MLC Election: ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್‌ಗೆ ಬೆಂಬಲಿಸಲು ಮಾಜಿ ಸಚಿವ ಎಚ್. ಆಂಜನೇಯ ಮನವಿ - Vistara News

ರಾಜಕೀಯ

MLC Election: ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್‌ಗೆ ಬೆಂಬಲಿಸಲು ಮಾಜಿ ಸಚಿವ ಎಚ್. ಆಂಜನೇಯ ಮನವಿ

MLC Election: ಅಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಈ ಬಾರಿ ಶಿಕ್ಷಕರು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ. ಶಿಕ್ಷಕರ ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡದ ವೈ.ಎ. ನಾರಾಯಣಸ್ವಾಮಿ ಅವರನ್ನು ಈ ಬಾರಿ ಸೋಲಿಸಲು ಶಿಕ್ಷಕರು ಈಗಾಗಲೇ ಎಲ್ಲಾ ಕಡೆಯಲ್ಲಿ ಶಪಥ ಮಾಡಿದ್ದಾರೆ ಎಂದು ಮಾಜಿ ಸಚಿವ ಎಚ್. ಆಂಜನೇಯ ತಿಳಿಸಿದ್ದಾರೆ.

VISTARANEWS.COM


on

Election campaign meeting for Congress party candidate d t Srinivas in Holalkere
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಳಲ್ಕೆರೆ: ಶಿಕ್ಷಕರ ಯಾವುದೇ ಸಮಸ್ಯೆ ಪರಿಹರಿಸುವ ಶಕ್ತಿ ನಮ್ಮ ಸರ್ಕಾರಕ್ಕೆ ಇದೆ ಎಂದು ಮಾಜಿ ಸಚಿವ ಎಚ್.ಆಂಜನೇಯ (MLC Election) ತಿಳಿಸಿದರು.

ಪಟ್ಟಣದ ಸ್ನೇಹ ಕಂಪರ್ಟ್‌ನಲ್ಲಿ ಆಯೋಜಿಸಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಪರ ಕೈಗೊಂಡ ಪ್ರಚಾರ ಸಭೆಯನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಶಿಕ್ಷಕರ ಯಾವುದೇ ಸಮಸ್ಯೆ ಪರಿಹರಿಸುವ ಶಕ್ತಿ ನಮ್ಮ ಸರ್ಕಾರಕ್ಕೆ ಇದೆ. ಶಿಕ್ಷಕರು ಚುನಾವಣೆಯಲ್ಲಿ ಸರ್ಕಾರಕ್ಕೆ ಬೆಂಬಲಿಸಬೇಕು. ಅದಕ್ಕೆ ಪ್ರತಿಫಲವಾಗಿ ಸೌಲಭ್ಯಗಳನ್ನು ಕೇಳಿ ಪಡೆದುಕೊಳ್ಳಬೇಕು. ಈ ಬಾರಿ ಶಿಕ್ಷಕರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್‌ ಗೆ ಬೆಂಬಲಿಸಿ, ಗೆಲ್ಲಿಸಿಕೊಂಡು ಬರಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: List of Movies Releasing: ಈ ವಾರ ಬಿಡುಗಡೆಗೆ ಸಜ್ಜಾಗಿವೆ ಈ ಸಾಲು ಸಾಲು ಸಿನಿಮಾಗಳು!

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಈ ಬಾರಿ ಶಿಕ್ಷಕರು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ. ಶಿಕ್ಷಕರ ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡದ ವೈ.ಎ.ನಾರಾಯಣಸ್ವಾಮಿ ಅವರನ್ನು ಈ ಬಾರಿ ಸೋಲಿಸಲು ಶಿಕ್ಷಕರು ಈಗಾಗಲೇ ಎಲ್ಲಾ ಕಡೆಯಲ್ಲಿ ಶಪಥ ಮಾಡಿದ್ದಾರೆ ಎಂದರು. ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಮಾತನಾಡಿದರು.

ಇದನ್ನೂ ಓದಿ: Diabetes Management Tips: ಈ ಏಳು ಪಾನೀಯಗಳನ್ನು ಸೇವಿಸಿ, ಮಧುಮೇಹ ನಿಯಂತ್ರಿಸಿ

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹನುಮಂತಪ್ಪ, ಮಾಜಿ ಸಂಸದ ಬಿ.ಎಸ್. ಚಂದ್ರಪ್ಪ, ಹನುಮಲಿ ಷಣ್ಮುಖಪ್ಪ, ಜಿಲ್ಲಾಧ್ಯಕ್ಷ ತಾಜಾಪೀರ್, ಜಿ.ಎಸ್. ಮಂಜುನಾಥ, ಎ. ಚಿತ್ತಪ್ಪ, ತಿರುಮಲಾಪುರದ ವಿಜಿಕುಮಾರ್, ಹಳೇಹಳ್ಳಿ ವೀರಭದ್ರಪ್ಪ, ಉಗಣೆ ಕಟ್ಟೆ ವೆಂಕಟೇಶ್, ಜಿ.ಪಂ. ಸದಸ್ಯರಾದ ಬಿ. ಗಂಗಾಧರ, ಡಿ.ಕೆ. ಶಿವಮೂರ್ತಿ, ಎಂ.ಜಿ. ಲೋಹಿತ್ ಕುಮಾರ್, ಎಸ್.ಜಿ. ರಂಗಸ್ವಾಮಿ, ನರಸಿಂಹಮೂರ್ತಿ, ಕೃಷ್ಣಮೂರ್ತಿ, ಪುರಸಭಾ ಸದಸ್ಯರಾದ ಸೈಯದ್ ಸಜೀಲ್, ಕೆ.ಸಿ. ರಮೇಶ್ ಸೇರಿದಂತೆ ಅನೇಕ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Actor Darshan: ನಾನು ದರ್ಶನ್ ಸೇಫ್ ಮಾಡ್ತಿರೋದು ಸುಳ್ಳು; ಬಿಜೆಪಿ ಶಾಸಕ ಸತೀಶ್ ರೆಡ್ಡಿ !

Actor Darshan: ಸಾಕಷ್ಟು ಊಹಾಪೋಹಗಳ ಮಧ್ಯೆ ದರ್ಶನ್ ಪ್ರಕರಣದಲ್ಲಿ ಸತೀಶ್ ರೆಡ್ಡಿ ಅವರ ಹೆಸರು ಚರ್ಚೆಗೆ ಗುರಿಯಾಗಿತ್ತು. ಇದೀಗ ಮಾಧ್ಯಮದ ಮುಂದೆ ಸತೀಶ್‌ ರೆಡ್ಡಿ ʻʻನಾನು ದರ್ಶನ್ ಅವರನ್ನು ಸೇಫ್ ಮಾಡುತ್ತಿರುವ ಸುದ್ದಿ ಸುಳ್ಳು.. ಇಂಡಸ್ಟ್ರಿಯ ಬಹುತೇಕರು ನನಗೆ ಕ್ಲೋಸ್ ಫ್ರೆಂಡ್ಸ್ʼʼಎಂದಿದ್ದಾರೆ.

VISTARANEWS.COM


on

Actor darshan Satish Reddy On Darshan Case
Koo

ಬೆಂಗಳೂರು: ನಟ ದರ್ಶನ್ (Actor Darshan) ಅವರನ್ನು ಸೇಫ್ ಮಾಡಲು ಪ್ರಭಾವಿ ಶಾಸಕರು, ಸಚಿವರು ಪ್ರಯತ್ನಿಸಿದ್ದರು ಎನ್ನುವ ಮಾತು ಕೇಳಿ ಬಂದಿತ್ತು. ನಟ ದರ್ಶನ್ ಬಂಧನದ ಬಳಿಕ ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಹೆಸರು ತಳುಕು ಹಾಕಿಕೊಂಡಿತ್ತು. ಸಾಕಷ್ಟು ಊಹಾಪೋಹಗಳ ಮಧ್ಯೆ ದರ್ಶನ್ ಪ್ರಕರಣದಲ್ಲಿ ಸತೀಶ್ ರೆಡ್ಡಿ ಅವರ ಹೆಸರು ಚರ್ಚೆಗೆ ಗುರಿಯಾಗಿತ್ತು. ಇದೀಗ ಮಾಧ್ಯಮದ ಮುಂದೆ ಸತೀಶ್‌ ರೆಡ್ಡಿ ʻʻನಾನು ದರ್ಶನ್ ಅವರನ್ನು ಸೇಫ್ ಮಾಡುತ್ತಿರುವ ಸುದ್ದಿ ಸುಳ್ಳು.. ಇಂಡಸ್ಟ್ರಿಯ ಬಹುತೇಕರು ನನಗೆ ಕ್ಲೋಸ್ ಫ್ರೆಂಡ್ಸ್ʼʼಎಂದಿದ್ದಾರೆ.

ಸತೀಶ್ ರೆಡ್ಡಿ ಮಾತನಾಡಿ ʻ ನಾನು ದರ್ಶನ್ ಸೇಫ್ ಮಾಡ್ತಿರೋದು ಸುಳ್ಳು.. ಇಂಡಸ್ಟ್ರಿಯ ಬಹುತೇಕರು ನನಗೆ ಕ್ಲೋಸ್ ಫ್ರೆಂಡ್ಸ್.. ನಾನು ದರ್ಶನ್ ಭೇಟಿಯಾಗಿ 3 ತಿಂಗಳು ಆಗಿದೆ. ದರ್ಶನ್ ವಿಚಾರದಲ್ಲಿ ನನ್ನ ಹೆಸರು ತರುತ್ತಿರುವುದು ಸರಿಯಲ್ಲ. ತಪ್ಪು ಯಾರೇ ಮಾಡಿದ್ರು ಶಿಕ್ಷೆ ಆಗ್ಬೇಕು.. ನಾನು ದರ್ಶನ್ ಸೇಫ್ ಮಾಡ್ತಿರೋದು ಸುಳ್ಳು.. ನಾನು ಯಾರ ಬಳಿಯೂ ಕೇಳಿಲ್ಲ.. ನಾನು ಒತ್ತಡ ಹಾಕ್ತಿದ್ದೀನಿ ಅನ್ನೋದು ಸುಳ್ಳು.. ನನಗೆ ಕಾಲು ಮುರಿದಿದ್ದ ಸಂದರ್ಭದಲ್ಲಿ ದರ್ಶನ್ ನನ್ನನ್ನು ಭೇಟಿಯಾಗಿದ್ರು. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗ್ಬೇಕು. ನಾನು ಈ ವಿಚಾರವಾಗಿ ದರ್ಶನ್ ಪರ ನಿಲ್ಲಲ್ಲ.. ದರ್ಶನ್ ತಪ್ಪು ಮಾಡಿದ್ದಾರಾ, ಇಲ್ವಾ ಅನ್ನೋದು ನ್ಯಾಯಾಲಯದ ಮೆಟ್ಟಿಲಲ್ಲಿದೆ. ಮುಂದೆ ನೋಡೋಣʼʼಎಂದಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಹತ್ಯೆ ಶ್ವಾನದ ಮೇಲೆ ʻಆನೆʼ ದಾಳಿ ಮಾಡಿದಂತೆ ಎಂದ ರಾಮ್​ ಗೋಪಾಲ್ ವರ್ಮಾ!

ದರ್ಶನ್ ಅವರನ್ನು ಬಚಾವ್ ಮಾಡಲು ಸಚಿವರು ಪ್ರಯತ್ನಿಸುತ್ತಿದ್ದಾರೆ ಎನ್ನುತ್ತಿದ್ದಂತೆ ಅವರು ಯಾರಾಗಿರಬಹುದು ಎನ್ನುವ ಚರ್ಚೆಯೂ ಜೋರಾಗಿತ್ತು. ದರ್ಶನ್​ ಹಾಗೂ ಆತನ ಗ್ಯಾಂಗ್​ನ ಸದಸ್ಯರು ಇದ್ದ ಪೊಲೀಸ್ ಠಾಣೆಗೆ ಭದ್ರತೆಯನ್ನು ಹೆಚ್ಚಿಸಲಾಗಿತ್ತು . ವಿಐಪಿ ಆರೋಪಿಗಳ ಮೇಲೆ ದಾಳಿಯಾಗುವ ಅಥವಾ ಇನ್ಯಾವುದೇ ಅನಾಹುತಗಳನ್ನು ತಪ್ಪಿಸುವ ಉದ್ದೇಶದಿಂದ ಠಾಣೆಯ ಹೊರಗಡೆ ಕೆಎಸ್​ಆರ್​​ಪಿ ಪೊಲೀಸ್​ ತಂಡವೊಂದನ್ನು ನಿಯೋಜಿಸಲಾಗಿತ್ತು.

ಇಂದು ನಟ ದರ್ಶನ್ ಜತೆಗೆ ವಿನಯ್, ಪ್ರದೋಶ್ ಮತ್ತು ಧನರಾಜ್ ಕಸ್ಟಡಿ ಅಂತ್ಯವಾಗುತ್ತಿದ್ದು, ಪೊಲೀಸರು ಸಂಜೆ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಪ್ರಕರಣ ಸಂಬಂಧ ಜೂನ್ 11ರಂದು ಕಾಮಾಕ್ಷಿಪಾಳ್ಯ ಪೊಲೀಸರು ಮೈಸೂರಿನಲ್ಲಿ ದರ್ಶನ್‌ನನ್ನು ಬಂಧಿಸಿದ್ದರು. ಈಗಾಗಲೇ 12 ದಿನ ಪೊಲೀಸ್ ಕಸ್ಟಡಿಯಲ್ಲಿ ಕಳೆದಿರುವ ದರ್ಶನ್ ಮತ್ತು ಇನ್ನಿತರ ಆರೋಪಿಗಳಿಗೆ ಕೋರ್ಟ್‌ ಬಹುತೇಕ ನ್ಯಾಯಾಂಗ ಬಂಧನದ ಆದೇಶ ನೀಡುವ ಸಾಧ್ಯತೆ ಇದೆ.

Continue Reading

ರಾಜಕೀಯ

Rushikonda Palace: 500 ಕೋಟಿಯ ʼಋಷಿಕೊಂಡ ಅರಮನೆʼ ಖರೀದಿಸಲು ಕ್ರಿಮಿನಲ್‌ ಸುಕೇಶ್ ಚಂದ್ರಶೇಖರ್ ರೆಡಿ!

ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅಧಿಕಾರದಲ್ಲಿದ್ದಾಗ ಸುಮಾರು 500 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಋಷಿಕೊಂಡ ಹಿಲ್‌ಟಾಪ್ ಪ್ಯಾಲೇಸ್ ಬಗ್ಗೆ ಟಿಡಿಪಿ ಆಕ್ಷೇಪ ವ್ಯಕ್ತಪಡಿಸಿ ಸಾಕಷ್ಟು ಆರೋಪಗಳನ್ನು ಮಾಡಿತ್ತು. ಇದೀಗ ಈ ಅರಮನೆಯನ್ನು (Rushikonda Palace) ಖರೀದಿ ಮಾಡಲು ಸದ್ಯ ದೆಹಲಿಯ ಮಂಡೋಲಿ ಜೈಲಿನಲ್ಲಿರುವ ಕುಖ್ಯಾತ ಕ್ರಿಮಿನಲ್ ಸುಕೇಶ್ ಚಂದ್ರಶೇಖರ್‌ ಆಸಕ್ತಿ ತೋರಿಸಿದ್ದಾನೆ.

VISTARANEWS.COM


on

By

Rushikonda Palace
Koo

ನವದೆಹಲಿ: ಆಂಧ್ರಪ್ರದೇಶದ ಋಷಿಕೊಂಡ ಬೆಟ್ಟದಲ್ಲಿ (Rushikonda Hilltop) ಈ ಹಿಂದಿನ ಜಗನ್ ರೆಡ್ಡಿ ಸರ್ಕಾರ ನಿರ್ಮಿಸಿರುವ ವಿವಾದಾತ್ಮಕ ಅರಮನೆಯನ್ನು (Rushikonda Palace) ಮಾರುಕಟ್ಟೆ ದರಕ್ಕಿಂತ ಶೇ.20ರಷ್ಟು ಹೆಚ್ಚು ಹಣ ಕೊಟ್ಟು ಖರೀದಿಸಲು ತಾನು ಸಿದ್ಧ ಎಂದು ಅಕ್ರಮ ಹಣ ವರ್ಗಾವಣೆ, ವಂಚನೆ ಮತ್ತು ಸುಲಿಗೆ ಪ್ರಕರಣ ಸಂಬಂಧ ದೆಹಲಿಯ ಜೈಲಿನಲ್ಲಿರುವ ಆರೋಪಿ ಸುಕೇಶ್ ಚಂದ್ರಶೇಖರ್ (Sukesh Chandrashekhar) ಹೇಳಿಕೊಂಡಿದ್ದಾನೆ. ಈ ಕುರಿತು ಆತ ಆಂಧ್ರಪ್ರದೇಶದ (Andhra Pradesh) ಮುಖ್ಯಮಂತ್ರಿ (Chief Minister) ಎನ್. ಚಂದ್ರಬಾಬು ನಾಯ್ಡು (N Chandrababu Naidu) ಅವರಿಗೆ ಪತ್ರ ಬರೆದಿದ್ದಾನೆ.

ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅಧಿಕಾರದಲ್ಲಿದ್ದಾಗ ಸುಮಾರು 500 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಋಷಿಕೊಂಡ ಹಿಲ್‌ಟಾಪ್ ಪ್ಯಾಲೇಸ್ ಬಗ್ಗೆ ಟಿಡಿಪಿ ಆಕ್ಷೇಪ ವ್ಯಕ್ತಪಡಿಸಿ ಸಾಕಷ್ಟು ಆರೋಪಗಳನ್ನು ಮಾಡಿತ್ತು. ಇದೀಗ ಈ ಅರಮನೆಯನ್ನು ಖರೀದಿ ಮಾಡಲು ಸದ್ಯ ದೆಹಲಿಯ ಜೈಲಿನಲ್ಲಿರುವ ಸುಕೇಶ್ ಆಸಕ್ತಿ ತೋರಿದ್ದಾನೆ.

ಆಂಧ್ರಪ್ರದೇಶದ ಈಗಿನ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸರ್ಕಾರವು ಆ ಆಸ್ತಿಯನ್ನು ಮಾರಾಟ ಮಾಡಲು ಅಥವಾ ಗುತ್ತಿಗೆಗೆ ನೀಡಲು ನಿರ್ಧರಿಸಿದರೆ ಮಾರುಕಟ್ಟೆ ಬೆಲೆಗಿಂತ ಶೇ. 20 ಹೆಚ್ಚಿನ ದರ ನೀಡುವುದಾಗಿ ಆತ ಹೇಳಿದ್ದಾನೆ. ಮಾಜಿ ಮುಖ್ಯಮಂತ್ರಿ ರೆಡ್ಡಿ ವೈಜಾಗ್‌ನಲ್ಲಿ 500 ಕೋಟಿ ರೂಪಾಯಿ ವೆಚ್ಚದ ಬೆಟ್ಟದ ಅರಮನೆಯನ್ನು ತಮ್ಮ ಸ್ವಾರ್ಥಕ್ಕಾಗಿ ನಿರ್ಮಿಸಿದ್ದಾರೆ ಎಂದು ತೆಲುಗು ದೇಶಂ ಪಕ್ಷ (ಟಿಡಿಪಿ) ಆರೋಪಿಸಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಕೆಟ್ಟದಾಗಿದ್ದರೂ ಈ ಅರಮನೆ ಮತ್ತು ಅಲ್ಲಿನ ಐಷಾರಾಮಿ ಸೌಕರ್ಯಗಳಿಗೆ ದುಂದು ವೆಚ್ಚ ಮಾಡಲಾಗಿದೆ ಎಂದು ಆರೋಪಿಸಿದೆ.

Rushikonda Palace


ಇದು ನನಗೆ, ನನ್ನ ಕುಟುಂಬಕ್ಕೆ ಮತ್ತು ನನ್ನ ಸಮುದಾಯಕ್ಕೆ ಬಹಳ ವಿಶೇಷವಾಗಿದೆ ಎಂದು ಸುಕೇಶ್ ಆಂಧ್ರಪ್ರದೇಶ ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾನೆ ಎಂದು ಅವರ ವಕೀಲ ಅನಂತ್ ಮಲಿಕ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ನಾನು ಬಾಲ್ಯದ ರಜಾ ದಿನಗಳಲ್ಲಿ ಅಜ್ಜಿಯ ಬಳಿ ಕರೆದುಕೊಂಡು ಹೋದಾಗ ಆ ಪ್ರದೇಶದ ಸುತ್ತಮುತ್ತ ಆಟವಾಡುತ್ತಿದ್ದೆ. ಆ ಸೆಂಟಿಮೆಂಟ್‌ ನನಗೆ ಅಲ್ಲಿಯ ಆಸ್ತಿ ಖರಿದಿಸುವ ಬಯಕೆ ಹುಟ್ಟಿಸಿದೆ. ಸರ್ಕಾರ ಆ ಆಸ್ತಿ ಮಾರಿದರೆ ಹಣವನ್ನು ಶೇ. 100ರಷ್ಟು ನ್ಯಾಯಸಮ್ಮತ ರೀತಿಯಲ್ಲಿ ಪಾವತಿಸುತ್ತೇನೆ ಎಂದು ಸುಕೇಶ್ ಪತ್ರದಲ್ಲಿ ತಿಳಿಸಿದ್ದಾನೆ.

ನನ್ನ ಆತಿಥ್ಯ ಉದ್ಯಮವು ಚೆನ್ನೈ, ಗೋವಾ, ದುಬೈ ಮತ್ತು ಬಾರ್ಸಿಲೋನಾದಲ್ಲಿ ಹೊಟೇಲ್ ರೂಪದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಈ ಎಲ್ಲಾ ವಿವರಗಳನ್ನು ನಾನು ದಾಖಲೆ ಸಮೇತ ನೀಡುವೆ. ಮಧ್ಯಮ ವರ್ಗದ ಕುಟುಂಬದ ಹುಡುಗನೊಬ್ಬ ಋಷಿಕೊಂಡ ಅರಮನೆಯಂತಹ ಪ್ರತಿಷ್ಠಿತ ಆಸ್ತಿಯನ್ನು ಪಡೆಯುವ ಹಂತಕ್ಕೆ ಬೆಳೆದಿದ್ದಾನೆ. ನನ್ನ ವಿರುದ್ಧದ ಆರೋಪಗಳು ಸಾಬೀತಾಗಿಲ್ಲ. ಹೀಗಾಗಿ ಅರಮನೆಯನ್ನು ಖರೀದಿಸಲು ಅಥವಾ ಬಾಡಿಗೆಗೆ ನೀಡಲು ನನಗೆ ಅವಕಾಶವನ್ನು ನೀಡುವುದರಿಂದ ಅಲ್ಲಿರುವ ಎಲ್ಲಾ ಯುವಕರಿಗೆ ಇದು ಸ್ಫೂರ್ತಿಯಾತ್ತದೆ. ಯಾಕೆಂದರೆ ಜಗತ್ತು ನಿಮ್ಮ ಯಶಸ್ಸಿಗೆ ವಿರುದ್ಧವಾಗಿದ್ದರೂ ಯಾವುದೂ ಅಸಾಧ್ಯವಲ್ಲ ಎಂದು ಸುಕೇಶ್ ಪತ್ರದಲ್ಲಿ ವಿವರಿಸಿದ್ದಾನೆ.

ಆರೋಪವೇನು?

ವೈ.ಎಸ್.ಜಗನ್‌ ಮೋಹನ್‌ ರೆಡ್ಡಿ ಅವರು ಈ ಮೊದಲು ಮೂರು ನಗರಗಳನ್ನು ರಾಜಧಾನಿ ಎಂದು ಘೋಷಿಸಿದ್ದರು. ವಿಶಾಖಪಟ್ಟಣಂ ಅಥವಾ ವೈಜಾಗ್‌ ಅನ್ನೇ ಈ ಮೊದಲು ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಲಾಗಿತ್ತು. ಹಾಗಾಗಿ, ಇಲ್ಲಿ ಪತ್ನಿಯ ಆಸೆಯಂತೆಯೇ ಜಗನ್‌ ಮೋಹನ್‌ ರೆಡ್ಡಿ ಅವರು ಐಷಾರಾಮಿ ಬಂಗಲೆ ಕಟ್ಟಿಸಿದ್ದಾರೆ ಎಂದು ಟಿಡಿಪಿ ಆರೋಪಿಸಿದೆ.

ಇದನ್ನೂ ಓದಿ: Actor Darshan: ದರ್ಶನ್‌ ತುಂಬ ಮುಗ್ದ, ತಾಯಿ ಕಣ್ಣೀರು ಹಾಕೊಂಡು ಮಗನನ್ನು ಬೆಳಸಬೇಕು ಎಂದಿದ್ರು ಎಂದ ಲಹರಿ ವೇಲು!

ಋಷಿಕೊಂಡ ಹಿಲ್ಸ್‌ ಪ್ರವಾಸಿ ತಾಣವಾಗಿತ್ತು. ಇಲ್ಲಿಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಿದ್ದರು. ಆದರೆ, 9.88 ಎಕರೆ ಜಾಗದಲ್ಲಿ ಜಗನ್‌ ಮೋಹನ್‌ ರೆಡ್ಡಿ ಅವರು ಬಂಗಲೆ ನಿರ್ಮಿಸಿದ್ದಾರೆ. ಸುಮಾರು 36 ಲಕ್ಷ ರೂ. ವೆಚ್ಚದಲ್ಲಿ ಬಾತ್‌ ಟಬ್‌ ನಿರ್ಮಿಸಿದ್ದಾರೆ. ಹತ್ತಾರು ಐಷಾರಾಮಿ ಕೋಣೆಗಳು, ಸೌಕರ್ಯಗಳು ಬಂಗಲೆಯಲ್ಲಿವೆ. ಇದನ್ನೇ ಪಾರ್ಟಿ ಕಚೇರಿ ಮಾಡುವುದು ಜಗನ್‌ ಮೋಹನ್‌ ರೆಡ್ಡಿ ಅವರ ಉದ್ದೇಶವಾಗಿತ್ತು ಎಂದು ಆರೋಪಿಸಲಾಗಿದೆ.

Continue Reading

ಕರ್ನಾಟಕ

Suraj Revanna Case: ಸೂರಜ್ ರೇವಣ್ಣ ವಿರುದ್ಧ ನಮಗೆ ಇನ್ನೂ ಅಧಿಕೃತ ದೂರು ಬಂದಿಲ್ಲ: ಗೃಹ ಸಚಿವ ಪರಮೇಶ್ವರ್‌

Suraj Revanna Case: ಸೂರಜ್‌ ರೇವಣ್ಣ ವಿರುದ್ಧ ಕೇಳಿಬಂದಿರುವ ಸಲಿಂಗ ಕಾಮ ಆರೋಪದ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯಿಸಿದ್ದು, ಪ್ರಕರಣ ಸಿಐಡಿಗೆ ಕೊಡುವ ಮುನ್ನ ಪ್ರಕರಣದ ನೈಜತೆ ತಿಳಿದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

VISTARANEWS.COM


on

Suraj Revanna Case
Koo

ಬೆಂಗಳೂರು: ಸೂರಜ್ ರೇವಣ್ಣ ಪ್ರಕರಣ ವಿಚಾರ ನಮಗೆ ಇನ್ನೂ ದೂರು ಬಂದಿಲ್ಲ. ಸುದ್ದಿ ವಾಹಿನಿಗಳಲ್ಲಿ ಈ ಬಗ್ಗೆ ನೋಡಿದ್ದೇವೆ. ಆದರೆ, ನಮಗೆ ಅಧಿಕೃತ ದೂರು ನೀಡಿಲ್ಲ. ದೂರು ಬಂದ ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಸೂರಜ್‌ ರೇವಣ್ಣ ವಿರುದ್ಧ ಕೇಳಿಬಂದಿರುವ ಸಲಿಂಗ ಕಾಮ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ ಅಂತ ಹೇಳಿದ್ದಾರೆ. ನನಗೆ ಯಾವುದೇ ಪತ್ರ ಬಂದಿಲ್ಲ, ಈಗ ತನಿಖೆ ಮಾಡುತ್ತೇವೆ. ಏನು ಅಂತ ತಿಳಿದುಕೊಂಡು ತನಿಖೆ ಮಾಡುತ್ತೇವೆ. ಸಿಐಡಿಗೆ ಕೊಡುವ ಮುನ್ನ ಪ್ರಕರಣದ ನೈಜತೆ ತಿಳಿದುಕೊಳ್ಳುತ್ತೇವೆ. ಪತ್ರ ಬರೆಯುವುದಕ್ಕೂ, ದೂರು ಕೊಡುವುದಕ್ಕೂ ವ್ಯತ್ಯಾಸ ಇದೆ. ಅಧಿಕೃತ ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯವರನ್ನು ‌ಕರೆದು ಮಾತನಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | Suraj Revanna Case: ಸೂರಜ್‌ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ; ಇಂದು ಮತ್ತೊಂದು ದೂರು ದಾಖಲು?

ಏನಿದು ಪ್ರಕರಣ?

ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದು, ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸೂರಜ್‌ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದರು. ಈ ಬಗ್ಗೆ ಡಿಜಿಪಿ, ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ.

ಖಾಸಗಿ ಫೈನಾನ್ಸ್‌ ಕಂಪನಿಯಲ್ಲಿ ಉದ್ಯೋಗಿಯಾದ ಜೆಡಿಎಸ್ ಕಾರ್ಯಕರ್ತ, ಜೂನ್ 16ರಂದು ಸೂರಜ್ ತನಗೆ ವಾಟ್ಸ್‌ಆ್ಯಪ್ ಮೂಲಕ ಸಂದೇಶ ಕಳುಹಿಸಿ, ಗನ್ನಿಕಡ ತೋಟದ ಮನೆಗೆ ಆಹ್ವಾನಿಸಿದ್ದರು. ಉದ್ಯೋಗ ನೀಡುವ ಭರವಸೆ ನೀಡಿ ತನ್ನನ್ನು ಕರೆಸಿಕೊಂಡು, ಸಲಿಂಗ ಕಾಮಕ್ಕೆ ಒತ್ತಾಯಿಸಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದರಿಂದ ನನ್ನ ದೇಹದ ಮೇಲೆ ಗಾಯಗಳಾಗಿದ್ದು, ಈ ಬಗ್ಗೆ ಎಲ್ಲಾದರೂ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ. ಅಸಹಜ ಲೈಂಗಿಕ ದೌರ್ಜನ್ಯದಿಂದ ದೇಹದ ಹಲವು ಭಾಗಗಳಲ್ಲಿ ಕಚ್ಚಿದ ಗುರುತುಗಳಿವೆ, ಮರ್ಮಾಂಗದ ಮೇಲೂ ಗಾಯವಾಗಿದೆ ಎಂದು ದೂರುದಾರ ಆರೋಪಿಸಿದ್ದಾರೆ.

ಇದನ್ನೂ ಓದಿ | Suraj Revanna Case: ಸೂರಜ್‌ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ; ದೂರು ಸಲ್ಲಿಸಿದ ವ್ಯಕ್ತಿ ವಿರುದ್ಧ ಎಫ್‌ಐಆರ್!

ಮತ್ತೊಂದೆಡೆ ದೂರು ನೀಡಿದ್ದ ವ್ಯಕ್ತಿ ವಿರುದ್ಧವೇ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಜೆಡಿಎಸ್‌ ಕಾರ್ಯಕರ್ತನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್ ಬಚಾವ್ ಮಾಡಲು ಪ್ಲ್ಯಾನ್‌ ಮಾಡಿತ್ತಾ ಸರ್ಕಾರ? ಆರ್ ಅಶೋಕ್ ಸವಾಲು ಹಾಕಿದ್ದೇನು?

Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಎರಡನೇ ಆರೋಪಿಯಾಗಿರುವ ನಟ ದರ್ಶನ್‌ (Darshan Arrested) ಸೇರಿ ನಾಲ್ವರು ಆರೋಪಿಗಳ ಪೊಲೀಸ್‌ ಕಸ್ಟಡಿ ಅಂತ್ಯವಾಗುತ್ತಿದ್ದು, ಇಂದು (ಜೂನ್‌ 22) ಪೊಲೀಸರು ಮೂರನೇ ಬಾರಿಗೆ ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದಾರೆ. ಇಲ್ಲಿ ದರ್ಶನ್‌ ಭವಿಷ್ಯ ನಿರ್ಧಾರವಾಗಲಿದೆ.

VISTARANEWS.COM


on

Actor Darshan government planned to make Darshan safe R Ashok challenged
Koo

ಬೆಂಗಳೂರು: ದರ್ಶನ್ (Actor Darshan) ಪ್ರಕರಣದಲ್ಲಿ ಸರ್ಕಾರದ ನಡೆ ಸಂಶಯಕ್ಕೆ ಕಾರಣವಾಗಿದೆ ಎಂದು  ಪ್ರತಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ. ದರ್ಶನ್ ಬಚಾವ್ ಮಾಡಲು ಪ್ಲಾನ್ ಮಾಡಿತ್ತಾ ಸರ್ಕಾರ..? ಆರ್ ಆಶೋಕ್ ಸರ್ಕಾರಕ್ಕೆ ಆ ಚಾಲೆಂಜ್ ಹಾಕಿದ್ದು ಯಾಕೆ..? ಹೀರೋ ಆಗಿ ಇಲ್ಲ ವಿಲನ್ ಅಂತ ಒಪ್ಪಿಕೊಳ್ಳಿ ಎಂದಿದ್ದು ಯಾಕೆ? ಈ ಎಲ್ಲ ವಿಚಾರಗಳ ಬಗ್ಗೆ ವಿಸ್ತಾರ ಜತೆ ಆರ್ ಅಶೋಕ್ ಮಾತನಾಡಿದ್ದು ಹೀಗೆ.

ಸರ್ಕಾರದ ನಡೆ ಅನುಮಾನ!

ದರ್ಶನ್‌ ಪ್ರಕರಣ ಕುರಿತು ಆರ್‌ ಅಶೋಕ್‌ ಮಾತನಾಡಿ ʻʻದರ್ಶನ್ ಪ್ರಕರಣದಲ್ಲಿ ಸರ್ಕಾರದ ನಡೆ ಅನುಮಾನಕ್ಕೆ ಕಾರಣವಾಗಿದೆ. ಸರ್ಕಾರ ಕೇಸ್‌ನಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ದರ್ಶನ್ ಮೇಲೆ ಕೊಲೆ ಆರೋಪ ಬಂದಿರುವುದು. ದರ್ಶನ್ ಕೇಸ್‌ನಲ್ಲಿ ಒತ್ತಡ ಹಾಕಿದವರ ಹೆಸರುಗಳನ್ನ ಬಹಿರಂಗ ಪಡಿಸಬೇಕು. ಮುಖ್ಯಮಂತ್ರಿಗಳು ಹಾಗೂ ಪರಮೇಶ್ವರ್ ಅವರಿಗೆ ಒತ್ತಡ ಹಾಕಿದ್ದು ಯಾರು ಅಂತ ಹೇಳಬೇಕು. ಇಂತಹ ಮಿನಿಸ್ಟರ್ ಬಂದಿದ್ರು.. ಇಂತಹ ಶಾಸಕ ಬಂದಿದ್ರು ಅಂತ ಹೇಳಲಿ. ಇದು ಹೇಳಿದ್ರೆ ಯುಆರ್ ಬಿಕಮ್ ದ ʻಹೀರೋʼ. ಇಲ್ಲ ಅಂದ್ರೆ ನೀವು ವಿಲನ್ ಆಗ್ತೀರಿ. ಪೊಲೀಸ್ ಠಾಣೆ ಮುಚ್ಚಿದ್ದು ಯಾಕೆ? ಸಾರ್ವಜನಿಕರ ಓಡಾಟಕ್ಕೆ ತೊಂದರೆ ಹಾಕಿದ್ದು ಯಾರು? ಇದರಿಂದ ತನಿಖೆ ಬಗ್ಗೆ ಅನುಮಾನ ಬರ್ತಿದೆ. ದರ್ಶನ್ ಕೇಸ್‌ನಲ್ಲಿ ಒತ್ತಡ ಹಾಕಿದವರ ಹೆಸರುಗಳನ್ನ ಬಹಿರಂಗ ಪಡಿಸಬೇಕು ಎಂಬುದೇ ನನ್ನ ಒತ್ತಾಯʼʼಎಂದು ಖಡಕ್‌ ಆಗಿಯೇ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Duniya Vijay: ʻಭೀಮʼ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ದುನಿಯಾ ವಿಜಯ್‌; ಸ್ಟಾರ್‌ ಹಿರೋ ಸಿನಿಮಾ ಜತೆ ಕ್ಲ್ಯಾಶ್‌?

ಕನ್ನಡ ಚಿತ್ರರಂಗದ ಗೌರವ ಮೂರು ಕಾಸಿಗೆ ಹರಾಜು ಹಾಕಿದಅ

ʻʻಕನ್ನಡ ಚಿತ್ರರಂಗದಲ್ಲಿ ದರ್ಶನ್ ಒಬ್ಬ ಖಳನಟ. ಕನ್ನಡ ಚಿತ್ರರಂಗದ ಗೌರವ ಮೂರು ಕಾಸಿಗೆ ಹರಾಜು ಹಾಕಿದ. ಬಡ ವ್ಯಕ್ತಿ ಮೇಲೆ ಪೌರುಷ ತೋರಿಸಿದ ವ್ಯಕ್ತಿ ಹೇಗೆ ನಾಯಕ ಆಗ್ತಾನೆ..? ಹೀರೋ ಅಂದ್ರೆ ರಾಜಕುಮಾರ್, ವಿಷ್ಣುವರ್ಧನ್, ಅಪ್ಪು.. ಆದರೆ ದರ್ಶನ್‌ ಹೀರೋ ಅಲ್ಲ ವಿಲನ್.! ಪುನಿತ್ ಜತೆ ನನಗೆ ನೇರ ಒಡನಾಟ ಇತ್ತು. ರಾಜಕುಮಾರ್ ಅವರನ್ನ ಹತ್ತಿರದಿಂದ ನೋಡಿದ್ದೇನೆ. ಅವರ ನಯ ವಿನಯ ಹಾಗೂ ಅಭಿಮಾನಿಗಳನ್ನ ದೇವರು ಅಂತ ಕರೆಯುತ್ತಿದ್ರು. ಇದೀಗ ದರ್ಶನ್‌ ಅಂತವರಿಂದ ಕನ್ನಡ ಚಿತ್ರರಂಗದ ಗೌರವ ಹೊರಟು ಹೋಯಿತು. ಇದು ಕನ್ನಡ ಚಿತ್ರರಂಗಕ್ಕೆ ಕಪ್ಪು ಚುಕ್ಕೆ ಆಗಿದೆ. ಅಮಾನವೀಯವಾಗಿ ಕೊಂದಿದ್ದಾರೆ. ಸಣಕಲು ವ್ಯಕ್ತಿ ಮೇಲೆ ಹದಿನಾಲ್ಕು ಜನ ಹಲ್ಲೆ ಮಾಡಿದ್ದಾರೆ ಪೊಲೀಸರಿಗೆ ಹೇಳಿದ್ರೆ ಅವರೇ ವಿಚಾರಿಸಿಕೊಳ್ಳುತ್ತಿದ್ರು. ಅದು ಬಿಟ್ಟು ಇವರು ಕಾನೂನು ಕೈಗೆತ್ತಿಕೊಂಡಿದ್ದು ಸರಿಯಲ್ಲ. ಇದು ಮನುಷ್ಯರು ಮಾಡುವ ಕೃತ್ಯ ಅಲ್ಲ -ಹೇಡಿಗಳ ಕೃತ್ಯ. ಒಬ್ಬನ ಮೇಲೆ ಪೌರುಷ ತೋರಿಸಿದ್ದಾರೆ. ದರ್ಶನ್ ತಪ್ಪು ಮಾಡಿದ್ದಾರೆ. ತಮ್ಮ ಜೀವನ ಅವರೇ ಹಾಳು ಮಾಡಿಕೊಂಡಿದ್ದಾರೆ. ಹೀರೋ ಆಗಿ ಅವರ ನಡವಳಿಕೆ ಸಂಶಯ ಬರುವ ರೀತಿಯಲ್ಲಿ ನಡೆದುಕೊಂಡಿದ್ದಾರೆʼʼಎಂದರು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಎರಡನೇ ಆರೋಪಿಯಾಗಿರುವ ನಟ ದರ್ಶನ್‌ (Darshan Arrested) ಸೇರಿ ನಾಲ್ವರು ಆರೋಪಿಗಳ ಪೊಲೀಸ್‌ ಕಸ್ಟಡಿ ಅಂತ್ಯವಾಗುತ್ತಿದ್ದು, ಇಂದು (ಜೂನ್‌ 22) ಪೊಲೀಸರು ಮೂರನೇ ಬಾರಿಗೆ ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದಾರೆ. ಇಲ್ಲಿ ದರ್ಶನ್‌ ಭವಿಷ್ಯ ನಿರ್ಧಾರವಾಗಲಿದೆ.

ನಟ ದರ್ಶನ್ ಜತೆಗೆ ವಿನಯ್, ಪ್ರದೋಶ್ ಮತ್ತು ಧನರಾಜ್ ಕಸ್ಟಡಿ ಅಂತ್ಯವಾಗುತ್ತಿದ್ದು, ಪೊಲೀಸರು ಸಂಜೆ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಪ್ರಕರಣ ಸಂಬಂಧ ಜೂನ್ 11ರಂದು ಕಾಮಾಕ್ಷಿಪಾಳ್ಯ ಪೊಲೀಸರು ಮೈಸೂರಿನಲ್ಲಿ ದರ್ಶನ್‌ನನ್ನು ಬಂಧಿಸಿದ್ದರು. ಈಗಾಗಲೇ 12 ದಿನ ಪೊಲೀಸ್ ಕಸ್ಟಡಿಯಲ್ಲಿ ಕಳೆದಿರುವ ದರ್ಶನ್ ಮತ್ತು ಇನ್ನಿತರ ಆರೋಪಿಗಳಿಗೆ ಕೋರ್ಟ್‌ ಬಹುತೇಕ ನ್ಯಾಯಾಂಗ ಬಂಧನದ ಆದೇಶ ನೀಡುವ ಸಾಧ್ಯತೆ ಇದೆ.

Continue Reading
Advertisement
ಕ್ರೀಡೆ5 mins ago

T20 World Cup 2024: ವಿಂಡೀಸ್​ಗೆ ಆಘಾತ; ವಿಶ್ವಕಪ್​ ಟೂರ್ನಿಯಿಂದ ಹೊರಬಿದ್ದ ಕಿಂಗ್

PGCET 2024
ಶಿಕ್ಷಣ6 mins ago

PGCET 2024 : ಪಿಜಿಸಿಇಟಿ ಅಪ್‌ಡೇಟ್ಸ್‌ ; ಶುಲ್ಕ ಪಾವತಿ, ತಿದ್ದುಪಡಿ, ಪರೀಕ್ಷಾ ಕೇಂದ್ರ ಆಯ್ಕೆಗೆ ಜೂ.24 ಕೊನೆ ದಿನ

The Lion King 30 years influence on fans and actors
ಬಾಲಿವುಡ್6 mins ago

The Lion King: ಆಲ್‌ ಟೈಮ್‌ ಫೇವರೇಟ್‌ ಕಾರ್ಟೂನ್‌ `ದಿ ಲಯನ್ ಕಿಂಗ್’ 30ನೇ ವಾರ್ಷಿಕೋತ್ಸವ

Viral Video
ವೈರಲ್ ನ್ಯೂಸ್11 mins ago

Viral Video: ಕಾರು ತಡೆದ ಟ್ರಾಫಿಕ್‌ ಪೊಲೀಸ್‌ ಕ್ಯಾಬ್‌ ಡ್ರೈವರ್‌ ಮಾಡಿದ್ದೇನು ಗೊತ್ತಾ?

Floods In Assam
ದೇಶ13 mins ago

Floods In Assam: ಭೀಕರ ಪ್ರವಾಹಕ್ಕೆ ನಲುಗಿದ ಅಸ್ಸಾಂ; 37ಕ್ಕೆ ಏರಿದ ಸಾವಿನ ಸಂಖ್ಯೆ

Actor Darshan
ಕರ್ನಾಟಕ15 mins ago

Actor Darshan: ದರ್ಶನ್ ಸೇರಿ ನಾಲ್ವರು ಸ್ಟೇಷನ್‌ನಿಂದ ಪರಪ್ಪನ ಅಗ್ರಹಾರ ಜೈಲಿಗೆ

Swamji Murder
ಪ್ರಮುಖ ಸುದ್ದಿ31 mins ago

Swamji Murder : ಆಸ್ತಿ, ಅಧಿಕಾರಕ್ಕಾಗಿ ಗಲಾಟೆ; ಸ್ವಾಮೀಜಿಯೊಬ್ಬರನ್ನು ಕೊಲೆ ಮಾಡಿದ ಸ್ವಾಮೀಜಿಗಳ ಗುಂಪು

Child Death
ಬೆಳಗಾವಿ37 mins ago

Child Death : ಮಕ್ಕಳ ಮಾರಾಟ ಜಾಲದಲ್ಲಿ ರಕ್ಷಣೆಯಾಗಿದ್ದ ಮಗು ಮೃತ್ಯು; ಅಂತ್ಯ ಸಂಸ್ಕಾರ ನೆರವೇರಿಸಿದ ಪೊಲೀಸರು

Shobha Shetty car gift to yashwanth birthday
ಟಾಲಿವುಡ್54 mins ago

Shobha Shetty: ಭಾವಿ ಪತಿಗೆ ಕಾರ್ ಗಿಫ್ಟ್ ನೀಡಿದ ‘ಅಗ್ನಿಸಾಕ್ಷಿ’ ಖ್ಯಾತಿಯ ನಟಿ!

IND vs BAN
ಕ್ರೀಡೆ1 hour ago

IND vs BAN: ಕೊಹ್ಲಿ ಬ್ಯಾಟಿಂಗ್​ ಬಗ್ಗೆ ಸ್ವತಃ ಬೇಸರ ವ್ಯಕ್ತಪಡಿಸಿದ ಬ್ಯಾಟಿಂಗ್​ ಕೋಚ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ21 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 day ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ2 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ6 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ6 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌