Narendra Modi: ಮೂರನೇ ಬಾರಿ ಪ್ರಧಾನಿ ಪಟ್ಟಕ್ಕೇರಿದ ಬಳಿಕ ಇಂದು ಸ್ವಕ್ಷೇತ್ರ ವಾರಾಣಸಿಗೆ ಮೋದಿ ಮೊದಲ ಭೇಟಿ - Vistara News

ದೇಶ

Narendra Modi: ಮೂರನೇ ಬಾರಿ ಪ್ರಧಾನಿ ಪಟ್ಟಕ್ಕೇರಿದ ಬಳಿಕ ಇಂದು ಸ್ವಕ್ಷೇತ್ರ ವಾರಾಣಸಿಗೆ ಮೋದಿ ಮೊದಲ ಭೇಟಿ

Narendra Modi: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಜೂನ್‌ 18) ಉತ್ತರ ಪ್ರದೇಶದ ತಮ್ಮ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಸತತ ಮೂರು ಬಾರಿ ಇಲ್ಲಿಂದ ಸ್ಪರ್ಧಿಸಿ ಮೋದಿ ಅವರು ಹ್ಯಾಟ್ರಿಕ್‌ ಜಯ ಗಳಿಸಿದ್ದಾರೆ. ಪ್ರಧಾನಿ ಪಟ್ಟಕ್ಕೇರಿದ ಬಳಿಕ ಅವರ ಮೊದಲ ಸ್ವಕ್ಷೇತ್ರ ಭೇಟಿ ಇದು ಎನ್ನುವುದು ವಿಶೇಷ. ಈ ಸಂದರ್ಭದಲ್ಲಿ ಅವರು  ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ 17ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ಜತೆಗೆ ತಮ್ಮ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ.

VISTARANEWS.COM


on

Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಇಂದು (ಜೂನ್‌ 18) ಉತ್ತರ ಪ್ರದೇಶದ ತಮ್ಮ ಕ್ಷೇತ್ರ ವಾರಣಾಸಿ (Varanasi)ಗೆ ಭೇಟಿ ನೀಡಲಿದ್ದಾರೆ. ಸತತ ಮೂರು ಬಾರಿ ಇಲ್ಲಿಂದ ಸ್ಪರ್ಧಿಸಿ ಮೋದಿ ಅವರು ಹ್ಯಾಟ್ರಿಕ್‌ ಜಯ ಗಳಿಸಿದ್ದಾರೆ. ಪ್ರಧಾನಿ ಪಟ್ಟಕ್ಕೇರಿದ ಬಳಿಕ ಅವರ ಮೊದಲ ಸ್ವಕ್ಷೇತ್ರ ಭೇಟಿ ಇದು ಎನ್ನುವುದು ವಿಶೇಷ. ಈ ಸಂದರ್ಭದಲ್ಲಿ ಅವರು  ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯ 17ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ಈ ಮೂಲಕ ಸುಮಾರು 9.26 ಕೋಟಿ ರೈತರ ಖಾತೆಗಳಿಗೆ 20,000 ಕೋಟಿ ರೂ. ಜಮೆ ಆಗಲಿದೆ.

ಮಾತ್ರವಲ್ಲ ಕೃಷಿ ಸಖಿಗಳಾಗಿ ತರಬೇತಿ ಪಡೆದ 30,000ಕ್ಕೂ ಹೆಚ್ಚು ಸ್ವಸಹಾಯ ಗುಂಪುಗಳಿಗೆ ಮೋದಿ ಪ್ರಮಾಣಪತ್ರಗಳನ್ನೂ ಬಿಡುಗಡೆ ಮಾಡಲಿದ್ದಾರೆ. ಜತೆಗೆ ತಮ್ಮ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಪಾಲ ಆನಂದಿಬೆನ್ ಪಟೇಲ್, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಹಲವು ರಾಜ್ಯ ಸಚಿವರು ಭಾಗವಹಿಸಲಿದ್ದಾರೆ.

ವಾರಣಾಸಿ ಪ್ರವಾಸದ ಸಂಪೂರ್ಣ ವಿವರ

ಮೋದಿ ಅವರು ಸುಮಾರು 5 ಗಂಟೆಗಳ ಕಾಲ ವಾರಣಾಸಿಯಲ್ಲಿ ಇರಲಿದ್ದಾರೆ. ಸಂಜೆ 4 ಗಂಟೆ ಸುಮಾರಿಗೆ ಮೋದಿ ಬಬತ್ಪುರದ ಲಾಲ್ ಬಹದ್ದೂರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಸಂಜೆ 5 ಗಂಟೆ ಸುಮಾರಿಗೆ ವಾರಣಾಸಿಯಲ್ಲಿ ಆಯೋಜಿಸಿರುವ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಸಮ್ಮಾನ್ ನಿಧಿಯ ಕಂತನ್ನು ಮೋದಿ ಬಿಡುಗಡೆ ಮಾಡಲಿದ್ದು, ವಾರಣಾಸಿಯಲ್ಲಿ 2,76,665 ಫಲಾನುಭವಿಗಳಿದ್ದಾರೆ. ಜತೆಗೆ 21 ರೈತರನ್ನು ಭೇಟಿ ಮಾಡಿ ಅವರ ಉತ್ಪನ್ನಗಳನ್ನು ಪರಿಶೀಲಿಸಲಿದ್ದಾರೆ.

ಸಂಜೆ 7 ಗಂಟೆ ಸುಮಾರಿಗೆ ವಾರಣಾಸಿಯ ದಶಾಶ್ವಮೇಧ ಘಾಟ್‌ನಲ್ಲಿ ನಡೆಯಲಿರುವ ಗಂಗಾ ಆರತಿಯನ್ನು ವೀಕ್ಷಿಸಲಿರುವ ಮೋದಿ, ನಂತರ ರಾತ್ರಿ 8 ಗಂಟೆಗೆ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಸುಮಾರು 25 ನಿಮಿಷಗಳ ಕಾಲ ದೇವಾಲಯದಲ್ಲಿ ಇರಲಿದ್ದಾರೆ ಎಂದು ಕಾಶಿ ವಿಶ್ವನಾಥ ದೇವಾಲಯದ ಸಿಇಒ ವಿಶ್ವ ಭೂಷಣ್ ಮಿಶ್ರಾ ತಿಳಿಸಿದ್ದಾರೆ. ಈ ಲೋಕಸಭಾ ಚುನಾವಣೆಯಲ್ಲಿ ಮೋದಿ ಅವರು ವಾರಣಾಸಿ ಕ್ಷೇತ್ರದಿಂದ ಸುಮಾರು 1,52,513 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: Narendra Modi: ಅಮೆರಿಕ ಭದ್ರತಾ ಸಲಹೆಗಾರ-ನರೇಂದ್ರ ಮೋದಿ ಭೇಟಿ; ಯಾವೆಲ್ಲ ವಿಷಯ ಚರ್ಚೆ?

ಏನಿದು ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆ?

ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ 2019ರಲ್ಲಿ ಜಾರಿಗೆ ತಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kidnapping Case: ಮಿಠಾಯಿ ತರಲೆಂದು ಮಕ್ಕಳನ್ನು ಬಿಟ್ಟು ಹೋದ ತಂದೆ-ತಾಯಿ; ಕಾರು ಸಮೇತ ಮಕ್ಕಳು ಕಿಡ್ನಾಪ್‌!

Kidnapping Case:ದೆಹಲಿಯ ಲಕ್ಷ್ಮೀ ನಗರದಲ್ಲಿ ಈ ಘಟನೆ ನಡೆದಿದೆ. ಪೋಷಕರು ಹೀರಾ ಸ್ವೀಟ್‌ ಹೊರಗೆ ಕಾರು ನಿಲ್ಲಿಸಿದ್ದರು. ಕೆಲವೇ ಕ್ಷಣದ ಕೆಲಸವಾಗಿರುವುದರಿಂದ ಕಾರನ್ನು ಹಾಗೇ ಸ್ಟಾರ್ಟಿಂಗ್‌ನಲ್ಲಿಟ್ಟು, ಅದರೊಳಗೆ ತಮ್ಮ 11ವರ್ಷದ ಮಗ ಹಾಗೂ 3 ವರ್ಷದ ಹೆಣ್ಣು ಮಗುವನ್ನು ಬಿಟ್ಟು ಹೋಗಿದ್ದರು. ಅಲ್ಲಿಂದ ವಾಪಾಸ್‌ ಬಂದು ನೋಡಿದಾಗ ಕಾರು ಸಮೇತ ಮಕ್ಕಳು ಕಣ್ಮರೆ ಆಗಿದ್ದರು.

VISTARANEWS.COM


on

Kidnapping Case
Koo

ಹೊಸದಿಲ್ಲಿ: ಈಗಿನ ಕಾಲದಲ್ಲಿ ಮಕ್ಕಳ ಬಗ್ಗೆ ಎಷ್ಟೇ ಎಚ್ಚರ ವಹಿಸಿದರೂ ಅದು ಕಡಿಮೆಯೇ. ಸ್ವಲ್ಪ ಎಚ್ಚರ ತಪ್ಪಿದರೂ ಭಾರೀ ಸಂಕಷ್ಟಕ್ಕೀಡಾಗಬೇಕಾಗುತ್ತದೆ. ಇದೀಗ ಅಂತಹದ್ದೇ ಒಂದು ಘಟನೆ(Viral News) ದೆಹಲಿಯಲ್ಲಿ ನಡೆದಿದೆ. ಮಕ್ಕಳಿಬ್ಬರನ್ನು ಕಾರಿನಲ್ಲಿ ಬಿಟ್ಟು ಮಿಠಾಯಿ ತರಲೆಂದು ಬೇಕರಿಗೆ ಹೋಗಿದ್ದ ಪೋಷಕರು ವಾಪಸ್‌ ಬಂದು ನೋಡಿದಾಗ ಬಿಗ್‌ ಶಾಕ್‌ ಕಾದಿತ್ತು. ಕಾರು ಸಮೇತ ಮಕ್ಕಳಿಬ್ಬರು ಕಣ್ಮರೆ ಆಗಿದ್ದರು. ಆಮೇಲೆ ಅಪಹರಣಕಾರರು(Kidnapping Case) ಕಾರು ಸಮೇತ ಮಕ್ಕಳನ್ನು ಅಪಹರಿಸಿರುವ ವಿಚಾರ ಬೆಳಕಿಗೆ ಬಂದಿತ್ತು.

ಘಟನೆ ವಿವರ:

ದೆಹಲಿಯ ಲಕ್ಷ್ಮೀ ನಗರದಲ್ಲಿ ಈ ಘಟನೆ ನಡೆದಿದೆ. ಪೋಷಕರು ಹೀರಾ ಸ್ವೀಟ್‌ ಹೊರಗೆ ಕಾರು ನಿಲ್ಲಿಸಿದ್ದರು. ಕೆಲವೇ ಕ್ಷಣದ ಕೆಲಸವಾಗಿರುವುದರಿಂದ ಕಾರನ್ನು ಹಾಗೇ ಸ್ಟಾರ್ಟಿಂಗ್‌ನಲ್ಲಿಟ್ಟು, ಅದರೊಳಗೆ ತಮ್ಮ 11ವರ್ಷದ ಮಗ ಹಾಗೂ 3 ವರ್ಷದ ಹೆಣ್ಣು ಮಗುವನ್ನು ಬಿಟ್ಟು ಹೋಗಿದ್ದರು. ಅಲ್ಲಿಂದ ವಾಪಾಸ್‌ ಬಂದು ನೋಡಿದಾಗ ಕಾರು ಸಮೇತ ಮಕ್ಕಳು ಕಣ್ಮರೆ ಆಗಿದ್ದರು.

ಗಾಬರಿಗೊಂಡ ಪೋಷಕರು ತಕ್ಷಣ ಪೊಲೀಸರಿಗೆ ದೂರು ನೀಡಿದ್ದರು. ಅಷ್ಟು ಹೊತ್ತಿಗಾಗಗಲೇ ಅಪಹರಣಕಾರರು ಪೋಷಕರಿಗೆ ಕರೆ ಮಾಡಿ ತಕ್ಷಣ 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ತಕ್ಷಣ ಕಾರ್ಯಪ್ರವೃತರಾದ ಪೊಲೀಸರು ಮಕ್ಕಳ ರಕ್ಷಣೆಗೆ ಹಾಗೂ ಕಿಡಿಗೇಡಿಗಳ ಬಂಧನಕ್ಕೆ ವಿಶೇಷ ತಂಡಗಳನ್ನು ರಚಿಸಿ ಫೀಲ್ಡ್‌ಗಿಳಿಯುತ್ತಾರೆ. ತಾಂತ್ರಿಕ ಸಹಾಯದಿಂದ ಹೇಗಾದರೂ ಕಾರನ್ನು ಚೇಸ್‌ ಮಾಡಲು ಶುರು ಮಾಡುತ್ತಾರೆ.

ಬರೋಬ್ಬರಿ 20 ಪೊಲೀಸ್‌ ವಾಹನಗಳು ಕಿಡ್ನಾಪರ್ಸ್‌ ಕಾರನ್ನು ಚೇಸ್‌ ಮಾಡಿ, ಪತ್ತೆ ಮಾಡುತ್ತಾರೆ. ಅದೃಷ್ಟವಶಾತ್‌ ಎರಡೂ ಮಕ್ಕಳನ್ನು ಸುರಕ್ಷಿತವಾಗಿ ಕಾಪಾಡುವಲ್ಲಿ ಪೊಲೀಸರು ಯಶಸ್ವಿ ಆಗಿದ್ದಾರೆ. ಕಾರಿನಲ್ಲಿ ಕೆಲವೊಂದು ಅಮೂಲ್ಯ ವಸ್ತುಗಳು, ಹಣ, ಒಡವೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅದೂ ಅಲ್ಲದೇ ಅಪಹರಣಕಾರರನ್ನೂ ಅರೆಸ್ಟ್‌ ಮಾಡಿದ್ದಾರೆ.

ಇಂತಹದ್ದೇ ಒಂದು ಘಟನೆ ಕಳೆದ ವರ್ಷ ಕುಂದಾನಗರಿ ಬೆಳಗಾವಿಯಲ್ಲೂ ನಡೆದಿತ್ತು. 9 ವರ್ಷದ ಬಾಲಕಿಯನ್ನು ಕಿಡಿಗೇಡಿಯೊಬ್ಬ ಅಪಹರಣಕ್ಕೆ ಯತ್ನಿಸಿದ್ದ. ಟ್ಯೂಷನ್‌ಗೆಂದು ಹೋಗುತ್ತಿದ್ದಾಗ ಬಾಲಕಿಗೆ ಚಾಕೊಲೇಟ್‌ ಆಮಿಷ ಒಡ್ಡುತ್ತಾ ಸಮೀಪಿಸಿದ್ದ. ಹತ್ತಿರ ಬಂದವನೇ ಎತ್ತಿಕೊಂಡು ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಬಾಲಕಿ ಕಿರುಚಿದ್ದರಿಂದ ಜನ ಬರುವ ಸೂಚನೆ ಕಂಡು ಆರೋಪಿ ಓಡಿ ಹೋಗಿದ್ದ. ಈ ಘಟನೆಯ ಬಗ್ಗೆ ಆತಂಕಿತರಾದ ಹೆತ್ತವರು ಟಿಳಕವಾಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ: Prajwal Revanna Case: ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌; ಬಂಧಿಸದಂತೆ ಹೈಕೋರ್ಟ್ ಆದೇಶ

Continue Reading

ದೇಶ

5 Soldiers Killed: ಲಡಾಕ್‌ನ ನದಿಯಲ್ಲಿ ಸೇನಾ ವಾಹನ ಮಗುಚಿ ಭೀಕರ ದುರಂತ; ಐವರು ಯೋಧರು ಹುತಾತ್ಮ

5 Soldiers Killed: ಲಡಾಕ್‌ನ ವಾಸ್ತವಿಕ ನಿಯಂತ್ರಣ ರೇಖೆ ಯ ಬಳಿ ಶ್ಯೋಕ್ ನದಿ ದಾಟುವ ಸಮಯದಲ್ಲಿ ಟ್ಯಾಂಕ್ ಅಪಘಾತಕ್ಕೀಡಾಗಿ ಐವರು ಸೈನಿಕರು ಮೃತಪಟ್ಟಿರುವ ಆಘಾತಕಾರಿ ಘಟನೆ ಶನಿವಾರ ನಡೆದಿದೆ. ಲಡಾಕ್‌ನ ನ್ಯೋಮಾ-ಚುಶುಲ್ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆ ಬಳಿ ಟಿ -72 ಟ್ಯಾಂಕ್‌ ನದಿಯನ್ನು ದಾಟುವಾಗ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

VISTARANEWS.COM


on

5 Soldiers Killed
Koo

ಲಡಾಕ್‌: ಲಡಾಕ್‌ನ ವಾಸ್ತವಿಕ ನಿಯಂತ್ರಣ ರೇಖೆ (Line of Actual Control)ಯ ಬಳಿ ಶ್ಯೋಕ್ (Shyok) ನದಿ ದಾಟುವ ಸಮಯದಲ್ಲಿ ಟ್ಯಾಂಕ್ ಅಪಘಾತಕ್ಕೀಡಾಗಿ ಐವರು ಸೈನಿಕರು ಮೃತಪಟ್ಟಿರುವ ಆಘಾತಕಾರಿ ಘಟನೆ ಶನಿವಾರ ನಡೆದಿದೆ (5 Soldiers Killed). ಮೃತಪಟ್ಟ ಐವರು ಜೂನಿಯರ್ ಕಮಿಷನ್ಡ್ ಆಫೀಸರ್ (Junior Commissioned Officer) ಎಂದು ಗುರುತಿಸಲಾಗಿದೆ.

ಲಡಾಕ್‌ನ ನ್ಯೋಮಾ-ಚುಶುಲ್ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆ ಬಳಿ ಟಿ -72 ಟ್ಯಾಂಕ್‌ (T-72 Tank) ನದಿಯನ್ನು ದಾಟುವಾಗ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ. ಅಪಘಾತದ ವೇಳೆ ತರಬೇತಿಯಲ್ಲಿ ತೊಡಗಿಸಿಕೊಂಡಿದ್ದ ಸೈನಿಕರು ತಮ್ಮ ಟಿ -72 ಟ್ಯಾಂಕ್‌ನಲ್ಲಿ ಲೇಹ್‌ನಿಂದ 148 ಕಿ.ಮೀ. ದೂರದಲ್ಲಿರುವ, ಚೀನಾ ಗಡಿ ಸಮೀಪದ ದೌಲತ್ ಬೇಗ್ ಓಲ್ಡಿಯ ಮಂದಿರ್ ಮೋರ್ಹ್ ಬಳಿ ನದಿಯನ್ನು ದಾಟುತ್ತಿದ್ದರು.

ʼʼಶನಿವಾರ ಮುಂಜಾನೆ 3 ಗಂಟೆ ಸುಮಾರಿಗೆ ನದಿ ದಾಟುವಾಗ ನೀರಿನ ಮಟ್ಟದಲ್ಲಿ ಹಠಾತ್ ಏರಿಕೆಯಿಂದ ಈ ದುರ್ಘಟನೆ ನಡೆದಿದೆ. ಎಲ್ಲ ಐದು ಸೈನಿಕರ ಶವಗಳನ್ನು ನೀರಿನಿಂದ ಮೇಲಕ್ಕೆತ್ತಲಾಗಿದೆʼʼ ಎಂದು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದೂ ಅವರು ತಿಳಿಸಿದ್ದಾರೆ. ಹಿಮ ಕರಗುವಿಕೆಯಿಂದಾಗಿ ನೀರಿನ ಮಟ್ಟ ಇದ್ದಕ್ಕಿದ್ದಂತೆ ಹೆಚ್ಚಾಗಿದೆ ಎಂದು ಊಹಿಸಲಾಗಿದೆ. ಶ್ಯೋಕ್ ಸಿಂಧೂ ನದಿಯ ಉಪನದಿಯಾಗಿದೆ.

ರಾಜನಾಥ್‌ ಸಿಂಗ್‌ ಸಂತಾಪ

ಘಟನೆ ಬಗ್ಗೆ ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ʼʼಲಡಾಕ್‌ನಲ್ಲಿ ನದಿ ದಾಟುವಾಗ ಸಂಭವಿಸಿದ ಅಪಘಾತದಲ್ಲಿ ನಮ್ಮ ಐವರು ಧೈರ್ಯಶಾಲಿ ಸೈನಿಕರು ಪ್ರಾಣ ಕಳೆದುಕೊಂಡಿರುವುದು ತೀವ್ರ ದುಃಖ ತಂದಿದೆ. ನಮ್ಮ ಸೈನಿಕರು ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ಈ ದುಃಖದ ಸಮಯದಲ್ಲಿ ರಾಷ್ಟ್ರವು ಅವರ ಕುಟುಂಬದೊಂದಿಗೆ ದೃಢವಾಗಿ ನಿಲ್ಲುತ್ತದೆʼʼ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸೇನಾ ವಾಹನ ಕಣಿವೆಗೆ ಬಿದ್ದು ಯೋಧ ಸಾವು, ನಾಲ್ವರಿಗೆ ಗಾಯ

ಶ್ರೀನಗರ: ಕಳೆದ ಕೆಲ ದಿನಗಳಿಂದ ಉಗ್ರರ ದಾಳಿಗೆ ನಲುಗಿ ಹೋಗಿರುವ ಜಮ್ಮು-ಕಾಶ್ಮೀರದಲ್ಲಿ (Jammu Kashmir) ಜೂನ್‌ 13ರಂದು ಮತ್ತೊಂದು ದುರಂತ ಸಂಭವಿಸಿತ್ತು. ರಾಜೌರಿ ಜಿಲ್ಲೆಯಲ್ಲಿ ಸೇನೆಯ ವಾಹನವೊಂದು (Army Vehicle) ಕಂದಕಕ್ಕೆ ಉರಳಿ ಒಬ್ಬ ಯೋಧ ಮೃತಪಟ್ಟಿದ್ದರೆ, ನಾಲ್ವರು ಸೈನಿಕರು ಗಾಯಗೊಂಡಿದ್ದರು. ಗಾಯಗೊಂಡಿರುವ ಯೋಧರನ್ನು ಸೇನೆಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ನೌಶೇರಾ ಸೆಕ್ಟರ್‌ ಬಳಿಯ ಗಡಿ ನಿಯಂತ್ರಣ ರೇಖೆಗೆ ಸಮೀಪದಲ್ಲಿರುವ ಭವಾನಿ ಗ್ರಾಮದ ಮೂಲಕ ಸೇನಾ ವಾಹನವು ಗುರುವಾರ ಸಂಜೆ ತೆರಳುತ್ತಿತ್ತು. ವಾಹದಲ್ಲಿ ಐವರು ಯೋಧರು ಇದ್ದರು. ಇದೇ ವೇಳೆ, ವಾಹನವು ಚಾಲಕನ ನಿಯಂತ್ರಣ ತಪ್ಪಿದ್ದು, ಕಂದಕಕ್ಕೆ ಉರುಳಿದೆ. ದುರಂತ ಸಂಭವಿಸುತ್ತಲೇ ಐವರೂ ಯೋಧರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಅಷ್ಟೊತ್ತಿಗಾಗಲೇ ಒಬ್ಬ ಯೋಧ ಮೃತಪಟ್ಟಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರರ ಉಪಟಳ ಜಾಸ್ತಿಯಾಗಿದೆ. ಹಾಗಾಗಿ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಸೇರಿ ಹಲವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದು, ಕಾಶ್ಮೀರದಲ್ಲಿ ಉಗ್ರರ ನಿರ್ನಾಮಕ್ಕೆ ಸೂಚಿಸಿದ್ದಾರೆ. ಹಾಗೆಯೇ, ಎಲ್ಲ ಸೈನಿಕರನ್ನು ಗಡಿಯಲ್ಲಿ ನಿಯೋಜಿಸುವ ಮೂಲಕ ಉಗ್ರರಿಗೆ ತಿರುಗೇಟು ನೀಡುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Jammu Kashmir: ಕಾಶ್ಮೀರದಲ್ಲಿ ಮತ್ತೊಂದು ದುರಂತ; ಸೇನಾ ವಾಹನ ಕಣಿವೆಗೆ ಬಿದ್ದು ಯೋಧ ಸಾವು, ನಾಲ್ವರಿಗೆ ಗಾಯ

Continue Reading

ದೇಶ

Ram Path: ಅಯೋಧ್ಯೆ ರಾಮ ಪಥ ಕಾಮಗಾರಿಯಲ್ಲಿ ನಿರ್ಲಕ್ಷ್ಯ; 6 ಅಧಿಕಾರಿಗಳ ತಲೆದಂಡ

Ram Path: ಜೂನ್ 23 ಮತ್ತು ಜೂನ್ 25ರಂದು ಸುರಿದ ಮಳೆಯಿಂದಾಗಿ ಅಯೋಧ್ಯೆಯ 14 ಕಿ.ಮೀ. ಉದ್ದದ ರಾಮ ಪಥ ಹಾನಿಗೊಳಗಾಗಿದೆ. ಅಲ್ಲದೆ ಒಳಚರಂಡಿ ನಿರ್ಮಾಣ ವಿಚಾರದಲ್ಲಿ ಸಂಪೂರ್ಣ ನಿರ್ಲಕ್ಷ್ಯ ತೋರಿದ ಕಾರಣಕ್ಕಾಗಿ ಉತ್ತರ ಪ್ರದೇಶ ಸರ್ಕಾರವು ಲೋಕೋಪಯೋಗಿ ಇಲಾಖೆ ಮತ್ತು ಉತ್ತರ ಪ್ರದೇಶ ಜಲ ನಿಗಮದ 6 ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

VISTARANEWS.COM


on

Ram Path
Koo

ಅಯೋಧ್ಯೆ: ಜೂನ್ 23 ಮತ್ತು ಜೂನ್ 25ರಂದು ಸುರಿದ ಮಳೆಯಿಂದಾಗಿ ಅಯೋಧ್ಯೆ (Ayodhya)ಯ 14 ಕಿ.ಮೀ. ಉದ್ದದ ರಾಮ ಪಥ (Ram Path) ಹಾನಿಗೊಳಗಾಗಿದೆ. ಅಲ್ಲದೆ ಒಳಚರಂಡಿ ನಿರ್ಮಾಣ ವಿಚಾರದಲ್ಲಿ ಸಂಪೂರ್ಣ ನಿರ್ಲಕ್ಷ್ಯ ತೋರಿದ ಕಾರಣಕ್ಕಾಗಿ ಉತ್ತರ ಪ್ರದೇಶ ಸರ್ಕಾರವು ಲೋಕೋಪಯೋಗಿ ಇಲಾಖೆ (PWD) ಮತ್ತು ಉತ್ತರ ಪ್ರದೇಶ ಜಲ ನಿಗಮದ 6 ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

ರಾಮಪಥದ ಉದ್ದಕ್ಕೂ ಇರುವ ಸುಮಾರು 15 ಉಪ ಮಾರ್ಗಗಳು ಮತ್ತು ಬೀದಿಗಳು ಮಳೆಯ ನಂತರ ತೀವ್ರವಾಗಿ ಜಲಾವೃತಗೊಂಡಿದ್ದವು. ಇದಲ್ಲದೆ ಸಮೀಪದ ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಸಂಕಷ್ಟ ಎದುರಾಗಿತ್ತು. ಹೀಗಾಗಿ ಇದು ಕಾಮಗಾರಿಯಲ್ಲಿನ ನಿರ್ಲಕ್ಷ್ಯ ಎಂದು ಉಲ್ಲೇಖಿಸಿ ಅಹಮದಾಬಾದ್ ಮೂಲದ ಗುತ್ತಿಗೆದಾರ ಸಂಸ್ಥೆ ಭುವನ್ ಇನ್ಫ್ರಾಕಾಮ್ ಪ್ರೈವೇಟ್ ಲಿಮಿಟೆಟ್‌ಗೆ ರಾಜ್ಯ ಸರ್ಕಾರ ನೋಟಿಸ್ ನೀಡಿದೆ.

ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಧ್ರುವ್ ಅಗರ್ವಾಲ್ ಮತ್ತು ಸಹಾಯಕ ಎಂಜಿನಿಯರ್ ಅನುಜ್ ದೇಶ್ವಾಲ್ ಅವರನ್ನು ಅಮಾನತುಗೊಳಿಸಿ ವಿಶೇಷ ಕಾರ್ಯದರ್ಶಿ ವಿನೋದ್ ಕುಮಾರ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಜತೆಗೆ ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್ (ಅಭಿವೃದ್ಧಿ) ವಿ.ಕೆ.ಶ್ರೀವಾಸ್ತವ್ ಅವರು ಕಿರಿಯ ಎಂಜಿನಿಯರ್ ಪ್ರಭಾತ್ ಕುಮಾರ್ ಪಾಂಡೆ ಅವರನ್ನು ಅಮಾನತುಗೊಳಿಸಿದ್ದಾರೆ.

ಇನ್ನು ಉತ್ತರ ಪ್ರದೇಶ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಕುಮಾರ್ ಮಿಶ್ರಾ ಅವರು ಕಾರ್ಯನಿರ್ವಾಹಕ ಎಂಜಿನಿಯರ್ ಆನಂದ್ ಕುಮಾರ್ ದುಬೆ, ಸಹಾಯಕ ಎಂಜಿನಿಯರ್ ರಾಜೇಂದ್ರ ಕುಮಾರ್ ಯಾದವ್ ಮತ್ತು ಕಿರಿಯ ಎಂಜಿನಿಯರ್ ಮೊಹಮ್ಮದ್ ಶಾಹಿದ್ ಅವರನ್ನು ಅಮಾನತು ಮಾಡಿದ್ದಾರೆ.

ಅಧಿಕಾರಿಗಳು ಹೇಳಿದ್ದೇನು?

“ರಾಮ ಪಥವನ್ನು ನಿರ್ಮಿಸಿದ ಕೆಲವೇ ದಿನಗಳಲ್ಲಿ ಅದರ ಮೇಲಿನ ಪದರಕ್ಕೆ ಹಾನಿಯಾಗಿದೆ. ರಾಜ್ಯ ಸರ್ಕಾರ ಆದ್ಯತೆಯ ಮೇರೆಗೆ ಕೈಗೊಂಡಿದ್ದ ಈ ಕಾಮಗಾರಿಯಲ್ಲಿನ ನಿರ್ಲಕ್ಷ್ಯ ಸಹಿಸಲು ಸಾಧ್ಯವಿಲ್ಲ. ಇದರಿಂದ ಸಾರ್ವಜನಿಕರ ಮುಂದೆ ರಾಜ್ಯ ಸರ್ಕಾರದ ಘನತೆಗೆ ಹಾನಿಯಾಗಿದ್ದು, ಈ ನಿಟ್ಟನಲ್ಲಿ ಕ್ರಮ ಕೈಗೊಳ್ಳಲಾಗಿದೆ” ಎಂದು ಲೋಕೋಪಯೋಗಿ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

“ಇದನ್ನು ಗಂಭೀರ ಅಕ್ರಮವೆಂದು ಪರಿಗಣಿಸಿ, ಉತ್ತರ ಪ್ರದೇಶ ಸರ್ಕಾರಿ ನೌಕರರ (ಶಿಸ್ತು ಮತ್ತು ಮೇಲ್ಮನವಿ) 1999ರ ನಿಯಮ 7ರ ಅಡಿಯಲ್ಲಿ ನಿರ್ಮಾಣ್ ಖಾಂಡ್ -3 ಯೋಜನೆಯ ಕಾರ್ಯನಿರ್ವಾಹಕ ಎಂಜಿನಿಯರ್ ಧ್ರುವ್ ಅಗರ್ವಾಲ್ ಅವರನ್ನು ಅಮಾನತುಗೊಳಿಸಲಾಗಿದೆ” ಎಂದು ಕಚೇರಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪಿಡಬ್ಲ್ಯುಡಿ ಪ್ರಧಾನ ಕಾರ್ಯದರ್ಶಿ ಅಜಯ್ ಚೌಹಾಣ್ ತಿಳಿಸಿದ್ದಾರೆ. ಹಾನಿಗೊಳಗಾದ ರಾಮ ಪಥದ ಚಿತ್ರಗಳು ಇತ್ತೀಚೆಗೆ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ವೈರಲ್‌ ಆಗಿತ್ತು.

ಇದನ್ನೂ ಓದಿ: Ayodhya Ram Mandir: ಅಯೋಧ್ಯೆ ರಾಮಲಲ್ಲಾನ ಸ್ನಾನವನ್ನೇ ಮರೆತ ಎಂಜಿನಿಯರ್‌ಗಳು! ಗರ್ಭಗುಡಿಯಲ್ಲೀಗ ದೊಡ್ಡ ಸಮಸ್ಯೆ!

ಈ ಮಧ್ಯೆ ಸುಮಾರು ಒಂದು ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಅರ್ಚಕರಿಗೆ ತಲೆನೋವಾಗಿ ಪರಿಣಮಿಸಿದೆ. ಸಂಗ್ರಹವಾದ ನೀರು ಹೊರಹರಿಯುವ ಒಳಚರಂಡಿ ವ್ಯವಸ್ಥೆಯಲ್ಲಿ ದೋಷಗಳು ಕಾಣಿಸಿಕೊಂಡು ಸುದ್ದಿ ಇತ್ತೀಚೆಗೆ ಭಾರೀ ಚರ್ಚೆಗೆ ಕಾರಣವಾಗಿದೆ.

Continue Reading

ದೇಶ

Mohan Bhagwat: ಮುಕೇಶ್‌ ಅಂಬಾನಿ ನಿವಾಸಕ್ಕೆ ಆಗಮಿಸಿದ ಮೋಹನ್‌ ಭಾಗವತ್‌; ಕೈ ಮುಗಿದು ಸ್ವಾಗತಿಸಿದ ನೀತಾ ಅಂಬಾನಿ

Mohan Bhagwat: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ತಮ್ಮ ನಿವಾಸ ಆಂಟಿಲಿಯಾ ದಲ್ಲಿ ಶುಕ್ರವಾರ ಆಯೋಜಿಸಿದ್ದ ಆತಿಥ್ಯವನ್ನು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಸ್ವೀಕರಿಸಿದರು. ಮೋಹನ್‌ ಭಾಗವತ್‌ ಅವರನ್ನು ಖುದ್ದು ಮುಕೇಶ್ ಅಂಬಾನಿ, ನೀತಾ ಅಂಬಾನಿ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಸ್ವಾಗತಿಸಿದರು.

VISTARANEWS.COM


on

Mohan Bhagwat
Koo

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರು ತಮ್ಮ ನಿವಾಸ ಆಂಟಿಲಿಯಾ (Antilia)ದಲ್ಲಿ ಶುಕ್ರವಾರ ಆಯೋಜಿಸಿದ್ದ ಆತಿಥ್ಯವನ್ನು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ (Mohan Bhagwat) ಸ್ವೀಕರಿಸಿದರು. ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ (Nita Ambani) ದಂಪತಿ ಪುತ್ರ ಅನಂತ್ ಅಂಬಾನಿ (Anant Ambani) ಮತ್ತು ರಾಧಿಕಾ ಮರ್ಚೆಂಟ್ (Radhika Merchant) ಅವರ ವಿವಾಹ ಜುಲೈಯಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಆಗಮಿಸಿದ ಮೋಹನ್‌ ಭಾಗವತ್‌ ಅವರನ್ನು ಖುದ್ದು ಮುಕೇಶ್ ಅಂಬಾನಿ, ನೀತಾ ಅಂಬಾನಿ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಸ್ವಾಗತಿಸಿದರು.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹ ಜುಲೈ 12ರಂದ್ ಅದ್ಧೂರಿಯಾಗಿ ನೆರವೇರಲಿದ್ದು, ಗಣ್ಯರನ್ನು ಆಮಂತ್ರಿಸಲಾಗುತ್ತಿದೆ. ಮೋಹನ್‌ ಭಾಗವತ್‌ ಭೇಟಿ ವೇಳೆ ರಾಧಿಕಾ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡರೆ, ಅನಂತ್‌ ಕುರ್ತಾ ಮತ್ತು ಜಾಕೆಟ್‌ ಧರಿಸಿ ಮಿಂಚಿದರು. ನೀತಾ ಅವರು ರೇಷ್ಮೆ ಸೀರೆಯಲ್ಲಿ ಕಾಣಿಸಿಕೊಂಡರೆ ಮುಕೇಶ್ ಅಂಬಾನಿ ಸರಳವಾಗಿ ಪ್ಯಾಂಟ್‌-ಷರ್ಟ್‌ ಧರಿಸಿದ್ದರು. ನೀತಾ ಅಂಬಾನಿ ಕೈ ಮುಗಿದು ಮೋಹನ್‌ ಭಾಗವತ್‌ ಅವರನ್ನು ಸ್ವಾಗತಿಸಿದರು.

ಕೆಲವು ದಿನಗಳ ಹಿಂದೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರಿಗೆ ಅಂಬಾನಿ ಕುಟುಂಬ ಸದಸ್ಯರು ಆಮಂತ್ರಣ ಪತ್ರಿಕೆ ನೀಡಿದ್ದರು. ಜತೆಗೆ ಸೋಮವಾರ ಬಾಲಿವುಡ್‌ ಸ್ಟಾರ್‌ ಅಜಯ್ ದೇವಗನ್ ಮತ್ತು ಕಾಜೋಲ್ ಅವರ ಮನೆಗೆ ತೆರಳಿದ್ದರು.

ಕಾಶಿ ವಿಶ್ವನಾಥ ದೇಗುಲಕ್ಕೆ ಭೇಟಿ

ನೀತಾ ಅಂಬಾನಿ ಅವರು ಸೋಮವಾರ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ತೆರಳಿ ದೇವರಿಗೆ ಮದುವೆಯ ಆಮಂತ್ರಣ ನೀಡಿದ್ದರು. ದೇವರ ದರ್ಶನದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼʼನಾನು ಈಗಷ್ಟೇ ಬಾಬಾ ಭೋಲೆನಾಥ್ ಅವರ ದರ್ಶನ ಪಡೆದಿದ್ದೇನೆ. ಹಿಂದೂ ಸಂಪ್ರದಾಯದ ಪ್ರಕಾರ ನಾವು ಮೊದಲು ಭಗವಂತನ ಆಶೀರ್ವಾದವನ್ನು ಪಡೆಯುತ್ತೇವೆ. ನಾನು ಬಾಬಾಗೆ ಮದುವೆಯ ಆಮಂತ್ರಣವನ್ನು ನೀಡಿದ್ದೇನೆ. ನನಗೆ ತುಂಬಾ ಸಂತೋಷವಾಗಿದೆ. 10 ವರ್ಷಗಳ ಅನಂತರ ಇಲ್ಲಿಗೆ ಬಂದಿದ್ದೇನೆ. ಅಭಿವೃದ್ಧಿ ಮತ್ತು ಕಾಶಿ ವಿಶ್ವನಾಥ ಕಾರಿಡಾರ್, ನಮೋ ಘಾಟ್, ಸೌರಶಕ್ತಿ ಸ್ಥಾವರಗಳು ಮತ್ತು ಸ್ವಚ್ಛತೆಯನ್ನು ನೋಡಲು ನನಗೆ ಸಂತೋಷವಾಗಿದೆʼʼ ಎಂದು ಹೇಳಿದ್ದರು.

ʼʼ10 ವರ್ಷಗಳ ಹಿಂದೆ ಕಾಶಿ ವಿಶ್ವನಾಥ ದೇವಸ್ಥಾನದ ದರ್ಶನಕ್ಕೆ ಬಂದಿದ್ದೆ. ಇಲ್ಲಿನ ಕುಶಲಕರ್ಮಿಗಳೊಂದಿಗೆ ನನಗೆ ವಿಶೇಷ ಬಾಂಧವ್ಯವಿದೆ. ನಾನು ಅವರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ. ರಿಲಯನ್ಸ್ ಫೌಂಡೇಶನ್ ಮತ್ತು ಸ್ವದೇಶ್ ಮಾಧ್ಯಮದ ಮೂಲಕ ನಾವು ಅವರಿಗೆ ಜಾಗತಿಕ ಮನ್ನಣೆ ಮತ್ತು ಗೌರವವನ್ನು ನೀಡಲು ಬಯಸುತ್ತೇವೆʼʼ ಎಂದು ತಿಳಿಸಿದ್ದರು.

ಜುಲೈ 12ರಂದು ಮದುವೆ

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12ರಂದು ಮುಂಬೈಯ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿದ್ದಾರೆ. ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಇದರ ವಿವರವನ್ನು ಬಹಿರಂಗಪಡಿಸುವ ಆಹ್ವಾನ ಪತ್ರಿಕೆ ರಿಲೀಸ್‌ ಆಗಿ, ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ: Anant Ambani Video: ಮಹಾರಾಷ್ಟ್ರ ಸಿಎಂ ಹೆಗಲ ಮೇಲೆ ಕೈ ಹಾಕಿದ ಅಂಬಾನಿ ಮಗ! ನೀವೇನಂತೀರಿ?

Continue Reading
Advertisement
Valmiki Corporation Scam
ಕರ್ನಾಟಕ5 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇನ್ನೂ 10 ಕೋಟಿ‌ ಎಸ್ಐಟಿ ವಶಕ್ಕೆ, ಇದುವರೆಗೆ ರಿಕವರಿ ಆಗಿದ್ದೆಷ್ಟು?

baby Death
ತುಮಕೂರು43 mins ago

Baby Death : ಶವ ಸಾಗಿಸಲು ಹಣವಿಲ್ಲದೇ ರೈಲಿನಲ್ಲೇ ಶಿಶು ಬಿಟ್ಟು ಹೋದ ಪೋಷಕರು

Viral Video
Latest48 mins ago

Viral Video: ನಡುರಸ್ತೆಯಲ್ಲಿ ಬಟ್ಟೆ ಕಳಚಿ ಬೆತ್ತಲೆಯಾಗಿ ನಡೆದ ಮಹಿಳೆ; ಪುರುಷರು ಕಕ್ಕಾಬಿಕ್ಕಿ!

Shabbar Zaidi
ವಿದೇಶ52 mins ago

Shabbar Zaidi: ಮಸೀದಿಗಳ ಧ್ವನಿವರ್ಧಕದ ಬಗ್ಗೆ ಪಾಕಿಸ್ತಾನದಲ್ಲೇ ಕೇಳಿ ಬಂತು ಅಪಸ್ವರ; ಮೊಹಮ್ಮದ್ ಶಬ್ಬರ್ ಜೈದಿ ಹೇಳಿದ್ದೇನು?

Satish Jarkiholi
ಕರ್ನಾಟಕ54 mins ago

Satish Jarkiholi: 2028ಕ್ಕೆ ನಾನೇ ರಾಜ್ಯದ ಸಿಎಂ ಎಂದ ಸತೀಶ್‌ ಜಾರಕಿಹೊಳಿ; ಡಿಕೆಶಿಗೆ ಸಚಿವ ಸೆಡ್ಡು!

Baby Death
Latest54 mins ago

Baby Death : ಆಟವಾಡುತ್ತಿದ್ದ ಮಗುವಿನ ಪಾಲಿಗೆ ಯಮದೂತ ಆದ ಟಿವಿ ಸ್ಟ್ಯಾಂಡ್‌!

Kalaburagi News
ಕರ್ನಾಟಕ56 mins ago

Kalaburagi News: ಮೊರಾರ್ಜಿ ವಸತಿ ಶಾಲೆಯಲ್ಲಿ ಉಪಾಹಾರ ಸೇವಿಸಿ 17 ವಿದ್ಯಾರ್ಥಿನಿಯರು ಅಸ್ವಸ್ಥ

Kidnapping Case
ದೇಶ1 hour ago

Kidnapping Case: ಮಿಠಾಯಿ ತರಲೆಂದು ಮಕ್ಕಳನ್ನು ಬಿಟ್ಟು ಹೋದ ತಂದೆ-ತಾಯಿ; ಕಾರು ಸಮೇತ ಮಕ್ಕಳು ಕಿಡ್ನಾಪ್‌!

kalaburagi Murder Case
ಕಲಬುರಗಿ1 hour ago

Kalaburagi murder : ಚಾಕುವಿನಿಂದ ಇರಿದು ಕೊಂದು ಆಟೋ ಚಾಲಕನನ್ನು ಮರಕ್ಕೆ ನೇತು ಹಾಕಿದ ಹಂತಕರು

Battlegrounds Mobile India
ಬೆಂಗಳೂರು1 hour ago

Battlegrounds Mobile India : ಬಿಜಿಎಮ್​ಐ ಜತೆ ಹೊಸ ಪಾಲುದಾರಿಕೆ ಮಾಡಿಕೊಂಡ ಕೆಎಫ್​​ಸಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ20 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌