Virat Kohli: 100 ಶತಕ ಬಾರಿಸುವಂತೆ ಕೊಹ್ಲಿಗೆ ಆಶೀರ್ವಾದ ಮಾಡಿದ ವಿಂಡೀಸ್​ ದಂತಕಥೆ ಸರ್ ವೆಸ್ಲಿ ಹಾಲ್ - Vistara News

ಕ್ರೀಡೆ

Virat Kohli: 100 ಶತಕ ಬಾರಿಸುವಂತೆ ಕೊಹ್ಲಿಗೆ ಆಶೀರ್ವಾದ ಮಾಡಿದ ವಿಂಡೀಸ್​ ದಂತಕಥೆ ಸರ್ ವೆಸ್ಲಿ ಹಾಲ್

Virat Kohli: 86 ವರ್ಷ ವಯಸ್ಸಿನ ವೆಸ್ಟ್ ಇಂಡೀಸ್ ದಂತಕಥೆ ಹಾಲ್ ಅವರು ತಮ್ಮ “ಆನ್ಸರಿಂಗ್ ದಿ ಕಾಲ್-ದಿ ಎಕ್ಸ್‌ಟ್ರಾರ್ಡಿನರಿ ಲೈಫ್ ಆಫ್ ಸರ್ ವೆಸ್ಲಿ ಹಾಲ್”(Answering the Call -The extraordinary Life of Sir Wesley Hall) ಹೆಸರಿನ ತಮ್ಮ ಆತ್ಮಚರಿತ್ರೆಯ ಪುಸ್ತಕವನ್ನು ಟೀಮ್​ ಇಂಡಿಯಾ ಆಟಗಾರರಿಗೆ ವಿಶೇಷ ಉಡುಗೊರೆಯಾಗಿ ನೀಡಿದರು.

VISTARANEWS.COM


on

Virat Kohli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾರ್ಬಡೋಸ್: ಟೀಮ್​ ಇಂಡಿಯಾದ ಆಟಗಾರರು ಹಾಲಿ ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಸೂಪರ್​-8 ಪಂದ್ಯವನ್ನಾಡಲು ವೆಸ್ಟ್​ ಇಂಡೀಸ್​ನ ಬಾರ್ಬಡೋಸ್​ನಲ್ಲಿದ್ದಾರೆ(Barbados). ನಾಳೆ ನಡೆಯುವ ಪಂದ್ಯದಲ್ಲಿ ಅಫಘಾನಿಸ್ತಾನ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಈ ಪಂದ್ಯಕ್ಕೆ ಅಭ್ಯಾಸ ನಡೆಸುತ್ತಿರುವ ವೇಳೆ ತಂಡದ ಸದಸ್ಯರು ವಿಂಡೀಸ್ ದಂತಕಥೆ ಸರ್ ವೆಸ್ಲಿ ಹಾಲ್(Sir Wesley Hall) ಅವರನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ವೆಸ್ಲಿ ಹಾಲ್ ಅವರು ವಿರಾಟ್​ ಕೊಹ್ಲಿ(Virat Kohli), ರೋಹಿತ್​ ಶರ್ಮ(Rohit Sharma) ಮತ್ತು ಟೀಮ್​ ಇಂಡಿಯಾ ಕೋಚ್​ ರಾಹುಲ್​ ದ್ರಾವಿಡ್(rahul dravid)​ ಅವರಿಗೆ ತಮ್ಮ ಆತ್ಮಚರಿತ್ರೆ ಪುಸ್ತಕವನ್ನು ಹಸ್ತಾಕ್ಷರದೊಂದಿಗೆ ಉಡುಗೊರೆಯಾಗಿ ನೀಡಿದ್ದಾರೆ.

100 ಶತಕ ಬಾರಿಸುವಂತೆ ಕೊಹ್ಲಿಗೆ ಹಾರೈಕೆ


ವೆಸ್ಲಿ ಹಾಲ್ ಅವರು ವಿರಾಟ್​ ಕೊಹ್ಲಿ ಜತೆ ಅತ್ಯಂತ ಆತ್ಮೀಯವಾಗಿ ಮಾತುಕತೆ ನಡೆಸಿದರು. ಇದೇ ವೇಳೆ ಅವರು ನಾನು ನಿಮ್ಮ ಕ್ರಿಕೆಟ್​ ಸಾಧನೆಯನ್ನು ನೋಡುತ್ತಿದ್ದೇನೆ. 80 ಶತಕ ಬಾರಿಸಿರುವ ನೀವು 100 ಶತಕವನ್ನು ಪೂರ್ತಿಗೊಳಿಸಬೇಕು ಎಂದು ಹಾರೈಸಿದ್ದಾರೆ. ಇದಕ್ಕೆ ಕೊಹ್ಲಿ ಖಂಡಿತವಾಗಿಯೂ… ಎಂದು ಅಷ್ಟೇ ವಿನಮ್ರದಿಂದ ಉತ್ತರಿಸಿ ಅವರಿಂದ ಆಶೀರ್ವಾದ ಪಡೆದರು.

86 ವರ್ಷ ವಯಸ್ಸಿನ ವೆಸ್ಟ್ ಇಂಡೀಸ್ ದಂತಕಥೆ ಹಾಲ್ ಅವರು ತಮ್ಮ “ಆನ್ಸರಿಂಗ್ ದಿ ಕಾಲ್-ದಿ ಎಕ್ಸ್‌ಟ್ರಾರ್ಡಿನರಿ ಲೈಫ್ ಆಫ್ ಸರ್ ವೆಸ್ಲಿ ಹಾಲ್”(Answering the Call -The extraordinary Life of Sir Wesley Hall) ಹೆಸರಿನ ತಮ್ಮ ಆತ್ಮಚರಿತ್ರೆಯ ಪುಸ್ತಕವನ್ನು ಟೀಮ್​ ಇಂಡಿಯಾ ಆಟಗಾರರಿಗೆ ವಿಶೇಷ ಉಡುಗೊರೆಯಾಗಿ ನೀಡಿದರು. ವೆಸ್ಲಿ ಹಾಲ್ ಅವರು ವೆಸ್ಟ್​ ಇಂಡೀಸ್​ ಪರ 48 ಟೆಸ್ಟ್​ ಪಂದ್ಯಗಳನ್ನು ಆಡಿ 192 ವಿಕೆಟ್​ ಮತ್ತು 818 ರನ್​ ಬಾರಿಸಿದ್ದಾರೆ. 80ರ ದಶಕದಲ್ಲಿ ವಿಂಡೀಸ್​ ಪರ ಅಮೋಘ ಸಾಧನೆ ತೋರಿದ್ದರು.

ಹಾಲಿ ಆವೃತ್ತಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿರಾಟ್​ ಕೊಹ್ಲಿ ಆಡಿದ ಮೂರು ಪಂದ್ಯಗಳಲ್ಲಿಯೂ ಒಂದಂಕಿಗೆ ಸೀಮಿತರಾಗಿ ಘೋರ ಬ್ಯಾಟಿಂಗ್​ ವೈಫಲ್ಯ ಕಂಡಿದ್ದರು. ಇದರಲ್ಲೊಂದು ಗೋಲ್ಡನ್​ ಡಕ್​ ಕೂಡ ಒಳಗೊಂಡಿದೆ. ಮಹತ್ವದ ಸೂಪರ್​-8 ಸುತ್ತಿನ ಪಂದ್ಯದಲ್ಲಾದರೂ ಕೊಹ್ಲಿ ನಿರೀಕ್ಷಿತ ಬ್ಯಾಟಿಂಗ್​ ನಡೆಸುವ ಮೂಲಕ ತಂಡಕ್ಕೆ ಆಸರೆಯಾಗಬೇಕಿದೆ. ಭಾರತ ನಾಳೆ ನಡೆಯುವ ಸೂಪರ್​-8 ಪಂದ್ಯದಲ್ಲಿ ಅಫಘಾನಿಸ್ತಾನ ವಿರುದ್ಧ ಆಡಲಿದೆ. ಈ ಪಂದ್ಯ ಬಾರ್ಬಡೋಸ್​ನಲ್ಲಿ ನಡೆಯಲಿದೆ.

ಇದನ್ನೂ ಓದಿ Virat Kohli: ಶಾರುಖ್, ಸಲ್ಮಾನ್ ಹಿಂದಿಕ್ಕಿ ಮೌಲ್ಯಯುತ ಸೆಲೆಬ್ರಿಟಿಯಾಗಿ ಹೊರಹೊಮ್ಮಿದ ಕಿಂಗ್​ ಕೊಹ್ಲಿ


ಭಾರತ-ಆಸೀಸ್​ ಪಂದ್ಯಕ್ಕೆ ಮಳೆ ಭೀತಿ


ಜೂನ್​ 24ರಂದು ಗ್ರಾಸ್​ ಐಲೆಟ್​ನಲ್ಲಿ ನಡೆಯಲಿರುವ ಭಾರತ-ಆಸೀಸ್​(Australia vs India) ನಡುವಿನ ಹೈವೋಲ್ಟೇಜ್​ ಪಂದ್ಯಕ್ಕೆ ಭಾರೀ ಮಳೆಯಾಗಿ ಪಂದ್ಯ ರದ್ದಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ಒಂದೊಮ್ಮೆ ಮಳೆಯಿಂದ ಪಂದ್ಯ ರದ್ದಾದರೆ ಇತ್ತಂಡಗಳಿಗೂ ತಲಾ ಒಂದು ಅಂಕ ನೀಡಲಾಗುತ್ತದೆ. ಹೀಗಾಗಿ ಭಾರತ ಅಫಘಾನಿಸ್ತಾನ ಮತ್ತು ಬಾಂಗ್ಲಾ ಎದುರಿನ ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದು ಸೆಮಿಫೈನಲ್​ ಟಿಕೆಟ್​ ಖಾತ್ರಿಗೊಳಿಸಬೇಕು. ಜೂನ್​ 29ರಂದು ಬ್ರಿಜ್​ಟೌನ್​ನಲ್ಲಿ ನಿಗದಿಯಾಗಿರುವ ಫೈನಲ್​ ಪಂದ್ಯವೂ ಮಳೆ ಭೀತಿ ಎದುರಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rahul Dravid: ನಾಯಕನಾಗಿ ಸೋಲಿನ ಅವಮಾನ ಎದುರಿಸಿದ್ದ ಮೈದಾನದಲ್ಲೇ ಕೋಚ್​ ಆಗಿ ವಿಶ್ವಕಪ್​ ಎತ್ತಿ ಹಿಡಿದ ದ್ರಾವಿಡ್

Rahul Dravid: 1996ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ರಾಹುಲ್‌ ದ್ರಾವಿಡ್‌ 2012ರ ವರೆಗೆ ಭಾರತ ತಂಡದ ಪರವಾಗಿ ಆಡಿದ್ದರು. ಆದರೆ ವಿಶ್ವಕಪ್ ಎನ್ನುವುದು ಅವರಿಗೆ ಕನಸಾಗಿತ್ತು. ಈ ಕೊರಗು ಕೂಡ ಅವರಲ್ಲಿತ್ತು. ಇದೀಗ ನಾಯಕನಾಗಿ, ಆಟಗಾರನಾಗಿ ಗೆಲ್ಲಲಾಗದ ವಿಶ್ವಕಪ್‌ ಅನ್ನು ತರಬೇತುದಾರನಾಗಿ ಗಳಿಸಿಕೊಂಡಿದ್ದಾರೆ.

VISTARANEWS.COM


on

Rahul Dravid
Koo

ಬಾರ್ಬಡೋಸ್​: ನಾಯಕನಾಗಿ ಗೆಲ್ಲಲಾಗದ ವಿಶ್ವಕಪ್(T20 World Cup 2024)​ ಟ್ರೋಫಿಯನ್ನು ರಾಹುಲ್​ ದ್ರಾವಿಡ್‌(Rahul Dravid) ಕೊನೆಗೂ ಭಾರತ ತಂಡದ ತರಬೇತುದಾರಾಗಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅದು ಕೂಡ ತಮ್ಮ ಕೊನೆಯ ಮಾರ್ಗದರ್ಶನದಲ್ಲಿ ಎನ್ನುವುದು ವಿಶೇಷ. ಈ ಗೆಲುವನ್ನು ಆಟಗಾರರಿಗಿಂತ ದ್ರಾವಿಡ್​ ಅವರೇ ಹೆಚ್ಚಾಗಿ ಸಂಭ್ರಮಿಸಿದರು. ಅಲ್ಲದೆ ಭಾವುಕರಾಗಿಯೂ ಕಂಡು ಬಂದರು.

ಶಾಂತ ಸ್ವಾಭಾವದ ದ್ರಾವಿಡ್​ ಅವರು ವಿಶ್ವಕಪ್​​ ಎತ್ತಿ ಹಿಡಿಯುವ ವೇಳೆ ಅವರ ಸಂತಸಕ್ಕೆ ಪಾರತವೇ ಇರಲಿಲ್ಲ. ಅತ್ಯಂತ ಜೋಶ್​ನಿಂದಲೇ ಕಿರುಚುತ್ತಾ ಕಪ್​ ಮೇಲೆತ್ತಿ ತಾನು ಕೂಡ ಆಟಗಾರನಂತೆ ಈ ಗೆಲುವನ್ನು ಸಂಭ್ರಮಿಸಿದರು. ಆಟಗಾರರ ಜತೆಗೂ ಈ ಸಂಭ್ರಮ ಕಂಡು ಬಂತು. ಒಟ್ಟಾರೆಯಾಗಿ ಇದು ಅವರಿಗೆ ಸ್ಮರಣೀಯ ಬೀಳ್ಕೊಡುಗೆ ಸಮಾರಂಭವಾಗಿತ್ತು. ಆಟಗಾರರು ಕೂಡ ಡ್ರಾವಿಡ್​ ಅವರನ್ನು ಮಗುವಿನಂತೆ ಮೇಲೆತ್ತಿ ಸಂಭ್ರಮಿಸಿದರು. ಈ ವಿಡಿಯೊ ವೈರಲ್​ ಆಗಿದೆ.

1996ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ರಾಹುಲ್‌ ದ್ರಾವಿಡ್‌ 2012ರ ವರೆಗೆ ಭಾರತ ತಂಡದ ಪರವಾಗಿ ಆಡಿದ್ದರು. ಆದರೆ ವಿಶ್ವಕಪ್ ಎನ್ನುವುದು ಅವರಿಗೆ ಕನಸಾಗಿತ್ತು. ಈ ಕೊರಗು ಕೂಡ ಅವರಲ್ಲಿತ್ತು. ಇದೀಗ ನಾಯಕನಾಗಿ, ಆಟಗಾರನಾಗಿ ಗೆಲ್ಲಲಾಗದ ವಿಶ್ವಕಪ್‌ ಅನ್ನು ತರಬೇತುದಾರನಾಗಿ ಗಳಿಸಿಕೊಂಡಿದ್ದಾರೆ.

ಇದನ್ನೂ ಓದಿ T20 World Cup final: ತ್ರಿವರ್ಣ ಧ್ವಜ ಹಿಡಿದು ಜಮ್ಮು-ಕಾಶ್ಮೀರದಲ್ಲಿ ಮೊಳಗಿದ ವಿಜಯೋತ್ಸವ

2007ರಲ್ಲಿ ವೆಸ್ಟ್​ ಇಂಡೀಸ್​ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ರಾಹುಲ್​ ದ್ರಾವಿಡ್​ ಅವರ ನಾಯಕತ್ವದಲ್ಲಿ ಭಾರತ ಅತ್ಯಂತ ಕಳಪೆ ಪ್ರದರ್ಶನ ತೋರುವ ಮೂಲಕ ಲೀಗ್​ ಹಂತದಿಂದಲೇ ನಿರ್ಗಮಿಸಿತ್ತು. ದುರ್ಬಲ ಬಾಂಗ್ಲಾದೇಶ ವಿರುದ್ದವೂ ಕೂಡ ಗೆಲುವು ಸಾಧಿಸಲು ಸಾಧ್ಯವಾಗ ಅವಮಾನಕ್ಕೆ ಸಿಲುಕಿತ್ತು. ಅಂದು ಅವಮಾನ ಎದುರಿಸಿದ ವಿಂಡೀಸ್​ ನೆಲದಲ್ಲೇ ಇದೀಗ ದ್ರಾವಿಡ್​ ತರಬೇತುದಾರನಾಗಿ ಕಪ್​ ಗೆದ್ದು ಸಂಭ್ರಮಿಸಿದ್ದಾರೆ.

 2022ರಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ರಾಹುಲ್​ ದ್ರಾವಿಡ್​ಗೆ ಕೋಚ್​ ಆಗಿ ಮೊದಲ ಸವಾಲಾಗಿತ್ತು. ಇಲ್ಲಿ ಕಪ್​ ಗೆಲ್ಲಲು ತಂಡ ವಿಫಲವಾಗಿತ್ತು. ಬಳಿಕ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ನಲ್ಲಿಯೂ ಭಾರತ ಫೈನಲ್​ನಲ್ಲಿ ಸೋಲು ಕಂಡಿತ್ತು. ನಿರ್ಗಮನದ ಹಂತದಲ್ಲಿ ಕೊನೆಗೂ ಕಪ್​ ಗೆದ್ದ ಖಷಿ ಅವರಿಗೆ ಲಭಿಸಿದೆ. ಜತೆಗೆ ಅವರ ಈ ಕನಸು ನೆರವೇರಲೆಂದು ಪ್ರಾರ್ಥಿಸಿಸಿದ ಕೊಟ್ಯಂತರ ಅಭಿಮಾನಿಗಳ ಹಾರೈಕೆ ಕೂಡ ಫಲಿಸಿದೆ.

ಬ್ರಿಜ್‌ಟೌನ್‌ನ ಕೆನ್ಸಿಂಗ್ಟನ್‌ ಓವಲ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ ಅಂತರದಿಂದ ಗೆದ್ದು 17 ವರ್ಷಗಳ ಬಳಿಕ 2ನೇ ಟಿ20 ವಿಶ್ವಕಪ್​ ಎತ್ತಿ ಹಿಡಿಯಿತು.

Continue Reading

ಕ್ರಿಕೆಟ್

Shiva Rajkumar: ರಾಹುಲ್ ದ್ರಾವಿಡ್ ಫೋಟೊ ಶೇರ್‌ ಮಾಡಿ ‘ಗೋಡೆ’ ಮೇಲೆ ವರ್ಲ್ಡ್ ಕಪ್ ಇಡೋರ್ ಆಗ್ಬೇಕು ಎಂದ ಶಿವಣ್ಣ

Shiva Rajkumar: ಶಿವಣ್ಣ ಎಕ್ಸ್‌ ಖಾತೆಯಲ್ಲಿ ʻʻಅಡ್ಡ ಗೋಡೆ ಮೇಲೆ ದೀಪ ಇಡೋ ಕಾಲದಲ್ಲಿ, ‘ಗೋಡೆ’ ಮೇಲೆ ವರ್ಲ್ಡ್ ಕಪ್ ಇಡೋರ್ ಆಗ್ಬೇಕುʼʼಎಂದು ಬರೆದುಕೊಂಡಿದ್ದಾರೆ. ಶಿವಣ್ಣ ಕೂಡ ಈಗ ಸಿಸಿಎಲ್ ಇನ್ನಿತರೆ ಸಿನಿಮಾ ಸಂಬಂಧಿ ಕ್ರಿಕೆಟ್ ಟೂರ್ನಿಗಳಲ್ಲಿ ಶಿವಣ್ಣ ಭಾಗವಹಿಸುತ್ತಾರೆ. ದಕ್ಷಿಣ ಆಫ್ರಿಕಾ(South Africa vs India) ತಂಡವನ್ನು 7 ರನ್​ಗಳಿಂದ ಮಣಿಸಿದ ಭಾರತ 2ನೇ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿತು.

VISTARANEWS.COM


on

Shiva Rajkumar Tweet About India's T20 Victory about rahul
Koo

ಬೆಂಗಳೂರು: ಅತ್ಯಂತ ರೋಚಕವಾಗಿ ನಡೆದ ಟಿ20 ವಿಶ್ವಕಪ್​ ಫೈನಲ್(T20 World Cup 2024) ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ(South Africa vs India) ತಂಡವನ್ನು 7 ರನ್​ಗಳಿಂದ ಮಣಿಸಿದ ಭಾರತ 2ನೇ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿತು. ಜತೆಗೆ 13 ವರ್ಷಗಳ ಕಪ್​ ಬರಗಾಲ ಕೂಡ ನೀಗಿತು. ಇದೀಗ ಟೀಂ ಇಂಡಿಯಾಗೆ ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಹಾಗೇ ನಟ ಶಿವರಾಜ್‌ ಕುಮಾರ್‌ ಅವರು ಕ್ರಿಕೆಟ್‌ ಪ್ರೇಮಿ ಎಂಬುದು ಗೊತ್ತೇ ಇದೆ. ಇದೀಗ ಶಿವಣ್ಣ ಸಹ ಖುಷಿ ಪಟ್ಟಿದ್ದು, ದ್ರಾವಿಡ್‌ಗೆ ವಿಶ್ವಕಪ್ ಗೆದ್ದು ಕೊಟ್ಟಿರುವುದನ್ನು ‘ಗೋಡೆ’ ಮೇಲೆ ವರ್ಲ್​ಕಪ್ ಇಡೋರು ಆಗ್ಬೇಕುʼʼಎಂದು ಹೇಳಿದ್ದಾರೆ.

ರಾಹುಲ್ ದ್ರಾವಿಡ್ ಕರ್ನಾಟಕದ ಆಟಗಾರ. ಆದರೆ ಅವರಿಗೆ ವಿಶ್ವಕಪ್‌ ಗೆಲ್ಲಲು ಸಾದ್ಯವಾಗಿಲ್ಲ, ಆದರೆ ದ್ರಾವಿಡ್‌ ಅವರು ಭಾರತ ಕ್ರಿಕೆಟ್ ತಂಡದ ಕೋಚ್ ಸ್ಥಾನದಿಂದ ಕೆಳಗೆ ಇಳಿಯುವ ಹೊತ್ತಿನಲ್ಲಿ ಭಾರತ ತಂಡ ವಿಶ್ವಕಪ್ ಗೆದ್ದಿದೆ. ಮಾತ್ರವಲ್ಲ ದ್ರಾವಿಡ್‌ ಕೈಯಲ್ಲಿ ಕಪ್‌ ಕಂಡು ಕನ್ನಡಿಗರು ವಿಶೇಷವಾಗಿ ಭಾವುಕಗೊಂಡಿದ್ದಾರೆ. ಹೀಗಾಗಿ ಶಿವಣ್ಣ ಕೂಡ ದ್ರಾವಿಡ್ ಗೆ ವಿಶ್ವಕಪ್ ಗೆದ್ದು ಕೊಟ್ಟಿರುವುದನ್ನು ‘ಗೋಡೆ’ ಮೇಲೆ ವರ್ಲ್​ಕಪ್ ಇಡೋರು ಆಗ್ಬೇಕು ಎಂದು ಬರೆದುಕೊಂಡಿದ್ದಾರೆ.

ಶಿವಣ್ಣ ಎಕ್ಸ್‌ ಖಾತೆಯಲ್ಲಿ ʻʻಅಡ್ಡ ಗೋಡೆ ಮೇಲೆ ದೀಪ ಇಡೋ ಕಾಲದಲ್ಲಿ, ‘ಗೋಡೆ’ ಮೇಲೆ ವರ್ಲ್ಡ್ ಕಪ್ ಇಡೋರ್ ಆಗ್ಬೇಕುʼʼಎಂದು ಬರೆದುಕೊಂಡಿದ್ದಾರೆ. ಶಿವಣ್ಣ ಕೂಡ ಈಗ ಸಿಸಿಎಲ್ ಇನ್ನಿತರೆ ಸಿನಿಮಾ ಸಂಬಂಧಿ ಕ್ರಿಕೆಟ್ ಟೂರ್ನಿಗಳಲ್ಲಿ ಶಿವಣ್ಣ ಭಾಗವಹಿಸುತ್ತಾರೆ.

ಇದನ್ನೂ ಓದಿ: Kalki 2898 AD: ಮೂರನೇ ದಿನ ಭರ್ಜರಿ ಗಳಿಕೆ ಕಂಡ ‘ಕಲ್ಕಿ 2898 ಎಡಿ’ ಸಿನಿಮಾ ! 

ರೋಚಕ ಪಂದ್ಯ ಗೆದ್ದ ಭಾರತ

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಎರಡನೇ ಎಸೆತವನ್ನು ರಬಾಡಾ ಬೌಂಡರಿ ಬಾರಿಸಿದರು. ಮೂರನೇ ಎಸೆತದಲ್ಲಿ ಒಂದು ರನ್ ಬಂತು. ಕೊನೆಯ ಎರಡು ಎಸೆತಗಳಲ್ಲಿ 10 ರನ್ ಅಗತ್ಯವಿತ್ತು. ಹಾರ್ದಿಕ್ ಒಂದು ವೈಡ್ ಎಸೆದರು. ರಬಾಡಾ ಕ್ಯಾಚಿತ್ತು ನಿರ್ಗಮಿಸಿದರು. ಕೊನೆಯ ಎಸೆತದಲ್ಲಿ ಒಂದು ರನ್ ಮಾತ್ರ ಬಂತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತು.

Continue Reading

ಕ್ರಿಕೆಟ್

T20 World Cup 2024: ಟೀಮ್​ ಇಂಡಿಯಾ ಗೆದ್ದ ಬಳಿಕ ವಿರಾಟ್‌- ಅನುಷ್ಕಾ ಮಗಳ ವಿಶೇಷ ಕಾಳಜಿ ಏನಾಗಿತ್ತು?

T20 World Cup 2024: ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು.

VISTARANEWS.COM


on

T20 World Cup 2024 Anushka Sharma reveals Vamika biggest concern
Koo

ಬೆಂಗಳೂರು: 17 ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup 2024)​ ಗೆದ್ದ ಟೀಮ್​ ಇಂಡಿಯಾಕ್ಕೆ, ಚೊಚ್ಚಲ ಟಿ20 ವಿಶ್ವಕಪ್(T20 World Cup Win)​ ಗೆದ್ದ ನಾಯಕ ಮಹೇಂದ್ರ ಸಿಂಗ್​ ಧೋನಿ(MS Dhoni) ವಿಶೇಷವಾಗಿ ಶುಭ ಹಾರೈಸಿದ್ದಾರೆ.  ಹಲವಾರು ಸೆಲೆಬ್ರಿಟಿಗಳು ಭಾರತೀಯ ಕ್ರಿಕೆಟ್ ತಂಡಕ್ಕೆ ತಮ್ಮ ಶುಭಾಶಯಗಳನ್ನು ಸಲ್ಲಿಸಿದರು. ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಪತಿ-ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹೊಗಳಿ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ಮಗಳು ವಾಮಿಕಾ ಬಗ್ಗೆ ಘಟನೆವೊಂದನ್ನು ಹಂಚಿಕೊಂಡಿದ್ದಾರೆ.

ಅನುಷ್ಕಾ ಶರ್ಮಾ ಪೋಸ್ಟ್‌ನಲ್ಲಿ ʻʻನಮ್ಮ ಮಗಳ ದೊಡ್ಡ ಕಾಳಜಿ ಏನೆಂದರೆ, ಎಲ್ಲಾ ಆಟಗಾರರು ಟಿವಿಯಲ್ಲಿ ಅಳುತ್ತಿರುವುದನ್ನು ನೋಡಿದ ನಂತರ ಅವರನ್ನು ತಬ್ಬಿಕೊಳ್ಳಲು ಯಾರಾದರೂ ಇದ್ದರೆ ಎಂದು. ಆಗ ನಾನು ಅಂದೆ ..ಹೌದು, ಅವರನ್ನು 1.5 ಬಿಲಿಯನ್ ಜನರು ತಬ್ಬಿಕೊಂಡರು ಎಂದೆ. ಎಂತಹ ಅದ್ಭುತ ಗೆಲುವು ಮತ್ತು ಎಂತಹ ಪೌರಾಣಿಕ ಸಾಧನೆ!! ಚಾಂಪಿಯನ್ಸ್ – ಅಭಿನಂದನೆಗಳು!! ಎಂದು ಬರೆದುಕೊಂಡಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, ಅನುಷ್ಕಾ ಅವರು ವಿರಾಟ್ ಮುಗುಳ್ನಕ್ಕು ಟ್ರೋಫಿಯನ್ನು ಎತ್ತುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: T20 World Cup 2024: ಸುದೀಪ್‌ ಸೇರಿದಂತೆ ಸೌತ್‌ ,ಬಾಲಿವುಡ್‌ ತಾರೆಯರು ವಿಶ್ವಕಪ್​ ಗೆಲುವನ್ನು  ಸಂಭ್ರಮಿಸಿದ್ದು ಹೀಗೆ!

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

ರೋಚಕ ಪಂದ್ಯ ಗೆದ್ದ ಭಾರತ

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಎರಡನೇ ಎಸೆತವನ್ನು ರಬಾಡಾ ಬೌಂಡರಿ ಬಾರಿಸಿದರು. ಮೂರನೇ ಎಸೆತದಲ್ಲಿ ಒಂದು ರನ್ ಬಂತು. ಕೊನೆಯ ಎರಡು ಎಸೆತಗಳಲ್ಲಿ 10 ರನ್ ಅಗತ್ಯವಿತ್ತು. ಹಾರ್ದಿಕ್ ಒಂದು ವೈಡ್ ಎಸೆದರು. ರಬಾಡಾ ಕ್ಯಾಚಿತ್ತು ನಿರ್ಗಮಿಸಿದರು. ಕೊನೆಯ ಎಸೆತದಲ್ಲಿ ಒಂದು ರನ್ ಮಾತ್ರ ಬಂತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತು.

Continue Reading

ಕ್ರೀಡೆ

T20 World Cup final: ತ್ರಿವರ್ಣ ಧ್ವಜ ಹಿಡಿದು ಜಮ್ಮು-ಕಾಶ್ಮೀರದಲ್ಲಿ ಮೊಳಗಿದ ವಿಜಯೋತ್ಸವ

T20 World Cup final: ಜಮ್ಮು ಕಾಶ್ಮೀರದ ಕಚಿ ಚೌನಿ ಸೇರಿದಂತೆ ವಿವಿಧ ಭಾಗಗಳಲ್ಲಿ ಚಳಿಯನ್ನು ಕೂಡ ಲೆಕ್ಕಿಸದೆ ಮಧ್ಯರಾತ್ರಿಯೇ ಅಭಿಮಾನಿಗಳು ಮನೆಯಿಂದ ಹೊರ ಬಂದು ಭಾರತದ ಗೆಲುವನ್ನು ಸಂಭ್ರಮಿಸಿದ್ದಾರೆ. ಬೃಹತ್ ತ್ರಿವರ್ಣ ಧ್ವಜ ಹಿಡಿದು ಪಟಾಕಿ ಸಿಡಿಸಿ ಜಯಘೋಷ ಮೊಳಗಿಸಿದ್ದಾರೆ.

VISTARANEWS.COM


on

T20 World Cup final
Koo

ಜಮ್ಮ-ಕಾಶ್ಮೀರ: 17ನೇ ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup final)​ ಗೆದ್ದ ಭಾರತ ತಂಡದ ಈ ಅಭೂತಪೂರ್ವ ಗೆಲುವನ್ನು ಅಭಿಮಾನಿಗಳು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದ್ದಾರೆ. ದೇಶದ ಮೂಲೆ ಮೂಲೆಯಲ್ಲೂ ತಡರಾತ್ರಿಯೇ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದ್ದಾರೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲೂ ಅಭಿಮಾನಿಗಳು ತ್ರಿವರ್ಣ ಧ್ವಜಗಳನ್ನು ಹಿಡಿದು ಗೆಲುವನ್ನು ಸಂಭ್ರಮಿಸಿದ್ದಾರೆ. ಇದರ ಫೋಟೊ ಮತ್ತು ವೈರಲ್​ ಆಗಿದೆ.

ಜಮ್ಮು ಕಾಶ್ಮೀರದ ಕಚಿ ಚೌನಿ ಸೇರಿದಂತೆ ವಿವಿಧ ಭಾಗಗಳಲ್ಲಿ ಚಳಿಯನ್ನು ಕೂಡ ಲೆಕ್ಕಿಸದೆ ಮಧ್ಯರಾತ್ರಿಯೇ ಅಭಿಮಾನಿಗಳು ಮನೆಯಿಂದ ಹೊರ ಬಂದು ಭಾರತದ ಗೆಲುವನ್ನು ಸಂಭ್ರಮಿಸಿದ್ದಾರೆ. ಬೃಹತ್ ತ್ರಿವರ್ಣ ಧ್ವಜ ಹಿಡಿದು ಪಟಾಕಿ ಸಿಡಿಸಿ ಜಯಘೋಷ ಮೊಳಗಿಸಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು.

ರಾಜ್ಯದ ವಿವಿಧೆಡೆ ಸಂಭ್ರಮಾಚರಣೆ 

ಬೆಂಗಳೂರಿನ ಹಲವು ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳ ಸಡಗರ ಮುಗಿಲು ಮುಟ್ಟಿತ್ತು‌. ಎಂ.ಜಿ. ರಸ್ತೆ, ಬ್ರಿಗೇಡ್ ರೋಡ್, ಕೋರಮಂಗಲ ಸೇರಿದಂತೆ ಬೆಂಗಳೂರಿನ ಹಲವು ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಮತ್ತು ತ್ರಿವರ್ಣ ಧ್ವಜ ಹಾರಿಸಿ, ಹಾಡುಗಳಿಗೆ ಕುಣಿದು ಸಂಭ್ರಮ ಆಚರಿಸಿ ಭಾರತ ತಂಡಕ್ಕೆ ಅಭಿನಂದನೆ‌ ಸಲ್ಲಿಸಿದರು.

ಇದನ್ನೂ ಓದಿ MS Dhoni Instagram Post: ಭಾರತ 2ನೇ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಅಚ್ಚರಿಯ ಪೋಸ್ಟ್ ಮಾಡಿದ ಧೋನಿ

ಭಾರತ ತಂಡ ಎರಡನೇ ಬಾರಿಗೆ ಟಿ-20 ವಿಶ್ವಕಪ್ ಗೆದ್ದ ಹಿನ್ನೆಲೆಯಲ್ಲಿ ಬೆಳಗಾವಿಯ ಸಮಾದೇವಿ ಗಲ್ಲಿಯಲ್ಲಿ ಕ್ರಿಕೆಟ್ ಪ್ರೇಮಿಗಳು ಭಾರತ ಧ್ವಜ, ಭಗವಾಧ್ವಜ ಪ್ರದರ್ಶಿಸಿ ಖುಷಿಪಟ್ಟರು. ಜತೆಗೆ ಡಿಜೆಗೆ ಸಖತ್‌ ಸ್ಟೆಪ್ ಹಾಕಿ ಕ್ರೀಡಾ ಪ್ರೇಮಿಗಳು ಸಂಭ್ರಮಿಸಿದರು. ಕನ್ನಡ, ಹಿಂದಿ ಹಾಡುಗಳ ನಡುವೆ ಯುವ ಜನತೆಯ ಡ್ಯಾನ್ಸ್‌ ಗಮನ ಸೆಳೆಯಿತು.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಭಾರತದ ಗೆಲುವನ್ನು ಕ್ರಿಕೆಟ್ ಪ್ರೇಮಿಗಳು ಸಂಭ್ರಮಿಸಿದರು. ಭಟ್ಕಳದ ಸಂಶುದ್ದೀನ್ ವೃತ್ತದಲ್ಲಿ ತಡರಾತ್ರಿ ಸಂಭ್ರಮಾಚರಣೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಹೆದ್ದಾರಿಯಲ್ಲಿ ಜಮಾಯಿಸಿದ ಕ್ರಿಕೆಟ್ ಪ್ರೇಮಿಗಳು ಸಂಚರಿಸುತ್ತಿದ್ದ ವಾಹನಗಳ ಎದುರು ಕುಣಿದು ಕುಪ್ಪಳಿಸಿದರು. ಭಾರತದ ಬಾವುಟ ಹಿಡಿದ ಯುವಕರು, ಮಕ್ಕಳು, ಕ್ರಿಕೆಟ್ ಪ್ರೇಮಿಗಳ ಸಂಭ್ರಮ ಮುಗಿಲು ಮುಟ್ಟಿತು. ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಕೆಲಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡ ಪ್ರಸಂಗವೂ ನಡೆಯಿತು. ಕ್ರಿಕೆಟ್ ಪ್ರೇಮಿಗಳನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ ಪಡಬೇಕಾಯಿತು. ಕೊನೆಗೆ ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಕ್ರಿಕೆಟ್ ಪ್ರೇಮಿಗಳನ್ನು ಪೊಲೀಸರು ಚದುರಿಸಿದರು.

Continue Reading
Advertisement
Physical Abuse
ಚಿಕ್ಕಬಳ್ಳಾಪುರ4 mins ago

Physical Abuse : ಆಟವಾಡುತ್ತಿದ್ದ 6 ವರ್ಷದ ಬಾಲಕಿ ಮೇಲೆ 17 ವರ್ಷದ ಬಾಲಕನಿಂದ ಅತ್ಯಾಚಾರ

Mann Ki Baat
ದೇಶ13 mins ago

Mann Ki Baat: ನಾಲ್ಕು ತಿಂಗಳ ನಂತರ ಮೋದಿ ʼಮನ್‌ ಕೀ ಬಾತ್‌ʼ; Live ಲಿಂಕ್ ಇಲ್ಲಿದೆ

Rahul Dravid
ಕ್ರೀಡೆ15 mins ago

Rahul Dravid: ನಾಯಕನಾಗಿ ಸೋಲಿನ ಅವಮಾನ ಎದುರಿಸಿದ್ದ ಮೈದಾನದಲ್ಲೇ ಕೋಚ್​ ಆಗಿ ವಿಶ್ವಕಪ್​ ಎತ್ತಿ ಹಿಡಿದ ದ್ರಾವಿಡ್

Shiva Rajkumar Tweet About India's T20 Victory about rahul
ಕ್ರಿಕೆಟ್26 mins ago

Shiva Rajkumar: ರಾಹುಲ್ ದ್ರಾವಿಡ್ ಫೋಟೊ ಶೇರ್‌ ಮಾಡಿ ‘ಗೋಡೆ’ ಮೇಲೆ ವರ್ಲ್ಡ್ ಕಪ್ ಇಡೋರ್ ಆಗ್ಬೇಕು ಎಂದ ಶಿವಣ್ಣ

T20 World Cup 2024 Anushka Sharma reveals Vamika biggest concern
ಕ್ರಿಕೆಟ್43 mins ago

T20 World Cup 2024: ಟೀಮ್​ ಇಂಡಿಯಾ ಗೆದ್ದ ಬಳಿಕ ವಿರಾಟ್‌- ಅನುಷ್ಕಾ ಮಗಳ ವಿಶೇಷ ಕಾಳಜಿ ಏನಾಗಿತ್ತು?

T20 World Cup final
ಕ್ರೀಡೆ49 mins ago

T20 World Cup final: ತ್ರಿವರ್ಣ ಧ್ವಜ ಹಿಡಿದು ಜಮ್ಮು-ಕಾಶ್ಮೀರದಲ್ಲಿ ಮೊಳಗಿದ ವಿಜಯೋತ್ಸವ

Shawarma
ಕರ್ನಾಟಕ59 mins ago

Shawarma: ನಾನ್‌ವೆಜ್ ಪ್ರಿಯರಿಗೆ ಬ್ಯಾಡ್‌ ನ್ಯೂಸ್‌; ಶೀಘ್ರದಲ್ಲೇ ರಾಜ್ಯದಲ್ಲಿ ಶವರ್ಮಾ ಬ್ಯಾನ್ ?

ಕ್ರೀಡೆ1 hour ago

MS Dhoni Instagram Post: ಭಾರತ 2ನೇ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಅಚ್ಚರಿಯ ಪೋಸ್ಟ್ ಮಾಡಿದ ಧೋನಿ

ಟಾಲಿವುಡ್1 hour ago

Kalki 2898 AD: ಮೂರನೇ ದಿನ ಭರ್ಜರಿ ಗಳಿಕೆ ಕಂಡ ‘ಕಲ್ಕಿ 2898 ಎಡಿ’ ಸಿನಿಮಾ ! 

Indian Armed Forces
ದೇಶ1 hour ago

Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ18 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌