Chandan Shetty: ಮುಂಚೆ ನಾನು ಗನ್‌ ತರ ಇದ್ದೆ, ಯಾವುದಕ್ಕೂ ಹೆದರ್ತಾ ಇರಲಿಲ್ಲ; ಹೀಗ್ಯಾಕೆ ಅಂದ್ರು ಚಂದನ್‌ ಶೆಟ್ಟಿ? - Vistara News

ಸ್ಯಾಂಡಲ್ ವುಡ್

Chandan Shetty: ಮುಂಚೆ ನಾನು ಗನ್‌ ತರ ಇದ್ದೆ, ಯಾವುದಕ್ಕೂ ಹೆದರ್ತಾ ಇರಲಿಲ್ಲ; ಹೀಗ್ಯಾಕೆ ಅಂದ್ರು ಚಂದನ್‌ ಶೆಟ್ಟಿ?

Chandan Shetty: ಅರುಣ್ ಅಮುಕ್ತ ನಿರ್ದೇಶನದ ʻವಿದ್ಯಾರ್ಥಿ ವಿದ್ಯಾರ್ಥಿನಿಯರೇʼ ಚಿತ್ರದ ಸ್ಟೂಡೆಂಟ್ ಪಾರ್ಟಿ ವೀಡಿಯೊ ಸಾಂಗ್ ಬಿಡುಗಡೆಗೊಂಡಿದೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಈ ಹಾಡಿಗೆ ಧ್ವನಿಯಾಗಿದ್ದಾರೆ. ಚಂದನ್‌ ಶೆಟ್ಟಿ ಹಲವು ಸಂದರ್ಶನಗಳಲ್ಲಿ ಹಾಗೇ ಸಿನಿಮಾ ಪ್ರಮೋಷನ್‌ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇದೀಗ ಚಂದನ್‌ ಸಂದರ್ಶನವೊಂದರಲ್ಲಿ ತಮ್ಮ ವೈಯಕ್ತಿಕ ಜೀವನ ಬಗ್ಗೆ, ಹಾಗೇ ಕರಿಯರ್‌ ಕುರಿತಾಗಿ ಹಲವಾರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

VISTARANEWS.COM


on

Chandan Shetty shares before fame life in interview
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು:  ಕನ್ನಡದ ರ್‍ಯಾಪರ್‌ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ ವಿಚ್ಛೇದನ ಪಡೆದ ಬೆನ್ನಲ್ಲೇ ಚಂದನ್‌ ಶೆಟ್ಟಿ ಹಲವು ಸಂದರ್ಶನಗಳಲ್ಲಿ ಹಾಗೇ ಸಿನಿಮಾ ಪ್ರಮೋಷನ್‌ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇದೀಗ ಚಂದನ್‌ ಸಂದರ್ಶನವೊಂದರಲ್ಲಿ ತಮ್ಮ ವೈಯಕ್ತಿಕ ಜೀವನ ಬಗ್ಗೆ, ಹಾಗೇ ಕರಿಯರ್‌ ಕುರಿತಾಗಿ ಹಲವಾರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ʻಫೇಮ್‌ ಬರುವ ಮುಂಚೆ ನಾನು ಗನ್‌ ತರ ಇದ್ದೆ. ಯಾವುದಕ್ಕೂ ನಾನು ಹೆದರುತ್ತ ಇರಲಿಲ್ಲ. ಫ್ರೀ ಬರ್ಡ್‌ ಆಗಿದ್ದೆʼʼಎಂದು ಹೇಳಿಕೊಂಡಿದ್ದಾರೆ.

ಸಂದರ್ಶನವೊಂದರಲ್ಲಿ ಆಗಿನ ಚಂದನ್‌ ಜೀವನ ಹೇಗಿತ್ತು ಎಂಬ ಪ್ರಶ್ನೆಗೆ ಚಂದನ್‌ ಶೆಟ್ಟಿ ಮಾತನಾಡಿದ್ದು ಹೀಗೆ. ʻʻಹಿಂದೆ ಏನು ಮಾಡಿದ್ದೆ ಎನ್ನುವ ಅಹಂಕಾರಕ್ಕಿಂತ ಮುಂದೆ ಏನು ಮಾಡಬೇಕು ಎನ್ನುವ ಭಯ ತುಂಬ ಇದೆ. ಅವತ್ತು ನಾನು ಗನ್‌ ತರ ಇದ್ದೆ. ಯಾವುದಕ್ಕೂ ನಾನು ಹೆದರುತ್ತ ಇರಲಿಲ್ಲ. ಲಿರಿಕ್ಸ್‌ ಬರೆಯುವಾಗ ಫ್ರೀ ಆಗಿ ಬರೆಯುತ್ತಿದ್ದೆ. ಒಟ್ಟಿನಲ್ಲಿ ಫ್ರೀ ಬರ್ಡ್‌ ಆಗಿದ್ದೆ. ಆಗ ನಾನು ಯಾರು ಅಂತ ಎಷ್ಟೋ ಜನರಿಗೆ ಗೊತ್ತಿರ್ಲಿಲ್ಲ. ನಾವು ಯಾರು ಅಂತ ಗೊತ್ತಾದ ಮೇಲೆ ಕಷ್ಟ ಬರೋದು ಜಾಸ್ತಿ. ನಾನು ಫೇಮ್‌ ಬರುವ ಮುಂಚಿನ ದಿನಗಳಲ್ಲಿ ಏನೇ ಅಂದುಕೊಂಡಿದ್ದರೂ ಲಿರಿಕ್ಸ್‌ ಬರೆಯುತ್ತಿದ್ದೆ. ʻಹಾಳಾಗ್‌ ಹೋದೆʼ ಅಂತ ಒಂದು ಹಾಡು ಬರೆದಿದ್ದೆ. ನಾನು ಯಾಕೆ ಆ ತರ ಹಾಡು ಬರೆದೆ ಅಂತ ಇದುವೆರೆಗೆ ಗೊತ್ತಿಲ್ಲ. ಯಾವ ಹಾಡು ಹಿಟ್‌ ಆಗತ್ತೆ, ಆಗಲ್ಲ ಅನ್ನೋದು ಗೊತ್ತಾಗಲ್ಲ. ಅವರೇಜ್‌ ಅಂತ ಅಂದುಕೊಂಡಿದ್ದ ಹಾಡುಗಳು ಕೆಲವೊಮ್ಮೆ ಸೂಪರ್‌ ಡೂಪರ್‌ ಹಿಟ್‌ ಆಗತ್ತೆ. ʻಖರಾಬುʼ ಸಾಂಗ್‌ ಮಾಡ್ದಾಗ ರೆಜೆಕ್ಟ್‌ ಆಗುತ್ತೆ ಎಂದೇ ಭಾವಿಸಿದ್ದೆ. ಆದರೆ ಆಮೇಲೆ ಧ್ರುವ ಸರ್ಜಾ ಅವರು ಇಷ್ಟ ಪಟ್ಟರುʼʼಎಂದರು.

ಇದನ್ನೂ ಓದಿ: Chandan Shetty: ಡಿವೋರ್ಸ್‌ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ಚಂದನ್‌ ಶೆಟ್ಟಿ!

ಮಾತು ಮುಂದುವರಿಸಿ ʻʻ ಮ್ಯೂಸಿಕ್‌ನಲ್ಲಿ ನಾನು ಮುಂದೆ ಬರಬೇಕು ಅಂದರೆ ತುಂಬ ಕಷ್ಟ. ಕಾಂಪಿಟೇಶನ್‌ ಜಾಸ್ತಿ ಆಗುತ್ತಿದೆ. ಹಾಗೇ ಜೀವನದಲ್ಲಿಯೂ ಹಾಗೇ ಇವತ್ತು ಬದುಕ್ಕಿದ್ದೀಯಾ, ಅಷ್ಟೇ ನಾಳೆ ಏನಾಗುತ್ತೆ ಅನ್ನೋದು ಗೊತ್ತಾಗಲ್ಲ. ಇರುವಷ್ಟು ದಿನ ನಾಲ್ಕು ಜನ ಮುಂದೆ ಚೆನ್ನಾಗಿ ಇರಬೇಕು. ನೀವು ಜೀವನದಲ್ಲಿ ಮುಂದೆ ಬರುತ್ತಿದ್ದಂತೆ ಹಿಂದೆ ಬೈಕೊಂಡು ಬರೋರು ಬರ್ತಾನೆ ಇರ್ತಾರೆ. ಮನುಷ್ಯರ ಜೀವನ ಕೂಡ ಪ್ರಕೃತಿ ತರ. ಒಂದೊಂದು ಸಲ ಖುಷಿ, ಒಂದೊಂದು ಸಲ ಬೇಜಾರು ಎಲ್ಲ ಇರುತ್ತದೆʼʼಎಂದು ಹೇಳಿದರು.

ಡಿವೋರ್ಸ್‌ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ಚಂದನ್‌ ಶೆಟ್ಟಿ!

ಅರುಣ್ ಅಮುಕ್ತ ನಿರ್ದೇಶನದ ʻವಿದ್ಯಾರ್ಥಿ ವಿದ್ಯಾರ್ಥಿನಿಯರೇʼ ಚಿತ್ರದ ಸ್ಟೂಡೆಂಟ್ ಪಾರ್ಟಿ ವೀಡಿಯೊ ಸಾಂಗ್ ಬಿಡುಗಡೆಗೊಂಡಿದೆ ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಈ ಹಾಡಿಗೆ ಧ್ವನಿಯಾಗಿದ್ದಾರೆ. ಈಗ ಬಿಡುಗಡೆಗೊಂಡಿರೋ ಹಾಡು ರ್ಯಾಪ್ ಶೈಲಿಯಲ್ಲಿ ಮೂಡಿ ಬಂದಿದೆ. ಚೇತನ್ ಕುಮಾರ್ ಸಾಹಿತ್ಯಕ್ಕೆ ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ. ಇದು ವಿಜೇತ್ ಕೃಷ್ಣ ಮತ್ತು ಚಂದನ್ ಶೆಟ್ಟಿ ಅವರುಗಳ ಎರಡನೇ ಸಮಾಗಮ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada New Movie: ಗೋಪಿನಾಥ ಬೆಟ್ಟದಲ್ಲಿ ನಡೆದ ಧರ್ಮ ಕೀರ್ತಿರಾಜ್ ಅಭಿನಯದ ʼಪ್ರೊಡಕ್ಷನ್ ನಂ 1ʼ ಚಿತ್ರದ ಮುಹೂರ್ತ

Kannada New Movie: ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸುತ್ತಿರುವ “ಪ್ರೊಡಕ್ಷನ್ ನಂ 1” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಚಿಕ್ಕಬಳ್ಳಾಪುರದ ಗೋಪಿನಾಥ ಬೆಟ್ಟದಲ್ಲಿರುವ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.

VISTARANEWS.COM


on

Dharma Keerthiraj starrer production No 1 movie Muhurta
Koo

ಬೆಂಗಳೂರು: ಲಿತನ್ಯ ಗೋಲ್ಡ್ ಲೀಫ್ ಮೀಡಿಯಾ ವೆಂಚರ್ಸ್ ಪ್ರೈ.ಲಿ. ಹಾಗೂ ಸಾರ್ಥಕ್ ಕ್ರಿಯೇಟರ್ಸ್ ಲಾಂಛನದಲ್ಲಿ ಜಿ.ಎಚ್. ಜನಾರ್ದನ್ ಹಾಗೂ ಸಿ.ಎಲ್. ಹರ್ಷವರ್ಧನ್ ನಿರ್ಮಿಸುತ್ತಿರುವ ರಮೇಶ್ ರಾಜ್ ಅವರ ನಿರ್ದೇಶನದಲ್ಲಿ ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸುತ್ತಿರುವ “ಪ್ರೊಡಕ್ಷನ್ ನಂ 1” ಚಿತ್ರದ (Kannada New Movie) ಮುಹೂರ್ತ ಸಮಾರಂಭ ಇತ್ತೀಚಿಗೆ ಚಿಕ್ಕಬಳ್ಳಾಪುರದ ಗೋಪಿನಾಥ ಬೆಟ್ಟದಲ್ಲಿರುವ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.

ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಆರಂಭ ಫಲಕ ತೋರಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಎಂ. ಮುನೇಗೌಡ ಕ್ಯಾಮೆರಾ ಚಾಲನೆ ಮಾಡಿದರು.

ಇದನ್ನೂ ಓದಿ: Eshwar Khandre: ಚಾರಣಪಥಗಳ ಆನ್‌ಲೈನ್ ಟಿಕೆಟ್‌ಗೆ ಶೀಘ್ರ ಚಾಲನೆ; ಸಚಿವ ಈಶ್ವರ ಖಂಡ್ರೆ

ಆಕ್ಷನ್ ಡ್ರಾಮ ಜಾನರ್‌ನ ಈ ಚಿತ್ರಕ್ಕೆ ನಿರ್ದೇಶಕ ರಮೇಶ್ ರಾಜ್ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. “ಗ್ಯಾಂಗ್ ಲೀಡರ್”, ” ತವರಿನ ಋಣ” ಚಿತ್ರಗಳನ್ನು ನಿರ್ದೇಶಿಸಿರುವ ರಮೇಶ್ ರಾಜ್ ಅವರಿಗೆ ಇದು ಮೂರನೇ ಚಿತ್ರ.

ಈಶ್ವರಿ ಸುರೇಶ್ ಛಾಯಾಗ್ರಹಣ, ಶಶಿ ಸಂಕಲನ, ಬಿ.ವಿ. ರೆಡ್ಡಿ ಸಹ ನಿರ್ದೇಶನ ಹಾಗೂ ಮಂಜುನಾಥ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ. ವಂಟೂರು ಶ್ರೀನಿವಾಸ್ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: Yuva Sambhrama 2024: ಬೆಂಗಳೂರಿನಲ್ಲಿ ಜು.12ರಿಂದ 3 ದಿನ ಯುವ ಸಂಭ್ರಮ

ಧರ್ಮ ಕೀರ್ತಿರಾಜ್ ಅವರಿಗೆ ಪ್ರಿಯಾ ಹೆಗ್ಡೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ಮುಂದಿನ ವಾರದಿಂದ ಚಿತ್ರೀಕರಣ ಆರಂಭವಾಗುತ್ತಿದೆ. ಚಿಕ್ಕಬಳ್ಳಾಪುರ, ಬೆಂಗಳೂರು, ಮಡಿಕೇರಿ ಹಾಗೂ ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ.

Continue Reading

ಸಿನಿಮಾ

Highest Collection Movie: ಅತೀ ಹೆಚ್ಚು ಗಳಿಕೆ ದಾಖಲಿಸಿದ ಭಾರತದ ಟಾಪ್‌ 10 ಸಿನಿಮಾಗಳಿವು

Highest Collection Movie: ಭಾರತೀಯ ಸಿನಿಮಾ (Indian Movies) ರಂಗದಲ್ಲಿ ಕೆಲವು ಚಿತ್ರಗಳು ಗಳಿಕೆಯಲ್ಲಿ ವಿಶ್ವ ದಾಖಲೆಯನ್ನೇ ಮಾಡಿದೆ. ಅದರಲ್ಲಿ ಅತಿ ಹೆಚ್ಚು ಗಳಿಕೆಯನ್ನು ಮಾಡಿ ಗಲ್ಲಾ ಪೆಟ್ಟಿಗೆಯಲ್ಲಿ ದಾಖಲೆ ಬರೆದಿರುವ ಹತ್ತು ಸಿನಿಮಾಗಳನ್ನು ಇಂದಿಗೂ ಹಲವು ಮಂದಿ ಪದೇ ಪದೇ ನೋಡುತ್ತಿರುತ್ತಾರೆ. ಆ ಚಿತ್ರಗಳು ಯಾವುದು, ಗಳಿಕೆ ಎಷ್ಟಾಗಿತ್ತು ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Highest Collection Movie
Koo

ಭಾರತೀಯ ಸಿನಿಮಾ (Indian Movies) ರಂಗದಲ್ಲಿ ಬಾಲಿವುಡ್ (Highest Collection Movie) ದಾಖಲೆಗಳು ನಿರಂತರವಾಗಿವೆ. ಹಲವಾರು ಚಿತ್ರಗಳು ಸಾರ್ವಕಾಲಿಕವಾಗಿ ಅತಿ ಹೆಚ್ಚು ಗಳಿಕೆಯನ್ನು ಪಡೆದಿವೆ. ದಂಗಲ್‌ (Dangal), ಜವಾನ್ (Jawan), ಪಠಾಣ್ (Pathaan), ಬಜರಂಗಿ ಭಾಯಿಜಾನ್ (Bajrangi Bhaijaan), ಸೀಕ್ರೆಟ್ ಸೂಪರ್‌ಸ್ಟಾರ್ (Secret Superstar), ಪಿಕೆ (PK) ಈ ಚಿತ್ರಗಳು ತೆರೆಗೆ ಬಂದು ಹತ್ತು ವರ್ಷಗಳೇ ಕಳೆದರೂ ಇಂದಿಗೂ ಬಹುತೇಕ ಮಂದಿಯ ಮೆಚ್ಚಿನ ಚಿತ್ರವಾಗಿ ಉಳಿದಿದೆ.

ಭಾರತೀಯ ಸಿನಿಮಾ ರಂಗದಲ್ಲಿ ಕೆಲವು ಚಿತ್ರಗಳು ಗಳಿಕೆಯಲ್ಲಿ ವಿಶ್ವ ದಾಖಲೆಯನ್ನೇ ಮಾಡಿದೆ. ಅದರಲ್ಲಿ ಅತಿ ಹೆಚ್ಚು ಗಳಿಕೆಯನ್ನು ಮಾಡಿ ಗಲ್ಲಾ ಪೆಟ್ಟಿಗೆಯಲ್ಲಿ (box office) ದಾಖಲೆ ಬರೆದಿರುವ ಹತ್ತು ಸಿನಿಮಾಗಳನ್ನು ಇಂದಿಗೂ ಹಲವು ಮಂದಿ ಪದೇ ಪದೇ ನೋಡುತ್ತಿರುತ್ತಾರೆ. ಆ ಚಿತ್ರಗಳು ಯಾವುದು, ಗಳಿಕೆ ಎಷ್ಟಾಗಿತ್ತು ಎನ್ನುವ ಮಾಹಿತಿ ಇಲ್ಲಿದೆ.

1. ದಂಗಲ್

ಕುಸ್ತಿ ಪಟುಗಳಾದ ಗೀತಾ ಫೋಗಟ್ ಮತ್ತು ಬಬಿತಾ ಫೋಗಟ್ ಅವರ ಜೀವನಾಧಾರಿತ ಚಿತ್ರದಲ್ಲಿ ಮಹಾವೀರ್ ಸಿಂಗ್ ಪಾತ್ರಧಾರಿಯಾಗಿ ಆಮೀರ್ ಖಾನ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. 2016ರಲ್ಲಿ ತೆರೆಗೆ ಬಂದ ಈ ಚಿತ್ರ 30 ಕೋಟಿ ರೂ. ಬಜೆಟ್‌ನದ್ದಾಗಿದ್ದು, ವಿಶ್ವಾದ್ಯಂತ ಗಲ್ಲಾ ಪೆಟ್ಟಿಗೆಯಲ್ಲಿ 2,024 ಕೋಟಿ ರೂ. ಗಳಿಸಿ ದಾಖಲೆ ಬರೆದು ಭಾರತೀಯ ಚಿತ್ರರಂಗದಲ್ಲಿ ಅತೀ ಹೆಚ್ಚು ಆದಾಯಗಳಿಸಿದ ಸಿನೆಮಾ ಎಂಬ ಖ್ಯಾತಿಯನ್ನು ಪಡೆದಿದೆ. ಅದರಲ್ಲೂ ಚೀನಾದಲ್ಲಿ ಈ ಸಿನಿಮಾ ಅತಿ ಹೆಚ್ಚು ಆದಾಯವನ್ನು ಗಳಿಸಿದ ಅನ್ಯ ಭಾಷೆಯ ಮೂರನೇ ಸಿನಿಮಾ ಇದು ಎನ್ನುವ ಖ್ಯಾತಿಯೂ ʼದಂಗಲ್ʼ ಚಿತ್ರದ್ದಾಗಿದೆ.


2. ಬಾಹುಬಲಿ 2

ಪ್ರಭಾಸ್ ಅಭಿನಯದ ‘ಬಾಹುಬಲಿ 2’ ಚಿತ್ರ 2012ರಲ್ಲಿ ತೆರೆಗೆ ಬಂದಿದ್ದು, ಎಸ್.ಎಸ್. ರಾಜಮೌಳಿ ಮತ್ತು ವಿ. ವಿಜಯೇಂದ್ರ ಪ್ರಸಾದ್ ಬರೆದು ನಿರ್ದೇಶಿಸಿದ್ದಾರೆ. 250 ಕೋಟಿ ರೂ. ಬಜೆಟ್ ನ ಈ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ 1,810.60 ಕೋಟಿ ರೂ. ಆದಾಯ ಗಳಿಸಿ ದಾಖಲೆ ಬರೆದಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಹೆಚ್ಚು ಆದಾಯ ಗಳಿಸಿರುವ ಚಿತ್ರ ಎಂಬ ಖ್ಯಾತಿ ಈ ಸಿನೆಮಾದ್ದಾಗಿದೆ. ಚಿತ್ರ ಬಿಡುಗಡೆಯಾದ ಮೊದಲ ಆರು ದಿನದಲ್ಲಿ 789 ಕೋಟಿ ರೂ. ಗಳಿಸಿರುವುದು ಮಾತ್ರವಲ್ಲ 10 ದಿನದಲ್ಲಿ 1 ಸಾವಿರ ಕೋಟಿ ರೂ. ಆದಾಯ ಪಡೆದ ಸಿನೆಮಾ ಇದಾಗಿದೆ.


3. ಆರ್ ಆರ್ ಆರ್

ರಾಮ್ ಚರಣ್ ಮತ್ತು ಜ್ಯೂ. ಎನ್ ಟಿ ಆರ್ ಅಭಿನಯದ ಆರ್ ಆರ್ ಆರ್ ಚಿತ್ರ 2022ರಲ್ಲಿ ತೆರೆಗೆ ಬಂದಿದ್ದು, 550 ಕೋಟಿ ರೂ. ಬಜೆಟ್ ನದ್ದಾಗಿದೆ. ಅತ್ಯಂತ ದುಬಾರಿ ಖರ್ಚು ಮಾಡಿ ನಿರ್ಮಿಸಿರುವ ಈ ಚಿತ್ರ ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ 405.9 ಕೋಟಿ ರೂ. ಗಳಿಸಿದೆ. ವಿಶ್ವದಾದ್ಯಂತ 1,387.26 ಕೋಟಿ ರೂ. ಆದಾಯ ಗಳಿಸಿದೆ. ಭಾರತದಲ್ಲಿ ಮೂರನೇ ಅತಿ ಹೆಚ್ಚು ಆದಾಯ ಗಳಿಸಿದ ಚಿತ್ರವಾಗಿ ಮಾತ್ರವಲ್ಲ ತೆಲುಗಿನಲ್ಲಿ ಎರಡನೇ ಅತಿ ಹೆಚ್ಚು ಆದಾಯಗಳಿಸಿರುವ ಚಿತ್ರವಾಗಿ ಗುರುತಿಸಿಕೊಂಡಿದೆ.


4. ಕೆಜಿಎಫ್ ಚಾಪ್ಟರ್ 2

2022ರಲ್ಲಿ ತೆರೆಗೆ ಬಂದ ಯಶ್ ಅಭಿನಯದ ಕನ್ನಡ ಚಿತ್ರ ಕೆಜಿಎಫ್ ಚಾಪ್ಟರ್ 2 ಅನ್ನು ಪ್ರಶಾಂತ್ ನೀಲ್ ಅವರು ನಿರ್ದೇಶಿಸಿದ್ದಾರೆ. ವಿಜಯ ಕಿರಗಂದೂರ್ ನಿರ್ಮಿಸಿದ್ದಾರೆ.

100 ಕೋಟಿ ಬಜೆಟ್‌ನ ಈ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ 1,250 ಕೋಟಿ ರೂ. ಆದಾಯ ಗಳಿಸಿದೆ. ವಿಶ್ವದಲ್ಲಿ (ಭಾರತೀಯ ಚಿತ್ರ) ನಾಲ್ಕನೇ ಹಾಗೂ ಭಾರತದಲ್ಲಿ ಎರಡನೇ ಅತಿ ಹೆಚ್ಚು ಆದಾಯ ಗಳಿಸಿರುವ ಚಿತ್ರವಾಗಿ ಇದು ಗುರುತಿಸಿಕೊಂಡಿದೆ.

5. ಜವಾನ್

ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರ 2023ರಲ್ಲಿ ತೆರೆಗೆ ಬಂದಿದ್ದು, 1,148.32 ಕೋಟಿ ರೂ. ಆದಾಯ ಗಳಿಸಿದೆ. 300 ಕೋಟಿ ರೂ. ಬಜೆಟ್‌ನ ಈ ಚಿತ್ರದಲ್ಲಿ ನಯನತಾರಾ, ದೀಪಿಕಾ ಪಡುಕೋಣೆ, ವಿಜಯ್ ಸೇತುಪತಿ, ಪ್ರಿಯಾಮಣಿ, ಸಾನ್ಯಾ ಮಲ್ಹೋತ್ರ ಕೂಡ ಕಾಣಿಸಿಕೊಂಡಿದ್ದಾರೆ.

ಹಿಂದಿ ಭಾಷೆಯಲ್ಲಿ ಎರಡನೇ ಅತಿ ಹೆಚ್ಚು ಆದಾಯ ಗಳಿಸಿರುವ ಚಿತ್ರವಾಗಿ ಇದು ಗುರುತಿಸಿಕೊಂಡಿದ್ದು, ಭಾರತೀಯ ಸಿನಿಮಾದಲ್ಲಿ ಐದನೇ ಸ್ಥಾನ ಪಡೆದಿದೆ.


6. ಪಠಾಣ್

ಸಿದ್ಧಾರ್ಥ್ ಆನಂದ್ ನಿರ್ದೇಶನ ಮಾಡಿರುವ ಚಿತ್ರ ʼಪಠಾಣ್ʼ ವಿಶ್ವದಾದ್ಯಂತ 1,050.30 ಕೋಟಿ ರೂ. ಆದಾಯ ಗಳಿಸಿದೆ. ಶಾರುಖ್ ಖಾನ್ ಅಭಿನಯದ ಈ ಚಿತ್ರ ಗಳಿಕೆಯಲ್ಲಿ ಹಿಂದಿ ಭಾಷೆಯಲ್ಲಿ ಮೂರನೇ ಸ್ಥಾನ ಹಾಗೂ ಭಾರತೀಯ ಸಿನಿಮಾ ರಂಗದಲ್ಲಿ ಆರನೇ ಸ್ಥಾನವನ್ನು ಗಳಿಸಿದೆ. 240 ಕೋಟಿ ರೂ. ಬಜೆಟ್ ನ ಚಿತ್ರ ಇದಾಗಿದೆ.


7. ಬಜರಂಗಿ ಭಾಯಿಜಾನ್

ಭಾರತದಾದ್ಯಂತ ಬಾಯಿಜಾನ್ ಎಂದೇ ಕರೆಯಲ್ಪಡುವ ಸಲ್ಮಾನ್ ಖಾನ್, ಕರೀನಾ ಕಪೂರ್ ಅಭಿನಯದ ಈ ಚಿತ್ರ 2015ರಲ್ಲಿ ತೆರೆಗೆ ಬಂದಿದ್ದು, ಕಬೀರ್ ಖಾನ್ ನಿರ್ದೇಶಿಸಿದ್ದಾರೆ. ವಿಶ್ವದಾದ್ಯಂತ 969 ಕೋಟಿ ರೂ. ಆದಾಯವನ್ನು ಈ ಚಿತ್ರ ಗಳಿಸಿದ್ದು, ಅತಿ ಹೆಚ್ಚು ಆದಾಯ ಗಳಿಸಿದ ಭಾರತದ 7ನೇ ಚಿತ್ರ ಹಾಗೂ ಹಿಂದಿ ಭಾಷೆಯ 4ನೇ ಚಿತ್ರವಾಗಿ ಗುರುತಿಸಿಕೊಂಡಿದೆ.


8. ಅನಿಮಲ್

ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್, ಬಾಬಿ ಡಿಯೋಲ್, ತೃಪ್ತಿ ದಿಮ್ರಿ ಅಭಿನಯದ ಈ ಚಿತ್ರ ವಿಶ್ವದಾದ್ಯಂತ 917.36 ಕೋಟಿ ರೂ. ಆದಾಯ ಗಳಿಸಿದೆ. ಈ ಚಿತ್ರವನ್ನು 200 ಕೋಟಿ ರೂ. ಬಜೆಟ್ ನಲ್ಲಿ ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸಿದ್ದಾರೆ.


9. ಸೀಕ್ರೆಟ್ ಸೂಪರ್ ಸ್ಟಾರ್

2017ರಲ್ಲಿ ತೆರೆಗೆ ಬಂದ ‘ಸೀಕ್ರೆಟ್ ಸೂಪರ್ ಸ್ಟಾರ್’ ಚಿತ್ರವನ್ನು ಅದ್ವತ್ ಚಂದನ್ ನಿರ್ದೇಶಿಸಿದ್ದು, ಆಮೀರ್ ಖಾನ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ವಿಶ್ವದಾದ್ಯಂತ 905.7 ಕೋಟಿ ರೂ. ಆದಾಯ ಗಳಿಸಿರುವ ಈ ಚಿತ್ರವನ್ನು ಅತೀ ಕಡಿಮೆ ಬಜೆಟ್ 15 ಕೋಟಿ ರೂ.ನಲ್ಲಿ ನಿರ್ಮಿಸಲಾಗಿದೆ.


ಇದನ್ನೂ ಓದಿ: Kalki 2898 AD: ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಬರೆದ ʼಕಲ್ಕಿʼ; ಬಿಡುಗಡೆಯಾದ 5ನೇ ದಿನ ಗಳಿಸಿದ್ದು ಬರೋಬ್ಬರಿ 84 ಕೋಟಿ ರೂ.

10. ಪಿಕೆ

ಆಮೀರ್ ಖಾನ್, ಅನುಷ್ಕಾ ಶರ್ಮಾ, ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಈ ಚಿತ್ರ 2014ರಲ್ಲಿ ತೆರೆಗೆ ಬಂದಿತ್ತು. ರಾಜಕುಮಾರ್ ಹಿರಾನಿ ನಿರ್ದೇಶಿರುವ ಈ ಚಿತ್ರವನ್ನು 122 ಕೋಟಿ ರೂ. ಬಜೆಟ್ ನಲ್ಲಿ ನಿರ್ಮಿಸಲಾಗಿದ್ದು, ವಿಶ್ವದಾದ್ಯಂತ 769.89 ಕೋಟಿ ರೂ. ಆದಾಯವನ್ನು ಗಳಿಸಿದೆ.

Continue Reading

ಸ್ಯಾಂಡಲ್ ವುಡ್

Harshika Poonacha: ಮದುವೆಯಾಗಿ ವರ್ಷದೊಳಗೆ ಸಿಹಿ ಸುದ್ದಿ ಹಂಚಿಕೊಂಡ ಹರ್ಷಿಕಾ ಪೂಣಚ್ಚ–ಭುವನ್

Harshika Poonacha: ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ತಾಯಿಯಾಗುತ್ತಿದ್ದಾರೆ‌. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಹರ್ಷಿಕಾ ಈ ಸಂಭ್ರಮವನ್ನು ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ. 2023, ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜತೆ ಹರ್ಷಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

VISTARANEWS.COM


on

Harshika Poonacha
Koo


ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಹರ್ಷಿಕಾ ಪೂಣಚ್ಚ (Harshika Poonacha) ತಾಯಿಯಾಗುತ್ತಿದ್ದಾರೆ‌. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಹರ್ಷಿಕಾ ಈ ಸಂಭ್ರಮವನ್ನು ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ. 2023, ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ (Bhuvann Ponnannaa) ಜತೆ ಹರ್ಷಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಮದುವೆಯಾಗಿ ವರ್ಷದೊಳಗೆ ಗುಡ್‌ನ್ಯೂಸ್‌ ನೀಡಿದ್ದಾರೆ.

ಹರ್ಷಿಕಾ‌ ಮತ್ತು ಭುವನ್ ಪೊನ್ನಣ್ಣ ಅನೇಕ ವರ್ಷಗಳ ಸ್ನೇಹಿತರು. ಈ ಸ್ನೇಹ ಪ್ರೀತಿಗೆ ತಿರುಗಿ ಕಳೆದ ವರ್ಷ ಹಸೆಮಣೆ ಏರಿದ್ದರು. ವಿರಾಜಪೇಟೆಯ ಅಮ್ಮತ್ತಿಯಲ್ಲಿ ಹರ್ಷಿಕಾ ಮತ್ತು ಭುವನ್ ಕೊಡವ ಶೈಲಿಯಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇಬ್ಬರ ಮದುವೆಗೆ ಸ್ಯಾಂಡಲ್‌ವುಡ್‌, ವಿವಿಧ ಕ್ಷೇತ್ರಗಳ ಗಣ್ಯರು ಆಗಮಿಸಿ ಹಾರೈಸಿದ್ದರು.

ತಾವು ಪೋಷಕರಾಗುತ್ತಿರುವ ವಿಚಾರವನ್ನು ಭುವನ್ ಮತ್ತು ಹರ್ಷಿಕಾ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ಸದ್ಯ ಹರ್ಷಿಕಾ ಐದು ತಿಂಗಳ ಗರ್ಭಿಣಿ ಆಗಿದ್ದು, ಈ ಖುಷಿ ವಿಚಾರವನ್ನ ವಿಭಿನ್ನ ರೀತಿಯಲ್ಲಿ ಫೋಟೊ ಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ.

ಗಮನ ಸೆಳೆದ ಫೋಟೊ ಶೂಟ್

ಹರ್ಷಿಕಾ ಮತ್ತು ಭುವನ್ ತಮ್ಮ ಕೊಡವ ಶೈಲಿ ಹಾಗೂ ಸಂಪ್ರದಾಯದ ಕಾನ್ಸೆಪ್ಟ್‌ ಇಟ್ಟುಕೊಂಡು ಫೋಟೊ ಶೂಟ್‌ ಮಾಡಿಸುವ ಮೂಲಕ ಗಮನ ಸೆಳೆದಿದ್ದಾರೆ. ತಮ್ಮ ಚೊಚ್ಚಲ ಮಗುವಿನ ಆಗಮನದ ಸಿಹಿ ಸುದ್ದಿ ತಿಳಿಸಲು ಪುರಾತನ ಕೊಡವ ಸಾಂಪ್ರದಾಯ, ಉಡುಪು, ಕೊಡಗಿನ ‘ಐನ್ ಮನೆ’ (ದೊಡ್ಡಮನೆ), ಕೋವಿ, ಉಪಕರಣಗಳು, ಜೀವನಶೈಲಿ ಎಲ್ಲವನ್ನು ಬಳಸಿಕೊಂಡು, ಸಂಪ್ರದಾಯವನ್ನು ಬಿಂಬಿಸುವ ಶೈಲಿಯಲ್ಲಿ ಫೋಟೋ ಶೂಟ್ ಮಾಡಿಸಿದ್ದಾರೆ.

ಅದರ ಜತೆಗೆ, ʼʼಇಂದಿನವರೆಗೂ ನಮ್ಮಿಬ್ಬರಿಗೆ ಸದಾ ಆಶೀರ್ವಾದಿಸುತ್ತಾ ಬಂದಿದ್ದೀರಿ. ಇನ್ನು ಮುಂದೆ ನಿಮ್ಮ ಪ್ರೀತಿ, ಆಶೀರ್ವಾದ ನಮ್ಮ ಈ ಇನ್ನೊಂದು ಪುಟ್ಟ ಜೀವದ ಮೇಲೂ ಇರಲಿ. ಅಕ್ಟೋಬರ್‌ಗೆ ಕಾತುರದಿಂದ ಕಾಯುತ್ತಿದ್ದೇವೆ” ಎಂದು ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಹರ್ಷಿಕಾ ಮತ್ತು ಭುವನ್‌ ಬರೆದುಕೊಂಡಿದ್ದಾರೆ.

2008ರಲ್ಲಿ ʼಪಿಯುಸಿʼ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ಹರ್ಷಿಕಾ ಬಳಿಕ ಕೊಡವ, ಕೊಂಕಣಿ, ತೆಲುಗು, ಮಲಯಾಳಂ, ಬೋಜಪುರಿ, ತಮಿಳು ಮುಂತಾದ ಚಿತ್ರಗಳಲ್ಲಿ ನಟಿಸಿ ಬಹುಭಾಷಾ ತಾರೆ ಎನಿಸಿಕೊಂಡಿದ್ದಾರೆ. 2010ರಲ್ಲಿ ತೆರೆಕಂಡದ ಕನ್ನಡದ ʼತಮಸ್ಸುʼ ಚಿತ್ರಕ್ಕಾಗಿ ಕರ್ನಾಟಕ ರಾಜ್ಯ ಪ್ರಶಸ್ತಿ ಮುಡಿಗೇರಿಸಿಕೊಂಡ ಅವರು ಸದ್ಯ ತಮಿಳು ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ.

ಇನ್ನು ಸ್ಯಾಂಡಲ್‌ವುಡ್‌ ನಟ ಭುವನ್‌ ಪೊನ್ನಣ್ಣ 2010ರಲ್ಲಿ ತೆರೆಕಂಡ, ಸುದೀಪ್‌ ಅಭಿನಯದ ʼಜಸ್ಟ್‌ ಮಾತ್‌ ಮಾತಲ್ಲಿʼ ಚಿತ್ರದ ಮೂಲಕ ಬಣ್ಣ ಲೋಕ ಪ್ರವೇಶಿಸಿದ್ದರು. ಗಣೇಶ್‌ ಜತೆಗೆ ಕೂಲ್‌ ಚಿತ್ರದಲ್ಲಿಯೂ ನಟಿಸಿರುವ ಅವರು 2019ರಲ್ಲಿ ತೆರೆಕಂಡ ರಾಂಧವ ಸಿನಿಮಾದ ಮೂಲಕ ಜನಪ್ರಿಯರಾಗಿದ್ದಾರೆ. ಕೊಡಗು ಮೂಲದ ಭುವನ್‌ ಮತ್ತು ಹರ್ಷಿಕಾ ಈ ಹಿಂದೆ ನೆರೆ ಪೀಡಿತರಿಗೆ ನೆರವಾಗುವ ಮೂಲಕ ಅನೇಕ ಮಂದಿಯ ಕಷ್ಟಗಳಿಗೆ ಸಹಾಯ ಹಸ್ತ ಚಾಚಿದ್ದರು.

ಇದನ್ನೂ ಓದಿ: Harshika Poonacha: ಹಲ್ಲೆ ಪ್ರಕರಣ; ನ್ಯಾಯ ಕೋರಿ ಪ್ರಲ್ಹಾದ ಜೋಶಿ ಭೇಟಿಯಾದ ಹರ್ಷಿಕಾ ಪೂಣಚ್ಚ ದಂಪತಿ

Continue Reading

ಕರ್ನಾಟಕ

Kannada New Movie: ಮೊಬೈಲ್ ಮುಂಚಿನ ಪ್ರೇಮಕಥೆ ‘ಕಾಗದ’ ಜುಲೈ 5ರಂದು ಬಿಡುಗಡೆ

Kannada New Movie: ಮೊಬೈಲ್ ಬರುವ ಮುಂಚೆ ನಡೆದ ಪ್ರೇಮಕಥೆಯಾದ “ಕಾಗದ” ಚಿತ್ರ ಇದೇ ವಾರ ಜುಲೈ 5 ರಂದು ತೆರೆಗೆ ಬರುತ್ತಿದೆ. ಅರುಣ್ ಕುಮಾರ್ ಆಂಜನೇಯ ಅವರ ನಿರ್ಮಾಣದಲ್ಲಿ ರಂಜಿತ್ ನಿರ್ದೇಶಿಸಿದ್ದು, ಆದಿತ್ಯ ಎಂಬ ನೂತನ ಪ್ರತಿಭೆ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಬಾಲನಟಿಯಾಗಿ ಜನಪ್ರಿಯರಾಗಿರುವ ಅಂಕಿತ ಜಯರಾಂ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದು, ನೇಹಾ ಪಾಟೀಲ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Kannada New Movie kagada film released on 5th July
Koo

ಬೆಂಗಳೂರು: ಅರುಣ್ ಕುಮಾರ್ ಆಂಜನೇಯ ಅವರ ನಿರ್ಮಾಣದಲ್ಲಿ ರಂಜಿತ್ ನಿರ್ದೇಶಿಸಿರುವ ಮೊಬೈಲ್ ಬರುವ ಮುಂಚೆ ನಡೆದ ಪ್ರೇಮಕಥೆಯಾದ “ಕಾಗದ” ಚಿತ್ರ (Kannada New Movie) ಇದೇ ಜುಲೈ 5ರಂದು ತೆರೆಗೆ ಬರುತ್ತಿದೆ.

“ಕಾಗದ” ಮೊಬೈಲ್ ಬರುವ ಮುಂಚೆ ನಡೆದ ಪ್ರೇಮಕಥೆ. 2005 ರ ಕಾಲಘಟ್ಟದ ಕಥೆಯೂ ಕೂಡ. ಹಳ್ಳಿಹಳ್ಳಿಗಳ ನಡುವಿನ ವೈಷಮ್ಯದ ನಡುವೆ ಅರಳಿದ ಪ್ರೇಮಕಥೆಯೂ ಹೌದು.

ಆದಿತ್ಯ ಎಂಬ ನೂತನ ಪ್ರತಿಭೆ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಬಾಲನಟಿಯಾಗಿ ಜನಪ್ರಿಯರಾಗಿರುವ ಅಂಕಿತ ಜಯರಾಂ “ಕಾಗದ” ಚಿತ್ರದ ನಾಯಕಿ. ನೇಹಾ ಪಾಟೀಲ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಲ ರಾಜ್ವಾಡಿ, ನೀನಾಸಂ ಅಶ್ವಥ್, ಮಠ ಕೊಪ್ಪಳ, ಶಿವಮಂಜು ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: IND vs SA : ಭಾರತ ವಿರುದ್ಧ ಟಿ20 ಸರಣಿಗೆ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಪ್ರಕಟ

ನಾಲ್ಕು ಹಾಡುಗಳಿರುವ “ಕಾಗದ” ಚಿತ್ರಕ್ಕೆ ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಹಣ ಹಾಗೂ ಪವನ್ ಗೌಡ ಸಂಕಲನ ಈ ಚಿತ್ರಕ್ಕಿದೆ.

Continue Reading
Advertisement
Sudha Murty
ದೇಶ17 mins ago

Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

Physical Abuse
ಕರ್ನಾಟಕ49 mins ago

Physical Abuse : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Mahua Moitra
ಪ್ರಮುಖ ಸುದ್ದಿ2 hours ago

Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Viral Video
Latest2 hours ago

Viral Video: ಲೈವ್‌ ವರದಿ ಮಾಡುತ್ತಿದ್ದಾಗ ಪಾಕ್ ಟಿವಿ ವರದಿಗಾರ್ತಿ ಮೇಲೆ ಗೂಳಿ ದಾಳಿ!

Hemant Nimbalkar
ಪ್ರಮುಖ ಸುದ್ದಿ2 hours ago

Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮರು ನೇಮಕ

Kolar News
ಕರ್ನಾಟಕ2 hours ago

Kolar News: ಕಾಲೇಜಿನ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಯುವಕನ ಬಂಧನ

Tamanna Bhatia
Latest2 hours ago

Tamanna Bhatia: ‘ಜೀ ಕರ್ದಾ’ದಲ್ಲಿ ತಮನ್ನಾ ಭಾಟಿಯಾ ಪೂರ್ತಿ ಟಾಪ್‌ಲೆಸ್‌! ವಿಡಿಯೊ ಇದೆ

bengaluru student Vaishnavi M who won the prestigious award from IIT Bombay
ಬೆಂಗಳೂರು2 hours ago

Bengaluru News: ಬೆಂಗಳೂರಿನ ವಿದ್ಯಾರ್ಥಿನಿಗೆ ಐಐಟಿ ಬಾಂಬೆಯ ಪ್ರತಿಷ್ಠಿತ ಪ್ರಶಸ್ತಿ

IPL 2025
ಪ್ರಮುಖ ಸುದ್ದಿ2 hours ago

IPL 2025 : ಐಪಿಎಲ್​ ತಂಡಗಳಲ್ಲಿ ಉಳಿಸಿಕೊಳ್ಳುವ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ

Dharma Keerthiraj starrer production No 1 movie Muhurta
ಕರ್ನಾಟಕ2 hours ago

Kannada New Movie: ಗೋಪಿನಾಥ ಬೆಟ್ಟದಲ್ಲಿ ನಡೆದ ಧರ್ಮ ಕೀರ್ತಿರಾಜ್ ಅಭಿನಯದ ʼಪ್ರೊಡಕ್ಷನ್ ನಂ 1ʼ ಚಿತ್ರದ ಮುಹೂರ್ತ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ4 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌