Actor Darshan: ಆರಾಧನೆ ಅತಿರೇಕವಾದರೆ ದುರಂತ ಖಚಿತ; ದರ್ಶನ್​ ಬಗ್ಗೆ ರಾಮ್​ಗೋಪಾಲ್ ವರ್ಮಾ ಹೇಳಿದ್ದು ಹೀಗೆ... - Vistara News

ಸ್ಯಾಂಡಲ್ ವುಡ್

Actor Darshan: ಆರಾಧನೆ ಅತಿರೇಕವಾದರೆ ದುರಂತ ಖಚಿತ; ದರ್ಶನ್​ ಬಗ್ಗೆ ರಾಮ್​ಗೋಪಾಲ್ ವರ್ಮಾ ಹೇಳಿದ್ದು ಹೀಗೆ…

Actor Darshan: ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು.

VISTARANEWS.COM


on

Actor Darshan case ram gopal varma Reaction
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ (Actor Darshan). ಕಸ್ಟಡಿಯಲ್ಲಿರುವ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ ಇತರ ಆರೋಪಿಗಳನ್ನು ಪಟ್ಟಣಗೆರೆಯ ಶೆಡ್‌ಗೆ ಬುಧವಾರ ಕರೆದೊಯ್ದು ಸ್ಥಳ ಮಹಜರು ನಡೆಸಿದರು. ಕೇಸ್​ನಲ್ಲಿ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಅವರ ಜೊತೆ ಪವಿತ್ರಾ ಕೂಡ ಬಂಧನಕ್ಕೆ ಒಳಗಾಗಿದ್ದಾರೆ. ಸದ್ಯ ಇವರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಈ ಪ್ರಕರಣದ ಬಗ್ಗೆ ಆರ್​ಜಿವಿ ಮಾತನಾಡಿದ್ದಾರೆ. ದರ್ಶನ್ ಅವರು ಕೊಲೆ ಕೇಸ್​ನಲ್ಲಿ ಭಾಗಿ ಆಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಹೊಸ ಹೊಸ ಕಥೆ ಹೇಳುತ್ತಿದ್ದಾರೆ ಎಂಬರ್ಥದಲ್ಲಿ ಆರ್​ಜಿವಿ ಮಾತನಾಡಿದ್ದಾರೆ.

ಎಕ್ಸ್‌ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ. ʻʻ”ಚಿತ್ರ ನಿರ್ಮಾಪಕರು ಚಿತ್ರಕಥೆಯನ್ನು ಅಂತಿಮಗೊಳಿಸಿದ ನಂತರವೇ ಚಿತ್ರೀಕರಣವನ್ನು ಪ್ರಾರಂಭಿಸುತ್ತಾರೆ. ಚಿತ್ರೀಕರಣ ನಡೆಯುತ್ತಿರುವಾಗ ಸಾಕಷ್ಟು ಬಾರಿ ನಿರ್ಮಾಪಕರು ಬರೆಯುತ್ತಾರೆ. ಆದರೆ ದರ್ಶನ್ ಕೊಲೆ ಪ್ರಕರಣದಲ್ಲಿ, ಸಿನಿಮಾ ಬಿಡುಗಡೆ ಆದ ಬಳಿಕ ಚಿತ್ರಕಥೆ ಬರೆಯಲಾಗುತ್ತಿದೆ’ ಎಂದಿದ್ದಾರೆ. ದರ್ಶನ್ ಅವರು ಕೊಲೆ ಕೇಸ್​ನಲ್ಲಿ ಭಾಗಿ ಆಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಹೊಸ ಹೊಸ ಕಥೆ ಹೇಳುತ್ತಿದ್ದಾರೆ ಎಂಬರ್ಥದಲ್ಲಿ ಆರ್​ಜಿವಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: Actor Darshan : ನಟ ದರ್ಶನ್‌ ವಿರುದ್ಧ ಸಿಡಿದೆದ್ದ ಮಂಡ್ಯ ರೈತರು; ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಇನ್ನೊಂದು ಪೋಸ್ಟ್‌ನಲ್ಲಿ ʻʻವೈಯಕ್ತಿಕ ಜೀವನದಲ್ಲಿ ಮಧ್ಯಪ್ರವೇಶಿಸುತ್ತಿರುವ ಅಭಿಮಾನಿಯನ್ನು ಕೊಲ್ಲಲು ಸ್ಟಾರ್​ ನಟ ಕಟ್ಟರ್​​ ಅಭಿಮಾನಿಗಳನ್ನೇ ಬಳಿಸಿಕೊಂಡಿದ್ದಾರೆ. ಇದು ಸ್ಟಾರ್ ಹೀರೋಗಳ ಆರಾಧನಾ ಸಂಸ್ಕೃತಿಯ ವಿಲಕ್ಷಣತೆಗೆ ಸೂಕ್ತ ಉದಾಹರಣೆ. ವ್ಯಕ್ತಿ ಆರಾಧನೆ ಅತಿರೇಕಕ್ಕೆ ಹೋದರೆ ಯಾವ ರೀತಿಯ ದುರಂತ ಸಂಭವಿಸಬಹುದು ಎನ್ನುವುದಕ್ಕೆ ಇದು ಉತ್ತಮ ಉದಾಹರಣೆ”ಎಂದು ಬರೆದುಕೊಂಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಹೇಗೆ ನಡೆದಿತ್ತು?

ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು.

ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ 80 ಪರ್ಸೆಂಟ್ ಸಾವನ್ನಪ್ಪಿದ್ದ. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ನಟ ದರ್ಶನ್‌ ಸಹ ಹಲ್ಲೆ ಮಾಡಿದ್ದಾರೆ.

ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸಂಜೆ 6.30ರ ಸುಮಾರಿಗೆ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದ. ಅದಾದ ಮೇಲೆ ರಾತ್ರಿ ಒಂದು ಗಂಟೆವರೆಗೆ ಮೃತದೇಹದೊಂದಿಗೆ ಹಂತಕರು ಇದ್ದರು. ಬಳಿಕ ದರ್ಶನ್‌ಗೆ ರಾಘವೇಂದ್ರ ಹಾಗೂ ವಿನಯ್ ಮಾಹಿತಿ ನೀಡಿದ್ದರು. ಬಳಿಕ ಶವ ಬಿಸಾಡುವುದರ ಬಗ್ಗೆ ಡೀಲ್ ನಡೆದಿದೆ. ನಂತರ ಜೂನ್‌ 9ರಂದು ಬೆಳಗ್ಗೆ ಸುಮನಹಳ್ಳಿ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Dolly Dhananjay: ಐತಿಹಾಸಿಕ ‘ಹಲಗಲಿ’ ಸಿನಿಮಾದಲ್ಲಿ ‘ಡಾಲಿ’ ಧನಂಜಯ ಹೀರೊ!

Dolly Dhananjay: ಕನ್ನಡ ನಾಡಿನ ಸ್ವಾತಂತ್ರ್ಯ ಪೂರ್ವದ ವೀರರ ಕಥೆಯನ್ನು ಒಳಗೊಂಡ ಈ ಚಿತ್ರದಲ್ಲಿ ಡಾಲಿ ಧನಂಜಯ್ ಅವರು ವಾರಿಯರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬ್ರಿಟಿಷರ ವಿರುದ್ಧ ಮೊದಲ ಗೆರಿಲ್ಲಾ ಯುದ್ಧ ಮಾಡಿದ ಕನ್ನಡ ನೆಲದ ಹಲಗಲಿಯ ಊರಿನ ಬೇಡರ ಕುರಿತ ಸಿನಿಮಾ ಇದಾಗಿದೆ. ಈ ವೀರರ ಆಚಾರ- ವಿಚಾರ ಹಾಗೂ ಅವರ ಹೋರಾಟದ ಹೆಜ್ಜೆ ಗುರುತುಗಳನ್ನು ಹಗಲಗಲಿ ಚಿತ್ರದ ಮೂಲಕ ತೆರೆ ಮೇಲೆ ತರಲಾಗುತ್ತಿದೆ. ಇಂಥದ್ದೊಂದು ಬಹು ದೊಡ್ಡ ಬಜೆಟ್ ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕರಾಗಿರುವುದು ಯುವ ಉದ್ಯಮಿ ಬಳ್ಳಾರಿಯ ಕಲ್ಯಾಣ್ ಚಕ್ರವರ್ತಿ ಧೂಳಿಪಾಳ್ಳ. ತಮ್ಮ ದುಹರ ಮೂವೀಸ್ ಬ್ಯಾನರ್ ನಲ್ಲಿ ಚಿತ್ರ ನಿರ್ಮಿಸುತ್ತಿದ್ದಾರೆ.

VISTARANEWS.COM


on

Dolly dhananjay Halagali on set
Koo

ಬೆಂಗಳೂರು: ಬಹುಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ʻಹಲಗಲಿʼ ಚಿತ್ರಕ್ಕೆ ಡಾಲಿ ಧನಂಜಯ್ ನಾಯಕನಾಗಿ ಎಂಟ್ರಿ ಆಗಿದ್ದಾರೆ. ಆ ಮೂಲಕ ಡಾಲಿ ಮತ್ತೊಂದು ಐತಿಹಾಸಿಕ ಚಿತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಸುಕೇಶ್ ಡಿ ಕೆ ನಿರ್ದೇಶನದ ಈ ಚಿತ್ರವು 80 ಕೋಟಿ ವೆಚ್ಚದಲ್ಲಿ ಎರಡು ಭಾಗಗಳಲ್ಲಿ ಮೂಡಿ ಬರುತ್ತಿದೆ. ಕನ್ನಡದ ಜತೆಗೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಬರಲಿರುವ ಈ ಚಿತ್ರಕ್ಕೆ ಮೈಸೂರಿನ ಲಲಿತ್ ಮಹಲ್ ನಲ್ಲಿ ಪೂಜೆ ಮಾಡುವ ಮೂಲಕ ಅದ್ಧೂರಿ ಚಾಲನೆ ನೀಡಲಾಗಿದೆ.

ಕನ್ನಡ ನಾಡಿನ ಸ್ವಾತಂತ್ರ್ಯ ಪೂರ್ವದ ವೀರರ ಕಥೆಯನ್ನು ಒಳಗೊಂಡ ಈ ಚಿತ್ರದಲ್ಲಿ ಡಾಲಿ ಧನಂಜಯ್ ಅವರು ವಾರಿಯರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬ್ರಿಟಿಷರ ವಿರುದ್ಧ ಮೊದಲ ಗೆರಿಲ್ಲಾ ಯುದ್ಧ ಮಾಡಿದ ಕನ್ನಡ ನೆಲದ ಹಲಗಲಿಯ ಊರಿನ ಬೇಡರ ಕುರಿತ ಸಿನಿಮಾ ಇದಾಗಿದೆ. ಈ ವೀರರ ಆಚಾರ- ವಿಚಾರ ಹಾಗೂ ಅವರ ಹೋರಾಟದ ಹೆಜ್ಜೆ ಗುರುತುಗಳನ್ನು ಹಗಲಗಲಿ ಚಿತ್ರದ ಮೂಲಕ ತೆರೆ ಮೇಲೆ ತರಲಾಗುತ್ತಿದೆ. ಇಂಥದ್ದೊಂದು ಬಹು ದೊಡ್ಡ ಬಜೆಟ್ ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕರಾಗಿರುವುದು ಯುವ ಉದ್ಯಮಿ ಬಳ್ಳಾರಿಯ ಕಲ್ಯಾಣ್ ಚಕ್ರವರ್ತಿ ಧೂಳಿಪಾಳ್ಳ. ತಮ್ಮ ದುಹರ ಮೂವೀಸ್ ಬ್ಯಾನರ್ ನಲ್ಲಿ ಚಿತ್ರ ನಿರ್ಮಿಸುತ್ತಿದ್ದಾರೆ. ಇವರು ಈಗಾಗಲೇ ತೆಲಗಿನಲ್ಲಿ ರಚಯತ ಚಿತ್ರವನ್ನು ನಿರ್ಮಿಸಿ, 20ಕ್ಕೂ ಹೆಚ್ಚು ಚಿತ್ರಗಳನ್ನು ಕನ್ನಡ ಹಾಗೂ ತೆಲುಗಿನಲ್ಲಿ ವಿತರಣೆ ಮಾಡಿದ್ದಾರೆ.

ಚಿತ್ರಕ್ಕಾಗಿ ಬಹುದೊಡ್ಡ ತಾಂತ್ರಿಕ ತಂಡ ಕೆಲಸ ಮಾಡುತಿದೆ. ಅತ್ಯುತ್ತಮ ಛಾಯಾಗ್ರಾಹಕ ವಿಭಾಗದಲ್ಲಿ ನಂದಿ ಪ್ರಶಸ್ತಿ ಪುರಸ್ಕೃತ ಸಾಯಿ ಶ್ರೀರಾಮ್ ಕ್ಯಾಮೆರಾ, ವಾಸುಕಿ ವೈಭವ್ ಸಂಗೀತ ಇದೆ. ವಿಶೇಷ ಎಂದರೆ ಕೆಜಿಎಫ್ ಚಿತ್ರಕ್ಕೆ ಸಾಹಸ ಸಂಯೋಜನೆ ಮಾಡಿದ್ದ ವಿಕ್ರಮ್ ಮೋರ್ ಅವರೇ ಹಲಗಲಿ ಚಿತ್ರಕ್ಕೂ ಸಾಹಸ ನಿರ್ದೇಶನ ಮಾಡಲಿದ್ದಾರೆ.
ಅಂದಹಾಗೆ ಈ ಚಿತ್ರಕ್ಕೆ ಈ ಮೊದಲು ಡಾರ್ಲಿಂಗ್ ಕೃಷ್ಣ ಅವರು ಹೀರೋ ಎಂದು ಸುದ್ದಿ ಆಗಿತ್ತು. ಆದರೆ, ಡಾರ್ಲಿಂಗ್ ಕೃಷ್ಣ ಅವರ ಡೇಟ್ಸ್ ಸಮಸ್ಯೆಯಿಂದ ಅವರು ಈ ಚಿತ್ರದಲ್ಲಿ ನಟಿಸಲು ಆಗುತ್ತಿಲ್ಲ. ಅಲ್ಲದೆ ಐತಿಹಾಸಿಕ, ಬಹುಭಾಷೆಯ ಚಿತ್ರಕ್ಕೆ ಡಾಲಿ ಧನಂಜಯ್ ಅವರೇ ಸೂಕ್ತ ಎನಿಸಿ ಈಗ ಡಾರ್ಲಿಂಗ್ ಜಾಗಕ್ಕೆ ಡಾಲಿ ಆಗಮನ ಆಗಿದೆ. ಚಿತ್ರದಲ್ಲಿ ಹೆಸರಾಂತ ಬಹು ಭಾಷೆಯ ಕಲಾವಿದರು ಕಾಣಿಸಿಕೊಳ್ಳುತ್ತಿದ್ದಾರೆ.

ಸಿನಿಮಾ ಬಗ್ಗೆ ಡಾಲಿ ಮಾತನಾಡಿ ʻʻಐತಿಹಾಸಿಕ ಕತೆಗಳು ಅಂದರೆ ನನಗೆ ಇಷ್ಟ. ಹಲಗಲಿ ಕತೆ ಕೇಳಿದಾಗ ತುಂಬಾ ಇಷ್ಟವಾಯಿತು. ನಮ್ಮ ನಾಡಿಗಾಗಿ ಹೋರಾಡಿದವರ ಕತೆಯನ್ನು ಸಿನಿಮಾ ಮಾಡುತ್ತಿದ್ದು, ಆ ಚಿತ್ರದಲ್ಲಿ ನಾನು ಹೀರೋ ಆಗುತ್ತಿರುವುದು ಖುಷಿ ಕೊಟ್ಟಿದೆ. ನಿರ್ದೇಶಕ ಸುಕೇಶ್ ಡಿ ಕೆ ಹಾಗೂ ನಿರ್ಮಾಪಕ ಕಲ್ಯಾಣ್ ಚಕ್ರವರ್ತಿ ಧೂಳಪಾಳ್ಳ ಅವರು ತುಂಬಾ ದೊಡ್ಡ ಕನಸು ಕಟ್ಟಿಕೊಂಡು ಈ ಚಿತ್ರವನ್ನು ಐದು ಭಾಷೆಯಲ್ಲಿ ಮಾಡುತ್ತಿದ್ದಾರೆ. ನಾನು ಈ ಚಿತ್ರಕ್ಕೆ ಹೀರೋ ಆಗುತ್ತಿರುವುದು ಹೆಮ್ಮೆ ಅನಿಸುತ್ತಿದೆʼʼಎಂದರು.

ದೊಡ್ಡ ಮಟ್ಟದಲ್ಲಿ ಮೂಡಿ ಬರುತ್ತಿರುವ ಸಿನಿಮಾ ಹಗಲಗಲಿ. ಈಗಾಗಲೇ ಮುಹೂರ್ತ ಕೂಡ ಮಾಡಿದ್ದೇವೆ. ಐದು ಭಾಷೆಗಳಲ್ಲಿ ಬರುತ್ತಿದೆ. ಪೂರ್ವ ತಯಾರಿಗಳು ಮುಗಿದಿವೆ. ಡಾರ್ಲಿಂಗ್ ಕೃಷ್ಣ ಅವರ ಮೂರು-ನಾಲ್ಕು ಚಿತ್ರಗಳಲ್ಲಿ ಬ್ಯುಸಿ ಆಗಿದ್ದಾರೆ. ಹೀಗಾಗಿ ಅವರಿಗೆ ಕಾಯಲು ಆಗುತ್ತಿಲ್ಲ. ಅಲ್ಲದೆ ನಮ್ಮ ಕತೆಗೆ ಡಾಲಿ ಧನಂಜಯ್ ಅವರು ಸೂಕ್ತ ಎನಿಸಿದ್ದು, ಅವರೇ ಹೀರೋ ಆಗಿ ಮಾಡುತ್ತಿದ್ದಾರೆ. ಸದ್ಯದಲ್ಲೇ ರೆಗ್ಯೂಲರ್ ಶೂಟಿಂಗ್ ಶುರುವಾಗಲಿದೆ ಎಂದರು
ಕಲ್ಯಾಣ್ ಚಕ್ರವರ್ತಿ ಧೂಳಪಾಳ್ಳ.

Continue Reading

ಸ್ಯಾಂಡಲ್ ವುಡ್

Kiccha Sudeep: ಮುಂದಿನ ಸಿನಿಮಾಗಾಗಿ ಭಾರಿ ವರ್ಕೌಟ್‌ ಮಾಡ್ತಾ ಇದ್ದಾರೆ ಕಿಚ್ಚ!

Kiccha Sudeep: ಒಂದು ಪಾತ್ರದಲ್ಲಿ ಭಾರಿ ಕಟ್ಟುಮಸ್ತಾದ ದೇಹವನ್ನು ಹೊಂದಿದ ವ್ಯಕ್ತಿಯಾಗಿ ಕಾಣಿಸಿಕೊಳ್ಳಲಿದ್ದು, ಅದಕ್ಕಾಗಿ ಜಿಮ್​ನಲ್ಲಿ ಬೆವರಿಳಿಸುತ್ತಿದ್ದಾರೆ ಕಿಚ್ಚ. ಮ್ಯಾಕ್ಸ್’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗುವ ಮುನ್ನವೇ ‘ಬಿಲ್ಲಾ ರಂಗ ಭಾಷಾ’ ಸಿನಿಮಾಕ್ಕೆ ತಯಾರಾಗುತ್ತಿದ್ದಾರೆ.

VISTARANEWS.COM


on

Kiccha Sudeep workout For next Movie
Koo

ಬೆಂಗಳೂರು: ‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ (Kiccha Sudeep) ಒಪ್ಪಿಕೊಂಡಿರುವ ಸಿನಿಮಾ ʻಮ್ಯಾಕ್ಸ್ʼ (MAX). ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ಈಗಾಗಲೇ ಸಿನಿಮಾ ಚಿತ್ರೀಕರಣ ಮುಗಿಸಿದ್ದು, ಮುಂದಿನ ಸಿನಿಮಾಗಾಗಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಬಿಲ್ಲಾ ರಂಗ ಭಾಷಾ’ಗಾಗಿ ರೆಡಿಯಾಗುತ್ತಿದ್ದಾರೆ. ಈ ಸಿನಿಮಾದಲ್ಲಿ ಮೂರು ಪಾತ್ರಗಳಲ್ಲಿ ಸುದೀಪ್ ನಟಿಸಲಿದ್ದಾರೆ ಎನ್ನಲಾಗುತ್ತಿದ್ದು, ಒಂದೊಂದು ಪಾತ್ರಕ್ಕೆ ಒಂದೊಂದು ರೀತಿ ಮ್ಯಾನರಿಸಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಕಿಚ್ಚ ಅವರು ವರ್ಕೌಟ್‌ ಮಾಡಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ.

ಒಂದು ಪಾತ್ರದಲ್ಲಿ ಭಾರಿ ಕಟ್ಟುಮಸ್ತಾದ ದೇಹವನ್ನು ಹೊಂದಿದ ವ್ಯಕ್ತಿಯಾಗಿ ಕಾಣಿಸಿಕೊಳ್ಳಲಿದ್ದು, ಅದಕ್ಕಾಗಿ ಜಿಮ್​ನಲ್ಲಿ ಬೆವರಿಳಿಸುತ್ತಿದ್ದಾರೆ ಕಿಚ್ಚ. ಮ್ಯಾಕ್ಸ್’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗುವ ಮುನ್ನವೇ ‘ಬಿಲ್ಲಾ ರಂಗ ಭಾಷಾ’ ಸಿನಿಮಾಕ್ಕೆ ತಯಾರಾಗುತ್ತಿದ್ದಾರೆ. ಈ ಸಿನಿಮಾವನ್ನು ಅನುಪ್ ಭಂಡಾರಿ ನಿರ್ದೇಶನ ಮಾಡಲಿದ್ದಾರೆ. ‘ದ್ರೋಣಾಚಾರ್ಯ’ ಸಿನಿಮಾವನ್ನು ಅನುಪ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿತ್ತು, ಆದರೆ ಅದರ ಬದಲಿಗೆ ‘ಬಿಲ್ಲಾ ರಂಗ ಭಾಷಾ’ ಸಿನಿಮಾ ಪ್ರಾರಂಭ ಮಾಡಿದ್ದಾರೆ.

ಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷನ್‌ಗಳೂ ಇದ್ದಾರೆ. ಹಾಗೆ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್ ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.

ಇದನ್ನೂ ಓದಿ: Kiccha Sudeep: ಜಗ್ಗೇಶ್‌ಗೆ ಹೇಗೆ ಮಾತನಾಡಬೇಕು, ಹೇಗೆ ಎಸ್ಕೇಪ್ ಆಗಬೇಕು ಅನ್ನೋದು ಗೊತ್ತು ಎಂದ ಕಿಚ್ಚ!

ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

Continue Reading

ಸ್ಯಾಂಡಲ್ ವುಡ್

Kiran Raj: ಜನುಮದಿನ ʻಫ್ಯಾಮಿಲಿ ಡೇʼ ಎಂದು ಆಚರಿಸಿ, ಅಭಿಮಾನಿಗಳಿಂದ ಸೈ ಎನಿಸಿಕೊಂಡ ʻಕನ್ನಡತಿʼ ಸೀರಿಯಲ್‌ ನಟ!

Kiran Raj: ಸದ್ಯಕ್ಕೆ ಕಿರಣ್‌ ರಾಜ್‌ ಅಭಿನಯದ ‘ರಾನಿ’ ಬಿಡುಗಡೆಗೊಳ್ಳಲಿದ್ದು, ಬಹು ನಿರೀಕ್ಷಿತ ಸಿನಿಮಾ ಇದಾಗಿದೆ. ಇದೇ ಆಗಸ್ಟ್‌ನಲ್ಲಿ ‘ರಾನಿ’ ಸಿನಿಮಾ ಬಿಡುಗಡೆಯಾಗಲಿದ್ದು, ಇದರಲ್ಲಿ ಪ್ರಮುಖ ಪಾತ್ರ ಒಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

VISTARANEWS.COM


on

Kiran Raj celebrate Family day on his birthday
Koo

ಬೆಂಗಳೂರು: ‘ಕನ್ನಡತಿ’ ಧಾರಾವಾಹಿ ನಂತರ ಹಲವು ಸಿನಿಮಾಗಳಲ್ಲಿ ಆಫರ್ ಗಿಟ್ಟಿಸಿಕೊಂಡಿರುವ ನಟ ಕಿರಣ್ ರಾಜ್ (Kiran Raj) ಅವರು ಸದ್ಯಕ್ಕಂತೂ ಹಿರಿತೆರೆಯಲ್ಲಿ ಬಹಳ ಬ್ಯುಸಿಯಾಗಿದ್ದಾರೆ. ಜೂನ್‌5ಕ್ಕೆ ಕಿರಣ್‌ ರಾಜ್‌ ಅವರ ಜನುಮದಿನವಾಗಿತ್ತು. 31ನೇ ವಸಂತಕ್ಕೆ ನಟ ಕಾಲಿಟ್ಟಿದ್ದರು. ಈ ದಿನ ವಿಶೇಷವಾಗಿ ಆಚರಿಸೋಣ ಎಂದು ತಮ್ಮ ಫ್ಯಾನ್ಸ್‌ ಬಳಿ ಮನವಿ ಮಾಡಿಕೊಂಡಿದ್ದರು. ಎಲ್ಲರೂ ಈ ದಿನವನ್ನು ʻಫ್ಯಾಮಿಲಿ ಡೇʼ ಅಂತ ಪರಿಗಣಿಸಿ. ನಿಮ್ಮ ನಿಮ್ಮ ಕುಟುಂಬದವರೊಂದಿಗೆ ಒಳ್ಳೆಯ ಸಮಯವನ್ನು ಕಳೆಯಿರಿ. ನೀವು ನಿಮ್ಮ ಕುಟುಂಬಸ್ಥರೊಂದಿಗೆ ಕಳೆದ ಸಂತೋಷ ಸಂತೋಷದ ಕ್ಷಣಗಳ ಫೋಟೋವನ್ನು ಕ್ಲಿಕ್ಕಿಸಿ ನನ್ನನ್ನು ಟ್ಯಾಗ್ ಮಾಡಿ ಬಹಳ ಸಂತೋಷ ಪಡುತ್ತೇನೆ” ಎಂದು ಬರೆದುಕೊಂಡಿದ್ದರು.

ಕಿರಣ್‌ ರಾಜ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದು ಹೀಗೆ, ʻʻಜುಲೈ 5 – ಕುಟುಂಬ ದಿನ. CDP ಗಾಗಿ ಧನ್ಯವಾದಗಳು ನೀವು ನನ್ನ ಹುಟ್ಟುಹಬ್ಬವನ್ನು ತುಂಬಾ ಉತ್ಸಾಹ ಮತ್ತು ಪ್ರೀತಿಯಿಂದ ಆಚರಿಸುತ್ತಿದ್ದೀರಿ ಎಂದು ನನಗೆ ತಿಳಿದಿದೆ. ಆದರೆ ನನಗಾಗಿ ಯಾವುದೇ ಉಡುಗೊರೆಗಳನ್ನು ತರಬೇಡಿ ಎಂದು ನಾನು ಎಲ್ಲರಿಗೂ ವಿನಂತಿಸುತ್ತೇನೆ. ಬದಲಿಗೆ ಜುಲೈ 5 ಅನ್ನು ಫ್ಯಾಮಿಲಿ ಡೇ ಎಂದು ಆಚರಿಸೋಣ.. ನಿಮ್ಮ ಕುಟುಂಬವನ್ನು ಹೊರಗೆ ಕರೆದುಕೊಂಡು ಹೋಗಿ ಮತ್ತು ಅವರ ಜತೆ ಒಳ್ಳೆಯ ಸಮಯ ಕಳೆಯಿರಿ. ಕುಟುಂಬದ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್ ಮಾಡಿ ಮತ್ತು ನನ್ನನ್ನು ಟ್ಯಾಗ್ ಮಾಡಿ. ಉಡುಗೊರೆ ನೀಡಿದಷ್ಟೇ ಸಂತೋಷಪಡುತ್ತೇನೆʼʼಎಂದು ಬರೆದುಕೊಂಡಿದ್ದರು. ಈ ನಡೆಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: Kung Fu Panda 4 OTT: ಪುಟಾಣಿಗಳ ಫೇವರಿಟ್‌ ʻಕುಂಗ್ ಫು ಪಾಂಡಾ 4 ಸಿನಿಮಾʼ ಒಟಿಟಿಗೆ; ಕನ್ನಡ ಭಾಷೆಯಲ್ಲೂ ಲಭ್ಯ!

ಅಂದಹಾಗೆ ನಟ ಕಿರಣ್ ರಾಜ್ ಅವರ ಈ ವಿಭಿನ್ನ ಕೋರಿಕೆಗೆ ಮನಸೋತ ನೆಟ್ಟಿಗರು ಅವರ ಈ ವಿಶೇಷವಾದ ಕಾನ್ಸೆಪ್ಟ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ಕಿರಣ್‌ ರಾಜ್‌ ಅಭಿನಯದ ‘ರಾನಿ’ ಬಿಡುಗಡೆಗೊಳ್ಳಲಿದ್ದು, ಬಹು ನಿರೀಕ್ಷಿತ ಸಿನಿಮಾ ಇದಾಗಿದೆ. ಇದೇ ಆಗಸ್ಟ್‌ನಲ್ಲಿ ‘ರಾನಿ’ ಸಿನಿಮಾ ಬಿಡುಗಡೆಯಾಗಲಿದ್ದು, ಇದರಲ್ಲಿ ಪ್ರಮುಖ ಪಾತ್ರ ಒಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಕಿನ್ನರಿ’ ಸೇರಿದಂತೆ ಕೆಲವು ಧಾರಾವಾಹಿಗಳಲ್ಲಿ ಕಾಣಿಸಿಕೊಂಡರೂ ‘ಕನ್ನಡತಿ’ ಇವರಿಗೆ ಕೊಟ್ಟ ಜನಪ್ರಿಯತೆ ಬಹು ದೊಡ್ಡದು.

Continue Reading

ಸ್ಯಾಂಡಲ್ ವುಡ್

Actor Darshan: ರೇಣುಕಾ ಸ್ವಾಮಿ ಸತ್ತೋಗ್ಬಿಟ್ಟ ಎಂಬ ಸುದ್ದಿ ಕೇಳಿದ ಕೂಡಲೇ ತಲೆ ಮೇಲೆ ಕೈ ಇಟ್ಟುಕೊಂಡಿದ್ರಂತೆ ದರ್ಶನ್‌!

Actor Darshan: ಈಗಾಗಲೇ ದರ್ಶನ್‌ ನ್ಯಾಯಾಂಗ ಬಂಧನಲ್ಲಿದ್ದಾರೆ.  ನಟ ದರ್ಶನ್‌ ಸೇರಿ ಹಲವು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಣೆ ಮಾಡಲಾಗಿದೆ. ಇದೀಗ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ಹೊಸ ಮಾಹಿತಿ ಸಿಕ್ಕಿದೆ.

VISTARANEWS.COM


on

Actor Darshan soon as he heard the news that Renuka Swami had passed away, Darshan shocked
Koo

ಬೆಂಗಳೂರು: ರೇಣುಕಾ ಸ್ವಾಮಿ (Actor Darshan) ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆ ರಹಸ್ಯದ ಒಂದೊಂದು ವಿಚಾರ ಬಗೆದಷ್ಟು ಬಯಲಾಗುತ್ತಿದೆ. ಈಗಾಗಲೇ ದರ್ಶನ್‌ ನ್ಯಾಯಾಂಗ ಬಂಧನಲ್ಲಿದ್ದಾರೆ.  ನಟ ದರ್ಶನ್‌ ಸೇರಿ ಹಲವು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಣೆ ಮಾಡಲಾಗಿದೆ. ಇದೀಗ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ಹೊಸ ಮಾಹಿತಿ ಸಿಕ್ಕಿದೆ.

ರೇಣುಕಾ ಸ್ವಾಮಿ ಹತ್ಯೆಯಾದ ದಿನ ಶೆಡ್‌ಗೆ ಬಂದಿದ್ದ ದರ್ಶನ್ ಬಳಿಕ ಸೀದಾ ಆರ್ ಆರ್ ನಗರ ಮನೆಗೆ ಹೋಗಿದ್ದರು. ವಿನಯ್ ಮತ್ತು ಟೀಂ ಪಾರ್ಟಿಗೆ ಎಂದು ಸ್ಟೋನಿಬ್ರೂಕ್‌ಗೆ ಹೋಗಿದ್ದರು. ಆ ಬಳಿಕ ಪಟ್ಟಣಗೆರೆ ಶೆಡ್ ನಿಂದ ಮತ್ತೊಮ್ಮೆ ದರ್ಶನ್‌ಗೆ ಫೋನ್‌ ಬಂದಿದೆ. ʻನೀವು ಹಲ್ಲೆ ಮಾಡಿದ್ದ ವ್ಯಕ್ತಿ ಸತ್ತೋಗ್ಬಿಟ್ಟಿದ್ದಾನೆ ಬೇಗ ಬನ್ನಿʼ ಎಂದು ದರ್ಶನ್‌ ಟೀಂ ಕರೆ ಮಾಡಿದ್ದಾರೆ. ಬಳಿಕ ಪಾರ್ಟಿಯಿಂದ ನೇರವಾಗಿ ವಿನಯ್ ತಂಡ ಶೆಡ್‌ಗ ಬಂದಿದೆ. ರೇಣುಕಾಸ್ವಾಮಿ ಮೃತಪಟ್ಟಿದ್ದು ನೋಡಿ ಒಂದು ಕ್ಷಣ ಶಾಕ್‌ ಆಗಿದ್ದಾರೆ. ಬಳಿಕ ಆರೋಪಿ ಪವನ್‌ ಎಂಬಾತ ದರ್ಶನ್‌ಗೆ ಫೋನ್‌ ಮಾಡುವಂತೆ ಹೇಳಿದ್ದಾನೆ. ʻಫೋನ್‌ ಏನು ಬೇಡʼ ಎಂದು ನೇರವಾಗಿ ಮಧ್ಯಾರಾತ್ರಿ ಏಕಾಏಕಿ ದರ್ಶನ್ ಮನೆಗೆ ವಿನಯ್‌ ಟೀಂ ಹೋಗಿದೆ. ದರ್ಶನ್‌ಗೆ ಈ ವಿಚಾರವನ್ನು ಹೇಳುತ್ತಿದ್ದಂತೆ ಒಂದು ಕ್ಷಣ ಗಾಬರಿಯಾಗಿದ್ದಾರೆ. ಶಾಕ್ ಆಗಿ ತಲೆ ಮೇಲೆ ಕೈ ಇಟ್ಟುಕೊಂಡು ಗ್ಯಾಂಗ್‌ ಮೇಲೆ ಕೂಗಾಡಿದ್ದಾರೆ. ಆರೋಪಿಗಳು, ತಮ್ಮ ಬಾಸ್‌ ರೊಚ್ಚಿಗೆದ್ದಂತೆ ʻಏನ್ ಆಗಲ್ಲ ಬಾಸ್‌, ನಾವ್ ನೋಡ್ಕೋತೀವಿʼ ಅಂದಿದ್ರಂತೆ. ಬಳಿಕ ಶೆಡ್‌ ಬಳಿ ಹೋಗದೇ ದರ್ಶನ್‌ ಮನೆಯಲ್ಲಿಯೇ ಉಳಿದಿದ್ದಾರೆ.

ವಿನಯ್ ,ಪ್ರದೂಶ್ ಸೇರಿ ಉಳಿದ ಆರೋಪಿಗಳು ಶೆಡ್‌ಗೆ ಶವ ಲೇವಾರಿ ಪ್ಲಾನ್ ಮಾಡಿದ್ದಾರೆ. ಆ ಸಮಯದಲ್ಲಿ ವಾಟ್ಸ್ ಅಪ್ ಕರೆಗಳ ಮೂಲಕ ಮೃತದೇಹ ವಿಲೇವಾರಿ ಹಾಗೂ ಶರಣಾಗತಿ ಹಾಗೂ ಹಣಕಾಸಿನ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಬೆಳಗ್ಗೆ ಪತ್ನಿ ಮನೆಯಲ್ಲಿ ಹೋಮ ಪೂಜೆ ಮುಗಿಸಿ ದರ್ಶನ್ ಮೈಸೂರಿಗೆ ಹೋಗಿದ್ರು. ಜತೆಗ ಡ್ರೈವರ್ ಮತ್ತು ನಾಗರಾಜ್ ಕೂಡಾ ಹೋಗಿದ್ದ. ಸಿನಿಮಾ ಶೂಟಿಂಗ್ ಅಂತ ಒಬ್ಬರೇ ಹೋಟೆಲ್‌ನಲ್ಲಿ ಉಳಿದಕೊಂಡು ನಾಗರಾಜ್ ಮೂಲಕ ದರ್ಶನ್ ಮಾಹಿತಿ ಪಡೆಯುತ್ತಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ.

ಇದನ್ನೂ ಓದಿ: Actor Darshan:ದರ್ಶನ್‌ ಹೊರಗೆ ಯಾವಾಗ ಬರ್ತಾರೆ? ವಿದ್ಯಾ ಶಂಕರಾನಂದ ಸರಸ್ವತಿ ಭವಿಷ್ಯ ಏನು?

ದರ್ಶನ್ ಬಳಸುತ್ತಿದ್ದ ಸಿಮ್ ಸೀಕ್ರೆಟ್‌ ರಿವೀಲ್

ಪೊಲೀಸ್‌ ತನಿಖೆ ವೇಳೆ ಆರೋಪಿಗಳು ಬೇರೊಬ್ಬರ ಸಿಮ್ ಕಾರ್ಡ್ ಬಳಕೆ ಮಾಡುತ್ತಿರುವುದು ಪತ್ತೆಯಾಗಿದೆ. ಮಾಹಿತಿ ಸಂಗ್ರಹಿಸಿ ಪರಿಶೀಲನೆ ವೇಳೆ ಸಿಮ್ ಕಾರ್ಡ್ ರಹಸ್ಯ ಬಯಲಾಗಿದೆ. ಹೇಮಂತ್ ಹೆಸರಿನಲ್ಲಿರುವ ಸಿಮ್‌ವನ್ನು ದರ್ಶನ್‌ ಬಳಸುತ್ತಿದ್ದರೆ, ಪವಿತ್ರಗೌಡ ಅವರು ಮನೋಜ್ ಹೆಸರಿನಲ್ಲಿದ್ದ ಸಿಮ್ ಬಳಸುತ್ತಿದ್ದರು. ಆರೋಪಿ ನಂದೀಶ್ ಅವರು ಹೇಮಂತ್ ಹೆಸರಿನಲ್ಲಿ, ಆರೋಪಿ ಪ್ರದ್ಯೂಷ್ ಖಾಸಗಿ ಕಂಪನಿ ಸೀನಿಯರ್ ಮ್ಯಾನೇಜರ್ ಹೆಸರಿನಲ್ಲಿ, ಆರೋಪಿ ಕಾರ್ತಿಕ್ ಅವರು ವೇಲು ಎಂಬಾತನ ಹೆಸರಲ್ಲಿ, ಕೇಶವಮೂರ್ತಿ ಅರು ಪ್ರಜ್ಞಾ ಎಂ ಹೆಸರಲ್ಲಿ, ನಿಖಿಲ್ ನಾಯಕ್ ಅವರು ಗೀತಾ ಹೆಸರಲ್ಲಿ ಸಿಮ್‌ ಬಳಕೆ ಮಾಡುತ್ತಿರುವುದಾಗಿ ತನಿಖೆ ವೇಳೆ ತಿಳಿದು ಬಂದಿದೆ.

Continue Reading
Advertisement
Anant Ambani-Radhika Merchant wedding
ಪ್ರಮುಖ ಸುದ್ದಿ6 mins ago

Anant Ambani-Radhika Merchant wedding : ಅನಂತ್- ರಾಧಿಕಾ ಸಂಗೀತ್ ಕಾರ್ಯಕ್ರಮದಲ್ಲಿ ವಿಶ್ವಕಪ್ ವಿಜೇತ ತಂಡದ ಸದಸ್ಯರು ಭಾಗಿ

Elephant Arjuna
ಕರ್ನಾಟಕ18 mins ago

Elephant Arjuna: ದಸರಾ ಆನೆ ಅರ್ಜುನನ ಸ್ಮಾರಕಕ್ಕೆ ಶಂಕುಸ್ಥಾಪನೆ; 50 ಲಕ್ಷ ವೆಚ್ಚದಲ್ಲಿ ನಿರ್ಮಾಣ

Hathras Stampede
ದೇಶ48 mins ago

Hathras Stampede: 121 ಜನರ ಸಾವಿಗೆ ಕಾರಣನಾದ ಭೋಲೆ ಬಾಬಾ ಆಸ್ತಿ ಧ್ವಂಸಕ್ಕೆ ಮುಂದಾದ ಯೋಗಿ!

karnataka weather Forecast
ಮಳೆ1 hour ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Ambani Family Fashion
ಫ್ಯಾಷನ್2 hours ago

Ambani Family Fashion: ಅಂಬಾನಿ ಮಹಿಳೆಯರ ದುಬಾರಿ ಉಡುಗೆಗಳು; ಇವರ ಮದುವೆ ಡ್ರೆಸ್‌‌ಗಳು ಹೇಗಿವೆ?

Team India :
ಪ್ರಮುಖ ಸುದ್ದಿ2 hours ago

Team India : ಎರಡನೇ ಟಿ20 ವಿಶ್ವ ಕಪ್​ ಗೆದ್ದ ಬಳಿಕವೂ ಭಾರತ ತಂಡದ ಜೆರ್ಸಿಯಲ್ಲಿ ಒಂದೇ ಸ್ಟಾರ್​ ಯಾಕೆ? ಇಲ್ಲಿದೆ ವಿವರಣೆ

BJP Karnataka
ಕರ್ನಾಟಕ2 hours ago

BJP Karnataka: ವಿಧಾನಸಭೆ, ವಿಧಾನ ಪರಿಷತ್ ಉಪಚುನಾವಣೆ; 4 ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ

Narendra Modi
ಪ್ರಮುಖ ಸುದ್ದಿ2 hours ago

Narendra Modi: ಬ್ರಿಟನ್‌ ನೂತನ ಪ್ರಧಾನಿ ಕೀರ್‌ ಸ್ಟಾರ್ಮರ್‌ಗೆ ಮೋದಿ ಕರೆ; ಭಾರತಕ್ಕೆ ಆಗಮಿಸುವಂತೆ ಮನವಿ!

Nafees Iqbal
ಪ್ರಮುಖ ಸುದ್ದಿ2 hours ago

Nafees Iqbal : ಬಾಂಗ್ಲಾದೇಶದ ಮಾಜಿ ಕ್ರಿಕೆಟಿಗನಿಗೆ ಮೆದುಳಿನ ರಕ್ತಸ್ರಾವ; ಪರಿಸ್ಥಿತಿ ಗಂಭೀರ

World Chocolate Day
ಲೈಫ್‌ಸ್ಟೈಲ್2 hours ago

World Chocolate Day: ಬಾಯಿ ಸಿಹಿ ಮಾಡಿಕೊಳ್ಳುವುದಕ್ಕೆ ಮತ್ತೊಂದು ದಿನ! ಇಂದು ಚಾಕಲೇಟ್ ಮರೆಯದೇ ತಿನ್ನಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 hour ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ4 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ5 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು7 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ9 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ13 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ1 day ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ1 day ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ1 day ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ1 day ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

ಟ್ರೆಂಡಿಂಗ್‌