Actor Darshan: ರಕ್ತ ಕಾರಿಕೊಂಡು ಸತ್ತ ದರ್ಶನ್‌ ಫಾರಂ ಹೌಸ್ ಮ್ಯಾನೇಜರ್;‌ ಏನಿದು ಮತ್ತೊಂದು ನಿಗೂಢ? - Vistara News

ಪ್ರಮುಖ ಸುದ್ದಿ

Actor Darshan: ರಕ್ತ ಕಾರಿಕೊಂಡು ಸತ್ತ ದರ್ಶನ್‌ ಫಾರಂ ಹೌಸ್ ಮ್ಯಾನೇಜರ್;‌ ಏನಿದು ಮತ್ತೊಂದು ನಿಗೂಢ?

actor darshan: ದರ್ಶನ್‌ ಮ್ಯಾನೇಜರ್‌ (Darshan manager) ಆಗಿದ್ದ ಶ್ರೀಧರ್‌ ಎಂಬಾತ ಶಂಕಾಸ್ಪದವಾಗಿ ರಕ್ತ ಕಾರಿಕೊಂಡು ಸತ್ತಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

VISTARANEWS.COM


on

actor darshan manager death 3
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆನೇಕಲ್‌: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renuka Swamy Murder) ನಟ ದರ್ಶನ್‌ (Actor Darshan) ಪೊಲೀಸ್‌ ವಿಚಾರಣೆ ಎದುರಿಸುತ್ತಿರುವ ಹೊತ್ತಿನಲ್ಲಿಯೇ, ದರ್ಶನ್‌ಗೇ ಸಂಬಂಧಿಸಿದ ಇನ್ನೊಂದು ಅನುಮಾನಾಸ್ಪದ ಸಾವು (UDR case) ಬಯಲಿಗೆ ಬಂದಿದೆ. ದರ್ಶನ್‌ ಫಾರಂ ಹೌಸ್ ಮ್ಯಾನೇಜರ್‌ (Darshan manager) ಆಗಿದ್ದ ಶ್ರೀಧರ್‌ ಎಂಬಾತ ಶಂಕಾಸ್ಪದವಾಗಿ ರಕ್ತ ಕಾರಿಕೊಂಡು ಸತ್ತಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶ್ರೀಧರ್ (35) ಆತ್ಮಹತ್ಯೆ (self harming) ಮಾಡಿಕೊಂಡ ಮ್ಯಾನೇಜರ್. ಏಪ್ರಿಲ್ 17ನೇ ತಾರೀಕು ಈತ ವಿಷ (poison) ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದ. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಬಗ್ಗನದೊಡ್ಡಿಯಲ್ಲಿ ಘಟನೆ ನಡೆದಿದೆ. ಬಗ್ಗನದೊಡ್ಡಿಯಲ್ಲಿ ನಟ ದರ್ಶನ್‌ಗೆ ಸೇರಿದ ʼದುರ್ಗ ಫಾರ್ಮ್ ಹೌಸ್ʼ ಇದ್ದು, ಅಲ್ಲಿ ಈತ ಮ್ಯಾನೇಜರ್‌ ಆಗಿದ್ದ. ಸಾವಿಗೆ ಮುನ್ನ ವಿಡಿಯೋ ಮಾಡಿದ್ದು, ಡೆತ್‌ನೋಟ್‌ ಕೂಡ ಬರೆದಿಟ್ಟಿದ್ದಾನೆ.

ಎರಡು ತಿಂಗಳ ಹಿಂದೆ ಈ ಆತ್ಮಹತ್ಯೆ ಘಟಿಸಿದ್ದು, ಪೊಲೀಸರು ಅನುಮಾನಾಸ್ಪದ ಸಾವು (UDR) ದಾಖಲಿಸಿಕೊಂಡಿದ್ದರು. ಫಾರ್ಮ್ ಹೌಸ್ ಪಕ್ಕದಲ್ಲಿಯೇ ಈತ ವಿಷ ಸೇವಿಸಿ ರಕ್ತ ಕಾರಿಕೊಂಡು ಮೃತಪಟ್ಟಿದ್ದಾನೆ. ಬಗ್ಗನದೊಡ್ಡಿಯಲ್ಲಿ ಸುಮಾರು 2 ಎಕರೆ 36 ಗುಂಟೆ ಪ್ರದೇಶದಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಒಂದು ವರ್ಷ ಕಾಲ ಈತ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದ. ಫಾರ್ಮ್‌ ಹೌಸ್‌ ಪಕ್ಕದ ಕಲ್ಲು ಬಂಡೆ ಮೇಲೆ ಶ್ರೀಧರ್ ಮೃತದೇಹ ಪತ್ತೆಯಾಗಿತ್ತು. ಶ್ರೀಧರ್ ಮೃತ ದೇಹ ಕಂಡು ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದ.

ಒಂದು ಡೆತ್‌ ನೋಟನ್ನೂ (Death note) ಶ್ರೀಧರ್‌ ಬರೆದಿಟ್ಟಿದ್ದಾನೆ. ತಾನು ಮಾನಸಿಕ ಖಿನ್ನತೆಗೊಳಗಾಗಿ ಸೂಸೈಡ್ ಮಾಡಿಕೊಳ್ಳುತ್ತಿರುವುದಾಗಿ ಅದರಲ್ಲಿ ಬರೆದಿದ್ದಾನೆ. “ನನ್ನ ಸಾವಿಗೆ ನಾನೇ ಕಾರಣ. ಒಂಟಿತನ ಕಾಡುತ್ತಿದೆ. ಬದುಕಿದ್ದು ಮನೆ ಕಟ್ಟಬೇಕು ಎಂದು ಆಸೆ ಇತ್ತು. ಆಗಲಿಲ್ಲ. ನಾನು ಸತ್ತಮೇಲೆ ನನ್ನ ಗೋರಿ ಆದರೂ ಕಟ್ಟಿ” ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ. ಡೆತ್‌ನೋಟನ್ನು ಯಾವುದೇ ಚಿತ್ತು ಕಾಟಿಲ್ಲದೆ ಬರೆದು, ಹೆಸರು ಬರೆದು ಸಹಿ ಹಾಕಿ ಜೊತೆಗೆ ಹೆಬ್ಬೆಟ್ಟು ಗುರುತನ್ನೂ ಒತ್ತಿದ್ದಾನೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ UDR ಪ್ರಕರಣ ದಾಖಲಾಗಿದೆ.

“ನನ್ನ ಸಾವಿಗೆ ಬೇರೆ ಯಾರೂ ಕಾರಣರಲ್ಲ” ಎಂದು ಮತ್ತೆ ಮತ್ತೆ ಡೆತ್‌ನೋಟ್‌ನಲ್ಲಿ ಶ್ರೀಧರ್‌ ಉಲ್ಲೇಖಿಸಿದ್ದಾನೆ. “ನನ್ನ ಅಮ್ಮ ಅಪ್ಪ ಅಕ್ಕಂದಿರು ಯಾರಾದರೂ ನನ್ನ ಸಾವಿನ ಬಗ್ಗೆ ಅನುಮಾನವಿದೆ ಎಂದು ಕಂಪ್ಲೇಂಟ್‌ ಕೊಟ್ಟರೆ ಅದನ್ನು ತಗೋಬೇಡಿ. ನಾನು ತುಂಬಾ ಯೋಚನೆ ಮಾಡಿ ನನ್ನ ಪ್ರಾಣ ಕಳೆದುಕೊಳ್ತಾ ಇದೇನೆ” ಎಂದು ಬರೆದಿದ್ದಾನೆ. ಇದೇ ಈಗ ಅನುಮಾನಕ್ಕೆ ಕಾರಣವಾಗಿದೆ. ದರ್ಶನ್‌ ಹೆಸರನ್ನು ಎಲ್ಲೂ ಈತ ಉಲ್ಲೇಖಿಸಿಲ್ಲ.

ಸಾಕ್ಷಿದಾರರಾಗಿ ಬಳಕೆ

ದರ್ಶನ್ ಆಂಡ್ ಗ್ಯಾಂಗ್‌ನಿಂದ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಲ್ಲದೇ ಹಲವು ಮಂದಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಅವರ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಹೇಳಿಕೆ ನೀಡಿದವರನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳು ಸೇರಿ 27ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಲಾಗಿದೆ. 27 ಮಂದಿಯಲ್ಲಿ 17 ಮಂದಿ ಬಂಧಿತ ಆರೋಪಿಗಳು. ನಟ ದರ್ಶನ್, ಪವಿತ್ರ ಗೌಡ ಸೇರಿ 17 ಮಂದಿ ಬಂಧಿತ ಆರೋಪಿಗಳು. ಇನ್ನುಳಿದ 10 ಮಂದಿಯನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ. ಸಾಕ್ಷಿಗಳು ಎಂದು ಈವರೆಗೆ 10 ಮಂದಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.

ಘಟನಾ ಸ್ಥಳದಲ್ಲಿ ಹಾಜರಿದ್ದ ಕೆಲವರು, ಬೇರೆಬೇರೆ ಕಡೆಗಳಲ್ಲಿ ಪ್ರತ್ಯಕ್ಷ ಪರೋಕ್ಷವಾಗಿ ಕಂಡು ಬಂದ ವ್ಯಕ್ತಿಗಳ ವಿಚಾರಣೆ ನಡೆಸಲಾಗಿದೆ. ಅವರನ್ನು ರೇಣುಕಾಸ್ವಾಮಿ ಕೊಲೆ ಸಂಬಂಧ ಸಾಕ್ಷಿಗಳು ಎಂದು ಪರಿಗಣಿಸಿ ಹೇಳಿಕೆ ದಾಖಲು ಮಾಡಲಾಗಿದೆ. ಶೆಡ್ ಬಳಿ ಇದ್ದ ಇನ್ನೂ ಕೆಲವರ ಹೇಳಿಕೆ ಪಡೆದುಕೊಂಡಿದ್ದಾರೆ. ಘಟನೆ ಹೇಗಾಯ್ತು, ಯಾರು ಯಾರು ಇದ್ದರು, ಎಷ್ಟು ಜನ ಸೇರಿದ್ದರು, ದರ್ಶನ್ ಎಷ್ಟು ಹೊತ್ತಿಗೆ ಬಂದಿದ್ದು, ಯಾವಯಾವ ಆಯುಧಗಳಿಂದ ಹಲ್ಲೆ ಮಾಡಿದರು, ಹೀಗೆ ಹಲವು ವಿಚಾರಗಳ ಬಗ್ಗೆ ಹೇಳಿಕೆ ದಾಖಲಿಸಿದ್ದಾರೆ. ಶೆಡ್‌ನ ಸಿಸಿ ಕ್ಯಾಮೆರಾ ಫೂಟೇಜ್‌ಗಳನ್ನು ದರ್ಶನ್‌ ಗ್ಯಾಂಗ್‌ ನಾಶ ಮಾಡಿರುವ ಹಿನ್ನೆಲೆಯಲ್ಲಿ, ಈ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಮಹತ್ವ ಪಡೆದುಕೊಳ್ಳಲಿದೆ.

ಇದನ್ನೂ ಓದಿ: Actor Darshan: ಹಾಸ್ಯನಟ ಚಿಕ್ಕಣ್ಣಗೆ ಮೂರು ಗಂಟೆ ಪೊಲೀಸರ ಡ್ರಿಲ್‌, ರೇಣುಕಾಸ್ವಾಮಿ ಕೊಲೆ ವಿಷಯ ಬಂತಾ ಪಾರ್ಟಿಯಲ್ಲಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಕರ್ನಾಟಕ ತೋಟದಪ್ಪನ ಛತ್ರ ಅಲ್ಲ; ಕನ್ನಡಿಗರಿಗೆ ಉದ್ಯೋಗಕ್ಕೆ ಆಗ್ರಹಿಸಿ ಜು.1ರಂದು ಕರವೇ ಬೃಹತ್‌ ಪ್ರತಿಭಟನೆ!

ಕರ್ನಾಟಕ ರಕ್ಷಣಾ ವೇದಿಕೆಯಿಂದ ʼಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜುಲೈ 1 ರಂದು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದು, ಸಾವಿರಾರು ಕರವೇ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.

VISTARANEWS.COM


on

Rakshana Vedike
Koo

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯಿಂದ (Karnataka Rakshana Vedike) ʼಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜುಲೈ 1ರಂದು ಬೃಹತ್ ಧರಣಿ ಸತ್ಯಾಗ್ರಹ (KaRaVe Protest) ನಡೆಸಲಿದ್ದು, ಸಾವಿರಾರು ಕರವೇ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ (Bengaluru News) ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕಕ್ಕೆ ಹೊರರಾಜ್ಯಗಳಿಂದ ಅವ್ಯಾಹತವಾಗಿ ವಲಸೆ ನಡೆಯುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಇದು ತೀವ್ರ ಸ್ವರೂಪ ಪಡೆದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಮಹಾನಗರಗಳು ವಲಸಿಗರ ಹಾವಳಿಯಿಂದ ಸಂಪೂರ್ಣ ಬದಲಾಗುತ್ತಿವೆ. ಕನ್ನಡಿಗರ ಉದ್ಯೋಗಗಳನ್ನು ಹೊರರಾಜ್ಯದವರು ಕಿತ್ತುಕೊಳ್ಳುತ್ತಿದ್ದಾರೆ. ಕನ್ನಡಿಗರು ತಮ್ಮ ನೆಲದಲ್ಲೇ ನಿರುದ್ಯೋಗಿಗಳಾಗುವ ಸ್ಥಿತಿ ನಿರ್ಮಾಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಕ್ಷಣಾ ವೇದಿಕೆ ದೊಡ್ಡ ಪ್ರಮಾಣದ ಚಳವಳಿಗೆ ಸಜ್ಜಾಗಿದೆ. ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸಮಗ್ರ ಕಾಯ್ದೆ ರೂಪಿಸಲು ಆಗ್ರಹಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಹಕ್ಕೊತ್ತಾಯಗಳು

ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946 ಅನ್ವಯ ರಾಜ್ಯ ಸರ್ಕಾರ ಬಲಿಷ್ಠವಾದ ಕಾನೂನು ರೂಪಿಸಿ, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಬೇಕು. ಎಲ್ಲ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ.100 ರಷ್ಟು ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಬೇಕು.

ಎಲ್ಲ ಖಾಸಗಿ ಸಂಸ್ಥೆಗಳ ಇತರ ಹುದ್ದೆಗಳಲ್ಲಿ ಶೇ. 80ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು. ಹದಿನೈದು ವರ್ಷ ಕಾಲ ಕರ್ನಾಟಕದಲ್ಲಿ ನೆಲೆಸಿದವರನ್ನು ಕನ್ನಡಿಗರೆಂದು ಪರಿಗಣಿಸುವ ನಿಯಮವಿದೆ. ಇವರಿಗೆ ಕಡ್ಡಾಯವಾಗಿ ಕನ್ನಡ ಬರವಣಿಗೆಯ ಪರೀಕ್ಷೆಯನ್ನು ನೀಡಿ, ಅದರಲ್ಲಿ ಉತ್ತೀರ್ಣರಾದವರನ್ನು ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು.

ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ನೀಡಿರುವ ಮಾನ್ಯತೆ ರದ್ದುಗೊಳಿಸಿ, ಅವುಗಳಿಗೆ ಭೂಮಿ ನೀಡಲಾಗಿದ್ದರೆ ಹಿಂದಕ್ಕೆ ಪಡೆಯುವ ಮತ್ತು ಆ ಸಂಸ್ಥೆಗಳಿಗೆ ನೀಡಿರುವ ಎಲ್ಲ ಸವಲತ್ತುಗಳನ್ನು ಹಿಂದಕ್ಕೆ ಪಡೆಯುವ ನಿಯಮವನ್ನು ರೂಪಿಸಬೇಕು. ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ದಂಡ ವಿಧಿಸಬೇಕು ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಬೇಕು. ರಾಜ್ಯ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ 100 ಪ್ರತಿಶತ ಮೀಸಲಾತಿ ನೀಡಬೇಕು.

ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಗ್ರೂಪ್ ‘ಸಿ’ ಮತ್ತು ಗ್ರೂಪ್ ‘ಡಿ’ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇಕಡಾ 100 ಮೀಸಲಾತಿ ನೀಡಬೇಕು. ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಿಗೆ ಹೊರತಾದ ಉಳಿದೆಲ್ಲ ಹುದ್ದೆಗಳಲ್ಲೂ ಶೇ. 90ರಷ್ಟು ಮೀಸಲಾತಿ ನೀಡಬೇಕು.

ರಾಜ್ಯ, ಕೇಂದ್ರ ಸರ್ಕಾರದ ಇಲಾಖೆಗಳು, ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಅವಕಾಶವನ್ನು ಉದ್ದೇಶಿತ ಕಾನೂನಿನಲ್ಲಿ ಅಳವಡಿಸಬೇಕು.

ರಾಜ್ಯ ಸರ್ಕಾರ ರೂಪಿಸುವ ಕಾನೂನನ್ನು ಸಮರ್ಪಕವಾಗಿ ಜಾರಿಗೆ ತರಲು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡಬೇಕು. ಮುಂದೆ ಕಾನೂನು ಸಮಸ್ಯೆಗಳು ಎದುರಾದರೆ ಅದನ್ನು ಎದುರಿಸಲು ಸಮರ್ಥ ವಕೀಲರ ತಂಡವನ್ನು ಸಿದ್ಧಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: letter to President: ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ: ನ್ಯಾಯ ಕೊಡಿಸಲು ರಾಷ್ಟ್ರಪತಿಗಳಿಗೆ ಕರವೇ ನಾರಾಯಣಗೌಡ ಮನವಿ

Continue Reading

Latest

Viral Video: ನಡುರಸ್ತೆಯಲ್ಲಿ ಬಟ್ಟೆ ಕಳಚಿ ಬೆತ್ತಲೆಯಾಗಿ ನಡೆದ ಮಹಿಳೆ; ಪುರುಷರು ಕಕ್ಕಾಬಿಕ್ಕಿ!

Viral Video ಫ್ಯಾಷನ್ ಎನ್ನುವುದು ಎಷ್ಟರ ಮಟ್ಟಿಗೆ ನಮ್ಮನ್ನು ಆವರಿಸಿದೆ ಎಂದರೆ ಇಂದು ಏನೇ ಮಾಡಿದರೂ ಸರಿ ಎನ್ನುವ ಮಟ್ಟಿಗೆ ಆಗಿದೆ. ಮೈ ತುಂಬಾ ಬಟ್ಟೆ ಧರಿಸುವುದು ನಮ್ಮ ಸಂಪ್ರದಾಯ ಆದರೆ ಈಗ ತುಂಡುಡುಗೆ ಧರಿಸಿಕೊಂಡು ಹೋಗುವುದೇ ಫ್ಯಾಷನ್ ಆಗಿದೆ. ಆದರೆ ಇಲ್ಲೊಬ್ಬಳು ಮಹಿಳೆ ನಡುರಸ್ತೆಯಲ್ಲಿ ಮೈ ಮೇಲೆ ಬಟ್ಟೆ ಇಲ್ಲದೇ ನಡೆದುಕೊಂಡು ಹೋಗಿದ್ದಾಳೆ. ಇವಳು ಹೀಗ್ಯಾಕೆ ಮಾಡಿದ್ದಾಳೆ ಎಂಬುದಕ್ಕೆ ಕಾರಣ ಗೊತ್ತಿಲ್ಲ, ಇನ್ನು ಈ ಮಹಿಳೆ ಯಾರೂ ಎಂಬುದು ಕೂಡ ತಿಳಿದಿಲ್ಲ.

VISTARANEWS.COM


on

Viral Video
Koo

ಗಾಜಿಯಾಬಾದ್ : ಹೆಣ್ಣಾಗಲಿ, ಗಂಡಾಗಲಿ ಅಗತ್ಯ ಇರುವಷ್ಟಾದರೂ ಬಟ್ಟೆ ತೊಟ್ಟುಕೊಂಡರೆ ಚೆನ್ನ. ಆದರೆ ಈಗ ಬಟ್ಟೆ ಬಗ್ಗೆ ಮಾತನಾಡುವ ಹಾಗೇ ಇಲ್ಲ. ಫ್ಯಾಷನ್‌ ನೆಪವೊಡ್ಡಿ ತಮ್ಮಿಷ್ಟದ ಬಟ್ಟೆ ಧರಿಸಿಕೊಂಡು ಓಡಾಡುವುದು ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಇಲ್ಲೊಬ್ಬ ಮಹಿಳೆ ನಡುರಸ್ತೆಯಲ್ಲಿ ನಗ್ನವಾಗಿ ಓಡಾಡಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ವೈರಲ್ (Viral Video )ಆಗಿದೆ.

ವಿಡಿಯೊದಲ್ಲಿ ಗಾಜಿಯಾಬಾದ್‌ನ ಮೋಹನ್ ನಗರದ ಚೌರಾಹಾದ ಜನನಿಬಿಡ ರಸ್ತೆಯಲ್ಲಿ ಮಹಿಳೆ ನಗ್ನವಾಗಿ ನಡೆದುಕೊಂಡು ಹೋಗುವುದು ಕಂಡುಬಂದಿದೆ. ಆದರೆ ಮಹಿಳೆಯನ್ನು ಈ ಸ್ಥಿತಿಯಲ್ಲಿ ಕಂಡು ಪುರುಷರು ಬಿಡಿ ಮಹಿಳೆಯರು ಕೂಡ ಸುಮ್ಮನೆ ನೋಡಿ ಹೋದರೇ ವಿನಃ ಆಕೆಯನ್ನು ತಡೆಯಲು ಅಥವಾ ಅವಳಿಗೆ ಬಟ್ಟೆಗಳನ್ನು ನೀಡಲು ಯಾರೂ ಪ್ರಯತ್ನಿಸುತ್ತಿಲ್ಲ ಎಂಬುವುದನ್ನು ಕಾಣಬಹುದು. ಆದರೆ ಮಹಿಳೆಯ ಗುರುತು ತಿಳಿದುಬಂದಿಲ್ಲ. ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸ್ ಅಧಿಕಾರಿಗಳು ಘಟನೆಯ ಬಗ್ಗೆ ತಿಳಿದು ಮಹಿಳೆಯನ್ನು ಗುರುತಿಸಲು ಮತ್ತು ಅವಳು ಎಲ್ಲಿಗೆ ಹೋದಳು ಎಂಬುದನ್ನು ಪತ್ತೆ ಹಚ್ಚಲು ವಿಡಿಯೊ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ವರದಿಗಳ ಪ್ರಕಾರ, ಈ ವೀಡಿಯೊವನ್ನು ಜೂನ್ 25 ರಂದು ರೆಕಾರ್ಡ್ ಮಾಡಲಾಗಿದ್ದು, 10 ಸೆಕೆಂಡುಗಳ ಈ ವಿಡಿಯೊದಲ್ಲಿ ವಾಹನಗಳು ಮತ್ತು ಪಾದಚಾರಿಗಳು ಹಾದುಹೋಗುವ ಭಾರಿ ದಟ್ಟಣೆಯ ಸ್ಥಳದಲ್ಲಿ ಮಹಿಳೆಯನ್ನು ಸೆರೆಹಿಡಿಯಲಾಗಿದೆ. ಮಹಿಳೆಯ ಗುರುತನ್ನು ಬಹಿರಂಗಪಡಿಸಲಾಗಿಲ್ಲ. ಅವಳು ಈ ಸ್ಥಿತಿಯಲ್ಲಿ ಏಕೆ ಇದ್ದಳು ಅಥವಾ ಅವಳು ಹೇಗೆ ರಸ್ತೆಗೆ ಬಂದಳು ಎಂಬುದು ಸ್ಪಷ್ಟವಾಗಿಲ್ಲ. ಈ ಘಟನೆಯು ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಆಕ್ರೋಶ ಮತ್ತು ಟೀಕೆಗಳನ್ನು ಹುಟ್ಟುಹಾಕಿದೆ. ಪೊಲೀಸ್ ಬೂತ್ ಸಮೀಪದಲ್ಲಿದ್ದರೂ, ಕೂಡ ಬುಧವಾರ ರಾತ್ರಿ ವಿಡಿಯೊ ಆನ್ ಲೈನ್ ನಲ್ಲಿ ಕಾಣಿಸಿಕೊಳ್ಳುವವರೆಗೂ ಅಧಿಕಾರಿಗಳಿಗೆ ತಿಳಿದಿರಲಿಲ್ಲ ಎನ್ನಲಾಗಿದೆ.

ಈ ವರ್ಷದ ಆರಂಭದಲ್ಲಿ, ದೆಹಲಿಯಲ್ಲಿ ಪ್ರಯಾಣಿಕರಿಂದ ತುಂಬಿದ್ದ ಬಸ್‌ನಲ್ಲಿ ಬಿಕಿನಿ ಧರಿಸಿದ ಮಹಿಳೆಯೊಬ್ಬರು ಪ್ರಯಾಣ ಮಾಡುತ್ತಿರುವ ವಿಡಿಯೊ ಕೂಡ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಈ ಮಹಿಳೆಯನ್ನು ನೋಡಿ ಪ್ರಯಾಣಿಕರಿಂದ ವಿಭಿನ್ನ ಪ್ರತಿಕ್ರಿಯೆ ಕಂಡುಬಂದಿತ್ತು, ಕೆಲವರು ಆಶ್ಚರ್ಯದಿಂದ ನೋಡಿದರು ಮತ್ತು ಕೆಲವರು ಅಸಡ್ಡೆ ತೋರಿದರು.

ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಉಡುಪನ್ನು ಸಾರ್ವಜನಿಕ ಬಸ್‌ಗಳಲ್ಲಿ ಪ್ರಯಾಣಿಸಲು ಸೂಕ್ತವಲ್ಲ ಎಂದು ಹಲವರು ಟೀಕೆ ಮಾಡಿದರೆ, ಕೆಲವರು ಇದರಲ್ಲಿ ತಪ್ಪೇನು ಎಂದು ಆಕೆಗೆ ಬೆಂಬಲ ನೀಡಿದ್ದಾರೆ.

Continue Reading

ವಿದೇಶ

Shabbar Zaidi: ಮಸೀದಿಗಳ ಧ್ವನಿವರ್ಧಕದ ಬಗ್ಗೆ ಪಾಕಿಸ್ತಾನದಲ್ಲೇ ಕೇಳಿ ಬಂತು ಅಪಸ್ವರ; ಮೊಹಮ್ಮದ್ ಶಬ್ಬರ್ ಜೈದಿ ಹೇಳಿದ್ದೇನು?

Shabbar Zaidi: ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಸ್ಥಾಪಿಸುವ ವಿಚಾರದ ಬಗ್ಗೆ ಪಾಕಿಸ್ತಾನದ ಫೆಡರಲ್ ಬೋರ್ಡ್ ಆಫ್ ರೆವೆನ್ಯೂ ಮಾಜಿ ಅಧ್ಯಕ್ಷ ಸೈಯದ್ ಮೊಹಮ್ಮದ್ ಶಬ್ಬರ್ ಜೈದಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸದ್ಯ ಸೈಯದ್ ಮೊಹಮ್ಮದ್ ಶಬ್ಬರ್ ಜೈದಿ ಅವರ ಈ ವಿಡಿಯೊ ಪಾಕಿಸ್ತಾನದಲ್ಲಿ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ನೆಟ್ಟಿಗರು ಬಗ್ಗೆ ವಿಧ ವಿಧವಾಗಿ ಕಮೆಂಟ್ ಮಾಡುತ್ತಿದ್ದಾರೆ.

VISTARANEWS.COM


on

Shabbar Zaidi
Koo

ಇಸ್ಲಾಮಾಬಾದ್‌: ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಸ್ಥಾಪಿಸುವ ವಿಚಾರದ ಬಗ್ಗೆ ಭಾರತ ಮಾತ್ರವಲ್ಲದೆ ಪಾಕಿಸ್ತಾನದಲ್ಲಿಯೂ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಪಾಕಿಸ್ತಾನದ ಫೆಡರಲ್ ಬೋರ್ಡ್ ಆಫ್ ರೆವೆನ್ಯೂ (Federal Board of Revenue) ಮಾಜಿ ಅಧ್ಯಕ್ಷ ಸೈಯದ್ ಮೊಹಮ್ಮದ್ ಶಬ್ಬರ್ ಜೈದಿ (Syed Mohammad Shabbar Zaidi) ಅವರು ಮಾತನಾಡಿರುವ ವಿಡಿಯೋ ಈಗ ವೈರಲ್ ಆಗುತ್ತಿದೆ. ಅವರು ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಸ್ಥಾಪಿಸುವುದು ಅನಗತ್ಯ ಎಂದು ಹೇಳಿದ್ದಾರೆ (Viral Video).

ಪಾಕಿಸ್ತಾನದ ಯೂಟ್ಯೂಬರ್ ಜತೆ ಮಾತನಾಡಿದ ಜೈದಿ, ʼʼನೀವು ಇತರರಿಗೆ ತೊಂದರೆ ನೀಡಿ ಅಜಾನ್ ಅನ್ನು ಜೋರಾಗಿ ಕೂಗುವುದು ಸರಿಯಲ್ಲ. ಅಲ್ಲಾಹನೊಂದಿಗಿನ ಜತೆಗಿನ ಸಂಬಂಧದ ಮಧ್ಯೆ ಇತರರಿಗೆ ನೋವು ನೀಡುವುದೇಕೆ? ನಾನು ಬರುತ್ತಿದ್ದಾಗ ಎಷ್ಟು ದೊಡ್ಡ ಅಜಾನ್ ಶಬ್ದ ಕೇಳಿಸಿಕೊಂಡಿತ್ತೆಂದರೆ ಅದು ನನ್ನ ತಲೆಗೆ ಅಪ್ಪಳಿಸಿತು. ನನಗೆ ಅದು ಇಷ್ಟವಿಲ್ಲ. ಏನು ನಡೆಯುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ. ಅಷ್ಟಕ್ಕೂ, ಇಷ್ಟು ದೊಡ್ಡ ಧ್ವನಿವರ್ಧಕಗಳನ್ನು ಏಕೆ ಸ್ಥಾಪಿಸಲಾಗುತ್ತಿದೆ?ʼʼ ಎಂದು ಅವರು ಪ್ರಶ್ನಿಸಿದ್ದಾರೆ.

ತೀವ್ರ ಚರ್ಚೆ

ಸದ್ಯ ಸೈಯದ್ ಮೊಹಮ್ಮದ್ ಶಬ್ಬರ್ ಜೈದಿ ಅವರ ಈ ವಿಡಿಯೊ ಪಾಕಿಸ್ತಾನದಲ್ಲಿ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ನೆಟ್ಟಿಗರು ಬಗ್ಗೆ ವಿಧ ವಿಧವಾಗಿ ಕಮೆಂಟ್ ಮಾಡುತ್ತಿದ್ದಾರೆ. ಜೈದಿ ಇಂತಹ ಹೇಳಿಕೆಗಳನ್ನು ನೀಡುತ್ತಿರುವುದು ಇದು ಮೊದಲ ಸಲವೇನಲ್ಲ. ಅವರ ಆಗಾಗ ಪಾಕಿಸ್ತಾನದ ಜನರನ್ನು ಧಾರ್ಮಿಕ ನಡೆಯನ್ನು ಟೀಕಿಸುತ್ತ ಬಂದಿದ್ದಾರೆ. ಪಾಕಿಸ್ತಾನದಲ್ಲಿ ಧರ್ಮಗುರುಗಳ ಕೈಯಲ್ಲಿರುವ ಅಧಿಕಾರವು ಹಾನಿಕಾರಕವೆಂದು ಸಾಬೀತಾಗಿದೆ ಎಂದು ಜೈದಿ ಇತ್ತೀಚೆಗೆ ಹೇಳಿಕೆ ನೀಡಿದ್ದರು.

ಭಾರತದ ಕುರಿತು ಮೆಚ್ಚುಗೆ

ಇದೇ ವೇಳೆ ಜೈದಿ ಅವರು ಭಾರತವನ್ನು ಹೊಗಳಿದ್ದಾರೆ. ಇಲ್ಲಿನ ವ್ಯವಸ್ಥೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಪಾಕಿಸ್ತಾನದೊಂದಿಗೆ ಹೋಲಿಸಿ ಭಾರತವನ್ನು ಶ್ಲಾಘಿಸಿದ್ದಾರೆ. ಮನಮೋಹನ್ ಸಿಂಗ್ ಅವರಂತಹ ನಾಯಕ ಪಾಕಿಸ್ತಾನಕ್ಕೆ ಇಲ್ಲ ಎಂದು ಜೈದಿ ಹೇಳಿದ್ದಾರೆ. ʼʼಅಂತಹವರು ಇಲ್ಲಿದ್ದರೆ ಇಂದು ಪಾಕಿಸ್ತಾನ ಇನ್ನಷ್ಟು ಬಲಿಷ್ಠವಾಗುತ್ತಿತ್ತು. ಆರ್ಥಿಕವಾಗಿ ದರಢವಾಗುತ್ತಿತ್ತು. 1992ರಲ್ಲಿ ಭಾರತ ಮತ್ತು ಪಾಕಿಸ್ತಾನದ ಪರಿಸ್ಥಿತಿ ಒಂದೇ ಆಗಿತ್ತು. ಭಾರತ ಇಂದು ಯಶಸ್ಸಿನ ಉತ್ತುಂಗಕ್ಕೇರಿದೆ. ಆದರೆ ಪಾಕಿಸ್ತಾನ ಇನ್ನೂ ಹಿಂದೆ ಇದೆ. ಅದಕ್ಕೆ ಕಾರಣ ಭಾರತದಲ್ಲಿ ಮನಮೋಹನ್ ಸಿಂಗ್ ಅವರಂತಹವರು ಇದ್ದರುʼʼ ಎಂದು ಮಾಜಿ ಪ್ರಧಾನಿಯ ಕುರಿತು ಹೊಗಳಿಕೆಯ ಮಾತುಗಳನ್ನು ಆಡಿದ್ದಾರೆ.

ಕಾಶ್ಮೀರವನ್ನು ಮರೆತು ಬಿಡಿ

ಜತೆಗೆ ಅವರು ಪಾಕಿಸ್ತಾನವು ಕಾಶ್ಮೀರವನ್ನು ಮರೆತು ಬಿಡಿವುದು ಒಳಿತು ಎಂದು ಸಲಹೆ ನೀಡಿದ್ದಾರೆ. “ಪಾಕಿಸ್ತಾನವು ಕಾಶ್ಮೀರ, ಇಸ್ಲಾಂ ಇತ್ಯಾದಿಗಳನ್ನು ಮರೆತು ಭಾರತದ ಮುಂದೆ ಮಂಡಿಯೂರಿ ನಿಲ್ಲಬೇಕು. ನಾವು ಭಾರತಕ್ಕೆ ಸಮಾನರಲ್ಲ. ಪಾಕಿಸ್ತಾನ ಸೇನೆಗೆ ತನ್ನ ಸೈನಿಕರನ್ನು ರಕ್ಷಿಸಲು ಸಾಧ್ಯವಾಗುತ್ತಿಲ್ಲʼʼ ಎಂದೂ ಅವರು ಹೇಳಿದ್ದಾರೆ.

ಜೈದಿ ಅವರು 2019ರ ಮೇಯಿಂದ 2020ರ ಏಪ್ರಿಲ್‌ವರೆಗೆ ಪಾಕಿಸ್ತಾನದ ಫೆಡರಲ್ ಬೋರ್ಡ್ ಆಫ್ ರೆವೆನ್ಯೂನ 26 ನೇ ಅಧ್ಯಕ್ಷರಾಗಿದ್ದರು. ಅವರು Panama Leaks – A Blessing in Disguise – Offshore Assets of Pakistani Citizens, A Journey for Clarity and Pakistan: Not a Failed State ಮುಂತಾದ ಪುಸ್ತಕ ಬರೆದಿದ್ದಾರೆ.

ಇದನ್ನೂ ಓದಿ: Hardeep Singh Nijjar: ಪಾಕಿಸ್ತಾನಕ್ಕೂ ಭೇಟಿ ಕೊಟ್ಟಿದ್ದನಂತೆ ನಿಜ್ಜರ್‌; ಖಲಿಸ್ತಾನಿ ಉಗ್ರನ ಬಗ್ಗೆ ಮತ್ತಷ್ಟು ಭೀಕರ ಸಂಗತಿ ಬಯಲು

Continue Reading

ಕರ್ನಾಟಕ

Satish Jarkiholi: 2028ಕ್ಕೆ ನಾನೇ ರಾಜ್ಯದ ಸಿಎಂ ಎಂದ ಸತೀಶ್‌ ಜಾರಕಿಹೊಳಿ; ಡಿಕೆಶಿಗೆ ಸಚಿವ ಸೆಡ್ಡು!

Satish Jarkiholi: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಚಾರವೂ ತೀವ್ರವಾಗಿ ಮುನ್ನೆಲೆಗೆ ಬಂದಿದೆ. ಆಯಾ ಸಮುದಾಯಗಳ ಸ್ವಾಮೀಜಿಗಳು ನಾಯಕರ ಹೆಸರನ್ನು ಸೂಚಿಸಿ, ಇವರನ್ನೇ ಸಿಎಂ ಮಾಡಿ ಎಂದು ಆಗ್ರಹಿಸುತ್ತಿದ್ದಾರೆ. ಕಾಂಗ್ರೆಸ್‌ ಶಾಸಕರು, ಸಚಿವರು ಕೂಡ ಇದನ್ನೇ ಚರ್ಚಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಮುಂದಿನ ಚುನಾವಣೆ ಬಳಿಕ ನಾನೇ ಸಿಎಂ ಎಂದು ಸತೀಶ್‌ ಜಾರಕಿಹೊಳಿ ಅವರು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

VISTARANEWS.COM


on

Satish Jarkiholi
Koo

ಚಿಕ್ಕೋಡಿ: ಕಳೆದ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಒಗ್ಗಟ್ಟಿನ ಮಂತ್ರ ಪಠಿಸಿದ್ದ ಕಾಂಗ್ರೆಸ್‌ ನಾಯಕರ ಮಧ್ಯೆಯೇ ಈಗ ಭಿನ್ನಾಭಿಪ್ರಾಯಗಳು ಮೂಡಿವೆ. ಅದರಲ್ಲೂ, ಮುಖ್ಯಮಂತ್ರಿ ಬದಲಾವಣೆ ವಿಚಾರವು ಮುನ್ನೆಲೆಗೆ ಬಂದಿದ್ದು, ಸ್ವಾಮೀಜಿಗಳು ಕೂಡ ಇದರ ಚರ್ಚೆಗೆ ಪದಾರ್ಪಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ, ‘2028ರಲ್ಲಿ ನಾನು ಕೂಡ ಮುಖ್ಯಮಂತ್ರಿಯಾಗಲು ಹಕ್ಕು ಮಂಡಿಸುತ್ತೇನೆ’ ಎಂದು ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಹೇಳುವ ಮೂಲಕ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್‌ (DK Shivakumar) ಅವರಿಗೆ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾತನಾಡಿದ ಅವರು, “2028ರಲ್ಲಿ ನಾನು ಕೂಡ ಸಿಎಂ ಆಗುತ್ತೇನೆ. ಆಗಿನ ಚುನಾವಣೆ ಫಲಿತಾಂಶದ ಬಳಿಕದ ಪರಿಸ್ಥಿತಿ ನೋಡಿಕೊಂಡು ಸಿಎಂ ಸ್ಥಾನಕ್ಕೆ ಹಕ್ಕು ಚಲಾವಣೆ ಮಾಡುತ್ತೇನೆ. ಮುಖ್ಯಮಂತ್ರಿ ಬದಲಾವಣೆ ವಿಚಾರ ಮುಗಿದುಹೋಗಿದೆ. ಸಿಎಂ ಬದಲಾವಣೆ ವಿಚಾರವು ಹೈಕಮಾಂಡ್‌ ತೀರ್ಮಾನವಾಗಿದೆ. ಡಿಸಿಎಂಗಳ ವಿಚಾರವೂ ಚುನಾವಣೆಗೆ ಮೊದಲು ಕೇಳಿಬಂದಿತ್ತು. ಈಗ ಮಾಡಬೇಕಾ, ಬೇಡವಾ ಎಂಬುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರವಾಗಿದೆ” ಎಂದು ಹೇಳಿದರು.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಚಾರವೂ ತೀವ್ರವಾಗಿ ಮುನ್ನೆಲೆಗೆ ಬಂದಿದೆ. ಆಯಾ ಸಮುದಾಯಗಳ ಸ್ವಾಮೀಜಿಗಳು ನಾಯಕರ ಹೆಸರನ್ನು ಸೂಚಿಸಿ, ಇವರನ್ನೇ ಸಿಎಂ ಮಾಡಿ ಎಂದು ಆಗ್ರಹಿಸುತ್ತಿದ್ದಾರೆ. ಕಾಂಗ್ರೆಸ್‌ ಶಾಸಕರು, ಸಚಿವರು ಕೂಡ ಇದನ್ನೇ ಚರ್ಚಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಮುಂದಿನ ಚುನಾವಣೆ ಬಳಿಕ ನಾನೇ ಸಿಎಂ ಎಂದು ಸತೀಶ್‌ ಜಾರಕಿಹೊಳಿ ಅವರು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಚಂದ್ರಶೇಖರ ಸ್ವಾಮೀಜಿ ಹೇಳಿದ್ದಿಷ್ಟು

ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು ಕೆಲ ದಿನಗಳ ಹಿಂದೆ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇದಿಕೆ ಮೇಲೆಯೇ ಡಿ.ಕೆ.ಶಿವಕುಮಾರ್‌ ಅವರ ಪರವಾಗಿ ಬ್ಯಾಟಿಂಗ್‌ ಮಾಡಿದ್ದರು. “ಎಲ್ಲರೂ ಮುಖ್ಯಮಂತ್ರಿಗಳಾಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿ.ಕೆ. ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು” ಹೇಳಿದ್ದರು.

ಲಿಂಗಾಯತ ಸಿಎಂ ಕೂಗು

ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಬೇಕು ಎಂದು ಬಾಳೆಹೊನ್ನೂರು‌ಶ್ರೀ ರಂಭಾಪುರಿ ಡಾ.ವೀರ‌ಸೋಮೇಶ್ವರ ಜಗದ್ಗುರು ಆಗ್ರಹಿಸಿದ್ದಾರೆ. “ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿವೆ. ಹಾಗಾಗಿ, ವೀರಶೈವ ಲಿಂಗಾಯತ ಸಮುದಾಯದ ನಾಯಕರಿಗೆ ಸಿಎಂ ಸ್ಥಾನ ಕೊಟ್ಟರೂ ತಪ್ಪಿಲ್ಲ. ಬಹುಸಂಖ್ಯಾತ ವೀರಶೈವ ಲಿಂಗಾಯತ ಸಮುದಾಯ‌ವು ಕಾಂಗ್ರೆಸ್‌ಗೆ ಬೆಂಬಲ ಕೊಟ್ಟಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ಕೊಟ್ಟರೆ ರಾಜ್ಯದಲ್ಲಿ ಒಳ್ಳೆಯ ಅಭಿವೃದ್ಧಿಯಾಗುತ್ತದೆ. ಸಿಎಂ ಸ್ಥಾನ ಅಲ್ಲದಿದ್ದರೂ ಡಿಸಿಎಂ ಸ್ಥಾನವನ್ನಾದರೂ ಕೊಡಬೇಕು” ಎಂದು ಹೇಳಿದರು.

ಇದನ್ನೂ ಓದಿ: Karnataka CM Row: ‘ಗೌಡ’ ಸಿಎಂ ಆಯ್ತು, ಈಗ ‘ಲಿಂಗಾಯತ’ ಸಿಎಂ ಕೂಗು; ರಂಭಾಪುರಿ ಶ್ರೀ ಹೇಳಿದ ಹೆಸರಿದು!

Continue Reading
Advertisement
Sania Mirza
ಕ್ರೀಡೆ16 mins ago

Sania Mirza: ಶಮಿ ಜತೆ ಮದುವೆ ಟಾಕ್​ ಬೆನ್ನಲ್ಲೇ ಇನ್​ಸ್ಟಾಗ್ರಾಮ್​ನಲ್ಲಿ ‘YES’ ಎಂದು ಬರೆದುಕೊಂಡ ಸಾನಿಯಾ ಮಿರ್ಜಾ

Mohamed Muizzu
ವಿದೇಶ18 mins ago

Mohamed Muizzu: ಮಾಲ್ಡೀವ್ಸ್‌ ಅಧ್ಯಕ್ಷನ ವಿರುದ್ಧ ವಾಮಾಚಾರ; ಸಚಿವೆ ಅರೆಸ್ಟ್‌

Rakshana Vedike
ಕರ್ನಾಟಕ26 mins ago

ಕರ್ನಾಟಕ ತೋಟದಪ್ಪನ ಛತ್ರ ಅಲ್ಲ; ಕನ್ನಡಿಗರಿಗೆ ಉದ್ಯೋಗಕ್ಕೆ ಆಗ್ರಹಿಸಿ ಜು.1ರಂದು ಕರವೇ ಬೃಹತ್‌ ಪ್ರತಿಭಟನೆ!

Heavy Rain
ದೇಶ26 mins ago

Heavy Rain: ಭಾರೀ ಮಳೆಗೆ ಕುಸಿದು ಬಿದ್ದ ರಾಜ್‌ಕೋಟ್‌ ವಿಮಾನ ನಿಲ್ದಾಣ ಹೊರಭಾಗದ ಛಾವಣಿ

Valmiki Corporation Scam
ಕರ್ನಾಟಕ33 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇನ್ನೂ 10 ಕೋಟಿ‌ ಎಸ್ಐಟಿ ವಶಕ್ಕೆ, ಇದುವರೆಗೆ ರಿಕವರಿ ಆಗಿದ್ದೆಷ್ಟು?

baby Death
ತುಮಕೂರು1 hour ago

Baby Death : ಶವ ಸಾಗಿಸಲು ಹಣವಿಲ್ಲದೇ ರೈಲಿನಲ್ಲೇ ಶಿಶು ಬಿಟ್ಟು ಹೋದ ಪೋಷಕರು

Viral Video
Latest1 hour ago

Viral Video: ನಡುರಸ್ತೆಯಲ್ಲಿ ಬಟ್ಟೆ ಕಳಚಿ ಬೆತ್ತಲೆಯಾಗಿ ನಡೆದ ಮಹಿಳೆ; ಪುರುಷರು ಕಕ್ಕಾಬಿಕ್ಕಿ!

Shabbar Zaidi
ವಿದೇಶ1 hour ago

Shabbar Zaidi: ಮಸೀದಿಗಳ ಧ್ವನಿವರ್ಧಕದ ಬಗ್ಗೆ ಪಾಕಿಸ್ತಾನದಲ್ಲೇ ಕೇಳಿ ಬಂತು ಅಪಸ್ವರ; ಮೊಹಮ್ಮದ್ ಶಬ್ಬರ್ ಜೈದಿ ಹೇಳಿದ್ದೇನು?

Satish Jarkiholi
ಕರ್ನಾಟಕ1 hour ago

Satish Jarkiholi: 2028ಕ್ಕೆ ನಾನೇ ರಾಜ್ಯದ ಸಿಎಂ ಎಂದ ಸತೀಶ್‌ ಜಾರಕಿಹೊಳಿ; ಡಿಕೆಶಿಗೆ ಸಚಿವ ಸೆಡ್ಡು!

Baby Death
Latest1 hour ago

Baby Death : ಆಟವಾಡುತ್ತಿದ್ದ ಮಗುವಿನ ಪಾಲಿಗೆ ಯಮದೂತ ಆದ ಟಿವಿ ಸ್ಟ್ಯಾಂಡ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ21 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌