Actor Darshan: ದರ್ಶನ್ ಮನೆ ಒತ್ತುವರಿ ತೆರವಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌; ಬುಲ್ಡೋಜರ್‌ ರೆಡಿ ಮಾಡುತ್ತಿದೆ ಬಿಬಿಎಂಪಿ - Vistara News

ಕರ್ನಾಟಕ

Actor Darshan: ದರ್ಶನ್ ಮನೆ ಒತ್ತುವರಿ ತೆರವಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌; ಬುಲ್ಡೋಜರ್‌ ರೆಡಿ ಮಾಡುತ್ತಿದೆ ಬಿಬಿಎಂಪಿ

Actor Darshan: ನಟ ದರ್ಶನ್ ಮನೆ ರಾಜಕಾಲುವೆ ‌ಮೇಲೆ ಇದ್ದರೂ ತೆರವುಗೊಳಿಸಲು ಈ ಹಿಂದೆ ಬಿಬಿಎಂಪಿ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಇದೀಗ ಮನೆ ತೆರವಿಗೆ ಸರ್ಕಾರದಿಂದ ಮೈಖಿಕ ಸೂಚನೆ ಸಿಕ್ಕಿದೆ ಎನ್ನಲಾಗಿದೆ.

VISTARANEWS.COM


on

Actor Darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮವಾಗಿ ರಾಜಕಾಲುವೆ ಮೇಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಮನೆ ಒತ್ತುವರಿ ತೆರವು ಮಾಡಲು ರಾಜ್ಯ ಸರ್ಕಾರ ಸೂಚಿಸಿದೆ. ನಟ ದರ್ಶನ್ (Actor Darshan) ಮನೆ ತೆರವಿಗೆ ಪಾಲಿಕೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರದಿಂದ ಮೌಕಿಕ ಸೂಚನೆ ಸಿಕ್ಕಿದೆ ಎನ್ನಲಾಗಿದ್ದು, ಯಾರೇ ಒತ್ತುವರಿ ಮಾಡಿ ಸ್ಟೇ ತಂದಿದ್ದರೂ ಕಾನೂನಿನ ಪ್ರಕಾರ ತೆರವು ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ನಟ ದರ್ಶನ್ ಮನೆ ರಾಜಕಾಲುವೆ ‌ಮೇಲೆ ಇದ್ದರೂ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಇದೀಗ ಒತ್ತುವರಿಗೆ ತೆರವಿಗೆ ಸೂಚನೆ ಹಿನ್ನೆಲೆಯಲ್ಲಿ ಕ್ರಮಕ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಬಿಬಿಎಂಪಿ ಮಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಕೂಡ ಒತ್ತುವರಿ ವಿಚಾರದಲ್ಲಿ ಕ್ರಮ ಕೈಗೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ.

ರಾಜಧಾನಿಯಲ್ಲಿ 2016ರಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾದಾಗ ರಾಜ ಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಕಟ್ಟಡಗಳನ್ನು ತೆರವುಗೊಳಿಸಲು ಅಂದಿನ ಸಿದ್ದರಾಮಯ್ಯ ಸರ್ಕಾರ ಬಿಬಿಎಂಪಿಗೆ ಸೂಚನೆ ನೀಡಿತ್ತು. ಆಗ ಆರ್‌.ಆರ್‌. ನಗರದ ದರ್ಶನ್‌ ಅವರ ನಿವಾಸ ಕೂಡ ರಾಜ ಕಾಲುವೆಯ ಬಫರ್‌ ಜೋನ್‌ ಮೇಲೆ ನಿರ್ಮಿಸಿರುವುದು ತಿಳಿದುಬಂದಿತ್ತು.

ಐಡಿಯಲ್‌ ಹೋಮ್ಸ್‌, ದರ್ಶನ್‌, ಶಾಮನೂರು ಅವರ ಆಸ್ಪತ್ರೆ ಸೇರಿ ಹಲವು ಕಟ್ಟಡಗಳನ್ನು ತೆರವುಗೊಳಿಸುವಂತೆ ನೋಟಿಸ್‌ ನೀಡಲಾಗಿತ್ತು. ನೋಟಿಸ್‌ ನೀಡಿದ್ದರಿಂದ ದರ್ಶನ್‌ ಮತ್ತಿತರರು ಸಿವಿಲ್‌ ನ್ಯಾಯಾಲಯದಿಂದ ತಡೆಯಾಜ್ಞೆ ತಂದು, ಬಳಿಕ 2016 ಅಕ್ಟೋಬರ್‌ನಲ್ಲಿ ತೆರವು ಮಾಡದಂತೆ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ಹೀಗಾಗಿ ಅಂದು ಒತ್ತುವರಿ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ದರ್ಶನ್‌ ಇದೀಗ ಬಂಧನವಾಗಿರುವ ಹಿನ್ನೆಲೆಯಲ್ಲಿ ಮನೆ ಒತ್ತುವರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿ | Self Harming: ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಇನ್ಫೋಸಿಸ್‌ ಉದ್ಯೋಗಿ ಆತ್ಮಹತ್ಯೆ; ರೈಲಿಗೆ ತಲೆಕೊಟ್ಟ ಫ್ಲಿಪ್‌ಕಾರ್ಟ್‌ ಉದ್ಯೋಗಿ

ಹಾಸ್ಯನಟ ಚಿಕ್ಕಣ್ಣ ಬೆನ್ನಲ್ಲೇ ನಟ ಯಶಸ್‌ ಸೂರ್ಯಗೂ ನೋಟೀಸ್‌, ವಿಚಾರಣೆ

actor darshan yashas surya

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಆರೆಸ್ಟ್ ಆಗಿರುವ ನಟ ದರ್ಶನ್ (Actor Darshan) ಜೊತೆ ಅದೇ ದಿನ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣ (comedian Chikkanna) ಅವರ ವಿಚಾರಣೆ ನಡೆಸಲಾಗಿದ್ದು, ಅದೇ ಪಾರ್ಟಿಯಲ್ಲಿದ್ದ ಇನ್ನೊಬ್ಬ ನಟನಿಗೂ ಪೊಲೀಸ್‌ ವಿಚಾರಣೆ ನೋಟೀಸ್‌ (police notice) ಹೋಗಿದೆ.

ನಟ ಯಶಸ್‌ ಸೂರ್ಯ (Yashas Surya) ಕೂಡ ಅಂದು ಕುಖ್ಯಾತ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ಲ್ಲಿ ಡಿ ಗ್ಯಾಂಗ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ಗೊತ್ತಾಗಿದೆ. ಈತ ದರ್ಶನ್‌ಗೆ ಆಪ್ತನಾಗಿದ್ದು, ಅದೇ ದಿನ ನಡೆಸಲಾದ ಪಾರ್ಟಿಯಲ್ಲಿ ಚಿಕ್ಕಣ್ಣ ಜೊತೆಗೆ ಹಾಜರಿದ್ದರು. ಇದೀಗ ವಿಚಾರಣೆಗೆ ಹಾಜರಾಗಲು ಯಶಸ್‌ಗೂ ನೋಟೀಸ್‌ ನೀಡಲಾಗಿದೆ.

ಚಿಕ್ಕಣ್ಣ, ಯಶಸ್ ಸೂರ್ಯ ಸೇರಿದಂತೆ ಇನ್ನೂ ಕೆಲ ನಟರಿಗೂ ಪೊಲೀಸರು ನೋಟೀಸ್ ನೀಡುವ ಸಾಧ್ಯತೆ ಇದೆ. ಮುಖ್ಯವಾಗಿ, ಅಂದು ದರ್ಶನ್‌ ಯಾರುಯಾರನ್ನು ಭೇಟಿಯಾಗಿದ್ದರೋ ಅವರೆಲ್ಲರೂ ಪೊಲೀಸ್‌ ತನಿಖೆಯನ್ನು ಎದುರಿಸಬೇಕಿದೆ. ಅಂದು ನಡೆಸಿದ ಮಾತುಕತೆಯನ್ನು ದರ್ಶನ್‌, ರೇಣುಕಾಸ್ವಾಮಿ ವಿಚಾರ ಎತ್ತಿದ್ದರೇ ಎಂಬುದು ತನಿಖೆಯ ಮುಖ್ಯ ವಿಚಾರವಾಗಿರಲಿದೆ.

actor darshan yashas surya

ಸಾಕ್ಷಿದಾರರಾಗಿ ಬಳಕೆ

ದರ್ಶನ್ ಆಂಡ್ ಗ್ಯಾಂಗ್‌ನಿಂದ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಲ್ಲದೇ ಹಲವು ಮಂದಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಅವರ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಹೇಳಿಕೆ ನೀಡಿದವರನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳು ಸೇರಿ 27ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಲಾಗಿದೆ. 27 ಮಂದಿಯಲ್ಲಿ 17 ಮಂದಿ ಬಂಧಿತ ಆರೋಪಿಗಳು. ನಟ ದರ್ಶನ್, ಪವಿತ್ರ ಗೌಡ ಸೇರಿ 17 ಮಂದಿ ಬಂಧಿತ ಆರೋಪಿಗಳು. ಇನ್ನುಳಿದ 10 ಮಂದಿಯನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ. ಸಾಕ್ಷಿಗಳು ಎಂದು ಈವರೆಗೆ 10 ಮಂದಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.

ಇದನ್ನೂ ಓದಿ | Actor Darshan: ರಕ್ತ ಕಾರಿಕೊಂಡು ಸತ್ತ ದರ್ಶನ್‌ ಫಾರಂ ಹೌಸ್ ಮ್ಯಾನೇಜರ್;‌ ಏನಿದು ಮತ್ತೊಂದು ನಿಗೂಢ?

ಘಟನಾ ಸ್ಥಳದಲ್ಲಿ ಹಾಜರಿದ್ದ ಕೆಲವರು, ಬೇರೆಬೇರೆ ಕಡೆಗಳಲ್ಲಿ ಪ್ರತ್ಯಕ್ಷ ಪರೋಕ್ಷವಾಗಿ ಕಂಡು ಬಂದ ವ್ಯಕ್ತಿಗಳ ವಿಚಾರಣೆ ನಡೆಸಲಾಗಿದೆ. ಅವರನ್ನು ರೇಣುಕಾಸ್ವಾಮಿ ಕೊಲೆ ಸಂಬಂಧ ಸಾಕ್ಷಿಗಳು ಎಂದು ಪರಿಗಣಿಸಿ ಹೇಳಿಕೆ ದಾಖಲು ಮಾಡಲಾಗಿದೆ. ಶೆಡ್ ಬಳಿ ಇದ್ದ ಇನ್ನೂ ಕೆಲವರ ಹೇಳಿಕೆ ಪಡೆದುಕೊಂಡಿದ್ದಾರೆ. ಘಟನೆ ಹೇಗಾಯ್ತು, ಯಾರು ಯಾರು ಇದ್ದರು, ಎಷ್ಟು ಜನ ಸೇರಿದ್ದರು, ದರ್ಶನ್ ಎಷ್ಟು ಹೊತ್ತಿಗೆ ಬಂದಿದ್ದು, ಯಾವಯಾವ ಆಯುಧಗಳಿಂದ ಹಲ್ಲೆ ಮಾಡಿದರು, ಹೀಗೆ ಹಲವು ವಿಚಾರಗಳ ಬಗ್ಗೆ ಹೇಳಿಕೆ ದಾಖಲಿಸಿದ್ದಾರೆ. ಶೆಡ್‌ನ ಸಿಸಿ ಕ್ಯಾಮೆರಾ ಫೂಟೇಜ್‌ಗಳನ್ನು ದರ್ಶನ್‌ ಗ್ಯಾಂಗ್‌ ನಾಶ ಮಾಡಿರುವ ಹಿನ್ನೆಲೆಯಲ್ಲಿ, ಈ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಮಹತ್ವ ಪಡೆದುಕೊಳ್ಳಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

R Ashok: ಪ್ರತಿ ಕುಟುಂಬದಿಂದ 8-10 ಸಾವಿರ ರೂ. ದರೋಡೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್ ಆರೋಪ

R Ashok: ಸಿಎಂ ಸ್ಥಾನದ ಕುರಿತು ಕಾಂಗ್ರೆಸ್‌ ಪಕ್ಷದೊಳಗೆ ಒಡಕು ಉಂಟಾಗಿದೆ. ಈ ಬಗ್ಗೆ ಒಕ್ಕಲಿಗ ಸ್ವಾಮೀಜಿ ಕೂಡ ಮಾತಾಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಹಾಗೂ ಮೂರು ಡಿಸಿಎಂ ಮಾಡುವಲ್ಲಿ ಎಲ್ಲರೂ ಮುಳುಗಿದ್ದು, ಅಭಿವೃದ್ಧಿ ಕೆಲಸ ಮಾಡಲು ಯಾರೂ ಮುಂದಾಗುತ್ತಿಲ್ಲ. ಈ ಸರ್ಕಾರಕ್ಕೆ ಕುಡಿಯುವ ನೀರು ಕೊಡುವ ಯೋಗ್ಯತೆಯೂ ಇಲ್ಲವಾಗಿ, ಜನರು ಕಲುಷಿತ ನೀರು ಸೇವಿಸಿ ಸಾಯುತ್ತಿದ್ದಾರೆ. ಡೆಂಘೀ ಸೋಂಕು ಹರಡಿ ಜನರು ತೊಂದರೆಗೊಳಗಾಗಿದ್ದರೂ ಅದಕ್ಕೆ ಸೂಕ್ತ ಕ್ರಮ ವಹಿಸಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆರೋಪಿಸಿದ್ದಾರೆ.

VISTARANEWS.COM


on

Opposition party leader r ashok latest statement in chikkaballapur
Koo

ಚಿಕ್ಕಬಳ್ಳಾಪುರ: ಕಾಂಗ್ರೆಸ್‌ ಸರ್ಕಾರದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನದ ಕುರಿತು ಕಚ್ಚಾಟ ನಡೆಯುತ್ತಿದ್ದು, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನದ ಕುರಿತು ಕಾಂಗ್ರೆಸ್‌ ಪಕ್ಷದೊಳಗೆ ಒಡಕು ಉಂಟಾಗಿದೆ. ಈ ಬಗ್ಗೆ ಒಕ್ಕಲಿಗ ಸ್ವಾಮೀಜಿ ಕೂಡ ಮಾತಾಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಹಾಗೂ ಮೂರು ಡಿಸಿಎಂ ಮಾಡುವಲ್ಲಿ ಎಲ್ಲರೂ ಮುಳುಗಿದ್ದು, ಅಭಿವೃದ್ಧಿ ಕೆಲಸ ಮಾಡಲು ಯಾರೂ ಮುಂದಾಗುತ್ತಿಲ್ಲ. ಈ ಸರ್ಕಾರಕ್ಕೆ ಕುಡಿಯುವ ನೀರು ಕೊಡುವ ಯೋಗ್ಯತೆಯೂ ಇಲ್ಲವಾಗಿ, ಜನರು ಕಲುಷಿತ ನೀರು ಸೇವಿಸಿ ಸಾಯುತ್ತಿದ್ದಾರೆ. ಡೆಂಘೀ ಸೋಂಕು ಹರಡಿ ಜನರು ತೊಂದರೆಗೊಳಗಾಗಿದ್ದರೂ ಅದಕ್ಕೆ ಸೂಕ್ತ ಕ್ರಮ ವಹಿಸಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ: Run4Research: ಬೆಂಗಳೂರಿನಲ್ಲಿ ಜೂ.30ರಂದು ʼರನ್4ರೀಸರ್ಚ್ʼ ಓಟ

ಈಗ ಒಕ್ಕಲಿಗರು ಹಾಗೂ ಲಿಂಗಾಯತರು ಮಾತಾಡುತ್ತಿದ್ದಾರೆ. ಮುಂದೆ ಕುರುಬ ಸಮುದಾಯದವರು ಮಾತಾಡುತ್ತಾರೆ. ಜಾತಿಗಳ ನಡುವೆ ಕಾಂಗ್ರೆಸ್‌ ಕಚ್ಚಾಟ ಹುಟ್ಟುಹಾಕಿರುವುದು ಒಳ್ಳೆಯದಲ್ಲ. ಜಾತಿಗಳನ್ನು ಒಡೆಯುವ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎಂದು ದೂರಿದರು.

ಒಂದು ಕುಟುಂಬಕ್ಕೆ 2,000 ರೂ. ನೀಡುತ್ತೇವೆಂದು ಹೇಳಿದ ಕಾಂಗ್ರೆಸ್‌, 8-10 ಸಾವಿರ ರೂ. ದರೋಡೆ ಮಾಡುತ್ತಿದೆ. ಹಾಲಿನ ದರವನ್ನು ಕಳೆದ ವರ್ಷ 3 ರೂ. ಹೆಚ್ಚಿಸಿ, ಈಗ 2 ರೂ. ಹೆಚ್ಚಿಸಿದ್ದಾರೆ. ಪೆಟ್ರೋಲ್‌-ಡೀಸೆಲ್‌ ದರವನ್ನು ನಿರ್ದಾಕ್ಷಿಣ್ಯವಾಗಿ ಏರಿಸಿದ್ದರಿಂದ ಎಲ್ಲ ದರಗಳು ಏರಿಕೆಯಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಾದ ಕೂಡಲೇ ಬಸ್‌ ಟಿಕೆಟ್‌ ದರ ಹೆಚ್ಚಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಸಾರಿಗೆ ನಿಗಮಗಳಿಗೆ ಇನ್ನೂ ಹಣ ಬಾಕಿ ಉಳಿಸಿಕೊಳ್ಳಲಾಗಿದೆ. ಹಾಲಿನ ಪೋತ್ಸಾಹಧನವೂ ಬಾಕಿ ಇದೆ ಎಂದರು.

ಇದನ್ನೂ ಓದಿ: Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಚೊಂಬು ನೀಡುತ್ತಿದೆ ಎಂದು ಕಾಂಗ್ರೆಸ್‌ ತೋರಿಸಿತ್ತು. ಆದರೆ ವಾಸ್ತವದಲ್ಲಿ ಕಾಂಗ್ರೆಸ್‌ ಸರ್ಕಾರವೇ ಜನರಿಗೆ ಚೊಂಬು ನೀಡುತ್ತಿದೆ. ಕೇಂದ್ರ ಸರ್ಕಾರದ ಬಳಿ ಹೋಗಿ ಅಲ್ಲಿಯೂ ದ್ವೇಷದ ಕಿಡಿ ಕಾರುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಟಾಚಾರಕ್ಕೆ ಸಂಸದರ ಸಭೆ ಕರೆದು ಮಾತಾಡಿದ್ದಾರೆ. ಕೇಂದ್ರ ಸರ್ಕಾರ ಯಾವುದೇ ಯೋಜನೆಗೆ ಅನುದಾನ ನೀಡಿದರೆ, ಅದಕ್ಕೆ ಸಮನಾಗಿ ತಮ್ಮ ಪಾಲನ್ನು ನೀಡಲು ಕೂಡ ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ಇಡೀ ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Continue Reading

ಉತ್ತರ ಕನ್ನಡ

Uttara Kannada News: ಜಿಲ್ಲೆಯ ಮಾಜಿ ಸೈನಿಕರು, ಅಶಕ್ತರಿಗೆ ಭೂಮಿ ಒದಗಿಸಲು ಕ್ರಮ: ಡಿಸಿ ಗಂಗೂಬಾಯಿ ಮಾನಕರ್‌

Uttara Kannada News: ಉತ್ತರ ಕನ್ನಡ ಜಿಲ್ಲೆಯಲ್ಲಿನ ಮಾಜಿ ಯೋಧರು, ಅಶಕ್ತರು ಮತ್ತು ವಸತಿ ಹೀನರಿಗೆ ಜೀವನ ನಿರ್ವಹಣೆಗೆ ಭೂಮಿ ಒದಗಿಸುವ ಕುರಿತಾಗಿ, ಜಿಲ್ಲೆಯ ಎಲ್ಲಾ ತಾಲೂಕುಗಳ ತಹಸೀಲ್ದಾರ್‌ಗಳು ತಮ್ಮ ವ್ಯಾಪ್ತಿಯಲ್ಲಿ ಲಭ್ಯವಿರುವ ಖಾಲಿ ಜಮೀನಿನ ಕುರಿತು ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ಸೂಚಿಸಿದ್ದಾರೆ.

VISTARANEWS.COM


on

Video conference meeting with Tehsildars by DC Gangubai Manakar
Koo

ಕಾರವಾರ: ಜಿಲ್ಲೆಯಲ್ಲಿನ ಮಾಜಿ ಯೋಧರು, ಅಶಕ್ತರು ಮತ್ತು ವಸತಿ ಹೀನರಿಗೆ ಜೀವನ ನಿರ್ವಹಣೆಗೆ ಭೂಮಿ ಒದಗಿಸುವ ಕುರಿತಾಗಿ, ಜಿಲ್ಲೆಯ (Uttara Kannada News) ಎಲ್ಲಾ ತಾಲೂಕುಗಳ ತಹಸೀಲ್ದಾರ್‌ಗಳು ತಮ್ಮ ವ್ಯಾಪ್ತಿಯಲ್ಲಿ ಲಭ್ಯವಿರುವ ಖಾಲಿ ಜಮೀನಿನ ಕುರಿತು ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ಸೂಚಿಸಿದರು.

ಜಿಲ್ಲೆಯ ಎಲ್ಲಾ ತಹಸೀಲ್ದಾರ್‌ಗಳೊಂದಿಗೆ ಶುಕ್ರವಾರ ನಡೆದ, ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತೀ ವರ್ಷ ಜುಲೈ 1 ಕ್ಕೆ ಜಿಲ್ಲೆಯಲ್ಲಿ ಲಭ್ಯವಿರುವ ಖಾಲಿ ಜಮೀನಿನ ಕುರಿತಂತೆ ಘೋಷಣೆ ಮಾಡುವುದು ಅತ್ಯಗತ್ಯವಾಗಿದ್ದು, ಇದರಿಂದಾಗಿ ಲಭ್ಯವಿರುವ ಖಾಲಿ ಭೂಮಿಯನ್ನು, ದೇಶ ಸೇವೆಗಾಗಿ ಜೀವನ ಮುಡಿಪಾಗಿಟ್ಟು ನಿವೃತ್ತರಾದ ಮತ್ತು ವಿವಿಧ ಕಾರ್ಯಚರಣೆಗಳಲ್ಲಿ ಭಾಗವಹಿಸಿ ವಿಕಲಚೇತನರಾದ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಜಿಲ್ಲೆಯಲ್ಲಿನ ಅಶಕ್ತರು ಮತ್ತು ವಸತಿಹೀನರಿಗೆ ಅವರು ಕೋರಿಕೆಗೆ ತಕ್ಕಂತೆ ಅಲ್ಲವಾದರೂ ಕನಿಷ್ಠ ಅವಶ್ಯಕತೆ ಪೂರೈಸಿಕೊಳ್ಳಲು ಅಗತ್ಯವಿರುವ ಪ್ರಮಾಣದ ಭೂಮಿ ನೀಡಲು ಸಾಧ್ಯವಾಗುತ್ತದೆ. ಆದ್ದರಿಂದ ಜಿಲ್ಲೆಯ ಎಲ್ಲಾ ತಹಸೀಲ್ದಾರ್‌ಗಳು ಜುಲೈ 1 ರೊಳಗೆ ತಮ್ಮ ವ್ಯಾಪ್ತಿಯಲ್ಲಿ ಲಭ್ಯವಿರುವ ಖಾಲಿ ಜಮೀನಿನ ಘೋಷಣೆ ಮಾಡುವಂತೆ ತಿಳಿಸಿದರು.

ಇದನ್ನೂ ಓದಿ: Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

ತಹಸೀಲ್ದಾರ್‌ಗಳು ತಮ್ಮ ವ್ಯಾಪ್ತಿಯಲ್ಲಿನ ಖಾಲಿ ಇರುವ ಸರ್ಕಾರಿ ಭೂಮಿಯನ್ನು ಸರ್ಕಾರಿ ಉದ್ದೇಶಗಳಿಗೆ ಅಗತ್ಯವಿದ್ದಲ್ಲಿ, ಆ ಯೋಜನೆಗೆ ಅಗತ್ಯವಿರುವ ಪ್ರಮಾಣದ ಭೂಮಿಯನ್ನು ಕಾಯ್ದಿರಿಸಿ, ಉಳಿದ ಭೂಮಿಯನ್ನು ಘೋಷಣೆ ಮಾಡುವಂತೆ ಹಾಗೂ ಯಾವುದೇ ಕಾರಣಕ್ಕೂ ಲಭ್ಯ ಜಮೀನಿನ ಮಾಹಿತಿಯನ್ನು ಮರೆಮಾಚದಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಶೇ.80 ರಷ್ಟು ಅರಣ್ಯ ಪ್ರದೇಶವಿದ್ದು, ಶೇ.20 ರಷ್ಟು ಮಾತ್ರ ಭೂ ಪ್ರದೇಶವಿದ್ದು, ಇರುವ ಭೂ ಪ್ರದೇಶವನ್ನು ಅರ್ಹರಿಗೆ, ನ್ಯಾಯಯುತವಾಗಿ, ಸಾಧ್ಯವಾದಷ್ಟು ಪ್ರಮಾಣದಲ್ಲಿ ಹಂಚಿಕೆ ಮಾಡುವಲ್ಲಿ ಹೆಚ್ಚಿನ ಮುತುವರ್ಜಿ ವಹಿಸುವಂತೆ ಅವರು ತಿಳಿಸಿದರು.

ಪ್ರಸ್ತುತ ಮಳೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಜೀವ ಹಾನಿಯಾಗದಂತೆ ಎಚ್ಚರವಹಿಸಿ. ಈಗಾಗಲೇ ಗುರುತಿಸಲಾಗಿರುವ ಗುಡ್ಡ ಕುಸಿತ ಮತ್ತು ಅಪಾಯಕಾರಿ ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ಅಗತ್ಯ ಎಚ್ಚರಿಕೆ ನೀಡಿ, ಅವರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಿಳಿಸಿ. ಅವರಿಗೆ ಅವರ ವಾಸದ ಸಮೀಪದಲ್ಲಿನ ಸೂಕ್ತ ಸುರಕ್ಷಿತ ಸ್ಥಳಗಳನ್ನು ಗುರುತಿಸಿ ಮಾಹಿತಿ ನೀಡಿ, ಆ ಸ್ಥಳಗಳಲ್ಲಿ ಅವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಮನೆ ಕುಸಿತ, ಕೊಟ್ಟಿಗೆ ಹಾನಿ ಮತ್ತು ಜಾನುವಾರು ಸಾವು ಪ್ರಕರಣಗಳಿಗೆ ಶೀಘ್ರದಲ್ಲಿ ಪರಿಹಾರ ವಿತರಿಸುವಂತೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ವಿಕೋಪ ಪರಿಹಾರ ಧನ ವಿತರಣೆಗೆ ಯಾವುದೇ ಅನುದಾನದ ಕೊರತೆಯಿಲ್ಲ, ಎಲ್ಲಾ ತಾಲೂಕುಗಳಲ್ಲಿ ಪ್ರಸ್ತುತ ಲಭ್ಯವಿರುವ ಅನುದಾನವನ್ನು ವೆಚ್ಚ ಮಾಡಿ, ಹೆಚ್ಚಿನ ಅನುದಾನದ ಅಗತ್ಯವಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಕೋರಿಕೆ ಸಲ್ಲಿಸಿದಲ್ಲಿ, ಕೂಡಲೇ ಬಿಡುಗಡೆ ಮಾಡಲಾಗುವುದು ಎಂದರು.

ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ತುರ್ತು ರಕ್ಷಣೆಗಾಗಿ ತೆರದಿರುವ ಕಂಟ್ರೋಲ್ ರೂಂ ಗಳಲ್ಲಿ ಸಿಬ್ಬಂದಿ 24*7 ಕಾರ್ಯನಿರ್ವಹಿಸುವಂತೆ ಹಾಗೂ ಯಾವುದೇ ಪ್ರಾಕೃತಿಕ ವಿಕೋಪಗಳು ಸಂಭವಿಸಿದಲ್ಲಿ ಪಂಚಾಯಿತಿ ಅಭಿವೃಧ್ದಿ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಯ ಅಧಿಕಾರಿಗಳು ತಕ್ಷಣ ಕಾರ್ಯ ಪ್ರವೃತ್ತರಾಗಿ, ಸಮನ್ವಯದಿಂದ ಕಾರ್ಯ ನಿರ್ವಹಿಸಿ, ಸಾರ್ವಜನಿಕರಿಗೆ ಅಗತ್ಯ ನೆರವು ನೀಡುವಂತೆ ತಿಳಿಸಿದರು.

ಇದನ್ನೂ ಓದಿ: Heavy Rain: ಭಾರೀ ಮಳೆಗೆ ಕುಸಿದು ಬಿದ್ದ ರಾಜ್‌ಕೋಟ್‌ ವಿಮಾನ ನಿಲ್ದಾಣ ಹೊರಭಾಗದ ಛಾವಣಿ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಹಾಗೂ ಜಿಲ್ಲೆಯ ತಹಸೀಲ್ದಾರ್‌ಗಳು ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿದ್ದರು.

Continue Reading

ಕರ್ನಾಟಕ

VSK Media Awards 2024: ಬೆಂಗಳೂರಿನಲ್ಲಿ ಜೂ.30 ರಂದು “ವಿಎಸ್‌ಕೆ ಮಾಧ್ಯಮ ಪ್ರಶಸ್ತಿ” ಪ್ರದಾನ

VSK Media Awards 2024: ವಿಶ್ವ ಸಂವಾದ ಕೇಂದ್ರ, ಕರ್ನಾಟಕ ವತಿಯಿಂದ ಬೆಂಗಳೂರು ನಗರದ ಬಸವನಗುಡಿಯ ಬಿ.ಎಂ.ಎಸ್‌. ಎಂಜಿನಿಯರಿಂಗ್‌ ಕಾಲೇಜು ಸಭಾಂಗಣದಲ್ಲಿ ಇದೇ ಜೂ.30 ರಂದು ಭಾನುವಾರ ಬೆಳಿಗ್ಗೆ 10.30 ಗಂಟೆಗೆ ವಿಎಸ್‌ಕೆ ಮೀಡಿಯಾ ಅವಾರ್ಡ್ಸ್‌ (VSK Media Awards) ಮಾಧ್ಯಮ ಪ್ರಶಸ್ತಿ 2024 ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ.

VISTARANEWS.COM


on

VSK Media Awards 2024 Programme in Bengaluru on June 30
Koo

ಬೆಂಗಳೂರು: ವಿಶ್ವ ಸಂವಾದ ಕೇಂದ್ರ, ಕರ್ನಾಟಕ ವತಿಯಿಂದ ಬೆಂಗಳೂರು ನಗರದ ಬಸವನಗುಡಿಯ ಬಿ.ಎಂ.ಎಸ್‌. ಎಂಜಿನಿಯರಿಂಗ್‌ ಕಾಲೇಜು ಸಭಾಂಗಣದಲ್ಲಿ ಇದೇ ಜೂ.30 ರಂದು ಭಾನುವಾರ ಬೆಳಿಗ್ಗೆ 10.30 ಗಂಟೆಗೆ ವಿಎಸ್‌ಕೆ ಮೀಡಿಯಾ ಅವಾರ್ಡ್ಸ್‌ (VSK Media Awards 2024) ಮಾಧ್ಯಮ ಪ್ರಶಸ್ತಿ 2024 ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ.

ಇದನ್ನೂ ಓದಿ: Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

ಕಾರ್ಯಕ್ರಮದಲ್ಲಿ ಆರ್ಗನೈಸರ್‌ ಪತ್ರಿಕೆಯ ಸಂಪಾದಕ ಪ್ರಫುಲ್ಲ ಕೇತ್ಕರ್‌, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರಿಯ ಸಂಘಚಾಲಕ ಡಾ. ಪಿ. ವಾಮನ್‌ ಶೆಣೈ ಉಪಸ್ಥಿತರಿರುವರು.

ಪ್ರಶಸ್ತಿ ಪುರಸ್ಕೃತರು

ತಿ.ತಾ. ಶರ್ಮ ಪತ್ರಿಕೋದ್ಯಮ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಸಂಪಾದಕ ಸುದರ್ಶನ್‌ ಚನ್ನಂಗಿಹಳ್ಳಿ, ಚಂದ್ರಶೇಖರ ಭಂಡಾರಿ ಪತ್ರಿಕೋದ್ಯಮ ಪ್ರಶಸ್ತಿಗೆ ಸುವರ್ಣ ನ್ಯೂಸ್ ಸಂಪಾದಕ ಅಜಿತ್‌ ಹನುಮಕ್ಕನವರ್‌, ಬೆ.ಸು.ನಾ. ಮಲ್ಯ ಪತ್ರಿಕೋದ್ಯಮ ಪ್ರಶಸ್ತಿಗೆ ಶೋಭಾ ಎಚ್‌.ಜಿ., ಹೊ.ವೆ. ಶೇಷಾದ್ರಿ ಅಂಕಣಕಾರ ಪ್ರಶಸ್ತಿಗೆ ಪ್ರೊ. ಪ್ರೇಮಶೇಖರ, ವಿ.ಎಸ್.ಕೆ. ಡಿಜಿಟಲ್‌ ಮಾಧ್ಯಮ ಪ್ರಶಸ್ತಿಗೆ ಡಾ. ಪೂರ್ವಿ ಜಯರಾಮ್‌ ಭಾಜನರಾಗಿದ್ದಾರೆ.

ಇದನ್ನೂ ಓದಿ: Gold Rate Today: ತುಸು ಏರಿಕೆ ಕಂಡ ಚಿನ್ನದ ಬೆಲೆ; ಇಷ್ಟಿದೆ ಇಂದಿನ ದರ

Continue Reading

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್ ರೇವಣ್ಣಗೆ ಜುಲೈ 8ರವರೆಗೆ ನ್ಯಾಯಾಂಗ ಬಂಧನ

Prajwal Revanna Case: ಜುಲೈ 8 ರವರೆಗೆ ಪ್ರಜ್ವಲ್‌ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್‌ ಆದೇಶ ನೀಡಿದೆ.

VISTARANEWS.COM


on

Prajwal Revanna Case
Koo

ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ಪ್ರಜ್ವಲ್ ಪರ ವಕೀಲರ ಮನವಿ ಮಾಡಿದ್ದಾರೆ. ಆದರೆ, ಆಸ್ಪತ್ರೆಗೆ ದಾಖಲಿಸಲು ಅವಕಾಶ ನೀಡಲು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೋಮವಾರ ನಡೆಸುವುದಾಗಿ ಕೋರ್ಟ್ ತಿಳಿಸಿದೆ.

ಇನ್ನು ಹೊಳೆನರಸೀಪುರ ಪ್ರಕರಣದಲ್ಲಿ ಪ್ರಜ್ವಲ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜೂನ್‌ 26ರಂದು 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಡ್ಜ್‌ ಸಂತೋಷ್‌ ಗಜಾನನ ಭಟ್‌ ಅವರು ವಜಾಗೊಳಿಸಿದ್ದರು. ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲು ಪ್ರಕರಣ ದಾಖಲಾಗಿತ್ತು. ನಂತರ ಪ್ರಜ್ವಲ್ ಮೇಲೆ ಅತ್ಯಾಚಾರ ಆರೋಪವನ್ನು ಪ್ರಕರಣದಲ್ಲಿ ಸೇರಿಸಲಾಗಿತ್ತು. ಪ್ರಕರಣದಲ್ಲಿ ಈಗಾಗಲೇ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಜಾಮೀನು ಪಡೆದುಕೊಂಡಿದ್ದಾರೆ. ಆದರೆ, ಪ್ರಜ್ವಲ್‌ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಇದೀಗ ಕಸ್ಟಡಿಯಲ್ಲಿದ್ದ ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ವಾಲ್ಮೀಕಿ ನಿಗಮ ಹಗರಣ; ಇನ್ನೂ 10 ಕೋಟಿ‌ ಎಸ್ಐಟಿ ವಶಕ್ಕೆ, ಇದುವರೆಗೆ ರಿಕವರಿ ಆಗಿದ್ದೆಷ್ಟು?

ಬೆಂಗಳೂರು: ವಾಲ್ಮೀಕಿ ನಿಗಮ ಬಹುಕೋಟಿ ಹಗರಣದಲ್ಲಿ (Valmiki Corporation Scam) ಇನ್ನು 10 ಕೋಟಿ‌ ರೂ.ಗಳನ್ನು ಎಸ್ಐಟಿ ವಶಕ್ಕೆ ಪಡೆದಿದೆ. ಬಾರ್‌ಗಳು, ಚಿನ್ನದ‌ ಅಂಗಡಿಗಳಿಗೆ ವರ್ಗಾವಣೆ ಆಗಿದ್ದ ಹಣ ವಶಕ್ಕೆ ಪಡೆಯಲಾಗಿದೆ. ಕರ್ನಾಟಕ, ಆಂಧ್ರದಲ್ಲಿನ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ಚುರುಕಗೊಳಿಸಿದೆ.

ವಾಲ್ಮೀಕಿ ನಿಗಮ ಹಗರಣದಲ್ಲಿ ಎಸ್‌ಐಟಿ ಅಧಿಕಾರಿಗಳು ರಿಕವರಿ ಮಾಡಿರುವ ಹಣ ಕೋರ್ಟ್ ಅಕೌಂಟ್‌ಗೆ ಜಮೆ ಮಾಡಲಾಗುತ್ತಿದೆ. ದೊಡ್ಡ ಮೊತ್ತದ ಹಣವನ್ನು ಸಿಐಡಿ ಕಚೇರಿಯಲ್ಲಿಡುವುದು ಕಷ್ಟ. ಭದ್ರತಾ ದೃಷ್ಟಿಯಿಂದ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ಕೋರ್ಟ್ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆದು ಹಣ ಜಮಾ ಮಾಡಿದ್ದಾರೆ. ನೆನ್ನೆಯಿಂದ ದಿನಕ್ಕೆ ನಾಲ್ಕು ಕೋಟಿಯಂತೆ ಹಣ ಜಮೆ ಮಾಡಲಾಗುತ್ತಿದೆ. ಇದುವರೆಗೂ ಸುಮಾರು 28 ಕೋಟಿ ಹಣ ರಿಕವರಿ ಆಗಿದೆ.

28 ಕೋಟಿ ಹಣವಮ್ನ ಒಟ್ಟಿಗೆ ಜಮೆ ಮಾಡೋದು ಕಷ್ಟ. ಹೀಗಾಗಿ ಅಷ್ಟು ಹಣ ಎಣಿಕೆ ಮಾಡಲು ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ. ಹೀಗಾಗಿ ದಿನಕ್ಕೆ ನಾಲ್ಕು ಕೋಟಿ ಹಣವನ್ನು ಮಾತ್ರ ಬ್ಯಾಂಕ್‌ಗೆ ಜಮೆ ಮಾಡಲಾಗುತ್ತಿದೆ.

ಮಾರ್ಚ್ 30ರಂದು ನವೀನ್ ಜಿ ಮಾಲೀಕತ್ವದ ಜಿ.ಎನ್ ಇಂಡಸ್ಟ್ರೀಸ್ ಕಂಪನಿ ಹೆಸರಲ್ಲಿ 4.42 ಕೋಟಿ ವರ್ಗಾವಣೆ ಆಗಿತ್ತು. ವಿಜಯ್ ಕೃಷ್ಣ ಆರ್ ಮಾಲೀಕತ್ವದ ರಾಮ್ ಎಂಟರ್ ಪ್ರೈಸಸ್ ಖಾತೆಗೆ 5.7 ಕೋಟಿ ಹಣ, ರಾಘವೇಂದ್ರ ಅವರ ನೋವೆಲ್ ಸೆಕ್ಯೂರಿಟಿ ಸರ್ವಿಸಸ್ ಪ್ರೈ.ಲಿ.ಕಂಪನಿ ಹೆಸರಿನ ಖಾತೆಗೆ 4 ಕೋಟಿ ಹಣ ವರ್ಗಾವಣೆಯಾಗಿತ್ತು. ರೇಖಾ ಎಂಬುವವರ ಮಾಲೀಕತ್ವದ ಸುಜಲ್ ಎಂಟರ್ ಪ್ರೈಸಸ್ ಹೆಸರಿನ ಖಾತೆಗೆ 5.63 ಕೋಟಿ ಹಣ ವರ್ಗಾವಣೆಯಾಗಿತ್ತು.

ಇದನ್ನೂ ಓದಿ | Road Accident : ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್‌ಗೆ ಗುದ್ದಿ ಹಳ್ಳಕ್ಕೆ ಜಿಗಿದ ಕೆಎಸ್‌ಆರ್‌ಟಿಸಿ; ಶಿರಾಡಿಘಾಟ್‌ನಲ್ಲಿ ಸರಣಿ ಅಪಘಾತ

ಎಲ್ಲಾ ಕಂಪನಿ ಹೆಸರಲ್ಲಿ ನಕಲಿ ಖಾತೆ ತೆಗೆದು ಹಣ ವರ್ಗಾವಣೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಖಾತೆ ಓಪನ್ ಮಾಡಿದ್ದ ಆಸಾಮಿಗಳು, ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಖಾತೆಗಳಿಗೆ ಹಣ ಜಮೆ ಮಾಡಿಸಿಕೊಂಡಿದ್ದಾರೆ.

Continue Reading
Advertisement
Actor Darshan Renuka swamy case chitral support by vinay gowda
ಸ್ಯಾಂಡಲ್ ವುಡ್3 mins ago

Actor Darshan: ʻಚಿತ್ರಾಲ್ʼ ಬಿಕಿನಿ ಮಾಡೆಲ್‌, ಕೆಟ್ಟ ಕಮೆಂಟ್‌ ಮಾಡಬೇಡಿ ಎಂದ ವಿನಯ್ ಗೌಡ !

Opposition party leader r ashok latest statement in chikkaballapur
ಕರ್ನಾಟಕ5 mins ago

R Ashok: ಪ್ರತಿ ಕುಟುಂಬದಿಂದ 8-10 ಸಾವಿರ ರೂ. ದರೋಡೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್ ಆರೋಪ

Video conference meeting with Tehsildars by DC Gangubai Manakar
ಉತ್ತರ ಕನ್ನಡ6 mins ago

Uttara Kannada News: ಜಿಲ್ಲೆಯ ಮಾಜಿ ಸೈನಿಕರು, ಅಶಕ್ತರಿಗೆ ಭೂಮಿ ಒದಗಿಸಲು ಕ್ರಮ: ಡಿಸಿ ಗಂಗೂಬಾಯಿ ಮಾನಕರ್‌

VSK Media Awards 2024 Programme in Bengaluru on June 30
ಕರ್ನಾಟಕ7 mins ago

VSK Media Awards 2024: ಬೆಂಗಳೂರಿನಲ್ಲಿ ಜೂ.30 ರಂದು “ವಿಎಸ್‌ಕೆ ಮಾಧ್ಯಮ ಪ್ರಶಸ್ತಿ” ಪ್ರದಾನ

Prajwal Revanna Case
ಪ್ರಮುಖ ಸುದ್ದಿ24 mins ago

Prajwal Revanna Case: ಪ್ರಜ್ವಲ್ ರೇವಣ್ಣಗೆ ಜುಲೈ 8ರವರೆಗೆ ನ್ಯಾಯಾಂಗ ಬಂಧನ

Stabbing
ದೇಶ24 mins ago

Stabbing: ಕೋಪದ ಕೈಗೆ ಬುದ್ದಿ ಕೊಟ್ರೆ ಹೀಗೇ ಆಗೋದು! ಸಹಪಾಠಿಯನ್ನೇ ಇರಿದು ಕೊಂದ ವಿದ್ಯಾರ್ಥಿ

IND vs SA Final
ಕ್ರೀಡೆ28 mins ago

IND vs SA Final: ಭಾರತ ಸೋತರೆ ರೋಹಿತ್ ಈ ಅನಾಹುತ ಮಾಡಿಕೊಳ್ಳಬಹುದು; ಮಾಜಿ ನಾಯಕನಿಂದ ಶಾಕಿಂಗ್​ ಹೇಳಿಕೆ ​

Road Accident
ಕ್ರೈಂ33 mins ago

Road Accident : ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್‌ಗೆ ಗುದ್ದಿ ಹಳ್ಳಕ್ಕೆ ಜಿಗಿದ ಕೆಎಸ್‌ಆರ್‌ಟಿಸಿ; ಶಿರಾಡಿಘಾಟ್‌ನಲ್ಲಿ ಸರಣಿ ಅಪಘಾತ

Job Alert
ಉದ್ಯೋಗ59 mins ago

Job Alert: 10ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್‌; SSCಯಿಂದ ಬರೋಬ್ಬರಿ 8,326 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

OTT Release
Latest1 hour ago

OTT Release : ಒಟಿಟಿಯಲ್ಲಿ ಈ ವಾರ ಬಿಡುಗಡೆಯಾಗಲಿರುವ ಹೊಸ ಚಲನಚಿತ್ರಗಳು, ವೆಬ್ ಸರಣಿಗಳ ಪಟ್ಟಿ ಹೀಗಿವೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ6 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ22 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌