Kiccha Sudeep: ʻಮ್ಯಾಕ್ಸ್ʼ ಪ್ರಿ- ಕ್ಲೈಮ್ಯಾಕ್ಸ್ ಫೋಟೊ ಲೀಕ್‌? ಬೆಂಕಿ ಬಿರುಗಾಳಿ ಅಂದ್ರು ಫ್ಯಾನ್ಸ್‌! - Vistara News

ಸ್ಯಾಂಡಲ್ ವುಡ್

Kiccha Sudeep: ʻಮ್ಯಾಕ್ಸ್ʼ ಪ್ರಿ- ಕ್ಲೈಮ್ಯಾಕ್ಸ್ ಫೋಟೊ ಲೀಕ್‌? ಬೆಂಕಿ ಬಿರುಗಾಳಿ ಅಂದ್ರು ಫ್ಯಾನ್ಸ್‌!

Kiccha Sudeep: ಈ ಹಿಂದೆ ಕಿಚ್ಚ ಸುದೀಪ್‌ ಅವರು ಶೂಟಿಂಗ್‌ ಕಂಪ್ಲೀಟ್‌ ಎಂದು ಟ್ವೀಟ್‌ನಲ್ಲಿ ಶೇರ್‌ ಮಾಡಿಕೊಂಡಿದ್ದರು. ಕಿಚ್ಚ ಸುದೀಪ್‌ ಎಕ್ಸ್‌ನಲ್ಲಿ ʻʻಮಹಾಬಲಿಪುರಂನಲ್ಲಿ ʻಮ್ಯಾಕ್ಸ್‌ʼಗಾಗಿ ಒಂದು ಸುತ್ತು. ಸುದೀರ್ಘ 10 ತಿಂಗಳ ಪ್ರಯಾಣ. ನಾನು‌ ಪ್ರತಿ ಘಳಿಗೆಯನ್ನು ಆನಂದಿಸಿದೆ. ಸೆಟ್‌ನಲ್ಲಿ ಅದ್ಭುತ ತಂಡ ಮತ್ತು ಸುಂದರ ತಾರೆಯನ್ನು ಒಳಗೊಂಡಿತ್ತು. ಧನ್ಯವಾದಗಳು ಧನು ಸರ್. ನನ್ನನ್ನು ಚೆನ್ನಾಗಿ ಹೋಸ್ಟ್ ಮಾಡಿದ್ದಕ್ಕಾಗಿ ಧನ್ಯವಾದಗಳು, ವಿಜಯ್ ಮತ್ತು ಇಡೀ ತಂಡಕ್ಕೆ ಧನ್ಯವಾದʼʼಎಂದು ಬರೆದುಕೊಂಡಿದ್ದರು.

VISTARANEWS.COM


on

Kiccha Sudeep Max cinema Pre climax Photo leak
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ (Kiccha Sudeep) ಒಪ್ಪಿಕೊಂಡಿರುವ ಸಿನಿಮಾ ʻಮ್ಯಾಕ್ಸ್ʼ (MAX). ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ‘ಮ್ಯಾಕ್ಸ್’ ಬಗ್ಗೆ ಏನಾದರೂ ಅಪ್‌ಡೇಟ್ ಕೊಡ್ತಾರ ಎಂದು ಕಿಚ್ಚ ಫ್ಯಾನ್ಸ್‌ ಕಾದಿದ್ದರು. ಕಿಚ್ಚ ಸುದೀಪ್‌ ʻಮ್ಯಾಕ್ಸ್‌ʼ ಸಿನಿಮಾ (Max cinema Pre climax) ಶೂಟಿಂಗ್‌ ಕಂಪ್ಲೀಟ್‌ ಆಗಿದೆ ಎಂದು ವಾರದ ಹಿಂದೆ ಎಕ್ಸ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ಆದರೀಗ ಸಿನಿಮಾದ ಪ್ರಿ- ಕ್ಲೈಮ್ಯಾಕ್ಸ್ ಫೋಟೊ ಲೀಕ್‌ ಆಗಿದೆ ಎಂದು ಹೇಳಲಾಗುತ್ತಿದೆ. ಜಾತ್ರೆಯ ಸೆಟಪ್‌, ಕಾಳೀಮಾತೆಯ ವಿಗ್ರಹ. ಸುದೀಪ್ ಕಾಳಿ ವಿಗ್ರಹ ಮುಂದೆ ನಡೆದು ಬರುತ್ತಿರುವುದನ್ನು ಕಂಡು ಕ್ಲೈಮ್ಯಾಕ್ಸ್ ಅಥವಾ ಇಂಟ್ರವಲ್‌ ವೇಳೆಗೆ ಬರುವ ಸನ್ನಿವೇಶ ಎಂದು ಜನ ಊಹಿಸುತ್ತಿದ್ದಾರೆ.

`ಪ್ರೀ-ಕ್ಲೈಮ್ಯಾಕ್ಸ್ ನಿಮ್ಮೆಲ್ಲರಿಗೂ ಮ್ಯಾಕ್ಸಿಮಮ್‌ ಹಬ್ಬವನ್ನು ಆನಂದಿಸುವಂತೆ ಮಾಡುತ್ತದೆ ಎಂದು ನಾನು ಭರವಸೆ ನೀಡುತ್ತೇನೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಯಾವ ರೀತಿ ನೋಡಲು ಬಹಳ ದಿನಗಳಿಂದ ಕಾಯುತ್ತಿದ್ದಾರೋ, ನಿಜಕ್ಕೂ ಸುದೀಪ್ ಅಣ್ಣ ಹಾಗೇ ಕಾಣುತ್ತಾರೆʼʼಎಂದು ಪ್ರದೀಪ್‌ ಎಂಬುವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kiccha Sudeep: ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಮುಗಿಸಿದ ಕಿಚ್ಚ ಸುದೀಪ್‌: ರಿಲೀಸ್‌ ಯಾವಾಗ?

ಈ ಹಿಂದೆ ಕಿಚ್ಚ ಸುದೀಪ್‌ ಅವರು ಶೂಟಿಂಗ್‌ ಕಂಪ್ಲೀಟ್‌ ಎಂದು ಟ್ವೀಟ್‌ನಲ್ಲಿ ಶೇರ್‌ ಮಾಡಿಕೊಂಡಿದ್ದರು. ಕಿಚ್ಚ ಸುದೀಪ್‌ ಎಕ್ಸ್‌ನಲ್ಲಿ ʻʻಮಹಾಬಲಿಪುರಂನಲ್ಲಿ ʻಮ್ಯಾಕ್ಸ್‌ʼಗಾಗಿ ಒಂದು ಸುತ್ತು. ಸುದೀರ್ಘ 10 ತಿಂಗಳ ಪ್ರಯಾಣ. ನಾನು‌ ಪ್ರತಿ ಘಳಿಗೆಯನ್ನು ಆನಂದಿಸಿದೆ. ಸೆಟ್‌ನಲ್ಲಿ ಅದ್ಭುತ ತಂಡ ಮತ್ತು ಸುಂದರ ತಾರೆಯನ್ನು ಒಳಗೊಂಡಿತ್ತು. ಧನ್ಯವಾದಗಳು ಧನು ಸರ್. ನನ್ನನ್ನು ಚೆನ್ನಾಗಿ ಹೋಸ್ಟ್ ಮಾಡಿದ್ದಕ್ಕಾಗಿ ಧನ್ಯವಾದಗಳು, ವಿಜಯ್ ಮತ್ತು ಇಡೀ ತಂಡಕ್ಕೆ ಧನ್ಯವಾದʼʼಎಂದು ಬರೆದುಕೊಂಡಿದ್ದರು.

ಇದಕ್ಕೂ ಕೆಲವು ದಿನಗಳ ಹಿಂದೆ ಟ್ರೈಲರ್ ರಫ್ ಕಟ್ ಆಗಿರುವ ಬಗ್ಗೆ ಸುದೀಪ್ ಮಾಹಿತಿ ಹಂಚಿಕೊಂಡಿದ್ದರು. ಸುದೀಪ್‌ ಎಕ್ಸ್‌ನಲ್ಲಿ ʻʻಮ್ಯಾಕ್ಸ್ (Max) ಕ್ಲೈಮ್ಯಾಕ್ಸ್‌ನ ಪ್ರಮುಖ ಭಾಗ ಪೂರ್ಣಗೊಳಿಸಲಾಗಿದೆ. ಇಲ್ಲಿಯವರೆಗೆ ಚಿತ್ರೀಕರಿಸಿದ ಅಷ್ಟೂ ಶಾಟ್‌ಗಳನ್ನು ನೋಡಿದೆ. ಚಿತ್ರದ ಪ್ರತಿ ಬಿಟ್ ನೋಡಿ, ತಂಡದ ಎಫರ್ಟ್‌ ಕಂಡು ಸಂತೋಷವಾಗಿದೆ. ಸ್ವಲ್ಪ ಭಾಗ ಚಿತ್ರೀಕರಣ ಬಾಕಿ ಇದೆ. ಟ್ರೈಲರ್ ವೇಳೆ ರಫ್ ಕಟ್ ಸಹ ನೋಡಿದೆ ಮತ್ತು ಅದು ನನ್ನನ್ನು ರೋಮಾಂಚನಗೊಳಿಸಿತುʼʼಎಂದು ಬರೆದುಕೊಂಡಿದ್ದರು.

ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ʻಅರ್ಜುನ್ ಮಹಾಕ್ಷಯ್ʼ ಹೆಸರಿನ ಸುದೀಪ್ ಪಾತ್ರ ಸ್ಪೆಷಲ್ ಆಗಿಯೇ ಇರಲಿದೆ ಎಂದು ವರದಿಯಾಗಿದೆ. ʻಮ್ಯಾಕ್ಸ್ʼ ಸಿನಿಮಾದಲ್ಲಿ ಸುದೀಪ್ ಭರ್ಜರಿ ಸಾಹಸಗಳನ್ನ ಮಾಡಿದ್ದಾರೆ. ಸಾಹಸ ನಿರ್ದೇಶಕ ಚೇತನ್ ಡಿಸೋಜಾ ಈ ಸಾಹಗಳನ್ನ ಕಂಪೋಸ್ ಮಾಡಿದ್ದಾರೆ. ವಿಶೇಷವಾಗಿ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಭರ್ಜರಿ ಆ್ಯಕ್ಷನ್‌ಗಳೇ ಇವೆ ಎನ್ನಲಾಗಿದೆ.

ʻಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷನ್‌ಗಳೂ ಇದ್ದಾರೆ. ಹಾಗೆ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್ ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.

ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Neha Gowda: ಸೀರೆಯುಟ್ಟು ಸಿಂಪಲ್‌ ಆಗಿ ಗಂಡನ ಜತೆ ಪೋಸ್‌ ಕೊಟ್ಟ ಗರ್ಭಿಣಿ ನೇಹಾ ಗೌಡ!

Neha Gowda: ಬಿಗ್‌ ಬಾಸ್‌ ಕನ್ನಡ ಸೀಸನ್‌ 9ರಲ್ಲಿ ಸ್ಪರ್ಧಿಸಿದ್ದರು ನೇಹಾ, ಕನ್ನಡದ ಜತೆಗೆ ತೆಲುಗು, ತಮಿಳು ಭಾಷೆಗಳಲ್ಲೂ ನೇಹಾ ಕೆಲಸ ಮಾಡಿದ್ದಾರೆ. ಪತಿ ಚಂದನ್ ಜತೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ರಾಜ-ರಾಣಿ ರಿಯಾಲಿಟಿ ಶೋನಲ್ಲೂ ಭಾಗವಹಿಸಿ ಗೆದ್ದಿದ್ದರು

VISTARANEWS.COM


on

Neha Gowda in saree with baby bump
Koo

ಮದುವೆಯಾದ 6 ವರ್ಷಗಳ ಬಳಿಕ ಸಿಹಿ ಸುದ್ದಿ ಕೊಟ್ಟಿದ್ದಾರೆ ಲಕ್ಷ್ಮೀ ಬಾರಮ್ಮ ಖ್ಯಾತಿಯ ಗೊಂಬೆ (Neha Gowda) ನೇಹಾ ಹಾಗೂ ಚಂದನ್‌ ದಂಪತಿ.

ಇದನ್ನೂ ಓದಿ: Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

ಇದೀಗ ತೋಟವೊಂದರಲ್ಲಿ ಕ್ಲಿಕ್ಕಿಸಿಕೊಂಡಿರುವ ಫೋಟೊಗಳನ್ನು ನೇಹಾ ಇನ್‌ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಇತ್ತ ಚಂದನ್ ಗೌಡ ತಮ್ಮ ಖಾತೆಯಲ್ಲಿ ಪತ್ನಿ ಜೊತೆ ಅದೇ ಸ್ಥಳದಲ್ಲಿ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

ನೇಹಾ ನಿರಂತರವಾಗಿ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿರುತ್ತಾರೆ. ಇದೀಗ ಸರಳವಾದ ಸೀರೆ ಧರಿಸಿಕೊಂಡು ಫೋಟೋ ತೆಗೆಸಿಕೊಂಡಿದ್ದಾರೆ.

2018ರಂದು ಬೆಂಗಳೂರಿನಲ್ಲಿ ಚಂದನ್ ಮತ್ತು ನೇಹಾ ಗೌಡ ಮದುವೆಯಾಗಿದ್ದರು.ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ನೇಹಾ ಹಾಗೂ ನಟ ಚಂದನ್​, ಸೋಶಿಯಲ್ ಮೀಡಿಯಾದಲ್ಲಿ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.

Continue Reading

ಕರ್ನಾಟಕ

Kannada New Movie: ಟ್ರೇಲರ್ ಮೂಲಕ ಸದ್ದು ಮಾಡುತ್ತಿರುವ “ಕಾಗದ” ಜುಲೈ 5ರಂದು ತೆರೆಗೆ

Kannada New Movie: ವಿನೋದ್ ಪ್ರಭಾಕರ್ ಅಭಿನಯದ “ರಗಡ್” ಸಿನಿಮಾ ನಿರ್ಮಾಪಕ ಅರುಣ್ ಕುಮಾರ್ ಅವರ ನಿರ್ಮಾಣದ ಹಾಗೂ ರಂಜಿತ್ ನಿರ್ದೇಶನದಲ್ಲಿ ಆದಿತ್ಯ ಹಾಗೂ ಅಂಕಿತ ಜಯರಾಂ ನಾಯಕ/ ನಾಯಕಿಯಾಗಿ ನಟಿಸಿರುವ ‘ಕಾಗದ’ ಚಿತ್ರದ ಟ್ರೇಲರ್ ಈಚೆಗೆ ಬಿಡುಗಡೆಯಾಯಿತು.

VISTARANEWS.COM


on

Kaagada movie released on 5th July
Koo

ಬೆಂಗಳೂರು: ವಿನೋದ್ ಪ್ರಭಾಕರ್ ಅಭಿನಯದ “ರಗಡ್” ಸಿನಿಮಾ ನಿರ್ಮಾಪಕ ಅರುಣ್ ಕುಮಾರ್ ಅವರ ನಿರ್ಮಾಣದ ಹಾಗೂ ರಂಜಿತ್ ನಿರ್ದೇಶನದಲ್ಲಿ ಆದಿತ್ಯ ಹಾಗೂ ಅಂಕಿತ ಜಯರಾಂ ನಾಯಕ/ ನಾಯಕಿಯಾಗಿ ನಟಿಸಿರುವ ‘ಕಾಗದ’ ಚಿತ್ರದ (Kannada New Movie) ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು.

ಬಿಜೆಪಿ ಮುಖಂಡ ರಾಘವೇಂದ್ರ ಶೆಟ್ಟಿ ಮುಖ್ಯ ಅತಿಥಿಯಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಚಿತ್ರದ ನಿರ್ದೇಶಕ ರಂಜಿತ್ ಮಾತನಾಡಿ, “ಕಾಗದ”, 2005ರಲ್ಲಿ ನಡೆದ ಪ್ರೇಮಕಥೆ. ಯುವಜನತೆಯ ಕೈಯಲ್ಲಿ ಇನ್ನೂ ಮೊಬೈಲ್‌ ಬಂದಿರದ, “ಕಾಗದ” ದಲ್ಲೇ ಪ್ರೀತಿ ವಿನಿಮಯವಾಗುತ್ತಿದ್ದ ಕಾಲಘಟ್ಟದ ಕಥೆಯೂ ಹೌದು. ಪರಸ್ಪರ ದ್ವೇಷಿಸುವ ಎರಡು ಹಳ್ಳಿಗಳ ನಡುವೆ ಅರಳಿದ ಪ್ರೇಮಕಥೆ ಕೂಡ. ಇಂತಹ ಹಲವು ವಿಶೇಷಗಳ “ಕಾಗದ” ಚಿತ್ರ , ಎಲ್ಲರ ಸಹಕಾರದಿಂದ ಉತ್ತಮವಾಗಿ ಮೂಡಿಬಂದಿದೆ. ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರ ಜುಲೈ 5 ರಂದು ಬಿಡುಗಡೆಯಾಗುತ್ತಿದೆ ಎಂದು ತಿಳಿಸಿದ ಅವರು, “ಆಪಲ್ ಕೇಕ್” ಚಿತ್ರದ ನಂತರ ಇದು ನನ್ನ ಎರಡನೇ ನಿರ್ದೇಶನದ ಚಿತ್ರ ಎಂದು ಹೇಳಿದರು.

ಇದನ್ನೂ ಓದಿ: Bengaluru News: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಜೂ.30ಕ್ಕೆ

ನನಗೆ ಮೊದಲಿನಿಂದಲೂ ಹಿಂದು-ಮುಸ್ಲಿಂ ಲವ್ ಸ್ಟೋರಿ ಸಿನಿಮಾ ಮಾಡುವ ಆಸೆಯಿತ್ತು. ಆದರೆ ನನ್ನ ಮನಮುಟ್ಟುವ ಹಾಗೆ ಯಾರು ಕಥೆ ಹೇಳುತ್ತಿರಲಿಲ್ಲ. ನನ್ನನ್ನು ಒಪ್ಪಿಸುವಲ್ಲಿ ರಂಜಿತ್ ಯಶಸ್ವಿಯಾದರು. ನಾವು ಈ ಚಿತ್ರದಲ್ಲಿ ಯಾವುದೇ ಧರ್ಮದ ಭಾವನೆಗಳಿಗ ಧಕ್ಕೆ ತರುವ ಸನ್ನಿವೇಶಗಳನ್ನು ತೋರಿಸಿಲ್ಲ. ಎಲ್ಲಕ್ಕಿಂತ ಮನುಷ್ಯತ್ವ ಮುಖ್ಯ ಎಂಬ ಸಂದೇಶ ತಿಳಿಸಿದ್ದೇವೆ. ನನ್ನ ಮಗ ಆದಿತ್ಯ ಈ ಚಿತ್ರದ ಮೂಲಕ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದಾನೆ. “ರಗಡ್” ಚಿತ್ರದ ನಂತರ ಈ ಚಿತ್ರ ನಿರ್ಮಾಣ ಮಾಡಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ಅರುಣ್ ಕುಮಾರ್ ತಿಳಿಸಿದರು. ರಗಡ್ ಚಿತ್ರ

ನಮ್ಮ ಮನೆಯ ಕೆಳಗಡೆ ಆಕ್ಟಿಂಗ್ ಸ್ಕೂಲ್ ಇತ್ತು. ಅಲ್ಲಿ ಕಲಿಯಲು ಬರುತ್ತಿದ್ದವರನ್ನು ನೋಡಿ‌ ನನಗೂ ನಟಿಸುವ ಆಸೆಯಾಯಿತು. ನಟನೆ ಕಲಿತು, ಕಿರುಚಿತ್ರ ಹಾಗೂ ನಾಟಕಗಳಲ್ಲಿ ಅಭಿನಯಿಸಿದ್ದೇನೆ. ಹಿರಿತೆರೆಯಲ್ಲಿ ಇದು ಮೊದಲ ಚಿತ್ರ. ನನ್ನ ಆಸೆ ಪೂರೈಸಿದ ಅಪ್ಪನಿಗೆ ಧನ್ಯವಾದ ಎಂದು ನಾಯಕ ಆದಿತ್ಯ ತಿಳಿಸಿದ್ದಾರೆ.

ಬಾಲನಟಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ ನನಗೆ ತಾವೆಲ್ಲರೂ ನೀಡಿರುವ ಪ್ರೋತ್ಸಾಹಕ್ಕೆ ಧನ್ಯವಾದ. ನಾಯಕಿಯಾಗಿ ಇದು ಮೊದಲ ಚಿತ್ರ. “ಕಾಗದ” ಚಿತ್ರದಲ್ಲಿ ಬೋಲ್ಡ್ ಹುಡುಗಿಯ ಪಾತ್ರ ನನ್ನದು ಎನ್ನುತ್ತಾರೆ ನಾಯಕಿ ಅಂಕಿತ ಜಯರಾಂ.

ಚಿತ್ರದಲ್ಲಿ ನಟಿಸಿರುವ ಶಿವಮಂಜು, ಗೌತಮ್ ತಮ್ಮ ಪಾತ್ರದ ಬಗ್ಗೆ ಹೇಳಿದರು. ಸಂಗೀತದ ಬಗ್ಗೆ ಪ್ರದೀಪ್ ವರ್ಮ, ಛಾಯಾಗ್ರಹಣದ ಕುರಿತು ವೀನಸ್ ನಾಗರಾಜ ಮೂರ್ತಿ ಹಾಗೂ ವರ್ಣಾಲಂಕಾರದ ಬಗ್ಗೆ ಮಣಿ ಮಾಹಿತಿ ನೀಡಿದರು‌.

ಈ ಚಿತ್ರದ ವಿಶೇಷ ಪಾತ್ರದಲ್ಲಿ ನೇಹಾ ಪಾಟೀಲ್ ಕಾಣಿಸಿಕೊಂಡಿದ್ದಾರೆ. ಬಲ ರಾಜವಾಡಿ, ನೀನಾಸಂ ಅಶ್ವಥ್, ಮಠ ಕೊಪ್ಪಳ, ಶಿವಮಂಜು ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Share Market : ಷೇರು ಮಾರುಕಟ್ಟೆಯಲ್ಲಿ ನೂತನ ದಾಖಲೆ; ಮೊದಲ ಬಾರಿಗೆ 78,000 ಮಟ್ಟವನ್ನು ದಾಟಿದ ಸೆನ್ಸೆಕ್ಸ್

“ಕಾಗದ” ಟ್ರೇಲರ್ ವೀಕ್ಷಿಸಿದ ಚಂದನವನದ ತಾರೆಯರಾದ ಧ್ರುವ ಸರ್ಜಾ, ರಮೇಶ್ ಅರವಿಂದ್, ಅನು ಪ್ರಭಾಕರ್ ಹಾಗೂ ನಿರ್ದೇಶಕ ಎ.ಪಿ.ಅರ್ಜುನ್ ಮೆಚ್ಚುಗೆ ಸೂಚಿಸಿದ್ದಾರೆ. ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಜಂಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಲಭ್ಯವಿದೆ.

Continue Reading

ಸ್ಯಾಂಡಲ್ ವುಡ್

Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

Vinay Gowda: ಈ ಸಿನಿಮಾದಲ್ಲಿ ವಿಲನ್ ಆಗಿ ನಟಿಸುತ್ತಿರುವ ಬಿಗ್‌ಬಾಸ್ ಖ್ಯಾತಿಯ ವಿನಯ್ ಗೌಡ (Vinay Gowda) ವಿಲನ್ ಆಗಿ ನಟಿಸುತ್ತಿದ್ದಾರೆ. ಡೆವಿಲ್‌ ಸಿನಿಮಾದಲ್ಲಿ 30% ಶೂಟ್‌ ಆಗಿದೆ. ಫೈಟ್‌ ಸೀಕ್ವೆನ್ಸ್‌ ಬಾಕಿ ಇದೆ. ಟೈಲಾಗ್‌ ಸ್ವಲ್ಪ ಬಾಕಿ ಉಳಿದೆʼʼ ಎಂದರು.ಜತೆಗೆ ʻʻಪ್ರಾಜೆಕ್ಟ್‌ ಆರ್ಧಕ್ಕೆ ನಿಂತಿದೆ ಪ್ರಾಜೆಲ್ಟ್‌ ಭವಿಷ್ಯ ಯಾರಿಗೂ ಗೊತ್ತು, ಆದರೆ ಸೂಪರ್‌ ಪ್ರಾಜೆಕ್ಟ್ʼʼಎಂದು ಹೇಳಿಕೆ ನೀಡಿದ್ದಾರೆ.‌

VISTARANEWS.COM


on

Vinay Gowda acted darshan devil Movie and says Futture cant be predict
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಜೈಲು ಸೇರಿದ್ದಾರೆ. ಹೀಗಾಗಿ ಅವರ ʻಡೆವಿಲ್‌ʼ ಸಿನಿಮಾ ಚಿತ್ರೀಕರಣ ಅರ್ಧಕ್ಕೆ ನಿಂತಿದೆ. ಇದೇ ವೇಳೆ ಈ ಸಿನಿಮಾದಲ್ಲಿ ವಿಲನ್ ಆಗಿ ನಟಿಸುತ್ತಿರುವ ಬಿಗ್‌ಬಾಸ್ ಖ್ಯಾತಿಯ ವಿನಯ್ ಗೌಡ (Vinay Gowda) ವಿಲನ್ ಆಗಿ ನಟಿಸುತ್ತಿದ್ದಾರೆ. ವಿನಯ್‌ ಸಂದರ್ಶನವೊಂದರಲ್ಲಿ ಡೆವಿಲ್‌ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಜತೆಗೆ ʻʻಪ್ರಾಜೆಕ್ಟ್‌ ಆರ್ಧಕ್ಕೆ ನಿಂತಿದೆ ಪ್ರಾಜೆಲ್ಟ್‌ ಭವಿಷ್ಯ ಯಾರಿಗೂ ಗೊತ್ತು, ಆದರೆ ಸೂಪರ್‌ ಪ್ರಾಜೆಕ್ಟ್ʼʼಎಂದು ಹೇಳಿಕೆ ನೀಡಿದ್ದಾರೆ.‌

ವಿನಯ್‌ ಗೌಡ ಮಾತನಾಡಿ ʻʻಬಿಗ್‌ ಬಾಸ್‌ ಮುಗಿಸಿದ ಬಳಿಕ ʻಡೆವಿಲ್‌ʼ ಸಿನಿಮಾ ಚಾನ್ಸ್‌ ಸಿಕ್ಕಿತು. ಈ ಸಿನಿಮಾ ಪರಿಚಯ ಹೇಗಾಯ್ತು ಎಂದರೆ ಪ್ರಕಾಶ್‌ ಅವರ ಜತೆ ಮುಂಚೆ ಕೆಲಸ ಮಾಡಿದ್ದೆ. ಒಂದಷ್ಟು ಧಾರಾವಾಹಿಗಳು ಮಾಡಿದ್ದೆ. ನನ್ನ ನಟನೆ ಗೊತ್ತು ಅವರಿಗೆ. ಈ ರೀತಿ ವಿಲನ್‌ ಕ್ಯಾರಕ್ಟರ್‌ ಬಗ್ಗೆ ಹೇಳಿದರು. ಬಳಿಕ ನಾನು ಸಿನಿಮಾಗೆ ಒಪ್ಪಿಗೆ ನೀಡಿದೆ. ಅವರ ಕೆಲಸ ಅಂತೂ ತುಂಬ ಕ್ಲೀನ್‌ ಹಾಗೂ ಕ್ಲೀಯರ್‌. ನಂದು ಡೆವಿಲ್‌ ಸಿನಿಮಾದಲ್ಲಿ 30% ಶೂಟ್‌ ಆಗಿದೆ. ಫೈಟ್‌ ಸೀಕ್ವೆನ್ಸ್‌ ಬಾಕಿ ಇದೆ. ಟೈಲಾಗ್‌ ಸ್ವಲ್ಪ ಬಾಕಿ ಉಳಿದೆʼʼ ಎಂದರು.

ಮುಂದೆ ಏನಾಗುತ್ತೆ? ಎಲ್ಲಿರವರೆಗೆ ಹೋಗುತ್ತೆ ಗೊತ್ತಿಲ್ಲ

ದರ್ಶನ್‌ ವಿವಾದದ ಬಗ್ಗೆ ಮಾತನಾಡಿ ʻʻನಾನು ಯಾರ ಬಗ್ಗೆ ಮಾತಾಡಲ್ಲ. ನಾವು ಈ ಉದ್ಯಮಕ್ಕೆ ಲೇಟ್‌ ಆಗಿ ಬಂದು ಕಡಿಮೆ ಕೊಡುಗೆ ಕೊಟ್ಟಿರಬಹುದು. ಆದರೆ ಈಗ ನಾನು ಇಂಡಸ್ಟ್ರಿಯಲ್ಲಿ ಇದ್ದೇನೆ. ಇಲ್ಲಿ ಈ ಬಗ್ಗ ಪ್ರಶ್ನೆ ಬಂದಾಗ. ಹೌದು ತೊಂದರೆ ಆಗಿದೆ. ಮುಂದೆ ಏನಾಗುತ್ತೆ? ಎಲ್ಲಿರವರೆಗೆ ಹೋಗುತ್ತೆ ಗೊತ್ತಿಲ್ಲ. ನಾನು ಈ ಚಿತ್ರರಂಗದ ಒಂದು ಭಾಗವೆಂದು ಅಂದುಕೊಂಡಿದ್ದೇನೆ. ಈಗ ಇಂತಹದ್ದೊಂದು ಘಟನೆ ನಡೆದಿದೆ. ಅದನ್ನು ಜಡ್ಜ್‌ ಮಾಡುವುದಕ್ಕೆ ನಾವ್ಯಾರೂ ಅಲ್ಲ. ಮಾಡಿರುವುದು ನಿಜನಾ? ಸುಳ್ಳಾ? ಅದ್ಯಾವುದೂ ನಮಗೆ ಗೊತ್ತಿಲ್ಲ. ಅದಕ್ಕೆ ಕಮೆಂಟ್ ಮಾಡುವುದು ನನಗೆ ಸೂಟ್ ಆಗುತ್ತೆ ಅಂತ ಅನಿಸುತ್ತಿಲ್ಲ.” ಎಂದು ವಿನಯ್ ಗೌಡ ಹೇಳಿದ್ದಾರೆ.

ಇದನ್ನೂ ಓದಿ: Pavithra Gowda : ಜೈಲಿನಲ್ಲಿರುವ ಪವಿತ್ರಾ ಗೌಡಗೆ ಬ್ಯಾಗ್​ ತುಂಬಾ ಸಾಮಗ್ರಿ ತಂದು ಕೊಟ್ಟ ಸಹೋದರ

ಸೂಪರ್‌ ಪ್ರಾಜೆಕ್ಟ್

ʻʻಈ ಘಟನೆ ಬಗ್ಗೆ ಹೇಳೋದೆನಂದರೆ ಒಂದು ಕಮೆಂಟ್‌ ಎಲ್ಲಿಯ ಹಂತದವರೆಗೆ ಹೋಗಿದೆ ನೋಡಿ. ಒಂದು ತಪ್ಪು ಕೆಲಸ ಮಾತ್ರ ಹೈಲೈಟ್‌ ಆಗತ್ತೆ. ತಪ್ಪು ಎಲ್ಲಿದೆ, ನೆಗೆಟಿವ್‌ ಎಲ್ಲಿದೆ ಅದು ಮಾತ್ರ ಹೈಲೈಟ್‌ ಆಗತ್ತೆ. ಪ್ರಾಜೆಕ್ಟ್‌ ಆರ್ಧಕ್ಕೆ ನಿಂತಿದೆ ಪ್ರಾಜೆಲ್ಟ್‌ ಭವಿಷ್ಯ ಯಾರಿಗೂ ಗೊತ್ತು, ಆದರೆ ಸೂಪರ್‌ ಪ್ರಾಜೆಕ್ಟ್.‌ ಆದರೆ ಬೇಜಾರಾಗತ್ತೆ. ಮುಂದೆ ಸರಿ ಹೋಗುತ್ತೆ ಎನ್ನುವ ನಂಬಿಕೆ ಅನ್ನೋದು ಇದೆಯಲ್ಲ. ಆ ಪ್ರಾಜೆಕ್ಟ್ ರಿಲೀಸ್ ಆದ್ಮೇಲೆ ಹಬ್ಬ ಇದೆಯಲ್ಲ. ಅದರ ಬಗ್ಗೆ ಯೋಚನೆ ಮಾಡುತ್ತಿರುತ್ತೇನೆ. ನಾನು ನೆಗೆಟಿವ್ ಯೋಚನೆ ಮಾಡುವುದಿಲ್ಲʼʼಎಂದರು.

ಕಾಟೇರ ಯಶಸ್ಸಿನ ಬಳಿಕ ಡೆವಿಲ್‌ ಎಂಬ ಸಿನಿಮಾದಲ್ಲಿ ದರ್ಶನ್‌ ನಟಿಸುತ್ತಿದ್ದಾರೆ. ಈ ವರ್ಷ ಚಿತ್ರಮಂದಿರಗಳಿಗೆ ಆಗಮಿಸುವ ನಿರೀಕ್ಷೆಯಿತ್ತು. ಈ ಸಿನಿಮಾದ ಶೂಟಿಂಗ್‌ ಭರದಿಂದ ನಡೆಯುತ್ತಿತ್ತು. ಈ ಚಿತ್ರದ ಗ್ಲಿಂಪ್ಸ್‌ ವಿಡಿಯೋ ಕೂಡ ರಿಲೀಸ್‌ ಮಾಡಲಾಗಿತ್ತು.ಡೆವಿಲ್‌ನಲ್ಲಿ ಬಾಲಿವುಡ್‌ ನಟ ಮಹೇಶ್‌ ಮಂಜ್ರೇಕರ್‌ ಕೂಡ ನಟಿಸುತ್ತಿದ್ದಾರೆ. ಪ್ರಕಾಶ್‌ ವೀರ್‌ ನಿರ್ದೇಶನದ ಡೆವಿಲ್‌ ಸಿನಿಮಾದ ಭವಿಷ್ಯ ಏನಾಗಬಹುದು ಎಂಬ ಆತಂಕ ಫ್ಯಾನ್ಸ್‌ಗೆ ಇದೆ.

Continue Reading

ಸ್ಯಾಂಡಲ್ ವುಡ್

Sanjith Hegde: ಸಂಜನಾ ದಾಸ್‌ಗೆ ʻನೀ ನಂಗೆ ಅಲ್ಲವಾʼ ಎಂದ ಸಂಜಿತ್ ಹೆಗಡೆ!

Sanjith Hegde: ರಿಯಾಲಿಟಿ ಶೋ ಮೂಲಕ ಬೆಳಕಿಗೆ ಬಂದ ಸಂಜಿತ್ ಹೆಗಡೆ ಅತಿ ಕಡಿಮೆ ಅವಧಿಯಲ್ಲಿ ಭಾರೀ ಜನಪ್ರಿಯತೆ ಪಡೆದುಕೊಂಡರು. ಬರೀ ಗಾಯನಕ್ಕೆ ಸೀಮಿತವಾಗದೇ ನಟನೆಯಲ್ಲಿಯೂ ತೊಡಗಿಸಿಕೊಂಡಿರುವ ಸಂಜಿತ್ ಈಗ ಮತ್ತೊಂದು ಹೊಸ ಹಾಡಿನ ಮೂಲಕ ಪ್ರತ್ಯಕ್ಷರಾಗಿದ್ದಾರೆ.

VISTARANEWS.COM


on

Sanjith Hegde Nange Allava song Out
Koo

ಬೆಂಗಳೂರು: ಕನ್ನಡದ ಸ್ಟಾರ್ ಸಿಂಗರ್ ಸಂಜಿತ್ ಹೆಗಡೆ (Sanjith Hegde) ಬರೀ ಕನ್ನಡಕ್ಕೆ ಸೀಮಿತವಾಗದೇ ತಮಿಳು, ತೆಲುಗು ಹಾಗೂ ಹಿಂದಿರಂಗದಲ್ಲಿಯೂ ತಮ್ಮ ಗಾಯನದ ಮೂಲಕ ಸಂಗೀತ ಪ್ರಿಯರನ್ನು ರಂಜಿಸುತ್ತಿದ್ದಾರೆ. ರಿಯಾಲಿಟಿ ಶೋ ಮೂಲಕ (Nange Allava) ಬೆಳಕಿಗೆ ಬಂದ ಸಂಜಿತ್ ಹೆಗಡೆ ಅತಿ ಕಡಿಮೆ ಅವಧಿಯಲ್ಲಿ ಭಾರೀ ಜನಪ್ರಿಯತೆ ಪಡೆದುಕೊಂಡರು. ಬರೀ ಗಾಯನಕ್ಕೆ ಸೀಮಿತವಾಗದೇ ನಟನೆಯಲ್ಲಿಯೂ ತೊಡಗಿಸಿಕೊಂಡಿರುವ ಸಂಜಿತ್ ಈಗ ಮತ್ತೊಂದು ಹೊಸ ಹಾಡಿನ ಮೂಲಕ ಪ್ರತ್ಯಕ್ಷರಾಗಿದ್ದಾರೆ.

‘ನೀ ನಂಗೆ ಅಲ್ಲವಾ’ ಅಂತಾ ಸಂಜಿತ್ ಹೆಗಡೆ ಯುವ ನಟಿ ಸಂಜನಾ ದಾಸ್ ಜತೆಗೂಡಿ ಹಾಡಿ ಕುಣಿದಿದ್ದಾರೆ. ಹಾಗಂತ ಇದು ಸಿನಿಮಾ ಗೀತೆಯಲ್ಲ. ಬದಲಾಗಿ ಸಂಜಿತ್ ತಮ್ಮ ತಂಡದೊಂದಿಗೆ ಸೇರಿ ಸ್ವತಂತ್ರವಾಗಿ ರಚಿಸಿರುವ ಗಾನಬಜಾನ..ನಾಗಾರ್ಜುನ್ ಶರ್ಮಾ ಪದಪೊಣಿಸಿರುವ ಹಾಡಿಗೆ ಸಂಜಿತ್ ಹಾಡಿದ್ದಾರೆ. ಜೊತೆಗೆ ಸಂಗೀತ ಕೂಡ ಸಂಯೋಜಿಸಿದ್ದು, ಬಿಜೋಯ್ ಶೆಟ್ಟಿ ನಿರ್ದೇಶನದಲ್ಲಿ ನಂಗೆ ಅಲ್ಲವ ಹಾಡು ಮೂಡಿಬಂದಿದೆ.ʼ

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ʻವಿಕಾಸ ಪರ್ವʼ ಸಿನಿಮಾ ಆಡಿಯೊ ರೈಟ್ಸ್

ಯುವ ಪ್ರೇಮಿಗಳನ್ನು ಹಾಗೇ ಕೇಳುಗರನ್ನು ಮಂತ್ರ ಮುಗ್ದರನ್ನಾಗಿ ಮಾಡುತ್ತದೆ ನಂಗೆ ಅಲ್ಲವ’ ಹಾಡು. ಈ ಹಾಡಿನ ಬಗ್ಗೆ ಮನಬಿಚ್ಚಿರುವ ಸಂಚಿತ್, “ಈ ಹಾಡು ನನ್ನ ಜೀವನವನ್ನು ಬದಲಾಯಿಸಿತು. ನಾನು ತುಂಬಾ ಆತಂಕಗೊಂಡಿದ್ದೇನೆ ಮತ್ತು ಇದನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ಉತ್ಸುಕನಾಗಿದ್ದೇನೆ. “ನೀ ನಂಗೆ ಅಲ್ಲವಾ” ನನ್ನ ಪ್ರೀತಿಯ ಜೀವನದ ಪ್ರಯಣವನ್ನು ವ್ಯಕ್ತಪಡಿಸಲು ನನಗೆ ಸಹಾಯ ಮಾಡಿತು. ಈ ಪ್ರಯಾಣದಲ್ಲಿ ಭಾಗವಾಗಿರುವ ಪ್ರತಿಯೊಬ್ಬರಿಗೂ ನಾನು ತುಂಬಾ ಕೃತಜ್ಞನಾಗಿದ್ದೇನೆ. ಈ ಹಾಡು ಬಿಡುಗಡೆಯೊಂದಿಗೆ ಹೃದಯ ತುಂಬಾ ಹಗುರ ಎನಿಸುತ್ತದೆ” ಎಂದಿದ್ದಾರೆ.

ಸಂಜಿತ್ ಹಿಂದಿಯಲ್ಲಿ “ಬಾದಲ್” ಮತ್ತು “ಗುಲಾಬೋ” ಹಾಡುಗಳೊಂದಿಗೆ ಈಗಾಗಲೇ ಹೊಸ ಅಲೆ ಸೃಷ್ಟಿಸಿದ್ದಾರೆ. ಈಗ ಅದೇ ಸಾಲಿಗೆ ನಂಗೆ ಅಲ್ಲವ ಗಾನಬಜಾನ ಸೇರ್ಪಡೆಯಾಗಿದೆ. ಸಂಜಿತ್ ಹೆಗ್ಡೆ ಯೂಟ್ಯೂಬ್ ಚಾನೆಲ್ ನಲ್ಲಿ ಹಾಗೂ ಎಲ್ಲಾ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಹಾಡು ಲಭ್ಯವಿದೆ. ವಾರ್ನರ್ ಮ್ಯೂಸಿಕ್ ಇಂಡಿಯಾ ಈ ಹಾಡನ್ನು ಬಿಡುಗಡೆ ಮಾಡಿದೆ.

Continue Reading
Advertisement
IRCTC
ದೇಶ13 mins ago

IRCTC: ಆನ್‌ಲೈನ್‌ನಲ್ಲಿ ರೈಲ್ವೇ ಟಿಕೆಟ್‌ ಬುಕ್ಕಿಂಗ್‌ ಮಾಡೋ ಮುನ್ನ ಹೊಸ ನಿಯಮದ ಬಗ್ಗೆ ಇರಲಿ ಗಮನ!

1983 World Cup
ಕ್ರೀಡೆ16 mins ago

1983 WC Win Anniversary: ಚೊಚ್ಚಲ ಏಕದಿನ ವಿಶ್ವಕಪ್ ಗೆಲುವಿನ​ ಸವಿ ನೆನಪನ್ನು ವಿಂಡೀಸ್​ನಲ್ಲಿ ಕೇಕ್​ ಕತ್ತರಿಸಿ ಸಂಭ್ರಮಿಸಿದ ರವಿಶಾಸ್ತ್ರಿ, ಗವಾಸ್ಕರ್, ​ಬಿನ್ನಿ

Viral Video
Latest18 mins ago

Viral Video: ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿ ಬೆರಗುಗೊಳಿಸಿದ ಅತ್ಯಂತ ಕಿರಿಯ ಸಂಸದೆ!

cm siddaramaiah water price hike
ಕರ್ನಾಟಕ22 mins ago

CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

Neha Gowda in saree with baby bump
ಸ್ಯಾಂಡಲ್ ವುಡ್24 mins ago

Neha Gowda: ಸೀರೆಯುಟ್ಟು ಸಿಂಪಲ್‌ ಆಗಿ ಗಂಡನ ಜತೆ ಪೋಸ್‌ ಕೊಟ್ಟ ಗರ್ಭಿಣಿ ನೇಹಾ ಗೌಡ!

Viral Video
Latest25 mins ago

Viral Video : ‘ಅಲ್ಲಾಹು ಅಕ್ಬರ್’ ಎನ್ನದ ಹಿಂದೂ ಬಾಲಕನಿಗೆ ಎಂಜಲು ನೆಕ್ಕಲು ಹೇಳಿದ ಮುಸ್ಲಿಂ ಯುವಕರು

Lok Sabha Speaker
ದೇಶ26 mins ago

Lok Sabha Speaker: ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

Kaagada movie released on 5th July
ಕರ್ನಾಟಕ30 mins ago

Kannada New Movie: ಟ್ರೇಲರ್ ಮೂಲಕ ಸದ್ದು ಮಾಡುತ್ತಿರುವ “ಕಾಗದ” ಜುಲೈ 5ರಂದು ತೆರೆಗೆ

prajwal revanna case 4th
ಕ್ರೈಂ1 hour ago

Prajwal Revanna Case: ʼಪ್ರತಿ ದಿನ ಫೋನ್‌ ಮಾಡಿ ಬಟ್ಟೆ ಕಳಚಲು ಹೇಳ್ತಿದ್ದ…ʼ ಪ್ರಜ್ವಲ್‌ ವಿರುದ್ಧ ದಾಖಲಾದ 4ನೇ ದೂರಿನಲ್ಲಿ ಏನಿದೆ?

Famous Serial Actress kasthuri shankar half naked photos leaked
ಟಾಲಿವುಡ್1 hour ago

Famous Serial Actress: ಖ್ಯಾತ ಧಾರಾವಾಹಿ ನಟಿಯ ಅರೆನಗ್ನ ಫೋಟೊಗಳು ಲೀಕ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌