Air India: ಟಗ್ ಟ್ರ್ಯಾಕ್ಟರ್‌ಗೆ 180 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಡಿಕ್ಕಿ; ತಪ್ಪಿದ ಭಾರೀ ದೊಡ್ಡ ದುರಂತ - Vistara News

ದೇಶ

Air India: ಟಗ್ ಟ್ರ್ಯಾಕ್ಟರ್‌ಗೆ 180 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಡಿಕ್ಕಿ; ತಪ್ಪಿದ ಭಾರೀ ದೊಡ್ಡ ದುರಂತ

Air India: 180 ಪ್ರಯಾಣಿಕರೊಂದಿಗೆ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಪುಣೆ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಗುರುವಾರ (ಮೇ 16) ಟಗ್‌ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ವಿಮಾನಕ್ಕೆ ಹಾನಿಯಾಗಿದ್ದರೂ ಅದೃಷ್ಟವಶಾತ್‌ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಅಪಘಾತದ ನಂತರ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಲಾಯಿತು. ಬಳಿಕ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಯಿತು ಎಂದು ವರದಿಯಲ್ಲಿ ತಿಳಿಸಲಾಗಿದೆ. ಅಪಘಾತದ ಕಾರಣವನ್ನು ಕಂಡುಹಿಡಿಯಲು ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ತನಿಖೆಯನ್ನು ಪ್ರಾರಂಭಿಸಿದೆ.

VISTARANEWS.COM


on

Air India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: 180 ಪ್ರಯಾಣಿಕರೊಂದಿಗೆ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ (Air India) ವಿಮಾನವು ಪುಣೆ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಗುರುವಾರ (ಮೇ 16) ಟಗ್‌ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ ಎಂದು ಮೂಲಗಳು ತಿಳಿಸಿವೆ. ಡಿಕ್ಕಿಯಿಂದಾಗಿ ವಿಮಾನಕ್ಕೆ ಹಾನಿಯಾಗಿದ್ದರೂ ಅದೃಷ್ಟವಶಾತ್‌ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ʼʼಸುಮಾರು 180 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಮತ್ತು ಟೈರ್‌ಗೆ ಹಾನಿಯಾಗಿದೆ. ಅಪಘಾತದ ಹೊರತಾಗಿಯೂ ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆʼʼ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಅಪಘಾತದ ನಂತರ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಲಾಯಿತು. ಬಳಿಕ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಯಿತು ಎಂದು ವರದಿಯಲ್ಲಿ ತಿಳಿಸಲಾಗಿದೆ. ಅಪಘಾತದ ಕಾರಣವನ್ನು ಕಂಡುಹಿಡಿಯಲು ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ತನಿಖೆಯನ್ನು ಪ್ರಾರಂಭಿಸಿದೆ. ಟಗ್ ಟ್ರಕ್ ಟ್ಯಾಕ್ಸಿಂಗ್ ಪ್ರಕ್ರಿಯೆಯ ಸಮಯದಲ್ಲಿ ವಿಮಾನಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ. ಅದಾಗ್ಯೂ ವಿಮಾನ ನಿಲ್ದಾಣದ ಕಾರ್ಯಾಚರಣೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರೆದವು. ಬಾಧಿತ ವಿಮಾನವನ್ನು ತಪಾಸಣೆಗೆ ಒಳಪಡಿಸಲಾಯಿತು. ದುರಸ್ತಿಗೆ ಒಳಗಾದ ವಿಮಾನ ಸದ್ಯ ಕಾರ್ಯಾಚರಣೆಗೆ ಸಿದ್ಧವಾಗಿದೆ.

ಬಾಂಬ್‌ ಬೆದರಿಕೆ

ಗುರುವಾರ ಏರ್‌ ಇಂಡಿಯಾ ವಿಮಾನಕ್ಕೆ ಹುಸಿ ಬಾಂಬ್‌ ಕರೆಯೊಂದು ಬಂದು ಕೆಲ ಹೊತ್ತು ಆತಂಕ ಸೃಷ್ಟಿಯಾಗಿತ್ತು. ದಿಲ್ಲಿಯಿಂದ ವಡೋದರಾಕ್ಕೆ ಪ್ರಯಾಣ ಬೆಳೆಸಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ಬಾಂಬ್‌ ಎಂದು ಬರೆದಿರುವ ಟಿಶ್ಯೂ ಪೇಪರ್‌ ಪತ್ತೆಯಾಗಿತ್ತು. ಶೌಚಾಲಯದಲ್ಲಿ ಈ ಟಿಶ್ಯೂ ಪೇಪರ್‌ ಪತ್ತೆಯಾಗಿ ಪ್ರಯಾಣಿಕರಲ್ಲಿ ಭಾರೀ ಆತಂಕ ಉಂಟು ಮಾಡಿತ್ತು. ಬೆಳಿಗ್ಗೆ 7.30ರ ವೇಳೆಗೆ ವಿಮಾನ ಇನ್ನೇನು ಟೇಕ್‌ ಆಫ್‌ ಆಗಬೇಕಿತ್ತು. ಈ ವೇಳೆ ವಿಮಾನ ಸಿಬ್ಬಂದಿಗೆ ಈ ಟಿಶ್ಯೂ ಸಿಕ್ಕಿತ್ತು ಎನ್ನಲಾಗಿದೆ.

ಘಟನೆ ವರದಿಯಾಗುತ್ತಿದ್ದಂತೆ ಎಲ್ಲ ಪ್ರಯಾಣಿಕರನ್ನು ತಕ್ಷಣ ಇಳಿಸಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(CISF)ಗೆ ಮಾಹಿತಿ ನೀಡಲಾಗಿತ್ತು. ಸಿಐಎಸ್‌ಎಫ್‌ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿತು. ನಂತರ ಪ್ರಯಾಣಿಕರನ್ನು ವಡೋದರಾಕ್ಕೆ ಮತ್ತೊಂದು ವಿಮಾನದಲ್ಲಿ ಕಳುಹಿಸಲಾಯಿತು. ವಿಮಾನದಲ್ಲಿ ಯಾವುದೇ ಬಾಂಬ್‌ ಅಥವಾ ಸ್ಫೋಟಕ ಪತ್ತೆಯಾಗಿಲ್ಲ. ಹೀಗಾಗಿ ಇದು ಕೂಡ ಒಂದು ಹುಸಿ ಬಾಂಬ್‌ ಕರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು.

ಬುಧವಾರ ಕಾನ್ಪುರ ಶಾಲೆಗಳಿಗೆ ಬಾಂಬ್‌ ಬೆದರಿಕೆ ಕರೆ ಬಂದಿತ್ತು. ಕಾನ್ಪುರದ ಸುಮಾರು 10 ಶಾಲೆಗಳು ಬೆದರಿಕೆ ಕರೆಗಳನ್ನು ಸ್ವೀಕರಿಸಿದ್ದವು. ಇಮೇಲ್‌ ಮೂಲಕ ಈ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ದೆಹಲಿ-ಎನ್‌ಸಿಆರ್‌, ಅಹಮದಾಬಾದ್‌ ಶಾಲೆಗಳಿಗೆ ಬಂದ ರಷ್ಯಾದ ಅದೇ ಸರ್ವರ್‌ಗೆ ಲಿಂಕ್ ಮಾಡಲಾದ ಇಮೇಲ್ ಮೂಲಕ ಕಾನ್ಪುರ ಶಾಲೆಗಳಿಗೆ ಬೆದರಿಕೆ ಒಡ್ಡಲಾಗಿದೆ ಎಂದು ವರದಿ ತಿಳಿಸಿದೆ. ಪೊಲೀಸರು ಈ ಬಗ್ಗೆ ತನಿಖೆಗೆ ನಡೆಸುತ್ತಿದ್ದಾರೆ. ಶಾಲೆಗಳ ಆವರಣದಲ್ಲಿ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎನ್ನಲಾಗಿದೆ. 

ಇದನ್ನೂ ಓದಿ: Air India : ಸೇಫ್ಟಿ ಫಸ್ಟ್​​; ಏರ್ ಇಂಡಿಯಾಗೆ 80 ಲಕ್ಷ ದಂಡ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Rain News: ವರುಣನ ಆರ್ಭಟ; ಮಳೆ ಸಂಬಂಧಿ ಅವಘಡಗಳಿಗೆ 24 ಗಂಟೆಯಲ್ಲಿ 13 ಜನ ಬಲಿ

Rain News: ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದಲ್ಲಿ 18.3 ಮಿಲಿಮೀಟರ್‌ ಮಳೆಯಾಗಿದೆ. ಫತೇಪುರದಲ್ಲಿ ಇಬ್ಬರು, ರಾಯ್‌ಬರೇಲಿಯಲ್ಲಿ ಇಬ್ಬರು, ಬುಲಂದ್‌ಶಹರ್‌, ಕನೌಜ್‌, ಮೈನ್‌ಪುರಿ, ಕೌಶಂಬಿ, ಫಿರೋಜಾಬಾದ್‌, ಪ್ರತಾಪ್‌ಗಢ ಹಾಗೂ ಉನ್ನಾವೋ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

Rain News
Koo

ಲಖನೌ: ಕರ್ನಾಟಕದ (Karnataka) ಹಲವೆಡೆ, ಅದರಲ್ಲೂ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಸ್ತೆಗಳು ಕೊಚ್ಚಿಕೊಂಡು ಹೋಗಿದ್ದು, ಮನೆಗಳು ಕುಸಿದಿವೆ. ಇದರಿಂದ ನಾಡಿನ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಕರ್ನಾಟಕ ಮಾತ್ರವಲ್ಲ, ಉತ್ತರ ಪ್ರದೇಶದಲ್ಲೂ (Uttar Pradesh) ವರುಣನ ಆರ್ಭಟವು (Rain News) ಜೋರಾಗಿದೆ. ಕಳೆದ 24 ಗಂಟೆಗಳಲ್ಲಿಯೇ ಮಳೆ ಸಂಬಂಧಿ ಅವಘಡಗಳಿಂದ 13 ಜನ ಮೃತಪಟ್ಟಿದ್ದು, ನೂರಾರು ಜನ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಮಳೆ ಸಂಬಂಧಿ ಅವಘಡಗಳ ಕುರಿತು ಉತ್ತರ ಪ್ರದೇಶ ಪರಿಹಾರ ಇಲಾಖೆಯ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ. ಮಳೆ ಸಂಬಂಧಿ ಅವಘಡಗಳಾದ ಸಿಡಿಲು, ಕಟ್ಟಡ ಕುಸಿತ, ಭೂಕುಸಿತ ಸೇರಿ ಹಲವು ರೀತಿಯ ಅವಘಡಗಳಿಂದ 13 ಜನ ಮೃತಪಟ್ಟಿದ್ದಾರೆ. ಶುಕ್ರವಾರ ಸಂಜೆ 6.30ರಿಂದ ಶನಿವಾರ ಸಂಜೆ 6.30ರ ಅವಧಿಯ 24 ಗಂಟೆಗಳಲ್ಲಿಯೇ ಇಷ್ಟು ಜನ ಮೃತಪಟ್ಟಿದ್ದಾರೆ. ನೂರಾರು ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದಲ್ಲಿ ಸರಾಸರಿ 18.3 ಮಿಲಿಮೀಟರ್‌ ಮಳೆಯಾಗಿದೆ. ಫತೇಪುರದಲ್ಲಿ ಇಬ್ಬರು, ರಾಯ್‌ಬರೇಲಿಯಲ್ಲಿ ಇಬ್ಬರು, ಬುಲಂದ್‌ಶಹರ್‌, ಕನೌಜ್‌, ಮೈನ್‌ಪುರಿ, ಕೌಶಂಬಿ, ಫಿರೋಜಾಬಾದ್‌, ಪ್ರತಾಪ್‌ಗಢ ಹಾಗೂ ಉನ್ನಾವೋ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ 75 ಜಿಲ್ಲೆಗಳ ಪೈಕಿ 45 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಸತತ ಮಳೆಯಿಂದಾಗಿ ರಾಜ್ಯದ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ. ಮೀನುಗಾರಿಕೆಗೆ ತೆರಳದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಅಸ್ಸಾಂನಲ್ಲಿ 52 ಮಂದಿ ಸಾವು

ಅಸ್ಸಾಂನಲ್ಲಿ ಮಳೆಯಿಂದಾಗಿ ಕಳೆದ 24 ಗಂಟೆಗಳಲ್ಲಿ ಸುಮಾರು 52 ಮಂದಿ ಮೃತಪಟ್ಟಿದ್ದು, ನೂರಾರು ಮಂದಿ ಮನೆ ಕಳೆದುಕೊಂಡಿದ್ದಾರೆ. ನೆರೆಯಿಂದಾಗಿ ಅಂದಾಜು 24 ಲಕ್ಷ ಮಂದಿ ತೊಂದರೆಗೆ ಒಳಗಾಗಿದ್ದಾರೆ. ರಾಜ್ಯದ ಮುಕ್ಕಾಲು ಭಾಗಗಳಲ್ಲಿ ನೆರೆ ಆವರಿಸಿದೆ. ರಾಜ್ಯದ 35 ಜಿಲ್ಲೆಗಳ ಪೈಕಿ 30 ಜಿಲ್ಲೆಗಳು ತೀವ್ರವಾಗಿ ಪ್ರವಾಹದ ಹೊಡೆತಕ್ಕೆ ಸಿಲುಕಿವೆ. ಒಂದು ತಿಂಗಳಿನಿಂದ ಇಲ್ಲಿನ ಪರಿಸ್ಥಿತಿ ಭೀಕರವಾಗಿದ್ದು, ಪ್ರಾಣಹಾನಿಯ ಜತೆಗೆ ವ್ಯಾಪಕ ಪ್ರಮಾಣದಲ್ಲಿ ಬೆಳೆ ನಾಶ ಉಂಟಾಗಿದೆ. ಈ ಈಶಾನ್ಯ ರಾಜ್ಯದ ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ ಮತ್ತು ನಿರಾಶ್ರಿತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Continue Reading

ದೇಶ

Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

Mid Day Meal: ಛತ್ತೀಸ್‌ಗಢದಲ್ಲಿ ಅಪೌಷ್ಟಿಕತೆ ಪ್ರಮಾಣ ಶೇ.17.76ರಷ್ಟಿದೆ. ಇದರಿಂದಾಗಿ ಬಿಸಿಯೂಟ ಯೋಜನೆಗೆ ರಾಜ್ಯ ಸರ್ಕಾರವು ಹೆಚ್ಚಿನ ಆದ್ಯತೆ ನೀಡುತ್ತದೆ. ಬಿಸಿಯೂಟದಲ್ಲಿ ಮಕ್ಕಳಿಗೆ ಚಪಾತಿ, ಅನ್ನ, ಸಾಂಬಾರ್‌, ಬೇಳೆ-ಕಾಳಿನಿಂದ ಮಾಡಿದ ಪಲ್ಯ ಸೇರಿ ಹಲವು ರೀತಿಯ ತಿನಿಸುಗಳು ಇರಬೇಕು ಎಂಬ ನಿಯಮ ರೂಪಿಸಿದೆ. ಆದರೆ, ಮಕ್ಕಳಿಗೆ ಸಿಗುತ್ತಿರುವುದು ಮಾತ್ರ ಅರಿಶಿಣ ಮಿಶ್ರಿತ ಅನ್ನ. ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ದುಸ್ಥಿತಿಯ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Mid Day Meal
Koo

ರಾಯ್‌ಪುರ: ಬಡವರ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಸಿಗಲಿ, ಊಟದ ಆಸೆಗಾಗಿಯಾದರೂ ಬಡವರ ಮಕ್ಕಳು ಶಾಲೆಗೆ ಬಂದು, ವಿದ್ಯಾವಂತರಾಗಲಿ ಎಂದು ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟದ (Mid Day Meal) ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆದರೆ, ಸರ್ಕಾರಗಳು ಜಾರಿಗೆ ತಂದಿರುವ ಇಂತಹ ಉತ್ತಮ ಯೋಜನೆಗಳಲ್ಲೂ, ಮಕ್ಕಳ ಊಟದಲ್ಲೂ ಅಧಿಕಾರಿಗಳು ಕಳ್ಳಾಟ ಆಡುತ್ತಿದ್ದಾರೆ. ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಬಿಸಿಯೂಟ ನೀಡುವುದಿಲ್ಲ ಎಂಬ ಆರೋಪಗಳು ಕೇಳಿಬರುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಛತ್ತೀಸ್‌ಗಢದ (Chhattisgarh) ಶಾಲೆಯೊಂದರಲ್ಲಿ ಮಕ್ಕಳಿಗೆ ಬಿಸಿಯೂಟ ಯೋಜನೆ ಅನ್ವಯ ಬರೀ ಅನ್ನ ಹಾಗೂ ಅರಿಶಿಣ ಮಿಶ್ರಣ ಮಾಡಿ, ಅದನ್ನೇ ನೀಡಲಾಗಿದೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಹೌದು, ಛತ್ತೀಸ್‌ಗಢದ ಬಲರಾಮ್‌ಪುರ ಜಿಲ್ಲೆಯ ಬಿಜಾಕುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಇಷ್ಟೊಂದು ಕಳಪೆ ಆಹಾರವನ್ನು ನೀಡಲಾಗುತ್ತಿದೆ. ಮಕ್ಕಳು ಅರಿಶಿಣ ಮಿಕ್ಸ್‌ ಆಗಿರುವ ಅನ್ನವನ್ನು ಸೇವಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 43 ವಿದ್ಯಾರ್ಥಿಗಳು ಓದುತ್ತಿದ್ದು, ಬಹುತೇಕರು ಬಡವರ ಮಕ್ಕಳಾಗಿದ್ದಾರೆ. ಆದರೆ, ಇವರಿಗೆ ಕಳೆದ ಒಂದು ವಾರದಿಂದ ಬಿಸಿಯೂಟದಲ್ಲಿ ತರಕಾರಿ ನೀಡದೆ, ಬರೀ ಅರಿಶಿಣ ಮಿಶ್ರಣ ಆಗಿರುವ ಅನ್ನ ನೀಡಲಾಗುತ್ತಿದೆ. ಇದನ್ನು ಶಾಲೆಯ ಅಧಿಕಾರಿಗಳೇ ದೃಢಪಡಿಸಿದ್ದಾರೆ.

“ಕಳೆದ ಒಂದು ವಾರದಿಂದ ತರಕಾರಿ ಪೂರೈಸುವವರು ಶಾಲೆಗೆ ತರಕಾರಿ ಪೂರೈಸುತ್ತಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ತರಕಾರಿ ವ್ಯವಸ್ಥೆ ಆಗಿಲ್ಲ. ಹಾಗಾಗಿ, ಮಕ್ಕಳಿಗೆ ಅನ್ನ-ಸಾರು ಇಲ್ಲವೇ ಅರಿಶಿಣ ಮಿಶ್ರಿತ ಅನ್ನ ನೀಡುತ್ತಿದ್ದೇವೆ” ಎಂದು ಶಾಲೆಯ ಮುಖ್ಯೋಪಾಧ್ಯಾಯ ತಿಳಿಸಿದ್ದಾರೆ. ಇವರ ಆರೋಪಗಳಿಗೆ ತರಕಾರಿ ಪೂರೈಸುವವರು ಪ್ರತಿಕ್ರಿಯಿಸಿದ್ದು, “ಶಾಲೆಗೆ ತರಕಾರಿ ಪೂರೈಸಿದ್ದಕ್ಕೆ ಹಲವು ತಿಂಗಳಿಂದ ಹಣ ನೀಡಿಲ್ಲ. ಇದರಿಂದಾಗಿ ನಾವು ತರಕಾರಿ ಪೂರೈಸುತ್ತಿಲ್ಲ” ಎಂದು ಹೇಳಿದ್ದಾರೆ. ಹೀಗೆ ಆರೋಪ-ಪ್ರತ್ಯಾರೋಪದ ಮಧ್ಯೆ ಮಕ್ಕಳು ಪೌಷ್ಟಿಕಾಂಶಯುಕ್ತ ಊಟದಿಂದ ವಿಮುಖರಾಗುತ್ತಿದ್ದಾರೆ. ಇದಕ್ಕೆ ಗ್ರಾಮಸ್ಥರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ಅಪೌಷ್ಟಿಕತೆ ಪ್ರಮಾಣ ಶೇ.17.76ರಷ್ಟಿದೆ. ಇದರಿಂದಾಗಿ ಬಿಸಿಯೂಟ ಯೋಜನೆಗೆ ರಾಜ್ಯ ಸರ್ಕಾರವು ಹೆಚ್ಚಿನ ಆದ್ಯತೆ ನೀಡುತ್ತದೆ. ಬಿಸಿಯೂಟದಲ್ಲಿ ಮಕ್ಕಳಿಗೆ ಚಪಾತಿ, ಅನ್ನ, ಸಾಂಬಾರ್‌, ಬೇಳೆ-ಕಾಳಿನಿಂದ ಮಾಡಿದ ಪಲ್ಯ ಸೇರಿ ಹಲವು ರೀತಿಯ ತಿನಿಸುಗಳು ಇರಬೇಕು ಎಂಬ ನಿಯಮ ರೂಪಿಸಿದೆ. ಇದಕ್ಕಾಗಿ ವಾರ್ಷಿಕ ಕೋಟ್ಯಂತರ ರೂ. ಖರ್ಚು ಮಾಡುತ್ತಿದೆ. ಇಷ್ಟಾದರೂ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಮಕ್ಕಳು ಅಪೌಷ್ಟಿಕಾಂಶಯುಕ್ತ ಆಹಾರ ಸೇವಿಸುವಂತಾಗಿದೆ. ಮಕ್ಕಳು ಬರೀ ಅನ್ನ ತಿನ್ನುತ್ತಿರುವ ವಿಡಿಯೊ ವೈರಲ್‌ ಆಗುತ್ತಲೇ ಜಿಲ್ಲಾ ಶಿಕ್ಷಣ ಅಧಿಕಾರಿ ದೇವೇಂದ್ರ ನಾಥ್‌ ಮಿಶ್ರಾ ಪ್ರತಿಕ್ರಿಯಿಸಿದ್ದು, “ಪ್ರಕರಣ ಈಗ ಗಮನಕ್ಕೆ ಬಂದಿದೆ. ಕೂಡಲೇ ಕ್ರಮ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ: Students Fall Sick: ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆರೋಗ್ಯ ವಿಚಾರಿಸಿದ ಶಾಸಕ

Continue Reading

ದೇಶ

Kashmir Encounter: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ನಾಲ್ವರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

Kashmir Encounter: ಕುಲ್ಗಾಮ್‌ ಜಿಲ್ಲೆಯ ಫ್ರೈಸಲ್‌ ಚಿನ್ನಿಗಮ್‌ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡಿದ್ದಾರೆ. ಕಾರ್ಯಾಚರಣೆ ಕೈಗೊಳ್ಳುತ್ತಲೇ ಉಗ್ರರು ಕೂಡ ಪ್ರತಿದಾಳಿ ನಡೆಸಿದ್ದಾರೆ. ಆಗ ಮುನ್ನಡೆ ಸಾಧಿಸಿದ ಭದ್ರತಾ ಸಿಬ್ಬಂದಿಯು ನಾಲ್ವರು ಉಗ್ರರನ್ನು ಹತ್ಯೆಗೈದಿದ್ದಾರೆ.

VISTARANEWS.COM


on

Kashmir Encounter
Koo

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಇತ್ತೀಚೆಗೆ ಹಿಂದು ಯಾತ್ರಿಕರು, ವಲಸಿಗ ಕಾರ್ಮಿಕರು ಹಾಗೂ ಸೈನಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಭಾರತೀಯ ಸೇನೆಯು (Indian Army) ಸರಿಯಾಗಿಯೇ ತಿರುಗೇಟು ನೀಡುತ್ತಿದೆ. ಉಗ್ರರ ನಿರ್ನಾಮಕ್ಕಾಗಿ ಸಾಲು ಸಾಲು ಕಾರ್ಯಾಚರಣೆಗಳನ್ನು ಕೈಗೊಳ್ಳುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ನಾಲ್ವರು ಉಗ್ರರನ್ನು (Kashmir Encounter) ಭದ್ರತಾ ಸಿಬ್ಬಂದಿಯು ಹೊಡೆದುರುಳಿಸಿದ್ದಾರೆ. ಇನ್ನು ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಕುಲ್ಗಾಮ್‌ ಜಿಲ್ಲೆಯ ಫ್ರೈಸಲ್‌ ಚಿನ್ನಿಗಮ್‌ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡಿದ್ದಾರೆ. ಕಾರ್ಯಾಚರಣೆ ಕೈಗೊಳ್ಳುತ್ತಲೇ ಉಗ್ರರು ಕೂಡ ಪ್ರತಿದಾಳಿ ನಡೆಸಿದ್ದಾರೆ. ಆಗ ಮುನ್ನಡೆ ಸಾಧಿಸಿದ ಭದ್ರತಾ ಸಿಬ್ಬಂದಿಯು ನಾಲ್ವರು ಉಗ್ರರನ್ನು ಹತ್ಯೆಗೈದಿದ್ದಾರೆ. ನಾಲ್ವರೂ ಉಗ್ರರು ಯಾವ ಉಗ್ರ ಸಂಘಟನೆಯವರು ಎಂಬ ಕುರಿತು ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಶನಿವಾರ (ಜುಲೈ 6) ಬೆಳಗ್ಗೆ ನಡೆದ ಕಾರ್ಯಾಚರಣೆಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದರು ಎಂದು ಮೂಲಗಳು ತಿಳಿಸಿವೆ. ಇದಾದ ಬಳಿಕ ಕೈಗೊಂಡ ಕಾರ್ಯಾಚರಣೆಯಲ್ಲಿ ನಾಲ್ವರನ್ನು ಹತ್ಯೆ ಮಾಡಲಾಗಿದೆ.

ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಅಡಗಿ ಕುಳಿತಿದ್ದ ಮೂವರು ಉಗ್ರರನ್ನು ಜೂನ್‌ 26ರಂದು ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ್ದರು. ಇತ್ತೀಚೆಗೆ ಕಣಿವೆಯಲ್ಲಿ ನಾಗರಿಕರು, ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಭದ್ರತೆ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದರು. ಅಲ್ಲದೆ, ಉಗ್ರರನ್ನು ನಿರ್ಮೂಲನೆ ಮಾಡಲು ಸೂಚನೆ ನೀಡಿದ್ದರು. ಅದರಂತೆ, ಯೋಧರು ಸತತ ಕಾರ್ಯಾಚರಣೆ ಕೈಗೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಜೂನ್ 11, 12ರಂದು ಚಟ್ಟರ್ಗಲ್ಲಾ ಸೇನಾ ಶಿಬಿರದ ಮೇಲೆ ನಡೆದ ದಾಳಿಯಲ್ಲಿ ಐವರು ಸೈನಿಕರು ಮತ್ತು ವಿಶೇಷ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದರು. ಇದಕ್ಕೆ ಸೇನೆ ಪ್ರತಿಕಾರ ತೀರಿಸಿಕೊಳ್ಳುತ್ತಿದ್ದು, ಈಗಾಗಲೆ 7-8 ಭಯೋತ್ಪಾದಕರು ಸತ್ತಿದ್ದಾರೆ. ಭಯೋತ್ಪಾದಕರಿಗೆ ಆಹಾರ ಮತ್ತು ಆಶ್ರಯ ನೀಡಿದ ಆರೋಪದ ಮೇಲೆ ಮೂವರು ಸ್ಥಳೀಯರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಾಲ್ವರು ಪಾಕಿಸ್ತಾನಿ ಭಯೋತ್ಪಾದಕರ ಸುಳಿವು ನೀಡಿದವರಿಗೆ ತಲಾ 5 ಲಕ್ಷ ರೂ.ಗಳ ನಗದು ಬಹುಮಾನವನ್ನು ಘೋಷಿಸಲಾಗಿದೆ.

ಇದನ್ನೂ ಓದಿ: Terrorists Killed: ಆಪರೇಷನ್‌ ಆಲ್‌ಔಟ್ ಯಶಸ್ವಿ; ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ

Continue Reading

ದೇಶ

Smriti Singh: ಮನೆ, ಮಗುವಿನ ಕನಸಿತ್ತು, ಎಲ್ಲವೂ ನುಚ್ಚು ನೂರಾಯ್ತು; ಹುತಾತ್ಮ ಯೋಧನ ಪತ್ನಿ ಕಣ್ಣೀರು!

Smriti Singh: ಮದುವೆಯಾದ ಎರಡು-ಮೂರು ತಿಂಗಳಲ್ಲಿ ಅವರು ಸಿಯಾಚಿನ್‌ಗೆ ನಿಯೋಜನೆಗೊಂಡರು. ಅವರಿಗೆ ಜೀವನದ ಬಗ್ಗೆ ಅಪಾರ ಪ್ರೀತಿ ಇತ್ತು. ಮನೆ ಕಟ್ಟಿಸಬೇಕು, ನಮ್ಮ ಮಕ್ಕಳನ್ನು ಮುದ್ದಾಡಬೇಕು, 50 ವರ್ಷ ನಾವು ಹೀಗೆಯೇ ಬದುಕಬೇಕು ಎಂದೆಲ್ಲ ಅವರು ಹುತಾತ್ಮನಾಗುವ ಹಿಂದಿನ ದಿನ ಹೇಳಿದ್ದರು ಎಂಬುದಾಗಿ ಹುತಾತ್ಮ ಯೋಧನ ಪತ್ನಿ ಸ್ಮೃತಿ ಸಿಂಗ್‌ ಹೇಳಿದ್ದಾರೆ.

VISTARANEWS.COM


on

Smriti Singh
Koo

ನವದೆಹಲಿ: ಕಳೆದ ವರ್ಷದ ಜುಲೈನಲ್ಲಿ ಸಿಯಾಚಿನ್‌ನಲ್ಲಿ ಹುತಾತ್ಮನಾದ ಕ್ಯಾಪ್ಟನ್‌ ಅನ್ಶುಮಾನ್‌ ಸಿಂಗ್‌ (Captain Anshuman Singh) ಅವರಿಗೆ ಮರಣೋತ್ತರವಾಗಿ ದೇಶದ ಎರಡನೇ ಗ್ಯಾಲಂಟ್ರಿ ಪ್ರಶಸ್ತಿಯಾದ ಕೀರ್ತಿ ಚಕ್ರ ಪ್ರಶಸ್ತಿ (Kirti Chakra Award) ಘೋಷಿಸಲಾಗಿದ್ದು, ಪತಿಯ ಪರವಾಗಿ ಅವರ ಪತ್ನಿ ಸ್ಮೃತಿ ಸಿಂಗ್‌ (Smriti Singh) ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಸ್ಮೃತಿ ಸಿಂಗ್‌ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೀರ್ತಿ ಚಕ್ರ ಪ್ರಶಸ್ತಿ ನೀಡಿದ್ದಾರೆ. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾಧ್ಯಮದವರೊಂದಿಗೆ ಸ್ಮೃತಿ ಸಿಂಗ್‌ ಮಾತನಾಡಿದ್ದು, ಪತಿಯ ಜತೆ ಕಳೆದ ದಿನಗಳನ್ನು ನೆನೆದು ಕಣ್ಣೀರು ಹಾಕಿದ್ದಾರೆ.

“ನಾವಿಬ್ಬರು ಪ್ರೀತಿಸುತ್ತಿದ್ದೆವು. 2023ರ ಫೆಬ್ರವರಿಯಲ್ಲಿ ನಮ್ಮ ಮದುವೆಯಾಗಿತ್ತು. ಇದಾದ ಬಳಿಕ ಅನ್ಶುಮಾನ್‌ ಸಿಂಗ್‌ ಸೇನೆಯ ಕರ್ತವ್ಯಕ್ಕಾಗಿ ಗಡಿಗೆ ತೆರಳಿದ್ದರು. ನಾನು ಮತ್ತು ಅನ್ಶುಮಾನ್‌ ಸಿಂಗ್‌ 2023ರ ಜುಲೈ 18ರಂದು ದೂರವಾಣಿ ಮೂಲಕ ಮಾತನಾಡಿದ್ದೆವು. ಅವರು ನಮ್ಮ ಬಗ್ಗೆ ನೂರು ಕನಸು ಕಂಡಿದ್ದರು. ಮನೆ ಕಟ್ಟಿಸುವುದು, ಮಗು, ಇಬ್ಬರೂ 50 ವರ್ಷ ಜತೆಯಾಗಿ ಇರೋಣ ಎಂದೆಲ್ಲ ಅವರು ಹೇಳಿದ್ದರು. ಆದರೆ, ಜುಲೈ 19ರಂದು ಬೆಳಗ್ಗೆ ನಮಗೆ ಕರೆ ಬಂತು. ಅನ್ಶುಮಾನ್‌ ಸಿಂಗ್‌ ಇನ್ನಿಲ್ಲ ಎಂಬ ಸುದ್ದಿ ತಿಳಿದು ಆಘಾತವಾಯಿತು” ಎಂಬುದಾಗಿ ಸ್ಮೃತಿ ಸಿಂಗ್‌ ಸ್ಮರಿಸಿದ್ದಾರೆ.

ಮೊದಲ ನೋಟದಲ್ಲೇ ಪ್ರೀತಿ

ಪ್ರೀತಿಯ ಬಗ್ಗೆಯೂ ಸ್ಮೃತಿ ಸಿಂಗ್‌ ಮಾತನಾಡಿದ್ದಾರೆ. “ನಾವು ಮೊದಲು ಭೇಟಿಯಾಗಿದ್ದು ಕಾಲೇಜಿನಲ್ಲಿ. ನಮಗೆ ಮೊದಲ ನೋಟದಲ್ಲಿಯೇ ಪ್ರೀತಿಯಾಗಿತ್ತು. ಒಂದು ತಿಂಗಳ ನಂತರ ಅನ್ಶುಮಾನ್‌ ಸಿಂಗ್‌ ಸಶಸ್ತ್ರ ಪಡೆಗಳ ಮೆಡಿಕಲ್‌ ಕಾಲೇಜ್‌ಗೆ (AFMC) ಆಯ್ಕೆಯಾದರು. ಆದರೂ, ನಾವು ದೂರವಾಣಿಯಲ್ಲಿ ಮಾತನಾಡುತ್ತಿದ್ದೆವು. ಇಬ್ಬರ ಮಧ್ಯೆ ಪ್ರೀತಿ ಚಿಗುರೊಡೆಯಿತು. ಎಂಟು ವರ್ಷಗಳ ಪ್ರೀತಿಯ ಬಳಿಕ ನಾವಿಬ್ಬರು ಮದುವೆಯಾದವು. ಮದುವೆಯಾದ ಕೆಲವೇ ದಿನಗಳಲ್ಲಿ ಅವರು ನನ್ನನ್ನು ಅಗಲಿದರು” ಎಂದು ಹೇಳಿದ್ದಾರೆ.

“ಮದುವೆಯಾದ ಎರಡು-ಮೂರು ತಿಂಗಳಲ್ಲಿ ಅವರು ಸಿಯಾಚಿನ್‌ಗೆ ನಿಯೋಜನೆಗೊಂಡರು. ಅವರಿಗೆ ಜೀವನದ ಬಗ್ಗೆ ಅಪಾರ ಪ್ರೀತಿ ಇತ್ತು. ಮನೆ ಕಟ್ಟಿಸಬೇಕು, ನಮ್ಮ ಮಕ್ಕಳನ್ನು ಮುದ್ದಾಡಬೇಕು, 50 ವರ್ಷ ನಾವು ಹೀಗೆಯೇ ಬದುಕಬೇಕು ಎಂದೆಲ್ಲ ಅವರು ಹುತಾತ್ಮನಾಗುವ ಹಿಂದಿನ ದಿನ ಹೇಳಿದ್ದರು. ಆದರೆ, ಮರುದಿನ ಅವರ ಅಗಲಿಕೆಯ ಸುದ್ದಿ ತಿಳಿದು ನನಗೆ ಆಘಾತವಾಯಿತು. ನಾವು 7-8 ಗಂಟೆಗಳವರೆಗೆ ಏನಾಯಿತು ಎಂಬುದನ್ನೇ ಅರಿಯಲು ಆಗಲಿಲ್ಲ” ಎಂದಿದ್ದಾರೆ.

ಕಳೆದ ವರ್ಷ ಏನಾಗಿತ್ತು?

2023ರ ಜುಲೈ 19ರಂದು ಸಿಯಾಚಿನ್‌ನಲ್ಲಿ ಅಗ್ನಿ ದುರಂತ ಸಂಭವಿಸಿತ್ತು. ಬೆಳಗಿನ ಜಾವ ಭಾರತೀಯ ಸೇನೆಯ ಶಸ್ತ್ರಾಸ್ತ್ರಗಳನ್ನು ಇರಿಸುವ ನೆಲೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿತ್ತು. ಫೈಬರ್‌ ಗ್ಲಾಸ್‌ನ ಕೋಣೆಯಲ್ಲಿ ಸಿಲುಕಿದ್ದ ಹಲವು ಸೈನಿಕರನ್ನು ಕ್ಯಾಪ್ಟನ್‌ ಅನ್ಶುಮಾನ್ ಸಿಂಗ್‌ ಅವರು ರಕ್ಷಣೆ ಮಾಡಿದ್ದರು. ಆದರೆ, ರಕ್ಷಣೆ ಮಾಡಿದ ಬಳಿಕ ಅವರೇ ಅಗ್ನಿಯ ಕೆನ್ನಾಲಗೆಗೆ ಸಿಲುಕಿ ಹುತಾತ್ಮರಾಗಿದ್ದರು.

ಇದನ್ನೂ ಓದಿ: 5 Soldiers Killed: ಲಡಾಕ್‌ನ ನದಿಯಲ್ಲಿ ಸೇನಾ ವಾಹನ ಮಗುಚಿ ಭೀಕರ ದುರಂತ; ಐವರು ಯೋಧರು ಹುತಾತ್ಮ

Continue Reading
Advertisement
Champions Trophy 2025:
ಪ್ರಮುಖ ಸುದ್ದಿ45 mins ago

Champions Trophy 2025 : ಭಾರತ ತಂಡ ಪಾಕಿಸ್ತಾನಕ್ಕೆ ಬರಲೇಬೇಕು ಹಠ ಹಿಡಿದು ಕುಳಿತಿರುವ ಪಿಸಿಬಿ

Rain News
ದೇಶ45 mins ago

Rain News: ವರುಣನ ಆರ್ಭಟ; ಮಳೆ ಸಂಬಂಧಿ ಅವಘಡಗಳಿಗೆ 24 ಗಂಟೆಯಲ್ಲಿ 13 ಜನ ಬಲಿ

KAS
ಕರ್ನಾಟಕ1 hour ago

KAS: ಕೆಎಎಸ್‌ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್;‌ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ, ಇಲ್ಲಿದೆ ಮಾಹಿತಿ

Mid Day Meal
ದೇಶ2 hours ago

Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

Dr HS Shetty: Rs 7 crore spent on charity; Businessman Dr. HS Shetty
ಪ್ರಮುಖ ಸುದ್ದಿ2 hours ago

Dr HS Shetty : ದಾನಗಳಿಗಾಗಿಯೇ ವರ್ಷದಲ್ಲಿ 7 ಕೋಟಿ ರೂ. ವಿನಿಯೋಗ

Vasishtha Simha starrer VIP Kannada movie
ಕರ್ನಾಟಕ3 hours ago

Kannada New Movie: ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಕಂಠಸಿರಿಯಲ್ಲಿ ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಚಿತ್ರದ ಹಾಡು

Asia Cup 2024
ಪ್ರಮುಖ ಸುದ್ದಿ3 hours ago

Asia Cup 2024 : ಮಹಿಳಾ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

Viral Video
Latest3 hours ago

Viral Video: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಪ್ರಾಂಶುಪಾಲರನ್ನು ಕುರ್ಚಿ ಸಹಿತ ಹೊರಗೆಳೆದ ಸಿಬ್ಬಂದಿ

Kashmir Encounter
ದೇಶ3 hours ago

Kashmir Encounter: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ನಾಲ್ವರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

Viral Video
Latest3 hours ago

Viral Video : ಹೀಗೆಲ್ಲಾ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಾರಾ…? ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ6 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ9 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ10 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು12 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ13 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ18 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ1 day ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ1 day ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ1 day ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ1 day ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

ಟ್ರೆಂಡಿಂಗ್‌