Viral News: ಅಯ್ಯೋ..ಇದೆಂಥಾ ಹುಚ್ಚಾಟ! ಬಿಜೆಪಿ ಗೆಲ್ಲಲ್ಲಿ ಎಂದು ಬೆರಳನ್ನೇ ಕತ್ತರಿಸಿಕೊಂಡ ಭೂಪ - Vistara News

ದೇಶ

Viral News: ಅಯ್ಯೋ..ಇದೆಂಥಾ ಹುಚ್ಚಾಟ! ಬಿಜೆಪಿ ಗೆಲ್ಲಲ್ಲಿ ಎಂದು ಬೆರಳನ್ನೇ ಕತ್ತರಿಸಿಕೊಂಡ ಭೂಪ

Viral News: ಛತ್ತೀಸ್‌ಗಡದ ಬಾಲರಾಮ್‌ಪುರದಲ್ಲಿ ಈ ಘಟನೆ ನಡೆದಿದ್ದು, ದುರ್ಗೇಶ್‌ ಪಾಂಡೆ ಎಂಬಾತನೇ ಬಿಜೆಪಿ ಬೆಂಬಲಿಗ. ಜೂ.4ರಂದು ಚನಾವಣಾ ಫಲಿತಾಂಶ ಹೊರಬಿದ್ದಾಗ ಆರಂಭದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸುತ್ತಿದ್ದಂತೆ ತೀವ್ರ ಬೇಸರಗೊಂಡಿದ್ದನಂತೆ. ಈ ಬಾರಿ ಅಧಿಕಾರ ಎನ್‌ಡಿಎ ಕೈ ತಪ್ಪಿ ಹೋಗುತ್ತದೆ ಎಂಬ ಆತಂಕಕ್ಕೆ ಬಿದ್ದ ದುರ್ಗೇಶ್‌, ಕಾಳಿ ಮಂದಿರಕ್ಕೆ ತೆರಳಿ ಬಿಜೆಪಿ ಗೆಲುವಿಗೆ ಪ್ರಾರ್ಥಿಸಿದ್ದಾನೆ. ಅಲ್ಲದೇ ತನ್ನ ಒಂದು ಬೆರಳನ್ನೇ ಕತ್ತರಿಸಿ ದೇವಿಗೆ ಅರ್ಪಿಸಿದ್ದಾನೆ.

VISTARANEWS.COM


on

Viral News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಛತ್ತೀಸ್‌ಗಡ: ಚುನಾವಣೆ(Election) ಅಂದ್ರೆನೇ ಹಾಗೆಯೇ ಅದೊಂದು ತರಹ ಯುದ್ಧದ ರೀತಿಯೇ ಭಾಸವಾಗುತ್ತದೆ. ತಮ್ಮ ತಮ್ಮ ನೆಚ್ಚಿನ ಪಕ್ಷಗಳು, ನಾಯಕರ ಗೆಲುವಿಗೆ ನೂರಾರು ಕಾರ್ಯಕರ್ತರು, ಬೆಂಬಲಿಗರು ಹಂಬಲಿಸೋದು ಸಹಜ. ಕೆಲವೊಮ್ಮೆ ಕಾರ್ಯಕರ್ತರ ಪಕ್ಷದ ಬಗೆಗಿನ ಒಲವು ಅತಿರೇಕಕ್ಕೆ ತಿರುಗಿದಾಗ ಅನೇಕ ಅವಘಡಗಳು ಸಂಭವಿಸುತ್ತಿರುತ್ತವೆ. ಅಂತಹದ್ದೇ ಒಂದು ಘಟನೆ(Viral News) ಛತ್ತೀಸ್‌ಗಡದಲ್ಲಿ ನಡೆದಿದ್ದು, ಎನ್‌ಡಿಎ(NDA) ಬಹುಮತದೊಂದಿಗೆ ಗೆಲವು ಸಾಧಿಸಿರುವ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಬೆರಳು ಕತ್ತರಿಸಿ ಕಾಳಿ ದೇವಿಗೆ ಅರ್ಪಿಸಿದ್ದಾನೆ.

ಏನಿದು ಘಟನೆ?

ಛತ್ತೀಸ್‌ಗಡದ ಬಾಲರಾಮ್‌ಪುರದಲ್ಲಿ ಈ ಘಟನೆ ನಡೆದಿದ್ದು, ದುರ್ಗೇಶ್‌ ಪಾಂಡೆ ಎಂಬಾತನೇ ಬಿಜೆಪಿ ಬೆಂಬಲಿಗ. ಜೂ.4ರಂದು ಚನಾವಣಾ ಫಲಿತಾಂಶ ಹೊರಬಿದ್ದಾಗ ಆರಂಭದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸುತ್ತಿದ್ದಂತೆ ತೀವ್ರ ಬೇಸರಗೊಂಡಿದ್ದನಂತೆ. ಈ ಬಾರಿ ಅಧಿಕಾರ ಎನ್‌ಡಿಎ ಕೈ ತಪ್ಪಿ ಹೋಗುತ್ತದೆ ಎಂಬ ಆತಂಕಕ್ಕೆ ಬಿದ್ದ ದುರ್ಗೇಶ್‌, ಕಾಳಿ ಮಂದಿರಕ್ಕೆ ತೆರಳಿ ಬಿಜೆಪಿ ಗೆಲುವಿಗೆ ಪ್ರಾರ್ಥಿಸಿದ್ದಾನೆ. ಅಲ್ಲದೇ ತನ್ನ ಒಂದು ಬೆರಳನ್ನೇ ಕತ್ತರಿಸಿ ದೇವಿಗೆ ಅರ್ಪಿಸಿದ್ದಾನೆ.

ಇನ್ನು ಬೆರಳು ಕತ್ತರಿಸಿಕೊಂಡ ದುರ್ಗೇಶ್‌ ಪಾಂಡೆ, ಬಟ್ಟೆಯನ್ನು ಕಟ್ಟಿ ಸುರಿಯುತ್ತಿದ್ದ ರಕ್ತವನ್ನು ತಡೆಯಲು ಯತ್ನಿಸಿದ್ದಾನೆ. ಆದರೆ ರಕ್ತ ಮಾತ್ರ ನಿಲ್ಲಲೇ ಇಲ್ಲ. ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದಂತೆ ಆತನ ಕುಟುಂಬಸ್ಥರು ಆತನನ್ನು ತಕ್ಷಣ ಸಮಾರಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಆತನನ್ನು ಅಂಬಿಕಾಪುರದ ಮೆಡಿಕಲ್‌ ಕಾಲೇಜಿಗೆ ರವಾನಿಸಲಾಗಿತ್ತು. ಬಹಳ ಹೊತ್ತಾದ ಕಾರಣ ನಜ್ಜುಗುಜ್ಜಾಗಿದ್ದ ಆತನ ಬೆರಳನ್ನು ಮತ್ತೆಜೋಡಿಸಲು ಸಾಧ್ಯವಾಗಿಲ್ಲ. ಅದ್ಯ ಚಿಕಿತ್ಸೆ ಮುಂದುವರೆದಿದ್ದು, ಆತನ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ದುರ್ಗೇಶ್‌ ಪಾಂಡೆ, ಆರಂಭಿಕ ಟ್ರೆಂಡ್‌ಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುವುದನ್ನು ಕಂಡು ನಾನು ವಿಚಲಿತನಾದೆ. ಮತ್ತೊಂದೆಡೆ ಕಾಂಗ್ರೆಸ್ ಬೆಂಬಲಿಗರು ಕೂಡ ಉತ್ಸಾಹದಲ್ಲಿದ್ದರು. ಇಡೀ ಗ್ರಾಮವು ನಂಬಿರುವ ಕಾಳಿ ದೇವಸ್ಥಾನಕ್ಕೆ ನಾನು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಬಿಜೆಪಿ ಗೆಲುವಿಗೆ ಬೆರಳು ಕೊಡುವುದಾಗಿ ಪ್ರತಿಜ್ಞೆ ಮಾಡಿದ್ದೆ. ಅಂದು ಸಂಜೆ ಬಿಜೆಪಿ ಚುನಾವಣೆಯಲ್ಲಿ ಗೆದ್ದಾಗ, ನಾನು ದೇವಸ್ಥಾನಕ್ಕೆ ಹೋಗಿ, ನನ್ನ ಬೆರಳು ಕತ್ತರಿಸಿ ಅದನ್ನು ಅರ್ಪಿಸಿದೆ, ಬಿಜೆಪಿ ಈಗ ಸರ್ಕಾರ ರಚಿಸುತ್ತದೆ, ಆದರೆ ಅವರು (ಎನ್‌ಡಿಎ) 400 ರ ಗಡಿ ದಾಟಿದರೆ ನನಗೆ ಹೆಚ್ಚು ಸಂತೋಷವಾಗುತ್ತಿತ್ತು ಎಂದಿದ್ದಾನೆ.

ಇದನ್ನೂ ಓದಿ:Rahul Gandhi: ಷೇರುಪೇಟೆಯಲ್ಲಿ ಭಾರಿ ಹಗರಣವಾಗಿದೆ ಎಂದಿದ್ದ ರಾಹುಲ್ ಗಾಂಧಿಗೆ ಐದೇ ದಿನದಲ್ಲಿ 25 ಲಕ್ಷ ರೂ. ಲಾಭ!

ಕೆಲವು ದಿನಗಳ ಹಿಂದೆ ಆಪ್‌ ನಾಯಕ, ನವದೆಹಲಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಸೋಮನಾಥ್‌ ಭಾರ್ತಿ, ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾದರೆ ನನ್ನ ತಲೆ ಬೋಳಿಸಿಕೊಳ್ಳುತ್ತೇನೆ” ಎಂದಿದ್ದರು. ಜೂನ್‌ 4ರಂದು ಎಲ್ಲ ಮತಗಟ್ಟೆ ಸಮೀಕ್ಷೆಗಳು ತಪ್ಪು ಎಂಬುದು ಸಾಬೀತಾಗಲಿದೆ. ಖಂಡಿತವಾಗಿಯೂ, ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುವುದಿಲ್ಲ. ದೆಹಲಿಯ ಎಲ್ಲ 7 ಲೋಕಸಭೆ ಕ್ಷೇತ್ರಗಳಲ್ಲೂ ಇಂಡಿಯಾ ಒಕ್ಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಇನ್ನು, ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾದರೆ, ನಾನು ನನ್ನ ತಲೆಯನ್ನು ಬೋಳಿಸಿಕೊಳ್ಳುತ್ತೇನೆ” ಎಂಬುದಾಗಿ ಮತಗಟ್ಟೆ ಸಮೀಕ್ಷೆಗಳ ವರದಿಗಳ ಬಳಿಕ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Parliament Sessions: “ಕಾಂಗ್ರೆಸ್‌ನದ್ದು ರಿಮೋಟ್‌ ಕಂಟ್ರೋಲ್‌ ಸರ್ಕಾರ”-ಸೋನಿಯಾ ವಿರುದ್ಧ ಮೋದಿ ವಾಗ್ಬಾಣ

Parliament Sessions:ರಾಜ್ಯಸಭೆಯಲ್ಲಿ ಮಾತನಾಡುತ್ತಾ ಪ್ರಧಾನಿ ಮೋದಿ, ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.” ಇವರೆಲ್ಲರೂ ಸರ್ಕಾರ ರಿಮೋಟ್‌ ಕಂಟ್ರೋಲ್‌ನಿಂದ ನಡೆಯುವುದನ್ನೇ ಬಯಸುತ್ತಿದ್ದಾರೆ. ಸರ್ಕಾರ ಸ್ವತಂತ್ರವಾಗಿ ಕಾರ್ಯನಿರ್ವಹಿಸುವುದು ಅವರಿಗೆ ಬೇಕಿಲ್ಲ. ಅವರಿಗೆ ಕೇವಲ ಅನುಮತಿಗಾಗಿ ಕಾಯುವುದು ಮಾತ್ರ ಗೊತ್ತು” ಎಂದು ಕಿಡಿಕಾರಿದರು.

VISTARANEWS.COM


on

Parliament Sessions
Koo

ಹೊಸದಿಲ್ಲಿ: ನಿನ್ನೆ ಲೋಕಸಭೆ ಅಧಿವೇಶನ(Parliament Sessions)ವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ(PM Narendra Modi) ಇಂದು ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಗೆ ರಾಜ್ಯಸಭೆಯಲ್ಲಿ ಉತ್ತರಿಸಿದರು. ಲೋಕಸಭೆಯಲ್ಲಿ ವಿಪಕ್ಷ ನಾಯಕರ ರಾಹುಲ್‌ ಗಾಂಧಿ(Rahul Gandhi)ಯನ್ನು ಬಾಲ ಬುದ್ಧಿಯ ನಾಯಕ ಎಂದಿದ್ದ ಮೋದಿ ಇಂದು ಪರೋಕ್ಷವಾಗಿ ರಾಜ್ಯಸಭೆ ಸದಸ್ಯೆ, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ(Sonia Gandhi)ಯನ್ನು ಕುಟುಕಿದರು. ಈ ವೇಳೆ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷ ಮುಖಂಡರು ಸಭಾತ್ಯಾಗ ಮಾಡಿದರು.

ರಾಜ್ಯಸಭೆಯಲ್ಲಿ ಮಾತನಾಡುತ್ತಾ ಪ್ರಧಾನಿ ಮೋದಿ, ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.” ಇವರೆಲ್ಲರೂ ಸರ್ಕಾರ ರಿಮೋಟ್‌ ಕಂಟ್ರೋಲ್‌ನಿಂದ ನಡೆಯುವುದನ್ನೇ ಬಯಸುತ್ತಿದ್ದಾರೆ. ಸರ್ಕಾರ ಸ್ವತಂತ್ರವಾಗಿ ಕಾರ್ಯನಿರ್ವಹಿಸುವುದು ಅವರಿಗೆ ಬೇಕಿಲ್ಲ. ಅವರಿಗೆ ಕೇವಲ ಅನುಮತಿಗಾಗಿ ಕಾಯುವುದು ಮಾತ್ರ ಗೊತ್ತು” ಎಂದು ಕಿಡಿಕಾರಿದರು. ಆ ಮೂಲಕ ಕಾಂಗ್ರೆಸ್‌ ಅಧಿಕಾರದಲ್ಲಿರುವಾಗ ಪ್ರಧಾನಿಯಾಗಿ ಮನಮೋಹನ್‌ ಸಿಂಗ್‌ ಇದ್ದರೂ ಎಲ್ಲಾ ನಿರ್ಧಾರಗಳು ಸೋನಿಯಾ ಗಾಂಧಿಯದ್ದೇ ಆಗಿತ್ತು ಎಂಬ ಬಿಜೆಪಿ ಆರೋಪವನ್ನು ಪುನರುಚ್ಛರಿಸಿದರು. ಈ ಹೇಳಿಕೆ ನೀಡುತ್ತಿರುವಾಗಲೇ ಪ್ರತಿಪಕ್ಷ ನಾಯಕರು ಗದ್ದಲ ಆರಂಭಿಸಿದರು.

ಪ್ರಧಾನಿ ಮಾತಿನ ಆಕ್ಷೇಪ ವ್ಯಕ್ತಪಡಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನದಿಂದ ಎದ್ದು ನಿಲ್ಲುತ್ತಿದ್ದಂತೆ ಸಭಾಧ್ಯಕ್ಷ ಜಗದೀಪ್‌ ಧನ್ಕರ್‌ ಅನುಮತಿ ನೀಡಲಿಲ್ಲ. ಇದರಿಂದ ಕೋಪಗೊಂಡ ನಾಯಕರು ವಾಕ್‌ಔಟ್‌ ಮಾಡಿದರು. ಇನ್ನು ಪ್ರತಿಪಕ್ಷ ನಾಯಕರು ಸಭಾತ್ಯಾಗ ಮಾಡುತ್ತಿದ್ದಂತೆ ಟಾಂಗ್‌ ಕೊಟ್ಟ ಪ್ರಧಾನಿ ಸತ್ಯವನ್ನು ಎದುರಿಸುವ ತಾಕತ್ತು ಪ್ರತಿಪಕ್ಷಕ್ಕೆ ಇಲ್ಲ ಎಂದರು.

10 ವರ್ಷಗಳ ನಂತರ ಸರ್ಕಾರವು ಸತತವಾಗಿ ಮರಳಿದೆ ಮತ್ತು 6 ದಶಕಗಳ ನಂತರ ಭಾರತೀಯ ಪ್ರಜಾಪ್ರಭುತ್ವದಲ್ಲಿ ಇದು ಸಂಭವಿಸಿದೆ ಎಂದು ನನಗೆ ತಿಳಿದಿದೆ, ಈ ಘಟನೆ ಅಸಾಮಾನ್ಯ ಘಟನೆಯಾಗಿದೆ. ದೇಶದ ಜನ ಸಾಧನೆಗೆ ಆದ್ಯತೆ ನೀಡಿದ್ದಾರೆ. ಆದರೆ ಕೆಲವರಿಗೆ ಸಾರ್ವಜನಿಕ ವ್ಯವಸ್ಥೆ ಅರ್ಥವಾಗಲಿಲ್ಲ. ದೇಶದ ಜನತೆ ವಿಶ್ವಾಸದ ರಾಜಕಾರಣವನ್ನು ಅಳವಡಿಸಿಕೊಂಡಿದ್ದಾರೆ. ಭವಿಷ್ಯದ ನಿರ್ಣಯಗಳಿಗಾಗಿ ಸಾರ್ವಜನಿಕರು ನಮ್ಮತ್ತ ಮುಖ ಮಾಡಿದ್ದಾರೆ. ನಮ್ಮ ಸರ್ಕಾರ 10 ವರ್ಷ ನಡೆದಿದೆ, ಇನ್ನೂ 20 ವರ್ಷ ಬಾಕಿ ಇದೆ ಎಂದಿದ್ದಾರೆ.

ಇದನ್ನೂ ಓದಿ: Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

Continue Reading

ದೇಶ

Narendra Modi: ಮುಂದಿನ 5 ವರ್ಷ ಬಡತನ ವಿರುದ್ಧದ ಹೋರಾಟಕ್ಕೆ ಮೀಸಲು; ರಾಜ್ಯಸಭೆಯಲ್ಲಿ ಮೋದಿ ಭರವಸೆ

Narendra Modi: ಪ್ರಧಾನಿ ನರೇಂದ್ರ ಮೋದಿ ಬುಧವಾರ ರಾಜ್ಯಸಭೆ ಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಮಾತನಾಡಿ, ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ”2024ರ ಲೋಕಸಭಾ ಚುನಾವಣೆಯ ಫಲಿತಾಂಶವು ಜನರು ಪ್ರಚಾರವನ್ನು ತಿರಸ್ಕರಿಸಿದ್ದಾರೆ ಮತ್ತು ಕಾರ್ಯಕ್ಷಮತೆಗಾಗಿ ಮತ ಚಲಾಯಿಸಿದ್ದಾರೆ ಎನ್ನುವುದನ್ನು ಸ್ಪಷ್ಟವಾಗಿ ತೋರಿಸಿದೆ. ಮುಂದಿನ 5 ವರ್ಷ ನಾವು ಬಡತನ ನಿರ್ಮೂಲನೆ ಮಾಡಲು ಹೋರಾಡುತ್ತೇವೆʼʼ ಎಂದು ಹೇಳಿದರು.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಬುಧವಾರ (ಜುಲೈ 3) ರಾಜ್ಯಸಭೆ (Rajya Sabha)ಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಮಾತನಾಡಿ, ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ”2024ರ ಲೋಕಸಭಾ ಚುನಾವಣೆಯ ಫಲಿತಾಂಶವು ಜನರು ಪ್ರಚಾರವನ್ನು ತಿರಸ್ಕರಿಸಿದ್ದಾರೆ ಮತ್ತು ಕಾರ್ಯಕ್ಷಮತೆಗಾಗಿ ಮತ ಚಲಾಯಿಸಿದ್ದಾರೆ ಎನ್ನುವುದನ್ನು ಸ್ಪಷ್ಟವಾಗಿ ತೋರಿಸಿದೆ. ಮುಂದಿನ 5 ವರ್ಷ ನಾವು ಬಡತನ ನಿರ್ಮೂಲನೆ ಮಾಡಲು ಹೋರಾಡುತ್ತೇವೆʼʼ ಎಂದು ಹೇಳಿದರು.

ʼʼನಾವು 10 ವರ್ಷಗಳಿಂದ ಸರ್ಕಾರ ನಡೆಸಿದ್ದೇವೆ. ಇನ್ನೂ 20 ವರ್ಷ ಇದು ಮುಂದುವರಿಯಲಿದೆ. ಭಾರತದ ಸಂವಿಧಾನದಿಂದಾಗಿ ಎನ್‌ಡಿಎ ಸರ್ಕಾರ ಅಧಿಕಾರದಲ್ಲಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದಾಗಿ ನಾನು ಇಲ್ಲಿದ್ದೇನೆ” ಎಂದರು. ʼʼಎನ್‌ಡಿಎ ಮೂರನೇ ಅವಧಿಯಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ. ಕಳೆದ 10 ವರ್ಷಗಳಲ್ಲಿ ಭಾರತದ ಆರ್ಥಿಕತೆಯು ಹತ್ತರಿಂದ ಐದನೇ ಸ್ಥಾನಕ್ಕೆ ಏರಿದೆʼʼ ಎಂದು ಅವರು ಹೇಳಿದರು.

ಯಾರು ಅಧಿಕಾರದಲ್ಲಿದ್ದರೂ ದೇಶ ಬೆಳೆಯುತ್ತದೆ ಎಂಬ ಕಾಂಗ್ರೆಸ್ ಹೇಳಿಕೆಗೆ ಮೋದಿ ತಿರುಗೇಟು ನೀಡಿದರು. ಆಟೋ-ಪೈಲಟ್ ಮೋಡ್‌ನಲ್ಲಿ ಸರ್ಕಾರವನ್ನು ನಡೆಸಿದವರು ಮಾತ್ರ ಅಂತಹ ಹೇಳಿಕೆಗಳನ್ನು ನೀಡಬಹುದು ಎಂದು ಅವರು ಹೇಳಿದರು.

ಪ್ರಧಾನಿ ಮೋದಿ ಅವರ ಭಾಷಣದ ಮಧ್ಯೆ ಪ್ರತಿಪಕ್ಷದ ಸಂಸದರು ತಮ್ಮ ಸ್ಥಾನದಿಂದ ಎದ್ದುನಿಂತು ರಾಜ್ಯಸಭೆಯನ್ನು ಮುಂದೂಡುವಂತೆ ಆಗ್ರಹಿಸಿದವು. ಪ್ರಧಾನಿ ಭಾಷಣದ ವೇಳೆ ಮಧ್ಯಪ್ರವೇಶಿಸಲು ಸಭಾಪತಿ ಜಗದೀಪ್ ಧನ್ಕರ್ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಪ್ರತಿಪಕ್ಷಗಳ ಸಂಸದರು ಸಭಾತ್ಯಾಗ ಮಾಡಿದರು. ಈ ಕರಿತು ವ್ಯಂಗ್ಯವಾಡಿದ ಮೋದಿ, ʼʼಪ್ರತಿಪಕ್ಷಗಳಿಗೆ ತಾವು ಎತ್ತಿದ ಪ್ರಶ್ನೆಗಳಿಗೆ ನಾವು ಹೇಳುವ ಉತ್ತರವನ್ನು ಕೇಳುವ ತಾಳ್ಮೆ ಇಲ್ಲ. ಹೀಗಾಗಿ ಅವರು ಓಡಿಹೋಗುತ್ತಿದ್ದಾರೆ. ಅವರು ಮೇಲ್ಮನೆ ಅದರ ಸಂಪ್ರದಾಯಗಳನ್ನು ಅವಮಾನಿಸುತ್ತಿದ್ದಾರೆ. ಜನರು ಅವರನ್ನು ಎಲ್ಲ ರೀತಿಯಲ್ಲಿ ಸೋಲಿಸಿದ್ದಾರೆ ಮತ್ತು ಅವರಿಗೆ ಗಲ್ಲಿಗಳಲ್ಲಿ ಕೂಗುವುದನ್ನು ಬಿಟ್ಟು ಬೇರೆ ಆಯ್ಕೆಗಳಿಲ್ಲʼʼ ಎಂದು ಟೀಕಿಸಿದರು.

ʼʼಬೆಂಬಲ ಬೆಲೆಯಲ್ಲಿ ದಾಖಲೆಯ ಖರೀದಿಯನ್ನೂ ಮಾಡಿದ್ದೇವೆ. ಮೊದಲು ಕೇವಲ ಘೋಷಣೆಗಳನ್ನು ಮಾಡಲಾಗುತ್ತಿತ್ತು, ಆದರೆ ಈಗ ಖರೀದಿಗಳನ್ನು ಮಾಡಲಾಗಿದೆ. ನಾವು ಮಹಿಳೆಯರ ಹೆಸರಿನಲ್ಲಿ ಹೆಚ್ಚಿನ ಮನೆಗಳನ್ನು ನಿರ್ಮಿಸಿದ್ದೇವೆ. ಬ್ಯಾಂಕ್‌ಗಳಲ್ಲಿ ಖಾತೆ ತೆರೆಯುವುದರೊಂದಿಗೆ ಆರ್ಥಿಕ ನಿರ್ಧಾರಗಳಲ್ಲಿ ಮಹಿಳೆಯರ ಪಾತ್ರ ಹೆಚ್ಚಿದೆ. ಎಲ್ಲರಿಂದಲೂ ಕಡೆಗಣಿಸಲ್ಪಟ್ಟ ಮಹಿಳೆಯರಲ್ಲಿ ಆತ್ಮವಿಶ್ವಾಸ ವೃದ್ಧಿಸಿದೆʼʼ ಎಂದು ಮೋದಿ ತಿಳಿಸಿದರು.

ಮೋದಿ ಹೇಳಿದ್ದೇನು?

  • ಈ ಚುನಾವಣೆಯಲ್ಲಿ ಈ ದೇಶದ ಜನರು ತೋರಿದ ಬುದ್ಧಿವಂತಿಕೆಯ ಬಗ್ಗೆ ನಮಗೆ ಹೆಮ್ಮೆ ಇದೆ. ಅವರು ಪ್ರಚಾರವನ್ನು ಸೋಲಿಸಿದರು. ಅವರು ಕಾರ್ಯಕ್ಷಮತೆಗೆ ಆದ್ಯತೆ ನೀಡಿದರು. ಅವರು ಮೋಸದ ರಾಜಕೀಯವನ್ನು ತಿರಸ್ಕರಿಸಿದರು ಮತ್ತು ನಂಬಿಕೆಯ ರಾಜಕೀಯದ ಮೇಲೆ ವಿಜಯದ ಮುದ್ರೆ ಒತ್ತಿದರು.
  • ‘ವಿಸಿತ್‌ ಭಾರತ್’ ಮತ್ತು ‘ಆತ್ಮನಿರ್ಭರ ಭಾರತ್’ ಅನ್ನು ಸಾಕಾರಗೊಳಿಸಲು ದೇಶದ ಜನರು ಮೂರನೇ ಬಾರಿಗೆ ನಮಗೆ ನೀಡಿದ ಅವಕಾಶ ಇದು.
  • ಮುಂದಿನ ಐದು ವರ್ಷಗಳು ಮೂಲಭೂತ ಸೌಕರ್ಯಗಳ ಪರಿಪೂರ್ಣತೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ಬಡತನದ ವಿರುದ್ಧದ ಹೋರಾಟಕ್ಕೆ ಮೀಸಲಿಡುತ್ತಿದ್ದೇವೆ. ಈ ದೇಶವು ಬಡತನದ ವಿರುದ್ಧದ ಹೋರಾಟದಲ್ಲಿ ವಿಜಯಶಾಲಿಯಾಗಿ ಹೊರಹೊಮ್ಮಲಿದೆ ಮತ್ತು ಕಳೆದ 10 ವರ್ಷಗಳ ಅನುಭವದ ಆಧಾರದ ಮೇಲೆ ನಾನು ಇದನ್ನು ಹೇಳುತ್ತಿದ್ದೇನೆ ಎಂದು ಮೋದಿ ಹೇಳಿದರು.
  • ಇದನ್ನೂ ಓದಿ: Narendra Modi: ರಾಹುಲ್‌ ಗಾಂಧಿ ಥರ ಆಡ್ಬೇಡಿ; ಗಂಭೀರವಾಗಿರಿ: ಎನ್‌ಡಿಎ ಸಂಸದರಿಗೆ ಮೋದಿ ಕಿವಿಮಾತು
Continue Reading

ದೇಶ

Hijab Row: ಹಿಬಾಬ್‌ ನಿಷೇಧದ ಬೆನ್ನಲ್ಲೇ ಜೀನ್ಸ್‌, ಟೀ-ಶರ್ಟ್‌ ಬ್ಯಾನ್‌- ಪ್ರಕಟಣೆ ಹೊರಡಿಸಿದ ಮುಂಬೈ ಕಾಲೇಜು

Hijab Row: ವಿದ್ಯಾರ್ಥಿಗಳು ಔಪಚಾರಿಕ ಮತ್ತು ಯೋಗ್ಯವಾದ ಉಡುಗೆಯನ್ನು ಧರಿಸಬೇಕು. ಅವರು ಶರ್ಟ್‌-ಪ್ಯಾಂಟ್‌ ಧರಿಸಬಹುದು. ಹುಡುಗಿಯರು ಭಾರತೀಯ ಹಾಗೂ ಮಾರ್ಡನ್‌ ಡ್ರೆಸ್‌ ಧರಿಸಬಹುದು. ಆದರೆ ಆದರೆ ಒಂದು ಧರ್ಮ, ಜಾತಿಯನ್ನು ಪ್ರತಿನಿಧಿಸುವಂತಹ ಬಟ್ಟೆಯನ್ನು ಧರಿಸುವಂತಿಲ್ಲ. ಆದರೆ ಜೀನ್ಸ್‌, ಟಿ ಶರ್ಟ್‌, ಅಸಭ್ಯ ರೀತಿಯ ಉಡುಗೆಗಳನ್ನು ಧರಿಸಲು ಅವಕಾಶ ಇಲ್ಲ. ಹಿಜಾಬ್‌, ಬುರ್ಖಾ, ನಖಾಬ್, ಶಾಲು, ಟೋಪಿಗಳನ್ನು ತೆಗೆದೇ ಕ್ಯಾಂಪಸ್‌ ಒಳಗೆ ಬರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

VISTARANEWS.COM


on

Hijab Row
Koo

ಮುಂಬೈ: ಹಿಜಾಬ್‌ ನಿಷೇಧ(Hijab Row)ದ ಬೆನ್ನಲ್ಲೇ ಮುಂಬೈ ಕಾಲೇಜು(Mumbai College) ಇದೀಗ ವಿದ್ಯಾರ್ಥಿಗಳು ಟೋರ್ನ್‌ ಜೀನ್ಸ್‌ ಮತ್ತು ಟೀ-ಶರ್ಟ್‌ ಧರಿಸುವುದನ್ನು ಬ್ಯಾನ್‌ ಮಾಡಿದ್ದು, ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿದೆ. ಚೆಂಬೂರ್‌ ಟ್ರಾಮ್ಬೇ ಎಜುಕೇಶನ್‌ ಸೊಸೈಟಿಯ ಎನ್‌ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜಿನ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದ್ದು, ಕಾಲೇಜು ಕ್ಯಾಂಪಸ್‌ನಲ್ಲಿ ವಸ್ತ್ರಸಂಹಿತೆಯನ್ನು ತಪ್ಪದೇ ಪಾಲಿಸುವಂತೆ ಆದೇಶಿಸಿದೆ.

ವಿದ್ಯಾರ್ಥಿಗಳು ಔಪಚಾರಿಕ ಮತ್ತು ಯೋಗ್ಯವಾದ ಉಡುಗೆಯನ್ನು ಧರಿಸಬೇಕು. ಅವರು ಶರ್ಟ್‌-ಪ್ಯಾಂಟ್‌ ಧರಿಸಬಹುದು. ಹುಡುಗಿಯರು ಭಾರತೀಯ ಹಾಗೂ ಮಾರ್ಡನ್‌ ಡ್ರೆಸ್‌ ಧರಿಸಬಹುದು. ಆದರೆ ಆದರೆ ಒಂದು ಧರ್ಮ, ಜಾತಿಯನ್ನು ಪ್ರತಿನಿಧಿಸುವಂತಹ ಬಟ್ಟೆಯನ್ನು ಧರಿಸುವಂತಿಲ್ಲ. ಆದರೆ ಜೀನ್ಸ್‌, ಟಿ ಶರ್ಟ್‌, ಅಸಭ್ಯ ರೀತಿಯ ಉಡುಗೆಗಳನ್ನು ಧರಿಸಲು ಅವಕಾಶ ಇಲ್ಲ. ಹಿಜಾಬ್‌, ಬುರ್ಖಾ, ನಖಾಬ್, ಶಾಲು, ಟೋಪಿಗಳನ್ನು ತೆಗೆದೇ ಕ್ಯಾಂಪಸ್‌ ಒಳಗೆ ಬರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕದಂತೆ ಮಹಾರಾಷ್ಟ್ರದಲ್ಲೂ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್‌, ಬುರ್ಖಾ ಧರಿಸುವ ಕುರಿತು ವಿವಾದ (Hijab Row) ಭುಗಿಲೆದ್ದಿದೆ. ಇದರ ಬೆನ್ನಲ್ಲೇ, ಚೆಂಬುರ್‌ ಟ್ರೋಂಬೆ ಎಜುಕೇಷನ್‌ ಸೊಸೈಟಿಯ ಎನ್‌.ಜಿ.ಆಚಾರ್ಯ ಹಾಗೂ ಕೆ.ಕೆ. ಮರಾಠೆ ಕಾಲೇಜು ಹಿಜಾಬ್‌, ಬುರ್ಖಾ ನಿಷೇಧಿಸಿದ (Hijab Ban) ಮುಂಬೈ ಮೂಲದ ಕಾಲೇಜಿನ ಆದೇಶವನ್ನು ಬಾಂಬೆ ಹೈಕೋರ್ಟ್‌ (Bombay High Court) ಎತ್ತಿಹಿಡಿದಿತ್ತು. ಕಾಲೇಜಿನಲ್ಲಿ ಹಿಜಾಬ್‌, ಬುರ್ಖಾ ನಿಷೇಧಿಸಿದ ಕಾಲೇಜಿನ ಆಡಳಿತ ಮಂಡಳಿ ತೀರ್ಮಾನದ ವಿಷಯದಲ್ಲಿ ಮಧ್ಯಪ್ರವೇಶ ಇಲ್ಲ ಎಂಬುದಾಗಿ ಬಾಂಬೆ ಹೈಕೋರ್ಟ್‌ ಖಡಾಖಂಡಿತವಾಗಿ ಹೇಳಿತ್ತು.

ಮುಂಬೈನಲ್ಲಿರುವ ಚೆಂಬುರ್‌ ಟ್ರೋಂಬೆ ಎಜುಕೇಷನ್‌ ಸೊಸೈಟಿಯ ಎನ್‌.ಜಿ.ಆಚಾರ್ಯ ಹಾಗೂ ಕೆ.ಕೆ. ಮರಾಠೆ ಕಾಲೇಜಿನಲ್ಲಿ ಇತ್ತೀಚೆಗೆ ವಸ್ತ್ರಸಂಹಿತೆ ಜಾರಿಗೆ ತರಲಾಗಿದ್ದು, ಕಾಲೇಜು ಆವರಣದಲ್ಲಿ ಹಿಜಾಬ್‌, ನಕಾಬ್‌, ಬುರ್ಖಾ, ಶಾಲು, ಟೋಪಿ, ಬ್ಯಾಡ್ಜ್‌ಗಳನ್ನು ಧರಿಸಿಕೊಂಡು ಬರುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಆದರೆ, ಕಾಲೇಜಿನಲ್ಲಿ ಪದವಿಯ ದ್ವಿತೀಯ ಹಾಗೂ ಅಂತಿಮ ವರ್ಷದ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ 9 ವಿದ್ಯಾರ್ಥಿನಿಯರು ಕಾಲೇಜಿನ ಆದೇಶ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗಿದ್ದರು.

ವಿದ್ಯಾರ್ಥಿಗಳ ಪರ ಹಿರಿಯ ವಕೀಲ ಅಲ್ತಾಫ್‌ ಖಾನ್‌ ವಾದ ಮಂಡಿಸಿದರು. “ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸುವುದು ಅವರ ಆಯ್ಕೆ ಹಾಗೂ ವೈಯಕ್ತಿಕ ವಿಚಾರವಾಗಿದೆ. ಹೀಗೆ, ಹಿಜಾಬ್‌ ಧರಿಸುವುದನ್ನು ನಿಷೇಧಿಸುವ ಮೂಲಕ ಕಾಲೇಜಿನ ಆಡಳಿತ ಮಂಡಳಿಯು ಕಾನೂನುಬಾಹಿರ, ನಿರಂಕುಶ ಹಾಗೂ ಹಟಮಾರಿತನದ ನಿರ್ಧಾರ ತೆಗೆದುಕೊಂಡಿದೆ. ಇಸ್ಲಾಂನಲ್ಲಿ ಹಿಜಾಬ್‌ ಧರಿಸುವುದು ಅತ್ಯವಶ್ಯಕವಾಗಿದೆ. ಈ ಕುರಿತು ಕುರಾನ್‌ನಲ್ಲಿ ಕೂಡ ಉಲ್ಲೇಖಿಸಲಾಗಿದೆ” ಎಂದು ಕುರಾನ್‌ನ ಹಲವು ಅಧ್ಯಾಯಗಳನ್ನು ಕೋರ್ಟ್‌ಗೆ ನೀಡಿದರು.

ಕಾಲೇಜು ಆಡಳಿತ ಮಂಡಳಿ ಪರ ಅನಿಲ್‌ ಅತುರ್ಕರ್‌ ವಾದ ಮಂಡಿಸಿದರು. “ಕಾಲೇಜಿನಲ್ಲಿ ಯಾವುದೇ ಧರ್ಮ, ಜಾತಿ ಹಾಗೂ ಸಮುದಾಯಗಳನ್ನು ಗಮನದಲ್ಲಿಟ್ಟುಕೊಂಡು ವಸ್ತ್ರಸಂಹಿತೆ ತಂದಿಲ್ಲ. ಎಲ್ಲ ತೀರ್ಮಾನಗಳನ್ನು ಸಮಾನ ವಸ್ತ್ರಸಂಹಿತೆ ಜಾರಿಯಲ್ಲಿರಲಿ ಎಂದು ತೆಗೆದುಕೊಳ್ಳಲಾಗಿದೆ. ಇಸ್ಲಾಂ ವಿರೋಧಿಯಾಗಿ, ಯಾವುದೇ ಧರ್ಮದ ವಿರೋಧಿಯಾಗಿ ಈ ತೀರ್ಮಾನ ತೆಗೆದುಕೊಂಡಿಲ್ಲ” ಎಂದು ಹೇಳಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳಾದ ಎ.ಎಸ್.ಚಂದುರ್ಕರ್‌ ಹಾಗೂ ರಾಜೇಶ್‌ ಪಾಟೀಲ್‌ ಅವರಿದ್ದ ಪೀಠವು, ಕಾಲೇಜು ಆಡಳಿತ ಮಂಡಳಿಯ ತೀರ್ಮಾನದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ತಿಳಿಸಿತು.

ಇದನ್ನೂ ಓದಿ:Stampedes in India: ದೇಶದಲ್ಲಿ ಈ ಹಿಂದೆಯೂ ನಡೆದಿವೆ ಭಾರೀ ಕಾಲ್ತುಳಿತ ದುರಂತ; ಇಲ್ಲಿದೆ ಲಿಸ್ಟ್‌

Continue Reading

ದೇಶ

Anant-Radhika Wedding: ಅನಂತ್‌ ಅಂಬಾನಿ ಮದುವೆಗೆ ಪೂರ್ವಭಾವಿಯಾಗಿ ಸಾಮೂಹಿಕ ವಿವಾಹ; ಪ್ರತಿ ವಧುವಿಗೆ ಚಿನ್ನಾಭರಣ, 1 ಲಕ್ಷ ರೂ.

Anant-Radhika Wedding: ಜುಲೈ 12ರಂದು ಮುಂಬೈಯಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹ ನಡೆಯಲಿದೆ. ಅದಕ್ಕೆ ಮುನ್ನುಡಿಯಾಗಿ ಜುಲೈ 2ರಂದು ಮುಕೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಸುಮಾರು 50 ಬಡ ಜೋಡಿಗಳ ಸಾಮೂಹಿಕ ವಿವಾಹ ನೆರವೇರಿಸಿ ಮಾದರಿಯಾಗಿದ್ದಾರೆ. ಮುಂಬೈಯಿಂದ ಸುಮಾರು 100 ಕಿ.ಮೀ. ದೂರದಲ್ಲಿರುವ ಫಾಲ್ಘರ್‌ನಲ್ಲಿ ಈ ಸಾಮೂಹಿಕ ವಿವಾಹ ನೆರವೇರಿತು. ರಿಲಯನ್ಸ್‌ ಕಾರ್ಪೋರೇಟ್‌ ಪಾರ್ಕ್‌ನಲ್ಲಿ ನಡೆದ ಈ ವಿವಾಹ ಸಮಾರಂಭದಲ್ಲಿ ಆರ್ಥಿಕವಾಗಿ ಹಿಂದುಳಿದ 50 ಜೋಡಿ ಹಸಮಣೆಗೇರಿತು.

VISTARANEWS.COM


on

Anant-Radhika Wedding
Koo

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಮತ್ತು ನೀತಾ ಅಂಬಾನಿ (Nita Ambani) ದಂಪತಿ ಪುತ್ರ ಅನಂತ್ ಅಂಬಾನಿ (Anant Ambani) ಮತ್ತು ರಾಧಿಕಾ ಮರ್ಚೆಂಟ್ (Radhika Merchant) ಅವರ ವಿವಾಹಕ್ಕೆ ದಿನ ಗಣನೆ ಆರಂಭವಾಗಿದೆ. ಜುಲೈ 12ರಂದು ಮುಂಬೈಯಲ್ಲಿ ಈ ಅದ್ಧೂರಿ ಸಮಾರಂಭ ಆಯೋಜಿಸಲಾಗಿದೆ. ಅದಕ್ಕೆ ಮುನ್ನುಡಿಯಾಗಿ ಜುಲೈ 2ರಂದು ಮುಕೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಸುಮಾರು 50 ಬಡ ಜೋಡಿಗಳ ಸಾಮೂಹಿಕ ವಿವಾಹ ನೆರವೇರಿಸಿ ಮಾದರಿಯಾಗಿದ್ದಾರೆ.

ಮುಂಬೈಯಿಂದ ಸುಮಾರು 100 ಕಿ.ಮೀ. ದೂರದಲ್ಲಿರುವ ಫಾಲ್ಘರ್‌ನಲ್ಲಿ ಈ ಸಾಮೂಹಿಕ ವಿವಾಹ ನೆರವೇರಿತು. ರಿಲಯನ್ಸ್‌ ಕಾರ್ಪೋರೇಟ್‌ ಪಾರ್ಕ್‌ನಲ್ಲಿ ನಡೆದ ಈ ವಿವಾಹ ಸಮಾರಂಭದಲ್ಲಿ ಆರ್ಥಿಕವಾಗಿ ಹಿಂದುಳಿದ 50 ಜೋಡಿ ಹಸಮಣೆಗೇರಿತು.

ಈ ಸಾಮೂಹಿಕ ವಿವಾಹದಲ್ಲಿ ವಧು-ವರರ ಕುಟುಂಬದ ಸುಮಾರು 800 ಮಂದಿ ಪಾಲ್ಗೊಂಡಿದ್ದರು. ಸ್ವತಃ ಮುಕೇಶ್‌ ಅಂಬಾನಿ, ನೀತಾ ಅಂಬಾನಿ, ಆಕಾಶ್‌ ಅಂಬಾನಿ, ಶ್ಲೋಕ ಮೆಹ್ತಾ, ಇಶಾ ಅಂಬಾನಿ, ಆನಂದ್‌ ಪಿರಮಾಲ್‌ ಆಗಮಿಸಿ ನೂತನ ವಧು-ವರರನ್ನು ಹಾರೈಸಿದರು.

ಉಡುಗೊರೆ

ಪ್ರತಿ ಜೋಡಿಗೆ ಚಿನ್ನದ ಉಂಗುರ, ಮಂಗಳ ಸೂತ್ರ, ಮೂಗುತ್ತಿ ಉಡುಗೊರೆಯಾಗಿ ನೀಡಲಾಯಿತು. ಜತೆಗೆ ಬೆಳ್ಳಿಯ ಆಭರಗಳನ್ನೂ ನೀಡಲಾಗಿದೆ. ಜತೆಗೆ ಸ್ತ್ರೀಧನವಾಗಿ ಪ್ರತಿ ವಧುವಿಗೆ 1.01 ಲಕ್ಷ ರೂ. ಚೆಕ್‌ ಅನ್ನು ಅಂಬಾನಿ ಕುಟುಂಬಸ್ಥರು ವಿತರಿಸಿದ್ದಾರೆ. ಮಾತ್ರವಲ್ಲ ಪ್ರತಿ ಜೋಡಿಗೆ ಒಂದು ವರ್ಷಕ್ಕೆ ಅಗತ್ಯವಾದ ದಿನಸಿ ಸಾಮಗ್ರಿಗಳನ್ನೂ ವಿತರಿಸಲಾಗಿದೆ. ಇದು ಪಾತ್ರೆ ಪರಿಕರಗಳು, ಗ್ಯಾಸ್‌ ಸ್ಟವ್‌, ಮಿಕ್ಸಿ, ಫ್ಯಾನ್‌, ಹಾಸಿಗೆ ಮತ್ತು ತಲೆ ದಿಂಬುಗಳನ್ನು ಒಳಗೊಂಡಿದೆ. ಅದ್ಧೂರಿ ಭೋಜನದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಈ ವೇಳೆ ವರ್ಲಿ ಬುಡಕಟ್ಟು ಜನಾಂಗದವರು ಪ್ರದರ್ಶಿಸಿದ ಸಾಂಪ್ರದಾಯಿಕ ತಾರ್ಪ ನೃತ್ಯವನ್ನು ಅತಿಥಿಗಳು ಮತ್ತು ಅಂಬಾನಿ ಕುಟುಂಬದ ಸದಸ್ಯರು ವೀಕ್ಷಿಸಿದರು.

ʼʼಜನ ಸೇವೆಯೇ ಜನಾರ್ದನ ಸೇವೆ ಎಂದು ಪರಿಗಣಿಸುವ ಅಂಬಾನಿ ಕುಟುಂಬ ಪ್ರತಿ ಶುಭ ಸಂದರ್ಭದಲ್ಲಿ ಸಮಾಜಕ್ಕೆ ನೆರವಾಗುವ ಉದ್ದೇಶದಿಂದ ಇಂತ ಜನ ಕಲ್ಯಾಣ ಕಾರ್ಯಕ್ರಮಗಳು ಆಯೋಜಿಸುತ್ತದೆʼʼ ಎಂದು ಆಪ್ತ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Mohan Bhagwat: ಮುಕೇಶ್‌ ಅಂಬಾನಿ ನಿವಾಸಕ್ಕೆ ಆಗಮಿಸಿದ ಮೋಹನ್‌ ಭಾಗವತ್‌; ಕೈ ಮುಗಿದು ಸ್ವಾಗತಿಸಿದ ನೀತಾ ಅಂಬಾನಿ

ಜುಲೈ 12ರಂದು ಮದುವೆ

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12ರಂದು ಮುಂಬೈಯ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿದ್ದಾರೆ. ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಇದರ ವಿವರವನ್ನು ಬಹಿರಂಗಪಡಿಸುವ ಆಹ್ವಾನ ಪತ್ರಿಕೆ ರಿಲೀಸ್‌ ಆಗಿ, ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಜುಲೈ 14ರವರೆಗೆ ಶುಭ ವಿವಾಹ, ಶುಭ ಆಶೀರ್ವಾದ ಮತ್ತು ಮಂಗಳ ಉತ್ಸವ ಎನ್ನುವ ಮೂರು ದಿನಗಳ ಕಾರ್ಯಕ್ರಮ ನಡೆಯಲಿದೆ. ಕೆಲವು ದಿನಗಳ ಹಿಂದೆ ಮೂರು ದಿನಗಳ ಅದ್ದೂರಿ ಮದುವೆ ಪೂರ್ವ ಸಮಾರಂಭ ನಡೆದಿತ್ತು. ದೇಶ-ವಿದೇಶಗಳ ವಿವಿಧ ಕ್ಷೇತ್ರಗಳ ಗಣ್ಯರು ಇದರಲ್ಲಿ ಪಾಲ್ಗೊಂಡಿದ್ದರು.

Continue Reading
Advertisement
Mangalore News
ಕರ್ನಾಟಕ1 min ago

Mangalore News: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು

Parliament Sessions
ದೇಶ10 mins ago

Parliament Sessions: “ಕಾಂಗ್ರೆಸ್‌ನದ್ದು ರಿಮೋಟ್‌ ಕಂಟ್ರೋಲ್‌ ಸರ್ಕಾರ”-ಸೋನಿಯಾ ವಿರುದ್ಧ ಮೋದಿ ವಾಗ್ಬಾಣ

Physical Abuse
ಕರ್ನಾಟಕ51 mins ago

Physical Abuse: ಬೆಂಗಳೂರಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ

Narendra Modi
ದೇಶ57 mins ago

Narendra Modi: ಮುಂದಿನ 5 ವರ್ಷ ಬಡತನ ವಿರುದ್ಧದ ಹೋರಾಟಕ್ಕೆ ಮೀಸಲು; ರಾಜ್ಯಸಭೆಯಲ್ಲಿ ಮೋದಿ ಭರವಸೆ

Double Ismart Steppa Maar electrifies with mass beats
ಟಾಲಿವುಡ್60 mins ago

Double Ismart: ಪ್ರಚಾರ ಅಖಾಡದಲ್ಲಿ ‘ಡಬಲ್ ಇಸ್ಮಾರ್ಟ್’: ಮೊದಲ ಹಾಡು ರಿಲೀಸ್!

Actor Darshan
ಕರ್ನಾಟಕ1 hour ago

Actor Darshan: ಮಗುವನ್ನು ಕೈದಿ ಮಾಡಿದವರಿಗೆ ಕಾನೂನು ಕಂಟಕ; ಪಾಲಕರಿಗೆ ನೋಟಿಸ್‌!

IPL 2025
ಕ್ರೀಡೆ2 hours ago

IPL 2025: ಮುಂದಿನ ವರ್ಷ ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕ?

Kannada New Movie kannnajaru teaser teaser Out
ಸಿನಿಮಾ2 hours ago

Kannada New Movie: ‘ಕಣಂಜಾರು’ ಟೀಸರ್ ಮೆಚ್ಚಿದ ಚಂದನವನ!

viral news signboard
ವೈರಲ್ ನ್ಯೂಸ್2 hours ago

Viral News: ʼತುರ್ತಾಗಿ ಒಂದು ಅಪಘಾತ ಮಾಡಿʼ ಅನ್ನುತ್ತಿದೆ ಈ ಸೈನ್‌ಬೋರ್ಡ್‌!

Hijab Row
ದೇಶ2 hours ago

Hijab Row: ಹಿಬಾಬ್‌ ನಿಷೇಧದ ಬೆನ್ನಲ್ಲೇ ಜೀನ್ಸ್‌, ಟೀ-ಶರ್ಟ್‌ ಬ್ಯಾನ್‌- ಪ್ರಕಟಣೆ ಹೊರಡಿಸಿದ ಮುಂಬೈ ಕಾಲೇಜು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ19 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌