Kalaburagi News: ರಸಗೊಬ್ಬರ, ಬೀಜ ಕೊರತೆಯಾಗದಂತೆ ಎಚ್ಚರ ವಹಿಸಲು ಪ್ರಿಯಾಂಕ್ ಖರ್ಗೆ ಸೂಚನೆ - Vistara News

ಮಳೆ

Kalaburagi News: ರಸಗೊಬ್ಬರ, ಬೀಜ ಕೊರತೆಯಾಗದಂತೆ ಎಚ್ಚರ ವಹಿಸಲು ಪ್ರಿಯಾಂಕ್ ಖರ್ಗೆ ಸೂಚನೆ

Kalaburagi News: ಕಲಬುರಗಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಪ್ರಸಕ್ತ ಸಾಲಿನ ಮುಂಗಾರು ಬಿತ್ತನೆ ಸಿದ್ಧತೆ ಮತ್ತು ಪ್ರವಾಹ ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

VISTARANEWS.COM


on

Minister Priyank Kharge held a meeting on Monsoon Sowing Preparation and Precautionary Measures for Flood Control
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಲಬುರಗಿ: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದ ಕಾರಣ ಎಲ್ಲೆಡೆ ಒಮ್ಮೆಲೆ ಬಿತ್ತನೆ ಶುರುವಾಗಿದ್ದು, ಬೀಜ ಮತ್ತು ರಸಗೊಬ್ಬರ ಕೊರತೆಯಾಗದಂತೆ ಕೃಷಿ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಪ್ರಸಕ್ತ ಸಾಲಿನ ಮುಂಗಾರು ಬಿತ್ತನೆ ಸಿದ್ಧತೆ ಮತ್ತು ಪ್ರವಾಹ ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಳೆದ ವರ್ಷ ಕಲಬುರಗಿ, ಚಿತ್ತಾಪುರ, ಕಾಳಗಿ ತಾಲೂಕಿನಲ್ಲಿ ಕಳಪೆ ಬೀಜ ವಿತರಣೆಯಾಗಿದ್ದರಿಂದ ರೈತರು ತಮ್ಮ ಬೆಳೆ ಹಾನಿ ಮಾಡಿಕೊಂಡಿದ್ದಾರೆ ಇದು ಪುನರಾವರ್ತನೆಯಾಗಬಾರದು ಎಂದು ತಿಳಿಸಿದರು.

ಈ ಸಲ ಅತಿವೃಷ್ಠಿಯಿಂದ ಬೆಳೆ ಹಾನಿಯಾಗುವ ಸಾಧ್ಯತೆ ಇದ್ದು, ಹಾನಿ ತಡೆಗೆ ಈ ಕೂಡಲೇ ಅಗತ್ಯ ಹಾಗೂ ಸೂಕ್ತ ಕ್ರಮ ಕೈಗೊಳ್ಳುವಂತೆ ಕೃಷಿ ಅಧಿಕಾರಿಗಳಿಗೆ ಸೂಚಿಸಿದ ಸಚಿವ‌ ಪ್ರಿಯಾಂಕ್ ಖರ್ಗೆ, ಹೆಚ್ಚು ಮಳೆಗೆ ಆಗಬಹುದಾದ ಹಾನಿ ತಪ್ಪಿಸಲು ಬಸಿಗಾಲುವೆ ನಿರ್ಮಾಣ ಹಾಗೂ ಬೆಳೆ ವಿಮೆ ಮಾಡಿಸಲು ಗ್ರಾಮೀಣ ಮಟ್ಟದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಕಳೆದ ವರ್ಷ ಬೆಳೆ‌ ವಿಮೆ ಮಾಡಿಸಿದ್ದರಿಂದ ಹೆಚ್ಚಿನ ಪರಿಹಾರ ಸಿಗಲು ಕಾರಣವಾಗಿದೆ. ಈ ಬಾರಿಯೂ ನೊಂದಣಿ ಹೆಚ್ಚಿಸಿ, ಮೈ ಮರೆಯದಿರಿ ಎಂದು ಕೃಷಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಇದನ್ನೂ ಓದಿ: Kalki 2898 AD: ‘ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ ಹೀಗಿದೆ ನೋಡಿ! ಜೂ.27ರಂದು ಚಿತ್ರ ರಿಲೀಸ್

ಪ್ರತಿ ತಾಲೂಕಿನಲ್ಲಿ ಪರವಾನಿಗೆ ಇಲ್ಲದೆ ಬೀಜ, ರಸಗೊಬ್ಬರ, ಕೀಟನಾಶಕ ಮಾರಾಟ ಮಾಡಿದಲ್ಲಿ, ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದಲ್ಲಿ ಅಂತಹ ಕೃಷಿ ಮಳಿಗೆಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಸಂಬಂಧಪಟ್ಟ ತಾಲೂಕಿನ ಸಹಾಯಕ ನಿರ್ದೇಶಕರನ್ನೇ ಇದಕ್ಕೆ ಹೊಣೆಗಾರರನ್ನಾಗಿಸಬೇಕು. ಈ ಸಂಬಂಧ ತಾಲೂಕಾ ಅಧಿಕಾರಿಗಳಿಗೆ ಲಿಖಿತ ಸೂಚನೆ ನೀಡಿ ಎಂದು ಡಿ.ಸಿ ಬಿ. ಫೌಜಿಯಾ ತರನ್ನುಮ್ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ ನೀಡಿದರು.

ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಮಾತನಾಡಿ, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 8.65 ಲಕ್ಷ‌ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದೆ. ಈ ವರ್ಷ ಉತ್ತಮ ಮಳೆಯಾದ ಕಾರಣ ಜಿಲ್ಲೆಯ ಎಲ್ಲೆಡೆ ಇದೂವರೆಗೆ ಶೇ.30 ಬಿತ್ತನೆಯಾಗಿದೆ. ಉಳಿದೆಡೆ ಬಿತ್ತನೆ ಚಟುವಟಿಕೆ ಗರಿಗೆದರಿವೆ. ಕಳೆದ ವರ್ಷದಲ್ಲಿ ಬೆಳೆ‌ ವಿಮೆ, ಸ್ಥಳೀಯ ಪ್ರಕೃತಿ ವಿಕೋಪ ಹಾಗೂ ತೊಗರಿ ನೆಟೆ ರೋಗ ಪ್ರಕರಣದಲ್ಲಿ ಒಟ್ಟಾರೆ 697.34 ಕೋಟಿ ರೂ. ಪರಿಹಾರ ರೈತರಿಗೆ ಸಿಕ್ಕಿದೆ. ಕಳೆದ‌ ಬಾರಿ 1.62 ಲಕ್ಷ ರೈತರು ಬೆಳೆ ವಿಮೆ‌ ಮಾಡಿಸಿದ್ದರು, ಈ ಸಲ 2.50 ಲಕ್ಷಕ್ಕೆ ಹೆಚ್ಚಿಸಲು ಗುರಿ ಹೊಂದಿದ್ದು, ಇದೂವರೆಗೆ 15 ಸಾವಿರಕ್ಕೂ ಹೆಚ್ಚು ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದರು.

ರೈತರಿಗೆ ಸಬ್ಸಿಡಿ ಹಾಗೂ ಪರಿಹಾರ ಕೊಡಿಸುವಲ್ಲಿ ಕೃಷಿ, ಕಂದಾಯ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಶ್ರಮವಹಿಸಿದ್ದೀರಿ. ಸರ್ಕಾರದ‌ ಮಟ್ಟದಲ್ಲಿ ಈ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ. ನಿಮಗೆ ಅಭಿನಂದನೆಗಳು ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಮುಂದುವರೆದು, ಎಫ್.ಐ.ಡಿ. ನೊಂದಣಿ ತೀವ್ರಗೊಳಿಸಬೇಕು. ಇದರಿಂದ ಡಿ.ಬಿ.ಟಿ. ಪರಿಹಾರ ಪಡೆಯಲು ಸಹಕಾರಿಯಾಗಲಿದೆ. ಇದು ಸ್ಪಂದಿಸುವ ಸರ್ಕಾರ ಎಂಬುದನ್ನು ಅರಿತಿರುವ ರೈತರು ನಮ್ಮಿಂದ ಹೆಚ್ಚಿನ ಅಪೇಕ್ಷೆ ಹೊಂದಿದ್ದಾರೆ. ಇದನ್ನರಿತು ನೀವು ಕೆಲಸ ಮಾಡಿ ಎಂದು ತಿಳಿಸಿದರು‌.

ಇದನ್ನೂ ಓದಿ: DK Shivakumar: ವಾರದೊಳಗೆ ಹೊಸ ಜಾಹೀರಾತು ನೀತಿಯ ಕರಡು ಪ್ರತಿ ಬಿಡುಗಡೆ

ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ವಿಶೇಷವಾಗಿ ಡಿ.ಎ.ಪಿ.ರಸಗೊಬ್ಬರ ಕೊರತೆ ಎದ್ದು ಕಾಣುತ್ತಿದೆ. ಇದು ಹೀಗೆ ಮುಂದುವರೆದರೆ ರೈತರು ಪಕ್ಕದ ರಾಜ್ಯ ಅಥವಾ ಬ್ಲ್ಯಾಕ್ ಮಾರ್ಕೆಟ್‌ನಲ್ಲಿ ಹೆಚ್ಚಿನ ಹಣ ನೀಡಿ ಖರೀದಿಸಬೇಕಾಗುತ್ತದೆ. ರೈತರನ್ನು ಇದರಿಂದ ತಪ್ಪಿಸಲು ಸಾಕಷ್ಟು ಪ್ರಮಾಣದಲ್ಲಿ ಆರ್.ಎಸ್.ಕೆ. ಕೇಂದ್ರದಲ್ಲಿ ಡಿ.ಎ.ಪಿ. ದಾಸ್ತಾನಿಕರಿಸಬೇಕು. ಕಳಪೆ, ನಕಲಿ ಬೀಜ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದರು.

ಬೆಳೆ ವಿಮೆ‌ ಮಾಡಿದ ರೈತರಿಗೆ ಬೆಳೆ ಹಾನಿ‌ ಸಂದರ್ಭದಲ್ಲಿ ಸಮರ್ಪಕ ಪರಿಹಾರ ಪಡೆಯುವ ನಿಟ್ಟಿನಲ್ಲಿ ಕ್ರಾಪ್ ಕಟ್ಟಿಂಗ್ ಎಕ್ಸ್ ಪೆರಿಮೆಂಟ್ ನಡೆಯುವ ಸಮಯದಲ್ಲಿ ಕಡ್ಡಾಯವಾಗಿ ಇರಬೇಕಾದ ಅಧಿಕಾರಿಗಳು ಇರಲೇಬೇಕು ಹಾಗೂ ಸಂಪೂರ್ಣ ಪ್ರಕ್ರಿಯೆಯನ್ನು ವಿಡಿಯೋಗ್ರಾಫಿ ಮಾಡಲೇಬೇಕು ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ್ ಕಟ್ಟುನಿಟ್ಟಾಗಿ ಸೂಚಿಸಿದರು.

ತೋಟಗಾರಿಕೆ ಇಲಾಖೆ ಚರ್ಚೆ ವೇಳೆಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ತೋಟಗಾರಿಕೆ ಬೆಳೆ ಪ್ರಮಾಣ ವರ್ಷದಿಂದ ವರ್ಷಕ್ಕೆ ವಿಸ್ತರಣೆಯಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ, ತೋಟಗಾರಿಕೆ ಬೆಳೆ ವಿಸ್ತಿರ್ಣ ಹೆಚ್ಚಿಸಬೇಕು. ಇಲ್ಲಿನ ಕೆಂಬಾಳೆ, ಕಲ್ಲಂಗಡಿ ಅಂತಹ ಹಣ್ಣುಗಳನ್ನು ಸೂಪರ್ ಫುಡ್ ಬ್ರ್ಯಾಂಡ್ ನಡಿ ಮಾರಾಟ ಮಾಡಬೇಕು. ರೈತರಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕೆಂದ ಅವರು, ಅತಿವೃಷ್ಠಿ ಹಾನಿಯಾದಲ್ಲಿ ಮೇವು ದಾಸ್ತಾನು, ಜಾನುವಾರುಗಳಿಗೆ ಲಸಿಕಾಕರಣ ಮಾಡಬೇಕು ಎಂದು ಪಶುಸಂಗೋಪನಾ ಉಪನಿರ್ದೇಶಕ ಡಾ.ಎಸ್.ಡಿ. ಆವಂಟಿ ಅವರಿಗೆ ಸೂಚಿಸಿದರು.

ರೈತರ ಆತ್ಮಹತ್ಯೆಗೆ ಕಳವಳ, ಪರಿಹಾರ ವಿಳಂಬ ಸಲ್ಲದು

ಸಭೆಯಲ್ಲಿ ರೈತರ ಆತ್ಮಹತ್ಯೆ ಚರ್ಚೆ ಸಂದರ್ಭದಲ್ಲಿ ಇನ್ನು 5 ಪ್ರಕರಣ ಪರಿಹಾರ ನೀಡಲು ಬಾಕಿ ಎಂದು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್‌ ಹೇಳಿದಾಗ, ಸಚಿವ ಪ್ರಿಯಾಂಕ್ ಖರ್ಗೆ ಅವರು ಆತ್ಮಹತ್ಯೆಗೆ ತೀವ್ರ ಕಳವಳ ವ್ಯಕ್ತಪಡಿಸುತ್ತಾ, ಇಂತಹ ಪ್ರಕರಣದಲ್ಲಿ ಪರಿಹಾರ ವಿಳಂಬ ಸಲ್ಲದು. ಇತ್ತೀಚೆಗೆ ಚಿತ್ತಾಪೂರ ತಾಲೂಕಿನ ಅಳ್ಳೊಳ್ಳಿಯಲ್ಲಿ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪ್ರಕರಣ ಉಲ್ಲೇಖಿಸಿ ಪಿ.ಎಚ್.ಸಿ ಯಲ್ಲಿ ಎಂಟಿ ಸ್ನೇಕ್ ವೆನೋಮ್ ಇಲ್ಲದಕ್ಕೆ ಯಾದಗಿರಿ ಆಸ್ಪತ್ರೆಗೆ ಹೋಗಬೇಕಾಯಿತು. ಪ್ರತಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಎಂಟಿ ಸ್ನೇಕ್ ವೆನೋಮ್ ಶೇಖರಿಸಿಡುವಂತೆ ಸೂಚಿಸಿದರು. ಇದಕ್ಕೆ ದನಿಗೂಡಿಸಿದ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಹಾವು ಕಚ್ಚಿದ ಪ್ರಕರಣದಲ್ಲಿ ಜನರು ತಪ್ಪು ನಂಬಿಕೆಯಲ್ಲಿ ಮಂತ್ರ-ತಂತ್ರ ಎಂದು ಆ ಕಡೆ ಹೋಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳು ಸಾರ್ವಜನಿಕರಿಗೆ ಅರಿವು ಮೂಡಿಸಲು ಅಭಿಯಾನ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಇದನ್ನೂ ಓದಿ: PGCET 2024 : ಪಿಜಿಸಿಇಟಿ ಅಪ್‌ಡೇಟ್ಸ್‌ ; ಶುಲ್ಕ ಪಾವತಿ, ತಿದ್ದುಪಡಿ, ಪರೀಕ್ಷಾ ಕೇಂದ್ರ ಆಯ್ಕೆಗೆ ಜೂ.24 ಕೊನೆ ದಿನ

ಸಭೆಯಲ್ಲಿ ಅಫಜಲಪುರ ಶಾಸಕ ಎಂ.ವೈ. ಪಾಟೀಲ, ವಿಧಾನ ಪರಿಷತ್ ಶಾಸಕರುಗಳಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷೆ ಚಂದ್ರಿಕಾ ಪರಮೇಶ್ವರಿ, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರಸಿಂಗ್ ಮೀನಾ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಮಹಾನಗರ ಪಾಲಿಕೆ ಉಪ ಆಯುಕ್ತ ಮಾಧವ ಗಿತ್ತೆ, ಪ್ರೊಬೇಷನರ್ ಐ.ಎ.ಎಸ್. ಅಧಿಕಾರಿ ಮೀನಾಕ್ಷಿ ಆರ್ಯ ಸೇರಿದಂತೆ ಜಿಲ್ಲಾ ಮಟ್ಟದ ಅನೇಕ ಅಧಿಕಾರಿಗಳು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಜುಲೈ ಮೊದಲ ವಾರ ಮತ್ತಷ್ಟು ಅಬ್ಬರಿಸಲಿದೆ ಗುಡುಗು ಸಹಿತ ಮಳೆ!

Rain News : ಜೂ.30ರಂದು ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಐಎಂಡಿ ಯೆಲ್ಲೋ ಅಲರ್ಟ್‌ ಘೋಷಣೆ (Karnataka Weather Forecast) ಮಾಡಿದೆ. ಜುಲೈ ಮೊದಲ ವಾರ ಮತ್ತಷ್ಟು ತೀವ್ರಗೊಳ್ಳಲಿದ್ದು, ಜು.3ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಭಾನುವಾರ ಕರಾವಳಿಯಲ್ಲಿ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ ಗಂಟೆಗೆ 30-40 ಕಿ.ಮೀ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ , ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ ಮತ್ತು ವಿಜಯಪುರದಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆ ಸಣ್ಣ ಪ್ರಮಾಣದಲ್ಲಿ ಮಳೆಯ ಸಿಂಚನವಾಗಲಿದೆ.

ಇನ್ನೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಸಾಧಾರಣ ಮಳೆಯಾಗಲಿದ್ದು, ಶಿವಮೊಗ್ಗದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: DCET 2024 : ಡಿಸಿಇಟಿ ಫಲಿತಾಂಶ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಯೆಲ್ಲೋ ಅಲರ್ಟ್‌ ಘೋಷಣೆ

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಭಾರಿ ಮಳೆಯೊಂದಿಗೆ ಗುಡುಗು ಇರಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜುಲೈ 3ರವರೆಗೆ ಮೀನುಗಾರರು ಮೀನುಗಾರಿಗೆ ತೆರಳದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

Karnataka Weather Forecast : ಮುಂಗಾರು ಮಳೆ ಅವಾಂತರವನ್ನೇ ಸೃಷ್ಟಿಸಿದ್ದು, ಚಿಕ್ಕಮಗಳೂರಲ್ಲಿ ಸ್ಕಿಡ್‌ ಆಗಿ ಕಾರೊಂದು ಹೇಮಾವತಿ ನದಿಗೆ ಹಾರಿದೆ. ಭಾನುವಾರವೂ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಚಿಕ್ಕಮಗಳೂರು/ಬೆಂಗಳೂರು: ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ (karnataka Weather Forecast) ಅಬ್ಬರ ಮುಂದುವರಿದಿದ್ದು, ಹೇಮಾವತಿ ನದಿಗೆ ಮತ್ತೊಂದು ಕಾರು ಬಿದ್ದಿದೆ. ಭಾರಿ ಮಳೆಯಿಂದ (Rain News) ಚಾಲಕನ ನಿಯಂತ್ರಣ ತಪ್ಪಿ ನದಿಗೆ ಹಾರಿದೆ. ನಿನ್ನೆ ಶುಕ್ರವಾರ ಕೂಡ ಇದೇ ಜಾಗದಲ್ಲಿ, ಇದೇ ಶೈಲಿಯಲ್ಲಿ ಕಾರು ಬಿದ್ದಿತ್ತು. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಘಟನೆ ನಡೆದಿದೆ.

ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣ-ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳ್ತಂಗಡಿಯಿಂದ ಮೂಡಿಗೆರೆಗೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆ ಹಾರಿ ನದಿಗೆ ಬಿದ್ದಿದೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳೀಯ ಸಹಾಯದಿಂದ ಕಾರನ್ನು ಮೇಲೆ ಎತ್ತಲಾಗಿದೆ.

ಜೂ 28ರಂದು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ನೋಡ ನೋಡುತ್ತಿದ್ದಂತೆ ‌ಕಾರು ಹೇಮಾವತಿ ನದಿಗೆ ಹಾರಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಂತ ಹಿನ್ನೆಲೆಯಲ್ಲಿ ರಸ್ತೆ ಕಾಣದೆ ಕಾರು ನಿಯಂತ್ರಣ ತಪ್ಪಿರುವ ಶಂಕೆ ವ್ಯಕ್ತವಾಗಿತ್ತು. ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಯಿಂದ ಜಿಗಿದು ನದಿಗೆ ಕಾರು ಬಿದ್ದಿತ್ತು. ಕಳೆದ ಎರಡು ತಿಂಗಳ ಹಿಂದೆ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದರು. ಇದೀಗ ಇದೆ ಸ್ಥಳದಲ್ಲೇ ಮತ್ತೆರಡು ಅಪಘಾತ ಸಂಭವಿಸಿದೆ.

ಇದನ್ನೂ ಓದಿ: Road Accident : ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್‌ಗೆ ಗುದ್ದಿ ಹಳ್ಳಕ್ಕೆ ಜಿಗಿದ ಕೆಎಸ್‌ಆರ್‌ಟಿಸಿ; ಶಿರಾಡಿಘಾಟ್‌ನಲ್ಲಿ ಸರಣಿ ಅಪಘಾತ

ಕರಾವಳಿಯಲ್ಲಿ ವಿಪರೀತ ಮಳೆ

ಜೂನ್‌ 30ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.‌ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ದಕ್ಷಿಣ ಒಳನಾಡಿನಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ

ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ಕ್ರಮವಾಗಿ 30-21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

Karnataka Rain : ಮುಂಗಾರು ಮಳೆ ಅಬ್ಬರಕ್ಕೆ ಹಲವೆಡೆ ಅನಾಹುತಗಳು ಮುಂದುವರಿದಿದ್ದು, ಮೈಸೂರಿನಲ್ಲಿ ಮಳೆಗೆ ಮನೆಗಳ ಗೋಡೆ ಕುಸಿದಿದೆ. ಅದೃಷ್ಟವಶಾತ್‌ ವೃದ್ಧರೊಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ.

VISTARANEWS.COM


on

By

karnataka Rain
Koo

ಮೈಸೂರು: ಮೈಸೂರಿನಲ್ಲಿ ಸುರಿದ ಭಾರಿ ಮಳೆಗೆ (Karnataka Rain) ಎರಡು ಮನೆಗಳ ಗೋಡೆ ಕುಸಿದಿದೆ. ಅದೃಷ್ಟವಶಾತ್ ಮನೆಯೊಳಗೆ ಇದ್ದ ವೃದ್ಧ ಪ್ರಾಣಪಾಯದಿಂದ ಪಾರಾಗಿದ್ದಾರೆ. ಮೈಸೂರು ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ಗೋಪಾಲಪುರ ಗ್ರಾಮದ ದೇವಮ್ಮ ಮತ್ತು ಸಣ್ಣ ತಾಯಮ್ಮ ಎಂಬುವರಿಗೆ ಸೇರಿದ ಮನೆಯ ಗೋಡೆ ಕುಸಿದಿದೆ. ಗೋಡೆ ಕುಸಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದೆ. ಇದೇ ಗ್ರಾಮದ ರಾಜೇಗೌಡ ಎಂಬುವರ ಮನೆ ಗೋಡೆ ಕೂಡ ಕುಸಿದಿದೆ. ಮನೆ ಗೋಡೆ ಕುಸಿಯುವಾಗ ಒಳಗೆ ಇದ್ದ ರಾಜೇಗೌಡ ಅವರು ಚಾವಣಿ ಅಡಿಯಲ್ಲಿ ಸಿಲುಕಿದ್ದರು. ಸಣ್ಣಪುಟ್ಟ ಗಾಯಗಳಷ್ಟೇ ಆಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ತಹಸೀಲ್ದಾರ್ ಮತ್ತು ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಬಿನಿ ಜಲಾಶಯ ಭರ್ತಿಗೆ 9 ಅಡಿಗಳು ಮಾತ್ರ ಬಾಕಿ

ಮೈಸೂರು ಜಿಲ್ಲೆಯ ಎಚ್‌ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯ ಸಂಪೂರ್ಣ ಭರ್ತಿಗೆ ಕೇವಲ 9 ಅಡಿಗಳು ಮಾತ್ರ ಬಾಕಿ ಇವೆ. ಕಬಿನಿ ಜಲಾನಯನ ಪ್ರದೇಶದಲ್ಲಿ ಮಳೆ ಅಬ್ಬರ ತಗ್ಗಿದ್ದು, ಒಳಹರಿವಿನ ಪ್ರಮಾಣದಲ್ಲಿ ಇಳಿಕೆ ಆಗಿದೆ.

ಸಮುದ್ರ ಮಟ್ಟದಿಂದ 2,284 ಅಡಿ ಗರಿಷ್ಠ ಸಾಮರ್ಥ್ಯದ ಕಬಿನಿ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟ 2275.06 ಅಡಿಗಳು ಇದೆ. ಒಟ್ಟು 19.52 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ, ಸದ್ಯ 14.30 ಟಿಎಂಸಿ ನೀರಿದೆ. ಜಲಾಶಯದ ಇಂದಿನ ಒಳಹರಿವು 17873 ಕ್ಯೂಸೆಕ್, ಹೊರಹರಿವು 2000 ಕ್ಯೂಸೆಕ್ ಇದೆ. ಕಬಿನಿ ಜಲಾಶಯ ಸಂಪೂರ್ಣ ಭರ್ತಿಗೆ 9 ಅಡಿಗಳು ಮಾತ್ರ ಬಾಕಿ ಇವೆ.

ಇದನ್ನೂ ಓದಿ: Karnataka Weather : ಕರಾವಳಿಯಲ್ಲಿ ಮುಂಗಾರು ಪ್ರಬಲ; ಮುಂದುವರಿಯಲಿದೆ ಮಳೆ ಅಬ್ಬರ

ಶಿಥಿಲಗೊಂಡಿರುವ ಚೆಲ್ಯಡ್ಯ ಸೇತುವೆಯಲ್ಲಿ ವಾಹನ ಓಡಾಟ ನಿಷೇಧ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಸೇತುವೆ ಶಿಥಿಲಗೊಂಡಿದೆ. ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆಗೆ ಚೆಲ್ಯಡ್ಕ ಸೇತುವೆ ಮುಳುಗಡೆಯಾಗಿತ್ತು. ಹೀಗಾಗಿ ಶಿಥಿಲಗೊಂಡಿರುವ ಚೆಲ್ಯಡ್ಯ ಸೇತುವೆಗೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಭೇಟಿ ನೀಡಿದರು. ಸೇತುವೆಯ ಪರಿಸ್ಥಿಯನ್ನು ಗಮನಿಸಿ ಸ್ಥಳೀಯರಲ್ಲಿ ಮಾಹಿತಿ ಪಡೆದುಕೊಂಡರು.

ಸೇತುವೆ ವೀಕ್ಷಣೆ ಬಳಿಕ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಚೆಲ್ಯಡ್ಕ ಸೇತುವೆಯಲ್ಲಿ ಘನವಾಹನ ಸಂಚಾರವನ್ನು ನಿಷೇಧ ಮಾಡಲಾಗಿದೆ. ಉಳಿದಂತೆ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾತ್ರಿ 8 ರಿಂದ ಬೆಳಗ್ಗೆ 6ರ ವರೆಗೆ ಸಂಪೂರ್ಣ ವಾಹನ ಸಂಚಾರ ನಿಷೇಧಿಸಲಾಗಿದ್ದು, ಬೆಳಗಿನ ಅವಧಿಯಲ್ಲಿ ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಅಂದರು. ಇನ್ನೂ ಮಳೆಗಾಲ ಮುಗಿದ ಬಳಿಕ ಸೇತುವೆಯ ಕಾಮಗಾರಿ ಆರಂಭಿಸಲಾಗುವುದು. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣವಾಗಿದೆ ಎಂದು ಮಾಹಿತಿ ನೀಡಿದರು, ಜಿಲ್ಲಾಧಿಕಾರಿಗೆ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ,ತಹಶೀಲ್ದಾರ್ ಪುರಂದರ ಹೆಗ್ಡೆ ಸಾಥ್ ನೀಡಿದ್ದರು.

ಕಾರವಾರದಲ್ಲಿ ಭಾರಿ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಸಾವು

ಕಾರವಾರ: ಭಾರಿ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ಕಾರವಾರದ ಅಸ್ನೋಟಿಯ ಆರವ ಗ್ರಾಮದ ತೋರ್ಲೆಭಾಗದಲ್ಲಿ ಶುಕ್ರವಾರ ನಡೆದಿದೆ. ಗುಲಾಬಿ ರಾಮಚಂದ್ರ ಮಾಂಜ್ರೇಕರ್ (70) ಮೃತ ದುರ್ದೈವಿ. ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ವೃದ್ಧೆ, ಚಿತ್ತಾಕುಲದಲ್ಲಿ ಹಣ್ಣಿನ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದರು. ನೆನ್ನೆ ಮಧ್ಯಾಹ್ನ ಮನೆಯ ಪಕ್ಕದ ಹಳೆಯ ಕಟ್ಟಡದ ಬಳಿ ತೆರಳಿದ್ದಾಗ ಮೈಮೇಲೆ ಗೋಡೆ ಕುಸಿದಿದೆ. ಗೋಡೆಯ ಅವಶೇಷಗಳಡಿ ವೃದ್ಧೆ ಮುಚ್ಚಿಹೋಗಿದ್ದರಂದ ಇಂದು ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ತಹಸೀಲ್ದಾರ್ ನಿಶ್ಚಲ ನೊರೋನ್ಹಾ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರಲ್ಲಿ ಭಾರಿ ಮಳೆಗೆ ರಸ್ತೆ ಕಾಣದೆ ನದಿಗೆ ಬಿದ್ದ ಕಾರು

ಭಾರಿ ಮಳೆಯಿಂದಾಗಿ ರಸ್ತೆ ಕಾಣದೆ ಕಾರೊಂದು ನದಿಗೆ ಬಿದ್ದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಜೂ 28ರಂದು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಘಟನೆ ನಡೆದಿದೆ. ನೋಡ ನೋಡುತ್ತಿದ್ದಂತೆ ‌ಕಾರು ಹೇಮಾವತಿ ನದಿಗೆ ಹಾರಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಂತ ಹಿನ್ನೆಲೆಯಲ್ಲಿ ರಸ್ತೆ ಕಾಣದೆ ಕಾರು ನಿಯಂತ್ರಣ ತಪ್ಪಿರುವ ಶಂಕೆ ವ್ಯಕ್ತವಾಗಿದೆ. ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಯಿಂದ ಜಿಗಿದು ನದಿಗೆ ಕಾರು ಬಿದ್ದಿದೆ. ಕಳೆದ ಎರಡು ತಿಂಗಳ ಹಿಂದೆ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದರು. ಇದೀಗ ಇದೆ ಸ್ಥಳದಲ್ಲೇ ಮತ್ತೊಂದು ಅಪಘಾತ ಸಂಭವಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿಯಲ್ಲಿ ಮುಂಗಾರು ಪ್ರಬಲ; ಮುಂದುವರಿಯಲಿದೆ ಮಳೆ ಅಬ್ಬರ

Karnataka Weather Forecast : ಕರಾವಳಿ ಭಾಗದಲ್ಲಿ ಮಳೆ ಅಬ್ಬರ (Rain News) ಮುಂದುವರಿದಿದೆ. ವೀಕೆಂಡ್‌ನಲ್ಲೂ ವ್ಯಾಪಕ ಮಳೆಯಾಗುವ ಎಚ್ಚರಿಕೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ (Yellow alert) ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯೊಂದಿಗೆ (Rain News) ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಕರ್ನಾಟಕ ಕರಾವಳಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯೊಂದಿಗೆ ಕೆಲವೊಮ್ಮೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಬೀದರ್‌, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾದರೆ, ಬೆಳಗಾವಿ, ಧಾರವಾಡ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ದಕ್ಷಿಣಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

ಬೆಂಗಳೂರಲ್ಲಿ ತುಂತುರು ಮಳೆ

ಶನಿವಾರ ಬೆಂಗಳೂರು ಸುತ್ತಮುತ್ತ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕರಾವಳಿಗೆ ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, 45-55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜುಲೈ 2 ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
bike wheeling
ಬೆಂಗಳೂರು ಗ್ರಾಮಾಂತರ2 mins ago

Bike Wheeling: ಹೈವೇಯಲ್ಲಿ ಭಯಾನಕ ವ್ಹೀಲಿಂಗ್‌ ಜತೆಗೆ ಯುವತಿಗೆ ಕೀಟಲೆ ಮಾಡಿದ ಪುಂಡರು!

Ex CIA Officer
ವಿದೇಶ4 mins ago

Ex CIA Officer: ಪಾಕಿಸ್ತಾನದಲ್ಲಿ ಭಾರತ ವಿರೋಧಿ ಉಗ್ರರನ್ನು ತಾಲಿಬಾನ್ ಮೂಲಕ ಕೊಲ್ಲುತ್ತಿರುವ ಭಾರತ; ಅಮೆರಿಕ ಗುಪ್ತಚರ ಇಲಾಖೆ ಮಾಜಿ ಅಧಿಕಾರಿ ಹೇಳಿಕೆ

Suryakumar Yadav
ಕ್ರೀಡೆ9 mins ago

Suryakumar Yadav Catch: ಬೌಂಡರಿ ಲೈನ್ ಟಚ್ ಮಾಡಿದ್ರಾ ಸೂರ್ಯಕುಮಾರ್?; ಹೊಸ ವಿಡಿಯೊ ವೈರಲ್​

Actor Darshan case Shivaraj Kumar reaction
ಸ್ಯಾಂಡಲ್ ವುಡ್16 mins ago

Actor Darshan: ಎಲ್ಲಾ ಹಣೆಬರಹ ಸ್ವಾಮಿ ಏನು ಮಾಡೋದು? ದರ್ಶನ್‌ ಕೇಸ್‌ ಬಗ್ಗೆ ಶಿವಣ್ಣ ಮಾತು!

Rohit Sharma
ಕ್ರೀಡೆ59 mins ago

Rohit Sharma: ಲಿಯೋನೆಲ್ ಮೆಸ್ಸಿ ಶೈಲಿಯಲ್ಲಿ ವಿಶ್ವಕಪ್​ ಎತ್ತಿ ಹಿಡಿದ ರೋಹಿತ್​; ವಿಡಿಯೊ ವೈರಲ್​

Karave Protest
ಕರ್ನಾಟಕ1 hour ago

Karave Protest: ಕನ್ನಡಿಗರಿಗೆ ಉದ್ಯೋಗಕ್ಕಾಗಿ ಆಗ್ರಹ; ನಾಳೆ‌ ಕರುನಾಡಲ್ಲಿ ಮೊಳಗಲಿದೆ ಕರವೇ ಕಹಳೆ

T20 World Cup 2024
ಕ್ರೀಡೆ1 hour ago

T20 World Cup 2024: ಎರಡನೇ ವಿಶ್ವಕಪ್‌ಗೆ ತಾಳ್ಮೆಯಿಂದ ಕಾದಂತೆ ಟ್ರಾಫಿಕ್‌ ಸಿಗ್ನಲ್‌ನಲ್ಲೂ ಕಾಯಿರಿ; ದೆಹಲಿ ಪೊಲೀಸರ ಕ್ರಿಯೇಟಿವ್​ ವಿಷ್‌

Road Accident
ಮೈಸೂರು2 hours ago

Road Accident : ತಿರುವಿನಲ್ಲಿ ಕಂದಕಕ್ಕೆ ಉರುಳಿದ ಬಸ್‌; ಚಾಲಕ ಸೇರಿ ಮೂವರು ಗಂಭೀರ

KPCC President
ಪ್ರಮುಖ ಸುದ್ದಿ2 hours ago

KPCC President: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸುಳಿವು; ಲಿಂಗಾಯತರಿಗೆ ಅವಕಾಶ ನೀಡಲು ಒತ್ತಾಯ

Jayam Ravi married to superstar rajinikanth daughter
ಕಾಲಿವುಡ್2 hours ago

Jayam Ravi: ರಜನಿಕಾಂತ್‌ ಮಗಳ ಜತೆ ಜಯಂ ರವಿ ಮದುವೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಬೆಂಗಳೂರು3 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ23 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

ಟ್ರೆಂಡಿಂಗ್‌