Serial Bride: ಹಲವು ಜನರನ್ನು ಮದುವೆಯಾಗಿ ವಂಚಿಸಿದ್ದ ಮಹಿಳೆಗೆ ಎಚ್‌ಐವಿ; ಮಾಜಿ ವರಗಳಿಗಾಗಿ ಶೋಧ! - Vistara News

ದೇಶ

Serial Bride: ಹಲವು ಜನರನ್ನು ಮದುವೆಯಾಗಿ ವಂಚಿಸಿದ್ದ ಮಹಿಳೆಗೆ ಎಚ್‌ಐವಿ; ಮಾಜಿ ವರಗಳಿಗಾಗಿ ಶೋಧ!

Serial Bride: ಅರೇಂಜ್‌ ಮ್ಯಾರೇಜ್‌ ಹೆಸರಿನಲ್ಲಿ ಮಹಿಳೆಯು ಹಲವರಿಗೆ ವಂಚಿಸಿದ್ದಳು. ತಾನು ಸೇರಿ ಏಳು ಜನರ ಗ್ಯಾಂಗ್‌ ಕಟ್ಟಿದ್ದ ಮಹಿಳೆಯು, ವಯಸ್ಸಾದರೂ ಮದುವೆಯಾಗದವರು, ಕಂಕಣ ಭಾಗ್ಯ ಕೂಡಿ ಬರದವರು, ಹೆಂಡತಿ ತೀರಿಕೊಂಡ ಬಳಿಕ ಒಂಟಿಯಾದವರನ್ನು ಗುರುತಿಸಿ, ಅವರನ್ನು ಮದುವೆಯಾಗುತ್ತಿದ್ದಳು. ಬಳಿಕ ಅವರ ಹಣ, ಚಿನ್ನ ಕದ್ದು ಪರಾರಿಯಾಗುತ್ತಿದ್ದಳು. ಈಗ ಈಕೆ ಜೈಲಿನಲ್ಲಿದ್ದು, ಎಚ್‌ಐವಿ ದೃಢಪಟ್ಟಿದೆ. ಇದು ಈಗ ಪೊಲೀಸರು ಹಾಗೂ ವೈದ್ಯಾಧಿಕಾರಿಗಳಿಗೆ ಹೊಸ ಆತಂಕ ತಂದೊಡ್ಡಿದೆ.

VISTARANEWS.COM


on

Serial Bride
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ದೇಶದ ಹಲವೆಡೆ ಹತ್ತಾರು ಜನರನ್ನು ನಂಬಿಸಿ, ಅವರನ್ನು ಮದುವೆಯಾಗಿ, ಬಳಿಕ ಅವರ ಚಿನ್ನ ಹಾಗೂ ನಗದನ್ನು ದೋಚಿ ಪರಾರಿಯಾಗುತ್ತಿದ್ದ, ಸೀರಿಯಲ್‌ ಬ್ರೈಡ್‌ (ಸರಣಿ ಮದುಮಗಳು ಅಥವಾ Serial Bride) ಎಂದೇ ಖ್ಯಾತಿಯಾಗಿದ್ದ ಮಹಿಳೆಗೆ ಈಗ ಎಚ್‌ಐವಿ ದೃಢಪಟ್ಟಿರುವುದು ವೈದ್ಯಕೀಯ ವರದಿಗಳಿಂದ ಸಾಬೀತಾಗಿದೆ. ಇದು ಈಗ ಪೊಲೀಸರಿಗೆ ಮತ್ತೊಂದು ಸವಾಲಾಗಿದ್ದು, ಈಕೆಯನ್ನು ಮದುವೆಯಾಗಿದ್ದ ಮಾಜಿ ಪತಿಯರನ್ನು ಹುಡುಕಲು ಉತ್ತರ ಪ್ರದೇಶ (Uttar Pradesh) ಹಾಗೂ ಉತ್ತರಾಖಂಡದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ.

ಅರೇಂಜ್‌ ಮ್ಯಾರೇಜ್‌ ಹೆಸರಿನಲ್ಲಿ ಮಹಿಳೆಯು ಹಲವರಿಗೆ ವಂಚಿಸಿದ್ದಳು. ತಾನು ಸೇರಿ ಏಳು ಜನರ ಗ್ಯಾಂಗ್‌ ಕಟ್ಟಿದ್ದ ಮಹಿಳೆಯು, ವಯಸ್ಸಾದರೂ ಮದುವೆಯಾಗದವರು, ಕಂಕಣ ಭಾಗ್ಯ ಕೂಡಿ ಬರದವರು, ಹೆಂಡತಿ ತೀರಿಕೊಂಡ ಬಳಿಕ ಒಂಟಿಯಾದವರನ್ನು ಗುರುತಿಸಿ, ಅವರನ್ನು ಮದುವೆಯಾಗುತ್ತಿದ್ದಳು. ಮದುವೆಯಾದ ಬಳಿಕ ಗ್ಯಾಂಗ್‌ನ ಸದಸ್ಯರನ್ನು ತನ್ನ ಸಂಬಂಧಿಕರು ಎಂದು ನೂತನ ವರಗಳಿಗೆ ಪರಿಚಯ ಮಾಡಿಸುತ್ತಿದ್ದಳು. ಇದಾದ ಬಳಿಕ, ಆ ವ್ಯಕ್ತಿಯ ಬಳಿಯ ನಗದು, ಚಿನ್ನಾಭರಣಗಳನ್ನು ಕದ್ದು ಪರಾರಿಯಾಗುತ್ತಿದ್ದಳು.

World Aids Vaccine Day

ಹೀಗೆ, ಉತ್ತರ ಪ್ರದೇಶ, ಉತ್ತರಾಖಂಡದಲ್ಲಿ ಹಲವರಿಗೆ ಮೋಸ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಹಿಳೆ ಹಾಗೂ ಆರು ಆರೋಪಿಗಳನ್ನು ಬಂಧಿಸಿದ್ದರು. ಮಹಿಳೆಯ ಸೇರಿ ಏಳು ಜನರನ್ನು ಮುಜಫ್ಫರ್‌ನಗರ ಜೈಲಿನಲ್ಲಿ ಇರಿಸಲಾಗಿದೆ. ಇತ್ತೀಚೆಗೆ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಜಿಲ್ಲಾಸ್ಪತ್ರೆಯ ವೈದ್ಯರು ನೀಡಿದ ವರದಿಯಲ್ಲಿ, ಮಹಿಳೆಗೆ ಏಡ್ಸ್‌ ಇರುವುದು ಪತ್ತೆಯಾಗಿದೆ. ಇದು ಈಗ ಭೀಕರ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆಯನ್ನು ತಂದೊಡ್ಡಿದೆ.

“ಮಹಿಳೆಯು ಹಲವು ಜನರಿಗೆ ವಂಚಿಸಿದ್ದು, ಹತ್ತಾರು ಜನರು ಈಕೆಯ ಜತೆ ದೈಹಿಕ ಸಂಪರ್ಕಕ್ಕೆ ಬಂದಿದ್ದಾರೆ. ಈಗ ಮಹಿಳೆಗೆ ಎಚ್‌ಐವಿ ಇದೆ ಎಂಬುದು ಇತ್ತೀಚಿನ ವೈದ್ಯಕೀಯ ವರದಿಯಿಂದ ತಿಳಿದುಬಂದಿದೆ. ಈಕೆಯ ಜತೆ ಲೈಂಗಿಕ ಸಂಪರ್ಕ ಹೊಂದಿದವರು, ಮದುವೆಯಾದವರನ್ನು ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಹುಡುಕಲಾಗುತ್ತಿದೆ” ಎಂದು ಮುಜಫ್ಫರ್‌ನಗರ ಜೈಲು ಎಸ್‌ಪಿ ಸೀತಾರಾಮ್‌ ಶರ್ಮಾ ಅವರು ಸುದ್ದಿಗಾರರರಿಗೆ ಮಾಹಿತಿ ನೀಡಿದ್ದಾರೆ. ಇನ್ನು, ಈಕೆಯನ್ನು ಮದುವೆಯಾದವರು ಕೂಡಲೇ ಎಚ್‌ಐವಿ ತಪಾಸಣೆ ಮಾಡಿಸಿಕೊಳ್ಳಿ ಎಂಬುದಾಗಿ ವೈದ್ಯಾಧಿಕಾರಿಗಳು ಕರೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Sebi Fines: ವಂಚನೆ ಪ್ರಕರಣ; ಟಿವಿ ನಿರೂಪಕ, ವಿಶ್ಲೇಷಕನಿಗೆ ತಲಾ 1 ಕೋಟಿ ರೂ. ದಂಡ ವಿಧಿಸಿದ ಸೆಬಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Medha Patkar: ನರ್ಮದಾ ಬಚಾವೋ ಹೋರಾಟಗಾರ್ತಿ ಮೇಧಾ ಪಾಟ್ಕರ್‌ಗೆ ಜೈಲು; 10ಲಕ್ಷ ರೂ. ದಂಡ

Medha Patkar: ಮೇಧಾ ಪಾಟ್ಕರ್‌ ಅವರನ್ನು ದೋಷಿ ಎಂದು ಘೋಷಿಸಿದ ಮೆಟ್ರೋಪಾಲಿಟನ್‌ ಮ್ಯಾಜಿಸ್ಟ್ರೇಟ್‌ ರಾಘವ್‌ ಸಕ್ಸೇನಾ ಅವರಿಗೆ 10ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದೆ. ಆ.1ರವರೆಗೆ ಆಕೆಯ ಶಿಕ್ಷೆಯ ವಿನಾಯಿತಿ ನೀಡಿದ್ದು, ಅಲ್ಲಿವರೆಗೆ ಆಕೆಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಕರಣದ ಗಂಭೀರತೆ, ಮೇಧಾ ಪಾಟ್ಕರ್‌ ಅವರ ವಯಸ್ಸು ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಸರಳ ಸಜೆ ವಿಧಿಸಲಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

VISTARANEWS.COM


on

Medha Patkar
Koo

ಹೊಸದಿಲ್ಲಿ: ಮಾನನಷ್ಟ ಮೊಕದ್ದಮೆ(Defamation Case)ಯಲ್ಲಿ ಖ್ಯಾತ ಸಾಮಾಜಿಕ ಕಾರ್ಯಕರ್ತೆ, ನರ್ಮದಾ ಬಚಾವೋ ಹೋರಾಟಗಾರ್ತಿ ಮೇಧಾ ಪಾಟ್ಕರ್‌(Medha Patkar) ಅವರು ಐದು ತಿಂಗಳ ಸರಳ ಸಜೆಗೆ ಗುರಿಯಾಗಿದ್ದಾರೆ. ಮೇಧಾ ವಿರುದ್ಧದಿಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ವಿನಯ್‌ ಕುಮಾರ್‌ ಸಕ್ಸೇನಾ(Vinay Kumar Saxena) ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣದಲ್ಲಿ ದಿಲ್ಲಿಯ ಸಾಕೇತ್‌ ಕೋರ್ಟ್‌(Delhi Saket Court) ಮೇಧಾ ಪಾಟ್ಕರ್‌ ಅವರನ್ನು ದೋಷಿ ಎಂದು ಘೋಷಿಸಿತ್ತು. ಇದೀಗ ಶಿಕ್ಷೆ ಪ್ರಮಾಣ ಪ್ರಕಟಿಸಿದೆ.

ಮೇಧಾ ಪಾಟ್ಕರ್‌ ಅವರನ್ನು ದೋಷಿ ಎಂದು ಘೋಷಿಸಿದ ಮೆಟ್ರೋಪಾಲಿಟನ್‌ ಮ್ಯಾಜಿಸ್ಟ್ರೇಟ್‌ ರಾಘವ್‌ ಸಕ್ಸೇನಾ ಅವರಿಗೆ 10ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದೆ. ಆ.1ರವರೆಗೆ ಆಕೆಯ ಶಿಕ್ಷೆಯ ವಿನಾಯಿತಿ ನೀಡಿದ್ದು, ಅಲ್ಲಿವರೆಗೆ ಆಕೆಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಕರಣದ ಗಂಭೀರತೆ, ಮೇಧಾ ಪಾಟ್ಕರ್‌ ಅವರ ವಯಸ್ಸು ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಸರಳ ಸಜೆ ವಿಧಿಸಲಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಮೇಧಾ ಪ್ರತಿಕ್ರಿಯೆ

ಇನ್ನು ಶಿಕ್ಷೆಯ ಪ್ರಮಾಣ ಘೋಷಣೆಯಾಗುತ್ತಲ್ಲೇ ಈ ಬಗ್ಗೆ ಮೇಧಾ ಪಾಟ್ಕರ್‌ ಪ್ರತಿಕ್ರಿಯಿಸಿದ್ದು, ಸತ್ಯ ಎಂದಿಗೂ ಸಾಯಲ್ಲ. ನಾವು ಯಾರನ್ನೂ ಅವಮಾನಿಸಿಲ್ಲ. ನಾವು ನಮ್ಮ ಕೆಲಸವನ್ನಷ್ಟೇ ಮಾಡಿದ್ದೇವೆ. ತೀರ್ಪನ್ನು ಪ್ರಶ್ನಿಸಿ ಮೆಲ್ಮನವಿ ಸಲ್ಲಿಸುತ್ತೇವೆ ಎಂದಿದ್ದಾರೆ.

ಏನಿದು ಪ್ರಕರಣ?

ದಿಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ವಿನಯ್‌ ಕುಮಾರ್‌ ಸಕ್ಸೇನಾ ಮತ್ತು ಮೇಧಾ ಅವರ ನಡುವೆ 2000ರಿಂದಲೂ ಕಾನೂನು ಸಮರ ನಡೆಯುತ್ತಿದೆ. ಸಕ್ಸೇನಾ ಅವರು ಆಗ ಗುಜರಾತ್‌ನ ಅಹಮದಾಬಾದ್‌ ಮೂಲದ ‘ನ್ಯಾಷನಲ್‌ ಕೌನ್ಸಿಲ್‌ ಫಾರ್‌ ಸಿವಿಲ್‌ ಲಿಬರ್ಟೀಸ್‌’ ಎನ್‌ಜಿಒದ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದರು. ಈ ವೇಳೆ ಮೇಧಾ ಪಾಟ್ಕರ್‌ ಅವರು ಟಿವಿ ಸಂದರ್ಶನದಲ್ಲಿ ಸಕ್ಸೇನಾ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಆಗ ತಮ್ಮ ಹಾಗೂ ಎನ್‌ಬಿಎ (ನರ್ಮದಾ ಬಚಾವೋ ಆಂದೋಲನ) ವಿರುದ್ಧ ಸಕ್ಸೇನಾ ಅವರು ಜಾಹೀರಾತು ಪ್ರಕಟಿಸಿದ್ದಾರೆ ಎಂದು ಮೇಧಾ ಅವರು ದೂರು ಸಲ್ಲಿಸಿದ್ದರು.2006ರಲ್ಲಿ ಟಿವಿ ಚಾನೆಲ್‌ ಒಂದರಲ್ಲಿ ತಮ್ಮ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ ಮತ್ತು ಅವಮಾನಕರ ಪತ್ರಿಕಾ ಹೇಳಿಕೆ ಹೊರಡಿಸಿದ್ದಾರೆ ಎಂದು ಆರೋಪಿಸಿ ಸಕ್ಸೇನಾ ಅವರು ಎರಡು ಪ್ರಕರಣಗಳನ್ನು ಮೇಧಾ ಪಾಟ್ಕರ್ ಅವರ ವಿರುದ್ಧ ದಾಖಲಿಸಿದ್ದರು.

2006ನೇ ಇಸವಿಯಲ್ಲಿ ದಾಖಲಿಸಿದ್ದ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ್ದ ದಿಲ್ಲಿಯ ಸಾಕೇತ್‌ ಕೋರ್ಟ್‌ ಮೆಟ್ರೋ ಪಾಲಿಟನ್‌ ಮ್ಯಾಜಿಸ್ಪ್ರೇಟ್‌ ರಾಘವ್‌ ಶರ್ಮಾ ಅವರು, ಮೇಧಾ ಪಾಟ್ಕರ್‌ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದರು.

ಇದನ್ನೂ ಓದಿ: Money Guide: ವಿದೇಶ ಪ್ರವಾಸಕ್ಕೆ ಮುಂದಾಗಿದ್ದೀರಾ? ಅತ್ಯುತ್ತಮ ಕೊಡುಗೆ ನೀಡುವ ಈ ಅಂತಾರಾಷ್ಟ್ರೀಯ ಡೆಬಿಟ್ ಕಾರ್ಡ್‌ ಬಗ್ಗೆ ತಿಳಿಯಿರಿ

Continue Reading

ವಾಣಿಜ್ಯ

New Rules: ಐಟಿಆರ್‌ನಿಂದ ಕ್ರೆಡಿಟ್ ಕಾರ್ಡ್‌ವರೆಗೆ; ಈ ತಿಂಗಳಲ್ಲಿ ಹಲವು ಹೊಸ ಬದಲಾವಣೆ

ಐಸಿಐಸಿಐ ಬ್ಯಾಂಕ್, ಎಸ್‌ಬಿಐ ಕ್ರೆಡಿಟ್ ಕಾರ್ಡ್ ಸೇವೆಗಳಲ್ಲಿ ಪರಿಷ್ಕರಣೆ, ಯೂನಿಯನ್ ಬಜೆಟ್‌ನ ಘೋಷಣೆ ಮತ್ತು ಆದಾಯ ತೆರಿಗೆ ರಿಟರ್ನ್ಸ್, ಡಿಜಿಟಲ್ ವ್ಯಾಲೆಟ್‌ಗಳಿಗೆ ಸಂಬಂಧಿಸಿ ಹೊಸ ನಿಯಮಗಳು (New Rules) ಜಾರಿ ಸೇರಿ ಈ ತಿಂಗಳಲ್ಲಿ ಹಲವು ಪ್ರಮುಖ ಬದಲಾವಣೆಗಳು ಆಗಲಿವೆ.

VISTARANEWS.COM


on

By

New Rules
Koo

ಜುಲೈ ತಿಂಗಳಿಗೆ ಹೆಜ್ಜೆ ಇಟ್ಟಿದ್ದೇವೆ. ಈ ಸಂದರ್ಭದಲ್ಲಿ ಕ್ರೆಡಿಟ್ ಕಾರ್ಡ್ (credit card) ಬಳಕೆದಾರರು, ತೆರಿಗೆದಾರರು (taxpayers) ಮತ್ತು ಡಿಜಿಟಲ್ ವ್ಯಾಲೆಟ್ (digital wallet) ಹೊಂದಿರುವವರು ಗಮನಿಸಬೇಕಾದ ಪ್ರಮುಖ ವಿಷಯಗಳಿವೆ. 2024ರ ಜುಲೈನಲ್ಲಿ ಹಲವು ಪ್ರಮುಖ (New Rules) ಬದಲಾವಣೆಗಳು ಆಗಲಿವೆ.

ಐಸಿಐಸಿಐ ಬ್ಯಾಂಕ್ (ICICI bank) ಮತ್ತು ಎಸ್‌ಬಿಐ (SBI) ಮೂಲಕ ಕ್ರೆಡಿಟ್ ಕಾರ್ಡ್ ಸೇವೆಗಳಲ್ಲಿ ಪರಿಷ್ಕರಣೆ, ಯೂನಿಯನ್ ಬಜೆಟ್‌ನ ಘೋಷಣೆ ಮತ್ತು ಆದಾಯ ತೆರಿಗೆ ರಿಟರ್ನ್ಸ್, ಡಿಜಿಟಲ್ ವ್ಯಾಲೆಟ್‌ಗಳಿಗೆ ಹೊಸ ನಿಯಮಗಳು ಸೇರಿವೆ.

ಯಾವುದೆಲ್ಲ ಪ್ರಮುಖ ಬದಲಾವಣೆ ?

ಆದಾಯ ತೆರಿಗೆ

2024-25ರ ಮೌಲ್ಯಮಾಪನ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ಸ್ (ITR) ಅನ್ನು 2024ರ ಜುಲೈ 31ರೊಳಗೆ ಸಲ್ಲಿಸಬೇಕು. ಸುಗಮ ಮತ್ತು ಸಮಯೋಚಿತ ಸಲ್ಲಿಕೆಯನ್ನು ಖಚಿತಪಡಿಸಿಕೊಳ್ಳಲು ತೆರಿಗೆದಾರರು ಫೈಲಿಂಗ್ ಪ್ರಕ್ರಿಯೆಯನ್ನು ಮೊದಲೇ ಪ್ರಾರಂಭಿಸುವುದು ಸೂಕ್ತ.

ಕ್ರೆಡಿಟ್ ಕಾರ್ಡ್

ಐಸಿಐಸಿಐ ಬ್ಯಾಂಕ್ ಚಾರ್ಜ್ ಸ್ಲಿಪ್ ವಿನಂತಿ, ಚೆಕ್/ನಗದು ಪಿಕ್ ಅಪ್, ಡಯಲ್-ಎ-ಡ್ರಾಫ್ಟ್ ವಹಿವಾಟು, ಔಟ್‌ಸ್ಟೇಷನ್ ಚೆಕ್ ಪ್ರಕ್ರಿಯೆ ಮತ್ತು ನಕಲಿ ಬ್ಯಾಂಕ್ ಸ್ಟೇಟ್‌ಮೆಂಟ್‌ಗಳಂತಹ ವಿವಿಧ ಸೇವೆಗಳಿಗೆ ಶುಲ್ಕವನ್ನು ನಿಲ್ಲಿಸಲಿದ್ದು, ಕಾರ್ಡ್ ಬದಲಾವಣೆಗೆ 200 ರೂ. ಶುಲ್ಕ ಜಾರಿ ಮಾಡಿದೆ.

ಎಸ್‌ಬಿಐ ಕಾರ್ಡ್‌ಗಳು ಜುಲೈ 15ರಿಂದ ಅನೇಕ ಕಾರ್ಡ್‌ಗಳಲ್ಲಿ ಸರ್ಕಾರಕ್ಕೆ ಸಂಬಂಧಿಸಿದ ವಹಿವಾಟುಗಳಿಗೆ ರಿವಾರ್ಡ್ ಪಾಯಿಂಟ್‌ಗಳನ್ನು ನೀಡುವುದನ್ನು ನಿಲ್ಲಿಸುತ್ತವೆ.

ಆಕ್ಸಿಸ್ ಬ್ಯಾಂಕ್‌ ಸಿಟಿ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳನ್ನು ಜುಲೈ 15ರೊಳಗೆ ನಿಲ್ಲಿಸಲಿದೆ. ಹೊಸ ಕಾರ್ಡ್ ಹೆಸರು ಮತ್ತು ರಿವಾರ್ಡ್ ಪಾಯಿಂಟ್‌ಗಳೊಂದಿಗೆ ಬರಲಿದೆ.

ಆರ್‌ಬಿಐ ಎಲ್ಲಾ ಕ್ರೆಡಿಟ್ ಕಾರ್ಡ್ ಪಾವತಿಗಳನ್ನು ಜುಲೈ 1ರಿಂದ ಭಾರತ್ ಬಿಲ್ ಪಾವತಿ ವ್ಯವಸ್ಥೆ (BBPS) ಮೂಲಕ ಪ್ರಕ್ರಿಯೆಗೊಳಿಸಬೇಕೆಂದು ಆದೇಶಿಸಿದೆ. ಇದು ಹಲವಾರು ಪ್ರಮುಖ ಬ್ಯಾಂಕ್‌ಗಳು ಮತ್ತು ಫಿನ್‌ಟೆಕ್ ಪ್ಲಾಟ್‌ಫಾರ್ಮ್‌ಗಳ ಮೇಲೆ ಪರಿಣಾಮ ಬೀರಲಿದೆ.

ಯೆಸ್ ಬ್ಯಾಂಕ್ ತನ್ನ ಲಾಂಜ್ ಪ್ರವೇಶ ನಿಯಮಗಳನ್ನು ಪರಿಷ್ಕರಿಸಿದೆ. ಪೂರಕ ಪ್ರವೇಶಕ್ಕಾಗಿ ಪ್ರತಿ ತ್ರೈಮಾಸಿಕಕ್ಕೆ ಕನಿಷ್ಠ 35,000 ರೂ. ಖರ್ಚು ಮಾಡಬೇಕಾಗುತ್ತದೆ.

2024ರ ಬಜೆಟ್ ಪರಿಣಾಮ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ತಿಂಗಳು ಕೇಂದ್ರ ಬಜೆಟ್ 2024 ಅನ್ನು ಪ್ರಕಟಿಸಲಿದ್ದಾರೆ. ಹಲವು ಬದಲಾವಣೆಗಳನ್ನು ನಿರೀಕ್ಷಿಸಲಾಗಿದೆ. ಆದಾಯ ತೆರಿಗೆಗಳಲ್ಲಿ ಹೊಂದಾಣಿಕೆ, ವೈದ್ಯಕೀಯ ವೆಚ್ಚ ಕಡಿತ, ಹೆಚ್ಚುವರಿ ತೆರಿಗೆ ರಿಯಾಯಿತಿ ಮತ್ತು ಪಿಂಚಣಿ ಪ್ರಯೋಜನಗಳನ್ನು ಇದು ಒಳಗೊಂಡಿರುವ ಸಾಧ್ಯತೆ ಇದೆ.

ಪೇಟಿಎಂ ವ್ಯಾಲೆಟ್‌ಗಳು

ಶೂನ್ಯ ಬ್ಯಾಲೆನ್ಸ್ ಹೊಂದಿರುವ, ಕಳೆದ ವರ್ಷ ಅಥವಾ ಹೆಚ್ಚಿನ ಅವಧಿಗೆ ಯಾವುದೇ ವಹಿವಾಟುಗಳಿಲ್ಲದ ಪೇಟಿಎಂ ನಿಷ್ಕ್ರಿಯ ವ್ಯಾಲೆಟ್‌ಗಳನ್ನು ಮುಚ್ಚಲಿದೆ. ಈ ಪ್ರಕ್ರಿಯೆ 2024ರ ಜುಲೈ 20ರಿಂದ ಪ್ರಾರಂಭವಾಗುತ್ತದೆ. ವ್ಯಾಲೆಟ್ ಮುಚ್ಚುವ ಮೊದಲು ಬಳಕೆದಾರರಿಗೆ ಸೂಚನೆಯನ್ನು ನೀಡಲಾಗುತ್ತದೆ.

ಇದನ್ನೂ ಓದಿ: Money Guide: ಸಾಲಕ್ಕೆ ಅಪ್ಲೈ ಮಾಡುವ ಮುನ್ನ ಈ ಅಂಶ ನಿಮಗೆ ತಿಳಿದಿರಲೇ ಬೇಕು

ಡೆಬಿಟ್ ಕಾರ್ಡ್

ಪಂಜಾಬ್ ನ್ಯಾಷನಲ್ ಬ್ಯಾಂಕ್ 2024ರ ಜುಲೈ 1ರಿಂದ ರುಪೇ ಪ್ಲಾಟಿನಂ ಡೆಬಿಟ್ ಕಾರ್ಡುದಾರರಿಗೆ ಪಿಎನ್‌ಬಿ ತನ್ನ ಲಾಂಜ್‌ ಪ್ರವೇಶ ಪ್ರೋಗ್ರಾಂ ಅನ್ನು ನವೀಕರಿಸಿದೆ. ಇದರಲ್ಲಿ ಹೊಸ ನಿಯಮಗಳು ಅನ್ವಯವಾಗಲಿದೆ. ಪ್ರತಿ ತ್ರೈಮಾಸಿಕಕ್ಕೆ ದೇಶೀಯ ವಿಮಾನ ನಿಲ್ದಾಣ ಅಥವಾ ರೈಲ್ವೇ ಲಾಂಜ್ ಪ್ರವೇಶ ವರ್ಷಕ್ಕೆ ಅನುಮತಿ ನೀಡುತ್ತದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕೋಣೆ ಪ್ರವೇಶ, ವಿಮಾನ ನಿಲ್ದಾಣದ ಲಾಂಜ್ ಪ್ರವೇಶಕ್ಕಾಗಿ 2 ರೂ. ಅಧಿಕೃತ ಶುಲ್ಕ ವಿಧಿಸಲಾಗುತ್ತದೆ.

Continue Reading

ದೇಶ

Amit Shah: ಹೊಸ ಕ್ರಿಮಿನಲ್ ಕಾನೂನಿನಲ್ಲಿ ಶಿಕ್ಷೆಯ ಬದಲು ನ್ಯಾಯಕ್ಕೆ ಪ್ರಾಧಾನ್ಯತೆ; ಅಮಿತ್ ಶಾ

Amit Shah: ಇಂದು ಜಾರಿಗೆ ಬಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಶಿಕ್ಷೆಯ ಬದಲಿಗೆ ನ್ಯಾಯವನ್ನು ಖಚಿತಪಡಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ವಸಾಹತುಶಾಹಿ ಯುಗದ ಅಪರಾಧ ಸಂಹಿತೆಯ ಕೂಲಂಕಷ ಪರಿಶೀಲನೆ ನಡೆಸಿ ನ್ಯಾಯ ವ್ಯವಸ್ಥೆಗೆ ʼಭಾರತೀಯ ಆತ್ಮʼವನ್ನು ಸೇರಿಸಲಾಗಿದೆ ಎಂದು ಹೇಳಿದ್ದಾರೆ.

VISTARANEWS.COM


on

Amith Shah
Koo

ನವದೆಹಲಿ: ಇಂದು (ಜುಲೈ 1) ಜಾರಿಗೆ ಬಂದ ಮೂರು ಹೊಸ ಕ್ರಿಮಿನಲ್ ಕಾನೂನು (New Criminal Laws)ಗಳು ಶಿಕ್ಷೆಯ ಬದಲಿಗೆ ನ್ಯಾಯವನ್ನು ಖಚಿತಪಡಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಸ್ವಾತಂತ್ರ್ಯ ಪಡೆದು 77 ವರ್ಷಗಳ ಬಳಿಕ ದೇಶವು ಸಂಪೂರ್ಣವಾಗಿ ‘ಸ್ವದೇಶಿ’ ಕಾನೂನು ವ್ಯವಸ್ಥೆಯನ್ನು ಹೊಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ವಸಾಹತುಶಾಹಿ ಯುಗದ ಅಪರಾಧ ಸಂಹಿತೆಯ ಕೂಲಂಕಷ ಪರಿಶೀಲನೆ ನಡೆಸಿ ನ್ಯಾಯ ವ್ಯವಸ್ಥೆಗೆ ʼಭಾರತೀಯ ಆತ್ಮʼವನ್ನು ಸೇರಿಸಲಾಗಿದೆ ಎಂದು ಹೇಳಿದ್ದಾರೆ. ಭಾರತೀಯ ದಂಡ ಸಂಹಿತೆ (IPC-1860), ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ (CrPC-1973) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು (Indian Evidence Act-1872) ತಿದ್ದುಪಡಿಗೆ ಒಳಪಡಿಸಲಾಗಿದೆ. ಇವುಗಳ ಬದಲಾಗಿ ಮೂರು ಹೊಸ ಕಾನೂನುಗಳು (New Laws) ಇಂದಿನಿಂದಲೇ (ಜುಲೈ 1) ದೇಶಾದ್ಯಂತ ಜಾರಿಗೆ ಬಂದಿವೆ.

ಅಮಿತ್‌ ಶಾ ಹೇಳಿದ್ದೇನು?

ಮಹಿಳೆಯರ ವಿರುದ್ಧದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ʼʼಹೊಸ ಕಾನೂನು ಸಂತ್ರಸ್ತೆಯ ಹೇಳಿಕೆಯನ್ನು ಅವರ ಮನೆಯಲ್ಲಿ ದಾಖಲಿಸಲು ಅವಕಾಶ ನೀಡುತ್ತದೆ ಮತ್ತು ಸಾಮಾಜಿಕ ಕಳಂಕದಿಂದ ಆಕೆಯನ್ನು ರಕ್ಷಿಸುವ ಉದ್ದೇಶದಿಂದ ಆನ್‌ಲೈನ್‌ ಎಫ್ಐಆರ್ ಸೌಲಭ್ಯವನ್ನೂ ಜಾರಿಗೆ ತರಲಾಗಿದೆ” ಎಂದು ತಿಳಿಸಿದ್ದಾರೆ.

“ಸಾಮಾಹಿಕ ಹತ್ಯೆ ಪ್ರಕರಣದ ಬಗ್ಗೆ ಈ ಹಿಂದೆ ಯಾವುದೇ ಪ್ರತ್ಯೇಕ ಕಾನೂನಿನ ಪ್ರಸ್ತಾವ ಇರಲಿಲ್ಲ. ಈಗ ಅದಕ್ಕೂ ಅವಕಾಶ ಕಲ್ಪಿಸಲಾಗಿದೆ. ಇದು ಬಹುದಿನಗಳ ಬೇಡಿಕೆಯಾಗಿತ್ತು. ಅಲ್ಲದೆ ನಾವು ದೇಶದ್ರೋಹದ ವಿಭಾಗವನ್ನು ಸಂಪೂರ್ಣವಾಗಿ ತೆಗೆದು ಹಾಕಿದ್ದೇವೆ ಮತ್ತು ರಾಷ್ಟ್ರ ವಿರೋಧಿ ಚಟುವಟಿಕೆಗಳಿಗಾಗಿ ಹೊಸ ವಿಭಾಗವನ್ನು ತಂದಿದ್ದೇವೆ. ಈ ಹಿಂದೆ ಸರ್ಕಾರದ ವಿರುದ್ಧ ಹೇಳಿಕೆ ನೀಡುವುದು ಅಪರಾಧವಾಗಿತ್ತು. ಈಗ ಭಾರತದ ಏಕತೆ ಮತ್ತು ಸಾರ್ವಭೌಮತ್ವಕ್ಕೆ ಹಾನಿ ಮಾಡುವ ಪ್ರಯತ್ನಗಳ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನು ಅವಕಾಶ ನೀಡುತ್ತದೆ” ಎಂದು ಅಮಿತ್‌ ಶಾ ವಿವರಿಸಿದ್ದಾರೆ.

ಹೊಸ ಕ್ರಿಮಿನಲ್ ಕಾನೂನುಗಳು ಆಧುನಿಕ ಕಾನೂನು ವ್ಯವಸ್ಥೆಯನ್ನು ವ್ಯಾಖ್ಯಾನಿಸುತ್ತವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. “ನಾವು ಕೇವಲ ತಂತ್ರಜ್ಞಾನವನ್ನು ಅಳವಡಿಸಿಕೊಂಡಿಲ್ಲ, ಮುಂದಿನ 50 ವರ್ಷಗಳಲ್ಲಿ ಸಂಭವಿಸಬಹುದಾದ ತಾಂತ್ರಿಕ ಬದಲಾವಣೆಗಳನ್ನು ಊಹಿಸಿ ಅದಕ್ಕೆ ತಕ್ಕಂತೆ ಬದಲಾವಣೆ ತಂದಿದ್ದೇವೆ. ಇದು ವಿಶ್ವದ ಅತ್ಯಂತ ಆಧುನಿಕ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಾಗಲಿದೆ ಎನ್ನುವ ವಿಶ್ವಾಸವಿದೆʼʼ ಎಂದಿದ್ದಾರೆ.

ʼʼದಾಳಿ ಮತ್ತು ಶೋಧದ ವೇಳೆ ವಿಡಿಯೊಗ್ರಫಿ ಈಗ ಕಡ್ಡಾಯವಾಗಿದೆ. ಇದರಿಂದ ಯಾರನ್ನೂ ಮೋಸ ಮಾಡಲು ಸಾಧ್ಯವಿಲ್ಲ. ಅತ್ಯಾಚಾರ ಅಥವಾ ಲೈಂಗಿಕ ಕಿರುಕುಳದಿಂದ ಬದುಕುಳಿದವರ ಇ-ಸ್ಟೇಟ್‌ಮೆಂಟ್‌ಗೆ ಇನ್ನು ಕಾನೂನು ಮಾನ್ಯತೆ ಇರಲಿದೆʼʼ ಎಂದು ಅವರು ತಿಳಿಸಿದ್ದಾರೆ.

ಪ್ರತಿಪಕ್ಷಗಳ ನಡೆಗೆ ಟೀಕೆ

ಹೊಸ ಕಾನೂನುಗಳ ಬಗ್ಗೆ ಸರಿಯಾಗಿ ಚರ್ಚಿಸಲಾಗಿಲ್ಲ ಮತ್ತು 146 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿದ ನಂತರ ಸಂಸತ್ತಿನಲ್ಲಿ ಇದನ್ನು ಅಂಗೀಕರಿಸಲಾಗಿದೆ ಎಂದು ವಿರೋಧ ಪಕ್ಷ ಆರೋಪಕ್ಕೂ ಅಮಿತ್‌ ಶಾ ಉತ್ತರಿಸಿದ್ದಾರೆ. ʼʼಸಂಸದರನ್ನು ಸಾಮೂಹಿಕವಾಗಿ ಅಮಾನತುಗೊಳಿಸಿದ ನಂತರ ಮಸೂದೆಗಳನ್ನು ತರಲಾಗಿದೆ ಎಂಬುದು ಮತ್ತೊಂದು ಸುಳ್ಳು. ಹೊಸ ಕಾನೂನು ಜಾರಿಗೊಳಿಸುವ ಮುನ್ನ ನಮ್ಮ ಸಚಿವಾಲಯವು ಎಲ್ಲ ಸಂಸದರು, ಮುಖ್ಯಮಂತ್ರಿಗಳು, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರು ಮತ್ತು ಅಧಿಕಾರಿಗಳಿಂದ ಸಲಹೆ ಪಡೆದುಕೊಂಡಿದೆ. ಈ ಎಲ್ಲ ಸಲಹೆಗಳನ್ನು ಅಧ್ಯಯನ ಮಾಡಲಾಗಿದೆ. ಈ ವಿಷಯದ ಬಗ್ಗೆ ಚರ್ಚಿಸಲು ನಾನು 158 ಸಭೆಗಳ ಅಧ್ಯಕ್ಷತೆ ವಹಿಸಿದ್ದೇನೆ. ಮಸೂದೆಯ ಚರ್ಚೆ ವೇಳೆ ಎಲ್ಲ ಪಕ್ಷಗಳ ಸದಸ್ಯರು ಭಾಗವಹಿಸಿದ್ದರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: New Criminal Laws : ಹೊಸ ಕ್ರಿಮಿನಲ್ ಕಾನೂನು ಇಂದಿನಿಂದ ಜಾರಿ; ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ!

ʼʼನಾಲ್ಕೈದು ರಾಜಕೀಯ ಶೈಲಿಯ ಸಲಹೆಗಳನ್ನು ಹೊರತುಪಡಿಸಿ, ಪ್ರತಿಯೊಂದು ಸಲಹೆಯನ್ನು ಅಳವಡಿಸಿಕೊಳ್ಳಲಾಗಿದೆ. ಜತೆಗೆ 93 ತಿದ್ದುಪಡಿಗಳನ್ನು ಮಾಡಲಾಗಿದೆ. ಮಸೂದೆಯನ್ನು ಮತ್ತೆ ಕ್ಯಾಬಿನೆಟ್ ಅನುಮೋದಿಸಿದ ಬಳಿಕ ಅದನ್ನು ಸಂಸತ್ತಿನಲ್ಲಿ ಮಂಡಿಸಲಾಯಿತು. ಶತಮಾನಗಳ ನಂತರ ನಡೆಯುತ್ತಿರುವ ಇಂತಹ ಬದಲಾವಣೆಗೆ ರಾಜಕೀಯ ಬಣ್ಣ ನೀಡುವುದು ಸರಿಯಲ್ಲ. ಏನಾದರೂ ಸಂದೇಹಗಳಿದ್ದರೆ ನೇರ ನನ್ನ ಬಳಿಗೆ ಬಂದರೆ ಚರ್ಚೆ ನಡೆಸಲು ಸಿದ್ಧʼʼ ಎಂದು ತಿಳಿಸಿದ್ದಾರೆ.

Continue Reading

ದೇಶ

Parliament Sessions: ಹಿಂದೂ ಹಿಂಸಾವಾದಿ ಹೇಳಿಕೆ; ಸಂಸತ್‌ನಲ್ಲಿ ರಾಹುಲ್‌-ಮೋದಿ ಜಟಾಪಟಿ

Parliament Sessions: ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳ ವಿರುದ್ಧ ವಾಗ್ದಾಳಿ ಆರಂಭಿಸಿದ ರಾಹುಲ್‌, ಹಿಂದೂ ಧರ್ಮ ಹಾಗೂ ನಮ್ಮ ಅನೇಕ ಹಿಂದೂ ಮಹಾಪುರುಷರು ಅಹಿಂಸೆಯನ್ನು ಪ್ರತಿಪಾದಿಸುತ್ತಾರೆ. ಜೀಸಸ್‌ ಕ್ರೈಸ್ಟ್‌ ಕೂಡ ಅಹಿಂಸೆಯನ್ನೇ ಪ್ರತಿಪಾದಿಸುತ್ತಾನೆ. ಸ್ವತಃ ಕೈಯಲ್ಲಿ ತ್ರಿಶೂಲ ಹಿಡಿದಿರುವ ಮಹಾಶಿವನೂ ಅಹಿಂಸೆಯನ್ನೇ ಹೇಳುತ್ತಾನೆ. ಆದರೆ ದಿನದ 24 ಹಿಂದೂಗಳೆಂದು ಹೇಳುತ್ತಾ ತಿರುಗಾಡುವವರು ಹಿಂಸೆ, ಶತ್ರುತ್ವ, ಅಸತ್ಯವನ್ನೇ ಹೇಳುತ್ತಿದ್ದಾರೆ. ನೀವು ಹಿಂದೂಗಳೇ ಅಲ್ಲ ಎಂದು ಕಿಡಿ ಕಾರಿದರು

VISTARANEWS.COM


on

Parliament Sessions
Koo

ಹೊಸದಿಲ್ಲಿ: ದಿನದ 24 ಗಂಟೆ ಹಿಂದೂಗಳೆಂದು ಹೇಳಿಕೊಂಡು ತಿರುಗುವವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಸಂಸತ್‌ ಅಧಿವೇಶನ(Parliament Sessions)ದಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ(Rahul Gandhi) ಹೇಳಿಕೆ ನೀಡಿದ್ದು, ಈ ವಿಚಾರ ಭಾರೀ ಕೋಲಾಹಲವನ್ನೇ ಸೃಷ್ಟಿಸಿತ್ತು. ರಾಹುಲ್‌ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಸೇರಿದಂತೆ ಆಡಳಿತ ಪಕ್ಷ ನಾಯಕರು ಭಾರೀ ವಿರೋಧ ವ್ಯಕ್ತಪಡಿಸಿದ್ದು, ಮಾತ್ರವಲ್ಲದೇ ತಕ್ಷಣ ರಾಹುಲ್‌ ಕ್ಷಮೆಯಾಚಿಸಬೇಕೆಂದು ಪಟ್ಟು ಹಿಡಿದ ಘಟನೆಗೆ ಇಂದು ಲೋಕಸಭೆ ಸಾಕ್ಷಿಯಾಯ್ತು.

ರಾಹುಲ್‌ ಹೇಳಿದ್ದೇನು?

ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳ ವಿರುದ್ಧ ವಾಗ್ದಾಳಿ ಆರಂಭಿಸಿದ ರಾಹುಲ್‌, ಹಿಂದೂ ಧರ್ಮ ಹಾಗೂ ನಮ್ಮ ಅನೇಕ ಹಿಂದೂ ಮಹಾಪುರುಷರು ಅಹಿಂಸೆಯನ್ನು ಪ್ರತಿಪಾದಿಸುತ್ತಾರೆ. ಜೀಸಸ್‌ ಕ್ರೈಸ್ಟ್‌ ಕೂಡ ಅಹಿಂಸೆಯನ್ನೇ ಪ್ರತಿಪಾದಿಸುತ್ತಾನೆ. ಸ್ವತಃ ಕೈಯಲ್ಲಿ ತ್ರಿಶೂಲ ಹಿಡಿದಿರುವ ಮಹಾಶಿವನೂ ಅಹಿಂಸೆಯನ್ನೇ ಹೇಳುತ್ತಾನೆ. ಆದರೆ ದಿನದ 24 ಗಂಟೆ ಹಿಂದೂಗಳೆಂದು ಹೇಳುತ್ತಾ ತಿರುಗಾಡುವವರು ಹಿಂಸೆ, ಶತ್ರುತ್ವ, ಅಸತ್ಯವನ್ನೇ ಹೇಳುತ್ತಿದ್ದಾರೆ. ನೀವು ಹಿಂದೂಗಳೇ ಅಲ್ಲ ಎಂದು ಕಿಡಿ ಕಾರಿದರು.

ಪ್ರಧಾನಿ ಮೋದಿ ಆಕ್ಷೇಪ

ಇನ್ನು ರಾಹುಲ್‌ ಮಾತು ಪುರ್ಣಗೊಳ್ಳುವ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಆಡಳಿತ ಪಕ್ಷ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಎಲ್ಲಾ ಹಿಂದೂಗಳನ್ನು ಹಿಂಸಾವಾದಿಗಳು ಹೇಳುತ್ತಿರುವುದು ತಪ್ಪು. ಹಿಂದೂಗ ಸಮುದಾಯವನ್ನು ಹಿಂಸಾವಾದಿಗಳೆಂದು ಕರೆಯುತ್ತಿರುವುದು ಗಂಭೀರವಾದ ಸಂಗತಿ ಎಂದಿದ್ದಾರೆ. ಇದಕ್ಕೆ ವಿರೋದ ವ್ಯಕ್ತಪಡಿಸಿದ ರಾಹುಲ್‌ ಕೇವಲ ಬಿಜೆಪಿ, ಆರ್‌ಎಸ್‌ಎಸ್‌ ನವರನ್ನು “ನಾನು ಉಲ್ಲೇಖಿಸಿ ಹೇಳಿರುವುದೇ ಹೊರತು ಪೂರ್ತಿ ಹಿಂದೂ ಸಮಾಜವನ್ನಲ್ಲ. ಪ್ರಧಾನಿ ಹೇಳಿಕೆಯನ್ನು ತಪ್ಪಾಗಿ ಅರ್ಥೈಸುತ್ತಿದ್ದಾರೆʼʼ ಎಂದು ಹೇಳಿದರು.

ಇನ್ನು ರಾಹುಲ್‌ ಹೇಳಿಕೆಗೆ ಬಿಜೆಪಿ ನಾಯಕರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ತಕ್ಷಣ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!

Continue Reading
Advertisement
Medha Patkar
ದೇಶ6 mins ago

Medha Patkar: ನರ್ಮದಾ ಬಚಾವೋ ಹೋರಾಟಗಾರ್ತಿ ಮೇಧಾ ಪಾಟ್ಕರ್‌ಗೆ ಜೈಲು; 10ಲಕ್ಷ ರೂ. ದಂಡ

Karave Protest
ಕರ್ನಾಟಕ8 mins ago

Karave Protest: ಕನ್ನಡಿಗರಿಗೆ ಉದ್ಯೋಗ ನೀಡಲು ಕರವೇ ನಾರಾಯಣ ಗೌಡ ನಿಯೋಗ ಮನವಿ; ಶೀಘ್ರವೇ ಕ್ರಮ ಎಂದ ಸಿಎಂ

Arecanut Insurance Karnataka last date
ಕೃಷಿ27 mins ago

Arecanut Insurance : ಮೆಣಸು, ಅಡಿಕೆಗೆ ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ

Thalapathy Vijay
Latest46 mins ago

Thalapathy Vijay: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

The whole society should be very careful about fake news says CM Siddaramaiah
ಕರ್ನಾಟಕ49 mins ago

Press Day: ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿದ್ದರಾಮಯ್ಯ

Money Guide
ಮನಿ-ಗೈಡ್57 mins ago

Money Guide: ವಿದೇಶ ಪ್ರವಾಸಕ್ಕೆ ಮುಂದಾಗಿದ್ದೀರಾ? ಅತ್ಯುತ್ತಮ ಕೊಡುಗೆ ನೀಡುವ ಈ ಅಂತಾರಾಷ್ಟ್ರೀಯ ಡೆಬಿಟ್ ಕಾರ್ಡ್‌ ಬಗ್ಗೆ ತಿಳಿಯಿರಿ

Suraj Revanna Case
ಪ್ರಮುಖ ಸುದ್ದಿ1 hour ago

Suraj Revanna Case: ಸೂರಜ್ ರೇವಣ್ಣ ಮತ್ತೆ 2 ದಿನ ಸಿಐಡಿ ಕಸ್ಟಡಿಗೆ; ವಕೀಲ ದೇವರಾಜೇಗೌಡಗೆ ಜಾಮೀನು

Actor Yash to recreate the 50s and 70s era in Toxic
ಸಿನಿಮಾ1 hour ago

Actor Yash: ರಾಕಿಂಗ್‌ ಸ್ಟಾರ್‌ ಯಶ್‌ ʼಟಾಕ್ಸಿಕ್‌ʼ ಸಿನಿಮಾದಿಂದ ಹೊರ ಬಿತ್ತು ಬಿಗ್‌ ಅಪ್‌ಡೇಟ್‌!

New Rules
ವಾಣಿಜ್ಯ2 hours ago

New Rules: ಐಟಿಆರ್‌ನಿಂದ ಕ್ರೆಡಿಟ್ ಕಾರ್ಡ್‌ವರೆಗೆ; ಈ ತಿಂಗಳಲ್ಲಿ ಹಲವು ಹೊಸ ಬದಲಾವಣೆ

new criminal law
ಕ್ರೈಂ2 hours ago

New Criminal Law: ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ ಹಾಸನದಲ್ಲಿ ದಾಖಲು, ಯಾವ ಕೇಸ್?‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ24 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌