Kerala Election Results 2024: ಕೇರಳದಲ್ಲಿ ಈ ಬಾರಿಯಾದರೂ ಕಮಲ ಅರಳುತ್ತಾ? 1 ಕಡೆ ಬಿಜೆಪಿಗೆ ಮುನ್ನಡೆ - Vistara News

Lok Sabha Election 2024

Kerala Election Results 2024: ಕೇರಳದಲ್ಲಿ ಈ ಬಾರಿಯಾದರೂ ಕಮಲ ಅರಳುತ್ತಾ? 1 ಕಡೆ ಬಿಜೆಪಿಗೆ ಮುನ್ನಡೆ

Election Results 2024: ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಈ ಬಾರಿ ಕೇರಳದಲ್ಲಿ ಬಿಜೆಪಿ ಖಾತೆ ತೆರೆಯಲಿದೆ ಎಂದಿದ್ದು, ಅದರಂತೆ ಒಂದು ಕಡೆ ಮುನ್ನಡೆ ಸಾಧಿಸಿದೆ. ಸದ್ಯದ ಕೇರಳದ ಚಿತ್ರಣ ಇಲ್ಲಿದೆ.

VISTARANEWS.COM


on

Kerala Election Results 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುವನಂತಪುರಂ: ತೀವ್ರ ಕುತೂಹಲ ಕೆರಳಿಸಿದ್ದ ಲೋಕಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಈಗಿನ ಟ್ರೆಂಡ್‌ ಪ್ರಕಾರ ನಿರೀಕ್ಷೆಯಂತೆ ಬಿಜೆಪಿ ನೇತೃತ್ವದ ಎನ್‌ಡಿಎ ಮುನ್ನಡೆ ಸಾಧಿಸಿದೆ. ಈಗಾಗಲೇ ಎನ್‌ಡಿಎ 290ಕ್ಕಿಂತಲೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ವಿಪಕ್ಷಗಳ ಇಂಡಿಯಾ ಮೈತ್ರಿಕೂಟ 220 ಸೀಟುಗಳಲ್ಲಿ ಮುಂದಿದೆ. ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಈ ಬಾರಿ ಕೇರಳದಲ್ಲಿ ಬಿಜೆಪಿ ಖಾತೆ ತೆರೆಯಲಿದೆ ಎನ್ನಲಾಗಿದೆ. ಹಾಗಾದರೆ ಈಗ ಅಲ್ಲಿನ ಸ್ಥಿತಿ ಹೇಗಿದೆ? ಇಲ್ಲಿದೆ ವಿವರ (Kerala Election Results 2024).

ಬಿಜೆಪಿಗೆ 1 ಕಡೆ ಮುನ್ನಡೆ

ಸದ್ಯ ಬಿಜೆಪಿ ಕೇರಳದ ಒಂದು ಕಡೆ ಲೀಡ್‌ನಲ್ಲಿದೆ. ತ್ರಿಶ್ಯೂರಿನಲ್ಲಿ ಬಿಜೆಪಿ ಅಭ್ಯರ್ಥಿ, ನಟ ಸುರೇಶ್‌ ಗೋಪಿ ಇದೀಗ ಮುನ್ನಡೆ ಸಾಧಿಸಿದ್ದಾರೆ. ಇಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (CPI)ದಿಂದ ವಿ.ಎಸ್.ಸುನೀಲ್ ಕುಮಾರ್ ಮತ್ತು ಕಾಂಗ್ರೆಸ್‌ನಿಂದ ಕೆ.ಮುರಳೀಧರನ್ ಕಣಕ್ಕಿಳಿದಿದ್ದು, ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಕಳೆದ ಬಾರಿ (2019)ಯ ಲೋಕಸಭಾ ಚುನಾವಣೆಯಲ್ಲಿಯೂ ಇಲ್ಲಿ ತೀವ್ರ ಪೈಪೋಟಿ ನಡೆದಿತ್ತು. ಕಾಂಗ್ರೆಸ್‌ ಅಭ್ಯರ್ಥಿ ಟಿ.ಎಸ್.ಪಾರ್ಥಪನ್ 93,633 ಮತಗಳ ಗೆಲುವಿನ ಅಂತರದಿಂದ ಗೆದ್ದಿದ್ದರು. ಅವರು 4,15,089 ಮತಗಳನ್ನು ಗಳಿಸಿದ್ದರು. 3,21,456 ಮತಗಳನ್ನು ಪಡೆದ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಅವರನ್ನು ಟಿ.ಎಸ್.ಪಾರ್ಥಪನ್ ಸೋಲಿಸಿದ್ದರು.

ಮುನ್ನಡೆಯಲ್ಲಿ ರಾಹುಲ್‌ ಗಾಂಧಿ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಯನಾಡಿನಿಂದ ಸ್ಪರ್ಧಿಸುತ್ತಿದ್ದು, ಮುನ್ನಡೆ ಸಾಧಿಸಿದ್ದಾರೆ. ಇಲ್ಲಿ ಸಿಪಿಐಯಿಂದ ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಆ್ಯನಿ ರಾಜಾ ಮತ್ತು ಬಿಜೆಪಿಯಿಂದ ಕೆ.ಸುರೇಂದ್ರನ್‌ ಸ್ಪರ್ಧಿಸುತ್ತಿದ್ದಾರೆ. ಕಳೆದ ಬಾರಿಯೂ ಇಲ್ಲಿ ರಾಹುಲ್‌ ಗಾಂಧಿ ಸ್ಪರ್ಧಿಸಿ ಗೆದ್ದಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಸಿಪಿಐನ ಪಿ.ಪಿ.ಸುನೀರ್ ಅವರನ್ನು 4.31 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದರು. ಇನ್ನು ಕೇರಳದ ರಾಜಧಾನಿ ತಿರುವನಂತಪುರಂನಲ್ಲಿ ಈ ಬಾರಿ ಜಿದ್ದಾಜಿದ್ದಿನ ಹೋರಾಟ ನಡೆಯುವ ನಿರೀಕ್ಷೆ ಇದೆ. ಇಲ್ಲಿ ಬಿಜೆಪಿ ಹಿರಿಯ ನಾಯಕ, ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಅವರನ್ನು ಕಣಕ್ಕಿಳಿಸಿದರೆ ಕಾಂಗ್ರೆಸ್‌ನಿಂದ ಹಿರಿಯ ನಾಯಕ ಶಶಿ ತರೂರರ್‌ ಸ್ಪರ್ಧಿಸುತ್ತಿದ್ದಾರೆ. ಶಶಿ ತರೂರ್‌ ಅವರಿಗೆ ಇದು ನಾಲ್ಕನೇ ಸ್ಪರ್ಧೆ. ಸದ್ಯ ಶಶಿ ತರೂರ್‌ ಅವರು ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಬಹು ನಿರೀಕ್ಷಿತ ಕ್ಷೇತ್ರಗಳಲ್ಲಿ ಇದೂ ಕೂಡ ಒಂದು.

ಸದ್ಯದ ಚಿತ್ರಣ

ಸದ್ಯ ಕೇರಳದಲ್ಲಿ ಯುಡಿಎಫ್‌ 18, ಎಲ್‌ಡಿಎಫ್‌ ಮತ್ತು ಎನ್‌ಡಿಎ ತಲಾ 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. 2019ರಲ್ಲಿ ಕೇರಳದಲ್ಲಿ ಯುಡಿಎಫ್‌ 19 ಮತ್ತು ಎಲ್‌ಡಿಎಫ್‌ 1 ಕಡೆ ಗೆದ್ದುಕೊಂಡಿತ್ತು. ಈ ಬಾರಿ ಇಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ. ಜತೆಗೆ ಶತಾಯ ಗತಾಯ ಕೇರಳದಲ್ಲಿ ಗೆಲುವು ಸಾಧಿಸಬೇಕು ಎಂದು ಬಿಜೆಪಿ ಹಠ ತೊಟ್ಟಿದ್ದು, ಪ್ರದಾನಿ ಮೋದಿ ಅವರೂ ಭರ್ಜರಿ ರೋಡ್‌ ಶೋ ನಡೆಸಿ ಗಮನ ಸೆಳೆದಿದ್ದರು. ಸದ್ಯ ದೇಶದಲ್ಲಿ ಎನ್‌ಡಿಎ 293, ಇಂಡಿಯಾ ಮೈತ್ರಿಕೂಟ 219 ಮತ್ತು ಇತರ ಅಭ್ಯರ್ಥಿಗಳು 30 ಕಡೆ ಮುನ್ನಡೆ ಸಾಧಿಸಿದ್ದಾರೆ.

ಇದನ್ನೂ ಓದಿ: Election results 2024: ದಿಲ್ಲಿಯಲ್ಲಿ ಈ ಬಾರಿಯೂ ಕ್ಲೀನ್‌ ಸ್ವೀಪ್‌ ಮಾಡುತ್ತಾ ಬಿಜೆಪಿ? ಏಳೂ ಕ್ಷೇತ್ರಗಳಲ್ಲಿ ಮುನ್ನಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ರಾಜಕೀಯ

K Annamalai: ಕೆ ಅಣ್ಣಾಮಲೈ ಯುಕೆ ಫೆಲೋಶಿಪ್‌ಗೆ ಆಯ್ಕೆ; ಬಿಜೆಪಿ ರಾಜ್ಯಾಧ್ಯಕ್ಷತೆಗೆ ರಾಜೀನಾಮೆ?

ಯುಕೆ ವಿದೇಶಾಂಗ ಕಚೇರಿಯ ಚೆವೆನಿಂಗ್ ಗುರುಕುಲ ಫೆಲೋಶಿಪ್ ಫಾರ್ ಲೀಡರ್‌ಶಿಪ್ ಮತ್ತು ಎಕ್ಸಲೆನ್ಸ್ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವ ಕೆ. ಅಣ್ಣಾಮಲೈ ( K Annamalai) ಅವರು ಬ್ರಿಟನ್‌ನಲ್ಲಿ ಕೋರ್ಸ್ ಮುಗಿಯುವವರೆಗೆ ತಮ್ಮನ್ನು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ಬಿಡುಗಡೆ ಮಾಡುವಂತೆ ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

VISTARANEWS.COM


on

By

K Annamalai
Koo

ಲೋಕಸಭಾ ಚುನಾವಣೆಯಲ್ಲಿ (Lok sabha election) ಬಿಜೆಪಿಯಿಂದ (bjp) ತಮಿಳುನಾಡಿನಲ್ಲಿ (tamilnadu) ಸ್ಪರ್ಧಿಸಿ ಸೋತಿದ್ದ ಒಂದು ತಿಂಗಳ ಬಳಿಕ ಕೆ. ಅಣ್ಣಾಮಲೈ ( K Annamalai) ಅವರಿಗೆ ಯುಕೆ (UK) ಫೆಲೋಶಿಪ್‌ ದೊರೆತಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷರೂ ಆಗಿರುವ ಕೆ ಅಣ್ಣಾಮಲೈ ಅವರು ಸದ್ಯದಲ್ಲೇ ಲಂಡನ್‌ಗೆ ತೆರಳಲಿದ್ದಾರೆ. ಯುಕೆ ವಿದೇಶಾಂಗ ಕಚೇರಿಯ ಚೆವೆನಿಂಗ್ ಗುರುಕುಲ ಫೆಲೋಶಿಪ್ ಫಾರ್ ಲೀಡರ್‌ಶಿಪ್ ಮತ್ತು ಎಕ್ಸಲೆನ್ಸ್ ಕಾರ್ಯಕ್ರಮಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ. ಮೂರು ತಿಂಗಳ ಕಾಲ ಅವರು ಅಲ್ಲಿ ನೆಲೆಸಲಿದ್ದಾರೆ.

ಫೆಲೋಶಿಪ್ ಕಾರ್ಯಕ್ರಮವು ಸೆಪ್ಟೆಂಬರ್ ಮಧ್ಯದಲ್ಲಿ ಪ್ರಾರಂಭವಾಗಲಿದ್ದು, ನವೆಂಬರ್‌ನಲ್ಲಿ ಮುಕ್ತಾಯಗೊಳ್ಳಲಿದೆ. ಮೂಲಗಳ ಪ್ರಕಾರ ಅಣ್ಣಾಮಲೈ ಅವರು 2024ರ ಲೋಕಸಭೆ ಚುನಾವಣೆಗೆ ಮುನ್ನ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಿದ್ದರು ಮತ್ತು ಮೇ ತಿಂಗಳಲ್ಲಿ ದೆಹಲಿಯಲ್ಲಿ ಸಂದರ್ಶನಕ್ಕೆ ಹಾಜರಾಗಿದ್ದರು. ಬ್ರಿಟನ್‌ನಲ್ಲಿ ಕೋರ್ಸ್ ಮುಗಿಯುವವರೆಗೆ ತಮ್ಮನ್ನು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ಬಿಡುಗಡೆ ಮಾಡುವಂತೆ ಬಿಜೆಪಿ ಹೈಕಮಾಂಡ್‌ಗೆ ಅಣ್ಣಾಮಲೈ ಅವರು ಮನವಿ ಮಾಡಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಅಣ್ಣಾಮಲೈ ಅವರು ನಾಗರಿಕ ಸೇವೆಯನ್ನು ತೊರೆದ ಅನಂತರ ಅವರು ಪ್ರಾರಂಭಿಸಿದ ಎನ್‌ಜಿಒ ‘ವೀ ದಿ ಲೀಡರ್ಸ್’ ಪ್ರತಿಷ್ಠಾನದ ಸಂಸ್ಥಾಪಕರಾಗಿ ಚೆವೆನಿಂಗ್ ಗುರುಕುಲ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಿದ್ದರು. ಕಾರ್ಯಕ್ರಮವನ್ನು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯವು ರಾಜಕೀಯ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ವಿಭಾಗದಲ್ಲಿ ಆಯೋಜಿಸಿದೆ ಎಂದು ಚೆವೆನಿಂಗ್ ವೆಬ್‌ಸೈಟ್ ತಿಳಿಸಿದೆ.

ಯುಕೆ ವಿದೇಶಾಂಗ ಕಚೇರಿಯು 20 ವರ್ಷಗಳಿಗೂ ಹೆಚ್ಚು ಕಾಲ ಫೆಲೋಶಿಪ್ ಕಾರ್ಯಕ್ರಮವನ್ನು ನಡೆಸುತ್ತಿದೆ. ಯುವ ಸಾಧಕರು ಮತ್ತು ಮಧ್ಯಮ ವೃತ್ತಿಪರರು ಹಾಗೂ ವಿವಿಧ ಹಿನ್ನೆಲೆಯ ವೃತ್ತಿಪರರು ಇಲ್ಲಿ ತಮ್ಮ ನಾಯಕತ್ವ ಸಾಮರ್ಥ್ಯವನ್ನು ಪ್ರದರ್ಶಿಸಬಹುದು ಎಂದು ವೆಬ್‌ಸೈಟ್ ಹೇಳಿದೆ. ಈ ಕುರಿತು ಜುಲೈ 26ರಂದು ಬ್ರಿಟಿಷ್ ಹೈ ಕಮಿಷನ್ ಘೋಷಣೆ ಮಾಡಲಿದ್ದು, ಅಣ್ಣಾಮಲೈ ಸೇರಿ ಸುಮಾರು ಹತ್ತು ವೃತ್ತಿಪರರು ಈ ಬಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಚೆವೆನಿಂಗ್ ಗುರುಕುಲ ಫೆಲೋಶಿಪ್ 12 ವಾರಗಳ ಕಾರ್ಯಕ್ರಮವಾಗಿದ್ದು, ಇದಕ್ಕಾಗಿ ಪ್ರತಿ ವರ್ಷ 12 ಅಭ್ಯರ್ಥಿಗಳನ್ನು ಭಾರತದಿಂದ ಗುರುಕುಲ ಫೆಲೋಗಳಾಗಿ ಆಯ್ಕೆ ಮಾಡಲಾಗುತ್ತದೆ. 12 ವಾರಗಳ ವಸತಿ ಕೋರ್ಸ್ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ರಾಜಕೀಯ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ವಿಭಾಗದಲ್ಲಿ ನಡೆಯಲಿದೆ.

ಫೆಲೋಶಿಪ್‌ಗೆ ಸಂಬಂಧಿಸಿದ ಒಂದೆರಡು ಪೂರ್ವ-ಉದ್ದೇಶಿತ ಕಾರ್ಯಕ್ರಮಗಳಿಗೆ ಅಣ್ಣಾಮಲೈ ಈಗಾಗಲೇ ಹಾಜರಾಗಿದ್ದಾರೆ ಮತ್ತು ಸೆಪ್ಟೆಂಬರ್‌ನಲ್ಲಿ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯಕ್ಕೆ ಹೋಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ, ಬಿಜೆಪಿ ಹೈಕಮಾಂಡ್ ರಾಜ್ಯಕ್ಕೆ ಹಂಗಾಮಿ ಅಧ್ಯಕ್ಷರನ್ನು ನೇಮಿಸುವ ನಿರೀಕ್ಷೆಯಿದೆ ಮತ್ತು ಸ್ಥಾನಕ್ಕೆ ಹೆಚ್ಚಿನ ಆಕಾಂಕ್ಷಿಗಳು ಇರುವುದರಿಂದ ತೀವ್ರ ಚರ್ಚೆಗಳು ನಡೆಯುತ್ತಿವೆ.

ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಅಣ್ಣಾಮಲೈ 2020ರ ಆಗಸ್ಟ್ ನಲ್ಲಿ ಬಿಜೆಪಿ ಸೇರಿದ್ದರು. ‘ಪಕ್ಷದ ನಿಷ್ಠಾವಂತ ಸೈನಿಕ’ ಎಂದು ಗುರುತಿಸಿಕೊಂಡಿರುವ ಅವರು ಪಕ್ಷಕ್ಕೆ ಸೇರಿದಾಗಿನಿಂದ ರಾಜ್ಯದಲ್ಲಿ ಹಲವಾರು ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಇದರ ಜತೆಗೆ ವಿವಾದಗಳಿಗೂ ಕೇಂದ್ರವಾಗಿದ್ದಾರೆ.

ಇದನ್ನೂ ಓದಿ: Narendra Modi: ನೀಟ್‌ ಅಕ್ರಮ ಕುರಿತು ಸಂಸತ್‌ನಲ್ಲಿ ಮೋದಿ ಪ್ರಸ್ತಾಪ; ವಿದ್ಯಾರ್ಥಿಗಳಿಗೆ ಅವರು ಹೇಳಿದ್ದಿಷ್ಟು

2023ರಲ್ಲಿ ಅಣ್ಣಾಮಲೈ ಅವರು ನಾಲ್ಕು ಆಡಿಯೋ ಟೇಪ್‌ಗಳ ಸರಣಿಯನ್ನು ಬಿಡುಗಡೆ ಮಾಡಿದರು. ಅದರ ಮೂಲಕ ಅವರು ಡಿಎಂಕೆ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು. ‘ಡಿಎಂಕೆ ಫೈಲ್‌ಗಳು’ ಎಂಬ ಶೀರ್ಷಿಕೆಯಡಿ, ಆಡಿಯೋ ಟೇಪ್‌ಗಳ ಭಾಗ ಒಂದರಲ್ಲಿ ಪಟ್ಟಿ ಮಾಡಲಾದ ಆಸ್ತಿಗಳು 1.34 ಲಕ್ಷ ಕೋಟಿ ರೂಪಾಯಿ ಮೌಲ್ಯದ್ದಾಗಿದೆ. ಇದು ಸ್ಟಾಲಿನ್ ಅವರ ಕುಟುಂಬ ಸದಸ್ಯರು ಮತ್ತು ಇತರ ಹಿರಿಯ ನಾಯಕರು ಸೇರಿದಂತೆ 12 ವ್ಯಕ್ತಿಗಳ ಒಡೆತನದಲ್ಲಿದೆ ಎಂದು ಅವರು ಆರೋಪಿಸಿದ್ದರು. ಅಣ್ಣಾಮಲೈ ಈ ಬಾರಿ ಚುನಾವಣೆಯಲ್ಲಿ ಸೋತಿದ್ದಾರೆ. ಆದರೆ ಅವರ ನಾಯಕತ್ವದಲ್ಲ ಪಕ್ಷ ತಮಿಳುನಾಡಿನಲ್ಲಿ ಶೇಕಡಾವಾರು ಮತ ಗಳಿಕೆಯಲ್ಲಿ ಭಾರಿ ಸಾಧನೆ ಮಾಡಿದೆ.

Continue Reading

ದೇಶ

Amartya Sen: ಭಾರತ ಹಿಂದೂ ರಾಷ್ಟ್ರವಲ್ಲ ಎನ್ನುವುದಕ್ಕೆ ಲೋಕಸಭೆ ಚುನಾವಣೆ ಫಲಿತಾಂಶವೇ ಸಾಕ್ಷಿ: ಅಮರ್ತ್ಯ ಸೇನ್

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಂದಿನ ಅವಧಿಯಲ್ಲಿ ಜನರನ್ನು ವಿಚಾರಣೆಯಿಲ್ಲದೆ ಕಂಬಿಗಳ ಹಿಂದೆ ಹಾಕುವುದು ಮತ್ತು ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ಹೆಚ್ಚಿಸುವಂತಹ ಕೆಲವು ಘಟನೆಗಳು ಇನ್ನೂ ಮುಂದುವರಿದಿದೆ. ಅದನ್ನು ನಿಲ್ಲಿಸಿ ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ (Amartya Sen) ಹೇಳಿದರು. ಈ ಬಾರಿಯ ಲೋಕಸಭೆ ಚುನಾವಣೆಯ ಫಲಿತಾಂಶವು ಭಾರತ ಹಿಂದೂ ರಾಷ್ಟ್ರ ಅಲ್ಲ ಎನ್ನುವುದನ್ನು ಸಾರಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

By

Amartya Sen
Koo

ಕೋಲ್ಕತ್ತಾ: ಇತ್ತೀಚಿನ ಲೋಕಸಭಾ ಚುನಾವಣಾ (Lok Sabha Election) ಫಲಿತಾಂಶವು ಭಾರತ (India) ಹಿಂದೂ ರಾಷ್ಟ್ರವಲ್ಲ (Hindu Rashtra) ಎಂಬುದನ್ನು ಸೂಚಿಸುತ್ತದೆ ಎಂದು ನೋಬೆಲ್ ಪ್ರಶಸ್ತಿ ಪುರಸ್ಕೃತ (Nobel laureate) ಖ್ಯಾತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ (Amartya Sen) ಪ್ರತಿಪಾದಿಸಿದರು. ಯುಎಸ್‌ನಿಂದ (US) ಕೋಲ್ಕತ್ತಾಗೆ (Kolkata) ಆಗಮಿಸಿದ ಅವರು ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರತಿ ಚುನಾವಣೆಯ ಅನಂತರ ನಾವು ಯಾವಾಗಲೂ ಬದಲಾವಣೆಯನ್ನು ಕಾಣುತ್ತೇವೆ ಎಂದ ಅವರು, ಭಾರತವು ಹಿಂದೂ ರಾಷ್ಟ್ರ ಅಲ್ಲ ಎಂಬುದು ಚುನಾವಣಾ ಫಲಿತಾಂಶಗಳಲ್ಲಿ ಪ್ರತಿಫಲಿಸುತ್ತದೆ ಎಂದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಂದಿನ ಅವಧಿಯಲ್ಲಿ ಜನರನ್ನು ವಿಚಾರಣೆಯಿಲ್ಲದೆ ಕಂಬಿಗಳ ಹಿಂದೆ ಹಾಕುವುದು ಮತ್ತು ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ಹೆಚ್ಚಿಸುವಂತಹ ಕೆಲವು ಘಟನೆಗಳು ಇನ್ನೂ ಮುಂದುವರೆದಿದೆ. ಅದನ್ನು ನಿಲ್ಲಿಸಿ ಎಂದು ಅವರು ಹೇಳಿದರು.

ಭಾರತವು ಜಾತ್ಯತೀತ ಸಂವಿಧಾನವನ್ನು ಹೊಂದಿರುವ ಜಾತ್ಯತೀತ ರಾಷ್ಟ್ರವಾಗಿರುವಾಗ ರಾಜಕೀಯವಾಗಿ ಮುಕ್ತ ಮನಸ್ಸಿನ ಅವಶ್ಯಕತೆಯಿದೆ. ಭಾರತವನ್ನು ಹಿಂದೂ ರಾಷ್ಟ್ರವಾಗಿ ಪರಿವರ್ತಿಸುವ ಕಲ್ಪನೆಯು ಸೂಕ್ತವಲ್ಲ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದ ಅವರು, ಹೊಸ ಕೇಂದ್ರ ಸಚಿವ ಸಂಪುಟವು ಹಿಂದಿನ ಸಂಪುಟದ ನಕಲು ಎಂದು ಅಭಿಪ್ರಾಯಪಟ್ಟರು.

ಹಲವು ಸಚಿವರಿಗೆ ಅವರ ಖಾತೆಗಳನ್ನು ಮುಂದುವರಿಸಲಾಗಿದೆ. ಸ್ವಲ್ಪಮಟ್ಟಿಗೆ ಪುನರ್ರಚನೆಯ ಹೊರತಾಗಿಯೂ, ರಾಜಕೀಯವಾಗಿ ಪ್ರಬಲರು ಇನ್ನೂ ಪ್ರಬಲರಾಗಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

ಭಾರತವು ಬ್ರಿಟಿಷರ ಆಳ್ವಿಕೆಯಲ್ಲಿದ್ದಾಗ ಜನರನ್ನು ಯಾವುದೇ ವಿಚಾರಣೆಯಿಲ್ಲದೆ ಜೈಲಿನಲ್ಲಿಡಲಾಗಿತ್ತು ಎಂದು ತಮ್ಮ ಬಾಲ್ಯದ ದಿನಗಳನ್ನು ಸೇನ್ ನೆನಪಿಸಿಕೊಂಡರು.

ನಾನು ಚಿಕ್ಕವನಿದ್ದಾಗ ನನ್ನ ಅನೇಕ ಚಿಕ್ಕಪ್ಪಂದಿರು ಮತ್ತು ಸೋದರಸಂಬಂಧಿಗಳನ್ನು ವಿಚಾರಣೆಯಿಲ್ಲದೆ ಜೈಲಿಗೆ ಹಾಕಲಾಯಿತು. ಭಾರತವು ಇದರಿಂದ ಮುಕ್ತವಾಗುತ್ತದೆ ಎಂದು ನಾವು ಭಾವಿಸಿದ್ದೇವೆ. ಇದು ನಿಲ್ಲದಿದ್ದಕ್ಕೆ ಕಾಂಗ್ರೆಸ್ ಕೂಡ ಕಾರಣ. ಅವರು ಅದನ್ನು ಬದಲಾಯಿಸಲಿಲ್ಲ. ಆದರೆ, ಪ್ರಸ್ತುತ ಸರ್ಕಾರದ ಅಡಿಯಲ್ಲಿ ಇದು ಹೆಚ್ಚು ಆಚರಣೆಯಲ್ಲಿದೆ ಎಂದು ಹೇಳಿದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹೊರತಾಗಿಯೂ ಬಿಜೆಪಿ ಫೈಜಾಬಾದ್ ಲೋಕಸಭಾ ಸ್ಥಾನವನ್ನು ಕಳೆದುಕೊಂಡಿರುವ ಬಗ್ಗೆ ಸೇನ್, ದೇಶದ ನಿಜವಾದ ಗುರುತನ್ನು ಮರೆಮಾಚುವ ಪ್ರಯತ್ನಗಳು ನಡೆದಿವೆ ಎಂದು ಹೇಳಿದರು.

ಇದನ್ನೂ ಓದಿ: Parliament Sessions: ಸಂಸತ್‌ ಅಧಿವೇಶನದಲ್ಲಿ ಇಂದು ರಾಷ್ಟ್ರಪತಿ ಭಾಷಣ; Live ನೋಡಿ

ಮಹಾತ್ಮ ಗಾಂಧಿ, ರವೀಂದ್ರನಾಥ ಟ್ಯಾಗೋರ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ದೇಶದಲ್ಲಿ ಈ ರೀತಿ ನಡೆಯಬಾರದಿತ್ತು. ಭಾರತವನ್ನು ಹಿಂದೂ ರಾಷ್ಟ್ರ’ ಎಂದು ಬಿಂಬಿಸಲು ತುಂಬಾ ಹಣ ಖರ್ಚು ಮಾಡಿ ರಾಮ ಮಂದಿರವನ್ನು ನಿರ್ಮಿಸಲಾಗುತ್ತಿದೆ. ಇದು ಭಾರತದ ನಿಜವಾದ ಗುರುತನ್ನು ನಿರ್ಲಕ್ಷಿಸುವ ಪ್ರಯತ್ನವನ್ನು ತೋರಿಸುತ್ತದೆ ಮತ್ತು ಇದು ಬದಲಾಗಬೇಕು ಅವರು ಹೇಳಿದರು.

ಭಾರತದಲ್ಲಿ ನಿರುದ್ಯೋಗ ಹೆಚ್ಚುತ್ತಿದೆ ಮತ್ತು ಪ್ರಾಥಮಿಕ ಶಿಕ್ಷಣ ಮತ್ತು ಪ್ರಾಥಮಿಕ ಆರೋಗ್ಯದಂತಹ ಕ್ಷೇತ್ರಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಸೇನ್ ಹೇಳಿದರು.

Continue Reading

Latest

Members of Parliament: ಸಂಸದರು ಪ್ರಮಾಣ ವಚನ ಸ್ವೀಕರಿಸದಿದ್ದರೆ ಏನಾಗುತ್ತದೆ? ಜೈಲಿನಲ್ಲಿದ್ದವರ ಕತೆಯೇನು?

ಲೋಕ ಸಭಾ ಚುನಾವಣೆ ಬಳಿಕ ಸಂಸದರಾಗಿ (Members of Parliament) ಆಯ್ಕೆಯಾಗುವವರು ಯಾವ ರೀತಿ ಪ್ರಮಾಣ ವಚನ ಸ್ವೀಕರಿಸಬೇಕು ಎಂಬುದನ್ನು ಸಂವಿಧಾನದಲ್ಲಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸದಿದ್ದರೂ ಸಂಸದೀಯ ಪಾತ್ರವನ್ನು ಪೂರೈಸುವಲ್ಲಿ ಪ್ರಮಾಣ ವಚನ ಸ್ವೀಕಾರವು ಮೊದಲ ಮತ್ತು ಪ್ರಮುಖ ಹೆಜ್ಜೆಯಾಗಿದೆ. ಆದರೂ ಕೆಲವು ಸಂಸದರು ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗದೇ ಇದ್ದರೆ ಮುಂದಿನ ನಡೆ ಹೇಗಿರುತ್ತದೆ ಎಂಬಿತ್ಯಾದಿ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

By

Members of Parliament
Koo

18ನೇ ಲೋಕಸಭೆಯ (loksabha election) ಮೊದಲ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಹೊಸದಾಗಿ ಚುನಾಯಿತರಾದ ಸಂಸತ್ ಸದಸ್ಯರು (Members of Parliament) ಸೋಮವಾರದಿಂದ ಪ್ರಮಾಣ ವಚನ (taking oath) ಸ್ವೀಕರಿಸಲು ಆರಂಭಿಸಿದ್ದಾರೆ. ಎರಡು ದಿನಗಳಲ್ಲಿ ಕೆಳಮನೆಯ (lower house) 543 ಸಂಸದರು ಪ್ರಮಾಣ ವಚನ ಸ್ವೀಕರಿಸಿದರು. ಜೂನ್ 26ರಂದು ನೂತನ ಲೋಕಸಭಾ ಸ್ಪೀಕರ್ (Speaker) ಆಯ್ಕೆ ನಡೆಯಲಿದೆ.

ಪ್ರಮಾಣ ವಚನ ಬೋಧಿಸುವವರು ಯಾರು?

ಸಂಸದೀಯ ಪದ್ಧತಿಗಳ ಪ್ರಕಾರ ಪ್ರತಿ ಸಾರ್ವತ್ರಿಕ ಚುನಾವಣೆಯ ಅನಂತರ ಲೋಕಸಭೆಗೆ ಹೊಸದಾಗಿ ಚುನಾಯಿತರಾದ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಪ್ರಮಾಣ ವಚನ ಸ್ವೀಕರಿಸುವ ಹೊಣೆ ನಿರ್ವಹಿಸುತ್ತಾರೆ. ಲೋಕಸಭೆಯ ನೂತನ ಸ್ಪೀಕರ್ ಆಯ್ಕೆಯನ್ನು ನಡೆಸುವ ಜವಾಬ್ದಾರಿ ಕೂಡ ಈ ಹಂಗಾಮಿ ಸ್ಪೀಕರ್‌ದೇ ಆಗಿರುತ್ತದೆ.

ಸಂವಿಧಾನದಲ್ಲಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸದಿದ್ದರೂ ಸಂಸದೀಯ ಪಾತ್ರವನ್ನು ಪೂರೈಸುವಲ್ಲಿ ಪ್ರಮಾಣ ವಚನ ಸ್ವೀಕಾರವು ಮೊದಲ ಹೆಜ್ಜೆಯಾಗಿದೆ. ಆದರೂ ಕೆಲವು ಸಂಸದರು ಅನಾರೋಗ್ಯದ ಕಾರಣ ಅಥವಾ ಅವರ ಸ್ಥಳದಿಂದ ತೆರಳಲು ಸಾಧ್ಯವಾಗದ ಕಾರಣ ಪ್ರಮಾಣ ವಚನ ಸ್ವೀಕರಿಸದಿರುವ ಸಾಧ್ಯತೆಯಿದೆ.

ಸಂಸದರು ಪ್ರಮಾಣ ವಚನ ಸ್ವೀಕರಿಸದಿದ್ದರೆ ಏನಾಗುತ್ತದೆ?

1. ಮೊದಲ ದಿನ ಪ್ರಮಾಣ ವಚನ ಅಥವಾ ದೃಢೀಕರಣವನ್ನು ಮಾಡದ ಚುನಾಯಿತ ಸಂಸದರು ಸದನದ ಅಧಿವೇಶನದ ಪ್ರಾರಂಭದಲ್ಲಿ ಅದೇ ಅಧಿವೇಶನದಲ್ಲಿ ಅಥವಾ ಅನಂತರದ ಅಧಿವೇಶನದಲ್ಲಿ ಯಾವುದೇ ನಂತರದ ದಿನದಲ್ಲಿ ಪ್ರಮಾಣ ವಚನ ಸ್ವೀಕರಿಸಬಹುದು.

2. ಸಂಸದರ ಕೋರಿಕೆಯ ಮೇರೆಗೆ ಸಭಾಧ್ಯಕ್ಷರ ಚೇಂಬರ್‌ನಲ್ಲಿ ಮಧ್ಯಂತರ ಅವಧಿಯಲ್ಲಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಲಾಗುತ್ತದೆ.

3. ಅನಾರೋಗ್ಯದಿಂದ ಬಳಲುತ್ತಿರುವವರು, ಸದನಕ್ಕೆ ಬರಲು ಸಾಧ್ಯವಾಗದ ಸಂದರ್ಭದಲ್ಲಿ ಅವರು ಬಯಸಿದಲ್ಲಿ ಪ್ರಮಾಣ ಅಥವಾ ದೃಢೀಕರಣವನ್ನು ಮಾಡಬಹುದು. ಈ ಸಂದರ್ಭದಲ್ಲಿ ಸಂಬಂಧಿತ ಅಧಿಕಾರಿಯು ಸದಸ್ಯರಿಗೆ ಸಂಬಂಧಿತ ಪ್ರಮಾಣ ಅಥವಾ ದೃಢೀಕರಣ ಕಾರ್ಡ್ ಅನ್ನು ನೀಡುತ್ತಾರೆ.

4. ಸಂವಿಧಾನದ ಪ್ರಕಾರ ಚುನಾಯಿತ ಸಂಸದರು 60 ದಿನಗಳವರೆಗೆ ಸಂಸತ್ತಿಗೆ ಹಾಜರಾಗದಿದ್ದರೆ ಅವರ ಸ್ಥಾನವನ್ನು ಖಾಲಿ ಎಂದು ಘೋಷಿಸಬಹುದು. ಇದೇ ಆಧಾರದಲ್ಲಿ ನ್ಯಾಯಾಲಯಗಳು ಜೈಲಿನಲ್ಲಿರುವ ಸಂಸದರಿಗೆ ಪ್ರಮಾಣ ವಚನ ಸ್ವೀಕರಿಸುವುದಕ್ಕಾಗಿ ಸಂಸತ್‌ಗೆ ಬರಲು ಅವಕಾಶ ನೀಡಬಹುದು. ಆದರೆ ಪ್ರಮಾಣ ವಚನ ಸ್ವೀಕರಿಸಿದ ಅನಂತರ ಅವರು ಮತ್ತೆ ಜೈಲಿಗೆ ಮರಳಬೇಕಾಗುತ್ತದೆ.

5. ದೃಷ್ಟಿ ಸಮಸ್ಯೆಯಿಂದ ಸದಸ್ಯರಿಗೆ ಸಹಿ ಮಾಡಲು, ಪ್ರಮಾಣ ಪತ್ರ ಓದಲು ಸಾಧ್ಯವಾಗದೇ ಇದ್ದರೆ ಇನ್ನೊಬ್ಬ ಸದಸ್ಯರು ಇವರಿಗೆ ಓದಿ ಹೇಳಬಹುದಾಗಿದೆ.

6. ನ್ಯಾಯಾಲಯದ ಆದೇಶದ ಪರಿಣಾಮವಾಗಿ ಒಬ್ಬ ವ್ಯಕ್ತಿಯು ಸದಸ್ಯರಾಗುವುದನ್ನು ತಡೆದರೆ ಮತ್ತು ಅವರ ಸ್ಥಾನದಲ್ಲಿ ಇನ್ನೊಬ್ಬರು ಚುನಾಯಿತರೆಂದು ಘೋಷಿಸಲ್ಪಟ್ಟರೆ ಮತ್ತೆ ಹೊಸದಾಗಿ ಪ್ರಮಾಣವಚನ ಅಥವಾ ದೃಢೀಕರಣವನ್ನು ಮಾಡಬೇಕು.

7. ಮೊದಲ ಸುತ್ತಿನಲ್ಲಿ ಪ್ರಮಾಣವಚನಕ್ಕೆ ಹಾಜರಾಗದ ಸದಸ್ಯರ ಹೆಸರನ್ನು ಕೊನೆಯಲ್ಲಿ ಮತ್ತೆ ಕರೆಯಲಾಗುತ್ತದೆ.

ಯಾವ ಪ್ರಮಾಣ ವಚನ ಸ್ವೀಕರಿಸುತ್ತಾರೆ?

ಸಂವಿಧಾನದ ಮೂರನೇ ಶೆಡ್ಯೂಲ್ ಸಂಸತ್ತಿನ ಪ್ರಮಾಣ ವಚನದ ಪಠ್ಯವನ್ನು ಒಳಗೊಂಡಿದೆ. ಅದು ಹೀಗೆ ಹೇಳುತ್ತದೆ: ನಾನು…. ಚುನಾಯಿತನಾದ ಅಥವಾ ನಾಮನಿರ್ದೇಶನಗೊಂಡ ಸದಸ್ಯರ ಸಂಸತ್‌ ಸದಸ್ಯನಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ನಾನು ಕಾನೂನಿನ ಮೂಲಕ ಸ್ಥಾಪಿಸಿದಂತೆ ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದುತ್ತೇನೆ ಎಂದು ಸ್ಪಷ್ಟವಾಗಿ ದೃಢಪಡಿಸುತ್ತೇನೆ. ನಾನು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಯನ್ನು ಎತ್ತಿಹಿಡಿಯುತ್ತೇನೆ. ನನ್ನ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ.

ಪ್ರಮಾಣ ವಚನ ಏಕೆ ಮಹತ್ವದ್ದಾಗಿದೆ?

ಲೋಕಸಭೆಯಲ್ಲಿ ಚರ್ಚೆ ಮತ್ತು ಮತ ಚಲಾಯಿಸುವ ಅಧಿಕಾರವನ್ನು ಪಡೆಯಲು ಸಂವಿಧಾನದಲ್ಲಿ (ಆರ್ಟಿಕಲ್ 99) ಸೂಚಿಸಿದಂತೆ ಸಂಸದರು ಪ್ರಮಾಣ ವಚನ ಸ್ವೀಕರಿಸಬೇಕು.

ಕೇವಲ ಚುನಾವಣೆಯಲ್ಲಿ ಗೆದ್ದು ಅವಧಿಯನ್ನು ಪ್ರಾರಂಭಿಸುವುದರಿಂದ ಅವರು ಸದನದ ಕಲಾಪಗಳಲ್ಲಿ ಭಾಗವಹಿಸಲು ಸ್ವಯಂಚಾಲಿತವಾಗಿ ಸಾಧ್ಯವಾಗುವುದಿಲ್ಲ.

ಹೇಗೆ ಪ್ರಮಾಣ ವಚನ ಸ್ವೀಕರಿಸುತ್ತಾರೆ?

ಸಂಸದರು ಮೊದಲು ತಮ್ಮ ಚುನಾವಣಾ ಪ್ರಮಾಣಪತ್ರವನ್ನು ಲೋಕಸಭೆಯ ಸಿಬ್ಬಂದಿಗೆ ಸಲ್ಲಿಸಬೇಕಾಗುತ್ತದೆ. 1957ರಲ್ಲಿ ನಡೆದ ಘಟನೆಯ ಅನಂತರ ಸಂಸತ್ತು ಈ ಸುರಕ್ಷತೆಯನ್ನು ಸೇರಿಸಿತು. ಮಾನಸಿಕವಾಗಿ ಅಸ್ವಸ್ಥ ವ್ಯಕ್ತಿಯೊಬ್ಬರು ಸಂಸದರೆಂದು ಪೋಸ್ ನೀಡಿ ಸದನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು!

ಪ್ರಮಾಣಪತ್ರದ ಜೊತೆಗೆ ಸಂಸದರು ಪ್ರಮಾಣ ವಚನ ಅಥವಾ ದೃಢೀಕರಣವನ್ನು ಮಾಡಲು ಬಯಸಿದ ಭಾಷೆಯನ್ನು ಸಹ ನಮೂದಿಸಬೇಕು.

ಸದಸ್ಯರು ಪ್ರಮಾಣ ವಚನ ಮಾಡುವಾಗ ಹಂಗಾಮಿ ಸ್ಪೀಕರ್ ಜೊತೆ ಹಸ್ತಲಾಘವ ಮಾಡುತ್ತಾರೆ. ಅನಂತರ ಅವರು ಸದನದಲ್ಲಿ ತಮ್ಮ ಆಸನದಲ್ಲಿ ಕುಳಿತುಕೊಳ್ಳಲು ಸದಸ್ಯರಿಗೆ ಸ್ಪೀಕರ್‌ ಅನುಮತಿ ನೀಡುತ್ತಾರೆ. ಸದಸ್ಯರು ದಾಖಲಾತಿ ಪುಸ್ತಕದಲ್ಲಿ ಸಹಿ ಮಾಡುತ್ತಾರೆ.

ಯಾವ ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸಬಹುದು?

ಸಂಸದರು ಇಂಗ್ಲಿಷ್ ಅಥವಾ ಅಸ್ಸಾಮಿ, ಬೆಂಗಾಲಿ, ಬೋಡೋ, ಡೋಗ್ರಿ, ಗುಜರಾತಿ, ಹಿಂದಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮೈಥಿಲಿ, ಮಲಯಾಳಂ, ಮಣಿಪುರಿ, ಮರಾಠಿ, ನೇಪಾಳಿ, ಒಡಿಯಾ, ಪಂಜಾಬಿ, ಸಂಸ್ಕೃತ, ಸಂತಾಲಿ, ಸಿಂಧಿ, ತಮಿಳು, ತೆಲುಗು ಮತ್ತು ಉರ್ದು.. ಹೀಗೆ 22 ಭಾಷೆಗಳಲ್ಲಿ ಪ್ರಮಾಣವಚನವನ್ನು ಸ್ವೀಕರಿಸಬಹುದು.

ಅರ್ಧದಷ್ಟು ಸಂಸದರು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಹಿಂದಿನ ಎರಡು ಲೋಕಸಭೆಯಲ್ಲಿ ಸಂಸ್ಕೃತವು ಜನಪ್ರಿಯ ಭಾಷೆಯಾಗಿ ಮಾರ್ಪಟ್ಟಿದ್ದು, ಹಲವು ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: Bansuri Swaraj: ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿ ಸುಷ್ಮಾ ಸ್ವರಾಜ್‌ರನ್ನು ನೆನಪಿಸಿದ ಮಗಳು! ವಿಡಿಯೊ ನೋಡಿ

ಯಾವಾಗ ಸದನದ ಸದಸ್ಯರಾಗುತ್ತಾರೆ?

ಒಬ್ಬ ವ್ಯಕ್ತಿಯು ಚುನಾವಣಾ ಅಧಿಕಾರಿಯಿಂದ ಚುನಾಯಿತರೆಂದು ಘೋಷಿಸಲ್ಪಟ್ಟ ದಿನಾಂಕದಿಂದ ಸದನದ ಸದಸ್ಯರಾಗುತ್ತಾರೆ. ಸದನವನ್ನು ರಚಿಸುವ ಚುನಾವಣಾ ಆಯೋಗದ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ ಅವರು ಸಂಸದರಾಗಿ ಸಂಬಳವನ್ನು ಸ್ವೀಕರಿಸಲು ಪ್ರಾರಂಭಿಸುತ್ತಾರೆ. ಸಂಸದರು ಸದನದ ಅಧಿವೇಶನಗಳಿಗೆ ಗೈರುಹಾಜರಿಯನ್ನು ಕೇಳಬಹುದಾಗಿದೆ.

Continue Reading

ಪ್ರಮುಖ ಸುದ್ದಿ

Parliament Session 2024: ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ

Parliament Session 2024: ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ಭಾಷಣ ಮಾಡಲಿದ್ದಾರೆ. ನರೇಂದ್ರ ಮೋದಿ ಅವರು ಸೇರಿ ಎಲ್ಲರೂ ನೂತನ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

VISTARANEWS.COM


on

Parliament session 2024
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಅಧಿಕಾರಕ್ಕೆ ಬಂದಿದ್ದು, ಪ್ರಧಾನಿಯಾಗಿ ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇನ್ನು ನೂತನ ಸರ್ಕಾರ ರಚನೆಯಾದ ಬಳಿಕ, 18ನೇ ಲೋಕಸಭೆಯ ಮೊದಲ ಸಂಸತ್‌ ವಿಶೇಷ ಅಧಿವೇಶನವು (Parliament Session 2024) ಸೋಮವಾರದಿಂದ (ಜೂನ್‌ 24) ಆರಂಭವಾಗಲಿದೆ. ನರೇಂದ್ರ ಮೋದಿ ಅವರು ಸೇರಿ ಚುನಾವಣೆಯಲ್ಲಿ ಆಯ್ಕೆಯಾದ ಎಲ್ಲರೂ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ಭಾಷಣ ಮಾಡಲಿದ್ದಾರೆ. ನರೇಂದ್ರ ಮೋದಿ ಅವರು ಸೇರಿ ಎಲ್ಲರೂ ನೂತನ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಾಗೆಯೇ, ನೂತನ ಸ್ಪೀಕರ್‌ ಆಯ್ಕೆಯ ಪ್ರಕ್ರಿಯೆಯೂ ನಡೆಯಲಿದೆ. ಸೋಮವಾರ ಬೆಳಗ್ಗೆ 11 ಗಂಟೆಗೆ ನರೇಂದ್ರ ಮೋದಿ ಹಾಗೂ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಂತರ ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸಂಸದರು ಅಲ್ಫಾಬೆಟಿಕಲ್‌ (ABCD ಆಧಾರದಂತೆ) ಆರ್ಡರ್‌ನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಉದಾಹರಣೆಗೆ, ಅಸ್ಸಾಂ ಸದಸ್ಯರು ಮೊದಲಿಗೆ, ಪಶ್ಚಿಮ ಬಂಗಾಳ ಸದಸ್ಯರು ಕೊನೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Narendra Modi

ಸಂಸತ್‌ ವಿಶೇಷ ಅಧಿವೇಶನದ ಮೊದಲ ದಿನ ಅಂದರೆ, ಜೂನ್‌ 24ರಂದು ಮೋದಿ, ಸಚಿವರು ಸೇರಿ ಒಟ್ಟು 280 ಸದಸ್ಯರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಂಗಳವಾರ ಅಂದರೆ ಜೂನ್‌ 25ರಂದು 264 ಸದಸ್ಯರು ಪದಗ್ರಹಣ ಮಾಡಲಿದ್ದಾರೆ. ಜೂನ್‌ 24ರಿಂದ ಜುಲೈ 3ರವರೆಗೆ ಸಂಸತ್‌ ವಿಶೇಷ ಅಧಿವೇಶನ ನಡೆಯಲಿದೆ. ಯಾವುದೇ ವಿಧೇಯಕಗಳ ಮಂಡನೆ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಯಾರಾಗ್ತಾರೆ ಸ್ಪೀಕರ್?‌

ಲೋಕಸಭೆಯ ಸ್ಪೀಕರ್‌ ಆಗಿ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಈಗಾಗಲೇ ಹಂಗಾಮಿ ಸ್ಪೀಕರ್‌ ಆಗಿ ಭಾರ್ತೃಹರಿ ಮಹತಾಬ್‌ ಅವರು ನೇಮಕಗೊಂಡಿದ್ದಾರೆ. ಜೂನ್‌ 26ರಂದು ಸ್ಪೀಕರ್‌ ಆಯ್ಕೆ ನಡೆಯುವ ಸಾಧ್ಯತೆ ಇದೆ. ಸ್ಪೀಕರ್‌ ಹುದ್ದೆಯ ಮೇಲೆ ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷಗಳಾದ ಜೆಡಿಯು ಹಾಗೂ ಟಿಡಿಪಿ ಕಣ್ಣಿಟ್ಟಿವೆ. ಬಿಜೆಪಿ ಅಭ್ಯರ್ಥಿಯನ್ನೇ ಸ್ಪೀಕರ್‌ ಸ್ಥಾನಕ್ಕೆ ಕೂರಿಸುವುದು ಆ ಪಕ್ಷದ ಉದ್ದೇಶವಾಗಿದೆ. ಸ್ಪೀಕರ್‌ ಸ್ಥಾನಕ್ಕೆ ಬಿಜೆಪಿಯ ಕಿರಣ್‌ ರಿಜಿಜು ಅವರ ಹೆಸರುಗಳು ಕೂಡ ಕೇಳಿಬರುತ್ತಿವೆ. ಹಾಗಾಗಿ, ಕುತೂಹಲ ಹೆಚ್ಚಾಗಿದೆ.

ಇದನ್ನೂ ಓದಿ: Pro Tem Speaker: ಲೋಕಸಭೆ ಹಂಗಾಮಿ ಸ್ಪೀಕರ್‌ ಆಗಿ ಬಿಜೆಪಿಯ ಭಾರ್ತೃಹರಿ ಮಹತಾಬ್ ನೇಮಕ

Continue Reading
Advertisement
Dina Bhavishya
ಭವಿಷ್ಯ18 mins ago

Dina Bhavishya :‌ ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಗುಡ್‌ ನ್ಯೂಸ್

Team India
ಪ್ರಮುಖ ಸುದ್ದಿ6 hours ago

Team India : ಮುಂಬೈನಲ್ಲಿ ನಡೆದ ಭಾರತ ತಂಡದ ವಿಜಯೋತ್ಸವ ನೋಡಿದರೆ ರೋಮಾಂಚನ ಖಾತರಿ

Viral Video
ದೇಶ6 hours ago

10 ರೂ.ಗಾಗಿ ಎಲ್ಲರ ಮುಂದೆ ಪ್ಯಾಂಟ್‌ ಬಿಚ್ಚಿ, ಆಟೋ ಡ್ರೈವರ್‌ ಮೇಲೆ ಮಂಗಳಮುಖಿ ಹಲ್ಲೆ; Video ಇಲ್ಲಿದೆ

A lorry collided with a bike Two persons died on the spot
ಕರ್ನಾಟಕ6 hours ago

Road Accident: ಬೈಕ್‌ಗೆ ಲಾರಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು!

Drowned In Water A woman died while crossing the kalu sanka
ಕರ್ನಾಟಕ6 hours ago

Drowned In Water: ಕಾಲು ಸಂಕ ದಾಟುವಾಗ ನೀರಲ್ಲಿ ಕೊಚ್ಚಿ ಹೋದ ಮಹಿಳೆ!

Fans came from Japan to Hyderabad to watch Prabhas starrer Kalki 2898 AD
ಕರ್ನಾಟಕ6 hours ago

Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

India's open-bus parade
ಪ್ರಮುಖ ಸುದ್ದಿ6 hours ago

India’s open-bus parade : ಮುಂಬೈನಲ್ಲಿ ನಡೆದ ಭಾರತ ಕ್ರಿಕೆಟ್​ ತಂಡದ ವಿಜಯೋತ್ಸವ ಕಾರ್ಯಕ್ರಮದ ಚಿತ್ರಗಳು ಇಲ್ಲಿವೆ

Dr Jitendra Singh
ದೇಶ7 hours ago

2025ರ ವೇಳೆಗೆ ಬಾಹ್ಯಾಕಾಶ, ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್;‌ ಕೇಂದ್ರ ಸಚಿವ ಮಹತ್ವದ ಘೋಷಣೆ

Rohit Sharma
ಕ್ರಿಕೆಟ್7 hours ago

Rohit Sharma : ವಾಂಖೆಡೆ ಸ್ಟೇಡಿಯಮ್​ನಲ್ಲಿ ಡಾನ್ಸ್ ಮಾಡಿದ ರೋಹಿತ್ ಶರ್ಮಾ

Mukesh Ambani
ದೇಶ8 hours ago

Mukesh Ambani: ಸೋನಿಯಾ ಗಾಂಧಿಯನ್ನು ಮಗನ ಮದುವೆಗೆ ಆಹ್ವಾನಿಸಿದ ಮುಕೇಶ್‌ ಅಂಬಾನಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ11 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ13 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ14 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ16 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ16 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ18 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ19 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

ಟ್ರೆಂಡಿಂಗ್‌