Anjali Murder Case: ನನ್ನ ಮಗ ಮಾಡಿದ್ದು ತಪ್ಪು, ಕೋರ್ಟ್ ಅವನಿಗೆ ಯಾವ ಶಿಕ್ಷೆಯಾದ್ರೂ ಕೊಡಲಿ: ಆರೋಪಿ ಗಿರೀಶ್ ತಾಯಿ - Vistara News

ಕರ್ನಾಟಕ

Anjali Murder Case: ನನ್ನ ಮಗ ಮಾಡಿದ್ದು ತಪ್ಪು, ಕೋರ್ಟ್ ಅವನಿಗೆ ಯಾವ ಶಿಕ್ಷೆಯಾದ್ರೂ ಕೊಡಲಿ: ಆರೋಪಿ ಗಿರೀಶ್ ತಾಯಿ

Anjali Murder Case: ಈ ಹಿಂದೆ ಕಳ್ಳತನ ಮಾಡಿದಾಗ ಬುದ್ಧಿವಾದ ಹೇಳಿದ್ದೆ. ಈಗ ಇಂತಹ ಕೆಲಸ ಮಾಡುತ್ತಾನೆ ಎಂದು ಊಹಿಸಿರಲಿಲ್ಲ ಎಂದು ಅಂಜಲಿ ಕೊಲೆ ಪ್ರಕರಣದ ಬಗ್ಗೆ ಆರೋಪಿ ಗಿರೀಶ್‌ ತಾಯಿ ಸವಿತಾ ಸಾವಂತ್ ಹೇಳಿದ್ದಾರೆ.

VISTARANEWS.COM


on

Anjali Murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ನನ್ನ ಮಗ ಗಿರೀಶ್ ಮಾಡಿದ್ದು ತಪ್ಪು, ಆತನಿಗೆ ಕೋರ್ಟ್ ಏನು ಶಿಕ್ಷೆ ಕೊಡುತ್ತೆ ಕೊಡಲಿ. ಅಂಜಲಿ (Anjali Murder Case) ನನ್ನನ್ನು ಮಮ್ಮಿ ಅಂತ ಕರೆಯುತ್ತಿದ್ದಳು, ಅಂಜಲಿ ಮತ್ತು ಗಿರೀಶ್ ಪರಸ್ಪರ ಪ್ರೀತಿಸುತ್ತಿದ್ದರು. ನನ್ನ ಮಗ ಅಂಜಲಿ ಜತೆ ಮದುವೆಯಾಗುತ್ತೇನೆ ಅಂದಿದ್ದ. ಆದರೆ, ಇತ್ತೀಚೆಗೆ ಇಬ್ಬರ ನಡುವೆ ಹೊಂದಾಣಿಕೆ ಇರಲಿಲ್ಲ. ಅವನು ಈ ಹಂತಕ್ಕೆ ಹೋಗುತ್ತಾನೆ ಅಂತ ಗೊತ್ತಿರಲಿಲ್ಲ ಎಂದು ಆರೋಪಿ ಗಿರೀಶ್ ತಾಯಿ ಸವಿತಾ ಸಾವಂತ್ ಹೇಳಿದ್ದಾರೆ.

ಅಂಜಲಿ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಇಬ್ಬರೂ ಹೇಗಾದರೂ ಚೆನ್ನಾಗಿರಿ ಅಂತ ಹೇಳಿದ್ದೆ. ಕಳೆದ ಆರು ತಿಂಗಳಿಂದ ಮಗ ಮನೆಗೆ ಬಂದಿಲ್ಲ. ಅಂಜಲಿ ಫೋನ್‌ನಲ್ಲಿ ಬೇರೆಯವರ ಜತೆ ಮಾತನಾಡುತ್ತಾಳೆ ಮಮ್ಮಿ ಅಂತ ಹೇಳಿದ್ದ. ಆಕೆಗೆ ಇಷ್ಟ ಇಲ್ಲದಿದ್ದರೆ ಬಿಟ್ಟು ಬಿಡು ಅಂದಿದ್ದೆ. ಆದರೆ ಈ ರೀತಿ ಮಾಡುತ್ತಾನೆ ಅಂತ ಗೊತ್ತಿರಲಿಲ್ಲ ಎಂದರು ತಿಳಿಸಿದ್ದಾರೆ.

ಇದನ್ನೂ ಓದಿ | Anjali Murder Case: ರೈಲಿನಲ್ಲಿ ಮತ್ತೊಬ್ಬ ಮಹಿಳೆ ಕೊಲೆಗೆ ಯತ್ನಿಸಿದ ಅಂಜಲಿ ಹಂತಕ!

ಅವನು ನನಗೆ ಒಂದು ಪೈಸೆಯೂ ಮನೆ ಖರ್ಚಿಗೆ ಕೊಡುತ್ತಿರಲಿಲ್ಲ. ಈ ಹಿಂದೆ ಕಳ್ಳತನ ಮಾಡಿದಾಗ ಬುದ್ಧಿವಾದ ಹೇಳಿದ್ದೆ. ನನಗೆ ಯಾರೂ ಇಲ್ಲ, ನಾನು ಕೆಲಸ ಮಾಡದೆ ಮನೆ ನಡೆಯಲ್ಲ. ಬಾಡಿಗೆ ಮನೆಯವರು ಮನೆ ಖಾಲಿ ಮಾಡು ಅಂತಿದ್ದಾರೆ. ಯಾವ ಸಂಬಂಧಿಕರೂ ನನ್ನ ಸಹಾಯಕ್ಕೆ ಬಂದಿಲ್ಲ. ನಾನು ಮಗನನ್ನ ನೋಡಲು ಕಿಮ್ಸ್‌ಗೆ ಹೋಗಲ್ಲ. ಅವನಿಗೆ ಬೇಲ್ ಸೇರಿದಂತೆ, ಯಾವುದೇ ಸಹಾಯವನ್ನು ಮಾಡಲ್ಲ. ನ್ಯಾಯಾಲಯ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ತೆಗೆದುಕೊಳ್ಳಲಿ ಎಂದು ಹೇಳಿದ್ದಾರೆ.

ಅಂಜಲಿ ಕೊಂದವನ ಎನ್‌ಕೌಂಟರ್ ಮಾಡಿ: ಸಹೋದರಿ ಪೂಜಾ ಆಗ್ರಹ

Anjali Murder Case

ಧಾರವಾಡ: ಅಂಜಲಿ ಹತ್ಯೆ ಪ್ರಕರಣದ (Anjali Murder Case) ಆರೋಪಿ ಗಿರೀಶ್‌ನನ್ನು ಎನ್‌ಕೌಂಟರ್ ಮಾಡಬೇಕು. ಯಾವುದೇ ಕಾರಣಕ್ಕೂ ಆರೋಪಿಗೆ ಚಿಕಿತ್ಸೆ ಕೊಡಬಾರದು, ಅವನನ್ನು ಆದಷ್ಟು ಬೇಗ ಎನ್ ಕೌಂಟರ್ ಮಾಡಬೇಕು. ನಮ್ಮ ಅಕ್ಕ ಹೇಗೆ ರಕ್ತ ಸುರಿದು ಪ್ರಾಣ ಬಿಟ್ಟಳೋ ಅದೇ ರೀತಿ ಅವನು ಸಾಯಬೇಕು ಎಂದು ಅಂಜಲಿ ಸಹೋದರಿ ಪೂಜಾ ಆಗ್ರಹಿಸಿದ್ದಾರೆ.

ವಿಸ್ತಾರ ನ್ಯೂಸ್‌ ಜತೆ ಶುಕ್ರವಾರ ಮಾತನಾಡಿರುವ ಅಂಜಲಿ ಸಹೋದರಿ ಪೂಜಾ, ನಮ್ಮ ಅಕ್ಕನಿಗೂ ಅವನಿಗೂ ಯಾವುದೇ ಸಂಬಂಧ ಇಲ್ಲ. ಏನೇನೋ ಹೇಳಿ ದಿಕ್ಕು ತಪ್ಪಿಸುತ್ತಿದ್ದಾರೆ. ಪೊಲೀಸರು ಹೇಗೆ ಬೇಕೋ ಹಾಗೆ ಮಾಡುವ ವಿಚಾರದಲ್ಲಿದ್ದಾರೆ. ಇದನ್ನು ಆದಷ್ಟು ಬೇಗ ತನಿಖೆ ಮಾಡಬೇಕು. ಬೆಳಗ್ಗೆ ಮಾತನಾಡಲು ಬಂದವನು ಚಾಕು ಹಾಕಿದ. ನಾವು ನಮ್ಮ ಅಕ್ಕನ ಜತೆ ಮಾತನಾಡಲು ಸಹ ಆಗಲಿಲ್ಲ. ಕೊನೆ ಗಳಿಗೆಯಲ್ಲಿ ಪೊಲೀಸರು ಬಂದು ಡಾಕ್ಟರ್ ಸಹ ಕರೆಯಲಿಲ್ಲ. ಕೇವಲ ಪೋಟೋ ತೆಗೆದುಕೊಂಡು ಹೋದರು. ಅವನಿಗೆ ಅದೇ ರೀತಿ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.

ನಮ್ಮ ಅಕ್ಕನ ಜತೆಗೆ ಏನೇನೋ ಸಂಬಂಧ ಕಲ್ಪಿಸುತ್ತಿದ್ದಾರೆ. ಹಾಗಾದರೆ ನೆನ್ನೆಯೂ ಸಹ ಅವನು ಯಾರದೋ ಜೊತೆ ಜಗಳ ಮಾಡಿದ್ದ. ಅವರಿಗೂ ಸಂಬಂಧ ಇದೆಯಾ ಎಂದು ಸಹೋದರಿ ಪ್ರಶ್ನೆ ಮಾಡಿದ್ದಾರೆ.

ಹಲ್ಲೇ ಮಾಡಿ ಓಡಿ ಹೋದ

ದಾವಣಗೆರೆ: ಮಹಿಳೆಗೆ ಅಂಜಲಿ ಹಂತಕನಿಂದ ಚಾಕು ಇರಿತ ಪ್ರಕರಣದ ಬಗ್ಗೆ ಗಾಯಾಳು ಮಹಿಳೆಯ ಪತಿ ಪ್ರತಿಕ್ರಿಯಿಸಿದ್ದಾರೆ. ನಾವು ಟ್ರೈನ್‌ನಲ್ಲಿ ಇರುವಾಗ ಅರೋಪಿ ಗಿರೀಶ್ ಹಿಂದೆ ಹಿಂದೆಯೇ ಬರುತ್ತಿದ್ದ. ರೆಸ್ಟ್ ರೂಂನ ಡೋರ್ ಓಪನ್ ಮಾಡಿ ಒಳ ನುಗ್ಗಲು ಯತ್ನಿಸಿದ. ಹೊಟ್ಟೆಗೆ ಚಾಕು ಚುಚ್ಚಲು ಮುಂದಾದಾಗ ನಾನು ಕೈ ಅಡ್ಡ ಹಿಡಿದೆ. ಕೈಗೆ ಗಾಯವಾಗುತ್ತಿದ್ದಂತೆ ಕೂಗಿಕೊಂಡೆ, ಆತ ಓಡಿಹೋದ ಎಂದು ಗದಗ ಮೂಲದ ಲಕ್ಷ್ಮೀ ಪತಿ ಮಹಾಂತೇಶ್ ತಿಳಿಸಿದ್ದಾರೆ. ಸದ್ಯ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ.

5 ಸಾವಿರ ಅಡ್ವಾನ್ಸ್ ತೆಗೆದುಕೊಂಡು ಹೋದವನು ಮತ್ತೆ ಬಂದಿಲ್ಲ

ಅಂಜಲಿ ಹತ್ಯೆ ಕೊಲೆ ಪ್ರಕರಣದ ಆರೋಪಿ ಗಿರೀಶ್ ಕಳೆದ ನಾಲ್ಕು ತಿಂಗಳಿನಿಂದ ಮೈಸೂರಿನ ಮಹಾರಾಜ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂಬುವುದು ತಿಳಿದುಬಂದಿದೆ. ಈ ಬಗ್ಗೆ ಮಹಾರಾಜ ಹೋಟೆಲ್ ಮಾಲೀಕ ಗೋವರ್ಧನ್ ಪ್ರತಿಕ್ರಿಯಿಸಿ, ವಿನಾಯಕ ನರ್ಸಿಂಗ್ ಕೇರ್ ಏಜೆನ್ಸಿ ಮೂಲಕ ನಮ್ಮ ತಂದೆ ನೋಡಿಕೊಳ್ಳಲು ಆರೋಪಿ ಗಿರೀಶ್‌ ಬಂದಿದ್ದ. ರೂಂ ಬಾಯ್, ಸಪ್ಲೈಯರ್ ಆಗಿ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Prajwal Revanna Case: ದೇವರಾಜೇಗೌಡರಿಗೆ ಮೆಂಟಲ್‌ ಟ್ರೀಟ್ಮೆಂಟ್‌ ಕೊಡಿಸಬೇಕಿದೆ: ಕಾಂಗ್ರೆಸ್‌ ವ್ಯಂಗ್ಯ

ಗಿರೀಶ್ ಸರಿಯಾಗಿ ಕೆಲಸಕ್ಕೆ ಬರುತ್ತಿರಲಿಲ್ಲ. ಒಮ್ಮೆ 10 ದಿನ, 5‌ ದಿನ ಹೀಗೆ ರಜಾ ತೆಗೆದುಕೊಳ್ಳುತ್ತಿದ್ದ. ಏಜೆನ್ಸಿ ಮೂಲಕ ಬಂದ ಕಾರಣ ಹೆಚ್ಚು ರಜಾ ತೆಗೆದುಕೊಂಡರೂ ನಾನು ಅವನ ಬಗ್ಗೆ ಕೇಳುತ್ತಿರಲಿಲ್ಲ. ಮಂಗಳವಾರ ಸಂಜೆ 5 ಸಾವಿರ ರೂ. ಹಣ ಅಡ್ವಾನ್ಸ್ ತೆಗೆದುಕೊಂಡು ಹೋದವನು ಮತ್ತೆ ವಾಪಸ್ ಬಂದಿಲ್ಲ ಎಂದು ಹೇಳಿದ್ದಾರೆ.

ಮರುದಿನ ಪೊಲೀಸರು ನನಗೆ ಕರೆ ಮಾಡಿದಾಗಲೇ ಗಿರೀಶ್‌ ಕೊಲೆ ಮಾಡಿದ್ದಾನೆ ಎಂಬುದು ತಿಳಿಯಿತು. ನಮ್ಮ ಹೋಟೆಲ್‌ನಲ್ಲಿ ಕೆಲಸ ಮಾಡುವ ಸಿಬ್ಬಂದಿ, ಮೊಬೈಲ್‌ನಲ್ಲಿ ಹೆಚ್ಚು ಮಾತನಾಡುತ್ತಿದ್ದ ಎಂದು ಅವನ ಬಗ್ಗೆ ಹೇಳಿದ್ದರು. ಜತೆಗೆ ಕಂಪನಿಯ ಫೋನ್‌ನಿಂದ ಹೆಚ್ಚು ದಿನ ಮಾತನಾಡಿದ್ದಾನೆ. ಘಟನೆ ನಡೆಯುವ ಹಿಂದಿನ ದಿನ ಜೋರಾಗಿ ಕೂಗಾಡಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದನಂತೆ. ನಮ್ಮ ಹೋಟೆಲ್‌ಗೆ ಏಳು ಪೊಲೀಸರು ಬಂದಿದ್ದರು. ನೆನ್ನೆ ರಾತ್ರಿಯವರೆಗೂ ಪೊಲೀಸರಿ ನಮ್ಮ ಹೋಟೆಲ್‌ನಲ್ಲಿ ಇದ್ದರು. ಆತ ದಾವಣಗೆರೆಯಲ್ಲಿ ಸಿಕ್ಕ ಬಳಿಕ ಮಧ್ಯರಾತ್ರಿ ಪೊಲೀಸರು ಇಲ್ಲಿಂದ ತೆರಳಿದರು ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPS officers promoted: ಡಿಜಿಪಿಯಾಗಿ ಮಾಲಿನಿ ಕೃಷ್ಣಮೂರ್ತಿ, ಪ್ರಣಬ್ ಮೊಹಂತಿಗೆ ಮುಂಬಡ್ತಿ

IPS officers promoted: ಐಪಿಎಸ್‌ ಅಧಿಕಾರಿ ಪ್ರಣಬ್ ಮೊಹಂತಿ ಅವರು ಎಡಿಜಿಪಿಯಿಂದ ಡಿಜಿಪಿಯಾಗಿ ಮುಂಬಡ್ತಿ ಪಡೆದಿದ್ದಾರೆ. ಮಾಲಿನಿ ಕೃಷ್ಣಮೂರ್ತಿ ಅವರಿಗೆ ಡಿಜಿಪಿ ಹಾಗೂ ಅಗ್ನಿ ಶಾಮಕದಳ, ತುರ್ತು ಸೇವೆಗಳ ಹೆಚ್ಚುವರಿ ಹುದ್ದೆ ನೀಡಲಾಗಿದೆ.

VISTARANEWS.COM


on

IPS officers promoted
Koo

ಬೆಂಗಳೂರು: ಐಪಿಎಸ್‌ ಅಧಿಕಾರಿ ಪ್ರಣಬ್ ಮೊಹಂತಿ ಅವರಿಗೆ ಮುಂಬಡ್ತಿ ನೀಡಲಾಗಿದ್ದು, ಮಾಲಿನಿ ಕೃಷ್ಣಮೂರ್ತಿ ಅವರಿಗೆ ಡಿಜಿಪಿ ಹಾಗೂ ಅಗ್ನಿ ಶಾಮಕದಳ, ತುರ್ತು ಸೇವೆಗಳ ಡಿಜಿಯಾಗಿ ಹೆಚ್ಚುವರಿ ಹುದ್ದೆ (IPS officers promoted) ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಐಪಿಎಸ್‌ ಅಧಿಕಾರಿ ಪ್ರಣಬ್ ಮೊಹಂತಿ ಅವರು ಎಡಿಜಿಪಿಯಿಂದ ಡಿಜಿಪಿಯಾಗಿ ಮುಂಬಡ್ತಿ ಪಡೆದಿದ್ದು, ಕಂಪ್ಯೂಟರ್ ವಿಂಗ್ ಡಿಜಿಪಿಯಾಗಿ ಮುಂದುವರಿಯಲಿದ್ದಾರೆ. ಇನ್ನು ಮಾಲಿನಿ ಕೃಷ್ಣಮೂರ್ತಿ ಅವರಿಗೆ ಡಿಜಿಪಿ ಹಾಗೂ ಅಗ್ನಿ ಶಾಮಕದಳ, ತುರ್ತು ಸೇವೆಗಳ ಹೆಚ್ಚುವರಿ ಹುದ್ದೆ ನೀಡಲಾಗಿದೆ. ನಾಳೆ ಡಿಜಿಪಿ ಕಮಲ್ ಪಂತ್ ಅವರು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಮಾಲಿನಿ ಕೃಷ್ಣಮೂರ್ತಿ ಅವರಿಗೆ ಹೆಚ್ಚುವರಿ ಹುದ್ದೆ ನೀಡಲಾಗಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದ್ದು, ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಮಹಾನಿರ್ದೇಶಕರಾದ (ಡಿಜಿ) ಮಾಲಿನಿ ಕೃಷ್ಣಮೂರ್ತಿ ಅವರನ್ನು ಡಿಜಿಪಿ ಮತ್ತು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಡಿಜಿ, ಹೋಮ್ ಗಾರ್ಡ್ಸ್ ಕಮಾಂಡೆಂಟ್ ಜನರಲ್, ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಡಿಜಿ, ನಾಗರಿಕ ರಕ್ಷಣೆ ನಿರ್ದೇಶಕರಾಗಿ ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿದೆ.

ಐಪಿಎಸ್‌ ಅಧಿಕಾರಿ ಪ್ರಣಬ್ ಮೊಹಂತಿ ಅವರು ಪೊಲೀಸ್ ಮಹಾನಿರ್ದೇಶಕರ ದರ್ಜೆಗೆ (ಡಿಜಿಪಿ) ಬಡ್ತಿ ಪಡೆದಿದ್ದು, ಅವರು ಸೈಬರ್ ಅಪರಾಧ ಮತ್ತು ಮಾದಕ ದ್ರವ್ಯಗಳ ಉನ್ನತೀಕರಿಸಿದ ಡಿಜಿಪಿ ಹುದ್ದೆಯ ಸಮಕಾಲೀನ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

ಇದನ್ನೂ ಓದಿ | Maya Neelakantan: ಅಮೆರಿಕವನ್ನು ಹುಚ್ಚೆಬ್ಬಿಸಿದ 10 ವರ್ಷದ ಭಾರತೀಯ ಗಿಟಾರ್‌ ಬಾಲೆ ಮಾಯಾ ನೀಲಕಂಠನ್‌, ಯಾರೀಕೆ?

Continue Reading

ಕರ್ನಾಟಕ

Kannada New Movie: ಸೆನ್ಸಾರ್ ಅಂಗಳದಲ್ಲಿ ‘ಬ್ಯಾಕ್ ಬೆಂಚರ್ಸ್’ ಸಿನಿಮಾ!

Kannada New Movie: ಕಾಲೇಜು ಕೇಂದ್ರಿತ ಕಥೆ ಮತ್ತು ಬೇರೆ ಹೊಸತನದ ನಿರೂಪಣೆಯ ಸುಳಿವಿನೊಂದಿಗೆ ಎಲ್ಲಾ ವರ್ಗದ ಪ್ರೇಕ್ಷಕರನ್ನೂ “ಬ್ಯಾಕ್ ಬೆಂಚರ್ಸ್” ಆಕರ್ಷಿಸಿದ್ದಾರೆ. ಹೀಗೆ ತಾನೇತಾನಾಗಿ ಎಲ್ಲರನ್ನು ಆವರಿಸಿಕೊಂಡಿರುವ ಈ ಚಿತ್ರ ಇದೇ ಜುಲೈ 19ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಆರಂಭಿಕ ಹೆಜ್ಜೆಯಲ್ಲಿಯೇ ಸಕಾರಾತ್ಮಕ ವಾತಾವರಣ ಸೃಷ್ಟಿಸಿಕೊಂಡಿರುವ ಈ ಸಿನಿಮಾ ಈಗ ಸೆನ್ಸಾರ್ ಅಂಗಳ ತಲುಪಿಕೊಂಡಿದೆ.

VISTARANEWS.COM


on

Back Benchers film in the Censor
Koo

ಬೆಂಗಳೂರು: ಭಿನ್ನ ಕಂಟೆಂಟಿನ ಮುನ್ಸೂಚನೆಯೊಂದಿಗೆ ಕ್ರೇಜ್ ಹುಟ್ಟುಹಾಕಿರುವ ಚಿತ್ರ `ಬ್ಯಾಕ್ ಬೆಂಚರ್ಸ್’ ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಕಾಲೇಜು ಕೇಂದ್ರಿತ ಕಥೆ ಮತ್ತು ಬೇರೆ ಹೊಸತನದ ನಿರೂಪಣೆಯ ಸುಳಿವಿನೊಂದಿಗೆ ಎಲ್ಲಾ ವರ್ಗದ ಪ್ರೇಕ್ಷಕರನ್ನೂ “ಬ್ಯಾಕ್ ಬೆಂಚರ್ಸ್” ಆಕರ್ಷಿಸಿದ್ದಾರೆ. ಹೀಗೆ ತಾನೇತಾನಾಗಿ ಎಲ್ಲರನ್ನು ಆವರಿಸಿಕೊಂಡಿರುವ ಈ ಚಿತ್ರ ಇದೇ ಜುಲೈ 19ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಆರಂಭಿಕ ಹೆಜ್ಜೆಯಲ್ಲಿಯೇ ಸಕಾರಾತ್ಮಕ ವಾತಾವರಣ ಸೃಷ್ಟಿಸಿಕೊಂಡಿರುವ ಈ ಸಿನಿಮಾ (Kannada New Movie) ಈಗ ಸೆನ್ಸಾರ್ ಅಂಗಳ ತಲುಪಿಕೊಂಡಿದೆ.

ಇದು ರಾಜಶೇಖರ್ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ. ನಿರ್ಮಾಪಕರಾಗಿ, ನಿರ್ದೇಶಕರಾಗಿ ಪ್ರೇಕ್ಷಕರ ನಾಡಿಮಿಡಿತವನ್ನು ಅರಿತಿರುವವರು ರಾಜಶೇಖರ್. ಅನುಭವವನ್ನೆಲ್ಲ ಒಟ್ಟುಗೂಡಿಸಿಕೊಂಡು, ಹೊಸಬರ ತಂಡವನ್ನಿಟ್ಟುಕೊಂಡು ರಾಜಶೇಖರ್ ಈ ಚಿತ್ರವನ್ನು ರೂಪಿಸಿದ್ದಾರೆ.

ಸಾಮಾನ್ಯವಾಗಿ ಹೊಸಬರನ್ನು ಹಾಕಿಕೊಂಡು ಸಿನಿಮಾ ಮಾಡಲು ಬಹುತೇಕರು ಹಿಂದೇಟು ಹಾಕುತ್ತಾರೆ. ರಾಜಶೇಖರ್ ಅವರು ಸಂಪೂರ್ಣವಾಗಿ ಹೊಸಬರ ತಂಡದೊಂದಿಗೆ ಈ ಚಿತ್ರವನ್ನು ತಯಾರಿಸಿದ್ದಾರೆಂದರೆ ಅಚ್ಚರಿ ಮೂಡದಿರುವುದಿಲ್ಲ. ಹೊಸಬರೇ ಸೇರಿರುವುದರಿಂದ ಇಲ್ಲಿ ಹೊಸತನದ ಛಾಯೆಯಿದೆ. ಅದರ ಘಮವೀಗ ಟೀಸರ್ ಮೂಲಕ ಪ್ರೇಕ್ಷಕರನ್ನು ತಲುಪಿಕೊಂಡಿದೆ.

ಇದನ್ನೂ ಓದಿ: VSK Media Awards 2024: ಬೆಂಗಳೂರಿನಲ್ಲಿ ಜೂ.30 ರಂದು “ವಿಎಸ್‌ಕೆ ಮಾಧ್ಯಮ ಪ್ರಶಸ್ತಿ” ಪ್ರದಾನ

ಇದರ ಭಾಗವಾಗಿರುವ ಯುವ ಪಡೆ ಭಿನ್ನ ಶೈಲಿಯಲ್ಲಿಯೇ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಸೋಶಿಯಲ್ ಮೀಡಿಯಾದಲ್ಲಂತೂ ಈಗ “ಬ್ಯಾಕ್ ಬೆಂಚರ್ಸ್” ಹವಾ ವ್ಯಾಪಿಸಿಕೊಂಡಿದೆ. ಇದು ನಾಯಕ ನಾಯಕಿಯರಾಗಿರುವವರು, ಇತರೇ ಪಾತ್ರಗಳನ್ನು ನಿರ್ವಹಿಸಿದವರು ಸೇರಿದಂತೆ ಒಂದಿಡೀ ತಂಡ ಹೊಸ ಶೈಲಿಯಲ್ಲಿ ಪ್ರೇಕ್ಷಕರನ್ನು ತಲುಪಿಕೊಳ್ಳುತ್ತಿದೆ.

ನಿರ್ದೇಶಕ ರಾಜಶೇಖರ್ ಸ್ಕ್ರಿಫ್ಟ್ ವರ್ಕ್ ಸೇರಿದಂತೆ ಎಲ್ಲದರಲ್ಲಿಯೂ ಈ ಹುಡುಗ-ಹುಡುಗಿಯರನ್ನು ಸೇರಿಸಿಕೊಂಡಿದ್ದಾರೆ. ಅದರ ಫಲವಾಗಿಯೇ ಈ ಕಾಲೇಜು ಸ್ಟೋರಿ ತಾಜಾ ಅನುಭೂತಿಯೊಂದಿಗೆ ಸೆಳೆದುಕೊಂಡಿದೆ.

ಪಿಪಿ ಪ್ರೊಡಕ್ಷನ್ಸ್ ಅಡಿಯಲ್ಲಿ ಖುದ್ದು ರಾಜಶೇಖರ್ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳೀಕರ್, ಮಾನ್ಯ ಗೌಡ, ಕುಂಕುಮ್ ಎಚ್, ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತಾ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್, ಗೌರವ್ ಮುಂತಾದವರ ತಾರಾಗಣವಿದೆ.

ಇದನ್ನೂ ಓದಿ: Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಮನೋಹರ್ ಜೋಶಿ ಛಾಯಾಗ್ರಹಣ, ರಂಜನ್ ಮತ್ತು ಅಮರ್ ಗೌಡ ಸಂಕಲನ ಈ ಚಿತ್ರಕ್ಕಿದೆ. ಇದೀಗ ಸೆನ್ಸಾರ್ ಅಂಗಳ ತಲುಪಿರುವ “ಬ್ಯಾಕ್ ಬೆಂಚರ್ಸ್” ಮತ್ತಷ್ಟು ವೇಗದಿಂದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

Continue Reading

ಕರ್ನಾಟಕ

Kannada New Movie: ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಅಜಾಗ್ರತ’ ಸಿನಿಮಾ ಡೈರೆಕ್ಟರ್‌ಗೆ ನಿರ್ಮಾಪಕರಿಂದ ದುಬಾರಿ ಕಾರ್‌ ಗಿಫ್ಟ್‌!

Kannada New Movie: ಯಾವುದೇ ಚಿತ್ರವಾದರೂ ಸರಿ. ಮೊದಲು ಬಂಡವಾಳ ಹಾಕಿದ ನಿರ್ಮಾಪಕರಿಗೆ ಆ ಸಿನಿಮಾ ಮೆಚ್ಚುಗೆಯಾಗಬೇಕು. ನಿರ್ಮಾಪಕರಿಗೆ ಸಿನಿಮಾ ಇಷ್ಟವಾದಾರೆ ನಿರ್ದೇಶಕ ಅರ್ಧ ಗೆದ್ದ ಹಾಗೆ. ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ.ಶಶಿಧರ್ ನಿರ್ದೇಶನದ “ಅಜಾಗ್ರತ” ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಗಿದು ಚಿತ್ರದ ರಫ್ ಕಾಪಿ ಬಂದಿದೆ. ‘ಅಜಾಗ್ರತ” ಚಿತ್ರದ ರಫ್ ಕಾಪಿ ನೋಡಿದ ನಿರ್ಮಾಪಕರಿಗೆ ಚಿತ್ರ ತುಂಬಾ ಇಷ್ಟವಾಗಿದೆಯಂತೆ. ಈ ಸಂದರ್ಭದಲ್ಲಿ ನಿರ್ಮಾಪಕ ರವಿರಾಜ್, ನಿರ್ದೇಶಕ ಶಶಿಧರ್ ಅವರಿಗೆ ದುಬಾರಿ ಕಾರ್‌ ಉಡುಗೊರೆಯಾಗಿ ನೀಡುವ ಮೂಲಕ ಚಿತ್ರ ಉತ್ತಮವಾಗಿ ಮೂಡಿಬಂದಿರುವ ಖುಷಿಯನ್ನು ವ್ಯಕ್ತಪಡಿಸಿದ್ದಾರೆ‌.

VISTARANEWS.COM


on

Producer who gifted an expensive car to the director of Radhika Kumaraswamy starrer Ajagrata
Koo

ಬೆಂಗಳೂರು: ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ. ಶಶಿಧರ್ ನಿರ್ದೇಶನದ “ಅಜಾಗ್ರತ” ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಗಿದು ಚಿತ್ರದ ರಫ್ ಕಾಪಿ ಬಂದಿದೆ. ‘ಅಜಾಗ್ರತ” ಚಿತ್ರದ ರಫ್ ಕಾಪಿ ನೋಡಿದ ನಿರ್ಮಾಪಕರಿಗೆ ಚಿತ್ರ ತುಂಬಾ ಇಷ್ಟವಾಗಿದೆಯಂತೆ. ಈ ಸಂದರ್ಭದಲ್ಲಿ ನಿರ್ಮಾಪಕ ರವಿರಾಜ್, ನಿರ್ದೇಶಕ ಶಶಿಧರ್ ಅವರಿಗೆ ದುಬಾರಿ ಕಾರು ನೀಡುವ ಮೂಲಕ ಚಿತ್ರ (Kannada New Movie) ಉತ್ತಮವಾಗಿ ಮೂಡಿಬಂದಿರುವ ಖುಷಿಯನ್ನು ವ್ಯಕ್ತಪಡಿಸಿದ್ದಾರೆ‌.

“ನಿರ್ದೇಶಕರು ಕಥೆ ಹೇಳಿದ ರೀತಿಯಲ್ಲೇ, ಅದಕ್ಕೂ ಹೆಚ್ಚಾಗಿಯೇ ಚಿತ್ರವನ್ನು ಬಹಳ ಚೆನ್ನಾಗಿ ಮಾಡಿ ಮುಗಿಸಿದ್ದಾರೆ. ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರ ನೋಡಿ ನನಗೆ ತುಂಬಾ ಖುಷಿಯಾಗಿದೆ. ಚಿತ್ರವನ್ನು ಉತ್ತಮವಾಗಿ ನಿರ್ದೇಶಿಸಿರುವ ನಿರ್ದೇಶಕರಿಗೆ ಉಡುಗೊರೆ ನೀಡುವ ಮನಸ್ಸಾಯಿತು. ಹಾಗಾಗಿ ಫಾರ್ಚ್ಯೂನರ್ ಕಾರನ್ನು ಉಡುಗೊರೆಯಾಗಿ ನೀಡುತ್ತಿದ್ದೇನೆ” ಎಂದು ನಿರ್ಮಾಪಕ ರವಿರಾಜ್ ತಿಳಿಸಿದ್ದಾರೆ.

ಇದನ್ನೂ ಓದಿ: VSK Media Awards 2024: ಬೆಂಗಳೂರಿನಲ್ಲಿ ಜೂ.30 ರಂದು “ವಿಎಸ್‌ಕೆ ಮಾಧ್ಯಮ ಪ್ರಶಸ್ತಿ” ಪ್ರದಾನ

ಚಿತ್ರ ಬಿಡುಗಡೆಯಾಗಿ ಯಶಸ್ವಿಯಾದ ನಂತರ ನಿರ್ದೇಶಕರಿಗೆ ಉಡುಗೊರೆ ನೀಡುವ ನಿರ್ಮಾಪಕರಿದ್ದಾರೆ. ಆದರೆ ಚಿತ್ರ ಬಿಡುಗಡೆಗೂ ಮುನ್ನ ನಿರ್ದೇಶಕರ ಕಾರ್ಯವನ್ನು ಮೆಚ್ಚಿ, ಕಾರನ್ನು ಉಡುಗೊರೆ ನೀಡಿರುವ ನಿರ್ಮಾಪಕ ರವಿರಾಜ್ ಅವರ ಗುಣ ನಿಜಕ್ಕೂ ಶ್ಲಾಘನೀಯ.

ಬಾಲಿವುಡ್‌ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ ಅಭಿನಯಿಸಿದ್ದಾರೆ. ಹೆಸರಾಂತ ನಟ ಬಾಬಿ ಸಿಂಹ ಸಹ ಈಗ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾ ಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: International Mud Day: ಆರೋಗ್ಯ, ಸೌಂದರ್ಯದ ಪಾಲಿಗೆ ಹೊನ್ನು ಈ ಮಣ್ಣು!

ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Continue Reading

ಬೆಂಗಳೂರು

Actor Darshan: ಜೈಲಲ್ಲಿ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ, ಪ್ರೇಮ್ ದಂಪತಿ

Actor Darshan: ನಟ ದರ್ಶನ್‌ ಭೇಟಿ ಬಳಿಕ ಪ್ರಕರಣದ ಬಗ್ಗೆ ರಕ್ಷಿತಾ, ಪ್ರೇಮ್ ದಂಪತಿ ಬೇಸರ ಹೊರಹಾಕಿದ್ದು, ಇಂತಹ ಪ್ರಕರಣ ನಡೆಯಬಾರದಿತ್ತು ಎಂದು ಹೇಳಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರನ್ನು (Actor Darshan) ಕೆಲ ಆಪ್ತರು ಭೇಟಿ ಮಾಡುತ್ತಿದ್ದಾರೆ. ಈ ನಡುವೆ ನಟಿ ರಕ್ಷಿತಾ, ಪ್ರೇಮ್ ದಂಪತಿ ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಭೇಟಿ ಬಳಿಕ ಪ್ರಕರಣದ ಬಗ್ಗೆ ರಕ್ಷಿತಾ, ಪ್ರೇಮ್ ದಂಪತಿ ಬೇಸರ ಹೊರಹಾಕಿದ್ದು, ಇಂತಹ ಪ್ರಕರಣ ನಡೆಯಬಾರದಿತ್ತು ಎಂದು ಹೇಳಿದ್ದಾರೆ.

ನಟ ದರ್ಶನ್ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ನಟಿ ರಕ್ಷಿತಾ, ಈ ಘಟನೆ ನಡೆದಿರುವುದು ದುರಾದೃಷ್ಟಕರ. ನಮಗೆ ಈ ಪ್ರಕರಣದ ಬಗ್ಗೆ ಬೇಜಾರು ಇದೆ ಎಂದು ಹೇಳಿದರು.

ನಿರ್ದೇಶಕ ಜೋಗಿ ಪ್ರೇಮ್ ಪ್ರತಿಕ್ರಿಯಿಸಿ, ಪ್ರಕರಣ ನ್ಯಾಯಾಲಯದಲ್ಲಿದೆ. ನಾವು ಈ ಸಂದರ್ಭದಲ್ಲಿ ಪ್ರಕರಣದ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳಿ, ಜೈಲಿನಲ್ಲಿ ದರ್ಶನ್ ಜತೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದರು.

ಪ್ರಕರಣದ ಬಗ್ಗೆ ಪವಿತ್ರಾ ಗೌಡಗೆ ಏನೂ ಗೊತ್ತಿಲ್ಲ: ವಕೀಲ

ಪವಿತ್ರಾ ಗೌಡ ಪರ ವಕೀಲ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ, ನ್ಯಾಯಾಂಗ ಬಂಧನದಲ್ಲಿದ್ದಾಗ ಎಲ್ಲರೂ ಚೆನ್ನಾಗಿಯೇ ಇರುತ್ತಾರೆ. ಯಾರಿಗೂ ಹಿಂಸೆ ಕೋಡಲು ಇಲ್ಲಿಗೆ ಕರೆದುಕೊಂಡು ಬರೋದಿಲ್ಲ. ಅವರ ಮನಪರಿವರ್ತನೆಯಾಗಲಿ ಎಂದು ಜೈಲಿಗೆ ಕರೆದುಕೊಂಡು ಬರಲಾಗುತ್ತದೆ. ಎಲ್ಲರೂ ಹೇಗೆ ಇರುತ್ತಾರೋ ಹಾಗೆ ಪವಿತ್ರಾ ಕೂಡ ಇರುತ್ತಾರೆ. ಅವರಿಗೆ ಸ್ಪೇಷಲ್ ಏನು ಇಲ್ಲ ಎಂದು ತಿಳಿಸಿದ್ದಾರೆ.

ಜಾಮೀನು ಅರ್ಜಿ ಯಾವಾಗ ಹಾಕಿಕೊಳ್ಳಬೇಕು ಎನ್ನುವುದಕ್ಕೆ ಕಾಯುತ್ತಿದ್ದೇವೆ. ಅದರ ಬಗ್ಗೆಯೇ ಚರ್ಚೆ ನಡೆಸಲು ಭೇಟಿ ಮಾಡಿದ್ದೆ. ಅವರಿಗೆ ಪ್ರಕರಣದ ಬಗ್ಗೆಯೇ ಏನೂ ತಿಳಿದಿಲ್ಲ. ಅವರಿಗೆ ಶಾಕ್ ಆಗಿದೆ. ಯಾವಾಗಲೂ ತಪ್ಪು ಮಾಡಿರಲಿಲ್ಲ, ಈ ರೀತಿಯಾದಾಗ ನೋವಾಗುತ್ತೆ. ತಪ್ಪು ಮಾಡಿರುವವರಿಗಾದರೆ ಅದರ ಅರಿವಿರುತ್ತದೆ. ನಾನು ಏನೂ ಮಾಡಿಲ್ಲ, ನನಗೆ ಯಾಕೆ ಇಂತ ಪರಿಸ್ಥಿತಿ ಎಂದು ಶಾಕ್‌ನಲ್ಲಿದ್ದಾರೆ. ಜುಲೈ 4ರ ಬಳಿಕ ಜಾಮೀನು ಅರ್ಜಿ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ | Assault Case: ಸಾಲ ವಾಪಸ್‌ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ ಬಿಜೆಪಿ ಕಾರ್ಯಕರ್ತ

ದರ್ಶನ್ ಭೇಟಿಯಾಗಲು ಅಭಿಮಾನಿಯ ರಂಪಾಟ

ದರ್ಶನ್ ಭೇಟಿ ಮಾಡಬೇಕೆಂದು ಅಭಿಮಾನಿಯೊಬ್ಬ ರಂಪಾಟವಾಡಿರುವುದು ಕಂಡುಬಂದಿದೆ. ಜೈಲ್ ಚೆಕ್ ಪೋಸ್ಟ್ ಬಳಿ ರಸ್ತೆಯಲ್ಲಿ ಕುಳಿತ ಅಭಿಮಾನಿ, ದರ್ಶನ್ ನೋಡಬೇಕೆಂದು ಕಣ್ಣೀರು ಹಾಕಿದ್ದಾನೆ. ಮದ್ಯಪಾನ ಮಾಡಿ ಬಂದಿದ್ದ ವ್ಯಕ್ತಿ, ದರ್ಶನ್ ನೋಡಲೇ ಬೇಕು ಎಂದು ಪಟ್ಟು ಹಿಡಿದಿದ್ದರಿಂದ ಆತನನ್ನು ಮನವೊಲಿಸಲು ಪೊಲೀಸರು ಹೈರಾಣಾದರು.

Continue Reading
Advertisement
Indira Gandhi's Emergency
ದೇಶ3 mins ago

Lalu Prasad Yadav: “ಇಂದಿರಾ ಗಾಂಧಿ ನಮ್ಮನ್ನು ಜೈಲಿಗಟ್ಟಿದರು, ಆದರೆ…” ಎಮರ್ಜೆನ್ಸಿ ಬಗ್ಗೆ ಲಾಲೂ ಹೇಳಿದ್ದೇನು?

IPS officers promoted
ಪ್ರಮುಖ ಸುದ್ದಿ24 mins ago

IPS officers promoted: ಡಿಜಿಪಿಯಾಗಿ ಮಾಲಿನಿ ಕೃಷ್ಣಮೂರ್ತಿ, ಪ್ರಣಬ್ ಮೊಹಂತಿಗೆ ಮುಂಬಡ್ತಿ

maya neelakantan
ವಿದೇಶ43 mins ago

Maya Neelakantan: ಅಮೆರಿಕವನ್ನು ಹುಚ್ಚೆಬ್ಬಿಸಿದ 10 ವರ್ಷದ ಭಾರತೀಯ ಗಿಟಾರ್‌ ಬಾಲೆ ಮಾಯಾ ನೀಲಕಂಠನ್‌, ಯಾರೀಕೆ?

Back Benchers film in the Censor
ಕರ್ನಾಟಕ47 mins ago

Kannada New Movie: ಸೆನ್ಸಾರ್ ಅಂಗಳದಲ್ಲಿ ‘ಬ್ಯಾಕ್ ಬೆಂಚರ್ಸ್’ ಸಿನಿಮಾ!

Producer who gifted an expensive car to the director of Radhika Kumaraswamy starrer Ajagrata
ಕರ್ನಾಟಕ50 mins ago

Kannada New Movie: ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಅಜಾಗ್ರತ’ ಸಿನಿಮಾ ಡೈರೆಕ್ಟರ್‌ಗೆ ನಿರ್ಮಾಪಕರಿಂದ ದುಬಾರಿ ಕಾರ್‌ ಗಿಫ್ಟ್‌!

T20 World Cup final
ಕ್ರಿಕೆಟ್1 hour ago

T20 World Cup Final : ಟಾಸ್​ ಗೆದ್ದವರು ಮ್ಯಾಚ್​ ಗೆಲ್ತಾರೆ; ವಿಶ್ವ ಕಪ್​ ಫೈನಲ್ ಪಂದ್ಯದ ಇತಿಹಾಸ ಹೀಗಿದೆ

Weight Loss Tips
ಆಹಾರ/ಅಡುಗೆ1 hour ago

Weight Loss Tips: ಕಪ್ಪು ಬಣ್ಣದ ಆಹಾರಗಳಿಂದ ತೂಕ ಇಳಿಸಿ!

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಫೈನಲ್ ಪಂದ್ಯ ಆರಂಭಕ್ಕೆ ಮೊದಲೇ ವಿಜೇತರನ್ನು ಘೋಷಿಸಿದ ಟಾಮ್ ಮೂಡಿ

Actor Darshan
ಬೆಂಗಳೂರು2 hours ago

Actor Darshan: ಜೈಲಲ್ಲಿ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ, ಪ್ರೇಮ್ ದಂಪತಿ

Special Status
ದೇಶ2 hours ago

Special Status: ಎನ್‌ಡಿಎಗೆ ಮೈತ್ರಿಗೆ ಮೊದಲ ಅಗ್ನಿ ಪರೀಕ್ಷೆ; ವಿಶೇಷ ಸ್ಥಾನಮಾನಕ್ಕೆ ಜೆಡಿಯು ನಿರ್ಣಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ5 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ11 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ1 day ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌