RCB vs CSK: ನಾಳಿನ ಪಂದ್ಯಕ್ಕೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ಆರ್​ಸಿಬಿ ಆಟಗಾರರು; ವಿಡಿಯೊ ವೈರಲ್​ - Vistara News

ಕ್ರೀಡೆ

RCB vs CSK: ನಾಳಿನ ಪಂದ್ಯಕ್ಕೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ಆರ್​ಸಿಬಿ ಆಟಗಾರರು; ವಿಡಿಯೊ ವೈರಲ್​

RCB vs CSK: ಹವಾಮಾನ ಇಲಾಖೆ ಪಂದ್ಯ ನಡೆಯುವ ಶನಿವಾರದಂದು ಶೇ.70ರಷ್ಟು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಆರ್​ಸಿಬಿ(RCB vs CSK) ಆಟಗಾರರು ಪಂದ್ಯದ ವೇಳೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ವಿಡಿಯೊವೊಂದು ಭಾರೀ ವೈರಲ್​(viral video) ಆಗಿದೆ.

VISTARANEWS.COM


on

RCB vs CSK
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​(Chennai Super Kings) ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ(Royal Challengers Bengaluru) ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ ಅನುವು ಮಾಡಿಕೊಡುವುದು ಬಹುತೇಖ ಅನುಮಾನ ಎನ್ನುವಂತಿದೆ. ಶುಕ್ರವಾರವೇ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಇದೀಗ ಆರ್​ಸಿಬಿ(RCB vs CSK) ಆಟಗಾರರು ಪಂದ್ಯದ ವೇಳೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ವಿಡಿಯೊವೊಂದು ಭಾರೀ ವೈರಲ್​(viral video) ಆಗಿದೆ.

ಹವಾಮಾನ ಇಲಾಖೆ ಪಂದ್ಯ ನಡೆಯುವ ಶನಿವಾರದಂದು ಶೇ.70ರಷ್ಟು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಪ್ಲೇ ಆಫ್​ ಪ್ರವೇಶ ಪಡೆಯಬೇಕಿದ್ದರೆ ಆರ್​ಸಿಬಿಗೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ ಪಂದ್ಯ ರದ್ದಾದರೆ ಟೂರ್ನಿಯಿಂದ ಅಧಿಕೃತವಾಗಿ ಹೊರಬೀಳಲಿದೆ. ಹೇಗಾದರೂ ಪಂದ್ಯದ ದಿನ ಮಳೆ ಬಾರದಿರಲಿ ಎಂದು ಆರ್​ಸಿಬಿ ಆಟಗಾರರು ಡ್ರೆಸಿಂಗ್​ ರೋಮ್​ನಲ್ಲಿ ಹರೇ ರಾಮ ಹರೇ ರಾಮ, ರಾಮ ರಾಮ ಹರೇ ಹರೇ, ಹರೇ ಕೃಷ್ಣ ಹರೇ ಕೃಷ್ಣ, ಕೃಷ್ಣ ಕೃಷ್ಣ ಹರೇ ಹರೇ ಎಂದು ಕೃಷ್ಣ ನಾಮ ಜಪಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ಅಸಲಿಗೆ ಆರ್​ಸಿಬಿ ಆಟಗಾರರು ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿಲ್ಲ. ಬದಲಾಗಿ ನೆಟ್ಟಿಗರು ಈ ವಿಡಿಯೊವನ್ನು ಎಡಿಟ್​ ಮಾಡಿ ವೈರಲ್​ ಮಾಡಿದ್ದಾರೆ. ಪ್ರತಿ ಪಂದ್ಯ ಗೆದ್ದಾಗ ಆರ್​ಸಿಬಿ ಡ್ರೆಸ್ಸಿಂಗ್​ ರೂಮ್​ನಲ್ಲಿ ಸಂಭ್ರಮಿಸುತ್ತಾರೆ. ಈ ವಿಡಿಯೊಗೆ ಕೃಷ್ಣ ನಾಮ ಜಪವನ್ನು ಮತ್ತು ಹವಾಮಾನ ಇಲಾಖೆಯ ವರದಿಯ ಫೋಟೊವನ್ನು ಎಡಿಟ್​​ ಮಾಡಲಾಗಿದೆ.

ಇದನ್ನೂ ಓದಿ RCB vs CSK: ಅದೇ ದಿನ, ಅದೇ ವಾರ, ಮಳೆ ಭೀತಿ; ಇದೆಂಥಾ ಕಾಕತಾಳೀಯ! ಆರ್​ಸಿಬಿಗೆ ಇದು ಅದೃಷ್ಟವಾ?

1. ಪಂದ್ಯದ ಸಮಯದಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ. ಒಂದೊಮ್ಮೆ ಪಂದ್ಯ ಮಳೆಯಿಂದ ರದ್ದಾದರೆ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕ ನೀಡಲಾಗುತ್ತದೆ.

2. ಆರ್​ಸಿಬಿ-ಸಿಎಸ್​ಕೆ​ ನಡುವಣ ಪಂದ್ಯದ ಅಂತಿಮ 5 ಓವರ್​ಗಳ ಪಂದ್ಯದ ಆಯೋಜನೆಗೆ ಕಟ್ ಆಫ್ ಟೈಮ್ 10:56 PM. ಈ ವೇಳೆಗೆ ಪಂದ್ಯ ಆಯೋಜಿಸುವಂತಹ ಪರಿಸ್ಥಿತಿ ಇರದಿದ್ದರೆ ಪಂದ್ಯವನ್ನು ರದ್ದು ಎಂದು ನಿರ್ಧರಿಸಲಾಗುತ್ತದೆ.

3. ಒಂದು ವೇಳೆ ಮಳೆ ಬಂದು, ಉದಾಹರಣೆಗೆ ನಿಗದಿತ 10 ಓವರ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ 10 ಓವರ್ ಆಡಿ, 2ನೇ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡಿದ ತಂಡ 5 ಓವರ್​ಗಳನ್ನು ಪೂರ್ತಿಗೊಳಿಸಿದರೆ ಮಾತ್ರ ಆಗ ಡಕ್​ವರ್ತ್ ಲೂಯಿಸ್ ನಿಯಮ ಅನ್ವಯವಾಗುತ್ತದೆ.

4. ಪಂದ್ಯ ಆರಂಭಗೊಂಡ ಬಳಿಕ ಮಳೆ ಬಂದರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಓವರ್ ಕಡಿತದೊಂದಿಗೆ ಟಾರ್ಗೆಟ್ ನೀಡಲಾಗುತ್ತದೆ. ಈ ಮೂಲಕ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ.

5. ಒಂದೊಮ್ಮೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಚೆನ್ನೈ ತಂಡ ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. ಏಕೆಂದರೆ ಈಗಾಗಲೇ ಚೆನ್ನೈ 14 ಅಂಕಗಳನ್ನು ಹೊಂದಿದ್ದು ಪಂದ್ಯ ರದ್ದಾದ ಕಾರಣ ಸಿಗುವ ಒಂದು ಅಂಕದಿಂದ ಒಟ್ಟು ಅಂಕ 15ಕ್ಕೇ ಏರಿಕೆಯಾಗುತ್ತದೆ. ಇನ್ನುಳಿದ ಯಾವುದೇ ತಂಡಕ್ಕೂ ಈ ಮೊತ್ತವನ್ನು ಮೀರಲು ಸಾಧ್ಯವಾಗುವುದಿಲ್ಲ. ಹೀಗಾಗಿ ಚೆನ್ನೈಗೆ ಮಳೆ ವರದಾನವಾಗಲಿದೆ. ಆರ್​ಸಿಬಿ ತಂಡವು 13 ಅಂಕಗಳೊಂದಿಗೆ ಐಪಿಎಲ್​ನಿಂದ ಹೊರಬೀಳಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Ravi Bishnoi : ಭಾರತ ಪರ ಸ್ಪಿನ್​ ಬೌಲಿಂಗ್​​ನಲ್ಲಿ ವಿಶೇಷ ಸಾಧನೆ ಮಾಡಿದ ರವಿ ಬಿಷ್ಣೋಯ್​​

Ravi Bishnoi :ಒಂದೇ ಟಿ20 ಪಂದ್ಯದಲ್ಲಿ ಎರಡು ಮೇಡನ್ ಬೌಲಿಂಗ್ ಮಾಡಿದ ಭಾರತದ ನಾಲ್ಕನೇ ಬೌಲರ್ ಎಂಬ ಹೆಗ್ಗಳಿಕೆಗೆ ಬಿಷ್ಣೋಯ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಹರ್ಭಜನ್ ಸಿಂಗ್, ಭುವನೇಶ್ವರ್ ಕುಮಾರ್ ಮತ್ತು ಜಸ್ಪ್ರೀತ್ ಬುಮ್ರಾ ಈ ಸಾಧನೆ ಮಾಡಿದ್ದಾರೆ. ವಾಸ್ತವವಾಗಿ, ಭುವನೇಶ್ವರ್ ಕುಮಾರ್ ಎರಡು ಬಾರಿ ಈ ಸಾಧನೆ ಮಾಡಿದ ಏಕೈಕ ಭಾರತೀಯ ಬೌಲರ್​.

VISTARANEWS.COM


on

Koo

ಹರಾರೆ: ಇಲ್ಲಿ ನಡೆದ ಜಿಂಬಾಬ್ವೆ ಮತ್ತು ಭಾರತ ನಡುವಿನ ಮೊದಲ ಟಿ 20 ಪಂದ್ಯದಲ್ಲಿ ಭಾರತದ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ (Ravi Bishnoi) ವಿನೂತನ ಸಾಧನೆ ಮಾಡಿದ್ದಾರೆ. ಬಿಷ್ಣೋಯ್ ಅವರ ಗಮನಾರ್ಹ ಬೌಲಿಂಗ್ ಪ್ರದರ್ಶನವು ಹರ್ಭಜನ್ ಸಿಂಗ್ ನಂತರ ಈ ಸ್ಮರಣೀಯ ಸಾಧನೆಯನ್ನು ಮಾಡಿದ ಎರಡನೇ ಭಾರತೀಯ ಸ್ಪಿನ್ನರ್ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಈ ಪಂದ್ಯದಲ್ಲಿ, ಬಿಷ್ಣೋಯ್ ಅವರು ನಾಲ್ಕು ಓವರ್​​ಗಳಲ್ಲಿ 13ರನ್​ ನೀಡಿ 4 ವಿಕೆಟ್​ ಪಡೆದಿದ್ದಾರೆ. ಬ್ರಿಯಾನ್ ಬೆನೆಟ್, ವೆಸ್ಲಿ ಮ್ಯಾಡ್ವೆರೆ, ಲ್ಯೂಕ್ ಜಾಂಗ್ವೆ ಮತ್ತು ಬ್ಲೆಸ್ಸಿಂಗ್ ಮುಜರಬಾನಿ ಅವರನ್ನು ಔಟ್ ಮಾಡಿದ್ದಾರೆ.

ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದ ಯುವ ಆಟಗಾರ ಬ್ರಿಯಾನ್ ಬೆನೆಟ್ ಅವರನ್ನು ಔಟ್ ಮಾಡುವ ಮೂಲಕ ಬಿಷ್ಣೋಯ್ ಪಂದ್ಯದ ಮೊದಲ ಎಸೆತದಲ್ಲಿ ವಿಕೆಟ್ ಪಡೆದರು. ಲೆಗ್ ಸ್ಪಿನ್ನರ್ ದೀರ್ಘಕಾಲದ ನಂತರ ಸ್ಪರ್ಧಾತ್ಮಕ ಕ್ರಿಕೆಟ್ ಆಡುತ್ತಿದ್ದರೂ ಯಾವುದೇ ಉತ್ಸಾಹ ತೋರಿಸಲಿಲ್ಲ. ಅವರು ತಮ್ಮ ಎರಡನೇ ಓವರ್​ನಲ್ಲಿ ವೆಸ್ಲಿ ಮ್ಯಾಡ್ವೆರೆ ಅವರನ್ನು ಔಟ್ ಮಾಡಿದರು. ಸ್ಲಾಗ್ ಓವರ್ ಸಮಯದಲ್ಲಿ ಬಿಷ್ಣೋಯ್ ತಮ್ಮ ಎರಡನೇ ಸ್ಪೆಲ್ ಎಸೆಯಲು ಬಂದರು. ನಿಧಾನಗತಿಯ ಪಿಚ್​​ನಲ್ಲಿ ಅವರನ್ನು ಅರಿಯಲು ಜಿಂಬಾಬ್ವೆ ಬ್ಯಾಟರ್​ಗಿಗೆ ಕಷ್ಟವಾಯಿತು. ಪಂದ್ಯದ 16ನೇ ಓವರ್ ನಲ್ಲಿ ಅವರು ತಮ್ಮ ಖಾತೆಗೆ ಇನ್ನೂ ಎರಡು ವಿಕೆಟ್ ಗಳನ್ನು ಸೇರಿಸಿ ಜಿಂಬಾಬ್ವೆಯನ್ನು ಕಡಿಮೆ ಮೊತ್ತಕ್ಕೆ ನಿಲ್ಲಿಸಿದರು.

ಹರ್ಭಜನ್ ಸಿಂಗ್ ನಂತರ ವಿಶೇಷ ಸಾಧನೆ

ರವಿ ಬಿಷ್ಣೋಯ್ ತಮ್ಮ ಅದ್ಭುತ ಸ್ಪಿನ್ ಬೌಲಿಂಗ್​​ನಲ್ಲಿ ಎರಡು ಮೇಡನ್ ಓವರ್​ಗಳನ್ನು ಎಸೆದರು. ಹರ್ಭಜನ್ ಸಿಂಗ್ ನಂತರ ಒಂದೇ ಟಿ 20 ಐನಲ್ಲಿ ಎರಡು ಮೇಡನ್ ಓವರ್​​ಗಳನ್ನು ಎಸೆದ ಎರಡನೇ ಭಾರತೀಯ ಸ್ಪಿನ್ನರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸುಮಾರು 12 ವರ್ಷಗಳ ಹಿಂದೆ ಹರ್ಭಜನ್ ಸಿಂಗ್ 2012 ರ ಟಿ 20 ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಎರಡು ಮೇಡನ್​ ಓವರ್​ ಎಸೆದಿದ್ದರು. ಆ ಸಮಯದಲ್ಲಿ, ಹರ್ಭಜನ್ 4-2-12-4 ಅಂಕಿಅಂಶಗಳನ್ನು ದಾಖಲಿಸಿದ್ದರು. ಹರ್ಭಜನ್ ಅವರ ವೀರೋಚಿತ ಪ್ರದರ್ಶನದಿಂದಾಗಿ ಭಾರತವು ಈ ಪಂದ್ಯದಲ್ಲಿ ಇಂಗ್ಲೆಂಡ್ ಅನ್ನು 90 ರನ್​​ಗಳಿಂದ ಸೋಲಿಸಿತ್ತು. ಅವರು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.

ಇದನ್ನೂ ಓದಿ: ಸರ್ಕಾರಿ ಮತ್ತು ಖಾಸಗಿ ವಲಯದ ಪಾಲುದಾರಿಕೆಯಿಂದ ಕ್ರೀಡೆಗಳ ಭವಿಷ್ಯ ನಿರ್ಧಾರ: ಪಾರ್ಥ್ ಜಿಂದಾಲ್ 

ಒಂದೇ ಟಿ20 ಪಂದ್ಯದಲ್ಲಿ ಎರಡು ಮೇಡನ್ ಬೌಲಿಂಗ್ ಮಾಡಿದ ಭಾರತದ ನಾಲ್ಕನೇ ಬೌಲರ್ ಎಂಬ ಹೆಗ್ಗಳಿಕೆಗೆ ಬಿಷ್ಣೋಯ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಹರ್ಭಜನ್ ಸಿಂಗ್, ಭುವನೇಶ್ವರ್ ಕುಮಾರ್ ಮತ್ತು ಜಸ್ಪ್ರೀತ್ ಬುಮ್ರಾ ಈ ಸಾಧನೆ ಮಾಡಿದ್ದಾರೆ. ವಾಸ್ತವವಾಗಿ, ಭುವನೇಶ್ವರ್ ಕುಮಾರ್ ಎರಡು ಬಾರಿ ಈ ಸಾಧನೆ ಮಾಡಿದ ಏಕೈಕ ಭಾರತೀಯ ಬೌಲರ್​.

ಭಾರತವನ್ನು ಸೋಲಿಸಿದ ಜಿಂಬಾಬ್ವೆ

ಪಂದ್ಯದ ಬಗ್ಗೆ ಮಾತನಾಡುವುದಾದರೆ ಭಾರತೀಯ ಬೌಲರ್​ಗಳು ಅದ್ಭುತವಾಗಿ ಬೌಲಿಂಗ್ ಮಾಡಿದರು. ಜಿಂಬಾಬ್ವೆಯನ್ನು 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 115 ರನ್​​ಗಳಿಗೆ ಸೀಮಿತಗೊಳಿಸಿದರು. ಗೆಲ್ಲಲು 116 ರನ್​ಗಳ ಗುರಿ ಬೆನ್ನತ್ತಿದ ಭಾರತದ ಯುವ ಬ್ಯಾಟಿಂಗ್ ಲೈನ್ಅಪ್ ಕಠಿಣ ಪಿಚ್​​ನಲ್ಲಿ ಪೇಚಿಗೆ ಈಡಾಯಿತು.

ಆರಂಭಿಕ ಆಟಗಾರರಾದ ರಿಯಾನ್ ಪರಾಗ್ ಮತ್ತು ಅಭಿಷೇಕ್ ಶರ್ಮಾ ಹೆಣಗಾಡಿದರು. ಒಂದು ಹಂತದಲ್ಲಿ ಮೆನ್ ಇನ್ ಬ್ಲೂ 47 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡಿತು. ನಾಯಕ ಶುಬ್ಮನ್ ಗಿಲ್ ಇನ್ನಿಂಗ್ಸ್ ಪುನರುಜ್ಜೀವನಗೊಳಿಸಲು ಪ್ರಯತ್ನಿಸಿದರು. ಜಿಂಬಾಬ್ವೆಯ ಬೌಲರ್​ಗಳು ಆ ದಿನ ತುಂಬಾ ಉತ್ತಮವೆಂದು ಸಾಬೀತುಪಡಿಸಿದರು.

Continue Reading

ಕ್ರೀಡೆ

Shashi Tharoor: ಜಿಂಬಾಬ್ವೆ ಎದುರು ಭಾರತಕ್ಕೆ ಸೋಲು: ಲೇವಡಿ ಮಾಡಿದ ಶಶಿ ತರೂರ್

Shashi Tharoor: ತರೂರ್ ಹೇಳಿಕೆಗೆ ತಕ್ಕ ತಿರುಗೇಟು ಕೊಟ್ಟಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್‌ ಪೂನಾವಾಲ, ‘ನಮ್ಮ ತಂಡ ಸರಿಯಾಗಿ ಆಡಲಿಲ್ಲ. ಹಾಗಾಗಿ ಸೋಲು ಅನುಭವಿಸಿದೆ. ಆದರೆ, ಬಿಜೆಪಿ ಮತ್ತು ಪ್ರಧಾನಿ ಮೋದಿ ಮೇಲಿನ ದ್ವೇಷದಿಂದಾಗಿ ಕಾಂಗ್ರೆಸ್‌ ಭಾರತ ತಂಡದ ಸೋಲನ್ನು ಸಂಭ್ರಮಿಸುವುದನ್ನು ನೋಡುವುದು ಅಸಹ್ಯಕರವಾಗಿದೆ’ ಎಂದು ಹೇಳಿದ್ದಾರೆ.

VISTARANEWS.COM


on

Shashi Tharoor
Koo

ನವದೆಹಲಿ: ಜಿಂಬಾಬ್ವೆ(Zimbabwe vs India) ವಿರುದ್ಧ ಶನಿವಾರ ನಡೆದಿದ್ದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಸೋಲು ಕಂಡ ಬೆನ್ನಲ್ಲೇ ಕಾಂಗ್ರೆಸ್ ಸಂಸದ ಶಶಿ ತರೂರ್(Shashi Tharoor) ಬಿಸಿಸಿಐ(BCCI) ಕಾರ್ಯದರ್ಶಿ ಜಯ್‌ ಶಾ(Jay Shah) ವಿರುದ್ಧ ಕಿಡಿಕಾರಿದ್ದಾರೆ. ಎದುರಾಳಿ ತಂಡಗಳನ್ನು ಲಘುವಾಗಿ ಪರಿಗಣಿಸಿದ್ದು ಈ ಸೋಲಿಗೆ ಕಾರಣ ಎಂದು ಹೇಳಿದ್ದಾರೆ.

’17 ವರ್ಷಗಳ ಬಳಿಕ 2ನೇ ಟಿ20 ವಿಶ್ವಕಪ್ ಗೆದ್ದು ಬೀಗಿದ್ದ ಟೀಮ್ ಇಂಡಿಯಾ ಆಟಗಾರರನ್ನು ಮುಂಬೈಯಲ್ಲಿ ಭರ್ಜರಿ ಕಾರ್ಯಕ್ರಮದ ಮೂಲಕ ಅಭಿನಂದಿಸಲಾಗಿತ್ತು. ಈ ಸಂಭ್ರಮ ಮುಗಿಯುವ ಮುನ್ನವೇ ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ ಸೋಲು ಕಂಡಿದ್ದೇವೆ. ಇದನ್ನು ಗಮನಿಸಿದರೆ ಬಿಸಿಸಿಐ ಎದುರಾಳಿ ತಂಡಗಳನ್ನು ಲಘುವಾಗಿ ಪರಿಗಣಿಸಿದೆ ಎಂಬುದು ಸ್ಪಷ್ಟ. ಜೂನ್ 4ರಂದು (ಲೋಕಸಭೆ ಚುನಾವಣಾ ಫಲಿತಾಂಶ) ಒಂದು ಹಂತದ ದುರಹಂಕಾರವನ್ನು ಇಳಿಸಲಾಗಿದೆ. ಜಿಂಬಾಬ್ವೆ ಉತ್ತಮ ಆಟವಾಡಿದೆ’ ಎಂದು ತರೂರ್ ‘ಎಕ್ಸ್‌’ನಲ್ಲಿ ಬಿಜೆಪಿ ಮತ್ತು ಬಿಸಿಸಿಐಯನ್ನು ಲೇವಡಿ ಮಾಡಿದ್ದಾರೆ.

ತರೂರ್ ಹೇಳಿಕೆಗೆ ತಕ್ಕ ತಿರುಗೇಟು ಕೊಟ್ಟಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್‌ ಪೂನಾವಾಲ, ‘ನಮ್ಮ ತಂಡ ಸರಿಯಾಗಿ ಆಡಲಿಲ್ಲ. ಹಾಗಾಗಿ ಸೋಲು ಅನುಭವಿಸಿದೆ. ಆದರೆ, ಬಿಜೆಪಿ ಮತ್ತು ಪ್ರಧಾನಿ ಮೋದಿ ಮೇಲಿನ ದ್ವೇಷದಿಂದಾಗಿ ಕಾಂಗ್ರೆಸ್‌ ಭಾರತ ತಂಡದ ಸೋಲನ್ನು ಸಂಭ್ರಮಿಸುವುದನ್ನು ನೋಡುವುದು ಅಸಹ್ಯಕರವಾಗಿದೆ’ ಎಂದು ಹೇಳಿದ್ದಾರೆ.

ಶೆಹಜಾದ್‌ ಪೂನಾವಾಲ ಟ್ವೀಟ್​ಗೆ ಮರು ಪ್ರತಿಕ್ರಿಯೆ ನೀಡಿದ ತರೂರ್​, ‘ಜಿಂಬಾಬ್ವೆ ಪ್ರವಾಸ ಕೈಗೊಂಡಿರುವ ಭಾರತ ತಂಡದಲ್ಲಿ ಪಂತ್, ಹಾರ್ದಿಕ್, ಕುಲದೀಪ್, ಸಿರಾಜ್, ಬುಮ್ರಾ ಮತ್ತು ಅರ್ಷದೀಪ್, ಸಂಜು, ಜೈಸ್ವಾಲ್, ಚಾಹಲ್, ದುಬೆ ಆಡುತ್ತಿಲ್ಲ. ಉತ್ತಮ ತಂಡವನ್ನು ಆಯ್ಕೆ ಮಾಡುವಲ್ಲಿ ಬಿಸಿಸಿಐ ಎಡವಿದೆ. ಜತೆಗೆ, ನಮ್ಮ ಆಟಗಾರರು ಸ್ವಾಭಿಮಾನವನ್ನು ತೋರಿಸದೆ ಸೋತಿರುವುದಕ್ಕೆ ಬೇಸರವಿದೆ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ Shashi Tharoor Controversy: ಉತ್ತರಪ್ರದೇಶದ ಬಗ್ಗೆ ಶಶಿ ತರೂರ್‌ ಹೇಳಿದ್ದೇನು ಗೊತ್ತಾ?; ಭಾರೀ ವಿವಾದಕ್ಕೀಡಾಗ್ತಿದೆ ಈ ಪೋಸ್ಟ್‌

ಮೋದಿ ಪದಗ್ರಹಣ ನೋಡಲ್ಲ ಎಂದಿದ್ದ ತರೂರ್

ಜೂನ್‌ 9 ರಂದು ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ವೇಳೆ ತಾನು ಮೋದಿ ಅವರ​ ಪದಗ್ರಹಣ ಸಮಾರಂಭದ ಬದಲು ಭಾರತ-ಪಾಕಿಸ್ತಾನ ಕ್ರಿಕೆಟ್​ ಪಂದ್ಯ ನೋಡಲು ಕಾತರಗೊಂಡಿದ್ದೇನೆ ಎಂದು ತರೂರ್ ಲೇವಡಿ ಮಾಡಿದ್ದರು.

“ನನ್ನನ್ನು ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನಿಸಿಲ್ಲ. ಹೀಗಾಗಿ ನಾನು ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್​ ಪಂದ್ಯವನ್ನು ವೀಕ್ಷಿಸುತ್ತೇನೆ. ಪ್ರಧಾನಿ ಪ್ರಮಾಣವಚನ ಸಮಾರಂಭಕ್ಕೆ ಬೇರೆ ರಾಷ್ಟ್ರದ ಅದರಲ್ಲೂ ಭಾರತ ವಿರೋಧಿ ಮನಸ್ಥಿತಿಯ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಅವರನ್ನು ಆಹ್ವಾನಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳುವ ಮೂಲಕ ಮೋದಿಗೆ ಟಾಂಗ್​ ಕೊಟ್ಟಿದ್ದರು.

ಸೋಲು ಕಂಡ ಭಾರತ

ಶನಿವಾರ ನಡೆದಿದ್ದ ಈ ಪಂದ್ಯದಲ್ಲಿ ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡ ಭಾರತ ಭರ್ಜರಿ ಬೌಲಿಂಗ್‌ ಮಾಡಿ ಜಿಂಬಾಬ್ವೆ ಆಟಗಾರರನ್ನು 115 ರನ್​ಗೆ ಕಟ್ಟಿ ಹಾಕಿತು. ಈ ಮೊತ್ತವನ್ನು ಭಾರತ ಕೇವಲ 10 ಓವರ್​ನಲ್ಲಿ ಹೊಡೆದು ಮುಗಿಸಬಹುದು ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಚೇಸಿಂಗ್ ಆರಂಭಿಸಿದಾಗ ನಡೆದಿದ್ದೇ ಬೇರೆ. ಭಾರತೀಯ ಬ್ಯಾಟರ್​ಗಳ ವಿಕೆಟ್​ಗಳು ತರಗೆಲೆಯಂತೆ ಉದುರಿಹೋಯಿತು. 19,5 ಓವರ್​ಗಳಲ್ಲಿ 102 ರನ್​ಗೆ ಸರ್ವ ಪತನ ಕಂಡು ಸೋಲೊಪ್ಪಿಕೊಂಡಿತು.

Continue Reading

ಪ್ರಮುಖ ಸುದ್ದಿ

Ishan Kishan : ನನ್ನನ್ನು ಹೊರಗಿಟ್ಟಿರುವ ತೀರ್ಮಾನ ಮೂರ್ಖತನದ್ದು; ಜಯ್​ ಶಾಗೆ ಟಾಂಗ್​ ಕೊಟ್ಟ ಇಶಾನ್​ ಕಿಶನ್​

Ishan Kishan : ಭಾರತದ ವಿಕೆಟ್ ಕೀಪರ್-ಬ್ಯಾಟರ್​ ಇಶಾನ್ ಕಿಶನ್​ಗೆ ಕಳೆದ ಕೆಲವು ತಿಂಗಳುಗಳು ಉತ್ತಮವಾಗಿಲ್ಲ. ಭಾರತೀಯ ಇಲೆವೆನ್​ನಲ್ಲಿ ಹಿಡಿದು ಭಾರತ ತಂಡದ ಸೆಟ್​ಅಪ್​​ನಲ್ಲಿ ಎಲ್ಲಿಯೂ ಕಾಣಿಸುತ್ತಿಲ್ಲ. ಅವರನ್ನು ಮೊದಲಿಗೆ ತಂಡದಿಂದ ಕೈಬಿಡಲಾಗಿತ್ತು. ಬಳಿಕ ಬಿಸಿಸಿಐನ ಕೇಂದ್ರ ಒಪ್ಪಂದದಿಂದ ತೆಗೆದುಹಾಕಲಾಗಿತ್ತು.

VISTARANEWS.COM


on

ishan Kishan
Koo

ನವದೆಹಲಿ: ರಾಹುಲ್ ದ್ರಾವಿಡ್ ಮತ್ತು ಬಿಸಿಸಿಐ ಸೂಚನೆ ನೀಡಿದರೂ ರಣಜಿ ಟ್ರೋಫಿಯಲ್ಲಿ ಏಕೆ ಆಡಲಿಲ್ಲ ಎಂಬ ಬಗ್ಗೆ ಭಾರತದ ವಿಕೆಟ್ ಕೀಪರ್ ಬ್ಯಾಟರ್​ ಇಶಾನ್ ಕಿಶನ್ (Ishan Kishan) ಮಾತನಾಡಿದ್ದಾರೆ. ವಿರಾಮದ ನಡುವೆ ದೇಶೀಯ ಕ್ರಿಕೆಟ್​ನಲ್ಲಿ ಆಡುವುದು ಯಾವುದೇ ಅರ್ಥವಿಲ್ಲ ಎಂದು ಹೇಳುವ ಜತೆಗೆ ಈ ನಿರ್ಧಾರ ತೆಗೆದುಕೊಂಡ ಜಯ್​ ಶಾ ಅವರ ಯೋಚನೆ ಸರಿಯಿಲ್ಲ ಎಂಬುದಾಗಿ ಹೇಳಿದ್ದಾರೆ.

ಭಾರತದ ವಿಕೆಟ್ ಕೀಪರ್-ಬ್ಯಾಟರ್​ ಇಶಾನ್ ಕಿಶನ್​ಗೆ ಕಳೆದ ಕೆಲವು ತಿಂಗಳುಗಳು ಉತ್ತಮವಾಗಿಲ್ಲ. ಭಾರತೀಯ ಇಲೆವೆನ್​ನಲ್ಲಿ ಹಿಡಿದು ಭಾರತ ತಂಡದ ಸೆಟ್​ಅಪ್​​ನಲ್ಲಿ ಎಲ್ಲಿಯೂ ಕಾಣಿಸುತ್ತಿಲ್ಲ. ಅವರನ್ನು ಮೊದಲಿಗೆ ತಂಡದಿಂದ ಕೈಬಿಡಲಾಗಿತ್ತು. ಬಳಿಕ ಬಿಸಿಸಿಐನ ಕೇಂದ್ರ ಒಪ್ಪಂದದಿಂದ ತೆಗೆದುಹಾಕಲಾಗಿತ್ತು.

ಇಶಾನ್ ಕಿಶನ್ ದಕ್ಷಿಣ ಆಫ್ರಿಕಾ ಟೆಸ್ಟ್​​ನಿಂದ ವಿರಾಮ ತೆಗೆದುಕೊಂಡ ನಂತರ ಅಂದಿನ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಭಾರತೀಯ ತಂಡಕ್ಕೆ ಮರಳಲು, ಕೀಪರ್-ಬ್ಯಾಟರ್​​ ದೇಶೀಯ ಕ್ರಿಕೆಟ್ ಆಡುವ ಅಗತ್ಯವಿದೆ ಎಂದು ಹೇಳಿದ್ದರು. ಬಿಸಿಸಿಐ ಕೂಡ ದ್ರಾವಿಡ್ ಹೇಳಿಕೆಗೆ ಸಮ್ಮತಿ ಸೂಚಿಸಿತ್ತು. ದೇಶೀಯ ಕ್ರಿಕೆಟ್ ಆಡುವ ಮಹತ್ವವನ್ನು ಎತ್ತಿ ತೋರಿಸಿದ್ದರು. ಆದಾಗ್ಯೂ, ಇಶಾನ್ ಕಿಶನ್ ರಾಹುಲ್ ದ್ರಾವಿಡ್ ಮತ್ತು ಬಿಸಿಸಿಐ ಮಾತನ್ನು ಕೇಳಲಿಲ್ಲ ಮತ್ತು ದೇಶೀಯವಾಗ ಜಾರ್ಖಂಡ್ ಪರ ಆಡಲಿಲ್ಲ. ಕೀಪರ್ ಬ್ಯಾಟರ್​​ ಅಹಂಕಾರ ತೋರಿಸಿದ್ದಾರೆ ಎಂದು ಅವರು ಅಭಿಪ್ರಾಯ ವ್ಯಕ್ತಗೊಂಡ ಬಳಿಕ ಆಡಳಿತ ಮಂಡಳಿ ಕ್ರಮ ಕೈಗೊಂಡಿತು. ಅವರನ್ನು ವಾರ್ಷಿಕ ಗುತ್ತಿಗೆಯಿಂದ ವಜಾಗೊಳಿಸಲಾಯಿತು.

ರಣಜಿ ಟ್ರೋಫಿಯಲ್ಲಿ ಏಕೆ ಆಡಲಿಲ್ಲ ಎಂಬುದರ ಬಗ್ಗೆ ಮಾತನಾಡಿದ ಇಶಾನ್ ಕಿಶನ್, ದೇಶೀಯ ಕ್ರಿಕೆಟ್ ಆಡುವುದರಲ್ಲಿ ಯಾವುದೇ ಅರ್ಥವಿಲ್ಲ. ಏಕೆಂದರೆ ನಾನು ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ವಿರಾಮ ತೆಗೆದುಕೊಂಡಿದ್ದೆ, ಜಾರ್ಖಂಡ್ ಪರ ಆಡಬೇಕಾದರೆ ನಾನು ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ವಿರಾಮ ತೆಗೆದುಕೊಳ್ಳಬೇಕಾಗಿಲ್ಲ ಎಂದು ಅವರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಇದನ್ನೂ ಓದಿ: Champions Trophy 2025 : ಭಾರತ ತಂಡ ಪಾಕಿಸ್ತಾನಕ್ಕೆ ಬರಲೇಬೇಕು ಹಠ ಹಿಡಿದು ಕುಳಿತಿರುವ ಪಿಸಿಬಿ

ನಾನು ವಿರಾಮ ತೆಗೆದುಕೊಂಡಿರುವ ಕಾರಣ ಬೇರೆ ಎಲ್ಲಿಯೂ ಆಡಲು ಸಾಧ್ಯವಿಲ್ಲ. ಪುನರಾಗಮನ ಮಾಡಲು ಬಯಸಿದರೆ ನೀವು ದೇಶೀಯ ಕ್ರಿಕೆಟ್​​ನಲ್ಲಿ ಪ್ರದರ್ಶನ ನೀಡಬೇಕು ಎಂಬ ನಿಯಮವಿದೆ. ಅದು ಸರಳವಾಗಿದೆ. ಈಗ, ದೇಶೀಯ ಕ್ರಿಕೆಟ್ ಆಡುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಹೇಳಿದ್ದಾರೆ.

ನಾನು ಆಡುವ ಮನಸ್ಥಿತಿಯಲ್ಲಿ ಇರಲಿಲ್ಲ ಮತ್ತು ಅದಕ್ಕಾಗಿಯೇ ನಾನು ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ವಿರಾಮ ತೆಗೆದುಕೊಂಡೆ. ನೀವು ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ವಿರಾಮ ತೆಗೆದುಕೊಂಡು ನಂತರ ದೇಶೀಯ ಪಂದ್ಯಗಳನ್ನು ಆಡಬೇಕು ಎಂದು ಅರ್ಥವಲ್ಲ. ಆಡಲೇಬೇಕಾದರೆ ನಾನು ಭಾರತಕ್ಕಾಗಿ ಆಡುವುದನ್ನು ಮುಂದುವರಿಸಬಹುದಿತ್ತು” ಎಂದು ಹೇಳಿದ್ದಾರೆ.

ತಂಡಕ್ಕೆ ಇದು ಸುಲಭವಲ್ಲ ಎಂದು ನನಗೆ ತಿಳಿದಿದೆ

ಇಶಾನ್ ಕಿಶನ್ ಕೂಡ ಭಾರತ ತಂಡಕ್ಕೆ ಮರಳುವ ಬಗ್ಗೆ ಮಾತನಾಡಿದ್ದಾರೆ. ಸಾಕಷ್ಟು ಸ್ಪರ್ಧೆ ಇರುವ ಪುನರಾಗಮನ ಮಾಡುವುದು ಸುಲಭವಲ್ಲ ಎಂದು ಒಪ್ಪಿಕೊಂಡರು. ತಾವು ಅತ್ಯುತ್ತಮವಾದದ್ದನ್ನು ನೀಡುತ್ತಲೇ ಇರುತ್ತೇನೆ ಎಂದು ಹೇಳಿದರು.

ಇದು ಸುಲಭವಲ್ಲ ಎಂದು ನನಗೆ ತಿಳಿದಿದೆ. ಆದರೆ ಸ್ಪರ್ಧೆಯು ನಿಮಗೆ ತೃಪ್ತಿಯ ಭಾವನೆಯನ್ನು ನೀಡುತ್ತದೆ ಎಂದು ನಾನು ಭಾವಿಸುತ್ತೇನೆ. ನಾನು ಅದನ್ನು ಆನಂದಿಸುತ್ತೇನೆ. ನಾನು ಅದರ ಬಗ್ಗೆ ಯಾವುದೇ ಒತ್ತಡವನ್ನು ತೆಗೆದುಕೊಳ್ಳುವುದಿಲ್ಲ, “ಎಂದು ಅವರು ಮುಕ್ತಾಯಗೊಳಿಸಿದರು.

Continue Reading

ಕ್ರೀಡೆ

Paris Olympics 2024: ಒಲಿಂಪಿಕ್ಸ್‌ಗೆ ಭಾರತದ ಎಲ್ಲ ಕ್ರೀಡಾಪಟುಗಳು ಫಿಟ್‌ ಎಂದ ಐಒಎ

Paris Olympics 2024: ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುತ್ತಿರುವ 120 ಕ್ರೀಡಾಪಡುಗಳಿಗೆ ತಮ್ಮ 13 ಜನರನ್ನೊಳಗೊಂಡ ತಂಡ ವೈದ್ಯೋಪಚಾರ ನೀಡಲು ಸಿದ್ಧವಾಗಿದೆ ಎಂದವರು ಮಾಹಿತಿ ನೀಡಿದ್ದಾರೆ.

VISTARANEWS.COM


on

Paris Olympics 2024
Koo

ನವದೆಹಲಿ: ಜುಲೈ 26ರಿಂದ ಪ್ಯಾರಿಸ್​ನಲ್ಲಿ ಆರಂಭಗೊಳ್ಳಲಿರುವ ಒಲಿಂಪಿಕ್ಸ್‌(Paris Olympics 2024) ಕ್ರೀಡಾಕೂಟದಲ್ಲಿ ಸ್ಪರ್ಧಿಸುವ ಎಲ್ಲ ಅಥ್ಲೀಟ್‌ಗಳು ಫಿಟ್‌ ಆಗಿದ್ದಾರೆ ಎಂದು ಭಾರತೀಯ ಒಲಿಂಪಿಕ್ಸ್‌ ಪ್ರಾಧಿಕಾರ (IOA) ಪ್ರಕಟಿಸಿದೆ. ಐಒಎ ಮುಖ್ಯ ವೈದ್ಯಾಧಿಕಾರಿ ಡಾ. ದೀನ್‌ಶಾ ಪಾರ್ದೀವಾಲ(Dr. Dinshaw Pardiwala) ಕ್ರೀಡಾಪಟುಗಳ ಫಿಟ್​ನೆಸ್​ ಪರೀಕ್ಷೆ ಮಾಡಿದ್ದರು. ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುತ್ತಿರುವ 120 ಕ್ರೀಡಾಪಡುಗಳಿಗೆ ತಮ್ಮ 13 ಜನರನ್ನೊಳಗೊಂಡ ತಂಡ ವೈದ್ಯೋಪಚಾರ ನೀಡಲು ಸಿದ್ಧವಾಗಿದೆ ಎಂದವರು ಮಾಹಿತಿ ನೀಡಿದ್ದಾರೆ.

ಕ್ರೀಡಾಪಟುಗಳು ಶ್ರೇಷ್ಠ ಪ್ರದರ್ಶನ ನೀಡಲಿದ್ದಾರೆ; ಮೋದಿ ವಿಶ್ವಾಸ


ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತದ ಅಥ್ಲೀಟ್‌ಗಳು ಉತ್ತಮ ಪ್ರದರ್ಶನ ನೀಡುವ ಮೂಲಕ ದೇಶಕ್ಕೆ ಹೆಮ್ಮೆ ತರುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ಯಾರಿಸ್‌ಗೆ ತೆರಳಲಿರುವ ಹಲವು ಅಥ್ಲೀಟ್‌ಗಳ ಜತೆ ಸಂವಾದ ನಡೆಸಿದ ಬಳಿಕ ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದರು.

‘ಒಲಿಂಪಿಕ್ಸ್‌ಗಾಗಿ ಪ್ಯಾರಿಸ್‌ಗೆ ತೆರಳಲಿರುವ ನಮ್ಮ ಅಥ್ಲೀಟ್‌ಗಳು ಅತ್ಯುತ್ತಮ ಪ್ರದರ್ಶನ ನೀಡಿ ಭಾರತವೇ ಹೆಮ್ಮೆ ಪಡುವಂತೆ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ. ಅವರ ಮೇಲೆ 140 ಕೋಟಿ ಭಾರತೀಯರು ಭರವಸೆ ಇಟ್ಟಿದ್ದಾರೆ’ ಎಂದು ಮೋದಿ ಬರೆದುಕೊಂಡಿದ್ದರು.

ಅಥ್ಲೀಟಿಕ್​ ತಂಡಕ್ಕೆ ನೀರಜ್​ ನಾಯಕ


ಟೋಕಿಯೊ ಒಲಿಂಪಿಕ್​ ಚಿನ್ನದ ಪದಕ ವಿಜೇತ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಅಥ್ಲೀಟಿಕ್​ ತಂಡಕ್ಕೆ ನಾಯಕನಾಗಿದ್ದಾರೆ. 28 ಸದಸ್ಯರನ್ನು ಒಳಗೊಂಡ ಟ್ರ್ಯಾಕ್ ಆ್ಯಂಡ್ ಫೀಲ್ಡ್ ತಂಡದ ಕಿರುಪಟ್ಟಿ ಈಗಾಗಲೇ ಪ್ರಕಟಗೊಂಡಿದೆ. ಟ್ರ್ಯಾಕ್ ಆ್ಯಂಡ್ ಫೀಲ್ಡ್ ಸ್ಪರ್ಧಾವಳಿಯು ಆಗಸ್ಟ್ 1ರಿಂದ 11ರ ತನಕ ಪ್ಯಾರಿಸ್​ನಲ್ಲಿ ನಡೆಯಲಿದೆ.

ಇದನ್ನೂ ಓದಿ Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ದೇಶದ ಕ್ರೀಡಾಪಟುಗಳ ಶ್ರೇಷ್ಠ ಪ್ರದರ್ಶನ; ಮೋದಿ ವಿಶ್ವಾಸ

ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪದಕ ಗೆಲ್ಲುವುದು ಭಾರತದ ಪ್ರಮುಖ ಗುರಿಯಾಗಿದೆ. ಟೋಕಿಯೊದಲ್ಲಿ ಭಾರತ ಒಟ್ಟು 7 ಪದಕ ಜಯಿಸಿತ್ತು. ಇದರಲ್ಲಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕ ಒಳಗೊಂಡಿತ್ತು. ಒಟ್ಟಾರೆಯಾಗಿ ಭಾರತ ಪದಕ ಪಟ್ಟಿಯಲ್ಲಿ 48ನೇ ಸ್ಥಾನ ಪಡೆದಿತ್ತು. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ(Paris Olympics) ಭಾಗಿಯಾಗುವ ಭಾರತದ ಆ್ಯತ್ಲೀಟ್‌ಗಳಿಗೆ ಮನೆಯ ವಾತಾವರಣವನ್ನು ಕಲ್ಪಿಸುವ ಉದ್ದೇಶದಿಂದ ರಿಲಯನ್ಸ್‌ ಸಂಸ್ಥೆ “ಇಂಡಿಯಾ ಹೌಸ್​”(India House)​ ಎಂಬ ವಿಶೇಷ ವ್ಯವಸ್ಥೆಯೊಂದನ್ನು ಮಾಡಿದೆ. ಭಾರತೀಯ ಕ್ರೀಡಾಪಟುಗಳು ಇದರಲ್ಲೇ ಉಳಿದುಕೊಳ್ಳಲಿದ್ದಾರೆ.

ಇಂಡಿಯಾ ಹೌಸ್​ಗೆ ಎಲ್ಲ ದೇಶಗಳ ಪತ್ರಕರ್ತರಿಗೆ ಮುಕ್ತ ಪ್ರವೇಶವಿದೆ ಎಂದು ನೀತಾ ಅಂಬಾನಿ(Nita Ambani) ಹೇಳಿದ್ದಾರೆ. ನೀತಾ ಅಂಬಾನಿ ಅವರು ಅಂತಾರಾಷ್ಟ್ರೀಯ ಒಲಿಂಪಿಕ್ ಸಂಸ್ಥೆ (ಐಒಸಿ.) ಸದಸ್ಯೆಯಾಗಿದ್ದಾರೆ. ಅಮೆರಿಕಾದ ಲಾಸ್ ಏಂಜಲಿಸ್​ನಲ್ಲಿ 2028ರಲ್ಲಿ ನಡೆಯುವ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್​ ಸೇರ್ಪಡೆಗೊಳ್ಳುವಲ್ಲಿ ನೀತಾ ಅಂಬಾನಿ ಅವರ ಪಾತ್ರವೂ ಪ್ರಮುಖವಾಗಿತ್ತು. ಕಳೆದ ವರ್ಷ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧಿವೇಶನ(International Olympic Committee Session) ಮುಂಬೈಯಲ್ಲಿ ನಡೆದ ವೇಳೆಯೂ ನೀತಾ ಅಂಬಾನಿ ಈ ಸಭೆಯ ವಕಾಲತ್ತು ವಹಿಸಿದ್ದರು.

Continue Reading
Advertisement
Viral News
ದೇಶ4 mins ago

Viral News: ಶಾಕಿಂಗ್‌ ಘಟನೆ! ಬುದ್ದಿ ಹೇಳಿದ ಗುರುವನ್ನೇ ಚುಚ್ಚಿ ಕೊಂದ ವಿದ್ಯಾರ್ಥಿ

ಪ್ರಮುಖ ಸುದ್ದಿ12 mins ago

Ravi Bishnoi : ಭಾರತ ಪರ ಸ್ಪಿನ್​ ಬೌಲಿಂಗ್​​ನಲ್ಲಿ ವಿಶೇಷ ಸಾಧನೆ ಮಾಡಿದ ರವಿ ಬಿಷ್ಣೋಯ್​​

Shashi Tharoor
ಕ್ರೀಡೆ17 mins ago

Shashi Tharoor: ಜಿಂಬಾಬ್ವೆ ಎದುರು ಭಾರತಕ್ಕೆ ಸೋಲು: ಲೇವಡಿ ಮಾಡಿದ ಶಶಿ ತರೂರ್

Karnataka Rain
ಮಳೆ23 mins ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

Money Guide
ಮನಿ-ಗೈಡ್23 mins ago

Money Guide: ನಿಮ್ಮ ಎಲ್‌ಐಸಿ ಪಾಲಿಸಿ ಲ್ಯಾಪ್ಸ್‌ ಆಗಿದೆಯಾ? ನವೀಕರಿಸಲು ಹೀಗೆ ಮಾಡಿ

Mumbai Hit And Run
ದೇಶ24 mins ago

Mumbai Hit And Run: ಮುಂಬೈನಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಮಹಿಳೆ ಬಲಿ; ಶಿವಸೇನೆ ನಾಯಕನ ಬಂಧನ!

Tharun Sudhir Bigg update marriage
ಸ್ಯಾಂಡಲ್ ವುಡ್34 mins ago

Tharun Sudhir: ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ತರುಣ್ ಸುಧೀರ್; ಹುಡುಗಿ ಹೇಗಿರಬೇಕು ಅಂದ್ರೆ….

Dengue Cases in Mysore
ಕರ್ನಾಟಕ35 mins ago

Dengue Cases in Mysore: ಮೈಸೂರಿನಲ್ಲಿ ಡೆಂಗ್ಯೂಗೆ ಜಯದೇವ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಸಾವು

ishan Kishan
ಪ್ರಮುಖ ಸುದ್ದಿ42 mins ago

Ishan Kishan : ನನ್ನನ್ನು ಹೊರಗಿಟ್ಟಿರುವ ತೀರ್ಮಾನ ಮೂರ್ಖತನದ್ದು; ಜಯ್​ ಶಾಗೆ ಟಾಂಗ್​ ಕೊಟ್ಟ ಇಶಾನ್​ ಕಿಶನ್​

Rishab Shetty Birthday pragati shetty cute wish
ಸಿನಿಮಾ55 mins ago

Rishab Shetty: ನನ್ನ ಜೀವನದ ಆಧಾರಸ್ತಂಭ ಎಂದು ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಪತ್ನಿ ಕ್ಯೂಟ್‌ ವಿಶ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ23 mins ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ11 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ22 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

ಟ್ರೆಂಡಿಂಗ್‌