Murder News : ಬಾಯ್​ಫ್ರೆಂಡ್​ ಜತೆ ಸೇರಿ ಅಪ್ಪ, ತಮ್ಮನನ್ನು ಕೊಂದು ಕತ್ತರಿಸಿ ಫ್ರಿಜ್​ನಲ್ಲಿಟ್ಟಿದ್ದ 16ರ ಬಾಲಕಿ - Vistara News

ಪ್ರಮುಖ ಸುದ್ದಿ

Murder News : ಬಾಯ್​ಫ್ರೆಂಡ್​ ಜತೆ ಸೇರಿ ಅಪ್ಪ, ತಮ್ಮನನ್ನು ಕೊಂದು ಕತ್ತರಿಸಿ ಫ್ರಿಜ್​ನಲ್ಲಿಟ್ಟಿದ್ದ 16ರ ಬಾಲಕಿ

Murder News: ಬಾಲಕಿಯನ್ನು ಪಟ್ಟಣದಲ್ಲಿ ಪತ್ತೆ ಹಚ್ಚಿದ ಬಳಿಕ ಮಂಗಳವಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು ಎಂದು ಹರಿದ್ವಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಂದ್ರ ದೋಭಾಲ್ ತಿಳಿಸಿದ್ದಾರೆ. ತಾನು ತನ್ನ ಗೆಳೆಯನೊಂದಿಗೆ ಹರಿದ್ವಾರಕ್ಕೆ ಬಂದಿದ್ದೇನೆ ಎಂದು ವಿಚಾರಣೆಯ ಸಮಯದಲ್ಲಿ ಬಹಿರಂಗಪಡಿಸಿದ್ದಾಳೆ

VISTARANEWS.COM


on

Murder News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಡೆಹ್ರಾಡೂನ್: ತನ್ನ ಪ್ರೀತಿಗೆ ವಿರೋಧ ಮಾಡಿದ್ದ ತಂದೆ ಹಾಗೂ ತಮ್ಮನನ್ನು ಕೊಲೆ ಮಾಡಿ ತುಂಡಾಗಿ ಕತ್ತರಿಸಿ ಫ್ರಿಜ್​ನಲ್ಲಿಟ್ಟಿದ್ದ 16ರ ಬಾಲಕಿಯೊಬ್ಬಳನ್ನು (Murder News) ಹರಿದ್ವಾರ ಪೊಲೀಸರು ಬಂಧಿಸಿದ್ದಾರೆ. ಆಕೆ 19 ವರ್ಷದ ಬಾಯ್​ಫ್ರೆಂಡ್​ ಜತೆ ಸೇರಿಕೊಂಡು ಇಬ್ಬರನ್ನು ಕತ್ತರಿಸಿ ಫ್ರಿಜ್​ನಲ್ಲಿಟ್ಟು ಪರಾರಿಯಾಗಿದ್ದಳು. ಒಂದು ತಿಂಗಳ ಬಳಿಕ ಘಟನೆ ಬೆಳಕಿಗೆ ಬಂದಿದ್ದು ಬಳಿಕ ಆಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮಾರ್ಚ್ 15 ರಂದು ಮಧ್ಯಪ್ರದೇಶದ ಜಬಲ್ಪುರದಲ್ಲಿ ಈ ಕೊಲೆ ನಡೆದಿದ್ದು, ಅಂದಿನಿಂದ ಬಾಲಕಿ ಪರಾರಿಯಾಗಿದ್ದಳು. ಆಕೆಯ 19 ವರ್ಷದ ಗೆಳೆಯ ಕೂಡ ಈ ಪ್ರಕರಣದಲ್ಲಿ ಆರೋಪಿಯಾಗಿದ್ದು, ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯನ್ನು ಪಟ್ಟಣದಲ್ಲಿ ಪತ್ತೆ ಹಚ್ಚಿದ ಬಳಿಕ ಮಂಗಳವಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು ಎಂದು ಹರಿದ್ವಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಂದ್ರ ದೋಭಾಲ್ ತಿಳಿಸಿದ್ದಾರೆ. ತಾನು ತನ್ನ ಗೆಳೆಯನೊಂದಿಗೆ ಹರಿದ್ವಾರಕ್ಕೆ ಬಂದಿದ್ದೇನೆ ಎಂದು ವಿಚಾರಣೆಯ ಸಮಯದಲ್ಲಿ ಬಹಿರಂಗಪಡಿಸಿದ್ದಾಳೆ ಎಂದು ಅಧಿಕಾರಿ ತಿಳಿಸಿದ್ದಾರೆ.

19 ವರ್ಷದ ಯುವಕನೊಂದಿಗಿನ ಸಂಬಂಧವನ್ನು ಅಪ್ಪ ವಿರೋಧಿಸಿದ ಕಾರಣ ಅವರನ್ನು ಮೊದಲು ಕೊಂದಿದ್ದಳು. ಅದನ್ನು ನೋಡಿದ ಸಹೋದರನನ್ನೂ ಅಪರಾಧಕ್ಕೆ ಸಾಕ್ಷಿಯಾಗುತ್ತಾನೆ ಹೆದರಿ ಕೊಂದಿದ್ದಾರೆ ಎಂದು ದೋಭಾಲ್ ಹೇಳಿದ್ದಾರೆ. ಅವರು ಶವಗಳನ್ನು ತುಂಡುಗಳಾಗಿ ಕತ್ತರಿಸಿ ಫ್ರಿಜ್​ನಲ್ಲಿಟ್ಟು ತುಂಬಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಪ್ರಕಾರ ಆಕೆಯ ಗೆಳೆಯ ಕೊಗೆ ಸಂಚು ರೂಪಿಸಿದ್ದ. ಬಾಲಕಿಯನ್ನು ಮಧ್ಯಪ್ರದೇಶ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ಆಕೆಯ ಪ್ರಿಯಕರನಿಗಾಗಿ ಶೋಧ ನಡೆಯುತ್ತಿದೆ ಎಂದು ದೋಭಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಪ್ರಜ್ಞೆ ಕಳೆದುಕೊಂಡು ಬಿದ್ದ ಕೋತಿಗೆ ಮರುಜೀವ ನೀಡಿದ ಪೊಲೀಸ್ ಅಧಿಕಾರಿ; ಮನ ಮಿಡಿಯೋ ವಿಡಿಯೊ ಇಲ್ಲಿದೆ

ಸಿಸಿಬಿ ತೆಕ್ಕೆಗೆ ವಕೀಲೆ ಚೈತ್ರಾ ಡೆತ್ ಕೇಸ್; 15 ದಿನಗಳ ಸಿಸಿಟಿವಿ ಪರಿಶೀಲನೆ

ಬೆಂಗಳೂರು: ವಕೀಲೆ ಚೈತ್ರಾ ಅವರ (Advocate Chaitra Gowda Case) ಸಾವು ಅವರ ಆಪ್ತರಿಗೆ ಇನ್ನೂ ಕೂಡ ನಿಗೂಢವಾಗಿಯೇ ಇದೆ. ಪೊಲೀಸರ ವರದಿಯಲ್ಲಿ ಇದೊಂದು ಆತ್ಮಹತ್ಯೆ ಎಂದರೂ ಕೂಡ ಅದನ್ನು ಚೈತ್ರಾ ಆಪ್ತರು ಒಪ್ಪುವ ಸ್ಥಿತಿಯಲ್ಲಿಲ್ಲ. ಹೀಗಾಗಿ ಈ ಪ್ರಕರಣವನ್ನು ಸಿಸಿಬಿ ತೆಕ್ಕೆಗೆ (Suspicious Death) ವಹಿಸಲಾಗಿದೆ.

ಇದೇ ತಿಂಗಳ ಮೇ 11ರಂದು ಚೈತ್ರಾ ಗೌಡ ಅವರ ಮೃತದೇಹ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಇದೊಂದದು ಆತ್ಮಹತ್ಯೆ ಎಂದು ಹೇಳಲಾಗಿತ್ತು. ಪೋಸ್ಟ್‌ ಮಾರ್ಟಮ್‌ ರಿಪೋರ್ಟ್‌ನಲ್ಲಿ ಚೈತ್ರಾ ಸಾವು ಆತ್ಮಹತ್ಯೆಯಿಂದಲೇ (Self Harming) ಆಗಿದೆ ಎಂಬುದು ದೃಢಪಟ್ಟಿತ್ತು. ಆದರೆ ಅವರ ಆಪ್ತ ವಲಯ ಚೈತ್ರಾಗೌಡ ಅವರ ಸಾವು ಸಹಜವಲ್ಲ ಎಂದು ಇಂದಿಗೂ ಕೂಡ ವಾದಿಸುತ್ತಲೆ ಇದೆ. ಹೀಗಾಗಿ ವಕೀಲರ ಸಂಘದವರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಈ ಸಾವಿನ ಬಗ್ಗೆ ತನಿಖೆ ನಡೆಸಿ ಎಂದಿದ್ದರು. ಇದರ ಫಲವಾಗಿ ಪ್ರಕರಣದ ಹೆಚ್ಚಿನ ತನಿಖೆಗೆ ಪೊಲೀಸ್ ಆಯುಕ್ತರು ಸಿಸಿಬಿಗೆ ವರ್ಗಾವಣೆ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ತನಿಖೆ ಕೈಗೆತ್ತಿಕೊಂಡಿರುವ ಸಿಸಿಬಿ ಪೊಲೀಸರು ಮೊದಲು ಆಕೆಯ ಸಾವಿನ 15 ದಿನಗಳ ಹಿಂದಿನ ಸಿಸಿಟಿವಿಗಳನ್ನು ಕಲೆ ಹಾಕುವ ಕೆಲಸ ಶುರು ಮಾಡಿದೆ. ಜತೆಗೆ ಚೈತ್ರಾರ ಮೊಬೈಲ್‌ಗೆ ಬಂದ ಕರೆಗಳ ಸಿಡಿಆರ್‌ಗಳನ್ನು ಸಂಗ್ರಹಿಸಿದೆ. ಚೈತ್ರಾರಿಗೆ ಯಾರಾದರೂ ತೊಂದರೆ ಕೊಟ್ಟಿರುವುದು ಅಥವಾ ಬೆದರಿಕೆ ಹಾಕಿದ್ದರಾ ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಹೀಗಾಗಿ ಚೈತ್ರ ಗೌಡ ಅವರ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Puri Jagannath Rath Yatra: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಒಬ್ಬನ ಸಾವು, 400 ಭಕ್ತರಿಗೆ ಗಾಯ!

Puri Jagannath Rath Yatra: ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಉಂಟಾಗಿದೆ. ಒಬ್ಬ ಭಕ್ತ ಉಸಿರಾಡಲು ಆಗದೆ ಮೃತಪಟ್ಟಿದ್ದಾನೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ರಥ ಎಳೆಯುವಾಗ ಒಬ್ಬರಿಗೊಬ್ಬರು ನೂಕುನುಗ್ಗಲು ಮಾಡಿದ್ದಾರೆ. ಇದರಿಂದಾಗಿ ಕಾಲ್ತುಳಿತ ಉಂಟಾಗಿದೆ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Puri Jagannath Rath Yatra
Koo

ಪುರಿ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿ 121 ಮಂದಿ ಮೃತಪಟ್ಟಿರುವ ಬೆನ್ನಲ್ಲೇ ಒಡಿಶಾದಲ್ಲಿರುವ (Odisha) ಐತಿಹಾಸಿಕ ಪುರಿ ಜಗನ್ನಾಥ ರಥಯಾತ್ರೆಯ (Puri Jagannath Rath Yatra) ವೇಳೆಯೂ ಕಾಲ್ತುಳಿತ ಸಂಭವಿಸಿದ್ದು, ಒಬ್ಬ ವ್ಯಕ್ತಿ ಮೃತಪಟ್ಟರೆ, 400ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಭಾನುವಾರ ರಥ ಎಳೆಯುವಾಗ ನೂಕುನುಗ್ಗಲು ಉಂಟಾಗಿದ್ದು, ಉಸಿರಾಡಲು ಆಗದೆ ಒಬ್ಬ ಭಕ್ತ ಮೃತಪಟ್ಟಿದ್ದಾರೆ. ನೂಕುನುಗ್ಗಲು ಬಳಿಕ ಕಾಲ್ತುಳಿತ (Stampede) ಉಂಟಾಗಿದ್ದು, 400ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

“ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಉಂಟಾಗಿದೆ. ಒಬ್ಬ ಭಕ್ತ ಉಸಿರಾಡಲು ಆಗದೆ ಮೃತಪಟ್ಟಿದ್ದಾನೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ರಥ ಎಳೆಯುವಾಗ ಒಬ್ಬರಿಗೊಬ್ಬರು ನೂಕುನುಗ್ಗಲು ಮಾಡಿದ್ದಾರೆ. ಇದರಿಂದಾಗಿ ಕಾಲ್ತುಳಿತ ಉಂಟಾಗಿದೆ” ಎಂದು ಅಧಿಕಾರಿಗಳು ತಿಳಿಸಿದರು. “ಒಬ್ಬ ವ್ಯಕ್ತಿ ಮೃತಪಟ್ಟಿರುವುದು ಹೃದಯಾಘಾತದಿಂದ ಅಲ್ಲ. ನೂಕುನುಗ್ಗಲು ಉಂಟಾದ ಕಾರಣ ಉಸಿರಾಡಲು ಆಗದೆ, ಉಸಿರುಗಟ್ಟಿ ಆತ ಮೃತಪಟ್ಟಿದ್ದಾನೆ” ಎಂದು ಸೇಂಟ್‌ ಜಾನ್‌ ಆಂಬುಲೆನ್ಸ್‌ ಸೇವೆಗಳ ವಿಭಾಗದ ಅಸಿಸ್ಟಂಟ್‌ ಕಮಾಂಡಂಟ್‌ ಸುಶಾಂತ್‌ ಕುಮಾರ್‌ ಪಟ್ನಾಯಕ್‌ ತಿಳಿಸಿದ್ದಾರೆ.

ಕಾಲ್ತುಳಿತದ ಬಳಿಕ 300 ಜನರನ್ನು ಪುರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 50 ಮಂದಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಡಿಸ್‌ಚಾರ್ಜ್‌ ಮಾಡಲಾಗಿದೆ. ಯಾರಿಗೂ ಗಂಭೀರವಾಗಿ ಗಾಯಗಳಾಗಿಲ್ಲ. ಕಾಲ್ತುಳಿತದ ಬಳಿಕವೂ ರಥಯಾತ್ರೆಯು ಸುಗಮವಾಗಿ ಸಾಗಿದೆ ಎಂಬುದಾಗಿ ಒಡಿಶಾ ಆರೋಗ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

ರಥಯಾತ್ರೆ ವೀಕ್ಷಿಸಿದ ದ್ರೌಪದಿ ಮುರ್ಮು

ಪ್ರಸಿದ್ಧ ಜಗನ್ನಾಥ ದೇಗುಲದ ವಾರ್ಷಿಕ ರಥಯಾತ್ರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಿದ್ದು,, ಅವರು ಲಕ್ಷಾಂತರ ಭಕ್ತರೊಂದಿಗೆ ಈ ರಥಯಾತ್ರೆಯನ್ನು ವೀಕ್ಷಿಸಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರ ವಿಶೇಷ ವ್ಯವಸ್ಥೆ ಮಾಡಿದ್ದು, ಸಾಮಾನ್ಯವಾಗಿ ಒಂದೇ ದಿನದಲ್ಲಿ ನಡೆಯುವ ಯಾತ್ರೆಯನ್ನು ಸುಗಮವಾಗಿ ನಡೆಸಲು ಒಡಿಶಾ ಸರ್ಕಾರ ವಿಸ್ತೃತ ವ್ಯವಸ್ಥೆಗಳನ್ನು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಗನ್ನಾಥ ದೇವಾಲಯದ ಮೂರು ದೇವರುಗಳಾದ ಜಗನ್ನಾಥ, ಬಲರಾಮ್ ಮತ್ತು ಸುಭದ್ರಾ ಮೂರು ವಿಭಿನ್ನ ರಥಗಳಲ್ಲಿ ಸವಾರಿ ಮಾಡುತ್ತಾರೆ. ಈ ಕಾರಣಕ್ಕಾಗಿ ರಥಯಾತ್ರೆಯನ್ನು ರಥೋತ್ಸವ ಎಂದು ಕರೆಯುತ್ತಾರೆ. ಅವರ ವಿಭಿನ್ನ ರಥಗಳನ್ನು ನಂದಿಘೋಷ, ತಾಳಧ್ವಜ ಮತ್ತು ದೇವದಳನ ಎಂದು ಕರೆಯಲಾಗುತ್ತದೆ. ಭಗವಾನ್ ಜಗನ್ನಾಥನ ನಂದಿಘೋಷ ರಥವು ಹದಿನೆಂಟು ಚಕ್ರಗಳನ್ನು ಹೊಂದಿದೆ. ಭಗವಾನ್ ಬಲರಾಮನ ತಾಳಧ್ವಜ ರಥವು ಹದಿನಾರು ಚಕ್ರಗಳನ್ನು ಹೊಂದಿದೆ ಮತ್ತು ಸುಭದ್ರೆಯ ಪದ್ಮಧ್ವಜ ರಥವು ಹದಿನಾಲ್ಕು ಚಕ್ರಗಳನ್ನು ಹೊಂದಿದೆ.

ಇದನ್ನೂ ಓದಿ: Puri Jagannath Yatra: ಪ್ರತಿ ವರ್ಷ ಹೊಸ ರಥ, ಜಗನ್ನಾಥನಿಗೆ ಜ್ವರ! ಪುರಿ ರಥ ಯಾತ್ರೆ ವಿಶೇಷ ಹಲವು!

Continue Reading

ವೈರಲ್ ನ್ಯೂಸ್

Viral News: ಸಮುದ್ರದಲ್ಲಿ ಮೂತ್ರ ವಿಸರ್ಜನೆ ಮಾಡಿದರೆ 67 ಸಾವಿರ ರೂ. ದಂಡ; ಕಂಡು ಹಿಡಿಯೋದು ಹೇಗೆ?

Viral News: ಮಾರ್ಬೆಲ್ಲಾ ನಗರದಲ್ಲಿ ಜಾರಿಗೆ ತರಲು ಚಿಂತನೆ ನಡೆದಿರುವ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಂತೂ ಪರ-ವಿರೋಧ ಚರ್ಚೆಯಾಗುತ್ತಿದೆ. ಟ್ರೋಲ್‌ಗಳನ್ನು ಮಾಡಲಾಗುತ್ತಿದೆ. ಅದರಲ್ಲೂ, ಕೆಲ ಮಾಧ್ಯಮಗಳು ಬೀಚ್‌ಗಳಿಗೆ ತೆರಳಿ ಜನರ ಅಭಿಪ್ರಾಯಗಳು ಕೇಳಿವೆ. ಮೀಮ್‌ಗಳು, ಟ್ರೋಲ್‌ಗಳು ಕೂಡ ಹರಿದಾಡುತ್ತಿವೆ.

VISTARANEWS.COM


on

Viral News
Koo

ಮ್ಯಾಡ್ರಿಡ್: ಜಗತ್ತನಾದ್ಯಂತ ಹತ್ತಾರು ದೇಶಗಳಲ್ಲಿ ಹಲವು ರೀತಿಯ, ಕೆಲವೊಮ್ಮೆ ವಿಚಿತ್ರ ನಿಯಮ, ನಿರ್ಬಂಧಗಳನ್ನು ವಿಧಿಸಲಾಗುತ್ತದೆ. ಅದರಲ್ಲೂ, ಸಾರ್ವಜನಿಕ ಸ್ಥಳಗಳಲ್ಲಿ ಜನರ ವರ್ತನೆ ಕುರಿತು ಬಹುತೇಕ ದೇಶಗಳು ಹೆಚ್ಚಿನ ನಿಗಾ ವಹಿಸುತ್ತವೆ. ಕಠಿಣ ನಿಯಮಗಳ ಮೂಲಕ ಶಿಸ್ತು ಕಾಪಾಡುತ್ತವೆ. ಇದರ ಮಧ್ಯೆಯೇ, ಸ್ಪೇನ್‌ (Spain) ದೇಶದ ನಗರವೊಂದರಲ್ಲಿ ವಿಚಿತ್ರ ನಿಯಮವೊಂದನ್ನು ಜಾರಿಗೆ ತರಲಾಗಿದೆ. ಸಮುದ್ರದಲ್ಲಿ ಈಜಾಡುವವರು, ಮೋಜು-ಮಸ್ತಿ ಮಾಡುವವರು ನೀರಿನಲ್ಲೇ ಮೂತ್ರ ವಿಸರ್ಜನೆ ಮಾಡಿದರೆ 67 ಸಾವಿರ ರೂ.ನಿಂದ 1 ಲಕ್ಷ ರೂ. ದಂಡ ವಿಧಿಸುವುದಾಗಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಸುದ್ದಿ ಈಗ ಭಾರಿ (Viral News) ಚರ್ಚೆಗೆ ಗ್ರಾಸವಾಗಿದೆ.

ಹೌದು, ಸ್ಪೇನ್‌ನ ಮಾರ್ಬೆಲ್ಲಾ ಎಂಬ ನಗರದಲ್ಲಿರುವ ಸಮುದ್ರಗಳಲ್ಲಿ ನೀರಿನ ಸ್ವಚ್ಛತೆ, ಶಿಸ್ತು ಕಾಪಾಡುವ ದಿಸೆಯಲ್ಲಿ ಹೊಸ ನಿಯಮಗಳನ್ನು ರೂಪಿಸಲಾಗುತ್ತದೆ. ಸಾರ್ವಜನಿಕರ ಆರೋಗ್ಯ, ನೀರಿನ ಗುಣಮಟ್ಟ, ಸ್ವಚ್ಛತೆ ದೃಷ್ಟಿಯಿಂದ ನಿಯಮಗಳನ್ನು ರೂಪಿಸುತ್ತಿದೆ. ಅದರಲ್ಲೂ, ಮೊದಲ ಬಾರಿಗೆ ಮೂತ್ರ ವಿಸರ್ಜನೆ ಮಾಡಿ ಸಿಕ್ಕಿಬಿದ್ದರೆ 67 ಸಾವಿರ ರೂ. ದಂಡ ಪಾವತಿಸಬೇಕಾಗುತ್ತದೆ. ದಂಡ ಪಾವತಿಸಿದ ಒಂದು ವರ್ಷದಲ್ಲಿ ಮತ್ತೆ ಸಿಕ್ಕಿಬಿದ್ದರೆ ಒಂದು ಲಕ್ಷ ರೂಪಾಯಿವರೆಗೆ ದಂಡ ವಿಧಿಸಲು ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ ಬಿಸಿ ಚರ್ಚೆ

ಮಾರ್ಬೆಲ್ಲಾ ನಗರದಲ್ಲಿ ಜಾರಿಗೆ ತರಲು ಚಿಂತನೆ ನಡೆದಿರುವ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಂತೂ ಪರ-ವಿರೋಧ ಚರ್ಚೆಯಾಗುತ್ತಿದೆ. ಟ್ರೋಲ್‌ಗಳನ್ನು ಮಾಡಲಾಗುತ್ತಿದೆ. ಅದರಲ್ಲೂ, ಕೆಲ ಮಾಧ್ಯಮಗಳು ಬೀಚ್‌ಗಳಿಗೆ ತೆರಳಿ ಜನರ ಅಭಿಪ್ರಾಯಗಳು ಕೇಳಿವೆ. “ನಾವು ಸಮುದ್ರದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದೇವೆ ಎಂಬುದನ್ನು ಹೇಗೆ ಪತ್ತೆ ಹಚ್ಚುತ್ತಾರೆ? ಮೀನುಗಳನ್ನು ಕೇಳಿ, ಅವರು ನಮಗೆ ದಂಡ ವಿಧಿಸುತ್ತಾರೆಯೇ” ಎಂಬುದಾಗಿ ಪ್ರವಾಸಿಗರೊಬ್ಬರು ಖಾರವಾಗಿ ಪ್ರಶ್ನಿಸಿದ್ದಾರೆ.

ಒಂದಷ್ಟು ಜನರು ಈ ಚಿಂತನೆಯೇ ನಾನ್‌ಸೆನ್ಸ್‌ ಎಂದಿದ್ದಾರೆ. “ಸಮುದ್ರದ ನೀರನ್ನು ಸ್ವಚ್ಛವಾಗಿಡಬೇಕು, ಯಾರೂ ಮೂತ್ರ ವಿಸರ್ಜನೆ ಮಾಡಬಾರದು ಎಂಬುದು ಸರಿ. ಆದರೆ, ಅದನ್ನು ತಿಳಿಯುವ ವಿಧಾನ ಏನಿದೆ? ಅದನ್ನು ಹೇಗೆ ಪತ್ತೆಹಚ್ಚುತ್ತಾರೆ? ಸಾರ್ವಜನಿಕರ ಹಣವನ್ನು ಹೀಗೆ ಖರ್ಚು ಮಾಡುವ, ನಾನ್‌ಸೆನ್ಸ್‌ ಯೋಜನೆಗಳನ್ನು ರೂಪಿಸುವ ಬದಲು, ಸಮುದ್ರದಲ್ಲಿ ಮೂತ್ರ ವಿಸರ್ಜನೆ ಮಾಡದಿರುವ, ನೀರಿನ ಸ್ವಚ್ಛತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದ್ದರೆ ಒಳ್ಳೆಯದಿತ್ತು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Team India Fan: ಟಿ20 ವಿಶ್ವಕಪ್​ ವಿಜೇತ ಭಾರತ ತಂಡದ ಆಟಗಾರರ ಹೆಸರನ್ನು ಬೆನ್ನ ಮೇಲೆ ಟ್ಯಾಟು ಹಾಕಿಸಿಕೊಂಡ ಅಭಿಮಾನಿ; ವಿಡಿಯೊ ವೈರಲ್​

Continue Reading

ಕರ್ನಾಟಕ

Dengue Cases: ರಾಜ್ಯದಲ್ಲಿ ಭಾನುವಾರ 159 ಮಂದಿಗೆ ಡೆಂಗ್ಯೂ ದೃಢ; ಬೆಂಗಳೂರಲ್ಲೇ ಅತಿ ಹೆಚ್ಚು!

Dengue Cases: ರಾಜ್ಯದಲ್ಲಿ ಒಟ್ಟು 301 ಸಕ್ರಿಯ ಪ್ರಕರಣಗಳ ಪೈಕಿ 35 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಅಂದರೆ 80 ಪ್ರಕರಣಗಳು ಪತ್ತೆಯಾಗಿವೆ.

VISTARANEWS.COM


on

Dengue Cases
Koo

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 159 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಒಟ್ಟು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 301ಕ್ಕೆ ಏರಿಕೆಯಾಗಿದೆ. ಇನ್ನು ಜನವರಿಯಿಂದ ಈವರೆಗೂ ಡೆಂಗ್ಯೂನಿಂದ (Dengue Cases) 6 ಸಾವು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಯಲ್ಲಿ 954 ಮಂದಿಗೆ ಟೆಸ್ಟ್‌ ಮಾಡಲಾಗಿದ್ದು, ಈ ಪೈಕಿ 159 ಮಂದಿಯಲ್ಲಿ ಡೆಂಗ್ಯೂ ಸೋಂಕು ಪತ್ತೆಯಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 80, ಚಿಕ್ಕಬಳ್ಳಾಪುರ – 08, ತುಮಕೂರು – 12, ದಾವಣಗೆರೆ – 10, ಗದಗ – 5, ಯಾದಗಿರಿ – 2, ಬೀದರ್ – 13, ಕೊಪ್ಪಳ – 1, ಹಾಸನ – 03, ಚಿಕ್ಕಮಗಳೂರು – 25 ಪ್ರಕರಣಗಳು ಪತ್ತೆಯಾಗಿವೆ.

ಕಳೆದ 24 ಗಂಟೆಗಳಲ್ಲಿ 1 ವರ್ಷದೊಳಗಿನ ಮೂವರು ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಸದ್ಯ 301 ಸಕ್ರಿಯ ಪ್ರಕರಣಗಳ ಪೈಕಿ 35 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಾಸನದಲ್ಲಿ ಶಂಕಿತ ಡೆಂಗ್ಯೂಗೆ 26 ವರ್ಷದ ಯುವತಿ ಬಲಿ

ಹಾಸನ: ಶಂಕಿತ ಡೆಂಗ್ಯೂಗೆ (Dengue Cases in Hassan) 26 ವರ್ಷದ ಯುವತಿ ಬಲಿಯಾಗಿರುವ ಘಟನೆ ಹಾಸನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಜಿಲ್ಲೆಯ ಅರಸೀಕೆರೆ ತಾಲೂಕಿನ ಮುದುಡಿ ತಾಂಡ್ಯ ಗ್ರಾಮದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಜೂಲೂನಾಯ್ಕ-ಸುಮಿತ್ರಾದೇವಿ ಎಂಬುವವರ ಪುತ್ರಿ ಸುಪ್ರಿತಾ (26) ಮೃತ ಯುವತಿ. ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿರುವಾಗಲೇ ಸುಪ್ರಿತಾಗೆ ಬಹುಅಂಗಾಗ ವೈಫಲ್ಯವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸುಪ್ರಿತಾ ಮೃತಪಟ್ಟಿದ್ದಾಳೆ. ಇದರಿಂದ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ಸಾವಿನ ಸಂಖ್ಯೆ ಏಳಕ್ಕೆ ಏರಿದೆ.

ಮೈಸೂರಿನಲ್ಲಿ ಜಯದೇವ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಸಾವು

ಮೈಸೂರು: ಜಿಲ್ಲೆಯಲ್ಲಿ ಡೆಂಗ್ಯೂಗೆ ಎರಡನೇ ಬಲಿಯಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಲಲಿತಾ ಮೃತಪಟ್ಟವರು. ಮೂರು ದಿನಗಳ ಹಿಂದೆ ಹುಣಸೂರು ಸಮುದಾಯ ಆರೋಗ್ಯಾಧಿಕಾರಿ ಮೃತಪಟ್ಟ ಬೆನ್ನಲ್ಲೇ ಇದೀಗ ಮತ್ತೊಬ್ಬರು ಡೆಂಗ್ಯೂ ಜ್ವರದಿಂದ (Dengue Cases in Mysore) ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ | Dengue Scare: ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಡೆಂಗ್ಯೂ; ನೂರಾರು ಮಂದಿ ಆಸ್ಪತ್ರೆಗೆ ದಾಖಲು

ಮೈಸೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. 3 ದಿನಗಳ ಹಿಂದೆ ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿತ್ತು. ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮುದಾಯ ಆರೋಗ್ಯಾಧಿಕಾರಿ ನಾಗೇಂದ್ರ (32) ಮೃತ ಮೃತಪಟ್ಟಿದ್ದರು.

Continue Reading

ಪ್ರಮುಖ ಸುದ್ದಿ

ZIM vs IND : ಭಾರತ ತಂಡಕ್ಕೆ 100 ರನ್​ ಭರ್ಜರಿ ಜಯ, ಜಿಂಬಾಬ್ವೆ ವಿರುದ್ಧ ಸರಣಿಯಲ್ಲಿ 1-1 ಸಮಬಲ ಸಾಧನೆ

VISTARANEWS.COM


on

ZIM vs IND
Koo

ಹರಾರೆ: ಬ್ಯಾಟಿಂಗ್​ನಲ್ಲಿ ಅಭಿಷೇಕ್​ ಶರ್ಮಾ (100 ರನ್​, 47 ಎಸೆತ, 7 ಫೋರ್, 8 ಸಿಕ್ಸರ್​) ಬಾರಿಸಿದ ಅಮೋಘ ಶತಕ ಹಾಗೂ ಬೌಲಿಂಗ್​ನಲ್ಲಿ ಮುಕೇಶ್​ ಕುಮಾರ್ ಹಾಗೂ ಅವೇಶ್​ ಖಾನ್​ ಅವರ ತಲಾ 3 ವಿಕೆಟ್​ ಸಾಧನೆಯಿಂದ ಮಿಂಚಿದ ಭಾರತ ತಂಡ ಆತಿಥೇಯ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯ (ZIM vs IND) ಎರಡನೇ ಪಂದ್ಯದಲ್ಲಿ 100 ರನ್​ ಭರ್ಜರಿ ವಿಜಯ ದಾಖಲಿಸಿದೆ. ಈ ಮೂಲಕ ಭಾರತ ತಂಡ ಐದು ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಸಾಧನೆ ಮಾಡಿದೆ. ಮೊದಲ ಪಂದ್ಯದಲ್ಲಿ 13 ರನ್​ಗಳ ಹೀನಾಯ ಸೋಲಿಗೆ ಒಳಗಾಗಿ ಅವಮಾನಕ್ಕೆ ಈಡಾಗಿದ್ದ ವಿಶ್ವ ಚಾಂಪಿಯನ್​ ಮೆನ್​ ಇನ್ ಬ್ಲ್ಯೂ ಬಳಗ ಎರಡನೇ ಪಂದ್ಯದಲ್ಲಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿತು. ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡರಲ್ಲೂ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿತು.

ಇಲ್ಲಿನ ಹರಾರೆ ಸ್ಪೋರ್ಟ್ಸ್​​ ಕ್ಲಬ್​ ಕ್ರಿಕೆಟ್​ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 234 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಆತಿಥೇಯ ಜಿಂಬಾಬ್ವೆ ಬಳಗ 18. 4 ಓವರ್​ಗಳಲ್ಲಿ 134 ರನ್​ಗಳಿಗೆ ಆಲ್​ಔಟ್ ಆಯಿತು.

ಮಾರಕ ಬೌಲಿಂಗ್​

ಭಾರತದ ಬ್ಯಾಟರ್​ಗಳು ದೊಡ್ಡ ಮೊತ್ತವನ್ನು ಪೇರಿಸಿದ್ದ ಕಾರಣ ಬೌಲರ್​ಗಳಿಗೆ ತಮ್ಮ ಪ್ರತಾಪ ತೋರಿಸಲು ಅನುಕೂಲವಾಯಿತು. ಆರಂಭದಿಂದಲೇ ಆತಿಥೇಯ ತಂಡದ ವಿರುದ್ಧ ಪ್ರಾಬಲ್ಯ ಸಾಧಿಸಿದರು. ಇನ್ನೋಸೆಂಟ್​ ಕೈಯಾ 4 ರನ್ ಬಾರಿಸಿ ಮುಕೇಶ್ ಎಸೆತಕ್ಕೆ ಔಟಾದರು. ಆದರೆ, ಅ ಬಳಿಕ ವೆಸ್ಲಿ ಮಧೆವೆರೆ (43 ರನ್​) ಹಾಗೂ ಬ್ರಿಯಾನ್ ಬೆನೆಟ್ (26 ರನ್​) ಭಾರತದ ಬೌಲರ್​ಗಳನ್ನು ಸ್ವಲ್ಪ ಹೊತ್ತು ಕಾಡಿದರು. ಆದರೆ, ಬ್ರಿಯಾನ್ ಮುಕೇಶ್ ಎಸೆತಕ್ಕೆ ಔಟಾದ ಬಳಿಕ ಡಿಯಾನ್ ಮೈರ್ಸ್​ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ನಾಯಕ ಸಿಕಂದರ್​ ರಾಜಾ 4 ರನ್​ಗೆ ಔಟಾದರು. ಇವರಿಬ್ಬರೂ ಆವೇಶ್​ ಖಾನ್​ ಬೌಲಿಂಗ್​ಗೆ ಬಲಿಯಾದರು. ಇದಾದ ಬಳಿಕ ಜಿಂಬಾಬ್ವೆ ಆಟಗಾರರ ಪ್ರತಾಪ ಕಡಿಮೆಯಾಯಿತು. ಕ್ಯಾಂಪ್​ಬೆಲ್​ 10 ರನ್​, ಮಂಡಂಡೆ ಶೂನ್ಯಕ್ಕೆ ಹಾಗೂ ಮಸಕಡ್ಸಾ 1 ರನ್​ಗೆ ಔಟಾಗುವ ಮೂಲಕ ಭಾರತ ಸಂಪೂರ್ಣವಾಗಿ ಮೇಲುಗೈ ಸಾಧಿಸಿತು. ಲ್ಯೂಕ್​ ಲ್ಯಾಂಗ್​ವೇ ಕೊನೆಯಲ್ಲಿ 33 ರನ್ ಬಾರಿಸಿದರೂ ಭಾರತದ ರನ್​ ಮೊತ್ತವನ್ನು ಸಮೀಪಿಸಲೂ ಅವರಿಗೆ ಸಾಧ್ಯವಾಗಲಿಲ್ಲ.

ಇದನ್ನೂ ಓದಿ: Rahul Dravid : ರಾಹುಲ್ ದ್ರಾವಿಡ್​ಗೆ ಭಾರತ ರತ್ನ ಕೊಡಿ; ಕೇಂದ್ರ ಸರ್ಕಾರಕ್ಕೆ ಗವಾಸ್ಕರ್ ಮನವಿ

ಅಭಿಷೇಕ್​ ಅಬ್ಬರ

ಮೊದಲು ಬ್ಯಾಟ್ ಮಾಡಿದ ಭಾರತ ಪರ ಅಭಿಷೇಕ್ ಶರ್ಮಾ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಶುಭ್​ಮನ್ ಗಿಲ್​ 2 ರನ್​ಗೆ ಔಟಾದ ಹೊರತಾಗಿಯೂ ಅವರು ತಮ್ಮ ಹೊಡೆಬಡಿಯ ಬ್ಯಾಟಿಂಗ್ ಪ್ರದರ್ಶನ ನಿಲ್ಲಿಸಲಿಲ್ಲ. ತಾವೆದರುಸಿದ ಮೊದಲ ಎಸೆತಕ್ಕೆ ಸಿಕ್ಸರ್ ಬಾರಿಸಿ ರನ್ ಕದಿಯಲು ಆರಂಭಿಸಿದ ಅವರು 34 ಎಸೆತಕ್ಕೆ ಅರ್ಧ ಶತಕ ಹಾಗೂ ನಂತರ 13 ಎಸೆತಗಳಲ್ಲಿ 50 ರನ್ ಬಾರಿಸಿ ಚೊಚ್ಚಲ ಅಂತಾರಾಷ್ಟ್ರೀಯ ಶತಕ ಬಾರಿಸಿದರು. ಆದರೆ, ನಂತರದ ಎಸೆತದಲ್ಲಿಯೇ ಔಟಾದರು. ಅದಕ್ಕಿಂತ ಮೊದಲು ಅವರು ಎರಡನೇ ವಿಕೆಟ್​ಗೆ ಋತುರಾಜ್ ಗಾಯಕ್ವಾಡ್ ಜತೆಗೆ 137ರನ್​ಗಳ ಜತೆಯಾಟ ಆಡಿದರು. ಶರ್ಮಾ ಔಟಾದ ಬಳಿಕ ಆಡಲು ಬಂದ ರಿಂಕು ಸಿಂಗ್​ ಇನ್ನಷ್ಟು ಅಬ್ಬರಿಸಿದರು. ಅವರು 22 ಎಸೆತಕ್ಕೆ 48 ರನ್ ಬಾರಿಸಿ ಮಿಂಚಿದರು. ಅದಕ್ಕಿಂತ ಮೊದಲು ಸಾವಧಾನವಾಗಿ ಇನಿಂಗ್ಸ್ ಕಟ್ಟಿದ ಋತುರಾಜ್ ಗಾಯಕ್ವಾಡ್​ 47 ಎಸೆತಕ್ಕೆ 77 ರನ್ ಹೊಡೆದರು. ಅವರ ಇನಿಂಗ್ಸ್​​ನಲ್ಲಿ 11 ಫೋರ್ ಹಾಗೂ 1 ಸಿಕ್ಸರ್ ಇತ್ತು.

ಸರಣಿಯ ಮೂರನೇ ಪಂದ್ಯ ಬುಧವಾರ (ಜುಲೈ 10ರಂದು) ನಡೆಯಲಿದೆ.

Continue Reading
Advertisement
Puri Jagannath Rath Yatra
ಪ್ರಮುಖ ಸುದ್ದಿ8 mins ago

Puri Jagannath Rath Yatra: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಒಬ್ಬನ ಸಾವು, 400 ಭಕ್ತರಿಗೆ ಗಾಯ!

NIA Arrest
ದೇಶ18 mins ago

NIA Arrest: ಹಿಜ್ಬುಲ್‌, LeT ಉಗ್ರ ಸಂಘಟನೆಗಳ ಜೊತೆ ನಂಟು; ಪ್ರಮುಖ ಆರೋಪಿ ಅರೆಸ್ಟ್‌

Elephant attack car in Kodagu‌ four people escape
ಕೊಡಗು20 mins ago

Elephant attack :ಕಾರಿನ ಮೇಲೆ ಕಾಡಾನೆ ದಾಳಿ; ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Viral News
ವೈರಲ್ ನ್ಯೂಸ್46 mins ago

Viral News: ಸಮುದ್ರದಲ್ಲಿ ಮೂತ್ರ ವಿಸರ್ಜನೆ ಮಾಡಿದರೆ 67 ಸಾವಿರ ರೂ. ದಂಡ; ಕಂಡು ಹಿಡಿಯೋದು ಹೇಗೆ?

Bengaluru News Physical Abuse
ಬೆಂಗಳೂರು54 mins ago

Bengaluru News : ʻ ಹುಡುಗ- ಹುಡುಗಿಯರ ಸರ್ವಿಸ್ ಬೇಕಾʼ ಎಂದವನ ಹೆಡೆಮುರಿ ಕಟ್ಟಿದ ಖಾಕಿ ಪಡೆ

Dengue Cases
ಕರ್ನಾಟಕ1 hour ago

Dengue Cases: ರಾಜ್ಯದಲ್ಲಿ ಭಾನುವಾರ 159 ಮಂದಿಗೆ ಡೆಂಗ್ಯೂ ದೃಢ; ಬೆಂಗಳೂರಲ್ಲೇ ಅತಿ ಹೆಚ್ಚು!

Sonakshi Sinha
ಸಿನಿಮಾ1 hour ago

Sonakshi Sinha: ಮದುವೆ ಆದವರು ಗರ್ಭಿಣಿಯಾದರೆ ಮಾತ್ರ ಆಸ್ಪತ್ರೆಗೆ ಹೋಗಬೇಕಾ? ವದಂತಿಕೋರರಿಗೆ ನಟಿ ಸೋನಾಕ್ಷಿ ಪ್ರಶ್ನೆ!

Dengue Scare
ಬೆಂಗಳೂರು1 hour ago

Dengue Scare: ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಡೆಂಗ್ಯೂ; ನೂರಾರು ಮಂದಿ ಆಸ್ಪತ್ರೆಗೆ ದಾಖಲು

Press Club of Bangalore
ಬೆಂಗಳೂರು2 hours ago

Press Club of Bangalore: ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಅಧ್ಯಕ್ಷರಾಗಿ ಆರ್. ಶ್ರೀಧರ್ ಮರು ಆಯ್ಕೆ; ನೂತನ ಪದಾಧಿಕಾರಿಗಳ ಪಟ್ಟಿ ಇಲ್ಲಿದೆ

Foods For Hormone Balance
ಆರೋಗ್ಯ2 hours ago

Foods For Hormone Balance: ಮಹಿಳೆಯರೇ, ಹಾರ್ಮೋನಿನ ಸಮತೋಲನಕ್ಕಾಗಿ ಈ ಆಹಾರಗಳನ್ನು ಮರೆಯದೇ ಸೇವಿಸಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ5 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ5 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ16 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌