CM Siddaramaiah: ವಿನಾಕಾರಣ ಕೇಂದ್ರವನ್ನು ದೂರಬೇಡಿ: ರಾಜ್ಯ ಸಂಸದರ ಸಭೆಯಲ್ಲಿ ಸಿಎಂಗೆ ಎನ್‌ಡಿಎ ಪಾಠ - Vistara News

ಪ್ರಮುಖ ಸುದ್ದಿ

CM Siddaramaiah: ವಿನಾಕಾರಣ ಕೇಂದ್ರವನ್ನು ದೂರಬೇಡಿ: ರಾಜ್ಯ ಸಂಸದರ ಸಭೆಯಲ್ಲಿ ಸಿಎಂಗೆ ಎನ್‌ಡಿಎ ಪಾಠ

CM Siddaramaiah: ನಿನ್ನೆ ಹೊಸದಿಲ್ಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ರಾಜ್ಯದಿಂದ ನೂತನವಾಗಿ ಆಯ್ಕೆಯಾದ ಲೋಕಸಭೆ ಹಾಗೂ ರಾಜ್ಯಸಭೆ ಸಂಸದರ ಸಭೆ ನಡೆಸಲಾಯಿತು.

VISTARANEWS.COM


on

mp meet cm siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ʼಕೇಂದ್ರ ಸರ್ಕಾರ (Central Govt) ರಾಜ್ಯಕ್ಕೆ ಏನೂ ಮಾಡಿಲ್ಲ, ಬಿಜೆಪಿ (BJP) ನಮಗೆ ಸಹಾಯ ಮಾಡ್ತಿಲ್ಲ, ರಾಜ್ಯದ ಬಗ್ಗೆ ನಮ್ಮ ರಾಜ್ಯದ ಬಿಜೆಪಿ ಸಂಸದರಿಗೇ ಕಾಳಜಿ ಇಲ್ಲ ಅನ್ನುವ ಮಾತುಗಳನ್ನು ಪದೇ ಪದೆ ಆಡುವುದನ್ನು ಬಿಡಿʼ ಎಂದು ಎನ್‌ಡಿಎ (NDA) ಸಂಸದರು ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಪಾಠ ಹೇಳಿದ್ದಾರೆ.

ನಿನ್ನೆ ಹೊಸದಿಲ್ಲಿಯಲ್ಲಿ ಸಿಎಂ ನೇತೃತ್ವದಲ್ಲಿ ನಡೆದ, ರಾಜ್ಯದ ನೂತನ ಸಂಸದರ ಸಭೆಯಲ್ಲಿ ಈ ಕುರಿತು ಮಾತುಗಳು ವಿನಿಮಯಗೊಂಡವು. ರಾಜ್ಯದ ಅಭಿವೃದ್ಧಿಗೆ ನಾವು ಬದ್ದರಿದ್ದೇವೆ. ರಾಜ್ಯದ ಸರ್ವತೋಮುಖ ಬೆಳವಣಿಗೆಗೆ ನಾವು ಸಹ ಸಹಕಾರ ನೀಡ್ತೇವೆ. ಹಾಗಂತ ಎಲ್ಲಾ ವಿಚಾರಗಳಿಗೂ ಸಹ ಕೇಂದ್ರ ಸರ್ಕಾರದ ತಪ್ಪು ಎನ್ನುವುದು ಸರಿ ಅಲ್ಲ. ಒಂದು ಯೋಜನೆ ಯಶಸ್ವಿಯಾಗಿ ಜಾರಿ ಆಗ್ಬೇಕು ಅಂದ್ರೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಬ್ಬರೂ ಸಹಕರಿಸಬೇಕು. ನೀವು ಏನೂ ಮಾಡದೆ, ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದು ಎಷ್ಟರ ಮಟ್ಟಿಗೆ ಸರಿ? ಎಂದು NDA ಸಂಸದರು ಕಾಂಗ್ರೆಸ್‌ಗೆ ಚಾಟಿ ಬೀಸಿದರು.

ರೈಲ್ವೆ ಯೋಜನೆ ಬಾಕಿ ಇದೆ, ರಾಷ್ಟ್ರೀಯ ಹೆದ್ದಾರಿಗಳು ಆಗಿಲ್ಲ ಅಂತ ಹೇಳುವ ಮೊದಲು ಅದಕ್ಕೆ ಬೇಕಾದ ಸಹಕಾರ ರಾಜ್ಯ ಸರ್ಕಾರ ಎಷ್ಟರ ಮಟ್ಟಿಗೆ ನೀಡಿದೆ ಎಂಬುದನ್ನು ಹೇಳಿ. ಸುಖಾ ಸುಮ್ಮನೆ ಕೇಂದ್ರ ಸರ್ಕಾರದ ಮೇಲೆ ಇಲ್ಲಾ ಸಲ್ಲದ ಆರೋಪ ಮಾಡಬೇಡಿ. ಬದಲಾಗಿ, ರಾಜ್ಯಕ್ಕೆ ಬೇಕಾದ ಅನುದಾನದ ಬಗ್ಗೆ ಫಾಲೋ ಅಪ್ ಮಾಡುವ ಕೆಲಸ ಮಾಡಿ. ನಾವು ನಿಮ್ಮೊಂದಿಗೇ ಇದ್ದೇವೆ, ರಾಜ್ಯದ ಹಿತಾಸಕ್ತಿಗೇ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ಸಂಸದರು ಹಾಗೂ ಸಚಿವರು ಹೇಳಿದ್ದಾರೆ.

ಯಾವುದೇ ಬಾಕಿ ಉಳಿಸಿಲ್ಲ: ನಿರ್ಮಲಾ

ಕೇಂದ್ರ ಸರಕಾರ ಬಾಕಿ ಹಣ ನೀಡಿಲ್ಲ ಎಂಬ ಸಿಎಂ ಆರೋಪಕ್ಕೆ ಸಿಎಂ ನೇತೃತ್ವದ ಸಭೆಯಲ್ಲೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ವಿವರಣೆ ನೀಡಿದರು. ಕೇಂದ್ರ ಸರ್ಕಾರ ನಮಗೆ ಅನ್ಯಾಯ ಮಾಡಿದೆ, ನಮ್ಮ ಹಣ ನಮಗೆ ನೀಡಿಲ್ಲ, GST ದುಡ್ಡು ನಮಗೆ ಸೇರಿಲ್ಲ ಅಂತ ಎಲ್ಲರೂ ಹೇಳಿದ್ದೀರಿ. ಬರ ಪರಿಹಾರದ ಹಣ ನೀಡಿಲ್ಲ ಅಂತ ಮಾಧ್ಯಮದ ಮುಂದೆ ದಿನಂಪ್ರತಿ ಹೇಳಿದ್ದೀರಿ. ಆದರೆ ನಾವು ಯಾವುದೇ ಹಣ ಬಾಕಿ ಉಳಿಸಿಲ್ಲ. ರಾಜ್ಯಕ್ಕೆ ಪೂರಕವಾಗಿ ಹಣ ಬಿಡುಗಡೆ ಮಾಡಿದ್ದೇವೆ ಎಂದು ನಿರ್ಮಲಾ ಹೇಳಿದರು.

ಬರ ಪರಿಹಾರ ಅಂತ 18 ಸಾವಿರ ಕೋಟಿ ಕೇಳಿದಾಗಲೂ ಸಹ ನಾವು ಅಗತ್ಯ ಹಣ ಬಿಡುಗಡೆ ಮಾಡಿದ್ದೇವೆ. GST ಹಣ ಸಹಿತ ನಾವು ನೀಡಿದ್ದೇವೆ. ನಿಮಗೆ ಪಕ್ಕಾ ಅಂಕಿ ಅಂಶ ಬೇಕಾದರೆ, ನಮ್ಮ ಜೊತೆ ಚರ್ಚೆಗೆ ಬನ್ನಿ. ಎಲ್ಲಾ ಅಂಕಿ ಅಂಶ ಸಮೇತ ನಾನು ನೀಡಬಲ್ಲೆ. ಅನವಶ್ಯಕವಾಗಿ ಕೇಂದ್ರದ ಮೇಲೆ ವಾಗ್ದಾಳಿ ಮಾಡಬೇಡಿ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ರಾಜ್ಯದ ಸಹಕಾರವೇ ಪ್ರಮುಖ: ಜೋಶಿ

ಕೇಂದ್ರ ಸರ್ಕಾರದಿಂದ ನಮಗೆ ಬರಬೇಕಾದದ್ದು ಬಹಳಷ್ಟಿದೆ ಅಂತ ಯಾವಾಗಲೂ ಹೇಳೋದು ಸರಿಯಲ್ಲ. ರೈಲ್ವೆ ಯೋಜನೆ ಬಾಕಿ ಇದೆ ಅಂತ ಆರೋಪ ಮಾಡೋದು ಒಳ್ಳೇದಲ್ಲ. ಅದಕ್ಕೆ ಬೇಕಾದ ಸೌಕರ್ಯ ಒದಗಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಈ ವರ್ಷದ ಬಜೆಟ್‌ನಲ್ಲಿ 7524 ಕೋಟಿ ರೂ.ಗಳನ್ನ ರಾಜ್ಯದ ರೈಲ್ವೆ ಅಭಿವೃದ್ಧಿಗೆ ಮೀಸಲು ಇಡಲಾಗಿದೆ. ಹುಬ್ಬಳ್ಳಿ -ಅಂಕೋಲಾ , ತುಮಕೂರು – ಚಿತ್ರದುರ್ಗ, ಧಾರವಾಡ- ಬೆಳಗಾವಿ ಸೇರಿದಂತೆ ಹಲವು ಯೋಜನೆ ಬಾಕಿ ಇದೆ. ಈ ಯೋಜನೆಗಳು ಬಾಕಿ ಉಳಿಯುವುದಕ್ಕೆ ಕೇವಲ ಕೇಂದ್ರ ಸರ್ಕಾರ ಮಾತ್ರ ಕಾರಣ ಅಲ್ಲ ಎಂದು ಸಂಸದ ಪ್ರಹ್ಲಾದ್‌ ಜೋಶಿ (Prahlad Joshi) ಗುಡುಗಿದರು.

ರೈಲ್ವೆ ಯೋಜನೆಯಲ್ಲಿ ರಾಜ್ಯ ಸರ್ಕಾರದ ಪಾತ್ರ ಸಹ ಪ್ರಮುಖವಾಗಿರಲಿದೆ. ರಾಜ್ಯ ಸರ್ಕಾರ ಫಾರೆಸ್ಟ್ ಕ್ಲಿಯರೆನ್ಸ್, ಲ್ಯಾಂಡ್ ಅಕ್ವಿಸಿಶನ್ ನೀಡಿದ್ರೆ ಮಾತ್ರ ಇವೆಲ್ಲಾ ಸಾಧ್ಯ. ಆದ್ರೆ ರಾಜ್ಯ ಸರ್ಕಾರ ಈ ಬಗ್ಗೆ ಪ್ರಸ್ತಾಪ ಮಾಡುವುದೇ ಇಲ್ಲ. ರೈಲ್ವೆ ಯೋಜನೆ ಬಂದಿಲ್ಲ, ಹೈವೇ ಆಗಿಲ್ಲ ಅಂತ ಹೇಳುವ ಕೆಲಸ ಮಾಡ್ತಿದೆ. ಈ ಎಲ್ಲಾ ಯೋಜನೆ ಸಂಪೂರ್ಣವಾಗಿ ರಾಜ್ಯಕ್ಕೆ ದೊರೆಯಬೇಕು ಅಂದ್ರೆ ನಿಮ್ಮ ಸಹಕಾರ ಸಹ ಅಗತ್ಯ. ನೀವು ನಮ್ಮೊಂದಿಗೆ ಕೆಲಸ ಮಾಡಿದರೆ, ಖಂಡಿತವಾಗಿಯೂ ರಾಜ್ಯದ ಹಿತಾಸಕ್ತಿ ನಾವು ಕಾಪಾಡಬಹುದು ಎಂದು ಪ್ರಹ್ಲಾದ್ ಜೋಶಿ ನುಡಿದಿದ್ದಾರೆ.

ಇದನ್ನೂ ಓದಿ: Kempegowda Jayanti: ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತರಾದವರಲ್ಲ; ಸಿದ್ದರಾಮಯ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs ZIM: ಜಿಂಬಾಬ್ವೆ ಟಿ20 ಸರಣಿಗೆ ಭಾರತ ತಂಡಲ್ಲಿ ದಿಢೀರ್​ ಬದಲಾವಣೆ ಮಾಡಿದ ಬಿಸಿಸಿಐ

IND vs ZIM: ಸಂಜು ಸ್ಯಾಮ್ಸನ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಬದಲಿಗೆ ಸಾಯಿ ಸುದರ್ಶನ್(Sai Sudharsan), ಜಿತೇಶ್ ಶರ್ಮಾ(Jitesh Sharma) ಮತ್ತು ಹರ್ಷಿತ್ ರಾಣಾ(Harshit Rana) ಅವರನ್ನು ಮೊದಲ ಎರಡು ಪಂದ್ಯಗಳಿಗಾಗಿ ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ.

VISTARANEWS.COM


on

IND vs ZIM
Koo

ಮುಂಬಯಿ: ಜುಲೈ 6 ರಿಂದ ಆರಂಭಗೊಳ್ಳಲಿರುವ ಜಿಂಬಾಬ್ವೆ (IND vs ZIM) ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ ಈಗಾಗಲೇ ಭಾರತ ತಂಡ ಪ್ರಕಟಗೊಂಡಿದೆ. ಶುಭಮನ್​ ಗಿಲ್​ ಅವರು ತಂಡವನ್ನು ಮುನ್ನಡೆಸಲಿದ್ದಾರೆ. ಅಂತಿಮ ಕ್ಷಣದಲ್ಲಿ ಬಿಸಿಸಿಐ ತಂಡದಲ್ಲಿ ಮೂರು ಬದಲಾವಣೆ ಮಾಡಿದೆ.

ಚಂಡಮಾರುತದಿಂದ ಬಾರ್ಬಡೋಸ್‌ನಲ್ಲಿ ಸಿಲುಕಿರುವ ಟಿ20 ವಿಶ್ವಕಪ್​ ತಂಡದ ಭಾಗವಾಗಿದ್ದ, ಸಂಜು ಸ್ಯಾಮ್ಸನ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಬದಲಿಗೆ ಸಾಯಿ ಸುದರ್ಶನ್(Sai Sudharsan), ಜಿತೇಶ್ ಶರ್ಮಾ(Jitesh Sharma) ಮತ್ತು ಹರ್ಷಿತ್ ರಾಣಾ(Harshit Rana) ಅವರನ್ನು ಮೊದಲ ಎರಡು ಪಂದ್ಯಗಳಿಗಾಗಿ ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ. ಪರಿಷ್ಕೃತ ತಂಡವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಪ್ರಕಟಿಸಿದೆ.

ಹರ್ಷಿತ್ ರಾಣಾ ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ ಮೊನಚಾದ ಬೌಲಿಂಗ್​ ಮೂಲಕ ಒಟ್ಟು 19 ವಿಕೆಟ್​ ಕಿತ್ತು ಮಿಂಚಿದ್ದರು. ಮಾಯಾಂಕ್​ ಅಗರ್ವಾಲ್​ ವಿಕೆಟ್​ ಕಿತ್ತು ದುರ್ವರ್ತನೆ ತೋರಿದ ಕಾರಣಕ್ಕೆ ದಂಡ ಮತ್ತು ಒಂದು ಪಂದ್ಯದ ನಿಷೇಧ ಶಿಕ್ಷೆ ಕೂಡ ಎದುರಿಸಿದ್ದರು.

ಮೊದಲ 2 ಪಂದ್ಯಕ್ಕೆ ಪರಿಷ್ಕೃತ ತಂಡ


ಶುಭಮನ್ ಗಿಲ್ (ನಾಯಕ), ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಧ್ರುವ್ ಜುರೆಲ್ (ವೀಕಿ), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ, ಸಾಯಿ ಸುದರ್ಶನ್, ಜಿತೇಶ್ ಶರ್ಮಾ (ವೀಕಿ) , ಹರ್ಷಿತ್ ರಾಣಾ.

ಇದನ್ನೂ ಓದಿ Team India : ಜಿಂಬಾಬ್ವೆ ಪ್ರವಾಸಕ್ಕೆ ಟೀಮ್ ಇಂಡಿಯಾ ಪ್ರಕಟ, ಶುಭ್​ಮನ್ ಗಿಲ್​ಗೆ ನಾಯಕತ್ವ

5 ಪಂದ್ಯಗಳ ಟಿ20 ಸರಣಿ ಇದಾಗಿದ್ದು, ಅಭಿಷೇಕ್ ಶರ್ಮಾ, ನಿತೀಶ್ ರೆಡ್ಡಿ, ರಿಯಾನ್ ಪರಾಗ್ 2024 ರ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಫಲಿತಾಂಶವಾಗಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಟಿ20 ಸರಣಿಯಲ್ಲಿ ಪಂದ್ಯಗಳನ್ನಾಡಲಿದ್ದಾರೆ. ಪರಾಗ್ ಅಸ್ಸಾಂ ನಿಂದ ಭಾರತೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುವ ಮೊದಲ ಕ್ರೀಡಾಪಟುವಾಗಿದ್ದಾರೆ.

ವೇಳಾಪಟ್ಟಿ: ಭಾರತದ ಜಿಂಬಾಬ್ವೆ ಪ್ರವಾಸ

1ನೇ ಟಿ20: ಜುಲೈ 6, ಹರಾರೆ, ಸಂಜೆ 4.30

2ನೇ ಟಿ20: ಜುಲೈ 7, ಹರಾರೆ, ಸಂಜೆ 4.30

3ನೇ T20: ಜುಲೈ 10, ಹರಾರೆ, ಸಂಜೆ 4.30

4ನೇ T20: ಜುಲೈ 13, ಹರಾರೆ, ಸಂಜೆ 4.30

5 ನೇ T20: ಜುಲೈ 14, ಹರಾರೆ, ಸಂಜೆ 4.30

Continue Reading

ದೇಶ

Narendra Modi Live: ಕೆಲವೇ ಕ್ಷಣಗಳಲ್ಲಿ ಸಂಸತ್‌ನಲ್ಲಿ ಮೋದಿ ಭಾಷಣ; ಲೈವ್‌ ಇಲ್ಲಿ ವೀಕ್ಷಿಸಿ

Narendra Modi Live: ಪ್ರಧಾನಿ ನರೇಂದ್ರ ಮೋದಿ ಅವರು ಕೆಲವೇ ಕ್ಷಣಗಳಲ್ಲಿ ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲೆ ವಂದನಾ ನಿರ್ಣಯದ ಕುರಿತು ಮಾತನಾಡಲಿದ್ದಾರೆ. ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಮಾಡುವ ಭಾಷಣದ ಲೈವ್‌ಅನ್ನು ಇಲ್ಲಿ ವೀಕ್ಷಿಸಬಹುದಾಗಿದೆ.

VISTARANEWS.COM


on

Narendra Modi
Koo

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಕೊನೆಯ ಹಂತಕ್ಕೆ (Parliament Sessions) ಬಂದಿದೆ. ಬುಧವಾರ (ಜುಲೈ 3) ಸಂಸತ್‌ ವಿಶೇಷ ಅಧಿವೇಶನ ಮುಕ್ತಾಯವಾಗಲಿದೆ. ಹಾಗಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ಜುಲೈ 2) ಸಂಜೆ 4 ಗಂಟೆಗೆ ಲೋಕಸಭೆಯಲ್ಲಿ ನರೇಂದ್ರ ಮೋದಿ (Narendra Modi Live) ಅವರು ರಾಷ್ಟ್ರಪತಿಯವರ ಭಾಷಣದ ಮೇಲೆ ವಂದನಾ ನಿರ್ಣಯದ ಕುರಿತು ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ನರೇಂದ್ರ ಮೋದಿ ಅವರು ಮಾಡುವ ಭಾಷಣದ ಲೈವ್‌ಅನ್ನು ಇಲ್ಲಿ ವೀಕ್ಷಿಸಿ.

ಲೈವ್‌ ಇಲ್ಲಿ ವೀಕ್ಷಿಸಿ

ಇದಕ್ಕೂ ಮೊದಲು ನರೇಂದ್ರ ಮೋದಿ ಅವರು ಮಂಗಳವಾರ ನಡೆದ ಸಂಸದೀಯ ಪಕ್ಷದ ಸಭೆಯಲ್ಲಿ ಎನ್‌ಡಿಎ (NDA) ಸಂಸದರಿಗೆ ಸಲಹೆ ನೀಡಿದರು. ಸಂಸದೀಯ ನಿಯಮಗಳು ಮತ್ತು ನಡವಳಿಕೆಯನ್ನು ಅನುಸರಿಸುವಂತೆ ಮತ್ತು ಉತ್ತಮ ಅಭ್ಯಾಸಗಳನ್ನು ಹಿರಿಯ ಸದಸ್ಯರಿಂದ ಕಲಿಯುವಂತೆ ಸೂಚಿಸಿದರು. ಸತತ ಮೂರನೇ ಬಾರಿ ಎನ್‌ಡಿಎ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ ಎನ್‌ಡಿಎ ಸಂಸದರನ್ನುದ್ದೇಶಿಸಿ ಮೋದಿ ಮಾತನಾಡಿದರು.

ಪ್ರತಿಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಸೋಮವಾರ ಬೇಜವಾಬ್ದಾರಿಯುತವಾಗಿ ಭಾಷಣ ಮಾಡಿದ್ದಾರೆ ಎಂದು ಆಡಳಿತರೂಢ ಎನ್‌ಡಿಎ ಆರೋಪಿಸಿದ ಒಂದು ದಿನದ ಬಳಿಕ ಪ್ರಧಾನಿ ಈ ರೀತಿಯ ಹೇಳಿಕೆ ನೀಡಿದರು. ಮೊದಲ ಬಾರಿಗೆ ಕಾಂಗ್ರೆಸೇತರ ನಾಯಕ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿರುವುದರಿಂದ ಪ್ರತಿಪಕ್ಷಗಳು ಅಸಮಾಧಾನಗೊಂಡಿವೆ ಎಂದು ಅವರು ಸಂಸದರಿಗೆ ತಿಳಿಸಿದರು ಎಂದು ಮೂಲಗಳಿ ವರದಿ ಮಾಡಿವೆ.

ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡುವಂತೆ ಮೋದಿ ಹೊಸ ಸಂಸದರಿಗೆ ಸಲಹೆ ನೀಡಿದರು. ಸಂಸತ್ತಿಗಿಂತ ಕಲಿಯಲು ಉತ್ತಮ ಸ್ಥಳವಿಲ್ಲ ಮತ್ತು ಮಹಾನ್‌ ನಾಯಕರ ಬಗ್ಗೆ ತಿಳಿದುಕೊಳ್ಳಲು ಮತ್ತು ಅವರ ಅನುಭವವನ್ನು ಅರಿತುಕೊಳ್ಳಲು ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ನೆರವಾಗುತ್ತದೆ ಎಂದು ತಿಳಿಸಿದರು.

ಯಾವುದೇ ವಿಷಯದ ಬಗ್ಗೆ ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸುವ ಮೊದಲು ಅದನ್ನು ಕೂಲಂಕುಷವಾಗಿ ಅಧ್ಯಯನ ಮಾಡಬೇಕು. ಸಾರ್ವಜನಿಕವಾಗಿ ಮಾತನಾಡುವುದರಲ್ಲಿ ಏಕರೂಪತೆ ಇರಬೇಕು, ಸಂಸದರು ಕ್ಷೇತ್ರಗಳೊಂದಿಗೆ ಸಂಪರ್ಕದಲ್ಲಿರಬೇಕು ಮತ್ತು ಬೆಂಬಲ ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದು ಮೋದಿ ಕಿವಿ ಮಾತು ಹೇಳಿದರು.

ಇದನ್ನೂ ಓದಿ: Akhilesh Yadav: ಎಲ್ಲ ಕ್ಷೇತ್ರ ಗೆದ್ದರೂ ಇವಿಎಂಗಳನ್ನು ನಂಬಲ್ಲ ಎಂದ ಅಖಿಲೇಶ್‌ ಯಾದವ್;‌ ಮತ್ತೆ ವಿವಾದ

Continue Reading

ದೇಶ

Akhilesh Yadav: ಎಲ್ಲ ಕ್ಷೇತ್ರ ಗೆದ್ದರೂ ಇವಿಎಂಗಳನ್ನು ನಂಬಲ್ಲ ಎಂದ ಅಖಿಲೇಶ್‌ ಯಾದವ್;‌ ಮತ್ತೆ ವಿವಾದ

Akhilesh Yadav: ನಾನು ಮೊದಲಿನಿಂದಲೂ ಇವಿಎಂಗಳ ಬಗ್ಗೆ ಅನುಮಾನ ಹೊಂದಿದ್ದೇನೆ. ನಾನು ಮೊದಲು ಕೂಡ ಇವಿಎಂಗಳನ್ನು ನಂಬಿಲ್ಲ, ಈಗಲೂ ನಂಬುವುದಿಲ್ಲ. ಉತ್ತರ ಪ್ರದೇಶದ ಎಲ್ಲ 80 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೂ ಇವಿಎಂಗಳನ್ನು ನಂಬುವುದಿಲ್ಲ ಎಂಬುದಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರು ಸಂಸತ್‌ನಲ್ಲಿ ಹೇಳಿದ್ದಾರೆ.

VISTARANEWS.COM


on

Akhilesh Yadav
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಮುಕ್ತಾಯವಾಗಿದೆ. ಬಿಜೆಪಿಯು ಸ್ಪಷ್ಟ ಬಹುಮತ ಪಡೆಯದಿದ್ದರೂ, ಎನ್‌ಡಿಎ ಒಕ್ಕೂಟದ ಬಲದಿಂದ ಅಧಿಕಾರ ಗಳಿಸಿದೆ. ಕಳೆದ ಬಾರಿಗಿಂತ ಈ ಬಾರಿ ಪ್ರತಿಪಕ್ಷಗಳು ಗಣನೀಯವಾಗಿ ಸೀಟುಗಳನ್ನು ಹೆಚ್ಚಿಸಿಕೊಂಡಿವೆ. ಇಷ್ಟಾದರೂ ಚುನಾವಣಾ ಮತಯಂತ್ರಗಳ (EVM) ಕುರಿತು ಪ್ರತಿಪಕ್ಷಗಳ ಅನುಮಾನ ಮಾತ್ರ ಕಡಿಮೆಯಾಗಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, “ಉತ್ತರ ಪ್ರದೇಶದ ಎಲ್ಲ 80 ಲೋಕಸಭೆ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೂ ನಾನು ಚುನಾವಣೆ ಮತಯಂತ್ರಗಳನ್ನು ನಂಬುವುದಿಲ್ಲ” ಎಂಬುದಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ (Akhilesh Yadav) ಹೇಳಿದ್ದಾರೆ.

ಸಂಸತ್ತಿನಲ್ಲಿ ರಾಷ್ಟ್ರಪತಿಯವರ ವಂದನಾ ನಿರ್ಣಯದ ಕುರಿತು ಮಾತನಾಡಿದ ಅವರು ಇವಿಎಂ ವಿಚಾರವನ್ನು ಪ್ರಸ್ತಾಪಿಸಿದರು. “ನಾನು ಮೊದಲಿನಿಂದಲೂ ಇವಿಎಂಗಳ ಬಗ್ಗೆ ಅನುಮಾನ ಹೊಂದಿದ್ದೇನೆ. ನಾನು ಮೊದಲು ಕೂಡ ಇವಿಎಂಗಳನ್ನು ನಂಬಿಲ್ಲ, ಈಗಲೂ ನಂಬುವುದಿಲ್ಲ. ಉತ್ತರ ಪ್ರದೇಶದ ಎಲ್ಲ 80 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೂ ಇವಿಎಂಗಳನ್ನು ನಂಬುವುದಿಲ್ಲ. ಇವಿಎಂಗಳ ವಿಚಾರದಲ್ಲಿ ನಮ್ಮ ನಿಲುವು ಮುಂದುವರಿಯುತ್ತದೆ. ಇವಿಎಂಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸದ ಹೊರತು ಸಮಸ್ಯೆ ಬಗೆಹರಿಯುವುದಿಲ್ಲ” ಎಂಬುದಾಗಿ ತಿಳಿಸಿದ್ದಾರೆ.

ಅನುಮಾನ ವ್ಯಕ್ತಪಡಿಸಿದ್ದ ಎಲಾನ್‌ ಮಸ್ಕ್‌

ಕೆಲ ದಿನಗಳ ಹಿಂದೆ ಟೆಸ್ಲಾ ಸಿಎಒ ಎಲಾನ್‌ ಮಸ್ಕ್‌ ಅವರು ಕೂಡ ಇವಿಎಂಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಅಮೆರಿಕದ ಚುನಾವಣೆಯಲ್ಲಿ ಬಳಸುವ ಇವಿಎಂಗಳ ಬಗ್ಗೆ ಅವರು ಅನುಮಾನ ವ್ಯಕ್ತಪಡಿಸಿದ್ದರು. “ಅಮೆರಿಕದಲ್ಲಿ ನಾವು ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷೀನ್‌ಗಳ ಬಳಕೆಯನ್ನು ನಿಲ್ಲಿಸಬೇಕು. ಹ್ಯಾಕರ್‌ಗಳು ಅಥವಾ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಕೆ ಮಾಡುವ ಮೂಲಕ ಇವಿಎಂಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಇದು ಸಣ್ಣ ಸಂಗತಿಯಾದರೂ, ದೊಡ್ಡ ಸಮಸ್ಯೆಯಾಗಿದೆ” ಎಂದು ಎಲಾನ್‌ ಮಸ್ಕ್‌ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು ಇದು ಅಮೆರಿಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಎಲಾನ್‌ ಮಸ್ಕ್‌ ಅಭಿಪ್ರಾಯವನ್ನು ರಾಹುಲ್‌ ಗಾಂಧಿ ಕೂಡ ಅನುಮೋದಿಸಿದ್ದರು. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂಬುದಾಗಿ ರಾಹುಲ್‌ ಗಾಂಧಿ ಹೇಳಿದ್ದರು.

ಇದನ್ನೂ ಓದಿ: DK Shivakumar: ಇವಿಎಂ ಸತ್ಯಾಸತ್ಯತೆ ಪ್ರಪಂಚಕ್ಕೇ ಅರ್ಥವಾಗಿದೆ; ಮಸ್ಕ್ ಅನುಮಾನ ಸಮರ್ಥಿಸಿಕೊಂಡ ಡಿಕೆಶಿ

Continue Reading

Latest

Viral Video: ಮೆಟ್ಟಿಲುಗಳ ಮೇಲೆ ಬೈಕ್‌ ಸವಾರಿ; ರೋಚಕ ವಿಡಿಯೊ ವೈರಲ್‌

Viral Video: ಸೋಷಿಯಲ್ ಮೀಡಿಯಾದಲ್ಲಿ ಈಗ ರೀಲ್ಸ್‌ಗಳದ್ದೇ ಹಾವಳಿ. ಒಬ್ಬರಿಗಿಂತ ಇನ್ನೊಬ್ಬರು ತಾವು ಮುಂದೆ ಎನ್ನುವ ಹಾಗೇ ರೀಲ್ಸ್ ಮಾಡಿ ಪೋಸ್ಟ್ ಮಾಡುತ್ತಾರೆ. ಈ ರೀಲ್ಸ್‌ಗಳನ್ನು ನೋಡುವಾಗ ಎದೆ ಝಲ್ ಅನ್ನುತ್ತದೆ.ವ್ಯಕ್ತಿಯೊಬ್ಬರು ಮೆಟ್ಟಿಲುಗಳ ಮೇಲೆ ಬೈಕ್ ಓಡಿಸುತ್ತಿರುವ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ವಿಡಿಯೊ ನೋಡಲು ರೋಮಾಂಚನಕಾರಿಯಾಗಿದ್ದು, ನೋಡುಗರನ್ನು ಬೆರಗುಗೊಳಿಸುವುದಂತು ಸತ್ಯ. ಆದರೆ ಈ ಸ್ಟಂಟ್ ಅಪಾಯಕಾರಿಯಾಗಿದ್ದು, ಒಂದು ವೇಳೆ ಎಡವಿ ಬಿದ್ದರೆ ಸಾವಿಗೆ ಕಾರಣವಾಗಬಹುದು.

VISTARANEWS.COM


on

Viral Video
Koo

ಇತ್ತೀಚಿನ ದಿನಗಳಲ್ಲಿ ಜನರು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು, ಹೆಚ್ಚು ಫಾಲೋವರ್ಸ್ ಅನ್ನು ಪಡೆಯಲು ಹಲವಾರು ಸರ್ಕಸ್‌ಗಳನ್ನು ಮಾಡುತ್ತಾರೆ. ಅದಕ್ಕಾಗಿ ಅಪಾಯಕಾರಿ ರೀಲ್ಸ್ ಮಾಡುವುದು, ಸ್ಟಂಟ್ ಮಾಡುವುದು ಮುಂತಾದವುಗಳನ್ನು ಮಾಡುತ್ತಿರುತ್ತಾರೆ. ಈ ಬಗ್ಗೆ ಪೊಲೀಸರು ಎಚ್ಚರಿಕೆ ನೀಡಿದರೂ ಕೂಡ ಜನರು ತಮ್ಮ ಜೀವಕ್ಕೆ ಅಪಾಯ ತಂದುಕೊಳ್ಳುವಂತಹ ಕೆಲಸ ಬಿಟ್ಟಿಲ್ಲ. ಇದೀಗ ವ್ಯಕ್ತಿಯೊಬ್ಬ ಬೈಕ್‌ನಿಂದ ಮೆಟ್ಟಿಲು ಹತ್ತುವ ದುಸ್ಸಾಹಸ ಮಾಡಿದ್ದು, ಈ ವಿಡಿಯೊ ವೈರಲ್ (Viral Video) ಆಗಿದೆ.

ಈ ವಿಡಿಯೊದಲ್ಲಿ ವ್ಯಕ್ತಿಯೊಬ್ಬ ಎತ್ತರವಾಗಿರುವ ಮೆಟ್ಟಿಲುಗಳನ್ನು ತಮ್ಮ ಬೈಕ್ ಮೂಲಕ ಹತ್ತುತ್ತಿರುವುದು ಕಂಡುಬಂದಿದೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೊ ನೋಡಲು ರೋಮಾಂಚನಕಾರಿಯಾಗಿದ್ದು, ನೋಡುಗರನ್ನು ಬೆರಗುಗೊಳಿಸುವುದಂತು ಸತ್ಯ. ಆದರೆ ಈ ಸ್ಟಂಟ್ ಅಪಾಯಕಾರಿಯಾಗಿದ್ದು, ಒಂದು ವೇಳೆ ಎಡವಿ ಬಿದ್ದರೆ ಸಾವಿಗೆ ಕಾರಣವಾಗಬಹುದು. ಇದನ್ನು ಸ್ಟಂಟ್ ಮಾಡುವಲ್ಲಿ ಪರಿಣತರು ಮಾತ್ರ ಮಾಡಬಹುದು ಎಂಬುದನ್ನು ವೀಕ್ಷಕರು ತಿಳಿದಿರಬೇಕು.

ಈ ಬೈಕ್ ಸವಾರಿ ವಿಡಿಯೊವನ್ನು ಲೂಯಿಜಿನ್ಹೋ ಫೆರೆರಾ (@luizinhoferreiraa) ಎಂಬುವವರು ತಮ್ಮ ಇನ್ ಸ್ಟಾಗ್ರಾಂ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ ಕೆಲವೇ ದಿನಗಳಲ್ಲಿ ವೈರಲ್ ಆಗಿದ್ದು, 2.3 ಕೋಟಿಗೂ ಹೆಚ್ಚು ವೀವ್ಸ್‌ಗಳನ್ನು ಗಳಿಸಿದೆ. ಈ ಪೋಸ್ಟ್ ಅನ್ನು 9.8 ಲಕ್ಷಕ್ಕೂ ಹೆಚ್ಚು ವೀಕ್ಷಕರು ಲೈಕ್ ಮಾಡಿದ್ದಾರೆ. ಸಾವಿರಾರು ಜನರು ವೀಡಿಯೊಗೆ ಕಾಮೆಂಟ್ ಮಾಡಿದ್ದಾರೆ. ಮೆಟ್ಟಿಲುಗಳ ಮೇಲೆ ವ್ಯಕ್ತಿ ಬಹಳ ಸುಲಭವಾಗಿ ಬೈಕ್ ಸವಾರಿ ಮಾಡುತ್ತಿರುವುದನ್ನು ನೋಡಿದ ನೆಟ್ಟಿಗರು ಆಶ್ಚರ್ಯಚಕಿತರಾದರು. ಯಮಹಾ ಕಂಪನಿಯು ಇದನ್ನು ತಮ್ಮ ಅಧಿಕೃತ ಜಾಹೀರಾತಾಗಿ ಮಾಡಬೇಕು ಎಂದು ಒಬ್ಬರು ಕಾಮೆಂಟ್ ಮಾಡಿದರೆ, ಇನ್ನೊಬ್ಬರು ವ್ಯಕ್ತಿಯ ಸ್ಟಂಟ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಮತ್ತು ಮತ್ತೊಬ್ಬರು ವ್ಯಕ್ತಿಯನ್ನು ಸ್ಟಂಟ್ ಮಾಸ್ಟರ್ ಎಂದು ಹೊಗಳಿದ್ದಾರೆ.

ಇದನ್ನೂ ಓದಿ: ಮಹಿಳೆಯ ಬೆತ್ತಲೆ ದೇಹದ ಮೇಲೆ ಮೃಷ್ಟಾನ್ನ ಬಡಿಸುವ ರೆಸ್ಟೋರೆಂಟ್‌!

ಬೈಕ್ ಸಂಬಂಧಿತ ಸ್ಟಂಟ್ ವೀಡಿಯೊಗಳನ್ನು ಪೋಸ್ಟ್ ಮಾಡಲು ಈ ಬಳಕೆದಾರರು ಹೆಚ್ಚು ಪ್ರಸಿದ್ಧರಾಗಿದ್ದಾರೆ. ಹಾಗಾಗಿ ಇವರು ತಮ್ಮ ಇನ್‌ಸ್ಟಾಗ್ರಾಂ ಹ್ಯಾಂಡಲ್ ನಲ್ಲಿ 91 ಸಾವಿರಕ್ಕೂ ಹೆಚ್ಚು ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. ಮತ್ತೊಂದು ವೀಡಿಯೊದಲ್ಲಿ, ಅವರು ಬೈಕ್ ಸವಾರಿ ಮೂಲಕ ಮೆಟ್ಟಿಲುಗಳಿಂದ ಕೆಳಗೆ ಇಳಿಯುತ್ತಿರುವುದು ಕಂಡುಬಂದಿದೆ, ಇದು ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿದೆ.

Continue Reading
Advertisement
IND vs ZIM
ಕ್ರೀಡೆ5 mins ago

IND vs ZIM: ಜಿಂಬಾಬ್ವೆ ಟಿ20 ಸರಣಿಗೆ ಭಾರತ ತಂಡಲ್ಲಿ ದಿಢೀರ್​ ಬದಲಾವಣೆ ಮಾಡಿದ ಬಿಸಿಸಿಐ

Job Alert
ಉದ್ಯೋಗ21 mins ago

Job Alert: KSRTCಯಿಂದ ಬೃಹತ್‌ ನೇಮಕಾತಿ; 13,000 ಚಾಲಕ ಹುದ್ದೆಗಳಿಗೆ 7ನೇ ತರಗತಿ ಪಾಸಾದವರು ಅಪ್ಲೈ ಮಾಡಿ

Narendra Modi
ದೇಶ25 mins ago

Narendra Modi Live: ಕೆಲವೇ ಕ್ಷಣಗಳಲ್ಲಿ ಸಂಸತ್‌ನಲ್ಲಿ ಮೋದಿ ಭಾಷಣ; ಲೈವ್‌ ಇಲ್ಲಿ ವೀಕ್ಷಿಸಿ

Akhilesh Yadav
ದೇಶ40 mins ago

Akhilesh Yadav: ಎಲ್ಲ ಕ್ಷೇತ್ರ ಗೆದ್ದರೂ ಇವಿಎಂಗಳನ್ನು ನಂಬಲ್ಲ ಎಂದ ಅಖಿಲೇಶ್‌ ಯಾದವ್;‌ ಮತ್ತೆ ವಿವಾದ

Viral Video
Latest43 mins ago

Viral Video: ಮೆಟ್ಟಿಲುಗಳ ಮೇಲೆ ಬೈಕ್‌ ಸವಾರಿ; ರೋಚಕ ವಿಡಿಯೊ ವೈರಲ್‌

Bike Accident
ಕರ್ನಾಟಕ45 mins ago

Bike Accident: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಸವಾರ ಸಾವು, ಇಬ್ಬರಿಗೆ ಗಾಯ

Heart Attack
ಕ್ರೀಡೆ48 mins ago

Heart Attack: ಬ್ಯಾಡ್ಮಿಂಟನ್​ ಆಡುತ್ತಿದ್ದಾಗಲೇ ಕುಸಿದು ಬಿದ್ದು  ಸಾವನ್ನಪ್ಪಿದ 17 ವರ್ಷದ ಶಟ್ಲರ್‌

Actor Kamal Haasan
Latest48 mins ago

Actor Kamal Haasan: ರಜನಿಕಾಂತ್ ಮತ್ತು ಕಮಲ್ ಹಾಸನ್ ಒಟ್ಟಾಗಿ ನಟಿಸದಿರಲು ಇದೇ ಕಾರಣ!

Google Map
ವೈರಲ್ ನ್ಯೂಸ್52 mins ago

Google Map: ಗೂಗಲ್‌ ಮ್ಯಾಪ್‌ ನಂಬಿ ಹೊರಟವರಿಗೆ ಕಾದಿತ್ತು ಬಿಗ್‌ ಶಾಕ್‌; 11ಗಂಟೆ ದಟ್ಟ ಕಾಡಿನಲ್ಲೇ ಸಿಲುಕಿದ ವಿದ್ಯಾರ್ಥಿಗಳು

karnataka cm mallikarjun kharge siddaramiah dk shivakumar
ಪ್ರಮುಖ ಸುದ್ದಿ1 hour ago

Karnataka CM: ಸಿದ್ದು- ಡಿಕೆಶಿ ಇಬ್ಬರ ಜಗಳ ಮೂರನೆಯವರಿಗೆ ಲಾಭ? ಆ ಮೂರನೆಯವರು ಇವರೇ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ22 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌