NEET UG 2024: ನೀಟ್ ಯುಜಿ ವಿವಾದದ ಬಗ್ಗೆ ಸಿಬಿಐ ತನಿಖೆಗೆ ಮನವಿ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್ - Vistara News

ಶಿಕ್ಷಣ

NEET UG 2024: ನೀಟ್ ಯುಜಿ ವಿವಾದದ ಬಗ್ಗೆ ಸಿಬಿಐ ತನಿಖೆಗೆ ಮನವಿ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್

NEET UG 2024: ಈ ಬಾರಿಯ ಪದವಿಪೂರ್ವ ವೈದ್ಯಕೀಯ ಕೋರ್ಸ್ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆಯ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್‌ ಮತ್ತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಕೇಂದ್ರಕ್ಕೆ ನೋಟಿಸ್‌ ಜಾರಿ ಮಾಡಿದೆ. ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷೆಯ ಬಗ್ಗೆ ಕೇಳಿ ಬಂದ ಇತರ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಕೋರಿ ಸಲ್ಲಿಸಲಾದ ವಿವಿಧ ಮನವಿಗಳ ಬಗ್ಗೆ ಪ್ರಸ್ತಾವಿಸಿ, ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

VISTARANEWS.COM


on

Kolkata Doctor murder case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಈ ಬಾರಿಯ ಪದವಿಪೂರ್ವ ವೈದ್ಯಕೀಯ ಕೋರ್ಸ್ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆಯ (NEET UG 2024) ಕುರಿತಾದ ವಿವಾದ ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಈ ಮಧ್ಯೆ ಸುಪ್ರೀಂ ಕೋರ್ಟ್‌ (Supreme Court) ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮತ್ತು ಕೇಂದ್ರಕ್ಕೆ ನೋಟಿಸ್‌ ಜಾರಿ ಮಾಡಿದೆ. ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷೆಯ ಬಗ್ಗೆ ಕೇಳಿ ಬಂದ ಇತರ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಕೋರಿ ಸಲ್ಲಿಸಲಾದ ವಿವಿಧ ಮನವಿಗಳ ಬಗ್ಗೆ ಪ್ರಸ್ತಾವಿಸಿ, ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. ಬಾಕಿ ಇರುವ ಅರ್ಜಿಗಳೊಂದಿಗೆ ವಿಚಾರಣೆಯನ್ನು ಜುಲೈ 8ಕ್ಕೆ ಮುಂದೂಡಿದೆ.

ಜತೆಗೆ ನೀಟ್-ಯುಜಿ ವಿವಾದದ ಬಗ್ಗೆ ವಿವಿಧ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಸಲ್ಲಿಸಿದ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ದೂರುದಾರರಿಗೂ ನೋಟಿಸ್ ನೀಡಿ ಜುಲೈ 8ರಂದು ವಿಚಾರಣೆಗೆ ಬರುವಂತೆ ನಿರ್ದೇಶನ ನೀಡಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇತರ ಅಕ್ರಮಗಳ ಆರೋಪದ ಮೇಲೆ ನೀಟ್-ಯುಜಿ 2024 ಅನ್ನು ರದ್ದುಗೊಳಿಸುವಂತೆ ಕೋರಿ ಹಲವು ಅರ್ಜಿಗಳು ವಿವಿಧ ಹೈಕೋರ್ಟ್‌ಗಳಲ್ಲಿ ಬಾಕಿ ಉಳಿದಿವೆ ಎಂಬ ಎನ್‌ಟಿಎ ವಕೀಲರ ಹೇಳಿಕೆಯನ್ನು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠ ಗಮನಿಸಿದ್ದು, ಇದರ ವಿಚಾರಣೆಯನ್ನು ಜುಲೈ 8ರಂದು ಕೈಗೆತ್ತಿಕೊಳ್ಳಲಾಗುವುದು ಎಂದು ಕೋರ್ಟ್‌ ತಿಳಿಸಿದೆ.

ನೀಟ್​ ಯುಜಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್​ (ಕೃಪಾಂಕ) ಪಡೆದಿರುವ 1,563 ಅಭ್ಯರ್ಥಿಗಳಿಗೆ ಜೂನ್​ 23ರಂದು ಮರು ಪರೀಕ್ಷೆ ನಡೆಸುವುದಾಗಿ ಕೇಂದ್ರ ಸರ್ಕಾರ ಮತ್ತು ಎನ್​ಟಿಎ ಗುರುವಾರ ಸುಪ್ರೀಂ ಕೋರ್ಟ್​ಗೆ ತಿಳಿಸಿದೆ. ನೀಟ್-ಯುಜಿ ಪರೀಕ್ಷೆಗೆ ಹಾಜರಾಗುವಾಗ ಅನುಭವಿಸಿದ ಸಮಯದ ನಷ್ಟವನ್ನು ಸರಿದೂಗಿಸಲು ‘ಗ್ರೇಸ್ ಅಂಕ’ ಪಡೆದ 1,563 ಕ್ಕೂ ಹೆಚ್ಚು ಅಭ್ಯರ್ಥಿಗಳ ಫಲಿತಾಂಶಗಳನ್ನು ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಸರ್ಕಾರ ಹೇಳಿದ್ದು, ಈ ವಿವರಗಳನ್ನು ಅರ್ಜಿ ಸಲ್ಲಿಕೆಯಾಗಿರುವ ಹೈಕೋರ್ಟ್‌ಗೆ ತಿಳಿಸುವುದಾಗಿ ಎನ್‌ಟಿಎ ಪರ ವಕೀಲರು ಸುಪ್ರೀಂ ಕೋರ್ಟ್‌ ಗಮನಕ್ಕೆ ತಂದಿದ್ದಾರೆ.

ಮರು ಪರೀಕ್ಷೆಗಳನ್ನು ಜೂನ್ 23ರಂದು ನಡೆಸಲಾಗುವುದು ಮತ್ತು ಜೂನ್ 30ರೊಳಗೆ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಎನ್​​ಟಿಎ ಗುರುವಾರ ತಿಳಿಸಿದೆ. ಅಲ್ಲದೆ ಮರುಪರೀಕ್ಷೆ ಬರೆಯಲು ಬಯಸದವರಿಗೆ ಗ್ರೇಸ್‌ ಮಾರ್ಕ್‌ ರಹಿತ ಅಂಕ ಹೊಂದುವ ಅವಕಾಶ ನೀಡಲಾಗಿದೆ ಎಂದೂ ಹೇಳಿದೆ.

2024ರ ಮೇ 5ರಂದು 14 ಅಂತಾರಾಷ್ಟ್ರೀಯ ಕೇಂದ್ರ ಸೇರಿದಂತೆ 571 ನಗರಗಳ 4,750 ಕಡೆಗಳಲ್ಲಿ 24 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದರು. ಜೂನ್ 4ರಂದು ಫಲಿತಾಂಶವನ್ನು ಪ್ರಕಟಿಸಲಾಯಿತು. ಬಳಿಕ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳು ದೊರೆತಿರುವುದು ಭಾರೀ ಸುದ್ದಿಯಾಗಿ ವಿವಾದ ಭುಗಿಲೆದ್ದಿತ್ತು. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಪರಿಪೂರ್ಣ ಅಂಕಗಳನ್ನು ಸಾಧಿಸಲು ಪ್ರಶ್ನೆ ಪತ್ರಿಕೆ ಸೋರಿಕೆಯೇ ಕಾರಣ ಎಂಬ ಆರೋಪಗಳೂ ಕೇಳಿ ಬಂದವು. ಈ ಹಿನ್ನೆಲೆಯಲ್ಲಿ ಹಲವರು ಕೋರ್ಟ್‌ ಮೆಟ್ಟಿಲೇರಿದ್ದರು. ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ಕೋರ್ಸ್‌ಗಳ ಪ್ರವೇಶಕ್ಕಾಗಿ ಜುಲೈ 6ರಂದು ಕೌನ್ಸೆಲಿಂಗ್ ಪ್ರಾರಂಭವಾಗಲಿದೆ ಎಂದು ಈಗಾಗಲೇ ಕೇಂದ್ರ ಸರ್ಕಾರ ಪ್ರಕಟಿಸಿದೆ.

ಇದನ್ನೂ ಓದಿ: NEET UG Result 2024: ಏನಿದು ನೀಟ್‌ ವಿವಾದ? ಗ್ರೇಸ್‌ ಅಂಕ ಕೊಟ್ಟಿದ್ಯಾಕೆ? ಮರು ಪರೀಕ್ಷೆ ಮಾಡೋದ್ಯಾಕೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು ಟೆಕ್ ಸಮ್ಮಿಟ್

Students Scholarship : ಯೆಲ್ಲೋ ಬೋರ್ಡ್‌ ವಾಹನ ಚಾಲಕರ ಮಕ್ಕಳಿಗೆ ಗುಡ್‌ ನ್ಯೂಸ್‌; ವಿದ್ಯಾನಿಧಿಯಡಿ ಸ್ಕಾಲರ್‌ಶಿಪ್‌ ಪಡೆಯಲು ಹೀಗೆ ಮಾಡಿ

Students Scholarship : ಯೆಲ್ಲೋ ಬೋರ್ಡ್‌ ವಾಹನ ಚಾಲಕರ ಮಕ್ಕಳಿಗೆ ಗುಡ್‌ ನ್ಯೂಸ್‌ ನೀಡಿದೆ. ವಿದ್ಯಾನಿಧಿಯಡಿ ಸ್ಕಾಲರ್‌ಶಿಪ್‌ ನೀಡಲು ಸರ್ಕಾರ ಆದೇಶ ಹೊರಡಿಸಿದೆ.

VISTARANEWS.COM


on

By

Good news for the children of yellow board drivers Do this to get a scholarship under Vidyanidhi
Koo

ಬೆಂಗಳೂರು: ಯೆಲ್ಲೋ ಬೋರ್ಡ್ ಇರುವ ಕ್ಯಾಬ್ ಹಾಗೂ ಆಟೋ ಚಾಲಕರ ಮಕ್ಕಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ರಾಜ್ಯ ಸರ್ಕಾರದಿಂದ ವಿದ್ಯಾನಿಧಿಯಡಿ ಚಾಲಕರ ಮಕ್ಕಳಿಗೆ ಸ್ಕಾಲರ್‌ಶಿಪ್‌ (Scholarship) ನೀಡಲು ಆದೇಶ ಹೊರಡಿಸಿದೆ. ಚಾಲಕರ ಹಲವು ವರ್ಷಗಳ ಬೇಡಿಕೆಯನ್ನು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಈಡೇರಿಸಿದ್ದಾರೆ. ಮೆಟ್ರಿಕ್ ನಂತರದ ಪೋಸ್ಟ್ ಮೆಟ್ರಿಕ್ ಕೋರ್ಸ್‌ಗಳಿಗೆ ಶಿಷ್ಯವೇತನ ನೀಡಲು ತೀರ್ಮಾನಿಸಲಾಗಿದೆ.

ವಿದ್ಯಾರ್ಥಿಗಳಿಗೆ ಎಷ್ಟು ಸ್ಕಾಲರ್‌ಶಿಪ್‌ ನೀಡಲಾಗುವುದು?

1) ಪಿಯುಸಿ/ಐಟಿಐ/ಡಿಪ್ಲೋಮಾ
ಹುಡುಗರಿಗೆ 2,500 ರೂ., ಹುಡುಗಿಯರು/ ಅನ್ಯ ಲಿಂಗದವರು 3,000 ರೂ.

2) ಎಲ್ಲಾ ಬಿಎ/ಬಿಎಸ್ಸಿ/ಬಿಕಾಂ ಪದವಿ ಇತ್ಯಾದಿ (ಎಂಬಿಬಿಎಸ್/ಬಿ.ಇ/ಬಿ.ಟೆಕ್ ಮತ್ತು ವೃತ್ತಿಪರ ಕೋರ್ಸ್‌ಗಳನ್ನು ಹೊರತುಪಡಿಸಿ)
ಹುಡುಗರಿಗೆ 5,000 ರೂ., ಹುಡುಗಿಯರಿಗೆ 5.500 ರೂ.

3) ಎಲ್.ಎಲ್.ಬಿ/ಪ್ಯಾರಾ ಮೆಡಿಕಲ್/ಬಿ ಫಾರ್ಮ್/ ನರ್ಸಿಂಗ್, ಇತ್ಯಾದಿ. ವೃತ್ತಿಪರ ಕೋರ್ಸ್‌ಗಳು.
ಹುಡುಗರಿಗೆ 7,500 ರೂ, ಹುಡುಗಿಯರಿಗೆ 8,000 ರೂ.

4) ಎಂ.ಬಿ.ಬಿ.ಎಸ್/ ಬಿ.ಇ/ ಬಿ.ಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್‌ಗಳು
ಹುಡುಗರಿಗೆ 10,000 ರೂ., ಹುಡುಗಿಯರಿಗೆ 11,000 ರೂ.

ಅರ್ಜಿ ಸಲ್ಲಿಸುವುದು ಹೇಗೆ?

ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ಅರ್ಹ ವಿಧ್ಯಾರ್ಥಿಗಳ ಆಧಾರ್ ಜೋಡಿತ ಬ್ಯಾಂಕ್ ಅಕೌಂಟ್‌ಗೆ ( DBT ) ವರ್ಗಾವಣೆ ಮೂಲಕ ಹಣ ಪಾವತಿಸಲಾಗುತ್ತದೆ. ( ಗ್ರಾಮ-ಓನ್, ಕರ್ನಾಟಕ- ಓನ್ ಹಾಗೂ ಬೆಂಗಳೂರು- ಓನ್ ) ಮೂಲಕವೂ ಅರ್ಜಿ ಸಲ್ಲಿಸಬಹುದು. ಪೋಷಕರ ಚಾಲನಾ ಅನುಜ್ಞಾಪತ್ರ ( ಡಿಎಲ್ ) ಸಂಖ್ಯೆ ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್ ಸಂಖ್ಯೆ ನೀಡಿ ಅರ್ಜಿ ಸಲ್ಲಿಸಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

KEA : ಎಂಸಿಸಿ ಸೀಟು ಉಳಿಸಿಕೊಂಡು, ಕೆಇಎ ಸೀಟು ರದ್ದತಿಗೆ ಅವಕಾಶ; ಸೀಟು ರದ್ದು ಪಡಿಸಿಕೊಳ್ಳಲು ನಾಳೆವರೆಗೂ ಗಡುವು

KEA update: ಎಂಸಿಸಿ ಸೀಟು ಉಳಿಸಿಕೊಂಡು, ಕೆಇಎ ಸೀಟು ರದ್ದತಿಗೆ ಅವಕಾಶ ಕಲ್ಪಿಸಲಾಗಿದೆ. ಸೆ.20ರಂದು ಬೆಳಿಗ್ಗೆ 11ರೊಳಗೆ ಸೀಟು ರದ್ದು ಪಡಿಸಿಕೊಳ್ಳಲು ಗಡುವು ನೀಡಲಾಗಿದೆ.

VISTARANEWS.COM


on

By

MCC Seat Retention, Opportunity to Cancel KEA Seat Deadline to Cancel Seats by 11 AM on September 20
Koo

ಬೆಂಗಳೂರು: ಮೆಡಿಕಲ್ ಕೌನ್ಸೆಲಿಂಗ್ ಕಮಿಟಿ (ಎಂಸಿಸಿ) ಎರಡನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶವನ್ನು ಗುರುವಾರ ಪ್ರಕಟಿಸಿದ್ದು, ಅಲ್ಲಿ ಸೀಟು ಸಿಕ್ಕಿ, ಅದನ್ನೇ ಉಳಿಸಿಕೊಳ್ಳಲು ಇಚ್ಛಿಸುವವರು ಶುಕ್ರವಾರ (ಸೆ.20) ಬೆಳಗ್ಗೆ 11ಗಂಟೆಯೊಳಗೆ ಕೆಇಎ‌ ಮೂಲಕ ಹಂಚಿಕೆ ಯಾಗಿರುವ ವೈದ್ಯಕೀಯ ಸೀಟನ್ನು ರದ್ದುಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಅಂತಹವರು, ನಾಳೆ ಶುಕ್ರವಾರ ಕೆಇಎ ಕಚೇರಿಗೆ ಖುದ್ದಾಗಿ ಬಂದು ರದ್ದುಪಡಿಸಿಕೊಳ್ಳಬೇಕು. ₹10,000 ದಂಡ ವಿಧಿಸಿ, ಉಳಿದ ಮೊತ್ತವನ್ನು ಹಿಂದಿರುಗಿಸಲಾಗುವುದು. ಸೀಟು ರದ್ದುಪಡಿಸಿಕೊಳ್ಳುವ ಸಮಯದಲ್ಲಿ ಅಖಿಲ ಭಾರತ ಕೌನ್ಸಿಲಿಂಗ್‌ನಲ್ಲಿ ಹಂಚಿಕೆಯಾದ ಸೀಟುಗಳ ವಿವರವನ್ನೂ ಸಲ್ಲಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದಾರೆ.

ಈ ಪ್ರಕ್ರಿಯೆ ನಂತರ ಕೆಇಎ ಯಲ್ಲಿ ರದ್ದಾದ ಎಲ್ಲಾ ಸೀಟುಗಳನ್ನು ಪರಿಗಣಿಸಿ ಮತ್ತು ಅರ್ಹ ಅಭ್ಯರ್ಥಿಗಳು ಎರಡನೇ ಸುತ್ತಿಗೆ ನಮೂದಿಸಿದ ಅದೇ ಆದ್ಯತಾ ಕ್ರಮದಲ್ಲಿನ ಆಪ್ಷನ್ಸ್ ಗಳೊಂದಿಗೆ ಎರಡನೇ ಸುತ್ತಿನ ಸೀಟು ಹಂಚಿಕೆಯನ್ನು ‘ರೀ ರನ್’ ಮಾಡಿ, ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಈ ಹಂತದಲ್ಲಿ ಆಪ್ಷನ್ಸ್ ಗಳ ಆದ್ಯತೆಗಳನ್ನು ಬದಲಾಯಿಸಲು ಅವಕಾಶವಿರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇತರೆ ಅಭ್ಯರ್ಥಿಗಳಿಗೆ ದಂಡವಿಲ್ಲದೆ ಯಾವುದೇ ಸೀಟನ್ನು ರದ್ದುಪಡಿಸುವುದಿಲ್ಲ. ಮುಂದಿನ ಪ್ರಕ್ರಿಯೆ ಮತ್ತು ಮಾಹಿತಿಯನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗುತ್ತದೆ ಎಂದು ಪ್ರಸನ್ನ ವಿವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೊಡಗು

KM Cariappa College : ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ 5ನೇ ಬಾರಿ ಸ್ಥಾನ ಪಡೆದ ಡಾ.ಜೆ.ಜಿ.ಮಂಜುನಾಥ

KM Cariappa College : ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ವಿಶ್ವದ ಅತ್ಯುನ್ನತ ಪ್ರಭಾವಿ ವಿಜ್ಞಾನಿಗಳ ಪಟ್ಟಿಯಲ್ಲಿ ಡಾ.ಜೆ.ಜಿ.ಮಂಜುನಾಥ ಸತತ 5ನೇ ಬಾರಿಗೆ ಸ್ಥಾನ ಪಡೆದಿದ್ದಾರೆ.

VISTARANEWS.COM


on

By

Dr JG Manjunatha has been ranked among the world's top scientists for the fifth time in a row
Koo

ಕೊಡಗು: ಯು.ಎಸ್.ಎ.ಯ ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಡಾ.ಜೆ.ಜಿ.ಮಂಜುನಾಥ (Dr JG Manjunatha) ಅವರು ಸತತ 5ನೇ ಬಾರಿ ಸ್ಥಾನ ಪಡೆದಿದ್ದಾರೆ.

ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಜೆ.ಜಿ.ಮಂಜುನಾಥ ಅವರು “Analytical Chemistry and Energy” ವಿಷಯಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿರುವ ಸಂಶೋಧನಾ ಲೇಖನಗಳ ಆಧಾರದ ಮೇಲೆ ಇವರು 2024ರ ಸಾಲಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ 8257ನೇ ಸ್ಥಾನವನ್ನು ಮತ್ತು ವಿಶ್ವದ ವೃತ್ತಿಜೀವಮಾನ ಸಾಧಕರ ಪಟ್ಟಿಯಲ್ಲಿ 65119ನೇ ಸ್ಥಾನವನ್ನು ಪಡೆದಿದ್ದಾರೆ (ಸಂಯೋಜಿತ ಅಂಕಗಳ ಆಧಾರದ ಮೇಲೆ ಶ್ರೇಣಿ).

ಇವರು 194 ಅಂತರಾಷ್ಟ್ರೀಯ ಲೇಖನಗಳನ್ನು ಅತ್ಯಂತ ಪ್ರತಿಷ್ಟಿತ ಜರ್ನಲ್‌ಗಳಲ್ಲಿ ಪ್ರಕಟಿಸಿದ್ದು, 25 ಪುಸ್ತಕಗಳನ್ನು ಹೊರ ತಂದಿದ್ದಾರೆ. 27 ಜರ್ನಲ್‌ಗಳಲ್ಲಿ ಎಡಿಟೋರಿಯಲ್ ಬೋರ್ಡ್ಮೆಂಬರ್ ಆಗಿಯೂ ಹಾಗೂ Sensing technology (Taylor and francis) ಜರ್ನಲ್‌ನ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿರುತ್ತಾರೆ.

Dr JG Manjunatha has been ranked among the world's top scientists for the fifth time in a row
Dr JG Manjunatha has been ranked among the world's top scientists for the fifth time in a row

ಇವರ ಈ ಸಾಧನೆಯೂ ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಕಾಲೇಜ್ ಗೆ ಹೆಮ್ಮೆ ತಂದಿದೆ ಎಂದು ಮಂಗಳೂರು ವಿಶ್ವವಿದ್ಯಾಲಯ ಮತ್ತು ಕೊಡಗು ವಿಶ್ವವಿದ್ಯಾಲಯದ ಕುಲಪತಿಯವರು, ಕುಲಸಚಿವರು, ಕಾಲೇಜಿನ ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

PSI Exam : ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರೀಕ್ಷೆಗೆ ಡೇಟ್‌ ಫಿಕ್ಸ್‌; ಅ.3ಕ್ಕೆ ಪರೀಕ್ಷೆ ನಡೆಸಲು ಕೆಇಎ ತೀರ್ಮಾನ

PSI Exam : ಅ.3ಕ್ಕೆ ಪಿಎಸ್‌ಐ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಲಿದೆ. ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಸೆ.29ರಿಂದ ಅವಕಾಶ ಕಲ್ಪಿಸಲಾಗಿದೆ.

VISTARANEWS.COM


on

By

PSI Exam 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ಪರೀಕ್ಷೆಯನ್ನು (PSI Exam) ಅಕ್ಟೋಬರ್ 3ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ. ಈ ಹಿಂದೆ ಸೆ.22ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆ ದಿನಾಂಕದಂದೇ ಯುಪಿಎಸ್ಸಿ ಮುಖ್ಯ ಪರೀಕ್ಷೆ ಇದ್ದ ಕಾರಣ ಈ ಪರೀಕ್ಷೆಯನ್ನು ಮುಂದೂಡಲಾಗಿತ್ತು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

Police sub-inspector exam to be held on October 3
Police sub-inspector exam to be held on October 3

ಸರ್ಕಾರ ಇತ್ತೀಚೆಗೆ ‌ಬಿ ಮತ್ತು‌ ಸಿ ವರ್ಗದ ಹುದ್ದೆಗಳ ನೇಮಕ ಸಂದರ್ಭದಲ್ಲಿ ಅರ್ಜಿ ಸಲ್ಲಿಸಲು ಗರಿಷ್ಠ ಮೂರು ವರ್ಷ ವಯೋಮಿತಿ ಸಡಿಲ ಮಾಡಿರುವ ಕಾರಣ ಗ್ರಾಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆ.19ರಿಂದ ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಪ್ರಸನ್ನ ವಿವರಿಸಿದ್ದಾರೆ.

ವಯೋಮಿತಿ ಸಡಿಲಿಕೆಯ ಲಾಭ ಪಡೆಯುವವರು ಸೇರಿ ಇತರ ಅರ್ಹರು ಸೆ.28ರವರೆಗೆ ಅರ್ಜಿ ಸಲ್ಲಿಸಬಹುದು. ಶುಲ್ಕ ಪಾವತಿಗೆ ಸೆ.29 ಕೊನೆ ದಿನ. ಈ ಹಿಂದೆ ಅರ್ಜಿ ಸಲ್ಲಿಸಿದವರು ಪುನಃ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ ಎಂದು ಪ್ರಸನ್ನ ಸ್ಪಷ್ಟಪಡಿಸಿದ್ದಾರೆ. ಆದರೆ ಈ ಹುದ್ದೆಗಳಿಗೆ ಈ ಹಿಂದೆ ನಿಗದಿಪಡಿಸಿದ್ದ ದಿನಾಂಕಗಳಂದೇ ಪರೀಕ್ಷೆ ನಡೆಯಲಿದೆ. ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಅ.26 ರಂದು ನಡೆಸಲಾಗುತ್ತದೆ. ಅದರ ನಂತರ ಎಲ್ಲರಿಗೂ ಅ.27ರಂದು ಪತ್ರಿಕೆ- 1 ಮತ್ತು 2ರ ಪರೀಕ್ಷೆ ನಡೆಯಲಿದೆ ಎಂದರು.

ಇನ್ನು ಕೆ-ಸೆಟ್ ಮತ್ತು ರಾಯಚೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನವೆಂಬರ್ 24ರಂದು ಪ್ರತ್ಯೇಕ ಪರೀಕ್ಷೆಗಳನ್ನು ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Murder case
ಬೆಂಗಳೂರು2 ಗಂಟೆಗಳು ago

Bengaluru Murder : ಮಹಿಳೆಯನ್ನು 50 ತುಂಡಾಗಿ ಕತ್ತರಿಸಿದವನು ಒಡಿಶಾದ ಸ್ಮಶಾನದಲ್ಲಿ ನೇಣಿಗೆ ಶರಣು!

assault case
ಹಾವೇರಿ3 ಗಂಟೆಗಳು ago

Assault Case : ಮನೆಗೆ ಬಾರದ ಪತ್ನಿ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

Murder case
ದಾವಣಗೆರೆ3 ಗಂಟೆಗಳು ago

Murder Case : ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು ಮಳ್ಳಿ! ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿ

new serial
ಬೆಂಗಳೂರು6 ಗಂಟೆಗಳು ago

New Serial : ಡಿಫರೆಂಟ್ ಕಥೆಯೊಂದಿಗೆ ಕಿರುತೆರೆಯಲ್ಲಿ ಶುರುವಾಗ್ತಿದೆ ʻನಿನ್ನ ಜೊತೆ ನನ್ನ ಕಥೆʼ

World Retinal Day 2024
ಪ್ರಮುಖ ಸುದ್ದಿ6 ಗಂಟೆಗಳು ago

World Retinal Day 2024 : ಶಾಕಿಂಗ್‌ ನ್ಯೂಸ್‌; ಜಾಗತಿಕವಾಗಿ 1 ಬಿಲಿಯನ್ ಜನರು ತಮ್ಮ ದೃಷ್ಟಿಯನ್ನು ಕಳೆದುಕೊಳ್ಳುತ್ತಿದ್ದರಂತೆ!

MUda Scam
ರಾಜಕೀಯ7 ಗಂಟೆಗಳು ago

Muda Scam : ಸಿದ್ದರಾಮಯ್ಯ ರಾಜೀನಾಮೆಗೆ ಹೆಚ್ಚಾದ ಒತ್ತಡ; ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್‌ ಪ್ರತಿಭಟನೆ

Cancer Treatment AI
ಆರೋಗ್ಯ7 ಗಂಟೆಗಳು ago

Cancer Treatment : ವೈದ್ಯಕೀಯ ಲೋಕದಲ್ಲಿ ಎಐ; ಕ್ಯಾನ್ಸರ್‌ಕಾರಕ ಗಡ್ಡೆ ಪತ್ತೆಗೂ ಬಂದಿದೆ ಎಐ ಚಾಲಿತ ಸೈಬರ್‌ನೈಫ್‌-ಎಸ್7 ಸಿಸ್ಟಮ್‌!

Dina Bhavishya
ಭವಿಷ್ಯ7 ಗಂಟೆಗಳು ago

Dina Bhavishya :ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Self Harming
ಕೋಲಾರ1 ದಿನ ago

Self Harming : ಹೆಂಡ್ತಿ ಮನೆಯವರ ಕಿರುಕುಳ; ವಿಡಿಯೊ ಮಾಡಿ ಮಾರ್ಕಂಡೇಶ್ವರ ಬೆಟ್ಟದಲ್ಲಿ ನೇಣಿಗೆ ಶರಣು

karnataka weather Forecast
ಮಳೆ2 ದಿನಗಳು ago

Karnataka Weather : ರಾಜ್ಯಾದ್ಯಂತ ವ್ಯಾಪಕ ಮಳೆ ; ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್‌

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌