Actor Darshan: ʻಡೆವಿಲ್ ಗ್ಯಾಂಗ್‌ʼಗೆ ಜೀವಾವಧಿ ಶಿಕ್ಷೆ ಆಗತ್ತಾ? ಕಾನೂನು ತಜ್ಞರು ಹೇಳೋದೇನು? - Vistara News

ಸಿನಿಮಾ

Actor Darshan: ʻಡೆವಿಲ್ ಗ್ಯಾಂಗ್‌ʼಗೆ ಜೀವಾವಧಿ ಶಿಕ್ಷೆ ಆಗತ್ತಾ? ಕಾನೂನು ತಜ್ಞರು ಹೇಳೋದೇನು?

Actor Darshan: ದರ್ಶನ್ ಸೇರಿ 4 ಜನ ಬಂಧಿತ ಆರೋಪಿಗಳನ್ನು ಇಂದು ಕೋರ್ಟ್‌ಗೆ ಹಾಜರು ಪಡಿಸಲಿರುವ ಪೊಲೀಸರು ಅದಕ್ಕಾಗಿ ಸಿದ್ಧತೆ ಕೈಗೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಸಂಬಂಧ ಕಳೆದ 12 ದಿನಗಳಿಂದ ಎಲ್ಲ 17 ಆರೋಪಿಗಳ ವಿಚಾರಣೆ ನಡೆಸಿರುವ ಪೊಲೀಸರು ಈಗಾಗಲೇ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ನಂತರ ಕೃತ್ಯಕ್ಕೆ ಸಂಬಂಧಿಸಿದ ಹಲವೆಡೆ ಮಹಜರು ಪ್ರಕ್ರಿಯೆ ನಡೆಸಿ, ಕೊಲೆಗೆ ಸಂಬಂಧಿಸಿದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನೂ ಸಂಗ್ರಹಿಸಿದ್ದಾರೆ.

VISTARANEWS.COM


on

Actor Darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಎರಡನೇ ಆರೋಪಿಯಾಗಿರುವ ನಟ ದರ್ಶನ್‌ (Darshan Arrested) ಸೇರಿ ನಾಲ್ವರು ಆರೋಪಿಗಳ ಪೊಲೀಸ್‌ ಕಸ್ಟಡಿ ಅಂತ್ಯವಾಗುತ್ತಿದ್ದು, ಇಂದು (ಜೂನ್‌ 22) ಪೊಲೀಸರು ಮೂರನೇ ಬಾರಿಗೆ ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದಾರೆ. ಇಲ್ಲಿ ದರ್ಶನ್‌ ಭವಿಷ್ಯ ನಿರ್ಧಾರವಾಗಲಿದೆ. ಕಾನೂನು ತಜ್ಞರು ಹೇಳುವ ಪ್ರಕಾರ ಆರೋಪಿಗಳು ಎಸಗಿರೋ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಆಗೋದು ಪಕ್ಕಾ ಎನ್ನುತ್ತಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಡೆವಿಲ್ ಗ್ಯಾಂಗ್‌ಗೆ ಜೀವಾವಧಿಗೂ ಮೀರಿದ ಶಿಕ್ಷೆ ಆಗಲಿದೆ ಎನ್ನಲಾಗಿದೆ. ಜೀವಾವಧಿ ಶಿಕ್ಷೆ ಅಂದರೆ ಆರೋಪಿ ಸಾಯೋವರೆಗೂ ಜೈಲಿನಲ್ಲೆ ಇಡುವುದು. ಅದರಲ್ಲಿಯೂ ಕೆಲವೊಮ್ಮೆ 14 ವರ್ಷಗಳಲ್ಲಿ ಆರೋಪಿಗಳನ್ನ ಬಿಡುಗಡೆ ಮಾಡಲಾಗುತ್ತೆ. ಕೆಲವೊಮ್ಮೆ 20 ವರ್ಷಗಳ ನಂತರವೂ ಬಿಡುಗಡೆ ಮಾಡಲಾಗುತ್ತೆ. ಅದು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಕ್ಯಾಬಿನೆಟ್ ನಲ್ಲಿ ತೀರ್ಮಾನ ಮಾಡಿ ಬಳಿಕ ಬಿಡುಗಡೆ ಮಾಡಲಾಗುತ್ತದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೀವಾವಧಿಗೂ ಮೀರಿದ ಶಿಕ್ಷೆ ಆಗೋ ಸಾಧ್ಯತೆ ಬಹುತೇಕ ಫಿಕ್ಸ್‌ ಅನ್ನುತ್ತಿದ್ದಾರೆ ಕಾನೂನು ತಜ್ಞರು. ಶಿಕ್ಷೆಯಿಂದ ಯಾರು ಎಸ್ಕೇಫ್ ಆಗೋ ಚಾನ್ಸೆ ಇಲ್ಲ ಅಂತಾರೆ ಕಾನೂನು ತಜ್ಞರು.

ಇದನ್ನೂ ಓದಿ: Actor Darshan: ದರ್ಶನ್‌ಗೆ ಇಂದು ಮತ್ತೊಂದು ಅಗ್ನಿ ಪರೀಕ್ಷೆ; ಎರಡನೇ ಬಾರಿ ಪರಪ್ಪನ ಅಗ್ರಹಾರ ಜೈಲು ಸೇರುತ್ತಾರಾ ಚಾಲೆಂಜಿಂಗ್‌ ಸ್ಟಾರ್‌?

ನಟ ದರ್ಶನ್ ಜತೆಗೆ ವಿನಯ್, ಪ್ರದೋಶ್ ಮತ್ತು ಧನರಾಜ್ ಕಸ್ಟಡಿ ಅಂತ್ಯವಾಗುತ್ತಿದ್ದು, ಪೊಲೀಸರು ಸಂಜೆ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಪ್ರಕರಣ ಸಂಬಂಧ ಜೂನ್ 11ರಂದು ಕಾಮಾಕ್ಷಿಪಾಳ್ಯ ಪೊಲೀಸರು ಮೈಸೂರಿನಲ್ಲಿ ದರ್ಶನ್‌ನನ್ನು ಬಂಧಿಸಿದ್ದರು. ಈಗಾಗಲೇ 12 ದಿನ ಪೊಲೀಸ್ ಕಸ್ಟಡಿಯಲ್ಲಿ ಕಳೆದಿರುವ ದರ್ಶನ್ ಮತ್ತು ಇನ್ನಿತರ ಆರೋಪಿಗಳಿಗೆ ಕೋರ್ಟ್‌ ಬಹುತೇಕ ನ್ಯಾಯಾಂಗ ಬಂಧನದ ಆದೇಶ ನೀಡುವ ಸಾಧ್ಯತೆ ಇದೆ.

ಪೊಲೀಸರಿಂದ ಸಿದ್ಧತೆ

ದರ್ಶನ್ ಸೇರಿ 4 ಜನ ಬಂಧಿತ ಆರೋಪಿಗಳನ್ನು ಇಂದು ಕೋರ್ಟ್‌ಗೆ ಹಾಜರು ಪಡಿಸಲಿರುವ ಪೊಲೀಸರು ಅದಕ್ಕಾಗಿ ಸಿದ್ಧತೆ ಕೈಗೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಸಂಬಂಧ ಕಳೆದ 12 ದಿನಗಳಿಂದ ಎಲ್ಲ 17 ಆರೋಪಿಗಳ ವಿಚಾರಣೆ ನಡೆಸಿರುವ ಪೊಲೀಸರು ಈಗಾಗಲೇ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ನಂತರ ಕೃತ್ಯಕ್ಕೆ ಸಂಬಂಧಿಸಿದ ಹಲವೆಡೆ ಮಹಜರು ಪ್ರಕ್ರಿಯೆ ನಡೆಸಿ, ಕೊಲೆಗೆ ಸಂಬಂಧಿಸಿದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನೂ ಸಂಗ್ರಹಿಸಿದ್ದಾರೆ.

ಕೊಲೆ ನಡೆದ ಆರ್.ಆರ್‌.ನಗರ ಶೆಡ್ ಬಳಿಯಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ, ಮೃತದೇಹ ಪತ್ತೆಯಾದ ಜಾಗ, ಆರೋಪಿಗಳು ಚಲನವಲನ ನಡೆಸಿದ್ದ ಜಾಗಗಳಲ್ಲಿನ ಸಾಕ್ಷ್ಯ ಕಲೆ ಹಾಕಿದ್ದಾರೆ. ಈಗಾಗಲೇ ಕೃತ್ಯಕ್ಕೆ ಬಳಸಿದ್ದ ವಸ್ತುಗಳು ಸೀಜ್ ಮಾಡಲಾಗಿದೆ. ಕೃತ್ಯ ನಡೆದ ದಿನ ಆರೋಪಿಗಳ ಸಂಪರ್ಕದಲ್ಲಿದ್ದ ನಟ ಚಿಕ್ಕಣ್ಣ, ದರ್ಶನ್ ಪತ್ನಿ ವಿಜಯಲಕ್ಷ್ಮೀ ಮತ್ತಿತರರ ಹೇಳಿಕೆಗಳನ್ನೂ ದಾಖಲಿಸಲಾಗಿದೆ.

ಡಿ ಗ್ಯಾಂಗ್ ಕೊಲೆಯ ಆರೋಪ ಸಾಬೀತು ಪಡಿಸಲು ಪ್ರತಿಯೊಂದು ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಬಟ್ಟೆಗಳು, ರಕ್ತ ಮತ್ತು ಕೂದಲಿನ ಮಾದರಿ ಪಡೆದು ಎಫ್ಎಸ್ಎಲ್‌ಗೆ ರವಾನಿಸಿದ್ದಾರೆ. ಆರೋಪಿಗಳ ಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದ್ದು, ಮೊಬೈಲ್ ಡೇಟಾ ರಿಟ್ರೀವ್ ಮಾಡಿ ತನಿಖೆ ಕೈಗೊಳ್ಳಲಾಗಿದೆ. ತನಿಖೆ ವಿಚಾರವಾಗಿ ಖುದ್ದು ಕಮಿಷನರ್ ದಯಾನಂದ್ ನಿಗಾ ವಹಿಸಿದ್ದು, ಪ್ರತಿದಿನ ತನಿಖೆ ‌ವರದಿ ಪಡೆದು‌ ಚಾರ್ಜ್ ಶೀಟ್ ತಯಾರಿಕೆಗೆ ಸಿದ್ಧತೆ ನಡೆಸಿದ್ದಾರೆ. ದರ್ಶನ್‌ ಜೈಲಿಗೆ ಹೋಗುತ್ತಾರಾ ಎನ್ನುವ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Actor Dhanush: ಧನುಷ್‌ ಬರ್ತ್‌ಡೇ ಸ್ಪೆಷಲ್‌; ‘ಕುಬೇರ’ ಸಿನಿಮಾದಿಂದ ಲುಕ್‌ ಪೋಸ್ಟರ್‌ ಔಟ್‌!

Actor Dhanush: ‘ಕುಬೇರ’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ, ನಾಗಾರ್ಜುನ, ಸಂದೀಪ್ ಕಿಶನ್ ಮತ್ತು ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸೂಪರ್ ಸ್ಟಾರ್ ಧನುಷ್ ನಟನೆಯ ತೆಲುಗು ನಿರ್ದೇಶಕ ಶೇಖರ್ ಕಮ್ಮುಲ ಆಕ್ಷನ್ ಕಟ್ ಹೇಳುತ್ತಿರುವ ʻಕುಬೇರʼ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ.

VISTARANEWS.COM


on

Actor Dhanush new poster from Kubera unveiled on his birthday
Koo

ಬೆಂಗಳೂರು: ಕಾಲಿವುಡ್‌ ನಟ ಧನುಷ್ (Actor Dhanush) ಅವರ ಮುಂಬರುವ ಚಿತ್ರ ‘ಕುಬೇರ’ ಸಿನಿಮಾ ಬಿಗ್‌ ಅಪ್‌ಡೇಟ್‌ ಕೊಟ್ಟಿದೆ. ಇಂದು ಧನುಷ್‌ ಅವರ ಜನುಮದಿನ. 41ನೇ ಹುಟ್ಟುಹಬ್ಬದಂದು ನಟನ ಹೊಸ ಪೋಸ್ಟರ್ ಔಟ್‌ ಆಗಿದೆ. ಧನುಷ್‌ ಅವರ ಹೊಸ ಲುಕ್‌ ಕಂಡು ಸಿನಿರಸಿಕರಲ್ಲಿ ನಿರೀಕ್ಷೆ ಹೆಚ್ಚಾಗಿದೆ.

ಧನುಷ್ ಅವರು ತಮ್ಮ ಮುಂಬರುವ ಚಿತ್ರ ‘ಕುಬೇರ’ ಹೊಸ ಪೋಸ್ಟರ್‌ನಲ್ಲಿ ಸ್ವಲ್ಪ ಡಲ್‌ ಆಗಿ ಕಂಡಿದ್ದಾರೆ. ʻಕುಬೇರ’ ಧನುಷ್ ಅವರ 51 ನೇ ಚಿತ್ರವಾಗಿದೆ. , ‘ಕುಬೇರ’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ, ನಾಗಾರ್ಜುನ, ಸಂದೀಪ್ ಕಿಶನ್ ಮತ್ತು ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸೂಪರ್ ಸ್ಟಾರ್ ಧನುಷ್ ನಟನೆಯ ತೆಲುಗು ನಿರ್ದೇಶಕ ಶೇಖರ್ ಕಮ್ಮುಲ ಆಕ್ಷನ್ ಕಟ್ ಹೇಳುತ್ತಿರುವ ʻಕುಬೇರʼ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಶ್ರೀ ವೆಂಕಟೇಶ್ವರ ಸಿನಿಮಾಸ್ ಎಲ್‌ಎಲ್‌ಪಿ ಮತ್ತು ಅಮಿಗೋಸ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಬ್ಯಾನರ್‌ನಡಿಯಲ್ಲಿ ಸುನೀಲ್ ನಾರಂಗ್ ಮತ್ತು ಪುಸ್ಕುರ್ ರಾಮ್ ಮೋಹನ್ ರಾವ್ ಈ ಚಿತ್ರವನ್ನು ಜಂಟಿಯಾಗಿ ನಿರ್ಮಿಸಿದ್ದಾರೆ. ‘ಶೇಖರ್ ಕಮ್ಮುಲ ಅವರ ಕುಬೇರ’ ಒಂದು ಪ್ಯಾನ್-ಇಂಡಿಯಾ ಬಹುಭಾಷಾ ಚಿತ್ರವಾಗಿದ್ದು, ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗಿದೆ. ಸದ್ಯ ಚಿತ್ರದ ಚಿತ್ರೀಕರಣ ಹೈದರಾಬಾದ್‌ನಲ್ಲಿ ನಡೆಯುತ್ತಿದೆ.

ಈಗಾಗಲೇ ಧನುಷ್ ಅವರ ರಾಯನ್‌ ಸಿನಿಮಾ ತೆರೆ ಕಂಡಿದೆ. ಧನುಷ್‌ ಬರೆದು ನಿರ್ದೇಶಿಸಿರುವ ಸನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ʻರಾಯನ್ʼ ಸಿನಿಮಾವನ್ನು ಕಲಾನಿಧಿ ಮಾರನ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಸಿನಿಮಾ ಜುಲೈ 26ಕ್ಕೆ ಚಿತ್ರ ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಿದೆ.

ಇದನ್ನೂ ಓದಿ: Actor Dhanush: ಸಿನಿಮಾ ಬಿಡುಗಡೆಗೂ ಮುನ್ನ ದೇವರ ಮೊರೆ ಹೋದ ನಟ ಧನುಷ್

ಧನುಷ್ (Actor Dhanush) ಅವರ ಎರಡನೇ ನಿರ್ದೇಶನದ ಸಿನಿಮಾ ರಾಯನ್‌’ (Raayan). ಧನುಷ್ ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಈ ಸಿನಿಮಾಗಾಗಿ ನಟ ತಲೆಯನ್ನು ಬೋಳಿಸಿಕೊಂಡಿದ್ದರು. 2017 ರಲ್ಲಿ ತೆರೆಕಂಡ ‘ಪಾ ಪಾಂಡಿ’ ಚಿತ್ರದ ಮೂಲಕ ಧನುಷ್ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ಈ ಚಿತ್ರಕ್ಕಾಗಿ ಫಿಲ್ಮ್‌ಫೇರ್‌ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇದೀಗ ʻರಾಯನ್‌ʼ ಅವರ ಎರಡನೇ ನಿರ್ದೇಶನದ ಸಿನಿಮಾ. ಧನುಷ್‌ ಕೊನೆಯದಾಗಿ ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲಿ ಕಾಣಿಸಿಕೊಂಡರು. ಅರುಣ್ ಮಾಥೇಶ್ವರನ್ ನಿರ್ದೇಶನದ ಈ ಚಿತ್ರದಲ್ಲಿ ಶಿವ ರಾಜ್‌ಕುಮಾರ್, ಪ್ರಿಯಾಂಕಾ ಮೋಹನ್, ನಿವೇದಿತಾ ಸತೀಶ್, ಜಾನ್ ಕೊಕ್ಕೆನ್ ಮತ್ತು ಮೂರ್ ಪ್ರಮುಖ ಪಾತ್ರಗಳಲ್ಲಿದ್ದರು.

Continue Reading

ಬಾಲಿವುಡ್

Ranveer Singh:‌ ಒಂದೇ ಸಿನಿಮಾದಲ್ಲಿ ಬಾಲಿವುಡ್‌ನ ಐದು ಸ್ಟಾರ್ಸ್; ರಣವೀರ್ ಸಿಂಗ್ ಹೊಸ ಸಿನಿಮಾ ಅನೌನ್ಸ್!

Ranveer Singh: ಆದಿತ್ಯ ತಮ್ಮ ಎರಡನೇ ಪ್ರಯತ್ನಕ್ಕೆ ದೊಡ್ಡ ದೊಡ್ಡ ಸ್ಟಾರ್‌ಗಳನ್ನು ಒಂದ್ಕಡೆ ಸೇರಿಸಿದ್ದಾರೆ. ಈ ಮೂಲಕ ಕುತೂಹಲವನ್ನೂ ಕೆರಳಿಸಿದ್ದಾರೆ. ಜಿಯೋ ಸ್ಟುಡಿಯೋಸ್‌ನಿಂದ ಜ್ಯೋತಿ ದೇಶಪಾಂಡೆ, ಲೋಕೇಶ್ ಧಾರ್ ಮತ್ತು ಆದಿತ್ಯ ಧಾರ್ ಅವರ ಬ್ಯಾನರ್ B62 ಸ್ಟುಡಿಯೋಸ್ ಅಡಿಯಲ್ಲಿ ನಿರ್ಮಾಣವಾಗಲಿದೆ.

VISTARANEWS.COM


on

Ranveer Singh up for new film directed by Aditya Dhar
Koo

ಬೆಂಗಳೂರು: ರಣವೀರ್ ಸಿಂಗ್ (Ranveer Singh) ಅಭಿನಯದ ಸಾಲು ಸಾಲು ಸಿನಿಮಾಗಳು ಶುರುವಾದಷ್ಟೇ ಬೇಗ ನಿಂತು ಹೋಗುತ್ತಿದ್ದವು. ಮಾತ್ರವಲ್ಲ ಇತ್ತೀಚೆಗೆ ಒಂದು ಸಿನಿಮಾಗಳು ಹಿಟ್‌ ಕಂಡಿಲ್ಲ. ಕರಣ್ ಜೋಹರ್ ನಿರ್ಮಾಣದ ತಖ್ತ್‌ , ಶಂಕರ್ ನಿರ್ದೇಶನದಲ್ಲಿ ಬರಬೇಕಿದ್ದ ʻಅನ್ನಿಯನ್ʼ ಚಿತ್ರದ ರಿಮೇಕ್, ಹನುಮಾನ ನಿರ್ದೇಶಕ ಪ್ರಶಾಂತ್ ವರ್ಮಾ ನಿರ್ದೇಶನದ ʻರಾಕ್ಷಸ್ʼ, ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ʻಬೈಜೂ ಬವರಾʼ, ಹೀಗೆ ಅನೇಕ ಸಿನಿಮಾಗಳು ಇನ್ನೇನು ಪ್ರಾರಂಭವಾಗಬೇಕು ಎನ್ನುವಷ್ಟರಲ್ಲಿ ನಿಂತು ಹೋದವು. ಇದೀಗ ನಟ ಹೊಸ ಸಿನಿಮಾ ಅನೌನ್ಸ್‌ ಮಾಡಿ ಸಿಹಿ ಸುದ್ದಿಯನ್ನು ನೀಡಿದ್ದಾರೆ.

ಈ ಮೆಗಾ ಸಹಯೋಗದಲ್ಲಿ, ರಣವೀರ್ ಸಿಂಗ್, ಸಂಜಯ್ ದತ್, ಆರ್ ಮಾಧವನ್, ಅಕ್ಷಯ್ ಖನ್ನಾ ಮತ್ತು ಅರ್ಜುನ್ ರಾಂಪಾಲ್ ಇರುವುದು ವಿಶೇಷ. ಇದನ್ನು ‘ಯುಆರ್‌ಐ: ದಿ ಸರ್ಜಿಕಲ್ ಸ್ಟ್ರೈಕ್’ ಖ್ಯಾತಿಯ ಆದಿತ್ಯ ಧರ್ ನಿರ್ದೇಶಿಸಲಿದ್ದಾರೆ.

ರಣವೀರ್ ಸಿಂಗ್, ತಮ್ಮ ಮುಂಬರುವ ಚಲನಚಿತ್ರವನ್ನು ಘೋಷಿಸಿ, “ಇದು ನನ್ನ ಅಭಿಮಾನಿಗಳಿಗಾಗಿ, ನನ್ನೊಂದಿಗೆ ತುಂಬಾ ತಾಳ್ಮೆಯಿಂದಿರುವ ನಿಮ್ಮೆಲ್ಲರನ್ನೂ ಪ್ರೀತಿಸುತ್ತೇನೆ. ನಾನು ನಿಮಗೆ ಭರವಸೆ ನೀಡುತ್ತೇನೆ. ಈ ಬಾರಿ ಹಿಂದೆಂದೂ ಇಲ್ಲದಂತಹ ಸಿನಿಮೀಯ ಅನುಭವವನ್ನು ನಾನು ನಿಮಗೆ ನೀಡುತ್ತೇನೆ. ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರಲಿʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಕುಟುಂಬಕ್ಕೆ ಹಣ ಸಹಾಯ ಮಾಡಿ, ದರ್ಶನ್‌ ಪರವಾಗಿ ವಾದ ಮಾಡಿದ ನಟ ಗಣೇಶ್ ರಾವ್!

ಆದಿತ್ಯ ಧರ್, ನಟಿ ಯಾಮಿ ಗೌತಮ್ ಅವರನ್ನು ವಿವಾಹವಾದರು, ‘URI: ದಿ ಸರ್ಜಿಕಲ್ ಸ್ಟ್ರೈಕ್’ ಮೂಲಕ 350-ಕೋಟಿ ಗಳಿಕೆಯ ಚಿತ್ರವನ್ನು ನೀಡಿದ ಮೊದಲ ಚೊಚ್ಚಲ ನಿರ್ದೇಶಕರಾಗಿ ಇತಿಹಾಸ ನಿರ್ಮಿಸಿದರು. ಅವರ ಹಿಟ್ ರೋಮ್-ಕಾಮ್, ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ನಂತರ ಅವರ ಮುಂದಿನ ಪ್ರಮುಖ ಯೋಜನೆಯಲ್ಲಿ ರಣವೀರ್ ಸಿಂಗ್ ನಟಿಸಿದ್ದಾರೆ.

ಆದಿತ್ಯ ತಮ್ಮ ಎರಡನೇ ಪ್ರಯತ್ನಕ್ಕೆ ದೊಡ್ಡ ದೊಡ್ಡ ಸ್ಟಾರ್‌ಗಳನ್ನು ಒಂದ್ಕಡೆ ಸೇರಿಸಿದ್ದಾರೆ. ಈ ಮೂಲಕ ಕುತೂಹಲವನ್ನೂ ಕೆರಳಿಸಿದ್ದಾರೆ. ಜಿಯೋ ಸ್ಟುಡಿಯೋಸ್‌ನಿಂದ ಜ್ಯೋತಿ ದೇಶಪಾಂಡೆ, ಲೋಕೇಶ್ ಧಾರ್ ಮತ್ತು ಆದಿತ್ಯ ಧಾರ್ ಅವರ ಬ್ಯಾನರ್ B62 ಸ್ಟುಡಿಯೋಸ್ ಅಡಿಯಲ್ಲಿ ನಿರ್ಮಾಣವಾಗಲಿದೆ.

Continue Reading

ಸಿನಿಮಾ

Naveen Sajju: ಗುಡ್‌ ನ್ಯೂಸ್‌ ಕೊಟ್ಟ ʻಚುಕ್ಕಿತಾರೆ ಸೀರಿಯಲ್‌ʼ ನಟ ನವೀನ್‌ ಸಜ್ಜು: ಶುಭ ಕೋರಿದ ಫ್ಯಾನ್ಸ್‌!

Naveen Sajju: ಬಿಗ್‌ ಬಾಸ್‌ ಖ್ಯಾತಿಯ ಅಕ್ಷತಾ ಪಾಂಡವಪುರ ಹಾಗೂ ಪ್ರಸನ್ನ ಸಾಗರ ಅವರ ವಸ್ತ್ರ ವಿನ್ಯಾಸ ಲೋ ನವೀನ ಚಿತ್ರಕ್ಕಿದೆ. ಎನ್‌ ಎಸ್‌-ನವೀನ್‌ ಸಜ್ಜು ಸ್ಟುಡಿಯೋ ಬ್ಯಾನರ್‌ ಅಡಿ ತಯಾರಾರಗುತ್ತಿರುವ ಸಿನಿಮಾಗೆ ಅನಿವಾಸಿ ಭಾರತೀಯರಾದ ವರ್ಜೀನಿಯಾ ನಿವಾಸಿ ಕೀರ್ತಿ ಸ್ವಾಮಿ ಬಂಡವಾಳ ಹೂಡಿದ್ದಾರೆ.

VISTARANEWS.COM


on

Naveen Sajju debuts movie titled first look out
Koo

ಬೆಂಗಳೂರು: ತಮ್ಮ ಕಂಠ ಹಾಗೂ ಗಾಯನದ ಮೂಲಕ ಕನ್ನಡ ಸಿನಿ ರಸಿಕರು ಹಾಗೂ ಸಂಗೀತ ಪ್ರೇಮಿಗಳ ಮನ ಗೆದ್ದಿರುವ ಲೂಸಿಯಾ ಖ್ಯಾತಿಯ ಗಾಯಕ ನವೀನ್‌ ಸಜ್ಜು (Naveen Sajju) ನಾಯಕ ನಟನಾಗಿ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ನವೀನ್ ಹೊಸ ಪಯಣಕ್ಕೆ ಕನ್ನಡ ಚಿತ್ರರಂಗದ ತಾರೆಯರು ಸಾಥ್ ಕೊಟ್ಟಿದ್ದಾರೆ. ʻಲೋ ನವೀನʼ ಸಿನಿಮಾದ ಟೈಟಲ್ ನ್ನು ಸ್ಯಾಂಡಲ್‌ ವುಡ್‌ ಹಾಗೂ ಕಿರುತೆರೆಯ 100 ಜನ ನಟ- ನಟಿಯರು ತಮ್ಮ, ತಮ್ಮ ಸೋಷಿಯಲ್‌ ಮೀಡಿಯಾಗಳ ಮೂಲಕ ನವೀನ್ ಸಜ್ಜು ಚೊಚ್ಚಲ ಸಿನಿಮಾಗೆ ಶುಭ ಕೋರಿದ್ದಾರೆ.

ಲೋ ನವೀನ, ಹಳ್ಳಿ ಸೊಗಡಿನ ಚಿತ್ರವಾಗಿದ್ದು. ಸ್ವತಃ ನವೀನ್‌ ಸಜ್ಜು ಅವರೇ ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಧನುರ್ದಾರಿ ಪವನ್‌ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಚಿತ್ರಕ್ಕೆ ಮೂರು ಜನ ಸಿನಿಮಾಟೋಗ್ರಾಫರ್‌ ಗಳಿರುವುದು ವಿಶೇಷ. ಬಿಗ್‌ ಬಾಸ್‌ ಖ್ಯಾತಿಯ ಅಕ್ಷತಾ ಪಾಂಡವಪುರ ಹಾಗೂ ಪ್ರಸನ್ನ ಸಾಗರ ಅವರ ವಸ್ತ್ರ ವಿನ್ಯಾಸ ಲೋ ನವೀನ ಚಿತ್ರಕ್ಕಿದೆ. ಎನ್‌ ಎಸ್‌-ನವೀನ್‌ ಸಜ್ಜು ಸ್ಟುಡಿಯೋ ಬ್ಯಾನರ್‌ ಅಡಿ ತಯಾರಾರಗುತ್ತಿರುವ ಸಿನಿಮಾಗೆ ಅನಿವಾಸಿ ಭಾರತೀಯರಾದ ವರ್ಜೀನಿಯಾ ನಿವಾಸಿ ಕೀರ್ತಿ ಸ್ವಾಮಿ ಬಂಡವಾಳ ಹೂಡಿದ್ದಾರೆ.

ಇದನ್ನೂ ಓದಿ: Naveen Sajju | ನವೆಂಬರ್‌ನಲ್ಲಿ ಬರ್ತಿದೆ ನವೀನ್ ಸಜ್ಜು ನಟನೆಯ ಮ್ಯಾನ್ಷನ್ ಹೌಸ್ ಮುತ್ತು

ಮೈಸೂರು, ಮಂಡ್ಯ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣಕ್ಕೆ ಯೋಜನೆ ಹಾಕಿಕೊಂಡಿದ್ದು, ಸಹ ನಟರು ಹಾಗು ತಂತ್ರಜ್ಞರ ಪಟ್ಟಿ ಅಂತಿಮಗೊಂಡಿದೆ. ಚಿತ್ರದ ನಾಯಕಿಯಾಗಿ ಹೊಸಬರನ್ನು ಈ ಚಿತ್ರದ ಮೂಲಕ ಚಂದನವನಕ್ಕೆ ಚಿತ್ರತಂಡ ಪರಿಚಯ ಮಾಡಲಿದೆ. ನವೀನ್ ಸಜ್ಜು ಮುಖ್ಯಪಾತ್ರದಲ್ಲಿ ನಟಿಸಿರುವ ಮ್ಯಾನ್‌ ಷನ್‌ ಹೌಸ್‌ ಮುತ್ತು ಚಿತ್ರವು ಬಿಡುಗಡೆಗೆ ಸಿದ್ದಗೊಂಡಿರುವ ಹೊತ್ತಿನಲ್ಲೇ ಲೋ ನವೀನ ಚಿತ್ರ ಸೆಟ್ಟೇರಿದೆ. ಕಲರ್ಸ್‌ ಕನ್ನಡದ ಚುಕ್ಕಿ ತಾರೆ ಧಾರಾವಾಹಿಯಲ್ಲಿ ಮಾಗಡಿ ರೋಡ್‌ ಮಲ್ಲಿಕಾರ್ಜುನನಾಗಿ ತಮ್ಮ ನಟನಾ ಕೌಶಲ್ಯದಿಂದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ಸಿಂಗರ್ ನವೀನ್‌ ಸಜ್ಜು ಬೆಳ್ಳಿ ತೆರೆಯ ಮೂಲಕ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Darshan: ರೇಣುಕಾಸ್ವಾಮಿ ಕುಟುಂಬಕ್ಕೆ ಹಣ ಸಹಾಯ ಮಾಡಿ, ದರ್ಶನ್‌ ಪರವಾಗಿ ವಾದ ಮಾಡಿದ ನಟ ಗಣೇಶ್ ರಾವ್!

Actor Darshan: ‘ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ರಾಜಕಾರಣಿ ಶಂಕರೇಗೌಡ ಪಾತ್ರದಲ್ಲಿ ನಟ ಗಣೇಶ್ ರಾವ್ ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿ ದರ್ಶನ್ ಪರವಾಗಿ ಮಾತನಾಡಿದರು. ಜತೆಗೆ ರೇಣುಕಾಸ್ವಾಮಿ ಕುಟುಂಬಕ್ಕೆ ಗಣೇಶ್ ರಾವ್ ಹಣ ಸಹಾಯ ಮಾಡಿದರು.ಮೃತ ರೇಣುಕಾಸ್ವಾಮಿ ಅವರ ಮನೆಗೆ ನಟ ಗಣೇಶ್ ರಾವ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿದ ನಟ ಗಣೇಶ್ ರಾವ್‌, ರೇಣುಕಾಸ್ವಾಮಿ ಅವರ ಕುಟುಂಬಸ್ಥರ ಮುಂದೆಯೇ ದರ್ಶನ್ ಪರವಾಗಿ ಮಾತನಾಡಿದರು.

VISTARANEWS.COM


on

Actor Darshan Ganesh Rao Visits Renukaswamy Family and spport In Chitradurga
Koo

ಬೆಂಗಳೂರುಚಾಲೆಂಜಿಂಗ್ ಸ್ಟಾರ್‌ ದರ್ಶನ್ (Actor Darshan) ಜೈಲು ಸೇರಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ದರ್ಶನ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನು ಹಲವು ನಾಯಕರು, ಸೆಲೆಬ್ರಿಟಿಗಳು ರೇಣುಕಾ ಸ್ವಾಮಿ ಕುಟುಂಬಕ್ಕೆ ಸಹಾಯವನ್ನು ಮಾಡಿದ್ದಾರೆ. ನಿನ್ನೆಯಷ್ಟೇ ವಿನೋದ್‌ ರಾಜ್‌ ಅವರು ಚಿತ್ರದುರ್ಗಕ್ಕೆ ಹೋಗಿ ಸಂತ್ರಸ್ತ ರೇಣುಕಾ ಸ್ವಾಮಿ ಕುಟುಂಬವನ್ನು ಭೇಟಿ ಮಾಡಿ ಸಾಂತ್ವಾನ ಹೇಳುವ ಜತೆಗೆ 1 ಲಕ್ಷ ರೂಪಾಯಿ ಹಣ ಸಹಾಯವನ್ನು ಸಹ ಮಾಡಿದ್ದರು. ಇದೀಗ   ‘ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ರಾಜಕಾರಣಿ ಶಂಕರೇಗೌಡ ಪಾತ್ರದಲ್ಲಿ ನಟ ಗಣೇಶ್ ರಾವ್ (Ganesh Rao) ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿ ದರ್ಶನ್ ಪರವಾಗಿ ಮಾತನಾಡಿದರು. ಜತೆಗೆ ರೇಣುಕಾಸ್ವಾಮಿ ಕುಟುಂಬಕ್ಕೆ ಗಣೇಶ್ ರಾವ್ ಹಣ ಸಹಾಯ ಮಾಡಿದರು.

ಮೃತ ರೇಣುಕಾಸ್ವಾಮಿ ಅವರ ಮನೆಗೆ ನಟ ಗಣೇಶ್ ರಾವ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿದ ನಟ ಗಣೇಶ್ ರಾವ್‌, ರೇಣುಕಾಸ್ವಾಮಿ ಅವರ ಕುಟುಂಬಸ್ಥರ ಮುಂದೆಯೇ ದರ್ಶನ್ ಪರವಾಗಿ ಮಾತನಾಡಿದರು.

ಗಣೇಶ್ ರಾವ್ ಮಾತನಾಡಿ ʻʻನಾವು ಯಾರನ್ನೂ ಸಮರ್ಥಿಸಿಕೊಳ್ಳುತ್ತಿಲ್ಲ. ದರ್ಶನ್‌ ಜತೆ ನಾವು 13 ಸಿನಿಮಾಗಳನ್ನು ಮಾಡಿದ್ದೇವೆ. ಆ ಮನುಷ್ಯ ಅಷ್ಟು ಕ್ರೂರಿ ಅಲ್ಲ. ಸೆಲೆಬ್ರಿಟಿ ಆದ ಕಾರಣ ಹೆಸರು ಮುನ್ನಲೆಗೆ ಬರುತ್ತಿದೆ. ನನಗೆ ಆತ್ಮ ಸಾಕ್ಷಿ ಹೇಳುತ್ತ ಇದೆ. ದರ್ಶನ್‌ ಅವರು ಆ ಮಟ್ಟಕ್ಕೆ ಇಳಿಯಲು ಸಾಧ್ಯವಿಲ್ಲ. ಅವರ ಜತೆ ಇದ್ದ ಸಂಗಡಿಗರು ಹೀಗೆ ಮಾಡಿದ್ದರಿಂದ ಅಪವಾಧ ಅವರ ಮೇಲೆ ಹೀಗೆ ಬಂದಿದೆ. ಇಲ್ಲಿ ಬಿಂಬಿಸುತ್ತಿರುವುದು ದರ್ಶನ್‌ ಅವರನ್ನು. ನ್ಯಾಯಾಲಕ್ಕೆ ಮುಂಚೆನೆ ಅವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ ಬಿಟ್ಟಿದ್ದಾರೆ. ತಪ್ಪು ಮಾಡಿದರೆ ಶಿಕ್ಷೆ ಅನುಭವಿಸಲಿ. ಆದರೆ ತಪ್ಪು ಮಾಡದೇನೇ ಅಪವಾಧ ಹೊರಿಸುವುದು ಸರಿಯಲ್ಲ. ಕೆಲವರು ಅವರೇ ಕಣ್ಣಾರೆ ನೋಡಿರೋ ತರ ಮಾತನಾಡುತ್ತಾರೆ. ಈ ದುರ್ಘಟನೆ ನಡೆಯಬಾರದಿತ್ತು. ರೇಣುಕಾಸ್ವಾಮಿ ಮನೆಯವರು ನೋವು ಅನುಭವಿಸುತ್ತಿದ್ದಾರೆ. ಅವರಿಗೆ ದುಃಖ ಭರಿಸುವ ಶಕ್ತಿಯನ್ನ ದೇವರು ಕೊಡಲಿ. ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ. ನ್ಯಾಯಾಲಯದ ಮೇಲೆ ನಂಬಿಕೆ ಇದೆ. ಮಾನವೀಯತೆ ದೃಷ್ಟಿಯಿಂದ ನೊಂದಿರುವ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದಿದ್ವಿʼʼ ಎಂದರು.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಇದಕ್ಕೂ ಮುಂಚೆ ಮುಂಚೆ ಚಿತ್ರದುರ್ಗಕ್ಕೆ ತೆರಳಿದ ನಟ ವಿನೋದ್ ರಾಜ್ ಮಾತನಾಡಿ, ‘ಮನೆಗೆ ಆಧಾರ ಸ್ತಂಭವಾದ ಮಗನನ್ನು ಕಳೆದುಕೊಂಡಿದ್ದಾರೆ. ಕುಟುಂಬ ಪರಿತಪಿಸುತ್ತಿರುವ ಸ್ಥಿತಿ ಕಂಡು ಕರಳುಕಿತ್ತು ಬರುತ್ತಿದೆ. ಜೀವನದಲ್ಲಿ ಮನುಷ್ಯ ಹೇಗೆ ಬಾಳಬೇಕು, ಹೇಗೆ ನಡೆದುಕೊಳ್ಳಬೇಕು, ಯಾವ ದಿಕ್ಕಿನಲ್ಲಿ ಮಾನವೀಯತೆ, ಮನುಷತ್ವ ಸಾಗುತ್ತಿದೆ, ಮನುಷ್ಯತ್ವ ಇದೆಯಾ ಎನ್ನುವುದು ನಮ್ಮನ್ನೇ ಮುಟ್ಟಿಕೊಂಡು ನೋಡುವಂತಹ ಕಾಲ ಬಂದಿದೆ. ಜೀವನ ಇಡೀ ಸಂಪದಾನೆ, ಹೆಸರು ಮಾಡುವುದು ಅಲ್ಲವೇ ಅಲ್ಲ. ಜೀವನ ಇಡಿ ಜೀವಗಳ ಬಗ್ಗೆ ಕಾಳಜಿ ತೆಗೆದುಕೊಂಡು ಬದುಕಬೇಕು. ಪ್ರತಿಯೊಬ್ಬರ ಜೀವನದಲ್ಲೂ ಜೀವಗಳಿವೆ. ಜೀವರಾಶಿಗಳನ್ನ ಭಗವಂತ ತಂದೆ ತಾಯಿ ರೂಪದಲ್ಲಿ ಸೃಷ್ಟಿ ಮಾಡಿರುತ್ತಾನೆ. ಅವರೂ ಕೂಡ ಚೆನ್ನಾಗಿ ಇರಬೇಕು ಎಂದು ಬೆಳೆಸುತ್ತಾರೆ. ಎಲ್ಲೋ ಒಂದು ಅತಾಚುರ್ಯ, ಕೆಟ್ಟದ್ದು ನಡೆಯುತ್ತೆ. ಕೆಟ್ಟದ್ದು ಜಾಸ್ತಿ ಆದಾಗ ಇಂತಹ ಪರಿಸ್ಥಿತಿ ಬರುತ್ತದೆ. ಆದರೆ ಇದು ಹೆಚ್ಚಾಗಬಾರದು. ಸಮಾಜದಲ್ಲಿ ಉನ್ನತವಾದ ಸ್ಥಾನ ಎತ್ತರದ ಮಟ್ಟದಲ್ಲಿರುವವರು ವಿವೇಕ ಮರೆಯಬಾರದು, ಅಚಾತುರ್ಯ‌ ನಡೆಯುತ್ತವೆ, ಮುಂದಿನ ತಲೆಮಾರುಗಳು ಹೀಗೆ ಆಗದಂತೆ ಎಚ್ಚರವಹಿಸಬೇಕು, ಮಾಧ್ಯಮ ತಿದ್ದಿಬುದ್ದಿ ಹೇಳಿದಂತೆ ಅನುಸರಿಸಿಕೊಂಡು ಸಾಗಬೇಕು’ ಎಂದು ವಿನೋದ್ ರಾಜ್​ಕುಮಾರ್ ಹೇಳಿದ್ದರು. .

Continue Reading
Advertisement
Dog Meat Controversy
ಕರ್ನಾಟಕ3 mins ago

Dog Meat Controversy: ಬೆಂಗಳೂರಿನಲ್ಲಿ ಸಿಕ್ಕಿರೋದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ: ಗೃಹ ಸಚಿವ ಪರಮೇಶ್ವರ್‌

Actor Dhanush new poster from Kubera unveiled on his birthday
ಟಾಲಿವುಡ್12 mins ago

Actor Dhanush: ಧನುಷ್‌ ಬರ್ತ್‌ಡೇ ಸ್ಪೆಷಲ್‌; ‘ಕುಬೇರ’ ಸಿನಿಮಾದಿಂದ ಲುಕ್‌ ಪೋಸ್ಟರ್‌ ಔಟ್‌!

theft case
ಮೈಸೂರು28 mins ago

Theft case : ಪೊಲೀಸ್‌ ಮನೆಯಲ್ಲಿ ಕಳ್ಳರ ಕಳ್ಳಾಟ; ಚಿನ್ನಾಭರಣ ಕದ್ದು ಎಸ್ಕೇಪ್‌

CH Vijayashankar2
ಪ್ರಮುಖ ಸುದ್ದಿ33 mins ago

CH Vijayashankar: ಬಯಸದೇ ಬಂದ ಭಾಗ್ಯ: ಮೇಘಾಲಯ ನೂತನ ರಾಜ್ಯಪಾಲ ಸಿಎಚ್‌ ವಿಜಯಶಂಕರ್

Paris 2024 Shooting
ಕ್ರೀಡೆ43 mins ago

Paris 2024 Shooting: ಶೂಟಿಂಗ್​ನಲ್ಲಿ ಫೈನಲ್​ ಪ್ರವೇಶಿಸಿದ ರಮಿತಾ ಜಿಂದಾಲ್; ಭಾರತಕ್ಕೆ 2 ಪದಕ ನಿರೀಕ್ಷೆ

Ranveer Singh up for new film directed by Aditya Dhar
ಬಾಲಿವುಡ್44 mins ago

Ranveer Singh:‌ ಒಂದೇ ಸಿನಿಮಾದಲ್ಲಿ ಬಾಲಿವುಡ್‌ನ ಐದು ಸ್ಟಾರ್ಸ್; ರಣವೀರ್ ಸಿಂಗ್ ಹೊಸ ಸಿನಿಮಾ ಅನೌನ್ಸ್!

DK Shivakumar
ಕರ್ನಾಟಕ58 mins ago

DK Shivakumar: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಡಿಸಿಎಂ ಡಿಕೆಶಿ ಮನವಿ

Israel Palestine War
ವಿದೇಶ2 hours ago

Israel Palestine War: ಹಿಜ್ಬುಲ್ಲಾ ದಾಳಿಗೆ 12 ಮಂದಿ ಸಾವು; ಇಸ್ರೇಲ್‌ನಿಂದ ಪ್ರತೀಕಾರದ ಎಚ್ಚರಿಕೆ

hd kumaraswamy muda
ಪ್ರಮುಖ ಸುದ್ದಿ2 hours ago

HD Kumaraswamy: ನಾನು ಮುಡಾದಿಂದ ನಿವೇಶನ ಪಡೆದಿಲ್ಲ, ಸಿಗದಿದ್ದುದೇ ನನ್ನ ಭಾಗ್ಯ: ಎಚ್‌ಡಿ ಕುಮಾರಸ್ವಾಮಿ

Paris Olympics 2024
ಕ್ರೀಡೆ2 hours ago

Paris Olympics 2024: ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಬಾಲರಾಜ್; ಪದಕದ ಆಸೆ ಜೀವಂತ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ21 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ1 day ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ1 day ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ3 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

ಟ್ರೆಂಡಿಂಗ್‌