FIFA World Cup: ವಿವಾದಾತ್ಮಕ ಗೋಲಿನಿಂದಾಗಿ ಭಾರತಕ್ಕೆ ಸೋಲು; ತನಿಖೆಗೆ ಕೋರಿದ ಎಐಎಫ್‌ಎಫ್‌ - Vistara News

ಕ್ರೀಡೆ

FIFA World Cup: ವಿವಾದಾತ್ಮಕ ಗೋಲಿನಿಂದಾಗಿ ಭಾರತಕ್ಕೆ ಸೋಲು; ತನಿಖೆಗೆ ಕೋರಿದ ಎಐಎಫ್‌ಎಫ್‌

FIFA World Cup: ಚೆಂಡು ಭಾರತೀಯ ಗೋಲು ಕೀಪರ್ ಕೈಗೆ ತಾಗಿ ಹೊರ ಹೋಗಿರುವುದು ಸ್ಪಷ್ಟವಾಗಿ ಕಂಡು ಬಂದರೂ ಕೂಡ ರೆಫರಿಗಳು ಕತಾರ್​ಗೆ ಯಾವ ಮಾನದಂಡದಲ್ಲಿ ಗೋಲು ನೀಡಿದರು ಎನ್ನುವುದು ಈಗ ಚರ್ಚೆಗೆ ಕಾರಣವಾಗಿದೆ. ಫಿಫಾ ನಿಯಮದ ಪ್ರಕಾರ ಚೆಂಡು ಗೆರೆ ದಾಟಿದ ಬಳಿಕ ಆಟ ಅಲ್ಲಿಗೆ ನಿಲುಗಡೆಗೊಳ್ಳಬೇಕು. ಜತೆಗೆ ಕತಾರ್‌ಗೆ ‘ಕಾರ್ನರ್-ಕಿಕ್’ ನೀಡಬೇಕಿತ್ತು. ಆದರೆ ಇಲ್ಲಿ ಹೀಗಾಗಲಿಲ್ಲ.

VISTARANEWS.COM


on

FIFA World Cup
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೋಹಾ: ಮಂಗಳವಾರ ನಡೆದಿದ್ದ ಫಿಫಾ ವಿಶ್ವಕಪ್(FIFA World Cup) ಅರ್ಹತಾ ಸುತ್ತಿನ ಪಂದ್ಯದಲ್ಲಿ ಭಾರತ ತಂಡ ಕತಾರ್(India vs Qatar) ವಿರುದ್ಧ 2-1 ಗೋಲುಗಳ ಅಂತರದಿಂದ ಸೋತು ಐತಿಹಾಸಿಕ ಮೂರನೇ ಸುತ್ತಿಗೆ ಪ್ರವೇಶ ಪಡೆಯುವ ಅವಕಾಶ ಕಳೆದುಕೊಂಡಿತ್ತು. ಭಾರತದ ಈ ಸೋಲಿಗೆ ಈ ಪಂದ್ಯದಲ್ಲಿ ರೆಫರಿ ನೀಡಿರುವ ವಿವಾದಾತ್ಮಕ(Controversial Goal) ಗೋಲು ಪ್ರಮುಖ ಕಾರಣ ಎಂದು ರೆಫರಿ ಮತ್ತು ಸಂಘಟಕರ ವಿರುದ್ಧ ಎಲ್ಲಡೆ ವಿರೋಧ ವ್ಯಕ್ತವಾಗಿದೆ. ಈ ಕುರಿತು ದೂರು ದಾಖಲಿಸಿರುವ ಅಖಿಲ ಭಾರತ ಫುಟ್‌ಬಾಲ್‌ ಫೆಡರೇಷನ್‌(All India Football Federation) (ಎಐಎಫ್‌ಎಫ್‌) ತನಿಖೆಯನ್ನು ಬಯಸಿದೆ.

ಈ ಪಂದ್ಯದಲ್ಲಿ ಲಾಲಿಯನ್ಜುವಾಲಾ ಚಾಂಗ್ಟೆ ಅವರು 37 ನೇ ನಿಮಿಷದಲ್ಲಿ ದಾಖಲಿಸಿದ ಗೋಲಿನಿಂದ ಭಾರತ ಮುಂದಿತ್ತು. ಆದರೆ, 73ನೇ ನಿಮಿಷದಲ್ಲಿ ಕತಾರ್‌ನ ಯೂಸುಫ್ ಐಮೆನ್ ವಿವಾದಾತ್ಮಕ ಗೋಲು ಗಳಿಸಿದರು. ಇದು ಪಂದ್ಯದ ಫಲಿತಾಂಶದ ಮೇಲೆ ಪರಿಣಾಮ ಬೀರುವಂತಾಯಿತು.

ಏನಿದು ಘಟನೆ?


ಕತಾರ್‌ನ ಆಟಗಾರ ಅಬ್ದುಲ್ಲಾ ಅಲರಾಕ್ ಅವರ ‘ಫ್ರಿ-ಕಿಕ್’ ಅನ್ನು ಯೂಸೆಫ್ ಅಯೆಮ್ ಹೆಡರ್ ಮೂಲಕ ಭಾರತದ ಗೋಲು ಪೆಟ್ಟಿಗೆಗೆ ಸೇರಿಸಲು ಯತ್ನಿಸಿದರು. ಈ ವೇಳೆ ಭಾರತೀಯ ಗೋಲು ಕೀಪರ್ ಗುರ್ಪಿತ್ ಸಿಂಗ್ ಸಂಧು ಅವರು ಗೋಲು ಪೋಸ್ಟ್ ಸಮೀಪದಲ್ಲಿ ಚೆಂಡನ್ನು ತಡೆಯಲು ಯತ್ನಿಸಿದಾಗ ಕೈಯಿಂದ ಕೈಚೆಲ್ಲಿದ ಚೆಂಡು ಗೆರೆ ದಾಟಿ ಹೊರಗೆ ಹೋಯಿತು. ಇದು ರಿಪ್ಲೇಯಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ. ಆದರೆ ಈ ವೇಳೆ ಮೋಸದಾಟದ ಮೂಲಕ ಕತಾರ್ ಆಟಗಾರ ಹಶ್ಮಿ ಹುಸೇನ್ ಚೆಂಡನ್ನು ಮತ್ತೆ ಒಳಕ್ಕೆ ಒದ್ದಿದ್ದಾರೆ. ಈ ವೇಳೆ ಮತೋರ್ವ ಆಟಗಾರ ಯೂಸುಫ್ ಐಮೆನ್ ಚೆಂಡನ್ನು ಬಲೆಯೊಳಗೆ ಸೇರಿಸಿದ್ದಾರೆ. ರೆಫರಿ ಗೋಲ್​ ಎಂದು ತೀರ್ಪು ನೀಡಿದರು.

ರೆಫರಿ ನಿರ್ಧಾರಕ್ಕೆ ಭಾರತೀಯ ಆಟಗಾರರು ಮೈದಾನದಲ್ಲೇ ತೀವ್ರ ಪ್ರತಿರೋಧ ತೋರಿದರೂ, ರೆಫರಿಗಳು ಪರಿಗಣಿಸಲೇ ಇಲ್ಲ. ಇದರಿಂದಾಗಿ ಪಂದ್ಯದಲ್ಲಿ ಭಾರತ ಹಿನ್ನಡೆ ಅನುಭವಿಸಿತು. ಬಳಿಕ 85ನೇ ನಿಮಿಷದಲ್ಲಿ ಅಹ್ಮದ್ ಅಲ್-ರಾವಿ ಗಳಿಸಿದ ಗೋಲಿನಿಂದ ಕತಾರ್ ಗೆಲುವು ಸಾಧಿಸಿತ್ತು.

ಇದನ್ನೂ ಓದಿ FIFA World Cup: ಫಿಫಾ ವಿಶ್ವಕಪ್ ಅರ್ಹತಾ ಪಂದ್ಯಗಳಿಗೆ ಭುವನೇಶ್ವರ, ಗುವಾಹಟಿ ಆತಿಥ್ಯ

ಚೆಂಡು ಭಾರತೀಯ ಗೋಲು ಕೀಪರ್ ಕೈಗೆ ತಾಗಿ ಹೊರ ಹೋಗಿರುವುದು ಸ್ಪಷ್ಟವಾಗಿ ಕಂಡು ಬಂದರೂ ಕೂಡ ರೆಫರಿಗಳು ಕತಾರ್​ಗೆ ಯಾವ ಮಾನದಂಡದಲ್ಲಿ ಗೋಲು ನೀಡಿದರು ಎನ್ನುವುದು ಈಗ ಚರ್ಚೆಗೆ ಕಾರಣವಾಗಿದೆ. ಫಿಫಾ ನಿಯಮದ ಪ್ರಕಾರ ಚೆಂಡು ಗೆರೆ ದಾಟಿದ ಬಳಿಕ ಆಟ ಅಲ್ಲಿಗೆ ನಿಲುಗಡೆಗೊಳ್ಳಬೇಕು. ಜತೆಗೆ ಕತಾರ್‌ಗೆ ‘ಕಾರ್ನರ್-ಕಿಕ್’ ನೀಡಬೇಕಿತ್ತು. ಆದರೆ ಇಲ್ಲಿ ಹೀಗಾಗಲಿಲ್ಲ.

ತನಿಖೆಗೆ ಆಗ್ರಹ


ರೆಫರಿ ವಿವಾದಾತ್ಮಕ ತೀರ್ಪಿನ ಕುರಿತು ಅಖಿಲ ಭಾರತ ಫುಟ್‌ಬಾಲ್‌ ಫೆಡರೇಷನ್‌ (ಎಐಎಫ್‌ಎಫ್‌) ದೂರು ದಾಖಲಿಸಿ ತನಿಖೆಗೆ ಬಯಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs ZIM: ಜಿಂಬಾಬ್ವೆ ತಲುಪಿದ ಯಂಗ್‌ ಟೀಮ್‌ ಇಂಡಿಯಾ; ಶನಿವಾರದಿಂದ ಸರಣಿ ಆರಂಭ

IND vs ZIM: ಆಟಗಾರರು ಮತ್ತು ಹಂಗಾಮಿ ಕೋಚ್​ ವಿವಿಎಸ್​ ಲಕ್ಮ್ಮಣ್(VVS Laxman)​ ಜಿಂಬಾಬ್ಬೆಗೆ ತಲುಪಿರುವ ಫೋಟೊವನ್ನು ಜಿಂಬಾಬ್ವೆ ಕ್ರಿಕೆಟ್‌ ಮಂಡಳಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಉಭಯ ತಂಡಗಳ ಸರಣಿ ಜುಲೈ 6 ರಿಂದ ಆರಂಭಗೊಳ್ಳಲಿದೆ.

VISTARANEWS.COM


on

IND vs ZIM
Koo

ಹರಾರೆ: ಆತಿಥೇಯ ಜಿಂಬಾಬ್ವೆ(IND vs ZIM) ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನಾಡಲು ಭಾರತ ತಂಡ ಹರಾರೆಗೆ(Team India touchdown in Zimbabwe) ತಲುಪಿದೆ. ಆಟಗಾರರು ಮತ್ತು ಹಂಗಾಮಿ ಕೋಚ್​ ವಿವಿಎಸ್​ ಲಕ್ಮ್ಮಣ್(VVS Laxman)​ ಜಿಂಬಾಬ್ಬೆಗೆ ತಲುಪಿರುವ ಫೋಟೊವನ್ನು ಜಿಂಬಾಬ್ವೆ ಕ್ರಿಕೆಟ್‌ ಮಂಡಳಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಉಭಯ ತಂಡಗಳ ಸರಣಿ ಜುಲೈ 6 ರಿಂದ ಆರಂಭಗೊಳ್ಳಲಿದೆ.

ಬುಧವಾರ (ಜುಲೈ 3) ಜಿಂಬಾಬ್ವೆಗೆ ಬಂದಿಳಿದ ಟೀಮ್​ ಇಂಡಿಯಾಕ್ಕೆ ಆತ್ಮೀಯ ಸ್ವಾಗತ ಕೋರಲಾಯಿತು. ಜಿಂಬಾಬ್ವೆ ಕ್ರಿಕೆಟ್ ಹಂಚಿಕೊಂಡ ವೀಡಿಯೊದಲ್ಲಿ, ಲಕ್ಷ್ಮಣ್ ವಿಮಾನ ನಿಲ್ದಾಣದಿಂದ ಹೊರಬರುತ್ತಿರುವುದನ್ನು ನೋಡಬಹುದು ಮತ್ತು ಇತರ ಬೆಂಬಲ ಸಿಬ್ಬಂದಿಯೊಂದಿಗೆ 15 ಸದಸ್ಯರ ತಂಡ ಕೂಡ ಜತೆಗಿತ್ತು. ಗುರುವಾರದಿಂದ ಆಟಗಾರರು ಅಭ್ಯಾಸ ಆರಂಭಿಸಲಿದ್ದಾರೆ.

ಚಂಡಮಾರುತದಿಂದ ಬಾರ್ಬಡೋಸ್‌ನಲ್ಲಿ ಸಿಲುಕಿರುವ ಟಿ20 ವಿಶ್ವಕಪ್​ ತಂಡದ ಭಾಗವಾಗಿದ್ದ, ಸಂಜು ಸ್ಯಾಮ್ಸನ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಇನ್ನೂ ಕೂಡ ಭಾರತಕ್ಕೆ ಆಗಮಿಸದ ಕಾರಣ ಅವರ ಬದಲಿಗೆ ಸಾಯಿ ಸುದರ್ಶನ್(Sai Sudharsan), ಜಿತೇಶ್ ಶರ್ಮಾ(Jitesh Sharma) ಮತ್ತು ಹರ್ಷಿತ್ ರಾಣಾ(Harshit Rana) ಅವರನ್ನು ಮೊದಲ ಎರಡು ಪಂದ್ಯಗಳಿಗಾಗಿ ಬಿಸಿಸಿಐ ಮಂಗಳವಾರ ತಂಡಕ್ಕೆ ಸೇರ್ಪಡೆಗೊಳಿಸಿತ್ತು.

ಚೊಚ್ಚಕ ಕರೆ ಪಡೆದ ಹರ್ಷಿತ್ ರಾಣಾ ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ ಮೊನಚಾದ ಬೌಲಿಂಗ್​ ಮೂಲಕ ಒಟ್ಟು 19 ವಿಕೆಟ್​ ಕಿತ್ತು ಮಿಂಚಿದ್ದರು. ಮಾಯಾಂಕ್​ ಅಗರ್ವಾಲ್​ ವಿಕೆಟ್​ ಕಿತ್ತು ದುರ್ವರ್ತನೆ ತೋರಿದ ಕಾರಣಕ್ಕೆ ದಂಡ ಮತ್ತು ಒಂದು ಪಂದ್ಯದ ನಿಷೇಧ ಶಿಕ್ಷೆ ಕೂಡ ಎದುರಿಸಿದ್ದರು.

ಇದನ್ನೂ ಓದಿ Team India: ತವರಿಗೆ ಪ್ರಯಾಣ ಬೆಳೆಸಿದ ಟೀಮ್​ ಇಂಡಿಯಾ; ನಾಳೆ ದಿಲ್ಲಿಗೆ ಆಗಮನ

5 ಪಂದ್ಯಗಳ ಟಿ20 ಸರಣಿ ಇದಾಗಿದ್ದು, ಅಭಿಷೇಕ್ ಶರ್ಮಾ, ನಿತೀಶ್ ರೆಡ್ಡಿ, ರಿಯಾನ್ ಪರಾಗ್ 2024 ರ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಫಲಿತಾಂಶವಾಗಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಟಿ20 ಸರಣಿಯಲ್ಲಿ ಪಂದ್ಯಗಳನ್ನಾಡಲಿದ್ದಾರೆ. ಪರಾಗ್ ಅಸ್ಸಾಂ ನಿಂದ ಭಾರತೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುವ ಮೊದಲ ಕ್ರೀಡಾಪಟುವಾಗಿದ್ದಾರೆ.

ಭಾರತ ತಂಡ

ಶುಭಮನ್ ಗಿಲ್ (ನಾಯಕ), ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಧ್ರುವ್ ಜುರೆಲ್ (ವೀಕಿ), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ, ಸಾಯಿ ಸುದರ್ಶನ್, ಜಿತೇಶ್ ಶರ್ಮಾ (ವೀಕಿ) , ಹರ್ಷಿತ್ ರಾಣಾ.

ವೇಳಾಪಟ್ಟಿ

1ನೇ ಟಿ20: ಜುಲೈ 6, ಹರಾರೆ, ಸಂಜೆ 4.30

2ನೇ ಟಿ20: ಜುಲೈ 7, ಹರಾರೆ, ಸಂಜೆ 4.30

3ನೇ T20: ಜುಲೈ 10, ಹರಾರೆ, ಸಂಜೆ 4.30

4ನೇ T20: ಜುಲೈ 13, ಹರಾರೆ, ಸಂಜೆ 4.30

5 ನೇ T20: ಜುಲೈ 14, ಹರಾರೆ, ಸಂಜೆ 4.30

Continue Reading

ಕ್ರೀಡೆ

Medal Biting: ಒಲಂಪಿಕ್ಸ್‌ನಲ್ಲಿ ಕ್ರೀಡಾಪಟುಗಳು ಪದಕ ಕಚ್ಚುವುದು ಏಕೆ?

Medal Biting: ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತ ಕ್ರೀಡಾಪಟುಗಳು ಪದಕಗಳನ್ನು ಕಚ್ಚಿ (Medal Biteing) ಫೋಟೋಗೆ ಪೋಸ್ ಕೊಡುತ್ತಾರೆ. ಇದು ಯಾಕಾಗಿ? ಪದಕದ ಶುದ್ಧತೆಯನ್ನು ಪರಿಶೀಲಿಸಲೇ ಅಥವಾ ಇದೊಂದು ಸಂಪ್ರದಾಯವೇ? ಇದು ಯಾವಾಗದಿಂದ ಆಚರಣೆಯಲ್ಲಿದೆ ಎನ್ನುವ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Medal Biteing
Koo

ಬೆಂಗಳೂರು: ಒಲಂಪಿಕ್ಸ್‌ನಲ್ಲಿ (Olympic) ಪದಕ ವಿಜೇತ ( winners ) ಕ್ರೀಡಾಪಟುಗಳು ಪದಕವನ್ನು ಕಚ್ಚಿ (Medal Biting) ಫೋಟೋಗೆ ಪೋಸ್ ಕೊಡುವುದನ್ನು ನೋಡಿರುತ್ತೇವೆ. ಇವರು ಯಾಕೆ ಹೀಗೆ ಮಾಡುತ್ತಾರೆ ಎನ್ನುವ ಪ್ರಶ್ನೆಯಂತೂ ಒಂದಲ್ಲಾ ಒಂದು ಬಾರಿ ನಮ್ಮ ಮನದಲ್ಲಿ ಮೂಡಿರುತ್ತದೆ. ಒಲಿಂಪಿಕ್ ಪದಕ ವಿಜೇತರು ಪದಕ ಕಚ್ಚಲು ಕಾರಣವಿದೆ ಮಾತ್ರವಲ್ಲ ಇದಕ್ಕೆ ದೊಡ್ಡ ಇತಿಹಾಸವೇ ಇದೆ.

ಒಲಿಂಪಿಕ್ಸ್ ಪದಕ ವಿಜೇತ ಗಣ್ಯ ಕ್ರೀಡಾಪಟುಗಳು ವೇದಿಕೆಯ ಮೇಲೆ ನಿಂತು ತಮ್ಮ ಪದಕಗಳನ್ನು ಕಚ್ಚುವುದು ಒಲಿಂಪಿಕ್ಸ್‌ನಲ್ಲಿ ಚಿರಪರಿಚಿತ ದೃಶ್ಯವಾಗಿದೆ. ಮೈಕೆಲ್ ಫೆಲ್ಪ್ಸ್, ಉಸೇನ್ ಬೋಲ್ಟ್ ಮತ್ತು ಸಿಮೋನ್ ಬೈಲ್ಸ್ ಅವರ ಇಂತಹ ಚಿತ್ರಗಳು ಇಂದಿಗೂ ಬಹುತೇಕ ಮಂದಿಯ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ಒಲಿಂಪಿಯನ್‌ಗಳು ಹೀಗೆ ಪದಕಗಳನ್ನು ಏಕೆ ಕಚ್ಚುತ್ತಾರೆ, ಇದರ ಹಿಂದಿರುವ ಕಾರಣ ಏನು ಗೊತ್ತೇ?

ಶುದ್ಧತೆ ಪರಿಶೀಲನೆ?

ಒಲಿಂಪಿಕ್ಸ್ ನ ಆರಂಭಿಕ ದಿನಗಳು. ಬೆಲೆಬಾಳುವ ಚಿನ್ನವನ್ನು ಕರೆನ್ಸಿಯ ರೂಪದಲ್ಲಿ ಬಳಸಲು ಪ್ರಾರಂಭಿಸಲಾಯಿತು. ಚಿನ್ನದ ಪರಿಶುದ್ಧತೆಯನ್ನು ಪರಿಶೀಲಿಸಲು ವ್ಯಾಪಾರಿಗಳು ಚಿನ್ನದ ನಾಣ್ಯಗಳನ್ನು ಕಚ್ಚಿ ನೋಡುತ್ತಿದ್ದರು ಎಂದು ಇತಿಹಾಸ ಹೇಳುತ್ತದೆ. ಚಿನ್ನವು ಮೃದುವಾದ ಲೋಹವಾಗಿದೆ. ಇದರ ಮೇಲೆ ಸ್ವಲ್ಪ ಒತ್ತಡ ಬಿದ್ದರೂ ಗುರುತು ಬೀಳುತ್ತದೆ. ಹೀಗಾಗಿ ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತ ಕ್ರೀಡಾಪಟುಗಳು ತಮಗೆ ಸಿಗುವ ಚಿನ್ನದ ಪದಕವನ್ನು ಪರಿಶೀಲಿಸಲು ಹೀಗೆ ಮಾಡುತ್ತಿದ್ದರು. ಕ್ರಮೇಣ ಇದೊಂದು ಅಭ್ಯಾಸದ ಭಾಗವಾಯಿತು.


ಒಲಿಂಪಿಕ್ ಚಾಂಪಿಯನ್‌ಗಳು ತಮ್ಮ ಬಾಯಿಯಲ್ಲಿ ಚಿನ್ನದ ಪದಕವನ್ನು ಕಚ್ಚುವುದು ಈಗ ಶುದ್ಧತೆಯನ್ನು ಪರಿಶೀಲಿಸುವುದಕ್ಕಾಗಿ ಅಲ್ಲ. ಯಾಕೆಂದರೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) 1912 ರಲ್ಲಿ ಶುದ್ಧ ಚಿನ್ನದ ಪದಕಗಳನ್ನು ನೀಡುವುದನ್ನು ನಿಲ್ಲಿಸಿತ್ತು. ಆದರೆ ಅದರ ಅಭ್ಯಾಸ ಕ್ರಮ ಇನ್ನೂ ಮುಂದುವರಿದಿದೆ.


ಕ್ರೀಡಾಪಟುಗಳು ಪದಕಗಳನ್ನು ಏಕೆ ಕಚ್ಚುತ್ತಾರೆ?

ಒಲಿಂಪಿಕ್ ಕ್ರೀಡಾಪಟುಗಳಿಗೆ ಪದಕಗಳನ್ನು ಕಚ್ಚಿ ಫೋಟೋಗೆ ಪೋಸ್ ಕೊಡಲು ಕ್ರೀಡಾ ಛಾಯಾಚಿತ್ರ ಗ್ರಾಹಕರು ಕೇಳುತ್ತಾರೆ. ಇದೀಗ ಗೀಳಾಗಿ ಪರಿಣಮಿಸಿದೆ ಎನ್ನುತ್ತಾರೆ ಇಂಟರ್ನ್ಯಾಷನಲ್ ಸೊಸೈಟಿ ಆಫ್ ಒಲಿಂಪಿಕ್ ಇತಿಹಾಸಕಾರರ ಅಧ್ಯಕ್ಷ ಡೇವಿಡ್ ವಾಲೆಚಿನ್ಸ್ ಕಿ.

ಪದಕವನ್ನು ಕಚ್ಚುವ ಭಂಗಿಯು ಪತ್ರಿಕೆಗಳ ಮೊದಲ ಪುಟಕ್ಕೆ ಕೊಡಬಹುದಾದ ಚಿತ್ರ ಎಂದು ಅವರು ಪರಿಗಣಿಸುತ್ತಾರೆ ಹೀಗಾಗಿ ಕ್ರೀಡಾಪಟುಗಳಿಗೆ ಹಾಗೆ ಮಾಡಲು ಪತ್ರಕರ್ತರೇ ವಿನಂತಿಸುತ್ತಾರೆ. ಅವರು ಅದನ್ನು ಒಂದು ಸಾಂಪ್ರದಾಯ ಎನ್ನುವಂತೆ ನೋಡುತ್ತಾರೆ. ಅಥ್ಲೀಟ್‌ಗಳು ಇದನ್ನು ಸ್ವಂತವಾಗಿ ಮಾಡುತ್ತಾರೆ ಎಂದು ನಾನು ಭಾವಿಸುವುದಿಲ್ಲ ಎಂದು ವಾಲೆಚಿನ್ಸ್ ಕಿ ವಿವರಿಸಿದರು.


ಇದನ್ನೂ ಓದಿ: Suryakumar Yadav Catch: ಸೂರ್ಯಕುಮಾರ್​ ಕ್ಯಾಚ್ ಎಡವಟ್ಟು; ವಿಶ್ವಕಪ್​ ವಾಪಸ್​ ನೀಡಬೇಕಾ ಭಾರತ?

ಹಲ್ಲು ಮುರಿದುಕೊಂಡ ಡೇವಿಡ್ ಮೊಲ್ಲರ್

2010ರ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ಜರ್ಮನ್ ಲೂಗರ್ ಡೇವಿಡ್ ಮೊಲ್ಲರ್ ಅವರಿಗೆ ಈ ಭಂಗಿಯಲ್ಲಿ ಫೋಟೋಗೆ ಪೋಸ್ ಕೊಡಲು ಪತ್ರಕರ್ತರು ಕೇಳಿಕೊಂಡರು, ಆದರೆ ಇದರಿಂದ ಬಳಿಕ ಅವರು ಒಂದು ಹಲ್ಲು ಮುರಿದುಕೊಂಡಿರುವುದಾಗಿ ಹೇಳಿಕೊಂಡಿದ್ದರು.

Continue Reading

ಕ್ರೀಡೆ

Team India: ತವರಿಗೆ ಪ್ರಯಾಣ ಬೆಳೆಸಿದ ಟೀಮ್​ ಇಂಡಿಯಾ; ನಾಳೆ ದಿಲ್ಲಿಗೆ ಆಗಮನ

Team India: ಬಿಸಿಸಿಐ ವ್ಯವಸ್ಥೆ ಮಾಡಿರುವ ವಿಶೇಷ ವಿಮಾನದಲ್ಲಿ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಭಾರತಕ್ಕೆ ಮರಳಲಿದ್ದಾರೆ. ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿತ್ತು.

VISTARANEWS.COM


on

Team India
Koo

ಬಾರ್ಬಡೋಸ್​: ಟಿ20 ವಿಶ್ವ ಚಾಂಪಿಯನ್​ ಭಾರತ ತಂಡ(Team India) ಬಾರ್ಬಡೋಸ್​ನಿಂದ(Barbados) ತವರಿಗೆ ಪ್ರಯಾಣ ಬೆಳೆಸಿದೆ(Team India’s departure). ಈ ವಿಚಾರವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಬುಧವಾರ ಖಚಿತಪಡಿಸಿದೆ. ಟಿ20 ವಿಶ್ವಕಪ್​ ಟ್ರೋಫಿಯ ವಿಡಿಯೊ ಹಾಕಿ ನಾವು ಮರಳುತ್ತಿದ್ದೇವೆ ಎಂದು ಬರೆದುಕೊಂಡಿದೆ. ಬುಧವಾರ ಬಾರ್ಬಡೋಸ್​ನಿಂದ ಹೊರಡಿರುವ ಟೀಮ್​ ಇಂಡಿಯಾ ಗುರುವಾರ ಬೆಳಗ್ಗೆ ನವದೆಹಲಿಗೆ ತಲುಪಲಿದ್ದಾರೆ ಎಂದು ವರದಿಯಾಗಿದೆ.

ಬಿಸಿಸಿಐ ವ್ಯವಸ್ಥೆ ಮಾಡಿರುವ ವಿಶೇಷ ವಿಮಾನದಲ್ಲಿ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಭಾರತಕ್ಕೆ ಮರಳಲಿದ್ದಾರೆ. ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿತ್ತು. ಗಂಟೆಗೆ 130 ಕಿ.ಮೀ.ಗೂ ವೇಗವಾಗಿ ಗಾಳಿ ಬೀಸುತ್ತಿರುವುದರಿಂದ ಪ್ರವಾಸಿಗರಿಗೆ ಒಳಾಂಗಣದಲ್ಲೇ ಉಳಿದುಕೊಳ್ಳುವಂತೆ ಎಚ್ಚರಿಕೆ ನೀಡಲಾಗಿತ್ತು. ಅಲ್ಲದೇ ಬಾರ್ಬಡಾಸ್‌ನಲ್ಲಿ ನಿಷೇದಾಜ್ಞೆ ಜಾರಿ ಮಾಡಿ ಜನರಿಗೆ ಮನೆಗಳಿಂದ ಹೊರಬರದಂತೆ ಸೂಚಿಸಲಾಗಿತ್ತು. ಜತೆಗೆ ವಿಮಾನ ನಿಲ್ದಾಣಗಳು ಬಂದ್‌ ಆಗಿತ್ತು. ಹೀಗಾಗಿ ಭಾರತ ತಂಡ ಬಾರ್ಬಡೋಸ್​ನ ಹೊಟೇಲ್‌ನಲ್ಲಿ ತಂಗಿತ್ತು.

17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದ ಭಾರತ

ಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತ್ತು.

ಬೆರಿಲ್ ಚಂಡಮಾರುತದ ದೃಶ್ಯವನ್ನು ವಿಡಿಯೊ ಕಾಲ್​ ಮೂಲಕ ಪತ್ನಿ ಅನುಷ್ಕಾಗೆ ತೋರಿಸಿದ ಕೊಹ್ಲಿ

ಚಂಡಮಾರುತದ ಅಬ್ಬರದ ದೃಶ್ಯವನ್ನು ವಿರಾಟ್​ ಕೊಹ್ಲಿ(virat kohli) ಅವರು ತಮ್ಮ ಪತ್ನಿ ಅನುಷ್ಕಾ ಶರ್ಮಗೆ(Virat- Anushka) ವಿಡಿಯೊ ಕಾಲ್ ಮೂಲಕ ತೋರಿಸುತ್ತಿರುವ ವಿಡಿಯೊ ಇದೀಗ ವೈರಲ್​ ಆಗಿದೆ.​

ವಿರಾಟ್​ ಕೊಹ್ಲಿ ತಾವು ತಂಗಿರುವ ಹೊಟೇಲ್‌ ಕಿಟಕಿಯಿಂದ ಸಮುದ್ರದಲ್ಲಿ ಅಪ್ಪಳಿಸುತ್ತಿರುವ ಭಾರೀ ಗಾತ್ರದ ಅಲೆಗಳನ್ನು, ಮತ್ತು ಅಲ್ಲಿನ ಪರಿಸ್ಥಿತಿ ಹೇಗಿದೆ ಎನ್ನುವುದನ್ನು ಪತ್ನಿ ಅನುಷ್ಕಾಗೆ(anushka sharma) ವಿಡಿಯೊ ಕಾಲ್​ ಮೂಲಕ ತೋರಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ. ಕುಟುಂಬಕ್ಕೆ ಮೊದಲ ಪ್ರಾಧಾನ್ಯತೆ ನೀಡುವ ಕೊಹ್ಲಿ ಯಾವುದೇ ಪಂದ್ಯ ಇರಲಿ ಇದು ಮುಕ್ತಾಯಗೊಂಡ ತಕ್ಷಣ ಪತ್ನಿಗೆ ವಿಡಿಯೊ ಕಾಲ್​ ಮಾಡಿ ಮಾತನಾಡುತ್ತಾರೆ. ಕೆಲವೊಮ್ಮೆ ಕ್ರಿಕೆಟ್​ ಸರಣಿ ಇದ್ದರೂ ಕೂಡ ಇದರಿಂದ ಹಿಂದೆ ಸರಿದು ಕುಟುಂಬದ ಜತೆ ಕಾಲ ಕಳೆಯುತ್ತಾರೆ. ಟಿ20 ವಿಶ್ವಕಪ್​ ಗೆದ್ದ ಬಳಿಕವೂ ಕೂಡ ಕೊಹ್ಲಿ ಪತ್ನಿಗೆ ಕರೆ ಮಾಡಿ ಮಕ್ಕಳ ಬಗ್ಗೆ ವಿಚಾರಿಸಿದ್ದಾರೆ. ಜತೆಗೆ ಪುಟ್ಟ ಮಗುವಿಗೆ ಫ್ಲೈಯಿಂಗ್ ಕಿಸ್ ನೀಡಿದ ವಿಡಿಯೊ ಕೂಡ ವೈರಲ್​ ಆಗಿತ್ತು.

Continue Reading

ಕ್ರೀಡೆ

Suryakumar Yadav Catch: ಸೂರ್ಯಕುಮಾರ್​ ಕ್ಯಾಚ್ ಎಡವಟ್ಟು; ವಿಶ್ವಕಪ್​ ವಾಪಸ್​ ನೀಡಬೇಕಾ ಭಾರತ?

Suryakumar Yadav Catch: ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ ರಜನೀಶ್ ಗುಪ್ತಾ ಎಂಬವರು ಸೂರ್ಯಕುಮಾರ್​ ಕ್ಯಾಚ್​ ವಿವಾದದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. “ನಾನು ಅಂದು ಮೈದಾನದ ಟಿವಿ ಕಾಮೆಂಟರಿ ಬಾಕ್ಸ್‌ನಲ್ಲಿದ್ದೆ. ಬಿಳಿ ಗೆರೆಯು ಬೌಂಡರಿಯಾಗಿರಲಿಲ್ಲ ಎಂದು ನಾನು ಹೇಳಬಲ್ಲೆ. ಏಕೆಂದರೆ ಬೌಂಡರಿ ರೋಪ್ ವೆಡ್ಜ್ ಆ ಬಿಳಿ ಗೆರೆಯ ಹಿಂದೆ ಇತ್ತು. ಪಂದ್ಯದ ಆರಂಭದಿಂದಲೂ ಹಾಗೆಯೇ ಇತ್ತು. ಪಿಚ್ ಅನ್ನು ಬದಲಾಯಿಸಿದಾಗ, ಬೌಂಡರಿಗಳನ್ನು ಸರಿಹೊಂದಿಸಲಾಗುತ್ತದೆ. ಹೀಗಾಗಿ ಈ ಬಗ್ಗೆ ಚರ್ಚೆ ನಡೆಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದಿದ್ದಾರೆ.

VISTARANEWS.COM


on

Suryakumar Yadav Catch
Koo

ಲಂಡನ್​: ಟಿ20 ವಿಶ್ವಕಪ್(T20 World Cup 2024)​ ಟೂರ್ನಿ ಮುಕ್ತಾಯ ಕಂಡಿದ್ದರೂ ಕೂಡ ಫೈನಲ್​ ಪಂದ್ಯದಲ್ಲಿ ಸೂರ್ಯಕುಮಾರ್​ ಯಾದವ್(Suryakumar Yadav Catch)​ ಅವರು ಹಿಡಿದ ಕ್ಯಾಚ್​ ಬಗೆಗಿನ ಚರ್ಚೆಗಳು ಮುಗಿದಂತೆ ಕಾಣುತ್ತಿಲ್ಲ. ಬೌಂಡರಿ ಲೈನ್​ಗೆ ಬಳಸುವ ಕುಶನ್ ಹಿಂದಕ್ಕೆ ತಳ್ಳಲಾಗಿತ್ತು. ಭಾರತದ ಬೌಲಿಂಗ್ ವೇಳೆ ಬೇಕಂತಲೇ ಕುಶನ್ ಹಿಂದಕ್ಕೆ ದೂಡಲಾಗಿತ್ತು, ಸೂರ್ಯಕುಮಾರ್(Suryakumar Yadav) ಅವರು ಬೌಂಡರಿ ಗೆರೆಯನ್ನು ತುಳಿದಿದ್ದಾರೆ ಎನ್ನಲಾದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಇದೀಗ ಭಾರತ ಗೆದ್ದಿರುವ ಟಿ20 ವಿಶ್ವಕಪ್ ವಾಪಸ್ ಕೊಡಬೇಕಾ? ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಜೂನ್​ 29, ಶನಿವಾರ ರಾತ್ರಿ ನಡೆದಿದ್ದ ಅತ್ಯಂತ ರೋಚಕ ಟಿ20 ವಿಶ್ವಕಪ್​ ಫೈನಲ್ ಪಂದ್ಯದಲ್ಲಿ ಟೀಮ್​ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್​ ಅಂತರದ ಗೆಲುವು ಸಾಧಿಸಿ 13 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಬರವನ್ನು ನೀಗಿಸಿತ್ತು.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಮಿಲ್ಲರ್​ ಔಟ್​ ಆಗುತ್ತಿದ್ದಂತೆ ಭಾರತದ ಗೆಲುವು ಕೂಡ ಖಚಿತಗೊಂಡಿತು.

ಇದನ್ನೂ ಓದಿ Suryakumar Yadav : ವಿಶ್ವ ಕಪ್​ ಟ್ರೋಫಿಯನ್ನು ಬೆಡ್​ ಮಧ್ಯದಲ್ಲಿಟ್ಟು ನಿದ್ದೆ ಮಾಡಿದ ಸೂರ್ಯಕುಮಾರ್ ದಂಪತಿ!

ಕ್ಯಾಚ್​ನ ವಿಡಿಯೊವನ್ನು ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದ ದಕ್ಷಿಣ ಆಫ್ರಿಕಾದ ನೆಟ್ಟಿಗರು, ಅಂಪೈರ್​ಗಳು ಈ ವಿಡಿಯೊವನ್ನು ಸೂಕ್ಷವಾಗಿ ಗಮನಿಸುವ ಅಗತ್ಯವಿದೆ. ಸೂರ್ಯಕುಮಾರ್​ ಅವರ ಕಾಲುಗಳು ಬೌಂಡರಿ ಲೈನ್​ಗ ಕೆಳ ಭಾಗದ ಪಟ್ಟಿಗೆ ತಾಗಿರುವುದು ಕಂಡು ಬಂದಿದೆ. ಹೀಗಾಗಿ ಇದು ಔಟ್​ ಅಲ್ಲ ಸಿಕ್ಸ್​ ಎಂದು ಆಕ್ರೋಶ ಹೊರಹಾಕಿದ್ದರು. ಇದಾದ ಬಳಿಕ ಭಾರತದ ಬೌಲಿಂಗ್ ವೇಳೆ ಬೇಕಂತಲೇ ಕುಶನ್ ಹಿಂದಕ್ಕೆ ದೂಡಲಾಗಿತ್ತು ಎಂಬ ಆರೋಪ ಕೂಡ ಕೇಳಿ ಬಂದಿತ್ತು. ಒಂದು ವೇಳೆ ಕುಶನ್ ನಿಗದಿತ ಸ್ಥಳದಲ್ಲಿ ಇದ್ದರೆ ದಕ್ಷಿಣ ಆಫ್ರಿಕಾ ಗೆಲುವು ಸಾಧಿಸುತ್ತಿತ್ತು ಎಂದು ಹಲವರು ವಾದಿಸುತ್ತಿದ್ದಾರೆ. ಇದಕ್ಕೆ ಇದೀಗ ಸ್ಪಷ್ಟನೆಯೊಂದು ಸಿಕ್ಕಿದೆ.

ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ ರಜನೀಶ್ ಗುಪ್ತಾ ಎಂಬವರು ಸೂರ್ಯಕುಮಾರ್​ ಕ್ಯಾಚ್​ ವಿವಾದದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. “ನಾನು ಅಂದು ಮೈದಾನದ ಟಿವಿ ಕಾಮೆಂಟರಿ ಬಾಕ್ಸ್‌ನಲ್ಲಿದ್ದೆ. ಬಿಳಿ ಗೆರೆಯು ಬೌಂಡರಿಯಾಗಿರಲಿಲ್ಲ ಎಂದು ನಾನು ಹೇಳಬಲ್ಲೆ. ಏಕೆಂದರೆ ಬೌಂಡರಿ ರೋಪ್ ವೆಡ್ಜ್ ಆ ಬಿಳಿ ಗೆರೆಯ ಹಿಂದೆ ಇತ್ತು. ಪಂದ್ಯದ ಆರಂಭದಿಂದಲೂ ಹಾಗೆಯೇ ಇತ್ತು. ಪಿಚ್ ಅನ್ನು ಬದಲಾಯಿಸಿದಾಗ, ಬೌಂಡರಿಗಳನ್ನು ಸರಿಹೊಂದಿಸಲಾಗುತ್ತದೆ. ಹೀಗಾಗಿ ಈ ಬಗ್ಗೆ ಚರ್ಚೆ ನಡೆಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದಿದ್ದಾರೆ.

Continue Reading
Advertisement
viral news signboard
ವೈರಲ್ ನ್ಯೂಸ್6 mins ago

Viral News: ʼತುರ್ತಾಗಿ ಒಂದು ಅಪಘಾತ ಮಾಡಿʼ ಅನ್ನುತ್ತಿದೆ ಈ ಸೈನ್‌ಬೋರ್ಡ್‌!

Hijab Row
ದೇಶ8 mins ago

Hijab Row: ಹಿಬಾಬ್‌ ನಿಷೇಧದ ಬೆನ್ನಲ್ಲೇ ಜೀನ್ಸ್‌, ಟೀ-ಶರ್ಟ್‌ ಬ್ಯಾನ್‌- ಪ್ರಕಟಣೆ ಹೊರಡಿಸಿದ ಮುಂಬೈ ಕಾಲೇಜು

Stray Dogs Attack
ಕರ್ನಾಟಕ21 mins ago

Stray Dogs Attack: ಸುರಪುರದಲ್ಲಿ ಬೀದಿ ನಾಯಿಗಳ ದಾಳಿಗೆ 15 ಕುರಿಗಳು ಬಲಿ

Gold Rate Today
ಚಿನ್ನದ ದರ26 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಷ್ಟಿದೆ ಇಂದಿನ ಬೆಲೆ

lovers death self harming
ಕ್ರೈಂ42 mins ago

Lovers Death: ನಾಪತ್ತೆಯಾಗಿದ್ದ ಪ್ರೇಮಿಗಳ ಶವ ನೈಸ್ ರಸ್ತೆ ಬಳಿ ಕೆರೆಯಲ್ಲಿ ಪತ್ತೆ

Anant-Radhika Wedding
ದೇಶ51 mins ago

Anant-Radhika Wedding: ಅನಂತ್‌ ಅಂಬಾನಿ ಮದುವೆಗೆ ಪೂರ್ವಭಾವಿಯಾಗಿ ಸಾಮೂಹಿಕ ವಿವಾಹ; ಪ್ರತಿ ವಧುವಿಗೆ ಚಿನ್ನಾಭರಣ, 1 ಲಕ್ಷ ರೂ.

Prajwal Devaraj cancel birthday darshan main reason
ಸಿನಿಮಾ53 mins ago

Prajwal Devaraj: ಪ್ರಜ್ವಲ್ ದೇವರಾಜ್ ಬರ್ತ್‌ಡೇ ಸೆಲೆಬ್ರೇಷನ್‌ ಕ್ಯಾನ್ಸಲ್‌; ದರ್ಶನ್‌ ಕಾರಣ?

IND vs ZIM
ಕ್ರೀಡೆ1 hour ago

IND vs ZIM: ಜಿಂಬಾಬ್ವೆ ತಲುಪಿದ ಯಂಗ್‌ ಟೀಮ್‌ ಇಂಡಿಯಾ; ಶನಿವಾರದಿಂದ ಸರಣಿ ಆರಂಭ

Medal Biteing
ಕ್ರೀಡೆ1 hour ago

Medal Biting: ಒಲಂಪಿಕ್ಸ್‌ನಲ್ಲಿ ಕ್ರೀಡಾಪಟುಗಳು ಪದಕ ಕಚ್ಚುವುದು ಏಕೆ?

Tharun Sudhir sonal monteiro marriage update
ಸ್ಯಾಂಡಲ್ ವುಡ್1 hour ago

Tharun Sudhir: ಸೋನಾಲ್-ತರುಣ್ ಮದುವೆ ಯಾವಾಗ? ಭಾವಿ ಸೊಸೆ ಬಗ್ಗೆ ಡೈರೆಕ್ಟರ್ ಅಮ್ಮ ಏನಂದ್ರು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ18 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌