Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಸಿಗಲಿದೆ ಶುಭ ಸುದ್ದಿ - Vistara News

ಭವಿಷ್ಯ

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಸಿಗಲಿದೆ ಶುಭ ಸುದ್ದಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಹುಣ್ಣಿಮೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಶನಿವಾರ ಮಕರ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಸಿಂಹ ರಾಶಿಯವರು ನಿಮ್ಮ ಆಕರ್ಷಕ ಮಾತುಗಳು ಇತರರನ್ನು ಸೆಳೆಯಲಿದೆ. ನಾಲಿಗೆಯ ರುಚಿಗೆ ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ, ಮಿತಿ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (22-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ಹುಣ್ಣಿಮೆ 06:36 ವಾರ: ಶನಿವಾರ
ನಕ್ಷತ್ರ: ಮೂಲಾ 17:53 ಯೋಗ: ಶುಕ್ಲ 16:43
ಕರಣ: ಭವ 06:36 ಅಮೃತಕಾಲ: ಬೆಳಗ್ಗೆ 11:37ರಿಂದ 01:11ರವರೆಗೆ
ದಿನದ ವಿಶೇಷ: ಕಾರ ಹುಣ್ಣಿಮೆ ಭೂಮಿ ಪೂರ್ಣಿಮಾ, ಸಂತ ಕಬೀರದಾಸ ಜಯಂತಿ

ಸೂರ್ಯೋದಯ : 05:55   ಸೂರ್ಯಾಸ್ತ : 06:48

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಸ್ನೇಹಿತರು ಅಥವಾ ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಾಸದಿಂದ ಖರ್ಚು ಇರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಅತಿಥಿಗಳ ಆಗಮನ ನಿಮ್ಮ ಯೋಚಿತ ಕಾರ್ಯವನ್ನು ವಿಳಂಬ ಮಾಡುವ ಸಾಧ್ಯತೆ ಇದೆ. ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ ಇದೆ, ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ,ಪ್ರಶಂಸೆ ಸಿಗುವುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಂಬಂಧವಿರದ ವಿಷಯಗಳಿಗೆ ಕಿವಿಗೊಡವುದು ಬೇಡ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ವಿಚಾರಗಳನ್ನು ಕೆರಳಿಸಿ ಗಾಯ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ನಿಮ್ಮ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ. ಇದರಿಂದ ಆತುರದಲ್ಲಿ ಮಾತನಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಖರ್ಚು ಇರಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕಟಕ:ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಗೃಹಬಳಕೆ ಸಾಧನಗಳ ಖರೀದಿ ಸಾಧ್ಯತೆಯಿಂದ ಖರ್ಚು ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅತಿಥಿಗಳ ಆಗಮನವು ಹರ್ಷ ತರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ:ನಿಮ್ಮ ಆಕರ್ಷಕ ಮಾತುಗಳು ಇತರರನ್ನು ಸೆಳೆಯಲಿದೆ. ನಾಲಿಗೆಯ ರುಚಿಗೆ ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ, ಮಿತಿ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಂಗಾತಿಯ ಮಾತುಗಳು ಮಧುರವೇನಿಸಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ನಿಮ್ಮ ತ್ಯಾಗದ ಮನೋಭಾವ ನಿಮಗೆ ಸಂತಸ ತರುವುದು. ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ, ವಿನಾಕಾರಣ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದಲ್ಲಿ ಅನಾವಶ್ಯಕ ಮಾತುಗಳಿಂದ ಜಗಳವಾಗಬಹುದು. ಮೌನದಿಂದ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಇತರರು ನಿಮ್ಮ ಕಾರ್ಯಗಳನ್ನು ಪ್ರಶಂಸೆ ಮಾಡುವರು. ಹಣಕಾಸಿನ ಹರಿವು ಹೆಚ್ಚಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಹದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿನಾಕಾರಣ ಜಗಳ ಮಾಡಿ ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ : ಇತರರನ್ನು ಟೀಕಿಸಲು ನಿಮ್ಮ ಅಮೂಲ್ಯ ಸಮಯ ವ್ಯರ್ಥ ಮಾಡುವುದು ಬೇಡ.ಅನಾವಶ್ಯಕ ವಿಚಾರ ಮಾಡಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ.ಹಣಕಾಸು ವ್ಯವಹಾರದಲ್ಲಿ ಪ್ರಗತಿ.ಉದ್ಯೋಗಿಗಳಿಗೆ ಶುಭ.ಕುಟುಂಬದಲ್ಲಿ ಹಳೆಯ ವಿಚಾರಗಳು ಕಲಹ ಸೃಷ್ಟಿಸಬಹುದು,ಮಾತು ಮಿತವಾಗಿರಲಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು:ಕುಟುಂಬ ಸದಸ್ಯರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಮೇಲೆ ಗಮನವಿರಲಿ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ನಿಮ್ಮ ಸಿಟ್ಟು ಸಂಗಾತಿಯ ಮೇಲೆ ಹಾಕಿ, ಕುಟುಂಬದ ವಾತಾವರಣ ಕೆಡಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಕರ: ನಿಮ್ಮ ಕೋಪದ ಸ್ವಭಾವದಿಂದ ಇತರರೊಂದಿಗೆ ವಾದಕ್ಕೆಳಿಯಬೇಡಿ. ಆತುರದಲ್ಲಿ ಅತಿರೇಕದ ಮಾತುಗಳು ಜಗಳ ತಂದಿತು. ಆರೋಗ್ಯದ ಕಡೆಗೆ ಗಮನವಿರಲಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಆತ್ಮೀಯರೊಂದಿಗೆ ಪ್ರಯಾಣಿಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಕೆಲಸಕ್ಕೆ ಹಾಕಿದ ಶ್ರಮ ವ್ಯರ್ಥವಾಗದಂತೆ ಎಚ್ಚರಿಕೆ ವಹಿಸಿ. ಆತುರದಲ್ಲಿ ಅತಿರೇಕದ ಮಾತುಗಳನ್ನಾಡುವುದು ಸರಿಯಲ್ಲ, ತಾಳ್ಮೆಯಿಂದ ಮಾತನಾಡಿ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮೀನ: ರಹಸ್ಯ ಕಾರ್ಯಗಳು ಯಶಸ್ಸು ತಂದು ಕೊಡಲಿವೆ. ಕುಟುಂಬಕ್ಕೆ ಸಮಯವನ್ನು ನೀಡುವಿರಿ. ವಿನಾಕಾರಣ ಕೋಪಗೊಂಡು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಖರ್ಚು ಹೆಚ್ಚಾಗಲಿದೆ. ಸಂಗಾತಿ ನಿಮ್ಮ ಮನಸ್ಸಿನ ಭಾವನೆಗಳಿಗೆ ಸ್ಪಂದಿಸುವಳು. ಮಧುರ ಪ್ರೇಮ ಅಂಕುರವಾಗಲಿದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಈ ರಾಶಿಯವರು ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವಿರಿ ಈ ದಿನ ಎಚ್ಚರಿಕೆ ಇರಲಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ನವಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhvishya
Koo

ಚಂದ್ರನು ಮೇಷ ರಾಶಿಯಿಂದ ಭಾನುವಾರ ಬೆಳಗ್ಗೆ 08:00ಕ್ಕೆ ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ,ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ವೃಷಭ ರಾಶಿಯವರು ಹಾಸ್ಯಪ್ರಜ್ಞೆಯ ನಡವಳಿಕೆಯಿಂದಾಗಿ ಇತರರನ್ನು ಚುಂಬಕದಂತೆ ಆಕರ್ಷಿಸಿ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿಕೊಳ್ಳುವಿರಿ. ಭೂ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ತೊಡುಗುವುದು ಬೇಡ. ಇದರಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (30-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ನವಮಿ 12:18 ವಾರ: ಭಾನುವಾರ
ನಕ್ಷತ್ರ: ರೇವತಿ 07:33 ಯೋಗ: ಅತಿಗಂಡ 16:13
ಕರಣ: ಗರಜ 12:18 ಅಮೃತಕಾಲ: ರಾತ್ರಿ 11:34ರಿಂದ 01:06ರವರೆಗೆ
ದಿನದ ವಿಶೇಷ: ಲಿಂಗಾನಂದಸ್ವಾಮಿ ಆರಾಧನೆ, ಹಲಾಪುರಕೋಟೇಶ್ವರ ರಥ

ಸೂರ್ಯೋದಯ : 05:57   ಸೂರ್ಯಾಸ್ತ : 06:50

ರಾಹುಕಾಲ: ಸಂಜೆ 05:13 ರಿಂದ 06:50
ಗುಳಿಕಕಾಲ: ಮಧ್ಯಾಹ್ನ 03:37 ರಿಂದ05:13

ಯಮಗಂಡಕಾಲ: ಮಧ್ಯಾಹ್ನ 12:23 ರಿಂದ 02:00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಹಾಸ್ಯಪ್ರಜ್ಞೆಯ ನಡವಳಿಕೆಯಿಂದಾಗಿ ಇತರರನ್ನು ಚುಂಬಕದಂತೆ ಆಕರ್ಷಿಸಿ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿಕೊಳ್ಳುವಿರಿ. ಭೂ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ತೊಡುಗುವುದು ಬೇಡ. ಇದರಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಉತ್ಸಾಹ ತುಂಬಿದ ವಾತಾವರಣ ಇರಲಿದೆ. ಇಂದು ನೀವು ಚೈತನ್ಯಯುಕ್ತವಾಗಿ ಇರುವಿರಿ. ಅನಾವಶ್ಯಕ ಖರ್ಚು ಮಾಡಿ ಆಮೇಲೆ ದುಃಖಿಸುವುದು ಬೇಡ. ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ನೀವು ಇತರರನ್ನು ಶ್ಲಾಘಿಸುವ ಮೂಲಕ ಯಶಸ್ಸನ್ನು ಆನಂದಿಸುವ ಸಾಧ್ಯತೆ ಇದೆ. ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಪ್ರೇಮಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆತ್ಮವಿಶ್ವಾಸದಿಂದ ಮಾಡಿದ ಕೆಲಸ ಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ ಇದೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯಕ್ಕಾಗಿ ಮನೋರಂಜನೆಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳು ನಿಮಗೆ ಪುಷ್ಟಿ ನೀಡಲಿವೆ. ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ. ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸದೃಢವಾಗಿ ಇರುವಿರಿ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಜೀವನದ ಪ್ರಮುಖ ನಿರ್ಧಾರಗಳ ಕುರಿತು ನೀವು ಕುಟುಂಬದೊಂದಿಗೆ ಚರ್ಚಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ : ಹಳೆಯ ಸ್ನೇಹಿತರೊಂದಿಗೆ ಆತ್ಮೀಯ ಮಾತುಕತೆಯಲ್ಲಿ ತೊಡಗುವಿರಿ. ಭವಿಷ್ಯದ ಕುರಿತು ಹೂಡಿಕೆ ಬಗ್ಗೆ ಆಲೋಚನೆ ಮಾಡುವಿರಿ. ಸಂಗಾತಿಯಿಂದ ಸಲಹೆ ಪಡೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅನೇಕ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಕೋರ್ಟ್ ಕಚೇರಿ ವ್ಯಾಜ್ಯಗಳು ವಿಜಯವನ್ನು ತಂದು ಕೊಡಲಿವೆ. ದಿನದ ಕೊನೆಯಲ್ಲಿ ಯಾವುದಾದರೂ ಕಾರಣದಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಯಾವುದೋ ಮೂಲದಿಂದ ಆರ್ಥಿಕವಾಗಿ ಬಲಗೊಳ್ಳಲಿದ್ದೀರಿ. ಕುಟುಂಬ ಸದಸ್ಯರ ಅಪಸ್ವರದಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಮಾತಿಗೆ ವಿರಾಮ ನೀಡಿ. ಉದ್ಯೋಗಿಗಳಿಗೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ನಿಮ್ಮ ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು. ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಬೇಡುವ ಸಾಧ್ಯತೆ ಇದೆ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿದಲ್ಲಿ ಯಶಸ್ಸು ಮತ್ತು ಮನ್ನಣೆ ನಿಮ್ಮದಾಗುತ್ತದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಹೊಂದಲಿದ್ದೀರಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅನಿವಾರ್ಯ ಕಾರಣಗಳಿಂದ ಕುಟುಂಬದ ಸದಸ್ಯರೊಂದಿಗೆ ಮನಸ್ತಾಪ ,ಆದಾಗ್ಯೂ ನೀವು ನಿಮ್ಮ ಶಾಂತ ಸ್ವಭಾವದಿಂದ ಎಲ್ಲವನ್ನು ಸರಿಗೊಳಿಸಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಧಾರ್ಮಿಕ

Ashada Month: ಆಷಾಢವನ್ನು ಅಶುಭ ತಿಂಗಳು ಅನ್ನುವುದೇಕೆ? ಇದಕ್ಕಿದೆ ವೈಜ್ಞಾನಿಕ ಕಾರಣ!

ಆಷಾಢ ಮಾಸವನ್ನು (Ashada Month) ಅಶುಭ ತಿಂಗಳು ಎಂದು ಕರೆಯಲು ಹಲವು ಕಾರಣಗಳೂ ಇವೆ. ಆದರೂ ಈ ಸಂದರ್ಭದಲ್ಲಿ ಹಲವು ವಿಶೇಷ ಆಚರಣೆಗಳನ್ನು ಮಾಡಲಾಗುತ್ತದೆ. ಶುಭ ಕಾರ್ಯಗಳಿಗೆ ಅಶುಭವಾದರೂ ಕೆಲವೊಂದು ಸಂಪ್ರದಾಯ, ಆಚರಣೆಗಳು ಈ ಸಂದರ್ಭದಲ್ಲಿ ಮಾತ್ರ ನಡೆಸಲಾಗುತ್ತದೆ. ಅದು ಯಾವುದು ಗೊತ್ತೆ? ಈ ಕುರಿತ ಮಾಹಿತಿ ಇಲ್ಲಿದೆ, ಓದಿ.

VISTARANEWS.COM


on

By

Ashada Month
Koo

ದಕ್ಷಿಣ ಭಾರತದಲ್ಲಿ (south india) ಆದಿ ಎಂದೂ ಕರೆಯಲ್ಪಡುವ ಆಷಾಢ ಮಾಸ (Ashada Month) ಶುಭ ಕಾರ್ಯಗಳಿಗೆ ಅತ್ಯಂತ ಅಶುಭ (inauspicious) ಮಾಸವೆಂದು ಪರಿಗಣಿಸಲಾಗಿದೆ. ಇದು ಈಗಿನ ನಂಬಿಕೆಯಲ್ಲ. ಇದಕ್ಕೆ ಸಹಸ್ರಾರು ವರ್ಷಗಳ ಹಿನ್ನೆಲೆಯೇ ಇದೆ. ಈ ಸಂದರ್ಭದಲ್ಲಿ ಕೆಲವೊಂದು ನಂಬಿಕೆ, ವಿಶಿಷ್ಟ ಆಚರಣೆಗಳನ್ನೂ ಮಾಡಲಾಗುತ್ತದೆ.

ಸರಿಸುಮಾರು ಜೂನ್- ಜುಲೈನಲ್ಲಿ ಬರುವ ಆಷಾಢ ಮಾಸದಲ್ಲಿ ಭಾರತದಲ್ಲಿ ಗಾಳಿ ಬೀಸುವ ಕಾಲವಾಗಿದೆ. ಮಳೆಗಾಲ ಆರಂಭದ ಸಮಯ. ಆಕಾಶದಲ್ಲಿ ದಟ್ಟ ಮೋಡಗಳು ಆವರಿಸುತ್ತದೆ. ಖಗೋಳಶಾಸ್ತ್ರದ ಪ್ರಕಾರ ಭೂಮಿಯು ಪೂರ್ವ- ಆಷಾಢ ನಕ್ಷತ್ರಪುಂಜದ ಸಮೀಪದಲ್ಲಿರುತ್ತದೆ. ಆದ್ದರಿಂದ ಈ ತಿಂಗಳಲ್ಲಿ ಪೂರ್ಣ ಚಂದ್ರನು ಆ ನಕ್ಷತ್ರಪುಂಜದಲ್ಲಿ ಕಾಣಿಸಿಕೊಳ್ಳುತ್ತಾನೆ. ಸೂರ್ಯ ಮಿಥುನ ರಾಶಿಯಿಂದ ಕರ್ಕಾಟಕಕ್ಕೆ ದಕ್ಷಿಣದ ಕಡೆಗೆ ಚಲಿಸುತ್ತಾನೆ.

ದಕ್ಷಿಣ ಭಾರತದಲ್ಲಿ ಈ ತಿಂಗಳು ನವವಿವಾಹಿತ ದಂಪತಿಗೆ ಬಹಳ ಭಾವನಾತ್ಮಕ ತಿಂಗಳು. ಯಾಕೆಂದರೆ ವಧು ಮತ್ತು ವರರನ್ನು ಈ ಒಂದು ತಿಂಗಳ ಕಾಲ ಬೇರ್ಪಡಿಸಲಾಗುತ್ತದೆ. ಅನೇಕರು ಇದನ್ನು ಸಂಪ್ರದಾಯದ ಭಾಗವಾಗಿ ಅನುಸರಿಸುತ್ತಾರೆ. ಇದಕ್ಕೆ ನಿರ್ದಿಷ್ಟ ಕಾರಣಗಳು ಇಲ್ಲವಾದರೂ ಸಂಪ್ರದಾಯವಂತೂ ಇಂದಿಗೂ ಆಚರಣೆಯಲ್ಲಿದೆ.

1. ಬೇಸಿಗೆಯಲ್ಲಿ ಮಗುವಿನ ಜನನ

ಆಷಾಢ ಮಾಸದಲ್ಲಿ ನವವಿವಾಹಿತರು ಬೇರ್ಪಡಲು ಮುಖ್ಯ ಕಾರಣ ಈ ಸಮಯದಲ್ಲಿ ಮಹಿಳೆ ಗರ್ಭಿಣಿಯಾದರೆ ದಕ್ಷಿಣ ಭಾರತದಲ್ಲಿ ಬೇಸಿಗೆಯ ಮಧ್ಯದಲ್ಲಿ ಅಂದರೆ ಮಾರ್ಚ್, ಏಪ್ರಿಲ್, ಮೇ ತಿಂಗಳಲ್ಲಿ ಮಗುವಿನ ಜನನವಾಗುತ್ತದೆ. ತಾಯಿ ಮತ್ತು ಮಗು ಇಬ್ಬರಿಗೂ ಇದು ಒಳ್ಳೆಯದಲ್ಲ. ಬೇಸಿಗೆಯಲ್ಲಿ ಮಗುವನ್ನು ನೋಡಿಕೊಳ್ಳುವುದು ತುಂಬಾ ಕಷ್ಟಕರವಾಗಿರುತ್ತದೆ ಮತ್ತು ಮಗುವಿಗೆ ತೊಂದರೆಯಾಗುತ್ತದೆ. ಆದ್ದರಿಂದ ನಮ್ಮ ಪೂರ್ವಜರು ನವಜಾತ ಶಿಶುವಿಗೆ ತೊಂದರೆಯಾಗದಂತೆ ವಧು ವರನನ್ನು ಬೇರ್ಪಡಿಸುವ ಯೋಜನೆಯನ್ನು ರೂಪಿಸಿದ್ದಾರೆ ಎನ್ನಲಾಗುತ್ತದೆ.


2. ಕೃಷಿಗೆ ಹೆಚ್ಚಿನ ಪ್ರಾಮುಖ್ಯತೆ

ಜುಲೈ ಮತ್ತು ಆಗಸ್ಟ್ ದಕ್ಷಿಣ ಭಾರತದ ಪ್ರದೇಶಗಳಲ್ಲಿ ಮಾನ್ಸೂನ್ ಆರಂಭವಾಗುತ್ತದೆ. ಈ ಋತುವಿನಲ್ಲಿ ಕೃಷಿಗೆ ಉತ್ತಮವಾದ ಋತುವಾಗಿದೆ. ನದಿ ಮತ್ತು ಸರೋವರಗಳು ನೀರಿನಿಂದ ತುಂಬಿರುತ್ತವೆ. ಜುಲೈ ಮತ್ತು ಆಗಸ್ಟ್ ತಿಂಗಾಲಿನಲ್ಲಿ ಹೊಲಗಳಲ್ಲಿ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ಆದ್ದರಿಂದ ಈ ತಿಂಗಳುಗಳಲ್ಲಿ ಕುಟುಂಬದ ಪ್ರತಿಯೊಬ್ಬರೂ ಇಡೀ ವರ್ಷ ಉತ್ತಮ ಫಲಿತಾಂಶವನ್ನು ಪಡೆಯಲು ಹೊಲದಲ್ಲಿ ಕೆಲಸ ಮಾಡಬೇಕಾಗುತ್ತದೆ. ವಧುವನ್ನು ತನ್ನ ತಂದೆಯ ಮನೆಗೆ ಕಳುಹಿಸಲಾಗುತ್ತದೆ. ಆದ್ದರಿಂದ ಅವಳು ತನ್ನ ಹೆತ್ತವರಿಗೆ ಸಹಾಯ ಮಾಡಬಹುದು ಮತ್ತು ಮದುಮಗನು ಕೃಷಿಯತ್ತ ಗಮನಹರಿಸಬಹುದು. ಕೆಲಸದ ಮೇಲೆ ಗಮನ ಕೇಂದ್ರೀಕರಿಸಲು ಇದು ಒಂದು ಯೋಜನೆಯಾಗಿ ನವದಂಪತಿಯನ್ನು ಬೇರ್ಪಡಿಸಲಾಗುತ್ತದೆ ಎನ್ನಲಾಗುತ್ತದೆ.

3. ಆಯುರ್ವೇದ ನಂಬಿಕೆ

ಆಯುರ್ವೇದ ಶಾಸ್ತ್ರದ ಪ್ರಕಾರ ಮಾನ್ಸೂನ್ ಸಮಯದಲ್ಲಿ ಲೈಂಗಿಕತೆಯನ್ನು ನಿಷೇಧಿಸಲಾಗುತ್ತದೆ. ಮಳೆಗಾಲವು ವಿಶ್ರಾಂತಿ ಮತ್ತು ನವ ಯೌವನ ಪಡೆಯುವ ಕಾಲವಾಗಿದೆ. ಈ ತಿಂಗಳಲ್ಲಿ ಲೈಂಗಿಕತೆಯನ್ನು ಅನುಮತಿಸಲಾಗುವುದಿಲ್ಲ. ಮಾನ್ಸೂನ್ ತಿಂಗಳುಗಳನ್ನು ಅತ್ಯಂತ ದುರ್ಬಲ ತಿಂಗಳುಗಳೆಂದು ಪರಿಗಣಿಸಲಾಗುತ್ತದೆ. ಮಳೆ ಸುರಿಯುವುದರಿಂದ ಸುಲಭವಾಗಿ ರೋಗಗಳನ್ನು ಉಂಟುಮಾಡುತ್ತದೆ. ಹಾಗಾಗಿ ಈ ತಿಂಗಳಲ್ಲಿ ಲೈಂಗಿಕತೆಯು ದೋಷಯುಕ್ತ ಸಮಸ್ಯೆಗಳು ಮತ್ತು ಇತರ ತೊಡಕುಗಳಿಗೆ ಕಾರಣವಾಗಬಹುದು ಎಂಬುದು ಹಳೆಯವರ ಲೆಕ್ಕಾಚಾರವಾಗಿತ್ತು!

4. ಸಾಂಸ್ಕೃತಿಕ ಮಹತ್ವ

ಆಷಾಢ ತಿಂಗಳು ತಮಿಳಿಗರು ಮತ್ತು ಮಲಯಾಳಿಗಳಲ್ಲಿ ಮಹತ್ವದ್ದಾಗಿದೆ. ಯಾಕೆಂದರೆ ಈ ತಿಂಗಳುಗಳನ್ನು ಅಶುಭವೆಂದು ಪರಿಗಣಿಸುವ ಅವರು ಈ ಸಮಯದಲ್ಲಿ ರಾಮಾಯಣವನ್ನು ಓದುತ್ತಾರೆ ಮತ್ತು ಧ್ಯಾನದಲ್ಲಿ ಹೆಚ್ಚು ತೊಡಗುತ್ತಾರೆ. ಅವರು ತಮ್ಮ ಆರೋಗ್ಯವನ್ನು ಬಲಪಡಿಸಲು ಮತ್ತು ಪ್ರತಿರಕ್ಷಣೆಗಾಗಿ ಔಷಧೀಯ ಆಹಾರ ಮತ್ತು ಪಾನೀಯಗಳನ್ನು ತೆಗೆದುಕೊಳ್ಳುತ್ತಾರೆ.


5. ಮೆಹೆಂದಿಗೆ ಪ್ರಾಮುಖ್ಯತೆ

ಭಾರತದ ಅನೇಕ ಸ್ಥಳಗಳಲ್ಲಿ ಜನರು ಆಷಾಢ ಮಾಸದಲ್ಲಿ ಕೈ ಮತ್ತು ಪಾದಗಳಿಗೆ ಮೆಹೆಂದಿಯನ್ನು ಹಚ್ಚುತಾರೆ. ಹವಾಮಾನ ಬದಲಾವಣೆಗಳ ಪರಿಣಾಮ ದೇಹದ ಮೇಲೆ ಆಗದೇ ಇರಲಿ ಎಂದು ಮೆಹೆಂದಿಯನ್ನು ಕೈಗಳಿಗೆ ಹಚ್ಚಿಕೊಳ್ಳಲಾಗುತ್ತದೆ ಎನ್ನಲಾಗುತ್ತದೆ. ಮೆಹೆಂದಿ ಎಲೆಗಳು ಈ ಸಮಯದಲ್ಲಿ ಬೆಳೆಯಲು ಪ್ರಾರಂಭಿಸುತ್ತವೆ. ಇದು ತೀವ್ರವಾದ ಹವಾಮಾನ ಬದಲಾವಣೆಯಿಂದ ಉಂಟಾಗುವ ಸೋಂಕುಗಳನ್ನು ತಡೆಗಟ್ಟುವ ಗುಣಗಳನ್ನು ಹೊಂದಿದೆ.

6. ವ್ರತ, ಪೂಜೆಗೆ ಆದ್ಯತೆ

ಆಷಾಢ ತಿಂಗಳು ಶುಭ ಕಾರ್ಯಕ್ರಮಗಳಿಗೆ ಅಶುಭವಾಗಿದ್ದರೂ ಈ ಸಂದರ್ಭದಲ್ಲಿ ವ್ರತ, ಪೂಜೆಗಳಿಗೆ ಈ ತಿಂಗಳು ಉತ್ತಮ ಎಂದೇ ಭಾವಿಸಲಾಗುತ್ತದೆ. ಹೊರಗೆ ಧಾರಾಕಾರವಾಗಿ ಮಳೆ ಸುರಿಯುವಾಗ ಯಾವುದೇ ಕೆಲಸ ಮಾಡುವುದು ಸಾಧ್ಯವಿಲ್ಲ. ಹೀಗಾಗಿ ಹೆಚ್ಚಿನವರು ಈ ಸಂದರ್ಭದಲ್ಲಿ ಪೂಜೆ, ವ್ರತಾಚರಣೆಯಲ್ಲಿ ತೊಡಗುತ್ತಾರೆ. ಕೆಲವು ದೇವಾಲಯಗಳಲ್ಲಿ ಈ ಸಂದರ್ಭದಲ್ಲಿ ವಿಶೇಷ ಪೂಜೆ, ಉತ್ಸವಗಳೂ ನಡೆಯುತ್ತವೆ.

7. ಬೇವಿಗೆ ಪ್ರಾಮುಖ್ಯತೆ

ದಕ್ಷಿಣ ಭಾರತದಾದ್ಯಂತ ಆಷಾಢ ಮಾಸದಲ್ಲಿ ಮನೆ ಮತ್ತು ಬೀದಿಗಳಲ್ಲಿ ಅನೇಕ ಬೇವಿನ ಎಲೆಗಳನ್ನು ತೂಗು ಹಾಕುತ್ತಾರೆ. ಕಾರಣ ಈ ಋತುವಿನಲ್ಲಿ ಸಾಮಾನ್ಯವಾಗಿ ರಾಜ್ಯದಾದ್ಯಂತ ಭಾರೀ ಗಾಳಿ ಇರುತ್ತದೆ. ಇದರೊಂದಿಗೆ ಮಳೆಯು ಬರುತ್ತದೆ. ಗಾಳಿ, ಮಳೆಯೂ ಅನೇಕ ಸೋಂಕುಗಳನ್ನು ಹಬ್ಬಿಸುವ ಸಾಧ್ಯತೆ ಇರುತ್ತದೆ. ಇದಕ್ಕಾಗಿ ಜನರು ಬೇವನ್ನು ರಕ್ಷಣೆಯಾಗಿ ಬಳಸುತ್ತಾರೆ. ಬೇವಿನ ಸೊಪ್ಪನ್ನು ಖಾದ್ಯಕ್ಕೆ ಸೇರಿಸುತ್ತಾರೆ. ಇದರಿಂದ ಅನೇಕ ರೋಗಗಳನ್ನು ದೂರವಿಡಬಹುದು ಎನ್ನಲಾಗುತ್ತದೆ.

8. ಆಷಾಢ ಕೊಡುಗೆ

ಸಾಮಾನ್ಯವಾಗಿ ಈ ತಿಂಗಳಲ್ಲಿ ವ್ಯಾಪಾರ ವಹಿವಾಟುಗಳು ಕಡಿಮೆಯಾಗುತ್ತವೆ. ಸಾಮಾನ್ಯವಾಗಿ ಭಾರತದ ದಕ್ಷಿಣ ಭಾಗಗಳಲ್ಲಿ ಹೊಸ ಉದ್ಯಮಗಳನ್ನು ಪ್ರಾರಂಭಿಸಲು, ಮನೆಗಳನ್ನು ಬದಲಾಯಿಸಲು ಅಶುಭ ಮಾಸವೆಂದೇ ಇದನ್ನು ಪರಿಗಣಿಸಲಾಗಿದೆ. ಹೀಗಾಗಿ ಹಲವು ವ್ಯಾಪಾರಿಗಳು ಈ ಸಂದರ್ಭದಲ್ಲಿ ವಿಶೇಷ ಕೊಡುಗೆಗಳನ್ನು ಘೋಷಿಸಲು ಪ್ರಾರಂಭಿಸುತ್ತಾರೆ.

ಇದನ್ನೂ ಓದಿ: Vastu Tips: ಈ ವಾಸ್ತು ನಿಯಮ ಪಾಲಿಸಿದರೆ ವ್ಯವಹಾರದಲ್ಲಿ ವೃದ್ಧಿ


9. ಆಟಿ ಕಷಾಯ ಸೇವನೆ

ಆಷಾಢ ಮಾಸದಲ್ಲಿ ಬರುವ ಅಮಾವಾಸ್ಯೆಯಂದು ಹಾಳೆ ಮರದ ತೊಗಟೆಯನ್ನು ತಂದು ಅದಕ್ಕೆ ಬೆಳ್ಳುಳ್ಳಿ, ಶುಂಠಿ, ಓಂ ಕಾಳು ಸೇರಿಸಿ ರಸ ತೆಗೆದು ಒಗ್ಗರಣೆಯನ್ನು ಹಾಕಿ ಕಷಾಯ ಮಾಡಿ ಸೇವಿಸಲಾಗುತ್ತದೆ. ಇದು ಮಳೆಗಾಲದಲ್ಲಿ ಉಂಟಾಗುವ ಅನೇಕ ರೀತಿಯ ಸೋಂಕಿನಿಂದ ನಮ್ಮನ್ನು ರಕ್ಷಿಸುತ್ತದೆ ಎಂಬ ನಂಬಿಕೆ ಜನರಲ್ಲಿದೆ.

Continue Reading

ಭವಿಷ್ಯ

Dina Bhavishya : ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶನಿವಾರವೂ ಮೇಷ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ಸಿಂಹ ರಾಶಿಯವರು ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದ್ದು, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (29-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ಅಷ್ಟಮಿ 14:19 16:26 ವಾರ: ಶನಿವಾರ
ನಕ್ಷತ್ರ: ಉತ್ತರ ಭಾದ್ರಪದ 08:48 ಯೋಗ: ಶೋಭನ 18:52
ಕರಣ: ಕೌಲವ 14:19 ಅಮೃತಕಾಲ: ಬೆಳಗ್ಗೆ 05:17 ರಿಂದ 06:48

ಸೂರ್ಯೋದಯ : 05:57   ಸೂರ್ಯಾಸ್ತ : 06:50

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30

ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಎಚ್ಚರಿಕೆ ಇರಲಿ. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡುವಿರಿ. ಆರ್ಥಿಕವಾಗಿ ಪ್ರಗತಿ ಹೊಂದುವಿರಿ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದ್ದು, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆ ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ : ಬಿಡುವಿಲ್ಲದ ಕಾರ್ಯದಿಂದ ಆಯಾಸ, ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಆದಷ್ಟು ವಿಶ್ರಾಂತಿ ಪಡೆಯಿರಿ.ಅನಗತ್ಯ ಖರ್ಚು ಇರಲಿದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಂತೋಷ ತುಂಬಿದ ವಾತಾವರಣ ಇರಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಗುರುತಿಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ. ಆದರೆ ಅದೇ ಸಮಯದಲ್ಲಿ ಖರ್ಚು ಹೆಚ್ಚಾಗುತ್ತದೆ. ನಿಮ್ಮ ಬಗೆಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಸಲಹೆ ಹಿತಕರವೆನಿಸುವುದು. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರ ವಹಿಸಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮೀನ ರಾಶಿಯಿಂದ ಶುಕ್ರವಾರ ಮೇಷ ರಾಶಿಯನ್ನು 04:52ಕ್ಕೆ ಪ್ರವೇಶಿಸುತ್ತಾನೆ. ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಆರ್ಥಿಕ ಜೀವನದಲ್ಲಿ ಇಂದು ಸಂತೋಷ ಉಳಿದಿರುತ್ತದೆ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ಮಿಥುನ ರಾಶಿಯವರು ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿದೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರಿಕೆ ವಹಿಸಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (28-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ಸಪ್ತಮಿ 16:26 ವಾರ: ಶುಕ್ರವಾರ
ನಕ್ಷತ್ರ: ಪೂರ್ವ ಭಾದ್ರಪದ 10:09 ಯೋಗ: ಸೌಭಾಗ್ಯ 21:37
ಕರಣ: ಭವ 16:26 ಅಮೃತಕಾಲ: ಬೆಳಗಿನ ಜಾವ 04:17 ರಿಂದ 05:48
ದಿನದ ವಿಶೇಷ: ಹರಿಪುರ ಉತ್ಸವ

ಸೂರ್ಯೋದಯ : 05:58   ಸೂರ್ಯಾಸ್ತ : 06:50

ರಾಹುಕಾಲ: ಬೆಳಗ್ಗೆ 10:46 ರಿಂದ 12:23
ಗುಳಿಕಕಾಲ: ಬೆಳಗ್ಗೆ 07:33
ರಿಂದ 09:10
ಯಮಗಂಡಕಾಲ: ಮಧ್ಯಾಹ್ನ 03:36 ರಿಂದ 05:13

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಆರ್ಥಿಕ ಜೀವನದಲ್ಲಿ ಇಂದು ಸಂತೋಷ ಉಳಿದಿರುತ್ತದೆ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ. ನೀವು ದೀರ್ಘಕಾಲದ ಪ್ರಯೋಜನಗಳನ್ನು ಹೊಂದಿರುವ ಯೋಜನೆಗಳ ಮೇಲೆ ಕೆಲಸ ಮಾಡುವ ಸಾಧ್ಯತೆ ಇದೆ. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ನಿಮ್ಮ ವೈವಾಹಿಕ ಜೀವನದಲ್ಲಿ ಅನೇಕ ಏರಿಳಿತಗಳ ನಂತರ, ಇಂದು ಪರಸ್ಪರ ನಿಮ್ಮ ಪ್ರೀತಿಯನ್ನು ಆಸ್ವಾದಿಸುವ ಸುವರ್ಣ ದಿನ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಉದ್ಯೋಗಿಗಳಿಗೆ ಶುಭ. ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿದೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರಿಕೆ ವಹಿಸಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಸಭಲತೆ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕಟಕ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಗಳಿಸುವಿರಿ. ಉದ್ಯೋಗಕ್ಕೆ ಸಂಬಂಧಿಸಿದ ಜನರು ಇಂದು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ತಾಳ್ಮೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಸಿಂಹ: ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆ ಹೆಚ್ಚಿದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ ಇದ್ದು, ಅನಗತ್ಯ ಖರ್ಚುಗಳ ಬಗೆಗೆ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಅನಗತ್ಯ ಒತ್ತಡದಿಂದ ಹೊರಬರಲು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಸಮಾಧಾನ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಕೊಂಚಮಟ್ಟಿಗೆ ನಿಧಾನವಾದರೂ ಪ್ರಯತ್ನವನ್ನು ಬಿಡಬೇಡಿ. ಮುಂದೊಂದು ದಿನ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯದ ದೃಷ್ಟಿಯಿಂದ ಉತ್ತಮವಾದ ದಿನ. ನಿಮ್ಮ ಹರ್ಷಚಿತ್ತದ ಮನಸ್ಸು ನಿಮಗೆ ಇನ್ನಷ್ಟೂ ಆತ್ಮವಿಶ್ವಾಸ ತರಲಿದೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಆರ್ಥಿಕವಾಗಿ ಸಾಧಾರಣ ಫಲ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಸಂತೋಷದ ವಾತಾವರಣ. ಅದೃಷ್ಟ ಸಂಖ್ಯೆ: 9

Horoscope Today

ವೃಶ್ಚಿಕ : ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ ಇದ್ದು, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯನ ಆರೋಗ್ಯ ಹದಗೆಡವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಉದ್ಯೋಗಿಗಳಿಗೆ ಹೆಚ್ಚಿದ ಕಿರಿಕಿರಿ. ಸಂಗಾತಿಯಿಂದ ಸಲಹೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ದೃಢ ವಿಶ್ವಾಸದ ನಿರ್ಧಾರದಿಂದಾಗಿ ಸುದೀರ್ಘವಾದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸ್ನೇಹಿತರಿಂದ ಆರ್ಥಿಕ ಸಹಾಯದ ಬೇಡಿಕೆ, ಆಲೋಚಿಸಿ ಸಹಾಯ ಮಾಡಿ. ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮಗೆ ಪ್ರಶಂಸೆ, ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮಕರ: ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು, ಇದು ನಿಮಗೆ ಕಿರಿಕಿರಿ ಹಾಗೂ ಆತಂಕದ ಭಾವನೆಗಳನ್ನು ಉಂಟುಮಾಡಬಹುದು. ಕುಟುಂಬದವರ ಬೆಂಬಲ ಪ್ರೋತ್ಸಾಹದಿಂದಾಗಿ ಕೊಂಚಮಟ್ಟಿಗೆ ನಿರಾಳವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಲಿದೆ. ಖರ್ಚಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ದಿನದ ಮಟ್ಟಿಗೆ ಮಾಡುವುದು ಬೇಡ. ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಸ್ನೇಹಿತರ ಜತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಲಾಭ ಇರಲಿದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 6

Horoscope Today

ಮೀನ: ಹೂಡಿಕೆಯಲ್ಲಿ ಲಾಭಾಂಶ ಕಡಿಮೆ ಇರಲಿದೆ. ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರಬಹುದು. ಪ್ರೀತಿ ಪಾತ್ರರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕೊಂಚ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ ನೀಡಲಿದೆ. ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Road Accident
ಮೈಸೂರು31 mins ago

Road Accident : ತಿರುವಿನಲ್ಲಿ ಕಂದಕಕ್ಕೆ ಉರುಳಿದ ಬಸ್‌; ಚಾಲಕ ಸೇರಿ ಮೂವರು ಗಂಭೀರ

KPCC President
ಪ್ರಮುಖ ಸುದ್ದಿ39 mins ago

KPCC President: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸುಳಿವು; ಲಿಂಗಾಯತರಿಗೆ ಅವಕಾಶ ನೀಡಲು ಒತ್ತಾಯ

Jayam Ravi married to superstar rajinikanth daughter
ಕಾಲಿವುಡ್43 mins ago

Jayam Ravi: ರಜನಿಕಾಂತ್‌ ಮಗಳ ಜತೆ ಜಯಂ ರವಿ ಮದುವೆ?

T20 World Cup 2024
ಕ್ರೀಡೆ52 mins ago

T20 World Cup 2024: ಸಂಭ್ರಮಾಚರಣೆ ವೇಳೆ ದುರಂತ: ಧ್ವಜ ಹಾರಿಸಲು ಹೋಗಿ ಬಿದ್ದ ಅಭಿಮಾನಿ; ವೈರಲ್‌ ವಿಡಿಯೊ ಇಲ್ಲಿದೆ

ಕ್ರೀಡೆ1 hour ago

Rohit Sharma: ವಿಶ್ವಕಪ್​ ಗೆದ್ದ ನಾಯಕ ರೋಹಿತ್​ಗೆ ಆಶೀರ್ವಾದ ಮಾಡಿದ ಕಾಂತಾರದ ‘ಪಂಜುರ್ಲಿ’ ದೈವ!

Actor Darshan
ಬೆಂಗಳೂರು1 hour ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

CM Siddaramaiah To Inaugurate Film Producers Association Building says build film city
ಸ್ಯಾಂಡಲ್ ವುಡ್1 hour ago

CM Siddaramaiah: ಡಾ.ರಾಜ್‍ಕುಮಾರ್ ಕನಸಿನಂತೆ ಫಿಲ್ಮ್ ಸಿಟಿ ನಿರ್ಮಾಣ ಮಾಡ್ತೇವೆ ಎಂದ ಸಿದ್ದರಾಮಯ್ಯ

Gold Rate Today
ಚಿನ್ನದ ದರ2 hours ago

Gold Rate Today: ಆಭರಣ ಖರೀದಿಗೆ ಇದು ಸೂಕ್ತ ಸಮಯ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

Mann Ki Baat
ದೇಶ2 hours ago

Mann Ki Baat: ʼಸಂವಿಧಾನದ ಬಗ್ಗೆ ಅಚಲ ನಂಬಿಕೆ ಇರಿಸಿದ್ದಕ್ಕೆ ಧನ್ಯವಾದʼ-ಮೋದಿ ಮನ್‌ ಕೀ ಬಾತ್‌ ಹೈಲೈಟ್ಸ್‌ ಹೀಗಿದೆ ನೋಡಿ

Road Accident
ಬೆಂಗಳೂರು2 hours ago

Road Accident : ಬೆಂಗಳೂರಲ್ಲಿ ಬೈಕ್‌ ಸವಾರರಿಬ್ಬರ ಪ್ರಾಣ ಕಸಿದ ಹೈ ಸ್ಪೀಡ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಬೆಂಗಳೂರು1 hour ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ21 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

ಟ್ರೆಂಡಿಂಗ್‌