Dina Bhavishya: ಈ ರಾಶಿಯವರಿಗೆ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ! - Vistara News

ಪ್ರಮುಖ ಸುದ್ದಿ

Dina Bhavishya: ಈ ರಾಶಿಯವರಿಗೆ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಅಮಾವಾಸ್ಯೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ವೃಷಭ ರಾಶಿಯಿಂದ ಬುಧವಾರ ಬೆಳಗ್ಗೆ 04:36ಕ್ಕೆ ಮಿಥುನ ರಾಶಿಯನ್ನು ಪ್ರವೇಶಿಸಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಸಿಂಹರಾಶಿಯವರ ಕಾರ್ಯಗಳಿಗೆ ಇತರರು ಪ್ರಶಂಸೆ ವ್ಯಕ್ತಪಡಿಸಲಿದ್ದಾರೆ. ಇವರಿಗೆ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಇನ್ನು ಕುಂಭ ರಾಶಿಯವರಿಗೆ ಅಧಿಕ ಶ್ರಮದಿಂದ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (6-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಅಮಾವಾಸ್ಯೆ 18:06 ವಾರ: ಗುರುವಾರ
ನಕ್ಷತ್ರ: ರೋಹಿಣಿ 20:15 ಯೋಗ: ಧೃತಿ 22:07
ಕರಣ: ಚತುಷ್ಪಾದ 06:57 ಅಮೃತ ಕಾಲ: ಸಂಜೆ 5:12 ರಿಂದ 06:44 ರವರಗೆ
ದಿನದ ವಿಶೇಷ: ಸಿಂಧಗಿ ಸಿದ್ದೇಶ್ವರ ಜಾತ್ರೆ

ಸೂರ್ಯೋದಯ : 05:53   ಸೂರ್ಯಾಸ್ತ : 06:44

ರಾಹುಕಾಲ : ಮಧ್ಯಾಹ್ನ 1:30 ರಿಂದ 3:00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿಯಾಗುವ ಸಾಧ್ಯತೆ ಇದೆ. ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ. ಆಪ್ತ ವ್ಯಕ್ತಿಗಳಿಗೆ ಸಹಾಯ ಮಾಡಲಿದ್ದೀರಿ. ಮನೆಯಲ್ಲಿ ಕಲಹಗಳಿಗೆ ಆಸ್ಪದ ಕೊಡಬೇಡಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಿರಿಕಿರಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ಅತಿರೇಕದಲ್ಲಿ ಮಾತನಾಡುವ ಮುನ್ನ ಯೋಚಿಸಿ. ತಿಳಿಯದೆ ನಿಮ್ಮ ಅಭಿಪ್ರಾಯಗಳು ಬೇರೊಬ್ಬರ ಭಾವನೆಗಳಿಗೆ ಧಕ್ಕೆಯುಂಟು ಮಾಡಬಹುದು. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಬಹುದು. ಉದ್ಯೋಗಿಗಳಿಗೆ ಶುಭ ಫಲ. ಕುಟಂಬದಲ್ಲಿ ನೆಮ್ಮದಿ ಇರಲಿದೆ. ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಸ್ನೇಹಿತರಿಗೆ ಸಹಾಯ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದ್ದು, ಸಕರಾತ್ಮಕ ಆಲೋಚನೆಗಳು ಪುಷ್ಟಿ ನೀಡುತ್ತದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ ಇರಲಿದ್ದು, ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕೆಲಸ ಕಾರ್ಯಗಳಲ್ಲಿ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ. ತಾಳ್ಮೆ ಇರಲಿ. ಅಗತ್ಯಕ್ಕಾಗಿ ಯಾರಾದರೂ ಹಣದ ಸಹಾಯ ಬೇಡುವ ಸಾಧ್ಯತೆ ಇದ್ದು, ಆಲೋಚಿಸಿ ಮುಂದುವರಿಯಿರಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ಇತರರು ನಿಮ್ಮ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತಪಡಿಸಲಿದ್ದಾರೆ. ನಿಮ್ಮನ್ನು ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗ, ಆರೋಗ್ಯ, ಕೌಟುಂಬಿಕವಾಗಿ ಶುಭ ಫಲವಿರಲಿದೆ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ನಿಮ್ಮ ಒತ್ತಡವನ್ನು ಇತರರ ಮೇಲೆ ಹಾಕಿ ಕೋಪಗೊಳ್ಳುವುದು ಬೇಡ. ಸಮಾಧಾನದಿಂದ ವರ್ತಿಸಿ. ಆರ್ಥಿಕವಾಗಿ ಸಾಧಾರಣ ಫಲವಿರಲಿದೆ. ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತರೊಂದಿಗೆ ಬಾಲ್ಯದ ನೆನಪು ಹಂಚಿಕೊಳ್ಳುವಿರಿ. ಮನಸ್ಸಿನ ಒತ್ತಡ ಈ ಮೂಲಕ ಹೊರಹಾಕುವಿರಿ. ಆರೋಗ್ಯ ಮಧ್ಯಮ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಫಲಿತಾಂಶ ಇರಲಿದೆ. ಕೈಗೊಂಡ ಕಾರ್ಯದಲ್ಲಿ ನಿಧಾನಗತಿಯ ಪ್ರಗತಿ ಇರಲಿದ್ದು, ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದ್ದು, ನಿಮ್ಮ ನಿರೀಕ್ಷೆಗೆ ತಕ್ಕಂತೆ ಪ್ರತಿಫಲ ಸಿಗುವುದು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ಚುರುಕುತನದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭ. ಹೊಸ ಸ್ನೇಹಿತರ ಪರಿಚಯ ಆಗಲಿದೆ. ಆರೋಗ್ಯ ಪರಿಪೂರ್ಣ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದ್ದು, ಕೌಟುಂಬಿಕವಾಗಿ ಶುಭ ಫಲ ಇರಲಿದೆ. ಅದೃಷ್ಟ ಸಂಖ್ಯೆ: 3

Horoscope Today

ಮಕರ: ಸಮಯ ವ್ಯರ್ಥಮಾಡಿ ಕೊರಗುವುದು ಬೇಡ. ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಉತ್ತಮ ಆಲೋಚನೆಗಳು ಇರಲಿ. ಹಳೆಯ ನೆನಪುಗಳು ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ. ದೈಹಿಕ ಆರೋಗ್ಯ ಉತ್ತಮ. ವಿನಾಕಾರಣ ಕುಟುಂಬದ ಸದಸ್ಯರೊಂದಿಗೆ ಕಲಹಗಳು ಸೃಷ್ಟಿ ಆಗುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಅಧಿಕ ಶ್ರಮದಿಂದ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ, ಕಾಳಜಿ ಇರಲಿ. ಸಾಂಕ್ರಮಿಕ ರೋಗದ ಬಾಧೆ ಸಾಧ್ಯತೆ ಇದ್ದು, ಆದಷ್ಟು ಮುಂಜಾಗ್ರತೆ ವಹಿಸುವುದು ಒಳ್ಳೆಯದು. ಸ್ನೇಹಿತರ ಸಹಕಾರ ಸಿಗಲಿದೆ. ಸಂಗಾತಿಯೊಂದಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮೀನ: ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು. ಆರೋಗ್ಯ ಪರಿಪೂರ್ಣ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ಮಾಡಿಕೊಡಬೇಡಿ. ಉದ್ಯೋಗದಲ್ಲಿ ಹೊಸ ಭರವಸೆ. ಆಧ್ಯಾತ್ಮಿಕತೆಯಿಂದ ಮನಸ್ಸಿನ ಒತ್ತಡದಿಂದ ಹೊರಬರಲು ಸಾಧ್ಯ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Hathras Stampede: 121 ಜನರ ಸಾವಿಗೆ ಕಾರಣನಾದ ಭೋಲೆ ಬಾಬಾ ಆಸ್ತಿ ಧ್ವಂಸಕ್ಕೆ ಮುಂದಾದ ಯೋಗಿ!

Hathras Stampede: ಭೋಲೆ ಬಾಬಾ ಅವರಿಗೆ ಭಾರತದಾದ್ಯಂತ ಅನುಯಾಯಿಗಳು ಇದ್ದಾರೆ. ಅದರಲ್ಲೂ, ಉತ್ತರ ಪ್ರದೇಶದ ಪಶ್ಚಿಮ ಭಾಗ, ಉತ್ತರಾಖಂಡ, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಹೆಚ್ಚು ಅನುಯಾಯಿಗಳು ಇದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರದಿದ್ದರೂ ಇವರ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರು ತಪ್ಪಿಸಿಕೊಳ್ಳುವುದಿಲ್ಲ. ಇಷ್ಟೆಲ್ಲ ಅನುಯಾಯಿಗಳನ್ನು ಹೊಂದಿರುವ ಭೋಲೆ ಬಾಬಾ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

VISTARANEWS.COM


on

Hathras Stampede
Koo

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಕಾಲ್ತುಳಿತದಲ್ಲಿ (Hathras Stampede) ಸುಮಾರು 121 ಜನರು ಸಾವಿಗೀಡಾಗಿದ್ದಾರೆ. ನೂರಾರು ಜನ ಗಾಯಗೊಂಡಿದ್ದು, ಈಗಲೂ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾರಾಯಣ ಸಕಾರ್‌ ಹರಿ (Narayan Sakaar Hari) ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ (Bhole Baba) ಅವರು ಸತ್ಸಂಗ ನೆರವೇರಿಸಿದ ಬಳಿಕ ಉಂಟಾದ ಕಾಲ್ತುಳಿತವು ನೂರಾರು ಜನರ ಸಾವಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ, ಭೋಲೆ ಬಾಬಾ ಹಲವು ಅಕ್ರಮಗಳು ಕೂಡ ಬಯಲಾಗಿವೆ. ಇವರ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್‌ ಕೂಡ ದಾಖಲಾಗಿದೆ. ಈ ಮಧ್ಯೆಯೇ, ಭೋಲೆ ಬಾಬಾ ಅವರ ಅಕ್ರಮ ಕಟ್ಟಡಗಳನ್ನು ಧ್ವಂಸಗೊಳಿಸಲು ಉತ್ತರ ಪ್ರದೇಶ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಹೌದು, ಉತ್ತರ ಪ್ರದೇಶದ ಹಲವೆಡೆ ಭೋಲೆ ಬಾಬಾ ಅವರಿಗೆ ಸಂಬಂಧಿಸಿದ ಹತ್ತಾರು ಕಟ್ಟಡಗಳಿದ್ದು, ಇವುಗಳು ಅಕ್ರಮವಾಗಿ ನಿರ್ಮಿಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಹಾಗೆಯೇ, ಭೋಲೆ ಬಾಬಾ ಆಸ್ತಿ, ಹಣದ ಕುರಿತು ಕೂಡ ಉತ್ತರ ಪ್ರದೇಶ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಹಾಗೊಂದು ವೇಳೆ, ಭೋಲೆ ಬಾಬಾ ಅಕ್ರಮ ಆಸ್ತಿ ಸಿಕ್ಕರೆ, ಅದನ್ನು ಧ್ವಂಸಗೊಳಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಈಗಾಗಲೇ ಕ್ರಿಮಿನಲ್‌ಗಳು, ಅತ್ಯಾಚಾರಿಗಳ ಕಟ್ಟಡಗಳನ್ನು ಧ್ವಂಸಗೊಳಿಸಲಾಗಿದೆ. ಇದೇ ಕಾರಣಕ್ಕಾಗಿ ಯೋಗಿ ಆದಿತ್ಯನಾಥ್‌ ಅವರನ್ನು ಬುಲ್ಡೋಜರ್‌ ಬಾಬಾ ಎಂದು ಕರೆಯಲಾಗುತ್ತದೆ.

ಉತ್ತರ ಪ್ರದೇಶದ ಮೈನ್ಪುರಿಯಲ್ಲಿರುವ 13 ಎಕರೆ “ಪಂಚತಾರಾ” ಆಶ್ರಮದ ಜಮೀನಿನ ಮೌಲ್ಯ 4 ಕೋಟಿ ರೂ. ಎಂಬುದಾಗಿ ತಿಳಿದುಬಂದಿದೆ. ಇನ್ನು ಮೈನ್ಪುರಿ ಆಶ್ರಮವು ಪಂಚತಾರಾ ಹೋಟೆಲ್‌ನಲ್ಲಿರುವ ಸೌಲಭ್ಯಗಳನ್ನು ಹೊಂದಿವೆ ಎನ್ನಲಾಗಿದೆ. ಈ ಆಶ್ರಮದಲ್ಲಿ ವಾಸವಾಗಿದ್ದ, ದೇವತಾಮಾನವ ಎಂದು ಕರೆಯುವ ಬಾಬಾರಿಗೆ ಈ ಆಶ್ರಮದಲ್ಲಿ ಆರು ಕೊಠಡಿಗಳನ್ನು ಮೀಸಲಿಡಲಾಗಿದೆ. ಇನ್ನೂ ಆರು ಕೊಠಡಿಗಳನ್ನು ಸಮಿತಿಯ ಸದಸ್ಯರು ಮತ್ತು ಅವರ ಸಂಸ್ಥೆಯ ಸ್ವಯಂಸೇವಕರಿಗೆ ಮೀಸಲಿಡಲಾಗಿದೆ. ಆಶ್ರಮವು ಖಾಸಗಿ ರಸ್ತೆಯನ್ನು ಮಾತ್ರವಲ್ಲದೆ ಅತ್ಯಾಧುನಿಕ ಕೆಫೆಟೇರಿಯಾವನ್ನು ಸಹ ಹೊಂದಿದೆ ಎನ್ನಲಾಗಿದೆ.

ಆಶ್ರಮಕ್ಕಾಗಿ ಭೂಮಿಯನ್ನು 3-4 ವರ್ಷಗಳ ಹಿಂದೆ ತನಗೆ ಉಡುಗೊರೆಯಾಗಿ ನೀಡಲಾಗಿದೆ ಎಂದು ಬಾಬಾ ಹೇಳಿದ್ದಾರೆ. ಆದರೆ ದಾಖಲೆಗಳು ಅವರು ಕೋಟಿಗಟ್ಟಲೆ ಮೌಲ್ಯದ ಹಲವಾರು ಆಸ್ತಿಗಳನ್ನು ಹೊಂದಿದ್ದಾರೆ ಎಂದು ಬಹಿರಂಗಪಡಿಸುತ್ತವೆ. ದೇಶದ ಇತರ ಸ್ಥಳಗಳಲ್ಲಿನ ಹೆಚ್ಚಿನ ಆಶ್ರಮಗಳು ಈ ಆಸ್ತಿಗಳ ವ್ಯಾಪ್ತಿಯಲ್ಲಿ ಬರುತ್ತದೆ ಎನ್ನಲಾಗಿದೆ.

ಯಾರಿವರು ಭೋಲೆ ಬಾಬಾ?

ಭೋಲೆ ಬಾಬಾ ಅವರು ಉತ್ತರ ಪ್ರದೇಶದ ಎತಾಹ್‌ ಜಿಲ್ಲೆಯ ಬಹದ್ದೂರ್‌ ಗ್ರಾಮದವರಾಗಿದ್ದಾರೆ. ಇವರು ಈಗ ಪ್ರಮುಖ ಧಾರ್ಮಿಕ ಮುಖಂಡರೆನಿಸಿದ್ದು, ಇವರ ಭಾಷಣ, ಬೋಧನೆಗಳನ್ನು ಕೇಳಲು ಸಾವಿರಾರು ಜನ ಆಗಮಿಸುತ್ತಾರೆ. ಇವರು ದೇಶದ ಗುಪ್ತಚರ ಇಲಾಖೆಯಲ್ಲಿ (IB) ಕಾರ್ಯನಿರ್ವಹಿಸಿದ್ದು, 26 ವರ್ಷಗಳ ಹಿಂದೆಯೇ ಸರ್ಕಾರಿ ನೌಕರಿ ತೊರೆದು, ಸ್ವಯಂಘೋಷಿತ ದೇವಮಾನವರಾಗಿದ್ದಾರೆ.

ಭೋಲೆ ಬಾಬಾ ಅವರಿಗೆ ಭಾರತದಾದ್ಯಂತ ಅನುಯಾಯಿಗಳು ಇದ್ದಾರೆ. ಅದರಲ್ಲೂ, ಉತ್ತರ ಪ್ರದೇಶದ ಪಶ್ಚಿಮ ಭಾಗ, ಉತ್ತರಾಖಂಡ, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಹೆಚ್ಚು ಅನುಯಾಯಿಗಳು ಇದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರದಿದ್ದರೂ ಇವರ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರು ತಪ್ಪಿಸಿಕೊಳ್ಳುವುದಿಲ್ಲ. ಪ್ರತಿ ಮಂಗಳವಾರ ಅಲಿಗಢದಲ್ಲಿ ಅವರ ಕಾರ್ಯಕ್ರಮ ನಡೆಯುತ್ತದೆ. ಅಲ್ಲಿಯೂ ಸಾವಿರಾರು ಜನ ಸೇರುತ್ತಾರೆ. ಕೊರೊನಾ ನಿರ್ಬಂಧದ ಮಧ್ಯೆಯೂ ಸಾವಿರಾರು ಜನರನ್ನು ಸೇರಿಸಿ, ಸತ್ಸಂಗ ಆಯೋಜಿಸಿದ್ದು ವಿವಾದಕ್ಕೂ ಕಾರಣವಾಗಿತ್ತು.

ಇದನ್ನೂ ಓದಿ: Hathras Stampede: ಹತ್ರಾಸ್‌ ಕಾಲ್ತುಳಿತ- ಭೋಲೆ ಬಾಬಾನ ವಿರುದ್ಧ ಮೊದಲ ಕೇಸ್‌ ದಾಖಲು

Continue Reading

ಮಳೆ

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Karnataka Weather Forecast: ಮುಂಗಾರು ಅಬ್ಬರಕ್ಕೆ ಜನರು ವಿಲವಿಲ ಅಂತ ಒದ್ದಾಡುವಂತೆ ಮಾಡಿದೆ. ಮಳೆ ಬಂದರೂ (Heavy rain Effect) ಕಷ್ಟ ಬಾರದೆ ಇದ್ದರೂ ಸಂಕಷ್ಟ ಎಂಬಂತಾಗಿದೆ. ಈಗಾಗಲೇ ಭಾರಿ ಮಳೆ ಹಿನ್ನೆಲೆಯಲ್ಲಿ ಗಿರಿಶಿಖರಗಳಲ್ಲಿ (Trekking) ಚಾರಣಕ್ಕೆ ನಿಷೇಧ ಹೇರಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು/ಮಂಗಳೂರು: ವ್ಯಾಪಕ ಮಳೆಯಿಂದಾಗಿ (Karnataka Weather Forecast) ಕರಾವಳಿಯ ಹಲವೆಡೆ ಪ್ರವಾಸಿಗರಿಗೆ ನಿಷೇಧ ಹಾಕಲಾಗಿದೆ. ಗಿರಿಶಿಖರಗಳಲ್ಲಿ ಚಾರಣಕ್ಕೆ ಹೋಗಬೇಕಾದರೆ ಮಳೆಗಾಲ (Heavy rain) ಮುಗಿಯುವವರೆಗೂ ಕಾಯಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಭೂ ಕುಸಿತ , ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗಿವೆ. ಇನ್ನಷ್ಟು ಪ್ರಾಕೃತಿಕ ವಿಕೋಪ ಸಂಭವಿಸುವ ಆತಂಕ ಇರುವ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯ ಗಿರಿ ಶಿಖರಗಳಿಗೆ ಚಾರಣಕ್ಕೆ ಹೋಗುವ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ಮಳೆಗಾಲ ಮುಗಿಯುವವರೆಗೆ ಹೋಮ್ ಸ್ಟೇ, ರೆಸಾರ್ಟ್ ಸೇರಿದಂತೆ ಅರಣ್ಯ ಇಲಾಖೆ ಏರ್ಪಡಿಸುವ ಟ್ರಕ್ಕಿಂಗ್, ಸಾಹಸ ಯಾತ್ರೆಗೂ ನಿಷೇಧ ಹಾಕಲಾಗಿದೆ. ಇವೆಲ್ಲದರ ಜತೆಗೆ ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದ್ದು, ಅಲ್ಲೂ ನದಿ ಹಾಗು ಸಮುದ್ರ ತಟದಲ್ಲಿ ಈಜು ಮೋಜು-ಮಸ್ತಿ ಚಟುವಟಿಕೆಗಳಿಗೂ ಬ್ರೇಕ್‌ ಹಾಕಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನಿಷೇಧ ಆದೇಶವನ್ನು ಹೊರಡಿಸಿದ್ದಾರೆ.

ಇಲ್ಲೆಲ್ಲ ಮಳೆ ಅಬ್ಬರ

ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಕ್ರಿಯವಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿದೆ. ಉತ್ತರ ಕನ್ನಡದ ಕ್ಯಾಸಲ್‌ ರಾಕ್‌ನಲ್ಲಿ 17 ಸೆಂ.ಮೀ ಮಳೆಯಾದರೆ, ಹೊನ್ನಾವರದಲ್ಲಿ 16 ಹಾಗೂ ಉಡುಪಿಯಲ್ಲಿ 15, ಅಂಕೋಲಾದಲ್ಲಿ 13 ಸೆಂ.ಮೀ ಮಳೆಯಾಗಿದೆ.

ಜು.7ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಗಾಳಿ ವೇಗವು 30-40ಕಿ.ಮೀ ಇರಲಿದ್ದು, ಜತೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಗಾಳಿ ವೇಗವು 30 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ 50 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ,ಕೊಡಗು, ಮೈಸೂರು, ರಾಮನಗರ ಸೇರಿದಂತೆ ದಾವಣಗೆರೆ, ಮಂಡ್ಯ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಉಕ್ಕಿ ಹರಿಯುವ ನದಿಯಲ್ಲಿ ಮೀನು ಹಿಡಿಯುವ ಸಾಹಸ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾದ ಮಳೆ ಪ್ರಮಾಣದಿಂದಾಗಿ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪಶ್ಚಿಮ ಘಟ್ಟದಲ್ಲಿಯೂ ನಿರಂತರವಾಗಿ ಮಳೆ ಹೆಚ್ಚಿದ್ದು, ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದು, ತೀರ ಪ್ರದೇಶದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಪ್ರವಾಹದ ಭೀತಿ ಇರುವುದರಿಂದ ನೇತ್ರಾವತಿ ನದಿ ತೀರದವರಿಗೆ, ದ್ವೀಪ ಪ್ರದೇಶ ಜನರಿಗೂ ಸೂಚನೆ ನೀಡಲಾಗಿದೆ. ನದಿಯಲ್ಲಿ ಮೀನುಗಾರಿಕೆ ನಡೆಸದಂತೆ ಎಚ್ಚರಿಕೆ ನೀಡಿದರೂ, ಸ್ಥಳೀಯರು ದೋಣಿ ಮೂಲಕ ಮೀನು ಹಿಡಿಯುತ್ತಿರುವುದು ಕಂಡು ಬಂದಿದೆ.

ತುಂಗಭದ್ರೆಯ ತಟದಲ್ಲಿ ಅಪರೂಪದ ನೀರು ನಾಯಿಗಳು ಪ್ರತ್ಯಕ್ಷ

ದಾವಣಗೆರೆಯ ಹರಿಹರದ ಬಳಿಯ ರಾಜನಹಳ್ಳಿ ಜಾಕ್ ವೆಲ್ ಬಳಿ ನೀರು ನಾಯಿಗಳ ಹಿಂಡು ಹಿಂಡಾಗಿ ಪ್ರತ್ಯಕ್ಷವಾಗಿದೆ. ನೀರು ನಾಯಿಗಳು ಜನರ ಕಣ್ಣಿಗೆ ಕಾಣುವುದು ಅಪರೂಪ. ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿಯ ದಡದಲ್ಲಿ ನೀರು ನಾಯಿಗಳು ಆಟವಾಡುತ್ತಿರುವುದು ಕಂಡು ಬಂದಿದೆ. ನೀರು ನಾಯಿ ಕಂಡರೆ ಸಮೃದ್ಧಿ ಮಳೆ ಬೆಳೆ ಆಗುತ್ತೆ ಎಂಬ ನಂಬಿಕೆ ಇದೆ.

ಅಬ್ಬಿ ಜಲಪಾತಕ್ಕೆ ಸಾಕು ನಾಯಿ ಜತೆಗೆ ಬಂದ ಪ್ರವಾಸಿಗರು!

ಕೊಡಗಿನಲ್ಲಿ ಮತ್ತೆ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ಸಾಕು ನಾಯಿ ಹಿಡಿದು ಪ್ರವಾಸಿತಾಣವಾದ ಮಡಿಕೇರಿ ಸಮೀಪದ ಅಬ್ಬಿ ಜಲಪಾತಕ್ಕೆ ಬಂದಿದ್ದಾರೆ. ಶ್ವಾನವನ್ನು ಒಳಗೆ ತರಬೇಡಿ ಎಂದರು ಹೇಳಿದರೆ ಪ್ರವಾಸಿಗರು ಪೊಲೀಸರೊಟ್ಟಿಗೆ ಕೂಗಾಟ ಶುರು ಮಾಡುತ್ತಿದ್ದಾರೆ.

ಇತ್ತ ಪ್ರವಾಸಿಗರನ್ನು ಕಂಡು ಶ್ವಾನಗಳು ಕಚ್ಚಲು ಎಳೆದಾಡುತ್ತಿದ್ದ ದೃಶ್ಯ ಕಂಡು ಬಂತು. ಮಕ್ಕಳು ಸೇರಿದಂತೆ ನೂರಾರು ಪ್ರವಾಸಿಗರು ಇರುವ ಸ್ಥಳದಲ್ಲಿ ಜರ್ಮನ್ ಶೆಫರ್ಡ್, ಎರಡು ಲ್ಯಾಬ್ ಸೇರಿದಂತೆ ಶ್ವಾನವನ್ನು ಹಿಡಿದು ಒಳಗೆ ಬಂದಿದ್ದಾರೆ. ಬಳಿಕ ಬಲವಂತವಾಗಿ ಪೊಲೀಸರು ಹೊರಗೆ ಕಳುಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Team India : ಎರಡನೇ ಟಿ20 ವಿಶ್ವ ಕಪ್​ ಗೆದ್ದ ಬಳಿಕವೂ ಭಾರತ ತಂಡದ ಜೆರ್ಸಿಯಲ್ಲಿ ಒಂದೇ ಸ್ಟಾರ್​ ಯಾಕೆ? ಇಲ್ಲಿದೆ ವಿವರಣೆ

Team India :

VISTARANEWS.COM


on

Team India :
Koo

ಬೆಂಗಳೂರು:

ಬೆಂಗಳೂರು: ಜುಲೈ 6 ರಂದು ಆತಿಥೇಯ ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಟಿ20 ಐ ಸರಣಿ ಆರಂಭಗೊಂಡಿದೆ. ಮೊದಲ ಪಂದ್ಯದಲ್ಲಿ ಭಾರತದ ಎರಡನೇ ಸ್ಟ್ರಿಂಗ್ ತಂಡವು ಜಿಂಬಾಬ್ವೆಯನ್ನು ಎದುರಿಸುತ್ತಿದೆ. ಈ ತಂಡವು ಅಡಿಡಾಸ್ ಕಂಪನಿಯು ಇತ್ತೀಚೆಗೆ ವಿನ್ಯಾಸ ಮಾಡಿರುವ ಜೆರ್ಸಿಯನ್ನು ಧರಿಸುತ್ತಿದೆ. ಆದರೆ ಇಲ್ಲೊಂದು ತಪ್ಪು ನಡೆದಿದೆ. ಏನೆಂದರೆ ಭಾರತ ಎರಡು ಟಿ20 ವಿಶ್ವ ಕಪ್ ಗೆದ್ದ ಜೆರ್ಸಿಯ ಹೊರತಾಗಿಯೂ ಜೆರ್ಸಿಯಲ್ಲಿ ಕೇವಲ ಒಂದೇ ಒಂದು ಸ್ಟಾರ್ ಇದೆ. ಹೀಗಾಗಿ ಅಭಿಮಾನಿಗಳಿಗೆ ಕುತೂಹಲ ಹೆಚ್ಚಾಗಿದೆ.

ಸಾಂಪ್ರದಾಯಿಕವಾಗಿ, ಕ್ರಿಕೆಟ್ ತಂಡದ ಜೆರ್ಸಿಯಲ್ಲಿರುವ ಸ್ಟಾರ್​ಗಳು ಸ್ವರೂಪದಲ್ಲಿ ಗೆದ್ದ ವಿಶ್ವಕಪ್ ಪ್ರಶಸ್ತಿಗಳ ಸಂಖ್ಯೆಯನ್ನು ಪ್ರತಿನಿಧಿಸುತ್ತವೆ. 17 ವರ್ಷಗಳ ಬಳಿಕ ಭಾರತ 2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಸಾಧನೆ ಮಾಡಿದೆ. ಕುತೂಹಲಕಾರಿ ಸಂಗತಿಯೆಂದರೆ. ಮುಂಬಯಿಯಲ್ಲಿ ವಿಜಯದ ಮೆರವಣಿಗೆಯನ್ನು ನಡೆಸಿದ ಭಾರತೀಯ ತಂಡವು ತಮ್ಮ ಜೆರ್ಸಿಗಳಲ್ಲಿ ಎರಡು ಸ್ಟಾರ್​ಗಳಿದ್ದವು. ಆದರೆ ಶುಭ್ಮನ್ ಗಿಲ್ ನೇತೃತ್ವದ ಭಾರತೀಯ ತಂಡದ ಪಂದ್ಯದ ದಿನದ ಜೆರ್ಸಿಯಲ್ಲಿ ಅದು ಕಾಣೆಯಾಗಿದೆ. ಇದು ಕುತೂಹಲಕ್ಕೆ ಕಾರಣವಾಗಿದೆ.

ಭಾರತದ ಜರ್ಸಿಯಲ್ಲಿರುವ ಏಕೈಕ ಸ್ಟಾರ್ ಇರುವುದಕ್ಕೆ ಕಾರಣ ಮೊದಲೇ ಜೆರ್ಸಿ ತಯಾರಾಗಿರುವುದು. ಬಾರ್ಬಡೋಸ್​​ನಲ್ಲಿ ಜೂನ್ 29 ರಂದು ಮುಕ್ತಾಯಗೊಂಡ ಟಿ 20 ವಿಶ್ವಕಪ್ 2024 ರ ಫೈನಲ್ ಫೈನಲ್​ನಲ್ಲಿ ಭಾರತ ಗೆಲ್ಲುವ ಮೊದಲು ಎರಡನೇ ಶ್ರೇಣಿಯ ಭಾರತೀಯ ತಂಡವು ಜಿಂಬಾಬ್ವೆಗೆ ಹಾರಿತ್ತು. ಅದಕ್ಕಿಂತ ಮುಂಚಿತವಾಗಿ ಜೆರ್ಸಿಗಳನ್ನು ತಯಾರು ಮಾಡಲಾಗಿತ್ತು. ಹೀಗಾಗಿ ಅವರಿಗೆ ಹೊಸ ಜೆರ್ಸಿ ಇನ್ನೂ ಸಿಕ್ಕಿಲ್ಲ. ಇದರಿಂದ ಅವರೆಲ್ಲರೂ ಹಳೆಯ ಜೆರ್ಸಿಯನ್ನು ಹಾಕುವಂತಾಗಿದೆ.

ಇದನ್ನೂ ಓದಿ: Nafees Iqbal : ಬಾಂಗ್ಲಾದೇಶದ ಮಾಜಿ ಕ್ರಿಕೆಟಿಗನಿಗೆ ಮೆದುಳಿನ ರಕ್ತಸ್ರಾವ; ಪರಿಸ್ಥಿತಿ ಗಂಭೀರ

ಈ ಪರಿಸ್ಥಿತಿಯು ತಂಡದ ಕಿಟ್​​ಗಳನ್ನು ನವೀಕರಿಸುವಲ್ಲಿ ಕ್ರಿಕೆಟ್ ಮಂಡಳಿಗಳು ಎದುರಿಸುತ್ತಿರುವ ವ್ಯವಸ್ಥಾಪನಾ ಸವಾಲುಗಳನ್ನು ಎತ್ತಿ ತೋರಿಸುತ್ತದೆ. ವಿಶೇಷವಾಗಿ ಅನೇಕ ತಂಡಗಳು ಏಕಕಾಲದಲ್ಲಿ ಅಥವಾ ತ್ವರಿತವಾಗಿ ಕಾರ್ಯನಿರ್ವಹಿಸುತ್ತಿರುವಾಗ. ವಿಶ್ವಕಪ್ ಫೈನಲ್ ಮತ್ತು ಜಿಂಬಾಬ್ವೆ ಸರಣಿಯ ನಡುವಿನ ಸಮಯದ ಕೊರತೆ ಜೆರ್ಸಿಗಳನ್ನು ಉತ್ಪಾದಿಸಲು ಮತ್ತು ಸಮಯಕ್ಕೆ ಸರಿಯಾಗಿ ತಂಡಕ್ಕೆ ರವಾನಿಸಲು ಸಾಧ್ಯವಾಗಲಿಲ್ಲ.

ಹರಾರೆ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆದ ಸರಣಿಯ ಮೊದಲ ಟಿ 20 ಪಂದ್ಯದಲ್ಲಿ ಆತಿಥೇಯ ಜಿಂಬಾಬ್ವೆ ಭಾರತವನ್ನು ಎದುರಿಸಿತು. ಟಾಸ್ ಗೆದ್ದ ಪ್ರವಾಸಿ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರೆ, ಭಾರತ ಈ ಪಂದ್ಯಕ್ಕೆ ಮೂವರು ಚೊಚ್ಚಲ ಆಟಗಾರರನ್ನು ಕಣಕ್ಕೆ ಇಳಿಸಿತು. ಧ್ರುವ್ ಜುರೆಲ್ ಟಿ 20 ಐಗೆ ಪಾದಾರ್ಪಣೆ ಮಾಡಿದರೆ, ಅಭಿಷೇಕ್ ಶರ್ಮಾ ಮತ್ತು ರಿಯಾನ್ ಪರಾಗ್ ಕ್ರಮವಾಗಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಎಂಟ್ರಿ ಗಿಟ್ಟಿಸಿದರು.

ಆರಂಭಿಕ ಎರಡು ಟಿ 20 ಪಂದ್ಯಗಳಿಗೆ ತಂಡವು ಮೂಲತಃ ಘೋಷಿಸಿದ ತಂಡಕ್ಕಿಂತ ಭಿನ್ನವಾಗಿದೆ. ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ಮತ್ತು ಶಿವಂ ದುಬೆ ಪ್ರಸ್ತುತ ಟಿ 20 ವಿಶ್ವಕಪ್ ಆಚರಣೆಯಲ್ಲಿ ಭಾಗವಹಿಸಲು ಭಾರತದಲ್ಲಿದ್ದಾರೆ. ಎರಡನೇ ಟಿ 20 ಐ ಪಂದ್ಯದ ನಂತರ ಅವರು ತಂಡವನ್ನು ಸೇರುವ ನಿರೀಕ್ಷೆಯಿದೆ.

“ನಾವು ಮೊದಲು ಫೀಲ್ಡಿಂಗ್ ಮಾಡುತ್ತೇವೆ. ಇದು ಉತ್ತಮ ವಿಕೆಟ್ ರೀತಿ ಕಾಣುತ್ತದೆ ಎಂದು ನಾನು ಭಾವಿಸುತ್ತೇನೆ. ಬಳಿವೂ ಹೆಚ್ಚು ಬದಲಾಗುವುದಿಲ್ಲ. ನಾವು 11 ವರ್ಷಗಳ ನಂತರ ಐಸಿಸಿ ಪಂದ್ಯಾವಳಿಯನ್ನು ಗೆದ್ದಿದ್ದೇವೆ. ನೀವು ಯಾವಾಗಲೂ ನಿಮ್ಮಿಂದ ಕೆಲವು ನಿರೀಕ್ಷೆಗಳನ್ನು ಹೊಂದಿದ್ದೀರಿ. ನಮ್ಮಲ್ಲಿ ಮೂವರು ಚೊಚ್ಚಲ ಆಟಗಾರರಿದ್ದಾರೆ. ಶರ್ಮಾ, ಜುರೆಲ್ ಮತ್ತು ಪರಾಗ್ ಪಾದಾರ್ಪಣೆ ಮಾಡಿದ್ದಾರೆ,” ಎಂದು ಭಾರತ ತಂಡದ ನಾಯಕ ಗಿಲ್ ಹೇಳಿದ್ದಾರೆ.

ಭಾರತ: ಶುಭ್ಮನ್ ಗಿಲ್ (ನಾಯಕ), ಅಭಿಷೇಕ್ ಶರ್ಮಾ, ಋತುರಾಜ್ ಗಾಯಕ್ವಾಡ್, ರಿಯಾನ್ ಪರಾಗ್, ರಿಂಕು ಸಿಂಗ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಮುಖೇಶ್ ಕುಮಾರ್, ಖಲೀಲ್ ಅಹ್ಮದ್.

ಜಿಂಬಾಬ್ವೆ ತಂಡ: ವೆಸ್ಲಿ ಮ್ಯಾಡ್ವೆರೆ, ಇನ್ನೋಸೆಂಟ್ ಕೈಯಾ, ಬ್ರಿಯಾನ್ ಬೆನೆಟ್, ಸಿಕಂದರ್ ರಾಜಾ (ಸಿ), ಡಿಯೋನ್ ಮೈಯರ್ಸ್, ಜೋನಾಥನ್ ಕ್ಯಾಂಪ್ಬೆಲ್, ಕ್ಲೈವ್ ಮದಂಡೆ (ವಿಕೆ), ವೆಲ್ಲಿಂಗ್ಟನ್ ಮಸಕಡ್ಜಾ, ಲ್ಯೂಕ್ ಜೊಂಗ್ವೆ, ಬ್ಲೆಸ್ಸಿಂಗ್ ಮುಜರಬಾನಿ, ತೆಂಡೈ ಚಟಾರಾ.

Continue Reading

ಪ್ರಮುಖ ಸುದ್ದಿ

Narendra Modi: ಬ್ರಿಟನ್‌ ನೂತನ ಪ್ರಧಾನಿ ಕೀರ್‌ ಸ್ಟಾರ್ಮರ್‌ಗೆ ಮೋದಿ ಕರೆ; ಭಾರತಕ್ಕೆ ಆಗಮಿಸುವಂತೆ ಮನವಿ!

Narendra Modi: ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಬರೋಬ್ಬರಿ 14 ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್‌ ಪಕ್ಷ 360 ಸ್ಥಾನಗಳನ್ನು ಗಳಿಸಿ ಮ್ಯಾಜಿಕ್‌ ನಂಬರ್‌ 320 ಅನ್ನು ದಾಟಿದೆ. ಹಾಗಾಗಿ, ಕೀರ್‌ ಸ್ಟಾರ್ಮರ್‌ ಅವರು ಬ್ರಿಟನ್‌ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಇವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಬ್ರಿಟನ್‌ ಸಂಸತ್‌ ಚುನಾವಣೆಯಲ್ಲಿ ಲೇಬರ್‌ ಪಕ್ಷವು (Labour Party) ಅಭೂತಪೂರ್ವ ಗೆಲುವು ಸಾಧಿಸಿದ್ದು, ಪಕ್ಷದ ವರಿಷ್ಠ ಕೀರ್‌ ಸ್ಟಾರ್ಮರ್‌ (Keir Starmer) ಅವರು ಬ್ರಿಟನ್‌ ಪ್ರಧಾನಿಯಾಗಿ (Britain PM) ಆಯ್ಕೆಯಾಗಿದ್ದಾರೆ. ಹಾಗಾಗಿ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕೀರ್‌ ಸ್ಟಾರ್ಮರ್‌ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದನೆ ತಿಳಿಸಿದ್ದಾರೆ. ಹಾಗೆಯೇ, ಭಾರತಕ್ಕೆ ಆಗಮಿಸುವಂತೆ ಮೋದಿ ಅವರು ಆಹ್ವಾನ ನೀಡಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ತಿಳಿಸಿದೆ.

“ನರೇಂದ್ರ ಮೋದಿ ಅವರು ಕೀರ್‌ ಸ್ಟಾರ್ಮರ್‌ ಅವರ ಜತೆ ಮಾತುಕತೆ ನಡೆಸುವಾಗ ಭಾರತ- ಬ್ರಿಟನ್‌ ದ್ವಿಪಕ್ಷೀಯ ಸಂಬಂಧ, ವ್ಯಾಪಾರ, ವ್ಯೂಹಾತ್ಮಕ ಸಹಭಾಗಿತ್ವ ಸೇರಿ ಹಲವು ವಿಷಯಗಳ ಕುರಿತು ಪ್ರಸ್ತಾಪಿಸಿದರು. ದ್ವಿಪಕ್ಷೀಯ ಸಂಬಂಧ ಇನ್ನಷ್ಟು ಗಟ್ಟಿಗೊಳಿಸುವ ಕುರಿತು ಕೂಡ ಉಲ್ಲೇಖಿಸಿದರು. ಇದಲ್ಲದೆ, ಎರಡೂ ದೇಶಗಳು ಹತ್ತಾರು ಕ್ಷೇತ್ರಗಳಲ್ಲಿ ಸಹಕಾರದಿಂದ ಕಾರ್ಯನಿರ್ವಹಿಸುವ ಕುರಿತು ಉಭಯ ನಾಯಕರು ಸಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದರು” ಎಂದು ಪಿಎಂಒ ಪ್ರಕಟಣೆ ತಿಳಿಸಿದೆ.

ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಬರೋಬ್ಬರಿ 14 ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್‌ ಪಕ್ಷ 360 ಸ್ಥಾನಗಳನ್ನು ಗಳಿಸಿ ಮ್ಯಾಜಿಕ್‌ ನಂಬರ್‌ 320 ಅನ್ನು ದಾಟಿದೆ. ಕನ್ಸರ್ವೇಟಿವ್‌ ಪಕ್ಷವು ಮುಖಭಂಗ ಅನುಭವಿಸಿದ್ದು, ಕೇವಲ 81 ಸ್ಥಾನಗಳನ್ನು ಪಡೆದಿದೆ. ಫಲಿತಾಂಶ ಪ್ರಕಟವಾಗುತ್ತಲೇ ರಿಷಿ ಸುನಕ್‌ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಭಾರತದ ಬಗ್ಗೆ ಸ್ಟಾರ್ಮರ್‌ ನಿಲುವೇನು?

ಜಾಗತಿಕ ಭದ್ರತೆ, ಹವಾಮಾನ ಭದ್ರತೆ ಮತ್ತು ಆರ್ಥಿಕ ಭದ್ರತೆಗೆ ಸಂಬಂಧಿಸಿದಂತೆ ಭಾರತದೊಂದಿಗೆ ಉತ್ತಮ ಬಾಂದವ್ಯ ಹೊಂದುವ ಬಗ್ಗೆ ಸ್ಟಾರ್ಮರ್‌ ತಮ್ಮ ಭಾಷಣದಲ್ಲಿ ಆಗಾಗ ಪ್ರಸ್ತಾಪಿಸುತ್ತಿರುತ್ತಾರೆ. ಚುನಾವಣಾ ಭಾಷಣದಲ್ಲಿ ಮಾತನಾಡುತ್ತಾ ಅವರು, ನಮ್ಮ ಲೇಬರ್‌ ಪಕ್ಷ ಅಧಿಕಾರಕ್ಕೆ ಬಂದರೆ ಭಾರತದೊಂದಿಗೆ ಉತ್ತಮ ಸಂಬಂಧ ಹೊಂದಲು ಬಯಸುತ್ತದೆ. ಅಲ್ಲದೇ ಮುಕ್ತ ವ್ಯಾಪಾರ ಒಪ್ಪಂದವನ್ನು (ಎಫ್‌ಟಿಎ) ಬಯಸುತ್ತದೆ. ಜಾಗತಿಕ ಭದ್ರತೆ, ಹವಾಮಾನ ಭದ್ರತೆ, ಆರ್ಥಿಕ ಭದ್ರತೆಗಾಗಿ ಹೊಸ ಕಾರ್ಯತಂತ್ರದ ಪಾಲುದಾರಿಕೆಯನ್ನು ಸಹ ಹಂಚಿಕೊಳ್ಳುತ್ತೇವೆ ಎಂದು ಅವರು ಹೇಳಿದರು.

ಇದನ್ನೂ ಓದಿ: UK Election: ಬ್ರಿಟನ್‌ ಸಂಸತ್ತಿಗೆ 28 ಭಾರತೀಯ ಮೂಲದವರು ಆಯ್ಕೆ; ಈ ಪೈಕಿ 12 ಮಂದಿ ಸಿಖ್‌ ಸಮುದಾಯದವರು

Continue Reading
Advertisement
Hathras Stampede
ದೇಶ12 mins ago

Hathras Stampede: 121 ಜನರ ಸಾವಿಗೆ ಕಾರಣನಾದ ಭೋಲೆ ಬಾಬಾ ಆಸ್ತಿ ಧ್ವಂಸಕ್ಕೆ ಮುಂದಾದ ಯೋಗಿ!

karnataka weather Forecast
ಮಳೆ30 mins ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Ambani Family Fashion
ಫ್ಯಾಷನ್57 mins ago

Ambani Family Fashion: ಅಂಬಾನಿ ಮಹಿಳೆಯರ ದುಬಾರಿ ಉಡುಗೆಗಳು; ಇವರ ಮದುವೆ ಡ್ರೆಸ್‌‌ಗಳು ಹೇಗಿವೆ?

Team India :
ಪ್ರಮುಖ ಸುದ್ದಿ58 mins ago

Team India : ಎರಡನೇ ಟಿ20 ವಿಶ್ವ ಕಪ್​ ಗೆದ್ದ ಬಳಿಕವೂ ಭಾರತ ತಂಡದ ಜೆರ್ಸಿಯಲ್ಲಿ ಒಂದೇ ಸ್ಟಾರ್​ ಯಾಕೆ? ಇಲ್ಲಿದೆ ವಿವರಣೆ

BJP Karnataka
ಕರ್ನಾಟಕ59 mins ago

BJP Karnataka: ವಿಧಾನಸಭೆ, ವಿಧಾನ ಪರಿಷತ್ ಉಪಚುನಾವಣೆ; 4 ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ

Narendra Modi
ಪ್ರಮುಖ ಸುದ್ದಿ1 hour ago

Narendra Modi: ಬ್ರಿಟನ್‌ ನೂತನ ಪ್ರಧಾನಿ ಕೀರ್‌ ಸ್ಟಾರ್ಮರ್‌ಗೆ ಮೋದಿ ಕರೆ; ಭಾರತಕ್ಕೆ ಆಗಮಿಸುವಂತೆ ಮನವಿ!

Nafees Iqbal
ಪ್ರಮುಖ ಸುದ್ದಿ1 hour ago

Nafees Iqbal : ಬಾಂಗ್ಲಾದೇಶದ ಮಾಜಿ ಕ್ರಿಕೆಟಿಗನಿಗೆ ಮೆದುಳಿನ ರಕ್ತಸ್ರಾವ; ಪರಿಸ್ಥಿತಿ ಗಂಭೀರ

World Chocolate Day
ಲೈಫ್‌ಸ್ಟೈಲ್2 hours ago

World Chocolate Day: ಬಾಯಿ ಸಿಹಿ ಮಾಡಿಕೊಳ್ಳುವುದಕ್ಕೆ ಮತ್ತೊಂದು ದಿನ! ಇಂದು ಚಾಕಲೇಟ್ ಮರೆಯದೇ ತಿನ್ನಿ!

Password Leak
ದೇಶ2 hours ago

Password Leak: 995 ಕೋಟಿ ಪಾಸ್‌ವರ್ಡ್‌ಗಳು ಲೀಕ್;‌ ನಿಮ್ಮ ಪಾಸ್‌ವರ್ಡ್‌ ಕೂಡ ಕಳ್ಳತನ ಆಗಿದೆಯೇ?

CM Siddaramaiah
ಕರ್ನಾಟಕ2 hours ago

CM Siddaramaiah: ಪ್ರತಿ ಠಾಣೆಗೂ ತೆರಳಿ ಪರಿಶೀಲಿಸಬೇಕು: ಪೊಲೀಸ್‌ ಮೇಲಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ30 mins ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ3 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ4 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು6 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ8 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ13 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ1 day ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ1 day ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ1 day ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ1 day ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

ಟ್ರೆಂಡಿಂಗ್‌