Job News: ಅಟೆನ್ಷನ್‌ ಪ್ಲೀಸ್‌; ಸರ್ಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಇಂದು, ನಾಳೆ ಕೊನೆಯ ದಿನ - Vistara News

ಉದ್ಯೋಗ

Job News: ಅಟೆನ್ಷನ್‌ ಪ್ಲೀಸ್‌; ಸರ್ಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಇಂದು, ನಾಳೆ ಕೊನೆಯ ದಿನ

Job News: ರಾಜ್ಯ ಮತ್ತು ಕೇಂದ್ರ ಸರ್ಕಾರದ ಸುಮಾರು 6,740 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಿ ಈ ಪೈಕಿ ಕೆಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದ್ದರೆ ಕೆಲವು ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ನಾಳೆಗೆ ಕೊನೆಗೊಳ್ಳುತ್ತದೆ. ಹೀಗಾಗಿ ಬೇಗ ಬೇಗ ಅಪ್ಲೈ ಮಾಡಿ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ವಿವರ ಇಲ್ಲಿದೆ.

VISTARANEWS.COM


on

Job News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಪಡೆದುಕೊಳ್ಳಬೇಕು ಎನ್ನುವುದು ಬಹತೇಕರ ಕನಸು. ಅದಕ್ಕಾಗಿ ಅನೇಕರು ಹಲವು ವರ್ಷಗಳಿಂದ ಕಠಿಣ ತಯಾರಿಯಲ್ಲಿ ತೊಡಗಿರುತ್ತಾರೆ. ಇದೀಗ ಅಂತಹದ್ದೊಂದು ಸುವರ್ಣಾವಕಾಶ ಬಂದಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಸುಮಾರು 6,740 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಿ ಈ ಪೈಕಿ ಕೆಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದ್ದರೆ ಕೆಲವು ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ನಾಳೆಗೆ ಕೊನೆಗೊಳ್ಳುತ್ತದೆ. ಹೀಗಾಗಿ ಬೇಗ ಬೇಗ ಅಪ್ಲೈ ಮಾಡಿ (Job News).

ಗ್ರೂಪ್‌ ಬಿ ಹುದ್ದೆಗಳು

ರಾಜ್ಯ ಸರ್ಕಾರದ 9 ಇಲಾಖೆಗಳ ಉಳಿಕೆ ಮೂಲ ವೃಂದ ಹಾಗೂ ಎಚ್‌ಕೆ ವೃಂದದ ವಿವಿಧ ಗ್ರೂಪ್‌ ಬಿ 327 ಹುದ್ದೆಗಳ ಅರ್ಜಿಗೆ ಇಂದೇ (14-05-2024) ಕೊನೆ ದಿನವಾಗಿದೆ. ಇಂದು ರಾತ್ರಿ 11.59 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಸಮಯಾವಕಾಶ ಇದೆ. ತಾಂತ್ರಿಕ ಹಾಗೂ ತಾಂತ್ರಿಕೇತರ ಪದವಿ, ಸ್ನಾತಕೋತ್ತರ ಪದವಿ ಪಾಸ್‌ ಮಾಡಿದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಸಿಎಪಿಎಫ್‌ 506 ಹುದ್ದೆಗಳು

ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC)ನ ಗಡಿ ಭದ್ರತಾ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಕೇಂದ್ರ ಮೀಸಲು ಪೊಲೀಸ್‌ ಪಡೆ, ಇಂಡೊ-ಟೆಬೆಟನ್ ಗಡಿ ಪೊಲೀಸ್‌ ಮತ್ತು ಸಶಸ್ತ್ರ ಸೀಮಾ ಬಲ ಪಡೆಗಳಲ್ಲಿನ 506 ಹುದ್ದೆಗಳಿಗೆ ಅಪ್ಲೈ ಮಾಡಲು ಇಂದು ಕೊನೆಯ ದಿನ (ಸಂಜೆ 6 ಗಂಟೆ). ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನ 4,660 ಹುದ್ದೆಗಳು

ರೈಲ್ವೆ ನೇಮಕಾತಿ ಮಂಡಳಿಯು ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನಲ್ಲಿ ಖಾಲಿ ಇರುವ ಬರೋಬ್ಬರಿ 4,660 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಇಂದೇ ಕೊನೆಯ ದಿನ. ಕಾನ್‌ಸ್ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳು ಇದಾಗಿದ್ದು, ಎಸ್ಸೆಸ್ಸೆಲ್ಸಿ ತೆರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

247 ಪಿಡಿಒ ಹುದ್ದೆಗಳು

ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಪಿಡಿಇ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ (ಮೇ 15) ಕೊನೆಯ ದಿನ. ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. 150 ಆರ್‌ಪಿಸಿ ಮತ್ತು 97 ಎಚ್‌ಕೆ ಹುದ್ದೆಗಳು ಸೇರಿ ಒಟ್ಟು 247 ಪೋಸ್ಟ್‌ಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಮೇ 15ರ ರಾತ್ರಿ 11 ಗಂಟೆವರೆಗೆ ಅವಕಾಶ ಇದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು

ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫೆ. 20ರಂದು ಅಧಿಸೂಚನೆ ಹೊರಡಿಸಿತ್ತು. ಅದರಂತೆ ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ. ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಲುಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಟೆಕ್ಸ್‌ಟೈಲ್ಸ್‌ ಕಮಿಟಿಯಿಂದ 40 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ಇದೆ ಪೋಸ್ಟಿಂಗ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Government Employee: ಹಳೇ ಪಿಂಚಣಿ ವ್ಯವಸ್ಥೆ (OPS) ಜಾರಿ ಸಾಧ್ಯತೆ ಪರಿಶೀಲನೆಗೆ ಸರ್ಕಾರದಿಂದ ಸಮಿತಿ ಪುನರ್‌ ರಚನೆ

ರಾಜ್ಯ ಸರ್ಕಾರಿ ನೌಕರರ ಪ್ರಮುಖ (Government Employee) ಬೇಡಿಕೆಯಾದ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರವು ಐಎಎಸ್‌ ಅಧಿಕಾರಿ ಅಂಜುಂ ಪರ್ವೇಜ್‌ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಪುನರ್‌ ರಚಿಸಿ ಆದೇಶಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

NPS
ಸಾಂದರ್ಭಿಕ ಚಿತ್ರ.
Koo

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ (Government Employee) ಪ್ರಮುಖ ಬೇಡಿಕೆಯಾದ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರವು ಐಎಎಸ್‌ ಅಧಿಕಾರಿ ಅಂಜುಂ ಪರ್ವೇಜ್‌ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಪುನರ್‌ ರಚಿಸಿ (NPS) ಆದೇಶಿಸಿದೆ. ರಾಜ್ಯ ಸರ್ಕಾರವು ಈಗಾಗಲೇ 7ನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸಿದ್ದು, ಸರ್ಕಾರಿ ನೌಕರರ ಮತ್ತೊಂದು ಪ್ರಮುಖ ಬೇಡಿಕೆಯಾದ ಎನ್‌ಪಿಎಸ್‌ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವ ಕುರಿತು ಸಮಿತಿಯನ್ನು ಪುನರ್‌ ರಚಿಸಿ ಆದೇಶಿಸಿದೆ.

ಇದನ್ನೂ ಓದಿ: Bengaluru Power Cut: ಗಮನಿಸಿ… ಬೆಂಗಳೂರಿನ ಈ ಪ್ರದೇಶಗಳಲ್ಲಿ ಆ.18ರಂದು ಕರೆಂಟ್‌ ಇರಲ್ಲ

ರಾಜ್ಯದಲ್ಲಿ ಏಪ್ರಿಲ್‌ 01 2006ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರಿರುವ ಎಲ್ಲಾ ಸರ್ಕಾರಿ ನೌಕರರಿಗೆ ಕಡ್ಡಾಯವಾಗಿ ರಾಷ್ಟ್ರೀಯ ಪಿಂಚಣಿ ಯೋಜನೆ ಜಾರಿಗೆ ತರಲಾಗಿದೆ. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಮಗ್ರವಾಗಿ ಪರಿಶೀಲಿಸಿ, ರಾಜ್ಯ ಸರ್ಕಾರಕ್ಕೆ ಸೂಕ್ತ ವರದಿಯನ್ನು ಸಲ್ಲಿಸಲು ಸಮಿತಿಯನ್ನು ಪುನರ್‌ ರಚಿಸಿ ಆದೇಶಿಸಲಾಗಿದೆ.

ಈ ಸಮಿತಿಯು ಈಗಾಗಲೇ ಹಳೆಯ ಪಿಂಚಣಿ ಯೋಜನೆಯನ್ನು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ, ವರದಿ ಸಲ್ಲಿಸಲು ಆದೇಶದಲ್ಲಿ ಸೂಚಿಸಲಾಗಿದೆ.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್‌ ಅವರ ಅಧ್ಯಕ್ಷತೆಯಲ್ಲಿ ಸದಸ್ಯರುಗಳಾಗಿ ಐಎಎಸ್‌ ಅಧಿಕಾರಿಗಳಾದ ರಿತೇಶ್‌ ಕುಮಾರ್‌ ಸಿಂಗ್‌, ಅಮಲಾನ್‌ ಆದಿತ್ಯ ಬಿಸ್ವಾಸ್‌, ಡಾ.ವಿಶಾಲ್‌ ಆರ್. ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ಡಾ.ಎಂ.ಟಿ. ರೇಜು ಸಮಿತಿಯನ್ನು ಪುನರ್‌ ರಚಿಸಿ, ಆದೇಶಿಸಲಾಗಿದೆ.

ಇದನ್ನೂ ಓದಿ: Kannada New Movie: ಸಿದ್ದು ಪೂರ್ಣಚಂದ್ರ ನಿರ್ದೇಶನದ ‘ಈ ಪಾದ ಪುಣ್ಯ ಪಾದ’ ಚಿತ್ರಕ್ಕೆ ವಿ. ನಾಗೇಂದ್ರ ಪ್ರಸಾದ್ ಕ್ಲಾಪ್

ಸಮಿತಿಯು ತನ್ನದೇ ಆದ ಕಾರ್ಯವಿಧಾನಗಳನ್ನು ರೂಪಿಸಿಕೊಳ್ಳುವಲ್ಲಿ ಸಕ್ಷಮವಾಗಿರುತ್ತದೆ. ಸಮಿತಿಯ ಪರಿಶೀಲನೆಗೊಳಪಟ್ಟ ಅಂಶಗಳಿಗೆ ಅಗತ್ಯವೆನಿಸಿದ ಮಾಹಿತಿಗಳನ್ನು ಒದಗಿಸಲು ಸರ್ಕಾರದ ಎಲ್ಲಾ ಇಲಾಖೆಗಳು ನಿಗದಿತ ಕಾಲಮಿತಿಯೊಳಗೆ ಸೂಕ್ತ ನೆರವು ನೀಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

Continue Reading

ಉದ್ಯೋಗ

BMRCL Recruitment 2024: ನಮ್ಮ ಮೆಟ್ರೋದಲ್ಲಿದೆ ಉದ್ಯೋಗಾವಕಾಶ; ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

BMRCL Recruitment 2024: ಬೆಂಗಳೂರಿನಲ್ಲೇ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ. ನಮ್ಮ ಮೆಟ್ರೋದಲ್ಲಿ ಖಾಲಿ ಇರುವ 58 ಅಸಿಸ್ಟಂಟ್‌ ಸೆಕ್ಯೂರಿಟಿ ಆಫೀಸರ್‌ ಹುದ್ದೆಗಳ ಭರ್ತಿಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್‌ 9.

VISTARANEWS.COM


on

BMRCL Recruitment 2024
Koo

ಬೆಂಗಳೂರು: ಬೆಂಗಳೂರಿನಲ್ಲೇ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ. ನಮ್ಮ ಮೆಟ್ರೋ (Namma Metro)ದಲ್ಲಿ ಖಾಲಿ ಇರುವ 58 ಅಸಿಸ್ಟಂಟ್‌ ಸೆಕ್ಯೂರಿಟಿ ಆಫೀಸರ್‌ (Assistant Security Officer) ಹುದ್ದೆಗಳ ಭರ್ತಿಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ (Bangalore Metro Rail Corporation Limited) ಅರ್ಜಿ ಆಹ್ವಾನಿಸಿದೆ (BMRCL Recruitment 2024). ಆಸಕ್ತರು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್‌ 9 (Job Alert).

ಹುದ್ದೆಗಳ ವಿವರ ಮತ್ತು ಅರ್ಹತೆ

ಅಸಿಸ್ಟಂಟ್‌ ಸೆಕ್ಯೂರಿಟಿ ಆಫೀಸರ್‌ ಹುದ್ದೆ ಇದಾಗಿದ್ದು, ಜೂನಿಯರ್ ಕಮಿಷನ್ಡ್ ಶ್ರೇಣಿಯಲ್ಲಿ ಸೇವೆಯಲ್ಲಿರುವ ಅಥವಾ ನಿವೃತ್ತ ಸಿಬ್ಬಂದಿ, ಅಧಿಕಾರಿ / ಸುಬೇದಾರ್ ಮೇಜರ್ / ಸುಬೇದಾರ್ / ಮಾಸ್ಟರ್ ಚೀಫ್ ಪೆಟ್ಟಿ, ಆಫೀಸರ್ / ಮಾಸ್ಟರ್ ವಾರಂಟ್ ಆಫೀಸರ್ / ವಾರಂಟ್ ಆಫೀಸರ್ ಅಥವಾ ತತ್ಸಮಾನ, ರಕ್ಷಣಾ ಸೇವೆಯಲ್ಲಿ ಇದ್ದವರು, ಇನ್ಸ್‌ಪೆಕ್ಟರ್‌ / ಸಬ್ ಇನ್ಸ್‌ಪೆಕ್ಟರ್‌ / ಎಎಸ್ಐ ಅಥವಾ ತತ್ಸಮಾನ ಶ್ರೇಣಿಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದವರು ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ

ಗರಿಷ್ಠ ವಯೋಮಿತಿ 62 ವರ್ಷ. ಗಮನಿಸಿ, ಇದು ಗುತ್ತಿಗೆ ಆಧಾರಿತ ಉದ್ಯೋಗವಾಗಿದ್ದು, 60 ವರ್ಷಕ್ಕಿಂತ ಕೆಳಗಿರುವವರನ್ನು 3 ವರ್ಷಕ್ಕೆ ಮತ್ತು 60 ವರ್ಷಕ್ಕಿಂತ ಮೇಲಿರುವವರನ್ನು 1 ವರ್ಷಕ್ಕೆ ನೇಮಕ ಮಾಡಿಕೊಳ್ಳಲಾಗುತ್ತದೆ. ಉದ್ಯೋಗ ನಿರ್ವಹಿಸುವ ರೀತಿಯನ್ನು ನೋಡಿಕೊಂಡು ಗುತ್ತಿಗೆ ಮುಂದಿರಿಸುವ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ದೈಹಿಕ ಪರೀಕ್ಷೆ, ಅರ್ಹತೆ, ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ 60 ವರ್ಷದೊಳಗಿನವರಿಗೆ 32,950 ರೂ. ಮತ್ತು 60 ವರ್ಷ ದಾಟಿದವರಿಗೆ 30,000 ರೂ. ಮಾಸಿಕ ವೇತನ ನೀಡಲಾಗುತ್ತದೆ.

BMRCL Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

General Manager (HR), Bangalore Metro Rail Corporation Limited, III Floor, BMTC Complex, K.H Road, Shanthinagar, Bengaluru – 560027.

ಗಮನಿಸಿ, ನಿಮ್ಮ ಅಪ್ಲಿಕೇಷನ್ ಸ್ಪೀಡ್‌ ಪೋಸ್ಟ್‌ / ಕೊರಿಯರ್‌ ಮೂಲಕ ಕಳುಹಿಸಬೇಕು. ಅರ್ಜಿ ಲಕೋಟೆಯ ಮೇಲ್ಭಾಗದಲ್ಲಿ “APPLICATION FOR THE POST OF ASSISTANT SECURITY OFFICER” ಎಂದು ನಮೂದಿಸುವುದನ್ನು ಮರೆಯಬೇಡಿ.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ: english.bmrc.co.inಗೆ ಭೇಟಿ ನೀಡಿ ಅಥವಾ ಇಮೇಲ್‌ ವಿಳಾಸ: helpdesk@bmrc.co.inಗೆ ಸಂಪರ್ಕಿಸಿ.

ಇದನ್ನೂ ಓದಿ: Job Alert: ಹೆಸ್ಕಾಂನ 338 ಹುದ್ದೆಗಳಿಗೆ ಅರ್ಜಿ ಆಹ್ವಾನ

Continue Reading

ಬೆಂಗಳೂರು

Government Employees Sports: ಆ.17ರಂದು ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

Government Employees Sports: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಆ. 17ರಂದು ಶನಿವಾರ ಸಂಜೆ 5 ಗಂಟೆಗೆ ಬೆಂಗಳೂರು ನಗರದ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ “ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು-2024” ಆಯೋಜಿಸಲಾಗಿದೆ.

VISTARANEWS.COM


on

Government Employees Sports
ಸಾಂದರ್ಭಿಕ ಚಿತ್ರ.
Koo

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಆ. 17ರಂದು ಶನಿವಾರ ಸಂಜೆ 5 ಗಂಟೆಗೆ ನಗರದ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ “ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು-2024” (Government Employees Sports) ಆಯೋಜಿಸಲಾಗಿದೆ.

ಇದನ್ನೂ ಓದಿ: Kannada New Movie: ತೆರೆಯ‌ ಮೇಲೆ‌ ಚಿತ್ರವಾಗಿ ಬರಲಿದೆ ಡಿ.ವಿ.ಜಿ ಅವರ ʼಮಂಕುತಿಮ್ಮನ ಕಗ್ಗʼ; ಮೊದಲ ಹಾಡು ರಿಲೀಸ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟವನ್ನು ಉದ್ಘಾಟಿಸುವರು. ಕೇಂದ್ರ ಹಣಕಾಸು ಹಾಗೂ ಕಾರ್ಪೋರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಉಪಸ್ಥಿತರಿರುವರು. ಡಿಸಿಎಂ ಡಿ.ಕೆ. ಶಿವಕುಮಾರ್ ಧ್ವಜಾರೋಹಣ ಮತ್ತು ಕ್ರೀಡಾ ಜ್ಯೋತಿ ಸ್ವೀಕಾರ ಮಾಡುವರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಪಸ್ಥಿತರಿರುವರು.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಆ.17ರಂದು ಪವರ್‌ ಕಟ್‌!

ಕಾರ್ಯಕ್ರಮದಲ್ಲಿ ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಹರ್ಷದ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಪ್ರಾಸ್ತಾವಿಕವಾಗಿ ಮಾತನಾಡುವರು.

Continue Reading

ಕರ್ನಾಟಕ

Government Employees: 7ನೇ ವೇತನ ಆಯೋಗ; ಸರ್ಕಾರಿ ನೌಕರರ ಸಂಘದಿಂದ ಆ.17ರಂದು ಸಿಎಂ, ಡಿಸಿಎಂಗೆ ಸನ್ಮಾನ

Government Employees: ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಅಭಿನಂದನೆ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಎಲ್ಲಾ ಇಲಾಖೆಗಳ ವೃಂದ ಸಂಘಗಳ ವತಿಯಿಂದ ಆ.17ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರು ನಗರದ ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ “ನಮ್ಮಭಿಮಾನದ ಅಭಿನಂದನಾ ಸಮಾರಂಭ” ಆಯೋಜಿಸಲಾಗಿದೆ.

VISTARANEWS.COM


on

Government Employees
Koo

ಬೆಂಗಳೂರು: ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಅಭಿನಂದನೆ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಎಲ್ಲಾ ಇಲಾಖೆಗಳ ವೃಂದ ಸಂಘಗಳ ವತಿಯಿಂದ (Government Employees)‌ ಆ.17 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ನಗರದ ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ “ನಮ್ಮಭಿಮಾನದ ಅಭಿನಂದನಾ ಸಮಾರಂಭ” ಆಯೋಜಿಸಲಾಗಿದೆ.

ಇದನ್ನೂ ಓದಿ: Teachers Transfer: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ

ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧುಬಂಗಾರಪ್ಪ, ವಿಶೇಷ ಆಹ್ವಾನಿತರಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಆರ್ಥಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಆರ್ಥಿಕ ಇಲಾಖೆಯ (ಬಿ&ಆರ್) ಸರ್ಕಾರದ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ಆರ್ಥಿಕ ಇಲಾಖೆ (ವೆಚ್ಚ) ಯ ಸರ್ಕಾರದ ಕಾರ್ಯದರ್ಶಿ ಡಾ. ಎಂ.ಟಿ. ರೇಜು ಪಾಲ್ಗೊಳ್ಳುವರು.

ಇದನ್ನೂ ಓದಿ: Kannada New Movie: ತೆರೆಯ‌ ಮೇಲೆ‌ ಚಿತ್ರವಾಗಿ ಬರಲಿದೆ ಡಿ.ವಿ.ಜಿ ಅವರ ʼಮಂಕುತಿಮ್ಮನ ಕಗ್ಗʼ; ಮೊದಲ ಹಾಡು ರಿಲೀಸ್‌

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

Continue Reading
Advertisement
cm siddaramaiah
ಪ್ರಮುಖ ಸುದ್ದಿ2 mins ago

CM siddaramaiah : ಕಾಂಗ್ರೆಸ್ ಪಕ್ಷ, ಸರ್ಕಾರ ಸಿದ್ದರಾಮಯ್ಯ ಬೆಂಬಲಕ್ಕಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Kundapura Kannada Habba
ಕರ್ನಾಟಕ9 mins ago

Kundapura Kannada Habba: ನನ್ನ ಸಿನಿಮಾ ಕಥೆಗಳಿಗೆ ಊರು, ಯಕ್ಷಗಾನವೇ ಪ್ರೇರಣೆ; ರಿಷಬ್ ಶೆಟ್ಟಿ

NPS News
ಕರ್ನಾಟಕ12 mins ago

NPS News: ಹೊಸ ಪಿಂಚಣಿ ರದ್ದುಗೊಳಿಸಲು ಸಮಿತಿ ಪುನರ್‌ ರಚನೆ; ಎನ್‌ಪಿಎಸ್‌ ನೌಕರರ ಸಂಘ ವಿರೋಧ

ಪ್ರಮುಖ ಸುದ್ದಿ52 mins ago

7th pay commission : 7ನೇ ವೇತನ ಆಯೋಗ ಜಾರಿ ಬಳಿಕ ನೌಕರರ ಸಂಬಳ ಏರಿಕೆ ಎಷ್ಟು? ಅಧಿಕೃತ ಪಟ್ಟಿ ಬಿಡುಗಡೆ

Prabhas New Film
ಸಿನಿಮಾ1 hour ago

Prabhas New Film: ಹೊಸ ಯುದ್ಧ ಶುರು; ಪ್ರಭಾಸ್ ಅಭಿನಯದ ಮುಂದಿನ ಚಿತ್ರ ಸುಳಿವು!

NPS
ಬೆಂಗಳೂರು2 hours ago

Government Employee: ಹಳೇ ಪಿಂಚಣಿ ವ್ಯವಸ್ಥೆ (OPS) ಜಾರಿ ಸಾಧ್ಯತೆ ಪರಿಶೀಲನೆಗೆ ಸರ್ಕಾರದಿಂದ ಸಮಿತಿ ಪುನರ್‌ ರಚನೆ

TJ Abraham
ಪ್ರಮುಖ ಸುದ್ದಿ2 hours ago

TJ Abraham : ಎಸ್ಎಂ ಕೃಷ್ಣರಿಂದ ಹಿಡಿದು ಸಿದ್ದರಾಮಯ್ಯವರೆಗೆ; ಕರ್ನಾಟಕ ರಾಜಕೀಯದ ದೊಡ್ಡ ಹುಲಿಗಳನ್ನೇ ಬೋನಿಗೆ ಬೀಳಿಸಿದ ಟಿ ಜೆ ಅಬ್ರಾಹಂ

Positive Pay System
ವಾಣಿಜ್ಯ2 hours ago

Positive Pay System: ಏನಿದು ಪಾಸಿಟಿವ್‌ ಪೇ ಸಿಸ್ಟಮ್‌? ಚೆಕ್ ಪಾವತಿ ಸುರಕ್ಷಿತಗೊಳಿಸುವುದು ಹೇಗೆ?

Dog attack
ವೈರಲ್ ನ್ಯೂಸ್3 hours ago

Dog Attack: 17 ಮಂದಿ ಮೇಲೆ ಬೀದಿ ನಾಯಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Kannada New Movie
ಬೆಂಗಳೂರು3 hours ago

Kannada New Movie: ಮಂಸೋರೆ ನಿರ್ದೇಶನದ ʼದೂರ ತೀರ ಯಾನʼ ಟೈಟಲ್ ಟೀಸರ್ ರಿಲೀಸ್‌

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌