Koratagere News: ಹಸಿರೇ ಉಸಿರು, ಹಸಿರಿದ್ದೆಡೆ ಮಾನವನ ಸರ್ವಾಂಗಿಣ ಪ್ರಗತಿ: ಸಚಿವ ಜಿ. ಪರಮೇಶ್ವರ್‌ - Vistara News

ತುಮಕೂರು

Koratagere News: ಹಸಿರೇ ಉಸಿರು, ಹಸಿರಿದ್ದೆಡೆ ಮಾನವನ ಸರ್ವಾಂಗಿಣ ಪ್ರಗತಿ: ಸಚಿವ ಜಿ. ಪರಮೇಶ್ವರ್‌

Koratagere News: ಕೊರಟಗೆರೆ ತಾಲೂಕಿನ ಹುಲಿಕುಂಟೆ ಗ್ರಾಮ ಪಂಚಾಯತಿಯ ಗೌರಗನಹಳ್ಳಿ ಗ್ರಾಮದ ಶ್ರೀರಂಗನಾಥ ಸ್ವಾಮಿ ಬೆಟ್ಟದ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ್ , ಸಸಿಗಳಿಗೆ ನೀರೆರೆಯುವುದರ ಮೂಲಕ ‘ಹಸಿರು ಗ್ರಾಮ’ ಕಾರ್ಯಕ್ರಮ ಉದ್ಘಾಟಿಸಿದರು.

VISTARANEWS.COM


on

Minister dr G Parameshwar inaugurated the hasiru grama programme in Koratagere
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊರಟಗೆರೆ: ಕಾಡುಗಳ ನಾಶದಿಂದ ಜಾಗತಿಕ ತಾಪಮಾನ ಹೆಚ್ಚಾಗಿದೆ. ಇದರಿಂದ ಅನೇಕ ಪ್ರಾಣಿ ಹಾಗೂ ಸಸ್ಯ ಸಂಕುಲಗಳು ಕಣ್ಮರೆಯಾಗುತ್ತಿವೆ. ಹಸಿರಿದ್ದೆಡೆ ಮಾನವನ ಸರ್ವಾಂಗೀಣ ಪ್ರಗತಿ ಕಾಣಬಹುದಾಗಿದ್ದು, ಈ ನಿಟ್ಟಿನಲ್ಲಿ ಸಸಿಗಳನ್ನು ನೆಟ್ಟು ಪೋಷಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ್ (Koratagere News) ತಿಳಿಸಿದರು.

ತಾಲೂಕಿನ ಹುಲಿಕುಂಟೆ ಗ್ರಾಮ ಪಂಚಾಯಿತಿಯ ಗೌರಗನಹಳ್ಳಿ ಗ್ರಾಮದ ಶ್ರೀರಂಗನಾಥ ಸ್ವಾಮಿ ಬೆಟ್ಟದ ಆವರಣದಲ್ಲಿ ಸಸಿಗಳಿಗೆ ನೀರೆರೆಯುವುದರ ಮೂಲಕ ‘ಹಸಿರು ಗ್ರಾಮ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯಾವ ದೇಶದಲ್ಲಿ ಅರಣ್ಯದ ವಿಸ್ತೀರ್ಣ ಶೇ. 50ಕ್ಕಿಂತ ಹೆಚ್ಚಿರುತ್ತದೋ ಅಂತಹ ದೇಶಗಳಲ್ಲಿ ಮಳೆ-ಬೆಳೆ ಚೆನ್ನಾಗಿ ಆಗಿ ಸಮೃದ್ಧಿಯನ್ನು ಕಾಣಬಹುದಾಗಿದೆ. ದಟ್ಟವಾದ ಅರಣ್ಯವನ್ನು ಹೊಂದಿದಂತಹ ದಕ್ಷಿಣ ಅಮೇರಿಕಾದಂತಹ ಪ್ರದೇಶಗಳಲ್ಲಿ ಕಾಡು ನಾಶದಿಂದ ವಾತಾವರಣದಲ್ಲಿ ವೈಪರೀತ್ಯ ಕಂಡು ಬರುತ್ತಿದೆ, ಭಾರತ ದೇಶವು ಶೇ.21 ರಷ್ಟು ಅರಣ್ಯ ಪ್ರದೇಶ ಹೊಂದಿದ್ದು, ರಾಜ್ಯದಲ್ಲಿ ಅರಣ್ಯ ಪ್ರದೇಶದ ವ್ಯಾಪ್ತಿಯು ಶೇ 19.20 ಇದ್ದು, ರಾಷ್ಟ್ರೀಯ ಸರಾಸರಿಗಿಂತ ರಾಜ್ಯದ ಅರಣ್ಯ ವಿಸ್ತೀರ್ಣ ಕಡಿಮೆ ಇರುತ್ತದೆ.

ಇದನ್ನೂ ಓದಿ: T20 World Cup 2024 Super 8: ಸೂಪರ್​-8 ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಆಫ್ಘಾನ್​ ಮೊದಲ ಎದುರಾಳಿ

ಆದರಿಂದ ರಾಜ್ಯದಲ್ಲಿ ಹಸರೀಕರಣ ಹೆಚ್ಚಿಸುವ ಮೂಲ ಉದ್ದೇಶದಿಂದ ‘ಹಸಿರು ಗ್ರಾಮ ‘ ಕಾರ್ಯಕ್ರಮ ರೂಪಿಸಲಾಗಿದೆ, ಇಂದು ಶ್ರೀರಂಗನಾಥ ಸ್ವಾಮಿ ಗುಟ್ಟೆ ಆವರಣದಲ್ಲಿ 600 ಸಸಿಗಳನ್ನು ನೆಡಲಾಗಿದ್ದು. ಜಿಲ್ಲೆಯಾದ್ಯಂತ ಈ ದಿನ ಏಕಕಾಲದಲ್ಲಿ 50 ಸಾವಿರ ಸಸಿಗಳನ್ನು ನೆಡಲಾಗುತ್ತಿದೆ ಎಂದು ತಿಳಿಸಿದ ಸಚಿವರು, ಸಸಿಗಳನ್ನು ನೆಡುವುದಲ್ಲದೆ, ಪ್ರತಿ ಮೂರು ತಿಂಗಳಿಗೊಮ್ಮೆ ಸಸಿಗಳ ಪ್ರಗತಿಯ ಆಡಿಟ್ ವರದಿಯನ್ನು ಪಡೆಯುವಂತಹ ಪರಿಪೂರ್ಣ ಯೋಜನೆ ರೂಪಿಸಿರುವ ಸಿಇಒ ಜಿ. ಪ್ರಭು ಕಾರ್ಯ ಶ್ಲಾಘನೀಯ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಕಳೆದ ವರ್ಷ ನಡೆದ ವಿಶ್ವ ಪರಿಸರ ದಿನ ಆಚರಣೆ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ನೀಡಿದ ಸೂಚನೆಯನ್ವಯ ಜಿಲ್ಲೆಯಾದ್ಯಂತ 3.58 ಲಕ್ಷ ಸಸಿಗಳನ್ನು ನೆಡುವ ಗುರಿ ಹೊಂದಿ, ಜಿಲ್ಲೆಯ ಪ್ರಮುಖ 17 ಸಸ್ಯ ಕ್ಷೇತ್ರಗಳಲ್ಲಿ ಒಂದು ವರ್ಷದಿಂದ ಬೆಳೆಸಿದ 47 ಜಾತಿಯ ವಿವಿಧ ಪ್ರಬೇಧಗಳನ್ನು ಬೆಳೆಸಿ, ಹಸಿರು ಗ್ರಾಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ಪ್ರತಿ ಗ್ರಾಮಪಂಚಾಯತಿ ವ್ಯಾಪ್ತಿಯ ಶಾಲಾ ಹಾಗೂ ಸರ್ಕಾರಿ ಕಚೇರಿಗಳ ಆವರಣ, ರಸ್ತೆ ಬದಿ ಮೊದಲಾದ ಪ್ರದೇಶಗಳಲ್ಲಿ ಬೆಳೆಸಲು ಪ್ರತಿ ಗ್ರಾಮಪಂಚಾಯತಿಗೆ 1500 ಸಸಿಗಳನ್ನು ನೀಡಲಾಗಿದೆ ಎಂದರು.

ಸಾಮಾಜಿಕ ಅರಣ್ಯ ಉಪವಿಭಾಗದ ಉಪ ಅರಣ್ಯಸಂರಕ್ಷಣಾಧಿಕಾರಿ ದೇವರಾಜು ಮಾತನಾಡಿ, ಗಿಡಗಳನ್ನು ಉಳಿಸಿ-ಬೆಳೆಸಿ ಎಂಬ ಸಂಕಲ್ಪ ಮಾಡೋಣ ಎಂದು ಕರೆ ನೀಡಿದರು.

ಸಚಿವರಿಂದ ಮುಂಗಾರು ಬಿತ್ತನೆಗೆ ಚಾಲನೆ

ಕೊರಟಗೆರೆ ತಾಲೂಕಿನ ಹಂಚಿಹಳ್ಳಿ ಗ್ರಾಮ ಪಂಚಾಯಿತಿಯ ಗೊಲ್ಲದೇವನಹಳ್ಳಿಯ ರೈತ ಚೆನ್ನಪ್ಪ ಅವರ ಜಮೀನಿನಲ್ಲಿ ಸಚಿವರು ಟ್ರಾಕ್ಟರ್ ಚಾಲನೆ ಮಾಡಿ, ತೊಗರಿ ಬಿಆರ್‌ಜಿ-05 ಸೊರಗು ನಿರೋಧಕ ಬೀಜವನ್ನು ಬಿತ್ತನೆ ಮಾಡುವ ಮೂಲಕ ಮುಂಗಾರು ಬಿತ್ತನೆಗೆ ಚಾಲನೆ ನೀಡಿದರು.

ಇದನ್ನೂ ಓದಿ: Vijayanagara News: ಪೌರ ಕಾರ್ಮಿಕರ ಉತ್ತಮ ಆರೋಗ್ಯಕ್ಕಾಗಿ ಆರೋಗ್ಯ ಶಿಬಿರ ನಡೆಸಲು ಸೂಚನೆ

ಕೊರಟಗೆರೆ ತಾಲೂಕಿನಲ್ಲಿ 32 ಸಾವಿರ ಹೆಕ್ಟೇರ್ ಪ್ರದೇಶ ಬಿತ್ತನೆ ಗುರಿ ಹೊಂದಲಾಗಿದ್ದು, ಇಲ್ಲಿಯವರೆಗೆ 340 ಹೆ.ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆಯಾಗಿರುತ್ತದೆ. ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮದಡಿ ಇಲ್ಲಿಯವರೆಗೂ 891.80 ಕ್ವಿಂಟಲ್ ಬಿತ್ತನೆ ಬೀಜ ವಿತರಣೆ ಮಾಡಲಾಗಿದ್ದು, 2624 ಕ್ವಿಂ. ಬಿತ್ತನೆ ಬೀಜ ವಿತರಣೆ ಗುರಿ ಹೊಂದಲಾಗಿದೆ. 2023-24ನೇ ಸಾಲಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ತಾಲೂಕಿನ 6572 ರೈತರು ನೋಂದಾಯಿಸಿದ್ದು, 1164.30 ಲಕ್ಷಗಳ ವಿಮಾ ಪರಿಹಾರ ವಿತರಿಸಲಾಗಿದೆ ಎಂದು ತಿಳಿಸಿದರು.

ಹಸಿರು ಗ್ರಾಮ

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕನಿಷ್ಟ 1 ಸಾವಿರ ಸಸಿಗಳನ್ನು ಹಸಿರು ಗ್ರಾಮ ಅಭಿಯಾನದ ಮೂಲಕ ನೆಟ್ಟು ಮುಂದಿನ 3 ವರ್ಷಗಳ ಕಾಲ ಸಂರಕ್ಷಿಸಿ ಶೇ.100 ರಷ್ಟು ಗಿಡಗಳನ್ನು ಉಳಿಸಿ ಬೆಳೆಸಿ ಆ ಮೂಲಕ ಸಾರ್ವಜನಿಕರಿಗೆ ಮತ್ತು ಮಕ್ಕಳಿಗೆ ಅರಿವು ಮೂಡಿಸಿ ಹಸಿರೀಕರಣ ಕಾರ್ಯಕ್ರಮಗಳಿಗೆ ಸ್ವಯಂಪ್ರೇರಿತರಾಗಿ ಎಲ್ಲರೂ ಪಾಲ್ಗೊಳ್ಳುವಂತೆ ಪ್ರೇರೇಪಿಸುವುದೇ ಹಸಿರು ಗ್ರಾಮ ಅಭಿಯಾನದ ಮೂಲ ಉದ್ದೇಶವಾಗಿದೆ.

ಇದನ್ನೂ ಓದಿ: Gold Rate Today: ಮತ್ತೆ ಏರಿಕೆಯ ಹಾದಿಯಲ್ಲಿ ಚಿನ್ನದ ಬೆಲೆ; ಆಭರಣ ಖರೀದಿಯ ಮುನ್ನ ಇಂದಿನ ದರ ಗಮನಿಸಿ

ಈ ಸಂದರ್ಭದಲ್ಲಿ ಮುಖಂಡರುಗಳಾದ ಚಂದ್ರಶೇಖರ್‌ಗೌಡ, ಅರಕೆರೆ ಶಂಕರ್, ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷೆ ಜಯಮ್ಮ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ತಹಸೀಲ್ದಾರ್ ಮಂಜುನಾಥ್, ತಾಲೂಕು ಕಾರ್ಯನಿರ್ವಹಣಾಧಿಕಾರಿ ಅಪೂರ್ವ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Attica Babu: ಕದ್ದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ

Attica Babu: ಕಳ್ಳತನ ಮಾಡಿದ ಚಿನ್ನದ ಆಭರಣಗಳನ್ನು ಖರೀದಿ ಮಾಡಿದ ಕುರಿತು ಅಟ್ಟಿಕಾ ಆಬು ವಿರುದ್ಧ ತುರುವೇಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ, ತುರುವೇಕೆರೆ ಸಿಪಿಐ ಲೋಹಿತ್‌ ಬಿ.ಎನ್‌ ಹಾಗೂ ತಂಡದಿಂದ ಬಂಧಿಸಲಾಗಿದೆ.

VISTARANEWS.COM


on

Attica Babu
Koo

ತುಮಕೂರು: ಖ್ಯಾತ ಚಿನ್ನದ ವ್ಯಾಪಾರಿ, ಅಟ್ಟಿಕಾ ಗೋಲ್ಡ್‌ ಕಂಪನಿ (Attica Gold Company) ಮಾಲೀಕ ಅಟ್ಟಿಕಾ ಬಾಬು (Attica Babu) ಅಲಿಯಾಸ್‌ ಬೊಮ್ಮನಹಳ್ಳಿ ಬಾಬು ಅವರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ಪೊಲೀಸರು (Turuvekere Police) ಬುಧವಾರ (ಜೂನ್‌ 26) ಬಂಧಿಸಿದ್ದಾರೆ. ಕದ್ದ ಚಿನ್ನದ ಆಭರಣಗಳನ್ನು ಖರೀದಿ ಮಾಡುತ್ತಿದ್ದ ಆರೋಪದಲ್ಲಿ ಬೆಂಗಳೂರಿನ (Bengaluru) ಫ್ರೇಜರ್‌ ಟೌನ್‌ ನಿವಾಸದ ಬಳಿ ಅಟ್ಟಿಕಾ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕಳ್ಳತನ ಮಾಡಿದ ಚಿನ್ನದ ಆಭರಣಗಳನ್ನು ಖರೀದಿ ಮಾಡಿದ ಕುರಿತು ತುರುವೇಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ, ತುರುವೇಕೆರೆ ಸಿಪಿಐ ಲೋಹಿತ್‌ ಬಿ.ಎನ್‌ ಹಾಗೂ ತಂಡದಿಂದ ಬಂಧಿಸಲಾಗಿದೆ. ಹಗಲು ಕಳ್ಳತನದ ಆರೋಪಿ ಉದಯ್‌ ಅಲಿಯಾಸ್‌ ಅಶೋಕ್‌, ತನ್ನ ಹೆಂಡತಿ ಶಾರದಾ ಮೂಲಕ ಅಟ್ಟಿಕಾ ಬಾಬುಗೆ ಚಿನ್ನ ಮಾರಾಟ ಮಾಡಿಸುತ್ತಿದ್ದ ತುರುವೇಕೆರೆ ವ್ಯಾಪ್ತಿಯಲ್ಲಿ ಕದ್ದ ಚಿನ್ನವನ್ನು ಅಟ್ಟಿಕಾ ಬಾಬು ಖರೀದಿ ಮಾಡುತ್ತಿರುವ ಕುರಿತು ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಬಂಧಿಸಿದ್ದಾರೆ.

ಶಾರದಾ ಮೂಲಕ ಜಿಗಣಿಯಲ್ಲಿರುವ ಅಟ್ಟಿಕಾ ಗೋಲ್ಡ್‌ ಕಂಪನಿಯಲ್ಲಿ ಉದಯ್‌ ಅಲಿಯಾಸ್‌ ಅಶೋಕ್‌ ಮಾರಾಟ ಮಾಡಿಸಿದ್ದ. ಪ್ರಕರಣ ದಾಖಲಾದ ಬಳಿಕ ಪೊಲೀಸರು ತನಿಖೆ ಮಾಡಿದ್ದರು. ಕಳ್ಳತನ ಮಾಡಿದ ಚಿನ್ನಾಭರಣವನ್ನು ಖರೀದಿಸಿದ್ದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೊಲೀಸರ ತಂಡವು ಬೆಂಗಳೂರಿಗೆ ಆಗಮಿಸಿ, ಅಟ್ಟಿಕಾ ಬಾಬು ಅವರನ್ನು ಬಂಧಿಸಿದ್ದಾರೆ. ಪೊಲೀಸರು ಅಟ್ಟಿಕಾ ಬಾಬು ಅವರನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

2022ರಲ್ಲೂ ಬಂಧಿಸಲಾಗಿತ್ತು

ಎರಡನೇ ಮದುವೆಯಾಗಿ, ಮೋಸ ಮಾಡಿದ್ದಾರೆ ಎಂಬುದಾಗಿ ಮಹಿಳೆಯೊಬ್ಬರು ದೂರು ನೀಡಿದ ಕಾರಣ 2022ರಲ್ಲೂ ಅಟ್ಟಿಕಾ ಬಾಬು ಅವರನ್ನು ಆಂಧ್ರಪ್ರದೇಶದ ಪೊಲೀಸರು ಬಂಧಿಸಿದ್ದರು. ಶೇಖ್‌ ಮಿನಾಜ್‌ ಎಂಬ ಮಹಿಳೆಯು ಹಲ್ಲೆ ಹಾಗೂ ಮೋಸ ಮಾಡಿದ ಆರೋಪ ಮಾಡಿದ ಹಿನ್ನೆಲೆಯಲ್ಲಿ ಬಂಧಿಸಿದ್ದರು. ಮಹಿಳೆ ದೂರಿನ ಹಿನ್ನೆಲೆಯಲ್ಲಿ ಅಟ್ಟಿಕಾ ಬಾಬು ವಿರುದ್ಧ ಹಲ್ಲೆ, ವರದಕ್ಷಿಣೆ ಕಿರುಕುಳದ ಪ್ರಕರಣ ಕೂಡ ದಾಖಲಿಸಲಾಗಿತ್ತು. ನಂತರ ಜಾಮೀನಿನ ಮೇಲೆ ಅಟ್ಟಿಕಾ ಬಾಬು ಬಿಡುಗಡೆಯಾಗಿದ್ದರು.

ಇದನ್ನೂ ಓದಿ: Actor Darshan: ಪ್ರಥಮ್‌, ಉಮಾಪತಿಗೆ ಬೆದರಿಕೆ ಹಾಕಿದ ಡಿ ಬಾಸ್‌ ಫ್ಯಾನ್‌ ಬಂಧನ

Continue Reading

ಕರ್ನಾಟಕ

Renuka Swamy Murder: ರೇಣುಕಾಸ್ವಾಮಿ ಕೊಲೆ ಕೇಸ್‌; ಬೆಂಗಳೂರಿನಿಂದ ತುಮಕೂರು ಜೈಲು ಸೇರಿದ ನಾಲ್ವರು ಆರೋಪಿಗಳು

Renuka Swamy Murder: ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನೆಲೆ‌ಯಲ್ಲಿ ರೇಣುಕಾಸ್ವಾಮಿ ಕೊಲೆ ಕೇಸ್‌ನ ನಾಲ್ವರು ಆರೋಪಿಗಳನ್ನು ಬೆಂಗಳೂರಿನಿಂದ ತುಮಕೂರು ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

VISTARANEWS.COM


on

Renuka Swamy Murder
Koo

ತುಮಕೂರು‌: ನಟ ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ (Renuka Swamy Murder) ನಾಲ್ವರು ಆರೋಪಿಗಳನ್ನು ತುಮಕೂರಿನ ಜೈಲಿಗೆ ಪೊಲೀಸರು ಕರೆತಂದಿದ್ದಾರೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನೆಲೆ‌ಯಲ್ಲಿ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್‌ ಮಾಡಲಾಗಿದೆ.‌

ಆರೋಪಿಗಳಾದ ರವಿಶಂಕರ್, ಕಾರ್ತಿಕ್, ಕೇಶವ್, ನಿಖಿಲ್ ತುಮಕೂರು ಜೈಲಿಗೆ ಸ್ಥಳಾಂತರಗೊಂಡಿದ್ದಾರೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ನಾಲ್ವರು ಆರೋಪಿಗಳನ್ನು ತುಮಕೂರಿನ ಊರುಕೆರೆ ಬಳಿಯ ರಂಗಾಪುರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ. ಕಾರಾಗೃಹ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಭದ್ರತಾ ದೃಷ್ಟಿಯಿಂದ ಈ ನಾಲ್ವರು ಆರೋಪಿಗಳನ್ನು ಪ್ರತ್ಯೇಕವಾಗಿಡಲು ಕೋರ್ಟ್ ಆದೇಶಿಸಿತ್ತು. ಹೀಗಾಗಿ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಆರೋಪಿಗಳನ್ನು ಕರೆತರಲಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ (Renuka Swamy Murder) ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು 24ನೇ ಎಸಿಎಂಎಂ ಕೋರ್ಟ್ ಜೂನ್‌ 24ರಂದು ಆದೇಶ ನೀಡಿತ್ತು. ಅರ್ಜಿ ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು ತುಮಕೂರು ಜೈಲಿಗೆ ವರ್ಗಾವಣೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಆರೋಪಿಗಳ ವರ್ಗಾವಣೆ ಯಾಕೆ ಅಗತ್ಯ ಎಂದು ಎಸ್‌ಪಿಪಿ ಪ್ರಸನ್ನ ಕುಮಾರ್ ವಿವರಿಸಿದ್ದರು.

ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ ಕಾರ್ತಿಕ್‌, ಕೇಶವ್ ಮತ್ತು ನಿಖಿಲ್ ಶರಣಾಗಿದ್ದರು. ಈ ಮೂವರು ಕೊಲೆ ಬಗ್ಗೆ ಸಂಪೂರ್ಣವಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದರು. ಇದರಿಂದ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿತ್ತು. ಒಂದೇ ಜೈಲಿನಲ್ಲಿದ್ದರೇ ಅವರವರೇ ಹೊಡೆದಾಡಿಕೊಳ್ಳುವ ಸಾಧ್ಯತೆ ಇದ್ದು, ನಾಲ್ವರು ಆರೋಪಿಗಳ ಜೀವಕ್ಕೆ ಅಪಾಯ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ತುಮಕೂರು ಜೈಲಿಗೆ ಶಿಫ್ಟ್‌ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ರೇಣುಕಾಸ್ವಾಮಿಯನ್ನ ಹೀರೊ ಮಾಡೋದು ನಿಲ್ಲಿಸಿ, ದರ್ಶನ್‌ನ ಬಿಟ್ಟುಕೊಡಲ್ಲ ಎಂದ ಖ್ಯಾತ ನಿರೂಪಕಿ!

Actor Darshan support by anchor hemalatha

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ (Actor Darshan) ಹತ್ಯೆಯಲ್ಲಿ ಪವಿತ್ರಾ ಗೌಡ ಹಾಗೂ ದರ್ಶನ್​ 14ದಿನಗಳ ವರೆಗೆ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಹಲವರು ನಟನ ಬೆಂಬಲಕ್ಕೆ ನಿಂತಿದ್ದರು. ನಟಿ ಸಂಜನಾ ಗಲ್ರಾನಿ ಅವರು ಕೂಡ ಸ್ಪಷ್ಟ ಅಭಿಪ್ರಾಯ ನೀಡಿ ದರ್ಶನ್ ತೂಗುದೀಪ ಬೆಂಬಲಕ್ಕೆ ನಿಂತಿದ್ದರು. ಇದರ ಬೆನ್ನಲ್ಲೇ ಕನ್ನಡದ ಖ್ಯಾತ ನಿರೂಪಕಿ ಹೇಮಾಲತಾ ತಮ್ಮ ಇನ್‌ಸ್ಟಾ ಖಾತೆಯಲ್ಲಿ ದರ್ಶನ್‌ ಜೊತೆಗಿನ ಫೋಟೋ ಹಂಚಿಕೊಂಡು ಮೃತ ರೇಣುಕಾಸ್ವಾಮಿಯನ್ನು ಹೀರೋ ಮಾಡುವುದನ್ನು ನಿಲ್ಲಿಸಿ ಎಂದು ಬರೆದುಕೊಂಡಿದ್ದಾರೆ.

ನಿರೂಪಕಿ ಹೇಮಾಲತಾ ಪೋಸ್ಟ್‌ನಲ್ಲಿ ʻʻಸಾವಿರ ಜನ ಸಾವಿರ ಮಾತನಾಡಲಿ.. ಒಮ್ಮೆ ಬೆಳೆದ ಸ್ನೇಹಕ್ಕೆ ಕಡಲಿನಸ್ಟಿರುವ ಪ್ರೀತಿಗೆ ನಾವೆಲ್ಲರೂ ಋಣಿಗಳೇ.. ಸ್ನೇಹಾವೆಂಬ ಸಂಕೋಲೆಯಲಿ ಒಮ್ಮೆ ಸಿಕ್ಕಿಕೊಂಡರೆ ಕೊಂಡಿ ಕಳಚುವುದಿಲ್ಲ…
ಅಂದಿಗೂ ಇಂದಿಗೂ ಎಂದೆಂದಿಗೂ ಮರೆಯುವುದಿಲ್ಲ, ಬಿಡುವುದಿಲ್ಲ, ಬಿಟ್ಟುಕೊಡುವುದಿಲ್ಲ. ಈ ಘಟನೆಗೆ ಏನು ಹೇಳಬೇಕು ಎಂದು ತಿಳಿಯುತ್ತಿಲ್ಲ, ಕಾನೂನಿನ ಮುಖಾಂತರ ಅಂತ್ಯವನ್ನಾಡಿ ಎಲ್ಲಾ ಕಳಂಕವನ್ನು ತೊಳೆದುಕೊಂಡು ಹೊರಗೆ ಬನ್ನಿ. ನಿಮ್ಮ ಮೇಲಿರುವ ಪ್ರೀತಿ ಗೌರವ ಎಂದಿಗೂ ಕಮ್ಮಿ ಆಗುವುದಿಲ್ಲ. ಅಲ್ಲದೇ ಕೊಲೆಯಾಗಿರುವ ರೇಣುಕಾಸ್ವಾಮಿಯನ್ನು ಹೀರೋ ಎನ್ನುವಂತೆ ಬಿಂಬಿಸಬೇಡಿʼʼ ಎಂದು ನಿರೂಪಕಿ ಹೇಮಾಲತಾ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

ಇನ್ನು ಈ ಹಿಂದೆ ಬಿಗ್‌ಬಾಸ್‌ ಸ್ಪರ್ಧಿ ಇಶಾನಿ ದರ್ಶನ್‌ ಜೊತೆಗಿನ ಫೋಟೋ ಹಂಚಿಕೊಂಡು, ದರ್ಶನ್ ಸರ್ ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆಯಾಗಲಿ ಎಂದಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಇಶಾನಿ, ನಿಜಕ್ಕೂ ಇದು ಅಘಾತಕಾರಿ ಸುದ್ದಿ. ಒಬ್ಬ ಅಣ್ಣನ ರೂಪದಲ್ಲಿ ನಾನು ಕಂಡ ದರ್ಶನ್ ಸರ್ ನಿಜಕ್ಕೂ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಕೇಳಿದಾಗ ನಂಬಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Continue Reading

ಉತ್ತರ ಕನ್ನಡ

Anantkumar Hegde: ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಮನೆಯಲ್ಲಿ ಬೆಂಕಿ ಆಕಸ್ಮಿಕ

Anantkumar Hegde: ಶಿರಸಿಯ ಕೆಎಚ್‌ಬಿ ಕಾಲೋನಿಯಲ್ಲಿ ಇರುವ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಸೃಷ್ಟಿಯಾದ ಪರಿಣಾಮ ಜಿಮ್ ಮಾಡುವ ಯಂತ್ರಗಳಿಗೆ ಅಲ್ಪ ಹಾನಿಯಾಗಿದೆ.

VISTARANEWS.COM


on

Anantkumar Hegde home fire
Koo

ಕಾರವಾರ: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ (Anantkumar Hegde) ಮನೆಯಲ್ಲಿ ಬೆಂಕಿ ಆಕಸ್ಮಿಕ (Fire mishop) ಸಂಭವಿಸಿದೆ. ಇದು ಶಾರ್ಟ್‌ ಸರ್ಕ್ಯೂಟ್‌ನಿಂದ (Short Circuit) ಆಗಿದೆ ಎಂದು ತಿಳಿದುಬಂದಿದೆ.

ಶಿರಸಿಯ ಕೆಎಚ್‌ಬಿ ಕಾಲೋನಿಯಲ್ಲಿ ಇರುವ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಸೃಷ್ಟಿಯಾದ ಪರಿಣಾಮ ಜಿಮ್ ಮಾಡುವ ಯಂತ್ರಗಳಿಗೆ ಅಲ್ಪ ಹಾನಿಯಾಗಿದೆ. ಇದನ್ನು ಹೊರತುಪಡಿಸಿದರೆ ಹೊಗೆಯಿಂದ ಗೋಡೆಗಳಿಗೆ ಹಾನಿಯಾಗಿದ್ದು ಅಂದಾಜು 50 ಸಾವಿರದಷ್ಟು ಹಾನಿಯಾಗಿರಬಹುದು ಎಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದು ಯಾವುದೇ ದೊಡ್ಡ ಹಾನಿಯಾಗಿಲ್ಲ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸುನೀಲ್ ಅವರು ಮಾಹಿತಿ ನೀಡಿದ್ದಾರೆ.

ಸರಗಳ್ಳನ ಕಾಲಿಗೆ ತುಮಕೂರು ಪೊಲೀಸ್‌ ಗುಂಡೇಟು

ತುಮಕೂರು: ತುಮಕೂರಿನಲ್ಲಿ ಪೊಲೀಸ್ ತುಪಾಕಿ (Tumkur Shoot out) ಸದ್ದು ಮಾಡಿದೆ. ನಿರಂತರವಾಗಿ ಸರಗಳ್ಳತನ ಮಾಡುತ್ತಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆಂಧ್ರದ ಹಿಂದೂಪುರ ಮೂಲದ ರಿಜ್ವಾನ್ ಎಂಬಾತನಿಗೆ ಗುಂಡೇಟು ಬಿದ್ದಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಈಜೀಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ.

ಆರೋಪಿ ರಿಜ್ವಾನ್‌ ಒಟ್ಟು 15ಕ್ಕೂ ಹೆಚ್ಚು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ. ಕಳೆದ ಒಂದು ವಾರದ ಹಿಂದೆ ಎ1 ಆರೋಪಿ ಚಿನ್ನಾ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಸೋಮವಾರ (ಜೂ.24) ಖಚಿತ ಮಾಹಿತಿ ಮೇರೆಗೆ ಎ2 ಆರೋಪಿ ರಿಜ್ವಾನ್‌ನನ್ನು ಬಂಧಿಸಲು ಪೊಲೀಸರು ತೆರಳಿದ್ದರು.

ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ, ಸಿಪಿಐ ಹನುನಂತರಾಯಪ್ಪ, ಪಿಎಸ್‌ಐ ಶ್ರೀನಿವಾಸ್, ದಾದಪೀರ್, ಹಾಗೂ ಪೊಲೀಸ್ ಸಿಬ್ಬಂದಿ ರಮೇಶ್ ತಂಡ ತೆರಳಿತ್ತು. ಹೊಸಪೇಟೆಯಿಂದ ಪೊಲೀಸ್ ಜೀಪ್‌ನಲ್ಲಿ ಮಧುಗಿರಿಗೆ ಕರೆತರುತ್ತಿದ್ದಾಗ, ಬಹಿರ್ದೆಸೆಗೆ ಹೋಗುವುದಾಗಿ ಈಜಿಹಳ್ಳಿ ಕ್ರಾಸ್ ಬಳಿ ಇಳಿದಿದ್ದ. ಈ ವೇಳೆ ಪೊಲೀಸ್ ಪೇದೆ ರಮೇಶ್ ಮೇಲೆ ರಿಹ್ವಾನ್‌ ಬಿಯರ್ ಬಾಟಲ್‌ ಎಸೆದು ಹಲ್ಲೆ ನಡೆಸಿ, ಪರಾರಿ ಆಗಲು ಯತ್ನಿಸಿದ್ದ. ಪೊಲೀಸರು ಶರಣಾಗುವಂತೆ ಮೂರು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ನಂತರ ಪೊಲೀಸರ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿ ಕರೆ ತಂದಿದ್ದಾರೆ.

tumkur Shoot out
ಗಾಯಾಳು ಪೊಲೀಸ್‌ ಪೇದೆ ರಮೇಶ್‌

ಬಿಯರ್‌ ಬಾಟೆಲ್‌ನಿಂದ ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿ ರಮೇಶ್‌ಗೆ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ರಿಜ್ವಾನ್‌ಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನೂ ರಿಜ್ವಾನ್‌ ಮೇಲೆ ಮಧುಗಿರಿ 3, ಮಿಡಗೇಶಿ 4, ಬಡವನಹಳ್ಳಿ 2, ಕೊರಟಗೆರೆ 1, ಕೊಡಿಗೇನಹಳ್ಳಿ 2 ಹಾಗೂ ಮಡಕಶಿರಾ 1, ಪಟ್ಟನಾಯಕನಹಳ್ಳಿ 2, ಗೌರಿಬಿದನೂರು 1 ಸೇರಿದಂತೆ ಹಲವು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ದೂರು ದಾಖಲಾಗಿವೆ. ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.

ಇದನ್ನೂ ಓದಿ: Contaminated Water : ಬೆಳಗಾವಿ, ಕೋಲಾರದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವು

Continue Reading

ಪ್ರಮುಖ ಸುದ್ದಿ

Hemavati Link Canal: ಹೇಮಾವತಿ‌ ಲಿಂಕ್‌ ಕೆನಾಲ್ ವಿರೋಧಿಸಿ ಇಂದು ತುಮಕೂರು ಬಂದ್

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿಯಿಂದ ಬಂದ್‌ಗೆ ಕರೆ ಕೊಡಲಾಗಿತ್ತು. ಬಂದ್‌ಗೆ ವಿವಿಧ ರೈತ, ಕನ್ನಡಪರ ಸಂಘಟನೆಗಳು ಬೆಂಬಲ ಘೋಷಿಸಿವೆ. ಮಠಾಧೀಶರು, ವರ್ತಕರು, ವಕೀಲರ ಸಂಘ, ಹೋಟೆಲ್ ಅಸೋಸಿಯೇಷನ್ ಸೇರಿ ಅನೇಕ ಸಂಘಟನೆಗಳಿಂದ ಬಂದ್‌ಗೆ ಬೆಂಬಲ ವ್ಯಕ್ತವಾಗಿದೆ. ಸ್ವಯಂಪ್ರೇರಿತರಾಗಿ ಬಂದ್‌ಗೆ ಬೆಂಬಲ‌ ನೀಡುವಂತೆ ಹೋರಾಟ ಸಮಿತಿಯಿಂದ ಮನವಿ ಮಾಡಲಾಗಿದೆ.

VISTARANEWS.COM


on

Hemavati Link Canal
Koo

ತುಮಕೂರು: ಹೇಮಾವತಿ‌ ಲಿಂಕ್‌ ಕೆನಾಲ್ (Hemavati Link Canal) ವಿರೋಧಿಸಿ ಇಂದು ತುಮಕೂರು ಬಂದ್ (Tumkur Bundh) ಆರಂಭವಾಗಿದೆ. ತುಮಕೂರು ಜಿಲ್ಲಾದ್ಯಂತ ಬಂದ್ ಮಾಡಲು ಹೋರಾಟ ಸಮಿತಿ ಕರೆ ನೀಡಿದ್ದು, ಇಂದು ಮುಂಜಾನೆಯಿಂದಲೇ ಕಾರ್ಯರ್ತರು ಬೀದಿಗೆ ಇಳಿದು ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ವಿನಂತಿಸಿಕೊಂಡರು.

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿಯಿಂದ ಬಂದ್‌ಗೆ ಕರೆ ಕೊಡಲಾಗಿತ್ತು. ಬಂದ್‌ಗೆ ವಿವಿಧ ರೈತ, ಕನ್ನಡಪರ ಸಂಘಟನೆಗಳು ಬೆಂಬಲ ಘೋಷಿಸಿವೆ. ಮಠಾಧೀಶರು, ವರ್ತಕರು, ವಕೀಲರ ಸಂಘ, ಹೋಟೆಲ್ ಅಸೋಸಿಯೇಷನ್ ಸೇರಿ ಅನೇಕ ಸಂಘಟನೆಗಳಿಂದ ಬಂದ್‌ಗೆ ಬೆಂಬಲ ವ್ಯಕ್ತವಾಗಿದೆ. ಸ್ವಯಂಪ್ರೇರಿತರಾಗಿ ಬಂದ್‌ಗೆ ಬೆಂಬಲ‌ ನೀಡುವಂತೆ ಹೋರಾಟ ಸಮಿತಿಯಿಂದ ಮನವಿ ಮಾಡಲಾಗಿದೆ.

ಬಂದ್‌ ಪ್ರಯುಕ್ತ ಬೆಳಗ್ಗೆ 10 ಗಂಟೆಗೆ ಟೌನ್‌ಹಾಲ್‌ನಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಹೋರಾಟ ಸಮಿತಿ ಸಲ್ಲಿಸಲಿದೆ. ತುಮಕೂರು ನಗರ ಸೇರಿದಂತೆ 10 ತಾಲ್ಲೂಕುಗಳಲ್ಲೂ ಬಂದ್‌ಗೆ ಸಿದ್ಧತೆ ಆಗಿದೆ. ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಹೋರಾಟಗಾರರು ಪ್ರತಿಭಟನೆ ಮಾಡಲಿದ್ದಾರೆ.

ಜಿಲ್ಲಾದ್ಯಂತ ಬಂದ್‌ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯಿಂದಲೂ ಬಿಗಿಭದ್ರತೆ ಹಾಕಲಾಗಿದೆ. ಹೇಮಾವತಿ ನಾಲಾ ವಲಯದ ಗುಬ್ಬಿ, ತುರುವೇಕೆರೆ, ತುಮಕೂರಿನಲ್ಲಿ ಬಂದ್ ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ. ಮೂರು ತಾಲ್ಲೂಕುಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಬಲವಂತವಾಗಿ ಯಾವುದೇ ಅಂಗಡಿ ಮುಚ್ಚಿಸದಂತೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ತುಮಕೂರು ‌ಎಸ್‌ಪಿ ಅಶೋಕ್ ವೆಂಕಟ್ ಖಡಕ್ ಸೂಚನೆ ನೀಡಿದ್ದಾರೆ.

ಇಂದು ಮುಂಜಾನೆಯೇ ಬೀದಿಗಿಳಿದ ಹೋರಾಟ ಸಮಿತಿಯ ಕಾರ್ಯಕರ್ತರು, ಅಂಗಡಿ- ಮುಂಗಟ್ಟುಗಳನ್ನ ತೆರೆಯದಂತೆ ವ್ಯಾಪಾರಸ್ಥರಿಗೆ ಮನವಿ ಮಾಡಿಕೊಂಡರು. ನಗರದ ಎಲ್ಲಾ ಪ್ರಮುಖ ರಸ್ತೆಗಳಿಗೆ ಹೋಗಿ ʼನಮ್ಮ ನೀರು ನಮ್ಮ ಹಕ್ಕುʼ ಅನ್ನುವ ಕೂಗಿನೊಂದಿಗೆ ಬಂದ್‌ಗೆ ಕರೆ ನೀಡಿದರು. ನಗರದ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಪ್ರತಿಭಟನಾಕಾರರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಹೇಮಾವತಿ ನದಿಯ ಗೊರೂರು ಡ್ಯಾಮ್ ನೀರಿಗಾಗಿ ತುಮಕೂರು ಜಿಲ್ಲೆ ಹಾಗೂ ರಾಮನಗರ ಜಿಲ್ಲೆಯ ನಡುವೆ ಕಿತ್ತಾಟ ಶುರುವಾಗಿದೆ. ಕೆನಾಲ್ ಮೂಲಕ ರಾಮನಗರ ಜಿಲ್ಲೆಯ ಮಾಗಡಿ ಶ್ರೀ ರಂಗ ಏತನೀರಾವರಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಂದ್‌ಗೆ ಕರೆ ನೀಡಲಾಗಿದೆ.

ಇಡೀ ತುಮಕೂರು ಜಿಲ್ಲೆ ಬಂದ್‌ಗೆ ಕರೆ ನೀಡಿ, ಗುಬ್ಬಿ ತಾಲೂಕು ಬಂದ್ ಯಶಸ್ವಿಯಾಗಿ ನಡೆಸಲು ಹೋರಾಟ ಸಮಿತಿಯ ಎಲ್ಲ ಮುಖಂಡರು ತೀರ್ಮಾನಿಸಿದ್ದಾರೆ. ಈ ಬಗ್ಗೆ ಹೇಮಾವತಿ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿ ಸಭೆ ನಡೆಸಿದೆ. ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮುಖಂಡರು, ಎಲ್ಲ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಾಗಿದ್ದರು. ಸ್ವಯಂಪ್ರೇರಿತರಾಗಿ ಬಂದ್‌ಗೆ ಬೆಂಬಲ ನೀಡುವಂತೆ ಸಮಿತಿ ಮನವಿ ಮಾಡಿದೆ.

ತುಮಕೂರು ಬಂದ್ ಹಿನ್ನೆಲೆ ಸ್ವಯಂಪ್ರೇರಿತ ಬಂದ್ ಇರಲಿದೆ. ಆಸ್ಪತ್ರೆ, ಮೆಡಿಕಲ್ ಶಾಪ್, ಆಂಬುಲೆನ್ಸ್‌ಗಳ ಸಂಚಾರಕ್ಕೆ ಮಾತ್ರ ಅವಕಾಶ ಇರುತ್ತದೆ. ಆಟೋಗಳು ರಸ್ತೆಗಿಳಿಯುವುದು ಅನುಮಾನ. ಬಹುತೇಕ ಅಂಗಡಿ-ಮುಂಗಟ್ಟುಗಳು, ಹೋಟೆಲ್‌ಗಳು ಬಾಗಿಲು ತೆರೆಯುವುದಿಲ್ಲ. ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಬಂದ್ ಇರಲಿದೆ. ಆದರೆ, ಸರ್ಕಾರಿ ಸಾರಿಗೆ, ಶಾಲಾ-ಕಾಲೇಜು ಸೇರಿದಂತೆ ಸರಕಾರಿ ಸೇವೆಗಳು ಎಂದಿನಂತೆ ಇರಲಿವೆ ಎಂದು ಆಡಳಿತ ಸ್ಪಷ್ಟಪಡಿಸಿದೆ. ಅನುದಾನರಹಿತ ಶಾಲೆಗಳ ಒಕ್ಕೂಟ (ರೂಪ್ಸಾ) ಬಂದ್‌ಗೆ ಬೆಂಬಲ ಸೂಚಿಸಿದ್ದು, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿದೆ.

ಇದನ್ನೂ ಓದಿ: Rishab Shetty: ಕುಂದಾಪುರಕ್ಕೆ ಆಗಮಿಸಿದ ʼಕಲ್ಕಿʼಯ ಬುಜ್ಜಿ; ಪ್ರಭಾಸ್‌ ಕಾರು ರೈಡ್‌ ಮಾಡಿದ ರಿಷಬ್‌ ಶೆಟ್ಟಿ ಹೇಳಿದ್ದೇನು?

Continue Reading
Advertisement
murder case anekal
ಕ್ರೈಂ13 mins ago

Murder Case: ಬಾರ್‌ನಲ್ಲಿ ಗುರಾಯಿಸಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

lk advani
ಪ್ರಮುಖ ಸುದ್ದಿ36 mins ago

LK Advani: ಮಾಜಿ ಉಪ ಪ್ರಧಾನಿ ಎಲ್‌ ಕೆ ಆಡ್ವಾಣಿ ಅಸ್ವಸ್ಥ, ಏಮ್ಸ್‌ಗೆ ದಾಖಲು

Smoking Effects
ಆರೋಗ್ಯ46 mins ago

Smoking Effects: ಮಹಿಳೆಯರೇ, ಧೂಮಪಾನದಿಂದ ನಿಮ್ಮ ಆರೋಗ್ಯದ ಮೇಲಾಗುವ ಪರಿಣಾಮದ ಅರಿವಿದೆಯೇ?

Vastu Tips
ಧಾರ್ಮಿಕ1 hour ago

Vastu Tips: ಬಾತ್ ರೂಮ್‌ನಲ್ಲಿ ಈ ವಸ್ತುಗಳಿದ್ದರೆ ಕುಟುಂಬಕ್ಕೆ ಭಾರಿ ಸಂಕಷ್ಟ!

Karnataka Weather
ಕರ್ನಾಟಕ1 hour ago

Karnataka Weather: ಇಂದು ಕೊಡಗು, ಹಾಸನ, ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ; ಹಲವೆಡೆ ಶಾಲೆಗಳಿಗೆ ರಜೆ!

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya: ಈ ರಾಶಿಯವರು ತಮಗೆ ಸಂಬಂಧಪಡದ ವಿಷಯದಲ್ಲಿ ಮೂಗು ತೂರಿಸುವುದು ಬೇಡ!

ollie robinson
ಪ್ರಮುಖ ಸುದ್ದಿ8 hours ago

Ollie Robinson: 6, 6nb, 4, 6, 4, 6nb, 4, 6nb, 1; ಒಂದೇ ಓವರ್‌ನಲ್ಲಿ 43 ರನ್‌ ಕೊಟ್ಟ ಇಂಗ್ಲೆಂಡ್‌ ಬೌಲರ್; Video ಇದೆ

Serial Bride
ದೇಶ8 hours ago

Serial Bride: ಹಲವು ಜನರನ್ನು ಮದುವೆಯಾಗಿ ವಂಚಿಸಿದ್ದ ಮಹಿಳೆಗೆ ಎಚ್‌ಐವಿ; ಮಾಜಿ ವರಗಳಿಗಾಗಿ ಶೋಧ!

Demand to provide job reservation for Kannadigas; Massive Dharani sathyagraha on July 1 from Karave
ಕರ್ನಾಟಕ9 hours ago

Bengaluru News: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ; ಕರವೇಯಿಂದ ಜು.1ರಂದು ಬೃಹತ್ ಧರಣಿ ಸತ್ಯಾಗ್ರಹ

Attica Babu
ಕರ್ನಾಟಕ10 hours ago

Attica Babu: ಕದ್ದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ7 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 weeks ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 weeks ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 weeks ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌