Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ! - Vistara News

ಸ್ಯಾಂಡಲ್ ವುಡ್

Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Actor Darshan: , ನಟಿ ಸಂಜನಾ ಗಲ್ರಾನಿ ಅವರು ಸ್ಪಷ್ಟ ಅಭಿಪ್ರಾಯ ನೀಡಿದ್ದು ದರ್ಶನ್ ತೂಗುದೀಪ ಬೆಂಬಲಕ್ಕೆ ನಿಂತಿದ್ದಾರೆ. ನಟಿ ಸಂಜನಾ ಗಲ್ರಾನಿ ಮಾತನಾಡಿ ʻʻದರ್ಶನ್‌ ಅವರು ಕೆಟ್ಟವರಲ್ಲ . ತುಂಬ ಜಂಟಲ್‌ಮೆನ್‌. ಹಾಗೇ ನಾನು ಅವರ ಜತೆ ಕೆಲಸ ಮಾಡಿದ್ದೇನೆ. ಅವರನ್ನು ಎಲ್ಲೇ ಭೇಟಿ ಆದರೂ ಚೆನ್ನಾಗಿ ಮಾತಾಡುತ್ತಾರೆ. ನನಗೆ ಅವರ ಮೇಲೆ ಗೌರವ ಇದೆ. ʻಅರ್ಜುನ್‌ʼ ಸಿನಿಮಾ ಮಾಡುವಾಗ, ನರ್ವಸ್‌ ಆದಾಗ ಸಹಾಯ ಮಾಡಿದ್ದರು. ಆದರೆ ಈಗ ದರ್ಶನ್‌ ಅವರ ಈ ನ್ಯೂಸ್‌ ತುಂಬ ಕಾಡುತ್ತಿದೆʼʼ ಎಂದರು.

VISTARANEWS.COM


on

Actor Darshan case sanjana galrani Reaction about ramya statement
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ (Actor Darshan) ಹತ್ಯೆಯಲ್ಲಿ ಪವಿತ್ರಾ ಗೌಡ ಎ1, ದರ್ಶನ್​ ಎ2 ಆಗಿದ್ದಾರೆ.  ಈ ಕೊಲೆ ಕೇಸ್‌ನಲ್ಲಿ ದರ್ಶನ್‌ ಅವರು ಕೇಸ್‌ನಿಂದ ತಪ್ಪಿಸಿಕೊಳ್ಳಲು ಪ್ರತಿ ಹಂತದಲ್ಲೂ ಎಚ್ಚರವಹಿಸಿದ್ದರು. ಇದೀಗ ಪೊಲೀಸ್‌ ಕಸ್ಟಡಿಯಲ್ಲಿ ಇದ್ದಾರೆ ದರ್ಶನ್‌. ಈ ನಡುವೆ, ನಟಿ ಸಂಜನಾ ಗಲ್ರಾನಿ ಅವರು ಸ್ಪಷ್ಟ ಅಭಿಪ್ರಾಯ ನೀಡಿದ್ದು ದರ್ಶನ್ ತೂಗುದೀಪ ಬೆಂಬಲಕ್ಕೆ ನಿಂತಿದ್ದಾರೆ. ನಟ ದರ್ಶನ್ ತೂಗುದೀಪ ಆರೋಪಿಯೇ ಹೊರತು ಅಪರಾಧಿ ಅಲ್ಲ ಎಂದಿದ್ದಾರೆ. ಜತೆಗೆ ರಮ್ಯಾ ಅವರ ಟ್ವಿಟರ ಬಗ್ಗೆ ಪ್ರತಿಕ್ರಿಯೆ ನೀಡಿ ಮಾತಿನ ನಡುವೆ ತಾವು ಮೂರು ತಿಂಗಳು ಜೈಲಿನಲ್ಲಿದ್ದ ಅವಧಿಯನ್ನು ನೆನಪಿಸಿಕೊಂಡಿದ್ದಾರೆ.

ನಟಿ ಸಂಜನಾ ಗಲ್ರಾನಿ ಮಾತನಾಡಿ ʻʻದರ್ಶನ್‌ ಅವರು ಕೆಟ್ಟವರಲ್ಲ . ತುಂಬ ಜಂಟಲ್‌ಮೆನ್‌. ಹಾಗೇ ನಾನು ಅವರ ಜತೆ ಕೆಲಸ ಮಾಡಿದ್ದೇನೆ. ಅವರನ್ನು ಎಲ್ಲೇ ಭೇಟಿ ಆದರೂ ಚೆನ್ನಾಗಿ ಮಾತಾಡುತ್ತಾರೆ. ನನಗೆ ಅವರ ಮೇಲೆ ಗೌರವ ಇದೆ. ʻಅರ್ಜುನ್‌ʼ ಸಿನಿಮಾ ಮಾಡುವಾಗ, ನರ್ವಸ್‌ ಆದಾಗ ಸಹಾಯ ಮಾಡಿದ್ದರು. ಆದರೆ ಈಗ ದರ್ಶನ್‌ ಅವರ ಈ ನ್ಯೂಸ್‌ ತುಂಬ ಕಾಡುತ್ತಿದೆʼʼ ಎಂದರು.

ಇನ್ನು ರಮ್ಯಾ ಅವರು ಗಲ್ಲು ಶಿಕ್ಷೆ ದರ್ಶನ್‌ ಅವರಿಗೆ ಆಗಬೇಕು ಎಂದು ಟ್ವೀಟ್‌ ಮಾಡಿದ್ದರು. ಈ ಬಗ್ಗೆ ಸಂಜನಾ ಅವರು ಪ್ರತಿಕ್ರಿಯೆ ನೀಡಿದ್ದು ಹೀಗೆ. ʻʻನೋಡಿ ಗಲ್ಲು ಶಿಕ್ಷೆ ಆಗಬೇಕು ಎಂದು ಹೇಳುವ ಅಧಿಕಾರ ಕೋರ್ಟ್‌ಗೆ ಇದೆ. ನನ್ನ ಉದಾಹರಣೆ ಕೊಡುತ್ತೇನೆ. ನಾನು ಡ್ರಗ್ಸ್‌ ಕೇಸ್‌ ವಿಚಾರವಾಗಿ ನನ್ನ ಕರೆದಾಗ ಏಕಾ ಏಕಿ ಅರೆಸ್ಟ್‌ ಮಾಡಿದ್ದರು. ಆಮೇಲೆ ಮೊಬೈಲ್‌ ತೆಗೆದುಕೊಂಡರು. ಆಮೇಲೆ ತುಂಬ ಕಷ್ಟ ಪಟ್ಟೆ. ಇನ್ನು ನ್ಯೂಸ್‌ನಲ್ಲಿ ನೋಡಿದಾಗ ಸಂಜನಾ ತಪ್ಪು ಒಪ್ಪಿಕೊಂಡಿದ್ದಾರೆ ಎಂದು ಬಂತು. ಇನ್ನು ಇಲ್ಲಿ ವಿಚಾರಣೆನೇ ಆಗಿಲ್ಲ. ಯಾವುದೇ ಹೇಳಿಕೆಯೇ ನೀಡಿಲ್ಲ. ಆಗಲೇ ತಪ್ಪು ಒಪ್ಪಿಕೊಂಡರು ಎಂದು ಮಾಧ್ಯಗಳಲ್ಲಿ ಬಂತು. ಡ್ರಗ್ಸ್‌ ದಂಧೆ ನಡೆಸುತ್ತಾರೆ ಎಂದೆಲ್ಲ ಹಬ್ಬಿತ್ತು. ಈ ತರ ರೂಮರ್ಸ್‌ವನ್ನು ಯಾರು ತಡಿಲಿಕ್ಕೆ ಆಗುತ್ತೆ. ನಮ್ಮ ವಕೀಲರು ಇನೋಸೆಂಟ್‌ ಅಂದರು ಯಾರು ಕ್ಯಾರ್‌ ಮಾಡಿಲ್ಲʼʼಎಂದಿದ್ದಾರೆ.

ಇದನ್ನೂ ಓದಿ: Actor Darshan: ಕೇಸ್‌ನಿಂದ ತಪ್ಪಿಸಿಕೊಳ್ಳೋಕೆ ಪ್ರತಿ ಹಂತದಲ್ಲೂ ಎಚ್ಚರವಹಿಸಿದ್ದ ದರ್ಶನ್; ಬೇಟೆಯ ಹಿಂದೆ ಭರ್ಜರಿ ಮಾಸ್ಟರ್‌ ಪ್ಲ್ಯಾನ್‌!

ʻʻಚಾರ್ಜ್‌ಶೀಟ್‌ವನ್ನು ಮೊದಲು ಗೌರವಿಸಬೇಕು. ಊಹಾಪೋಹಗಳು ನಿಜ ಅಲ್ಲ. ಇನ್ನು ದರ್ಶನ್‌ ಕೇಸ್‌ಗೆ ಸಂಬಂಧಪಟ್ಟಂತೆ ವಿಚಾರಣೆ ಇನ್ನೂ ನಡಯುತ್ತಿದೆ ಅಂದಿದ್ದಾರೆ. ಆದರೂ ಈ ಗಾಸಿಪ್‌ಗಳು ಯಾಕೆ ಅನ್ನೋದು ಗೊತ್ತಿಲ್ಲ. ಕೆಲವೊಂದು ಮಾಧ್ಯಮಗಳು ಟಿಆರ್‌ಪಿಗೋಸ್ಕರ ಏನೂ ಬೇಕಾದರು ಹಾಕುತ್ತಾರೆ. ದರ್ಶನ್‌ ಅವರು ಕೆಟ್ಟವರಲ್ಲʼʼಎಂದಿದ್ದಾರೆ.

ನಟಿ ಪವಿತ್ರಾ ಗೌಡ (Pavithra Gowda) ಜೈಲು ಪಾಲಾಗಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್​ ಮಾಡಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ ಹತ್ಯೆಯಲ್ಲಿ ಪವಿತ್ರಾ ಗೌಡ ಎ1, ದರ್ಶನ್​ ಎ2 ಆಗಿದ್ದಾರೆ. ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಪ್ರಮುಖ ಆರೋಪಿ ಆಗಿದ್ದು, ಜೂನ್​ 20 ಅವರ ಪೊಲೀಸ್​​ ಕಸ್ಟಡಿ ಅಂತ್ಯವಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡ ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸಿದ್ದರು ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Kannada New Movie: ಸೆನ್ಸಾರ್ ಅಂಗಳದಲ್ಲಿ ‘ಬ್ಯಾಕ್ ಬೆಂಚರ್ಸ್’ ಸಿನಿಮಾ!

Kannada New Movie: ಕಾಲೇಜು ಕೇಂದ್ರಿತ ಕಥೆ ಮತ್ತು ಬೇರೆ ಹೊಸತನದ ನಿರೂಪಣೆಯ ಸುಳಿವಿನೊಂದಿಗೆ ಎಲ್ಲಾ ವರ್ಗದ ಪ್ರೇಕ್ಷಕರನ್ನೂ “ಬ್ಯಾಕ್ ಬೆಂಚರ್ಸ್” ಆಕರ್ಷಿಸಿದ್ದಾರೆ. ಹೀಗೆ ತಾನೇತಾನಾಗಿ ಎಲ್ಲರನ್ನು ಆವರಿಸಿಕೊಂಡಿರುವ ಈ ಚಿತ್ರ ಇದೇ ಜುಲೈ 19ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಆರಂಭಿಕ ಹೆಜ್ಜೆಯಲ್ಲಿಯೇ ಸಕಾರಾತ್ಮಕ ವಾತಾವರಣ ಸೃಷ್ಟಿಸಿಕೊಂಡಿರುವ ಈ ಸಿನಿಮಾ ಈಗ ಸೆನ್ಸಾರ್ ಅಂಗಳ ತಲುಪಿಕೊಂಡಿದೆ.

VISTARANEWS.COM


on

Back Benchers film in the Censor
Koo

ಬೆಂಗಳೂರು: ಭಿನ್ನ ಕಂಟೆಂಟಿನ ಮುನ್ಸೂಚನೆಯೊಂದಿಗೆ ಕ್ರೇಜ್ ಹುಟ್ಟುಹಾಕಿರುವ ಚಿತ್ರ `ಬ್ಯಾಕ್ ಬೆಂಚರ್ಸ್’ ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಕಾಲೇಜು ಕೇಂದ್ರಿತ ಕಥೆ ಮತ್ತು ಬೇರೆ ಹೊಸತನದ ನಿರೂಪಣೆಯ ಸುಳಿವಿನೊಂದಿಗೆ ಎಲ್ಲಾ ವರ್ಗದ ಪ್ರೇಕ್ಷಕರನ್ನೂ “ಬ್ಯಾಕ್ ಬೆಂಚರ್ಸ್” ಆಕರ್ಷಿಸಿದ್ದಾರೆ. ಹೀಗೆ ತಾನೇತಾನಾಗಿ ಎಲ್ಲರನ್ನು ಆವರಿಸಿಕೊಂಡಿರುವ ಈ ಚಿತ್ರ ಇದೇ ಜುಲೈ 19ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಆರಂಭಿಕ ಹೆಜ್ಜೆಯಲ್ಲಿಯೇ ಸಕಾರಾತ್ಮಕ ವಾತಾವರಣ ಸೃಷ್ಟಿಸಿಕೊಂಡಿರುವ ಈ ಸಿನಿಮಾ (Kannada New Movie) ಈಗ ಸೆನ್ಸಾರ್ ಅಂಗಳ ತಲುಪಿಕೊಂಡಿದೆ.

ಇದು ರಾಜಶೇಖರ್ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ. ನಿರ್ಮಾಪಕರಾಗಿ, ನಿರ್ದೇಶಕರಾಗಿ ಪ್ರೇಕ್ಷಕರ ನಾಡಿಮಿಡಿತವನ್ನು ಅರಿತಿರುವವರು ರಾಜಶೇಖರ್. ಅನುಭವವನ್ನೆಲ್ಲ ಒಟ್ಟುಗೂಡಿಸಿಕೊಂಡು, ಹೊಸಬರ ತಂಡವನ್ನಿಟ್ಟುಕೊಂಡು ರಾಜಶೇಖರ್ ಈ ಚಿತ್ರವನ್ನು ರೂಪಿಸಿದ್ದಾರೆ.

ಸಾಮಾನ್ಯವಾಗಿ ಹೊಸಬರನ್ನು ಹಾಕಿಕೊಂಡು ಸಿನಿಮಾ ಮಾಡಲು ಬಹುತೇಕರು ಹಿಂದೇಟು ಹಾಕುತ್ತಾರೆ. ರಾಜಶೇಖರ್ ಅವರು ಸಂಪೂರ್ಣವಾಗಿ ಹೊಸಬರ ತಂಡದೊಂದಿಗೆ ಈ ಚಿತ್ರವನ್ನು ತಯಾರಿಸಿದ್ದಾರೆಂದರೆ ಅಚ್ಚರಿ ಮೂಡದಿರುವುದಿಲ್ಲ. ಹೊಸಬರೇ ಸೇರಿರುವುದರಿಂದ ಇಲ್ಲಿ ಹೊಸತನದ ಛಾಯೆಯಿದೆ. ಅದರ ಘಮವೀಗ ಟೀಸರ್ ಮೂಲಕ ಪ್ರೇಕ್ಷಕರನ್ನು ತಲುಪಿಕೊಂಡಿದೆ.

ಇದನ್ನೂ ಓದಿ: VSK Media Awards 2024: ಬೆಂಗಳೂರಿನಲ್ಲಿ ಜೂ.30 ರಂದು “ವಿಎಸ್‌ಕೆ ಮಾಧ್ಯಮ ಪ್ರಶಸ್ತಿ” ಪ್ರದಾನ

ಇದರ ಭಾಗವಾಗಿರುವ ಯುವ ಪಡೆ ಭಿನ್ನ ಶೈಲಿಯಲ್ಲಿಯೇ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಸೋಶಿಯಲ್ ಮೀಡಿಯಾದಲ್ಲಂತೂ ಈಗ “ಬ್ಯಾಕ್ ಬೆಂಚರ್ಸ್” ಹವಾ ವ್ಯಾಪಿಸಿಕೊಂಡಿದೆ. ಇದು ನಾಯಕ ನಾಯಕಿಯರಾಗಿರುವವರು, ಇತರೇ ಪಾತ್ರಗಳನ್ನು ನಿರ್ವಹಿಸಿದವರು ಸೇರಿದಂತೆ ಒಂದಿಡೀ ತಂಡ ಹೊಸ ಶೈಲಿಯಲ್ಲಿ ಪ್ರೇಕ್ಷಕರನ್ನು ತಲುಪಿಕೊಳ್ಳುತ್ತಿದೆ.

ನಿರ್ದೇಶಕ ರಾಜಶೇಖರ್ ಸ್ಕ್ರಿಫ್ಟ್ ವರ್ಕ್ ಸೇರಿದಂತೆ ಎಲ್ಲದರಲ್ಲಿಯೂ ಈ ಹುಡುಗ-ಹುಡುಗಿಯರನ್ನು ಸೇರಿಸಿಕೊಂಡಿದ್ದಾರೆ. ಅದರ ಫಲವಾಗಿಯೇ ಈ ಕಾಲೇಜು ಸ್ಟೋರಿ ತಾಜಾ ಅನುಭೂತಿಯೊಂದಿಗೆ ಸೆಳೆದುಕೊಂಡಿದೆ.

ಪಿಪಿ ಪ್ರೊಡಕ್ಷನ್ಸ್ ಅಡಿಯಲ್ಲಿ ಖುದ್ದು ರಾಜಶೇಖರ್ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳೀಕರ್, ಮಾನ್ಯ ಗೌಡ, ಕುಂಕುಮ್ ಎಚ್, ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತಾ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್, ಗೌರವ್ ಮುಂತಾದವರ ತಾರಾಗಣವಿದೆ.

ಇದನ್ನೂ ಓದಿ: Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಮನೋಹರ್ ಜೋಶಿ ಛಾಯಾಗ್ರಹಣ, ರಂಜನ್ ಮತ್ತು ಅಮರ್ ಗೌಡ ಸಂಕಲನ ಈ ಚಿತ್ರಕ್ಕಿದೆ. ಇದೀಗ ಸೆನ್ಸಾರ್ ಅಂಗಳ ತಲುಪಿರುವ “ಬ್ಯಾಕ್ ಬೆಂಚರ್ಸ್” ಮತ್ತಷ್ಟು ವೇಗದಿಂದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

Continue Reading

ಕರ್ನಾಟಕ

Kannada New Movie: ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಅಜಾಗ್ರತ’ ಸಿನಿಮಾ ಡೈರೆಕ್ಟರ್‌ಗೆ ನಿರ್ಮಾಪಕರಿಂದ ದುಬಾರಿ ಕಾರ್‌ ಗಿಫ್ಟ್‌!

Kannada New Movie: ಯಾವುದೇ ಚಿತ್ರವಾದರೂ ಸರಿ. ಮೊದಲು ಬಂಡವಾಳ ಹಾಕಿದ ನಿರ್ಮಾಪಕರಿಗೆ ಆ ಸಿನಿಮಾ ಮೆಚ್ಚುಗೆಯಾಗಬೇಕು. ನಿರ್ಮಾಪಕರಿಗೆ ಸಿನಿಮಾ ಇಷ್ಟವಾದಾರೆ ನಿರ್ದೇಶಕ ಅರ್ಧ ಗೆದ್ದ ಹಾಗೆ. ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ.ಶಶಿಧರ್ ನಿರ್ದೇಶನದ “ಅಜಾಗ್ರತ” ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಗಿದು ಚಿತ್ರದ ರಫ್ ಕಾಪಿ ಬಂದಿದೆ. ‘ಅಜಾಗ್ರತ” ಚಿತ್ರದ ರಫ್ ಕಾಪಿ ನೋಡಿದ ನಿರ್ಮಾಪಕರಿಗೆ ಚಿತ್ರ ತುಂಬಾ ಇಷ್ಟವಾಗಿದೆಯಂತೆ. ಈ ಸಂದರ್ಭದಲ್ಲಿ ನಿರ್ಮಾಪಕ ರವಿರಾಜ್, ನಿರ್ದೇಶಕ ಶಶಿಧರ್ ಅವರಿಗೆ ದುಬಾರಿ ಕಾರ್‌ ಉಡುಗೊರೆಯಾಗಿ ನೀಡುವ ಮೂಲಕ ಚಿತ್ರ ಉತ್ತಮವಾಗಿ ಮೂಡಿಬಂದಿರುವ ಖುಷಿಯನ್ನು ವ್ಯಕ್ತಪಡಿಸಿದ್ದಾರೆ‌.

VISTARANEWS.COM


on

Producer who gifted an expensive car to the director of Radhika Kumaraswamy starrer Ajagrata
Koo

ಬೆಂಗಳೂರು: ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ. ಶಶಿಧರ್ ನಿರ್ದೇಶನದ “ಅಜಾಗ್ರತ” ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಗಿದು ಚಿತ್ರದ ರಫ್ ಕಾಪಿ ಬಂದಿದೆ. ‘ಅಜಾಗ್ರತ” ಚಿತ್ರದ ರಫ್ ಕಾಪಿ ನೋಡಿದ ನಿರ್ಮಾಪಕರಿಗೆ ಚಿತ್ರ ತುಂಬಾ ಇಷ್ಟವಾಗಿದೆಯಂತೆ. ಈ ಸಂದರ್ಭದಲ್ಲಿ ನಿರ್ಮಾಪಕ ರವಿರಾಜ್, ನಿರ್ದೇಶಕ ಶಶಿಧರ್ ಅವರಿಗೆ ದುಬಾರಿ ಕಾರು ನೀಡುವ ಮೂಲಕ ಚಿತ್ರ (Kannada New Movie) ಉತ್ತಮವಾಗಿ ಮೂಡಿಬಂದಿರುವ ಖುಷಿಯನ್ನು ವ್ಯಕ್ತಪಡಿಸಿದ್ದಾರೆ‌.

“ನಿರ್ದೇಶಕರು ಕಥೆ ಹೇಳಿದ ರೀತಿಯಲ್ಲೇ, ಅದಕ್ಕೂ ಹೆಚ್ಚಾಗಿಯೇ ಚಿತ್ರವನ್ನು ಬಹಳ ಚೆನ್ನಾಗಿ ಮಾಡಿ ಮುಗಿಸಿದ್ದಾರೆ. ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರ ನೋಡಿ ನನಗೆ ತುಂಬಾ ಖುಷಿಯಾಗಿದೆ. ಚಿತ್ರವನ್ನು ಉತ್ತಮವಾಗಿ ನಿರ್ದೇಶಿಸಿರುವ ನಿರ್ದೇಶಕರಿಗೆ ಉಡುಗೊರೆ ನೀಡುವ ಮನಸ್ಸಾಯಿತು. ಹಾಗಾಗಿ ಫಾರ್ಚ್ಯೂನರ್ ಕಾರನ್ನು ಉಡುಗೊರೆಯಾಗಿ ನೀಡುತ್ತಿದ್ದೇನೆ” ಎಂದು ನಿರ್ಮಾಪಕ ರವಿರಾಜ್ ತಿಳಿಸಿದ್ದಾರೆ.

ಇದನ್ನೂ ಓದಿ: VSK Media Awards 2024: ಬೆಂಗಳೂರಿನಲ್ಲಿ ಜೂ.30 ರಂದು “ವಿಎಸ್‌ಕೆ ಮಾಧ್ಯಮ ಪ್ರಶಸ್ತಿ” ಪ್ರದಾನ

ಚಿತ್ರ ಬಿಡುಗಡೆಯಾಗಿ ಯಶಸ್ವಿಯಾದ ನಂತರ ನಿರ್ದೇಶಕರಿಗೆ ಉಡುಗೊರೆ ನೀಡುವ ನಿರ್ಮಾಪಕರಿದ್ದಾರೆ. ಆದರೆ ಚಿತ್ರ ಬಿಡುಗಡೆಗೂ ಮುನ್ನ ನಿರ್ದೇಶಕರ ಕಾರ್ಯವನ್ನು ಮೆಚ್ಚಿ, ಕಾರನ್ನು ಉಡುಗೊರೆ ನೀಡಿರುವ ನಿರ್ಮಾಪಕ ರವಿರಾಜ್ ಅವರ ಗುಣ ನಿಜಕ್ಕೂ ಶ್ಲಾಘನೀಯ.

ಬಾಲಿವುಡ್‌ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ ಅಭಿನಯಿಸಿದ್ದಾರೆ. ಹೆಸರಾಂತ ನಟ ಬಾಬಿ ಸಿಂಹ ಸಹ ಈಗ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾ ಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: International Mud Day: ಆರೋಗ್ಯ, ಸೌಂದರ್ಯದ ಪಾಲಿಗೆ ಹೊನ್ನು ಈ ಮಣ್ಣು!

ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Continue Reading

ಸ್ಯಾಂಡಲ್ ವುಡ್

Actor Darshan: ದಚ್ಚು ಪರಿಸ್ಥಿತಿಗೆ ಪವಿತ್ರಾ ಕಾರಣ ಅನ್ನೋಕಾಗಲ್ಲ; ದರ್ಶನ್‌ಗೆ ಕೌನ್ಸೆಲಿಂಗ್‌ ಅಗತ್ಯ ಇಲ್ಲ ಎಂದ ಖ್ಯಾತ ಗಾಯಕಿ!

Actor Darshan: ಹಲವು ನಟ ನಟಿಯರು ದರ್ಶನ್‌ ಪರ ಧ್ವನಿ ಎತ್ತುತ್ತಿದ್ದಾರೆ. ಈ ಸಾಲಿಗೆ ಗಾಯಕಿ ಡಾ.ಶಮಿತಾ ಮಲ್ನಾಡ್ (dr shamitha malnad) ಸೇರ್ಪಡೆಯಾಗಿದ್ದರು. ಇದೀಗ ವಿಸ್ತಾರ ಜತೆ ಶಮಿತಾ ಮಾತನಾಡಿ ʻʻವಿಜಯಲಕ್ಷ್ಮಿ ಹಾಗೂ ದರ್ಶನ್‌ ನಡುವೆ ಬೆಟ್ಟದಷ್ಟು ಪ್ರೀತಿ ಇದೆ. ಪ್ರೀತಿಸಿ ಮದುವೆ ಆದ ನಂತರ ವಿಜಯಲಕ್ಷ್ಮಿ ಅವರು ದರ್ಶನ್‌ಗಾಗಿ ತಮ್ಮ ಕರಿಯರ್‌ನೇ ತ್ಯಾಗ ಮಾಡಿದ್ದಾರೆʼʼಎಂದು ಹೇಳಿದ್ದಾರೆ.

VISTARANEWS.COM


on

Actor Darshan does not need counseling says by shamitha malnad
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ ದರ್ಶನ್‌. ದರ್ಶನ್ ಪರ ಒಲವು ತೋರಿದವರ (Actor Darshan) ಸಂಖ್ಯೆ ತೀರಾ ಕಡಿಮೆ. ಹಲವು ನಟ ನಟಿಯರು ದರ್ಶನ್‌ ಪರ ಧ್ವನಿ ಎತ್ತುತ್ತಿದ್ದಾರೆ. ಈ ಸಾಲಿಗೆ ಗಾಯಕಿ ಡಾ.ಶಮಿತಾ ಮಲ್ನಾಡ್ (dr shamitha malnad) ಸೇರ್ಪಡೆಯಾಗಿದ್ದರು. ಇದೀಗ ವಿಸ್ತಾರ ಜತೆ ಶಮಿತಾ ಮಾತನಾಡಿ ʻʻವಿಜಯಲಕ್ಷ್ಮಿ ಹಾಗೂ ದರ್ಶನ್‌ ನಡುವೆ ಬೆಟ್ಟದಷ್ಟು ಪ್ರೀತಿ ಇದೆ. ಪ್ರೀತಿಸಿ ಮದುವೆ ಆದ ನಂತರ ವಿಜಯಲಕ್ಷ್ಮಿ ಅವರು ದರ್ಶನ್‌ಗಾಗಿ ತಮ್ಮ ಕರಿಯರ್‌ನೇ ತ್ಯಾಗ ಮಾಡಿದ್ದಾರೆʼʼಎಂದು ಹೇಳಿದ್ದಾರೆ.

ಗಾಯಕಿ ಶಮಿತಾ ಮಲ್ನಾಡ್ ಮಾತನಾಡಿ ʻʻದರ್ಶನ್ ಅರೆಸ್ಟ್ ಆದ ನಂತರ ವಿಜಯಲಕ್ಷ್ಮಿ ಅವರನ್ನು ನಾನು ಭೇಟಿ ಮಾಡಿದ್ದೆ. ವಿಜಯಲಕ್ಷ್ಮಿ ಅವರು ಗಟ್ಟಿಗಿತ್ತಿ, ಇಂತ ಸಂದರ್ಭದಲ್ಲೂ ಮೆಂಟಲಿ ತುಂಬಾ ಸ್ಟ್ರಾಂಗ್ ಆಗಿದ್ದಾರೆ. ಪಕ್ಕಾ ಫ್ಯಾಮಿಲಿ ವಿಮೆನ್ ಅವರು. ವಿಜಯಲಕ್ಷ್ಮಿ ಹಾಗೂ ದರ್ಶನ್‌ ನಡುವೆ ಬೆಟ್ಟದಷ್ಟು ಪ್ರೀತಿ ಇದೆ. ಪ್ರೀತಿಸಿ ಮದುವೆ ಆದ ನಂತರ ವಿಜಯಲಕ್ಷ್ಮಿ ಅವರು ದರ್ಶನ್‌ಗಾಗಿ ತಮ್ಮ ಕರಿಯರ್‌ನೇ ತ್ಯಾಗ ಮಾಡಿದ್ದಾರೆ. ವಿಜಯಲಕ್ಷ್ಮಿ ಸಾಮಾನ್ಯ ಹೆಣ್ಣಲ್ಲ, ಆಕೆಯ ಸ್ಟ್ಯಾಂಡರರ್ಡ್‌ಗೆ ಜಾಬ್ ಆಫರ್ ಬಂದಿದ್ದು ರಿಜೆಕ್ಟ್ ಮಾಡಿದ್ಲು. ಗಂಡ, ಮಗ ಇದೇ ಆಕೆಯ ಪ್ರಪಂಚʼʼಎಂದರು.

ದರ್ಶನ್ ಕುರಿತು ಶಮಿತಾ ಮಾತನಾಡಿ ʻʻದರ್ಶನ್ ಅವರನ್ನು ಮೊದಲು ನೋಡಿದ್ದು ಮೆಜೆಸ್ಟಿಕ್ ಸಿನಿಮಾದ ಚಿತ್ರದ ಸೆಟ್‌ನಲ್ಲಿ. ಈ ಹುಡುಗ ಯಾರು, ಇಷ್ಟೊಂದ್ ಹೈಟ್ ಇದಾರೆ ಅನ್ಕೊಂಡಿದೆ. ತುಂಬಾ ಕಷ್ಟ ಪಟ್ಟು ಕಣ್ಣೀರು ಹಾಕಿ ಮೇಲೆ ಬಂದ ವ್ಯಕ್ತಿ. ಸಾರಥಿ ಸಿನಿಮಾದಲ್ಲಿ ನನ್ನ ಕಂಠದ ಎರಡೂ ಟೈಟಲ್ ಟ್ರ್ಯಾಕ್ ಸೆಲೆಕ್ಟ್ ಮಾಡಿದ್ದೆ ದರ್ಶನ್.ಅಂದಿನಿಂದಲೂ ದರ್ಶನ್ ಹಾಗು ನನ್ನ ನಡುವೆ ಅಣ್ಣ ತಂಗಿ ಸಂಬಂಧ ಬೆಳೆದಿದೆ. ವಿಜಯಲಕ್ಷ್ಮಿ ನನ್ನ ಆಪ್ತ ಸ್ನೇಹಿತೆ. ದರ್ಶನ್ ಈ ಪರಿಸ್ಥಿತಿಗೆ ಪವಿತ್ರಾ ಗೌಡ ಕಾರಣ ಅಂತ ದೂಷಿಸೋಕೆ ಆಗಲ್ಲ. ನಾನು ಡಾಕ್ಟರ್ ಆಗಿ ಹೇಳ್ತಿದೀನಿ ದರ್ಶನ್‌ಗೆ ಕೌನ್ಸೆಲಿಂಗ್‌ ಅಗತ್ಯ ಇಲ್ಲ. ಹಾಗೆ ನೋಡುದ್ರೆ ಪ್ರತಿ ವ್ಯಕ್ತಿಗೂ ಕೌನ್ಸೆಲಿಂಗ್‌ ಅಗತ್ಯವಿದೆ. ಕಷ್ಟ ಬಂದಾಗ ರಕ್ತಸಂಬಂಧಿಗಳು ದೂರ ಆಗ್ತಾರೆʼʼಎಂದರು.

ಇದನ್ನೂ ಓದಿ: Actor Darshan: ʻಚಿತ್ರಾಲ್ʼ ಬಿಕಿನಿ ಮಾಡೆಲ್‌, ಕೆಟ್ಟ ಕಮೆಂಟ್‌ ಮಾಡಬೇಡಿ ಎಂದ ವಿನಯ್ ಗೌಡ !

ಇದಕ್ಕೂ ಮುಂಚೆ ಶಮಿತಾ ಅವರು ಪೋಸ್ಟ್‌ನನಲ್ಲಿ ʻʻʻʻಮನಸೇ ಮನಸೇ,,, ಸೋಲೋ ಗೆಲುವೋ, ನೋವೋ ನಲಿವೋ, ಏಳೋ ಬೀಳೋ,,ಕಲ್ಲೋ ಮುಳ್ಳೋ ಜೀವನದ ಹಾದಿ ಸುಲಭವಲ್ಲ.. ಯಶಸ್ಸಿನ ಹಾದಿ ಸುಗಮವಲ್ಲ… ಹಸಿವು, ಅವಮಾನ, ನೋವುಂಡು ಯಶಸ್ಸು ಗಳಿಸಿದ ಹೆಸರು
ದರ್ಶನ್ ತೂಗುದೀಪ.. ಸಹಚರ, ಗೆಳೆಯ, ಸೋದರ, ಎಷ್ಟೋ ಜನರಿಗೆ ಸಹಾಯ ಹಸ್ತ ನೀಡಿ ಜೀವನವಾಗಿದ್ದವರು, ಒಳ್ಳೆ ಕೆಲಸಗಳಿಗೆ ಕೈ ಚಾಚಿದ್ದವರು,, ಜಾರಿ ಬಿದ್ದಾಗ ಆಳಿಗೊಂದು ಕಲ್ಲಾಗೋದು ಬೇಡಾ…. ಅವರ ಅಭಿನಯ, ಭೇದವಿಲ್ಲದ ಪ್ರೀತಿ, ಸರಳತೆ, ಸ್ನೇಹ ಅಭಿಮಾನದ ಸಿಹಿ ಉಂಡವರು ನಾವು, ಅಭಿಮಾನಿಯಾಗಿ ಸಿನಿಮಾ ಅಭಿನಯ ನೋಡಿ ಅತ್ತು, ನಕ್ಕು, ಚಪ್ಪಾಳೆ ಶಿಳ್ಳೆ ಹೊಡೆದು ಸಂಭ್ರಮಿಸಿದವರು ನಾವು,, ಆರಡಿ ದೇಹವ ಮೂರಡಿ ಬಗ್ಗಿಸಿ ತಗ್ಗಿ ನಮ್ಮೊಂದಿಗೆ ವಿನಯದಿ ಮಾತಾಡುವಾಗ ಹೆಮ್ಮೆ ಪಟ್ಟವರು ನಾವು,,, ತಪ್ಪಾಗಿದೆಯೋ ಇಲ್ಲವೋ ಏನಾಗಿದೆ ಎಂದು ಅರಿಯದವರು ನಾವು.. ಹಣಕ್ಕೆ ಬಗ್ಗದೆ ಪ್ರೀತಿಗೆ ಬಗ್ಗಿದವರು ಅವರು,,, ತಪ್ಪಾಗಿದ್ದರೆ ನ್ಯಾಯಾಂಗವಿದೆ, ಕಾನೂನಿದೆ,,,
ಶಿಕ್ಷೆ ಇದೇʼʼಎಂದು ಬರೆದುಕೊಂಡಿದ್ದರು.

ʻʻ ಅಕಾಲ ನಿಧನರಾದ ಶ್ರೀ ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ,,, ಅವರ ಕುಟುಂಬ ಹಾಗೂ ಹಲವು ನೊಂದ ಕುಟುಂಬಗಳಿಗೆ ನಮ್ಮೆಲ್ಲರ ಸಾಂತ್ವನ ,, ನೆರವು, ಆಸರೆ, ನ್ಯಾಯ ಬೇಕಿದೆ,, ಹಾಗೆ ಸೋಶಿಯಲ್ ಮೀಡಿಯಾವನ್ನು ದಯವಿಟ್ಟು ಒಳಿತಿಗೆ ಉಪಯೋಗಿಸಿ,, ಎಲ್ಲರ ಮೇಲೆ ಗೌರವವಿರಲಿ,, ಕಾಮೆಂಟ್ಸ್, ಪೋಸ್ಟ್, ಮೇಲೆ ಹಿಡಿತವಿರಲಿ,,
ದರ್ಶನ್ ಅಣ್ಣಾ,, ಕನ್ನಡದ ಕುಟುಂಬ,, ಚಲನಚಿತ್ರದ ಕುಟುಂಬ ನಮ್ಮ ಕುಟುಂಬ,, ಕಲಾವಿದರ ಕುಟುಂಬ,, ಏನೇ ಆದರೂ ನಮ್ಮ ಮನೆಯವರ ಜೊತೆ ನಾವು ಯಾವಾಗ್ಲೂ ಜೊತೆ ಇರುತ್ತೇವೆ,, ಅಲ್ಲವೇ??? ಹಾಗೆ ಪ್ರೀತಿ ಅಭಿಮಾನ ಬದಲಾಗದು,, ತಪ್ಪು ಯಾರು ಮಾಡಿದ್ದರೂ ಶಿಕ್ಷೆ ಆಗಬೇಕು .. ನ್ಯಾಯ ಎಲ್ಲರಿಗೂ ಒಂದೇ,,, ದರ್ಶನ್ ಅವರನ್ನು ಪ್ರೀತಿಸುವ ಎಲ್ಲರಿಗೂ ನೋವಾಗಿದೆ,,ಸಂಕಟವಾಗಿದೆ,, ಇದು ಸಂಯಮ, ತಾಳ್ಮೆ, ಪ್ರಾರ್ಥನೆಯ ಸಮಯ,,
ಸಿಟ್ಟು, ಕೋಪ, ಅಸಹನೆ, ಹತಾಶೆ ದರ್ಶನ್ ಹಾಗೂ ಅವರ ಕುಟುಂಬಕ್ಕೆ ಇನ್ನಷ್ಟು ತೊಂದರೆ ಒಡ್ಡಬಹುದು,,
ಚಿನ್ನ ಕುದಿವ ಕುಲುಮೆಯಲ್ಲಿದೆ, ಕಲ್ಮಶ ಕಳೆದು ಅಪರಂಜಿ ಆಗಿ ಶುದ್ಧವಾಗಿ ಬರಲು ಸಮಯ ಬೇಕು,,, ಕಾಯೋಣ ,, ಸಮಾಧಾನದಿಂದ..ದರ್ಶನ್ ಅಣ್ಣಾ ಅವರಿಗಾಗಿ ಪ್ರಾರ್ಥಿಸೋಣ, ಹಾರೈಸೋಣ…ʼʼಎಂದು ಬರೆದುಕೊಂಡಿದ್ದರು.

Continue Reading

ಸ್ಯಾಂಡಲ್ ವುಡ್

Manvita Kamath: ಮದುವೆ ಆದ ಒಂದು ತಿಂಗಳ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ʻಟಗರು ಪುಟ್ಟಿʼ!

Manvita Kamath: ಶ್ರೇಯಸ್ ಚಿಂಗಾ, ಮಾನ್ವಿತಾ ಕಾಮತ್ ಜೊತೆಗೆ ಸಾಧು ಕೋಕಿಲಾ, ಅನಿನಾಶ್, ಸುಚೇಂದ್ರ ಪ್ರಸಾದ್, ‘ಸ್ಪರ್ಶ’ ರೇಖಾ, ಅನಂತು, ಸುಂದರಶ್ರೀ, ‘ಕಾಮಿಡಿ ಕಿಲಾಡಿ’ ಖ್ಯಾತಿಯ ಹಿತೇಶ್ ಕುಮಾರ್, ಮಹಾಂತೇಶ್ ಹಿರೇಮಠ್, ನಿಕಿತಾ ದೋರ್ತೊಡಿ, ಲಲಿತಾ ನಾಯಕ್, ರೋಹಿತ್ ಅರುಣ್, ಅಮಾನ್, ರಾಖಿ ಭೂತಪ್ಪ ಮುಂತಾದವರು ಈ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದ್ದಾರೆ.

VISTARANEWS.COM


on

Manvita Kamath One and Half cinema song out
Koo

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಕೆಲವು ಪ್ರಯತ್ನಗಳು ಯಶಸ್ವಿಯಾದರೆ, ಕೆಲವು ಬಿಗ್ ಬಜೆಟ್ (Manvita Kamath) ಸಿನಿಮಾಗಳ ನಡುವೆ ಕಳೆದು ಹೋಗುತ್ತವೆ. ಹೊಸತನಕ್ಕೆ ಬೆಂಬಲ ಸಿಗಲಿ, ಸಿಗದೇ ಇರಲಿ ಆದರೆ ಪ್ರಯತ್ನಗಳಂತೂ ನಿಂತಿಲ್ಲ ಎಂಬುದು ಕನ್ನಡ ಸಿನಿಮಾ ಪ್ರೇಮಿಗಳಿಗೆ ಖುಷಿಯ ಸಂಗತಿ. ಸಿನಿಮಾ ಬಗ್ಗೆ ಅತೀವ ಪ್ರೀತಿ ಹೊಂದಿರುವ R. ಚರಣ್ ‘ಒನ್ ಅಂಡ್ ಹಾಫ್‘ ಸಿನಿಮಾ ಮೂಲಕ ನಿರ್ಮಾಪಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಇವರ ಜನ್ಮದಿನದ ಪ್ರಯುಕ್ತ ಹಾಡಿನ ಗ್ಲಿಂಪ್ಸ್ ಬಿಡುಗಡೆ ಮಾಡಲಾಯಿತು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಪ್ರತಿಕಾಗೋಷ್ಠಿ ಇಡೀ ಚಿತ್ರತಂಡ ಭಾಗಿಯಾಗಿ ಮಾಹಿತಿ ಹಂಚಿಕೊಂಡಿದೆ.

ನಟಿ ಮಾನ್ವಿತಾ, ʻʻನನಗೆ ಇದು ಸ್ಪೆಷಲ್ ಸಿನಿಮಾ. ಈ ಸಿನಿಮಾ ಬಂದ ಮೇಲೆ ನನ್ನ ಲೈಫ್ ಗೆ ಹೊಸ ವ್ಯಕ್ತಿ ಬಂದರು. ಸಿನಿಮಾ ತುಂಬಾ ಚೆನ್ನಾಗಿ ಮಾಡಿದ್ದಾರೆ. ಮ್ಯೂಸಿಕ್ ಗೆ ಕುಂತ್ರೆ ಮಣಿ ಅಣ್ಣ ಸೂಪರ್. ಲಿಖಿತಾ ಸಿರಿ ನನ್ನ ಕೋಸ್ಟಾರ್. ನಮ್ಮ 3 ಜನಕ್ಕೂ ಒಳ್ಳೆ ಬಾಂಡಿಂಗ್ ಇತ್ತು. ಶ್ರೇಯಸ್ ಡೈರೆಕ್ಟರ್ ಆಕ್ಟರ್ ಆಗಿ ಒಳ್ಳೆ ಕೆಲಸ ಮಾಡಿದ್ದಾರೆʼʼ ಎಂದರು.

ನಿರ್ದೇಶಕ ಕಂ ನಾಯಕ ಶ್ರೇಯಸ್ ಚಿಂಗಾ ಮಾತನಾಡಿ, ʻʻಇದು ತಂತ್ರಜ್ಞನರ ಸಿನಿಮಾ..ಪ್ರತಿಯೊಬ್ಬ ತಂತ್ರಜ್ಞರು ಕೂಡ ಫ್ಯಾಮಿಲಿ ತರ. ಅವರು ಅವರ ಕರ್ತವ್ಯ ನಿರ್ವಹಿಸಿದ್ದಾರೆ. ನಾನು ಸಿನಿಮಾವನ್ನು ತೆರೆಗೆ ತರಲು ಬೆಂಬಲಿಸಿದ ಇಡೀ ಚಿತ್ರತಂಡಕ್ಕೆ ಧನ್ಯವಾದ. ಈ ಸಮಯದಲ್ಲಿ ಜನ ಥಿಯೇಟರ್ ಗೆ ಬರುತ್ತಿಲ್ಲ. ನಿಮ್ಮ ಬೆಂಬಲ ನಮಗೆ ಇರಬೇಕು. ಇದು ತುಂಬಾ ವಿಭಿನ್ನ ಸಿನಿಮಾ. ಬೇರೆ ಭಾಷೆಯಲ್ಲಿ ಮಾಡುವ ಸಾಧ್ಯತೆ ನೂರಷ್ಟಿದೆʼʼ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: Manvita Kamath: ಅರುಣ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ʼಟಗರು ಪುಟ್ಟಿʼ

ನಿರ್ಮಾಪಕ ಆರ್.ಚರಣ್ ಸುಬ್ಬಯ್ಯ ಮಾತನಾಡಿ, ʻʻನಾನು ಗಾಂಧಿನಗರದ ಹುಡ್ಗ. ಶ್ರೇಯಸ್ ಮಾಡಿದ ಡೆವಿಡ್ ಸಿನಿಮಾ ನೋಡಿ ಇಷ್ಟವಾಯ್ತು. ನನಗೆ ಊಹೆ ಕೂಡ ಮಾಡಲು ಆಗಲಿಲ್ಲ. ಈ ರೀತಿ ಸಿನಿಮಾ ಮಾಡಿದ್ದಾನೆ ಎಂದು. ಯಾವುದಾದರೂ ಕನ್ಸೆಪ್ಟ್ ಇದ್ದರೆ ಹೇಳು ಎಂದು ಹೇಳಿದೆ. ಅವನು ಹೇಳಿದ ಕೇಳಿದ ಕಥೆ ನನಗೆ ಇಷ್ಟವಾಗಿ ಅಡ್ವಾನ್ಸ್ ಕೊಟ್ಟಿದ್ದೆ. ಒಂದೊಳ್ಳೆ ಬ್ಯೂಟಿಫುಲ್ ಸಬ್ಜೆಕ್ಟ್. ಈ ಸಿನಿಮಾವನ್ನು ಥಿಯೇಟರ್ ಗೆ ಬಂದು ನೋಡಬೇಕುʼʼ ಎಂದರು.

ಈ ಹಿಂದೆ ‘ರಂಗ್‌ಬಿರಂಗಿ’, ‘ಡೆವಿಡ್’, ‘ದಿ ವೆಕೆಂಟ್ ಹೌಸ್’ ಸಿನಿಮಾಗಳಲ್ಲಿ ನಟಿಸಿ ಭರವಸೆ ಮೂಡಿಸಿದ್ದ ನಟ ಶ್ರೇಯಸ್ ಚಿಂಗಾ, ಇದೀಗ ‘ಒನ್ ಅಂಡ್ ಹಾಫ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಇದು ಇವರ ಮೊದಲ ಸಿನಿಮಾ. ನಿರ್ದೇಶನದ ಜೊತೆಗೆ ಹೀರೋ ಆಗಿಯೂ ಅವರು ಅಭಿನಯಿಸುತ್ತಿದ್ದಾರೆ. ಶೂಟಿಂಗ್ ಮುಗಿಸಿರುವ ಚಿತ್ರತಂಡವೀಗ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ‘ಒನ್ ಅಂಡ್ ಹಾಫ್’ ಕಾಮಿಡಿ ಜಾನರ್ ಸಿನಿಮಾವಾಗಿದ್ದು, ಮನರಂಜನೆ ಪಕ್ಕ ಅನ್ನೋದು ಚಿತ್ರತಂಡದ ಭರವಸೆ.ಈ ಚಿತ್ರದ ಮತ್ತೊಂದು ವಿಶೇಷ ಅಂದರೆ ಹೀರೋ ಹೆಸರು ಕನ್ನಡ ಅಂತಾ ಇಡಲಾಗಿದೆ.

ಶ್ರೇಯಸ್ ಚಿಂಗಾ, ಮಾನ್ವಿತಾ ಕಾಮತ್ ಜೊತೆಗೆ ಸಾಧು ಕೋಕಿಲಾ, ಅನಿನಾಶ್, ಸುಚೇಂದ್ರ ಪ್ರಸಾದ್, ‘ಸ್ಪರ್ಶ’ ರೇಖಾ, ಅನಂತು, ಸುಂದರಶ್ರೀ, ‘ಕಾಮಿಡಿ ಕಿಲಾಡಿ’ ಖ್ಯಾತಿಯ ಹಿತೇಶ್ ಕುಮಾರ್, ಮಹಾಂತೇಶ್ ಹಿರೇಮಠ್, ನಿಕಿತಾ ದೋರ್ತೊಡಿ, ಲಲಿತಾ ನಾಯಕ್, ರೋಹಿತ್ ಅರುಣ್, ಅಮಾನ್, ರಾಖಿ ಭೂತಪ್ಪ ಮುಂತಾದವರು ಈ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ‘ಒನ್ ಅಂಡ್ ಹಾಫ್’ ಸಿನಿಮಾಗೆ ದೇವೇಂದ್ರ ಛಾಯಾಗ್ರಹಣ ಮಾಡುತ್ತಿದ್ದು, ಮಣಿಕಾಂತ್ ಕದ್ರಿ ಸಂಗೀತ ನೀಡುತ್ತಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಕಥೆಯುಳ್ಳ ಈ ಸಿನಿಮಾಗೆ ಸುಲಕ್ಷ್ಮೀ ಫಿಲ್ಮ್ಸ್‌ ಬ್ಯಾನರ್‌ನಡಿ ಆರ್.ಚರಣ್ ಹಣ ಹಾಕುತ್ತಿದ್ದಾರೆ. ಇಂಪನಾ ಪ್ರಸಾದ್, ಅರ್ಪಿತ್ ನಾರಾಯಣ್, ಸಂತೋಷ್ ನಾಗೇನಹಳ್ಳಿ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ.

Continue Reading
Advertisement
tamanna bhatia gold
ಸಿನಿಮಾ13 mins ago

Actress Tamanna Bhatia: ಬೆಂಗಳೂರಿನ ಶಾಲೆಯಲ್ಲಿ ನಟಿ ತಮನ್ನಾ ಭಾಟಿಯಾ ಬಗ್ಗೆ ಪಾಠ; ಪೋಷಕರ ಆಕ್ಷೇಪ

Viral Video
Latest13 mins ago

Viral Video: ಮನೆಯ ಹೊರಗೆ ತಾಯಿಯ ಜೊತೆ ಆಡುತ್ತಿದ್ದ ಮಗುವಿನ ಮೇಲೆ ಕಾರು ಹತ್ತಿಸಿದ ಚಾಲಕ!

Parenting Tips
ಶಿಕ್ಷಣ13 mins ago

Parenting Tips: ಕಾಲೇಜಿಗೆ ಹೊರಡಲು ಸಿದ್ಧವಾಗಿರುವ ಮಕ್ಕಳಿಗೆ ಪೋಷಕರು ತಿಳಿಸಲೇಬೇಕಾದ ಸಂಗತಿಗಳಿವು!

ದಶಮುಖ back to school
ಅಂಕಣ28 mins ago

ದಶಮುಖ ಅಂಕಣ: ಮಳೆಯ ನಡುವೆ ಮರಳಿ ಶಾಲೆಗೆ!

T20 World Cup 2024
ಪ್ರಮುಖ ಸುದ್ದಿ43 mins ago

T20 World Cup 2024 : ಗೆಲುವಿನ ಸಂಭ್ರಮದಲ್ಲಿ ಪಾಂಡ್ಯ ಕೆನ್ನೆಗೆ ಮುತ್ತಿಟ್ಟ ನಾಯಕ ರೋಹಿತ್; ಇಲ್ಲಿದೆ ವಿಡಿಯೊ

Railway Rules
Latest43 mins ago

Railway Rules: ರೈಲು ಪ್ರಯಾಣಿಕರು ತಿಳಿದುಕೊಳ್ಳಲೇಬೇಕಾದ ನಿಯಮಗಳು

T20 World Cup 2024
ಪ್ರಮುಖ ಸುದ್ದಿ1 hour ago

T20 World Cup 2024 : ಒಂದೇ ಒಂದು ಸೋಲು ಕಾಣದೆ ವಿಶ್ವ ಕಪ್ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ ತಂಡ

karnataka weather Forecast
ಮಳೆ1 hour ago

Karnataka Weather : ಜುಲೈ ಮೊದಲ ವಾರ ಮತ್ತಷ್ಟು ಅಬ್ಬರಿಸಲಿದೆ ಗುಡುಗು ಸಹಿತ ಮಳೆ!

Stop Drinking
Latest1 hour ago

Stop Drinking: ಗಂಡನ ಕುಡಿತ ನಿಲ್ಲಿಸಬೇಕೆ? ಹಾಗಾದ್ರೆ ಬಿಜೆಪಿ ಸಚಿವರೊಬ್ಬರ ಈ ಟಿಪ್ಸ್‌ ಟ್ರೈ ಮಾಡಿ ನೋಡಿ!

Ananth Ambani
Latest2 hours ago

Ananth Ambani: ಮಗನ ಮದುವೆ ಖುಷಿಯಲ್ಲಿ ನೀತಾ ಅಂಬಾನಿ ಹಾಗೂ ಮುಖೇಶ್‌ ಅಂಬಾನಿಯಿಂದ ಬಡವರಿಗಾಗಿ ಸಾಮೂಹಿಕ ವಿವಾಹ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ15 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ21 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌