Actor Dhanush: ಧನುಷ್‌ಗೆ ಐಶ್ವರ್ಯಾ ದೋಖಾ; ಐಶ್ವರ್ಯಾಗೆ ಧನುಷ್‌ ಮೋಸ! ಖ್ಯಾತ ಗಾಯಕಿಯಿಂದ ಸೆನ್ಷೆಷನಲ್‌ ಮಾಹಿತಿ - Vistara News

ಸಿನಿಮಾ

Actor Dhanush: ಧನುಷ್‌ಗೆ ಐಶ್ವರ್ಯಾ ದೋಖಾ; ಐಶ್ವರ್ಯಾಗೆ ಧನುಷ್‌ ಮೋಸ! ಖ್ಯಾತ ಗಾಯಕಿಯಿಂದ ಸೆನ್ಷೆಷನಲ್‌ ಮಾಹಿತಿ

Actor Dhanush: ಕಾಲಿವುಡ್‌ ನಟ ಧನುಷ್‌ ಮತ್ತು ಐಶ್ವರ್ಯಾ ರಜನಿಕಾಂತ್‌ ವಿಚ್ಛೇಧನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಇಬ್ಬರು ತಮ್ಮ ಸುದೀರ್ಘ ದಾಂಪತ್ಯ ಜೀವನ ಯಾವ ಕಾರಣಕ್ಕೆ ಕೊನೆಯಾಯ್ತು ಎನ್ನುವುದನ್ನು ತಿಳಿಸಿಲ್ಲ. ಇದೀಗ ಜನಪ್ರಿಯ ಗಾಯಕಿ ಸುಚಿತ್ರಾ ಅವರು ಇಬ್ಬರ ಬಗ್ಗೆ ಶಾಕಿಂಗ್‌ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅವರು ಪರಸ್ಪರ ಮೋಸ ಮಾಡಿಕೊಂಡಿದ್ದರು ಎಂದು ಹೇಳಿದ್ದಾರೆ.

VISTARANEWS.COM


on

Actor Dhanush
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಈಗಾಗಲೇ ಕಾಲಿವುಡ್‌ ನಟ ಧನುಷ್‌ (Actor Dhanush) ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಪುತ್ರಿ ಐಶ್ವರ್ಯಾ ರಜನಿಕಾಂತ್‌ (Aishwarya Rajinikanth) ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ. 2022ರ ಜನವರಿ 17ರಂದು ಧನುಷ್‌ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ 18 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡುವುದಾಗಿ ಘೋಷಿಸಿದ್ದರು. ಆದರೆ ಇಬ್ಬರು ತಮ್ಮ ಸುದೀರ್ಘ ದಾಂಪತ್ಯ ಜೀವನ ಯಾವ ಕಾರಣಕ್ಕೆ ಕೊನೆಯಾಯ್ತು ಎನ್ನುವುದನ್ನು ತಿಳಿಸಿಲ್ಲ. ಇದೀಗ ಜನಪ್ರಿಯ ಗಾಯಕಿ ಸುಚಿತ್ರಾ (Suchitra) ಅವರು ಧನುಷ್‌ ಮತ್ತು ಐಶ್ವರ್ಯಾ ಅವರಿಗೆ ಸಂಬಂಧಿಸಿ ಶಾಕಿಂಗ್‌ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೆಯೂ ಧನುಷ್‌ ಬಗ್ಗೆ ಆರೋಪ ಹೊರಿಸಿದ್ದ ಸುಚಿತ್ರಾ ಸಂದರ್ಶನವೊಂದರಲ್ಲಿ, ಧನುಷ್‌ ಮತ್ತು ಐಶ್ವರ್ಯಾ ಪರಸ್ಪರ ಮೋಸ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಯೂಟ್ಯೂಬ್‌ ಚಾನಲ್‌ ಕುಮುದಂಗೆ ನೀಡಿದ ಸಂದರ್ಶನಲ್ಲಿ ಸುಚಿತ್ರಾ ಈ ಬಗ್ಗೆ ಮಾತನಾಡಿದ್ದಾರೆ. ಧನುಷ್‌ ಮತ್ತು ಐಶ್ವರ್ಯಾ ಇಬ್ಬರೂ ವ್ಯವಸ್ಥಿತವಾಗಿ ಪರಸ್ಪರ ಮೋಸ ಮಾಡಿಕೊಂಡಿದ್ದ ದಂಪತಿ ಎಂದು ಸುಚಿತ್ರಾ ಕರೆದಿದ್ದಾರೆ. ಇವರು ಮದುವೆಯಾದ ಮೇಲೆ ಆಗಾಗ ಇತರರೊಂದಿಗೆ ಡೇಟಿಂಗ್ ಹೋಗುತ್ತಿದ್ದರು ಎಂದೂ ಹೇಳಿದ್ದಾರೆ. ಧನುಷ್ ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಸುಚಿತ್ರಾ, ಐಶ್ವರ್ಯಾ ಅವರನ್ನು ಕೆಟ್ಟ ತಾಯಿ ಎಂದು ಜರೆದಿದ್ದಾರೆ ಮತ್ತು ಈ ವಿಚಾರದಲ್ಲಿ ಧನುಷ್‌ ಪರವಾಗಿ ನಿಂತಿದ್ದಾರೆ. ಧನುಷ್ ಪ್ರೀತಿಯ ತಂದೆಯಾಗಿ ತಮ್ಮ ಕರ್ತವ್ಯಗಳನ್ನು ಪೂರೈಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಐಶ್ವರ್ಯಾ ಅವರು ಯಾವಾಗಲೂ ಧನುಷ್‌ ತಮಗೆ ಮೋಸ ಮಾಡಿದ್ದಾರೆ ಎಂದು ಹೇಳುತ್ತಾರೆ. ಆದರೆ ಅವರೂ ಕೂಡ ಅದನ್ನೇ ಮಾಡಿದ್ದಾರೆ. ಆಕೆಗೊಂದು ನ್ಯಾಯ ಆತನಿಗೊಂದು ನ್ಯಾಯವೇ? ಎಂದು ಸುಚಿತ್ರಾ ಪ್ರಶ್ನಿಸಿದ್ದಾರೆ. “ಅವರು ಬಾರ್‌ನಲ್ಲಿ ಕುಳಿತು ಡೇಟಿಂಗ್ ನಡೆಸುತ್ತಿರುವ ವ್ಯಕ್ತಿಯೊಂದಿಗೆ ಮದ್ಯ ಸೇವಿಸಿದ್ದಾರೆ” ಎಂದಿದ್ದಾರೆ.

ತಮ್ಮ ಮಾಜಿ ಪತಿ ಕಾರ್ತಿಕ್ ವಿರುದ್ಧವೂ ಸುಚಿತ್ರಾ ಗಂಭೀರ ಆರೋಪ ಮಾಡಿದ್ದಾರೆ. ʼʼಆತ (ಕಾರ್ತಿಕ್) ಸಲಿಂಗಕಾಮಿ. ಆದರೆ ಅದನ್ನು ಹೇಳಲು ಅವನಿಗೆ ಧೈರ್ಯವಿಲ್ಲ. ಪತಿ ಸಲಿಂಗಕಾಮಿ ಎಂದು ನನಗೆ ಮದುವೆಯಾದ 2 ವರ್ಷಕ್ಕೆ ತಿಳಿಯಿತು. ಧನುಷ್ ಹಾಗೂ ನನ್ನ ಮಾತಿ ಪತಿ ಒಟ್ಟಿಗೆ ಕೋಣೆಯಲ್ಲಿ ಏನು ಮಾಡುತ್ತಿದ್ದರು? ಪಾರ್ಟಿಗಳಲ್ಲಿ ಏನು ನಡೆಯುತ್ತಿತ್ತು?ʼʼ ಎಂದು ಸುಚಿತ್ರಾ ಕೇಳಿದ್ದಾರೆ.

ಧನುಷ್ ವಿರುದ್ಧ ಆರೋಪ ಹೊರಿಸಿದ್ದ ಸುಚಿತ್ರಾ

2017ರಲ್ಲಿ ಸುಚಿತ್ರಾ ಅವರು ಧನುಷ್ ಸಹಾಯಕ ತಮ್ಮ ಜತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದರು. ಆ ಬಳಿಕ ಧನುಷ್ ಬಗ್ಗೆಯೂ ದೂರಿದ್ದರು. ಧನುಷ್ ಓರ್ವ ಡ್ರಗ್ ಅಡಿಕ್ಟ್ ವ್ಯಕ್ತಿ, ತಮಗೆ ಕಿರುಕುಳ ನೀಡಿದ್ದರು ಎಂದು ಹೇಳಿದ್ದರು. ಇದೀಗ ಮತ್ತೊಮ್ಮೆ ಧನುಷ್‌ ವಿರುದ್ದ ಮಾತನಾಡಿ ಸಂಚಲನ ಮೂಡಿಸಿದ್ದಾರೆ.

ಕಳೆದ ತಿಂಗಳು ಧನುಷ್‌ ಮತ್ತು ಐಶ್ವರ್ಯಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ʼʼಇಬ್ಬರೂ ಅಧಿಕೃತವಾಗಿ ಚೆನ್ನೈಯ ನ್ಯಾಯಾಲಯದಲ್ಲಿ ವಿಚ್ಛೇಧನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕೆಲವು ವರ್ಷಗಳಿಂದ ಅವರು ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಅವರು ಪರಸ್ಪರ ಗೌರವ ಹೊಂದಿದ್ದಾರೆ. ಇದು ಸೌಹಾರ್ದಯುತ ಪ್ರಕ್ರಿಯೆಯಾಗಲಿದೆ” ಎಂದು ಮೂಲಗಳು ತಿಳಿಸಿವೆ.

ಸದ್ಯ ಧನುಷ್‌ ‌ʼರಾಯನ್‌ʼ ಚಿತ್ರದಲ್ಲಿ ನಟಿಸುವ ಜತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ರಾಷ್ಟ್ರ ಪಶಸ್ತಿ ವಿಜೇತ ನಟಿ ಅಪರ್ಣಾ ಬಾಲಮುರಳಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರ ಜತೆಗೆ ಬಹುಭಾಷಾ ಸಿನಿಮಾ ʼಕುಬೇರʼದಲ್ಲಿಯೂ ಧನುಷ್‌ ನಟಿಸುತ್ತಿದ್ದು, ಇವರಿಗೆ ಜೋಡಿಯಾಗಿ ಕನ್ನಡತಿ ರಶ್ಮಿಕಾ ಮಂದಣ್ಣ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ ತೆರೆಕಂಡ ಐಶ್ವರ್ಯಾ ರಜನಿಕಾಂತ್‌ ನಿರ್ರದೇಶನದ ʼಲಾಲ್‌ ಸಲಾಂʼ ಬಾಕ್ಸ್‌ ಆಫೀಸ್‌ನಲ್ಲಿ ಅಷ್ಟೇನೂ ಸದ್ದು ಮಾಡಿಲ್ಲ. ಅವರ ಮುಂದಿನ ಸಿನಿಮಾ ಇನ್ನಷ್ಟೆ ಘೋಷಣೆಯಾಗಬೇಕಿದೆ.

ಇದನ್ನೂ ಓದಿ: Actor Dhanush: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ನಾಗಾರ್ಜುನ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Vijayalakshmi Darshan: ಜೈಲಲ್ಲಿ ದರ್ಶನ್‌ ಭೇಟಿ ಬೆನ್ನಲ್ಲೇ ಫ್ಯಾನ್ಸ್‌ಗೆ ದೊಡ್ಡ ಸಂದೇಶ ಕೊಟ್ಟ ವಿಜಯಲಕ್ಷ್ಮೀ; ಇಲ್ಲಿದೆ ಪೋಸ್ಟ್!

Vijayalakshmi Darshan: ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್‌ ಅವರನ್ನು ಭೇಟಿ ಮಾಡಿಕೊಂಡು ಬಂದ ಬಳಿಕ ಇದೇ ಮೊದಲ ಬಾರಿಗೆ ವಿಜಯಲಕ್ಷ್ಮೀ ಅವರು ಪೋಸ್ಟ್‌ ಮಾಡಿದ್ದಾರೆ. ಅಭಿಮಾನಿಗಳು ಶಾಂತಿಯಿಂದ ವರ್ತಿಸಬೇಕು. ನಮಗೆ ನ್ಯಾಯ ಸಿಗಲಿದೆ ಎಂದು ಹೇಳುವ ಮೂಲಕ ಅವರು ಅಭಿಮಾನಿಗಳ ದುಃಖ, ಬೇಸರವನ್ನು ತಣಿಸುವ ಪ್ರಯತ್ನ ಮಾಡಿದ್ದಾರೆ.

VISTARANEWS.COM


on

Vijayalakshmi Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ನಟ ದರ್ಶನ್‌ (Actor Darshan) ಬಂಧಿತನಾಗಿ, ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಜೈಲಿನಲ್ಲಿರುವ ಪತಿಯನ್ನು ಭೇಟಿಯಾಗಿ ಬಂದಿರುವ ಪತ್ನಿ ವಿಜಯಲಕ್ಷ್ಮೀ (Vijayalakshmi Darshan) ಅವರು ಇನ್‌ಸ್ಟಾಗ್ರಾಂ ಪೋಸ್ಟ್‌ ಮೂಲಕ ನಟನ ಅಭಿಮಾನಿಗಳಿಗೆ ದೊಡ್ಡ ಸಂದೇಶವೊಂದನ್ನು ರವಾನಿಸಿದ್ದಾರೆ. “ಅಭಿಮಾನಿಗಳು ಶಾಂತಿಯಿಂದ ಇರಬೇಕು” ಎಂಬುದಾಗಿ ಅವರು ಪೋಸ್ಟ್‌ ಮೂಲಕ ಮನವಿ ಮಾಡಿದ್ದಾರೆ.

ವಿಜಯಲಕ್ಷ್ಮೀ ಪೋಸ್ಟ್‌ ಹೀಗಿದೆ…

” ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ” ಎಂಬುದಾಗಿ ವಿಜಯಲಕ್ಷ್ಮೀ ದರ್ಶನ್‌ ಪೋಸ್ಟ್‌ ಮಾಡಿದ್ದಾರೆ.

“ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ” ಎಂದು ಅವರು ಹೇಳಿದ್ದಾರೆ. ಇದಕ್ಕೆ ದರ್ಶನ್‌ ಅವರ ನೂರಾರು ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿಗೆ ಸೋಮವಾರ (ಜೂನ್‌ 24) ದರ್ಶನ್ ಪತ್ನಿ ವಿಜಯಲಕ್ಷ್ಮೀ, ಮಗ ವಿನೀಶ್ ಕಪ್ಪು ಬಣ್ಣದ ಕಿಯಾ ಕಾರಿನಲ್ಲಿ ಆಗಮಿಸಿದ್ದರು. ಮೊದಲು ಜೈಲಿನ ಚೆಕ್ ಪೋಸ್ಟ್ ಸಮೀಪ ಕಾರು ನಿಲ್ಲಿಸಲಾಗಿತ್ತು. ಆಗ ಮಾಧ್ಯಮಗಳ ಕ್ಯಾಮೆರಾ ಕಂಡು ವಿಜಯಲಕ್ಷ್ಮಿ, ವಿನೀಶ್ ವಾಪಸ್ ತೆರಳಿದರು. ನಂತರ ಬೇರೊಂದು ಕಾರಿನಲ್ಲಿ ಜೈಲಿನ ಬಳಿ ಬಂದರು. ಆಗ ಮಾಧ್ಯಮಗಳ ಕಣ್ತಪ್ಪಿಸಿ ಜೈಲಿನ ಒಳಗೆ ದರ್ಶನ್‌ ಪತ್ನಿ, ಪುತ್ರನನ್ನು ಪೊಲೀಸರು ಕರೆದೊಯ್ದಿದ್ದರು.‌ ದರ್ಶನ್‌ ಭೇಟಿ ಬಳಿಕ ಇದೇ ಮೊದಲ ಬಾರಿಗೆ ವಿಜಯಲಕ್ಷ್ಮೀ ಅವರು ಪೋಸ್ಟ್‌ ಮಾಡಿದ್ದಾರೆ.

ದರ್ಶನ್‌ ಪತ್ನಿ, ಪುತ್ರ ಭೇಟಿ ಮಾಡಿ ಹೊರಟ ಬಳಿಕ, ನಟ ವಿನೋದ್ ಪ್ರಭಾಕರ್ ಅವರು ಸ್ನೇಹಿತರ ಜತೆ ತೆರಳಿ ದರ್ಶನ್ ಅವರನ್ನು ಭೇಟಿ ಮಾಡಿ ನಿರ್ಗಮಿಸಿದರು. ನಂತರ ಮಾತನಾಡಿದ ವಿನೋದ್ ಪ್ರಭಾಕರ್ ಅವರು, ಮೃತ ರೇಣುಕಾ ಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ನೋವನ್ನು ಬರಿಸುವ ಶಕ್ತಿ ಭಗವಂತ ನೀಡಲಿ. ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದರು.

ಇದನ್ನೂ ಓದಿ: Actor Darshan: `ದರ್ಶನ್‌’ ಫುಲ್‌ ಟೈಟ್‌ ಆದಾಗಲೇ ಅಗ್ರೆಸಿವ್‌ ಆಗೋದು‌ ಎಂದ ಭಾವನಾ ಬೆಳಗೆರೆ!

Continue Reading

ಸ್ಯಾಂಡಲ್ ವುಡ್

Actor Darshan: `ದರ್ಶನ್‌’ ಫುಲ್‌ ಟೈಟ್‌ ಆದಾಗಲೇ ಅಗ್ರೆಸಿವ್‌ ಆಗೋದು‌ ಎಂದ ಭಾವನಾ ಬೆಳಗೆರೆ!

Actor Darshan: ಕೊಲೆ ಕೇಸ್‌ ಆದ ಬಳಿಕ ರೇಣುಕಾಸ್ವಾಮಿ ನಿವಾಸಕ್ಕೆ ರವಿ ಬೆಳಗೆರೆ ಪುತ್ರಿ ಭಾವನಾ ಬೆಳಗೆರೆ ಭೇಟಿ ನೀಡಿ, ಮೃತ ರೇಣುಕಾ ಸ್ವಾಮಿಯ ಪತ್ನಿ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು. ಆದರೀಗ ವಿಸ್ತಾರ ನ್ಯೂಸ್‌ನಲ್ಲಿ ಭಾವನಾ ಬೆಳಗೆರೆ ಅವರು ʻಕುಡಿದಾಗ ಮಾತ್ರ ದರ್ಶನ್‌ ಅಗ್ರೆಸ್ಸಿವ್‌ ಆಗಿ ಮಾತಾಡಡುತ್ತಾರೆ. ಹಾಗೇ ಈ ಕೃತ್ಯ ಕುಡಿದಾಗಲೇ ಮಾಡಿರಬಹುದುʼʼಎಂದು ಹೇಳಿಕೆ ನೀಡಿದ್ದಾರೆ.

VISTARANEWS.COM


on

Actor Darshan Full aggressive mode while he drunk
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ ಆದ ಬಳಿಕ ರೇಣುಕಾಸ್ವಾಮಿ ನಿವಾಸಕ್ಕೆ ರವಿ ಬೆಳಗೆರೆ ಪುತ್ರಿ ಭಾವನಾ ಬೆಳಗೆರೆ ಭೇಟಿ ನೀಡಿ, ಮೃತ ರೇಣುಕಾ ಸ್ವಾಮಿಯ ಪತ್ನಿ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು. ಮಾತ್ರವಲ್ಲ ಹಲವು ಮಾಧ್ಯಮಗಳಿಗೆ ಈ ಬಗ್ಗೆ ಹೇಳಿಕೆ (Actor Darshan) ನೀಡಿದ್ದಾರೆ. ಆದರೀಗ ವಿಸ್ತಾರ ನ್ಯೂಸ್‌ನಲ್ಲಿ ಭಾವನಾ ಬೆಳಗೆರೆ ಅವರು ʻಕುಡಿದಾಗ ಮಾತ್ರ ದರ್ಶನ್‌ ಅಗ್ರೆಸ್ಸಿವ್‌ ಆಗಿ ಮಾತಾಡಡುತ್ತಾರೆ. ಹಾಗೇ ಈ ಕೃತ್ಯ ಕುಡಿದಾಗಲೇ ಮಾಡಿರಬಹುದುʼʼಎಂದು ಹೇಳಿಕೆ ನೀಡಿದ್ದಾರೆ.

ಭಾವನಾ ಬೆಳಗೆರೆ ಮಾತನಾಡಿ ʻʻದರ್ಶನ್‌ ಅವರು ಕುಡಿದು ಮಾತನಾಡುವಾಗ ಅಗ್ರೆಸಿವ್‌ ಆಗಿ ಮಾತಾಡ್ತಾರೆ. ಇಲ್ಲ ಅಂದರೆ ಆರಾಮಾಗಿ ಮಾತನಾಡುತ್ತಾರೆ. ಪ್ರತಿ ಬಾರಿ ಮಾತನಾಡುವಾಗ ಅಲ್ವಾ! ಎಂಬ ಉತ್ತರಕ್ಕೆ ಕಾಯುತ್ತಾರೆ. ಮಿಕ್ಕಿದ ದಿನದಲ್ಲಿ ಕ್ಯಾಮೆರಾಗೆ ಅಟ್ಯಾಕ್‌ ಮಾಡಲು ಬರುತ್ತಾರೆ. ಕುಡಿದಿದ್ದಾಗ ಯಾರು ಏನೇ ಹೇಳಿದ್ದರೂ ಒಪ್ಪಿಕೊಳ್ಳಲ್ಲ. ಇಂದು ನಾನು ತಂದೆಯವರೆ ಹಿಸ್ಟರಿ ಇಟ್ಟುಕೊಂಡು ಮಾತಾಡ್ತಾ ಇಲ್ಲ. ನನ್ನ ಸ್ವತಃ ಅಣುಭವ ಹಂಚಿಕೊಳ್ಳುತ್ತಿರುವೆʼʼಎಂದರು.

ಇದನ್ನೂ ಓದಿ: ‌Actor Darshan: ರೇಣುಕಾಸ್ವಾಮಿಯನ್ನ ಹೀರೊ ಮಾಡೋದು ನಿಲ್ಲಿಸಿ, ದರ್ಶನ್‌ನ ಬಿಟ್ಟುಕೊಡಲ್ಲ ಎಂದ ಖ್ಯಾತ ನಿರೂಪಕಿ!

ʻʻಆಗಿನ ಕಾಲದ ನಟರನ್ನು ನಾವು ಪೂಜಿಸುತ್ತಿದ್ದೇವು. ಅಣ್ಣಾವ್ರ ಆಗಲಿ ಹಲವು ನಟರು ಇಷ್ಟವಾಗುತ್ತಿದ್ದರು. ಆದರೆ ಆಗ ಅಭಿಮಾನಿಗಳ ನಡುವೆ ಜಿದ್ದಾ ಜಿದ್ದಿ ಇರಲಿಲ್ಲ. ಆದರೆ ಈಗ ದರ್ಶನ್‌ ಅಥವಾ ಅಪ್ಪು, ಸುದೀಪ್‌ ಈ ರೀತಿ ಅಭಿಮಾನಿಗಳು ಮಾತನಾಡಲು ಶುರು ಮಾಡಿದ್ದಾರೆ. ಮುಂಚೆ ಎಲ್ಲರೂ ಒಟ್ಟಿಗೆ ನಿಂತು ಬೆಳೆಸುತ್ತಿದ್ದರು. ಆದರೀಗ ಒಬ್ಬರ ಫ್ಯಾನ್ಸ್‌ ಇನ್ನೊಬ್ಬರ ಸಿನಿಮಾ ಕೂಡ ನೋಡುತ್ತಿಲ್ಲʼʼಎಂದರು.

ನಮ್ಮ ತಂದೆ ಅವತ್ತು ಬುದ್ಧಿ ಹೇಳಿದ್ದೇ ತಪ್ಪಾ?

ʻʻನನ್ನ ತಂದೆ ದರ್ಶನ್‌ ಅವರಿಗೆ ವಿಜಯಲಕ್ಷ್ಮಿ ಅವರನ್ನು ಹೊಡೆಯಬೇಡ ಎಂದಿದ್ದಾಗ, ದರ್ಶನ್‌ ನನ್ನ ಹೆಂಡತಿ ಅವಳು ಹೊಡತ್ತೀನಿ, ನೀನು ಯಾರು ಎಂದು ಕೇಳಿದ್ದರು. ಆದರೆ ನನ್ನ ತಂದೆ ಬುದ್ಧಿ ಮಾತು ಹೇಳಿದ್ದರು. ಕುಡಿದಾಗ ಮಾತ್ರ ದರ್ಶನ್‌ ಹೀಗೆ. ಆದರೆ ಬೇರೆ ಸಮಯದಲ್ಲಿ ತುಂಬ ಸಾಫ್ಟ್‌. ಈ ಕೃತ್ಯ ಆದಾಗ ಅವರು ಕುಡಿದಾಗಲೇ ಮಾಡಿರೋದು. ಆದರೆ ಈಗ ಕಾನೂನು ಒಂದೇ. ಕುಡಿದು ಮಾಡಿದೆ ಅಂತ ಕ್ಷಮೆ ಏನು ಕಡಿಮೆ ಆಗಲ್ಲ. ಆದರೆ ದರ್ಶನ್‌ ಯಾವಾಗ ಈ ರೀತಿಯ ಗೂನವನ್ನು ಸರಿ ಮಾಡ್ಕೋತ್ತಾರೆ? ಆದರೆ ಮುಂದೆ ಏನಾಗುತ್ತೆ ಎನ್ನುವುದು ಗೊತ್ತಿಲ್ಲʼʼಎಂದರು.

ರೇಣುಕಾ ಸ್ವಾಮಿ ಚಿತ್ರದುರ್ಗದವರಾಗಿದ್ದು ಬಡ ಮಧ್ಯಮ ಕುಟುಂಬದವರಾಗಿದ್ದಾರೆ. ಕಳೆದ ವರ್ಷ ಇದೇ ತಿಂಗಳು ಮದುವೆಯಾಗಿದ್ದ ರೇಣುಕಾ ಸ್ವಾಮಿಯ ಪತ್ನಿ ಐದು ತಿಂಗಳ ಗರ್ಭಿಣಿ. ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾ ಸ್ವಾಮಿಯನ್ನು ಶನಿವಾರ ಅಪಹರಣ ಮಾಡಿದ್ದ ನಟ ದರ್ಶನ್ ಸಹಚರರು ಪಟ್ಟಣಗೆರೆಯ ಶೆಡ್​ನಲ್ಲಿ ಕೂಡಿಹಾಕಿ ಹೊಡೆದು, ಚಿತ್ರಹಿಂಸೆ ನೀಡಿ ಕೊಲೆ ಮಾಡಿ, ಚರಂಡಿಗೆ ಎಸಗಿ ಹೋಗಿದ್ದರು.

Continue Reading

ಕಾಲಿವುಡ್

Actress Akshita: ಕನ್ನಡತಿ ಅಕ್ಷಿತಾ ಈಗ ತಮಿಳು ಚಿತ್ರದ ನಾಯಕಿ!

Actress Akshita : ಕನ್ನಡದ ಸಿದ್ಲಿಂಗು-2 ಚಿತ್ರವನ್ನು ನಿರ್ಮಾಣ ಮಾಡಿದ್ದ ಬ್ಯಾನರಿನಲ್ಲಿಯೇ ಈ ಚಿತ್ರವೂ ತಯಾರಾಗುತ್ತಿದೆ. ಇದು ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲದಲ್ಲಿಯೇ ರೂಪುಗೊಳ್ಳಲಿದೆ. ವಿಶೇಷವೆಂದರೆ, ಅಕ್ಷಿತಾ ಬಯಸಿದಂಥಾ ಪಾತ್ರವೇ ಇಲ್ಲಿ ಸಿಕ್ಕಿದೆ. ಸದ್ಯದ ಮಟ್ಟಿಗೆ ಈ ಸಿನಿಮಾ ಬಗೆಗಾಗಲಿ, ಅಕ್ಷಿತಾರ ಪಾತ್ರದ ಬಗೆಗಾಗಲಿ ಹೆಚ್ಚೇನೂ ಮಾಹಿತಿ ಜಾಹೀರು ಮಾಡುವಂತಿಲ್ಲ.

VISTARANEWS.COM


on

Actress Akshita entry to kollywood cinema
Koo

ಬೆಂಗಳೂರು: ಕನ್ನಡದ ನಟ ನಟಿಯರು ಬೇರೆ ಭಾಷೆಗಳಲ್ಲಿ ಮಿಂಚುವುದು ಹೊಸತೇನಲ್ಲ. ಆದರೆ, ಬೇರೆ ಭಾಷೆಗಳಲ್ಲಿ ಜನಪ್ರಿಯತೆ ದಕ್ಕಿದ ಮೇಲೂ ಕನ್ನಡತನವನ್ನೇ ಧ್ಯಾನಿಸುತ್ತಾ, ತಾಯ್ನೆಲದ ಪ್ರೇಕ್ಷಕರನ್ನು ಚೆಂದದ ಪಾತ್ರಗಳ ಮೂಲಕ ಪ್ರಧಾನ ಆದ್ಯತೆಯಾಗಿಸಿಕೊಂಡವರ ಸಂಖ್ಯೆ ಕಡಿಮೆಯಿದೆ. ಆ ಸಾಲಿಗೆ ಸೇರುವ ಗುಣ ಹೊಂದಿರುವವರು ಅಕ್ಷಿತಾ ಬೋಪಯ್ಯ. ಕನ್ನಡದ ಒಂದಷ್ಟು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿ ಪ್ರೇಕ್ಷಕರ ಮನಗೆದ್ದಿರುವ ಅಕ್ಷಿತಾ, ಕಾಲದ ಸೆಳವಿಗೆ ಸಿಕ್ಕು ತಮಿಳು ಸೀರಿಯಲ್ ಜಗತ್ತಿಗೆ ಅಡಿಯಿರಿಸಿದ್ದರು. ಈವತ್ತಿಗೆ ಆಕೆಯ ಪಾಲಿಗೆ ತಮಿಳು ಕಿರುತೆರೆಯಲ್ಲಿ ದೊಡ್ಡ ಮಟ್ಟದ ಗೆಲುವು ಸಿಕ್ಕಿದೆ. ದೊಡ್ಡ ಸಂಖ್ಯೆಯ ಅಭಿಮಾನಿ ಬಳಗವನ್ನೂ ಸಂಪಾದಿಸಿಕೊಂಡಿರುವ ಅಕ್ಷಿತಾ ಈಗ ತಮಿಳು ಚಿತ್ರವೊಂದರ ಮೂಲಕ ನಾಯಕಿಯಾಗಿ ಬಡ್ತಿ ಪಡೆದುಕೊಂಡಿದ್ದಾರೆ.

ʻಬ್ರಹ್ಮಚಾರಿʼ, ʻಐ ಲವ್ ಯೂʼ, ʻಶಿವಾರ್ಜುನʼ ಮುಂತಾದ ಚಿತ್ರಗಳ ಮೂಲಕ ಅಕ್ಷಿತಾ ಕನ್ನಡದ ಪ್ರೇಕ್ಷಕರಿಗೆಲ್ಲ ಪರಿಚಿತರಾಗಿದ್ದಾರೆ. ಈ ನಡುವೆ ತಮಿಳು ಸೀರಿಯಲ್‌ಗಳಾಗಿ ನಟಿಸುವ ಮೂಲಕ ಭಾರೀ ಜನಪ್ರಿಯತೆಯನ್ನೂ ಪಡೆದುಕೊಂಡಿದ್ದಾರೆ. ಹಾಗೆ ಅಕ್ಷಿತಾ ನಟಿಸುತ್ತಿದ್ದ ಪ್ರಸಿದ್ಧ ತಮಿಳು ಧಾರಾವಾಹಿ ನಾಲ್ಕು ತಿಂಗಳ ಹಿಂದೆ ಮುಕ್ತಾಯಗೊಂಡಿತ್ತು. ಅದಾದ ನಂತರ ಸೀರಿಯಲ್ಲುಗಳ ಅವಕಾಶವಿದ್ದರೂ ಕೂಡಾ ಅಕ್ಷಿತಾರ ಆಸಕ್ತಿ ಹೊರಳಿಕೊಂಡಿದ್ದದ್ದು ಸಿನಿಮಾ ರಂಗದತ್ತ. ತಮಿಳು ಕಿರುತೆರೆ ಜಗತ್ತಿನ ಮುಖ್ಯ ನಾಯಕಿಯಾಗಿ ದಾಖಲಾಗಿದ್ದ ಅಕ್ಷಿತಾ, ಸಿನಿಮಾದಲ್ಲಿ ನಟಿಸುವ ಮೂಲಕ ಏಕತಾನತೆಯನ್ನು ದಾಟಿಕೊಳ್ಳುವ ನಿರ್ಧಾರ ಮಾಡಿದ್ದರು.
ಅಂಥಾ ಹೊತ್ತಿನಲ್ಲಿ ತಮಿಳಿನಲ್ಲೊಂದು ಚೆಂದದ ಅವಕಾಶ ಸಿಕ್ಕಿದೆ.

ಕನ್ನಡದ ಸಿದ್ಲಿಂಗು-2 ಚಿತ್ರವನ್ನು ನಿರ್ಮಾಣ ಮಾಡಿದ್ದ ಬ್ಯಾನರಿನಲ್ಲಿಯೇ ಈ ಚಿತ್ರವೂ ತಯಾರಾಗುತ್ತಿದೆ. ಇದು ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲದಲ್ಲಿಯೇ ರೂಪುಗೊಳ್ಳಲಿದೆ. ವಿಶೇಷವೆಂದರೆ, ಅಕ್ಷಿತಾ ಬಯಸಿದಂಥಾ ಪಾತ್ರವೇ ಇಲ್ಲಿ ಸಿಕ್ಕಿದೆ. ಸದ್ಯದ ಮಟ್ಟಿಗೆ ಈ ಸಿನಿಮಾ ಬಗೆಗಾಗಲಿ, ಅಕ್ಷಿತಾರ ಪಾತ್ರದ ಬಗೆಗಾಗಲಿ ಹೆಚ್ಚೇನೂ ಮಾಹಿತಿ ಜಾಹೀರು ಮಾಡುವಂತಿಲ್ಲ. ಆದರೆ, ಒಂದೊಳ್ಳ್ಳೆ ತಂಡ, ಹೊಸತೆನ್ನಿಸುವಂಥಾ ಕಥಾನಕದೊಂದಿಗೆ ಈ ಸಿನಿಮಾ ತಯಾರಾಗುತ್ತಿರುವ ಬಗ್ಗೆ ಅಕ್ಷಿತಾರೊಳಗೊಂದು ಖುಷಿ ಇದೆ. ಸದ್ಯ ಕೊಡಗಿನ ಸುತ್ತಮುತ್ತ ಸದರಿ ಸಿನಿಮಾದ ಚಿತ್ರೀಕರಣ ಸಂಪೂರ್ಣಗೊಂಡಿದೆ.

ಇದನ್ನೂ ಓದಿ: Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

ತಮಿಳು ಒಂದು ಹಂತದಲ್ಲಿ ಅಕ್ಷಿತಾ ಪಾಲಿಗೆ ಗುರುತಿರದ ಭಾಷೆಯಾಗಿತ್ತು. ಆ ಭಾಷೆಯಲ್ಲೇ ಧಾರಾವಾಹಿಯೊಂದರ ನಾಯಕಿಯಾಗೋ ಅವಕಾಶ ಕೂಡಿ ಬಂದಾಗ, ಪ್ರತಿಭೆಯ ಬಲದಿಂದಲೇ ಅದನ್ನು ತಮ್ಮದಾಗಿಸಿಕೊಂಡಿದ್ದವರು ಅಕ್ಷಿತಾ. ಹಾಗೆ ತಮಿಳು ಕಿರುತೆರೆಗೆ ತೆರಳಿ ಅಲ್ಲಿನ ಪ್ರೇಕ್ಷಕರನ್ನೆಲ್ಲ ಆವರಿಸಿಕೊಂಡಿರುವ ಅಕ್ಷಿತಾ ಪಾಲಿಗೆ, ಅಲ್ಲಿಯೇ ನಟಿಯಾಗಿ ನೆಲೆಗಾಣುವ ವಿಪುಲ ಅವಕಾಶಗಳಿದ್ದಾವೆ. ಆದರೂ ಕೂಡಾ ಕನ್ನಡ ಚಿತ್ರರಂಗವೇ ತನ್ನ ಪಾಲಿನ ಖಾಯಂ ನೆಲೆ ಅಂದುಕೊಂಡಿರುವ ಅವರು, ಈಗಾಗಲೇ ಕರ್ನಾಟಕದ ಅಳಿಯ, ಮಿಸ್ಟರ್ ಆಂಡ್ ಮಿಸೆಸ್ ಎಂಬೆರಡು ಚಿತ್ರಗಳಲ್ಲಿ ನಟಿಸಿದ್ದಾರೆ. ಅವೆರಡೂ ಸನಿಮಾಗಳೀಗ ಬಿಡುಗಡೆಯ ಹೊಸ್ತಿಲಿನಲ್ಲಿವೆ.

ಹೀಗೆ ಪರಭಾಷಾ ನೆಲದಲ್ಲಿಯೂ ನೆಲೆ ಕಂಡುಕೊಂಡು, ಕನ್ನಡ ಚಿತ್ರರಂಗದಲ್ಲಿಯೂ ಮಿಂಚುವ ಲಕ್ಷಣಗಳನ್ನ ಹೊಂದಿರುವ ಅಕ್ಷಿತಾ ಕೊಡಗಿನವರು. ಬಿಎಸ್‍ಸಿ ಪದವೀಧರೆಯಾಗಿರೋ ಅಕ್ಷಿತಾ ಕ್ಲಾಸಿಕಲ್ ಡ್ಯಾನ್ಸರ್ ಕೂಡಾ ಹೌದು. ಕುಟುಂಬದಲ್ಲಿ ಸಿನಿಮಾ ಹಿನ್ನಲೆ ಇಲ್ಲದಿದ್ದರೂ ಕೂಡಾ ಆರಂಭದಿಂದಲೇ ನಟಿಯಾಗೋ ಕನಸು ಸಾಕಿಕೊಂಡಿದ್ದವರು ಅಕ್ಷಿತಾ. ಪದವಿ ಮುಗಿಯುತ್ತಲೇ ಕೆಲಸಕ್ಕೆ ಸೇರಿಕೊಳ್ಳುವ ಸಂದರ್ಭ ಬಂದಾಗ ಸೀದಾ ತನ್ನ ಕನಸಿನ ಹಾದಿಯಲ್ಲಿ ಧೈರ್ಯವಾಗಿ ಹೆಜ್ಜೆಯೂರಿದ್ದ ಈಕೆ, ಸಾಯಿ ಕುಮಾರ್ ನಟಿಸಿದ್ದ ರಿಯಲ್ ಪೊಲೀಸ್ ಚಿತ್ರದ ಪಾತ್ರವೊಂದರಲ್ಲಿ ನಟಿಸಿದ್ದರು. ಆ ಮೂಲಕ ಎಂಟ್ರಿ ಪಡೆದುಕೊಂಡಿದ್ದ ಅಕ್ಷಿತಾ ಆ ನಂತರದಲ್ಲಿ ಒಂದಷ್ಟು ಚಿತ್ರಗಳಲ್ಲಿ ಸಹನಟಿಯಾಗಿ ನಟಿಸಿ, ನಂತರ ನಾಯಕಿಯಾಗಿಯೂ ಹೊರಹೊಮ್ಮಿದ್ದರು.

ಈ ನಡುವೆ ತಮಿಳು ಸೀರಿಯಲ್ಲುಗಳ ಅವಕಾಶ ಸಿಕ್ಕಿ, ಅಲ್ಲಿ ಪ್ರಸಿದ್ಧಿ ಬಂದರೂ ಕನ್ನಡವೇ ಅಕ್ಷಿತಾರ ಪಾಲಿಗೆ ಪ್ರಧಾನ ಆದ್ಯತೆಯಾಗಿತ್ತು. ಕನ್ನಡದ ನೆಲೆಯಿಂದಲೇ ಬೇರೆ ಬೇರೆ ಭಾಷೆಗಳಲ್ಲಿಯೂ ನಟಿಸಬೇಕೆಂಬುದು ಅವರ ಬಯಕೆ. ಓರ್ವ ನಟಿಯಾಗಿ ಅಕ್ಷಿತಾರದ್ದು ಭಿನ್ನ ಅಭಿರುಚಿ. ಸಿಕ್ಕ ಅವಕಾಶಗಳನ್ನು ಅಳೆದೂ ತೂಗಿ ಒಪ್ಪಿಕೊಳ್ಳುವ ಈಕೆಯ ಪ್ರಧಾನ ಆದ್ಯತೆ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳೇ. ನಟನೆಗೆ ಅವಕಾಶವಿರುವ ಭಿನ್ನ ಪಾತ್ರಗಳಲ್ಲಿ ಮಿಂಚುವ ಆಸೆ ಹೊಂದಿರುವ ಅಕ್ಷಿತಾ ಈಗ ತಮಿಳಿನಲ್ಲಿ ನಾಯಕಿಯಾಗಿ ಅವತರಿಸಿದ್ದಾರೆ. ತೆಲುಗಿಗೂ ಎಂಟರಿ ಕೊಡುತ್ತಿದ್ದಾರೆ. ಇದೇ ಹೊತ್ತಿನಲ್ಲಿ ಕನ್ನಡದಲ್ಲಿಯೂ ಒಂದಷ್ಗಟು ಒಳ್ಳೆ ಅವಕಾಶಗಳು ಅವರನ್ನು ಅರಸಿಕೊಂಡು ಬರುತ್ತಿವೆ. ಸ್ತ್ರೀ ಪ್ರಧಾನ ಚಿತ್ರದ ಕನಸು ಹೊಂದಿರೋ ಅಕ್ಷಿತಾ, ಅಂಥಾದ್ದೊಂದು ಅಮೋಘ ಅವಕಾಶ ಕನ್ನಡದಿಂದಲೇ ಸಿಗುವ ನಿರೀಕ್ಷೆ ಹೊಂದಿದ್ದಾರೆ.

Continue Reading

ಕಿರುತೆರೆ

Shri Devi Mahathme: ಬರ್ತಿದೆ ಪಾರ್ವತಿ ಜಗನ್ಮಾತೆಯಾದ ಕಥೆ “ಶ್ರೀ ದೇವೀ ಮಹಾತ್ಮೆ”; ವೀಕ್ಷಣೆ ಎಲ್ಲಿ?

Shri Devi Mahathme: ಇನ್ನು ಈ ಧಾರಾವಾಹಿಯು ಅದ್ಧೂರಿಯಾಗಿ, ಅಮೋಘ ಸೆಟ್‌ ಗಳು ಮತ್ತು ಅತ್ಯದ್ಭುತವಾಗಿರುವ ಗ್ರಾಫಿಕ್ಸ್‌ ತಂತ್ರಜ್ಞಾನಗಳಿಂದ ಚಿತ್ರೀಕರಣಗೊಳ್ಳುತ್ತಿದೆ. ಟಿವಿಯಲ್ಲಿ ಪ್ರಸಾರವಾಗುತ್ತಿರುವ ಪ್ರೋಮೋಗಳಿಗೆ ಜನರು ಮನಸೋತಿದ್ದು, ಧಾರಾವಾಹಿಯನ್ನು ನೋಡಲು ಕಾತರತೆಯಿಂದ ಕಾಯುತ್ತಿದ್ದಾರೆ.

VISTARANEWS.COM


on

Koo

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಹಲವು ಮೊದಲುಗಳಿಗೆ ಸಾಕ್ಷಿಯಾಗಿರುವ ಸ್ಟಾರ್ ಸುವರ್ಣ ವಾಹಿನಿಯು (star suvrna) ವೀಕ್ಷಕರಿಗೆ ಪುರಾಣ, ಆಧ್ಯಾತ್ಮ ಮತ್ತು ಮೌಲ್ಯಾಧಾರಿತ ಕಥೆಗಳನ್ನು ನೀಡುವ ಸಲುವಾಗಿ ಗುರು ರಾಘವೇಂದ್ರ ವೈಭವ, ಹರ ಹರ ಮಹಾದೇವ, ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ (Shri Devi Mahathme) ಹಾಗು ಎಡೆಯೂರು ಶ್ರೀ ಸಿದ್ದಲಿಂಗೇಶ್ವರದಂತಹ ಧಾರಾವಾಹಿಗಳನ್ನು ನೀಡುತ್ತಾ ಬಂದಿದೆ. ಇದೀಗ ನಿಮ್ಮ ಮನರಂಜನೆಯನ್ನು ದುಪ್ಪಟ್ಟುಗೊಳಿಸಲು ಜಗವನು ಕಾಯುವ ಕರುಣೆಯ ತಾಯಿ ‘ಪಾರ್ವತಿ’ಯ ಕಥೆಯನ್ನು ಪ್ರಸ್ತುತಪಡಿಸಲು ಸಜ್ಜಾಗಿದೆ ಅದೇ “ಶ್ರೀ ದೇವೀ ಮಹಾತ್ಮೆ”.

ಪುರಾಣಗಳ ಪ್ರಕಾರ ಸತಿಯು ಅತ್ಯಂತ ಸುಂದರವಾಗಿರುತ್ತಾಳೆ. ತಪಸ್ವಿ ಶಿವನಿಗೆ ಮನಸೋಲುವ ಸತಿ, ಮುಂದೆ ಪಾರ್ವತಿಯಾಗಿ ಹೇಗೆ ಮರು ಜನ್ಮತಾಳುತ್ತಾಳೆ ? ಹಾಗು ಮಹಾಕಾಳಿಯ ರುದ್ರಾವತಾರವನ್ನು ಏಕೆ ಧರಿಸುತ್ತಾಳೆ ? ಎಂಬುದರ ಜೊತೆಗೆ ಜಗನ್ಮಾತೆಯ ಮಹಿಮೆಯನ್ನು, ಪವಾಡಗಳನ್ನು ಅರ್ಥಗರ್ಭಿತವಾಗಿ ಎಳೆ ಎಳೆಯಾಗಿ ಮನಮುಟ್ಟುವಂತೆ ಜನರಿಗೆ ತಿಳಿಸುವುದೇ ‘ಶ್ರೀ ದೇವೀ ಮಹಾತ್ಮೆ’ಯ ಮುಖ್ಯ ಉದ್ದೇಶ.

ಇನ್ನು ಈ ಧಾರಾವಾಹಿಯು ಅದ್ಧೂರಿಯಾಗಿ, ಅಮೋಘ ಸೆಟ್‌ ಗಳು ಮತ್ತು ಅತ್ಯದ್ಭುತವಾಗಿರುವ ಗ್ರಾಫಿಕ್ಸ್‌ ತಂತ್ರಜ್ಞಾನಗಳಿಂದ ಚಿತ್ರೀಕರಣಗೊಳ್ಳುತ್ತಿದೆ. ಟಿವಿಯಲ್ಲಿ ಪ್ರಸಾರವಾಗುತ್ತಿರುವ ಪ್ರೋಮೋಗಳಿಗೆ ಜನರು ಮನಸೋತಿದ್ದು, ಧಾರಾವಾಹಿಯನ್ನು ನೋಡಲು ಕಾತರತೆಯಿಂದ ಕಾಯುತ್ತಿದ್ದಾರೆ. ಶಿವನ ಪಾತ್ರವನ್ನು ಅರ್ಜುನ್ ರಮೇಶ್, ಪಾರ್ವತಿಯ ಪಾತ್ರವನ್ನು ಜೀವಿತಾ ವಸಿಷ್ಠ ನಿರ್ವಹಿಸುತ್ತಿದ್ದಾರೆ. ಜೊತೆಗೆ ಈ ಪೌರಾಣಿಕ ಧಾರಾವಾಹಿಯು ಅತ್ಯುತ್ತಮ ತಾರಾಗಣವನ್ನು ಹೊಂದಿದ್ದು, ನಂದಿ ಮೂವೀಸ್ ನಿರ್ಮಾಣ ಸಂಸ್ಥೆಯು ಈ ಧಾರಾವಾಹಿಯನ್ನು ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ: Shubman Gill: ಕಿರುತೆರೆ​ ನಟಿಯೊಂದಿಗೆ ಶುಭಮನ್​ ಗಿಲ್ ಮದುವೆ?; ಸ್ವತಃ ಸ್ಪಷ್ಟನೆ ನೀಡಿದ ನಟಿ

ಪಾರ್ವತಿ ಜಗನ್ಮಾತೆಯಾದ ಕಥೆ “ಶ್ರೀ ದೇವೀ ಮಹಾತ್ಮೆ” ನಿಮ್ಮ ಮನೆ ಮನದಂಗಳದಲ್ಲಿ ಇದೇ ಜುಲೈ 1 ರಿಂದ ಸೋಮ-ಶನಿವಾರ ರಾತ್ರಿ 7 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

{ಬದಲಾದ ಸಮಯದಲ್ಲಿ ಬರ್ತಿದೆ ನಿಮ್ಮ ನೆಚ್ಚಿನ ಧಾರಾವಾಹಿ “ಗೌರಿ ಶಂಕರ” ಇದೇ ಸೋಮವಾರದಿಂದ ಸಂಜೆ 6.30 ತಪ್ಪದೇ ವೀಕ್ಷಿಸಿ}

Continue Reading
Advertisement
Serial Bride
ದೇಶ25 mins ago

Serial Bride: ಹಲವು ಜನರನ್ನು ಮದುವೆಯಾಗಿ ವಂಚಿಸಿದ್ದ ಮಹಿಳೆಗೆ ಎಚ್‌ಐವಿ; ಮಾಜಿ ವರಗಳಿಗಾಗಿ ಶೋಧ!

Demand to provide job reservation for Kannadigas; Massive Dharani sathyagraha on July 1 from Karave
ಕರ್ನಾಟಕ57 mins ago

Bengaluru News: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ; ಕರವೇಯಿಂದ ಜು.1ರಂದು ಬೃಹತ್ ಧರಣಿ ಸತ್ಯಾಗ್ರಹ

Attica Babu
ಕರ್ನಾಟಕ2 hours ago

Attica Babu: ಕದ್ದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ

Terrorists Killed
ಪ್ರಮುಖ ಸುದ್ದಿ2 hours ago

Terrorists Killed: ಆಪರೇಷನ್‌ ಆಲ್‌ಔಟ್ ಯಶಸ್ವಿ; ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ

DCM Dk shivakumar statement in bagilige bantu sarkara sevege irali sahakara programme in channapattana
ಕರ್ನಾಟಕ3 hours ago

DK Shivakumar: ಸರ್ಕಾರಿ ಅಧಿಕಾರಿಗಳು ಗುಲಾಮರೆಂದ ಮಾಜಿ ಶಾಸಕ; ಕ್ಷಮೆ ಕೇಳಿದ ಡಿ.ಕೆ. ಶಿವಕುಮಾರ್

MEIL got the opportunity to implement Kaiga nuclear power generation project
ಕರ್ನಾಟಕ3 hours ago

MEIL: ಕೈಗಾ ಪರಮಾಣು ವಿದ್ಯುತ್‌ ಉತ್ಪಾದನೆ ಯೋಜನೆ ಜಾರಿ ಅವಕಾಶ ಗಿಟ್ಟಿಸಿದ ಎಂ.ಇ.ಐ.ಎಲ್‌

DCM DK Shivakumar statement about milk price hike
ಕರ್ನಾಟಕ3 hours ago

DK Shivakumar: ಹಾಲಿನ ದರ ಕಡಿಮೆಯಾಯಿತು, ಇನ್ನೂ ಹೆಚ್ಚಿಸಬೇಕಿತ್ತು ಎಂದ ಡಿ.ಕೆ. ಶಿವಕುಮಾರ್

Union Minister HD Kumaraswamy latest statement in New Delhi
ಬೆಂಗಳೂರು3 hours ago

HD Kumaraswamy: ನನ್ನ ಹೃದಯದಲ್ಲಿ ಕೆಂಪೇಗೌಡರಿದ್ದಾರೆ, ಆಹ್ವಾನ ಬೇಕಿಲ್ಲ; ಕುಮಾರಸ್ವಾಮಿ

NEET UGC NET Exam irregularities protest demanding investigation
ರಾಯಚೂರು3 hours ago

Raichur News: ನೀಟ್, ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ; ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

kempegowda Jayanti
ಪ್ರಮುಖ ಸುದ್ದಿ3 hours ago

Kempegowda Jayanti: ಕೆಂಪೇಗೌಡ ಜಯಂತಿಗೆ ದೇವೇಗೌಡ, ಎಚ್‌ಡಿಕೆಗೆ ಸಿಗದ ಆಹ್ವಾನ; ಸರ್ಕಾರದ ವಿರುದ್ಧ ತಿರುಗಿಬಿದ್ದ ಒಕ್ಕಲಿಗರ ಸಂಘ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌