MLC Election: ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ವಿಜಯನಗರ ಜಿಲ್ಲೆಯಲ್ಲಿ ಜೂ.1ರಿಂದ ನಿಷೇಧಾಜ್ಞೆ ಜಾರಿ - Vistara News

ವಿಜಯನಗರ

MLC Election: ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ವಿಜಯನಗರ ಜಿಲ್ಲೆಯಲ್ಲಿ ಜೂ.1ರಿಂದ ನಿಷೇಧಾಜ್ಞೆ ಜಾರಿ

MLC Election: ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ಜೂನ್ 01ರ ಸಂಜೆ 06 ಗಂಟೆಯಿಂದ ಜೂ. 03ರ ಮಧ್ಯರಾತ್ರಿಯವರೆಗೆ ವಿಜಯನಗರ ಜಿಲ್ಲೆಯಾದ್ಯಂತ ಸಿಆರ್‌ಪಿಸಿ 1973ರ ಕಲಂ 144ರಡಿ ಹಾಗೂ ಇತರೆ ಜಾರಿಯಲ್ಲಿರುವ ಕಾನೂನು ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ, ಕೆಲವು ಷರತ್ತುಗಳನ್ನು ವಿಧಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

VISTARANEWS.COM


on

MLC Election North East Graduates Constituency Election Prohibitory order imposed in Vijayanagar district from June 1
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸಪೇಟೆ: ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರ ದ್ವೈವಾರ್ಷಿಕ ಚುನಾವಣೆಯನ್ನು (MLC Election) ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ಜೂನ್ 01ರ ಸಂಜೆ 06 ಗಂಟೆಯಿಂದ ಜೂ. 03ರ ಮಧ್ಯರಾತ್ರಿಯವರೆಗೆ ವಿಜಯನಗರ ಜಿಲ್ಲೆಯಾದ್ಯಂತ ಸಿಆರ್‌ಪಿಸಿ 1973ರ ಕಲಂ 144ರಡಿ ಹಾಗೂ ಇತರೆ ಜಾರಿಯಲ್ಲಿರುವ ಕಾನೂನು ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ, ಕೆಲವು ಷರತ್ತುಗಳನ್ನು ವಿಧಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ವಿಜಯನಗರ ಜಿಲ್ಲೆಯ ವ್ಯಾಪ್ತಿಯಲ್ಲಿ 05ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ-ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ ಬೆಂಬಲಿಗರು ಸೇರಿ 05 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರತಕ್ಕದ್ದಲ್ಲ., ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯೊಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ.

ಇದನ್ನೂ ಓದಿ: Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಜಿರಾಕ್ಸ್ ಅಂಗಡಿ, ಬುಕ್‌ಸ್ಟಾಲ್, ಸೈಬರ್‌ ಕೆಫೆಗಳನ್ನು ನಿರ್ಬಂಧಿಸಿದೆ. ಕಲ್ಲುಗಳನ್ನು, ಕಾರ ಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಹಾಗೂ ಯಾವುದೇ ದಾಹಕ ವಸ್ತುಗಳನ್ನು ಹಾಗೂ ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಮನುಷ್ಯ ರೂಪದ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಎಲ್ಲಾ ಮತಗಟ್ಟೆ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಸ್ಥಳ ನಿರ್ಬಂಧಿತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ, ಧ್ವನಿವರ್ಧಕ ಬಳಕೆ ಮುಂತಾದವುಗಳನ್ನು ನಿಷೇಧಿಸಿದೆ ಹಾಗೂ ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ಪಕ್ಷದ ಪ್ರಚಾರ, ಮತದ ಓಲೈಕೆ ಮಾಡುವಂತಿಲ್ಲ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

ಶವಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಆಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಮಾರ್ಗಸೂಚಿಗಳನ್ನು ನಿಯಮಗಳನ್ನು ಪಾಲಿಸುವುದು., ಚುನಾವಣಾ ಕಾರ್ಯದಲ್ಲಿ ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆದ ಅಧಿಕಾರಿಗಳು ಸಿಬ್ಬಂದಿ ಹೊರತುಪಡಿಸಿ ಮತಗಟ್ಟೆ ಕೇಂದ್ರಗಳ ಸುತ್ತಲು 100 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್, ಕಾರ್ಡ್ಲೆಸ್ ಪೋನ್, ಅಥವಾ ಇನ್ನಿತರ ಎಲೆಕ್ಟ್ರಾನಿಕ್ಸ್ ಉಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 126ರ ಷರತ್ತುಗಳನ್ನು ಪಾಲಿಸತಕ್ಕದ್ದು., ಮತಗಟ್ಟೆಗಳ ಸುತ್ತಲೂ 100 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್ ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ.

ಇದನ್ನೂ ಓದಿ: Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

ಚುನಾವಣೆಯ ಮತದಾನವು ಅಂತ್ಯಗೊಳ್ಳುವ 48 ಗಂಟೆಗಳ ಪೂರ್ವದಲ್ಲಿ ಚುನಾವಣೆ ಪ್ರಚಾರ ಹಾಗೂ ಚುನಾವಣೆಗೆ ಸಂಬಂಧಿಸಿದ ಯಾವುದೇ ರೀತಿಯ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಈ ಸಮಯದಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿಗಳು ಬಾಗಿಲಿನಿಂದ ಬಾಗಿಲಿಗೆ ಹೋಗಿ ಮತಯಾಚಿಸುವ ಸಲುವಾಗಿ ಮನೆಯಿಂದ ಮನೆಗೆ ಹೋಗುವುದು ನಿರ್ಬಂಧಿಸಿರುವುದಿಲ್ಲ. ಆದರೆ 5 ಜನರಿಗಿಂತ ಹೆಚ್ಚಿನ ಜನರು ಗುಂಪು ಕೂಡಿಕೊಂಡು ಮನೆಯಿಂದ ಮನೆಗೆ ಹೋಗಿ ಮತಯಾಚಿಸುವುದು ನಿರ್ಬಂಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು. ಈ ಆದೇಶವು ಮತದಾನ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಇಂದು ಧ್ವಜಾರೋಹಣ ಆಯ್ತು, ನಾಳೆ ವರಮಹಾಲಕ್ಷ್ಮಿ ಹಬ್ಬಕ್ಕೂ ಮಳೆ ಅಡ್ಡಿ; ಬೆಂಗಳೂರು ಸೇರಿ ಕರಾವಳಿ, ಮಲೆನಾಡಿಗೆ ಅಲರ್ಟ್‌

Karnataka Weather Forecast: ವರಮಹಾಲಕ್ಷ್ಮಿ ಹಬ್ಬದ (Varamahalakshim Fest) ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಎಲ್ಲ ಸಾಧ್ಯತೆಯೂ ಇದೆ. ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka Weather Forecast
ಜಲಾವೃತಗೊಂಡ ಸರ್ಕಾರಿ ಪ್ರಾಥಮಿಕ ಶಾಲೆ.. ನಿಂತ ನೀರಲ್ಲೇ ಧ್ವಜಾರೋಹಣ ಮಾಡಿದ ಮಕ್ಕಳು
Koo

ಚಿಕ್ಕೋಡಿ: ಗುರುವಾರ ಸಂಜೆ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಮಳೆ (Rain news) ಅಬ್ಬರ ಜೋರಾಗಿತ್ತು. ಚಿಕ್ಕೋಡಿ, ನಿಪ್ಪಾಣಿ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಕಳೆದ ಒಂದು ವಾರದಿಂದ ವಿರಾಮ ನೀಡಿದ್ದ ಮಳೆ (karnataka weather Forecast) ಅಬ್ಬರಿಸಿತ್ತು.

ಶಾಲಾ ಆವರಣದಲ್ಲಿ ನಿಂತ ನೀರು

ರಾತ್ರಿ ಸುರಿದ ಮಳೆಯು ಅವಾಂತರವೇ ಸೃಷ್ಟಿಯಾಗಿದೆ. ಶಾಲಾ ಆವರಣದಲ್ಲಿ ನಿಂತ ನೀರಲ್ಲೇ ವಿದ್ಯಾರ್ಥಿಗಳು ಧ್ವಜಾರೋಹಣ ನೆರವೇರಿಸಿದರು. ಬಾಗಲಕೋಟೆಯ ಜಮಖಂಡಿಯ ಲಿಂಗದಕಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.

ಇತ್ತ ನಿನ್ನೆ ಬುಧವಾರ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಬೆಳೆಗಳು ಜಲಾವೃತಗೊಂಡಿತ್ತು. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗುಂಡಾ ಗ್ರಾಮ ಹೊಲಗಳಿಗೆ ಹಳ್ಳದ ನೀರು ನುಗ್ಗಿತ್ತು. ರೈತ ಬಸವರಾಜ್ ಎಂಬುವವರಿಗೆ ಸೇರಿದ ನಾಲ್ಕೈದು ಎಕರೆ ಜಮೀನು ಜಲಾವೃತಗೊಂಡಿದೆ. ಹಿರೆಹಳ್ಳ ಒಡೆದು ಜಮೀನಿಗೆ ನೀರು ನುಗ್ಗಿದ ಪರಿಣಾಮ ಬೋರ್ ವೆಲ್ ಪೈಪ್ ಗಳು ಸೇರಿ ಮೆಕ್ಕೆಜೋಳ ಬೆಳೆ ಕೊಚ್ಚಿ ಹೋಗಿದೆ. ಮಳೆಗಾಲದಲ್ಲಿ ಹಳ್ಳದ ಮೂಲಕ ಗಣಿ ತ್ಯಾಜ್ಯ ಸಹ ಹರಿದು ಬಂದು ಜಮೀನುಗಳಲ್ಲಿ ಶೇಕರಣೆ ಆಗುತ್ತಿದೆ. ಇದರಿಂದಾಗಿ ಭೂಮಿ ಬೆಳೆ ಬೆಳೆಯಲು ಯೋಗ್ಯ ಇಲ್ಲದಂತಾಗಿದೆ.

ಇತ್ತ ಭಾರಿ ಮಳೆಯಿಂದ ನಾಗಲಾಪುರ ಹಳ್ಳ ಮೈದುಂಬಿ ಹರಿಯುತ್ತಿದ್ದು, ನಾಗಲಾಪೂರ- ಬ್ಯಾಲಕುಂದಿ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಿಂದ 5 ಹಳ್ಳಿಗಳ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಸೇತುವೆ ಮೇಲ್ಭಾಗದಲ್ಲಿ 7 ಅಡಿಗಳಷ್ಟು ಹರಿಯುತ್ತಿರುವ ನೀರಿನಿಂದಾಗಿ ನಾಗಲಾಪುರ, ನಾಗಲಾಪುರ ತಾಂಡಾ, ಬ್ಯಾಲಕುಂದಿ, ಗೊಲ್ಲರಹಳ್ಳಿ ಹಾಗೂ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

ಇದನ್ನೂ ಓದಿ: Electric shock : ಕರೆಂಟ್‌ ಶಾಕ್‌ನಿಂದ ಎಂಜಿನಿಯರ್‌ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಈ ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆ

ಶುಕ್ರವಾರದಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾಸನ, ಬಳ್ಳಾರಿ, ತುಮಕೂರು, ಮೈಸೂರು, ಕೊಡಗು ಜಿಲ್ಲೆಗಳಲ್ಲೂ ಪ್ರತ್ಯೇಕವಾಗಿ ಭಾರಿ ವರ್ಷಾಧಾರೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Tungabhadra Dam: ತುಂಗಭದ್ರಾ ಡ್ಯಾಂಗೆ ತಾತ್ಕಾಲಿಕ ಗೇಟ್ ಅಳವಡಿಕೆ ಕಾರ್ಯ ಚುರುಕು

Tungabhadra Dam: ಹೊಸಪೇಟೆಯ ತುಂಗಭದ್ರಾ ಜಲಾಶಯದಲ್ಲಿ ಮುರಿದುಹೋಗಿರುವ 19ನೇ ನಂಬರ್‌ ಗೇಟ್ ಅನ್ನು ಮತ್ತೆ ಅಳವಡಿಸುವ ಕಾರ್ಯ ಆರಂಭವಾಗಿದೆ. ಇದೀಗ ಕ್ರೇನ್ ಮೂಲಕ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅನ್ನು ಅಳವಡಿಸಲು ಜಿಂದಾಲ್ ಎಂಜಿನಿಯರ್‌ಗಳು ಮುಂದಾಗಿದ್ದಾರೆ. 5 ಎಲಿಮೆಂಟ್‌ಗಳ ಜೋಡಿಸಲು ಯೋಜನೆ ರೂಪಿಸಲಾಗಿದ್ದು, ತಲಾ ಒಂದು ಎಲಿಮೆಂಟ್ ಅಳವಡಿಕೆಯಿಂದ 25 ಟಿಎಂಸಿ ನೀರು ತಡೆಯಲು ಸಾಧ್ಯವಿದೆ.

VISTARANEWS.COM


on

Tungabhadra Dam
Koo

ವಿಜಯನಗರ: ಹೊಸಪೇಟೆಯ ತುಂಗಭದ್ರಾ ಜಲಾಶಯದಲ್ಲಿ (Tungabhadra Dam) ಮುರಿದುಹೋಗಿರುವ 19ನೇ ನಂಬರ್‌ ಗೇಟ್ ಅನ್ನು ಮತ್ತೆ ಅಳವಡಿಸುವ ಕಾರ್ಯ ಡ್ಯಾಂ ಸುರಕ್ಷತಾ ತಜ್ಞ ಕನ್ನಯ್ಯ ನಾಯ್ಡು ನೇತೃತ್ವದಲ್ಲಿ ಆರಂಭವಾಗಿದೆ. ಇದೀಗ ಕ್ರೇನ್ ಮೂಲಕ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅನ್ನು ಅಳವಡಿಸಲು ಜಿಂದಾಲ್ ಎಂಜಿನಿಯರ್‌ಗಳು ಮುಂದಾಗಿದ್ದಾರೆ.

5 ಎಲಿಮೆಂಟ್‌ಗಳ ಜೋಡಿಸಲು ಯೋಜನೆ ರೂಪಿಸಲಾಗಿದ್ದು, ತಲಾ ಒಂದು ಎಲಿಮೆಂಟ್ ಅಳವಡಿಕೆಯಿಂದ 25 ಟಿಎಂಸಿ ನೀರು ತಡೆಯಲು ಸಾಧ್ಯವಿದೆ. ಈ ಸಂಬಂಧ ನೂರಾರು ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾರೆ. ಇಂದು ಮಳೆ ಕೊಂಚ ಬಿಡುವು ನೀಡಿದ್ದು, ಕಾಮಗಾರಿಗೆ ಅನುಕೂಲವಾಗಿ ಪರಿಣಮಿಸಿದೆ.

13ರಿಂದ 14 ಟನ್ ತೂಕದ ತಾತ್ಕಾಲಿಕ ಗೇಟ್ ಹಾಕಿ ಡ್ಯಾಂ ನೀರು ತಡೆಯುವ ಕಾರ್ಯ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ತುಂಡಾಗಿರುವ ಗೇಟ್ ಬಳಿ ಇರುವ ಚೈನ್ ಲಿಂಕ್ ಜೋಡನೆಯನ್ನು ತಂತ್ರಜ್ಞರು ಆರಂಭಿಸಿದ್ದಾರೆ. ಗೇಟ್‌ನಲ್ಲಿ ಸಿಲುಕಿದ್ದ ಕಟ್ ಆಗಿರೋ ಚೈನ್ ಲಿಂಕ್ ತೆರವು ಕಾರ್ಯವೂ ಪ್ರಗತಿಯಲ್ಲಿದೆ. ಡ್ಯಾಂ ಸಿಬ್ಬಂದಿ ಕ್ರೇನ್ ಮೂಲಕ ಹಳೆ ಚೈನ್ ಲಿಂಕ್ ತೆರವು ಮಾಡಲು ಮಂದಾಗಿದ್ದಾರೆ.

ತಪ್ಪಿದ ದುರಂತ

ಜಲಾಶಯದ ಮೇಲ್ಬಾಗಕ್ಕೆ ಗುರುವಾರ ಗೇಟ್ ರವಾನಿಸಲಾಗುತ್ತಿದ್ದು, ಟ್ರಕ್‌ನಿಂದ ಪ್ಲೇಟ್‌ಗಳನ್ನು ಇಳಿಸುವಾಗ ಒಮ್ಮೆ ಬ್ಯಾಲೆನ್ಸ್ ತಪ್ಪಿತ್ತು. ಅದೃಷ್ಟವಶಾತ್ ಯಾವುದೇ ಸಮಸ್ಯೆಯಾಗಲಿಲ್ಲ. ನಂತರ ಕ್ರೇನ್ ಮೂಲಕ ಬೆಲ್ಟ್ ಹಾಕಿ ಕಬ್ಬಿಣ ಪೇಲ್ಟ್‌ಗಳನ್ನು ಜಲಾಶಯದ ಮೇಲ್ಭಾಗಕ್ಕೆ ಸಾಗಿಸಲಾಯಿತು.

ಪ್ರವೇಶವಿಲ್ಲ

78ನೇ ಸ್ವಾತಂತ್ರ್ಯ ದಿನೋತ್ಸವದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯ ವೀಕ್ಷಣೆಗೆ ಬಂದ ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಜಲಾಶಯ ಗೇಟ್ ಕಿತ್ತು ಹೋಗಿರುವುದರಿಂದ ಮತ್ತು ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಜಲಾಶಯ ವೀಕ್ಷಣೆಗೆ ಬಂದವರು ರಾಷ್ಟ್ರೀಯ ಹೆದ್ದಾರಿ ಮೇಲೆ ಕಿಕ್ಕಿರಿದು ಸೇರಿದ್ದಾರೆ. ಕಾರು, ಬೈಕ್ ಕಾಲ್ನಡಿಗೆ ಮೂಲಕ ಬಂದ ಪ್ರವಾಸಿಗರು ರಸ್ತೆ ಬದಿ ನಿಂತೇ ಜಲ ವೈಭವವನ್ನು ಕಣ್ತುಂಬಿ ಕೊಳ್ಳುತ್ತಿದ್ದಾರೆ.

ಸಾವಿರಾರು ಸಂಖ್ಯೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಪ್ರವಾಸಿಗರು ನಿಂತಿರುವ ಕಾರಣ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ. ವಾಹನಗಳು ವೇಗವಾಗಿ ಬರುತ್ತಿರುವುದರಿಂದ ಅಪಘಾತ ಸಂಭವಿಸುವ ಸಾಧ್ಯತೆಯೂ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರವಾಸಿಗರನ್ನ ನಿಯಂತ್ರಿಸಲು ಪೊಲೀಸರು ಹರ ಸಾಹಸ ಪಡುವಂತಾಗಿದೆ.

ದುರ್ದೈವದ ಸಂಗತಿ

ರಾಯಚೂರು: ತುಂಗಭದ್ರಾ ಡ್ಯಾಂ 19ನೇ ಕ್ರಸ್ಟ್‌ ಗೇಟ್‌ ಕಟ್ ಆಗಿದ್ದು ಬಹಳ ದುರ್ದೈವದ ವಿಷಯ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ರಾಯಚೂರಿನಲ್ಲಿ ಹೇಳಿದ್ದಾರೆ. ʼʼಈ ಬಾರಿ ನಮ್ಮ ಡ್ಯಾಂ ಸಂಪೂರ್ಣವಾಗಿ ತುಂಬಿತ್ತು. ಆದರೆ ಗೇಟ್ ತುಂಡಾಗಿರೋದರಿಂದ ನೀರನ್ನ ಬೀಡಬೇಕಾಗಿದೆ. ಆ ಗೇಟ್‌ನ ರಿಪೇರಿ ಕಾರ್ಯ ಕೂಡ ನಡೆಯುತ್ತಿದೆ‌. ನಾನು ಕೂಡ ಅಲ್ಲಿಯೇ ಹೋಗಿ ಮಾರ್ನಿಟರ್ ಮಾಡುತ್ತೇನೆʼʼ ಎಂದು ತಿಳಿಸಿದ್ದಾರೆ.

ʼʼಹವಾಮಾನ ಇಲಾಖೆಯ ಪ್ರಕಾರ ಆಗಸ್ಟ್‌ ಕೊನೆಯ ವಾರದಲ್ಲಿ ಮಳೆಯಾಗುವ ಅಂದಾಜಿದೆ. ಅದರಿಂದ ಮತ್ತೆ ನಮ್ಮ ಡ್ಯಾಂ ತುಂಬುತ್ತೆ ಅನ್ನೋ ನೀರಿಕ್ಷೆಯಿದೆ. ಸದ್ಯಕ್ಕೆ ರೈತರಿಗೆ ಆತಂಕ ಕಾಡೋದು ಸಹಜ. ಮಳೆಯಾದ್ರೆ ಮತ್ತೊಮ್ಮೆ ಡ್ಯಾಂ ತುಂಬುತ್ತೆ ಎನ್ನುವ ನಿರೀಕ್ಷೆ ಇಟ್ಟುಕೊಳ್ಳೋಣ. ಗೇಟ್‌ ತುಂಡಾಗಲು ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೇ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ಬಳಿಕ ಅವರ ಮೇಲೂ ಕ್ರಮ ಕೈಗೊಳ್ಳಲಾಗುತ್ತದೆ. ಸರ್ಕಾರ ಇದರ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. 105 ಟಿಎಂಸಿ ತುಂಬಿರುವ ಡ್ಯಾಂನಿಂದ ಅರ್ಧ ನೀರು ಖಾಲಿ ಮಾಡಬೇಕಿದ್ದು, ಈ ಬಗ್ಗೆ ನಮಗೂ ಬೇಸರವಿದೆʼʼ ಎಂದು ಹೇಳಿದ್ದಾರೆ.

ಇದನ್ನೂ ಓದಿ: Tungabhadra Dam: ನೀರಿನ ರಭಸದ ನಡುವೆಯೇ ಇಂದಿನಿಂದ ಗೇಟ್‌ ಅಳವಡಿಸುವ ಕಾರ್ಯ; ತಜ್ಞ ಕನ್ನಯ್ಯ ನಾಯ್ಡು ಸಾಹಸ

Continue Reading

ಪ್ರಮುಖ ಸುದ್ದಿ

Tungabhadra Dam: ನೀರಿನ ರಭಸದ ನಡುವೆಯೇ ಇಂದಿನಿಂದ ಗೇಟ್‌ ಅಳವಡಿಸುವ ಕಾರ್ಯ; ತಜ್ಞ ಕನ್ನಯ್ಯ ನಾಯ್ಡು ಸಾಹಸ

Tungabhadra Dam: ಕನ್ನಯ್ಯ ನಾಯ್ಡು ಅವರ ಪ್ರಯತ್ನದಿಂದ ನೀರು ಉಳಿಯುವ ಭರವಸೆ ಮೂಡಿದೆ. ಪರಿಣಿತರಾದ ಕನ್ನಯ್ಯ ನಾಯ್ಡು ಅವರಿಂದ ನೀರು ಉಳಿಸುವ ಪ್ರಯತ್ನ ನಡೆದಿದ್ದು, ಬಳ್ಳಾರಿಯ ಜಿಂದಾಲ್‌ನಿಂದ ಬೃಹತ್‌ ಯಂತ್ರಗಳು ಬಂದಿವೆ. ಹೊಸಪೇಟೆಯ ನಾರಾಯಣ ಎಂಜಿನಿಯರ್ಸ್, ಹೊಸಳ್ಳಿಯ ಹಮೀದ್ ಎಂಜನಿಯರ್ಸ್‌ಗಳಲ್ಲಿ ಗೇಟ್‌ ರೆಡಿ ಮಾಡಲಾಗಿದೆ.

VISTARANEWS.COM


on

cm siddaramaiah tungabhadra dam
Koo

ವಿಜಯನಗರ: ಹೊಸಪೇಟೆಯ ತುಂಗಭದ್ರಾ ಜಲಾಶಯದಲ್ಲಿ (Tungabhadra Dam) ಮುರಿದುಹೋಗಿರುವ 19ನೇ ನಂಬರ್‌ ಗೇಟ್ (19 gate crash) ಅನ್ನು ಮತ್ತೆ ಅಳವಡಿಸುವ ಕಾರ್ಯ ಇಂದಿನಿಂದಲೇ ಆರಂಭವಾಗುತ್ತಿದೆ. ಡ್ಯಾಂ ಇಂಜಿನಿಯರ್ ಕನ್ನಯ್ಯ ನಾಯ್ಡು ಅವರ ತಂಡ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ನೀರು ಇರುವಾಗಲೇ ಗೇಟ್ ಅಳವಡಿಸುವ ಸಾಧ್ಯಾಸಾಧ್ಯತೆಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ನಿನ್ನೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು.

ನೀರು ಇರುವಾಗ ಶಟರ್‌ಗಳನ್ನು ಹೇಗೆ ಸೆಟ್ ಮಾಡಬೇಕು ಎಂಬುದರ ಬಗ್ಗೆ ಚರ್ಚಿಸಿರುವ ಕನ್ನಯ್ಯ ನಾಯ್ಡು ಆ್ಯಂಡ್ ಟೀಂ 20 ಅಡಿ ಅಗಲ, 12 ಅಡಿ ಉದ್ದದ ಕಟ್ ಮಾಡಿ ರೆಡಿ ಇರಿಸಿಕೊಂಡಿದೆ. ಈಗ ಗೇಟ್ ಮುಚ್ಚಿದರೆ ಜಲಾಶಯದಲ್ಲಿ ಸಾಕಷ್ಟು ನೀರು ಉಳಿಸಿಕೊಳ್ಳಬಹುದು. ಇಲ್ಲವಾದರೆ ಸುಮಾರು 60 ಟಿಎಂಸಿಯಷ್ಟು ನೀರು ವ್ಯರ್ಥವಾಗಿ ಹರಿದುಹೋಗಲಿದೆ.

ಕನ್ನಯ್ಯ ನಾಯ್ಡು ಅವರ ಪ್ರಯತ್ನದಿಂದ ನೀರು ಉಳಿಯುವ ಭರವಸೆ ಮೂಡಿದೆ. ಪರಿಣಿತರಾದ ಕನ್ನಯ್ಯ ನಾಯ್ಡು ಅವರಿಂದ ನೀರು ಉಳಿಸುವ ಪ್ರಯತ್ನ ನಡೆದಿದ್ದು, ಬಳ್ಳಾರಿಯ ಜಿಂದಾಲ್‌ನಿಂದ ಬೃಹತ್‌ ಯಂತ್ರಗಳು ಬಂದಿವೆ. ಹೊಸಪೇಟೆಯ ನಾರಾಯಣ ಎಂಜಿನಿಯರ್ಸ್, ಹೊಸಳ್ಳಿಯ ಹಮೀದ್ ಎಂಜನಿಯರ್ಸ್‌ಗಳಲ್ಲಿ ಗೇಟ್‌ ರೆಡಿ ಮಾಡಲಾಗಿದೆ.

ಕನ್ನಯ್ಯ ನಾಯ್ಡು ಹೇಳಿದ್ದೇನು?

ಕ್ರೆಸ್ಟ್‌ ಪರಿಣತ ಎಂದೇ ಖ್ಯಾತಿ ಪಡೆದಿರುವ ಹಿರಿಯ ತಜ್ಞ ಕನ್ನಯ್ಯ ನಾಯ್ಡು ಸ್ಥಳದಲ್ಲಿದ್ದು, ಒಟ್ಟಾರೆ ಕಾರ್ಯಾಚರಣೆಯ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದಾರೆ. ಸಿಎಂ ಆಗಮನಕ್ಕೂ ಮುನ್ನವೇ ಜಲಾಶಯಕ್ಕೆ ಆಗಮಿಸಿದ್ದ ಕನ್ನಯ್ಯ ನೇತೃತ್ವದ ತಜ್ಞರ ತಂಡ ಅದರ ಪರಿಶೀಲನೆ ನಡೆಸಿತ್ತು.

ಕ್ರೆಸ್ಟ್ ತಜ್ಞ ಅಂತಲೇ ಪ್ರಖ್ಯಾತಿ ಹೊಂದಿರೋ ಕನ್ಹಯ್ಯ ನಾಯ್ಡು ಹೇಳಿರುವ ಪ್ರಕಾರ, ಒಂದೇ ಬಾರಿ ಇಷ್ಟೊಂದು ದೊಡ್ಡ ಪ್ರಮಾಣದ ನೀರು ನಿಲ್ಲಿಸುವುದು ಕಷ್ಟ. 48 ಟನ್ ಭಾರದ ಗೇಟ್ ಒಂದೇ ಬಾರಿಗೆ ಇಳಿಸುವುದು ಕಷ್ಟ. ಒಟ್ಟು ಐವತ್ತು ಟನ್ ಭಾರದ ಕಬ್ಬಿಣದ ಗೇಟ್‌ನಲ್ಲಿ ಐದು ಪೀಸ್‌ಗಳನ್ನು ಒಂದೊಂದಾಗಿ ಇಳಿಸಬೇಕು. ಮೂರು ನಾಲ್ಕು ಕಡೆ ಗೇಟ್ ನಿರ್ಮಾಣವಾಗುತ್ತಿದೆ.

ನಾಳೆಯಿಂದ ಒಂದೊಂದೇ ಪೀಸ್‌ಗಳನ್ನು ಕೂರಿಸುತ್ತೇವೆ. ಭಗವಂತನ ಮೇಲೆ ಭಾರ ಹಾಕಿ ಕೆಲಸ ಪ್ರಾರಂಭ ಮಾಡುತ್ತೇವೆ. ನೀರು ಉಳಿಸುವ ಎಲ್ಲಾ ಪ್ರಯತ್ನ ಮಾಡುತ್ತೇವೆ. ಗೇಟ್ ಆಯುಷ್ಯ ಸುಮಾರು 40 ವರ್ಷ ಇರುತ್ತದೆ. ಇದೀಗ ಜಲಾಶಯಕ್ಕೆ 70 ವರ್ಷವಾಗಿದೆ. ಉತ್ತಮವಾಗಿ ಎಲ್ಲ ರೀತಿಯ ಮೆಂಟೆನೆನ್ಸ್ ಮಾಡಿದ್ದೇವೆ. ಇದೀಗ ಹೊಸ ಪ್ರಯತ್ನ ಮಾಡಿ ನೀರು ನಿಲ್ಲಿಸುತ್ತೇವೆ. ಇದು ತಾತ್ಕಾಲಿಕ. ನೀರು ಕಡಿಮೆಯಾದ ಮೇಲೆ ‌ಮತ್ತೊಮ್ಮೆ ಗೇಟ್ ಕೂಡಿಸಬೇಕು ಎಂದು ಕನ್ನಯ್ಯ ನಿನ್ನೆ ತಿಳಿಸಿದ್ದರು.

ಸಿಎಂ ಹೇಳಿದ್ದೇನು?

“70 ವರ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಗೇಟ್ ಒಡೆದಿದೆ. ನೀರಿನ ರಭಸಕ್ಕೆ ಗೇಟ್ ಕೊಚ್ಚಿ ಹೋಗಿದೆ. ಇದನ್ನು ಆಗಲೇ ತಯಾರು ಮಾಡಲಾಗ್ತಿದೆ. ನಾಳೆಯಿಂದ ಗೇಟ್ ಕೂಡಿಸೋ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ. ಕನ್ನಯ್ಯ ನಾಯ್ಡು ಮತ್ತವರ ತಂಡದಿಂದ ಕಾರ್ಯ ನಡೆಯುತ್ತಿದೆ. ಬಹಳ ಅನುಭವಿ ಅವರು, ಅವರ ನೇತೃತ್ವದಲ್ಲಿ ನಾಳೆಯಿಂದ ತಾತ್ಕಾಲಿಕ ಗೇಟ್ ಕೂಡಿಸಲಾಗ್ತದೆ. ತಜ್ಞರ ಪ್ರಕಾರ 50 ವರ್ಷಕ್ಕೊಮ್ಮೆ ಗೇಟ್ ಬದಲಿಸಬೇಕು. ಇನ್ಮುಂದೆ ತಜ್ಞರು ಹೇಳಿದಂತೆ, ಜಲಾಶಯ ನಿರ್ವಹಣೆ ಮಾಡಲಾಗುತ್ತದೆ” ಎಂದು ಸಿಎಂ ಸಿದ್ದರಾಮಯ್ಯ ನಿನ್ನೆ ಭೇಟಿಯ ಬಳಿಕ ಹೇಳಿದ್ದರು.

ಇದನ್ನೂ ಓದಿ: CM Siddaramaiah: ಬೆಂಗಳೂರಿನಲ್ಲಿ ಸಿಎಂ‌ ಸಿದ್ದರಾಮಯ್ಯಗೆ ಟೆನ್ಷನ್; ದೆಹಲಿಯಲ್ಲಿ ಡಿಕೆ‌ ಶಿವಕುಮಾರ್ ಲಾಬಿ

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಅಬ್ಬರಿಸಲಿದೆ ಗುಡುಗು ಸಹಿತ ಮಳೆ

Rain News : ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು ಒಳನಾಡಿನಲ್ಲಿ ಸಾಮಾನ್ಯವಾಗಿದ್ದು, ಕರಾವಳಿ ಭಾಗದಲ್ಲಿ ದುರ್ಬಲಗೊಂಡಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ತಿಳಿಸಿದೆ. ಈ ದಿನ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದ ಸುತ್ತಮುತ್ತಲೂ ಮಧ್ಯಮ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಕೋಲಾರ, ವಿಜಯನಗರದ ಒಂದೆರಡು ಕಡಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಕೊಪ್ಪಳ, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್‌, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರಿನಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಸಾಧಾರಣದೊಂದಿಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಕೆಲವೊಮ್ಮೆ ಬಿಸಿಲ ಧಗೆಯು ಹೆಚ್ಚಿರಲಿದೆ.

ಇದನ್ನೂ ಓದಿ: Physical Abuse : ಅಪ್ರಾಪ್ತೆಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೊ ಹರಿಬಿಟ್ಟ ಯುವಕ!

ಹುಡುಗಿಯರ ಮಾನ್ಸೂನ್‌ ಡ್ರೆಸ್‌ ಹೇಗಿರಬೇಕು? ಹೇಗಿರಬಾರದು?

ಮಾನ್ಸೂನ್‌ನಲ್ಲಿ ಹುಡುಗಿಯರು ಧರಿಸುವ (Monsoon Fashion do’s & don’ts) ಉಡುಪುಗಳು ನೋಡಲು ಆಕರ್ಷಕವಾಗಿದ್ದರಷ್ಟೇ ಸಾಲದು, ಧರಿಸಿದಾಗ ಕಂಫರ್ಟಬಲ್‌ ಆಗಿರಬೇಕು, ಎಲ್ಲದಕ್ಕಿಂತ ಹೆಚ್ಚಾಗಿ ಸೀಸನ್‌ಗೆ ತಕ್ಕಂತಿರಬೇಕು ಎನ್ನುತ್ತಾರೆ ಫ್ಯಾಷನಿಸ್ಟ್‌ಗಳು. ಸಮೀಕ್ಷೆಯೊಂದರ ಪ್ರಕಾರ, ಸಾಕಷ್ಟು ಹುಡುಗಿಯರು ಸ್ಟೈಲಿಶ್‌ ಆಗಿ ಕಾಣಿಸಲು ಮಾನ್ಸೂನ್‌ನಲ್ಲೂ ಸಮ್ಮರ್‌ ಫ್ಯಾಷನ್‌ವೇರ್‌ಗಳನ್ನು ಧರಿಸುತ್ತಾರಂತೆ. ಇನ್ನು, ಕೆಲವು ಯುವತಿಯರು ಮಾನ್ಸೂನ್‌ ಸೀಸನ್‌ನಲ್ಲಿ ಹೊದ್ದುಕೊಂಡಂತಿರುವ ಉಡುಪುಗಳನ್ನು ಧರಿಸುತ್ತಾರಂತೆ. ಆದರೆ, ಫ್ಯಾಷನಿಸ್ಟ್‌ಗಳ ಪ್ರಕಾರ, ಆಯಾ ವರ್ಗದ ಅನುಗುಣವಾಗಿ ಹುಡುಗಿಯರು ಧರಿಸುವ ಉಡುಪುಗಳು ಬದಲಾಗುತ್ತವಂತೆ. ಅದರಲ್ಲೂ, ಜೆನ್‌ ಜಿ ಹುಡುಗಿಯರು, ಯಾವುದೇ ಸೀಸನ್‌ ಟ್ರೆಂಡ್‌ ಫಾಲೋ ಮಾಡುವುದಿಲ್ಲ, ಬದಲಾಗಿ ತಮ್ಮದೇ ಆದ ಸ್ಟೈಲಿಶ್‌ ಮಾರ್ಗವನ್ನು ಹಿಡಿಯುತ್ತಾರಂತೆ. ಅಂದ ಹಾಗೆ, ಇದೆಲ್ಲಾ ಓಕೆ, ಹಾಗೆಂದು ಸೀಸನ್‌ಗೆ ವಿರುದ್ಧವಾಗಿ ಕಾಣಿಸುವುದು ದಿನಚರಿಯಾಗಬಾರದು! ಇದು ಆರೋಗ್ಯಕ್ಕೂ ಮಾರಕ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಹಾಗಾದಲ್ಲಿ, ಈ ಸೀಸನ್‌ನಲ್ಲಿ ಯಾವ ರೀತಿಯ ಡ್ರೆಸ್‌ಗಳು ಬೆಸ್ಟ್? ಯಾವುದು ನಾಟ್‌ ಓಕೆ ! ಎಂಬುದನ್ನು ಫ್ಯಾಷನಿಸ್ಟ್‌ಗಳು ಸಿಂಪಲ್ಲಾಗಿ ತಿಳಿಸಿದ್ದಾರೆ.

Monsoon Fashion

ಮಾನ್ಸೂನ್‌ ಡ್ರೆಸ್‌ಗಳು

ಮಳೆಗಾಲದಲ್ಲಿ ಟ್ರೆಂಡಿಯಾಗುವ ಜಾಕೆಟ್‌ ಡ್ರೆಸ್‌, ಕೋಟ್‌ ಡ್ರೆಸ್‌-ಫ್ರಾಕ್ಸ್, ಸ್ಕೆಟರ್‌ ಡ್ರೆಸ್, ಮಿಡಿ ಡ್ರೆಸ್‌, ಹೈ ವೇಸ್ಟ್ ಶಾಟ್ಸ್ ಆಯ್ಕೆ ಮಾಡಬಹುದು. ಇವು ಸ್ಟೈಲಿಶ್‌ ಆಗಿ ಕಾಣಿಸುವುದರ ಜೊತೆಗೆ ಟ್ರೆಂಡಿಯಾಗಿಯೂ ಬಿಂಬಿಸುತ್ತವೆ.

Monsoon Fashion

ಗಿಡ್ಡ ಪ್ಯಾಂಟ್‌ಗೆ ಓಕೆ ಹೇಳಿ

ಆಂಕೆಲ್‌ ಲೆಂಥ್‌, ಕ್ರಾಪ್ಡ್ ಪ್ಯಾಂಟ್‌, ಲೆಗ್ಗಿಂಗ್ಸ್, ಜೆಗ್ಗಿಂಗ್ಸ್, ಪುಶ್‌ ಬ್ಯಾಕ್‌ನಂತಹ ಪ್ಯಾಂಟ್‌ಗಳನ್ನು ಧರಿಸಬಹುದು. ಆದರೆ, ಯಾವುದೇ ಕಾರಣಕ್ಕೂ ಪಲ್ಹಾಜೋ, ಪ್ಯಾರಲಲ್‌, ಬೂಟ್‌ ಕಟ್‌, ಶರರಾ, ಘರಾರದಂತಹ ಅಗಲವಾದ ನೆಲಹಾಸುವಂತಹ ಪ್ಯಾಂಟ್‌ಗಳನ್ನು ಧರಿಸಬೇಡಿ.

Monsoon Fashion

ನೆಲ ಮುಟ್ಟುವ ಗೌನ್‌ಗಳನ್ನು ದೂರವಿಡಿ

ನಡೆಯುವಾಗ ನೆಲವನ್ನು ಮುಟ್ಟುವಂತಹ ಉದ್ದುದ್ದ ಮ್ಯಾಕ್ಸಿ, ಗೌನ್‌ಗಳಿಗೆ ಸದ್ಯಕ್ಕೆ ಬೈ ಹೇಳಿ. ಇವು ನೋಡಲು ಮಾತ್ರ ಆಕರ್ಷಕವಾಗಿ ಕಾಣಿಸುತ್ತವೆ. ಇವನ್ನು ನಿರ್ವಹಣೆ ಮಾಡುವುದು ಕಷ್ಟ.

Monsoon Fashion

ಭಾರವಿಲ್ಲದ ಲೈಟ್‌ವೈಟ್‌ ಉಡುಗೆ ಧರಿಸಿ

ಲೇಯರಿಂಗ್‌ ಹೆಸರಲ್ಲಿ ದಪ್ಪನೆಯ ಫ್ಯಾಬ್ರಿಕ್‌ನ ಉಡುಗೆಗಳು ಉಸಿರುಕಟ್ಟಿಸಬಹುದು. ಮಳೆಯಲ್ಲಿ ಒದ್ದೆಯಾದರಂತೂ ಕಿರಿಕಿರಿ ಎನಿಸಬಹುದು. ಇದನ್ನು ಅವಾಯ್ಡ್ ಮಾಡಲು, ಬೇಗನೇ ಒಣಗುವ ಲೈಟ್‌ವೈಟ್‌ ಡ್ರೆಸ್‌ಗಳಿಗೆ ಸೈ ಎನ್ನಿ.

ಹೆವಿ ಎಥ್ನಿಕ್‌ ಡಿಸೈನರ್‌ವೇರ್‌ ಅವಾಯ್ಡ್ ಮಾಡಿ

ಹೆವಿ ಎಥ್ನಿಕ್‌ವೇರ್‌ಗಳನ್ನು ಆವಾಯ್ಡ್ ಮಾಡಿ. ಎಥ್ನಿಕ್‌ವೇರ್‌ ಧರಿಸಲೇ ಬೇಕಿದ್ದಲ್ಲಿ ಆದಷ್ಟೂ ಆಂಕೆಲ್‌ ಲೆಂಥ್‌ ಡಿಸೈನರ್‌ವೇರ್ಸ್ ಸೆಲೆಕ್ಟ್ ಮಾಡಿ ಶಾರ್ಟ್ ಕುರ್ತಾ, ಆಂಕೆಲ್‌ ಲೆಂಥ್‌ ಚೂಡಿದಾರ್‌, ಸಲ್ವಾರ್‌ಗಳನ್ನು ಧರಿಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Bengaluru Roads
ಕರ್ನಾಟಕ11 mins ago

Bengaluru Roads: ರಸ್ತೆ ಗುಂಡಿ ಮುಚ್ಚುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸಚಿವರಿಂದಲೇ ಮನವಿ!

Wildlife
ಪರಿಸರ11 mins ago

Wildlife: ಹುಟ್ಟಿದ ತಕ್ಷಣ ತಾಯಿಯನ್ನೇ ಕೊಂದು ತಿನ್ನುವ ಜೀವಿ ಇದು!

Karnataka Rain
ಮಳೆ18 mins ago

Karnataka Rain: ಗಂಗಾವತಿಯಲ್ಲಿ ಭಾರಿ ಮಳೆಗೆ ಮನೆಗಳಿಗೆ ನುಗ್ಗಿದ ನೀರು; ಭತ್ತದ ಗದ್ದೆಗಳಿಗೆ ಹಾನಿ

Gold Rate
ಪ್ರಮುಖ ಸುದ್ದಿ20 mins ago

Gold Rate : ಬೆಲೆ ಏರಿಕೆ ಪರಿಣಾಮ; ಏಪ್ರಿಲ್-ಜುಲೈನಲ್ಲಿ ಚಿನ್ನದ ಆಮದು ಶೇ.4.23ರಷ್ಟು ಇಳಿಕೆ

Viral Video
Latest25 mins ago

‌Richard Lugner: ಇತ್ತೀಚೆಗಷ್ಟೆ 6ನೇ ಮದುವೆಯಾಗಿದ್ದ 91 ವರ್ಷದ ಬಿಲಿಯಾಧೀಶ ಇನ್ನಿಲ್ಲ!

Viral News
Latest32 mins ago

Viral News: ಈತ 610 ಕೆಜಿ ಇದ್ದ, ಈಗ 63 ಕೆಜಿಗೆ ಇಳಿದಿದ್ದಾನೆ! 30 ವೈದ್ಯರ ತಂಡದ ಕಾರ್ಯಾಚರಣೆ!

Sexual Abuse
Latest40 mins ago

Sexual Abuse: ಲೈಂಗಿಕ ಕಿರುಕುಳ ನೀಡಿದವನನ್ನು ನಡು ರಸ್ತೆಯಲ್ಲಿ ಥಳಿಸಿದ ಅಕ್ಕತಂಗಿ; ವಿಡಿಯೊ ವೈರಲ್

Paris Paralympics
ಪ್ರಮುಖ ಸುದ್ದಿ57 mins ago

Paris Paralympics : ಪ್ಯಾರಾಲಿಂಪಿಕ್ಸ್​​ನಲ್ಲಿ 12 ಕ್ರೀಡೆಗಳಲ್ಲಿ ಭಾಗವಹಿಸಲಿದೆ ಭಾರತ

karnataka Weather Forecast
ಮಳೆ1 hour ago

Karnataka Weather : ಇಂದು ಧ್ವಜಾರೋಹಣ ಆಯ್ತು, ನಾಳೆ ವರಮಹಾಲಕ್ಷ್ಮಿ ಹಬ್ಬಕ್ಕೂ ಮಳೆ ಅಡ್ಡಿ; ಬೆಂಗಳೂರು ಸೇರಿ ಕರಾವಳಿ, ಮಲೆನಾಡಿಗೆ ಅಲರ್ಟ್‌

Electric Shock
ಕರ್ನಾಟಕ2 hours ago

Electric Shock: ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಮನೆಗೆ ಹೋಗುವಾಗ ವಿದ್ಯುತ್ ತಗುಲಿ ವಿದ್ಯಾರ್ಥಿ ಸಾವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌