IPL 2024 : ಹಾರ್ದಿಕ್ ಪಾಂಡ್ಯಗೆ ನಿಷೇಧ ಹೇರಿದ ಬಿಸಿಸಿಐ; ಮುಂದಿನ ಪಂದ್ಯದಲ್ಲಿ ಆಡದಂತೆ ತಾಕೀತು - Vistara News

ಕ್ರೀಡೆ

IPL 2024 : ಹಾರ್ದಿಕ್ ಪಾಂಡ್ಯಗೆ ನಿಷೇಧ ಹೇರಿದ ಬಿಸಿಸಿಐ; ಮುಂದಿನ ಪಂದ್ಯದಲ್ಲಿ ಆಡದಂತೆ ತಾಕೀತು

IPL 2024 : ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಪ್ಲೇಯಿಂಗ್ ಇಲೆವೆನ್​​ನ ಉಳಿದ ಸದಸ್ಯರಿಗೆ ತಲಾ 12 ಲಕ್ಷ ರೂ.ಗಳ ದಂಡ ಅಥವಾ ಆಯಾ ಪಂದ್ಯದ ಶುಲ್ಕದ 50 ಪ್ರತಿಶತದಷ್ಟು ದಂಡ ವಿಧಿಸಲಾಗಿದೆ. ಮುಂಬೈ ತಂಡದ ಐಪಿಎಲ್​ 2024ರ ಅಭಿಯಾನ ಮುಕ್ತಾಯಗೊಂಡಿದೆ. ಹೀಗಾಗಿ ಅವರ ಬ್ಯಾನ್ ಯಾವ ರೀತಿಯಲ್ಲಿ ಪರಿಣಾಮಕಾರಿ ಎಂಬುದು ಅಸ್ಪಷ್ಟ.

VISTARANEWS.COM


on

IPL 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಇಲ್ಲಿನ ವಿಶ್ವ ಪ್ರಸಿದ್ಧ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ ರಾತ್ರಿ ನಡೆದ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧದ ಐಪಿಎಲ್​ 2024 (IPL 2024 ) ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ ನಿಯಮಗಳನ್ನು ಮೀರಿದ ಹಿನ್ನೆಲೆಯಲ್ಲಿ ಭಾರಿ ಮೊತ್ತದ ದಂಡ ಪಾವತಿ ಮಾಡಬೇಕಾಗಿದೆ. ಜತೆಗೆ ಅವರಿಗೆ ನಿಷೇಧವನ್ನೂ ಹೇರಿದೆ. ಪಂದ್ಯದಲ್ಲಿ ಅವರ ನೇತೃತ್ವದ ತಂಡವು ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿತ್ತು. ಹೀಗಾಗಿ ಬಿಸಿಸಿಐ 30 ಲಕ್ಷ ರೂ.ಗಳ ದಂಡ ವಿಧಿಸಿದೆ. ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದ ಐಪಿಎಲ್​​ನ ನೀತಿ ಸಂಹಿತೆಯ ಅಡಿಯಲ್ಲಿ ಇದು ಅವರ ತಂಡದ ಮೂರನೇ ಅಪರಾಧವಾಗಿದೆ. ಹೀಗಾಗಿ ಪಾಂಡ್ಯಗೆ 30 ಲಕ್ಷ ರೂ.ಗಳ ದಂಡ ವಿಧಿಸಲಾಯಿತು ಮತ್ತು ತಂಡದ ಮುಂದಿನ ಪಂದ್ಯವನ್ನು ಆಡದಂತೆ ನಿಷೇಧಿಸಲಾಗಿದೆ ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಿದೆ.

ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಪ್ಲೇಯಿಂಗ್ ಇಲೆವೆನ್​​ನ ಉಳಿದ ಸದಸ್ಯರಿಗೆ ತಲಾ 12 ಲಕ್ಷ ರೂ.ಗಳ ದಂಡ ಅಥವಾ ಆಯಾ ಪಂದ್ಯದ ಶುಲ್ಕದ 50 ಪ್ರತಿಶತದಷ್ಟು ದಂಡ ವಿಧಿಸಲಾಗಿದೆ. ಮುಂಬೈ ತಂಡದ ಐಪಿಎಲ್​ 2024ರ ಅಭಿಯಾನ ಮುಕ್ತಾಯಗೊಂಡಿದೆ. ಹೀಗಾಗಿ ಅವರ ಬ್ಯಾನ್ ಯಾವ ರೀತಿಯಲ್ಲಿ ಪರಿಣಾಮಕಾರಿ ಎಂಬುದು ಅಸ್ಪಷ್ಟ.

ನಿಕೋಲಸ್ ಪೂರನ್ (28 ಎಸೆತಗಳಲ್ಲಿ 75 ರನ್) ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ 45 ನಿಮಿಷಗಳ ಮಳೆ ವಿರಾಮದ ನಡುವೆ ಮುಂಬೈ ಇಂಡಿಯನ್ಸ್ ವಿರುದ್ಧ 18 ರರನ್​ಗಳ ಭರ್ಜರಿ ಜಯ ದಾಖಲಿಸಿದೆ. ಪೂರನ್ 19 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಅವರು 8 ಸಿಕ್ಸರ್ ಬಾರಿಸುವ ಮೂಲಕ ಐಪಿಎಲ್ 2024 ರಲ್ಲಿ ಅತಿ ಹೆಚ್ಚು ಸಿಕ್ಸ್ ಬಾರಿಸಿದವರು (36) ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಮುಂಬೈ ಇಂಡಿಯನ್ಸ್ 14 ಪಂದ್ಯಗಳಿಂದ 8 ಅಂಕಗಳನ್ನು ಗಳಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಎಲ್ಎಸ್ಜಿ 14 ಅಂಕಗಳೊಂದಿಗೆ ಅಭಿಯಾನ ಮುಗಿಸಿತು.

ಪಂದ್ಯದ ವಿವರ ಈ ಕೆಳಗೆ ಇದೆ

ಹಾರ್ದಿಕ್​ ಪಾಂಡ್ಯಗೆ ನಾಯಕತ್ವ ನೀಡಿದ್ದ ಮುಂಬೈ ಇಂಡಿಯನ್ಸ್ ತಂಡದ ಯೋಜನೆ ಸಂಪೂರ್ಣವಾಗಿ ಬುಡಮೇಲಾಗಿದೆ. ಹೀಗಾಗಿ ಐಪಿಎಲ್ 17ನೇ ಆವೃತ್ತಿಯ (IPL 2024) 14 ಪಂದ್ಯಗಳಲ್ಲಿ 10 ಸೋಲು ಮತ್ತು ಕೇವಲ 4 ಗೆಲುವಿನೊಂದಿಗೆ 8 ಅಂಕಗಳೊಂದಿಗೆ ಅಭಿಯಾನ ಮುಗಿಸಿದೆ. ತವರಿನಲ್ಲಿ ನಡೆದ ಕೊನೇ ಪಂದ್ಯದಲ್ಲಿ ಲಕ್ನೊ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿಯೂ 18 ರನ್​ಗಳ ಸೋಲಿಗೆ ಒಳಗಾಗಿದೆ. ಎರಡೂ ತಂಡಗಳಿಗೆ ಇದು ಕೊನೇ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಗೆದ್ದಿರುವ ಲಕ್ನೊ ಸೂಪರ್ ಜೈಂಟ್ಸ್ ತಂಡ ಒಟ್ಟು 7 ಗೆಲುವಿನೊಂದಿಗೆ 14 ಅಂಕಗಳ ಸಮೇತ ಏಳನೇ ಸ್ಥಾನ ಪಡೆದುಕೊಂಡಿದೆ. ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಬ್ಯಾಟರ್​ಗಳು ಮತ್ತೊಂದು ಬಾರಿ ತಮ್ಮ ಅಸಮರ್ಥತೆಯನ್ನು ಪ್ರದರ್ಶಿಸಿ ಅತ್ಯಂತ ನಿರಾಶಾದಾಯಕ ಸೀಸನ್ ಅನ್ನು ಎದುರಿಸಿದರು.

ಇದನ್ನೂ ಓದಿ: IPL 2024 : ಆರ್​ಸಿಬಿ- ಚೆನ್ನೈ ಪಂದ್ಯದ ವೇಳೆ ಮಳೆ ಬಂದು ರದ್ದಾದರೆ ಮುಂದೇನಾಗುವುದು?

ಇಲ್ಲಿನ ವಾಖೆಂಡೆ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಚೇಸಿಂಗ್ ಸುಲಭ ಎಂಬ ಯೋಜನೆಯೊಂದಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲ ಬ್ಯಾಟ್ ಮಾಡಿದ ಲಕ್ನೊ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 214 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿ ಮುಂಬೈ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 6 ವಿಕೆಟ್​ ನಷ್ಟಕ್ಕೆ 196 ರನ್​ ಬಾರಿಸಿ ಸೋಲೊಪ್ಪಿಕೊಂಡಿತು. ಚೇಸಿಂಗ್ ಸುಲಭ ಎಂದುಕೊಂಡಿದ್ದ ಮುಂಬೈ ತಂಡಕ್ಕೆ ಮಧ್ಯದಲ್ಲಿ ಸುರಿದ ಮಳೆ ಅಡಚಣೆ ಮಾಡಿತು. ಏಕಾಏಕಿ ವಾತಾವರಣ ತಂಪುಗೊಂಡ ಕಾರಣ ಇಬ್ಬನಿ ಪರಿಣಾಮವನ್ನು ಅನುಭವಿಸಿ ಸುಲಭವಾಗಿ ಸ್ಕೋರ್ ಬಾರಿಸಿ ಗೆಲ್ಲುವ ಯೋಜನೆ ವಿಫಲಗೊಂಡಿತು.
ದೊಡ್ಡ ಗುರಿಯನ್ನು ಬೆನ್ನಟ್ಟಲು ಹೊರಟ ಮುಂಬೈ ತಂಡ ಅದ್ಭುತ ಆರಂಭ ಪಡೆಯಿತು. ರೋಹಿತ್ ಶರ್ಮಾ 38 ಎಸೆತಕ್ಕೆ 6 ರನ್ ಬಾರಿಸಿ ಮಿಂಚಿದರು. ಡೀವಾಲ್ಡ್​ ಬ್ರೇವಿಸ್​ 23 ರನ್ ಹೊಡೆದರು. ಈ ಜೋಡಿ 8. 4 ಓವರ್​ಗಳಲ್ಲಿ ಮೊದಲ ವಿಕೆಟ್​ಗೆ 84 ರನ್ ಬಾರಿಸಿ ಗೆಲುವಿನ ನಿರೀಕ್ಷೆ ಹುಟ್ಟಿಸಿತು. ಆದರೆ, ಆ ಬಳಿಕ ಮುಂಬೈ ತಂಡ ಬ್ಯಾಟಿಂಗ್ ವೈಫಲ್ಯ ಪ್ರದರ್ಶನಗೊಂಡಿತು. ಸೂರ್ಯಕುಮಾರ್ ಶೂನ್ಯಕ್ಕೆ ಔಟಾದರೆ ಇಶಾನ್ ಕಿಶನ್ 14 ರನ್ ಬಾರಿಸಿದರು. ಹಾರ್ದಿಕ್ ಪಾಂಡ್ಯ ಕೊಡುಗೆ ಕೇವಲ 16 ರನ್​. ನೆಹಲ್ ವದೇರಾ 1 ರನ್​ಗೆ ಔಟಾಗುವ ಮೂಲಕ ಮುಂಬೈ ಆಸೆ ಕಮರಿತು. ಏತನ್ಮದ್ಯೆ ಮಧ್ಯಮ ಕ್ರಮಾಂಕದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ನಮನ್​ ಧಿರ್ 28 ಎಸೆತಕ್ಎಕ 68 ರನ್ ಬಾರಿಸಿದರು. ಅದರೆ ಅವರಿಗೆ ಗೆಲುವು ತಂದು ಕೊಡಲು ಸಾಧ್ಯವಾಗಲಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Hurricane Beryl : ವೆಸ್ಟ್​ ಇಂಡೀಸ್​ನಲ್ಲಿ ಚಂಡಮಾರುತ, ಸಂಕಷ್ಟದಲ್ಲಿ ಸಿಲುಕಿದ ಚಾಂಪಿಯನ್ ಭಾರತ ತಂಡ

Hurricane Beryl : ವಿಮಾನ ನಿಲ್ದಾಣ ಮಾತ್ರವಲ್ಲ, ಬಾರ್ಬಡೋಸ್​​ನ ಎಲ್ಲಾ ಹೋಟೆಲ್​​, ರೆಸ್ಟೋರೆಂಟ್​ಗಳು ಮತ್ತು ಅಂಗಡಿಗಳನ್ನು ಸಹ ಮುಚ್ಚಲಾಗಿದೆ. ದೇಶದಲ್ಲಿ ತುರ್ತು ಪರಿಸ್ಥಿತಿಯಿಂದಾಗಿ ಭಾರತೀಯ ತಂಡ ಉಳಿದುಕೊಂಡಿರುವ ಹೋಟೆಲ್ ಪ್ರಸ್ತುತ ಸೀಮಿತ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ನಂಬಲಾಗಿದೆ. ಹೀಗಾಗಿ ಭಾರತ ತಂಡದ ಆಟಗಾರರಿಗೆ ಅತ್ಯ ಸೌಕರ್ಯಗಳು ಸಿಗುತ್ತಿಲ್ಲ.

VISTARANEWS.COM


on

Hurricane Beryl
Koo

ಬೆಂಗಳೂರು: ವೆಸ್ಟ್​ ಇಂಡೀಸ್​ನಲ್ಲಿ ಬಾರ್ಬಡೋಸ್​ಗೆ ಬೆರಿಲ್ ಚಂಡಮಾರುತದಿಂದಾಗಿ (Hurricane Beryl) ಅಪ್ಪಳಿಸಿದೆ. ವಿಶ್ವ ಕಪ್​ ಫೈನಲ್ ಪಂದ್ಯ ಮುಗಿದ ಮರುದಿನದೇ ಈ ಪಾಕೃತಿಕ ವಿಕೋಪ ಸಂಭವಿಸಿದೆ. ಹೀಗಾಗಿ ವಿಶ್ವ ಕಪ್​ ಗೆದ್ದು ಸಂಭ್ರಮದಲ್ಲಿರುವ ಭಾರತ ತಂಡ ಸಂಕಷ್ಟಕ್ಕೆ ಸಿಲುಕಿದೆ. ತವರಿಗೆ ಮರಳಲು ಸಾಧ್ಯವಾಗದೇ, ಅಲ್ಲಿಯೂ ಸೂಕ್ತ ವ್ಯವಸ್ಥೆ ಇಲ್ಲದೆ ನಲುಗುವಂತಾಗಿದೆ. ಭಾರತೀಯ ತಂಡದ ಬಗ್ಗೆ ಬಿಸಿಸಿಐ ಹೊಸ ಅಪ್​​ಡೇಟ್​ ನೀಡಿದ್ದು, ಟಿ 20 ವಿಶ್ವಕಪ್ 2024 ರ ಗೆಲುವಿನ ನಂತರ ಭಾರತಕ್ಕೆ ತೆರಳಬೇಕಿದ್ದ ಟೀಮ್ ಇಂಡಿಯಾ, ಚಂಡಮಾರುತದಿಂದಾಗಿ ಬಾರ್ಬಡೋಸ್​ನಲ್ಲಿ ಸಿಲುಕಿಕೊಂಡಿದೆ ಎಂದು ಬರೆದುಕೊಂಡಿದೆ. ಎಲ್ಲಾ ಹೊರಹೋಗುವ ವಿಮಾನಗಳನ್ನು ರದ್ದುಪಡಿಸಲಾಗಿತ್ತು ಮತ್ತು ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ ಎಂದು ಹೇಳಿದೆ. ಅದರ ನಡುವೆಯೂ ಅಲ್ಲಿರುವ ಆಟಗಾರರು ಸೌಲಭ್ಯಗಳ ಕೊರತೆ ಎದುರಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಮಾನ ನಿಲ್ದಾಣ ಮಾತ್ರವಲ್ಲ, ಬಾರ್ಬಡೋಸ್​​ನ ಎಲ್ಲಾ ಹೋಟೆಲ್​​, ರೆಸ್ಟೋರೆಂಟ್​ಗಳು ಮತ್ತು ಅಂಗಡಿಗಳನ್ನು ಸಹ ಮುಚ್ಚಲಾಗಿದೆ. ದೇಶದಲ್ಲಿ ತುರ್ತು ಪರಿಸ್ಥಿತಿಯಿಂದಾಗಿ ಭಾರತೀಯ ತಂಡ ಉಳಿದುಕೊಂಡಿರುವ ಹೋಟೆಲ್ ಪ್ರಸ್ತುತ ಸೀಮಿತ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ನಂಬಲಾಗಿದೆ. ಹೀಗಾಗಿ ಭಾರತ ತಂಡದ ಆಟಗಾರರಿಗೆ ಅತ್ಯ ಸೌಕರ್ಯಗಳು ಸಿಗುತ್ತಿಲ್ಲ.

ಟೀಮ್ ಇಂಡಿಯಾಗೆ ಬಿಸಿಸಿಐ ಭರವಸೆ

ಚಂಡಮಾರುತವು ಕಡಿಮೆಯಾದ ನಂತರ ಬಾರ್ಬಡೋಸ್​ನಿಂದ ಹೊರಬರಲು ಟೀಮ್ ಇಂಡಿಯಾ, ಸಹಾಯಕ ಸಿಬ್ಬಂದಿ ಮತ್ತು ಮಾಧ್ಯಮ ತಂಡಕ್ಕೆ ಸಹಾಯ ಮಾಡುವುದಾಗಿ ಬಿಸಿಸಿಐ ಭರವಸೆ ನೀಡಿದೆ. ಖ್ಯಾತ ಪತ್ರಕರ್ತ ಬೋರಿಯಾ ಮಜುಂದಾರ್ ಅವರ ವರದಿಗಳ ಪ್ರಕಾರ, ಹೋಟೆಲ್​​ನಲ್ಲಿ ಸೀಮಿತ ಸಿಬ್ಬಂದಿಯಿಂದಾಗಿ ಭಾರತೀಯ ತಂಡವು ಸರದಿಯಲ್ಲಿ ನಿಂತಿ ಕಾಗದದ ತಟ್ಟೆಗಳಲ್ಲಿ ಊಟ ಮಾಡುತ್ತಿದೆ.

ಇದನ್ನೂ ಓದಿ: ICC Team of the Tournament : ಐಸಿಸಿ ಟೀಮ್​ ಆಫ್​​ ದಿ ಟೂರ್ನಮೆಂಟ್​ನಲ್ಲಿ ಆರು

ವರದಿಗಳ ಪ್ರಕಾರ, ಕ್ರಿಕೆಟ್ ದಕ್ಷಿಣ ಆಫ್ರಿಕಾ (ಸಿಎಸ್ಎ) ತಂಡ ಮತ್ತು ಸಹಾಯಕ ಸಿಬ್ಬಂದಿ ಚಾರ್ಟರ್ ವಿಮಾನದ ಮೂಲಕ ವಾಪಸ್ ತೆರಳಿದೆ. ಹೀಗಾಗಿ ದಕ್ಷಿಣ ಆಫ್ರಿಕಾ ತಂಡವು ಬಾರ್ಬಡೋಸ್ನಿಂದ ಹೊರಟಿದೆ. ಇದು ದಕ್ಷಿಣ ಆಫ್ರಿಕಾ ತಂಡಕ್ಕೆ ದೊಡ್ಡ ಪರಿಹಾರವಾಗಿದೆ ಆದರೆ ಭಾರತೀಯ ತಂಡವು ದ್ವೀಪ ರಾಷ್ಟ್ರವನ್ನು ಇನ್ನೂ ತೊರೆದಿಲ್ಲ. ಅವರಿಗೆ ತಕ್ಷಣದ ಪರಿಹಾರ ಸಿಕ್ಕಿಲ್ಲ.

ಭಾರತ ತಂಡವು ಜುಲೈ 1 ರಂದು ಹೊರಡಬೇಕಿತ್ತು. ಆದರೆ ಚಂಡಮಾರುತದಿಂದಾಗಿ ಬಾರ್ಬಡೋಸ್ ನ ಆಡಳಿತ ಹೆಚ್ಚಿನ ಎಚ್ಚರಿಕೆ ವಹಿಸಿದೆ. ವಿಮಾನ ನಿಲ್ದಾಣವನ್ನು ಸೋಮವಾರ ಮಧ್ಯಾಹ್ನದವರೆಗೆ (ಬಿಎಸ್ಟಿ) ಮುಚ್ಚಲಾಗುವುದು ಮತ್ತು ಚಂಡಮಾರುತ ಕಡಿಮೆಯಾದ ನಂತರವೇ ಅದನ್ನು ಮತ್ತೆ ತೆರೆಯಲಾಗುತ್ತದೆ. ಎಲ್ಲವೂ ಸುಧಾರಿಸಿಕೊಂಡ ನಂತರ ಭಾರತ ತಂಡ ಅಲ್ಲಿಂದ ಹೊರಡಬೇಕಾಗಿದೆ.

ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ಭಾನುವಾರ ಬೆಳಿಗ್ಗೆ ಗ್ರೇಡ್​ 3 ಚಂಡಮಾರುತವಾಗಿ ಪರಿವರ್ತನೆಗೊಂಡಿದೆ ಭಾನುವಾರ ಬೆಳಿಗ್ಗೆಯೇ ಮಾರುತದ ಗಂಟೆಗೆ 120 ಕಿಲೋಮೀಟರ್​ನಷ್ಟಿತ್ತು. ಚಂಡಮಾರುತವು ಕ್ಷಣದಿಂದ ಕ್ಷಣಕ್ಕೆ ಬಲಗೊಳ್ಳುತ್ತಿದೆ.

ಪೋರ್ಟೊ ರಿಕೊದ ಆಗ್ನೇಯ ಮತ್ತು ವೆನೆಜುವೆಲಾದ ಉತ್ತರಕ್ಕೆ ವಿಂಡ್ವರ್ಡ್ ದ್ವೀಪಗಳಿಗೆ ಬೆರಿಲ್ ಚಂಡಮಾರುತ ಅಪ್ಪಳಿಸಲಿದೆ ನಿರೀಕ್ಷೆಯಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ರಾತ್ರಿ 8:30 ರ ಹೊತ್ತಿಗೆ ಬೆರಿಲ್ ಬಾರ್ಬಡೋಸ್​​ನ ಪೂರ್ವ-ಆಗ್ನೇಯಕ್ಕೆ ಸುಮಾರು 355 ಮೈಲಿ ದೂರದಲ್ಲಿ ಸಾಗಲಿದೆ. ಮುಂಬರುವ ಗಂಟೆಗಳಲ್ಲಿ ಪರಿಸ್ಥಿತಿ ತೀವ್ರವಾಗಬಹುದು ಎಂದು ವರದಿಯಾಗಿದೆ.

Continue Reading

ಪ್ರಮುಖ ಸುದ್ದಿ

ICC Team of the Tournament : ಐಸಿಸಿ ಟೀಮ್​ ಆಫ್​​ ದಿ ಟೂರ್ನಮೆಂಟ್​ನಲ್ಲಿ ಆರು ಭಾರತೀಯರು​; ಕೊಹ್ಲಿಗಿಲ್ಲ ಚಾನ್ಸ್​

ICC Team of the Tournament : ಫೈನಲ್ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 7 ರನ್ ಗಳಿಂದ ಬಗ್ಗು ಬಡಿದಿತ್ತು. ಇದರೊಂದಿಗೆ ಎಂ.ಎಸ್.ಧೋನಿ ಬಳಿಕ ಟಿ20 ವಿಶ್ವಕಪ್ ಗೆದ್ದ ಭಾರತದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. 2007ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಉದ್ಘಾಟನಾ ಆವೃತ್ತಿಯಲ್ಲಿ ಧೋನಿನೇತೃತ್ವದಲ್ಲಿ ಭಾರತ ಟ್ರೋಫಿ ಗೆದ್ದಿತ್ತು.

VISTARANEWS.COM


on

ICC Team of the Tournament
Koo

ಬೆಂಗಳೂರು: ಜೂನ್ 29 ರಂದು ವೆಸ್ಟ್​ ಇಂಡೀಸ್​ನ ಬಾರ್ಬಡೋಸ್​ನಲ್ಲಿ ನಡೆದ ಐಸಿಸಿ ಟಿ20 ವಿಶ್ವ ಕಪ್​ 2024ರ (ICC T20 World Cup 2024) ಫೈನಲ್​ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಟ್ರೋಫಿ ಗೆದ್ದಿತು. ಅಲ್ಲಿಗೆ ದೊಡ್ಡ ಅಧ್ಯಾಯವೊಂದು ಮುಗಿಯಿತು. ಇಡೀ ಟೂರ್ನಿಯಲ್ಲಿ ರೋಚಕ ಪಂದ್ಯಗಳು ಮತ್ತು ಅತ್ಯುತ್ತಮ ಪ್ರದರ್ಶನಗಳನ್ನು ಕಂಡವು. ಅವೆಲ್ಲವನ್ನೂ ಪರಿಗಣಿಸಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ , ಫೈನಲ್ ಪಂದ್ಯದ ನಂತರ ಟೀಮ್ ಆಫ್​ ದಿ ಟೂರ್ನಮೆಂಟ್​ (ICC Team of the Tournament- ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರ ತಂಡ) ಪ್ರಕಟಿಸಿದೆ. ಇದರಲ್ಲಿ 6 ಭಾರತೀಯ ಆಟಗಾರರು ಅವಕಾಶ ಪಡೆದಿದ್ದಾರೆ. ಆದರೆ ಸ್ಟಾರ್ ಬ್ಯಾಟರ್​ ವಿರಾಟ್ ಕೊಹ್ಲಿಗೆ ಚಾನ್ಸ್ ಸಿಕ್ಕಿಲ್ಲ.

ಫೈನಲ್ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 7 ರನ್ ಗಳಿಂದ ಬಗ್ಗು ಬಡಿದಿತ್ತು. ಇದರೊಂದಿಗೆ ಎಂ.ಎಸ್.ಧೋನಿ ಬಳಿಕ ಟಿ20 ವಿಶ್ವಕಪ್ ಗೆದ್ದ ಭಾರತದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. 2007ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಉದ್ಘಾಟನಾ ಆವೃತ್ತಿಯಲ್ಲಿ ಧೋನಿನೇತೃತ್ವದಲ್ಲಿ ಭಾರತ ಟ್ರೋಫಿ ಗೆದ್ದಿತ್ತು. ಹಾಗೆಯ ಐಸಿಸಿ ಟೀಮ್ ಆಫ್​ ದಿ ಟೂರ್ನಮೆಂಟ್​​ನಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಜಸ್ಪ್ರೀತ್ ಬುಮ್ರಾ ಸೇರಿದಂತೆ ಭಾರತ ತಂಡದ ಆರು ಆಟಗಾರರು ಇದ್ದಾರೆ. ಆದರೆ, ರನ್ನರ್ ಅಪ್ ಸ್ಥಾನ ಪಡೆದರೂ ದಕ್ಷಿಣ ಆಫ್ರಿಕಾದ ಯಾವುದೇ ಆಟಗಾರರ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆದಿಲ್ಲ

ಸೆಮಿಫೈನಲ್ ತಲುಪಿದ ನಂತರ ಅಫ್ಘಾನಿಸ್ತಾನದ ಮೂವರು ಆಟಗಾರರು 11ರ ಬಳಗದಲ್ಲಿರುವುದು ವಿಶೇಷ. ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾದ ತಲಾ ಒಬ್ಬ ಆಟಗಾರ ಸ್ಥಾನ ಕಂಡುಕೊಂಡಿದ್ದಾರೆ. ಆಯ್ಕೆ ಸಮಿತಿಯಲ್ಲಿ ವೀಕ್ಷಕವಿವರಣೆಗಾರರಾದ ಹರ್ಷ ಭೋಗ್ಲೆ, ಇಯಾನ್ ಬಿಷಪ್, ಕಾಸ್ ನೈದೂ ಮತ್ತು ಐಸಿಸಿ ಕ್ರಿಕೆಟ್ ಜನರಲ್ ಮ್ಯಾನೇಜರ್ ವಾಸಿಮ್ ಖಾನ್ ಇದ್ದರು.

ರೋಹಿತ್ ಶರ್ಮಾ ತಂಡದ ನಾಯಕ

ಭಾರತವನ್ನು ಪ್ರಶಸ್ತಿಗೆ ಮುನ್ನಡೆಸಿದ ನಂತರ ರೋಹಿತ್ ಶರ್ಮಾ ಐಸಿಸಿ ಟೀಮ್ ಆಫ್​ ದಿ ಟೂರ್ನಮೆಂಟ್​ಗೂ ನಾಯಕ. ರೋಹಿತ್ 8 ಇನ್ನಿಂಗ್ಸ್​ಗಳಲ್ಲಿ 257 ರನ್ ಗಳಿಸಿ ಎರಡನೇ ಗರಿಷ್ಠ ರನ್ ಸ್ಕೋರರ್ ಆಗಿದ್ದರು. 281 ರನ್ ಗಳಿಸಿರುವ ರಹಮಾನುಲ್ಲಾ ಗುರ್ಬಾಜ್ ಇತ್ತೀಚೆಗೆ ಮುಕ್ತಾಯಗೊಂಡ ಟಿ 20 ಪಂದ್ಯಾವಳಿಯಲ್ಲಿ ರೋಹಿತ್ ಅವರಿಗಿಂತ ಮುಂದಿದ್ದರು. ಅವರು ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಮಧ್ಯಮ ಕ್ರಮಾಂಕದಲ್ಲಿ ವಿಂಡೀಸ್​ನ ನಿಕೋಲಸ್ ಪೂರನ್ ಹಾಗೂ ಮಾರ್ಕಸ್ ಸ್ಟೊಯಿನಿಸ್ ಇದ್ದಾರೆ. ಪೂರನ್ ಅಫ್ಘಾನಿಸ್ತಾನ ವಿರುದ್ಧ 53 ಎಸೆತಗಳಲ್ಲಿ 98 ರನ್ ಸೇರಿದಂತೆ 38 ಸರಾಸರಿಯಲ್ಲಿ 228 ರನ್ ಗಳಿಸಿದ್ದರು. ಸ್ಟೋಯ್ನಿಸ್ 40 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 169 ರನ್ ಗಳಿಸಿದ್ದಾರೆ. ಅವರು 160 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಸ್ಪರ್ಧೆಯ ಸಮಯದಲ್ಲಿ ಅವರು ಬೌಲಿಂಗ್​ನಲ್ಲಿ 10 ವಿಕೆಟ್ ಗಳನ್ನು ಪಡೆದಿದ್ದಾರೆ.

ಯುಎಸ್ಎ, ಅಫ್ಘಾನಿಸ್ತಾನ ಮತ್ತು ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್​ನಲ್ಲಿ ಕೊಡುಗೆ ನೀಡಿದರು. ವಿಶ್ವಕಪ್ ಫೈನಲ್​​ನ ಅಂತಿಮ ಓವರ್​ನಲ್ಲಿ ಸೂರ್ಯಕುಮಾರ್ ಡೇವಿಡ್ ಮಿಲ್ಲರ್ ಅವರ ಕ್ಯಾಚ್ ಪಡೆದು ಮಿಂಚಿದ್ದಾರೆ. ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಈ ತಂಡದಲ್ಲಿದ್ದಾರೆ.

ಇದನ್ನೂ ಓದಿ: Dinesh Karthik : ಆರ್​​ಸಿಬಿ ಬ್ಯಾಟಿಂಗ್ ಕೋಚ್​, ಮಾರ್ಗದರ್ಶಕರಾಗಿ ದಿನೇಶ್​ ಕಾರ್ತಿಕ್ ನೇಮಕ

ಅಫ್ಘಾನಿಸ್ತಾನದ ನಾಯಕ ರಶೀದ್ ಖಾನ್ ಬೌಲಿಂಗ್ ಆಲ್ರೌಂಡರ್ ಆಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವೇಗದ ದಾಳಿಯಲ್ಲಿ ಜಸ್ಪ್ರೀತ್ ಬುಮ್ರಾ, ಅರ್ಷ್ದೀಪ್ ಸಿಂಗ್ ಮತ್ತು ಫಜಲ್ಹಾಕ್ ಫಾರೂಕಿ ಇದ್ದಾರೆ. ಟೂರ್ನಿಯಲ್ಲಿ 15 ವಿಕೆಟ್ ಪಡೆದ ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಅನ್ರಿಚ್ ನಾರ್ಟ್ಜೆ 12ನೇ ಆಟಗಾರನಾಗಿ ಆಯ್ಕೆಯಾಗಿದ್ದಾರೆ.

ಐಸಿಸಿ ಟಿ20 ವಿಶ್ವಕಪ್ ತಂಡ ಈ ರೀತಿ ಇದೆ

ರೋಹಿತ್ ಶರ್ಮಾ (ನಾಯಕ- ಭಾರತ), ರಹಮಾನುಲ್ಲಾ ಗುರ್ಬಾಜ್ (ಅಫ್ಘಾನಿಸ್ತಾನ), ನಿಕೋಲಸ್ ಪೂರನ್ (ವೆಸ್ಟ್ ಇಂಡೀಸ್), ಸೂರ್ಯಕುಮಾರ್ ಯಾದವ್ (ಭಾರತ), ಮಾರ್ಕಸ್ ಸ್ಟೊಯಿನಿಸ್ (ಆಸ್ಟ್ರೇಲಿಯಾ), ಹಾರ್ದಿಕ್ ಪಾಂಡ್ಯ (ಭಾರತ), ಅಕ್ಷರ್ ಪಟೇಲ್ (ಭಾರತ), ರಶೀದ್ ಖಾನ್ (ಅಫ್ಘಾನಿಸ್ತಾನ), ಜಸ್ಪ್ರೀತ್ ಬುಮ್ರಾ (ಭಾರತ), ಅರ್ಷ್ದೀಪ್ ಸಿಂಘಾ (ಭಾರತ), ಫಜಲ್ಹಾಕ್ ಫಾರೂಕಿ (ಅಫ್ಘಾನಿಸ್ತಾನ).

Continue Reading

ಕ್ರಿಕೆಟ್

Dinesh Karthik : ಆರ್​​ಸಿಬಿ ಬ್ಯಾಟಿಂಗ್ ಕೋಚ್​, ಮಾರ್ಗದರ್ಶಕರಾಗಿ ದಿನೇಶ್​ ಕಾರ್ತಿಕ್ ನೇಮಕ

Dinesh Karthik : ನಮ್ಮ ಕೀಪರ್ ದಿನೇಶ್ ಕಾರ್ತಿಕ್ ಅವರನ್ನು ಹೊಸ ಅವತಾರದಲ್ಲಿ ಆರ್​​​ಸಿಬಿಗೆ ಸ್ವಾಗತಿಸುತ್ತೇವೆ. ಆರ್​ಸಿಬಿ ಪುರುಷರ ತಂಡದ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ಡಿಕೆ ಕಾರ್ಯನಿರ್ವಹಿಸಲಿದ್ದಾರೆ. ನೀವು ಕಾರ್ತಿಕ್ ಅವರನ್ನು ಕ್ರಿಕೆಟ್​ನಿಂದ ಹೊರತೆಗೆಯಬಹುದು ಆದರೆ ಕ್ರಿಕೆಟ್ ಅನ್ನು ಅವರಿಂದ ಹೊರತೆಗೆಯಲು ಸಾಧ್ಯವಿಲ್ಲ! 🙌 12 ಮ್ಯಾನ್​ ಆರ್ಮಿ. ಅವರಿಗಾಗಿ ಪ್ರೀತಿಯನ್ನು ಸ್ಪುರಿಸಿ ಎಂದು ಬರೆದುಕೊಂಡಿದೆ.

VISTARANEWS.COM


on

Dinesh Karthik
Koo

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡವು ಮಾಜಿ ಕ್ರಿಕೆಟಿಗ ದಿನೇಶ್ ಕಾರ್ತಿಕ್ (Dinesh Karthik) ಅವರನ್ನು ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಋತುವಿನಲ್ಲಿ (IPL 2025) ಬ್ಯಾಟಿಂಗ್ ಕೋಚ್ ಮತ್ತು ತಂಡದ ಮಾರ್ಗದರ್ಶಕರಾಗಿ ನೇಮಕ ಮಾಡಿದೆ. ಐಪಿಎಲ್ ಫ್ರಾಂಚೈಸಿ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ ನ ತನ್ನ ಅಧಿಕೃತ ಹ್ಯಾಂಡಲ್ ಮೂಲಕ ಈ ಘೋಷಣೆಯನ್ನು ಪ್ರಕಟಿಸಿದೆ.

ನಮ್ಮ ಕೀಪರ್ ದಿನೇಶ್ ಕಾರ್ತಿಕ್ ಅವರನ್ನು ಹೊಸ ಅವತಾರದಲ್ಲಿ ಆರ್​​​ಸಿಬಿಗೆ ಸ್ವಾಗತಿಸುತ್ತೇವೆ. ಆರ್​ಸಿಬಿ ಪುರುಷರ ತಂಡದ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ಡಿಕೆ ಕಾರ್ಯನಿರ್ವಹಿಸಲಿದ್ದಾರೆ. ನೀವು ಕಾರ್ತಿಕ್ ಅವರನ್ನು ಕ್ರಿಕೆಟ್​ನಿಂದ ಹೊರತೆಗೆಯಬಹುದು ಆದರೆ ಕ್ರಿಕೆಟ್ ಅನ್ನು ಅವರಿಂದ ಹೊರತೆಗೆಯಲು ಸಾಧ್ಯವಿಲ್ಲ! 12 ಮ್ಯಾನ್​ ಆರ್ಮಿ. ಅವರಿಗಾಗಿ ಪ್ರೀತಿಯನ್ನು ಸ್ಪುರಿಸಿ ಎಂದು ಬರೆದುಕೊಂಡಿದೆ.

ದಿನೇಶ್ ಕಾರ್ತಿಕ್ ಬ್ಯಾಟಿಂಗ್ ವೈಭವ

ಕೆಳ ಮಧ್ಯಮ ಕ್ರಮಾಂಕದ ಬ್ಯಾಟರ್​ ಆಗಿರುವ ಕಾರ್ತಿಕ್, ಮೈದಾನದ ಎಲ್ಲೆಡೆ ಚೆಂಡು ಕಳುಹಿಸಿ ಸ್ಕೋರ್ ಮಾಡುವ ಸಾಮರ್ಥ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಮುನ್ನಡೆಸಿದ್ದ ನಂತರ, ಕೀಪರ್- ಬ್ಯಾಟರ್​ ಐಪಿಎಲ್ 2022 ಕ್ಕೆ ಮುಂಚಿತವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡರು. ಐಪಿಎಲ್ ವೃತ್ತಿಜೀವನದಲ್ಲಿ ಆರು ತಂಡಗಳನ್ನು ಪ್ರತಿನಿಧಿಸಿರುವ ಕಾರ್ತಿಕ್, ಆರ್ಸಿಬಿ ಪರ 53 ಇನಿಂಗ್ಸ್​ಗಳಲ್ಲಿ 162.96 ಸ್ಟ್ರೈಕ್​ ರೇಟ್​​ನಲ್ಲಿ ಮೂರು ಅರ್ಧಶತಕಗಳು ಸೇರಿದಂತೆ 937 ರನ್ ಗಳಿಸಿದ್ದಾರೆ.

ಅವರು ಇತ್ತೀಚೆಗೆ ಐಪಿಎಲ್ 2024 ರಲ್ಲಿ ಅದ್ಭುತ ಯಶಸ್ಸನ್ನು ಅನುಭವಿಸಿದ್ದಾರೆ. 36.22 ಸರಾಸರಿ ಮತ್ತು 187.36 ಸ್ಟ್ರೈಕ್ ರೇಟ್​​ನಲ್ಲಿ 326 ರನ್ ಗಳಿಸಿದ್ದಾರೆ. ಆದಾಗ್ಯೂ, ನಾವು ಮೆಗಾ ಹರಾಜು ಬರುತ್ತಿರುವುದನ್ನು ಪರಿಗಣಿಸಿ, ಕಾರ್ತಿಕ್ ಐಪಿಎಲ್​​ನಿಂದ ಹೊರಕ್ಕೆ ನಡೆದರು.

ಇದನ್ನೂ ಓದಿ: Jasprit Bumrah : ಜಸ್​ಪ್ರಿತ್ ಬುಮ್ರಾ ವೈಟ್ ಬಾಲ್ ಕ್ರಿಕೆಟ್​​ನ ಅತ್ಯುತ್ತಮ ಬೌಲರ್​ ಎಂದು ಹೊಗಳಿದ ಮೈಕಲ್ ವಾನ್

ಕಾರ್ತಿಕ್ ಮೂರು ಸ್ವರೂಪಗಳಲ್ಲಿ 180 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಇದರಲ್ಲಿ ಅವರು ಏಕೈಕ ಟೆಸ್ಟ್ ಶತಕ ಮತ್ತು 17 ಅರ್ಧಶತಕಗಳೊಂದಿಗೆ 3463 ರನ್ ಗಳಿಸಿದ್ದಾರೆ. ಕಾರ್ತಿಕ್ 172 ಔಟ್​ಗಳನ್ನು ಸಹ ಮಾಡಿದ್ದಾರೆ. ಅವುಗಳಲ್ಲಿ ಹೆಚ್ಚಿನವು ಸ್ಪಂಪ್​​ಗಳ ಹಿಂದೆ ಹಾಗೂ ಕೆಲವು ಔಟ್​ಫೀಲ್ಡ್​ ಕ್ಯಾಚ್​ಗಳು. 2022ರ ಟಿ20 ವಿಶ್ವಕಪ್​​ನಲ್ಲಿ ಬಾಂಗ್ಲಾದೇಶ ವಿರುದ್ಧ ಕೊನೆಯ ಬಾರಿ ಆಡಿದ್ದರು.

20007 ವಿಶ್ವ ಕಪ್ ವಿಜೇತ

2007 ರ ಟಿ 20 ವಿಶ್ವಕಪ್ ವಿಜೇತ ತಾರೆ ಕಾರ್ತಿಕ್​ ಐಪಿಎಲ್​ನಲ್ಲಿ ಭರ್ಜರಿ ಅನುಭವ ಹೊಂದಿದ್ದಾರೆ. 257 ಪಂದ್ಯಗಳನ್ನು ಆಡಿದ ಅವರು 26.32 ಸರಾಸರಿಯಲ್ಲಿ 4,842 ರನ್ ಗಳಿಸಿದ್ದಾರೆ. ಕಾರ್ತಿಕ್ ತಮ್ಮ ಐಪಿಎಲ್ ಪ್ರಯಾಣವನ್ನು ಡೆಲ್ಲಿ ಡೇರ್ ಡೆವಿಲ್ಸ್ (ಈಗ ಕ್ಯಾಪಿಟಲ್ಸ್) ನೊಂದಿಗೆ ಪ್ರಾರಂಭಿಸಿದ್ದರು. ಆರ್ ಸಿಬಿ ಹೊರತುಪಡಿಸಿ ಕೋಲ್ಕತ್ತಾ ನೈಟ್ ರೈಡರ್ಸ್, ಮುಂಬೈ ಇಂಡಿಯನ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ಅನ್ನು ಪ್ರತಿನಿಧಿಸಿದರು.

ಬ್ಯಾಟಿಂಗ್ ಕೋಚ್ ಮತ್ತು ಬ್ಯಾಟಿಂಗ್ ಮೆಂಟರ್ ಆಗಿ ನೇಮಕಗೊಂಡ ಬಗ್ಗೆ ಮಾತನಾಡಿದ ದಿನೇಶ್ ಕಾರ್ತಿಕ್, ವೃತ್ತಿಪರ ಮಟ್ಟದಲ್ಲಿ ಕೋಚಿಂಗ್ ನನಗೆ ನಂಬಲಾಗದಷ್ಟು ರೋಮಾಂಚನಕಾರಿಯಾಗಿದೆ. ಇದು ನನ್ನ ಜೀವನದ ಹೊಸ ಅಧ್ಯಾಯ. ನಾನು ನಿಜವಾಗಿಯೂ ಉತ್ಸುಕನಾಗಿದ್ದೇನೆ. ಒಬ್ಬ ಆಟಗಾರನಾಗಿ ನನ್ನ ಅನುಭವಗಳನ್ನು ತಂಡದ ಅಭಿವೃದ್ಧಿಗೆ ಕೊಡುಯಾಗಿ ನೀಡುತ್ತೇನೆ. ಹೆಚ್ಚುವರಿ ಮೌಲ್ಯವನ್ನು ತರುತ್ತೇನೆ ಎಮದು ಹೇಳಿದ್ದಾರೆ.

ಕ್ರಿಕೆಟ್ ಯಶಸ್ಸು ಕೇವಲ ತಾಂತ್ರಿಕ ಪ್ರಾವೀಣ್ಯತೆಯ ಮೇಲೆ ಮಾತ್ರವಲ್ಲ, ಬುದ್ಧಿವಂತಿಕೆ ಮತ್ತು ಸಂಯಮದ ಮೇಲೂ ಅವಲಂಬಿತವಾಗಿದೆ ಎಂದು ನಾನು ನಂಬುತ್ತೇನೆ. ನಮ್ಮ ಬ್ಯಾಟಿಂಗ್ ಗುಂಪಿಗೆ ತರಬೇತಿ ನೀಡಲು ಮತ್ತು ಮಾರ್ಗದರ್ಶನ ನೀಡಲು ನಾನು ಉತ್ಸುಕನಾಗಿದ್ದೇನೆ. ಆಟಗಾರರ ವಿಧಾನವನ್ನು ಪರಿಷ್ಕರಿಸಲು ಮಾತ್ರವಲ್ಲದೆ ಒತ್ತಡದಲ್ಲಿ ಉತ್ತಮ ಸಾಧನೆ ಮಾಡಲು ಅಗತ್ಯ ಅರಿವನ್ನು ಬೆಳೆಸಿಕೊಳ್ಳಲು ಸಹಾಯ ಮಾಡುತ್ತೇನೆ. ನಾನು ಆರ್ಸಿಬಿಯೊಂದಿಗೆ ನನ್ನ ಒಡನಾಟವನ್ನು ಮುಂದುವರಿಸುವುದು ಖುಷಿಯ ವಿಚಾರ ಎಂದು ಅವರು ಹೇಳಿದರು.

ಆರ್​ಸಿಬಿ ದೊಡ್ಡ ಪ್ರಮಾಣದ ಅಭಿಮಾನಿ ಬಳಗ ಹೊಂದಿದೆ. ಆದರೆ ಇನ್ನೂ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿಲ್ಲ. ಫ್ರಾಂಚೈಸಿ ನಾಯಕ ಮತ್ತು ತರಬೇತುದಾರರ ಹಲವಾರು ಸಂಯೋಜನೆಗಳನ್ನು ಪ್ರಯತ್ನಿಸಿದೆ ಮತ್ತು ಪರೀಕ್ಷಿಸಿದೆ. ಆದರೆ ಏನೂ ಕೆಲಸ ಮಾಡಿಲ್ಲ. ಆದರೆ 2008ರಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ 2011ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹಾಗೂ 2016ರಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಫೈನಲ್​​ನಲ್ಲಿ ಆರ್​ಸಿಬಿ ಸೋತಿದೆ

Continue Reading

ಕ್ರೀಡೆ

Jasprit Bumrah : ಜಸ್​ಪ್ರಿತ್ ಬುಮ್ರಾ ವೈಟ್ ಬಾಲ್ ಕ್ರಿಕೆಟ್​​ನ ಅತ್ಯುತ್ತಮ ಬೌಲರ್​ ಎಂದು ಹೊಗಳಿದ ಮೈಕಲ್ ವಾನ್

Jasprit Bumrah : ಫೈನಲ್​​ನಲ್ಲಿ ಹೆನ್ರಿಕ್ ಕ್ಲಾಸೆನ್ 27 ಎಸೆತಗಳಲ್ಲಿ 52 ರನ್ ಗಳಿಸಿದ್ದರಿಂದ ದಕ್ಷಿಣ ಆಫ್ರಿಕಾ ಗೆಲುವಿನತ್ತ ಸಾಗಿತ್ತು. ಬುಮ್ರಾ ತಮ್ಮ ಅತ್ಯುತ್ತಮ ಸ್ಪೆಲ್ ಅನ್ನು ಕಾರ್ಯಗತಗೊಳಿಸಿದರು. ಅವರು ತಮ್ಮ ನಾಲ್ಕು ಓವರ್ ಗಳಲ್ಲಿ ಕೇವಲ 18 ರನ್ ನೀಡಿ ಎರಡು ವಿಕೆಟ್ ಪಡೆದರು. ಕೊನೆಯ ಐದು ಓವರ್​ಗಳಲ್ಲಿ ದಕ್ಷಿಣ ಆಫ್ರಿಕಾಕ್ಕೆ ಬಹುತೇಕ ಒಂದು ಎಸೆತಕ್ಕೆ ಒಂದು ರನ್​ ಅಗತ್ಯವಿತ್ತು. ವೇಗಿ ಎರಡು ಓವರ್​ಗಳನ್ನು ಎಸೆದು ಕ್ರಮವಾಗಿ ಒಂದು ಮತ್ತು ಆರು ರನ್​​ ನೀಡಿದರು

VISTARANEWS.COM


on

Jasprit Bumrah
Koo

ಬೆಂಗಳೂರು: ಬಾರ್ಬಡೋಸ್​​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಜೂನ್ 29 ರಂದು ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಭಾರತವು ಎರಡನೇ ಟಿ 20 ವಿಶ್ವಕಪ್ ಪ್ರಶಸ್ತಿ ಗೆದ್ದಿತು. ಸರಣಿಯಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಜಸ್​ಪ್ರಿತ್ ಬುಮ್ರಾ (Jasprit Bumrah ) ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು. ಭಾರತ ಗೆಲುವಿನಲ್ಲಿ ಬುಮ್ರಾ ಮುಂಚೂಣಿ ಸ್ಥಾನ ಪಡೆದಿದ್ದರು. ಆಗಾಗ ನಿರ್ಣಾಯಕ ಪ್ರಗತಿಯನ್ನು ಒದಗಿಸಿದ್ದರು. ಭಾರತದ ಸ್ಟಾರ್ ವೇಗಿ ಟಿ 20 ವಿಶ್ವಕಪ್ ಆವೃತ್ತಿಯಲ್ಲಿ ಯಾವುದೇ ಬೌಲರ್​​ಗೆ ಕಡಿಮೆ ಇಲ್ಲದ ಎಕಾನಮಿ ರೇಟ್ ಪ್ರದರ್ಶಿಸಿದರು. ಅವರು 8.26 ಸರಾಸರಿ ಮತ್ತು 4.17 ಎಕಾನಮಿ ರೇಟ್​​​ನಲ್ಲಿ 15 ವಿಕೆಟ್​ ಉರುಳಿಸಿ ಭಾರತದ ಗೆಲುವಿನ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಫೈನಲ್​​ನಲ್ಲಿ ಹೆನ್ರಿಕ್ ಕ್ಲಾಸೆನ್ 27 ಎಸೆತಗಳಲ್ಲಿ 52 ರನ್ ಗಳಿಸಿದ್ದರಿಂದ ದಕ್ಷಿಣ ಆಫ್ರಿಕಾ ಗೆಲುವಿನತ್ತ ಸಾಗಿತ್ತು. ಬುಮ್ರಾ ತಮ್ಮ ಅತ್ಯುತ್ತಮ ಸ್ಪೆಲ್ ಅನ್ನು ಕಾರ್ಯಗತಗೊಳಿಸಿದರು. ಅವರು ತಮ್ಮ ನಾಲ್ಕು ಓವರ್ ಗಳಲ್ಲಿ ಕೇವಲ 18 ರನ್ ನೀಡಿ ಎರಡು ವಿಕೆಟ್ ಪಡೆದರು. ಕೊನೆಯ ಐದು ಓವರ್​ಗಳಲ್ಲಿ ದಕ್ಷಿಣ ಆಫ್ರಿಕಾಕ್ಕೆ ಬಹುತೇಕ ಒಂದು ಎಸೆತಕ್ಕೆ ಒಂದು ರನ್​ ಅಗತ್ಯವಿತ್ತು. ವೇಗಿ ಎರಡು ಓವರ್​ಗಳನ್ನು ಎಸೆದು ಕ್ರಮವಾಗಿ ಒಂದು ಮತ್ತು ಆರು ರನ್​​ ನೀಡಿದರು. ಈ ಸಾಧನೆಗಾಗಿ ಇಂಗ್ಲೆಂಡ್​​ನ ಮಾಜಿ ನಾಯಕ ಮೈಕಲ್ ವಾನ್ ಬುಮ್ರಾ ಅವರನ್ನು ಪಾಕಿಸ್ತಾನದ ಮಾಜಿ ಬೌಲರ್​ ವಾಸಿಂ ಅಕ್ರಮ್​ಗೆ ಸರಿಸಮಾನರು ಎಂದು ಹೊಗಳಿದ್ದಾರೆ.

ಇದನ್ನೂ ಓದಿ: Rohit Sharma: ನನಗೆ ಟಿ20ಗೆ ನಿವೃತ್ತಿ ಘೋಷಿಸಲು ಮನಸ್ಸು ಇರಲಿಲ್ಲ; ಆಘಾತಕಾರಿ ಹೇಳಿಕೆ ನೀಡಿದ ರೋಹಿತ್​ ಶರ್ಮಾ

“ಅವರು ಉತ್ತಮ ಬೌಲರ್, ಅವರು ಎಲ್ಲಾ ವಿಭಿನ್ನ ಬ್ಯಾಟರ್​ಗಳ ವಿರುದ್ಧ ಬೌಲಿಂಗ್ ಮಾಡಲು ಯೋಜನೆ ಹೊಂದಿದ್ದಾರೆ. ಅದಕ್ಕಾಗಿ ಅವರು ಕೌಶಲ ಹೊಂದಿದ್ದಾರೆ. ಯಾವ ಎಸೆತವನ್ನು ಯಾವಾಗ ಎಸೆಯಬೇಕು ಎಂಬುದನ್ನು ತಿಳಿದುಕೊಂಡಿದ್ದಾರೆ. ನನ್ನ ಪ್ರಕಾರ ಉತ್ತಮ ಸೀಮ್ ಬೌಲರ್ ಎಂದು ಹೇಳುವುದಾದರೆ ಮಾಜಿ ಆಟಗಾರ ವಾಸಿಮ್ ಅಕ್ರಮ್ ವಿಶೇಷ. ಆದರೆ, ಅದಕ್ಕೆ ಸಮಾನಾಗಿದ್ದಾರೆ ಬುಮ್ರಾ. ಬುಮ್ರಾ ಅದ್ಭುತ ಆ್ಯಕ್ಷನ್ ಸಾಮರ್ಥ್ಯವನ್ನು ಹೊಂದಿದ್ದಾರೆ ಹಾಗೂ ವೇಗವನ್ನೂ ಹೊಂದಿದ್ದಾರೆ/ ಅವರು ಎಲ್ಲಾ ವಿಭಿನ್ನ ತಾಂತ್ರಿಕತೆಯನ್ನೂ ಹೊಂದಿದ್ದು ಎದುರಾಳಿಯನ್ನು ಒತ್ತಡದಲ್ಲಿ ಇಡುತ್ತಾರೆ. ಇದು ವಿಶ್ವಕಪ್​ನಲ್ಲಿ ಕೇವಲ ಎರಡು ಅಥವಾ ಮೂರು ಬಾರಿ ಅಲ್ಲ. ಇದು ಪ್ರತಿಯೊಂದು ಪಂದ್ಯದಲ್ಲೂ ಆಗಿದೆ “ಎಂದು ವಾನ್ ತಿಳಿಸಿದ್ದಾರೆ.

ನನ್ನದು ಪ್ರಾಮಾಣಿಕ ಅಭಿಪ್ರಾಯ : ವಾನ್

ಫೈನಲ್ ಪಂದ್ಯದಲ್ಲಿ ರೀಜಾ ಹೆಂಡ್ರಿಕ್ಸ್ ಅವರನ್ನು ಬೌಲ್ಡ್ ಮಾಡುವ ಮೂಲಕ ಭಾರತ ಪರ ಬೌಲಿಂಗ್ ದಾಳಿ ಪ್ರಾರಂಭಿಸಿದ ಬುಮ್ರಾ, ಪವರ್ ಪ್ಲೇನಲ್ಲಿ ವಿಶೇಷವಾಗಿ ಅತ್ಯುತ್ತಮವಾಗಿ ಅಡಿದ್ದರು. ಈ ಎಸೆತವನ್ನು ಪ್ರಸಾರಕರು ಪ್ರಸಾರ ಮಾಡದೇ ಇರಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಮಾರ್ಕೊ ಜಾನ್ಸೆನ್ ಅವರನ್ನು ಔಟ್​ ಮಾಡಿದ್ದಂತೂ ಅದ್ಭುತ. ಹೀಗಾಗಿ ನನ್ನ ಪ್ರಾಮಾಣಿಕ ಅಭಿಪ್ರಾಯದ ಪ್ರಕಾರ ಬುಮ್ರಾ ಆಧುನಿಕ ಯುಗ ಬೆಸ್ಟ್​ ಬೌಲರ್​.

Continue Reading
Advertisement
Parliament Sessions
ಪ್ರಮುಖ ಸುದ್ದಿ5 mins ago

Parliament Sessions : ರಾಹುಲ್ ಗಾಂಧಿಯಿಂದ ಹಿಂದೂಗಳಿಗೆ ಅವಮಾನ: ಬಿಜೆಪಿ ಆರೋಪ

Reliance Jio
ಕರ್ನಾಟಕ13 mins ago

Reliance Jio: ಮೊಬೈಲ್‌ ಶುಲ್ಕ ಏರಿಕೆ; ಯಾವ ಕಂಪನಿಯ ಪ್ಲ್ಯಾನ್‌ ಸೂಕ್ತ?

Parliament Sessions
ದೇಶ22 mins ago

Parliament Sessions: ಮೋದಿ ಆತ್ಮದ ಜೊತೆ ಪರಮಾತ್ಮನ ಸಂವಹನ; ರಾಹುಲ್‌ ಗಾಂಧಿ ವ್ಯಂಗ್ಯ

MUDA site scandal
ಕರ್ನಾಟಕ28 mins ago

MUDA site scandal: ಮುಡಾ ನಿವೇಶನಗಳ ಹಂಚಿಕೆ ರದ್ದು; ಬಹುಕೋಟಿ ಹಗರಣದ ತನಿಖೆಗೆ ಸರ್ಕಾರ ಆದೇಶ

Fashion Show News
ಫ್ಯಾಷನ್49 mins ago

Fashion Show News: ಸಿಇಎಸ್‌ ಫ್ಯಾಷನ್‌ ಡಿಸೈನಿಂಗ್‌ ವಿದ್ಯಾರ್ಥಿಗಳ ರ‍್ಯಾಂಪ್‌ ಶೋ

karnataka Weather Forecast
ಮಳೆ57 mins ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Medha Patkar
ದೇಶ1 hour ago

Medha Patkar: ನರ್ಮದಾ ಬಚಾವೋ ಹೋರಾಟಗಾರ್ತಿ ಮೇಧಾ ಪಾಟ್ಕರ್‌ಗೆ ಜೈಲು; 10ಲಕ್ಷ ರೂ. ದಂಡ

Karave Protest
ಕರ್ನಾಟಕ1 hour ago

Karave Protest: ಕನ್ನಡಿಗರಿಗೆ ಉದ್ಯೋಗ ನೀಡಲು ಕರವೇ ನಾರಾಯಣ ಗೌಡ ನಿಯೋಗ ಮನವಿ; ಶೀಘ್ರವೇ ಕ್ರಮ ಎಂದ ಸಿಎಂ

Arecanut Insurance Karnataka last date
ಕೃಷಿ2 hours ago

Arecanut Insurance : ಮೆಣಸು, ಅಡಿಕೆಗೆ ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ

Thalapathy Vijay
Latest2 hours ago

Thalapathy Vijay: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ57 mins ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ1 day ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌