ಸೆಕ್ಸ್‌ ವರ್ಕರ್‌ಗೆ ಮಾಡಿದ ಮೆಸೇಜ್‌ ಗೊತ್ತಾಗಿ ಪತ್ನಿ ವಿಚ್ಛೇದನ; ಆ್ಯಪಲ್‌ ಕಂಪನಿ ವಿರುದ್ಧ ಕೇಸ್‌ ಜಡಿದ ಪತಿ! - Vistara News

ಪ್ರಮುಖ ಸುದ್ದಿ

ಸೆಕ್ಸ್‌ ವರ್ಕರ್‌ಗೆ ಮಾಡಿದ ಮೆಸೇಜ್‌ ಗೊತ್ತಾಗಿ ಪತ್ನಿ ವಿಚ್ಛೇದನ; ಆ್ಯಪಲ್‌ ಕಂಪನಿ ವಿರುದ್ಧ ಕೇಸ್‌ ಜಡಿದ ಪತಿ!

ಲಂಡನ್‌ ಉದ್ಯಮಿಯೊಬ್ಬ ಆ್ಯಪಲ್‌ ಕಂಪನಿ ವಿರುದ್ಧ ಮೊಕದ್ದಮೆ ಹೂಡಿದ್ದಾನೆ. ಉದ್ಯಮಿಯ ಮನೆಯಲ್ಲಿರುವ ಸದಸ್ಯರ ಬಳಕೆಗಾಗಿ ಐಮ್ಯಾಕ್‌ ಇದೆ. ಐಮ್ಯಾಕ್‌ನಲ್ಲಿ ಐಮೆಸೇಜ್‌ ಮೂಲಕ ಹಲವು ಸೆಕ್ಸ್‌ ವರ್ಕರ್‌ಗಳ ಜತೆ ರೊಮ್ಯಾಂಟಿಕ್‌ ಆಗಿ ಚಾಟ್‌ (Sexting) ಮಾಡಿದ್ದಾನೆ. ಈ ಮೆಸೇಜ್‌ಗಳನ್ನು ಡಿಲೀಟ್‌ ಮಾಡಿದರೂ ಪತ್ನಿಗೆ ಕಾಣಿಸಿವೆ. ಇದರಿಂದಾಗಿ ಕಂಪನಿ ವಿರುದ್ಧವೇ ಉದ್ಯಮಿಯು ಮೊಕದ್ದಮೆ ಹೂಡಿದ್ದಾನೆ.

VISTARANEWS.COM


on

Sex Worker
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್:‌ ಸುರಕ್ಷತೆಯ ದೃಷ್ಟಿಯಿಂದ ಆ್ಯಪಲ್‌ ಕಂಪನಿಯ ಉತ್ಪನ್ನಗಳನ್ನು ಜನ ಹೆಚ್ಚಿನ ದುಡ್ಡು ಕೊಟ್ಟು ಖರೀದಿಸುತ್ತಾರೆ. ಐಫೋನ್‌ ಹಾಗೂ ಐಮ್ಯಾಕ್‌ಗಳನ್ನು ಇದೇ ಕಾರಣಕ್ಕಾಗಿ ಖರೀದಿಸುತ್ತಾರೆ. ಆದರೆ, ಲಂಡನ್‌ನಲ್ಲಿ ವ್ಯಕ್ತಿಯೊಬ್ಬ ಸುರಕ್ಷತೆಗೆ ಧಕ್ಕೆ ಬಂದ ಹಿನ್ನೆಲೆಯಲ್ಲಿ ಆ್ಯಪಲ್‌ ಕಂಪನಿ (Apple Company) ವಿರುದ್ಧವೇ ಮೊಕದ್ದಮೆ ಹೂಡಿದ್ದಾನೆ. ವ್ಯಕ್ತಿಯೊಬ್ಬ ಐಮ್ಯಾಕ್‌ನಲ್ಲಿ ಲೈಂಗಿಕ ಕಾರ್ಯಕರ್ತೆ (Sex Worker) ಜತೆ ಚಾಟ್‌ ಮಾಡಿದ್ದು, ಆ ಮೆಸೇಜ್‌ಗಳನ್ನು ಬಳಿಕ ಡಿಲೀಟ್‌ ಮಾಡಿದ್ದಾನೆ. ಆದರೆ, ಪರ್ಮನೆಂಟ್‌ ಆದ ಮೆಸೇಜ್‌ಗಳು ಹೆಂಡತಿಗೆ ಕಾಣಿಸಿದ ಕಾರಣ ವ್ಯಕ್ತಿಯು ಆ್ಯಪಲ್‌ ಕಂಪನಿ ವಿರುದ್ಧ ಕೇಸ್‌ ಹಾಕಿದ್ದಾನೆ ಎಂದು ತಿಳಿದುಬಂದಿದೆ.

ಹೌದು, ಲಂಡನ್‌ ಉದ್ಯಮಿಯೊಬ್ಬ ಆ್ಯಪಲ್‌ ಕಂಪನಿ ವಿರುದ್ಧ ಮೊಕದ್ದಮೆ ಹೂಡಿದ್ದಾನೆ. ಉದ್ಯಮಿಯ ಮನೆಯಲ್ಲಿರುವ ಸದಸ್ಯರ ಬಳಕೆಗಾಗಿ ಐಮ್ಯಾಕ್‌ ಇದೆ. ಐಮ್ಯಾಕ್‌ನಲ್ಲಿ ಐಮೆಸೇಜ್‌ ಮೂಲಕ ಹಲವು ಸೆಕ್ಸ್‌ ವರ್ಕರ್‌ಗಳ ಜತೆ ರೊಮ್ಯಾಂಟಿಕ್‌ ಆಗಿ ಚಾಟ್‌ (Sexting) ಮಾಡಿದ್ದಾನೆ. ಐಮ್ಯಾಕ್‌ನಲ್ಲಿ ಕಳುಹಿಸಿದ ಮೆಸೇಜ್‌ಗಳನ್ನು ಆತ ತನ್ನ ಐಫೋನ್‌ನಲ್ಲಿ ಡಿಲೀಟ್‌ ಮಾಡಿದ್ದಾನೆ. ಪರ್ಮನೆಂಟ್‌ ಆಗಿ ಮೆಸೇಜ್‌ಗಳನ್ನು ಡಿಲೀಟ್‌ ಮಾಡಿದ್ದಾನೆ. ಆದರೂ, ಈ ಮೆಸೇಜ್‌ಗಳನ್ನು ಪತ್ನಿಯು ಪತ್ತೆಹಚ್ಚಿದ್ದಾರೆ. ಇದು ಉದ್ಯಮಿಯ ಪಿತ್ತ ನೆತ್ತಿಗೇರುವಂತೆ ಮಾಡಿದೆ.

Hiring to Apple

ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ

ಪತಿಯು ರೆಡ್‌ಲೈಟ್‌ ಏರಿಯಾದ ಲಲನೆಯರ ಜತೆ ‘ಸರಸ’ದ ಮೆಸೇಜ್‌ಗಳನ್ನು ಮಾಡಿರುವುದು ಪತ್ತೆ ಹಚ್ಚಿದ ಪತ್ನಿಯು ಈಗ ವಿಚ್ಛೇದನ ಅರ್ಜಿ ಹಾಕಿದ್ದಾರೆ. ಅಷ್ಟೇ ಅಲ್ಲ, ಸುಮಾರು 52 ಕೋಟಿ ರೂ. (50 ಲಕ್ಷ ಪೌಂಡ್ಸ್)‌ ಜೀವನಾಂಶ ಕೊಡಬೇಕು ಎಂದು ಕೋರ್ಟ್‌ ಮೊರೆಹೋಗಿದ್ದಾರೆ. ಇದು ಈಗ ಹೆಸರು ಹೇಳಲು ಇಚ್ಛಿಸದ ಉದ್ಯಮಿಗೆ ಪೇಚಾಟ ತಂದಿದೆ. ಹೆಂಡತಿ ಇದ್ದರೂ ಬೇರೆ ಹೆಣ್ಣುಮಕ್ಕಳ ಜತೆ ಚಾಟ್‌ ಮಾಡಿದ್ದರಿಂದ ಕುಟುಂಬಸ್ಥರು ಹಾಗೂ ಗೆಳೆಯರ ಎದುರು ಅವಮಾನ ಆಗಿದೆ. ಇದರ ಮಧ್ಯೆಯೇ ಪತ್ನಿಯು ವಿಚ್ಛೇದನಕ್ಕೆ ಅರ್ಜಿ ಹಾಕಿರುವುದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಆ್ಯಪಲ್‌ ವಿರುದ್ಧ ಕೇಸ್‌ ಏಕೆ?

ಐಮ್ಯಾಕ್‌ನಲ್ಲಿ ಮಾಡಿದ ಮೆಸೇಜ್‌ಗಳನ್ನು ಐಫೋನ್‌ನಲ್ಲಿ ಡಿಲೀಟ್‌ ಮಾಡಿದ್ದರಿಂದ ಉದ್ಯಮಿಯ ಪತ್ನಿಗೆ ಐಮ್ಯಾಕ್‌ನಲ್ಲಿ ಮಾಡಿದ ಮೆಸೇಜ್‌ಗಳು ಸಿಕ್ಕಿವೆ. ಹಾಗಾಗಿ, “ಲಿಂಕ್‌ ಆದ ಡಿವೈಸ್‌ಗಳ ಮೂಲಕ ಕಳುಹಿಸಿದ ಮೆಸೇಜ್‌ಗಳನ್ನು ಎಲ್ಲ ಕಡೆಯೂ ಡಿಲೀಟ್‌ ಮಾಡಬೇಕು ಎಂಬುದರ ಕುರಿತು ಆ್ಯಪಲ್‌ ಕಂಪನಿಯು ಗ್ರಾಹಕರಿಗೆ ಮಾಹಿತಿ ನೀಡಿಲ್ಲ. ಇದರಿಂದ ನಾನೀಗ ನನ್ನ ಪತ್ನಿ, ಅಪಾರ ಪ್ರಮಾಣದ ಹಣ ಕಳೆದುಕೊಳ್ಳುವಂತಾಗಿದೆ” ಎಂದು ಉದ್ಯಮಿಯು ಕೋರ್ಟ್‌ ಮೊರೆ ಹೋಗಿದ್ದಾನೆ.

ಇದನ್ನೂ ಓದಿ: Murder Case : ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಚಟ್ಟ ಕಟ್ಟಿದಳು ಹೆಂಡತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Shah Rukh Khan: ನಟ ಶಾರುಖ್ ಖಾನ್ ಬಗ್ಗೆ ಶಾಕಿಂಗ್ ಸುದ್ದಿ ಕೊಟ್ಟ ನಟ ಗೋವಿಂದ್ ನಾಮದೇವ್

Shah Rukh Khan ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಅವರೊಂದಿಗೆ ಹಿಟ್ ಚಿತ್ರಗಳನ್ನು ಮಾಡಿದ ಹಿರಿಯ ನಟ ಗೋವಿಂದ್ ನಾಮದೇವ್ ಅವರು ಇತ್ತೀಚಿಗೆ ನಡೆದ ಸಂದರ್ಶನವೊಂದರಲ್ಲಿ ಇಬ್ಬರು ಬಾಲಿವುಡ್ ಸೂಪರ್ ಸ್ಟಾರ್‌ಗಳೊಂದಿಗೆ ಕೆಲಸ ಮಾಡಿದ ಅನುಭವದ ಬಗ್ಗೆ ಮಾತನಾಡಿದ್ದಾರೆ. ತಮ್ಮ ಕೆಲಸದ ಬಗ್ಗೆ ತುಂಬಾ ನಿಷ್ಠೆ ಇರುವ ನಟ ಶಾರೂಕ್ ಖಾನ್ ರಾತ್ರಿಯಿಡೀ ಚಿತ್ರತಂಡದೊಂದಿಗೆ ಸೇರಿಕೊಂಡು ಮುಂಜಾನೆ 2 ಗಂಟೆಯವರೆಗೆ ಕೆಲಸ ಮಾಡುತ್ತಿದ್ದರು. ಅವರು ಮೂರೂವರೆ ಅಥವಾ ನಾಲ್ಕು ಗಂಟೆಗಳಿಗಿಂತ ಹೆಚ್ಚು ಕಾಲ ನಿದ್ರೆ ಮಾಡುತ್ತಿರಲಿಲ್ಲ.ಇನ್ನೂ ಧೂಮಪಾನದ ಚಟ ಕೂಡ ಇವರಿಗೆ ವಿಪರೀತವಿತ್ತು ಎಂದು ಹೇಳಿದ್ದಾರೆ.

VISTARANEWS.COM


on

Shah Rukh Khan
Koo

ಮುಂಬೈ : ಶಾರುಖ್ ಖಾನ್ (Shah Rukh Khan) ಬಾಲಿವುಡ್‌ನಲ್ಲಿ ಸೂಪರ್ ಸ್ಟಾರ್ ನಟರೆನಿಸಿಕೊಂಡಿದ್ದಾರೆ. ದೇಶ, ವಿದೇಶಗಳಲ್ಲಿ ಕೊಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಈ ನಟನ ಧೂಮಪಾನ ಚಟದ ಕುರಿತು ಹಿರಿಯ ನಟ ಗೋವಿಂದ್ ನಾಮದೇವ್ ಅವರು ಶಾಕಿಂಗ್ ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಅವರೊಂದಿಗೆ ಹಿಟ್ ಚಿತ್ರಗಳನ್ನು ಮಾಡಿದ ಹಿರಿಯ ನಟ ಗೋವಿಂದ್ ನಾಮದೇವ್ ಅವರು ಇತ್ತೀಚಿಗೆ ನಡೆದ ಸಂದರ್ಶನವೊಂದರಲ್ಲಿ ಇಬ್ಬರು ಬಾಲಿವುಡ್ ಸೂಪರ್ ಸ್ಟಾರ್‌ಗಳೊಂದಿಗೆ ಕೆಲಸ ಮಾಡಿದ ಅನುಭವದ ಬಗ್ಗೆ ಮಾತನಾಡಿದ್ದಾರೆ.

Shah Rukh Khan

2000ರಲ್ಲಿ ಬಿಡುಗಡೆಯಾದ “ಫಿರ್ ಭಿ ದಿಲ್ ಹೈ ಹಿಂದೂಸ್ತಾನಿ” ಚಿತ್ರದ ಚಿತ್ರೀಕರಣ ಸಮಯದಲ್ಲಿ ಶಾರುಖ್ ಖಾನ್ ಅವರ ಜೊತೆ ಕಳೆದ ದಿನಗಳನ್ನು ಅವರು ಮೆಲುಕು ಹಾಕಿದ್ದಾರೆ. “ಫಿರ್ ಭಿ ದಿಲ್ ಹೈ ಹಿಂದೂಸ್ತಾನಿ” ಚಿತ್ರವನ್ನು ಶಾರುಖ್ ಖಾನ್, ಅವರ ಸ್ನೇಹಿತೆ ನಟಿ ಜೂಹಿ ಚಾವ್ಲಾ ಮತ್ತು ಚಲನಚಿತ್ರ ನಿರ್ಮಾಪಕ ಅಜೀಜ್ ಮಿರ್ಜಾ ನಿರ್ಮಿಸಿದ್ದು, ಡ್ರೀಮ್ಜ್ ಅನ್ಲಿಮಿಟೆಡ್ ನಿರ್ಮಾಣ ಮಾಡಿದೆ.

Shah Rukh Khan

ನಟ ಶಾರುಖ್ ಖಾನ್ ಅವರು ಈ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾಗಿದ್ದರು. ಹಾಗಾಗಿ ಅವರು ದಿನವಿಡೀ ಕೆಲಸ ಮಾಡುತ್ತಿದ್ದರು, ರಾತ್ರಿಯಿಡೀ ಚಿತ್ರತಂಡದೊಂದಿಗೆ ಸೇರಿಕೊಂಡು ಮುಂಜಾನೆ 2 ಗಂಟೆಯವರೆಗೆ ಕೆಲಸ ಮಾಡುತ್ತಿದ್ದರು. ಅವರು ಸಮಾರಂಭವೊಂದರಲ್ಲಿ ಭಾಗವಹಿಸಲು ಚೆನ್ನೈಗೆ ಮುಂಜಾನೆ ವಿಮಾನದಲ್ಲಿ ತೆರಳಬೇಕಾಗಿತ್ತು, ನಂತರ ಹಿಂತಿರುಗಿ ಬಂದು ಮತ್ತೆ ಚಿತ್ರೀಕರಣವನ್ನು ಪುನರಾರಂಭಿಸಬೇಕಾಗಿತ್ತು. ಹಾಗಾಗಿ ಅವರು ಮೂರೂವರೆ ಅಥವಾ ನಾಲ್ಕು ಗಂಟೆಗಳಿಗಿಂತ ಹೆಚ್ಚು ಕಾಲ ನಿದ್ರೆ ಮಾಡುತ್ತಿರಲಿಲ್ಲ.

ಹಾಗಾಗಿ ಅವರು ಚಿಮಣಿಯಂತೆ ಧೂಮಪಾನ ಮಾಡುತ್ತಿದ್ದರು ಮತ್ತು ಕೆಲಸ ಮಾಡುತ್ತಲೇ ಇರುತ್ತಿದ್ದರು, ಮುಂದೆ ಏನು ಮಾಡಬೇಕೆಂದು ಯೋಚಿಸುತ್ತಲೇ ಇರುತ್ತಾರೆ. ಸೂಪರ್‌ ಸ್ಟಾರ್‌ಗಳಲ್ಲಿ ಸಾಮಾನ್ಯವಾಗಿ ಈ ಮನೋಭಾವ ಇರುತ್ತದೆ ಎಂದು ಗೋವಿಂದ್ ಅವರು ಶಾರುಖ್ ಖಾನ್ ಬಗ್ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಈ ಆರು ಯೂಟ್ಯೂಬರ್‌ಗಳು ಜೈಲು ಪಾಲಾಗಲು ಶಾರುಖ್‌ ಖಾನ್‌ ಕಾರಣವಂತೆ!

ಆದರೆ ಬೋನಿ ಕಪೂರ್ ನಿರ್ಮಿಸಿದ ಆಕ್ಷನ್ ಚಿತ್ರ ‘ವಾಂಟೆಡ್’ ನಲ್ಲಿ ಸಲ್ಮಾನ್ ಖಾನ್ ಅವರೊಂದಿಗೆ ಕೆಲಸ ಮಾಡಿದ ಅನುಭವದ ಬಗ್ಗೆ ಮಾತನಾಡಿದ ಗೋವಿಂದ್ ಅವರು, ನಟ ಸಲ್ಮಾನ್ ಖಾನ್ ಅವರು ನಟ ಶಾರುಖ್ ಖಾನ್ ಅವರಿಗೆ ವಿರುದ್ಧವಾಗಿದ್ದರು. ಯಾಕೆಂದರೆ ಅವರು ಹೆಚ್ಚು ಯಾರೊಂದಿಗೂ ಮಾತನಾಡುತ್ತಿರಲಿಲ್ಲ. ಇತರರೊಂದಿಗೆ ಸಂವಹನ ನಡೆಸುವ ವಿಷಯದಲ್ಲಿ ಅವರು ಶಾರುಖ್ ಖಾನ್‌ಗೆ ವಿರುದ್ಧವಾಗಿದ್ದಾರೆ” ಎಂದು ಅವರು ಹೇಳಿದರು.

Continue Reading

ಪ್ರಮುಖ ಸುದ್ದಿ

Gold Rate Today: ತುಸು ಏರಿಕೆ ಕಂಡ ಚಿನ್ನದ ಬೆಲೆ; ಇಷ್ಟಿದೆ ಇಂದಿನ ದರ

Gold Rate Today: ಬೆಂಗಳೂರಿನಲ್ಲಿ ಶನಿವಾರ (ಜೂನ್‌ 29) 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 6,616 ರೂ. ಆದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು 7,217 ರೂ. ಆಗಿದೆ. ಒಂದು ರೂಪಾಯಿ ಏರಿಕೆಯಾಗಿರುವುದು ಗ್ರಾಹಕರಿಗೆ ಅಷ್ಟೇನೂ ಹೊರೆಯಾಗಿಲ್ಲ. ಇನ್ನು ಒಂದು ಗ್ರಾಂ ಬೆಳ್ಳಿಯ ಬೆಲೆಯು 89.40 ರೂಪಾಯಿ ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಚಿನ್ನದ ಬೆಲೆಯು (Gold Rate Today) ಶನಿವಾರ (ಜೂನ್‌ 29) ತುಸು ಏರಿಕೆ ಕಂಡಿದೆ. ಸಿಲಿಕಾನ್‌ ಸಿಟಿಯಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 1 ರೂ. ಏರಿಕೆಯಾದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲೂ ಇಷ್ಟೇ ಏರಿಕೆಯಾಗಿದೆ. ಇದರಿಂದಾಗಿ ವೀಕೆಂಡ್‌ನಲ್ಲಿ ಚಿನ್ನದ ಖರೀದಿಸಲು ಮುಂದಾದವರಿಗೆ ಅಷ್ಟೇನೂ ಹೊರೆಯಾಗುವುದಿಲ್ಲ.

ಇದರೊಂದಿಗೆ ನಗರದಲ್ಲಿ ಶನಿವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 6,616 ರೂ. ಆದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು 7,217 ರೂ. ಆಗಿದೆ. ರಾಜ್ಯ ರಾಜಧಾನಿಯಲ್ಲಿ ಶುಕ್ರವಾರ (ಜೂನ್‌ 28) ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿತ್ತು. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 40 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 43 ರೂ. ಏರಿಕೆ ಏರಿಕೆಯಾಗಿತ್ತು. ಇನ್ನು ಬೆಳ್ಳಿಯ ಬೆಲೆಯಲ್ಲಿ ತುಸು ಅಂದರೆ 0.10 ರೂ. ಇಳಿಕೆಯಾಗಿದ್ದು, ಒಂದು ಗ್ರಾಂ ಬೆಳ್ಳಿಗೆ 89.40 ರೂ. ಇದೆ.

Gold Rate Today

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Attica Babu: ಕದ್ದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ

Continue Reading

ಕ್ರೀಡೆ

IND vs SA Final: ವಿಶ್ವಕಪ್​ ಗೆಲ್ಲಲು ಕೊಹ್ಲಿ, ರೋಹಿತ್​, ದ್ರಾವಿಡ್​ಗೆ ಇದು ಕೊನೆಯ ಅವಕಾಶ!

IND vs SA Final: ರೋಹಿತ್‌ ಶರ್ಮ, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌, ಹಾರ್ದಿಕ್‌ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಇರುವ ಭಾರತ ತಂಡವನ್ನು ಬಲಿಷ್ಠ ಎನ್ನಲೇಬೇಕು. ಆದರೆ, ಭಾರತ ಪೂರ್ಣ ಎಚ್ಚರದಿಂದಲೇ ಫೈನಲ್​ ಆಡಬೇಕು.

VISTARANEWS.COM


on

IND vs SA Final
Koo

ಬಾರ್ಬಡೋಸ್​: 10 ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯಲ್ಲಿ ಫೈನಲ್​(IND vs SA Final) ಪ್ರವೇಶಿಸಿರುವ ಭಾರತ ತಂಡ ಫೈನಲ್​ ಪಂದ್ಯ ಆಡಲು ಸಜ್ಜಾಗಿ ನಿಂತಿದೆ. ಬ್ರಿಜ್‌ಟೌನ್‌ನ(Bridgetown) “ಕೆನ್ಸಿಂಗ್ಟನ್‌ ಓವಲ್‌’(Kensington Oval) ಮೈದಾನದಲ್ಲಿ ಇಂದು ನಡೆಯುವ ಫೈನಲ್​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ(South Africa vs India Final) ಸವಾಲು ಎದುರಿಸಲಿದೆ. ರೋಹಿತ್ ಶರ್ಮ ಮತ್ತು ವಿರಾಟ್​ ಕೊಹ್ಲಿಗೆ ಇದು ಬಹುತೇಕ ಕೊನೆಯ ಟಿ20 ವಿಶ್ವಕಪ್​ ಟೂರ್ನಿಯಾಗಿದೆ. ತಮ್ಮ ಅಂತಿಮ ಪ್ರಯತ್ನದಲ್ಲಾದರೂ ಕಪ್​ ಗೆದ್ದು ಸ್ಮರಣೀಯ ವಿದಾಯ ಸಿಗುವಂತಾಗಲಿ ಎಂದು ಉಭಯ ಆಟಗಾರರ ಅಭಿಮಾನಿಗಳ ಹಾರೈಕೆಯಾಗಿದೆ.

ರನ್‌ ಮಷಿನ್‌ ಖ್ಯಾತಿಯ ವಿರಾಟ್​ ಕೊಹ್ಲಿ ಈ ಬಾರಿಯ ವಿಶ್ವಕಪ್​ನಲ್ಲಿ ನಿರೀಕ್ಷಿತ ಪ್ರದರ್ಶನ ತೋರಿಲ್ಲ. ಆಡಿದ 7 ಪಂದ್ಯಗಳಲ್ಲಿ ವಿರಾಟ್‌ ಗಳಿಸಿರುವುದು ಕೇವಲ 75 ರನ್‌. ಪ್ರತಿ ಐಸಿಸಿ ಟೂರ್ನಿಯಲ್ಲಿ ಅಬ್ಬರಿಸುವ ಕೊಹ್ಲಿ ಇಷ್ಟೊಂದು ಕಳಪೆ ಪ್ರದರ್ಶನ ತೋರಿದ್ದು ಇದೇ ಮೊದಲು. ಸ್ವತಃ ಕೊಹ್ಲಿ ಕೂಡ ತಮ್ಮ ಬ್ಯಾಟಿಂಗ್​ ಬಗ್ಗೆ ಚಿಂತಿಸಿ ಕಣ್ಣೀರು ಕೂಡ ಹಾಕಿದ್ದಾರೆ. 35 ವರ್ಷದ ವಿರಾಟ್ ಕೊಹ್ಲಿ ಮತ್ತು 36 ವರ್ಷದ ರೋಹಿತ್​ ಶರ್ಮ ಪಾಲಿಗೆ ಬಹುತೇಕ ಇದೇ ಕೊನೆಯ ಟಿ20 ವಿಶ್ವಕಪ್ ಆಗುವ ಸಾಧ್ಯತೆಯಿದೆ. ಹೀಗಾಗಿ ವಿರಾಟ್ ಮತ್ತು ರೋಹಿತ್​ ತಮ್ಮ ಪಾಲಿನ ಬಹುತೇಕ ಕೊನೆಯ ವಿಶ್ವಕಪ್ ಫೈನಲ್‌ನಲ್ಲಿ ಸ್ಮರಣೀಯ ಇನಿಂಗ್ಸ್ ಆಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಬೇಕಿದೆ.

ದ್ರಾವಿಡ್​ಗೆ ಸಿಗಲಿ ಸ್ಮರಣೀಯ ಉಡುಗೊರೆ

ರಾಹುಲ್​ ದ್ರಾವಿಡ್​ ಅವರಿಗೆ ಕೋಚ್​ ಆಗಿ ಇದು ಕೊನೆಯ ಟೂರ್ನಿಯಾಗಿದೆ. ಈ ಟೂರ್ನಿ ಮುಕ್ತಾಯದ ಬಳಿಕ ಅವರು ಕೋಚಿಂಗ್​ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. 2022ರಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ರಾಹುಲ್​ ದ್ರಾವಿಡ್​ಗೆ ಕೋಚ್​ ಆಗಿ ಮೊದಲ ಸವಾಲಾಗಿತ್ತು. ಇಲ್ಲಿ ಕಪ್​ ಗೆಲ್ಲಲು ತಂಡ ವಿಫಲವಾಗಿತ್ತು. ಬಳಿಕ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ನಲ್ಲಿಯೂ ಭಾರತ ಫೈನಲ್​ನಲ್ಲಿ ಸೋಲು ಕಂಡಿತ್ತು. ಇದೀಗ ನಿರ್ಗಮನದ ಹಂತದಲ್ಲಿರುವ ದ್ರಾವಿಡ್​ ತಮ್ಮ ಕೊನೆಯ ಮಾರ್ಗದರ್ಶನದಲ್ಲಿ ಭಾರತ ತಂಡ ಕಪ್​ ಗೆದ್ದರೆ ಅವರಿಗೂ ಕೂಡ ವಿಶ್ವಕಪ್​ ಗೆದ್ದ ಸಂತಸವಿರುತ್ತದೆ. ಜತೆಗೆ ಸ್ಮರಣೀಯ ಉಡುಗೊರೆಯೊಂದು ಲಭಿಸಲಿದೆ. ಇದು ನೆರವೇರಲಿ ಎನ್ನುವುದು ಕೊಟ್ಯಂತರ ಅಭಿಮಾನಿಗಳ ಹಾರೈಕೆಯಾಗಿದೆ.

ಇದನ್ನೂ ಓದಿ IND vs SA Final: ಭಾರತ ತಂಡ ವಿಶ್ವಕಪ್​ ಗೆಲ್ಲಲಿ; ಪ್ರಯಾಗ್ ರಾಜ್​ನಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ

ಭಾರತ ಬಲಿಷ್ಠ ಆದರೆ ಎಚ್ಚರ ಅಗತ್ಯ


ರೋಹಿತ್‌ ಶರ್ಮ, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌, ಹಾರ್ದಿಕ್‌ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಇರುವ ಭಾರತ ತಂಡವನ್ನು ಬಲಿಷ್ಠ ಎನ್ನಲೇಬೇಕು. ಆದರೆ, ಭಾರತ ಪೂರ್ಣ ಎಚ್ಚರದಿಂದಲೇ ಫೈನಲ್​ ಆಡಬೇಕು. ಎದುರಾಳಿಯನ್ನು ಒಮ್ಮೆಯೂ ಕಡೆಗಣಿಸುವುದು ಸಾಧ್ಯವೇ ಇಲ್ಲ. ಯಾರು ಯಾರನ್ನು ಕೆಡವಿ ಬೀಳಿಸುತ್ತಾರೆ ಎಂಬುದು ಟಿ20 ಮಾದರಿಯಲ್ಲಿ ಅಂದಾಜಿಸುವುದಕ್ಕೆ ಕಷ್ಟ ಸಾಧ್ಯ. ಕೆಲವೇ ಓವರ್‌ಗಳಲ್ಲಿ ಪಂದ್ಯದ ಚಿತ್ರಣವೇ ಬದಲಾಗುವುದು ಟಿ20 ಪಂದ್ಯಗಳ ಶಕ್ತಿ.

Continue Reading

ಕರ್ನಾಟಕ

Law And Order: ಗದಗ, ರಾಯಚೂರಿನಲ್ಲಿ ಪೊಲೀಸರ ಮೇಲೆಯೇ ಹಲ್ಲೆ; ಕಾನೂನು ಸುವ್ಯವಸ್ಥೆ ಗತಿ ಏನು?

Law And Order: ಗದಗ ಹಾಗೂ ರಾಯಚೂರಿನಲ್ಲಿ ದುಷ್ಕರ್ಮಿಗಳು ಪೊಲೀಸರ (Police) ಮೇಲೆಯೇ ಹಲ್ಲೆ ನಡೆಸಿರುವುದು ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯು ಸಂಪೂರ್ಣವಾಗಿ ಹದಗೆಟ್ಟಿದೆ ಎಂಬುದಕ್ಕೆ ನಿದರ್ಶನ ಎಂಬಂತಾಗಿದೆ. ಗದಗ ನಗರದ ಬೆಟಗೇರಿ ರೈಲ್ವೆ ಸೇತುವೆ ಬಳಿ ಕೆಲ ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಪೊಲೀಸರನ್ನು ಅಡ್ಡಗಟ್ಟಿ ದಾಳಿ ನಡೆಸಿದ್ದಾರೆ. ರಾಯಚೂರಿನಲ್ಲೂ ಪೊಲೀಸ್‌ ಸಿಬ್ಬಂದಿ ಮೇಲೆ ದಾಳಿ ನಡೆಸಲಾಗಿದೆ.

VISTARANEWS.COM


on

Law And Order
Koo

ಗದಗ/ರಾಯಚೂರು: ಧಾರವಾಡದಲ್ಲಿ ನೇಹಾ ಹಿರೇಮಠ (Neha Hiremath) ಎಂಬ ಯುವತಿಯ ಕೊಲೆ ಸೇರಿ ಹಲವು ಕೊಲೆ ಪ್ರಕರಣಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ (Law And Order) ಬಗ್ಗೆ ಪ್ರಶ್ನೆಗಳು ಹುಟ್ಟಿಸುವಂತೆ ಮಾಡಿವೆ. ಇದರ ಬೆನ್ನಲ್ಲೇ, ಗದಗ ಹಾಗೂ ರಾಯಚೂರಿನಲ್ಲಿ ದುಷ್ಕರ್ಮಿಗಳು ಪೊಲೀಸರ (Police) ಮೇಲೆಯೇ ಹಲ್ಲೆ ನಡೆಸಿರುವುದು ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯು ಸಂಪೂರ್ಣವಾಗಿ ಹದಗೆಟ್ಟಿದೆ ಎಂಬುದಕ್ಕೆ ನಿದರ್ಶನ ಎಂಬಂತಾಗಿದೆ.

ಗದಗದಲ್ಲಿ ನಡೆದಿದ್ದೇನು?

ಗದಗ ನಗರದ ಬೆಟಗೇರಿ ರೈಲ್ವೆ ಸೇತುವೆ ಬಳಿ ಕೆಲ ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಪೊಲೀಸರನ್ನು ಅಡ್ಡಗಟ್ಟಿ ದಾಳಿ ನಡೆಸಿದ್ದಾರೆ. ಪೊಲೀಸರ ಕಾರಿನ ಗಾಜು ಒಡೆದು, ಪೊಲೀಸರ ಮೇಲೆಯೇ ಹಲ್ಲೆ ನಡೆಸಿ, ಕಾರಿನಲ್ಲಿದ್ದ ಆರೋಪಿಯನ್ನು ದುಷ್ಕರ್ಮಿಗಳು ಕರೆದುಕೊಂಡು ಹೋಗಿದ್ದಾರೆ. ಗಂಗಾವತಿ ಪೊಲೀಸರು ಆರೋಪಿಯನ್ನು ಕರೆದುಕೊಂಡು ಹೋಗುವಾಗ ಹಲ್ಲೆ ನಡೆಸಲಾಗಿದೆ. ಗಂಗಾವತಿ ಮೂಲದ ಇಬ್ಬರು ಪೊಲೀಸ್‌ ಸಿಬ್ಬಂದಿ ಹಾಗೂ ಕಾರು ಚಾಲಕನಿಗೆ ಶುಕ್ರವಾರ (ಜೂನ್‌ 29) ರಾತ್ರಿ ನಡೆದ ಹಲ್ಲೆಯಿಂದ ಗಾಯಳಾಗಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಗದಗಿನ ಎಂ.ಎಸ್.ಕೃಷ್ಣಾ ನಗರದ ಅಲಿ ಎಂಬ ಆರೋಪಿಯನ್ನು ಗಂಗಾವತಿ ಪೊಲೀಸರು ಕರೆದುಕೊಂಡು ಹೋಗುತ್ತಿದ್ದರು. ಪ್ರಕರಣವೊಂದರ ವಿಚಾರಣೆಯ ಭಾಗವಾಗಿ ಕರೆದುಕೊಂಡು ಹೋಗುತ್ತಿದ್ದರು. ಇದೇ ವೇಳೆ ದುಷ್ಕರ್ಮಿಗಳು ಪೊಲೀಸರ ಕಾರಿಗೆ ಅಡ್ಡಗಟ್ಟಿ, ಪೊಲೀಸ್‌ ಸಿಬ್ಬಂದಿ ಮೇಲೆಯೇ ಹಲ್ಲೆ ನಡೆಸಿದ್ದಾರೆ. ಇಬ್ಬರು ಪೊಲೀಸ್‌ ಅಧಿಕಾರಿಗಳು ಹಾಗೂ ಕಾರು ಚಾಲಕನು ಗದಗಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ರಾಯಚೂರಿನಲ್ಲೂ ಪೊಲೀಸರ ಮೇಲೆ ಹಲ್ಲೆ

ರಾಯಚೂರು ಜಿಲ್ಲೆಯಲ್ಲಿಯೂ ಪೊಲೀಸರ ಮೇಲೆ ಡಕಾಯಿತರ ಗ್ಯಾಂಗ್‌ ದಾಳಿ ನಡೆಸಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಶುಕ್ರವಾರ ತಡರತ್ರಿ ಸರ್ಕಲ್‌ ಇನ್ಸ್‌ಪೆಕ್ಟರ್‌ ವಾಹನವನ್ನು ಗುರಿಯಾಗಿಸಿ ದಾಳಿ ಮಾಡಲಾಗಿದ್ದು, ದರೋಡೆಗೆ ಯತ್ನಿಸಲಾಗಿದೆ. ಲಿಂಗಸುಗೂರು ಸರ್ಕಲ್‌ ಇನ್ಸ್‌ಪೆಕ್ಟರ್‌ ಹಾಗೂ ಕಾನ್‌ಸ್ಟೆಬಲ್‌ ಮೇಲೆ ದಾಳಿ ನಡೆಸಿದ್ದು, ಪೊಲೀಸ್‌ ಸಿಬ್ಬಂದಿಯು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ದಾಳಿಯ ವೇಳೆ ಪೊಲೀಸರ ಜೀಪ್‌ ಜಖಂಗೊಂಡಿದ್ದು, ಕೆಲ ಸಿಬ್ಬಂದಿಗೆ ಗಾಯಗಳಾಗಿವೆ. ಸ್ಕಾರ್ಪಿಯೋ ಕಾರ್‌ನಲ್ಲಿ ಬಂದು ದಾಳಿ ನಡೆಸಿದ್ದಾರೆ. ಇದಾದ ಬಳಿಕ ಪೊಲೀಸರು ಸಾರ್ವಜನಿಕರ ಸಹಾಯದಿಂದ ಮೂವರು ಡಕಾಯಿತರನ್ನು ಬಂಧಿಸಿದ್ದಾರೆ. ಬಂಧಿತರು ಯಾದಗಿರಿ ಜಿಲ್ಲೆಯ ಕನ್ಯಾ ಕೋಳೂರು ತಾಂಡಾ ನಿವಾಸಿಗಳಾಗಿದ್ದಾರೆ. ಕುಮಾರ (35), ಗುರುರಾಜ (25) ಹಾಗೂ ಸುರೇಶ್‌ (45) ಬಂಧಿತರು. ಗಾಯಗೊಂಡಿರುವ ಪೊಲೀಸರಿಗೆ ಚಿಕಿತ್ಸೆ ನೀಡಲಾಗುತ್ತಿದೆ .

ಇದನ್ನೂ ಓದಿ: Abbi Falls: ಅಬ್ಬಿ ಫಾಲ್ಸ್ ಬಳಿ ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ; ಕೊಡಗಿನಲ್ಲಿ ಮತ್ತೆ ಪ್ರವಾಸಿಗರ ಮೇಲೆ ಹಲ್ಲೆ

Continue Reading
Advertisement
Shah Rukh Khan
ಪ್ರಮುಖ ಸುದ್ದಿ37 seconds ago

Shah Rukh Khan: ನಟ ಶಾರುಖ್ ಖಾನ್ ಬಗ್ಗೆ ಶಾಕಿಂಗ್ ಸುದ್ದಿ ಕೊಟ್ಟ ನಟ ಗೋವಿಂದ್ ನಾಮದೇವ್

Ram Path
ದೇಶ18 mins ago

Ram Path: ಅಯೋಧ್ಯೆ ರಾಮ ಪಥ ಕಾಮಗಾರಿಯಲ್ಲಿ ನಿರ್ಲಕ್ಷ್ಯ; 6 ಅಧಿಕಾರಿಗಳ ತಲೆದಂಡ

DP Manu
ಕ್ರೀಡೆ19 mins ago

DP Manu: ಡೋಪಿಂಗ್ ಸುಳಿಯಲ್ಲಿ ಸಿಲುಕಿದ ಜಾವೆಲಿನ್‌ ತಾರೆ ಮನು; ಒಲಿಂಪಿಕ್ಸ್​ಗೆ ಹಿನ್ನಡೆ

Love Failure
ರಾಯಚೂರು28 mins ago

Love Failure : ಅತ್ತಿಗೆ ತಂಗಿಯ ಪ್ರೀತಿ ಸಿಗದ್ದಕ್ಕೆ ಫ್ಯಾನಿಗೆ ನೇಣು ಬಿಗಿದುಕೊಂಡ ಹುಚ್ಚು ಪ್ರೇಮಿ

Gold Rate Today
ಪ್ರಮುಖ ಸುದ್ದಿ39 mins ago

Gold Rate Today: ತುಸು ಏರಿಕೆ ಕಂಡ ಚಿನ್ನದ ಬೆಲೆ; ಇಷ್ಟಿದೆ ಇಂದಿನ ದರ

ಬಾಲಿವುಡ್47 mins ago

Asha Bhosle: ಹಿರಿಯ ಗಾಯಕಿ ಆಶಾ ಭೋಂಸ್ಲೆ ಪಾದಕ್ಕೆ ಮುತ್ತಿಟ್ಟು, ಪನ್ನೀರಿನಿಂದ ತೊಳೆದು ನಮಸ್ಕರಿಸಿದ ಸೋನು ನಿಗಮ್

karnataka Rain
ಮಳೆ56 mins ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

Mohan Bhagwat
ದೇಶ1 hour ago

Mohan Bhagwat: ಮುಕೇಶ್‌ ಅಂಬಾನಿ ನಿವಾಸಕ್ಕೆ ಆಗಮಿಸಿದ ಮೋಹನ್‌ ಭಾಗವತ್‌; ಕೈ ಮುಗಿದು ಸ್ವಾಗತಿಸಿದ ನೀತಾ ಅಂಬಾನಿ

Kalki 2898 AD Yash calls visually stunning spectacle
ಟಾಲಿವುಡ್1 hour ago

Kalki 2898 AD: ʻಕಲ್ಕಿʼ ಸಿನಿಮಾ ಹಾಡಿ ಹೊಗಳಿದ ರಾಕಿಂಗ್‌ ಸ್ಟಾರ್‌ ಯಶ್‌!

IND vs SA Final
ಕ್ರೀಡೆ1 hour ago

IND vs SA Final: ವಿಶ್ವಕಪ್​ ಗೆಲ್ಲಲು ಕೊಹ್ಲಿ, ರೋಹಿತ್​, ದ್ರಾವಿಡ್​ಗೆ ಇದು ಕೊನೆಯ ಅವಕಾಶ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ56 mins ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ17 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌