Shira News: ಶಿರಾದಲ್ಲಿ ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ - Vistara News

ತುಮಕೂರು

Shira News: ಶಿರಾದಲ್ಲಿ ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

Shira News: ಶಿರಾ ಮಾರ್ಗವಾಗಿ ತುಮಕೂರಿಗೆ ತೆರಳಲು ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ, ಮಂಗಳವಾರ ಬೆಳಿಗ್ಗೆ ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಪ್ರಯಾಣಿಕರು ಪ್ರತಿಭಟನೆ ನಡೆಸಿದರು.

VISTARANEWS.COM


on

Protest demanding adequate bus facility in Shira
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿರಾ: ಶಿರಾ ಮಾರ್ಗವಾಗಿ (Shira News) ತುಮಕೂರಿಗೆ ತೆರಳಲು ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ, ಮಂಗಳವಾರ ಬೆಳಿಗ್ಗೆ ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಪ್ರಯಾಣಿಕರು ಪ್ರತಿಭಟನೆ (Protest) ನಡೆಸಿದರು.

ಶಿರಾದಿಂದ ತುಮಕೂರು ಮಾರ್ಗಕ್ಕೆ ತೆರಳಲು ಸಮರ್ಪಕ ಬಸ್‌ ಸೌಲಭ್ಯವಿಲ್ಲದ ಕಾರಣ ಪ್ರತಿನಿತ್ಯ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ತಲುಪಲು ಸಾಧ್ಯವಾಗುತ್ತಿಲ್ಲ ಹಾಗೂ ವಿವಿಧ ಕಾರ್ಯಗಳ ನಿಮಿತ್ತ ಶಿರಾದಿಂದ ತುಮಕೂರು ಮತ್ತು ಬೆಂಗಳೂರಿಗೆ ತೆರಳಲು ಬೆಳಿಗ್ಗೆಯ ಸಮಯದಲ್ಲಿ ಸೂಕ್ತ ಬಸ್‌ಗಳ ವ್ಯವಸ್ಥೆ ಇಲ್ಲದಿರುವುದರಿಂದ ದಿನನಿತ್ಯ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇದನ್ನೂ ಓದಿ: Gemini Mobile App: ಕನ್ನಡ ಸೇರಿದಂತೆ 9 ಭಾರತೀಯ ಭಾಷೆಗಳಲ್ಲಿ ಗೂಗಲ್ ಜೆಮಿನಿ ಆಪ್; ಏನಿದರ ಉಪಯೋಗ?

ಶಕ್ತಿ ಯೋಜನೆ ಜಾರಿ ಬಳಿಕ ಚಿತ್ರದುರ್ಗ ಮತ್ತು ದಾವಣಗೆರೆ ಸೇರಿದಂತೆ ಮತ್ತಿತರೆ ಕಡೆಗಳಿಂದ ಬರುವ ಬಹುತೇಕ ಬಸ್‌ಗಳು ತುಂಬಿ ಬರುತ್ತಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಪ್ರಯಾಣಿಕರು ಪ್ರತಿನಿತ್ಯ ಸಮಸ್ಯೆ ಅನುಭವಿಸುವಂತಾಗಿದೆ ಜತೆಗೆ ಸರಣಿ ರಜಾ ದಿನಗಳಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಿದೆ ಎಂದು ಪ್ರತಿಭಟನಾ ನಿರತರು ದೂರಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಶಿರಾ ಕೆಎಸ್‌ಆರ್‌ಟಿಸಿ ಉಪ ವಿಭಾಗಾಧಿಕಾರಿ ವಿದ್ವತ್‌ ರಾವ್, ಈ ವೇಳೆ ಮಾತನಾಡಿ, ಸರಣಿ ರಜಾದಿನಗಳಲ್ಲಿ ಪ್ರಯಾಣಿಕರ ಒತ್ತಡ ಹೆಚ್ಚಾಗುವ ಕಾರಣದಿಂದಾಗಿ ಬೇರೆ ಕಡೆಗಳಿಂದ ನಗರಕ್ಕೆ ಬರುವ ಬಸ್‌ಗಳು ಬೈಪಾಸ್‌ ಮೂಲಕ ಸಾಗುವ ಕಾರಣದಿಂದಾಗಿ ಈ ಸಮಸ್ಯೆ ಉದ್ಭವಿಸುತ್ತಿದೆ. ಜತೆಗೆ ಶಿರಾ ಭಾಗದಿಂದ ತುಮಕೂರು ಕಡೆಗೆ ಹೋಗಿ, ಮರಳಿ ಬರಲು, ತುಮಕೂರು ನಗರದಲ್ಲಿ ಕೆರೆ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿರುವುದರಿಂದ ಬಸ್‌ಗಳು ಹೋಗಿ ವಾಪಾಸ್ಸು ಬರಲು ವಿಳಂಬವಾಗುವ ಕಾರಣದಿಂದಾಗಿ ಈ ಸಮಸ್ಯೆ ಎದುರಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ: Job News: ಕೇಂದ್ರ ಸರ್ಕಾರದಿಂದ ‘ಎಲೆಕ್ಟ್ರಾನಿಕ್’ ಯೋಜನೆ;‌ 5 ವರ್ಷಗಳಲ್ಲಿ 50 ಲಕ್ಷ ಉದ್ಯೋಗ ಸೃಷ್ಟಿ!

ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ ಸೌಲಭ್ಯ ಕಲ್ಪಿಸುವುದಾಗಿ ಈ ವೇಳೆ ಅವರು ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಪ್ರಯಾಣಿಕರು ಹಾಗೂ ಇತರರು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

Karnataka Weather Forecast : ಮುಂಗಾರು ಮಳೆ ಅವಾಂತರವನ್ನೇ ಸೃಷ್ಟಿಸಿದ್ದು, ಚಿಕ್ಕಮಗಳೂರಲ್ಲಿ ಸ್ಕಿಡ್‌ ಆಗಿ ಕಾರೊಂದು ಹೇಮಾವತಿ ನದಿಗೆ ಹಾರಿದೆ. ಭಾನುವಾರವೂ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಚಿಕ್ಕಮಗಳೂರು/ಬೆಂಗಳೂರು: ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ (karnataka Weather Forecast) ಅಬ್ಬರ ಮುಂದುವರಿದಿದ್ದು, ಹೇಮಾವತಿ ನದಿಗೆ ಮತ್ತೊಂದು ಕಾರು ಬಿದ್ದಿದೆ. ಭಾರಿ ಮಳೆಯಿಂದ (Rain News) ಚಾಲಕನ ನಿಯಂತ್ರಣ ತಪ್ಪಿ ನದಿಗೆ ಹಾರಿದೆ. ನಿನ್ನೆ ಶುಕ್ರವಾರ ಕೂಡ ಇದೇ ಜಾಗದಲ್ಲಿ, ಇದೇ ಶೈಲಿಯಲ್ಲಿ ಕಾರು ಬಿದ್ದಿತ್ತು. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಘಟನೆ ನಡೆದಿದೆ.

ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣ-ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳ್ತಂಗಡಿಯಿಂದ ಮೂಡಿಗೆರೆಗೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆ ಹಾರಿ ನದಿಗೆ ಬಿದ್ದಿದೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳೀಯ ಸಹಾಯದಿಂದ ಕಾರನ್ನು ಮೇಲೆ ಎತ್ತಲಾಗಿದೆ.

ಜೂ 28ರಂದು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ನೋಡ ನೋಡುತ್ತಿದ್ದಂತೆ ‌ಕಾರು ಹೇಮಾವತಿ ನದಿಗೆ ಹಾರಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಂತ ಹಿನ್ನೆಲೆಯಲ್ಲಿ ರಸ್ತೆ ಕಾಣದೆ ಕಾರು ನಿಯಂತ್ರಣ ತಪ್ಪಿರುವ ಶಂಕೆ ವ್ಯಕ್ತವಾಗಿತ್ತು. ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಯಿಂದ ಜಿಗಿದು ನದಿಗೆ ಕಾರು ಬಿದ್ದಿತ್ತು. ಕಳೆದ ಎರಡು ತಿಂಗಳ ಹಿಂದೆ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದರು. ಇದೀಗ ಇದೆ ಸ್ಥಳದಲ್ಲೇ ಮತ್ತೆರಡು ಅಪಘಾತ ಸಂಭವಿಸಿದೆ.

ಇದನ್ನೂ ಓದಿ: Road Accident : ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್‌ಗೆ ಗುದ್ದಿ ಹಳ್ಳಕ್ಕೆ ಜಿಗಿದ ಕೆಎಸ್‌ಆರ್‌ಟಿಸಿ; ಶಿರಾಡಿಘಾಟ್‌ನಲ್ಲಿ ಸರಣಿ ಅಪಘಾತ

ಕರಾವಳಿಯಲ್ಲಿ ವಿಪರೀತ ಮಳೆ

ಜೂನ್‌ 30ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.‌ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ದಕ್ಷಿಣ ಒಳನಾಡಿನಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ

ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ಕ್ರಮವಾಗಿ 30-21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

Baby Death : ಶವ ಸಾಗಿಸಲು ಹಣವಿಲ್ಲದೇ ರೈಲಿನಲ್ಲೇ ಶಿಶು ಬಿಟ್ಟು ಹೋದ ಪೋಷಕರು

Baby Death : ತುಮಕೂರು ರೈಲ್ವೆ ನಿಲ್ದಾಣದಲ್ಲಿ (Tumkur railway station) ಬಟ್ಟೆಯಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ಹಸೂಗೂಸಿನ ಶವ ಪತ್ತೆಯಾಗಿತ್ತು. ಇದೀಗ ಮಗುವಿನ ಪೋಷಕರ ಸುಳಿವು ಸಿಕ್ಕಿದ್ದು, ಶವ ಸಾಗಿಸಲು ಹಣವಿಲ್ಲದೆ ಬಿಟ್ಟು ಹೋಗಿರುವುದು ಗೊತ್ತಾಗಿದೆ.

VISTARANEWS.COM


on

By

baby Death
Koo

ತುಮಕೂರು: ತುಮಕೂರು ರೈಲ್ವೆ ನಿಲ್ದಾಣದಲ್ಲಿ ಹಸೂಗೂಸಿನ ಶವವೊಂದು (Dead body) ಪತ್ತೆಯಾಗಿತ್ತು. ಪೊಲೀಸರು ಪ್ರಕರಣದ ತನಿಖೆಗಿಳಿದಾಗ, ಶವ ಸಾಗಿಸಲು (Baby Death) ಹಣವಿಲ್ಲದೆ ಪೋಷಕರು ರೈಲ್ವೆ ನಿಲ್ದಾಣದಲ್ಲಿ (Tumkur railway station) ಬಿಟ್ಟು ಹೋಗಿರುವುದು ಬೆಳಕಿಗೆ ಬಂದಿದೆ.

ಕಳೆದ 27ರಂದು ತುಮಕೂರು ರೈಲ್ವೆ ನಿಲ್ದಾಣದಲ್ಲಿ ಬಟ್ಟೆಯಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ಹಸೂಗೂಸಿನ ಶವ ಪತ್ತೆಯಾಗಿತ್ತು. ಇದನ್ನೂ ಗಮನಿಸಿದ ಪ್ರಯಾಣಿಕರು ಕೂಡಲೇ ಪೊಲೀಸರಿಗೆ ‌ಮಾಹಿತಿ ನೀಡಿದ್ದರು. ತನಿಖೆಗಿಳಿದ ಪೊಲೀಸರು ಹಸುಗೂಸಿನ ಕೈಗೆ ಹಾಕಿದ್ದ ಟ್ಯಾಗ್‌ನಿಂದ ಪೋಷಕರ ಸುಳಿವು ಸಿಕ್ಕಿದೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕುಂದರ್ತಿ ಮಂಡಲದ ಅಂಬಿಕಾಗೆ ಎಂಬುವವರಿಗೆ ಇದೇ ತಿಂಗಳ 23ರಂದು ಪಾವಗಡ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿತ್ತು. ಮಗುವಿಗೆ ಉಸಿರಾಟದ ತೊಂದರೆ ಇದ್ದ ಕಾರಣಕ್ಕೆ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಅಂಬಿಕಾಳ ಪತಿ ಜತೆಗೆ ಆಕೆ ತಾಯಿಯು ಮಗುವನ್ನು ಆಸ್ಪತ್ರೆಗೆ ಕರೆತಂದಿದ್ದರು.

ಈ ವೇಳೆ ಆಸ್ಪತ್ರೆ ಖರ್ಚಿಗೆ ಹಣ ತರಲು ಮಗುವಿನ ತಂದೆ ಬೆಂಗಳೂರಿಗೆ ಹೋಗಿದ್ದರು. ಆದರೆ ಅನಾರೋಗ್ಯದಿಂದ ಹಸುಗೂಸು ಮೃತಪಟ್ಟಿತ್ತು. ಇತ್ತ ಮಗುವಿನ ಅಜ್ಜಿ ಊರಿಗೆ ಶವ ಸಾಗಿಸಲು ಹಣವಿಲ್ಲದೇ ರೈಲು ನಿಲ್ದಾಣದಲ್ಲಿಯೇ ಬಿಟ್ಟು ಹೋಗಿದ್ದರು. ಸದ್ಯ ತನಿಖೆ ನಡೆಸಿ ಮೃತ ಮಗುವಿನ ಪೋಷಕರ ವಿಳಾಸ ಪತ್ತೆ ಹಚ್ಚಿರುವ ತಿಲಕ್ ಪಾರ್ಕ್ ಪೊಲೀಸರು, ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.

ಇದನ್ನೂ ಓದಿ: Kalaburagi murder : ಚಾಕುವಿನಿಂದ ಇರಿದು ಕೊಂದು ಆಟೋ ಚಾಲಕನನ್ನು ಮರಕ್ಕೆ ನೇತು ಹಾಕಿದ ಹಂತಕರು

ರೈಲು ಬೋಗಿಯ ಕಸದ ಬುಟ್ಟಿಯಲ್ಲಿತ್ತು ನವಜಾತ ಶಿಶು

ಬೆಂಗಳೂರು: ರೈಲು ಬೋಗಿಯಲ್ಲಿರುವ ಕಸದ ಬುಟ್ಟಿಯಲ್ಲಿ ನವಜಾತ ಶಿಶು (Newborn Baby) ಪತ್ತೆಯಾಗಿದೆ. ಜನಿಸಿದ ನಾಲ್ಕೈದು ಗಂಟೆಯಲ್ಲೇ ಗಂಡು ಮಗುವೊಂದು ನರಳಾಡಿ ಪ್ರಾಣ ಬಿಟ್ಟಿದೆ. ಪಾಪಿ ತಾಯಿಯೊಬ್ಬಳು ರೈಲಿನಲ್ಲೇ ಹೆರಿಗೆಯಾಗಿ ಡಸ್ಟ್ ಬಿನ್‌ನಲ್ಲೇ ಶಿಶುವನ್ನು ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಈ ಅಮಾನವೀಯ ಕೃತ್ಯಕ್ಕೆ ಎಲ್ಲೆಡೆ ವ್ಯಾಪಕ ಟೀಕೆಗಳು (Yelahanka Railway ) ವ್ಯಕ್ತವಾಗಿವೆ.

ಬೆಂಗಳೂರಿನ ಯಲಹಂಕ ರೈಲು ನಿಲ್ದಾಣದಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಬುಧವಾರ ಮುಂಜಾನೆ ಭುವನೇಶ್ವರದಿಂದ ಬೆಂಗಳೂರಿಗೆ ಬಂದಿದ್ದ ಪ್ರಶಾಂತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕ್ರೂರಿ ತಾಯಿಯೊಬ್ಬಳು ಗಂಡು ಮಗುವನ್ನು ಬಿಳಿ ಬಟ್ಟೆಯಲ್ಲಿ ಸುತ್ತಿ ಕಸದ ಬುಟ್ಟಿಯಲ್ಲಿ ಹಾಕಿ ಹೋಗಿದ್ದಾಳೆ.

ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಮೃತದೇಹ ಕಂಡ ಪ್ರಯಾಣಿಕರೊಬ್ಬರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಯಶವಂತಪುರ ರೈಲ್ವೆ ಪೊಲೀಸರು ಮೃತದೇಹವನ್ನು ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ರವಾನಿಸಿದ್ದಾರೆ. ಮಗು ಯಾರದ್ದು? ಯಾರು ಬಿಸಾಡಿ ಹೋಗಿರುವುದು ಎಂದು ತಿಳಿಯಲು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

Karnataka Rain : ಮುಂಗಾರು ಮಳೆ ಅಬ್ಬರಕ್ಕೆ ಹಲವೆಡೆ ಅನಾಹುತಗಳು ಮುಂದುವರಿದಿದ್ದು, ಮೈಸೂರಿನಲ್ಲಿ ಮಳೆಗೆ ಮನೆಗಳ ಗೋಡೆ ಕುಸಿದಿದೆ. ಅದೃಷ್ಟವಶಾತ್‌ ವೃದ್ಧರೊಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ.

VISTARANEWS.COM


on

By

karnataka Rain
Koo

ಮೈಸೂರು: ಮೈಸೂರಿನಲ್ಲಿ ಸುರಿದ ಭಾರಿ ಮಳೆಗೆ (Karnataka Rain) ಎರಡು ಮನೆಗಳ ಗೋಡೆ ಕುಸಿದಿದೆ. ಅದೃಷ್ಟವಶಾತ್ ಮನೆಯೊಳಗೆ ಇದ್ದ ವೃದ್ಧ ಪ್ರಾಣಪಾಯದಿಂದ ಪಾರಾಗಿದ್ದಾರೆ. ಮೈಸೂರು ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ಗೋಪಾಲಪುರ ಗ್ರಾಮದ ದೇವಮ್ಮ ಮತ್ತು ಸಣ್ಣ ತಾಯಮ್ಮ ಎಂಬುವರಿಗೆ ಸೇರಿದ ಮನೆಯ ಗೋಡೆ ಕುಸಿದಿದೆ. ಗೋಡೆ ಕುಸಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದೆ. ಇದೇ ಗ್ರಾಮದ ರಾಜೇಗೌಡ ಎಂಬುವರ ಮನೆ ಗೋಡೆ ಕೂಡ ಕುಸಿದಿದೆ. ಮನೆ ಗೋಡೆ ಕುಸಿಯುವಾಗ ಒಳಗೆ ಇದ್ದ ರಾಜೇಗೌಡ ಅವರು ಚಾವಣಿ ಅಡಿಯಲ್ಲಿ ಸಿಲುಕಿದ್ದರು. ಸಣ್ಣಪುಟ್ಟ ಗಾಯಗಳಷ್ಟೇ ಆಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ತಹಸೀಲ್ದಾರ್ ಮತ್ತು ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಬಿನಿ ಜಲಾಶಯ ಭರ್ತಿಗೆ 9 ಅಡಿಗಳು ಮಾತ್ರ ಬಾಕಿ

ಮೈಸೂರು ಜಿಲ್ಲೆಯ ಎಚ್‌ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯ ಸಂಪೂರ್ಣ ಭರ್ತಿಗೆ ಕೇವಲ 9 ಅಡಿಗಳು ಮಾತ್ರ ಬಾಕಿ ಇವೆ. ಕಬಿನಿ ಜಲಾನಯನ ಪ್ರದೇಶದಲ್ಲಿ ಮಳೆ ಅಬ್ಬರ ತಗ್ಗಿದ್ದು, ಒಳಹರಿವಿನ ಪ್ರಮಾಣದಲ್ಲಿ ಇಳಿಕೆ ಆಗಿದೆ.

ಸಮುದ್ರ ಮಟ್ಟದಿಂದ 2,284 ಅಡಿ ಗರಿಷ್ಠ ಸಾಮರ್ಥ್ಯದ ಕಬಿನಿ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟ 2275.06 ಅಡಿಗಳು ಇದೆ. ಒಟ್ಟು 19.52 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ, ಸದ್ಯ 14.30 ಟಿಎಂಸಿ ನೀರಿದೆ. ಜಲಾಶಯದ ಇಂದಿನ ಒಳಹರಿವು 17873 ಕ್ಯೂಸೆಕ್, ಹೊರಹರಿವು 2000 ಕ್ಯೂಸೆಕ್ ಇದೆ. ಕಬಿನಿ ಜಲಾಶಯ ಸಂಪೂರ್ಣ ಭರ್ತಿಗೆ 9 ಅಡಿಗಳು ಮಾತ್ರ ಬಾಕಿ ಇವೆ.

ಇದನ್ನೂ ಓದಿ: Karnataka Weather : ಕರಾವಳಿಯಲ್ಲಿ ಮುಂಗಾರು ಪ್ರಬಲ; ಮುಂದುವರಿಯಲಿದೆ ಮಳೆ ಅಬ್ಬರ

ಶಿಥಿಲಗೊಂಡಿರುವ ಚೆಲ್ಯಡ್ಯ ಸೇತುವೆಯಲ್ಲಿ ವಾಹನ ಓಡಾಟ ನಿಷೇಧ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಸೇತುವೆ ಶಿಥಿಲಗೊಂಡಿದೆ. ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆಗೆ ಚೆಲ್ಯಡ್ಕ ಸೇತುವೆ ಮುಳುಗಡೆಯಾಗಿತ್ತು. ಹೀಗಾಗಿ ಶಿಥಿಲಗೊಂಡಿರುವ ಚೆಲ್ಯಡ್ಯ ಸೇತುವೆಗೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಭೇಟಿ ನೀಡಿದರು. ಸೇತುವೆಯ ಪರಿಸ್ಥಿಯನ್ನು ಗಮನಿಸಿ ಸ್ಥಳೀಯರಲ್ಲಿ ಮಾಹಿತಿ ಪಡೆದುಕೊಂಡರು.

ಸೇತುವೆ ವೀಕ್ಷಣೆ ಬಳಿಕ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಚೆಲ್ಯಡ್ಕ ಸೇತುವೆಯಲ್ಲಿ ಘನವಾಹನ ಸಂಚಾರವನ್ನು ನಿಷೇಧ ಮಾಡಲಾಗಿದೆ. ಉಳಿದಂತೆ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾತ್ರಿ 8 ರಿಂದ ಬೆಳಗ್ಗೆ 6ರ ವರೆಗೆ ಸಂಪೂರ್ಣ ವಾಹನ ಸಂಚಾರ ನಿಷೇಧಿಸಲಾಗಿದ್ದು, ಬೆಳಗಿನ ಅವಧಿಯಲ್ಲಿ ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಅಂದರು. ಇನ್ನೂ ಮಳೆಗಾಲ ಮುಗಿದ ಬಳಿಕ ಸೇತುವೆಯ ಕಾಮಗಾರಿ ಆರಂಭಿಸಲಾಗುವುದು. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣವಾಗಿದೆ ಎಂದು ಮಾಹಿತಿ ನೀಡಿದರು, ಜಿಲ್ಲಾಧಿಕಾರಿಗೆ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ,ತಹಶೀಲ್ದಾರ್ ಪುರಂದರ ಹೆಗ್ಡೆ ಸಾಥ್ ನೀಡಿದ್ದರು.

ಕಾರವಾರದಲ್ಲಿ ಭಾರಿ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಸಾವು

ಕಾರವಾರ: ಭಾರಿ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ಕಾರವಾರದ ಅಸ್ನೋಟಿಯ ಆರವ ಗ್ರಾಮದ ತೋರ್ಲೆಭಾಗದಲ್ಲಿ ಶುಕ್ರವಾರ ನಡೆದಿದೆ. ಗುಲಾಬಿ ರಾಮಚಂದ್ರ ಮಾಂಜ್ರೇಕರ್ (70) ಮೃತ ದುರ್ದೈವಿ. ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ವೃದ್ಧೆ, ಚಿತ್ತಾಕುಲದಲ್ಲಿ ಹಣ್ಣಿನ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದರು. ನೆನ್ನೆ ಮಧ್ಯಾಹ್ನ ಮನೆಯ ಪಕ್ಕದ ಹಳೆಯ ಕಟ್ಟಡದ ಬಳಿ ತೆರಳಿದ್ದಾಗ ಮೈಮೇಲೆ ಗೋಡೆ ಕುಸಿದಿದೆ. ಗೋಡೆಯ ಅವಶೇಷಗಳಡಿ ವೃದ್ಧೆ ಮುಚ್ಚಿಹೋಗಿದ್ದರಂದ ಇಂದು ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ತಹಸೀಲ್ದಾರ್ ನಿಶ್ಚಲ ನೊರೋನ್ಹಾ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರಲ್ಲಿ ಭಾರಿ ಮಳೆಗೆ ರಸ್ತೆ ಕಾಣದೆ ನದಿಗೆ ಬಿದ್ದ ಕಾರು

ಭಾರಿ ಮಳೆಯಿಂದಾಗಿ ರಸ್ತೆ ಕಾಣದೆ ಕಾರೊಂದು ನದಿಗೆ ಬಿದ್ದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಜೂ 28ರಂದು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಘಟನೆ ನಡೆದಿದೆ. ನೋಡ ನೋಡುತ್ತಿದ್ದಂತೆ ‌ಕಾರು ಹೇಮಾವತಿ ನದಿಗೆ ಹಾರಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಂತ ಹಿನ್ನೆಲೆಯಲ್ಲಿ ರಸ್ತೆ ಕಾಣದೆ ಕಾರು ನಿಯಂತ್ರಣ ತಪ್ಪಿರುವ ಶಂಕೆ ವ್ಯಕ್ತವಾಗಿದೆ. ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಯಿಂದ ಜಿಗಿದು ನದಿಗೆ ಕಾರು ಬಿದ್ದಿದೆ. ಕಳೆದ ಎರಡು ತಿಂಗಳ ಹಿಂದೆ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದರು. ಇದೀಗ ಇದೆ ಸ್ಥಳದಲ್ಲೇ ಮತ್ತೊಂದು ಅಪಘಾತ ಸಂಭವಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿಯಲ್ಲಿ ಮುಂಗಾರು ಪ್ರಬಲ; ಮುಂದುವರಿಯಲಿದೆ ಮಳೆ ಅಬ್ಬರ

Karnataka Weather Forecast : ಕರಾವಳಿ ಭಾಗದಲ್ಲಿ ಮಳೆ ಅಬ್ಬರ (Rain News) ಮುಂದುವರಿದಿದೆ. ವೀಕೆಂಡ್‌ನಲ್ಲೂ ವ್ಯಾಪಕ ಮಳೆಯಾಗುವ ಎಚ್ಚರಿಕೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ (Yellow alert) ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯೊಂದಿಗೆ (Rain News) ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಕರ್ನಾಟಕ ಕರಾವಳಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯೊಂದಿಗೆ ಕೆಲವೊಮ್ಮೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಬೀದರ್‌, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾದರೆ, ಬೆಳಗಾವಿ, ಧಾರವಾಡ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ದಕ್ಷಿಣಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

ಬೆಂಗಳೂರಲ್ಲಿ ತುಂತುರು ಮಳೆ

ಶನಿವಾರ ಬೆಂಗಳೂರು ಸುತ್ತಮುತ್ತ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕರಾವಳಿಗೆ ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, 45-55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜುಲೈ 2 ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Weight Loss Tips
ಆಹಾರ/ಅಡುಗೆ37 seconds ago

Weight Loss Tips: ಕಪ್ಪು ಬಣ್ಣದ ಆಹಾರಗಳಿಂದ ತೂಕ ಇಳಿಸಿ!

T20 World Cup 2024
ಪ್ರಮುಖ ಸುದ್ದಿ21 mins ago

T20 World Cup 2024 : ಫೈನಲ್ ಪಂದ್ಯ ಆರಂಭಕ್ಕೆ ಮೊದಲೇ ವಿಜೇತರನ್ನು ಘೋಷಿಸಿದ ಟಾಮ್ ಮೂಡಿ

Actor Darshan
ಬೆಂಗಳೂರು23 mins ago

Actor Darshan: ಜೈಲಲ್ಲಿ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ, ಪ್ರೇಮ್ ದಂಪತಿ

Special Status
ದೇಶ28 mins ago

Special Status: ಎನ್‌ಡಿಎಗೆ ಮೈತ್ರಿಗೆ ಮೊದಲ ಅಗ್ನಿ ಪರೀಕ್ಷೆ; ವಿಶೇಷ ಸ್ಥಾನಮಾನಕ್ಕೆ ಜೆಡಿಯು ನಿರ್ಣಯ

Jain Shantamani Kala Kendra Stone Carving and Painting Camp in Bengaluru
ಬೆಂಗಳೂರು43 mins ago

Bengaluru News: ಜೈನ್‌ ಶಾಂತಮಣಿ ಕಲಾ ಕೇಂದ್ರದ ಕಲ್ಲಿನ ಕೆತ್ತನೆ ಮತ್ತು ಚಿತ್ರಕಲಾ ಶಿಬಿರ “ಪಾರ್ಶ್ವ ಪಡಾಪ್” ಗೆ ಸಂಭ್ರಮದ ತೆರೆ

Virat Kohli
ಪ್ರಮುಖ ಸುದ್ದಿ1 hour ago

Virat kohli : ವಿರಾಟ್ ಕೊಹ್ಲಿಗೆ ಫಾರ್ಮ್​ಗೆ ಮರಳಲು ಸಲಹೆಗಳನ್ನು ನೀಡಿದ ಮಾಜಿ ನಾಯಕ ಸುನೀಲ್ ಗವಾಸ್ಕರ್​

WhatsApp color
ತಂತ್ರಜ್ಞಾನ1 hour ago

WhatsApp: ಇನ್ನು ಮುಂದೆ ಈ ಫೋನ್‌ಗಳಲ್ಲಿ ವಾಟ್ಸ್ಯಾಪ್‌ ಸಿಗೋಲ್ಲ! ನಿಮ್ಮ ಫೋನೂ ಇದೆಯಾ ನೋಡಿ

Self Harming
ಕ್ರೈಂ1 hour ago

Self Harming: ಕೆರೆಗೆ ಹಾರಿ ಆತ್ಮಹತ್ಯೆ ಯತ್ನ; ಇಬ್ಬರು ಮಕ್ಕಳ ಸಾವು, ತಾಯಿ ಪಾರು

Rohit Sharma
ಪ್ರಮುಖ ಸುದ್ದಿ1 hour ago

Rohit Sharma : ಒಂದು ಸಿಕ್ಸರ್ ಬಾರಿಸಿದರೆ ಕೊಹ್ಲಿಯ ದಾಖಲೆ ಮುರಿಯುತ್ತಾರೆ ರೋಹಿತ್​ ಶರ್ಮಾ

Shirt Dress Fashion
ಫ್ಯಾಷನ್2 hours ago

Shirt Dress Fashion: ಶರ್ಟ್ ಡ್ರೆಸ್‌ ನ್ಯೂ ಲುಕ್‌ಗೆ 3 ಸಿಂಪಲ್‌ ಐಡಿಯಾ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ9 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ1 day ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌