Dina Bhavishya : ಕುಟುಂಬದ ಆಪ್ತರಿಂದ ಈ ರಾಶಿಯವರಿಗೆ ಸಿಗಲಿದೆ ಗುಡ್‌ ನ್ಯೂಸ್‌ - Vistara News

ಭವಿಷ್ಯ

Dina Bhavishya : ಕುಟುಂಬದ ಆಪ್ತರಿಂದ ಈ ರಾಶಿಯವರಿಗೆ ಸಿಗಲಿದೆ ಗುಡ್‌ ನ್ಯೂಸ್‌

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಬಿದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಧನಸ್ಸು ರಾಶಿಯಿಂದ ಶನಿವಾರ ಬೆಳಗ್ಗೆ 11:35ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಮಿಥುನ ರಾಶಿಯವರು ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸ್ನೇಹಿತರು, ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ ಇದೆ. ಕನ್ಯಾ ರಾಶಿಯವರು ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದ್ದು ಲಾಭವಾಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (25-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಬಿದಿಗೆ 18:57 ವಾರ: ಶನಿವಾರ
ನಕ್ಷತ್ರ: ಜೇಷ್ಠಾ 10:35 ಯೋಗ: ಸಿದ್ದಿ 10:05
ಕರಣ: ತೈತುಲ 07:14 ಅಮೃತ ಕಾಲ: ಬೆಳಗಿನ ಜಾವ 04:12 ರಿಂದ 05:48
ದಿನದ ವಿಶೇಷ: ನಾರದ ಜಯಂತಿ

ಸೂರ್ಯೋದಯ : 05:53   ಸೂರ್ಯಾಸ್ತ : 06:41

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ
6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ:ಹಣದ ಹೂಡಿಕೆ ಕುರಿತು ಆಲೋಚನೆ ಮಾಡುವಿರಿ. ಹಾಸ್ಯದ ಮನೋವೃತ್ತಿ ಇತರರನ್ನು ಆಕರ್ಷಿಸುತ್ತದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸ್ನೇಹಿತರು, ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ ಇದೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ. ಯಾವುದೇ ಆತುರದ ಮಾತುಗಳನ್ನಾಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಒತ್ತಡದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರಲಿದೆ. ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ನಿಮಗೆ ವಿಜಯವನ್ನು ತಂದು ಕೊಡಲಿದೆ. ಸಂಗಾತಿಯ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವಿರಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ, ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ ವ್ಯವಹಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದ್ದು ಲಾಭವಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಿರಿಯರ ಮಾರ್ಗದರ್ಶನ ಸಿಗಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದಲ್ಲಿ ಅನೇಕ ಬದಲಾವಣೆಗಳನ್ನು ಕಾಣುವ ಸಾಧ್ಯತೆ ಇದೆ. ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ನಿಮ್ಮದಲ್ಲದ ಕುರಿತು ಅನಗತ್ಯವಾಗಿ ಚರ್ಚೆ ಮಾಡಿ, ಕುಟುಂಬದ ಸ್ವಾಸ್ಥ್ಯ ಕೆಡಿಸಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡುವ ಸಾಧ್ಯತೆ ಇದೆ. ಆಲಸ್ಯತನದಿಂದ ಕಾರ್ಯ ಮುಂದೂಡುವುದು ಬೇಡ. ಅಮೂಲ್ಯ ವಸ್ತುಗಳ ಕುರಿತಾಗಿ ಜಾಗೃತೆ ಇರಲಿ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸುವುದು ಅಗತ್ಯ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅತಿಯಾದ ಒತ್ತಡ ಉಂಟು ಮಾಡುವ ವಿಚಾರಗಳಿಂದ ದೂರ ಇರಿ. ಕುಟುಂಬದ ಆಪ್ತರಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದ ವ್ಯತ್ಯಾಸದಿಂದ ದಿನದ ಮಟ್ಟಿಗೆ ಖರ್ಚು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಹಾಸ್ಯ ಪ್ರವೃತ್ತಿಯಿಂದ ಬರುವ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದವರು ನಿಮ್ಮ ಬಗ್ಗೆ ಹೆಚ್ಚು ಕಾಳಜಿ ವಹಿಸುವರು. ಆರೋಗ್ಯ‌ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಅತಿಯಾದ ಉತ್ಸಾಹದ ಭರದಲ್ಲಿ ಅತಿರೇಕದ ಮಾತುಗಳನ್ನಾಡುವುದು ಸರಿಯಲ್ಲ, ಅಪಾಯ ತಂದಿತು ಎಚ್ಚರಿಕೆ ಇರಲಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಆಹಾರ ಕ್ರಮದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಸಂಗಾತಿಯ ಮಾತುಗಳು ಹಿತವೇನಿಸಿದರೂ ಅವರ ಮಾತುಗಳಿಗೆ ಮನ್ನಣೆ ಸಿಗುವುದಿಲ್ಲ. ಆರೋಗ್ಯ ಹಾಗೂ ಹಣಕಾಸಿನ ವಿಷಯದಲ್ಲಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya: ಈ ರಾಶಿಯವರಿಗೆ ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದುಕೊಡಲಿದೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
Koo

ಚಂದ್ರನು ಕುಂಭ ರಾಶಿಯಿಂದ ಮೀನ ರಾಶಿಗೆ ಬುಧವಾರ ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಕುಂಭ ರಾಶಿಯವರಿಗೆ ಹೂಡಿಕೆಯ ಲಾಭ ಇಂದು ಉಪಯೋಗಕ್ಕೆ ಬರುವುದು. ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದು ಕೊಡಲಿದೆ. ಇನ್ನು ವೃಶ್ಚಿಕ ರಾಶಿಯವರಿಗೆ ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (26-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ಪಂಚಮಿ 20:54 ವಾರ: ಬುಧವಾರ
ನಕ್ಷತ್ರ: ಧನಿಷ್ಠಾ 13:04 ಯೋಗ: ವಿಷ್ಕಂಭ 06:12
ಕರಣ: ಕೌಲವ 10:02 ಅಮೃತಕಾಲ: ಬೆಳಗಿನ ಜಾವ 04:51 ರಿಂದ 06:21
ದಿನದ ವಿಶೇಷ: ಕೂಡ್ಲಿ ನೃಸಿಂಹ ಭಾರತೀ ಸ್ವಾಮಿಗಳ ಆರಾಧನೆ

ಸೂರ್ಯೋದಯ : 05:44   ಸೂರ್ಯಾಸ್ತ : 07:15

ರಾಹುಕಾಲ: ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆಪ್ತರ ವರ್ತನೆಯಿಂದ ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆಗಳು ಹೆಚ್ಚು, ತಾಳ್ಮೆಯಿಂದ ಇರಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು. ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ, ಆರೋಗ್ಯದ ಕಡೆಗೆ ಗಮನ ಹರಿಸಿ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಪ್ರಗತಿಯೊಂದಿಗೆ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಿರಿಯರಿಂದ ಮಾರ್ಗದರ್ಶನ. ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಯಾರಾದರೂ ನಿಮ್ಮ ಸಹಾಯ ಬೇಡಿ ಬರುವರು, ವಿಮರ್ಶಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣ. ಯಾರಾದರೂ ನಿಮ್ಮ ಭಾವನೆಗಳನ್ನು ನಿರಾಸೆ ಮಾಡುವ ಸಾಧ್ಯತೆ, ಅವರ ಮಾತನ್ನು ಲಕ್ಷಿಸದೆ ಕಾರ್ಯದಲ್ಲಿ ಮುನ್ನುಗ್ಗಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹೊಸ ಭರವಸೆಯ ಆಶಾಭಾವನೆ ಮೂಡಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ. ಅಪರಿಚರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರಿಕೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕವಾಗಿ ಲಾಭ ಕಡಿಮೆ. ಹೊಸ ಆಲೋಚನೆಗಳು ನಿಮ್ಮನ್ನು ಸೃಜನಾತ್ಮಕವಾಗಿ ಏನಾದರೂ ಮಾಡಲು ಪ್ರಯತ್ನಿಸುವಂತೆ ಮಾಡುವಂತೆ ಪ್ರೇರೇಪಿಸುತ್ತದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣ, ದಿನದ ಮಟ್ಟಿಗೆ ಖರ್ಚು. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಾಸಿಗೆ ಇದ್ದಷ್ಟು ಕಾಲು ಚಾಚಿ. ಆರೋಗ್ಯ, ಮಾಧ್ಯಮ ಕ್ಷೇತ್ರ ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಪ್ರಭಾವಿ ಜನರ ಬೆಂಬಲ ಸಿಗಲಿದೆ. ಇದರಿಂದ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ. ಒಡಹುಟ್ಟಿದವರ ಸಹಕಾರ ಸಿಗಲಿದೆ. ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನು ಆಡಿ, ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ : ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಇಂದು ಹಣಕಾಸಿನ ಹೊಡಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಪ್ರಯಾಣದಿಂದ ಲಾಭ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ಭಾವನಾ ಜೀವಿಗಳಾದ ನೀವು ನಕಾರಾತ್ಮಕ ಆಲೋಚನೆಗಳಿಂದ ದೂರ ಇರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ, ಕ್ಷೇತ್ರ ದರ್ಶನ ಪಡೆದು ಮಾನಸಿಕ ನೆಮ್ಮದಿ ತಂದುಕೊಳ್ಳುವುದು ಅವಶ್ಯಕ. ಮಕ್ಕಳ ಆರೋಗ್ಯದ ಕಡೆಗೆ ಗಮನ ಹರಿಸಿ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಮಕರ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಸಾಧ್ಯತೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಕೆಲಸ ಕಾರ್ಯಗಳಲ್ಲಿ ಬಳಸಿಕೊಂಡರೆ ಇನ್ನೂ ಹೆಚ್ಚು ಆಕರ್ಷಕ ವ್ಯಕ್ತಿತ್ವ ವಿಕಸನ ಆಗುತ್ತದೆ. ಆರೋಗ್ಯ ಉತ್ತಮ. ದಿನದ ಮಟ್ಟಿಗೆ ಖರ್ಚು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಅತಿಥಿಗಳ ಆಗಮನ ಸಂತಸ ತರುವುದು. ಆತ್ಮವಿಶ್ವಾಸ ಹೊಸ ಭರವಸೆ ಮೂಡಲಿದೆ. ಹೂಡಿಕೆಯ ಲಾಭ ಇಂದು ಉಪಯೋಗಕ್ಕೆ ಬರುವುದು. ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದು ಕೊಡಲಿದೆ. ಆರೋಗ್ಯ, ಉದ್ಯೋಗದಲ್ಲಿ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅತಿರೇಕದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಕೋಪಗೊಳ್ಳುವಂತೆ ಉದ್ರೇಕವಾಗುವ ವಿಷಯಗಳಿಂದ ದೂರ ಇರಿ. ತಾಳ್ಮೆಯಿಂದ ವರ್ತಿಸಿ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಕುಟುಂಬದ ಆಪ್ತರಿಂದ ಶುಭ ಸುದ್ದಿ; ಬಹು ದಿನಗಳ ಕನಸು ನನಸಾಗುವ ಕಾಲವಿದು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ಚೌತಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavihsya
Koo

ಚಂದ್ರನು ಮಂಗಳವಾರವೂ ಕುಂಭ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ವೃಷಭ ರಾಶಿಯವರು ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಕಟಕ ರಾಶಿಯವರು ಒತ್ತಡದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರಲಿದೆ. ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ನಿಮಗೆ ವಿಜಯವನ್ನು ತಂದುಕೊಡಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (25-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ಚೌತಿ 23:10 ವಾರ: ಮಂಗಳವಾರ
ನಕ್ಷತ್ರ: ಶ್ರವಣಾ 14:31 ಯೋಗ: ವೈಧೃತಿ 09:04
ಕರಣ: ಭವ 12:17 ಅಮೃತಕಾಲ: ಬೆಳಗಿನ ಜಾವ 03:19 ರಿಂದ 04:49
ದಿನದ ವಿಶೇಷ: ಸಂಕಷ್ಟಹರ ಚತುರ್ಥಿ

ಸೂರ್ಯೋದಯ : 05:56   ಸೂರ್ಯಾಸ್ತ : 06:49

ರಾಹುಕಾಲ: ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಹಣದ ಹೂಡಿಕೆ ಕುರಿತು ಆಲೋಚನೆ ಮಾಡುವಿರಿ. ಹಾಸ್ಯದ ಮನೋವೃತ್ತಿ ಇತರರನ್ನು ಆಕರ್ಷಿಸುತ್ತದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸ್ನೇಹಿತರು,ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ ಇದೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ. ಯಾವುದೇ ಆತುರದ ಮಾತುಗಳನ್ನು ಆಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಒತ್ತಡದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರಲಿದೆ. ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ನಿಮಗೆ ವಿಜಯವನ್ನು ತಂದುಕೊಡಲಿದೆ. ಸಂಗಾತಿಯ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳವಿರಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ, ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ ವ್ಯವಹಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭವಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಿರಿಯರ ಮಾರ್ಗದರ್ಶನ ಸಿಗಲಿದೆ, ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದಲ್ಲಿ ಅನೇಕ ಬದಲಾವಣೆಗಳನ್ನು ಕಾಣುವ ಸಾಧ್ಯತೆ ಇದೆ. ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ನಿಮಗಲ್ಲದವರ ಕುರಿತು ಅನಗತ್ಯವಾಗಿ ಚರ್ಚೆ ಮಾಡಿ, ಕುಟುಂಬದ ಸ್ವಾಸ್ಥ್ಯ ಕೆಡಿಸಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ : ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡುವ ಸಾಧ್ಯತೆ ಇದೆ. ಆಲಸ್ಯತನದಿಂದ ಕಾರ್ಯ ಮುಂದುಡುವುದು ಬೇಡ. ಅಮೂಲ್ಯ ವಸ್ತುಗಳ ಕುರಿತಾಗಿ ಜಾಗೃತೆ ಇರಲಿ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸುವುದು ಅಗತ್ಯ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅತಿಯಾದ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ. ಕುಟುಂಬದ ಆಪ್ತರಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದ ಕಾರಣಕ್ಕೆ ದಿನದ ಮಟ್ಟಿಗೆ ಖರ್ಚು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಹಾಸ್ಯ ಪ್ರವೃತ್ತಿಯಿಂದ,ಬರುವ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದವರು ನಿಮ್ಮ ಬಗೆಗೆ ಹೆಚ್ಚು ಕಾಳಜಿ ವಹಹಿಸುವರು. ಆರೋಗ್ಯ‌ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ.ಅತಿಯಾದ ಉತ್ಸಾಹದ ಭರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಸರಿಯಲ್ಲ, ಅಪಾಯ ತಂದಿತು ಎಚ್ಚರಿಕೆ.ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಆಹಾರ ಕ್ರಮದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಸಂಗಾತಿಯ ಮಾತುಗಳು ಹಿತವೇನಿಸಿದರೂ ಅವರ ಮಾತುಗಳಿಗೆ ಮನ್ನಣೆ ಸಿಗುವುದಿಲ್ಲ. ಆರೋಗ್ಯ ಹಾಗೂ ಹಣಕಾಸಿನ ವಿಷಯವು ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಗಾಳಿಯಲ್ಲಿ ಗೋಪುರ ಕಟ್ಟಿಕೊಂಡು ಈ ರಾಶಿಯವರು ವ್ಯರ್ಥ ಪ್ರಯತ್ನ ಮಾಡಬೇಡಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ತದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಸೋಮವಾರವೂ ಕುಂಭ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ವೃಷಭ ರಾಶಿಯವರು ಹಿರಿಯರ ಸಲಹೆ ಆರ್ಥಿಕವಾಗಿ ಲಾಭ ತರುವುದು. ಕುಟುಂಬದ ಸದಸ್ಯರ ಬೆಂಬಲ ಕೆಲಸ ಕಾರ್ಯಗಳಲ್ಲಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಮನ್ನಣೆ ಸಿಕ್ಕು ಪ್ರಶಂಸೆ ಪಡೆಯುವಿರಿ. ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವಂತೆ ಮಾಡಬಹುದು, ಮಾತು ಮಿತವಾಗಿರಲಿ. ಕಟಕ ರಾಶಿಯವರು ಅವಿರತವಾಗಿ ಶ್ರಮಿಸಿದ ಜೀವಕೆ ವಿಶ್ರಾಂತಿಯು ಸಿಗಲಿದೆ. ಸಂಗಾತಿಯೊಂದಿಗೆ ಹೂಡಿಕೆ ಕುರಿತಾಗಿ ಚರ್ಚೆ ಮಾಡುವಿರಿ. ಉತ್ತಮ ವ್ಯಕ್ತಿಗಳ ಸಂಪರ್ಕ, ಮಾರ್ಗದರ್ಶನ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (24-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ತದಿಗೆ 25:22 ವಾರ: ಸೋಮವಾರ
ನಕ್ಷತ್ರ: ಉತ್ತರಾಷಾಡ 15:53 ಯೋಗ:ಇಂದ್ರ 11:50
ಕರಣ: ವಣಿಜ 14:25 ಅಮೃತಕಾಲ: ಬೆಳಗ್ಗೆ 09:48 ರಿಂದ 11:20
ದಿನದ ವಿಶೇಷ: ಮೇಲುಕೋಟೆ ಪಲ್ಲವೋತ್ಸವ, ಕೊಳ್ಳೇಗಾಲ ಸುಬ್ರಮಣ್ಯ ಸ್ವಾಮಿ ವರ್ಧಂತಿ

ಸೂರ್ಯೋದಯ : 05:55   ಸೂರ್ಯಾಸ್ತ : 06:49

ರಾಹುಕಾಲ: ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರ್ಥಿಕ ವ್ಯವಹಾರಗಳ ಕುರಿತಾಗಿ ಹಿರಿಯರಿಂದ ಮಾರ್ಗದರ್ಶನ ಪಡೆಯುವಿರಿ. ಆರೋಗ್ಯದ ಕುರಿತು ಕಾಳಜಿ ವಹಿಸಿ, ಅದರಲ್ಲಿಯೂ ಕಣ್ಣಿನ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಸೂಕ್ತ. ಆರ್ಥಿಕವಾಗಿ ಪ್ರಗತಿ ಇರಲಿದೆ. ವ್ಯಾಪಾರ-ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ವೃಷಭ: ಹಿರಿಯರ ಸಲಹೆ ಆರ್ಥಿಕವಾಗಿ ಲಾಭ ತರುವುದು. ಕುಟುಂಬದ ಸದಸ್ಯರ ಬೆಂಬಲ ಕೆಲಸ ಕಾರ್ಯಗಳಲ್ಲಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಮನ್ನಣೆ ಸಿಕ್ಕು ಪ್ರಶಂಸೆ ಪಡೆಯುವಿರಿ. ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವಂತೆ ಮಾಡಬಹುದು, ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಆಶಾವಾದಿಗಳಾಗಿರಿ, ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡುವುದು. ಅನಿವಾರ್ಯ ಕಾರಣಗಳಿಂದ ಖರ್ಚು ಮಾಡುವ ಸಾಧ್ಯತೆ ಇದೆ. ಹಳೆಯ ಪರಿಚಿತರ ಸಂಪರ್ಕ ಪುನಃ ಸ್ಥಾಪಿತವಾಗುವುದು. ವೈವಾಹಿಕ ಜೀವನಕ್ಕೆ ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕಟಕ:ಅವಿರತವಾಗಿ ಶ್ರಮಿಸಿದ ಜೀವಕೆ ವಿಶ್ರಾಂತಿಯು ಸಿಗಲಿದೆ. ಸಂಗಾತಿಯೊಂದಿಗೆ ಹೂಡಿಕೆ ಕುರಿತಾಗಿ ಚರ್ಚೆ ಮಾಡುವಿರಿ. ಉತ್ತಮ ವ್ಯಕ್ತಿಗಳ ಸಂಪರ್ಕ, ಮಾರ್ಗದರ್ಶನ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ತಾಳ್ಮೆಯಿಂದ ಸಹಕರಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಸಿಂಹ: ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಹಣಕಾಸು ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಅಗತ್ಯ ವಸ್ತುಗಳ ಖರೀದಿ ಸಾಧ್ಯತೆ ಇದೆ. ಆತುರದ ಮಾತುಗಳು ಸುತ್ತಮುತ್ತಲಿನ ಜನರೊಂದಿಗೆ ವಾದಕ್ಕೆ ಇಳಿಯುವಂತೆ ಮಾಡಬಹುದು ಎಚ್ಚರಿಕೆ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ:ಹೊಸ ಆರ್ಥಿಕ ಒಪ್ಪಂದಗಳು ಗರಿಗೆದರಲಿವೆ. ಆಪ್ತರಿಂದ ಆಮಂತ್ರಣ ಸಿಗಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಆಸ್ತಿ ಖರೀದಿ ವ್ಯವಹಾರದ ಕುರಿತು ಚರ್ಚೆ ಮಾಡುವಿರಿ. ಸಂಗಾತಿಯ ಮಾತುಗಳಿಗೆ ಮನ್ನಣೆ ಸಿಗದೇ ಇರುವುದರಿಂದ ನಿಮ್ಮ ಮೇಲೆ ಕೋಪಿಸಿಕೊಳ್ಳುವ ಸಾಧ್ಯತೆ ಇದೆ. ನಗುವಿನ ಮೂಲಕ ಪರಿಸ್ಥಿತಿ ತಿಳಿಗೊಳಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 6

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಗಾಳಿಯಲ್ಲಿ ಗೋಪುರ ಕಟ್ಟಿಕೊಂಡು ವ್ಯರ್ಥ ಪ್ರಯತ್ನ ಮಾಡಬೇಡಿ. ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ.ಕುಟುಂಬದ ಸದಸ್ಯರ ಮಾರ್ಗದರ್ಶನ ಪಡೆಯುವುದು ಒಳ್ಳೆಯದು. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಸಂಗಾತಿಯ ಮಧುರ ಪ್ರೀತಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ : ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಹಣಕಾಸಿನ ವ್ಯವಹಾರ ನಿರೀಕ್ಷಿಸಿದಷ್ಟು ಸಾಧ್ಯವಿಲ್ಲ. ಅತಿಥಿಗಳ ಆಗಮನದಿಂದ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ ಇದೆ. ಆತುರದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಕುಟುಂಬ ಸದಸ್ಯರೊಂದಿಗೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ, ಯಾವುದೇ ಹಣಕಾಸು ಒಪ್ಪಂದಗಳನ್ನು ಮಾಡಿಕೊಳ್ಳುವುದು ಬೇಡ. ಪ್ರೀತಿ ಪಾತ್ರರೊಂದಿಗೆ ಆತುರದ ಮಾತುಗಳಿಂದ ನೋವು ಆಗಲಿದೆ. ನಿಧಾನಿಸಿ, ಯೋಚಿಸಿ ಮಾತನಾಡಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಕರ: ಬಹಳ ದಿನಗಳ ಕನಸು ನನಸಾಗುವ ಕಾಲವಿದು. ಆತುರದಲ್ಲಿ ಯಾವುದೇ ಸಂಕಲ್ಪ ಮಾಡುವುದು ಬೇಡ. ಸ್ನೇಹಿತರ ಕಷ್ಟಕಾಲಕ್ಕೆ ಸ್ಪಂದಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕುಂಭ: ಅತಿಯಾದ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯಿರಿ. ತಾಳ್ಮೆಯಿಂದ ವರ್ತಿಸಿ. ಆತುರದಿಂದ ಮಾತನಾಡುವುದು ಬೇಡ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಮೀನ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ ಕಾಳಜಿ ವಹಿಸುವುದು ಸೂಕ್ತ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಂಗಾತಿಯ ವರ್ತನೆ ನಿಮಗೆ ಕೋಪ ತರಿಸಬಹುದು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರು ಮಡದಿಯ ಪ್ರೀತಿಗೆ ಸೋಲುವಿರಿ; ಮನೆಯಲ್ಲಿ ಸಂತೋಷದ ದಿನ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ಬಿದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ಮಕರ ರಾಶಿಯಿಂದ ಭಾನುವಾರ ರಾತ್ರಿ 11:14ಕ್ಕೆ ಕುಂಭ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಉತ್ಸಾಹದ ವಾತಾವರಣ ತುಂಬಿರಲಿದೆ. ಆಪ್ತರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ಮಿಥುನ ರಾಶಿಯವರು ಸಂತಸದ ಕ್ಷಣಗಳನ್ನು ಕಳೆಯುವಿರಿ. ಆರ್ಥಿಕ ಪ್ರಗತಿ ಇರಲಿದೆ. ಬಹಳ ದಿನಗಳ ಬಾಕಿ ಇರುವ ಕಾರ್ಯವು ಪೂರ್ಣವಾಗುವುದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (23-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ಬಿದಿಗೆ 27:25 ವಾರ: ಭಾನುವಾರ
ನಕ್ಷತ್ರ: ಪೂರ್ವಾಆಷಾಢ 17:02 ಯೋಗ: ಬ್ರಹ್ಮ 14:24
ಕರಣ: ತೈತುಲ 16:21 ಅಮೃತಕಾಲ: ಮಧ್ಯಾಹ್ನ 12:26ರಿಂದ 01:58

ಸೂರ್ಯೋದಯ : 05:55   ಸೂರ್ಯಾಸ್ತ : 06:49

ರಾಹುಕಾಲ: ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉತ್ಸಾಹದ ವಾತಾವರಣ ತುಂಬಿರಲಿದೆ. ಆಪ್ತರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ವ್ಯಾಪಾರ ವ್ಯವಹಾರಗಳಿಗೆ ಹೆಚ್ಚಿನ ಲಾಭ ದೊರೆಯಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ನಿಮ್ಮ ವ್ಯಕ್ತಿತ್ವ ಇತರರನ್ನು ಆಕರ್ಷಿಸಿ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಕುಟುಂಬದಲ್ಲಿ ನೆಮ್ಮದಿ. ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ಸಂತಸದ ಕ್ಷಣಗಳನ್ನು ಕಳೆಯುವಿರಿ. ಆರ್ಥಿಕ ಪ್ರಗತಿ ಇರಲಿದೆ. ಬಹಳ ದಿನಗಳ ಬಾಕಿ ಇರುವ ಕಾರ್ಯವು ಪೂರ್ಣವಾಗುವುದು. ಮನೆಯಲ್ಲಿ ಪರಸ್ಪರ ಸಹಕಾರ ಸಿಗುವುದು, ಉತ್ಸಾಹದ ದಿನವಿದು. ಅದೃಷ್ಟ ಸಂಖ್ಯೆ: 3

Horoscope Today

ಕಟಕ:ಆಕರ್ಷಕ ವ್ಯಕ್ತಿತ್ವ ಹೊಂದಿರುವ ನೀವು ಇಂದು ಇತರರನ್ನು ಆಕರ್ಷಿಸುವಿರಿ. ಆರ್ಥಿಕ ಪ್ರಗತಿ ಸಾಧಾರಣ ವಿದ್ದರೂ ಸಮರ್ಥವಾಗಿ ನಿರ್ವಹಿಸುವಿರಿ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಮಡದಿಯ ಪ್ರೀತಿಗೆ ಸೋಲುವಿರಿ. ಕುಟುಂಬದಲ್ಲಿ ನೆಮ್ಮದಿ. ಅದೃಷ್ಟ ಸಂಖ್ಯೆ: 7

Horoscope Today

ಸಿಂಹ:ಉದ್ಯೋಗ ಅಪೇಕ್ಷಿತರಿಗೆ ಇಂದು ಉದ್ಯೋಗದ ಭರವಸೆ ಸಿಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಪರಿಶ್ರಮಕ್ಕೆ ತಕ್ಕ ಪ್ರತಿ ಫಲ ಸಿಗುವುದು. ಮನೆಯವರ ಪ್ರೀತಿ ಸಹಕಾರ ಸಿಗಲಿದೆ. ಕುಟುಂಬದಲ್ಲಿ ನೆಮ್ಮದಿ ಇರಲಿದೆ. ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ:ಮನೆಯಲ್ಲಿ ಸದಸ್ಯರ ಮಧ್ಯೆ ಕಲಹದಿಂದ ವಾತಾವರಣ ಹದಗೆಡಬಹುದು. ಕೆಲಸದಲ್ಲಿ ಹಿರಿಯರಿಂದ ಒತ್ತಡ ಇರಲಿದೆ, ಎಚ್ಚರಿಕೆ ವಹಿಸಿ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಯಾವುದೇ ಹೂಡಿಕೆ ಮಾಡುವುದು ಬೇಡ. ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಮನೆಯಲ್ಲಿ ಸಂತೋಷದ ದಿನ. ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ : ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಹೊಂದಲು ಹಿರಿಯರು ಮಾರ್ಗದರ್ಶನ ಮಾಡಲಿದ್ದಾರೆ. ಧೈರ್ಯದಿಂದ ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗುವುದು. ಕುಟುಂಬದಲ್ಲಿ ನೆಮ್ಮದಿ ಸಿಗಲಿದೆ. ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಕುಟುಂಬ ಸದಸ್ಯರ ಆರೋಗ್ಯ ಸಂಬಂಧಿ ವಿಷಯಗಳು ತಮಗೆ ಒತ್ತಡ ಉಂಟುಮಾಡಬಹುದು. ಉದಾಸೀನತೆ ಮಾಡುವುದು ಬೇಡ. ಆಶಾವಾದಿಗಳಾಗಿರಿ ಕುಲದೇವರನ್ನು ಸ್ಮರಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಮಕರ: ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಕಿರಿಕಿರಿ ಒತ್ತಡ ಉಂಟಾಗುವ ಸಾಧ್ಯತೆ ಇದೆ. ಆಲಸ್ಯದಿಂದ ದೂರವಿದ್ದು ಕಾರ್ಯ ಪೂರ್ಣ ಮಾಡಿ. ಕೆಲಸದ ಒತ್ತಡದಿಂದ ಮನೆಯ ಸದಸ್ಯರ ಮೇಲೆ ಹಾಕಿ, ವಾತಾವರಣ ಹದಗೆಡಲು ಕಾರಣವಾಗಬೇಡಿ. ಗುರುಗಳ ಆರಾಧನೆ ಮಾಡಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ಭೂ ಸಂಬಂಧಿ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರುವುದು. ಅನ್ಯರು ಆಡುವ ಕುಹುಕು ಮಾತುಗಳಿಗೆ ಧ್ವನಿಯಾಗಬೇಡಿ. ಕುಟುಂಬದಲ್ಲಿ ನೆಮ್ಮದಿ. ಅದೃಷ್ಟ ಸಂಖ್ಯೆ: 3

Horoscope Today

ಮೀನ: ನಿಮ್ಮ ಮಹತ್ವಾಕಾಂಕ್ಷೆಯ ಕೆಲಸ ಕಾರ್ಯಗಳು ಕುಂಠಿತವಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಆರ್ಥಿಕ ನಷ್ಟದಿಂದ ತಪ್ಪಿಸಿಕೊಳ್ಳಿ. ಸಂಗಾತಿಯ ಮಾತುಗಳು ಹಿತವೆನಿಸುವುದು. ಕುಟುಂಬದಲ್ಲಿ ನೆಮ್ಮದಿ. ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Para Badminton Ranking
ಕ್ರೀಡೆ8 mins ago

Para Badminton Ranking: ಮೊದಲ ಬಾರಿಗೆ ವಿಶ್ವ ನಂ.1 ಸ್ಥಾನಕ್ಕೇರಿದ ಕನ್ನಡಿಗ ಸುಹಾಸ್‌ ಯತಿರಾಜ್

Actor Darshan Renukaswamy assault police lathi found How did D Gang get
ಕ್ರೈಂ14 mins ago

Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

IRCTC
ದೇಶ37 mins ago

IRCTC: ಆನ್‌ಲೈನ್‌ನಲ್ಲಿ ರೈಲ್ವೇ ಟಿಕೆಟ್‌ ಬುಕ್ಕಿಂಗ್‌ ಮಾಡೋ ಮುನ್ನ ಹೊಸ ನಿಯಮದ ಬಗ್ಗೆ ಇರಲಿ ಗಮನ!

1983 World Cup
ಕ್ರೀಡೆ40 mins ago

1983 WC Win Anniversary: ಚೊಚ್ಚಲ ಏಕದಿನ ವಿಶ್ವಕಪ್ ಗೆಲುವಿನ​ ಸವಿ ನೆನಪನ್ನು ವಿಂಡೀಸ್​ನಲ್ಲಿ ಕೇಕ್​ ಕತ್ತರಿಸಿ ಸಂಭ್ರಮಿಸಿದ ರವಿಶಾಸ್ತ್ರಿ, ಗವಾಸ್ಕರ್, ​ಬಿನ್ನಿ

Viral Video
Latest42 mins ago

Viral Video: ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿ ಬೆರಗುಗೊಳಿಸಿದ ಅತ್ಯಂತ ಕಿರಿಯ ಸಂಸದೆ!

cm siddaramaiah water price hike
ಕರ್ನಾಟಕ46 mins ago

CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

Neha Gowda in saree with baby bump
ಸ್ಯಾಂಡಲ್ ವುಡ್47 mins ago

Neha Gowda: ಸೀರೆಯುಟ್ಟು ಸಿಂಪಲ್‌ ಆಗಿ ಗಂಡನ ಜತೆ ಪೋಸ್‌ ಕೊಟ್ಟ ಗರ್ಭಿಣಿ ನೇಹಾ ಗೌಡ!

Viral Video
Latest49 mins ago

Viral Video : ‘ಅಲ್ಲಾಹು ಅಕ್ಬರ್’ ಎನ್ನದ ಹಿಂದೂ ಬಾಲಕನಿಗೆ ಎಂಜಲು ನೆಕ್ಕಲು ಹೇಳಿದ ಮುಸ್ಲಿಂ ಯುವಕರು

Lok Sabha Speaker
ದೇಶ50 mins ago

Lok Sabha Speaker: ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

Kaagada movie released on 5th July
ಕರ್ನಾಟಕ54 mins ago

Kannada New Movie: ಟ್ರೇಲರ್ ಮೂಲಕ ಸದ್ದು ಮಾಡುತ್ತಿರುವ “ಕಾಗದ” ಜುಲೈ 5ರಂದು ತೆರೆಗೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌