Harish Poonja: ಪೊಲೀಸರಿಗೆ ಧಮ್ಕಿ ಕೇಸ್‌; ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಆರೋಪ ಸುಳ್ಳಾ: FIR ಸಮರ್ಥಿಸಿಕೊಂಡ ಸಿಎಂ - Vistara News

ರಾಜಕೀಯ

Harish Poonja: ಪೊಲೀಸರಿಗೆ ಧಮ್ಕಿ ಕೇಸ್‌; ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಆರೋಪ ಸುಳ್ಳಾ: FIR ಸಮರ್ಥಿಸಿಕೊಂಡ ಸಿಎಂ

Harish Poonja: ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ ಎಫ್ಐಆರ್ ಅನ್ನು ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲುವಾಸದ ಶಿಕ್ಷೆ ನೀಡುವ ಅವಕಾಶವಿದೆ. ಆದರೆ, ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗಳೆಯಲು ಸಾಧ್ಯವೇ ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

CM Siddaramaiah defends FIR against Harish Poonja
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಪ್ರತಿಭಟನೆ ವೇಳೆ ಪೊಲೀಸರಿಗೆ ಧಮ್ಕಿ ಹಾಕಿದ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ಕಾನೂನು ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ಅನ್ನು ದಾಖಲು ಮಾಡಲಾಗಿದೆ. ಐಪಿಸಿ 353ರ ಪ್ರಕಾರ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಕಾನೂನು ಎಲ್ಲರಿಗೂ ಒಂದೇ. ಹರೀಶ್‌ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲೆ ಇರುವ ಆರೋಪ ಸುಳ್ಳಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನೆ ಮಾಡಿದ್ದಾರೆ.

ಮಂಗಳವಾರ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಈ ಪ್ರತಿಕ್ರಿಯೆ ನೀಡಿದರು.

7 ವರ್ಷ ಜೈಲುವಾಸ ಶಿಕ್ಷೆ

ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ ಎಫ್ಐಆರ್ ಅನ್ನು ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲುವಾಸದ ಶಿಕ್ಷೆ ನೀಡುವ ಅವಕಾಶವಿದೆ. ಆದರೆ, ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗಳೆಯಲು ಸಾಧ್ಯವೇ ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದರು.

ಶಾಸಕರಾದರೆ ಪೊಲೀಸರಿಗೆ ಧಮ್ಕಿ ಹಾಕಬಹುದೇ?

ಹರೀಶ್ ಪೂಂಜಾ ಅವರಿಗೆ ಸ್ಟೇಷನ್ ಬೇಲ್ ದೊರಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಅವರ ಮೇಲೆ ದಾಖಲಾಗಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ ಎಂದು ಮರು ಪ್ರಶ್ನಿಸಿದರು.

ಅರೆಸ್ಟ್‌ ಮಾಡದೇ ವಾಪಸ್‌ ಹೋಗಿದ್ದ ಪೊಲೀಸರು!

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದ್ದ ಬೆನ್ನಲ್ಲೇ ಮೇ 22ರಂದು ಅವರನ್ನು ಬಂಧಿಸಲು ಪೊಲೀಸರು ನಡೆಸಿದ ಪ್ರಹಸನ ವಿಫಲವಾಗಿತ್ತು. ಅಂದು ಮಧ್ಯಾಹ್ನದಿಂದ ಅವರ ಮನೆಯಲ್ಲಿ ಠಿಕಾಣಿ ಹೂಡಿದ್ದ ಪೊಲೀಸರು, ಕೊನೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿ ರಾತ್ರಿ 7.15ರ ಸುಮಾರಿಗೆ ವಾಪಸಾಗಿದ್ದರು. ಅಕ್ರಮ ಕಲ್ಲು ಗಣಿಗಾರಿಕೆ (Illegal quarrying) ಪ್ರಕರಣದಲ್ಲಿ ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್‌ಐಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಕೇಸ್‌ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕರ ಮನೆಯಲ್ಲಿ ಹೈಡ್ರಾಮಾವೇ ನಡೆದಿತ್ತು.

ಈ ಸಂಬಂಧ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮಿತ್ತಿಲದಲ್ಲಿರುವ ಶಾಸಕ ಹರೀಶ್ ಪೂಂಜಾ ಮನೆಗೆ ಬುಧವಾರ (ಮೇ 22) ಮಧ್ಯಾಹ್ನದ ವೇಳೆಗೆ ಪೊಲೀಸರು ಆಗಮಿಸಿದ್ದರು. ಸರ್ಕಲ್ ಇನ್ಸ್‌ಪೆಕ್ಟರ್‌ ಸುಬ್ಬಪೂರ್ ಮಠ್‌ ಮತ್ತು ಪಿಎಸ್ಐ ಚಂದ್ರಶೇಖರ್ ನೇತೃತ್ವದ ಪೊಲೀಸರ ತಂಡ ಆಗಮಿಸಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಧಾವಿಸಿ, ಆಕ್ರೋಶವನ್ನು ಹೊರಹಾಕಿದ್ದರು.

Harish Poonja case Belthangady BJP MLA Harish Poonja arrested for taunting police

ಮನೆ ಮುಂದೆ ಹೈಡ್ರಾಮಾ

ಹರೀಶ್ ಪೂಂಜ ಬಂಧನಕ್ಕೆ ಪೊಲೀಸರು ಬಂದಿದ್ದರಿಂದ ಗರ್ಡಡಿ ಹರೀಶ್ ಪೂಂಜಾ ನಿವಾಸಕ್ಕೆ ವಕೀಲರ ತಂಡ ಭೇಟಿ ನೀಡಿತು. ಪೊಲೀಸರ ಜತೆ ವಕೀಲರ ತಂಡದಿಂದ ಮಾತುಕತೆ ನಡೆಸಲಾಯಿತು. ಈ ವೇಳೆ ನಿರಂತರವಾಗಿ ಚರ್ಚೆ ನಡೆದಿದ್ದು, ಪೊಲೀಸ್‌ ಕ್ರಮ ತಪ್ಪು ಎಂದು ವಕೀಲರು ವಾದಿಸಿದರು. ಈ ವೇಳೆ ಮನೆಯ ಹೊರಗಡೆ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗುತ್ತಿದ್ದರು. ಅಲ್ಲದೆ, ಪೊಲೀಸರು ಹಾಗೂ ಕಾರ್ಯಕರ್ತರ ನಡುವಿನ ಹೈಡ್ರಾಮಾಕ್ಕೆ ಪೂಂಜಾ ನಿವಾಸವು ಸಾಕ್ಷಿಯಾಯಿತು. ಇನ್ನು ಪೂಂಜಾ ನಿವಾಸದತ್ತ ಸಂಸದ ನಳಿನ್ ಕುಮಾರ್ ಕಟೀಲ್, ಬ್ರಿಜೇಶ್ ಚೌಟ ದೌಡಾಯಿಸಿದರು. ರಾಜ್ಯ ಸರ್ಕಾರದ ನಡೆಯನ್ನು ಅವರು ತೀವ್ರವಾಗಿ ಖಂಡಿಸಿದರು. ಬಂಧನ ಮಾಡಿದ್ದೇ ಆದಲ್ಲಿ ಮಂಗಳೂರು ಬಂದ್‌ ಮಾಡುವ ಎಚ್ಚರಿಕೆಯನ್ನು ನೀಡಿದ್ದರು.

ನೋಟಿಸ್ ಇಲ್ಲದೇ ಅರೆಸ್ಟ್ ಮಾಡುವುದು ಅಪರಾಧ

ಈ ವೇಳೆ ಶಾಸಕ ಹರೀಶ್ ಪೂಂಜಾ ಪರ ವಕೀಲ ಶಂಭು ಶಂಕರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ವಿಚಾರಣೆಗೆ ಕರೆದುಕೊಂಡು ಹೋಗಲು ಬಂದಿದ್ದಾಗಿ ಪೊಲೀಸರು ಹೇಳಿದ್ದಾರೆ. ನಿಯಮ ಪ್ರಕಾರ ಆ ಕ್ರಮ ಇಲ್ಲ. ಪೊಲೀಸರು ಮನೆಗೆ ಒಳಗೆ ಕುಳಿತಿದ್ದಾರೆ. ನೋಟಿಸ್ ಈವರೆಗೆ ಕೊಟ್ಟಿಲ್ಲ. ಶಾಸಕರು ಅವರ ಕೆಲಸ ಮಾಡದ ಹಾಗೆ ಮಾಡಿದ್ದಾರೆ. ಮನೆಯಲ್ಲಿಯೇ ಕೂಡಿ ಹಾಕಿದ ಹಾಗೆ ಮಾಡಿದ್ದಾರೆ. ಒತ್ತಡಕ್ಕೆ ಮಣಿದು ಪೊಲೀಸರು ಇಲ್ಲಿಯೇ ಕುಳಿತಿದ್ದಾರೆ. ನೋಟಿಸ್ ಇಲ್ಲದೆ ಅರೆಸ್ಟ್ ಮಾಡುವುದು ಅಪರಾಧ ಎಂದು ಹೇಳಿದ್ದಾರೆ.

ಯಾವುದೇ ನೋಟಿಸ್ ನೀಡದೆ, ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕರೆಯುವಂತಿಲ್ಲ. ಅದು ಕಾನೂನು ಬಾಹಿರವಾಗುತ್ತದೆ. ಅಲ್ಲದೆ, ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಎಫ್‌ಐಆರ್ ದಾಖಲಾಗಿವೆ. ಅದರಲ್ಲಿ ಕೆಲವು ಸೆಕ್ಷನ್ ನಾನ್ ಬೇಲಬಲ್ ಸೆಕ್ಷನ್‌ಗಳಿವೆ. ಸುಪ್ರೀಂ ಕೋರ್ಟ್‌ನ ಈ ಹಿಂದಿನ ಆದೇಶದ ಪ್ರಕಾರ 7 ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗುವ ಪ್ರಕರಣಗಳಲ್ಲಿ ಬಂಧನ ಅನಿವಾರ್ಯವಲ್ಲ. ಅತ್ಯಂತ ಅಪರೂಪದ ಪ್ರಕರಣಗಳಲ್ಲಿ ಬಂಧನ ಮಾಡಲು ಅವಕಾಶವಿರುತ್ತದೆ. ಆದರೆ, ಎಲ್ಲ ಪ್ರಕರಣಗಳಲ್ಲೂ ಬಂಧನ ಅಗತ್ಯವಿಲ್ಲ. ವಿಚಾರಣೆಗೆ ಕರೆಯಲು ಪೇದೆಯ ಮೂಲಕ ನೋಟಿಸ್ ನೀಡಬಹುದು. ಆದರೆ ಹಿರಿಯ ಅಧಿಕಾರಿಗಳು ಬರುವ ಅಗತ್ಯತೆ ಏನಿದೆ? ಇದು ಶಾಸಕ ಪೂಂಜಾ ವಿರುದ್ಧ ಟಾರ್ಗೆಟ್ ಮಾಡಿ ಬಂಧಿಸುವ ಹುನ್ನಾರ ಆಗಿದೆ. ನೋಟಿಸ್ ನೀಡಲು ಕೇಳಿದ್ದೇವೆ. ಈ ವರೆಗೂ ನೋಟಿಸ್ ನೀಡಿಲ್ಲ ಎಂದು ವಕೀಲ ಶಂಭು ಶಂಕರ್ ಆಪಾದಿಸಿದ್ದರು.

Harish Poonja case Belthangady BJP MLA Harish Poonja arrested for taunting police

ವಿಡಿಯೊ ಸ್ಟೇಟಸ್‌ಗೆ ಹಾಕಿದ್ದ ಪೋಲಿಸ್‌ನನ್ನು ಆಚೆ ಕಳಿಸಿದ್ದ ಶಾಸಕ!

ಈ ವೇಳೆ ಪೊಲೀಸ್ ಠಾಣೆ ನಿಮ್ಮ ಅಪ್ಪಂದ ಎಂದು ಶಾಸಕ ಹರೀಶ್ ಪೂಂಜಾ ಅವಾಜ್‌ ಹಾಕುತ್ತಿದ್ದ ದೃಶ್ಯವನ್ನು ವಿಡಿಯೊ ಮಾಡಿ ಮೊಬೈಲ್‌ನಲ್ಲಿ ಸ್ಟೇಟಸ್‌ ಹಾಕಲಾಗಿದ್ದ ಪೊಲೀಸ್‌ ಸಿಬ್ಬಂದಿ ಆನಂದ್‌ ಅವರು ಶಾಸಕರ ಮನೆಗೆ ಬಂದರು. ಅವರನ್ನು ನೋಡಿ ಕೆರಳಿದ ಶಾಸಕ ಹರೀಶ್‌ ಪೂಂಜಾ, ಆನಂದ್‌ಗೆ ಮನೆಯಿಂದ ಹೊರಗೆ ಹೋಗು ಎಂದು ಸೂಚಿಸಿದ್ದರು. ಅಲ್ಲಿಯೇ ಇದ್ದ ಹಿರಿಯ ಅಧಿಕಾರಿಗಳತ್ತ ತಿರುಗಿ, ಇವನನ್ನು ಹೊರಗೆ ಕಳುಹಿಸಿ, ಜನ ಇದ್ದಾರೆ. ಗಲಾಟೆ ಮಾಡ್ತಾರೆ ಅಂತಾ ಅಧಿಕಾರಿಗಳಿಗೆ ಹೇಳಿದ್ದರು. ಬಳಿಕ ಸೆಕ್ಯುರಿಟಿ ಕೊಟ್ಟು ಅಲ್ಲಿಂದ ಆನಂದ್ ಅವರನ್ನು ಪೊಲೀಸರು ಕರೆದೊಯ್ದಿದ್ದರು.

ಹರೀಶ್ ಪೂಂಜಾಗೆ ನೋಟಿಸ್ ಜಾರಿ

ಶಾಸಕ ಹರೀಶ್ ಪೂಂಜಾ ಅವರಿಗೆ ಇನ್ನೂ ನೋಟಿಸ್‌ ಕೊಟ್ಟಿಲ್ಲ ಎಂದು ಅವರ ಪರ ವಕೀಲರು ಆರೋಪ ಮಾಡಿದ ಬೆನ್ನಲ್ಲೇ ವಿಟ್ಲ ಠಾಣೆಯ ಇನ್ಸ್ಪೆಕ್ಟರ್ ನಾಗರಾಜ್ ಮತ್ತು ಸಬ್ ಇನ್ಸ್ಪೆಕ್ಟರ್ ನಂದಕುಮಾರ್ ಅವರು ನೋಟಿಸ್ ಜಾರಿ ಮಾಡಿದ್ದರು. ತನಿಖಾಧಿಕಾರಿಗಳ ಜತೆ ಠಾಣೆಗೆ ಬರಲು ನೋಟಿಸ್‌ನಲ್ಲಿ ಸೂಚಿಸಲಾಗಿತ್ತು. ಹೀಗಾಗಿ ರಾತ್ರಿವರೆಗೂ ಬಂಧನಕ್ಕಾಗಿ ಪೊಲೀಸರು ಕಾದಿದ್ದರು. ಈ ವೇಳೆ ಶಾಸಕರ ಮನೆಗೆ ಹೆಚ್ಚಿನ ಪೊಲೀಸರನ್ನು ಕರೆಸಿಕೊಳ್ಳಲಾಗಿತು. ಈ ವೇಳೆ ಬಿಜೆಪಿ ಕಾರ್ಯಕರ್ತರು, ಮುಖಂಡರು ಇನ್ನಷ್ಟು ರೋಷಗೊಂಡರು. ಅಂತಿಮವಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಮೂಲಕ ಸೂಚಿಸಿ ಪೊಲೀಸರು ಅಲ್ಲಿಂದ ತೆರಳಿದ್ದರು.

ಏನಿದು ಕೇಸ್‌?

ಬೆಳ್ತಂಗಡಿಯ ಮೆಲಂತಬೆಟ್ಟುವಿನ ಕಲ್ಲು ಕ್ವಾರಿ ಮೇಲೆ ತಹಸೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಗುರುವಾಯನಕೆರೆಯ ಬಿಜೆಪಿಯ ಯುವ ಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಎಂಬುವವರನ್ನು ಬಂಧನ ಮಾಡಲಾಗಿತ್ತು. ಇದನ್ನು ಖಂಡಿಸಿ ರಾತ್ರೋರಾತ್ರಿ ಪೊಲೀಸ್ ಠಾಣೆ ಎದುರು ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿ, ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ: PM Modi: ಮೋದಿ ಬಂಡೀಪುರ ಭೇಟಿ ಆತಿಥ್ಯಕ್ಕೆ 6 ಕೋಟಿ ರೂ. ಖರ್ಚು; ಬಿಲ್‌ ಬಾಕಿಗೆ ಕೇಂದ್ರ – ರಾಜ್ಯ ಇಲಾಖೆಗಳ ಜಟಾಪಟಿ

ಪ್ರತಿಭಟನೆ ವೇಳೆ ‘ಪೊಲೀಸ್ ಠಾಣೆ ನಿಮ್ಮ‌ ಅಪ್ಪಂದಾʼ ಅಂತ ಬೆಳ್ತಂಗಡಿ ಪಿಎಸ್‌ಐ ಮುರುಳಿಧರ್ ನಾಯ್ಕ್‌ಗೆ ಶಾಸಕ ಹರೀಶ್‌ ಪೂಂಜಾ ಧಮ್ಕಿ ಹಾಕಿದ್ದರು. ಮನೆಯಲ್ಲಿದ್ದವರನ್ನು ಯಾವುದೇ ದಾಖಲೆಗಳಿಲ್ಲದೆ ಹೆಂಗಸರು, ಮಕ್ಕಳೆದುರು ಬಂಧನ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ. ಅಮಾಯಕನ ಬಂಧನವಾಗಿದ್ದು, ಕೂಡಲೇ ಆತನನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದ್ದರು. ಹೀಗಾಗಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CM Siddaramaiah: ಗಣಿ ಪರಿಸರ ಪುನಶ್ಚೇತನ ನಿಗಮದ ಸಭೆ; ಅಧಿಕಾರಿಗಳ ವಿಳಂಬ ಧೋರಣೆಗೆ ಸಿಎಂ ಗರಂ

CM Siddaramaiah: ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಪ್ರಗತಿ ಪರಿಶೀಲನಾ ಸಭೆ ಬುಧವಾರ ನಡೆಸಿದರು. ಕಾರ್ಯಾದೇಶ ಸಿಕ್ಕಿರುವ ಯೋಜನೆಗಳ ಅನುಷ್ಠಾನಕ್ಕೆ ಒಂದು ವಾರದೊಳಗೆ ಡಿ.ಪಿ.ಆರ್. ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಇಲಾಖೆಗಳಿಗೆ ಸಿಎಂ ಸೂಚಿಸಿದ್ದಾರೆ.

VISTARANEWS.COM


on

CM Siddaramaiah
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಪ್ರಗತಿ ಪರಿಶೀಲನಾ ಸಭೆ ಬುಧವಾರ ನಡೆಯಿತು. ಈ ವೇಳೆ ಅಧಿಕಾರಿಗಳ ವಿಳಂಬ ಧೋರಣೆಗೆ ಗರಂ ಆದ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಕಾರ್ಯದರ್ಶಿಗಳಿಗೆ ತೀವ್ರ ತರಾಟೆ ತೆಗೆದುಕೊಂಡರು.

ಸಭೆಯ ಮುಖ್ಯಾಂಶಗಳು

  1. ಕೆಎಂಇಆರ್‌ಸಿಗೆ CEPMIZ ಯೋಜನೆಯಡಿ ಒಟ್ಟು 24,996.30 ಕೋಟಿ ರೂ. ಒದಗಿಸಲಾಗಿದೆ. ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಒದಗಿಸಲಾಗಿದೆ.
  2. ಇದರಲ್ಲಿ ಯೋಜನೆಗಳ ಆಯ್ಕೆ ಹಾಗೂ ಕಾಮಗಾರಿಗಳ ಪ್ರಗತಿಯ ಮೇಲ್ವಿಚಾರಣಾ ಪ್ರಾಧಿಕಾರ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ ರೆಡ್ಡಿ ಅವರು ಒಟ್ಟು 7928.78 ಕೋಟಿ ರೂ. ಮೊತ್ತದ 358 ಯೋಜನೆಗಳನ್ನು ಅನುಮೋದಿಸಿದ್ದಾರೆ.
  3. ಈ ಪೈಕಿ ಒಟ್ಟು 3469.41 ಕೋಟಿ ರೂ. ವೆಚ್ಚದ 182 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. 135 ಯೋಜನೆಗಳಿಗೆ ಟೆಂಡರ್‌ ಕರೆಯಲಾಗಿದ್ದು, 47 ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದೆ. 23 ಕಾಮಗಾರಿಗಳನ್ನು ವಿವಿಧ ಸಂಸ್ಥೆಗಳಿಗೆ ವಹಿಸಲಾಗಿದೆ.
  4. ಈ ಯೋಜನೆಗಳ ಅನುಷ್ಠಾನಕ್ಕೆ ಒಂದು ವಾರದೊಳಗೆ ಡಿ.ಪಿ.ಆರ್. ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು.
  5. ಯೋಜನೆಗಳ ಸಕಾಲಿಕ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಂಬಂಧಿಸಿದ ಇಲಾಖೆಯಲ್ಲಿ ಯೋಜನಾ ಮೇಲ್ವಿಚಾರಣೆ ಘಟಕ ಸ್ಥಾಪಿಸುವಂತೆ ಸೂಚಿಸಿದರು.
  6. ವರ್ಷ ಕಳೆದರೂ DPR ಆಗದೇ ಇದ್ದುದಕ್ಕೆ ಕಾರ್ಯದರ್ಶಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡ ಸಿಎಂ. ಅಧಿಕಾರಿಗಳ ವಿಳಂಬ ಧೋರಣೆಗೆ ಗರಂ ಆಗಿ ಎಚ್ಚರಿಸಿದರು.
  7. ಇದು ವಿಶೇಷ ಕಾರ್ಯಕ್ರಮವಾಗಿದ್ದು, ಟೆಂಡರ್‌ನ ವಾಡಿಕೆಯ ಷರತ್ತುಗಳು ಅನ್ವಯಿಸುವುದಿಲ್ಲ. ಟೆಂಡರ್‌ನಲ್ಲಿ ನಿಗಮವು ವಾರದೊಳಗೆ ಬಿಲ್‌ ಪಾವತಿಸಲಾಗುವುದರಿಂದ ಯಾವುದೇ mobilization advance ನೀಡಲಾಗದು ಎಂಬುದನ್ನು ಗುತ್ತಿಗೆದಾರರಿಗೆ ಸ್ಪಷ್ಟ ಪಡಿಸಲು ಸೂಚಿಸಿದರು.
  8. ರೈಲ್ವೆ ಯೋಜನೆಗಳಿಗೆ 5271.96 ಕೋಟಿ ರೂ. , ಕುಡಿಯುವ ನೀರಿನ ಯೋಜನೆಗಳಿಗೆ 4929.84 ಕೋಟಿ ರೂ., ಆರೋಗ್ಯ ಕ್ಷೇತ್ರಕ್ಕೆ 1915.78 ಕೋಟಿ ರೂ., ಪರಿಸರ ಪುನಃಸ್ಥಾಪನೆಗೆ 2655.17 ಕೋಟಿ ರೂ., ರಸ್ತೆಗಳು ಮತ್ತು ಸಂವಹನ ಯೋಜನೆಗಳಿಗೆ 2559.17 ಕೋಟಿ ರೂ. , ವಸತಿ ಯೋಜನೆಗಳಿಗೆ 1193.98 ಕೋಟಿ ರೂ. ನಿಗದಿ ಪಡಿಸಲಾಗಿದೆ.
  9. ವಸತಿ ಯೋಜನೆಗಳಡಿ ಫಲಾನುಭವಿಗಳನ್ನು ಶೀಘ್ರವೇ ಗುರುತಿಸಲು ಸೂಚಿಸಿದರು.
  10. ಸಣ್ಣ ನೀರಾವರಿ ಇಲಾಖೆ 14 ಯೋಜನೆಗಳ ಪೈಕಿ 7 ಯೋಜನೆಗಳ ಕಾಮಗಾರಿ ಆರಂಭಿಸಲಾಗಿದೆ. ಉಳಿದ 7 ಯೋಜನೆಗಳ ಟೆಂಡರ್ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ ಕಾಮಗಾರಿ ಅನುಷ್ಠಾನ‌ಮಾಡುವಂತೆ ಸಿಎಂ ಸೂಚಿಸಿದರು.
  11. ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಶಾಲೆಗಳ ಕಟ್ಟಡ ದುರಸ್ತಿ, ಕೊಠಡಿ, ಪ್ರಯೋಗಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳಲು ಸೂಚನೆ.
  12. ಅಂಗನವಾಡಿ ಕಟ್ಟಡ, ವಿದ್ಯಾರ್ಥಿ ನಿಲಯಗಳು ಮತ್ತಿತರ ಯೋಜನೆಗಳಿಗೆ ಒತ್ತು ನೀಡುವಂತೆ ಸೂಚನೆ.
  13. ಲಭ್ಯವಿರುವ ಅನುದಾನದಲ್ಲಿ ಈ ನಾಲ್ಕೂ ಜಿಲ್ಲೆಗಳು ಮಾದರಿ ಜಿಲ್ಲೆಗಳಾಗಿ ಅಭಿವೃದ್ಧಿ ಮಾಡುವಂತೆ ಅಭಿವೃದ್ಧಿ ಆಯುಕ್ತರಿಗೆ ಸೂಚಿಸಿದರು. ಮುಂದಿನ ಸಭೆಯಲ್ಲಿ ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಹ ಭಾಗವಹಿಸುವಂತೆ ಸೂಚಿಸಿದರು.
  14. ಕಾಮಗಾರಿಯನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಹಾಗೂ ಕಾಮಗಾರಿಯ ಗುಣಮಟ್ಟವನ್ನು ಖಾತರಿಪಡಿಸಬೇಕು ಎಂದರು.
  15. ಗಣಿ ಬಾಧಿತ ಜಿಲ್ಲೆಗಳಲ್ಲಿ ಮಾಲಿನ್ಯದ ಪ್ರಮಾಣ ಕಳೆದ ವರ್ಷಕ್ಕೆ ಹೋಲಿಸಿದರೆ ಕಡಿಮೆ ಇದ್ದು, ತೃಪ್ತಿಕರ ಹಂತಕ್ಕೆ ತಲುಪಿದೆ ಎಂದು ಅಧಿಕಾರಿಗಳು ವಿವರಿಸಿದರು.

ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ | CM Siddaramaiah: ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರೋದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದ ಸಿಎಂ

ಸಿಎಂ ಭೇಟಿಯಾದ ಹಾಪ್‌ಕಾಮ್ಸ್ ಪದಾಧಿಕಾರಿಗಳು

ಬೆಂಗಳೂರಿನ ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ ನಿಯಮಿತ (ಹಾಪ್‌ಕಾಮ್ಸ್) ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ನಿರ್ದೇಶಕ ಮಂಡಳಿಯ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು ಹಾಗೂ ನಸೀರ್‌ ಅಹ್ಮದ್‌, ಮುಖ್ಯಮಂತ್ರಿಯವರ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ಶಾಸಕರಾದ ಕೊತ್ತೂರು ಮಂಜುನಾಥ್, ಹಾಪ್‌ಕಾಮ್ಸ್‌ ಅಧ್ಯಕ್ಷ ಗೋಪಾಲಕೃಷ್ಣ, ವ್ಯವಸ್ಥಾಪಕ ನಿರ್ದೇಶಕ ಉಮೇಶ್‌ ಮಿರ್ಜಿ ಮತ್ತು ನಿರ್ದೇಶಕ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Continue Reading

ದೇಶ

Parliament Sessions: ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಸದನ; ಶೇಕ್‌ ಹ್ಯಾಂಡ್‌ ಮಾಡಿದ ಪ್ರಧಾನಿ ಮೋದಿ, ರಾಹುಲ್‌

Parliament Sessions: ಓಂ ಬಿರ್ಲಾ ಅವರು ಸ್ಪೀಕರ್‌ ಆಗಿ ಚುನಾಯಿತರಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ವಿಪಕ್ಷ ನಾಯಕರ ರಾಹುಲ್‌ ಗಾಂಧಿ ತಮ್ಮ ತಮ್ಮ ಸ್ಥಾನಗಳಿಂದ ಎದ್ದು ಬಂದು ಓಂ ಬಿರ್ಲಾ ಅವರನ್ನು ಸ್ವಾಗತಿಸಿದರು. ಈ ವೇಳೆ ಪರಸ್ಪರ ಶೇಕ್‌ ಹ್ಯಾಂಡ್‌ ಮಾಡಿಕೊಂಡರು. ಬಳಿಕ ಓಂ ಬಿರ್ಲಾ ಅವರನ್ನು ಅವರ ಸೀಟ್‌ವರೆಗೆ ಕರೆದೊಯ್ದರು. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

VISTARANEWS.COM


on

Parliament Sessions
Koo

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ(Parliament Sessions)ದ ಮೂರನೇ ದಿನವಾದ ಇಂದು ಹಲವು ಮಹತ್ವದ ಘಟನೆಗಳಿಗೆ ಸಾಕ್ಷಿಯಾಯಿತು. ಇಂದು ಸ್ಪೀಕರ್‌ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಓಂ ಬಿರ್ಲಾ(Om Birla) ಅವರು ಎರಡನೇ ಬಾರಿ ಲೋಕಸಭೆಯ ಸ್ಪೀಕರ್‌ ಆಗಿ ಚುನಾಯಿತರಾಗಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಮತ್ತು ವಿಪಕ್ಷ ನಾಯಕ ರಾಹುಲ್‌ ಗಾಂಧಿ ಪರಸ್ಪರ ಹಸ್ತಾಲಾಘವ(Shake Hand) ಮಾಡಿದ ಅಪರೂಪದ ಕ್ಷಣಗಳಿಗೆ ಇಡೀ ಸದನವೇ ಸಾಕ್ಷಿ ಆಯಿತು.

ಓಂ ಬಿರ್ಲಾ ಅವರು ಸ್ಪೀಕರ್‌ ಆಗಿ ಚುನಾಯಿತರಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ವಿಪಕ್ಷ ನಾಯಕರ ರಾಹುಲ್‌ ಗಾಂಧಿ ತಮ್ಮ ತಮ್ಮ ಸ್ಥಾನಗಳಿಂದ ಎದ್ದು ಬಂದು ಓಂ ಬಿರ್ಲಾ ಅವರನ್ನು ಸ್ವಾಗತಿಸಿದರು. ಈ ವೇಳೆ ಪರಸ್ಪರ ಶೇಕ್‌ ಹ್ಯಾಂಡ್‌ ಮಾಡಿಕೊಂಡರು. ಬಳಿಕ ಓಂ ಬಿರ್ಲಾ ಅವರನ್ನು ಅವರ ಸೀಟ್‌ವರೆಗೆ ಕರೆದೊಯ್ದರು. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

18ನೇ ಲೋಕಸಭೆಯ ಸ್ಪೀಕರ್‌ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಎನ್‌ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಅವರು ಸ್ಪೀಕರ್‌ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ (Lok Sabha Speaker). ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಕಣಕ್ಕಿಳಿದಿದ್ದರು. ಭಾರೀ ಕುತೂಹಲ ಮೂಡಿಸಿದ್ದ ಈ ಐತಿಹಾಸಿಕ ಚುನಾವಣೆಯಲ್ಲಿ ಇದೀಗ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ಆರಂಭವಾದ ಚುನಾವಣಾ ಪ್ರಕ್ರಿಯೆಯಲ್ಲಿ ಓಂ ಬಿರ್ಲಾ ಅವರು ಬಹುಮತಗಳನ್ನು ಪಡೆದುಕೊಂಡರು. ಓಂ ಬಿರ್ಲಾ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ಬಳಿಕ ಹಲವು ನಾಯಕರು ಅನುಮೋದಿಸಿದರು. ಧ್ವನಿ ಮತದ ಮೂಲಕ ಸದಸ್ಯರು ಮತ ಚಲಾಯಿಸಿದರು. ಈ ಮೂಲಕ ಓಂ ಬಿರ್ಲಾ ಅವರು ಬಲರಾಮ್ ಜಖರ್ (1980-89) ನಂತರ ಎರಡು ಪೂರ್ಣ ಅವಧಿಗೆ ಆಯ್ಕೆಯಾದ ಎರಡನೇ ಸ್ಪೀಕರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಲೋಕಸಭೆಯ ಎರಡನೇ ಸ್ಪೀಕರ್ ಎಂ.ಎ.ಅಯ್ಯಂಗಾರ್ ಮತ್ತು ಗುರ್ದಿಯಾಲ್ ಸಿಂಗ್ ಧಿಲ್ಲಾನ್ ಈ ಹಿಂದೆ ಎರಡು ಬಾರಿ ಈ ಹುದ್ದೆಯನ್ನು ಆಯ್ಕೆಯಾಗಿದ್ದರೂ ಅವರ ಎರಡನೇ ಅವಧಿ ಒಂದೂವರೆ ವರ್ಷಕ್ಕಿಂತ ಹೆಚ್ಚು ಕಾಲ ಉಳಿದಿರಲಿಲ್ಲ. ಹಂಗಾಮಿ ಸ್ಪೀಕರ್‌ ಭಾರ್ತೃಹರಿ ಮಹತಾಬ್‌ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು

ಇದನ್ನೂ ಓದಿ:Life threat: ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ; ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

Continue Reading

ದೇಶ

Lok Sabha Speaker: ಎರಡನೇ ಬಾರಿ ಸ್ಪೀಕರ್‌ ಆದ ಓಂ ಬಿರ್ಲಾಗೆ ಮೋದಿ, ರಾಹುಲ್‌ ಅಭಿನಂದನೆ

Lok Sabha Speaker:ಇದೇ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಸದನದ ಪರವಾಗಿ ನಾನು ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆ. ಅಮೃತ ಕಾಲದ ಸಮಯದಲ್ಲಿ ನೀವು ಎರಡನೇ ಬಾರಿಗೆ ಈ ಜವಾಬ್ದಾರಿಯುತ ಹುದ್ದೆ ಅಲಂಕರಿಸಿರುವುದು ಬಹಳ ಸಂತಸ ತಂದಿದೆ. ನಿಮ್ಮ ಅನುಭವದೊಂದಿಗೆ, ಮುಂದಿನ 5 ವರ್ಷಗಳವರೆಗೆ ನೀವು ನಮಗೆ ಮಾರ್ಗದರ್ಶನ ನೀಡುತ್ತೀರಿ ಎಂದು ನಾವು ಭಾವಿಸುತ್ತೇವೆ. ನಿಮ್ಮ ಮುಖದ ಮೇಲಿನ ಸಿಹಿಯಾದ ನಗು ಇಡೀ ಸದನವನ್ನು ಸಂತೋಷವನ್ನಾಗಿರಿಸುತ್ತದೆ ಎಂದು ಹೇಳಿದರು.

VISTARANEWS.COM


on

Lok Sabha Speaker
Koo

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್‌ ಆಗಿ ಎನ್‌ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಅವರು ಆಯ್ಕೆಯಾಗಿದ್ದಾರೆ (Lok Sabha Speaker). ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇದೀಗ ಎರಡನೇ ಬಾರಿ ಲೋಕಸಭೆ ಸ್ಪೀಕರ್‌ ಆಗಿ ಆಯ್ಕೆ ಆಗಿರುವ ಓಂ ಬಿರ್ಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಎಲ್ಲಾ ಸಂಸತ್‌ ಸದಸ್ಯರು ಪಕ್ಷಾತೀತ ಅಭಿನಂದನೆ ಸಲ್ಲಿಸಿದರು.

ಇದೇ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಸದನದ ಪರವಾಗಿ ನಾನು ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆ. ಅಮೃತ ಕಾಲದ ಸಮಯದಲ್ಲಿ ನೀವು ಎರಡನೇ ಬಾರಿಗೆ ಈ ಜವಾಬ್ದಾರಿಯುತ ಹುದ್ದೆ ಅಲಂಕರಿಸಿರುವುದು ಬಹಳ ಸಂತಸ ತಂದಿದೆ. ನಿಮ್ಮ ಅನುಭವದೊಂದಿಗೆ, ಮುಂದಿನ 5 ವರ್ಷಗಳವರೆಗೆ ನೀವು ನಮಗೆ ಮಾರ್ಗದರ್ಶನ ನೀಡುತ್ತೀರಿ ಎಂದು ನಾವು ಭಾವಿಸುತ್ತೇವೆ. ನಿಮ್ಮ ಮುಖದ ಮೇಲಿನ ಸಿಹಿಯಾದ ನಗು ಇಡೀ ಸದನವನ್ನು ಸಂತೋಷವನ್ನಾಗಿರಿಸುತ್ತದೆ ಎಂದು ಹೇಳಿದರು.

ಸ್ವಾತಂತ್ರ್ಯದ 70 ವರ್ಷಗಳಲ್ಲಿ ನಡೆಯದ ಕೆಲಸಗಳು ನಿಮ್ಮ ಅಧ್ಯಕ್ಷತೆಯಲ್ಲಿ ಈ ಸದನದಲ್ಲಿ ಸಾಧ್ಯವಾಗಿವೆ. ಹಲವು ಮೈಲಿಗಲ್ಲುಗಳಿಗೆ ಈ ಸದನ ಸಾಕ್ಷಿಯಾಗಿತ್ತು. 17 ನೇ ಲೋಕಸಭೆಯ ಸಾಧನೆಗಳ ಬಗ್ಗೆ ದೇಶವು ಹೆಮ್ಮೆಪಡುತ್ತದೆ ಎಂದು ಹೇಳಿದರು.

ಇದು ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ, “ಪ್ರತಿಪಕ್ಷಗಳಿಗೆ ಮಾತನಾಡಲು ಅವಕಾಶ ನೀಡಿ ಭಾರತದ ಜನರನ್ನು ಪ್ರತಿನಿಧಿಸಲು ಅವಕಾಶ ನೀಡುವ ಮೂಲಕ, ನೀವು ಭಾರತದ ಸಂವಿಧಾನವನ್ನು ರಕ್ಷಿಸುವ ನಿಮ್ಮ ಕರ್ತವ್ಯವನ್ನು ನೀವು ಸರಿಯಾಗಿ ನಿರ್ವಹಿಸುತ್ತೀರಿ ಎಂಬ ಬಗ್ಗೆ ನಮಗೆ ವಿಶ್ವಾಸವಿದೆ. ನಾನು ಮತ್ತೊಮ್ಮೆ ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆ ಎಂದರು.

ಇದನ್ನೂ ಓದಿ: Life threat: ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ; ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

Continue Reading

ಕರ್ನಾಟಕ

CM Siddaramaiah: ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರೋದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದ ಸಿಎಂ

CM Siddaramaiah: ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

CM Siddaramaiah
Koo

ಬೆಂಗಳೂರು: ರಾಹುಲ್ ಗಾಂಧಿ ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು. ಅವರು ಲೋಕಸಭಾ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ ನೀಡಿದ್ದೆ. ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಎದುರಿಸಬೇಕಾದರೆ ನೀವೇ ವಿರೋಧಪಕ್ಷದ ನಾಯಕರಾಗಬೇಕೆಂದು ಕಾರ್ಯಕಾರಿಣಿ ಸಮಿತಿ ಹಾಗೂ ನಾನೂ ಒತ್ತಾಯ ಮಾಡಿದ್ದೆ. ವಿಪಕ್ಷ ನಾಯಕರಾಗಿ ಜವಾಬ್ದಾರಿ ವಹಿಸಿಕೊಂಡಿರುವ ಅವರಿಗೆ ಅಭಿನಂದನೆ ಹೇಳಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಹೇಳಿದರು.

ಹಾಲಿನ ಉತ್ಪಾದನೆ 99 ಲಕ್ಷ ಲೀಟರ್‌ಗಿಂತ ಹೆಚ್ಚಾಗಿದೆ

ಹಾಲಿನ ದರ ಹೆಚ್ಚಾಗಿಲ್ಲ. ಕಳೆದ ವರ್ಷ ಇದೇ ವೇಳೆಗೆ ಹಾಲಿನ ಉತ್ಪಾದನೆ 90 ಲಕ್ಷ ಲೀಟರ್ ಇತ್ತು. ಈಗ 99 ಲಕ್ಷ ಲೀಟರ್‌ಗಿಂತ ಹೆಚ್ಚಾಗಿದೆ. ರೈತರಿಂದ ನಾವು ಹಾಲು ಪಡೆಯಬೇಕಾಗಿದ್ದು, ಅದನ್ನು ಮಾರಾಟ ಮಾಡಬೇಕಿದೆ. ಅರ್ಧ ಲೀಟರ್ ಪ್ಯಾಕೆಟ್‌ನಲ್ಲಿ 50 ಮೀ.ಲೀ ಹೆಚ್ಚು ಮಾಡಿದ್ದು, ಅದಕ್ಕೆ ತಗಲುವ 2.10 ರೂ.ಗಳನ್ನು ಪ್ರಮಾಣಕ್ಕೆ ತಕ್ಕಂತೆ ಬೆಲೆ ನಿಗದಿ ಮಾಡಲಾಗಿದೆ ಎಂದು ಪುನರುಚ್ಚರಿಸಿದರು. ಮಾರುಕಟ್ಟೆ ಅಗತ್ಯವಿದೆ, ಹಾಲಿನ ಬೆಲೆ ಹೆಚ್ಚು ಮಾಡಿಲ್ಲ. ಹಾಲು ಹೆಚ್ಚು ಉತ್ಪಾದನೆಯಾಗಿರುವುದನ್ನು ಹೆಚ್ಚು ನೀಡಿ ಅದಕ್ಕೆ ತಕ್ಕದರವನ್ನಷ್ಟೇ ನಿಗದಿ ಮಾಡಲಾಗಿದೆ ಎಂದರು.

ಹಾಲಿನ ದರ ಏರಿಕೆಯಾಗಿಲ್ಲ: ಕಾಫಿ, ಟೀ ದರಗಳ ಹೆಚ್ಚಳ ಸಲ್ಲದು

ಹೋಟೆಲ್ ಮಾಲೀಕರ ಸಂಘದವರು ಸಭೆ ಸೇರಿ ಕಾಫಿ‌, ಟೀ ದರಗಳನ್ನು ಹೆಚ್ಚಿಸಲಾಗುವುದು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅವರು ಹೇಗೆ ಹೆಚ್ಚಿಸುತ್ತಾರೆ, ಹಾಲಿನ ಬೆಲೆ ಏರಿದ್ದರೆ ಮಾತ್ರ ಹೆಚ್ಚಿಸಬೇಕು ಎಂದರು.

ಇದನ್ನೂ ಓದಿ | CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

ರೈತರಿಂದ ಹಾಲು ಕೊಳ್ಳಬೇಕು

ಹೆಚ್ಚಾಗಿ ಉತ್ಪಾದನೆಯಾಗಿರುವ ಹಾಲನ್ನು ರೈತರಿಂದ ಕೊಳ್ಳಬೇಕೆ ಹೊರತು ಚೆಲ್ಲಲಾಗುವುದಿಲ್ಲ. ಕೊಳ್ಳುವವವರಿಗೆ ಹಾಲು ಹೆಚ್ಚಾಗಿ ದೊರೆಯುತ್ತಿದ್ದು ಜನ ಹಾಲನ್ನು ಕೊಳ್ಳಬೇಕು ಎಂದರು. ಇದೇ ವೇಳೆ ಸಂಸದರ ಸಭೆಗೆ ದೆಹಲಿಗೆ ತೆರಳುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಹೋಗುವಾಗ ಹೇಳುತ್ತೇನೆ ಎಂದರು.

Continue Reading
Advertisement
Development of Gaanagapura kshethra on Pandharpur, Thulajapur model says DC Fauzia Tarannum
ಕಲಬುರಗಿ3 mins ago

Kalaburagi News: ಪಂಢರಪುರ, ತುಳಜಾಪುರ ಮಾದರಿಯಲ್ಲಿ ಗಾಣಗಾಪುರ ಕ್ಷೇತ್ರ ಅಭಿವೃದ್ಧಿ

CM Siddaramaiah
ಪ್ರಮುಖ ಸುದ್ದಿ4 mins ago

CM Siddaramaiah: ಗಣಿ ಪರಿಸರ ಪುನಶ್ಚೇತನ ನಿಗಮದ ಸಭೆ; ಅಧಿಕಾರಿಗಳ ವಿಳಂಬ ಧೋರಣೆಗೆ ಸಿಎಂ ಗರಂ

Job Alert
ಉದ್ಯೋಗ6 mins ago

Job Alert: ಗ್ರಾಮೀಣ ಬ್ಯಾಂಕ್‌ಗಳಲ್ಲಿ 586 ಹುದ್ದೆ; ಗಮನಿಸಿ-ಅರ್ಜಿ ಸಲ್ಲಿಸಲು ನಾಳೆಯೇ ಅಂತಿಮ ದಿನ

Parliament Sessions
ದೇಶ16 mins ago

Parliament Sessions: ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಸದನ; ಶೇಕ್‌ ಹ್ಯಾಂಡ್‌ ಮಾಡಿದ ಪ್ರಧಾನಿ ಮೋದಿ, ರಾಹುಲ್‌

Pavithra Gowda lipstick case Notice to PSI
ಕ್ರೈಂ31 mins ago

Pavithra Gowda: ಪವಿತ್ರಾಗೆ ಲಿಪ್‌ಸ್ಟಿಕ್‌ ಹಚ್ಚಲು ಅವಕಾಶ ಮಾಡಿಕೊಟ್ಟಿದ್ದ ಮಹಿಳಾ `PSI’ಗೆ ನೋಟಿಸ್‌!

PGCET 2024
ಕರ್ನಾಟಕ42 mins ago

PGCET 2024: ಪಿಜಿಸಿಇಟಿ ಪರೀಕ್ಷೆ ಮುಂದೂಡಿಕೆ; ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟ

Liquor Price karnataka
ಕರ್ನಾಟಕ44 mins ago

Liquor Price Karnataka: ಶ್ರೀಮಂತರಿಗೆ ಮತ್ತು, ಬಡವರಿಗೆ ಕುತ್ತು! ಪ್ರೀಮಿಯಂ ಮದ್ಯ ದರ ಇಳಿಕೆ, ಬಡವರ ಎಣ್ಣೆ ರೇಟ್‌ ಏರಿಕೆ?

Lok Sabha Speaker
ದೇಶ59 mins ago

Lok Sabha Speaker: ಎರಡನೇ ಬಾರಿ ಸ್ಪೀಕರ್‌ ಆದ ಓಂ ಬಿರ್ಲಾಗೆ ಮೋದಿ, ರಾಹುಲ್‌ ಅಭಿನಂದನೆ

Tharun Sudhir and sonal monteiro love story support By Darshan
ಸ್ಯಾಂಡಲ್ ವುಡ್1 hour ago

Tharun Sudhir: ದರ್ಶನ್‌ ತಮಾಷೆಯಿಂದಲೇ ಹುಟ್ಟಿತು ತರುಣ್‌- ಸೋನಲ್‌ ಪ್ರೀತಿ? ಇಬ್ಬರ ಲವ್ ಸ್ಟೋರಿ ಶುರುವಾಗಿದ್ದೇಗೆ?

Kenya Violence
ವಿದೇಶ1 hour ago

Kenya Violence: ಕೀನ್ಯಾದಲ್ಲಿ ಭುಗಿಲೆದ್ದ ಹಿಂಸಾಚಾರ; ಭಾರತೀಯರಿಗೆ ಎಚ್ಚರಿಕೆ ನೀಡಿದ ಹೈಕಮಿಷನ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌