MLC Election: ಒಂದಾದ ಸಿಎಂ- ಡಿಸಿಎಂ, ಪರಂ ಗರಂ; ಅಖಾಡಕ್ಕಿಳಿದ ರಮೇಶ್‌ ಕುಮಾರ್‌ - Vistara News

ರಾಜಕೀಯ

MLC Election: ಒಂದಾದ ಸಿಎಂ- ಡಿಸಿಎಂ, ಪರಂ ಗರಂ; ಅಖಾಡಕ್ಕಿಳಿದ ರಮೇಶ್‌ ಕುಮಾರ್‌

MLC Election: ಪರಿಷತ್ ಅಭ್ಯರ್ಥಿ ಆಯ್ಕೆ ವಿಷ್ಯದಲ್ಲಿ ಹಿರಿಯ ನಾಯಕರ ಸಲಹೆ ಪಡೆದಿಲ್ಲ. ಇಂಥ ಆಯ್ಕೆಗಳನ್ನು ನಾಲ್ಕು ಗೋಡೆ ನಡುವೆ ಮಾಡುವುದು ಸರಿಯಲ್ಲ ಎಂದು ಗೃಹ ಸಚಿವ ಪರಮೇಶ್ವರ ಬಹಿರಂಗವಾಗಿ ಟೀಕಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೂ ಕೈ ಪಾಳಯದಲ್ಲಿ ಈ ಬಗ್ಗೆ ಅಸಮಾಧಾನ ಮೂಡಿತ್ತು.

VISTARANEWS.COM


on

mlc election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನ ಪರಿಷತ್‌ಗೆ (MLC Election) ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಬಿಕ್ಕಟ್ಟಿನ ಚೆಂಡು ಸದ್ಯಕ್ಕೆ ಹೈಕಮಾಂಡ್ ಅಂಗಳದಲ್ಲಿದೆ. ದೆಹಲಿಯಲ್ಲಿ ನಡೆಯುತ್ತಿರುವ ಸರಣಿ ಸಭೆಗಳಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ (DCM DK Shivakumar) ಸದ್ಯ ತಮ್ಮ ಭಿನ್ನಮತಗಳನ್ನು ಮರೆತು ಒಂದಾಗಿದ್ದಾರೆ. ಈ ನಡುವೆ ಹಿರಿಯ ನಾಯಕ, ಗೃಹ ಸಚಿವ ಪರಮೇಶ್ವರ (G Parameshwara) ಅವರು, ಹಿರಿಯ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂಬ ಬಾಂಬ್‌ ಹಾಕಿದ್ದಾರೆ. ಕೋಲಾರದ ಹಿರಿಯ ನಾಯಕ ರಮೇಶ್‌ ಕುಮಾರ್‌ (Ramesh Kumar) ಅವರು ಕೂಡ ತಮ್ಮ ದಾಳ ಉರುಳಿಸಲು ಮುಂದಾಗಿದ್ದಾರೆ.

ರಾಜಕೀಯ ವರ್ಚಸ್ಸಿಗಾಗಿ ನನಗೆ ನೀನು, ನಿನಗೆ ನಾನು ಎಂಬ ತತ್ವ ಉಪಯೋಗಿಸಿರುವ ಸಿಎಂ ಹಾಗೂ ಡಿಸಿಎಂ, ತಮ್ಮ ಆಪ್ತರಿಗೆ ಟಿಕೆಟ್‌ ಕೊಡಿಸುವುದು ಬಹುತೇಕ ಖಚಿತವಾಗಿದೆ. ಪರಿಷತ್ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಡಿಕೆಶಿ, ಸಿದ್ದರಾಮಯ್ಯ ಒಂದಾಗಿದ್ದು, ಹಿರಿಯ ನಾಯಕರ ಅಭಿಪ್ರಾಯವನ್ನು ತೆಗೆದುಕೊಳ್ಳದೇ ದೆಹಲಿಗೆ ದೌಡಾಯಿಸಿದ್ದಾರೆ. ಎರಡು ಪ್ರತ್ಯೇಕ ಪಟ್ಟಿ ಹಿಡಿದು ಹೊರಟಿರುವ ನಾಯಕರು ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಭೇಟಿ ಮಾಡಿದ್ದಾರೆ. ನಾಳೆ ಎಐಸಿಸಿ ಅಧ್ಯಕ್ಷ ಖರ್ಗೆಯವರನ್ನು (Mallikarjun Kharge) ಭೇಟಿ ಮಾಡಲಿದ್ದಾರೆ.

ಸಿದ್ದರಾಮಯ್ಯ ಪುತ್ರ ಯತೀಂದ್ರ ಹಾಗೂ ಗೋವಿಂದರಾಜುಗೆ ಟಿಕೆಟ್ ಕನ್ಫರ್ಮ್ ಎಂದು ಮೂಲಗಳು ತಿಳಿಸಿವೆ. ಈ ಉಭಯರ ಪರವಾಗಿ ಸಿಎಂ ಸಿದ್ದರಾಮಯ್ಯ ಬ್ಯಾಟಿಂಗ್ ಮಾಡಿದ್ದಾರೆ. ಪುತ್ರ ಯತೀಂದ್ರ ತಂದೆಗಾಗಿ ವರುಣ ಕ್ಷೇತ್ರ ತ್ಯಾಗ ಮಾಡಿದ್ದರು. ತ್ಯಾಗ ಮಾಡಿದ ಮಗನಿಗೆ ಪರಿಷತ್ ಸ್ಥಾನ ಕೊಡಿಸಲು ಸಿದ್ದರಾಮಯ್ಯ ಟೊಂಕ ಕಟ್ಟಿದ್ದಾರೆ. ಇತ್ತ ಗೋವಿಂದರಾಜು ಪರವಾಗಿಯೂ ಸಿಎಂ‌ ಬ್ಯಾಟಿಂಗ್ ಮಾಡಿದ್ದಾರೆ.

ಡಿಕೆಶಿ ಹೇಳಿರುವ ಹೆಸರಿಗೂ ಸಿಎಂ ಎಸ್ ಎಂದಿದ್ದಾರೆ ಎನ್ನುತ್ತಿವೆ ಮೂಲಗಳು. ವಿನಯ್ ಕಾರ್ತಿಕ್ ಹಾಗೂ ಮುಳುಗುಂದ್ ಪರ ಡಿಕೆಶಿ ನಿಂತಿದ್ದಾರೆ ಎನ್ನುತ್ತಿವೆ ದೆಹಲಿಯ ಮೂಲಗಳು. ಹೀಗಾಗಿ ಈ ಬಾರಿ ಪರಿಷತ್ ಅಭ್ಯರ್ಥಿ ಆಯ್ಕೆಯಲ್ಲಿ ಸಿಎಂ, ಡಿಸಿಎಂ ಇಬ್ಬರ ಕೈ ಮೇಲುಗೈ ಆಗೋದರಲ್ಲಿ ಯಾವುದೇ ಅನುಮಾನವಿಲ್ಲ.

ಇದರಿಂದ ಕಾಂಗ್ರೆಸ್ ಪಕ್ಷದ ಹಿರಿಯ ಹುದ್ದರಿಗಳಲ್ಲಿ ಅಸಮಾಧಾನ ಮೂಡಿದೆ. ದೆಹಲಿಯಲ್ಲಿ ಚರ್ಚೆಗೂ ಮುನ್ನವೇ ಕೈ ಪಾಳಯದಲ್ಲಿನ ಹಿರಿಯ ನಾಯಕರ ಅಸಮಾಧಾನ ಮುಗಿಲು ಮುಟ್ಟಿದ್ದು, ಪ್ರತಿ ಬಾರಿಯೂ ಹಿರಿಯ ನಾಯಕರ ಕಡೆಗಣಿನೆಯಾಗುತ್ತಿದೆ ಎಂದು ಕೆಲವರು ಬಹಿರಂಗ ಅಸಮಾಧಾನ ತೋಡಿಕೊಂಡಿದ್ದಾರೆ. ಪರಿಷತ್ ಅಭ್ಯರ್ಥಿ ಆಯ್ಕೆ ವಿಷ್ಯದಲ್ಲಿ ಹಿರಿಯ ನಾಯಕರ ಸಲಹೆ ಪಡೆದಿಲ್ಲ. ಇಂಥ ಆಯ್ಕೆಗಳನ್ನು ನಾಲ್ಕು ಗೋಡೆ ನಡುವೆ ಮಾಡುವುದು ಸರಿಯಲ್ಲ ಎಂದು ಗೃಹ ಸಚಿವ ಪರಮೇಶ್ವರ ಬಹಿರಂಗವಾಗಿ ಟೀಕಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೂ ಕೈ ಪಾಳಯದಲ್ಲಿ ಈ ಬಗ್ಗೆ ಅಸಮಾಧಾನ ಮೂಡಿತ್ತು. ಈ ಬಾರಿಯೂ ಸಿಎಂ, ಡಿಸಿಎಂ ತಮ್ಮ ತಮ್ಮ ಆಪ್ತರಿಗೆ ಟಿಕೆಟ್ ಕೊಡಿಸುವುದು ಪಕ್ಕಾ ಆಗಿದ್ದು, ಇವರಿಬ್ಬರ ನಿರಂಕುಶ ಓಟಕ್ಕೆ ಎಐಸಿಸಿ ಅಧ್ಯಕ್ಷ ಖರ್ಗೆ ಬ್ರೇಕ್ ಹಾಕುತ್ತಾರಾ ನೋಡಬೇಕಿದೆ.

ಇತ್ತ ಕೊನೆಯ ಕ್ಷಣದಲ್ಲಿ ಪರಿಷತ್ ಸ್ಪರ್ಧೆಗೆ ರಮೇಶ್ ಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಕಾಂಗ್ರೆಸ್‌ಗೆ ಸಿಗುವ ಏಳು ಸ್ಥಾನಕ್ಕೆ ಭಾರಿ ಪೈಪೋಟಿ ಇದ್ದು, ಏಳು ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ಮಾಡಲು ದೆಹಲಿಗೆ ಹೋಗುವ ಮುನ್ನವೇ ರಮೇಶ್ ಕುಮಾರ್ ಅವರು ಸಿಎಂ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಕಾಂಗ್ರೆಸ್ ಶಾಸಕರ ಜತೆ ಹೋಗಿ ಲಾಬಿ ಮಾಡಿರುವ ರಮೇಶ್‌ ಕುಮಾರ್‌, ಪರಿಷತ್ ಸ್ಥಾನ ತಮಗೆ ಕೊಡಿಸುವಂತೆ ಪಟ್ಟು ಹಿಡಿದಿದ್ದಾರೆ.

ನನ್ನ ಲಿಸ್ಟ್‌ನಲ್ಲಿ ನೀನು ಇದ್ದೀಯಾ. ಡಿಕೆ ಶಿವಕುಮಾರ್ ಬಳಿ ಹೋಗು. ಅವರ ಪಟ್ಟಿಯಲ್ಲಿ ಹೆಸರು ಬರುವ ರೀತಿ ಮಾಡು ಎಂದು ಸಿದ್ದರಾಮಯ್ಯ ಓಲೈಸಿ ಕಳಿಸಿದ್ದಾರೆ. ಹೀಗಾಗಿ ಡಿಕೆಶಿ ಮನೆಗೂ ತೆರಳಿದ ರಮೇಶ್ ಕುಮಾರ್ ಆಂಡ್ ಟೀಮ್, ಪರಿಷತ್ ಸ್ಥಾನ ಕೊಡಿಸುವಂತೆ ಪಟ್ಟು ಹಿಡಿದಿದ್ದಾರೆ. ಆಕಾಂಕ್ಷಿಗಳ ಸಂಖ್ಯೆ ದುಪ್ಪಟ್ಟು ಇದೆ. ಆದರೂ ನಿಮ್ಮ ಬಗ್ಗೆ ಹೈಕಮಾಂಡ್ ಜತೆ ಮಾತನಾಡ್ತೀವಿ ಎಂದು ಹೇಳಿ ಡಿಕೆಶಿ ಕಳಿಸಿದ್ದಾರೆ ಎಂದು ತಿಳಿದುಬಂದಿದೆ.

ಹೀಗಾಗಿ ದೆಹಲಿಯ ಕಾಂಗ್ರೆಸ್ ಬೆಳವಣಿಗೆಗಳ ಮೇಲೆ ರಮೇಶ್ ಕುಮಾರ್ ಕಣ್ಣಿಟ್ಟಿದ್ದಾರೆ. ಅತ್ತ ಕೆ.ಎಚ್‌ ಮುನಿಯಪ್ಪ ಬಣ ರಮೇಶ್‌ ಕುಮಾರರ ಆಕಾಂಕ್ಷೆಗೆ ಅಡ್ಡಗಾಲಾಗಿದೆ. ಈ ವಿರೋಧದ ನಡುವೆಯೂ ರಮೇಶ್ ಕುಮಾರ್‌ಗೆ ಸ್ಥಾನ ಒಲಿಯಲಿದೆಯೇ ನೋಡಬೇಕಿದೆ.

ಇದನ್ನೂ ಓದಿ: MLC Election: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವು ಖಚಿತ: ಬೇಳೂರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Pawan Kalyan: ವೇತನವೇ ಬೇಡ ಎಂದ ಪವನ್‌ ಕಲ್ಯಾಣ್‌- ಮತ್ತೊಮ್ಮೆ ಗಮನ ಸೆಳೆದ ಆಂಧ್ರ ಡಿಸಿಎಂ

Pawan Kalyan: ಕಾಕಿನಾಡ ಜಿಲ್ಲೆಯ ಗೋಲಾಪೊರ್ಲು ಗ್ರಾಮಕ್ಕೆ ಪವನ್ ಕಲ್ಯಾಣ್ ಭೇಟಿ ನೀಡಿ ಎನ್ ಟಿಆರ್ ಭರೋಸಾ ಪಿಂಚಣಿ ಪತ್ರಗಳನ್ನು ವಿತರಿಸಿದರು. ಈ ವೇಳೆ ಮಾತನಾಡಿದ ಅವರು, ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದರಿಂದ ವೇತನ ಪಡೆಯುವುದಿಲ್ಲ ಎಂದರು. ಇದೇ ವೇಳೆ ಅವರು ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಜಗನ್‌ ಅನಗತ್ಯವಾಗಿ ಅರಮನೆ ಕಟ್ಟಿಸಿಕೊಂಡು ರಾಜ್ಯವನ್ನು ಸಂಕಷ್ಟಕ್ಕೆ ದೂಡಿದ್ದಾರೆ. ಇಲಾಖೆಗಳಲ್ಲಿ ಹಣದ ಕೊರತೆ ಇದ್ದರೂ ಬಂಗಲೆ ಕಟ್ಟಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದರು.

VISTARANEWS.COM


on

Pawan Kalyan
Koo

ಪೀಠಾಪುರ್: ಆಂಧ್ರಪ್ರದೇಶ(Andra Pradesh) ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಅಭೂತಪೂರ್ವ ಗೆಲುವಿನ ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದ ಪವನ್‌ ಕಲ್ಯಾಣ್‌(Pawan Kalyan) ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ರಾಜ್ಯದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿರುವ ಹಿನ್ನೆಲೆ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ತಮ್ಮ ವೇತನ ಪಡೆಯಲು ನಿರಾಕರಿಸಿದ್ದಾರೆ.

ನಿನ್ನೆ ಕಾಕಿನಾಡ ಜಿಲ್ಲೆಯ ಗೋಲಾಪೊರ್ಲು ಗ್ರಾಮಕ್ಕೆ ಪವನ್ ಕಲ್ಯಾಣ್ ಭೇಟಿ ನೀಡಿ ಎನ್ ಟಿಆರ್ ಭರೋಸಾ ಪಿಂಚಣಿ ಪತ್ರಗಳನ್ನು ವಿತರಿಸಿದರು. ಈ ವೇಳೆ ಮಾತನಾಡಿದ ಅವರು, ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದರಿಂದ ವೇತನ ಪಡೆಯುವುದಿಲ್ಲ ಎಂದರು. ಇದೇ ವೇಳೆ ಅವರು ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಜಗನ್‌ ಅನಗತ್ಯವಾಗಿ ಅರಮನೆ ಕಟ್ಟಿಸಿಕೊಂಡು ರಾಜ್ಯವನ್ನು ಸಂಕಷ್ಟಕ್ಕೆ ದೂಡಿದ್ದಾರೆ. ಇಲಾಖೆಗಳಲ್ಲಿ ಹಣದ ಕೊರತೆ ಇದ್ದರೂ ಬಂಗಲೆ ಕಟ್ಟಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದರು.

ಇಲಾಖೆಯಲ್ಲಿ ಹಣವಿಲ್ಲ,. ಇದಕ್ಕಾಗಿಯೇ ಕಳೆದ ತಿಂಗಳ ವೇತನಕ್ಕೆ ಸಂಬಂಧಿಸಿದ ಕಡತಕ್ಕೆ ಕೆಲ ದಿನ ಸಹಿ ಹಾಕುವುದನ್ನು ತಡೆದರು. ಸಂಬಳದ ಅಗತ್ಯವಿಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ಹಿಂದಿನ ಸರ್ಕಾರ ಪಂಚಾಯಿತಿ ಹಣ ಎಲ್ಲಿದೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಟೀಕಿಸಿದರು. ಇಲಾಖೆಯ ಹಣದ ಕೊರತೆಯ ನಡುವೆಯೂ ಅಂದಿನ ಮುಖ್ಯಮಂತ್ರಿ ರುಷಿಕೊಂಡನಲ್ಲಿ ಅರಮನೆ ನಿರ್ಮಿಸಿದ್ದರು ಎಂದು ಆರೋಪಿಸಿದರು. ಪಂಚಾಯತ್ ರಾಜ್ ಇಲಾಖೆಯಲ್ಲಿ ತಮ್ಮ ಕಡೆಯಿಂದ ಯಾವುದೇ ಭ್ರಷ್ಟಾಚಾರ ನಡೆಯುವುದಿಲ್ಲ ಎಂದು ಪವನ್ ಕಲ್ಯಾಣ್ ಸಾರ್ವಜನಿಕರಿಗೆ ಭರವಸೆ ನೀಡಿದರು.

ಇದೇ ವೇಳೆ ಜನರಿಗೆ ಕುಡಿಯುವ ನೀರು ಸಮರ್ಪಕವಾಗಿ ತಲುಪಿಸುವುದೇ ನಮ್ಮ ಮೊದಲ ಆದ್ಯತೆ ಎಂದು ಪವನ್ ಕಲ್ಯಾಣ್ ಹೇಳಿದರು. ಗೋದಾವರಿ ನದಿಯ ಸಮೀಪವಿದ್ದರೂ, ಗೋದಾವರಿ ಜಿಲ್ಲೆಗಳ ಅನೇಕ ಪ್ರದೇಶಗಳು ಕುಡಿಯುವ ನೀರಿನ ಕೊರತೆಯನ್ನು ಎದುರಿಸುತ್ತಿವೆ ಎಂದು ಪವನ್ ಕಲ್ಯಾಣ್ ಪ್ರಸ್ತಾಪಿಸಿದರು. ಹಿಂದಿನ ಸರ್ಕಾರ ಜಲ ಜೀವನ್ ಮಿಷನ್ ನಿಧಿಯನ್ನು ಬಳಸಿಕೊಂಡಿಲ್ಲ ಎಂದು ಟೀಕಿಸಿದರು. ಮನವಿ ಮೇರೆಗೆ ಹಣ ಮಂಜೂರು ಮಾಡಲು ಕೇಂದ್ರ ಸರ್ಕಾರ ಸಿದ್ಧವಿದ್ದರೂ ಹೊಂದಾಣಿಕೆ ಅನುದಾನ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು. ಮುಂದಿನ ಐದು ವರ್ಷಗಳಲ್ಲಿ ಪವಾಡಗಳ ಭರವಸೆ ನೀಡುವುದಿಲ್ಲ, ಆದರೆ ಸರ್ಕಾರವು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಅವರು ಭರವಸೆ ನೀಡಿದರು. ಪವನ್ ಕಲ್ಯಾಣ್ ಅವರು ತಮ್ಮ ದೇಶ ಮತ್ತು ಭೂಮಿಗಾಗಿ ಕೆಲಸ ಮಾಡುವ ಬದ್ಧತೆಯನ್ನು ಪುನರುಚ್ಚರಿಸಿದರು, ಅವರು ರಾಜ್ಯದ ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಸಮರ್ಪಿತರಾಗಿದ್ದಾರೆ ಎಂದು ಒತ್ತಿ ಹೇಳಿದರು.

ಇದನ್ನೂ ಓದಿ: MUDA site scandal: ಮುಡಾ ನಿವೇಶನಗಳ ಹಂಚಿಕೆ ರದ್ದು; ಬಹುಕೋಟಿ ಹಗರಣದ ತನಿಖೆಗೆ ಸರ್ಕಾರ ಆದೇಶ

Continue Reading

ರಾಜಕೀಯ

Parliament Sessions: ಲೋಕಸಭೆಯಲ್ಲಿ ಇಂದು ಮೋದಿ ಭಾಷಣ; ರಾಹುಲ್‌ ಗಾಂಧಿ ಆರೋಪಗಳಿಗೆ ಪ್ರಧಾನಿ ಉತ್ತರವೇನು? ಇಲ್ಲಿದೆ Live

Parliament Sessions: 18ನೇ ಲೋಕಸಭೆಯ ಮೊದಲ ಅಧಿವೇಶನ ನಡೆಯುತ್ತಿದೆ. ಈ ಬಾರಿ ಪ್ರತಿಪಕ್ಷ ಬಹಳಷ್ಟು ಬಹಳಷ್ಟು ಪ್ರಬಲವಾಗಿರುವುದರಿಂದ ಕಾವೇರಿದ ಚರ್ಚೆ ನಡೆಯುತ್ತಿದೆ. ಇಂದು (ಜುಲೈ 2) ನರೇಂದ್ರ ಮೋದಿ ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ಆರೋಪಗಳಿಗೆ ಉತ್ತರ ನೀಡಲಿದ್ದಾರೆ. ಅಧಿವೇಶನದ ಕ್ಷಣ ಕ್ಷಣದ ಮಾಹಿತಿಗಾಗಿ Live ನೋಡಿ.

VISTARANEWS.COM


on

Parliament Sessions
Koo

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ನಡೆಯುತ್ತಿದೆ (Parliament Sessions). ಈ ಬಾರಿ ಪ್ರತಿಪಕ್ಷ ಬಹಳಷ್ಟು ಬಹಳಷ್ಟು ಪ್ರಬಲವಾಗಿರುವುದರಿಂದ ಕಾವೇರಿದ ಚರ್ಚೆ ನಡೆಯುತ್ತಿದೆ. ಸೋಮವಾರ ಪ್ರತಿಪಕ್ಷಗಳ ನಾಯಕ ರಾಹುಲ್‌ ಗಾಂಧಿ (Rahul Gandhi) ಸರ್ಕಾರದ ಬೆವರಿಳಿಸಿದ್ದಾರೆ. ನೀಟ್‌ (NEET) ವಿವಾದ ಚರ್ಚೆ ನಡೆಸಬೇಕೆಂಬ ಬೇಡಿಕೆ ಮುಂದಿಟ್ಟು ಅವರು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಇಂದು (ಜುಲೈ 2) ನರೇಂದ್ರ ಮೋದಿ (Narendra Modi) ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ಆರೋಪಗಳಿಗೆ ಉತ್ತರ ನೀಡಲಿದ್ದಾರೆ.

ಪ್ರತಿಪಕ್ಷಗಳ ನಾಯಕನಾದ ಬಳಿಕ ರಾಹುಲ್‌ ಗಾಂಧಿ ಸೋಮವಾರ ಮೊದಲ ಬಾರಿ ಲೋಕಸಭೆಯಲ್ಲಿ ಮಾತನಾಡಿದ್ದು, ಇಂದು ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಮೋದಿ ಉತ್ತರವನ್ನು ನೀಡಲಿದ್ದಾರೆ.

ಸಂಸತ್ತಿನಲ್ಲಿ ಭಾಷಣ ಮಾಡುವ ಮೊದಲು, ಮೋದಿ ಬೆಳಿಗ್ಗೆ 9:30ಕ್ಕೆ ಎನ್‌ಡಿಎ ನಾಯಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೂರನೇ ಅವಧಿಗೆ ಅಧಿಕಾರಕ್ಕೆ ಬಂದ ಬಳಿಕ ಆಡಳಿತಾರೂಢ ಬಣದ ಸಂಸದರನ್ನುದ್ದೇಶಿಸಿ ಮೋದಿ ನಡೆಸುವ ಮೊದಲ ಭಾಷಣ ಇದಾಗಿರಲಿದೆ. 2014ರ ನಂತರ ಮೊದಲ ಬಾರಿಗೆ ಬಿಜೆಪಿ ಬಹುಮತ ಕಳೆದುಕೊಂಡಿರುವುದರಿಂದ ಮತ್ತು ಆಡಳಿತ ನಡೆಸಲು ಮಿತ್ರಪಕ್ಷಗಳನ್ನು ಅವಲಂಬಿಸಬೇಕಿರುವಿದರಿಂದ ಈ ಬೆಳವಣಿಗೆ ಮಹತ್ವವನ್ನು ಪಡೆದುಕೊಂಡಿದೆ. 543 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದರೆ, ಮಿತ್ರಪಕ್ಷಗಳು 53 ಸ್ಥಾನಗಳಲ್ಲಿ ಜಯಗಳಿಸಿವೆ.

ಆರಂಭದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯನ್ನು ಶುಕ್ರವಾರ ನಿಗದಿಪಡಿಸಲಾಗಿತ್ತು. ಆದರೆ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ಪ್ರತಿಪಕ್ಷಗಳ ಸಂಸದರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.

ರಾಹುಲ್‌ ಗಾಂಧಿ ವಾಗ್ದಾಳಿ

ಸೋಮವಾರ ರಾಹುಲ್‌ ಗಾಂಧಿ ವಿವಿಧ ವಿಚಾರಗಳನ್ನು ಕೈಗೆತ್ತಿಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಕ್ಸಮರಕ್ಕೆ ಸಜ್ಜಾಗಿಯೇ ಬಂದಿದ್ದ ರಾಹುಲ್‌ ಗಾಂಧಿ, ಹಲವು ವಿಚಾರಗಳನ್ನು ಪ್ರಸ್ತಾಪಿಸಿ ನೇರವಾಗಿ ತಿವಿದರು. ಇದರಿಂದ ಸದನ ರಣರಂಗವಾಗಿತ್ತು. ʼʼಅಗ್ನಿಪಥ್ ಯೋಜನೆಯು ಪ್ರಧಾನಿ ಮೋದಿಯ ಕೂಸು. ಆದರೆ ಸಶಸ್ತ್ರ ಪಡೆಗಳದ್ದಲ್ಲ. ನಮ್ಮ ಸರ್ಕಾರ ಬಂದಾಗ ಅಗ್ನಿಪಥ್ ಯೋಜನೆಯನ್ನು ರದ್ದುಗೊಳಿಸುತ್ತೇವೆ. ಏಕೆಂದರೆ ಇದು ಸಶಸ್ತ್ರ ಪಡೆಗಳು ಮತ್ತು ದೇಶಭಕ್ತಿಗೆ ವಿರುದ್ಧವಾಗಿದೆ. ಬಿಜೆಪಿಯ ನೀತಿಗಳು, ರಾಜಕಾರಣವು ಮಣಿಪುರವನ್ನು ಭಸ್ಮ ಮಾಡಿದೆ, ನಾಗರಿಕ ಯುದ್ಧಕ್ಕೆ ನೂಕಿದೆ. ಆದರೂ ಪ್ರಧಾನಿ ಮೋದಿ ರಾಜ್ಯಕ್ಕೆ ಈವರೆಗೂ ಭೇಟಿ ನೀಡಿಲ್ಲ. ನೀಟ್‌ ಅಕ್ರಮದಿಂದ ಕೋಟ್ಯಂತರ ವಿದ್ಯಾರ್ಥಿಗಳಿಗೆ ತೊಂದರೆ ಎದುರಾಗಿದೆʼʼ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದರು.

ಬಿಜೆಪಿಯು ಸಂವಿಧಾನ ಮತ್ತು ಭಾರತದ ಮೂಲಭೂತ ಕಲ್ಪನೆಯ ಮೇಲೆ ವ್ಯವಸ್ಥಿತ ದಾಳಿಗಳನ್ನು ನಡೆಸುತ್ತಿದೆ ಎಂದು ದೂರಿದ್ದ ಅವರು, ʼʼಆಡಳಿತ ಪಕ್ಷವು ಪ್ರಸ್ತಾಪಿಸಿದ ವಿಚಾರಗಳನ್ನು ಲಕ್ಷಾಂತರ ಜನರು ವಿರೋಧಿಸಿದ್ದಾರೆ. ಪ್ರಧಾನಿ ಮೋದಿಯವರ ಆದೇಶದ ಮೇರೆಗೆ ನನ್ನ ಮೇಲೆ ದಾಳಿ ನಡೆದಿದೆ. 20ಕ್ಕೂ ಹೆಚ್ಚು ಪ್ರಕರಣಗಳು ನನ್ನ ವಿರುದ್ಧ ದಾಖಲಾಗಿವೆ. ನನ್ನ ಮನೆಯನ್ನು ಕಿತ್ತುಕೊಳ್ಳಲಾಯಿತು, ಇ.ಡಿ 55 ಗಂಟೆಗಳ ವಿಚಾರಣೆ ನಡೆಸಿತುʼʼ ಎಂದು ಹೇಳಿದ್ದರು.

ಪ್ರತಿಪಕ್ಷಗಳ, ರಾಹುಲ್‌ ಗಾಂಧಿ ಅವರ ಈ ಎಲ್ಲ ಆರೋಪಗಳಿಗೆ ನರೇಂದ್ರ ಮೋದಿ ಅವರು ಇಂದು ಯಾವ ರೀತಿ ಉತ್ತರಿಸುತ್ತಾರೆ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: Parliament Sessions: ಮೋದಿ ಆತ್ಮದ ಜೊತೆ ಪರಮಾತ್ಮನ ಸಂವಹನ; ರಾಹುಲ್‌ ಗಾಂಧಿ ವ್ಯಂಗ್ಯ

Continue Reading

ಪ್ರಮುಖ ಸುದ್ದಿ

Maharashtra Politics : ವಿಧಾನ ಪರಿಷತ್​ನಲ್ಲಿ ಬಿಜೆಪಿಯನ್ನು ಸೋಲಿಸಿದ ಉದ್ಧವ್​ ಠಾಕ್ರೆಯ ಶಿವಸೇನೆ

Maharashtra Politics: ಪರಬ್ 44,784 ಮತಗಳನ್ನು ಪಡೆದರೆ, ಶೆಲಾರ್ 18,772 ಮತಗಳನ್ನು ಪಡೆದರು. ಜೂನ್ 26 ರಂದು ನಡೆದ ಮತದಾನದಲ್ಲಿ ಒಟ್ಟು 67,644 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. ಚಲಾವಣೆಯಾದ ಒಟ್ಟು ಮತಗಳಲ್ಲಿ 64,222 ಮತಗಳು ಕ್ರಮಬದ್ಧವಾಗಿದ್ದು, ಗೆಲುವಿನ ಕೋಟಾ 32,112 ಮತಗಳಾಗಿದ್ದವು.

VISTARANEWS.COM


on

Maharashtra Politics
Koo

ಮುಂಬೈ: ಮಹಾರಾಷ್ಟ್ರ ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ (Maharashtra Politics) ಶಿವಸೇನೆ (ಉದ್ಧವ್​ ಠಾಕ್ರೆ ಬಣ) ಮುಖಂಡ ಅನಿಲ್ ಪರಬ್ ಅವರು ಬಿಜೆಪಿಯ ಕಿರಣ್ ಶೆಲಾರ್ ಅವರನ್ನು ಸೋಲಿಸಿದ್ದಾರೆ. ಪರಬ್ 44,784 ಮತಗಳನ್ನು ಪಡೆದರೆ, ಶೆಲಾರ್ 18,772 ಮತಗಳನ್ನು ಪಡೆದರು. ಜೂನ್ 26 ರಂದು ನಡೆದ ಮತದಾನದಲ್ಲಿ ಒಟ್ಟು 67,644 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. ಚಲಾವಣೆಯಾದ ಒಟ್ಟು ಮತಗಳಲ್ಲಿ 64,222 ಮತಗಳು ಕ್ರಮಬದ್ಧವಾಗಿದ್ದು, ಗೆಲುವಿನ ಕೋಟಾ 32,112 ಮತಗಳಾಗಿದ್ದವು.

ಮೊದಲ ಪ್ರಾಶಸ್ತ್ಯದ ಮತದಾನದಲ್ಲಿ ಪರಬ್ 44,784 ಮತಗಳನ್ನು ಪಡೆದು ಚುನಾಯಿತರಾಗಿದ್ದಾರೆ. ಜುಲೈ 12 ರಂದು ಮಹಾರಾಷ್ಟ್ರ ವಿಧಾನ ಪರಿಷತ್ತಿಗೆ ನಡೆಯಲಿರುವ

ದ್ವೈವಾರ್ಷಿಕ ಚುನಾವಣೆಗೆ ಎಂಎಲ್​​ಸಿ ಪ್ರಜ್ಞಾ ಸತವ್ ಅವರನ್ನು ಕಾಂಗ್ರೆಸ್ ಇಂದು ಶಾಸಕರ ಕೋಟಾದಿಂದ ತನ್ನ ಅಭ್ಯರ್ಥಿಯಾಗಿ ಮರು ನಾಮಕರಣ ಮಾಡಿದೆ. ರಾಜ್ಯ ವಿಧಾನಸಭೆಯ ಮೇಲ್ಮನೆಯ 11 ಸ್ಥಾನಗಳಿಗೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ (ಜುಲೈ 2) ಕೊನೆಯ ದಿನವಾಗಿದೆ. ಹಾಲಿ ಸದಸ್ಯರು ಜುಲೈ 27 ರಂದು ನಿವೃತ್ತರಾಗುವುದರಿಂದ ಖಾಲಿಯಾಗುವ 11 ಸ್ಥಾನಗಳನ್ನು ತುಂಬಲು ಈ ಚುನಾವಣೆ ನಡೆಯುತ್ತಿದೆ.

ಇದನ್ನೂ ಓದಿ: ಏರ್‌ಪೋರ್ಟ್‌ನಲ್ಲೇ ಟಿ20 ವಿಶ್ವಕಪ್‌ ಫೈನಲ್‌ ವೀಕ್ಷಿಸಿದ್ದ ಸಿಎಂ ಸಿದ್ದರಾಮಯ್ಯ; 70 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡ ವಿಡಿಯೊ!

ವಿಧಾನಸಭೆಯ ಸದಸ್ಯರು (ಶಾಸಕರು) ಚುನಾವಣೆಯಲ್ಲಿ ಮತ ಚಲಾಯಿಸುತ್ತಾರೆ. ನಿವೃತ್ತರಾಗುತ್ತಿರುವ 11 ಎಂಎಲ್ಸಿಗಳಲ್ಲಿ ಇಬ್ಬರು ಕಾಂಗ್ರೆಸ್​ನವರು. ಆದಾಗ್ಯೂ, ವಿಧಾನಸಭೆಯಲ್ಲಿ ಕಾಂಗ್ರೆಸ್​​ನ ಪ್ರಸ್ತುತ ಬಲವನ್ನು ಗಮನಿಸಿದರೆ, ವಿರೋಧ ಪಕ್ಷವು ಮೇಲ್ಮನೆಗೆ ಒಬ್ಬ ಅಭ್ಯರ್ಥಿಯನ್ನು ಮಾತ್ರ ಆಯ್ಕೆ ಮಾಡಬಹುದು.

ಪ್ರದ್ನ್ಯಾ ಸತವ್ ಅವರು ದಿವಂಗತ ಕಾಂಗ್ರೆಸ್ ಸಂಸದ ರಾಜೀವ್ ಸತವ್ ಅವರ ಪತ್ನಿ. ಹಾಲಿ ಕಾಂಗ್ರೆಸ್ ಎಂಎಲ್ಸಿ ಶರದ್ ರಾನ್ಪೈಸ್ ಅವರ ನಿಧನದ ನಂತರ ಉಪಚುನಾವಣೆ ಅನಿವಾರ್ಯವಾದಾಗ 2021 ರಲ್ಲಿ ಅವರು ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾದರು. ಮಧ್ಯ ಮಹಾರಾಷ್ಟ್ರದ ಬೀಡ್ ನಿಂದ ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಸೋತ ಮಾಜಿ ರಾಜ್ಯ ಸಚಿವೆ ಪಂಕಜಾ ಮುಂಡೆ ಸೇರಿದಂತೆ ಆಡಳಿತಾರೂಢ ಬಿಜೆಪಿ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಕಾಂಗ್ರೆಸ್​ನ ಮಿತ್ರ ಪಕ್ಷವಾದ ಎನ್ಸಿಪಿ (ಶರದ್​​ ಪವಾರ್) ಪೆಸೆಂಟ್ಸ್ ಅಂಡ್ ವರ್ಕರ್ಸ್ ಪಾರ್ಟಿ (ಪಿಡಬ್ಲ್ಯೂಪಿ) ಅಭ್ಯರ್ಥಿ ಜಯಂತ್ ಪಾಟೀಲ್ ಅವರಿಗೆ ಬೆಂಬಲ ಘೋಷಿಸಿದೆ. 288 ಸದಸ್ಯರ ವಿಧಾನಸಭೆಯಲ್ಲಿ 14 ಸ್ಥಾನಗಳು ಖಾಲಿ ಇದ್ದು, ಎಲೆಕ್ಟೋರಲ್ ಕಾಲೇಜ್ 274 ಮತ್ತು ವಿಜೇತ ಅಭ್ಯರ್ಥಿಯ ಕೋಟಾ 23 ಆಗಿದೆ. ಅಕ್ಟೋಬರ್ ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸ್ವಲ್ಪ ಮುಂಚಿತವಾಗಿ ದ್ವೈವಾರ್ಷಿಕ ಚುನಾವಣೆಗಳು ನಡೆಯುತ್ತಿವೆ.

Continue Reading

ವೈರಲ್ ನ್ಯೂಸ್

CM Siddaramaiah: ಏರ್‌ಪೋರ್ಟ್‌ನಲ್ಲೇ ಟಿ20 ವಿಶ್ವಕಪ್‌ ಫೈನಲ್‌ ವೀಕ್ಷಿಸಿದ್ದ ಸಿಎಂ ಸಿದ್ದರಾಮಯ್ಯ; 70 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡ ವಿಡಿಯೊ!

CM Siddaramaiah: ದೆಹಲಿಯ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯನವರು ಕ್ರಿಕೆಟ್‌ ನೋಡಿದ್ದ ವಿಡಿಯೊ ವೈರಲ್‌ ಆಗಿದ್ದು, ಮುಖ್ಯಮಂತ್ರಿಗಳ ಕ್ರಿಕೆಟ್‌ ಪ್ರೇಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

VISTARANEWS.COM


on

CM Siddaramaiah
Koo

ಬೆಂಗಳೂರು: ಟಿ20 ವಿಶ್ವಕಪ್​ 2024 ಚಾಂಪಿಯನ್‌ ಆಗಿ ಹೊರ ಹೊಮ್ಮಿದ ಟೀಮ್‌ ಇಂಡಿಯಾಗೆ (T20 World Cup 2024) ಅಭಿನಂದನೆಗಳ ಪ್ರವಾಹವೇ ಹರಿದು ಬರುತ್ತಿದೆ. ಈ ನಡುವೆ ಜೂನ್‌ 29ರಂದು ನಡೆದಿದ್ದ ದಕ್ಷಿಣ ಆಫ್ರಿಕಾ ಮತ್ತು ಭಾರತ ತಂಡದ ನಡುವಿನ ಫೈನಲ್‌ ಪಂದ್ಯವನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಏರ್‌ಪೋರ್ಟ್‌ನಲ್ಲೇ ವೀಕ್ಷಿಸಿದ್ದ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್‌ ಆಗುತ್ತಿದ್ದು, ಸಿಎಂ ಕ್ರಿಕೆಟ್‌ ಪ್ರೀತಿಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ವಿಡಿಯೊವನ್ನು 70 ಲಕ್ಷಕ್ಕೂ ಅಧಿಕ ಜನ ವೀಕ್ಷಿಸಿದ್ದು, 1.3 ಲಕ್ಷ ಮಂದಿ ಲೈಕ್ ಮಾಡಿದ್ದು, ಸಾವಿರಾರು ಮಂದಿ ಕಮೆಂಟ್‌ ಮಾಡಿದ್ದಾರೆ.

ಶನಿವಾರ ಟಿ20 ವಿಶ್ವಕಪ್‌ನ ಫೈನಲ್‌ ನಡೆದು, ಭಾರತ ತಂಡ ರೋಚಕ ಜಯದೊಂದಿಗೆ ವಿಶ್ವಕಪ್‌ಗೆ ಮುತ್ತಿಕ್ಕಿದೆ. ಪ್ರತಿ ಎಸೆತವೂ ಪಂದ್ಯದ ಗತಿ ಬದಲಿಸುವಂತಿದ್ದುದ್ದರಿಂದ ಇಡೀ ದೇಶವೇ ಫೈನಲ್‌ ಪಂದ್ಯವನ್ನು ನಿಬ್ಬೆರಗಾಗಿ ವೀಕ್ಷಿಸಿದೆ. ಮೂರು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, 9.30ರ ವಿಮಾನ ಹತ್ತಿ ಬೆಂಗಳೂರಿಗೆ ವಾಪಾಸಾಗಬೇಕಿತ್ತು. ಇದೆಲ್ಲದರ ನಡುವೆ ಅವರಿಗೆ ಸಿಕ್ಕಿದ್ದು ಕೆಲವೇ ಕೆಲವು ನಿಮಿಷಗಳು ಮಾತ್ರ, ಅದೇ ಅಲ್ಪ ಬಿಡುವಿನ ಸಮಯದಲ್ಲಿ ವಿಮಾನದ ಬಾಗಿಲಲ್ಲಿ ನಿಂತು ವಿಶ್ವಕಪ್‌ ಟಿ20 ಫೈನಲ್‌ ಪಂದ್ಯ ವೀಕ್ಷಿಸಿ ಅದನ್ನು ತಮ್ಮ ಸಾಮಾಜಿಕ ಜಾಲತಾಣವಾದ ಫೇಸ್‌ ಬುಕ್‌ ನಲ್ಲಿ ಹಂಚಿಕೊಂಡಿದ್ದರು. ಅದರ ಜೊತೆಗೆ ಭಾರತವು ಸಂಘಟಿತ ಪ್ರದರ್ಶನದ ಮೂಲಕ ವಿಶ್ವಕಪ್‌ ಗೆದ್ದು ಬರಲಿ ಎಂದು ಮನದುಂಬಿ ಹಾರೈಸಿದ್ದರು.

ಈ ರೀತಿ ಸಿದ್ದರಾಮಯ್ಯನವರು ಶೇರ್‌ ಮಾಡಿದ್ದ ವಿಡಿಯೊ ಇದೀಗ ಜಾಲತಾಣದಲ್ಲಿ ಭಾರೀ ಹವಾ ಸೃಷ್ಟಿಸಿದೆ. ಈವರೆಗೆ ವಿಡಿಯೋವನ್ನು 70 ಲಕ್ಷಕ್ಕೂ ಅಧಿಕ ಜನ ವೀಕ್ಷಿಸಿದ್ದಾರೆ, 1,30,000 ಮಂದಿ ಸಿದ್ದರಾಮಯ್ಯನವರ ಕ್ರಿಕೆಟ್‌ ಪ್ರೇಮಕ್ಕೆ ಲೈಕ್‌ ಒತ್ತಿ ಮೆಚ್ಚಿದ್ದಾರೆ. ಸಾವಿರಾರು ಮಂದಿ ಕಮೆಂಟ್‌ ಗಳ ಸುರಿಮಳೆಗೈದು ನಿಮ್ಮ ಕ್ರೀಡಾ ಪ್ರೀತಿಗೆ ನಾವು ಅಭಿಮಾನಿಯಾಗಿದ್ದೇವೆಂದು ಕೊಂಡಾಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಕರ್ನಾಟಕದ ರಾಜಕಾರಣಿಯೊಬ್ಬರ ಸಾಮಾಜಿಕ ಜಾಲತಾಣದಲ್ಲಿ ಹಾಕಲ್ಪಟ್ಟ ಯಾವೊಂದು ವೀಡಿಯೋ ಕೂಡ ಇಷ್ಟು ವೈರಲ್‌ ಆಗಿಲ್ಲ ಎಂಬುದು ಗಮನಾರ್ಹ.

ಇದನ್ನೂ ಓದಿ | ZIM v IND 2024: ಭಾರತ ವಿರುದ್ಧ ಟಿ20 ಸರಣಿಗೆ ಜಿಂಬ್ವಾಬ್ವೆ ತಂಡ ಪ್ರಕಟ, ಸಿಕಂದರ್​ ನಾಯಕ

ಆಗಾಗ್ಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಐಪಿಎಲ್‌, ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯಗಳಿಗೆ ಹೋಗಿ ಪಂದ್ಯ ವೀಕ್ಷಿಸಿ ಆಟಗಾರರಿಗೆ ಚಪ್ಪಾಳೆಯ ಮೂಲಕ ಹುರಿದುಂಬಿಸುತ್ತಿದ್ದ ಸಿದ್ದರಾಮಯ್ಯನವರು ಬಿಡುವಿರದ ದಿನಚರಿಯ ಕಾರಣಕ್ಕೆ ವಿಮಾನದ ಬಾಗಿಲಲ್ಲಿ ನಿಂತು ಕ್ರಿಕೆಟ್‌ ವೀಕ್ಷಿಸಿದ್ದಕ್ಕೆ ಕರುನಾಡು ಕೊಂಡಾಡುತ್ತಿದೆ.
ಒಂದೆಡೆ ಭಾರತ ವಿಶ್ವಕಪ್‌ ಗೆದ್ದಿದೆ, ಇನ್ನೊಂದೆಡೆ ಸಿದ್ದರಾಮಯ್ಯನವರು ನಾಡಿನ ಕ್ರಿಕೆಟ್‌ ಪ್ರಿಯರ ಮನ ಗೆದ್ದಿದ್ದಾರೆ.

Continue Reading
Advertisement
Rohit Sharma
ಕ್ರೀಡೆ4 mins ago

Rohit Sharma: ಪಿಚ್​ ಮಣ್ಣು ತಿಂದಿದ್ದೇಕೆ?; ಪ್ರತಿಕ್ರಿಯಿಸಿದ ರೋಹಿತ್​

Allahabad High Court
ದೇಶ10 mins ago

Allahabad High Court: ಮತಾಂತರ ತಡೆಯದಿದ್ದರೆ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಹೈಕೋರ್ಟ್ ಕಳವಳ

Physical Abuse
ಬೆಂಗಳೂರು14 mins ago

Physical Abuse : ಶಿಕ್ಷಕನಿಂದ ಇದೆಂಥ ಅನಾಚಾರ! ಬಾಲಕಿಗೆ ಲೈಂಗಿಕ ಕಿರುಕುಳ

Actor Darshan Devil gang gets life imprisonment What do legal experts say
ಕ್ರೈಂ27 mins ago

Actor Darshan: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಹೆಸರು ಆಚೆ ಬಂದದ್ದು ಹೀಗೆ!

Road Rage Case
ಕರ್ನಾಟಕ29 mins ago

Road Rage Case: ಬೆಂಗಳೂರಲ್ಲಿ ಕಿಡಿಗೇಡಿಗಳಿಂದ ಕಾರು ಮಾಲೀಕನ ಕಾಪಾಡಿದ ಡ್ಯಾಶ್‌ ಕ್ಯಾಮೆರಾ; ವಿಡಿಯೊ ಇದೆ

Namma metro Yellow line
ಬೆಂಗಳೂರು40 mins ago

Namma Metro : ಗುಡ್‌ ನ್ಯೂಸ್‌- ಹಳದಿ ಮೆಟ್ರೋ ಮಾರ್ಗದಲ್ಲಿ ಟ್ರಯಲ್ ರನ್‌ ಮುಕ್ತಾಯ; ಸಿಗ್ನಲಿಂಗ್ ಟೆಸ್ಟ್ ಆರಂಭ

Shoaib Akhtar
ಕ್ರೀಡೆ56 mins ago

Shoaib Akhtar: ಭಗವದ್ಗೀತೆಯ ಸಂದೇಶ ಹಂಚಿಕೊಂಡ ಪಾಕ್​ ಆಟಗಾರ ಶೋಯೆಬ್ ಅಖ್ತರ್

Gold Rate Today
ಚಿನ್ನದ ದರ1 hour ago

Gold Rate Today: ಮತ್ತೆ ಮೇಲ್ಮುಖವಾಗಿ ಸಾಗಿದ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

Road Accident
ಕ್ರೈಂ1 hour ago

Road Accident : ಹೆದ್ದಾರಿಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್‌ಗೆ ‌ವೃದ್ಧ ಸಾವು; ಯುವಕನ ತಲೆ ಮೇಲೆ ಹರಿದ ಟ್ಯಾಂಕರ್‌

Virat Kohli
ಕ್ರೀಡೆ2 hours ago

Virat Kohli: ಬುರ್ಜ್‌ ಖಲೀಫಾದಲ್ಲಿ ಕಣ್ಮನ ಸೆಳೆದ ವಿರಾಟ್​ ಕೊಹ್ಲಿಯ ಫೋಟೊ; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ20 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌