Kannada New Movie: `ಕುಂಟೆಬಿಲ್ಲೆ' ಸಿನಿಮಾದ ಮುಹೂರ್ತ: ಶುಭಕೋರಿದ ಗಣ್ಯರು - Vistara News

ಸ್ಯಾಂಡಲ್ ವುಡ್

Kannada New Movie: `ಕುಂಟೆಬಿಲ್ಲೆ’ ಸಿನಿಮಾದ ಮುಹೂರ್ತ: ಶುಭಕೋರಿದ ಗಣ್ಯರು

Kannada New Movie: ಪೋಷಕ ಪಾತ್ರಗಳಲ್ಲಿ ಕಿಶೋರ್, ಪವಿತ್ರಾ ಲೋಕೇಶ್, ಶಂಕರ್ ಅಶ್ವಥ್, ಚಂದ್ರಪ್ರಭ ಮೊದಲಾದವರು ನಟಿಸಲಿದ್ದಾರೆ.
ʻನಾವೆಲ್ಲಾ ಚಿಕ್ಕ ವಯಸ್ಸಿನಲ್ಲಿ ಆಡುತ್ತಿದ್ದ ಆಟ ʻಕುಂಟೆಬಿಲ್ಲೆ‌ʼ. ಅದೇ ಟೈಟಲ್ ಇಟ್ಟುಕೊಂಡು ಪ್ರೀತಿ, ನೋವು, ಕಾಮ ಎಲ್ಲವನ್ನೂ ಕಟ್ಟಿಕೊಡಲಿದ್ದೇವೆʼ ಎಂದು ನಿರ್ದೇಶಕ ಸಿದ್ದೇಗೌಡ ತಿಳಿಸಿದರು. ಹತ್ತಕ್ಕೂ ಹೆಚ್ಚು ಚಿತ್ರ ಮಾಡಿರುವ ಮೇಘ ಶ್ರೀ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

Kannada New Movie meghashri starrer kuntebille goes on floor
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈ ಮೊದಲು `ದಕ್ಷ ಯಜ್ಞ’, ತರ್ಲೆ ವಿಲೇಜ್’, ಋತುಮತಿ ಚಿತ್ರಗಳನ್ನು (Kannada New Movie) ನಿರ್ದೇಶನ ಮಾಡಿದ್ದ ಸಿದ್ದೇಗೌಡ ಜಿ.ಬಿ‌.ಎಸ್. ಅವರು `ಕುಂಟೆಬಿಲ್ಲೆ’ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಯುವ ನಟ ಯದು ಮೊದಲ ಬಾರಿಗೆ ನಾಯಕರಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ‌. ಹತ್ತಕ್ಕೂ ಹೆಚ್ಚು (kuntebille goes on floor) ಚಿತ್ರ ಮಾಡಿರುವ ಮೇಘ ಶ್ರೀ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಪೋಷಕ ಪಾತ್ರಗಳಲ್ಲಿ ಕಿಶೋರ್, ಪವಿತ್ರಾ ಲೋಕೇಶ್, ಶಂಕರ್ ಅಶ್ವಥ್, ಚಂದ್ರಪ್ರಭ ಮೊದಲಾದವರು ನಟಿಸಲಿದ್ದಾರೆ.
ʻನಾವೆಲ್ಲಾ ಚಿಕ್ಕ ವಯಸ್ಸಿನಲ್ಲಿ ಆಡುತ್ತಿದ್ದ ಆಟ ʻಕುಂಟೆಬಿಲ್ಲೆ‌ʼ. ಅದೇ ಟೈಟಲ್ ಇಟ್ಟುಕೊಂಡು ಪ್ರೀತಿ, ನೋವು, ಕಾಮ ಎಲ್ಲವನ್ನೂ ಕಟ್ಟಿಕೊಡಲಿದ್ದೇವೆʼ ಎಂದು ನಿರ್ದೇಶಕ ಸಿದ್ದೇಗೌಡ ತಿಳಿಸಿದರು. ನಿರ್ಮಾಪಕ ಎಸ್.ಬಿ. ಶಿವು ಮಾತನಾಡಿ, ʻಜೀವಿತ ಕ್ರಿಯೇಷನ್‌ನಿಂದ ಒಳ್ಳೆಯ ಸಿನಿಮಾ ಮಾಡಿದ್ದೇವೆ. ಯದು ಹೊಸ ಪ್ರತಿಭೆ ಆಗಿದ್ದು ಅವರನ್ನೇ ನಾಯಕರನ್ನಾಗಿ ಮಾಡಿಕೊಂಡಿದ್ದೇವೆʼ ಎಂದರು. ಮತ್ತೊಬ್ಬ ನಿರ್ಮಾಪಕ ಕುಮಾರ್ ಗೌಡ ಮಾತನಾಡಿ,
ʻನಿರ್ಮಾಣ ಕ್ಷೇತ್ರ ನನಗೆ ಹೊಸದು. 30 ವರ್ಷದ ಹಿಂದೆ ನಾನೊಬ್ಬ ಕಲಾವಿದ ಆಗಬೇಕು ಎಂದು ಬೆಂಗಳೂರಿಗೆ ಹೋಗಿದ್ದವನು‌. ಆದರೆ ಅದು ಸಾಧ್ಯವಾಗಿರಲಿಲ್ಲ‌. ಈಗ ಅದನ್ನು ನನ್ನ ಮಗನ ಮೂಲಕ ಈಡೇರಿಸಿಕೊಳ್ಳುತ್ತಿದ್ದೇನೆ. ನನ್ನ ಮಗನಿಗೆ ರಂಗಭೂಮಿ ಕಡೆಗೆ ಆಸಕ್ತಿ ಇತ್ತು . ಇದೀಗ ವಿದ್ಯಾಭ್ಯಾಸ ಮುಗಿಸಿ ನಟನೆ ಕಡೆಗೆ ಬರುತ್ತಿದ್ದಾನೆ. ಈಗ ನಾನೇ ಮುಂದೆ ನಿಂತು ನಿರ್ದೇಶಕ ಸಿದ್ದೇಗೌಡ ಅವರ ಗರಡಿಗೆ ಬಿಟ್ಟಿದ್ದೇವೆ. ನನ್ನ ಮಗನಿಗೆ ಹೊಂದುವಂತ ಒಳ್ಳೆಯ ಕತೆ ಇದೆ. ಸಿನಿಮಾ ಚೆನ್ನಾಗಿ ಮೂಡಿಬರಲಿದೆʼ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು‌.

ಇದನ್ನೂ ಓದಿ: Kannada New Movie: ಮನರಂಜನೆಯ ರಸದೌತಣ ಬಡಿಸಲು ಬಂದ ʻಮೂರನೇ ಕೃಷ್ಣಪ್ಪʼ: ಟ್ರೈಲರ್‌ ಔಟ್‌!

ಮೇಘಶ್ರೀ ಮಾತಿಗಿಳಿದು, ʻʻಟೈಟಲ್ ನಷ್ಟೇ ಸ್ಕ್ರಿಪ್ಟ್ ಕೂಡ ಚೆನ್ನಾಗಿದೆ. ಕನ್ನಡದಲ್ಲಿ ಈ ರೀತಿಯ ಸ್ಟೋರಿ ಕೇಳಿರಲಿಲ್ಲ. ಒಳ್ಳೆಯ ತಂಡ ಸಿಕ್ಕಿದ್ದು, ನಾನು ಹಳ್ಳಿಯೊಂದರ ಶ್ರೀಮಂತ ಕುಟುಂಬದ ಹುಡುಗಿಯ ಪಾತ್ರ ಮಾಡಲಿದ್ದೇನೆ ಎಂದರು.
ನಾಯಕ ಯದು ಮಾತನಾಡಿ, ನನ್ನ ಮೇಲೆ ನಂಬಿಕೆ ಇಟ್ಟು ಅವಕಾಶ ಕೊಟ್ಟಿದ್ದಾರೆ‌. ಆ ನಿಟ್ಟಿನಲ್ಲಿ ಪಾತ್ರ ಮಾಡುವೆʼʼ ಎಂದರು.

ಹಿರಿಯ ನಟ ಶಂಕರ್ ಅಶ್ವಥ್ ಮಾತನಾಡಿ, ʻʻಅಕ್ಷಯ ತೃತೀಯ ದಿನದಂದು ಯಾವುದೇ ಒಳ್ಳೆಯ ಕೆಲಸ ಮಾಡಿದರೂ ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆ ಇದೆ‌. ಅದೇ ರೀತಿ ಈ ಚಿತ್ರಕ್ಕೂ ಒಳ್ಳೆಯದಾಗಲಿ. ನನ್ನದು ನಾಯಕಿಯ ತಂದೆ ಪಾತ್ರ‌. ಒಂದು ಗ್ರಾಮೀಣ ಆಟ ಜೀವನದಲ್ಲಿ ಎಷ್ಟು ಮುಖ್ಯ ಆಗುತ್ತದೆ ಎನ್ನುವುದನ್ನು ಚಿತ್ರದಲ್ಲಿ ಹೇಳಿದ್ದಾರೆ‌. ವಿಭಿನ್ನ ಮತ್ತು ಕುತೂಹಲಕಾರಿ ಚಿತ್ರ ಇದಾಗಿರಲಿದೆʼʼ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.

ಸಂಭಾಷಣೆ ಬರೆದಿರುವ ಮಧು ಮಾತನಾಡಿ ʻʻನಾನು ಪ್ರತಿ ಸಿನಿಮಾಗೆ ಬರೆಯುವಾಗಲೂ ಹೊಸದಾಗಿಯೇ ಬರೆಯುತ್ತೇನೆ. ಈ ಚಿತ್ರದ ಕಥೆ ಚೆನ್ನಾಗಿದೆ. ಅದಕ್ಕೆ ತಕ್ಕಂತೆ ಸಂಭಾಷಣೆ ಬರೆದಿದ್ದೇನೆ. ಹಳ್ಳಿಯ ನೈಜ ಘಟನೆಗಳು ಇಲ್ಲಿ ಇವೆʼʼ ಎಂದು ತಿಳಿಸಿದರು. ಒಂದು ಗ್ರಾಮೀಣ ಆಟ ಜೀವನದಲ್ಲಿ ಎಷ್ಟು ಮುಖ್ಯ ಆಗುತ್ತದೆ ಎನ್ನುವುದು ಚಿತ್ರದಲ್ಲಿ ಇರಲಿದೆ ಎನ್ನಲಾಗಿದೆ. ವಿಭಿನ್ನ ಮತ್ತು ಕುತೂಹಲಕಾರಿ ಚಿತ್ರ ಇದಾಗಿರಲಿದೆ ಎನ್ನುವ ವಿಶ್ವಾಸ ಚಿತ್ರತಂಡದ್ದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada New Movie: ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಕಂಠಸಿರಿಯಲ್ಲಿ ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಚಿತ್ರದ ಹಾಡು

Kannada New Movie: ವಸಿಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ “ವಿಐಪಿ” ಚಿತ್ರಕ್ಕಾಗಿ ಡಾ.ವಿ. ನಾಗೇಂದ್ರಪ್ರಸಾದ್ ಬರೆದಿರುವ ತಾಯಿ-ಮಗನ ಬಾಂಧವ್ಯ ಸಾರುವ “ಬಾರೋ ಕಂದ” ಎಂಬ ಹಾಡನ್ನು ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಇತ್ತೀಚಿಗೆ ಚೆನ್ನೈನಲ್ಲಿ ಕೆ.ಎಸ್.ಚಿತ್ರಾ ಅದ್ಭುತವಾಗಿ ಹಾಡಿದ್ದಾರೆ.‌ ಹರ್ಷವರ್ಧನ್ ರಾಜ್ ಸಂಗೀತ ಸಂಯೋಜಿಸಿದ್ದಾರೆ.

VISTARANEWS.COM


on

Vasishtha Simha starrer VIP Kannada movie
Koo

ಬೆಂಗಳೂರು: ತಮ್ಮ ಅದ್ಭುತ ಗಾಯನದಿಂದ ಜನಪ್ರಿಯರಾಗಿರುವ ಗಾಯಕಿ ಕೆ.ಎಸ್.ಚಿತ್ರಾ, ಬಹಳ ದಿನಗಳ ನಂತರ ಕನ್ನಡ ಚಿತ್ರವೊಂದರ ಹಾಡಿಗೆ ಧ್ವನಿಯಾಗಿದ್ದಾರೆ. ವಸಿಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ “ವಿಐಪಿ” ಚಿತ್ರಕ್ಕಾಗಿ (Kannada New Movie) ಡಾ.ವಿ. ನಾಗೇಂದ್ರಪ್ರಸಾದ್ ಬರೆದಿರುವ ತಾಯಿ-ಮಗನ ಬಾಂಧವ್ಯ ಸಾರುವ “ಬಾರೋ ಕಂದ” ಎಂಬ ಹಾಡನ್ನು ಇತ್ತೀಚಿಗೆ ಚೆನ್ನೈನಲ್ಲಿ ಕೆ.ಎಸ್. ಚಿತ್ರಾ ಅವರು ಹಾಡಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ ಸಂಯೋಜಿಸಿದ್ದಾರೆ.

ದೇಶಕಂಡ ಜನಪ್ರಿಯ ಗಾಯಕಿ ಚಿತ್ರ ಅವರು ನಮ್ಮ ಚಿತ್ರದ ಹಾಡನ್ನು ಹಾಡಿದ್ದು ತುಂಬಾ ಸಂತೋಷವಾಗಿದೆ. “ಬಾರೋ ಕಂದ” ಹಾಡನ್ನು ಚಿತ್ರಾ ಅವರು ಅದ್ಭುತವಾಗಿ ಹಾಡಿದ್ದಾರೆ.‌ ಹಾಡು ಹಾಡಿದ ನಂತರ ಸಂಗೀತ ನಿರ್ದೇಶಕ ಹರ್ಷವರ್ಧನ್ ರಾಜ್ ಅವರ ಬಳಿ ನಾನು ಹಾಡಿರುವುದು ನಿಮಗೆ ಇಷ್ಟವಾಯಿತಾ? ಇಲ್ಲವಾದ್ದಲ್ಲಿ ಇನ್ನೊಮ್ಮೆ ಹಾಡುತ್ತೇನೆ ಎಂದರು. ಅಂತಹ ದೊಡ್ಡ ಗಾಯಕಿಯಾದರೂ ಅವರಲ್ಲಿರುವ ಸರಳತೆ ಎಲ್ಲರಿಗೂ ಮಾದರಿ ಎಂದು ತಿಳಿಸಿರುವ ಕಾರ್ಯಕಾರಿ ನಿರ್ಮಾಪಕ ಅಫ್ಜಲ್, ಬೆಂಗಳೂರು ಸುತ್ತಮುತ್ತ “ವಿಐಪಿ” ಚಿತ್ರಕ್ಕೆ ಚಿತ್ರೀಕರಣ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಈಗಾಗಲೇ ವಸಿಷ್ಠ ಸಿಂಹ ಅವರ ಫಸ್ಟ್ ಲುಕ್ ಪೋಸ್ಟರ್‌ನಿಂದ “ವಿಐಪಿ” ಚಿತ್ರ ಎಲ್ಲೆಡೆ ಜನಪ್ರಿಯವಾಗಿದೆ. ಆಕ್ಷನ್ ಥ್ರಿಲ್ಲರ್ ಜಾನರ್‌ನ ಈ ಚಿತ್ರದಲ್ಲಿ ಅದ್ಭುತ ಸಾಹಸ ಸನ್ನಿವೇಶಗಳಿದೆ. ವಸಿಷ್ಠ ಸಿಂಹ ಅವರ ಈವರೆಗಿನ ಪಾತ್ರಗಳಿಗಿಂತ ನಮ್ಮ ಚಿತ್ರದ ಪಾತ್ರ ವಿಭಿನ್ನವಾಗಿರುತ್ತದೆ ಎಂದು ನಿರ್ದೇಶಕ ಬ್ರಹ್ಮ ತಿಳಿಸಿದ್ದಾರೆ.

ಕಲಾ ಸೃಷ್ಟಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್.ಎಸ್. ಮೋಹನ್ ಕುಮಾರ್ ಹಾಗೂ ಆರ್. ಅಚ್ಯುತ್ ರಾವ್ ಅವರ ನಿರ್ಮಾಣದಲ್ಲಿ ಈ ಚಿತ್ರ ಅದ್ದೂರಿಯಾಗಿ ಮೂಡಿ ಬರುತ್ತಿದೆ. ಬ್ರಹ್ಮ ಈ ಚಿತ್ರದ ನಿರ್ದೇಶಕರು.

ಮೇಕಿಂಗ್‌ನಿಂದ ಸದ್ದು ಮಾಡುತ್ತಿರುವ “ವಿಐಪಿ” ಚಿತ್ರದಲ್ಲಿ ವಸಿಷ್ಠ ಸಿಂಹ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶರ್ಮ ಅಭಿನಯಿಸುತ್ತಿದ್ದಾರೆ. ಸುನೀಲ್ ಪುರಾಣಿಕ್, ಬಲ ರಾಜವಾಡಿ , ಅಫ್ಜಲ್ , ಸ್ಪರ್ಶ ರೇಖಾ, ಸುಚೇಂದ್ರ ಪ್ರಸಾದ್ , ಹನುಮಂತೇಗೌಡ, ರಾಮ್ ಕಶ್ಯಪ್, ರಣವೀರ್, ಸನತ್, ಶ್ರೀದತ್ತ ಮುಂತಾದವರು ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ: Tumkur News: ರೈತರು ಮೊಬೈಲ್ ಆ್ಯಪ್ ಮೂಲಕ ಬೆಳೆ ವಿವರ ದಾಖಲಿಸಬೇಕು

ರಾಜೀವ್ ಗಣೇಸನ್ ಛಾಯಾಗ್ರಹಣ, ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನ ಹಾಗೂ ಸತೀಶ್ ಚಂದ್ರಯ್ಯ ಸಂಕಲನ ಈ ಚಿತ್ರಕ್ಕಿದೆ.

Continue Reading

ಸ್ಯಾಂಡಲ್ ವುಡ್

Dolly Dhananjay: ಐತಿಹಾಸಿಕ ‘ಹಲಗಲಿ’ ಸಿನಿಮಾದಲ್ಲಿ ‘ಡಾಲಿ’ ಧನಂಜಯ ಹೀರೊ!

Dolly Dhananjay: ಕನ್ನಡ ನಾಡಿನ ಸ್ವಾತಂತ್ರ್ಯ ಪೂರ್ವದ ವೀರರ ಕಥೆಯನ್ನು ಒಳಗೊಂಡ ಈ ಚಿತ್ರದಲ್ಲಿ ಡಾಲಿ ಧನಂಜಯ್ ಅವರು ವಾರಿಯರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬ್ರಿಟಿಷರ ವಿರುದ್ಧ ಮೊದಲ ಗೆರಿಲ್ಲಾ ಯುದ್ಧ ಮಾಡಿದ ಕನ್ನಡ ನೆಲದ ಹಲಗಲಿಯ ಊರಿನ ಬೇಡರ ಕುರಿತ ಸಿನಿಮಾ ಇದಾಗಿದೆ. ಈ ವೀರರ ಆಚಾರ- ವಿಚಾರ ಹಾಗೂ ಅವರ ಹೋರಾಟದ ಹೆಜ್ಜೆ ಗುರುತುಗಳನ್ನು ಹಗಲಗಲಿ ಚಿತ್ರದ ಮೂಲಕ ತೆರೆ ಮೇಲೆ ತರಲಾಗುತ್ತಿದೆ. ಇಂಥದ್ದೊಂದು ಬಹು ದೊಡ್ಡ ಬಜೆಟ್ ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕರಾಗಿರುವುದು ಯುವ ಉದ್ಯಮಿ ಬಳ್ಳಾರಿಯ ಕಲ್ಯಾಣ್ ಚಕ್ರವರ್ತಿ ಧೂಳಿಪಾಳ್ಳ. ತಮ್ಮ ದುಹರ ಮೂವೀಸ್ ಬ್ಯಾನರ್ ನಲ್ಲಿ ಚಿತ್ರ ನಿರ್ಮಿಸುತ್ತಿದ್ದಾರೆ.

VISTARANEWS.COM


on

Dolly dhananjay Halagali on set
Koo

ಬೆಂಗಳೂರು: ಬಹುಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ʻಹಲಗಲಿʼ ಚಿತ್ರಕ್ಕೆ ಡಾಲಿ ಧನಂಜಯ್ ನಾಯಕನಾಗಿ ಎಂಟ್ರಿ ಆಗಿದ್ದಾರೆ. ಆ ಮೂಲಕ ಡಾಲಿ ಮತ್ತೊಂದು ಐತಿಹಾಸಿಕ ಚಿತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಸುಕೇಶ್ ಡಿ ಕೆ ನಿರ್ದೇಶನದ ಈ ಚಿತ್ರವು 80 ಕೋಟಿ ವೆಚ್ಚದಲ್ಲಿ ಎರಡು ಭಾಗಗಳಲ್ಲಿ ಮೂಡಿ ಬರುತ್ತಿದೆ. ಕನ್ನಡದ ಜತೆಗೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಬರಲಿರುವ ಈ ಚಿತ್ರಕ್ಕೆ ಮೈಸೂರಿನ ಲಲಿತ್ ಮಹಲ್ ನಲ್ಲಿ ಪೂಜೆ ಮಾಡುವ ಮೂಲಕ ಅದ್ಧೂರಿ ಚಾಲನೆ ನೀಡಲಾಗಿದೆ.

ಕನ್ನಡ ನಾಡಿನ ಸ್ವಾತಂತ್ರ್ಯ ಪೂರ್ವದ ವೀರರ ಕಥೆಯನ್ನು ಒಳಗೊಂಡ ಈ ಚಿತ್ರದಲ್ಲಿ ಡಾಲಿ ಧನಂಜಯ್ ಅವರು ವಾರಿಯರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬ್ರಿಟಿಷರ ವಿರುದ್ಧ ಮೊದಲ ಗೆರಿಲ್ಲಾ ಯುದ್ಧ ಮಾಡಿದ ಕನ್ನಡ ನೆಲದ ಹಲಗಲಿಯ ಊರಿನ ಬೇಡರ ಕುರಿತ ಸಿನಿಮಾ ಇದಾಗಿದೆ. ಈ ವೀರರ ಆಚಾರ- ವಿಚಾರ ಹಾಗೂ ಅವರ ಹೋರಾಟದ ಹೆಜ್ಜೆ ಗುರುತುಗಳನ್ನು ಹಗಲಗಲಿ ಚಿತ್ರದ ಮೂಲಕ ತೆರೆ ಮೇಲೆ ತರಲಾಗುತ್ತಿದೆ. ಇಂಥದ್ದೊಂದು ಬಹು ದೊಡ್ಡ ಬಜೆಟ್ ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕರಾಗಿರುವುದು ಯುವ ಉದ್ಯಮಿ ಬಳ್ಳಾರಿಯ ಕಲ್ಯಾಣ್ ಚಕ್ರವರ್ತಿ ಧೂಳಿಪಾಳ್ಳ. ತಮ್ಮ ದುಹರ ಮೂವೀಸ್ ಬ್ಯಾನರ್ ನಲ್ಲಿ ಚಿತ್ರ ನಿರ್ಮಿಸುತ್ತಿದ್ದಾರೆ. ಇವರು ಈಗಾಗಲೇ ತೆಲಗಿನಲ್ಲಿ ರಚಯತ ಚಿತ್ರವನ್ನು ನಿರ್ಮಿಸಿ, 20ಕ್ಕೂ ಹೆಚ್ಚು ಚಿತ್ರಗಳನ್ನು ಕನ್ನಡ ಹಾಗೂ ತೆಲುಗಿನಲ್ಲಿ ವಿತರಣೆ ಮಾಡಿದ್ದಾರೆ.

ಚಿತ್ರಕ್ಕಾಗಿ ಬಹುದೊಡ್ಡ ತಾಂತ್ರಿಕ ತಂಡ ಕೆಲಸ ಮಾಡುತಿದೆ. ಅತ್ಯುತ್ತಮ ಛಾಯಾಗ್ರಾಹಕ ವಿಭಾಗದಲ್ಲಿ ನಂದಿ ಪ್ರಶಸ್ತಿ ಪುರಸ್ಕೃತ ಸಾಯಿ ಶ್ರೀರಾಮ್ ಕ್ಯಾಮೆರಾ, ವಾಸುಕಿ ವೈಭವ್ ಸಂಗೀತ ಇದೆ. ವಿಶೇಷ ಎಂದರೆ ಕೆಜಿಎಫ್ ಚಿತ್ರಕ್ಕೆ ಸಾಹಸ ಸಂಯೋಜನೆ ಮಾಡಿದ್ದ ವಿಕ್ರಮ್ ಮೋರ್ ಅವರೇ ಹಲಗಲಿ ಚಿತ್ರಕ್ಕೂ ಸಾಹಸ ನಿರ್ದೇಶನ ಮಾಡಲಿದ್ದಾರೆ.
ಅಂದಹಾಗೆ ಈ ಚಿತ್ರಕ್ಕೆ ಈ ಮೊದಲು ಡಾರ್ಲಿಂಗ್ ಕೃಷ್ಣ ಅವರು ಹೀರೋ ಎಂದು ಸುದ್ದಿ ಆಗಿತ್ತು. ಆದರೆ, ಡಾರ್ಲಿಂಗ್ ಕೃಷ್ಣ ಅವರ ಡೇಟ್ಸ್ ಸಮಸ್ಯೆಯಿಂದ ಅವರು ಈ ಚಿತ್ರದಲ್ಲಿ ನಟಿಸಲು ಆಗುತ್ತಿಲ್ಲ. ಅಲ್ಲದೆ ಐತಿಹಾಸಿಕ, ಬಹುಭಾಷೆಯ ಚಿತ್ರಕ್ಕೆ ಡಾಲಿ ಧನಂಜಯ್ ಅವರೇ ಸೂಕ್ತ ಎನಿಸಿ ಈಗ ಡಾರ್ಲಿಂಗ್ ಜಾಗಕ್ಕೆ ಡಾಲಿ ಆಗಮನ ಆಗಿದೆ. ಚಿತ್ರದಲ್ಲಿ ಹೆಸರಾಂತ ಬಹು ಭಾಷೆಯ ಕಲಾವಿದರು ಕಾಣಿಸಿಕೊಳ್ಳುತ್ತಿದ್ದಾರೆ.

ಸಿನಿಮಾ ಬಗ್ಗೆ ಡಾಲಿ ಮಾತನಾಡಿ ʻʻಐತಿಹಾಸಿಕ ಕತೆಗಳು ಅಂದರೆ ನನಗೆ ಇಷ್ಟ. ಹಲಗಲಿ ಕತೆ ಕೇಳಿದಾಗ ತುಂಬಾ ಇಷ್ಟವಾಯಿತು. ನಮ್ಮ ನಾಡಿಗಾಗಿ ಹೋರಾಡಿದವರ ಕತೆಯನ್ನು ಸಿನಿಮಾ ಮಾಡುತ್ತಿದ್ದು, ಆ ಚಿತ್ರದಲ್ಲಿ ನಾನು ಹೀರೋ ಆಗುತ್ತಿರುವುದು ಖುಷಿ ಕೊಟ್ಟಿದೆ. ನಿರ್ದೇಶಕ ಸುಕೇಶ್ ಡಿ ಕೆ ಹಾಗೂ ನಿರ್ಮಾಪಕ ಕಲ್ಯಾಣ್ ಚಕ್ರವರ್ತಿ ಧೂಳಪಾಳ್ಳ ಅವರು ತುಂಬಾ ದೊಡ್ಡ ಕನಸು ಕಟ್ಟಿಕೊಂಡು ಈ ಚಿತ್ರವನ್ನು ಐದು ಭಾಷೆಯಲ್ಲಿ ಮಾಡುತ್ತಿದ್ದಾರೆ. ನಾನು ಈ ಚಿತ್ರಕ್ಕೆ ಹೀರೋ ಆಗುತ್ತಿರುವುದು ಹೆಮ್ಮೆ ಅನಿಸುತ್ತಿದೆʼʼಎಂದರು.

ದೊಡ್ಡ ಮಟ್ಟದಲ್ಲಿ ಮೂಡಿ ಬರುತ್ತಿರುವ ಸಿನಿಮಾ ಹಗಲಗಲಿ. ಈಗಾಗಲೇ ಮುಹೂರ್ತ ಕೂಡ ಮಾಡಿದ್ದೇವೆ. ಐದು ಭಾಷೆಗಳಲ್ಲಿ ಬರುತ್ತಿದೆ. ಪೂರ್ವ ತಯಾರಿಗಳು ಮುಗಿದಿವೆ. ಡಾರ್ಲಿಂಗ್ ಕೃಷ್ಣ ಅವರ ಮೂರು-ನಾಲ್ಕು ಚಿತ್ರಗಳಲ್ಲಿ ಬ್ಯುಸಿ ಆಗಿದ್ದಾರೆ. ಹೀಗಾಗಿ ಅವರಿಗೆ ಕಾಯಲು ಆಗುತ್ತಿಲ್ಲ. ಅಲ್ಲದೆ ನಮ್ಮ ಕತೆಗೆ ಡಾಲಿ ಧನಂಜಯ್ ಅವರು ಸೂಕ್ತ ಎನಿಸಿದ್ದು, ಅವರೇ ಹೀರೋ ಆಗಿ ಮಾಡುತ್ತಿದ್ದಾರೆ. ಸದ್ಯದಲ್ಲೇ ರೆಗ್ಯೂಲರ್ ಶೂಟಿಂಗ್ ಶುರುವಾಗಲಿದೆ ಎಂದರು
ಕಲ್ಯಾಣ್ ಚಕ್ರವರ್ತಿ ಧೂಳಪಾಳ್ಳ.

Continue Reading

ಸ್ಯಾಂಡಲ್ ವುಡ್

Kiccha Sudeep: ಮುಂದಿನ ಸಿನಿಮಾಗಾಗಿ ಭಾರಿ ವರ್ಕೌಟ್‌ ಮಾಡ್ತಾ ಇದ್ದಾರೆ ಕಿಚ್ಚ!

Kiccha Sudeep: ಒಂದು ಪಾತ್ರದಲ್ಲಿ ಭಾರಿ ಕಟ್ಟುಮಸ್ತಾದ ದೇಹವನ್ನು ಹೊಂದಿದ ವ್ಯಕ್ತಿಯಾಗಿ ಕಾಣಿಸಿಕೊಳ್ಳಲಿದ್ದು, ಅದಕ್ಕಾಗಿ ಜಿಮ್​ನಲ್ಲಿ ಬೆವರಿಳಿಸುತ್ತಿದ್ದಾರೆ ಕಿಚ್ಚ. ಮ್ಯಾಕ್ಸ್’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗುವ ಮುನ್ನವೇ ‘ಬಿಲ್ಲಾ ರಂಗ ಭಾಷಾ’ ಸಿನಿಮಾಕ್ಕೆ ತಯಾರಾಗುತ್ತಿದ್ದಾರೆ.

VISTARANEWS.COM


on

Kiccha Sudeep workout For next Movie
Koo

ಬೆಂಗಳೂರು: ‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ (Kiccha Sudeep) ಒಪ್ಪಿಕೊಂಡಿರುವ ಸಿನಿಮಾ ʻಮ್ಯಾಕ್ಸ್ʼ (MAX). ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ಈಗಾಗಲೇ ಸಿನಿಮಾ ಚಿತ್ರೀಕರಣ ಮುಗಿಸಿದ್ದು, ಮುಂದಿನ ಸಿನಿಮಾಗಾಗಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಬಿಲ್ಲಾ ರಂಗ ಭಾಷಾ’ಗಾಗಿ ರೆಡಿಯಾಗುತ್ತಿದ್ದಾರೆ. ಈ ಸಿನಿಮಾದಲ್ಲಿ ಮೂರು ಪಾತ್ರಗಳಲ್ಲಿ ಸುದೀಪ್ ನಟಿಸಲಿದ್ದಾರೆ ಎನ್ನಲಾಗುತ್ತಿದ್ದು, ಒಂದೊಂದು ಪಾತ್ರಕ್ಕೆ ಒಂದೊಂದು ರೀತಿ ಮ್ಯಾನರಿಸಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಕಿಚ್ಚ ಅವರು ವರ್ಕೌಟ್‌ ಮಾಡಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ.

ಒಂದು ಪಾತ್ರದಲ್ಲಿ ಭಾರಿ ಕಟ್ಟುಮಸ್ತಾದ ದೇಹವನ್ನು ಹೊಂದಿದ ವ್ಯಕ್ತಿಯಾಗಿ ಕಾಣಿಸಿಕೊಳ್ಳಲಿದ್ದು, ಅದಕ್ಕಾಗಿ ಜಿಮ್​ನಲ್ಲಿ ಬೆವರಿಳಿಸುತ್ತಿದ್ದಾರೆ ಕಿಚ್ಚ. ಮ್ಯಾಕ್ಸ್’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗುವ ಮುನ್ನವೇ ‘ಬಿಲ್ಲಾ ರಂಗ ಭಾಷಾ’ ಸಿನಿಮಾಕ್ಕೆ ತಯಾರಾಗುತ್ತಿದ್ದಾರೆ. ಈ ಸಿನಿಮಾವನ್ನು ಅನುಪ್ ಭಂಡಾರಿ ನಿರ್ದೇಶನ ಮಾಡಲಿದ್ದಾರೆ. ‘ದ್ರೋಣಾಚಾರ್ಯ’ ಸಿನಿಮಾವನ್ನು ಅನುಪ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿತ್ತು, ಆದರೆ ಅದರ ಬದಲಿಗೆ ‘ಬಿಲ್ಲಾ ರಂಗ ಭಾಷಾ’ ಸಿನಿಮಾ ಪ್ರಾರಂಭ ಮಾಡಿದ್ದಾರೆ.

ಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷನ್‌ಗಳೂ ಇದ್ದಾರೆ. ಹಾಗೆ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್ ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.

ಇದನ್ನೂ ಓದಿ: Kiccha Sudeep: ಜಗ್ಗೇಶ್‌ಗೆ ಹೇಗೆ ಮಾತನಾಡಬೇಕು, ಹೇಗೆ ಎಸ್ಕೇಪ್ ಆಗಬೇಕು ಅನ್ನೋದು ಗೊತ್ತು ಎಂದ ಕಿಚ್ಚ!

ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

Continue Reading

ಸ್ಯಾಂಡಲ್ ವುಡ್

Kiran Raj: ಜನುಮದಿನ ʻಫ್ಯಾಮಿಲಿ ಡೇʼ ಎಂದು ಆಚರಿಸಿ, ಅಭಿಮಾನಿಗಳಿಂದ ಸೈ ಎನಿಸಿಕೊಂಡ ʻಕನ್ನಡತಿʼ ಸೀರಿಯಲ್‌ ನಟ!

Kiran Raj: ಸದ್ಯಕ್ಕೆ ಕಿರಣ್‌ ರಾಜ್‌ ಅಭಿನಯದ ‘ರಾನಿ’ ಬಿಡುಗಡೆಗೊಳ್ಳಲಿದ್ದು, ಬಹು ನಿರೀಕ್ಷಿತ ಸಿನಿಮಾ ಇದಾಗಿದೆ. ಇದೇ ಆಗಸ್ಟ್‌ನಲ್ಲಿ ‘ರಾನಿ’ ಸಿನಿಮಾ ಬಿಡುಗಡೆಯಾಗಲಿದ್ದು, ಇದರಲ್ಲಿ ಪ್ರಮುಖ ಪಾತ್ರ ಒಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

VISTARANEWS.COM


on

Kiran Raj celebrate Family day on his birthday
Koo

ಬೆಂಗಳೂರು: ‘ಕನ್ನಡತಿ’ ಧಾರಾವಾಹಿ ನಂತರ ಹಲವು ಸಿನಿಮಾಗಳಲ್ಲಿ ಆಫರ್ ಗಿಟ್ಟಿಸಿಕೊಂಡಿರುವ ನಟ ಕಿರಣ್ ರಾಜ್ (Kiran Raj) ಅವರು ಸದ್ಯಕ್ಕಂತೂ ಹಿರಿತೆರೆಯಲ್ಲಿ ಬಹಳ ಬ್ಯುಸಿಯಾಗಿದ್ದಾರೆ. ಜೂನ್‌5ಕ್ಕೆ ಕಿರಣ್‌ ರಾಜ್‌ ಅವರ ಜನುಮದಿನವಾಗಿತ್ತು. 31ನೇ ವಸಂತಕ್ಕೆ ನಟ ಕಾಲಿಟ್ಟಿದ್ದರು. ಈ ದಿನ ವಿಶೇಷವಾಗಿ ಆಚರಿಸೋಣ ಎಂದು ತಮ್ಮ ಫ್ಯಾನ್ಸ್‌ ಬಳಿ ಮನವಿ ಮಾಡಿಕೊಂಡಿದ್ದರು. ಎಲ್ಲರೂ ಈ ದಿನವನ್ನು ʻಫ್ಯಾಮಿಲಿ ಡೇʼ ಅಂತ ಪರಿಗಣಿಸಿ. ನಿಮ್ಮ ನಿಮ್ಮ ಕುಟುಂಬದವರೊಂದಿಗೆ ಒಳ್ಳೆಯ ಸಮಯವನ್ನು ಕಳೆಯಿರಿ. ನೀವು ನಿಮ್ಮ ಕುಟುಂಬಸ್ಥರೊಂದಿಗೆ ಕಳೆದ ಸಂತೋಷ ಸಂತೋಷದ ಕ್ಷಣಗಳ ಫೋಟೋವನ್ನು ಕ್ಲಿಕ್ಕಿಸಿ ನನ್ನನ್ನು ಟ್ಯಾಗ್ ಮಾಡಿ ಬಹಳ ಸಂತೋಷ ಪಡುತ್ತೇನೆ” ಎಂದು ಬರೆದುಕೊಂಡಿದ್ದರು.

ಕಿರಣ್‌ ರಾಜ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದು ಹೀಗೆ, ʻʻಜುಲೈ 5 – ಕುಟುಂಬ ದಿನ. CDP ಗಾಗಿ ಧನ್ಯವಾದಗಳು ನೀವು ನನ್ನ ಹುಟ್ಟುಹಬ್ಬವನ್ನು ತುಂಬಾ ಉತ್ಸಾಹ ಮತ್ತು ಪ್ರೀತಿಯಿಂದ ಆಚರಿಸುತ್ತಿದ್ದೀರಿ ಎಂದು ನನಗೆ ತಿಳಿದಿದೆ. ಆದರೆ ನನಗಾಗಿ ಯಾವುದೇ ಉಡುಗೊರೆಗಳನ್ನು ತರಬೇಡಿ ಎಂದು ನಾನು ಎಲ್ಲರಿಗೂ ವಿನಂತಿಸುತ್ತೇನೆ. ಬದಲಿಗೆ ಜುಲೈ 5 ಅನ್ನು ಫ್ಯಾಮಿಲಿ ಡೇ ಎಂದು ಆಚರಿಸೋಣ.. ನಿಮ್ಮ ಕುಟುಂಬವನ್ನು ಹೊರಗೆ ಕರೆದುಕೊಂಡು ಹೋಗಿ ಮತ್ತು ಅವರ ಜತೆ ಒಳ್ಳೆಯ ಸಮಯ ಕಳೆಯಿರಿ. ಕುಟುಂಬದ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್ ಮಾಡಿ ಮತ್ತು ನನ್ನನ್ನು ಟ್ಯಾಗ್ ಮಾಡಿ. ಉಡುಗೊರೆ ನೀಡಿದಷ್ಟೇ ಸಂತೋಷಪಡುತ್ತೇನೆʼʼಎಂದು ಬರೆದುಕೊಂಡಿದ್ದರು. ಈ ನಡೆಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: Kung Fu Panda 4 OTT: ಪುಟಾಣಿಗಳ ಫೇವರಿಟ್‌ ʻಕುಂಗ್ ಫು ಪಾಂಡಾ 4 ಸಿನಿಮಾʼ ಒಟಿಟಿಗೆ; ಕನ್ನಡ ಭಾಷೆಯಲ್ಲೂ ಲಭ್ಯ!

ಅಂದಹಾಗೆ ನಟ ಕಿರಣ್ ರಾಜ್ ಅವರ ಈ ವಿಭಿನ್ನ ಕೋರಿಕೆಗೆ ಮನಸೋತ ನೆಟ್ಟಿಗರು ಅವರ ಈ ವಿಶೇಷವಾದ ಕಾನ್ಸೆಪ್ಟ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ಕಿರಣ್‌ ರಾಜ್‌ ಅಭಿನಯದ ‘ರಾನಿ’ ಬಿಡುಗಡೆಗೊಳ್ಳಲಿದ್ದು, ಬಹು ನಿರೀಕ್ಷಿತ ಸಿನಿಮಾ ಇದಾಗಿದೆ. ಇದೇ ಆಗಸ್ಟ್‌ನಲ್ಲಿ ‘ರಾನಿ’ ಸಿನಿಮಾ ಬಿಡುಗಡೆಯಾಗಲಿದ್ದು, ಇದರಲ್ಲಿ ಪ್ರಮುಖ ಪಾತ್ರ ಒಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಕಿನ್ನರಿ’ ಸೇರಿದಂತೆ ಕೆಲವು ಧಾರಾವಾಹಿಗಳಲ್ಲಿ ಕಾಣಿಸಿಕೊಂಡರೂ ‘ಕನ್ನಡತಿ’ ಇವರಿಗೆ ಕೊಟ್ಟ ಜನಪ್ರಿಯತೆ ಬಹು ದೊಡ್ಡದು.

Continue Reading
Advertisement
Champions Trophy 2025:
ಪ್ರಮುಖ ಸುದ್ದಿ2 hours ago

Champions Trophy 2025 : ಭಾರತ ತಂಡ ಪಾಕಿಸ್ತಾನಕ್ಕೆ ಬರಲೇಬೇಕು ಹಠ ಹಿಡಿದು ಕುಳಿತಿರುವ ಪಿಸಿಬಿ

Rain News
ದೇಶ2 hours ago

Rain News: ವರುಣನ ಆರ್ಭಟ; ಮಳೆ ಸಂಬಂಧಿ ಅವಘಡಗಳಿಗೆ 24 ಗಂಟೆಯಲ್ಲಿ 13 ಜನ ಬಲಿ

KAS
ಕರ್ನಾಟಕ3 hours ago

KAS: ಕೆಎಎಸ್‌ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್;‌ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ, ಇಲ್ಲಿದೆ ಮಾಹಿತಿ

Mid Day Meal
ದೇಶ4 hours ago

Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

Dr HS Shetty: Rs 7 crore spent on charity; Businessman Dr. HS Shetty
ಪ್ರಮುಖ ಸುದ್ದಿ4 hours ago

Dr HS Shetty : ದಾನಗಳಿಗಾಗಿಯೇ ವರ್ಷದಲ್ಲಿ 7 ಕೋಟಿ ರೂ. ವಿನಿಯೋಗ

Vasishtha Simha starrer VIP Kannada movie
ಕರ್ನಾಟಕ4 hours ago

Kannada New Movie: ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಕಂಠಸಿರಿಯಲ್ಲಿ ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಚಿತ್ರದ ಹಾಡು

Asia Cup 2024
ಪ್ರಮುಖ ಸುದ್ದಿ4 hours ago

Asia Cup 2024 : ಮಹಿಳಾ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

Viral Video
Latest4 hours ago

Viral Video: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಪ್ರಾಂಶುಪಾಲರನ್ನು ಕುರ್ಚಿ ಸಹಿತ ಹೊರಗೆಳೆದ ಸಿಬ್ಬಂದಿ

Kashmir Encounter
ದೇಶ5 hours ago

Kashmir Encounter: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ನಾಲ್ವರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

Viral Video
Latest5 hours ago

Viral Video : ಹೀಗೆಲ್ಲಾ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಾರಾ…? ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ7 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ10 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ11 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು13 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ15 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ20 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ1 day ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ1 day ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ1 day ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ2 days ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

ಟ್ರೆಂಡಿಂಗ್‌