Rakhi Sawant: ಆಸ್ಪತ್ರೆಗೆ ದಾಖಲಾದ ನಟಿ ರಾಖಿ ಸಾವಂತ್‌ - Vistara News

ಬಾಲಿವುಡ್

Rakhi Sawant: ಆಸ್ಪತ್ರೆಗೆ ದಾಖಲಾದ ನಟಿ ರಾಖಿ ಸಾವಂತ್‌

Rakhi Sawant: ಇದಕ್ಕೂ ಮುಂಚೆ ರಾಖಿ ಅವರು ಕೆಂಪು ಟವೆಲ್ ಧರಿಸಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಸುದ್ದಿ ಮಾಡಿದರು. ಪಾಪರಾಜಿಗಳೊಂದಿಗೆ ತಮಾಷೆಯ ವಿಡಿಯೊಗಳು ಬಹಳಷ್ಟು ಸದ್ದು ಮಾಡಿತ್ತು. ಸದಾ ತಮ್ಮ ವಿಭಿನ್ನ ಉಡುಗೆ ಮತ್ತು ಲುಕ್‌ಗಳಿಗೆ ಹೆಸರುವಾಸಿಯಾಗಿರುವ ರಾಖಿ ಸಾವಂತ್ ಇತ್ತೀಚೆಗೆ ಈವೆಂಟ್‌ನಲ್ಲಿ ವಿಶಿಷ್ಟವಾದ ‘ಟವೆಲ್’ ಉಡುಪನ್ನು ಧರಿಸಿ ಅಭಿಮಾನಿಗಳನ್ನು ಬೆರಗುಗೊಳಿಸಿದರು. ಟವೆಲ್‌ ಧರಿಸಿ ರೆಡ್ ಕಾರ್ಪೆಟ್‌ನಲ್ಲಿ ನಡೆಯುವ ಫೋಟೊ ಹಾಗೂ ವಿಡಿಯೊಗಳು ವೈರಲ್‌ ಆಗಿತ್ತು.

VISTARANEWS.COM


on

Rakhi Sawant Rushed to Hospital After Heart-Related Ailment
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟಿ ರಾಖಿ ಸಾವಂತ್‌ (Rakhi Sawant) ಆಸ್ಪತ್ರೆಗೆ ದಾಖಲಾಗಿರುವ ಫೋಟೊ ವೈರಲ್‌ ಆಗುತ್ತಿದೆ. ವರದಿಗಳ ಪ್ರಕಾರ, ರಾಖಿ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಇದೀಗ ನಟಿಯ ಫ್ಯಾನ್ಸ್‌ ʻಬೇಗ ಚೇತರಿಸಿಕೊಳ್ಳಿʼ ಎಂದು (Rakhi Sawant Heart-Related Ailment) ಕಮೆಂಟ್‌ ಮಾಡುತ್ತಿದ್ದಾರೆ. ಇನ್ನೂ ಕೆಲವರು ಪ್ರಚಾರಕ್ಕಾಗಿ ಹೀಗೆ ಮಾಡುತ್ತಿದ್ದಾರೆ ಎಂದು ಕಮೆಂಟ್‌ ಮಾಡಿದ್ದಾರೆ.

ವರದಿಗಳ ಪ್ರಕಾರ ರಾಖಿ ಸಾವಂತ್ ಅವರು ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ರಾಖಿ ಸಾವಂತ್ ಪಾಪರಾಜಿವೊಬ್ಬರಿಗೆ ಸಂದೇಶ ಕಳಿಸಿದ್ದಾರಂತೆ. ಮಾಜಿ ಪತಿ ರಿತೇಶ್ ಅವರು ಶೀಘ್ರದಲ್ಲೇ ಅವರ ಆರೋಗ್ಯದ ಬಗ್ಗೆ ತಿಳಿಸುವುದಾಗಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ.

ಇದಕ್ಕೂ ಮುಂಚೆ ರಾಖಿ ಅವರು ಕೆಂಪು ಟವೆಲ್ ಧರಿಸಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಸುದ್ದಿ ಮಾಡಿದರು. ಪಾಪರಾಜಿಗಳೊಂದಿಗೆ ತಮಾಷೆಯ ವಿಡಿಯೊಗಳು ಬಹಳಷ್ಟು ಸದ್ದು ಮಾಡಿತ್ತು. ಸದಾ ತಮ್ಮ ವಿಭಿನ್ನ ಉಡುಗೆ ಮತ್ತು ಲುಕ್‌ಗಳಿಗೆ ಹೆಸರುವಾಸಿಯಾಗಿರುವ ರಾಖಿ ಸಾವಂತ್ ಇತ್ತೀಚೆಗೆ ಈವೆಂಟ್‌ನಲ್ಲಿ ವಿಶಿಷ್ಟವಾದ ‘ಟವೆಲ್’ ಉಡುಪನ್ನು ಧರಿಸಿ ಅಭಿಮಾನಿಗಳನ್ನು ಬೆರಗುಗೊಳಿಸಿದರು. ಟವೆಲ್‌ ಧರಿಸಿ ರೆಡ್ ಕಾರ್ಪೆಟ್‌ನಲ್ಲಿ ನಡೆಯುವ ಫೋಟೊ ಹಾಗೂ ವಿಡಿಯೊಗಳು ವೈರಲ್‌ ಆಗಿತ್ತು.

ಇದನ್ನೂ ಓದಿ: Rakhi Sawant: ವೈಮನಸ್ಸು ಬಿಟ್ಟು ಮಾಜಿ ಪತಿ ಜೊತೆ ಒಂದಾದ್ರಾ ರಾಖಿ ಸಾವಂತ್‌?

ಆದಿಲ್‌ ಖಾನ್‌ ದುರಾನಿ(Adil Khan Durrani) ಜೊತೆ ವೈವಾಹಿಕ ಸಂಬಂಧ ಕಳೆದುಕೊಂಡ ಬಳಿಕ ಇದೀಗ ನಟಿ ರಾಖಿ ಸಾವಂತ್‌ ತಮ್ಮ ಮಾಜಿ ಪತಿ ರಿತೇಶ್‌(Rithesh) ಜತೆ ಮತ್ತೆ ಕಾಣಿಸಿಕೊಂಡಿದ್ದರು. ಆದಿಲ್‌ ಕೂಡ ರಾಖಿ ಸಾವಂತ್‌ ಜೊತೆಗಿನ ನಿರಂತರ ಕಾನೂನು ಹೋರಾಟದ ಬಳಿಕ ಇತ್ತೀಚೆಗೆ ಇನ್‌ಸ್ಟಾಗ್ರಾಂನಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದರು. ಸುಪ್ರೀಂ ಕೋರ್ಟ್‌(Supreme Court) ರಾಖಿಯ ನಿರೀಕ್ಷಣಾ ಜಾಮೀನನ್ನು ತಿರಸ್ಕರಿಸಿದ್ದು, ನಾಲ್ಕು ವಾರಗಳಲ್ಲಿ ಕೋರ್ಟ್‌ ಮುಂದೆ ಶರಣಾಗುವಂತೆ ಆದೇಶಿದೆ. ಇದರ ಅರ್ಥ ಏನೆಂದರೆ ಮೊದಲು ಆಕೆ ಜೈಲಿಗೆ ಹೋಗಲೇಬೇಕು. ಆಮೇಲಷ್ಟೇ ಜಾಮೀನು ಪಡೆಯಬಹುದು ಎಂದು ಹೇಳಿದ್ದರು. ಇದರಿಂದ ರೊಚ್ಚಿಗೆದ್ದಿರುವ ರಾಖಿ ಮಾಜಿ ಪತಿ ರಿತೇಶ್‌ ಜೊತೆಗೂಡಿ ಆದಿಲ್‌ ವಿರುದ್ಧ ಕಿಡಿಕಾರಿದ್ದರು.

ರಾಖಿ ಸಾವಂತ್ ಅವರ ಮಾಜಿ ಪತಿ ಆದಿಲ್ ಖಾನ್ ದುರಾನಿ ಈಗಾಗಲೇ ಮತ್ತೊಮ್ಮೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದಿಲ್ ಖಾನ್ ಇತ್ತೀಚೆಗೆ ಜೈಪುರದಲ್ಲಿ ಹಿಂದಿ ಬಿಗ್ ಬಾಸ್ 12ರ ಖ್ಯಾತಿಯ ಸೋಮಿ ಖಾನ್ ಅವರನ್ನು ವಿವಾಹವಾಗಿದ್ದಾರೆ. ಈ ಮದುವೆಯಲ್ಲಿ ಆಪ್ತರು ಮಾತ್ರ ಹಾಜರಿದ್ದರು. ಸೋಮಿ ಅವರು ಸಬಾ ಖಾನ್ ಅವರ ಸಹೋದರಿ. ಕಳೆದ ಕೆಲವು ತಿಂಗಳುಗಳಿಂದ ಆದಿಲ್ ಹಾಗೂ ಸೋಮಿ ಇಬ್ಬರೂ ತಮ್ಮ ಸಂಬಂಧವನ್ನು ರಹಸ್ಯವಾಗಿ ಇಟ್ಟಿದ್ದರು ಎನ್ನಲಾಗಿದೆ. ಸಲ್ಮಾನ್ ಖಾನ್ ನಡೆಸಿಕೊಡುವ ‘ಬಿಗ್ ಬಾಸ್ ಹಿಂದಿ ಸೀಸನ್ 12’ರಲ್ಲಿ ಸೋಮಿ ಮತ್ತು ಸಬಾ ಖಾನ್ ಇಬ್ಬರೂ ಸ್ಪರ್ಧಿಗಳಾಗಿ ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

Ghuspaithia Hindi movie: ಕನ್ನಡ ಚಿತ್ರರಂಗದಲ್ಲಿ ‘ಉಪ್ಪು ಹುಳಿ ಖಾರʼ, ‘ನಾತಿಚರಾಮಿʼ, ‘ಪಡ್ಡೆಹುಲಿʼ, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿರುವ ಹಾಗೂ ಪ್ರಸ್ತುತ ಬಹು ನಿರೀಕ್ಷಿತ “45” ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಬಾಲಿವುಡ್ ನಲ್ಲಿ “ಘುಸ್ಪೈಥಿಯಾ” ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿತು.

VISTARANEWS.COM


on

Ghuspaithia Hindi movie release on August 9
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ‘ಉಪ್ಪು ಹುಳಿ ಖಾರʼ, ‘ನಾತಿಚರಾಮಿʼ, ‘ಪಡ್ಡೆಹುಲಿʼ, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿರುವ ಹಾಗೂ ಪ್ರಸ್ತುತ ಬಹು ನಿರೀಕ್ಷಿತ “45” ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಬಾಲಿವುಡ್ ನಲ್ಲಿ “ಘುಸ್ಪೈಥಿಯಾ” ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ರಮೇಶ್ ರೆಡ್ಡಿ, ಜ್ಯೋತಿಕ ಶೆಣೈ ಹಾಗೂ ಮಂಜರಿ ಸುಸಿ ಗಣೇಶನ್ ನಿರ್ಮಿಸಿರುವ ಈ ಚಿತ್ರವನ್ನು ಸುಸಿ ಗಣೇಶನ್ ನಿರ್ದೇಶಿಸಿದ್ದಾರೆ.

ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿತು.

ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ಮಾಪಕ ರಮೇಶ್ ರೆಡ್ಡಿ, ಈ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರವಿರಲಿ. ಮುಂದೆ ಕೂಡ ಹಿಂದಿ ಚಿತ್ರಗಳನ್ನು ನಿರ್ಮಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Paris Olympic: ರೋಯಿಂಗ್​ನಲ್ಲಿ ಶುಭ ಸುದ್ದಿ; ಶೂಟಿಂಗ್​ನಲ್ಲಿ ನಿರಾಸೆ ಮೂಡಿಸಿದ ಮಿಶ್ರ ತಂಡ

ಆಗಸ್ಟ್ 9ರಂದು AA ಫಿಲಂಸ್ ಮೂಲಕ ಬಿಡುಗಡೆಯಾಗಲಿರುವ ಈ ಚಿತ್ರದ ತಾರಾಬಳಗದಲ್ಲಿ ವಿನೀತ್ ಕುಮಾರ್ ಸಿಂಗ್, ಊರ್ವಶಿ ರೌಟೇಲ, ಅಕ್ಷಯ್ ಒಬೆರಾಯ್ ಮುಂತಾದವರಿದ್ದಾರೆ.

Continue Reading

ಬಾಲಿವುಡ್

Malaika Arora: ಒಂದೇ ಈವೆಂಟ್‌ನಲ್ಲಿ ಇದ್ದರೂ ಒಬ್ಬರ ಮುಖವನ್ನು ಇನ್ನೊಬ್ಬರು ನೋಡಿಕೊಂಡಿಲ್ಲ! ಅರ್ಜುನ್​-ಮಲೈಕಾ ಬ್ರೇಕಪ್‌ ಖಚಿತ?

Malaika Arora: ಈವೆಂಟ್‌ನಲ್ಲಿ ಜೋಡಿಯ ಹಲವಾರು ವೀಡಿಯೊಗಳು ಮತ್ತು ಚಿತ್ರಗಳು ಸಾಮಾಜಿಕ ವೈರಲ್‌ ಆಗಿವೆ. ಆದರೆ ಇಬ್ಬರೂ ಒಂದೇ ಈವೆಂಟ್‌ನಲ್ಲಿ ಭಾಗಿಯಾಗಿದ್ದರೂ ಈಗ ಪರಸ್ಪರ ದೂರ ಆಗಿದ್ದಾರೆ.ಇಬ್ಬರೂ ಒಂದೇ ವೇದಿಕೆ ಏರಿದ್ದಾರೆ. ಆದರೆ, ಒಬ್ಬರಿಗೊಬ್ಬರು ನಿರ್ಲಕ್ಷಿಸಿದ್ದಾರೆ. ಒಬ್ಬರ ಮುಖವನ್ನು ಮತ್ತೊಬ್ಬರು ನೋಡಿಕೊಂಡಿಲ್ಲ.

VISTARANEWS.COM


on

Malaika Arora breakup rumours rushes past Arjun Kapoor
Koo

ಬೆಂಗಳೂರು: ಬ್ರೇಕಪ್ ವದಂತಿಗಳ ಬಳಿಕ, ನಟ ಅರ್ಜುನ್ ಕಪೂರ್ ಮತ್ತು ಮಲೈಕಾ ಅರೋರಾ (Malaika Arora) ಶುಕ್ರವಾರ ದೆಹಲಿಯಲ್ಲಿ ನಡೆದ ಇಂಡಿಯಾ ಕೌಚರ್ ವೀಕ್‌ನಲ್ಲಿ ಡಿಸೈನರ್ ಕುನಾಲ್ ರಾವಲ್ ಅವರ ಕಾರ್ಯಕ್ರಮದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಈವೆಂಟ್‌ನಲ್ಲಿ ಜೋಡಿಯ ಹಲವಾರು ವೀಡಿಯೊಗಳು ಮತ್ತು ಚಿತ್ರಗಳು ಸಾಮಾಜಿಕ ವೈರಲ್‌ ಆಗಿವೆ. ಆದರೆ ಇಬ್ಬರೂ ಒಂದೇ ಈವೆಂಟ್‌ನಲ್ಲಿ ಭಾಗಿಯಾಗಿದ್ದರೂ ಈಗ ಪರಸ್ಪರ ದೂರ ಆಗಿದ್ದಾರೆ.ಇಬ್ಬರೂ ಒಂದೇ ವೇದಿಕೆ ಏರಿದ್ದಾರೆ. ಆದರೆ, ಒಬ್ಬರಿಗೊಬ್ಬರು ನಿರ್ಲಕ್ಷಿಸಿದ್ದಾರೆ. ಒಬ್ಬರ ಮುಖವನ್ನು ಮತ್ತೊಬ್ಬರು ನೋಡಿಕೊಂಡಿಲ್ಲ.

ವೀಡಿಯೊವೊಂದರಲ್ಲಿ, ಅರ್ಜುನ್ ಕಪೂರ್ ಮತ್ತು ಮಲೈಕಾ ಮುಂದಿನ ಸಾಲಿನಲ್ಲಿ ಕುಳಿತಿದ್ದಾರೆ. ಪರಸ್ಪರ ಅಕ್ಕ ಪಕ್ಕದಲ್ಲಿ ಕುಳಿತುಕೊಳ್ಳಲಿಲ್ಲ. ಮತ್ತೊಂದು ಕ್ಲಿಪ್‌ನಲ್ಲಿ, ಅರ್ಜುನ್ ಕಪೂರ್ ಎದುರಲ್ಲೇ ಮಲೈಕಾ ಹಾದು ಹೋಗಿದ್ದಾರೆ. ಈ ವೇಳೆ ಅಭಿಮಾನಿಗಳು ಮುತ್ತಿಕೊಳ್ಳದಂತೆ ತಡೆದಿದ್ದಾರೆ ಅರ್ಜುನ್ ಕಪೂರ್. ಆದರೆ, ಇದನ್ನು ಮಲೈಕಾ ಅರೋರಾ ಗಮನಿಸಿಯೂ ಇಲ್ಲ. ಅವರು ನೇರವಾಗಿ ಹೊರಟು ಹೋಗಿದ್ದಾರೆ. ಈ ಮೂಲಕ ಬ್ರೇಕಪ್ ವಿಚಾರ ಖಚಿತವಾಗಿದೆ. ಸ್ವತಃ ಮಲೈಕಾ ಅವರೇ ಬ್ರೇಕಪ್ ಮಾಡಿಕೊಂಡರೇ ಎನ್ನುವ ಪ್ರಶ್ನೆ ಮೂಡಿದೆ. ಏಕೆಂದರೆ ಅರ್ಜುನ್ ಕಪೂರ್​ಗೆ ಮಲೈಕಾ ಮೇಲೆ ಇನ್ನೂ ಕಾಳಜಿ ಇದೆ. ಆದರೆ, ಈ ಕಾಳಜಿ ಮಲೈಕಾಗೆ ಇಲ್ಲ.

ಈವೆಂಟ್‌ಗಾಗಿ, ಮಲೈಕಾ ವೈಟ್ ಬ್ಲೇಜರ್ ಕೋ-ಆರ್ಡರ್ ಸೆಟ್‌ನಲ್ಲಿ ಸುಂದರವಾಗಿ ಕಾಣುತ್ತಿದ್ದರು. ಅರ್ಜುನ್ ಕಪ್ಪು ಶೆರ್ವಾನಿ ಮತ್ತು ಧೋತಿ ಪ್ಯಾಂಟ್‌ನಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: Malaika Arora: 38ರ ಅರ್ಜುನ್‌ ಕಪೂರ್‌ಗೆ 50ರ ಮಲೈಕಾ ಅರೋರಾ ಸಹವಾಸ ಸಾಕಾಯ್ತಾ?!

ಮಲೈಕಾ ಮತ್ತು ಅರ್ಜುನ್ ʼವಿಶೇಷವಾದ ಸಂಬಂಧʼವನ್ನು ಹೊಂದಿದ್ದರು. ಇಬ್ಬರೂ ಪರಸ್ಪರರ ಹೃದಯದಲ್ಲಿ ವಿಶೇಷ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಆದರೆ ಇದೀಗ ಜೋಡಿ ಬೇರೆಯಾಗಬೇಕು ಎಂದು ನಿರ್ಧರಿಸಿದೆ. ಇಷ್ಟೂ ವರ್ಷಗಳಲ್ಲಿ, ಅವರು ತಮ್ಮ ಸಂಬಂಧಕ್ಕೆ ಗೌರವವನ್ನು ನೀಡಿದ್ದಾರೆ. ಒಂದು ವೇಳೆ ಬೇರೆಯಾಗಲು ನಿರ್ಧರಿಸಿದರೂ ಪರಸ್ಪರ ಅದೇ ಗೌರವವನ್ನು ಕಾಪಾಡಿಕೊಂಡು ಹೋಗುತ್ತಾರೆ ಎಂದು ವರದಿಯಾಗಿದೆ.

11 ವರ್ಷಗಳ ಅಂತರ

ಮಲೈಕಾ ಅರೋರಾ ಅವರಿಗೆ ಈಗ 50 ವರ್ಷ. ಅರ್ಜುನ್ ಕಪೂರ್​ಗೆ 38. ಇಬ್ಬರ ಮಧ್ಯೆ ಸುಮಾರು 11 ವರ್ಷಗಳ ಅಂತರ ಇದೆ. ಅರ್ಜುನ್ ಕಪೂರ್ ವಯಸ್ಸಿನಲ್ಲಿ ಸಣ್ಣವರು. ಮಾತ್ರವಲ್ಲ ಕೆಲವು ದಿನಗಳಿಂದ ಮಗು ವಿಚಾರವಾಗಿ ಸಾಕಷ್ಟು ಟ್ರೋಲ್‌ ಆಗಿತ್ತು ಜೋಡಿ. ಮಲೈಕಾ ಹಾಗೂ ಅರ್ಜುನ್ ಕಪೂರ್​ಗೆ ಮದುವೆ ಯಾವಾಗ ಎನ್ನುವ ಪ್ರಶ್ನೆ ಎದುರಾಗುತ್ತಲೇ ಇತ್ತು. ಆದರೆ, ಈ ಬಗ್ಗೆ ಈ ಜೋಡಿ ಮೌನ ವಹಿಸಿದ್ದರು.

ಇತ್ತೀಚಿನ ವರದಿಗಳ ಪ್ರಕಾರ ಇಬ್ಬರ ನಡುವೆ ಬಿರುಕು ಮೂಡಿದೆ ಎನ್ನಲಾಗಿದೆ. ಅರ್ಜುನ್‌ ಕಪೂರ್ ಕುಟುಂಬದವರನ್ನು ಅನ್​ಫಾಲೋ ಮಾಡಿದ್ದಾರೆ ಮಲೈಕಾ ಅರೋರಾ. ಅಷ್ಟೇ ಅಲ್ಲದೇ ಅರ್ಜುನ್ ಕಪೂರ್ ಈಗ ನಟಿ ಕುಶಾ ಕಪಿಲಾ (Kusha Kapila) ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂತಲೂ ವರದಿಗಳಿವೆ.

ಈ ಮೊದಲು ಮಲೈಕಾ ಅವರು ಅರ್ಜುನ್ ಕಪೂರ್ ತಂದೆ ಬೋನಿ ಕಪೂರ್, ಕುಟುಂಬದ ಇತರ ಸದಸ್ಯರಾದ ಅನಿಲ್ ಕಪೂರ್, ಜಾನ್ವಿ ಕಪೂರ್, ಖುಷಿ ಕಪೂರ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಫಾಲೋ ಮಾಡುತ್ತಿದ್ದರು. ಆದರೆ, ಇವರುಗಳನ್ನು ಮಲೈಕಾ ಅನ್​ಫಾಲೋ ಮಾಡಿದ್ದಾರೆ. ಆದರೆ, ಅರ್ಜುನ್ ಕಪೂರ್ ಅವರನ್ನು ಈಗಲೂ ಅವರು ಫಾಲೋ ಮಾಡುತ್ತಿದ್ದಾರೆ. ಇತ್ತೀಚೆಗೆ ಮುಂಬೈನಲ್ಲಿರುವ ಕರಣ್ ಜೋಹರ್ ಅವರ ಮನೆಯಲ್ಲಿ ಅರ್ಜುನ್ ಮತ್ತು ಕುಶಾ ಒಟ್ಟಿಗೆ ಪಾರ್ಟಿ ಮಾಡಿದ್ದಾಗಿನಿಂದಲೂ ಸಂಬಂಧದ ವದಂತಿಗಳು ಪ್ರಾರಂಭವಾದವು.

ಮಲೈಕಾ ಈ ಹಿಂದೆ ನಟ, ನಿರ್ಮಾಪಕ ಅರ್ಬಾಜ್ ಖಾನ್ ಅವರನ್ನು ವಿವಾಹವಾಗಿದ್ದರು. ಇಬ್ಬರು 2016ರಲ್ಲಿ ವಿಚ್ಛೇದನ ಪಡೆದುಕೊಂಡಿದ್ದಾರೆ. ಅವರಿಗೆ ಅರ್ಹಾನ್ ಖಾನ್ ಹೆಸರಿನ ಮಗನಿದ್ದಾನೆ. ಮಲೈಕಾ ಮತ್ತು ಅರ್ಜುನ್ ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದು, 2019ರಲ್ಲಿ ಅದನ್ನು ಸಾರ್ವಜನಿಕವಾಗಿ ಹೇಳಿಕೊಂಡಿದ್ದಾರೆ.

Continue Reading

ಸಿನಿಮಾ

Salman Khan: ಗರ್ಲ್​ಫ್ರೆಂಡ್ ಬರ್ತ್​ಡೇ ಪಾರ್ಟಿಯಲ್ಲಿ ಸಖತ್‌ ಎಂಜಾಯ್‌ ಮಾಡಿದ ಸಲ್ಮಾನ್ ಖಾನ್!

Salman Khan: ಸಲ್ಮಾನ್ ಖಾನ್ ಈ ಮೊದಲು ಅನೇಕ ಹುಡುಗಿಯರ ಜೊತೆ ಸುತ್ತಾಟ ನಡೆಸಿದ್ದಾರೆ. ಆದರೆ, ಯಾರನ್ನೂ ಅವರು ಮದುವೆ ಆಗುವ ನಿರ್ಧಾರ ತೆಗೆದುಕೊಂಡಿಲ್ಲ. ಈ ವಿಚಾರ ಅನೇಕರಿಗೆ ಅಚ್ಚರಿ ತಂದಿದೆ.ಜಿಯೋ ಕನ್ವೆನ್ಷನ್ ಸೆಂಟರ್‌ನಲ್ಲಿ ಶುಕ್ರವಾರ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಅವರ ಅದ್ಧೂರಿ ವಿವಾಹದಲ್ಲಿ ಸಲ್ಮಾನ್‌ ಭಾಗಿಯಾಗಿದ್ದರು. ಹಾಗೇ ಶನಿವಾರ ಆಯೋಜಿಸಲಾದ ಸ್ಟಾರ್-ಸ್ಟಡ್ಡ್ ಶುಭ್ ಆಶೀರ್ವಾದ್ ಸಮಾರಂಭದಲ್ಲಿ ಸಲ್ಮಾನ್‌ ಇದ್ದರು. . ಸಲ್ಲು ಜೊತೆ ಮಾಜಿ ಗೆಳತಿ ಯುಲಿಯಾ ವಂಟೂರ್ ( Iulia Vantur) ಅವರು ಈ ಕಾರ್ಯಕ್ರಮದಲ್ಲಿ ಮಿಂಚಿದ್ದರು.

VISTARANEWS.COM


on

Salman Khan New Pics From Iulia Vantur Birthday Party
Koo

ಬೆಂಗಳೂರು: ಸಲ್ಮಾನ್ ಖಾನ್ (Salman Khan) ಅವರು ಯೂಲಿಯಾ ವಂಟೂರ್ (Iulia Vantur) ಅವರ ಬರ್ತ್​ಡೇಯನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಗಾಯಕರಾದ ಹಿಮೇಶ್ ರೇಶಮಿಯಾ ಮತ್ತು ಮಿಕಾ ಸಿಂಗ್ ಹಂಚಿಕೊಂಡ ಪಾರ್ಟಿಯ ಫೋಟೊಗಳಲ್ಲಿ ಸಲ್ಮಾನ್ ಖಾನ್ ಕಾಣಿಸಿಕೊಂಡಿದ್ದಾರೆ. ಹಿಮೇಶ್ ರೇಶಮಿಯಾ ಅವರು ತಮ್ಮ ಇನ್‌ಸ್ಟಾಗ್ರಾಮ್ ಪ್ರೊಫೈಲ್‌ನಲ್ಲಿ ಪಾರ್ಟಿಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು “ಭಾಯಿ ಮತ್ತು ಕುಟುಂಬ, ಸ್ನೇಹಿತರೊಂದಿಗೆ ಐತಿಹಾಸಿಕ ಸ್ಮರಣೀಯ ಸುಂದರ ಸಂಜೆ. ಬರ್ತ್‌ಡೇ ಹುಡುಗಿ ಯುಲಿಯಾ ವಂಟೂರ್‌ಗೆ ಶುಭ ಹಾರೈಕೆಗಳುʼʼಎಂದು ಶೀರ್ಷಿಕೆ ನೀಡಿದ್ದಾರೆ.

ಸಲ್ಮಾನ್ ಖಾನ್ ಈ ಮೊದಲು ಅನೇಕ ಹುಡುಗಿಯರ ಜೊತೆ ಸುತ್ತಾಟ ನಡೆಸಿದ್ದಾರೆ. ಆದರೆ, ಯಾರನ್ನೂ ಅವರು ಮದುವೆ ಆಗುವ ನಿರ್ಧಾರ ತೆಗೆದುಕೊಂಡಿಲ್ಲ. ಈ ವಿಚಾರ ಅನೇಕರಿಗೆ ಅಚ್ಚರಿ ತಂದಿದೆ. ಈಗ ಅವರು ಯೂಲಿಯಾ ಜೊತೆ ಸುತ್ತಾಟ ನಡೆಸುತ್ತಿದ್ದಾರೆಯೇ ಎನ್ನುವ ಪ್ರಶ್ನೆ ಮೂಡಿದೆ.ಯೂಲಿಯಾ ವಂಟೂರ್ ಬರ್ತ್​ಡೇ ಸೆಲೆಬ್ರೇಷನ್ ಮಾಡಲು ಒಳ್ಳೆಯ ಗೆಟ್​ ಟುಗೇದರ್ ಆಯೋಜಿಸಲಾಗಿತ್ತು’ ಎಂದು ಮಿಕಾ ಸಿಂಗ್ ಬರೆದುಕೊಂಡಿದ್ದಾರೆ. ಈ ಬರ್ತ್​ಡೇ ಸೆಲೆಬ್ರೇಷನ್​ನಿಂದ ಸಲ್ಲು ಹಾಗೂ ಯೂಲಿಯಾ ಮಧ್ಯೆ ಏನೋ ನಡೆಯುತ್ತಿದೆ ಎನ್ನುವ ವಿಚಾರ ಅಧಿಕೃತ ಆದಂತೆ ಆಗಿದೆ.

ಇದನ್ನೂ ಓದಿ: Salman Khan: ಸಲ್ಮಾನ್ ಖಾನ್‌ ಹೆದರುವ ರೀತಿಯಲ್ಲಿ ಗುಂಡಿನ ದಾಳಿ ಆಗಬೇಕು ಎಂದು ಶೂಟರ್‌ಗಳಿಗೆ ಸ್ಫೂರ್ತಿ ತುಂಬಿದ್ದ ಬಿಷ್ಣೋಯಿ!

ಅಂಬಾನಿ ಮದುವೆಯಲ್ಲಿಯೂ ಒಟ್ಟಿಗೆ ಕಂಡಿತ್ತು ಜೋಡಿ!

ಜಿಯೋ ಕನ್ವೆನ್ಷನ್ ಸೆಂಟರ್‌ನಲ್ಲಿ ಶುಕ್ರವಾರ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಅವರ ಅದ್ಧೂರಿ ವಿವಾಹದಲ್ಲಿ ಸಲ್ಮಾನ್‌ ಭಾಗಿಯಾಗಿದ್ದರು. ಹಾಗೇ ಶನಿವಾರ ಆಯೋಜಿಸಲಾದ ಸ್ಟಾರ್-ಸ್ಟಡ್ಡ್ ಶುಭ್ ಆಶೀರ್ವಾದ್ ಸಮಾರಂಭದಲ್ಲಿ ಸಲ್ಮಾನ್‌ ಇದ್ದರು. . ಸಲ್ಲು ಜೊತೆ ಮಾಜಿ ಗೆಳತಿ ಯುಲಿಯಾ ವಂಟೂರ್ ( Iulia Vantur) ಅವರು ಈ ಕಾರ್ಯಕ್ರಮದಲ್ಲಿ ಮಿಂಚಿದ್ದರು. ಸಲ್ಮಾನ್ ಮತ್ತು ಯೂಲಿಯಾ ಇಬ್ಬರೂ ಭಾಗಿಯಾಗಿದ್ದು, ಇನ್ನೂ ರಿಲೇಶನ್​ಶಿಪ್​ನಲ್ಲಿದ್ದಾರಾ ಎನ್ನುವ ಪ್ರಶ್ನೆ ನೆಟ್ಟಿಗರಿಗೆ ಕಾಡಿತ್ತು. ಇತ್ತೀಚೆಗೆ, ಅನಂತ್ ಮತ್ತು ರಾಧಿಕಾ ಅವರ ಸಂಗೀತ ಕಾರ್ಯಕ್ರಮದಲ್ಲಿ “ಓ ಓ ಜಾನೆ ಜಾನಾ” ಹಾಡಿಗೆ ಒಟ್ಟಿಗೆ ನೃತ್ಯ ಮಾಡಿರುವ ವಿಡಿಯೊ ಕೂಡ ವೈರಲ್‌ ಆಗಿತ್ತು.

ಸಿನಿಮಾ ವಿಚಾರಕ್ಕೆ ಬಂದರೆ ಜೂನ್ 19 ರಂದು ‘ಸಿಕಂದರ್’ ಚಿತ್ರದ ಚಿತ್ರೀಕರಣ ಪ್ರಾರಂಭವಾಯಿತು. ಚಿತ್ರದಲ್ಲಿ ಸಲ್ಮಾನ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

ಈ ಹಿಂದೆ ಸಿನಿಮಾ ಈದ್ 2025ರಂದು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ಪೋಸ್ಟರ್‌ ಜತೆ ಮಾಹಿತಿ ಹಂಚಿಕೊಂಡಿದ್ದಾರೆ. ಮಾರ್ಚ್ 12ರಂದು, ಸಲ್ಮಾನ್ ಖಾನ್ ತಮ್ಮ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ ಸಿನಿಮಾ ಬಗ್ಗೆ ಹಂಚಿಕೊಂಡಿದ್ದರು. ಪ್ರತಿಭಾವಂತರಾದ ಎಆರ್ ಮುರುಗದಾಸ್ ನನ್ನ ಸ್ನೇಹಿತ, ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತೋಷವಾಗಿದೆ. ಈ ಸಹಯೋಗ ವಿಶೇಷವಾಗಿದೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ನಮ್ಮ ಮೇಲೆ ಇರಲಿʼʼಎಂದು ಬರೆದುಕೊಂಡಿದ್ದರು.

ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

ʻಸಿಖಂದರ್’ ಸಿನಿಮಾ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿರಲಿದೆ. 400 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ ಎಂದು ವರದಿಯಾಗಿದೆ. ಸಲ್ಮಾನ್ ಖಾನ್ ಕೊನೆಯದಾಗಿ ‘ಟೈಗರ್ 3’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

Continue Reading

ಸಿನಿಮಾ

Samantha Ruth Prabhu: ಆ.1ಕ್ಕೆ ‘ಸಿಟಾಡೆಲ್’ ಬಿಗ್‌ ಅಪ್‌ಡೇಟ್‌ : ಸಮಂತಾ ಫ್ಯಾನ್ಸ್‌ಗೆ ಸಿಗಲಿದೆ ಗುಡ್‌ ನ್ಯೂಸ್‌!

Samantha Ruth Prabhu: ‘ಸಿಟಾಡೆಲ್: ಹನಿ ಬನ್ನಿ’ ಟ್ರೈಲರ್ ಆಗಸ್ಟ್ 1 ರಂದು ಬಿಡುಗಡೆಯಾಗಲಿದೆ ಎಂದು ಅಭಿಮಾನಿಗಳು ಊಹಿಸಿದ್ದಾರೆ. ಮೂಲಗಳ ಪ್ರಕಾರ, ಪ್ರೈಮ್ ವಿಡಿಯೋ ವರುಣ್ ಮತ್ತು ಸಮಂತಾ ‘ಸಿಟಾಡೆಲ್: ಹನಿ ಬನ್ನಿ’ ನ ಪ್ರೀಮಿಯರ್ ದಿನಾಂಕವನ್ನು ಘೋಷಿಸಲಿದ್ದಾರೆ.

VISTARANEWS.COM


on

Samantha Ruth Prabhu Citadel Honey Bunny Varun Dhawan
Koo

ಬೆಂಗಳೂರು: ಟಾಲಿವುಡ್ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ‘ಸಿಟಾಡೆಲ್: ಹನಿ ಬನಿ’ ಎಂಬ ಹಿಂದಿ ವೆಬ್ ಸೀರಿಸ್​ ಮೂಲಕ ಚಿತ್ರರಂಗಕ್ಕೆ ಮರಳಲು ಸಜ್ಜಾಗಿದ್ದಾರೆ. ನಿರ್ದೇಶಕ ಜೋಡಿಯಾದ ರಾಜ್ ಮತ್ತು ಡಿಕೆ ಆ್ಯಕ್ಷನ್​ ಕಟ್​ ಹೇಳಿರುವ ಈ ಸರಣಿಯಲ್ಲಿ ಬಾಲಿವುಡ್ ನಟ ವರುಣ್ ಧವನ್ ನಟಿಸಿದ್ದು, ವೆಬ್ ಸರಣಿ ಕ್ಷೇತ್ರಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಆಗಸ್ಟ್‌ 1ರಂದು ಸಿರೀಸ್‌ ಅಪ್‌ಡೇಟ್‌ವನ್ನು ಹಂಚಿಕೊಳ್ಳಲಿದೆ ಚಿತ್ರತಂಡ.

ನಿರ್ದೇಶಕ ರಾಜ್ ಮತ್ತು ಡಿಕೆ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ಇನ್‌ಸ್ಟಾಗ್ರಾಮ್ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯಲ್ಲಿ ಹೆಚ್ಚು ಏನನ್ನೂ ಬಹಿರಂಗಪಡಿಸಲಾಗಿಲ್ಲ ಆದರೆ ಇದು ಅಭಿಮಾನಿಗಳ ಕುತೂಹಲವನ್ನು ಕೆರಳಿಸಿದೆ. ‘ಸಿಟಾಡೆಲ್: ಹನಿ ಬನ್ನಿ’ ಟ್ರೈಲರ್ ಆಗಸ್ಟ್ 1 ರಂದು ಬಿಡುಗಡೆಯಾಗಲಿದೆ ಎಂದು ಅಭಿಮಾನಿಗಳು ಊಹಿಸಿದ್ದಾರೆ. ಮೂಲಗಳ ಪ್ರಕಾರ, ಪ್ರೈಮ್ ವಿಡಿಯೋ ವರುಣ್ ಮತ್ತು ಸಮಂತಾ ‘ಸಿಟಾಡೆಲ್: ಹನಿ ಬನ್ನಿ’ ನ ಪ್ರೀಮಿಯರ್ ದಿನಾಂಕವನ್ನು ಘೋಷಿಸಲಿದ್ದಾರೆ.

‘ಸಿಟಾಡೆಲ್: ಹನಿ ಬನಿ’

ಸಿಟಾಡೆಲ್ (Citadel) ಯೂನಿವರ್ಸ್‌ನ ಭಾರತೀಯ ಅಧ್ಯಾಯದಲ್ಲಿ ವರುಣ್ ಧವನ್ ಹಾಗೂ ಸಮಂತಾ (Samantha Ruth Prabhu) ನಾಯಕ, ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ʻಸಿಟಾಡೆಲ್’ ಇಂಗ್ಲಿಷ್ ವರ್ಷನ್ ಈಗಾಗಲೇ ಅಮೆಜಾನ್ ಪ್ರೈಂನಲ್ಲಿ ಸದ್ದು ಮಾಡುತ್ತಿದ್ದು, ಇದರಲ್ಲಿ ಪ್ರಿಯಾಂಕಾ ಚೋಪ್ರಾ ಜೋನಾಸ್ ಹಾಗೂ ರಿಚರ್ಡ್ ನಡುವೆ ಕಿಸ್ಸಿಂಗ್ ಹಾಗೂ ಹಾಟ್‌ ದೃಶ್ಯಗಳಿವೆ. ಈಗ ಇದೇ ಟೈಟಲ್‌ ಇಟ್ಟು ಭಾರತದಲ್ಲೂ ವೆಬ್ ಸೀರಿಸ್ ರೆಡಿಯಾಗುತ್ತಿದೆ. ಇದೀಗ ಪ್ರಿಯಾಂಕಾ-ರಿಚರ್ಡ್ ನಡುವಿನ ರೊಮ್ಯಾಂಟಿಕ್ ದೃಶ್ಯಗಳಂತೆ, ಸಮಂತಾ-ವರುಣ್ ಧವನ್ ನಡುವೆ ಇರುತ್ತದೆ ಎಂಬ ಸುದ್ದಿ ಸಖತ್‌ ವೈರಲ್‌ ಆಗುತ್ತಿದೆ.

ಬೋಲ್ಡ್‌ ದೃಶ್ಯಗಳಲ್ಲಿ ಕಾಣಿಸಿಕೊಳ್ಳುತ್ತಾರಾ ಸಮಂತಾ?

‘ಫ್ಯಾಮಿಲಿ ಮ್ಯಾನ್ 2’ ವೆಬ್‌ ಸೀರಿಸ್‌ನಲ್ಲಿ ಸಮಂತಾ ಬೋಲ್ಡ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಫ್ಯಾಮಿಲಿ ಮ್ಯಾನ್‌ ಸಿರೀಸ್‌ ಬರುವ ಸಮಯದಲ್ಲಿ ಸಮಂತಾ ಅವರು ನಾಗಚೈತನ್ಯ ಅವರಿಗೆ ವಿಚ್ಛೇದನ ನೀಡಿರಲಿಲ್ಲ. ಆದರೆ ಸಿರೀಸ್‌ನಲ್ಲಿ ಸಮಂತಾ ನಟಿಸಿರುವ ದೃಶ್ಯಗಳೇ ಇಬ್ಬರನ್ನು ಬೇರೆ ಮಾಡಿದ್ದು ಎನ್ನುವ ಸುದ್ದಿ ವೈರಲ್‌ ಆಗಿತ್ತು. ‘ಫ್ಯಾಮಿಲಿ ಮ್ಯಾನ್ 2’ ಸೀರಿಸ್ ನಿರ್ದೇಶಿಸಿದ್ದ ರಾಜ್ ಮತ್ತು ಡಿಕೆ ‘ಸಿಟಾಡೆಲ್‌’ ಭಾರತೀಯ ವರ್ಷನ್‌ಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇದೇ ಸೀರಿಸ್‌ನಲ್ಲಿ ಸಮಂತಾ, ಪ್ರಿಯಾಂಕಾ ಚೋಪ್ರಾರಂತೆ ಹಾಟ್‌ ದೃಶ್ಯಗಳನ್ನು ಮಾಡುತ್ತಾರೆ ಎಂದು ಅವರ ಅಭಿಮಾನಿಗಳು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌

ಇದು ರಿಮೇಕ್ ಅಲ್ಲ

ಸಮಂತಾ ಹಾಗೂ ವರುಣ್ ಧವನ್ ನಡುವೆ ಕಿಸ್ಸಿಂಗ್ ದೃಶ್ಯಗಳು ಇರುತ್ತವೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಈಗಾಗಲೇ ಸಮಂತಾ ‘ಸಿಟಾಡೆಲ್’ ರಿಮೇಕ್ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಕಿಸ್ಸಿಂಗ್ ಹಾಗೂ ಬೆಡ್ ರೂಮ್ ದೃಶ್ಯಗಳು ಇರುತ್ತವೆಯೇ? ಎನ್ನುವ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಇದೆ.

ಸಮಂತಾ ಮತ್ತು ವರುಣ್ ಅವರಲ್ಲದೆ, ಕೇ ಕೇ ಮೆನನ್, ಸಿಮ್ರಾನ್, ಸೋಹಮ್ ಮಜುಂದಾರ್, ಶಿವಂಕಿತ್ ಪರಿಹಾರ್, ಕಶ್ವಿ ಮಜ್ಮುಂದರ್, ಸಾಕಿಬ್ ಸಲೀಮ್ ಮತ್ತು ಸಿಕಂದರ್ ಖೇರ್ ಸಹ ಈ ಸಿರೀಸ್‌ನಲ್ಲಿ ನಟಿಸಿದ್ದಾರೆ.

Continue Reading
Advertisement
Minister Dinesh Gundurao drives for the 5th Kannada Sahitya Sammelana in Bengaluru
ಬೆಂಗಳೂರು10 mins ago

Kannada Sahitya Sammelana: ಬೆಂಗಳೂರಿನಲ್ಲಿ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

The woman shows gray hair on her head. Hair with fragments of gray hair, hair roots requiring dyeing
ಆರೋಗ್ಯ11 mins ago

Ways to Prevent Gray Hair: 30 ದಾಟುವ ಮೊದಲೇ ಕೂದಲು ಬೆಳ್ಳಗಾಗುತ್ತಿದೆಯೇ? ಇದಕ್ಕಿದೆ ಸರಳ ಪರಿಹಾರ

Yadgiri News Kolluru bridge inundation MLA Channareddy Patil tunnuru visit inspection
ಯಾದಗಿರಿ11 mins ago

Yadgiri News: ಕೃಷ್ಣಾ ನದಿ ಪ್ರವಾಹದಿಂದ ಕೊಳ್ಳುರು ಸೇತುವೆ ಮುಳುಗಡೆ; ಶಾಸಕ ಚನ್ನಾರೆಡ್ಡಿ ಪಾಟೀಲ ಭೇಟಿ

Nirmala Sahaya Hasta programme by Okkaliga Yuva Brigade on 28th July and 1st 3rd and 5th August
ಬೆಂಗಳೂರು12 mins ago

Bengaluru News: ಒಕ್ಕಲಿಗ ಯುವ ಬ್ರಿಗೇಡ್‌ನಿಂದ ಜು.28ರಂದು ʼನಿರ್ಮಲ ಸಹಾಯ ಹಸ್ತʼ ಕಾರ್ಯಕ್ರಮ

Karnataka weather Forecast
ಮಳೆ13 mins ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Drowned in water
ಬಳ್ಳಾರಿ26 mins ago

Drowned in water : ಮೀನು ಹಿಡಿಯುವಾಗ ಫಿಟ್ಸ್‌ ಬಂದು ನದಿಗೆ ಬಿದ್ದ ಮೀನುಗಾರ

HD Kumaraswamy
ಪ್ರಮುಖ ಸುದ್ದಿ49 mins ago

HD Kumaraswamy: ರಾಜ್ಯದಲ್ಲಿ ನಾಳೆ ಚುನಾವಣೆ ನಡೆದ್ರೂ ಕಾಂಗ್ರೆಸ್‌ ಮನೆಗೆ; ಭವಿಷ್ಯ ನುಡಿದ ಕುಮಾರಸ್ವಾಮಿ

Paris Olympics 2024
ಪ್ರಮುಖ ಸುದ್ದಿ53 mins ago

Paris Olympics 2024 : ಶೂಟಿಂಗ್​ನಲ್ಲಿ ಭಾರತಕ್ಕೆ ಖುಷಿ ಸುದ್ದಿ; ಮಹಿಳೆಯರ 10 ಮೀಟರ್ ಏರ್​ ಪಿಸ್ತೂಲ್ ವಿಭಾಗದಲ್ಲಿ ಮನು ಭಾಕರ್​ ಫೈನಲ್​ಗೆ

Paris Olympics 2024
ಫ್ಯಾಷನ್55 mins ago

Paris Olympics 2024: ಭಾರತೀಯ ಅಥ್ಲೀಟ್‌ಗಳ ಡ್ರೆಸ್‌ ಕೋಡ್‌ ವಿನ್ಯಾಸಕ್ಕೆ ಜನರ ಮಿಶ್ರ ಪ್ರತಿಕ್ರಿಯೆ

Vaccin for Hiv
ಆರೋಗ್ಯ1 hour ago

Vaccine for HIV: ವರ್ಷಕ್ಕೆರಡು ಬಾರಿ ಈ ಇಂಜೆಕ್ಷನ್‌ ತೆಗೆದುಕೊಂಡರೆ ಎಚ್‌ಐವಿ ಭಯವೇ ಬೇಡ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ13 mins ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ5 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ6 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌