Tharun Sudhir: ಸೋನಲ್ ಜತೆ `ತರುಣ್ ಸುಧೀರ್‌'ಗೆ ಕೂಡಿಬಂತು ಕಂಕಣಭಾಗ್ಯ? - Vistara News

ಸಿನಿಮಾ

Tharun Sudhir: ಸೋನಲ್ ಜತೆ `ತರುಣ್ ಸುಧೀರ್‌’ಗೆ ಕೂಡಿಬಂತು ಕಂಕಣಭಾಗ್ಯ?

Tharun Sudhir: ಎಕ್ಸ್‌ಕ್ಯೂಸ್‌ಮಿ’ ಚಿತ್ರದ ಸಣ್ಣ ಪಾತ್ರದಲ್ಲಿ ನಟಿಸಿದರು. ‘ರ್ಯಾಂಬೊ’ ಚಿತ್ರದ ಸಹ ನಿರ್ದೇಶಕರಾಗಿ ಕೆಲಸ ಮಾಡಿ ತರುಣ್ ‘ಚೌಕ’ ಚಿತ್ರದಿಂದ ನಿರ್ದೇಶಕರಾದರು. ‘ಚೌಕ’ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ತರುಣ್ ಮುಂದೆ ಒಂದರ ಹಿಂದೆಯಂತೆ ಎರಡು ಹಿಟ್ ಸಿನಿಮಾಗಳನ್ನು ಕೊಟ್ಟರು. ಇದೀಗ ತರುಣ್ 4ನೇ ಸಿನಿಮಾ ತಯಾರಿಯಲ್ಲಿದ್ದಾರೆ.’ಮಹಾನಟಿ’ ರಿಯಾಲಿಟಿ ಶೋನಲ್ಲಿ ತೀರ್ಪುಗಾರರಾಗಿ ಕೂಡ ಗುರುತಿಸಿಕೊಂಡಿರುವ ತರುಣ್ ಸುಧೀರ್ ಮದುವೆಗೆ (Tharun Sudhir) ಸಜ್ಜಾಗುತ್ತಿದ್ದಾರೆ ಎನ್ನಲಾಗಿದೆ.

VISTARANEWS.COM


on

Tharun Sudhir sonal monteiro will get marriage
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ʻಕಾಟೇರʼ ಸಿನಿಮಾ (Kaatera Movie) ನಿರ್ದೇಶಕ, ‘ಮಹಾನಟಿ’ ರಿಯಾಲಿಟಿ ಶೋನಲ್ಲಿ ತೀರ್ಪುಗಾರರಾಗಿ ಕೂಡ ಗುರುತಿಸಿಕೊಂಡಿರುವ ತರುಣ್ ಸುಧೀರ್ ಮದುವೆಗೆ (Tharun Sudhir) ಸಜ್ಜಾಗುತ್ತಿದ್ದಾರೆ ಎನ್ನಲಾಗಿದೆ. ನಟಿ ಸೋನಾಲ್ ಮಂಥೆರೊ (sonal monteiro) ಕೈ ಹಿಡಿಯುತ್ತಾರೆ ಎಂದು ವರದಿಯಾಗಿದೆ. ತರುಣ್ ನಿರ್ದೇಶನದ ‘ರಾಬರ್ಟ್’ ಚಿತ್ರದಲ್ಲಿ ರಾಘವ ವಿನೋದ್ ಪ್ರಭಾಕರ್ ಜೋಡಿ ತನು ಆಗಿ ಸೋನಲ್ ಮಿಂಚಿದ್ದರು. ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಸೋನಲ್ ಮೊದಲಿಗೆ ತುಳು ಸಿನಿಮಾಗಳಲ್ಲಿ ನಟಿಸಿದ್ದರು. ‘ಅಭಿಸಾರಿಕೆ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸಿದರು. ಇದೀಗ ಈ ಜೋಡಿ ಸಪ್ತಪದಿ ತುಳಿಯಲಿದೆ ಎನ್ನಲಾಗಿದೆ. ತರುಣ್‌ ಹಾಗೂ ಸೋನಲ್‌ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

‘ಚೌಕ’ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ತರುಣ್ ಮುಂದೆ ಒಂದರ ಹಿಂದೆಯಂತೆ ಎರಡು ಹಿಟ್ ಸಿನಿಮಾಗಳನ್ನು ಕೊಟ್ಟರು. ಇದೀಗ ತರುಣ್ 4ನೇ ಸಿನಿಮಾ ತಯಾರಿಯಲ್ಲಿದ್ದಾರೆ. ಖಳನಟ ಸುಧೀರ್ ಕಿರಿಯಪುತ್ರ ತರುಣ್ ಮದುವೆ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬಿವೆ. ಈಗಾಗಲೇ ತರುಣ್‌ ಅವರ ಮದುವೆ ಫಿಕ್ಸ್‌ ಆಗಿದ್ದು, ಎರಡು ತಿಂಗಳಲ್ಲಿ ಮದುವೆ ಫಿಕ್ಸ್‌ ಎನ್ನುವ ವದಂತಿ ಹಬ್ಬಿದೆ.

‘ಎಕ್ಸ್‌ಕ್ಯೂಸ್‌ಮಿ’ ಚಿತ್ರದ ಸಣ್ಣ ಪಾತ್ರದಲ್ಲಿ ನಟಿಸಿದರು. ‘ರ್ಯಾಂಬೊ’ ಚಿತ್ರದ ಸಹ ನಿರ್ದೇಶಕರಾಗಿ ಕೆಲಸ ಮಾಡಿ ತರುಣ್ ‘ಚೌಕ’ ಚಿತ್ರದಿಂದ ನಿರ್ದೇಶಕರಾದರು. ತರುಣ್‌ ಹಾಗೂ ಸೋನಲ್‌ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಅಗಸ್ಟ್‌ 10ಕ್ಕೆ ತರುಣ್‌ ಅವರ ಮದುವೆ ಎನ್ನಲಾಗಿದೆ.

ಇದನ್ನೂ ಓದಿ: Duniya Vijay: ʻಭೀಮʼ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ದುನಿಯಾ ವಿಜಯ್‌; ಸ್ಟಾರ್‌ ಹಿರೋ ಸಿನಿಮಾ ಜತೆ ಕ್ಲ್ಯಾಶ್‌?

ಕೆಲವು ದಿನಗಳ ಹಿಂದೆ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರು BMW X1 ಕಾರನ್ನು ಖರೀದಿ ಮಾಡಿದ್ದರು. ಕಳೆದ ಕೆಲ ದಿನಗಳ ಹಿಂದೆ ಈ ಕಾರನ್ನು ಅವರು ತೆಗೆದುಕೊಂಡಿದ್ದು, ಆ ವೇಳೆ ಅವರ ತಾಯಿ ಮಾಲತಿ ಸುಧೀರ್ ಕೂಡ ಜತೆಗೆ ಇದ್ದರು. ಅಂದಹಾಗೆ, ಈ BMW X1 ಕಾರಿನ ಬೆಲೆಯು 60 ಲಕ್ಷ ರೂಪಾಯಿಗಳಿಗೂ ಅಧಿಕ ಎಂದು ಹೇಳಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Samarjit Lankesh: ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಅಭಿನಯದ `ಗೌರಿ’ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

Samarjit Lankesh: ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ 15 ಸ್ವತಂತ್ರ ದಿನಾಚರಣೆ ದಿನ ಹಾಗೂ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ.

VISTARANEWS.COM


on

Samarjit Lankesh gowri movie kannada release date announce
Koo

ಬೆಂಗಳೂರು: ಪತ್ರಕರ್ತ, ನಿರ್ದೇಶಕ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್ (Samarjit Lankesh) ಪುತ್ರ ಸಮರ್ಜಿತ್ ಲಂಕೇಶ್ “ಗೌರಿ” ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಅಗಸ್ಟ್ 15 ಸ್ವತಂತ್ರ ದಿನಾಚರಣೆ ದಿನ ಹಾಗೂ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ.

ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಲು ಇಂದ್ರಜಿತ್ ಲಂಕೇಶ್ ಅವರು ರಾಜಾಜಿನಗರದ ವಿದ್ಯಾವಿಹಾರ (ಎಂ ಇ ಎಸ್ ಮ್ಯಾನೇಜ್ಮೆಂಟ್) ಕಾಲೇಜಿನಲ್ಲಿ ಅದ್ಧೂರಿ ಸಮಾರಂಭ ಆಯೋಜಿಸಿದ್ದರು. ಅಧಿಕ ಸಂಖ್ಯೆಯ ವಿದ್ಯಾರ್ಥಿಗಳು ಸಮಾರಂಭಕ್ಕೆ ಸಾಕ್ಷಿಯಾದರು. ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ʻʻನಮ್ಮ “ಗೌರಿ” ಚಿತ್ರತಂಡ ಕರ್ನಾಟಕದಾದ್ಯಂತ ಸಂಚಾರ ಮಾಡುತ್ತಿದೆ. ಆ ಊರಿನ ಮಾಧ್ಯಮದವರು ಹಾಗೂ ಅಭಿಮಾನಿಗಳು ನೀಡುತ್ತಿರುವ ಪ್ರೋತ್ಸಾಹಕ್ಕೆ ಮನ ತುಂಬಿ ಬಂದಿದೆ. ಹಾಡುಗಳ ಮೂಲಕ ಈಗಾಗಲೇ ಜನರನ್ನು ತಲುಪಿರುವ “ಗೌರಿ” ಚಿತ್ರ ಇದೇ ಅಗಸ್ಟ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ವರಮಹಾಲಕ್ಷ್ಮೀ, ಸ್ವತಂತ್ರ ದಿನಾಚರಣೆ, ರಕ್ಷಾ ಬಂಧನ ಹೀಗೆ ಸಾಲುಸಾಲು ರಜೆ ದಿಗಗಳು ಆ ಸಮಯದಲ್ಲಿದೆ. ಹಾಗಾಗಿ ಆಗಸ್ಟ್ 15 ದಿನಾಂಕವನ್ನು ಆಯ್ಕೆ ಮಾಡಿಕೊಂಡಿದ್ದೇವೆ‌. ಒಬ್ಬ ಪ್ರೇಕ್ಷಕನಾಗಿ ಸಿನಿಮಾ ನೋಡಿದಾಗ ನನಗೆ ಬಹಳ ಇಷ್ಟವಾಯಿತು. ಪ್ರೇಕ್ಷಕರಿಗೂ ನಮ್ಮ ಚಿತ್ರ ಮೆಚ್ಚುಗೆಯಾಗಲಿದೆʼʼ ಎಂದರು ಇಂದ್ರಜಿತ್ ಲಂಕೇಶ್.

ಇದನ್ನೂ ಓದಿ: Kidnap case : ಕೋಟಿ ಆಸೆಗೆ ಸಿನಿಮಾ ಸ್ಟೈಲ್‌ನಲ್ಲಿ ಸ್ಟಾಕ್‌ ಮಾರ್ಕೆಟ್‌ ವಂಚಕನ ಕಿಡ್ನ್ಯಾಪ್‌

ಅಪ್ಪ ಹೇಳಿದ ಹಾಗೆ ಹೋದ ಕಡೆಯಲ್ಲಾ ನಮ್ಮ ಚಿತ್ರಕ್ಕೆ ಪಾಸಿಟಿವ್ ರೆಸ್ಪಾನ್ಸ್ ಸಿಗುತ್ತಿದೆ‌. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ನನ್ನ ಹಲವು ವರ್ಷಗಳ ಶ್ರಮಕ್ಕೆ ಉತ್ತರ ಸಿಗುವ ದಿನ ಹತ್ತಿರ ಬಂದಿದೆ ಎಂದರು ನಾಯಕ ಸಮರ್ಜಿತ್ ಲಂಕೇಶ್.

ಆಗಸ್ಟ್ 15 ನನ್ನ ಕನಸು ನನ್ನಸಾಗುವ ದಿನ. ಈ ದಿನಕ್ಕಾಗಿ ಕಾಯುತ್ತಿದೆ‌. ಅವಕಾಶ ನೀಡಿದ ಇಂದ್ರಜಿತ್ ಲಂಕೇಶ್ ಅವರಿಗೆ ಧನ್ಯವಾದ ಎಂದರು ನಾಯಕಿ ಸಾನ್ಯ ಅಯ್ಯರ್ .

Continue Reading

ಕ್ರೈಂ

Actor Darshan:  ದರ್ಶನ್‌‌‌‌‌‌ ವಿರುದ್ಧ ಪರೋಕ್ಷವಾಗಿ ಕೌಂಟರ್‌ ಕೊಟ್ಟ ನಟ ಜಗ್ಗೇಶ್!

Actor Darshan: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Actor Darshan ) ತೂಗುದೀಪ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ದೂಡುತಿದ್ದಾರೆ. ಹಲವು ಅಭಿಮಾನಿಗಳು ದರ್ಶನ್​ರನ್ನು ಭೇಟಿಯಾಗಲು ಪ್ರತಿನಿತ್ಯ ಜೈಲಿನ ಬಳಿ ಬರುತ್ತಿದ್ದಾರೆ. ಆದರೆ ಪೊಲೀಸರು ಯಾರಿಗೂ ಅವಕಾಶ ನೀಡುತ್ತಿಲ್ಲ. ಕೇವಲ ಕುಟುಂಬ ಸದಸ್ಯರಿಗೆ ಹಾಗೂ ವಕೀಲರಿಗಷ್ಟೆ ಅವಕಾಶ ನೀಡಲಾಗಿದೆ.

VISTARANEWS.COM


on

Actor Darshan case Jaggesh reaction about this
Koo

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ (ಶಿವಾನಂದ ಸರ್ಕಲ್) ಉದ್ಘಾಟನಾ ಸಮಾರಂಭವನ್ನು (Actor Darshan) ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಹೊಸ ಕಟ್ಟಡವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ನಟ ಶಿವರಾಜ್‌ ಕುಮಾರ್‌, ಜಗ್ಗೇಶ್‌ , ಸಾಧು ಕೋಕಿಲಾ ಸೇರದಂತೆ ಅನೇಕ ಗಣ್ಯ ವ್ಯಕ್ತಿಗಳು ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಜಗ್ಗೇಶ್, ಚಿತ್ರರಂಗದ ಕೆಲಸಗಳನ್ನು ಪಟ್ಟು ಹಿಡಿದು ಮಾಡಿಸಬೇಕು, ಸಿದ್ದರಾಮಯ್ಯ ಅವರು ಬಂದಾಗ ಹೇಳಿ ಸುಮ್ಮನಾಗುವುದಲ್ಲ ಆಗಾಗ್ಗೆ ಹೋಗಿ ಅವರ ತಲೆ ನಿನ್ನುತ್ತಿರಬೇಕು, ಸಿಎಂ ಅವರಿಗೆ ಕೆಲಸದ ಭಾರ ತುಂಬಾ ಇರುತ್ತದೆ. ಒಟಿಟಿ ಎಂಬುದು ಒಳ್ಳೆಯ ಯೋಜನೆ. ಇದನ್ನು ಸರ್ಕಾರ ಮಾಡಿದ್ರೆ ಪ್ರಾಫಿಟ್‌ ತಂದು ಕೊಡುತ್ತದೆ. ಈಗಾಗಲೇ ಮಲ್ಟಿ ನ್ಯಾಷನಲ್ ಕಂಪನಿ ಮಾಡಿಕೊಂಡಿದೆ. ನಮ್ಮ ದುಡ್ಡು ಹೊರ ರಾಜ್ಯಕ್ಕೆ ಹೋಗ್ತಿದೆ’ ಎಂದಿದ್ದಾರೆ.

ಇದನ್ನೂ ಓದಿ: Actor Darshan : ಶಂಖ ಊದುತ್ತ, ಜಾಗಟೆ ಬಾರಿಸುತ್ತ ದರ್ಶನ್‌ ಭೇಟಿಗೆ ಬಂದ ವಿಶೇಷ ಚೇತನ ಅಭಿಮಾನಿ!

ಸಿನಿಮಾ ರಂಗದ ಇತ್ತೀಚಿನ ಬೆಳವಣಿಗೆ ಬಗ್ಗೆ ಜಗ್ಗೇಶ್‌ ಮಾತನಾಡಿ ಪರೋಕ್ಷವಾಗಿ ʻʻ ನಿರ್ಮಾಪಕರು ಸಿನಿಮಾ ನಾಯಕನ ಹಿಂದೆ ಹೋಗಿ ಸಿನಿಮಾ ಮಾಡಬೇಡಿ. ಕಥೆ ಹಿಂದೆ ಹೋಗಿ ಸಿನಿಮಾ ಮಾಡಿ. ಇವತ್ತು ನಾಯಕರ ಹಿಂದೆಯೇ ಹೋದಾಗಲೇ ನಿರ್ಮಾಪಕರಿಗೆ ಸಮಸ್ಯೆ ಆಗಿದೆ. ಹಿಂದೆ ಕಥೆ ಹಿಂದೆ ಹೋದಾಗ ನಿರ್ಮಾಪಕರು ಚನ್ನಾಗಿದ್ದರುʼʼಎಂದರು.

ಈ ವೇಳೆ ನಟ ಶಿವರಾಜ್‌ಕುಮಾರ್‌ ಕೂಡ ಭಾಗಿಯಾಗಿದ್ದರು. ಈ ವೇಳೆ ದರ್ಶನ್‌ (Actor Darshan) ಕುರಿತಾಗಿ ಮಾತನಾಡಿದರು. ಶಿವಣ್ಣ ಮಾತನಾಡಿ ʻʻಈ ವಿಚಾರದ ಬಗ್ಗೆ ಬೇಸರ ಆಗತ್ತೆ. ಅದೆಲ್ಲ ಹಣೆಬರಹ. ಹಣೆ ಬರಹ ಅನ್ನೋದು ಒಂದು ಇರುತ್ತೆ. ಏನೇ ಮಾತನಾಡಿದರೂ ಅದು ಸರಿನಾ ಎಂದು ಯೋಚನೆ ಮಾಡಬೇಕು. ನಾವು ಬಂದರೋದು ಎದುರಿಸಲೇ ಬೇಕು. ಈಗಾಗಲೇ ತನಿಖೆ ಆಗುತ್ತಿದೆ. ಯಾಕಪ್ಪ ಹೀಗೆ ಆಯ್ತು ಅಂತ ಬೇಜಾರ ಆಗುತ್ತೆ. ಎರಡೂ ಕುಟಂಬಗಳು ಬೇಜಾರಿನ ಲ್ಲಿದೆ. ನ್ಯಾಯ ಎಲ್ಲಿದೆ ಮುಂದೆ ಗೊತ್ತಾಗತ್ತೆʼʼಎಂದರು.

 ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Actor Darshan ) ತೂಗುದೀಪ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ದೂಡುತಿದ್ದಾರೆ. ಹಲವು ಅಭಿಮಾನಿಗಳು ದರ್ಶನ್​ರನ್ನು ಭೇಟಿಯಾಗಲು ಪ್ರತಿನಿತ್ಯ ಜೈಲಿನ ಬಳಿ ಬರುತ್ತಿದ್ದಾರೆ. ಆದರೆ ಪೊಲೀಸರು ಯಾರಿಗೂ ಅವಕಾಶ ನೀಡುತ್ತಿಲ್ಲ. ಕೇವಲ ಕುಟುಂಬ ಸದಸ್ಯರಿಗೆ ಹಾಗೂ ವಕೀಲರಿಗಷ್ಟೆ ಅವಕಾಶ ನೀಡಲಾಗಿದೆ. ಭಾನುವಾರ ರಜೆ ಹಿನ್ನೆಲೆಯಲ್ಲಿ ಯಾರಿಗೂ ಭೇಟಿಯಾಗುವ ಅವಕಾಶ ಇರುವುದಿಲ್ಲ. ಹೀಗಿದ್ದರೂ ದಾಸಪ್ಪ ವೃತ್ತಿ ಮಾಡುವ ವಿಶೇಷ ಚೇತನ ಅಭಿಮಾನಿ, ಹಾಗೂ ಮಾರತ್ತಹಳ್ಳಿಯಿಂದ ಆಟೋ ಚಾಲಕ ಸುನೀಲ್ ದರ್ಶನ್‌ ನೋಡಲು ಬಂದಿದ್ದಾರೆ.

Continue Reading

ರಾಜಕೀಯ

Hamsa Moily: ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ವಿಧಿವಶ

Hamsa Moily: ಹಂಸ ಮೊಯ್ಲಿ ಅವರು ಭರತನಾಟ್ಯ ಕಲಾವಿದೆ ಆಗಿದ್ದರು. 46 ವರ್ಷದ ಹಂಸ ಮೊಯ್ಲಿ ಅವರು ಇತ್ತೀಚೆಗೆ ಅಸೌಖ್ಯದಿಂದ ಬಳಲುತ್ತಿದ್ದರು. ಭರತನಾಟ್ಯ ನೃತ್ಯಗಾರ್ತಿ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು. ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳು ಸಿನಿಮಾʻ ಶೃಂಗಾರಂʼನಲ್ಲಿ ನಟಿಸಿದ್ದರು.

VISTARANEWS.COM


on

Hamsa Moily Veerappa Moily's daughter passed away
Koo

ಬೆಂಗಳೂರು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ (Veerappa Moily’s daughter ) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ (Hamsa Moily) ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಪುತ್ರಿ ಹಂಸ ಮೊಯ್ಲಿ ಸಾವಿನ ಸುದ್ದಿ ತಿಳಿದು ಛತ್ತೀಸ್‌ಘಡದಲ್ಲಿದ್ದ ವೀರಪ್ಪ ಮೊಯ್ಲಿ ರಾತ್ರಿಯೇ ವಾಪಾಸ್ ಆಗಿದ್ದಾರೆ.

ಹಂಸ ಮೊಯ್ಲಿ ಅವರು ಭರತನಾಟ್ಯ ಕಲಾವಿದೆ ಆಗಿದ್ದರು. 46 ವರ್ಷದ ಹಂಸ ಮೊಯ್ಲಿ ಅವರು ಇತ್ತೀಚೆಗೆ ಅಸೌಖ್ಯದಿಂದ ಬಳಲುತ್ತಿದ್ದರು. ಭರತನಾಟ್ಯ ನೃತ್ಯಗಾರ್ತಿ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು. ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳು ಸಿನಿಮಾʻ ಶೃಂಗಾರಂʼನಲ್ಲಿ ನಟಿಸಿದ್ದರು.

ಅನಾರೋಗ್ಯದಿಂದಾಗಿ ಏಕಾಏಕಿ ಬಳಲಿದ್ದ ಅವರು, ನಿನ್ನೆ ಸಂಜೆ ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವೀರಪ್ಪಮೊಯ್ಲಿ ಅವರ ಮೂರನೇ ಪುತ್ರಿಯಾಗಿದ್ದ ಹಂಸ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ʻಜನಾನುರಾಗಿʼ ಎಂಬ ಹೆಸರು ಪಡೆದಿದ್ದ ಅವರು, ತಮದೇ ಆದ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಭರತ ನಾಟ್ಯ ಕಲಾವಿದರಾಗಿದ್ದ ಹಂಸ ಮೊಯ್ಲಿ ಅವರು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡಿದ್ದರು.

ಇದನ್ನೂ ಓದಿ: Kalki 2898 AD: ಮೂರನೇ ದಿನ ಭರ್ಜರಿ ಗಳಿಕೆ ಕಂಡ ‘ಕಲ್ಕಿ 2898 ಎಡಿ’ ಸಿನಿಮಾ ! 

ಹಂಸ ಮೊಯ್ಲಿ ಭರತನಾಟ್ಯ ನೃತ್ಯಗಾರ್ತಿ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿ. ಇತ್ತೀಚೆಗೆ ಮಕ್ಕಳಿಗಾಗಿ ಹಿಂದಿ ನಾಟಕ, ಕ್ಯುನ್ ಕ್ಯುನ್ ಲಡ್ಕಿ, ಅದೇ ಹೆಸರಿನ ಮಹಾಶ್ವೇತಾ ದೇವಿಯವರ ಪುಸ್ತಕದಿಂದ ಸ್ಫೂರ್ತಿ ಪಡೆದಿದ್ದಾರೆ ಮತ್ತು ರವೀಂದ್ರನಾಥ ಟ್ಯಾಗೋರ್ ಅವರು ಬರೆದ ಮಕ್ಕಳಿಗಾಗಿ ಇಂಗ್ಲಿಷ್ ನಾಟಕವನ್ನು ನೃತ್ಯ ಸಂಯೋಜನೆ ಮಾಡಿದ್ದಾರೆ.
ಅವಳು ತನ್ನನ್ನು ತಾನು ಅನ್ವೇಷಕ ಮತ್ತು ಯೋಗದ ಅಭ್ಯಾಸಿ ಎಂದು ವಿವರಿಸುತ್ತಾಳೆ.

Continue Reading

ಸ್ಯಾಂಡಲ್ ವುಡ್

Actor Darshan : ಶಂಖ ಊದುತ್ತ, ಜಾಗಟೆ ಬಾರಿಸುತ್ತ ದರ್ಶನ್‌ ಭೇಟಿಗೆ ಬಂದ ವಿಶೇಷ ಚೇತನ ಅಭಿಮಾನಿ!

Actor Darshan: ಭಾನುವಾರ ರಜೆ ಹಿನ್ನೆಲೆಯಲ್ಲಿ ಯಾರಿಗೂ ಭೇಟಿಯಾಗುವ ಅವಕಾಶ ಇರುವುದಿಲ್ಲ. ಹೀಗಿದ್ದರೂ ದಾಸಪ್ಪ ವೃತ್ತಿ ಮಾಡುವ ವಿಶೇಷ ಚೇತನ ಅಭಿಮಾನಿ, ಹಾಗೂ ಮಾರತ್ತಹಳ್ಳಿಯಿಂದ ಆಟೋ ಚಾಲಕ ಸುನೀಲ್ ದರ್ಶನ್‌ ನೋಡಲು ಬಂದಿದ್ದಾರೆ.

VISTARANEWS.COM


on

Actor Darshan in Parappana Agrahara Jail special fan who came to visit
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Actor Darshan ) ತೂಗುದೀಪ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ದೂಡುತಿದ್ದಾರೆ. ಹಲವು ಅಭಿಮಾನಿಗಳು ದರ್ಶನ್​ರನ್ನು ಭೇಟಿಯಾಗಲು ಪ್ರತಿನಿತ್ಯ ಜೈಲಿನ ಬಳಿ ಬರುತ್ತಿದ್ದಾರೆ. ಆದರೆ ಪೊಲೀಸರು ಯಾರಿಗೂ ಅವಕಾಶ ನೀಡುತ್ತಿಲ್ಲ. ಕೇವಲ ಕುಟುಂಬ ಸದಸ್ಯರಿಗೆ ಹಾಗೂ ವಕೀಲರಿಗಷ್ಟೆ ಅವಕಾಶ ನೀಡಲಾಗಿದೆ. ಭಾನುವಾರ ರಜೆ ಹಿನ್ನೆಲೆಯಲ್ಲಿ ಯಾರಿಗೂ ಭೇಟಿಯಾಗುವ ಅವಕಾಶ ಇರುವುದಿಲ್ಲ. ಹೀಗಿದ್ದರೂ ದಾಸಪ್ಪ ವೃತ್ತಿ ಮಾಡುವ ವಿಶೇಷ ಚೇತನ ಅಭಿಮಾನಿ, ಹಾಗೂ ಮಾರತ್ತಹಳ್ಳಿಯಿಂದ ಆಟೋ ಚಾಲಕ ಸುನೀಲ್ ದರ್ಶನ್‌ ನೋಡಲು ಬಂದಿದ್ದಾರೆ.

ಇಂದು ಭಾನುವಾರ ಆದ ಕಾರಣ ದರ್ಶನ್‌ ಭೇಟಿಗೆ ಯಾರಿಗೂ ಅವಕಾಶ ಇಲ್ಲ. ಆದರೂ ನಟ ದರ್ಶನ್ ಭೇಟಿಗೆ ವಿಶೇಷ ಚೇತನ ಆಗಮಿಸಿದ್ದರು, ದಾಸಪ್ಪ ವೃತ್ತಿ ಮಾಡುವ ವಿಶೇಷ ಚೇತನ ಅಭಿಮಾನಿ, ಕಿವಿ ಕೇಳಿಸದಿದ್ದರು ಶಂಖ ಊದುತ್ತಾ, ಜಾಗಟೆ ಬಾರಿಸುತ್ತ ಜೈಲಿನ ಬಳಿ ಬಂದಿದ್ದರು. ತುರುವೆಕೆರೆಯ ಜಡಿಯೊ ಗ್ರಾಮದ ವಿಶೇಷ ಚೇತನ ಅಭಿಮಾನಿಯಾಗಿದ್ದಾರೆ. ʻʻನಟ ದರ್ಶನ್ ಒಳ್ಳೆಯ ವ್ಯಕ್ತಿ. ಅಂತಹವರನ್ನು ಜೈಲಿನಲ್ಲಿಟ್ಟರೆ ಸಿನಿ ಕಾರ್ಮಿಕರು, ನಿರ್ಮಾಪಕರಿಗೆ ತೊಂದರೆ. ಅವ್ರು ತಪ್ಪು ಮಾಡಿರಬಹುದು. ಆದರೆ ನಟ ದರ್ಶನ್ ಸಾಕಷ್ಟು ಸಮಾಜಸೇವೆ ಮಾಡಿದ್ದಾರೆ ಮಾನವೀಯತೆ ದೃಷ್ಟಿಯಿಂದ ಬಿಡುಗಡೆ ಮಾಡಬೇಕು. ದರ್ಶನ್ ಬಿಡುಗಡೆಗಾಗಿ ಗೃಹ ಮಂತ್ರಿ ಜಿ ಪರಮೇಶ್ವರ ಭೇಟಿಗೆ ಹೋಗಿದ್ದೆ. ಆದರೆ ಅವರು ಸಿಗಲಿಲ್ಲʼʼ ಎಂದು ವಿಶೇಷ ಚೇತನ ಅಭಿಮಾನಿ ಗೋವಿಂದ ರಾಜು ಹೇಳಿಕೆ ನೀಡಿದರು.

ಇದನ್ನೂ ಓದಿ: Actor Darshan: ಎಲ್ಲಾ ಹಣೆಬರಹ ಸ್ವಾಮಿ ಏನು ಮಾಡೋದು? ದರ್ಶನ್‌ ಕೇಸ್‌ ಬಗ್ಗೆ ಶಿವಣ್ಣ ಮಾತು!

ಇನ್ನು ಮಾರತ್ತಹಳ್ಳಿಯಿಂದ ಆಟೋ ಚಾಲಕ ಸುನೀಲ್ ದರ್ಶನ್ ನೋಡಲು ಆಗಮಿಸಿದ್ದರು. ತಿಂಗಳಿಗೆ ಒಮ್ಮೆ ದರ್ಶನ್ ಅಣ್ಣನ ಭೇಟಿ ಮಾಡುತ್ತಿದ್ದೆ ಆದರೆ ಈಗ ಜೈಲಿನಲ್ಲಿ ಇದ್ದಾರೆ. ಹಾಗಾಗಿ ನೋಡಲು ಬಂದೆ. ನಮ್ ಬಾಸ್ ಒಳ್ಳೆಯ ಕೆಲಸಗಳನ್ನು ಜನರಿಗೆ ಮಾಡುತ್ತಿದ್ದರು. ಈಗ ಅವರು ಜೈಲಿನಲ್ಲಿ ಕಷ್ಟ ಅನುಭವಿಸುತ್ತಿದ್ದಾರೆ. ತಂದೆ ತಾಯಿ‌ ಬಿಟ್ರೆ ದರ್ಶನ್ ನನಗೆ ದೇವರುʼʼಎಂದಿದ್ದಾರೆ.

ದರ್ಶನ್ ಭೇಟಿ ಮಾಡಬೇಕೆಂದು ಅಭಿಮಾನಿಯೊಬ್ಬ ರಂಪಾಟವಾಡಿರುವುದು ಕಂಡುಬಂದಿದೆ. ಜೈಲ್ ಚೆಕ್ ಪೋಸ್ಟ್ ಬಳಿ ರಸ್ತೆಯಲ್ಲಿ ಕುಳಿತ ಅಭಿಮಾನಿ, ದರ್ಶನ್ ನೋಡಬೇಕೆಂದು ಕಣ್ಣೀರು ಹಾಕಿದ್ದಾನೆ. ಮದ್ಯಪಾನ ಮಾಡಿ ಬಂದಿದ್ದ ವ್ಯಕ್ತಿ, ದರ್ಶನ್ ನೋಡಲೇ ಬೇಕು ಎಂದು ಪಟ್ಟು ಹಿಡಿದಿದ್ದರಿಂದ ಆತನನ್ನು ಮನವೊಲಿಸಲು ಪೊಲೀಸರು ಹೈರಾಣಾದರು.

Continue Reading
Advertisement
Karnataka Politics
ಕರ್ನಾಟಕ12 mins ago

Karnataka Politics: ಸ್ಥಾನ ಭದ್ರಪಡಿಸಲು ದೆಹಲಿಯಲ್ಲಿ ಸಿಎಂ, ಡಿಸಿಎಂ ಪ್ರಯತ್ನ: ಎನ್.ರವಿಕುಮಾರ್ ಟೀಕೆ

Google Map
ಕ್ರೈಂ21 mins ago

Google Map: ತಪ್ಪು ದಾರಿ ತೋರಿಸಿದ ಗೂಗಲ್‌ ಮ್ಯಾಪ್‌; ನದಿಗೆ ಬಿದ್ದ ಕಾರು!

Viral Video
ವೈರಲ್ ನ್ಯೂಸ್28 mins ago

Viral Video: ರೀಲ್ಸ್‌ಗಾಗಿ ಸಿಗರೇಟ್‌ ದಂ ಹೊಡೆದ ಯುವತಿ; ಮನೇಲಿ ಹಿಗ್ಗಾಮುಗ್ಗಾ ಹೊಡೆದ ಅಪ್ಪ!

Reasi Terror Attack
ದೇಶ60 mins ago

Reasi Terror Attack: ಕಾಶ್ಮೀರದಲ್ಲಿ ಹಿಂದೂ ಯಾತ್ರಿಕರ ಮೇಲೆ ಉಗ್ರರ ದಾಳಿ; ಹಲವೆಡೆ NIA ರೇಡ್‌

Jasprit Bumrah
ಪ್ರಮುಖ ಸುದ್ದಿ1 hour ago

Jasprit Bumrah : ಮಗನ ಮುಂದೆ ವಿಶ್ವ ಕಪ್​ ಗೆದ್ದಿದ್ದು ದೊಡ್ಡ ಖುಷಿ ಎಂದ ಜಸ್​ಪ್ರಿತ್​ ಬುಮ್ರಾ

Bangalore–Mysore Expressway
ಕರ್ನಾಟಕ1 hour ago

Bangalore–Mysore Expressway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಾಳೆಯಿಂದ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

karnataka Weather Forecast
ಮಳೆ1 hour ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Rain Effect
ಕೊಡಗು1 hour ago

Rain Effect : ಭಾರಿ ಮಳೆ ಎಫೆಕ್ಟ್‌; ಈ ಹೆದ್ದಾರಿ ಮಾರ್ಗದಲ್ಲಿ ನಾಳೆಯಿಂದ 1 ತಿಂಗಳು ವಾಹನ ಸಂಚಾರಕ್ಕೆ ನಿರ್ಬಂಧ!

Breakfast Tip
ಆರೋಗ್ಯ2 hours ago

Breakfast Tips: ಬೆಳಗಿನ ಉಪಾಹಾರಕ್ಕೆ ಈ 5 ಬಗೆಯ ಆಹಾರಗಳನ್ನು ಸೇವಿಸಬೇಡಿ!

Ravindra jadeja
ಪ್ರಮುಖ ಸುದ್ದಿ2 hours ago

Ravindra Jadeja : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಆಲ್​ರೌಂಡರ್​ ರವೀಂದ್ರ ಜಡೇಜಾ ವಿದಾಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ1 hour ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು6 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ1 day ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌