SP Balasubrahmanyam: ಕಂಠಸಿರಿಯಿಂದಲೇ ಚಿತ್ರರಂಗದ ಸಿರಿ ಹೆಚ್ಚಿಸಿದ ಎಸ್​.ಪಿ. ಬಾಲಸುಬ್ರಹ್ಮಣ್ಯಮ್ ಜನುಮದಿನ ಇಂದು - Vistara News

ಸ್ಯಾಂಡಲ್ ವುಡ್

SP Balasubrahmanyam: ಕಂಠಸಿರಿಯಿಂದಲೇ ಚಿತ್ರರಂಗದ ಸಿರಿ ಹೆಚ್ಚಿಸಿದ ಎಸ್​.ಪಿ. ಬಾಲಸುಬ್ರಹ್ಮಣ್ಯಮ್ ಜನುಮದಿನ ಇಂದು

SP Balasubrahmanyam: ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ, ತುಳು, ಪಂಜಾಬಿ, ಮರಾಠಿ ಹೀಗೆ ದೇಶದ ಎಲ್ಲ ಭಾಷೆಗಳಲ್ಲೂ ಎಸ್‌ಪಿಬಿ ಹಾಡಿದ್ದಾರೆ. ಐದು ದಶಕಗಳ ಅವಧಿಯಲ್ಲಿ 45 ಸಾವಿರ ಹಾಡುಗಳನ್ನು ಹಾಡುವುದೆಂದರೆ ಹುಡುಗಾಟವೇನಲ್ಲ. ಅದೇ ಕಾಲಕ್ಕೆ ಎಲ್ಲ ದಿಗ್ಗಜ ಸಂಗೀತ ನಿರ್ದೇಶಕರ ಜತೆ ಕೆಲಸ ಮಾಡಿದ್ದಾರೆ. ಅದರಲ್ಲೂ ತಮಿಳಿನಲ್ಲಿ ಇಳಯರಾಜಾ-ಎಸ್‌ಪಿಬಿ-ರಜಿನಿಕಾಂತ್ ಜೋಡಿ ಎಲ್ಲಡೆ ಮೋಡಿ ಮಾಡಿತ್ತು. ಕನ್ನಡದಲ್ಲೂ ಹಂಸಲೇಖ-ಎಸ್‌ಪಿಬಿ- ರವಿಚಂದ್ರನ್ ಜೋಡಿಗೆ ಇಂಥದ್ದೇ ಫ್ಯಾನ್ ಕ್ರೇಜ್ ಇತ್ತು.

VISTARANEWS.COM


on

SP Balasubrahmanyam Birth Anniversary Awards won
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಎಸ್​.ಪಿ. ಬಾಲಸುಬ್ರಹ್ಮಣ್ಯಮ್ (SP Balasubrahmanyam). ಭಾರತ ಕಂಡ ಶ್ರೇಷ್ಠ ಗಾಯಕರಲ್ಲಿ ಒಬ್ಬರು. ಇಂದು (ಜೂನ್ 4) ಅವರ ಜನ್ಮದಿನ. ಅವರು ಇಂದು ಇದ್ದಿದ್ದರೆ 78ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ವಿವಿಧ ಭಾಷೆಗಳಲ್ಲಿ 40,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಎಸ್.ಪಿ.ಬಿ ನಾಲ್ಕು ಭಾಷೆಗಳಲ್ಲಿ ಒಟ್ಟು 06 ರಾಷ್ಟ್ರ ಪ್ರಶಸ್ತಿಗಳನ್ನು ಪಡೆದಿದ್ದರು. 25 ಬಾರಿ ಆಂಧ್ರಪ್ರದೇಶ ಸರ್ಕಾರದ ನಂದಿ ಪ್ರಶಸ್ತಿಯನ್ನು ಪಡೆದಿದ್ದು ಮತ್ತೊಂದು ದಾಖಲೆ. ಹಲವು ವಿಶ್ವ ವಿದ್ಯಾಲಯಗಳ ಡಾಕ್ಟರೇಟ್ ಗೌರವ ಕೂಡ ಸಿಕ್ಕಿದೆ.

ಮದ್ರಾಸ್​ನಲ್ಲಿ 1946ರಲ್ಲಿ ಜೂನ್​ 4ರಂದು ಎಸ್​.ಪಿ. ಬಾಲಸುಬ್ರಹ್ಮಣ್ಯಮ್ ಅವರು ಜನಿಸಿದರು. ಇಂಜಿನಿಯರ್ ಆಗಬೇಕು ಎಂದು ಅವರು ಕನಸು ಕಂಡಿದ್ದರು. ಅವರಿಗೆ ಸಂಗೀತದ ಬಗ್ಗೆ ಆಸಕ್ತಿ ಇತ್ತು. ಎಸ್​ಪಿಬಿ ಮೊದಲು ಹಾಡಿದ್ದು 1966ರಲ್ಲಿ. ಅವರ ಮೊದಲ ಗಾಯನ ಮೂಡಿ ಬಂದಿದ್ದು ತೆಲುಗಿನಲ್ಲಿ. ನಂತರ ಅವರು ಕನ್ನಡಕ್ಕೂ ಕಾಲಿಟ್ಟರು.

ಎಸ್‌ಪಿಬಿ ಎಂದೇ ಖ್ಯಾತರಾಗಿದ್ದ ಎಸ್‌ ಪಿ ಬಾಲುಸುಬ್ರಹ್ಮಣ್ಯಂ (SPB) ಅವರು ತಮ್ಮ ಕಂಠಸಿರಿಯಿಂದಲೇ ಭಾರತೀಯ ಚಿತ್ರರಂಗದ ಶ್ರೀಮಂತಿಕೆಯನ್ನು ಹೆಚ್ಚಿಸಿದರು. ಅದರಲ್ಲೂ ದಕ್ಷಿಣ ಭಾರತದ ಚಿತ್ರರಂಗವನ್ನು ಎಸ್‌ಪಿಬಿ ಅವರನ್ನು ಹೊರಗಿಟ್ಟು ನೋಡಲು ಸಾಧ್ಯವೇ ಇಲ್ಲ. ಸುಮಾರು ಐದು ದಶಕಗಳ ಕಾಲ ಅವರು ಕೇಳುಗರನ್ನು ರಂಜಿಸಿದರು. ಸಮ್ಮೋಹನಗೊಳಿಸಿದರು! ಅದುವರೆಗೂ ಬಾಲು ಸಿನಿಮಾಗಳಲ್ಲಿ ಸಣ್ಣ ಪುಟ್ಟ ರೋಲ್‌ ಮಾಡುತ್ತಿದ್ದುದಿತ್ತು. ಇಂಥದೇ ಒಂದು ಕ್ಯಾಮಿಯೋ ರೋಲ್‌ ಶೂಟ್‌ ಮಾಡುತ್ತಿದ್ದ ಸಂದರ್ಭದಲ್ಲಿ ತರುಣ ನಿರ್ದೇಶಕ ವಸಂತ್‌ ಇವರನ್ನು ಗಮನಿಸಿದರು. ‘ಎಷ್ಟೊಂದು ಕ್ಯಾಶುಯಲ್ಲಾಗಿ, ಕ್ಯಾಮೆರಾ ಎದುರಿಗಿಲ್ಲ ಎಂಬಂತೆ ಇರುತ್ತಾರಲ್ಲʼ ಎನಿಸಿತು ಅವರಿಗೆ. ನಂತರ ಅವರನ್ನೇ ಮನಸ್ಸಿನಲ್ಲಿಟ್ಟುಕೊಂಡು ಅನಂತು ಜತೆ ಸೇರಿ ಒಂದು ಸ್ಕ್ರಿಪ್ಟ್‌ ರಚಿಸಿದರು.

ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ, ತುಳು, ಪಂಜಾಬಿ, ಮರಾಠಿ ಹೀಗೆ ದೇಶದ ಎಲ್ಲ ಭಾಷೆಗಳಲ್ಲೂ ಎಸ್‌ಪಿಬಿ ಹಾಡಿದ್ದಾರೆ. ಐದು ದಶಕಗಳ ಅವಧಿಯಲ್ಲಿ 45 ಸಾವಿರ ಹಾಡುಗಳನ್ನು ಹಾಡುವುದೆಂದರೆ ಹುಡುಗಾಟವೇನಲ್ಲ. ಅದೇ ಕಾಲಕ್ಕೆ ಎಲ್ಲ ದಿಗ್ಗಜ ಸಂಗೀತ ನಿರ್ದೇಶಕರ ಜತೆ ಕೆಲಸ ಮಾಡಿದ್ದಾರೆ. ಅದರಲ್ಲೂ ತಮಿಳಿನಲ್ಲಿ ಇಳಯರಾಜಾ-ಎಸ್‌ಪಿಬಿ-ರಜಿನಿಕಾಂತ್ ಜೋಡಿ ಎಲ್ಲಡೆ ಮೋಡಿ ಮಾಡಿತ್ತು. ಕನ್ನಡದಲ್ಲೂ ಹಂಸಲೇಖ-ಎಸ್‌ಪಿಬಿ- ರವಿಚಂದ್ರನ್ ಜೋಡಿಗೆ ಇಂಥದ್ದೇ ಫ್ಯಾನ್ ಕ್ರೇಜ್ ಇತ್ತು. ಎಲ್ಲ ಭಾಷೆ ಚಿತ್ರರಂಗದ ಉತ್ಕೃಷ್ಟ ಸಂಗೀತ ನಿರ್ದೇಶಕರ ಜತೆ ಎಸ್‌ಪಿಬಿ ಕೆಲಸ ಮಾಡಿದ್ದಾರೆ. ಹಳೆಯ ಮ್ಯೂಸಿಕ್ ಡೈರೆಕ್ಟರ್‌ಗಳಿಂದ ಹಿಡಿದು ಹೊಸ ಕಾಲದ ಮ್ಯೂಸಿಕ್‌ ಡೈರೆಕ್ಟರ್‌ಗಳವರೆಗೂ ಎಸ್‌ಪಿಬಿ ಅವರ ಗೋಲ್ಡ್ ವಾಯ್ಸ್ ಸೆರೆ ಹಿಡಿದಿದೆ.

ಇದನ್ನೂ ಓದಿ: S. P. Balasubrahmanyam: ಎಸ್‌ ಪಿ ಬಾಲುಸುಬ್ರಹ್ಮಣ್ಯಂ ಸಾವಿಗೆ ನಾನೂ ಒಬ್ಬ ಕಾರಣ ಎಂದ ಹಿರಿಯ ನಟ!

ಹುಟ್ಟಿದ್ದು ಕೋನೆಟಂಪೇಟೆಯಲ್ಲಿ…

ಎಸ್‌ಪಿಬಿ ಅವರು 1946ರ ಜೂನ್ 4ರಂದು ಇಂದಿನ ತಮಿಳುನಾಡಿನ ಕೋನೆಟಂಪೇಟೆಯಲ್ಲಿ ಜನಿಸಿದರು. ತಂದೆ ಎಸ್ ಬಿ ಸಾಂಬಮೂರ್ತಿ. ಅವರು ಉತ್ತಮ ಸಂಗೀತಗಾರರಾಗಿದ್ದರು ಮತ್ತು “ಹರಿಕಥಾ” ವಿದ್ವಾಂಸರಾಗಿದ್ದರು. ಸಹಜವಾಗಿಯೂ ಇದು ಬಾಲಕ ಎಸ್‌ಪಿಬಿ ಮೇಲೂ ಪ್ರಭಾವ ಬೀರಿತು. ಆದರೆ, ಬಾಲ್ಯದಲ್ಲಿ ಅವರೇನೂ ಶಾಸ್ತ್ರೀಯ ಸಂಗೀತವನ್ನು ಕಲಿತಿರಲಿಲ್ಲ. ಎಂಜಿನಿಯರಿಂಗ್ ಡಿಪ್ಲೋಮಾ ಮುಗಿಯುತ್ತಿದ್ದಂತೆ ಸಾರ್ವಜನಿಕವಾಗಿ ಸ್ಪರ್ಧೆಗಳಲ್ಲಿ ಅವರು ಹಾಡುತ್ತಿದ್ದರು.

ಚೆನ್ನೈನಲ್ಲಿ ನಡೆದ ಸ್ಪರ್ಧೆಯೊಂದರಲ್ಲಿ ಎಸ್‌ಪಿಬಿ ಭಾಗವಹಿಸಿಿದ್ದರು. ಸ್ಪರ್ಧೆಯಲ್ಲಿ ಗೆದ್ದ ಬಾಲು ಅವರಿಗೆ ಮ್ಯೂಸಿಕ್ ಡೈರೆಕ್ಟರ್ ಎಸ್ ಪಿ ಕೋದಂಡಪಾಣಿ ಅವರು ಬಹುಮಾನ ವಿತರಿಸಿದರು. ಆ ಬಳಿಕ 1966ರಲ್ಲಿ ತೆರೆ ಕಂಡ ಶ್ರೀ ಶ್ರೀ ಶ್ರೀ ಮರ್ಯಾದಾ ರಾಮಣ್ಣ ಚಿತ್ರದಲ್ಲಿ ಹಾಡಲು ಎಸ್‌ಪಿಬಿ ಅವರಿಗೆ ಕೋದಂಡಪಾಣಿ ಅವರು ಅವಕಾಶ ನೀಡಿದರು. ಅಲ್ಲಿಂದ ಎಸ್‌ಪಿಬಿ ಹಿಂದೆ ತಿರುಗಿ ನೋಡಲಿಲ್ಲ. 1967ರಲ್ಲಿ ಅವರು ಕನ್ನಡದಲ್ಲಿ ಮೊದಲ ಹಾಡು ಹಾಡಿದರು. ನಕ್ಕರೆ ಅದೇ ಸ್ವರ್ಗದ ಚಿತ್ರದ ಮೂಲಕ ಕನ್ನಡಕ್ಕೂ ಪರಿಚಯಗೊಂಡರು. ಆ ಬಳಿಕ ಕನ್ನಡದ ಮನೆ ಮಗನಾಗಿಯೇ ಬೆಳೆದರು. ಎಸ್‌ಪಿಬಿ ಅವರು, ಒಂದೇ ದಿನದಲ್ಲಿ ತೆಲುಗು ಮತ್ತು ತಮಿಳಿನಲ್ಲಿ 19 ಸಾಂಗ್ಸ್ ರೆಕಾರ್ಡ್ ಮಾಡಿದ್ದಾರೆ. ಆನಂದ್ ಮತ್ತು ಮಿಲಿಂದ್ ಅವರ ಸಂಗೀತ ನಿರ್ದೇಶನದಲ್ಲಿ ಹಿಂದಿಯಲ್ಲಿ ಒಂದೇ ದಿನದಲ್ಲಿ 16 ಹಾಡುಗಳನ್ನು ರೆಕಾರ್ಡ್ ಮಾಡಿರುವುದು ಈವರೆಗೂ ದಾಖಲೆಯಾಗಿಯೇ ಉಳಿದಿದೆ!

ಕನ್ನಡದ ಎಲ್ಲ ನಟರಿಗೂ ಹಾಡು

ಡಾ. ವಿಷ್ಣುವರ್ಧನ್ ಅವರಿಂದ ಹಿಡಿದು ಪುನೀತ್ ರಾಜಕುಮಾರ್ ಅವರವರೆಗೂ ಎಲ್ಲ ನಾಯಕ ನಟರಿಗಾಗಿ ಹಾಡಿದ್ದಾರೆ. ಪುನೀತ್ ರಾಜಕುಮಾರ್ ನಿರ್ಮಾಣದ ಮಾಯಾಬಜಾರ್ ಚಿತ್ರದಲ್ಲಿ ಎಸ್‌ಪಿಬಿ ಅವರು ಲೋಕ ಮಾಯಾ ಬಜಾರು ಎಂಬ ಗೀತೆಯನ್ನು ಹಾಡಿದ್ದರು ಮತ್ತು ಇದರಲ್ಲಿ ಪುನೀತ್ ಅವರು ಅಭಿನಯಿಸಿದ್ದರು. ಕನ್ನಡದ ಮಟ್ಟಿಗೆ ಇದೇ ಕೊನೆಯ ಹಾಡು ಅವರದ್ದು. ಈ ಚಿತ್ರವು 2016ರಲ್ಲಿ ತೆರೆಗೆ ಬಂದಿತ್ತು. ಆ ಬಳಿಕ ಅವರು ಕೊರೊನಾ ಜಾಗೃತಿಗಾಗಿ ಕನ್ನಡದಲ್ಲಿ ಹಾಡು ಹಾಡಿದರು.

ವಿಷ್ಣುವರ್ಧನ್ ಅವರ ಚಿತ್ರಗಳಲ್ಲಿ ಎಸ್‌ಪಿಬಿ ಹಾಡುವುದು ಪಕ್ಕಾ. ಒಂದು ರೀತಿಯಲ್ಲಿ ವಿಷ್ಣು ಶರೀರವಾದರೆ, ಎಸ್‌ಪಿಬಿ ಅವರು ಶಾರೀರವಾಗಿದ್ದರು. ರೆಬೆಲ್ ಸ್ಟಾರ್ ಅಂಬರೀಷ್, ಶಶಿಕುಮಾರ್, ರವಿಚಂದ್ರನ್, ಶಂಕರ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್, ಉಪೇಂದ್ರ, ಶ್ರೀನಾಥ ಹೀಗೆ… ಪಟ್ಟಿ ಬೆಳೆಯುತ್ತದೆ. ಅದೇ ರೀತಿ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿಯಲ್ಲೂ ಎಲ್ಲ ಸ್ಟಾರ್ ನಟರು, ಘಟಾನುಘಟಿ ಕಲಾವಿದರಿಗೆ ಹಾಡಿದ್ದಾರೆ ಎಸ್‌ಪಿಬಿ.

ಸಂಗೀತ ನಿರ್ದೇಶಕ ಉಪೇಂದ್ರ ಕುಮಾರ್ ಅವರೊಂದಿಗೆ ಎಸ್‌ಪಿಬಿ ವಿಶಿಷ್ಟ ದಾಖಲೆಯೊಂದನ್ನು ಬರೆದಿದ್ದಾರೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 9 ಗಂಟೆವರೆಗೆ, ಅವರ ನಿರ್ದೇಶನದಲ್ಲಿ ಒಟ್ಟು 17 ಹಾಡುಗಳನ್ನು ರೆಕಾರ್ಡ್ ಮಾಡಿ ಕೊಟ್ಟಿದ್ದಾರೆ. ಇದೊಂದ ವಿಶಿಷ್ಟ ದಾಖಲೆಯಾಗಿ ಉಳಿದಿದೆ. ಗಾಯನದೊಂದಿಗೆ ಎಸ್‌ಪಿಬಿ ಕನ್ನಡ, ತೆಲುಗು, ಹಿಂದಿ ಮತ್ತು ತಮಿಳು ಭಾಷೆಯಲ್ಲಿ ಸುಮಾರು 45 ಸಿನಿಮಾಗಳಿಗೆ ಸಂಗೀತ ಸಂಯೋಜನೆ ಕೂಡ ಮಾಡಿದ್ದಾರೆ. ಇಷ್ಟೇ ಸಂಖ್ಯೆಯ ಚಿತ್ರಗಳಲ್ಲಿ ನಟಿಸಿದ್ದಾರೆ ಕೂಡ.

ಇದನ್ನೂ ಓದಿ: Legend Singer SPB | ತಮ್ಮ ಕಂಠಸಿರಿಯಿಂದಲೇ ಚಿತ್ರರಂಗದ ಸಿರಿ ಹೆಚ್ಚಿಸಿದ ಎಸ್‌ಪಿಬಿ

ಎಸ್‌ಪಿಗಾಗಿ ಡಾ.ರಾಜ್ ಹಾಡಿದ್ದರು

ಇದೊಂದು ಅಪರೂಪದ ಘಟನೆ. ಕನ್ನಡದಲ್ಲಿ ಮುದ್ದಿನಮಾವ ಸಿನಿಮಾದಲ್ಲಿ ಶಶಿಕುಮಾರ್ ಜತೆ ಎಸ್‌ ಪಿ ಬಾಲಸುಬ್ರಹ್ಮಣ್ಯ ಅವರು ನಟಿಸಿದ್ದರು. ಈ ಚಿತ್ರದಲ್ಲಿ ದೀಪಾವಳಿ ದೀಪಾವಳಿ ಗೋವಿಂದ ಲೀಲಾವಳಿ ಎಂಬ ಹಾಡು ಇದೆ. ಈ ಹಾಡಿನಲ್ಲಿ ಶಶಿಕುಮಾರ್ ಅವರಿಗೆ ಎಸ್‌ಪಿಬಿ ಹಾಡಿದ್ದಾರೆ. ಎಸ್‌ಪಿಬಿಗೆ ಯಾರು ಹಾಡಬೇಕೆಂದು ಯೋಚನೆ ಮಾಡಿದಾಗ ಹೊಳೆದಿದ್ದು ಗಾನಗಂಧರ್ವ ಡಾ. ರಾಜ್. ರಾಘವೇಂದ್ರ ರಾಜಕುಮಾರ್ ಅವರ ಮೂಲಕ ಈ ವಿಷಯವನ್ನು ಡಾ.ರಾಜ್ ಅವರ ಕಿವಿಗೆ ಹಾಕಿದರಂತೆ. ಆಗ ರಾಜಕುಮಾರ್ ಅವರು ಅಯ್ಯೋ ಅದು ನನ್ನ ಪುಣ್ಯ ಎಂದು ಬಂದು ಎಸ್‌ಪಿಗೆ ಹಾಡಿದರಂತೆ. ಈ ವಿಷಯವನ್ನು ಸ್ವತಃ ಎಸ್‌ಪಿಬಿ ಅವರು ರಿಯಾಲಿಟಿ ಶೋವೊಂದರಲ್ಲಿ ಹೇಳಿಕೊಂಡಿದ್ದಾರೆ. ಹಿನ್ನೆಲೆ ಗಾಯನದಲ್ಲಿ ಎಸ್‌ಪಿಬಿ ಮತ್ತು ಡಾ.ರಾಜ್ ಇಬ್ಬರೂ ಮಹಾ ಪರ್ವತ. ಅಂಥವರು ಇನ್ನೊಬ್ಬರಿಗೆ ಸ್ವರವಾಗುವುದೆಂದರೆ ಅದು ಮಹಾ ಸಂಗಮವೇ ಸರಿ. ಬಹುಶಃ ಇದೊಂದು ಅಪರೂಪದ ಘಟನೆಯಾಗಿ ಇತಿಹಾಸ ಸೇರಿದೆ.

ಕನ್ನಡಿಗರಿಂದ ವಿಶೇಷ ಪ್ರೀತಿ

ಬಹುಶಃ ಎಸ್ಪಿಬಿ ಈ ವಿಷಯವನ್ನು ಸಾಕಷ್ಟು ಬಾರಿ ಹೇಳಿಕೊಂಡಿದ್ದಾರೆ. ಅವರಿಗೆ ಕರ್ನಾಟಕ, ಕನ್ನಡ ಮತ್ತು ಕನ್ನಡಿಗರು ಎಂದರೆ ಅಚ್ಚುಮೆಚ್ಚು. ಆಂಧ್ರದವರಾದರೂ ಕನ್ನಡಿಗರು ಅವರನ್ನು ತಮ್ಮವರೆಂದೇ ಪ್ರೀತಿಸಿದರು. ಅದಕ್ಕಾಗಿ ಅವರು ಆಗಾಗ, ಕನ್ನಡಿಗರಿಂದ ನನಗೇ ವಿಶೇಷವಾದ ಪ್ರೀತಿ ಸಿಕ್ಕಿದೆ. ಈ ಪ್ರೀತಿಯ ಋಣವನ್ನು ತೀರಿಸಲು ಸಾಧ್ಯವಿಲ್ಲ ಎನ್ನುತ್ತಿದ್ದರು.

ಎದೆ ತುಂಬಿ ಹಾಡಿದರು

ಎಸ್‌ಪಿಬಿ ಹಾಡಲು ನಿಂತರೆ ಸಂಗೀತದ ರಸದೌತಣ. ಅಲ್ಲಿ ಯಾವುದಕ್ಕೂ ಕೊರತೆ ಇಲ್ಲ. ಅವರು ಹಾಡಿದ ಅಷ್ಟೂ ಭಾಷೆಗಳ ಅಷ್ಟೂ ಸಾಂಗುಗಳೇ ಇದಕ್ಕೆ ನಿದರ್ಶನ. ಗಾಯನದಲ್ಲಿ ಮೇರು ಪರ್ವತವೇ ಆದ ಎಸ್‌ಪಿಬಿ, ಕನ್ನಡದಲ್ಲಿ ಎದೆ ತುಂಬಿ ಹಾಡಿದೆನು ಎಂಬ ವಿಶಿಷ್ಟ ಸಂಗೀತ ರಿಯಾಲ್ಟಿ ಶೋವನ್ನು ದೂರದರ್ಶನಕ್ಕಾಗಿ ನಡೆಸಿಕೊಂಡು ಬರುತ್ತಿದ್ದರು. ಈ ಶೋ ಮೂಲಕ ಅನೇಕ ಪ್ರತಿಭಾವಂತ ಗಾಯಕ, ಗಾಯಕಿಯರನ್ನು ಸಂಗೀತ ಲೋಕಕ್ಕೆ ಪರಿಚಯಿಸಿದ್ದಾರೆ. ಬೇರೆ ಭಾಷೆಗಳಲ್ಲೂ ಇದೇ ರೀತಿಯ ಪ್ರೋಗ್ರಾಮ್ ನಡೆಸಿ ಕೊಡುತ್ತಿದ್ದರು.

ಅರಸಿ ಬಂದ ಬಿರುದು, ಸನ್ಮಾನ

ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಸೇರಿ ವಿವಿಧ ಭಾಷೆಗಳಲ್ಲಿ 45 ಸಾವಿರಕ್ಕೂ ಅಧಿಕ ಹಾಡುಗಳು ಎಸ್‌ಪಿಬಿ ಅವರ ಕಂಠಸಿರಿಯಲ್ಲಿ ಅರಳಿವೆ. ಶಂಕರಾಭರಣಂ, ಪಂಚಾಕ್ಷರಿ ಗವಾಯಿ(ಕನ್ನಡ), ಸಾಗರ ಸಂಗಮಂ, ಸ್ವಾತಿ ಮುತ್ಯಂ, ರುದ್ರವೀಣ, ಏಕ್ ದೂಜೇ ಕೇಲಿಯೇ ಚಿತ್ರದ ಹಾಡುಗಳಿಗೆ 6 ಬಾರಿ ಅತ್ಯುತ್ತಮ ಗಾಯಕ ಎಂಬ ನ್ಯಾಷನಲ್ ಅವಾರ್ಡ್ ಬಂದಿದೆ. ಆಂಧ್ರ ಪ್ರದೇಶ ಸರ್ಕಾರ ನೀಡುವ ನಂದಿ ಪ್ರಶಸ್ತಿಯನ್ನು 25 ಬಾರಿ ಪಡೆದುಕೊಂಡಿದ್ದಾರೆ. ಇದೊಂದು ದಾಖಲೆಯೇ ಸರಿ. ಕರ್ನಾಟಕ, ಕೇರಳ, ತಮಿಳುನಾಡು ರಾಜ್ಯ ಸರ್ಕಾರಗಳು ನೀಡುವ ಪ್ರಶಸ್ತಿಯೂ ಎಸ್ಪಿಬಿ ಅವರನ್ನು ಹುಡುಕಿಕೊಂಡು ಬಂದಿವೆ.

ಎಲ್ಲಕ್ಕಿಂತ ಹೆಚ್ಚಾಗಿ ಭಾರತ ಸರ್ಕಾರದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳು ಎನಿಸಿಕೊಂಡಿರುವ ಪದ್ಮಶ್ರೀ ಮತ್ತು ಪದ್ಮಭೂಷಣಗಳೂ ಅವರಿಗೆ ಸಂದಿವೆ. ಈ ಬಿರುದು ಸನ್ಮಾನಗಳಿಗಿಂತಲೂ ಇಡೀ ಭಾರತದ ಸಂಗೀತ ಪ್ರಿಯರ ಹೃದಯದಲ್ಲಿ ಅವರಿಗೆ ಬೇರೆಯದ್ದೇ ಸ್ಥಾನವಿದೆ. ನಾಲ್ಕು ಭಾಷೆಗಳಿಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಏಕೈಕ ಗಾಯಕ ಇವರು. ಈ ಸಾಧನೆ ಗಾಯಕರಷ್ಟೇ ಅಲ್ಲ ಬೇರಾರೂ ಮಾಡಿಲ್ಲ ಕೂಡ. ಇಷ್ಟು ಮಾತ್ರವಲ್ಲದೇ, ತಮಿಳುನಾಡು ಸರ್ಕಾರವು ಕಲೈಂಮಣಿ ಪುರಸ್ಕಾರ ನೀಡಿದರೆ, ಪೊಟ್ಟಿ ಶ್ರೀರಾಮುಲು ತೆಲುಗು ವಿವಿ ಅವರಿಗೆ 1999ರಲ್ಲಿ ಗೌರವ ಡಾಕ್ಟರೇಟ್ ನೀಡಿತು. ಅದೇ ವರ್ಷ ಮಧ್ಯಪ್ರದೇಶ ಸರ್ಕಾರವು ಲತಾ ಮಂಗೇಶ್ಕರ್ ಪುರಸ್ಕಾರ ಪ್ರದಾನ ಮಾಡಿತು. ಸತ್ಯಂಬಾ ಮತ್ತು ಆಂಧ್ರ, ಅನಂತಪುರ ವಿವಿಗಳು ಗೌರವ ಡಾಕ್ಟರೇಟ್ ನೀಡಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada New Movie: ಮೊಬೈಲ್ ಮುಂಚಿನ ಪ್ರೇಮಕಥೆ ‘ಕಾಗದ’ ಜುಲೈ 5ರಂದು ಬಿಡುಗಡೆ

Kannada New Movie: ಮೊಬೈಲ್ ಬರುವ ಮುಂಚೆ ನಡೆದ ಪ್ರೇಮಕಥೆಯಾದ “ಕಾಗದ” ಚಿತ್ರ ಇದೇ ವಾರ ಜುಲೈ 5 ರಂದು ತೆರೆಗೆ ಬರುತ್ತಿದೆ. ಅರುಣ್ ಕುಮಾರ್ ಆಂಜನೇಯ ಅವರ ನಿರ್ಮಾಣದಲ್ಲಿ ರಂಜಿತ್ ನಿರ್ದೇಶಿಸಿದ್ದು, ಆದಿತ್ಯ ಎಂಬ ನೂತನ ಪ್ರತಿಭೆ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಬಾಲನಟಿಯಾಗಿ ಜನಪ್ರಿಯರಾಗಿರುವ ಅಂಕಿತ ಜಯರಾಂ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದು, ನೇಹಾ ಪಾಟೀಲ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Kannada New Movie kagada film released on 5th July
Koo

ಬೆಂಗಳೂರು: ಅರುಣ್ ಕುಮಾರ್ ಆಂಜನೇಯ ಅವರ ನಿರ್ಮಾಣದಲ್ಲಿ ರಂಜಿತ್ ನಿರ್ದೇಶಿಸಿರುವ ಮೊಬೈಲ್ ಬರುವ ಮುಂಚೆ ನಡೆದ ಪ್ರೇಮಕಥೆಯಾದ “ಕಾಗದ” ಚಿತ್ರ (Kannada New Movie) ಇದೇ ಜುಲೈ 5ರಂದು ತೆರೆಗೆ ಬರುತ್ತಿದೆ.

“ಕಾಗದ” ಮೊಬೈಲ್ ಬರುವ ಮುಂಚೆ ನಡೆದ ಪ್ರೇಮಕಥೆ. 2005 ರ ಕಾಲಘಟ್ಟದ ಕಥೆಯೂ ಕೂಡ. ಹಳ್ಳಿಹಳ್ಳಿಗಳ ನಡುವಿನ ವೈಷಮ್ಯದ ನಡುವೆ ಅರಳಿದ ಪ್ರೇಮಕಥೆಯೂ ಹೌದು.

ಆದಿತ್ಯ ಎಂಬ ನೂತನ ಪ್ರತಿಭೆ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಬಾಲನಟಿಯಾಗಿ ಜನಪ್ರಿಯರಾಗಿರುವ ಅಂಕಿತ ಜಯರಾಂ “ಕಾಗದ” ಚಿತ್ರದ ನಾಯಕಿ. ನೇಹಾ ಪಾಟೀಲ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಲ ರಾಜ್ವಾಡಿ, ನೀನಾಸಂ ಅಶ್ವಥ್, ಮಠ ಕೊಪ್ಪಳ, ಶಿವಮಂಜು ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: IND vs SA : ಭಾರತ ವಿರುದ್ಧ ಟಿ20 ಸರಣಿಗೆ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಪ್ರಕಟ

ನಾಲ್ಕು ಹಾಡುಗಳಿರುವ “ಕಾಗದ” ಚಿತ್ರಕ್ಕೆ ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಹಣ ಹಾಗೂ ಪವನ್ ಗೌಡ ಸಂಕಲನ ಈ ಚಿತ್ರಕ್ಕಿದೆ.

Continue Reading

ಕರ್ನಾಟಕ

Kannada New Movie: ಪ್ರವೀಣ್ ತೇಜ್ ಅಭಿನಯದ ʼಜಿಗರ್ ಚಿತ್ರ ಜುಲೈ 5ರಂದು ಬಿಡುಗಡೆ

Kannada New Movie: ಪ್ರವೀಣ್ ತೇಜ್ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ” ಜಿಗರ್” ಚಿತ್ರ ಈ ವಾರ (ಜುಲೈ 5) ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಯು.ಕೆ. ಪ್ರೊಡಕ್ಷನ್ಸ್ ಲಾಂಛನದಲ್ಲಿ ಪೂಜಾ ವಸಂತಕುಮಾರ್ ನಿರ್ಮಿಸಿರುವ, ಸೂರಿ ಕುಂದರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದು, ಈಗಾಗಲೇ ರಿತ್ವಿಕ್ ಮುರಳಿಧರ್ ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಜನಮನ ಗೆದ್ದಿದೆ.

VISTARANEWS.COM


on

Praveen Tej starrer Jigar released on July 5
Koo

ಬೆಂಗಳೂರು: ಯು.ಕೆ. ಪ್ರೊಡಕ್ಷನ್ಸ್ ಲಾಂಛನದಲ್ಲಿ ಪೂಜಾ ವಸಂತಕುಮಾರ್ ನಿರ್ಮಿಸಿರುವ, ಸೂರಿ ಕುಂದರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಹಾಗೂ ಪ್ರವೀಣ್ ತೇಜ್ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “ಜಿಗರ್” ಚಿತ್ರ (Kannada New Movie) ಈ ವಾರ ಜುಲೈ 5ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈಗಾಗಲೇ ರಿತ್ವಿಕ್ ಮುರಳಿಧರ್ ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಜನಮನ ಗೆದ್ದಿದೆ. ಚಿತ್ರ ಕೂಡ ಯಶಸ್ವಿಯಾಗುವ ಭರವಸೆ ಚಿತ್ರ ತಂಡಕ್ಕಿದೆ.

ಶಿವಸೇನ ಛಾಯಾಗ್ರಹಣ, ಜ್ಞಾನೇಶ್ ಮಠದ್ ಸಂಕಲನ, ಧನಂಜಯ ಬಿ. ನೃತ್ಯ ನಿರ್ದೇಶನ ಹಾಗೂ ಚೇತನ್ ಡಿಸೋಜ ಅವರ ಸಾಹಸ ನಿರ್ದೇಶನವಿರುವ “ಜಿಗರ್” ಚಿತ್ರಕ್ಕೆ ಸುನೀಲ್ ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಹಾಗೂ ಗಣೇಶ್ ಪರಶುರಾಮ್ ಹಾಡುಗಳನ್ನು ರಚಿಸಿದ್ದಾರೆ.

ಇದನ್ನೂ ಓದಿ: UPSC 2024: ಯುಪಿಎಸ್ಸಿ ಸಿಎಸ್ಇ ಪ್ರಿಲಿಮ್ಸ್ ಫಲಿತಾಂಶ ಪ್ರಕಟ; ಪರಿಶೀಲಿಸುವುದು ಹೇಗೆ?

ಪ್ರವೀಣ್ ತೇಜ್ ಅವರಿಗೆ ನಾಯಕಿಯಾಗಿ ವಿಜಯಶ್ರೀ ನಟಿಸಿದ್ದಾರೆ. ವಿನಯಪ್ರಸಾದ್, ಯಶ್ವಂತ್ ಶೆಟ್ಟಿ, ಬಲರಾಜ್ ವಾಡಿ, ಭವ್ಯ ಪೂಜಾರಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

Continue Reading

ಕರ್ನಾಟಕ

Kabzaa movie: ಅತಿ ಹೆಚ್ಚು ತೆರಿಗೆ ಪಾವತಿ; ಆರ್. ಚಂದ್ರು ನಿರ್ಮಾಣ ಸಂಸ್ಥೆಗೆ ಕೇಂದ್ರದಿಂದ ಪ್ರಶಂಸಾ ಪತ್ರ!

Kabzaa movie: ಆರ್. ಚಂದ್ರು ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿಬಂದ ಪ್ಯಾನ್ ಇಂಡಿಯಾ ಚಿತ್ರ “ಕಬ್ಜ” ದೇಶಾದ್ಯಂತ ಜನಮನ್ನಣೆ ಪಡೆದಿತ್ತು. ಈಗ ಈ ಚಿತ್ರವನ್ನು ನಿರ್ಮಿಸಿದ್ದ ಶ್ರೀ ಸಿದ್ದೇಶ್ವರ ಎಂಟರ್‌ಪ್ರೈಸಸ್ ಸಂಸ್ಥೆ ಅತೀ ಹೆಚ್ಚು ತೆರಿಗೆ ಪಾವತಿಸಿದ ಕೀರ್ತಿಗೆ ಭಾಜನವಾಗಿದೆ. ದಾಖಲೆ ಮೊತ್ತದ ಹಣವನ್ನು‌ “ಕಬ್ಜ” ಚಿತ್ರದ ಸಲುವಾಗಿ ಆರ್. ಚಂದ್ರು ಕೇಂದ್ರ ತೆರಿಗೆ ಇಲಾಖೆಗೆ ಪಾವತಿಸಿದ್ದಾರೆ‌. ಯಾವುದೇ ತೆರಿಗೆ ಉಳಿಸಿಕೊಳ್ಳದೇ ಅಧಿಕ ಮೊತ್ತದ ತೆರಿಗೆಯನ್ನು ಪಾವತಿಸಿರುವುದಕ್ಕಾಗಿ ಕೇಂದ್ರ ಹಣಕಾಸು ಸಚಿವಾಲಯದಿಂದ ಪ್ರಶಂಸಾ ಪತ್ರ ಕೂಡ ದೊರಕಿದೆ.

VISTARANEWS.COM


on

Kabzaa movie Appreciation Letter from Union Finance Ministry to Sri siddeshwar Enterprises
Koo

ಬೆಂಗಳೂರು: ಆರ್. ಚಂದ್ರು ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿಬಂದ ಪ್ಯಾನ್ ಇಂಡಿಯಾ ಚಿತ್ರ “ಕಬ್ಜ” ದೇಶಾದ್ಯಂತ ಜನಮನ್ನಣೆ ಪಡೆದಿತ್ತು. ಈಗ ಈ ಚಿತ್ರವನ್ನು ನಿರ್ಮಿಸಿದ್ದ ಶ್ರೀ ಸಿದ್ದೇಶ್ವರ ಎಂಟರ್‌ಪ್ರೈಸಸ್ ಸಂಸ್ಥೆ ಅತೀ ಹೆಚ್ಚು ತೆರಿಗೆ ಪಾವತಿಸಿದ ಕೀರ್ತಿಗೆ ಭಾಜನವಾಗಿದೆ. ದಾಖಲೆ ಮೊತ್ತದ ಹಣವನ್ನು‌ “ಕಬ್ಜ” ಚಿತ್ರದ (Kabzaa movie) ಸಲುವಾಗಿ ಆರ್. ಚಂದ್ರು ಕೇಂದ್ರ ತೆರಿಗೆ ಇಲಾಖೆಗೆ ಪಾವತಿಸಿದ್ದಾರೆ‌.

ಯಾವುದೇ ತೆರಿಗೆ ಉಳಿಸಿಕೊಳ್ಳದೇ ಅಧಿಕ ಮೊತ್ತದ ತೆರಿಗೆಯನ್ನು ಪಾವತಿಸಿರುವುದಕ್ಕಾಗಿ ಕೇಂದ್ರ ಹಣಕಾಸು ಸಚಿವಾಲಯದಿಂದ ಪ್ರಶಂಸಾ ಪತ್ರ ಕೂಡ ದೊರಕಿದೆ. ಸರ್ಕಾರಕ್ಕೆ ದೊಡ್ಡ ಮೊತ್ತದ ತೆರಿಗೆ ಪಾವತಿಸಿದ ಸಾಲಿಗೆ ಕನ್ನಡದ “ಕಬ್ಜ” ಚಿತ್ರ ಸೇರಿದೆ.

ಇದನ್ನೂ ಓದಿ: Press Day: ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿದ್ದರಾಮಯ್ಯ

ಇತ್ತೀಚೆಗೆ ನಡೆದ ಪ್ರಜಾವಾಣಿ ಕನ್ನಡ ‌ಸಿನಿ ಸಮ್ಮಾನ ಸಮಾರಂಭದಲ್ಲಿ ‌ಅತ್ಯುತ್ತಮ ವಿಎಫ್ಎಕ್ಸ್ ಪೋಸ್ಟ್ ಪ್ರೊಡಕ್ಷನ್ ಹಾಗೂ ಅನಿಮೇಷನ್ ಚಿತ್ರ ಪ್ರಶಸ್ತಿಗೆ “ಕಬ್ಜ” ಚಿತ್ರ ಭಾಜನವಾಗಿದೆ.

ಇದನ್ನೂ ಓದಿ: New Rules: ಐಟಿಆರ್‌ನಿಂದ ಕ್ರೆಡಿಟ್ ಕಾರ್ಡ್‌ವರೆಗೆ; ಈ ತಿಂಗಳಲ್ಲಿ ಹಲವು ಹೊಸ ಬದಲಾವಣೆ

ಈ ಎಲ್ಲಾ ಖುಷಿಯ ವಿಚಾರಗಳ ನಡುವೆ ಆರ್. ಚಂದ್ರು ಅವರ ಆರ್.ಸಿ. ಸ್ಟುಡಿಯೋಸ್ ನಿರ್ಮಾಣದ ಐದು ಚಿತ್ರಗಳಲ್ಲಿ ಒಂದಾದ ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರೈ ಮುಂತಾದವರು ನಟಿಸುತ್ತಿರುವ “ಫಾದರ್” ಚಿತ್ರಕ್ಕೆ ಮೈಸೂರಿನಲ್ಲಿ‌ ಮೊದಲ ಹಂತದ ಚಿತ್ರೀಕರಣ ಅದ್ಧೂರಿಯಾಗಿ ನಡೆಯುತ್ತಿದೆ.

Continue Reading

ಸಿನಿಮಾ

Actor Yash: ರಾಕಿಂಗ್‌ ಸ್ಟಾರ್‌ ಯಶ್‌ ʼಟಾಕ್ಸಿಕ್‌ʼ ಸಿನಿಮಾದಿಂದ ಹೊರ ಬಿತ್ತು ಬಿಗ್‌ ಅಪ್‌ಡೇಟ್‌!

Actor Yash: ʼಕೆಜಿಎಫ್‌ 2ʼ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ ಸುಮಾರು ಒಂದೂವರೆ ವರ್ಷದ ಬಳಿಕ ಯಶ್‌ ಅಭಿನಯದ ʼಟಾಕ್ಸಿಕ್‌ʼ (Toxic) ಸಿನಿಮಾ ಘೋಷಣೆಯಾಗಿದೆ. ಮಲೆಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ.

VISTARANEWS.COM


on

Actor Yash to recreate the 50s and 70s era in Toxic
Koo

ಬೆಂಗಳೂರು: ʼಕೆಜಿಎಫ್‌ʼ ಚಿತ್ರದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿದ ರಾಕಿಂಗ್‌ ಸ್ಟಾರ್‌ ಯಶ್‌ (Actor Yash) ಅವರ ಮುಂದಿನ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ. ʼಕೆಜಿಎಫ್‌ 2ʼ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ ಸುಮಾರು ಒಂದೂವರೆ ವರ್ಷದ ಬಳಿಕ ಯಶ್‌ ಅಭಿನಯದ ʼಟಾಕ್ಸಿಕ್‌ʼ (Toxic) ಸಿನಿಮಾ ಘೋಷಣೆಯಾಗಿದೆ. ಮಲೆಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ನಟ ಯಶ್ ಮತ್ತು ನಯನತಾರಾ ಮೊದಲ ಬಾರಿಗೆ ಜೊತೆಯಾಗುತ್ತಿದ್ದಾರೆ, ಇದರಲ್ಲಿ ಕಿಯಾರಾ ಆಡ್ವಾಣಿ, ಹುಮಾ ಖುರೇಷಿ ಮತ್ತು ಶ್ರುತಿ ಹಾಸನ್ ಕೂಡ ಇದ್ದಾರೆ. ಇದೀಗ ಸಿನಿಮಾ ಕುರಿತು ಹೊಸ ಸಂಗತಿವೊಂದು ವೈರಲ್‌ ಆಗುತ್ತಿದೆ.

ʼಟಾಕ್ಸಿಕ್‌ʼ (Toxic) ಸಿನಿಮಾ 1950- 1970ರ ಘಟ್ಟದಲ್ಲಿ ನಡೆಯುವ ಕಥೆಯಾಗಿದೆ ಎಂದು ವರದಿಯಾಗಿದೆ. ಡ್ರಗ್ಸ್ ಮಾಫಿಯಾ ಹಿನ್ನಲೆಯಲ್ಲಿ ಈ ಚಿತ್ರವು ತಯಾರಾಗುತ್ತಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Samarjit Lankesh: ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಅಭಿನಯದ `ಗೌರಿ’ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

ಮಲೆಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಆರಂಭದಲ್ಲಿ ಸಾಯಿ ಪಲ್ಲವಿ, ಸಂಯುಕ್ತಾ ಮೆನನ್‌ ನಾಯಕಿಯರಾಗಿತ್ತಾರೆ ಎನ್ನಲಾಗಿತ್ತು. ಅದಾದ ಬಳಿಕ ಕರೀನಾ ಕಪೂರ್‌ ಹೆಸರು ಕೇಳಿ ಬಂದಿತ್ತು. ಇತ್ತೀಚೆಗೆ ಬಹುಭಾಷಾ ನಟಿ ಶ್ರುತಿ ಹಾಸನ್‌ ಟಾಕ್ಸಿಕ್‌ ಚಿತ್ರದಲ್ಲಿ ಮುಖ್ಯ ಪಾತ್ರ ನಿರ್ವಹಿಸಲಿದ್ದಾರೆ ಎನ್ನುವ ಸುದ್ದಿಯೂ ಹಬ್ಬಿತ್ತು. ಇದರ ಜತೆಗೆ ಮಲಯಾಳಂ ನಟ ಟೊವಿನೋ ಥಾಮಸ್ ಚಿತ್ರದ ಮುಖ್ಯ ಪಾತ್ರದಲ್ಲಿ ನಟಿಸುತ್ತಾರೆ ಎನ್ನಲಾಗಿದೆ. ಆದರೆ ಚಿತ್ರತಂಡ ಇದುವರೆಗೆ ಇದ್ಯಾವುದನ್ನೂ ಅಧಿಕೃತವಾಗಿ ಹೇಳಿಕೊಂಡಿಲ್ಲ. ಹೀಗಾಗಿ ಸಿನಿ ಪ್ರಿಯರಲ್ಲಿ ಕುತೂಹಲ ಮನೆ ಮಾಡಿದೆ. ಬರೋಬ್ಬರಿ 170 ಕೋಟಿ ರೂಪಾಯಿ ಬಜೆಟ್‌ನ ಈ ಯಶ್‌ (Yash) ಚಿತ್ರ ಡ್ರಗ್‌ ಮಾಫಿಯಾ ಬಗ್ಗೆ ಬೆಳಕು ಚೆಲ್ಲಲಿದೆ ಎಂದು ಮೂಲಗಳು ತಿಳಿಸಿವೆ. 2025ರಲ್ಲಿ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದೆ.

ಕಳೆದ ಡಿಸೆಂಬರ್‌ನಲ್ಲಿ ಭಾರತ, ಮಲೇಶಿಯಾ, ಜಪಾನ್, ನ್ಯೂಜಿಲ್ಯಾಂಡ್, ಆಫ್ರಿಕಾ, ಆಸ್ಟ್ರೇಲಿಯಾ, ರಷ್ಯಾ, ಇಂಗ್ಲೆಂಡ್‌, ಯೂರೋಪ್ ಸೇರಿದಂತೆ ಹಲವೆಡೆ ʼಟಾಕ್ಸಿಕ್‌ʼ ಟೈಟಲ್ ಅದ್ಧೂರಿಯಾಗಿ ರಿವೀಲ್ ಆಗಿತ್ತು. ಇದುವರೆಗೂ ಕನ್ನಡ ಯಾವ ಸಿನಿಮಾದ ಟೈಟಲ್ ಕೂಡ ವಿಶ್ವದಾದ್ಯಂತ ಈ ರೀತಿ ರಿಲೀಸ್ ಆಗಿರಲಿಲ್ಲ. ಈ ಮೂಲಕ ಹಾಲಿವುಡ್ ರೇಂಜ್‌ನಲ್ಲಿ ಸಿನಿಮಾ ರಿಲೀಸ್‌ ಆಗುತ್ತಿದೆ ಎನ್ನುವುದು ಖಚಿತವಾಗಿದೆ.

Continue Reading
Advertisement
Virat Kohli
ಕ್ರಿಕೆಟ್32 mins ago

Virat Kohli: ನನ್ನ ​ಅಹಂಕಾರವೇ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣ ಎಂದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

crimes in karnataka physical abuse
ಕ್ರೈಂ45 mins ago

Physical Abuse: ಎಚ್‌ಐವಿ ಪೀಡಿತ ವ್ಯಕ್ತಿಯ ಪ್ರಜ್ಞೆ ತಪ್ಪಿಸಿ ಅತ್ಯಾಚಾರ, ಚಿನ್ನಾಭರಣ ದರೋಡೆ

Indian Origin Businessman
ವಿದೇಶ50 mins ago

Indian Origin Businessman: 8,300 ಕೋಟಿ ರೂ. ವಂಚನೆ; ಭಾರತೀಯ ಮೂಲದ ಅಮೆರಿಕದ ಉದ್ಯಮಿಗೆ ಜೈಲು

Ms Universal Petite 2024
ಕರ್ನಾಟಕ52 mins ago

Ms Universal Petite 2024: ಜಾಗತಿಕ ಸೌಂದರ್ಯ ಸ್ಪರ್ಧೆಯಲ್ಲಿ ಕನ್ನಡತಿ, ಶಿರಸಿ ಮೂಲದ ಡಾ. ಶ್ರುತಿಗೆ ಕಿರೀಟ

Parliament Sessions
ರಾಜಕೀಯ1 hour ago

Parliament Sessions: ಲೋಕಸಭೆಯಲ್ಲಿ ಇಂದು ಮೋದಿ ಭಾಷಣ; ರಾಹುಲ್‌ ಗಾಂಧಿ ಆರೋಪಗಳಿಗೆ ಪ್ರಧಾನಿ ಉತ್ತರವೇನು? ಇಲ್ಲಿದೆ Live

lovers fight hubli
ವೈರಲ್ ನ್ಯೂಸ್1 hour ago

Lovers Fight: ಫೋನ್‌ಗಾಗಿ ಕಿತ್ತಾಡಿದ ಪ್ರೇಮಿಗಳು, ಲವರ್‌ ಬಾಯ್‌ಗೆ ಸಾರ್ವಜನಿಕರ ಗೂಸಾ

Team India stuck in Barbados
ಕ್ರೀಡೆ1 hour ago

Team India stuck in Barbados: ಟೀಮ್​ ಇಂಡಿಯಾ ತವರಿಗೆ ವಾಪಸಾಗುವುದು ಮತ್ತಷ್ಟು ವಿಳಂಬ

Latest1 hour ago

Viral Video: ರಸ್ತೆ ಮೇಲೆಯೇ ಮಹಿಳೆಯ ವಶೀಕರಣ! 4.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲೂಟಿ

Kalki 2898 AD
ಸಿನಿಮಾ2 hours ago

Kalki 2898 AD: ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಬರೆದ ʼಕಲ್ಕಿʼ; ಬಿಡುಗಡೆಯಾದ 5ನೇ ದಿನ ಗಳಿಸಿದ್ದು ಬರೋಬ್ಬರಿ 84 ಕೋಟಿ ರೂ.

Anant Ambani
ಫ್ಯಾಷನ್2 hours ago

Anant Ambani: ಅನಂತ್ ಅಂಬಾನಿ ಬಳಿ ಇವೆ 300 ಕೋಟಿಯ ವಾಚ್‌ಗಳು! ಎಂಥೆಂಥ ಗಡಿಯಾರಗಳಿವೆ ನೋಡಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ16 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌