Tumkur News: ಮೇವು ಬ್ಯಾಂಕ್ ಸದುಪಯೋಗಪಡಿಸಿಕೊಳ್ಳಿ: ತಹಸೀಲ್ದಾರ್ ಮಂಜುನಾಥ್ - Vistara News

ತುಮಕೂರು

Tumkur News: ಮೇವು ಬ್ಯಾಂಕ್ ಸದುಪಯೋಗಪಡಿಸಿಕೊಳ್ಳಿ: ತಹಸೀಲ್ದಾರ್ ಮಂಜುನಾಥ್

Tumkur News: ಕೊರಟಗೆರೆ ತಾಲೂಕು ಸಂಪೂರ್ಣ ಮಳೆ ಆಶ್ರಿತ ಒಣ ಪ್ರದೇಶವಾಗಿದ್ದು ಸರ್ಕಾರದಿಂದ ಬರ ಪೀಡಿತ ತಾಲೂಕು ಎಂದು ಘೋಷಣೆಯಾಗಿದೆ. ಇತ್ತೀಚೆಗೆ ಜಿಲ್ಲೆಯಲ್ಲಿಯೇ ಅತಿ ಕಡಿಮೆ ಮಳೆಯಾಗಿದೆ ಇದರಿಂದ ರೈತರು ಜಾನುವಾರುಗಳಿಗೆ ಮೇವು ಒದಗಿಸಲು ಸಂಕಷ್ಟ ಪಡುತ್ತಿದ್ದಾರೆ. ಆದ್ದರಿಂದ ತಾಲೂಕಿನ ಕಸಬಾ ಹೋಬಳಿಯಲ್ಲಿ ಮೇವು ಬ್ಯಾಂಕ್‌ನ್ನು ತೆರೆಯಲಾಗಿದೆ ತಹಸೀಲ್ದಾರ್ ಮಂಜುನಾಥ್ ತಿಳಿಸಿದ್ದಾರೆ.

VISTARANEWS.COM


on

Fodder Bank inauguration at kasaba
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊರಟಗೆರೆ: ತುಮಕೂರು ಜಿಲ್ಲೆಯಲ್ಲಿ ಕೊರಟಗೆರೆ ತಾಲೂಕಿನಲ್ಲಿ ಅತಿ ಕಡಿಮೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಸಬಾ ಹೋಬಳಿಯಲ್ಲಿ ಮೇವು ಬ್ಯಾಂಕ್‌ ಅನ್ನು ತೆರೆಯಲಾಗಿದೆ ಎಂದು ತಹಸೀಲ್ದಾರ್ ಮಂಜುನಾಥ್ (Tumkur News) ತಿಳಿಸಿದರು.

ಪಟ್ಟಣದ ಬೈಲಾಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಮೂರನೇ ಮೇವು ಬ್ಯಾಂಕ್ ಉದ್ಘಾಟಿಸಿ ಮಾತನಾಡಿದ ಅವರು, ಕೊರಟಗೆರೆ ತಾಲೂಕು ಸಂಪೂರ್ಣ ಮಳೆ ಆಶ್ರಿತ ಒಣ ಪ್ರದೇಶವಾಗಿದ್ದು, ಸರ್ಕಾರದಿಂದ ಬರ ಪೀಡಿತ ತಾಲೂಕು ಎಂದು ಘೋಷಣೆಯಾಗಿದೆ. ಇತ್ತೀಚೆಗೆ ಜಿಲ್ಲೆಯಲ್ಲಿಯೇ ಅತಿ ಕಡಿಮೆ ಮಳೆಯಾಗಿದೆ ಇದರಿಂದ ರೈತರು ಜಾನುವಾರುಗಳಿಗೆ ಮೇವು ಒದಗಿಸಲು ಸಂಕಷ್ಟ ಪಡುತ್ತಿದ್ದಾರೆ. ಆದ್ದರಿಂದ ತಾಲೂಕಿನ ಕಸಬಾ ಹೋಬಳಿಯ ಮೇವು ಬ್ಯಾಂಕ್‌ ಅನ್ನು ತೆರೆಯಲಾಗಿದೆ ಎಂದರು.

ಇದನ್ನೂ ಓದಿ: UPSC: ಐಇಎಸ್‌ / ಐಎಸ್‌ಎಸ್‌ಇ 2024 ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ವೇಳಾಪಟ್ಟಿ

ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಮೇವು ಬ್ಯಾಂಕ್ ತೆರೆಯಲಾಗಿದೆ. ಈಗಾಗಲೇ ತಾಲೂಕಿನ ಹೊಳವನಹಳ್ಳಿ ಹಾಗೂ ಬುಕ್ಕಾಪಟ್ಟಣಗಳಲ್ಲಿ ಮೇವು ಬ್ಯಾಂಕ್ ಪ್ರಾರಂಭಿಸಿದ್ದು ರೈತರ ಮನವಿ ಹಿನ್ನಲೆಯಲ್ಲಿ ಕಸಬಾ ಹೋಬಳಿ ರೈತರಿಗೆ ಅನುಕೂಲವಾಗುವಂತೆ ಮೇವು ಬ್ಯಾಂಕ್ ತೆರೆಯಲಾಗಿದೆ, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ರೈತರು ತಮ್ಮ ಪಹಣಿಯೊಂದಿಗೆ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸಬೇಕು ಇದರಿಂದ ಸರ್ಕಾರದ ಯೋಜನೆಯ ಅನುದಾನಗಳನ್ನು ರೈತರ ಖಾತೆಗಳಿಗೆ ನೇರವಾಗಿ ಹಣ ಸಂದಾಯಿಸಲು ಅನುಕೂಲವಾಗುತ್ತದೆ ಎಂದರು.

ಪಶು ಇಲಾಖಾ ಸಹಾಯಕ ನಿರ್ದೇಶಕ ನಾಗಭೂಷಣ್ ಮಾತನಾಡಿ, ರಾಜ್ಯದಲ್ಲಿ ಭೀಕರ ಬರಗಾಲದ ಹಿನ್ನಲೆಯಲ್ಲಿ ಮೇವು ಇಲ್ಲದೆ ರೈತರು ಪರದಾಡುತ್ತಿದ್ದು, ಇದನ್ನು ಮನಗೊಂಡ ಸರ್ಕಾರ ಮೇವು ಬ್ಯಾಂಕ್‌ಗಳನ್ನು ತೆರೆಯಲು ಆದೇಶಿಸಿದೆ, ಈಗಾಗಲೇ ಮಳೆ ಪ್ರಾರಂಭವಾಗಿದ್ದರೂ ಇನ್ನು ಕೆಲವು ದಿನಗಳ ಕಾಲ ಮೇವಿಗೆ ಅಭಾವವಿರುತ್ತದೆ, ಅದರಲ್ಲೂ ಕೊರಟಗೆರೆ ತಾಲೂಕಿನಲ್ಲಿ ಇತ್ತೀಚೆಗೆ ಜಿಲ್ಲೆಯಲ್ಲಿಯೇ ಅತಿ ಕಡಿಮೆ ಮಳೆಯಾಗಿದೆ, ಅದಕ್ಕಾಗಿ ಕಸಬಾ ಹೋಬಳಿಯ ಮೂರನೇ ಮೇವು ಬ್ಯಾಂಕ್ ತೆರೆದಿದ್ದು, ರೈತರು ಶಾಂತಿಯಿಂದ ಮೇವನ್ನು ಪಡೆಯಬೇಕು, ಪ್ರತಿಯೊಬ್ಬ ಜಾನುವಾರು ಹೊಂದಿರುವ ರೈತರಿಗೆ ಮೇವು ತಲುಪಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.

ಇದನ್ನೂ ಓದಿ: Viral Video: ರಸ್ತೆ ಜಗಳದಿಂದ ತಪ್ಪಿಸಿಕೊಳ್ಳುವುದು ಹೇಗೆ? ಬೆಂಗಳೂರು ಪೊಲೀಸರ ವಿಡಿಯೊ ಪಾಠ ಇಲ್ಲಿದೆ!

ಈ ಸಂದರ್ಭದಲ್ಲಿ ಪಶು ಇಲಾಖೆಯ ಡಾ.ಮಂಜನಾಥ್, ಡಾ.ಚಂದ್ರಶೇಖರ್, ಕಂದಾಯ ಇಲಾಖೆಯ ಕಸಬಾ ಆರ್.ಐ ಬಸವರಾಜು, ವಿ.ಎ.ಗಳಾದ ಮೋಹನ್‌ಕುಮಾರ್, ಪವನ್ ಕುಮಾರ್, ಗುರುಶಂಕರ್, ಮೀನಾಕುಮಾರಿ ಹಾಗೂ ಕಂದಾಯ ಸಿಬ್ಬಂದಿ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿ, ಮಲೆನಾಡಿಗೆ ಗುಡುಗು ಸಹಿತ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka Weather Forecast : ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿಯೊಂದಿಗೆ (Heavy Rain) ಮಳೆಯಾಗಲಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಭಾಗಕ್ಕೆ ಹೈ ಅಲರ್ಟ್‌ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರ್ನಾಟಕ ಕರಾವಳಿ ಹಾಗೂ ಮಲೆನಾಡಿನಲ್ಲಿ ವ್ಯಾಪಕವಾದ ಮಧ್ಯಮದಿಂದ ಭಾರಿ ಮಳೆಯಾಗುವ (Rain News) ನಿರೀಕ್ಷೆಯಿದೆ. ಪ್ರತ್ಯೇಕದಿಂದ ಚದುರಿದ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಇನ್ನೂ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿಯೊಂದಿಗೆ (Heavy Rain) ಮಳೆಯಾಗಲಿದೆ.

ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನ ಬೆಳಗಾವಿ ಮತ್ತು ಗದಗದಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಮಲೆನಾಡಿನ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಸಾಧಾರಣದಿಂದ ಶುರುವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ರಾಜಧಾನಿ ಬೆಂಗಳೂರಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಸುಮಾರು 31 ಮತ್ತು 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

9 ಜಿಲ್ಲೆಗಳಿಗೆ ಹೈ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗುವುದರ ಜತೆಗೆ ಗಾಳಿ ವೇಗವು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಕೊಡಗು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ ಮತ್ತು ಮೈಸೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ . ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಮೀನುಗಾರಿಕೆ ತೆರಳದಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Health Tips: ನಮ್ಮ ದೇಹಕ್ಕೆ ಪ್ರೊಟೀನ್‌ ಪುಷ್ಟಿ ನೀಡಲು ಯಾವ ಮೊಳಕೆ ಕಾಳುಗಳು ಸೂಕ್ತ?

ಮುದ್ದು ಶ್ವಾನಗಳಿಗೂ ಬಂತು ಮಾನ್ಸೂನ್‌ ಫ್ಯಾಷನ್‌!

ಮುದ್ದು ಶ್ವಾನಗಳಿಗೂ ಬಂತು ಮಾನ್ಸೂನ್‌ ಫ್ಯಾಷನ್‌! (Dogs Monsoon Fashion) ಅರರೆ., ಇದೇನಿದು ಶ್ವಾನಗಳಿಗೂ ಮಳೆಗಾಲದ ಫ್ಯಾಷನ್‌ ಎಂದು ಹುಬ್ಬೇರಿಸಬಹುದು. ಹೌದು, ಇದೀಗ ಶ್ವಾನಗಳ ಮಾನ್ಸೂನ್‌ ಡ್ರೆಸ್‌ ಹಾಗೂ ರೈನ್‌ಕೋಟ್‌, ಮತ್ತಿತರೇ ಆಕ್ಸೆಸರೀಸ್‌ ಪೆಟ್‌ ಲೋಕದಲ್ಲಿ ಕಾಲಿಟ್ಟಿವೆ. ಆಯಾ ಜಾತಿಯ ಮುದ್ದು ಶ್ವಾನಗಳಿಗೆ ಹೊಂದುವಂತಹ, ನಾನಾ ವೆರೈಟಿ ಮಾನ್ಸೂನ್‌ ಡ್ರೆಸ್‌ಗಳು ಹಾಗೂ ವಾಟರ್‌ಪ್ರೂಫ್‌ ರೈನ್‌ಕೋಟ್‌ಗಳು ನಾಯಿಮರಿಗಳನ್ನು ಅಲಂಕರಿಸುತ್ತಿವೆ.

Dogs Monsoon Fashion

ಮುದ್ದು ಶ್ವಾನಗಳಿಗೂ ಮಾನ್ಸೂನ್‌ ಫ್ಯಾಷನ್‌

“ಇಂದು ಕಾಲ ಬದಲಾಗಿದೆ. ಮನೆಯಲ್ಲಿ ಮುದ್ದು ಶ್ವಾನಗಳಿಗೂ ಮಕ್ಕಳ ಸ್ಥಾನ ಮಾನ ದೊರಕಿದೆ. ಪ್ರತಿಯೊಬ್ಬರು ಅವರು ಸಾಕಿದ ನಾಯಿಮರಿಗಳನ್ನು ಯಾವ ಮಟ್ಟಿಗೆ ಇಷ್ಟ ಪಡುತ್ತಾರೆಂದರೇ, ಅವಕ್ಕೆ ಇತ್ತೀಚೆಗೆ ನಾನಾ ಬಗೆಯಲ್ಲಿ ಸ್ಟೈಲಿಂಗ್‌ ಕೂಡ ಮಾಡುತ್ತಾರೆ. ಇನ್ನು, ಹಿರಿಯರು ಕಿರಿಯರೆನ್ನದೇ ಎಲ್ಲರೂ ವಾಕಿಂಗ್‌ ಹಾಗೂ ಜಾಕಿಂಗ್‌ ಸಮಯದಲ್ಲೂ ಶ್ವಾನಗಳನ್ನು ಜೊತೆಯಲ್ಲಿಯೇ ಕರೆದೊಯ್ಯುತ್ತಾರೆ. ಇದಕ್ಕೆ ಪೂರಕ ಎಂಬಂತೆ, ಪೆಟ್‌ ಲೋಕದಲ್ಲೂ ನಾನಾ ಬಗೆಯ ಆಕ್ಸೆಸರೀಸ್‌ಗಳು ಹಾಗೂ ಉಡುಗೆಗಳು ಬಂದಿವೆ. ಆಯಾ ಸೀಸನ್‌ಗೆ ಮ್ಯಾಚ್‌ ಆಗುವಂತೆ ದೊರಕುತ್ತಿವೆ. ಅವುಗಳಲ್ಲಿ ಇದೀಗ ಮಾನ್ಸೂನ್‌ ಸೀಸನ್‌ಗೆ ಹೊಂದುವಂತಹ ಫ್ಯಾಷನ್‌ ಉಡುಗೆ ಹಾಗೂ ರೈನ್‌ಕೋಟ್‌ಗಳು ಬಿಡುಗಡೆಗೊಂಡಿವೆ” ಎನ್ನುತ್ತಾರೆ ಪೆಟ್‌ ಸ್ಪಾನ ಸ್ಟೈಲಿಂಗ್‌ ಎಕ್ಸ್‌ಫರ್ಟ್ ಜಾಕಿ. ಅವರ ಪ್ರಕಾರ, ಶ್ವಾನಗಳು ಇದೀಗ ಸ್ಟೈಲಿಶ್‌ ಆಗಿ ಕಾಣಿಸಲು ಈ ಆಕ್ಸೆಸರೀಸ್‌ಗಳು ಸಹಕರಿಸುತ್ತಿವೆಯಂತೆ.

Dogs Monsoon Fashion

ಮಾನ್ಸೂನ್‌ಗೆ ಮ್ಯಾಚಿಂಗ್‌

ಶ್ವಾನಗಳಿಗೆ ಬಂದಿರುವ ಕಲರ್‌ಫುಲ್‌ ಉಡುಗೆ ಹಾಗೂ ರೈನ್‌ಕೋಟ್‌ ಮತ್ತು ಅವುಗಳ ಕಾಲಿನ ಪಾದಗಳಿಗೆ ಹಾಕಬಹುದಾದ ಪೆಟ್‌ ವೆಲ್ಲೈಸ್‌, ರೈನ್‌ ಬೂಟ್ಸ್ ಹಾಗೂ ಟವೆಲ್‌ ಮತ್ತು ವೈಪ್ಸ್ ಈ ಸೀಸನ್‌ನಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿವೆ.

Dogs Monsoon Fashion

ಕಲರ್‌ಫುಲ್‌ ಡಾಗ್ಗಿ ರೈನ್‌ ಕೋಟ್ಸ್

ಪಿರಿ ಪಿರಿ ಸಣ್ಣ ಮಳೆಯಲ್ಲೂ ಡಾಗ್ಗಿಯಿಲ್ಲದೇ ವಾಕ್‌ ಮಾಡಲಾಗುವುದಿಲ್ಲ ಎನ್ನುವ ಶ್ವಾನಗಳ ಪೋಷಕರು, ಈ ಮಾನ್ಸೂನ್‌ ಡಾಗ್‌ ರೈನ್‌ಕೋಟ್ಸ್‌ಗಳ ಖರೀದಿ ಮಾಡತೊಡಗಿದ್ದಾರೆ. ಬೇಡಿಕೆ ಹೆಚ್ಚಾದಂತೆ, ಸಿಂಥಟಿಕ್‌, ಪಾಲಿಸ್ಟರ್‌ ಸೇರಿದಂತೆ ವಾಟರ್‌ ಪ್ರೂಫ್‌ ಫ್ಯಾಬ್ರಿಕ್‌ನಲ್ಲಿ ಇವು ನಾನಾ ಡಿಸೈನ್‌ನಲ್ಲಿ ಆಗಮಿಸಿವೆ.

Dogs Monsoon Fashion

ಪೆಟ್ಸ್ ರೈನ್‌ ಬೂಟ್ಸ್

ನಾಯಿ ಮರಿಗಳಿಗೆ ರಸ್ತೆಯ ಹಾಗೂ ನೆಲದ ಕೊಚ್ಚೆ, ಕೆಸರು ಹತ್ತದಂತೆ ಕಾಪಾಡಬಹುದಾದ ಪುಟ್ಟ ಪುಟ್ಟ ರೈನ್‌ ಬೂಟ್ಸ್‌ಗಳು ಕೂಡ ನಾನಾ ವಿನ್ಯಾಸದಲ್ಲಿ ಪೆಟ್‌ ಶಾಪ್‌ಗಳಿಗೆ ಬಂದಿವೆ. ಇನ್ನು, ಡಾಗ್‌ ಟವೆಲ್ಸ್ ಹಾಗೂ ವೈಪ್ಸ್ ಸೇರಿದಂತೆ, ಬೋ ಹಾಗೂ ಬೆಲ್ಟ್‌ಗಳು ಕೂಡ ಪೆಟ್‌ ಶಾಪ್‌ಗಳಿಗೆ ಲಗ್ಗೆ ಇಟ್ಟಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Theft Case: ಶಿರಾದಲ್ಲಿ ಪೊಲೀಸರಂತೆ ನಟಿಸಿ ಮಹಿಳೆಯ ಮಾಂಗಲ್ಯ ಕಳವು!

Theft Case: ಶಿರಾ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಬಳಿ ಪೊಲೀಸ್ ಅಧಿಕಾರಿಗಳಂತೆ ನಟಿಸಿ, ವಂಚಕರಿಬ್ಬರು ಮಹಿಳೆಯೊಬ್ಬರ 1.50 ಲಕ್ಷ ರೂ. ಮೌಲ್ಯದ 48 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕದ್ದು ಪರಾರಿಯಾಗಿರುವ ಘಟನೆ ಜರುಗಿದೆ.

VISTARANEWS.COM


on

Mangalya chain was stolen by pretending to be a police in Shira
Koo

ಶಿರಾ: ಪೊಲೀಸ್ ಅಧಿಕಾರಿಗಳಂತೆ ನಟಿಸಿ, ವಂಚಕರಿಬ್ಬರು ಮಹಿಳೆಯೊಬ್ಬರ 1.50 ಲಕ್ಷ ರೂ. ಮೌಲ್ಯದ 48 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕದ್ದು (Theft Case) ಪರಾರಿಯಾಗಿರುವ ಘಟನೆ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಬಳಿ ಶುಕ್ರವಾರ ನಡೆದಿದೆ.

ತಾಲೂಕಿನ ಕಡವಿಗೆರೆ ಗ್ರಾಮದ ಅಶ್ವತ್ಥಮ್ಮ ಮಾಂಗಲ್ಯ ಸರ ಕಳೆದುಕೊಂಡವರು. ಅನಾರೋಗ್ಯದ ಹಿನ್ನೆಲೆಯಲ್ಲಿ ಮಾತ್ರೆಗಳನ್ನು ತೆಗೆದುಕೊಂಡು ಸ್ಥಳೀಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮುಂಭಾಗ ಹೋಗುತ್ತಿರುವ ವೇಳೆ ಪೊಲೀಸರು ಎಂದು ಹೇಳಿಕೊಂಡ ಇಬ್ಬರು ಅಪರಿಚಿತರು ಗಮನ ಬೇರೆಡೆಗೆ ಸೆಳೆದು ಅಶ್ವತ್ಥಮ್ಮ ಅವರ ಬಂಗಾರದ ಸರ ತೆಗೆಸಿ, ಪೇಪರ್ ಕವರ್‌ನಲ್ಲಿ ಹಾಕುವಂತೆ ತಿಳಿಸಿದ್ದರು. ಬಳಿಕ ಆ ಕವರನ್ನು ಅಶ್ವಥಮ್ಮ ಅವರ ಬ್ಯಾಗ್‌ನಲ್ಲಿರಿಸಿದ್ದರು ಎನ್ನಲಾಗಿದೆ.

ಇದನ್ನೂ ಓದಿ: Murder Case: ಹುಬ್ಬಳ್ಳಿಯಲ್ಲಿ ಚಾಕುವಿನಿಂದ ಇರಿದು ಯುವಕನ ಹತ್ಯೆ

ಅಲ್ಲಿಂದ ಸ್ವಲ್ಪ ದೂರ ತೆರಳಿದ್ದ ಅಶ್ವತ್ಥಮ್ಮ, ಬಳಿಕ ಬ್ಯಾಗ್‌ನಲ್ಲಿದ್ದ ಪೇಪರ್ ಕವರ್ ತೆಗೆದು ನೋಡಿದಾಗ ಆಘಾತ ಕಾದಿತ್ತು. ಪೇಪರ್ ಕವರ್‌ನಲ್ಲಿ ಚಿನ್ನದ ಮಾಂಗಲ್ಯ ಸರ ಇರಲಿಲ್ಲ. ಇದನ್ನು ಗಮನಿಸಿದ ತಕ್ಷಣವೇ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಬಳಿ ಬಂದು ನೋಡಿದಾಗ ವಂಚಕರು ಅಲ್ಲಿಂದ ಪರಾರಿಯಾಗಿದ್ದಾರೆ. ಈ ಕುರಿತು ಅಶ್ವಥಮ್ಮ ನೀಡಿದ ದೂರಿನ ಮೇರೆಗೆ ಶಿರಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಮಳೆ

Karnataka Weather : ವೀಕೆಂಡ್‌ ಪ್ರಿಯರೇ ಎಚ್ಚರ; ಭಾನುವಾರ ಸುರಿಯಲಿದೆ ಮಳೆ ಧಾರಾಕಾರ

Karnataka Weather Forecast : ಜೂನ್‌ 23ಕ್ಕೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Rain News) ನೀಡಿದೆ. ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಜೂನ್‌ 26ರವರೆಗೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಭಾನುವಾರದಂದು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಕೆಲವು ಸ್ಥಳದಲ್ಲಿ ಗುಡುಗು ಸಹಿತ ಭಾರಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿಗೆ ಲಘು ಮಳೆ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕನಿಷ್ಟ ತಾಪಮಾನ 21 ಹಾಗೂ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ:

ಮಳೆ ಬಂದರೆ ಸವಾರರಿಗೆ ಆತಂಕ

ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಮಳೆ ಬಂದರೆ ಸಾಕು ಸವಾರರು ಭಯದಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಣಗಿದ ಮರಗಳು ಬೀಳುವ ಆತಂಕದಲ್ಲಿ ಜನರು ಜೀವವನ್ನು ಕೈಯಲ್ಲಿ ಹಿಡಿದು ಓಡಾಡುತ್ತಿದ್ದಾರೆ.

ಗಾಳಿ ಮಳೆಯಿಂದಾಗಿ ಆನೇಕ ಕಡೆ ಮರಗಳು ಧರೆಗುರುಳಿದ್ದವು. ಸಾಕಷ್ಟು ಕಡೆ ಅನಾಹುತಗಳು ಸಂಭವಿಸಿದ್ದರೂ ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿಲ್ಲ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಒಣಗಿದ ಮರಗಳು ಅನಾಹುತಕ್ಕೆ ದಾರಿ ಮಾಡಿಕೊಡುತ್ತಿವೆ. ಹೆಬ್ಬಗೋಡಿ ನಗರಸಭೆ ಮತ್ತು ಬೊಮ್ಮಸಂದ್ರ ಕೈಗಾರಿಕಾ ಸಂಘಕ್ಕೆ ಒಳಪಡುವ ಈ ರಸ್ತೆಯಲ್ಲಿ ಎಂಟಿಆರ್‌, ಸಾಯಿ ವಿಶ್ರಾಂ ಹೋಟೆಲ್ ಮತ್ತು ಡೆಲ್ಟಾ ಕಂಪನಿ ಸೇರಿದಂತೆ ಹಲವು ಪ್ರತಿಷ್ಠಿತ ಕಂಪನಿಗಳಿವೆ.

ನಿತ್ಯ ಸಾವಿರಾರು ಸಂಖ್ಯೆಯ ಕಾರ್ಮಿಕರು ಇದೇ ರಸ್ತೆಯಲ್ಲಿ ಸಂಚರಿಸುತ್ತಾರೆ. ರಸ್ತೆಯುದ್ದಕ್ಕೂ ಒಣಗಿದ ಮರಗಳು ಮತ್ತು ಕೊಂಬೆಗಳು ಬೀಳುವ ಆತಂಕದಿಂದಾಗಿ ವಾಹನ ಸವಾರರು, ಪಾದಚಾರಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಕಳದೆರಡು ವರ್ಷಗಳ ಹಿಂದೆ ರಸ್ತೆಯಲ್ಲಿ ಮರ ಬಿದ್ದು ವ್ಯಕ್ತಿಯೊಬ್ಬ ಗಂಭೀರ ಗಾಯಗೊಂಡಿದ್ದರು. ಇಷ್ಟಾದರೂ ತಲೆಕೇಡಿಸಿಕೊಳ್ಳದ ಅಧಿಕಾರಿಗಳು, ಒಣಗಿದ ಮರಗಳನ್ನು ತೆರವು ಮಾಡದೆ ನಿರ್ಲಕ್ಷ್ಯ ವಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

Love case : 50 ವರ್ಷದ ಅಂಕಲ್‌ ಜತೆಗೆ 19ರ ಯುವತಿ ನಾಪತ್ತೆ; ಕುಟುಂಬಸ್ಥರು ಪ್ರೀತಿಗೆ ಒಪ್ಪದ್ದಕ್ಕೆ ಕೆರೆಗೆ ಹಾರಿಬಿಟ್ಟರೆ!

Love Failure: 50ರ ವಿವಾಹಿತ ಪುರಷನೊಂದಿಗೆ 19ರ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿದ್ದಾಳೆ. ಮಾವತ್ತೂರು ಕೆರೆ ಬಳಿ ಇಬ್ಬರ ಚಪ್ಪಲಿಗಳು ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಸಿದ್ದು, ಕೆರೆಯಲ್ಲಿ ಶೋಧ ಕಾರ್ಯ ಮುಂದುವರಿದಿದೆ.

VISTARANEWS.COM


on

By

Love Case
ಕೆರೆ ಬಳಿ ಚಪ್ಪಲಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ಶೋಧ ಕಾರ್ಯಕ್ಕೆ ಮುಂದಾದ ಅಗ್ನಿಶಾಮಕ ದಳ ಸಿಬ್ಬಂದಿ
Koo

ತುಮಕೂರು: ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ (Love case) ನಾಪತ್ತೆ (Missing Case) ಆಗಿದ್ದು, ಕೆರೆಯ ದಡದಲ್ಲಿ ಇಬ್ಬರ ಚಪ್ಪಲಿಗಳು ಪತ್ತೆಯಾಗಿವೆ. ಕೆರೆ ಬಳಿ ಕಾರು ನಿಲ್ಲಿಸಿ ಮೊಬೈಲ್‌ಗಳನ್ನು ಕಾರಿನೊಳಗೆ ಇಟ್ಟು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಘಟನೆ ನಡೆದಿದೆ.

ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ಅನನ್ಯ (19) ಹಾಗೂ ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ (50) ನಾಪತ್ತೆಯಾದವರು. ವಯಸ್ಸಿನ ಅಂತರ ಇದ್ದರೂ, ಇವರಿಬ್ಬರ ನಡುವೆ ಅದ್ಹೇಗೋ ಪ್ರೀತಿ ಚಿಗುರಿತ್ತು. ಕದ್ದುಮುಚ್ಚಿ ಇದ್ದ ಇವರಿಬ್ಬರ ಪ್ರೀತಿ ಕುಟುಂಬಸ್ಥರಿಗೆ ತಿಳಿದುಹೋಗಿತ್ತು. ಈ ಪ್ರೀತಿಗೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದರಿಂದ, ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಎನ್ನಲಾಗಿದೆ.

ಕಳೆದ 3 ದಿನಗಳ ಹಿಂದೆ ಅನನ್ಯ ಮನೆಯಿಂದ ನಾಪತ್ತೆಯಾಗಿದ್ದಳು. ಪೋಷಕರು ಆಕೆಗಾಗಿ ಹುಡುಕಾಟ ನಡೆಸಿದ್ದರು. ಈ ನಡುವೆ ಮಾವತ್ತೂರು ಕೆರೆ ಬಳಿ ಆಕೆಯ ಚಪ್ಪಲಿ ಪತ್ತೆಯಾಗಿದೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೋಟ್ ಸಹಾಯದಿಂದ ಕೆರೆಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ.

ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಅನಿಲ್, ಕೊಳಾಲ ಪಿಎಸ್‌ಐ ರೇಣುಕಾ ಯಾದವ್, ಯೋಗೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇನ್ನೂ ಈ ವಿಷಯ ಎಲ್ಲೆಡೆ ಹಬ್ಬುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಕೊಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Bengaluru news : ಸೋಪಿನ ಮೇಲೆ ಕಾಲಿಟ್ಟು ಆಯತಪ್ಪಿ ಕಟ್ಟಡದ ಮೇಲಿಂದ ಹಾರಿ ಬಿದ್ದಳು; ಎದೆ ಝಲ್​ ಎನಿಸುವ ದೃಶ್ಯ ಸೆರೆ

ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರಗೈದು ಕೊಲೆಗೆ ಯತ್ನಿಸಿದ ಕಾಮುಕ

ರಾಯಚೂರು: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ (Physical Abuse) ಎಸಗಿ ಬಳಿಕ ಕೊಲೆಗೆ ಯತ್ನಿಸಿರುವ ಅಮಾನವೀಯ ಘಟನೆ ನಡೆದಿದೆ. ರಾಯಚೂರಿನ ಲಿಂಗಸುಗೂರು ತಾಲೂಕಿನ ಗುಂಡಸಾಗರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ಬಾಲಕಿಯೊಬ್ಬಳು ಬಹಿರ್ದೆಸೆಗೆಂದು ಹೋಗಿದ್ದಳು. ಇವಳನ್ನೇ ಹಿಂಬಾಲಿಸಿಕೊಂಡು ಬಂದಿದ್ದ ಕಾಮುಕ ಬಸವರಾಜ ಎಂಬಾತ ಅತ್ತಿಂದಿತ್ತ ಕಣ್ಣಾಡಿಸಿದ್ದ. ಯಾರು ಇಲ್ಲದೆ ಇರುವುದನ್ನು ತಿಳಿದು ಏಕಾಏಕಿ ಹಿಂದಿನಿಂದ ಬಂದು ಬಾಲಕಿಯನ್ನು ಗಟ್ಟಿಯಾಗಿ ಹಿಡಿದು ಬಾಯಿಗೆ ಬಟ್ಟೆಯನ್ನು ತುರುಕಿದ್ದಾನೆ. ಆತನ ಮುಷ್ಠಿಯಿಂದ ಬಿಡಿಸಿಕೊಳ್ಳಲು ಆಗದೇ ಇದ್ದಾಗ ಬಾಲಕಿಯ ಅಸಹಾಯಕತೆಯನ್ನೇ ದುರುಪಯೋಗ ಮಾಡಿಕೊಂಡು ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ.

ಅತ್ಯಾಚಾರ ಎಸಗಿದ ಬಳಿಕ ಸಿಕ್ಕಿ ಬೀಳುವ ಭೀತಿಯಲ್ಲಿ ಕಾಮುಕ ಬಸವರಾಜ, ಅಸ್ವಸ್ಥಳಾಗಿದ್ದ ಬಾಲಕಿ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಿದ್ದಾನೆ. ಆದರೆ ಅದ್ಹೇಗೋ ಬಾಲಕಿ ಆತನಿಂದ ತಪ್ಪಿಸಿಕೊಂಡು ಬಂದಿದ್ದು, ನಡೆದಿದ್ದ ಎಲ್ಲ ಘಟನೆಯನ್ನು ಪೋಷಕರಿಗೆ ಹೇಳಿದ್ದಾಳೆ.

Physical Abuse

ಕೂಡಲೇ ಪೋಷಕರು ಸಂತ್ರಸ್ತೆ ಜತೆಗೂಡಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದ ಲಿಂಗಸಗೂರು ಪೊಲೀಸರು ಕೃತ್ಯ ನಡೆದ ಕೆಲವೇ ಗಂಟೆಯಲ್ಲಿ ಅತ್ಯಾಚಾರಿ ಆರೋಪಿ ಬಸವರಾಜ ದ್ಯಾವಪ್ಪ ಆದಾಪುರನನ್ನು ಅರೆಸ್ಟ್‌ ಮಾಡಿದ್ದಾರೆ. ಸದ್ಯ ಈ ಸಂಬಂಧ ಲಿಂಗಸಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Actor Darshan Judicial Custody Jailer Gave UTP Number
ಸ್ಯಾಂಡಲ್ ವುಡ್14 seconds ago

Actor Darshan: ಪರಪ್ಪನ ಅಗ್ರಹಾರದಲ್ಲಿ ʻದಾಸʼ; ʻಡಿʼಬಾಸ್‌ ಕೈದಿ ನಂಬರ್‌ 6106!

viral video
Latest1 min ago

Viral Video: ತಲೆ ಮೇಲೆ ಎರಡು ಗ್ಯಾಸ್ ಸಿಲಿಂಡರ್, ಅದರ ಮೇಲೆ ಬಿಂದಿಗೆ! ಅಬ್ಬಾ ಎಂಥ ಅದ್ಭುತ!

Gully cricket vibes
ಕ್ರೀಡೆ6 mins ago

Gully Cricket Vibes: ಗಲ್ಲಿ ಕ್ರಿಕೆಟ್​ನಂತೆ ಚೆಂಡು ಹುಡುಕಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Share Market Scam
ಕ್ರೈಂ16 mins ago

Share Market Scam: ಮುಖೇಶ್ ಅಂಬಾನಿ ಡೀಪ್ ಫೇಕ್‌! 7 ಲಕ್ಷ ರೂ. ಕಳೆದುಕೊಂಡ ವೈದ್ಯೆ

Tharun Sudhir sonal monteiro will get marriage
ಸಿನಿಮಾ17 mins ago

Tharun Sudhir: ಸೋನಲ್ ಜತೆ `ತರುಣ್ ಸುಧೀರ್‌’ಗೆ ಕೂಡಿಬಂತು ಕಂಕಣಭಾಗ್ಯ?

Rushikonda Palace Issue
ದೇಶ31 mins ago

Rushikonda Palace: 500 ಕೋಟಿಯ ಋಷಿಕೊಂಡ ಅರಮನೆ; 12 ಬೆಡ್‌ರೂಮ್‌, ವಾಶ್‌ರೂಮ್‌ ಒಂದು ಮನೆಯಷ್ಟು!

Sumit Nagal
ಕ್ರೀಡೆ37 mins ago

Paris Olympics 2024: ಅಧಿಕೃತವಾಗಿ ಪ್ಯಾರಿಸ್​ ಒಲಿಂಪಿಕ್ಸ್ ಟಿಕೆಟ್​ ಪಡೆದ ಸುಮಿತ್‌ ನಗಾಲ್‌

Suraj Revanna Case
ಕರ್ನಾಟಕ54 mins ago

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌; ಎಂಎಲ್‌ಸಿ ಸೂರಜ್‌ ರೇವಣ್ಣ ಅರೆಸ್ಟ್‌

Doodle V3 E-Cycle
ಆಟೋಮೊಬೈಲ್1 hour ago

Doodle V3 E-Cycle: ‘ಕಲ್ಕಿ 2898 ಎಡಿ’ನಿಂದ ಪ್ರೇರಿತವಾದ ಇ-ಸೈಕಲ್ ಮಾರುಕಟ್ಟೆಗೆ

Suraj Revanna Case
ಕರ್ನಾಟಕ1 hour ago

Suraj Revanna Case:  ಸಲಿಂಗ ಕಾಮ ಆರೋಪ; ಸಂತ್ರಸ್ತನ ವೈದ್ಯಕೀಯ ಪರೀಕ್ಷೆ ಬಳಿಕ ಇಂದೇ ಅರೆಸ್ಟ್‌ ಆಗ್ತರಾ ಸೂರಜ್‌ ರೇವಣ್ಣ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ2 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ7 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ7 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ7 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌