HSRP Number Plate: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿಗೆ ಡೆಡ್‌ಲೈನ್‌! ಇನ್ನೂ ಎರಡೇ ದಿನ ಬಾಕಿ - Vistara News

ಬೆಂಗಳೂರು

HSRP Number Plate: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿಗೆ ಡೆಡ್‌ಲೈನ್‌! ಇನ್ನೂ ಎರಡೇ ದಿನ ಬಾಕಿ

HSRP Number Plate : ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿಗೆ ಈಗಾಗಲೇ ಹಲವು ಬಾರಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿತ್ತು. ಇದೀಗ ನಂಬರ್‌ ಪ್ಲೇಟ್‌ ನೋಂದಣಿಗೆ ಇನ್ನೆರಡು ದಿನಗಳು ಮಾತ್ರ ಬಾಕಿ ಇವೆ ಅಂದರೆ, ಜೂನ್‌ 12ಕ್ಕೆ ಮುಕ್ತಾಯವಾಗಲಿದೆ.

VISTARANEWS.COM


on

HSRP Number Plate
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ‌ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ (Old Vehicles) ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ನಂಬರ್‌ ಪ್ಲೇಟ್‌ (HSRP Number Plate) ಕಡ್ಡಾಯವಾಗಿ ಅಳವಡಿಸಲು ಇದ್ದ ಗಡುವು ಇನ್ನೂ ಎರಡೇ ದಿನದಲ್ಲಿ ಮುಕ್ತಾಯವಾಗಲಿದೆ. ಈ ಹಿಂದೆ ಫೆಬ್ರವರಿ 17ಕ್ಕೆ ಇದ್ದ ನೋಂದಣಿ ಗಡುವನ್ನು ರಾಜ್ಯ ಸರ್ಕಾರ ಮೇ 31ಕ್ಕೆ ವಿಸ್ತರಣೆ ಮಾಡಿತ್ತು. ಬಳಿಕ ಜೂನ್‌ 12ರವರೆಗೆ ಗಡುವು ನೀಡಿದ್ದು, ಇನ್ನೆರಡು ದಿನದಲ್ಲಿ ಮುಕ್ತಾಯವಾಗಲಿದೆ. ನೋಂದಣಿ ಮಾಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಕ್ರಮ ಜರುಗಿಸುವ ತೀರ್ಮಾನಕ್ಕೆ ಸಾರಿಗೆ ಇಲಾಖೆ ಬಂದಿದೆ. ಮೊದಲ ಬಾರಿಗೆ ಸಿಕ್ಕಿಬಿದ್ದರೆ 500 ರೂಪಾಯಿ ದಂಡ, ಎರಡನೇ ಬಾರಿ ಸಿಕ್ಕಿಬಿದ್ದರೆ 1000 ರೂಪಾಯಿಗೆ ಏರಿಕೆ ಮಾಡುವ ನಿಟ್ಟಿನಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಲು ಚಿಂತಿಸಲಾಗಿದೆ ಎನ್ನಲಾಗಿದೆ.

ಅಧಿಕೃತ ವೆಬ್‌ಸೈಟ್‌ನಲ್ಲಿ ಮಾತ್ರವೇ ನೋಂದಣಿ ಮಾಡಿ

ಅದೆಷ್ಟೋ ಜನರಿಗೆ ಎಲ್ಲಿ ಅಪ್ಲೈ ಮಾಡಬೇಕು ಎಂಬುದೇ ಗೊತ್ತಿಲ್ಲ. ಹೀಗಾಗಿ ಗೊತ್ತಾಗದೇ ಮಧ್ಯವರ್ತಿಗಳ ಮೊರೆ ಹೋಗುತ್ತಿದ್ದಾರೆ ಕೂಡ. ಇನ್ನು ಕೆಲವರು ಯಾವುದ್ಯಾವುದೋ ವೆಬ್‌ಸೈಟ್‌ ಓಪನ್‌ ಮಾಡಿ ವಂಚನೆಗೆ ಒಳಗಾಗುತ್ತಿದ್ದು, ಇದನ್ನು ತಪ್ಪಿಸುವ ಕೆಲಸ ಆಗಬೇಕಿದೆ. ಇನ್ನು ಮೊಬೈಲ್‌ ಇಲ್ಲವೇ ಡೆಸ್ಕ್‌ಟಾಪ್‌ ಮೂಲಕವೇ ನೋಂದಣಿ ಮಾಡಿಸಬಹುದಾಗಿದ್ದು, ಇದಕ್ಕೆ ಸರಳ ವಿಧಾನವಿದೆ.

ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನ, ಪ್ರಯಾಣಿಕ ಕಾರು, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನ, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಅಳವಡಿಸುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು.

ಏನಿದು ಎಚ್ಎಸ್ಆರ್‌ಪಿ ನಂಬರ್‌ ಪ್ಲೇಟ್‌?

ಎಚ್‌ಎಸ್‌ಆರ್‌ಪಿ ಎಂದರೆ ಅತಿ ಸುರಕ್ಷಿತ ನೋಂದಣಿ ಫಲಕವಾಗಿದೆ. ಇವುಗಳನ್ನು ಅಲ್ಯೂಮಿನಿಯಂ ಲೋಹದಿಂದ ಮಾಡಿರುತ್ತಾರೆ. ಈ ಪ್ಲೇಟ್‌ನ ಮೇಲ್ಭಾಗದ ಎಡಬದಿಯಲ್ಲಿ ಅಶೋಕ ಚಕ್ರ ಮುದ್ರೆಯ 20X20 ಮಿ.ಮೀ ಅಳತೆಯ ಕ್ರೋಮಿಯಂ ಹೋಲೋಗ್ರಾಮ್‌ ಇರುತ್ತದೆ. ಇಂಗ್ಲಿಷ್ ಅಕ್ಷರಗಳು ಹಾಗೂ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತವೆ. ಈ ನಂಬರ್‌ ಪ್ಲೇಟ್‌ಗಳನ್ನು ಎರಡು ಲಾಕ್‌ ಪಿನ್‌ಗಳನ್ನು ಬಳಸಿ ಅಳವಡಿಸುತ್ತಾರೆ. ಇದರಿಂದ ಒರಿಜಿನಲ್‌ ಯಾವುದು, ನಕಲಿ ಯಾವುದು ಎಂದು ಸುಲಭವಾಗಿ ಗುರುತಿಸಬಹುದು.

ಇದನ್ನೂ ಓದಿ: NEET UG : ನೀಟ್-ಯುಜಿ ಫಲಿತಾಂಶ ಹಿಂಪಡೆಯಲು ಕೋರಿ ಸುಪ್ರೀಂ ಕೋರ್ಟ್​​ಗೆ ಅರ್ಜಿ

ಎಚ್ಎಸ್ಆರ್‌ಪಿ ಪಡೆಯುವುದು ಹೇಗೆ?

ಕರ್ನಾಟಕ ಸಾರಿಗೆ ಇಲಾಖೆ ವೆಬ್‌ಸೈಟ್‌ ಅಥವಾ ಸೊಸೈಟಿ ಆಫ್‌ ಇಂಡಿಯನ್‌ ಆಟೋಮೊಬೈಲ್‌ ಮ್ಯಾನುಫ್ಯಾಕ್ಚರರ್ಸ್‌ (ಎಸ್‌ಐಎಎಂ) ವೆಬ್‌ಸೈಟ್‌ ಭೇಟಿ ನೀಡಿ ಮತ್ತು Book HSRP ಅನ್ನು ಕ್ಲಿಕ್‌ ಮಾಡಿ.
-ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ.
-ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
-HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆ ಮಾಡಿ.
-HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ, ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
-ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ ರವಾನಿಸಲಾಗುವುದು.
-ನಿಮ್ಮ ಅನುಕೂಲಕ್ಕೆ ತಕ್ಕಂತಹ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ.
-ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.
-ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆಯನ್ನು ಹೊಂದಬಹುದು.

ಎಚ್‌ಎಸ್‌ಆರ್‌ಪಿ ಯಾಕೆ ಮತ್ತು ವಿಶೇಷತೆ ಏನು?

-HSRP ನೋಂದಣಿ ಫಲಕಗಳು ಅತ್ಯಂತ ಸುರಕ್ಷಿತವಾಗಿದ್ದು ಇವುಗಳನ್ನು ಬದಲಿಸುವುದು, ವಿರೂಪಗೊಳಿಸುವುದು ಸಾಧ್ಯವಿಲ್ಲ.

-ನಂಬರ್‌ ಪ್ಲೇಟ್‌ನ ಒಂದು ಬದಿಯಲ್ಲಿ ನೀಲಿ ಬಣ್ಣದ ಚಕ್ರವನ್ನು ಹೋಲುವ ಹಾಲೋಗ್ರಾಮ್‌ ಇರುತ್ತದೆ. ಇದರ ಕೆಳಗಡೆ 10 ನಂಬರಿನ ವಿಶಿಷ್ಟ ಗುರುತಿನ ಸಂಖ್ಯೆ ಇರುತ್ತದೆ. ಅಂಕಿಗಳ ಮೇಲೆ ಆಂಗ್ಲಭಾಷೆಯಲ್ಲಿ ‘ಇಂಡಿಯಾ’ ಎಂಬ ಪದ ಹಲವೆಡೆ ಇರುತ್ತದೆ.
-ಸುರಕ್ಷಿತ ನಂಬರ್‌ ಪ್ಲೇಟ್‌ನಲ್ಲಿ ನಂಬರ್‌ ಪ್ಲೇಟ್‌ ನಕಲು ಮಾಡುವುದು ಸಾಧ್ಯವಿಲ್ಲ.
-ವಾಹನಗಳ ಕಳವು, ಅವುಗಳನ್ನು ಬಳಸಿ ಅಪರಾಧ ಚಟುವಟಿಕೆ ಮಾಡಿದಾಗ ಪರಿಶೀಲಿಸಲು ಎಚ್‌ಎಸ್‌ಆರ್‌ಪಿ ಸಹಕಾರಿಯಾಗಲಿದೆ.
-ರಸ್ತೆಗಳಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ಗುರುತಿಸಲು ಸಹಕಾರಿ.
-ನೋಂದಣಿ ಫಲಕಗಳಲ್ಲಿ ಏಕರೂಪತೆ ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತವೆ.

ಹೆಚ್ಚುತ್ತಿವೆ ನಕಲಿ ಹಾವಳಿ

HSRP ನಂಬರ್‌ ಪ್ಲೇಟ್‌ಗಳನ್ನು ನಕಲಿ ಮಾಡಿ ವಂಚನೆ ಮಾಡುವ ಜಾಲವು ಇದ್ದು, ಸಾರ್ವಜನಿಕರು ಮೋಸ ಹೋಗದಂತೆ ಮನವಿ ಮಾಡಲಾಗುತ್ತಿದೆ. ಈ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ನಂತೆಯೇ ಹೋಲಿಕೆ ಇರುವಂತೆ ಇಂಥವರು ಸಿದ್ಧಪಡಿಸಿ ಕೊಡುತ್ತಾರೆ. ಇದನ್ನು ಅಗ್ಗದ ಬೆಲೆಯಲ್ಲಿ ಕೊಡುವುದರಿಂದ ಜನರೂ ಗೊತ್ತಿಲ್ಲದೆ ಖರೀದಿ ಮಾಡುತ್ತಾರೆ. ಆದರೆ, ಅದರಲ್ಲಿ ಟ್ಯಾಂಪರ್‌ ಪ್ರೂಫ್‌ ವೈಶಿಷ್ಟ್ಯ, ಯುನೀಕ್‌ ಐಡೆಂಟಿಟಿ ಅಂಶಗಳು ಇರುವುದಿಲ್ಲ. ಇದರಿಂದ ಒಮ್ಮೆ ಆರ್‌ಟಿಒ ಪೊಲೀಸರಿಗೆ ಸಿಕ್ಕಿ ಬಿದ್ದರೆ ದಂಡ ಕಟ್ಟುವುದು ಗ್ಯಾರಂಟಿಯಾಗಿದೆ. ಇಲ್ಲಿ “IND” ಗುರುತಾಗಲೀ, ಅಶೋಕ ಚಕ್ರ ಚಿಹ್ನೆಯ Hot stamp ಆಗಲೀ ಇರುವುದಿಲ್ಲ. ಹೀಗಾಗಿ ಅಧಿಕೃತ ವಿತರಕರಿಂದ ಮಾತ್ರ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಳನ್ನು ಪಡೆದುಕೊಳ್ಳಬೇಕು ಎಂದು ಸರ್ಕಾರ ಸಹ ಹೇಳಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Physical Abuse: ಎಚ್‌ಐವಿ ಪೀಡಿತ ವ್ಯಕ್ತಿಯ ಪ್ರಜ್ಞೆ ತಪ್ಪಿಸಿ ಅತ್ಯಾಚಾರ, ಚಿನ್ನಾಭರಣ ದರೋಡೆ

Physical Abuse: ಪಾಟೀಲ್ ತಾನು ಕ್ಷಯರೋಗದಿಂದ ಬಳಲುತ್ತಿದ್ದೇನೆ ಎಂದು ಹೇಳಿಕೊಂಡು ಸಂತ್ರಸ್ತನ ವಿಶ್ವಾಸ ಗಳಿಸಿದ್ದ. ಇತ್ತೀಚೆಗಷ್ಟೇ ಸಂತ್ರಸ್ತನ ಪತ್ನಿ ಮತ್ತು ಮಕ್ಕಳು ಸ್ವಗ್ರಾಮಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಆರೋಪಿ ಪರಿಸ್ಥಿತಿಯ ಲಾಭ ಪಡೆದು ಕೃತ್ಯ ಎಸಗಿದ್ದಾನೆ.

VISTARANEWS.COM


on

crimes in karnataka physical abuse
Koo

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿ ಒಂದು ಶಾಕಿಂಗ್‌ ಘಟನೆ (shocking incident) ನಡೆದಿದೆ. 56 ವರ್ಷದ ಎಚ್‌ಐವಿ ಪೀಡಿತ (HIV) ವ್ಯಕ್ತಿಯೊಬ್ಬರನ್ನು ಅವರ ನಿವಾಸದಲ್ಲೇ ಅತ್ಯಾಚಾರ (Physical Abuse) ಎಸಗಿ ದರೋಡೆ (Robbery) ಮಾಡಿರುವ ಆಘಾತಕಾರಿ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ವರದಿಯಾಗಿದೆ.

ಬೆಂಗಳೂರು ಉತ್ತರ ತಾಲೂಕಿನ ನೆಲಮಂಗಲ (bangalore rural) ಸಮೀಪದ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಎನ್‌ಜಿಒವೊಂದರಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಒಂದು ವರ್ಷದ ಹಿಂದೆ ಆರೋಪಿ ಶ್ಯಾಮ್ ಪಾಟೀಲ್ ಎಂಬಾತನ ಜೊತೆ ಸ್ನೇಹ ಬೆಳೆಸಿದ್ದ. ಪಾಟೀಲ್ ತಾನು ಕ್ಷಯರೋಗದಿಂದ ಬಳಲುತ್ತಿದ್ದೇನೆ ಎಂದು ಹೇಳಿಕೊಂಡು ಸಂತ್ರಸ್ತನ ವಿಶ್ವಾಸ ಗಳಿಸಿದ್ದ. ಇತ್ತೀಚೆಗಷ್ಟೇ ಸಂತ್ರಸ್ತನ ಪತ್ನಿ ಮತ್ತು ಮಕ್ಕಳು ಸ್ವಗ್ರಾಮಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಆರೋಪಿ ಪರಿಸ್ಥಿತಿಯ ಲಾಭ ಪಡೆದು ಕೃತ್ಯ ಎಸಗಿದ್ದಾನೆ.

ಸಂತ್ರಸ್ತ ಒಂಟಿಯಾಗಿರುವ ವಿಚಾರ ತಿಳಿದ ಪಾಟೀಲ್ ಅವರ ಮನೆಗೆ ಭೇಟಿ ನೀಡಿ ಜ್ಯೂಸ್‌ನಲ್ಲಿ ನಿದ್ದೆ ಮಾತ್ರೆ ಬೆರೆಸಿ ಕೊಟ್ಟಿದ್ದಾನೆ. ಸಂತ್ರಸ್ತ ಪ್ರಜ್ಞಾಹೀನರಾಗುತ್ತಿದ್ದಂತೆ, ಪಾಟೀಲ್ ಅವರ ಮುಖಕ್ಕೆ ಪ್ರಜ್ಞೆ ತಪ್ಪಿಸುವ ಲಿಕ್ವಿಡ್‌ ಸಿಂಪಡಿಸಿದ್ದಾನೆ. ನಂತರ ಅವರ ಮೇಲೆ ಅತ್ಯಾಚಾರ ಎಸಗಿ, ಕಬೋರ್ಡ್‌ನಲ್ಲಿಟ್ಟಿದ್ದ 88 ಗ್ರಾಂ ಚಿನ್ನಾಭರಣ, 20 ಸಾವಿರ ನಗದು, ಮೊಬೈಲ್ ಹ್ಯಾಂಡ್ ಸೆಟ್ ದೋಚಿ ಪರಾರಿಯಾಗಿದ್ದಾನೆ.

ಸಂತ್ರಸ್ತ ಮರುದಿನ ಬೆಳಗ್ಗೆ ಎಚ್ಚೆತ್ತಾಗ ತಾನು ದರೋಡೆಯಾಗಿರುವುದು ಗಮನಕ್ಕೆ ಬಂದಿದೆ. ಅವರು ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಶ್ಯಾಮ್ ಪಾಟೀಲ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಫೋನ್‌ಗಾಗಿ ಕಿತ್ತಾಡಿದ ಪ್ರೇಮಿಗಳು, ಲವರ್‌ ಬಾಯ್‌ಗೆ ಸಾರ್ವಜನಿಕರ ಗೂಸಾ

ಹುಬ್ಬಳ್ಳಿ: ಪ್ರೇಮಕಲಹ ಬೀದಿಗೆ ಬಂದರೆ ಸಾರ್ವಜನಿಕರಿಂದ ಏಟೂ ತಿನ್ನಬೇಕಾಗುತ್ತದೆ ಎಂಬುದಕ್ಕೆ ಈ ಘಟನೆ ಉದಾಹರಣೆ. ಫೋನ್‌ಗಾಗಿ ರಸ್ತೆ ಪಕ್ಕದಲ್ಲೇ ಪ್ರೇಮಿಗಳು ಜಗಳ ಮಾಡಿಕೊಂಡಿದ್ದು, ಹುಡುಗಿಯ ಕತ್ತಿನ ಸುತ್ತ ಶಾಲು ಹಾಕಿ ಎಳೆದಾಡಿದ ಹುಡುಗನಿಗೆ ಸಾರ್ವಜನಿಕರ ಗೂಸಾ ಬಿದ್ದಿದೆ.

lovers fight hubli

ಹುಬ್ಬಳ್ಳಿಯ ಕೊಪ್ಪಿಕರ ರಸ್ತೆಯ ಮಾಲ್ ಬಳಿ ಘಟನೆ ನಡೆದಿದೆ. ಕಿತ್ತಾಡುತ್ತಿರುವ ಪ್ರೇಮಿಗಳ ಜಗಳದ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಮಳೆ ಸುರಿಯುತ್ತಿದ್ದರೂ ಲೆಕ್ಕಿಸದೆ ರಸ್ತೆ ಪಕ್ಕದಲ್ಲಿ ನಿಂತು ಇಬ್ಬರೂ ಜಗಳ ಮಾಡಿಕೊಂಡಿದ್ದಾರೆ. ಫೋನ್‌ ಕೊಡು ಎಂದು ಹುಡುಗ ಪೀಡಿಸಿದ್ದು, ಆಕೆ ಕೊಡದೆ ಹೋದಾಗ ಆಕೆಯ ಕೊರಳಿಗೆ ಸ್ಕಾರ್ಫ್‌ ಸುತ್ತು ಹಾಕಿ ಎಳೆದಾಡಿದ್ದಾನೆ ಹುಡುಗ.

ಲವರ್‌ ಬಾಯ್‌ನ ಈ ಕೃತ್ಯ ನೋಡಿದ ಸ್ಥಳೀಯರು ರೊಚ್ಚಿಗೆದ್ದು ಮಧ್ಯಪ್ರವೇಶಿಸಿದ್ದಾರೆ. ನಮ್ಮ ಮಧ್ಯೆ ನೀವೂ ಬಂದಿದ್ದೇಕೆ ಎಂದು ಉಡಾಫೆಯಿಂದ ಹುಡುಗ ಉತ್ತರಿಸಿದಾಗ ಕ್ರುದ್ಧರಾದ ಸಾರ್ವಜನಿಕರು ಆತನಿಗೆ ಚೆನ್ನಾಗಿ ಗೂಸಾ ಕೊಟ್ಟಿದ್ದಾರೆ. ʼಸಾರ್ವಜನಿಕ ಸಭ್ಯತೆ ಪಾಲಿಸಿʼ ಎಂದು ಪಾಠ ಹೇಳಿದ್ದಾರೆ. ಲವರ್ಸ್ ಜಗಳದ ವಿಡಿಯೋ ಸಾಮಾಜಿಕ‌ ಜಾಲತಾಣಗಳಲ್ಲಿ‌ ಫುಲ್ ವೈರಲ್ ಆಗುತ್ತಿದೆ.

ಇದನ್ನೂ ಓದಿ: Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

Continue Reading

ಮಳೆ

Karnataka Weather : ರಾಜ್ಯದ ಇಲ್ಲೆಲ್ಲ ವಿಪರೀತ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather Forecast : ಕರಾವಳಿ ಹಾಗೂ ಮಲೆನಾಡು ಸುತ್ತಮುತ್ತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆ ಹಗುರದಿಂದ ಕೂಡಿದ ಮಳೆ ಸುರಿಯಲಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ (rain News) ಸಾಧ್ಯತೆ ಇದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (karnataka Weather Forecast) ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳದಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನ ಜತೆಗೆ ಗಂಟೆಗೆ 30-40 ಕಿ.ಮೀ ಗಾಳಿ ಬೀಸುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಪ್ರತ್ಯೇಕವಾಗಿ ಹಗುರವಾದ ಮಳೆಯಾಗುವ ನಿರೀಕ್ಷೆಯಿದೆ.

ಮಲೆನಾಡು ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾದರೆ, ಕರಾವಳಿಯಲ್ಲಿ ವ್ಯಾಪಕ ಲಘುದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಕರಾವಳಿ ಮತ್ತು ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆಯು ಮುಂದುವರಿದಿದೆ. ಗುಡುಗು ಸಹಿತ ಗಾಳಿಗೆ ವೇಗವು 40-50 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ ಹೇರಲಾಗಿದೆ.

ಇದನ್ನೂ ಓದಿ: Tumkur News : ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆದು ಮನಬಂದಂತೆ ಥಳಿಸಿದ ಉಪಾಧ್ಯಕ್ಷ!

ಮಳೆಗಾಲಕ್ಕೆ ತಕ್ಕಂತೆ ಬದಲಾಗುವ ಫುಟ್‌ವೇರ್‌ ಸ್ಟೈಲಿಂಗ್‌


ಮಳೆಗಾಲಕ್ಕೆ ತಕ್ಕಂತೆ (Monsoon Footwear Fashion) ಪ್ರತಿಯೊಬ್ಬರ ಫುಟ್‌ವೇರ್‌ ಸ್ಟೈಲಿಂಗ್‌ ಕೂಡ ಬದಲಾಗುತ್ತದೆ. ಇದಕ್ಕೆ ಪೂರಕ ಎಂಬಂತೆ, ಮಾರುಕಟ್ಟೆಯಲ್ಲಿ ನಾನಾ ಬ್ರಾಂಡ್‌ಗಳು ವಿನೂತನ ಮಾದರಿಯ ಬಗೆಬಗೆಯ ವಿನ್ಯಾಸದ ವಾಟರ್‌ಪ್ರೂಫ್‌ ಹಾಗೂ ಸ್ಕಿಡ್‌ ಆಗದ ಫುಟ್‌ವೇರ್​​ಗಳು ಲಗ್ಗೆ ಇಟ್ಟಿವೆ.

Monsoon Footwear Fashion

ವೈವಿಧ್ಯಮಯ ಫುಟ್‌ವೇರ್ಸ್

ಅವುಗಳಲ್ಲಿ ಫಂಕಿ ಕ್ರೂಕ್ಸ್‌, ಫ್ಲಿಪ್‌ಫ್ಲಾಪ್‌, ಜೆಲ್ಲಿ ಫ್ಲಾಟ್ಸ್, ವೆಡ್ಜಸ್‌ ಬೆಲ್ಲಿ ಶೂಸ್‌, ಸ್ಕಿಪ್ಪರ್‌ ಕ್ಲಾಗ್ಸ್‌, ಕ್ಯಾನ್ವಾಸ್‌, ಬ್ಯಾಲೇರಿನಾ ಫ್ಲಾಟ್‌ ಸ್ಯಾಂಡಲ್ಸ್, ಮಾನ್ಸೂನ್‌ ಸ್ನೀಕರ್‌, ರೈನ್‌ ಶೂ, ಅಕ್ವಾ ಶೂಸ್‌, ಗಮ್‌ ಬೂಟ್ಸ್, ಫೋಮ್‌ ಕ್ಲಾಗ್ಸ್ ಸೇರಿದಂತೆ ಮೆನ್ಸ್‌ ಹಾಗೂ ವುಮೆನ್ಸ್‌ ಕೆಟಗರಿಯಲ್ಲಿ ನಾನಾ ಬಗೆಯವು ಬಿಡುಗಡೆಗೊಂಡಿದ್ದು, ಮಾರಾಟ ಹೆಚ್ಚಾಗಿಯೇ ಸಾಗಿದೆ ಎನ್ನುತ್ತಾರೆ ಫುಟ್‌ವೇರ್‌ ಶೋರೂಂವೊಂದರ ಮಾರಾಟಗಾರರು.

ಸೀಸನ್‌ಗೆ ಬದಲಾಗುವ ಫುಟ್‌ವೇರ್ಸ್

ಸಮ್ಮರ್‌ ಸೀಸನ್‌ನಿಂದ ಮಾನ್ಸೂನ್‌ ಸೀಸನ್‌ಗೆ ಕಾಲಿಡುವಾಗ ಫುಟ್‌ವೇರ್‌ ಫ್ಯಾಷನ್‌ ಕೂಡ ಸಾಕಷ್ಟು ಬದಲಾಗುತ್ತದೆ. ಗ್ರ್ಯಾಂಡ್‌ ಲುಕ್‌ ನೀಡುವ ಸ್ಯಾಂಡಲ್ಸ್‌ ಆಗಲಿ, ವೆಲ್ವೆಟ್‌ ಹಾಗೂ ಡಿಸೈನರ್‌ ಶೂಗಳನ್ನಾಗಲಿ ಈ ಮಳೆಗಾಲದಲ್ಲಿ ಧರಿಸಿ ಹೊರಾಂಗಣದಲ್ಲಿ ಓಡಾಡಲು ಸಾಧ್ಯವಿಲ್ಲ! ಹಾಗಾಗಿ ಮಳೆಗಾಲಕ್ಕೆ ನೀರಿನಲ್ಲಿ ನೆನೆದರೂ, ತೊಪ್ಪೆಯಾದರೂ, ವಾಶ್‌ ಮಾಡಿದರೂ ಹಾಳಾಗದ ಮೆಟೀರಿಯಲ್‌ನ ಫುಟ್‌ವೇರ್‌ಗಳನ್ನು ಧರಿಸುವುದು, ವಾಕ್‌ ಮಾಡುವಾಗ ಸ್ಕಿಡ್‌ ಆಗದ, ಜಾರದ ಫುಟ್‌ವೇರ್‌ಗಳನ್ನು ಧರಿಸುವುದು ಅವಶ್ಯವಾಗುತ್ತದೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಅದರಲ್ಲೂ ಪ್ರತಿನಿತ್ಯ ಹೆಚ್ಚು ಓಡಾಡುವ ವ್ಯಾಪಾರಸ್ಥರು, ಉದ್ಯೋಗಸ್ಥರು ಹೆಚ್ಚಾಗಿ ಕಂಫರ್ಟಬಲ್‌ ಜೊತೆಗೆ ಸೀಸನ್‌ ಮುಗಿಯುವವರೆಗೂ ಬಾಳಿಕೆ ಬರುವಂತಹ ಫುಟ್‌ವೇರ್‌ಗಳನ್ನೇ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ ಎನ್ನುತ್ತಾರೆ ಅವರು.

ಬೂಟ್ಸ್-ಶೂ-ಸ್ಯಾಂಡಲ್ಸ್-ಫ್ಲಿಪ್‌-ಫ್ಲಾಪ್‌

ಮಳೆಗಾಲದಲ್ಲಿ ಫ್ಯಾಷನ್‌ ಲುಕ್‌ಗಾಗಿ ಮಾತ್ರವಲ್ಲ, ನಿಮ್ಮ ಕಂಫರ್ಟಬಲಿಟಿಗೆ ತಕ್ಕಂತೆ ಆಯ್ಕೆ ಮಾಡಿಕೊಳ್ಳುವುದು ಜಾಣತನ. ಔಟ್‌ಡೋರ್‌ನಲ್ಲಿ ಹೆಚ್ಚು ಓಡಾಡುವವರು ಹಾಗೂ ಕೆಲಸ ಮಾಡುವವರು ಬೂಟ್ಸ್​​​ಗಎ ಮೊರೆ ಹೋದರೆ, ಮಹಿಳೆಯರು ಸ್ಯಾಂಡಲ್ಸ್‌ ಹಾಗೂ ಫ್ಲಿಪ್‌-ಫ್ಲಾಪ್‌ಗಳನ್ನು ಚೂಸ್‌ ಮಾಡುತ್ತಾರೆ. ಇನ್ನು ಹುಡುಗಿಯರು ಕ್ರೂಕ್ಸ್‌ ಹಾಗೂ ಬ್ಯಾಲೇರಿನಾ ಶೂಗಳಂತವನ್ನು ಸೆಲೆಕ್ಟ್‌ ಮಾಡುತ್ತಾರೆ ಎನ್ನುತ್ತಾರೆ ಫುಟ್‌ವೇರ್‌ ಮಾರಾಟಗಾರರು.

ಫುಟ್‌ವೇರ್‌ ಸೆಲೆಕ್ಷನ್‌ ಹೀಗಿರಲಿ

  • – ಫ್ಯಾಷನ್‌ಗಿಂತ ಹೆಚ್ಚಾಗಿ ಆರಾಮದಾಯಕವಾಗಿರಲಿ.
  • – ಫುಟ್‌ವೇರ್‌ ಒದ್ದೆಯಾಗಿದ್ದಲ್ಲಿ, ಒಣಗಿಸಿ, ಧರಿಸಿ.
  • – ಗುಣಮಟ್ಟದ ಫುಟ್‌ವೇರ್ ಕೊಳ್ಳಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bengaluru News: ಬೆಂಗಳೂರಿನಲ್ಲಿ 2ನೇ ರಾಷ್ಟ್ರೀಯ ಮಕ್ಕಳ ಪಾರ್ಶ್ವವಾಯುವಿನ ಶೃಂಗ 2024ಕ್ಕೆ ಚಾಲನೆ

Bengaluru News: ಬೆಂಗಳೂರಿನಲ್ಲಿ ಎರಡು ದಿನಗಳ 2ನೇ ರಾಷ್ಟ್ರೀಯ ಪೀಡಿಯಾಟ್ರಿಕ್ ಸ್ಟ್ರೋಕ್ ಕಾನ್ ಕ್ಲೇವ್ 2024 (ಮಕ್ಕಳ ಪಾರ್ಶ್ವವಾಯು ಶೃಂಗ 2024) ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು. ಇಂಡಿಯನ್ ಸ್ಟ್ರೋಕ್ ಅಸೋಸಿಯೇಷನ್ (ಐ.ಎಸ್.ಎ) ಅಧ್ಯಕ್ಷ ಡಾ.ನಿರ್ಮಲ್ ಸೂರ್ಯ ಉದ್ಘಾಟಿಸಿದರು.

VISTARANEWS.COM


on

2nd National Pediatric Stroke Conclave 2024 inauguration in Bengaluru
Koo

ಬೆಂಗಳೂರು: ನಗರದಲ್ಲಿ ಎರಡು ದಿನಗಳ 2ನೇ ರಾಷ್ಟ್ರೀಯ ಪೀಡಿಯಾಟ್ರಿಕ್ ಸ್ಟ್ರೋಕ್ ಕಾನ್ ಕ್ಲೇವ್ 2024 (ಮಕ್ಕಳ ಪಾರ್ಶ್ವವಾಯು ಶೃಂಗ 2024) ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು. ಇಂಡಿಯನ್ ಸ್ಟ್ರೋಕ್ ಅಸೋಸಿಯೇಷನ್ (ಐ.ಎಸ್.ಎ) ಅಧ್ಯಕ್ಷ ಡಾ. ನಿರ್ಮಲ್ ಸೂರ್ಯ (Bengaluru News) ಉದ್ಘಾಟಿಸಿದರು.

ಮಕ್ಕಳ ಪಾರ್ಶ್ವವಾಯು ರೋಗತಡೆ, ಆರೈಕೆ ಮತ್ತು ಚಿಕಿತ್ಸೆಯ ಕ್ಷೇತ್ರಗಳ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪರಿಣಿತರು ಒಂದೇ ಸೂರಿನಡಿ ಸೇರುವ ಅಪೂರ್ವ ಸಂದರ್ಭಕ್ಕೆ ಈ ಸಮ್ಮೇಳನ ಸಾಕ್ಷಿಯಾಯಿತು.

ಜಾಗತಿಕವಾಗಿ ಮಕ್ಕಳ ಪಾರ್ಶ್ವವಾಯು ಮಕ್ಕಳಲ್ಲಿ ಮರಣಕ್ಕೆ ಆರನೇ ಮುಂಚೂಣಿಯ ಕಾರಣವಾಗಿದೆ. ಸುಮಾರು ಐವತ್ತರಿಂದ ಅರವತ್ತು ಶೇಕಡಾ ಮಕ್ಕಳ ಪಾರ್ಶ್ವವಾಯು ಪ್ರಕರಣಗಳಿಗೆ ಚಿಕಿತ್ಸೆ ನೀಡಲು ಮತ್ತು ತಡೆಯಲು ಸಾಧ್ಯ.

ಪ್ರತಿ ನಿಮಿಷ ಭಾರತದಲ್ಲಿ ಸುಮಾರು 52 ಶಿಶುಗಳು ಜನಿಸುತ್ತಿದ್ದು ಮಕ್ಕಳ ಪಾರ್ಶ್ವವಾಯುವಿನ ಸಾಮಾಜಿಕ-ಆರ್ಥಿಕ ಪರಿಣಾಮಗಳು ಅಪಾರವಾಗಿವೆ. ಭಾರತದಲ್ಲಿ ಪ್ರಕಟವಾದ ಕೆಲ ಅಧ್ಯಯನಗಳ ಪ್ರಕಾರ ಮಕ್ಕಳ ಪಾರ್ಶ್ವವಾಯು ಮಕ್ಕಳ ಆಸ್ಪತ್ರೆ ಸೇರ್ಪಡೆಯ ಶೇ.1ಕ್ಕಿಂತ ಕಡಿಮೆ ಇದೆ ಮತ್ತು ಎಲ್ಲ ಯುವ ಪಾರ್ಶ್ವವಾಯು ಪ್ರಕರಣಗಳ ಶೇಕಡಾ ಐದರಿಂದ ಹತ್ತರಷ್ಟು (40 ವರ್ಷಗಳ ವಯಸ್ಸಿಗಿಂತ ಕಿರಿಯರು) ಹೊಂದಿವೆ. ಈ ಸಂಖ್ಯೆಗಳು ಬರೀ ಅಂದಾಜು ಆಗಿದೆ ಮತ್ತು ವಾಸ್ತವ ಸಂಖ್ಯೆ ಇನ್ನೂ ಹೆಚ್ಚಾಗಿರುವ ಸಾಧ್ಯತೆ ಇದ್ದು ಸಾಕಷ್ಟು ಪ್ರಕರಣಗಳು ವರದಿಯಾಗುವುದಿಲ್ಲ ಮತ್ತು ಪತ್ತೆಯಾಗುವುದಿಲ್ಲ.

ಇದನ್ನೂ ಓದಿ: Press Day: ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿದ್ದರಾಮಯ್ಯ

ವಯಸ್ಕರಲ್ಲಿ ಹೆಚ್ಚು ರಕ್ತದೊತ್ತಡ, ಕರೊನರಿ ಆರ್ಟರಿ ರೋಗ, ಧೂಮಪಾನ, ಬೊಜ್ಜು, ಹೆಚ್ಚಿನ ಕೊಲೆಸ್ಟರಾಲ್ ಮತ್ತು ದುರ್ಬಲ ಜೀವನಶೈಲಿ ಇತ್ಯಾದಿ ರಿಸ್ಕ್ ಅಂಶಗಳಿರುತ್ತವೆ ಆದರೆ ಮಕ್ಕಳ ಪಾರ್ಶ್ವವಾಯುವಿಗೆ ಕಾರಣಗಳನ್ನು ಗುರುತಿಸುವುದು ಬಹಳ ಸಂಕೀರ್ಣ ಮತ್ತು ಹಲವು ಅಂಶಗಳನ್ನು ಹೊಂದಿದೆ.

ಸಮ್ಮೇಳನದಲ್ಲಿ ಉಪನ್ಯಾಸ ನೀಡುವ ತಜ್ಞರಲ್ಲಿ ಐ.ಎಸ್.ಎ ಅಧ್ಯಕ್ಷ ಡಾ.ನಿರ್ಮಲ್ ಸೂರ್ಯ, ಸಂಘಟನಾ ಅಧ್ಯಕ್ಷ ಡಾ.ವಿಕ್ರಮ್ ಹುಡೇದ್, ಡಾ.ಅರವಿಂದ್ ಶರ್ಮಾ, ಡಾ.ಮಿನಲ್ ಕೆಕಟ್ ಪುರೆ, ಡಾ.ವಿನಯನ್ ಕೆ.ಪಿ., ಡಾ.ಶೆಫಾಲಿ ಗುಲಾಟಿ ಮತ್ತು ಡಾ.ಪ್ರತಿಭಾ ಸಿಂಘಿ, ಡಾ.ಹೆಲ್ತರ್ ಫುಲ್ಲರ್ ಟನ್‌ ಮತ್ತು ಡಾ.ಮಜಾ ಸ್ಟೀನ್ಲಿನ್ ಅಂತಾರಾಷ್ಟ್ರೀಯ ತಜ್ಞರು ಪಾಲ್ಗೊಂಡಿದ್ದಾರೆ.

2ನೇ ನ್ಯಾಷನಲ್ ಪೀಡಿಯಾಟ್ರಿಕ್ ಕಾನ್ ಕ್ಲೇವ್ ಆರೋಗ್ಯ ಸೇವಾ ವೃತ್ತಿಪರರಿಗೆ ಮಕ್ಕಳ ಪಾರ್ಶ್ವವಾಯುವಿನ ರೋಗ ತಡೆ, ಆರೈಕೆ ಮತ್ತು ಚಿಕಿತ್ಸೆ ಕುರಿತು ಅವರ ಜ್ಞಾನ ಹಂಚಿಕೊಳ್ಳಲು, ಅರ್ಥಪೂರ್ಣ ಚರ್ಚೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುತ್ತದೆ. ಈ ಸಮ್ಮೇಳನವು ದೇಶಾದ್ಯಂತ ಪೂರೈಸುವ ಮಕ್ಕಳ ಆರೈಕೆಯ ಗುಣಮಟ್ಟ ಸುಧಾರಿಸುವ ಮತ್ತು ಈ ಕ್ಷೇತ್ರದ ಪ್ರಮುಖ ಸಮಸ್ಯೆಗಳನ್ನು ನಿವಾರಿಸುವ ಗುರಿ ಹೊಂದಿದೆ. ಈ ಎರಡು ದಿನಗಳ ಸಮ್ಮೇಳನದಲ್ಲಿ ಪೀಡಿಯಾಟ್ರಿಕ್ ಸ್ಟ್ರೋಕ್ ನ ನ್ಯೂರೋಇಮೇಜಿಂಗ್, ಪೀಡಿಯಾಟ್ರಿಕ್ ವ್ಯಾಸ್ಕುಲೈಟಿಸ್ ಮತ್ತು ವ್ಯಾಸ್ಕುಲೊಪಥೀಸ್, ಕಾರ್ಡಿಯೊಎಂಬೊಲಿಕ್ ಸ್ಟ್ರೋಕ್, ಹೈಪರಕ್ಯೂಟ್ ಮ್ಯಾನೇಜ್ಮೆಂಟ್ ಆಫ್ ಪೀಡಿಯಾಟ್ರಿಕ್ ಸ್ಟ್ರೋಕ್, ನ್ಯೂರೋಇಂಟರ್ವೆನ್ಷನ್ಸ್ ಇನ್ ಪೀಡಿಯಾಟ್ರಿಕ್ ಸ್ಟ್ರೋಕ್ ಮತ್ತಿತರೆ ಒಳಗೊಂಡಿವೆ.

ಇದನ್ನೂ ಓದಿ: Kannada New Movie: ಪ್ರವೀಣ್ ತೇಜ್ ಅಭಿನಯದ ʼಜಿಗರ್ ಚಿತ್ರ ಜುಲೈ 5ರಂದು ಬಿಡುಗಡೆ

ಇಂಡಿಯನ್ ಸ್ಟ್ರೋಕ್ ಅಸೋಸಿಯೇಷನ್ (ಐ.ಎಸ್.ಎ) ನಿಯಮಿತವಾಗಿ ಮಕ್ಕಳ ಪಾರ್ಶ್ವವಾಯುವಿನ ಅರಿವು ಹೆಚ್ಚಿಸುವ, ರೋಗನಿರ್ಣಯ ಸುಧಾರಿಸುವ, ಮಕ್ಕಳ ಪಾರ್ಶ್ವವಾಯು ನಿರ್ವಹಿಸುವ ವೈದ್ಯಕೀಯ ಸಿಬ್ಬಂದಿಗೆ ಶಿಕ್ಷಣ ನೀಡುವ ಉದ್ದೇಶದಿಂದ ಹಲವಾರು ಉಪಕ್ರಮಗಳನ್ನು ಕೈಗೊಳ್ಳುತ್ತಿದ್ದು ಸುವರ್ಣ ಘಳಿಗೆಯಲ್ಲಿ ಚಿಕಿತ್ಸೆ ನೀಡುವ ಕುರಿತು ಅರಿವನ್ನು ಮೂಡಿಸುತ್ತದೆ ಮತ್ತು ಬಾಧಿತ ಮಕ್ಕಳ ಅಂಗವಿಕಲತೆ ಮಿತಿಗೊಳಿಸಲು ಕಾರ್ಯತಂತ್ರಗಳನ್ನು ವಿನೂತನ ಮಕ್ಕಳ ಪಾರ್ಶ್ವವಾಯುವಿನ ರಾಷ್ಟ್ರೀಯ ಸಮ್ಮೇಳನ ಆಯೋಜಿಸುವ ಮೂಲಕ ಕಾರ್ಯಪ್ರವೃತ್ತವಾಗಿದೆ.

Continue Reading

ಕರ್ನಾಟಕ

Foreign Investment: ರಾಜ್ಯದಲ್ಲಿ ವಾಹನ ಬಿಡಿಭಾಗ ತಯಾರಿಕೆ; ಬಂಡವಾಳ ಹೂಡಿಕೆಗೆ ದ.ಕೊರಿಯಾ ಒಲವು

Foreign Investment: ದಕ್ಷಿಣ ಕೊರಿಯಾಕ್ಕೆ ಭೇಟಿ ನೀಡಿರುವ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು ಸೋಮವಾರ ಸೋಲ್‌ನಲ್ಲಿ ಹೊಯ್ಸಂಗ್‌ ಅಡ್ವಾನ್ಸ್ಡ್‌ ಮಟೇರಿಯಲ್ಸ್‌, ಎಚ್‌ಎಲ್‌ ಮಾಂಡೊ ಕಾರ್ಪೊರೇಷನ್‌, ನಿಫ್ಕೊ, ಡಿಎನ್‌ ಸೊಲುಷನ್ಸ್‌ ಮತ್ತು ಹುಂಡೈ ಮೋಟರ್ಸ್‌ನ ಮುಖ್ಯಸ್ಥರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿತು.

VISTARANEWS.COM


on

Manufacturing of auto parts in the state Increased propensity for capital investment
Koo

ಬೆಂಗಳೂರು: ದಕ್ಷಿಣ ಕೊರಿಯಾಕ್ಕೆ ಭೇಟಿ ನೀಡಿರುವ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ (Foreign Investment) ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು ಸೋಮವಾರ ಸೋಲ್‌ನಲ್ಲಿ ಹೊಯ್ಸಂಗ್‌ ಅಡ್ವಾನ್ಸ್ಡ್‌ ಮಟೇರಿಯಲ್ಸ್‌, ಎಚ್‌ಎಲ್‌ ಮಾಂಡೊ ಕಾರ್ಪೊರೇಷನ್‌, ನಿಫ್ಕೊ, ಡಿಎನ್‌ ಸೊಲುಷನ್ಸ್‌ ಮತ್ತು ಹುಂಡೈ ಮೋಟರ್ಸ್‌ನ ಮುಖ್ಯಸ್ಥರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿತು.

ಜಪಾನಿನ ಐದು ದಿನಗಳ ಯಶಸ್ವಿ ಭೇಟಿ ಪೂರ್ಣಗೊಳಿಸಿ ದಕ್ಷಿಣ ಕೊರಿಯಾಕ್ಕೆ ತೆರಳಿರುವ ನಿಯೋಗವು ಈ ತಿಂಗಳ 5 ರವರೆಗೆ ಅಲ್ಲಿನ ಬಹುರಾಷ್ಟ್ರೀಯ ಕಂಪನಿಗಳ ಜತೆ ಸಮಾಲೋಚನೆ ನಡೆಸಿ ಬಂಡವಾಳ ಹೂಡಿಕೆ ಆಕರ್ಷಿಸಲಿದೆ.

ರಾಜ್ಯದಲ್ಲಿ ವಾಹನ ಬಿಡಿಭಾಗ, ಜವಳಿ ಉತ್ಪನ್ನ, ನವೀಕರಿಸಬಹುದಾದ ಇಂಧನ, ಮಷಿನ್‌ಟೂಲ್ಸ್‌ ತಯಾರಿಕಾ ವಲಯಗಳಲ್ಲಿ ಬಂಡವಾಳ ಹೂಡಿಕೆ ಹೆಚ್ಚಿಸಲು, ವಹಿವಾಟು ವಿಸ್ತರಿಸಲು ದಕ್ಷಿಣ ಕೊರಿಯಾದ ಈ ಬಹುರಾಷ್ಟ್ರೀಯ ಕಂಪನಿಗಳು ತೀವ್ರ ಆಸಕ್ತಿ ವ್ಯಕ್ತಪಡಿಸಿವೆ.

ಇದನ್ನೂ ಓದಿ: Press Day: ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿದ್ದರಾಮಯ್ಯ

ರಾಜ್ಯದಲ್ಲಿ ವಿದ್ಯುತ್‌ಚಾಲಿತ ವಾಹನಗಳ (ಇವಿ) ಮಾರುಕಟ್ಟೆಯು ವ್ಯಾಪಕವಾಗಿ ವಿಸ್ತರಣೆ ಆಗುತ್ತಿರುವುದು ಮತ್ತು ಭಾರತದಲ್ಲಿನ ತಯಾರಿಕಾ ಘಟಕಗಳಲ್ಲಿ ʼಇವಿʼಗಳನ್ನು ತಯಾರಿಸುವ ಬಗ್ಗೆ ಹುಂಡೈ ಮುಖ್ಯಸ್ಥರ ಜತೆಗಿನ ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು.

ರಾಜ್ಯದಲ್ಲಿ ಕೈಗಾರಿಕಾ ಅಶಾಂತಿ (ಕಾರ್ಮಿಕರ ವಿವಾದಗಳು) ಕಡಿಮೆ ಪ್ರಮಾಣದಲ್ಲಿ ಇರುವುದು ಮತ್ತು ಪೂರೈಕೆ ಸರಪಣಿಯಲ್ಲಿ ಸ್ಥಿರತೆ ಇರುವುದನ್ನು ಸಚಿವರು ಹುಂಡೈ ಕಂಪನಿಯ ಪ್ರಮುಖರ ಗಮನಕ್ಕೆ ತಂದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ವಾಹನಗಳ ಪ್ಲಾಸ್ಟಿಕ್‌ ಬಿಡಿಭಾಗ ತಯಾರಿಸುವ ಘಟಕ ಸ್ಥಾಪಿಸಲಿರುವ ನಿಫ್ಕೊ ಕೊರಿಯಾ ಕಂಪನಿಗೆ ಅಗತ್ಯವಾದ ಭೂಮಿ ಸ್ವಾಧೀನ ಮತ್ತು ಇತರ ಅನುಮೋದನೆಗಳಿಗೆ ರಾಜ್ಯ ಸರ್ಕಾರ ತ್ವರಿತವಾಗಿ ಸ್ಪಂದಿಸಲಿದೆ. ಕಾರ್ಖಾನೆಗೆ ಸಂಸ್ಕರಿಸಿದ ನೀರನ್ನು ಪೂರೈಸಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ ಭರವಸೆ ನೀಡಿದರು.

ರಾಜ್ಯದಲ್ಲಿ ಫೈಬರ್‌ ಆಪ್ಟಿಕ್‌ ಅಳವಡಿಕೆ ಯೋಜನೆಗಳು ಮತ್ತು ವಿದ್ಯುತ್‌ಚಾಲಿತ ವಾಹನಗಳ (ಇವಿ) ಬಳಕೆ ಹೆಚ್ಚಿಸುವ ಕ್ಷೇತ್ರಗಳಲ್ಲಿ ವಹಿವಾಟು ನಡೆಸಲು ಹೊಯ್ಸಂಗ್‌ ಅಡ್ವಾನ್ಸ್ಡ್‌ ಮಟೇರಿಯಲ್ಸ್‌ ಇಂಗಿತ ವ್ಯಕ್ತಪಡಿಸಿದೆ.

ಕಂಪನಿಯ ಉಪಾಧ್ಯಕ್ಷ ಹಾಂಗ್‌ ಸಂಗ್‌ ಅಹ್ನ್‌ ಅವರು ರಾಜ್ಯದ ನಿಯೋಗದ ಜತೆಗಿನ ಮಾತುಕತೆಯಲ್ಲಿ ಭಾಗಿಯಾಗಿದ್ದರು. ಟೈರ್‌ ಕೋರ್ಡ್ಸ್‌ ತಯಾರಿಕೆಗೆ ಭಾರತವನ್ನು ಪ್ರಮುಖ ನೆಲೆಯನ್ನಾಗಿ ಅಭಿವೃದ್ಧಿಪಡಿಸಲು ಕಂಪನಿಯ ಉದ್ದೇಶಿಸಿದೆ. ಭಾರತದಲ್ಲಿ ಪರಿಸರ ಸ್ನೇಹಿ ಸರಕುಗಳು ಹಾಗೂ ಸುಧಾರಿತ ಜವಳಿ ಉತ್ಪನ್ನಗಳನ್ನು ತಯಾರಿಸುವ ವಹಿವಾಟು ವಿಸ್ತರಿಸುವ ಅವಕಾಶಗಳನ್ನು ಕಂಪನಿಯು ಪರಿಶೀಲಿಸುತ್ತಿದೆ.

ಇದನ್ನೂ ಓದಿ: Kabzaa movie: ಅತಿ ಹೆಚ್ಚು ತೆರಿಗೆ ಪಾವತಿ; ಆರ್. ಚಂದ್ರು ನಿರ್ಮಾಣ ಸಂಸ್ಥೆಗೆ ಕೇಂದ್ರದಿಂದ ಪ್ರಶಂಸಾ ಪತ್ರ!

ರಾಜ್ಯದಲ್ಲಿನ ನವೀಕರಿಸಬಹುದಾದ ಇಂಧನ ವಲಯದಲ್ಲಿನ ಭವಿಷ್ಯದ ವಿಸ್ತರಣೆ ಬಗ್ಗೆ ಸೌರಕೋಶಗಳ ಸೆಮಿಕಂಡಕ್ಟರ್‌ ತಯಾರಿಸುವ ಒಸಿಐ ಹೋಲ್ಡಿಂಗ್ಸ್‌ ಕಂಪನಿ ಜೊತೆ ಸಚಿವರು ಮಾತುಕತೆ ನಡೆಸಿದರು.

ಸೌರಶಕ್ತಿ ಫಲಕಗಳನ್ನು ತಯಾರಿಸುವ ಯೋಜನೆಗಳಿಗೆ ರಾಜ್ಯ ಸರ್ಕಾರವು ಕೊಡಮಾಡುತ್ತಿರುವ ಉತ್ತೇಜನಗಳನ್ನು ನಿಯೋಗವು ಕಂಪನಿಯ ಪ್ರಮುಖರಿಗೆ ಮನವರಿಕೆ ಮಾಡಿಕೊಟ್ಟಿತು.

ವಾಹನ ಬಿಡಿಭಾಗ ತಯಾರಿಸುವ ಎಚ್‌ಎಲ್‌ ಮಂಡೊ ಕಾರ್ಪೊರೇಷನ್ನಿನ ಸಿಎಫ್‌ಒ ಲೀ ಚುಲ್‌ ಮತ್ತು ನಿರ್ದೇಶಕ ಕಿಮ್‌ ಇವುನ್‌ ಸಂಗ್‌ ಅವರನ್ನು ರಾಜ್ಯದ ನಿಯೋಗವು ಭೇಟಿಯಾಗಿತ್ತು.

ಇದನ್ನೂ ಓದಿ: Kannada New Movie: ಪ್ರವೀಣ್ ತೇಜ್ ಅಭಿನಯದ ʼಜಿಗರ್ ಚಿತ್ರ ಜುಲೈ 5ರಂದು ಬಿಡುಗಡೆ

ಬೆಂಗಳೂರಿನಲ್ಲಿ ತಯಾರಿಕಾ ಘಟಕ ಹೊಂದಿರುವ ಕಂಪನಿಯು ರಾಜ್ಯದಲ್ಲಿ ಇನ್ನಷ್ಟು ಬಂಡವಾಳ ಹೂಡಿಕೆ ಮಾಡಲು ಉತ್ಸುಕತೆ ತೋರಿದೆ. ವಿದ್ಯುತ್‌ಚಾಲಿತ ಸೇರಿದಂತೆ ರಾಜ್ಯದಲ್ಲಿನ ಒಟ್ಟಾರೆ ವಾಹನ ಉದ್ಯಮ ಕ್ಷೇತ್ರದಲ್ಲಿನ ಅನುಕೂಲತೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ರಾಜ್ಯದ ನಿಯೋಗವು ಆಹ್ವಾನ ನೀಡಿದೆ. ಮಷೀನ್‌ಟೂಲ್ಸ್‌ ತಯಾರಿಕಾ ಕಂಪನಿ ಡಿಎನ್‌ ಸೊಲುಷನ್ಸ್‌, ಬೆಂಗಳೂರು ಬಳಿ 25 ಎಕರೆ ಪ್ರದೇಶದಲ್ಲಿ ತನ್ನ ತಯಾರಿಕಾ ಘಟಕ ಆರಂಭಿಸಲಿದೆ.

Continue Reading
Advertisement
Virat Kohli
ಕ್ರಿಕೆಟ್16 mins ago

Virat Kohli: ನನ್ನ ​ಅಹಂಕಾರವೇ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣ ಎಂದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

crimes in karnataka physical abuse
ಕ್ರೈಂ30 mins ago

Physical Abuse: ಎಚ್‌ಐವಿ ಪೀಡಿತ ವ್ಯಕ್ತಿಯ ಪ್ರಜ್ಞೆ ತಪ್ಪಿಸಿ ಅತ್ಯಾಚಾರ, ಚಿನ್ನಾಭರಣ ದರೋಡೆ

Indian Origin Businessman
ವಿದೇಶ35 mins ago

Indian Origin Businessman: 8,300 ಕೋಟಿ ರೂ. ವಂಚನೆ; ಭಾರತೀಯ ಮೂಲದ ಅಮೆರಿಕದ ಉದ್ಯಮಿಗೆ ಜೈಲು

Ms Universal Petite 2024
ಕರ್ನಾಟಕ37 mins ago

Ms Universal Petite 2024: ಜಾಗತಿಕ ಸೌಂದರ್ಯ ಸ್ಪರ್ಧೆಯಲ್ಲಿ ಕನ್ನಡತಿ, ಶಿರಸಿ ಮೂಲದ ಡಾ. ಶ್ರುತಿಗೆ ಕಿರೀಟ

Parliament Sessions
ರಾಜಕೀಯ56 mins ago

Parliament Sessions: ಲೋಕಸಭೆಯಲ್ಲಿ ಇಂದು ಮೋದಿ ಭಾಷಣ; ರಾಹುಲ್‌ ಗಾಂಧಿ ಆರೋಪಗಳಿಗೆ ಪ್ರಧಾನಿ ಉತ್ತರವೇನು? ಇಲ್ಲಿದೆ Live

lovers fight hubli
ವೈರಲ್ ನ್ಯೂಸ್59 mins ago

Lovers Fight: ಫೋನ್‌ಗಾಗಿ ಕಿತ್ತಾಡಿದ ಪ್ರೇಮಿಗಳು, ಲವರ್‌ ಬಾಯ್‌ಗೆ ಸಾರ್ವಜನಿಕರ ಗೂಸಾ

Team India stuck in Barbados
ಕ್ರೀಡೆ1 hour ago

Team India stuck in Barbados: ಟೀಮ್​ ಇಂಡಿಯಾ ತವರಿಗೆ ವಾಪಸಾಗುವುದು ಮತ್ತಷ್ಟು ವಿಳಂಬ

Latest1 hour ago

Viral Video: ರಸ್ತೆ ಮೇಲೆಯೇ ಮಹಿಳೆಯ ವಶೀಕರಣ! 4.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲೂಟಿ

Kalki 2898 AD
ಸಿನಿಮಾ1 hour ago

Kalki 2898 AD: ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಬರೆದ ʼಕಲ್ಕಿʼ; ಬಿಡುಗಡೆಯಾದ 5ನೇ ದಿನ ಗಳಿಸಿದ್ದು ಬರೋಬ್ಬರಿ 84 ಕೋಟಿ ರೂ.

Anant Ambani
ಫ್ಯಾಷನ್1 hour ago

Anant Ambani: ಅನಂತ್ ಅಂಬಾನಿ ಬಳಿ ಇವೆ 300 ಕೋಟಿಯ ವಾಚ್‌ಗಳು! ಎಂಥೆಂಥ ಗಡಿಯಾರಗಳಿವೆ ನೋಡಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ16 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌