ಸಮಾಜದಲ್ಲಿ ಕುಟುಂಬವೇ ಮಾದರಿ ಸಂಸ್ಥೆ ಕಸಾಪ ಅಧ್ಯಕ್ಷ ಮಹೇಶ್ ಜೋಷಿ ಅಭಿಮತ - Vistara News

ಶಿವಮೊಗ್ಗ

ಸಮಾಜದಲ್ಲಿ ಕುಟುಂಬವೇ ಮಾದರಿ ಸಂಸ್ಥೆ ಕಸಾಪ ಅಧ್ಯಕ್ಷ ಮಹೇಶ್ ಜೋಷಿ ಅಭಿಮತ

ಮದುವೆಯೆಂಬ ಅನುಬಂಧದ ನೆಲೆಯಲ್ಲಿ ರೂಪುಗೊಂಡ ಕುಟುಂಬಗಳು ಸಮಾಜದ ಗುಣಲಕ್ಷಣಗಳನ್ನು ಬೆಳೆಸುವಲ್ಲಿ ಪ್ರಾಮುಖ್ಯತೆ ವಹಿಸುತ್ತದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ : ʻʻಮದುವೆಯು ಕುಟುಂಬದ ಸಂಬಂಧಗಳ ಬೆಳವಣಿಗೆಯ ನಿರ್ಣಾಯಕದ ಅಂಶವಾಗಿದೆ. ಸಮಾಜದಲ್ಲಿ ಕುಟುಂಬವು ಒಂದು ಮಾದರಿ ಸಂಸ್ಥೆಯಾಗಿ ಕಾರ್ಯ ನಿರ್ವಹಿಸುತ್ತದೆ. ಕುಟುಂಬದ ಸಹಕಾರ ರೂಪವೇ ಸಮಾಜದ ಬೆಳವಣಿಗೆಗೆ ಮುಖ್ಯ ತಳಹದಿʼʼ ಎಂದು ಕರ್ನಾಟಕ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಷಿ ಹೇಳಿದರು.

ಸೊರಬ ತಾಲ್ಲೂಕಿನ ಕೆರೆಹಳ್ಳಿ ಗ್ರಾಮದಲ್ಲಿ ಡಾ.ವಿಶ್ವನಾಥ್ ನಾಡಿಗೇರ್ ಕುಟುಂಬದಿಂದ ನಿರ್ಮಿಸಲ್ಪಟ್ಟ ಶ್ರೀ ರಾಮೇಶ್ವರ ದೇವಾಲಯಕ್ಕೆ ಹೊಂದಿಕೊಂಡಂತೆ ನಿರ್ಮಾಣಗೊಂಡ ಶಿವ ಸನ್ನಿಧಿ ಕಲ್ಯಾಣ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಲುಶಿತಗೊಳ್ಳುತ್ತಿರುವ ಸಮಾಜವನ್ನು ಸರಿದಾರಿಗೆ ತರಲು ಮಠ, ಮಂದಿರ ಮತ್ತು ಕುಟುಂಬ ವ್ಯವಸ್ಥೆ ಅತ್ಯಂತ ಮಹತ್ತರ ಪಾತ್ರ ವಹಿಸುತ್ತವೆ. ಸತ್ಸಂಗ ಮತ್ತು ಸಮಾಜಮುಖಿ ಕಾರ್ಯ ನಡೆಸಲು ಶಿವ ಸನ್ನಿಧಿ ಸಹಕಾರಿಯಾಗಲಿ ಶುಭ ಹಾರೈಸಿದರು.

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್.ದತ್ತಾತ್ರಿ, ಉದ್ಯಮಿ ವಿ.ವಿ. ಕಾಮತ್, ಹಿರಿಯ ಕೃಷಿಕ ಗಣೇಶ್ ರಾವ್ ನಾಡಿಗೇರ್, ಡಾ: ಶ್ರೀದೇವಿ ನಾಡಿಗೇರ್ ಉಪಸ್ಥಿತರಿದ್ದರು.

ಇದನ್ನು ಓದಿ | ಮುಸ್ಲಿಂ ಯುವತಿಯ ಜತೆ ಮದುವೆ: ಹಿಂದೂ ಯುವಕನ ಕೊಲೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Road Accident : ಮುಖಾಮುಖಿಯಾಗಿ ಬಂದ ಕಾರುಗಳು ಪೀಸ್‌ ಪೀಸ್‌; ಚಾಲಕ ಸ್ಪಾಟ್‌ ಡೆತ್‌

Road Accident : ಪ್ರತ್ಯೇಕ ಕಡೆಗಳಲ್ಲಿ ಅಪಘಾತ ಸಂಭವಿಸಿದ್ದು ಸಾವು-ನೋವಿಗೆ ಕಾರಣವಾಗಿದೆ. ಶಿವಮೊಗ್ಗದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಗೆ ಚಾಲಕ ಪ್ರಾಣ ಬಿಟ್ಟರೆ, ಉಡುಪಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಗೂಡ್ಸ್‌ ಗಾಡಿ ಗುದ್ದಿದೆ. ಚಿಕ್ಕಮಗಳೂರಲ್ಲಿ ಕಾರೊಂದು ಹೊತ್ತಿ ಉರಿದಿದೆ. ಉಡುಪಿಯಲ್ಲಿ ನಿಯಂತ್ರಣ ತಪ್ಪಿದ ಆಯಿಲ್‌ ಟ್ಯಾಂಕರ್‌ ಪಲ್ಟಿಯಾಗಿದೆ.

VISTARANEWS.COM


on

By

Road Accident in shivamogga
Koo

ಶಿವಮೊಗ್ಗ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತ (Road Accident ) ಸಂಭವಿಸಿದೆ. ಮಾರುತಿ ಓಮ್ನಿ ಹಾಗೂ ಇಂಡಿಕಾ ಕಾರು ನಡುವೆ ಡಿಕ್ಕಿಯ ರಭಸಕ್ಕೆ ಓಮ್ನಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಜೇಯ (21) ಮೃತ ದುರ್ದೈವಿ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಂಚಾಲೆ ಗ್ರಾಮದ ಬಳಿ ಅಪಘಾತ ನಡೆದಿದೆ. ಓಮ್ನಿ ಕಾರು ಜೋಗದಿಂದ ಶಿವಮೊಗ್ಗ ಕಡೆ ಹೊರಟಿತ್ತು. ಇಂಡಿಕಾ ಕಾರು ಆನಂದಪುರದಿಂದ ಸಾಗರ ಕಡೆಗೆ ತೆರಳುತ್ತಿದ್ದ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಂಡಿಕಾ ಕಾರು ಚಾಲಕ ಹಾಗೂ ಮಾರುತಿ ಓಮ್ನಿಯಲ್ಲಿದ್ದ ಯುವಕನಿಗೆ ಗಾಯವಾಗಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚೆಲ್ಲಾಪಿಲ್ಲಿಯಾಗಿದ್ದ ಬಿದ್ದಿದ್ದ ಕಾರುಗಳನ್ನು ತೆರವು ಮಾಡಿದ್ದಾರೆ. ಆನಂದಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಗೂಡ್ಸ್‌ ಲಾರಿ ಡಿಕ್ಕಿ

ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಗೂಡ್ಸ್‌ ಲಾರಿಯೊಂದು ಡಿಕ್ಕಿ ಹೊಡೆದಿದೆ. ಉಡುಪಿಯ ರಾಷ್ಟ್ರೀಯ ಹೆದ್ದಾರಿ 66 ಉದ್ಯಾವನದಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದೆ.

ಲಾರಿಯು ತಾಂತ್ರಿಕ ಸಮಸ್ಯೆಯಿಂದ ರಾಷ್ಟ್ರೀಯ ಹೆದ್ದಾರಿ ನಡುವೆಯೇ ಕೆಟ್ಟು ನಿಂತಿತ್ತು. ಇದನ್ನೂ ಗಮನಿಸಿದ ಗೂಡ್ಸ್‌ ಚಾಲಕ ವೇಗವಾಗಿ ಬಂದಿದ್ದಾನೆ. ಈ ವೇಳೆ ಅಪಘಾತ ಸಂಭವಿಸಿದೆ. ಉಡುಪಿಯ ಕಾಪು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Fire Accident: ಹಾವೇರಿಯಲ್ಲಿ ಧಗಧಗಿಸಿದ ಬೆಂಕಿ; ಸುಟ್ಟು ಭಸ್ಮವಾಯ್ತು 5 ಅಂಗಡಿ

ಉಡುಪಿಯಲ್ಲಿ ಆಯಿಲ್‌ ಟ್ಯಾಂಕರ್‌ ಪಲ್ಟಿ

ಉಡುಪಿಯ ಸಂತೆಕಟ್ಟೆ ಜಂಕ್ಷನ್‌ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಖಾದ್ಯ ತೈಲ ಸಾಗಣೆ ಮಾಡುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದೆ. ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಆಯಿಲ್ ಟ್ಯಾಂಕರ್ ಕೆಸರು ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನಿಗೆ ತರಚಿದ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಹೈವೇ ಕಾಮಗಾರಿ ಸೂಚನಾ ಫಲಕ ನೋಡದೆ ಮುಚ್ಚಿದ್ದ ಸರ್ವಿಸ್ ರಸ್ತೆಯಲ್ಲಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣವಾಗಿದೆ.

ಶಾರ್ಟ್‌ ಸರ್ಕ್ಯೂಟ್‌ಗೆ ಹೊತ್ತಿ ಉರಿದ ಕಾರು

ಚಿಕ್ಕಮಗಳೂರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಕಾರೊಂದು ಹೊತ್ತಿ ಉರಿದಿದೆ. ಚಿಕ್ಕಮಗಳೂರಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಸ್ಟಿಫ್ಟ್‌ ಕಾರೊಂದು ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ಬಂದಾಗ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಲ್ಲಿದ್ದ ನಾಲ್ವರು ಕೆಳಗಿಳಿದು ಜೀವ ಉಳಿಸಿಕೊಂಡಿದ್ದಾರೆ. ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಸ್ವಿಫ್ಟ್ ಕಾರು ಸುಟ್ಟು ಹೋಗಿದೆ. ಕಡೂರು ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಮುಂದುವರಿದ ಮಳೆ; 19 ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್‌ ಅಲರ್ಟ್‌

Heavy rain : ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (rain news) ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ (karnataka weather forecast) ಯೆಲ್ಲೋ ಹಾಗೂ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ನೈರುತ್ಯ ಮಾನ್ಸೂನ್ ರಾಜ್ಯವನ್ನು ಆವರಿಸಿದೆ. ವಾರಾಂತ್ಯದಲ್ಲಿ ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ. ಜೂ.10ರವರೆಗೆ ಮೀನುಗಾರಿಕೆಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ ಮತ್ತು ವಿಜಯನಗರ, ಬಾಗಲಕೋಟೆ, ಕೊಪ್ಪಳ , ಧಾರವಾಡದಲ್ಲೂ ವ್ಯಾಪಕ ಮಳೆಯಾಗಲಿದೆ.

ಮಲೆನಾಡಿನ ಪ್ರದೇಶದಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಚದುರಿದಂತೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Karnataka Rain : ಮಳೆ ಶುರುವಾದರೆ ಸಾಕು ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ!

ಬೆಂಗಳೂರಲ್ಲಿ ಸಂಜೆ ಮಳೆ

ರಾಜಧಾನಿ ಬೆಂಗಳೂರಿನಲ್ಲೂ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಅನುಕ್ರಮವಾಗಿ ಸುಮಾರು 32 ಮತ್ತು 23 ಡಿ.ಸೆ ಇರಲಿದೆ.

ಮತ್ತೆ ಭಾರಿ ಮಳೆ ಎಚ್ಚರಿಕೆ ಕೊಟ್ಟ ತಜ್ಞರು

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿಯು ಗಂಟೆಗೆ 40-50 ಕಿ.ಮೀ ಬೀಸಲಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ದಕ್ಷಿಣ ಕನ್ನಡ, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Shivamogga News: ಸೊರಬದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತ ಆರೋಪ

Shivamogga News: ಸೊರಬ ತಾಲೂಕಿನಲ್ಲಿ ಕಳೆದ ಒಂದು ವರ್ಷದಿಂದ ಅಭಿವೃದ್ಧಿ ಚಟುವಟಿಕೆಗಳು ನಡೆಯದ ಕಾರಣ, ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ. ಆಯ್ಕೆ ಮಾಡಿದ ಜನರಿಗೆ ಕ್ಷೇತ್ರದ ಶಾಸಕರು ನಂಬಿಕೆ ದ್ರೋಹ ವೆಸಗಿದ್ದಾರೆ ಎಂದು ಸೊರಬ ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲುಕೊಪ್ಪ ಆರೋಪಿಸಿದ್ದಾರೆ.

VISTARANEWS.COM


on

soraba BJP Mandala president prakash talakaalukoppa pressmeet
Koo

ಸೊರಬ: ಕಳೆದ ಒಂದು ವರ್ಷದಿಂದ ಅಭಿವೃದ್ಧಿ ಚಟುವಟಿಕೆಗಳು ನಡೆಯದ ಕಾರಣ ತಾಲೂಕಿನಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ. (Shivamogga News) ಆಯ್ಕೆ ಮಾಡಿದ ಜನರಿಗೆ ಕ್ಷೇತ್ರದ ಶಾಸಕರು ನಂಬಿಕೆ ದ್ರೋಹ ವೆಸಗಿದ್ದಾರೆ ಎಂದು ಸೊರಬ ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲುಕೊಪ್ಪ ಆರೋಪಿಸಿದರು.

ಶುಕ್ರವಾರ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯ್ಕೆಯಾಗಿ, ಸಚಿವರಾಗಿ ಒಂದು ವರ್ಷ ಕಳೆದರೂ ಒಂದೇ ಒಂದು ಬಿಡಿಗಾಸಿನ ಅನುದಾನ ತರದ ಮಧು ಬಂಗಾರಪ್ಪ ಅವರಿಗೆ ಅಭಿವೃದ್ಧಿ ಎನ್ನುವ ಪದದ ಅರ್ಥವೇ ತಿಳಿದಿಲ್ಲ. ಹಾಗಾಗಿ ತಾಲೂಕನ್ನು ಮರೆತಿದ್ದಾರೆ. ಆದ್ದರಿಂದ ಬಿಜೆಪಿ ಕಾರ್ಯಕರ್ತರು ಸ್ಥಗಿತಗೊಂಡಿರುವ ಆಡಳಿತ ಯಂತ್ರವನ್ನು ಚಾಲನೆ ತರುವ ಕೆಲಸಕ್ಕೆ ಮುಂದಾಗಬೇಕಿದೆ ಎಂದರು.

ಇದನ್ನೂ ಓದಿ: Cyber Crime: ವಾಟ್ಸ್ಆ್ಯಪ್‌ ಗ್ರೂಪ್‌ ಮೆಸೇಜ್‌ ಓಪನ್‌ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಾಪಾರಿ

ಈಗಾಗಲೇ ಮಳೆಗಾಲ ಪ್ರಾರಂಭಗೊಂಡಿದೆ. ರಸಗೊಬ್ಬರ, ಬಿತ್ತನೆ ಬೀಜ ಸಾಕಷ್ಟು ದಾಸ್ತಾನು ಇಲ್ಲದ ಕಾರಣ ರೈತರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗುವ ಸಂದರ್ಭ ಎದುರಾಗಿದೆ. ಅಲ್ಲದೇ ರೈತ ಪರಿಕರಗಳ ದರ ದುಪ್ಪಟ್ಟಾಗಿದೆ. ಈ ಬಗ್ಗೆ ಯಾವುದೇ ಸಭೆ ನಡೆದಿಲ್ಲ. ಬರಿಯ ಚುನಾವಣೆಗಷ್ಟೇ ಸೀಮಿತವಾಗಿರುವ ಸಚಿವರು, ವರ್ಷ ಕಳೆದರೂ ಒಂದೇ ಒಂದು ಕೆಡಿಪಿ ಮತ್ತು ಅಧಿಕಾರಿಗಳ ಸಭೆಗೆ ಭಾಗವಹಿಸಿಲ್ಲ. ಈ ಕಾರಣ ರೈತರು ಮತ್ತು ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಅವರಿಂದ ಹೇಗೆ ಸಾಧ್ಯವಾಗುತ್ತದೆ ಎಂದು ಆರೋಪಿಸಿದ ಅವರು, ಕೂಡಲೇ ಸಚಿವರು ಅಧಿಕಾರಿಗಳ ಸಭೆ ನಡೆಸಬೇಕು ಮತ್ತು ತಾಲೂಕಿನ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿ, ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಸಚಿವರು ವರ್ಷದಿಂದ ಅಭಿವೃದ್ಧಿ ಅನುದಾನದ ಹಣವನ್ನು ತರದೇ ಕಾಲಹರಣ ಮಾಡಿದ್ದಾರೆ. ಕುಮಾರ್ ಬಂಗಾರಪ್ಪ ಅವರ ಅವಧಿಯಲ್ಲಿ ಬಿಡುಗಡೆಯಾದ ಅನುದಾನದ ಹಣದಲ್ಲಿ ನಿರ್ಮಾಣವಾಗುತ್ತಿರುವ ಈಡಿಗ ಸಮುದಾಯ ಭವನ, ನೌಕರರ ಭವನ, ಕನ್ನಡ ಸಾಹಿತ್ಯ ಪರಿಷತ್ ಭವನ ಸೇರಿದಂತೆ ವಿವಿಧ ಸಮುದಾಯಗಳ ಭವನಗಳಿಗೆ ಹಣದ ಕೊರತೆ ಎದುರಾಗಿ ಕಾಮಗಾರಿ ಕುಂಠಿತಗೊಂಡಿವೆ. ಆದ್ದರಿಂದ ಸರ್ಕಾರದಿಂದ ಹೆಚ್ಚಿನ ಹಣ ಬಿಡುಗಡೆಗೊಳಿಸಿ ತಕ್ಷಣ ಪೂರ್ಣಗೊಳಿಸಿ ಸಾರ್ವನಿಕರ ಸೇವೆಗೆ ಅನುವು ಮಾಡಿಕೊಡುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ನೈರುತ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾದ ಡಾ. ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ಎಲ್. ಭೋಜೇಗೌಡ ಅವರ ಗೆಲುವಿಗೆ ಸಹಕರಿಸಿದ ಪ್ರಜ್ಞಾವಂತ ಮತದಾರರಿಗೆ ಕೃತಜ್ಞತೆಗಳನ್ನು ಅರ್ಪಿಸಿದ ಅವರು, ಡಾ.ಧನಂಜಯ ಸರ್ಜಿ, ಎಸ್‌.ಎಲ್. ಭೋಜೇಗೌಡ ಮತ್ತು ವಿಧಾನ ಪರಿಷತ್‍ಗೆ ಅವಿರೋಧವಾಗಿ ಆಯ್ಕೆಯಾದ ಸಿ.ಟಿ. ರವಿ, ಎನ್. ರವಿಕುಮಾರ್, ಎಂ.ಜಿ. ಮುಳೆ ಅವರಿಗೆ ಪಕ್ಷದ ಪರವಾಗಿ ಅಭಿನಂದನೆ ಸಲ್ಲಿಸಿದರು.

ಇದನ್ನೂ ಓದಿ: Money Guide: ಪಿಎಫ್‌ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇಲ್ಲಿದೆ ಸಂಪೂರ್ಣ ಮಾಹಿತಿ

ಈ ವೇಳೆ ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕಡಸೂರು, ಮುಖಂಡರಾದ ಪ್ರಕಾಶ ಅಗಸನಹಳ್ಳಿ, ದೇವೇಂದ್ರಪ್ಪ ಚನ್ನಾಪುರ, ಎಂ.ಡಿ. ಉಮೇಶ, ಕೊಟ್ರೇಶಸ್ವಾಮಿ ಆನವಟ್ಟಿ, ಓಂಕಾರಪ್ಪ ತತ್ತೂರು, ಗುರುಮೂರ್ತಿ ಹಿರೇಶಕುನ, ಹರೀಶ್, ವಿಶ್ವನಾಥ, ವಿನಯ್ ಗುತ್ತೇರ್, ಟೀಕಪ್ಪ ಕೊಡಕಣಿ, ಬಸವರಾಜ ಕೊಡಕಣಿ, ಜಾನಕಪ್ಪ ಒಡೆಯರ್ ಯಲಸಿ, ಅಶೋಕ್ ಶೇಟ್, ಡಿ. ಶಿವಯೋಗಿ ಸೇರಿದಂತೆ ಇತರರು ಇದ್ದರು.

Continue Reading

ಶಿವಮೊಗ್ಗ

Shivamogga News: ನೈರುತ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಭರ್ಜರಿ ಗೆಲುವು; ರಿಪ್ಪನ್‌ಪೇಟೆಯಲ್ಲಿ ಸಂಭ್ರಮಾಚರಣೆ

Shivamogga News: ವಿಧಾನ ಪರಿಷತ್‌ನ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿಗಳಾದ ಎಸ್‌.ಎಲ್‌. ಭೋಜೇಗೌಡ, ಡಾ. ಧನಂಜಯ ಸರ್ಜಿ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಿಪ್ಪನ್‌ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಶುಕ್ರವಾರ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

VISTARANEWS.COM


on

Alliance Candidates Win in MLC South West Constituency Celebration at Ripponpet
Koo

ರಿಪ್ಪನ್‌ಪೇಟೆ: ವಿಧಾನ ಪರಿಷತ್‌ನ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿಗಳಾದ ಎಸ್‌. ಎಲ್‌. ಭೋಜೇಗೌಡ, ಡಾ. ಧನಂಜಯ ಸರ್ಜಿ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ ಶುಕ್ರವಾರ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ (Shivamogga News) ನಡೆಸಿದರು.

ಇದನ್ನೂ ಓದಿ: Pesticides in Spices: MDH, Everest ಬೆನ್ನಲ್ಲೇ ರಾಜ್ಯದ ಮಸಾಲೆ ಪದಾರ್ಥಗಳಿಗೂ ತಟ್ಟಿದ ಬ್ಯಾನ್‌ ಬಿಸಿ

ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್‌.ಎಲ್‌.ಭೋಜೇಗೌಡ ಹಾಗೂ ನೈರುತ್ಯ ಪದವೀಧರರ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ ಅವರು ಭರ್ಜರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್ ಮಾತನಾಡಿದರು.

ಇದನ್ನೂ ಓದಿ: Karnataka Rain : ಮಳೆ ಶುರುವಾದರೆ ಸಾಕು ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ!

ಈ ವೇಳೆ ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರುಗಳಾದ ಎನ್. ಸತೀಶ್, ಎಂ.ಬಿ.‌ ಮಂಜುನಾಥ್, ಸುರೇಶ್ ಸಿಂಗ್, ಸೋಮಶೇಖರ್ ದೂನ, ಪಿ. ರಮೇಶ್, ರಾಮಚಂದ್ರ, ಸುಧೀರ್ ಪಿ., ಮುರುಳಿ ಕೆರೆಹಳ್ಳಿ, ಈಶ್ವರ್ ಮಳಕೊಪ್ಪ, ಮಹೇಶ್ ಮಾನಿಕೆರೆ, ಮಂಜುಳಾ ಕೇತರ್ಜಿರಾವ್‌, ದೀಪಾ ಸುಧೀರ್‌, ಪದ್ಮಾ ಸುರೇಶ್, ಲೀಲಾಶಂಕರ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading
Advertisement
Chandan Shetty Dhruva Sarja Talk With Niveditha Gowda
ಸ್ಯಾಂಡಲ್ ವುಡ್10 mins ago

Chandan Shetty: ಚಂದನ್-ನಿವೇದಿತಾ ಸಂಬಂಧ ಸರಿ ಮಾಡ್ತಾರಾ ಧ್ರುವ ಸರ್ಜಾ? ಪ್ರಥಮ್ ಕೊಟ್ಟಿದ್ದಾರೆ ಕ್ಲೂ!

Electric shock
ಬೆಂಗಳೂರು11 mins ago

Electric shock : ಫ್ಯಾನ್‌ ಸ್ವಿಚ್‌ ಆನ್‌ ಮಾಡುವಾಗ ಕರೆಂಟ್‌ ಶಾಕ್‌; ವಿದ್ಯುತ್‌ ಕಂಬದಲ್ಲಿ ನೇತಾಡಿದ ಲೈನ್‌ಮ್ಯಾನ್‌ ಡೆಡ್‌ ಬಾಡಿ

Modi 3.0 Cabinet
Lok Sabha Election 202419 mins ago

Modi 3.0 Cabinet: ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಯಾರಿಗೆಲ್ಲ ಸಚಿವ ಸ್ಥಾನ? ಇವರೇ ನೋಡಿ ಸಂಭಾವ್ಯ ಮಿನಿಸ್ಟರ್‌ಗಳು

Kannada New Movie Ramesh Suresh Movie June 21st release
ಸ್ಯಾಂಡಲ್ ವುಡ್47 mins ago

Kannada New Movie: ʻರಮೇಶ್ ಸುರೇಶ್‌ʼ ಸಿನಿಮಾದಲ್ಲಿ ಇಬ್ಬರು ನಿರ್ದೇಶಕರು, ಇಬ್ಬರು ನಾಯಕರು ; ಜೂನ್ 21ರಂದು ತೆರೆಗೆ!

Road Accident in shivamogga
ಕ್ರೈಂ52 mins ago

Road Accident : ಮುಖಾಮುಖಿಯಾಗಿ ಬಂದ ಕಾರುಗಳು ಪೀಸ್‌ ಪೀಸ್‌; ಚಾಲಕ ಸ್ಪಾಟ್‌ ಡೆತ್‌

Rahul Gandhi
ದೇಶ55 mins ago

Rahul Gandhi: ಷೇರುಪೇಟೆಯಲ್ಲಿ ಭಾರಿ ಹಗರಣವಾಗಿದೆ ಎಂದಿದ್ದ ರಾಹುಲ್ ಗಾಂಧಿಗೆ ಐದೇ ದಿನದಲ್ಲಿ 25 ಲಕ್ಷ ರೂ. ಲಾಭ!

Raja Rani Show started Today onwards
ಕಿರುತೆರೆ1 hour ago

Raja Rani Show: ಇಂದಿನಿಂದ ʻರಾಜ ರಾಣಿ ರೀಲೋಡೆಡ್ʼ ರಿಯಾಲಿಟಿ ಶೋ ಶುರು!

Valmiki Corporation Scam
ಕರ್ನಾಟಕ1 hour ago

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದಲ್ಲಿ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೆಸರು; ಡಾ. ಜಿ.ಪರಮೇಶ್ವರ್‌ ಹೇಳಿದ್ದೇನು?

World Brain Tumor Day
ಆರೋಗ್ಯ2 hours ago

World Brain Tumor Day: ಇಂದು ವಿಶ್ವ ಬ್ರೇನ್‌ ಟ್ಯೂಮರ್‌ ದಿನ; ಮೊದಲೇ ಎಚ್ಚೆತ್ತುಕೊಂಡರೆ ಈ ಕಾಯಿಲೆಯಿಂದ ಪಾರಾಗಬಹುದು

love Torture Man uploads private photo of young woman on social media
ಕೊಡಗು2 hours ago

Love‌ Torture : ಪ್ರೀತ್ಸೆ ಅಂತ ಪ್ರಾಣ ತಿಂದ; ಒಪ್ಪದೇ ಇದ್ದಾಗ ಯುವತಿಯ ಖಾಸಗಿ ಫೋಟೋ ಹರಿಬಿಟ್ಟ ಪಾಗಲ್‌ ಪ್ರೇಮಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ18 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ19 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌