Uttara Kannada News: ಕಾರವಾರದ ಎನ್.ಕೆ. ಬೈಲು ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸೂಚನೆ - Vistara News

ಉತ್ತರ ಕನ್ನಡ

Uttara Kannada News: ಕಾರವಾರದ ಎನ್.ಕೆ. ಬೈಲು ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸೂಚನೆ

Uttara Kannada News: ಸೀ ಬರ್ಡ್ ನೌಕಾನೆಲೆ ಉದ್ದೇಶಕ್ಕಾಗಿ ಎನ್.ಕೆ.ಬೈಲು (ನೆಲ್ಲೂರು ಕಂಚಿನಬೈಲು) ನಲ್ಲಿ ಭೂ ಸ್ವಾಧೀನ ಪಡಿಸಿಕೊಂಡಿರುವ 58.11 ಎಕರೆಗೆ ಸಂಬಂಧಿಸಿದಂತೆ, ಸಂತ್ರಸ್ತರಿಗೆ ಇದುವರೆಗೆ ಪರಿಹಾರ ನೀಡದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಈ ಎಲ್ಲಾ ಸಂತ್ರಸ್ತರಿಗೆ ಶೀಘ್ರದಲ್ಲಿ ಪರಿಹಾರ ದೊರಕಿಸಲು ತಾವೇ ದೆಹಲಿಯ ರಕ್ಷಣಾ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.

VISTARANEWS.COM


on

NK Bailu victims to get relief soon says Incharge secretary Ritesh Kumar Singh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಸೀ ಬರ್ಡ್ ನೌಕಾನೆಲೆ ಉದ್ದೇಶಕ್ಕಾಗಿ ಎನ್.ಕೆ. ಬೈಲು(ನೆಲ್ಲೂರು ಕಂಚಿನಬೈಲು)ನಲ್ಲಿ ಭೂ ಸ್ವಾಧೀನ ಪಡಿಸಿಕೊಂಡಿರುವ 58.11 ಎಕರೆಗೆ ಸಂಬಂಧಿಸಿದಂತೆ, ಸಂತ್ರಸ್ತರಿಗೆ ಇದುವರೆಗೆ ಪರಿಹಾರ ನೀಡದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಈ ಎಲ್ಲಾ ಸಂತ್ರಸ್ತರಿಗೆ ಶೀಘ್ರದಲ್ಲಿ ಪರಿಹಾರ ದೊರಕಿಸಲು ತಾವೇ ದೆಹಲಿಯ ರಕ್ಷಣಾ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ (Uttara Kannada News) ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ, ಸೀಬರ್ಡ್ ಯೋಜನೆಯ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎನ್.ಕೆ. ಬೈಲುನಲ್ಲಿ ಸೀ ಬರ್ಡ್ ನೌಕಾನೆಲೆ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ 58.11 ಎಕರೆಗೆ ಸಂಬಂಧಿಸಿದಂತೆ, ಈ ಭೂಮಿಯ ಸಂತ್ರಸ್ತರಿಗೆ ಇದುವರೆಗೂ ಪರಿಹಾರ ದೊರೆತಿಲ್ಲ. ಅಲ್ಲದೇ ಈ ಭೂಮಿಯಲ್ಲಿ ಯಾವುದೇ ಕೃಷಿ ಚಟುವಟಿಕೆ ಮಾಡಲು ಸಹ ಅನುಮತಿ ನೀಡುತ್ತಿಲ್ಲ. ಈ ಭೂಮಿಗೆ ಈಗಾಗಲೇ 18 ಕೋಟಿ 91 ಲಕ್ಷ ರೂ.ಗಳ ಪರಿಹಾರದ ಮೊತ್ತವನ್ನು ಬಿಡುಗಡೆಗೊಳಿಸುವಂತೆ ಬೆಂಗಳೂರಿನ ಡಿಫೆನ್ಸ್ ಎಸ್ಟೇಟ್ ಅಧಿಕಾರಿಗಳೊಂದಿಗೆ ಹಲವು ಪತ್ರ ಬರೆದರೂ ಸಹ ಯಾವುದೇ ಪ್ರಗತಿಯಾಗಿಲ್ಲ ಎಂದರು.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

ಈ ವಿಷಯದ ಕುರಿತಂತೆ ಬೆಂಗಳೂರಿನಲ್ಲಿರುವ ಡಿಫೆನ್ಸ್ ಎಸ್ಟೇಟ್ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಈ ಕುರಿತಂತೆ ಪ್ರಸ್ತಾವನೆಯು ದೆಹಲಿಯ ರಕ್ಷಣಾ ಸಚಿವಾಲದಯಲ್ಲಿ ಬಾಕಿ ಇರುವ ಬಗ್ಗೆ ತಿಳಿದು, ರಕ್ಷಣಾ ಇಲಾಖೆಯೊಂದಿಗೆ ನಡೆಸಿರುವ ಪತ್ರ ವ್ಯವಹಾರಗಳನ್ನು ಪ್ರತಿಯನ್ನು ತಮಗೆ ನೀಡುವಂತೆ ಹಾಗೂ ಈ ಪ್ರಕರಣದ ಬಗ್ಗೆ ತಾವೇ ಖುದ್ದು ರಕ್ಷಣಾ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಶೀಘ್ರದಲ್ಲಿ ಪರಿಹಾರ ದೊರಕಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.

ನೌಕಾನೆಲೆಯ ಕಾರಣದಿಂದ ಭೂಮಿ ಕಳೆದುಕೊಂಡಿರುವ 158 ಕುಟುಂಬಗಳಲ್ಲಿ ವಿವಿಧ ಕಾರಣಗಳಿಂದ ಇದುವರೆಗೆ ಪರಿಹಾರ ದೊರೆಯದ ಕುಟುಂಬಗಳಿಗೆ ಸಂಬಂದಿಸಿದಂತೆ 1 ತಿಂಗಳ ಒಳಗೆ ಎಲ್ಲಾ ಅಗತ್ಯ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಿ, ಪರಿಹರ ದೊರೆಯಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಮುದಗಾದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ನಿರ್ಮಿಸಿರುವ ಅಣೆಕಟ್ಟುನಿಂದಾಗಿ ಮಳೆಗಾಲದಲ್ಲಿ ನೌಕಾನೆಲೆಯೊಳಗೆ ನೀರು ನುಗ್ಗುತ್ತಿರುವ ಬಗ್ಗೆ ರಕ್ಷಣಾ ಇಲಾಖೆಯಿಂದ ಬರುತ್ತಿರುವ ದೂರುಗಳ ಬಗ್ಗೆ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಕೋಸ್ಟಲ್‌ ಗಾರ್ಡ್ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳಿಗೆ ವಾಹನಗಳ ಸಂಚಾರಕ್ಕೆ ರಸ್ತೆ ಸಂಪರ್ಕದ ಸಮಸ್ಯೆಯಿರುವ ಬಗ್ಗೆ ನಡೆದ ಚರ್ಚೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಪರ್ಯಾಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಬ್ಲಾಕ್ ಸ್ಟಾಟ್‌ಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಅಪಘಾತಗಳನ್ನು ನಿಯಂತ್ರಿಸುವಂತೆ ಮತ್ತು ಹೆದ್ದಾರಿಯಲ್ಲಿ ಬೀದಿ ದೀಪಗಳನ್ನು ಅಳವಡಿಸುವಂತೆ ಐ.ಆರ್.ಬಿ. ಎಂಜಿನಿಯರ್‌ಗಳಿಗೆ ಸೂಚಿಸಿದರು.

ಇದನ್ನೂ ಓದಿ: Airtel Price Hike: ಜಿಯೋ ನಂತರ ಏರ್‌ಟೆಲ್‌ ಡೇಟಾ ಬಳಕೆದಾರರ ಜೇಬಿಗೂ ಕತ್ತರಿ; 21% ದರ ಏರಿಕೆ

ಸಭೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಉಪ ವಿಭಾಗಾಧಿಕಾರಿಗಳಾದ ಕನಿಷ್ಠ. ಕಲ್ಯಾಣಿ ಕಾಂಬ್ಳೆ, ನೌಕಾದಳ ಮತ್ತು ಕೋಸ್ಟ್ ಗಾರ್ಡ್‌ನ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bomb Blast: ಜೋಯಿಡಾದಲ್ಲಿ ಪತ್ರಕರ್ತರು ಸಾಗುತ್ತಿದ್ದ ಕಾರಿನಡಿ ನಾಡ ಬಾಂಬ್ ಸ್ಫೋಟ

Bomb Blast: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಗುಂದ ಗ್ರಾಮದ ಬಳಿ ಪತ್ರಕರ್ತರ ಕಾರಿನಡಿ ನಾಡ ಬಾಂಬ್ ಸ್ಫೋಟವಾಗಿದೆ. ಜೋಯಿಡಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

Bomb Blast
Koo

ಕಾರವಾರ: ಪತ್ರಕರ್ತರು ಸಾಗುತ್ತಿದ್ದ ಕಾರಿನ ಕೆಳಗೆ ನಾಡ ಬಾಂಬ್ ಸ್ಫೋಟವಾಗಿರುವ (Bomb Blast) ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಗುಂದ ಗ್ರಾಮದ ಬಳಿ ಮಂಗಳವಾರ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸಂದೇಶ್ ದೇಸಾಯಿ ಎನ್ನುವ ಪತ್ರಕರ್ತರಿಗೆ ಸೇರಿದ ಕಾರಿನಲ್ಲಿ ಮೂವರು ಪತ್ರಕರ್ತರು, ಶಾಸಕ ಆರ್.ವಿ. ದೇಶಪಾಂಡೆ ಸಭೆಗೆ ತೆರಳುತ್ತಿದ್ದರು. ಜೋಯಿಡಾದ ಗುಂದ ಗ್ರಾಮದ ಬಳಿ ಕಾರಿನ ಟಯರ್‌ಗೆ ಸಿಕ್ಕಿ ಬಾಂಬ್ ಸ್ಫೋಟವಾಗಿದೆ. ಅದೃಷ್ಟವಶಾತ್ ಪತ್ರಕರ್ತರು ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ | Uttar Pradesh stampede: ಹತ್ರಾಸ್‌ ಕಾಲ್ತುಳಿತ ದುರ್ಘಟನೆ; ಸಾವಿನ ಸಂಖ್ಯೆ 60ಕ್ಕೆ ಏರಿಕೆ

Sandalwood theft : ಶ್ರೀಗಂಧ ಕದಿಯಲು ಬಂದವನಿಗೆ ಗುಂಡೇಟು;‌ ಮತ್ತೊಬ್ಬ ಗಾಯಾಳು ಸೇರಿ ಹಲವರು ಪರಾರಿ

ಕೋಲಾರ : ಅರಣ್ಯ ಪ್ರದೇಶದಲ್ಲಿ ಶ್ರೀಗಂಧವನ್ನು ಕದಿಯಲು (Sandalwood theft) ಬಂದವನು ಅರಣ್ಯ ಇಲಾಖೆ ಸಿಬ್ಬಂದಿಯಿಂದ ಗುಂಡೇಟು ತಿಂದಿದ್ದಾನೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕಾಶಿಪುರ ಅರಣ್ಯ ಪ್ರದೇಶದಲ್ಲಿ (Kashipura Forest) ಘಟನೆ ನಡೆದಿದೆ.

ತಾಯಲೂರು ಗ್ರಾಮದ ಭತ್ಯಪ್ಪ ಎಂಬಾತ ಕಾಲಿಗೆ ಗುಂಡು ತಗುಲಿದೆ. ಅರಣ್ಯ ಇಲಾಖೆ ರಕ್ಷಕ ಅನಿಲ್ ಗುಂಡು ಹಾರಿಸಿದ್ದಾರೆ. ಶ್ರೀಗಂಧ ಕಳ್ಳತನಕ್ಕೆ ಆಂಧ್ರಪ್ರದೇಶದ ಐದಾರು ಮಂದಿ ಜತೆಗೆ ಭತ್ಯಪ್ಪ ಬಂದಿದ್ದ. ಈ ವೇಳೆ ರಕ್ಷಕ ಅನಿಲ್ ಮೇಲೆ ಹಲ್ಲೆಗೆ ಮುಂದಾಗಿದ್ದ.

ರಕ್ಷಣೆಗಾಗಿ ಭತ್ಯಪ್ಪ ಹಾಗೂ ಮತ್ತೋರ್ವನಿಗೆ ಅರಣ್ಯ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಭತ್ಯಪ್ಪ ಸಿಕ್ಕಿಬಿದ್ದರೆ ಉಳಿದವರು ಕಾಲ್ಕಿತ್ತಿದ್ದಾರೆ. ಗಾಯಾಳು ಭತ್ಯಪ್ಪಗೆ ಮುಳಬಾಗಿಲು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Drowned In water : ರಭಸವಾಗಿ ಹರಿಯುತ್ತಿದ್ದ ನೀರಲ್ಲಿ ಈಜಲು ಹೋಗಿ ಕೊಚ್ಚಿ ಹೋದ ಮಾಜಿ ಸೈನಿಕ

ಕೋರ್ಟ್‌ ಆವರಣದಲ್ಲೇ ಡೆಡ್ಲಿ ಅಟ್ಯಾಕ್‌

ಕಲಬುರಗಿ ಕೋರ್ಟ್ ಆವರಣದಲ್ಲಿ ಸಿನಿಮೀಯ ಶೈಲಿಯಲ್ಲಿ ವ್ಯಕ್ತಿಯ ಬೆನ್ನತ್ತಿ ದುಷ್ಕರ್ಮಿಗಳು ತಲವಾರ್‌ನಿಂದ ದಾಳಿ ನಡೆಸಿದ್ದಾರೆ. ಧೀರಜ್ ಎಂಬಾತನ ಮೇಲೆ ತಲವಾರ್‌‌ನಿಂದ ದಾಳಿ ನಡೆಸಿದ್ದಾರೆ.

ತಲವಾರ್ ದಾಳಿಯಿಂದ ಧೀರಜ್‌ ಎಂಬಾತ ಗಾಯಗೊಂಡಿದ್ದು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇತ್ತ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ದುಷ್ಕರ್ಮಿಗಳನ್ನು ಸಾರ್ವಜನಿಕರು ಹಾಗೂ ವಕೀಲರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆ ಸಂಬಂಧ ಪ್ರಶಾಂತ್ ಪಾಟೀಲ್ (20), ವಿರೇಶ್ ಪಾಟೀಲ್ (19), ರಾಮು ಪಾಟೀಲ್ (38) ಈ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕಲಬುರಗಿ ನಗರದ ಬಾಪುನಗರ ಬಡಾವಣೆಯ ನಿವಾಸಿಗಳು ಎನ್ನಲಾಗಿದೆ. ವೈಯುಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

Karnataka Weather Forecast :ರಾಜ್ಯಾದ್ಯಂತ ಮಳೆ ಅಬ್ಬರಕ್ಕೆ (Rain News) ಗುಡ್ಡ ಕುಸಿತದಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಕೊಡಗಿನಲ್ಲಿ ಗುಡ್ಡ ಕುಸಿದರೆ, ಮಂಗಳೂರಲ್ಲಿ ರಸ್ತೆ ಕುಸಿದಿದೆ. ಚಿಕ್ಕಮಗಳೂರಲ್ಲಿ ಗಾಳಿ- ಮಳೆಗೆ ಶಾಲೆಗೆ ಹಾನಿಯಾಗಿದೆ. ಇನ್ನೊಂದು ವಾರವು ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ನೈರುತ್ಯ ಮುಂಗಾರು (Rain News) ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿದ್ದು, ಉತ್ತರ ಒಳನಾಡಿನಲ್ಲಿ (Karnataka Weather Forecast) ದುರ್ಬಲಗೊಂಡಿದೆ. ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದ್ದು, ಗುಡ್ಡ ಕುಸಿತದಂತಹ ಪ್ರಕರಣಗಳು ಹೆಚ್ಚಾಗಿವೆ. ಕೊಲ್ಲೂರು, ಸಿದ್ದಾಪುರ, ಕೊಟ್ಟಿಗೆಹಾರದಲ್ಲಿ 9 ಸೆಂ.ಮೀ ಮಳೆಯಾಗಿದೆ. ಕೋಟ, ಆಗುಂಬೆಯಲ್ಲಿ ತಲಾ 8 ಸೆಂ.ಮೀ ಹಾಗೂ ಉಡುಪಿ, ಧರ್ಮಸ್ಥಳ, ಲಿಂಗನಮಕ್ಕಿಯಲ್ಲಿ 7 ಸೆಂ.ಮೀ ಮಳೆಯಾಗಿದೆ.

ಆರಿದ್ರಾ ಮಳೆ ಎಫೆಕ್ಟ್‌ ಕೊಡಗಿನಲ್ಲಿ ಗುಡ್ಡ ಕುಸಿತ

ಕೊಡಗಿನಲ್ಲಿ ಸುರಿದ ಆರಿದ್ರಾ ಮಳೆಯ ಎಫೆಕ್ಟ್‌ನಿಂದಾಗಿ ಅಲ್ಲಲ್ಲಿ ಸಣ್ಣ ಪ್ರಮಾಣದ ಗುಡ್ಡ ಕುಸಿತ ಉಂಟಾಗುತ್ತಿದೆ. ನಿನ್ನೆ ಸೋಮವಾರ ಸುರಿದ ಮಳೆಗೆ ಬೆಟ್ಟದ ಮಣ್ಣು ಕುಸಿದು ಮನೆ ಮತ್ತು ದೇವಸ್ಥಾನಕ್ಕೆ ಅಲ್ಪಪ್ರಮಾಣದಲ್ಲಿ ಹಾನಿಯಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಪಾಲೆಮಾಡುವಿನಲ್ಲಿ ಘಟನೆ ನಡೆದಿದೆ. ಪಾಲೆಮಾಡುವಿನ ಎಂಆರ್ ಕಾಳಪ್ಪ ಅವರ ಮನೆಯ ಸಮೀಪದ ಮಣ್ಣು ಕುಸಿದಿದೆ. ದೇವಸ್ಥಾನದ ಗೋಡೆ ಪಕ್ಕದಲ್ಲಿ ಮತ್ತು ವಾಸದ ಮನೆಯ ಪಕ್ಕದಲ್ಲಿ ರಾಶಿ ಮಣ್ಣು ತುಂಬಿದೆ.

ಇದನ್ನೂ ಓದಿ: Student Death : ಅಮ್ಮನ ಸೀರೆಯಲ್ಲಿ ನೇಣು ಬಿಗಿದುಕೊಂಡಳು ಅಪ್ರಾಪ್ತೆ

ಮಂಗಳೂರಿನ ಬಂಗ್ರ ಕೂಳೂರಿನಲ್ಲೂ ರಸ್ತೆ ಕುಸಿತ

ಭಾರೀ ಮಳೆಯಿಂದಾಗಿ ಮಂಗಳೂರಿನಲ್ಲಿ ಅವಾಂತರವೇ ಸೃಷ್ಟಿಯಾಗಿದೆ. ಮಂಗಳೂರಿನ ಬಂಗ್ರ ಕೂಳೂರಿನಲ್ಲಿ ರಸ್ತೆ ಕುಸಿದಿದೆ. ಎ ಜೆ ಇಂಜಿನಿಯರಿಂಗ್ ಕಾಲೇಜಿಗೆ ಸಂಪರ್ಕಿಸುವ ರಸ್ತೆ ಇದಾಗಿದ್ದು, ಮಣ್ಣಿನ ಸವೆತಕ್ಕೆ ಕ್ಷಣ ಕ್ಷಣಕ್ಕೂ ರಸ್ತೆಯು ಕುಸಿಯುತ್ತಿದೆ.

350 ಮೀಟರ್ ಉದ್ದದ ಈ ರಸ್ತೆಯಲ್ಲಿ ರಾಜಕಾಲುವೆಯು ಹೊಂದಿಕೊಂಡಿದೆ. ಹೀಗಾಗಿ ಈ ರಸ್ತೆಯಲ್ಲಿ ವಾಹನ ಸಂಚಾರ ಹಾಗೂ ಜನರ ಓಡಾಟವನ್ನು ನಿಷೇಧಿಸಲಾಗಿದೆ. ರಸ್ತೆ ಪಕ್ಕದ 10ಕ್ಕೂ ಹೆಚ್ಚು ಮನೆಗಳು ಕೂಡ ಅಪಾಯದಲ್ಲಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ.

ಚಿಕ್ಕಮಗಳೂರಲ್ಲಿ ಗಾಳಿ- ಮಳೆಗೆ ಶಾಲೆಗೆ ಹಾನಿ

ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ ಮುಂದುವರಿದಿದೆ. ಭಾರಿ ಮಳೆಗೆ ಶಾಲಾ ಕಟ್ಟಡವೊಂದು ಶಿಥಿಲಾವಸ್ಥೆಗೊಂಡಿದೆ. ಸರ್ಕಾರಿ ಶಾಲೆಯ ಚಾವಣಿಗೆ ಹಾನಿಯಾಗಿದ್ದು, ಗೋಡೆಯ ಮಣ್ಣು ಉದುರುತ್ತಿದೆ. ಮೂಡಿಗೆರೆ ತಾಲೂಕಿನ ಹಾಲೂರು ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ಭೇಟಿ ನೀಡಿದ ಸ್ಥಳೀಯ ಶಾಸಕಿ ನಯನ ಮೋಟಮ್ಮ, ಶಿಥಿಲಾವಸ್ಥೆ ಗೊಂಡಿರುವ ಚಾವಣಿ ಸರಿಪಡಿಸಲು ಕ್ರಮವಹಿಸಲು ಸೂಚಿಸಿದರು.

ಧಾರಾಕಾರ ಮಳೆಗೆ ಧುಮ್ಮಿಕ್ಕಿದ ಜೋಗ್‌ ಫಾಲ್ಸ್‌

ಶಿವಮೊಗ್ಗದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಜೋಗ ಜಲಪಾತದ ಸೌಂದರ್ಯಕ್ಕೆ ಪ್ರವಾಸಿಗರು ಮನ ಸೋತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Ms Universal Petite 2024: ಜಾಗತಿಕ ಸೌಂದರ್ಯ ಸ್ಪರ್ಧೆಯಲ್ಲಿ ಕನ್ನಡತಿ, ಶಿರಸಿ ಮೂಲದ ಡಾ. ಶ್ರುತಿಗೆ ಕಿರೀಟ

Ms Universal Petite 2024: ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ, ಹುಬ್ಬಳಿಯ ವೈದ್ಯೆ ಶ್ರುತಿ ಹೆಗಡೆ ಇತ್ತೀಚಿಗೆ ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಅಮೆರಿಕದಲ್ಲಿ ನಡೆದ ಮಿಸ್ ಯೂನಿವರ್ಸಲ್‌ ಪೆಟೀಟ್‌ ಎನ್ನುವ ಸೌಂದರ್ಯ ಸ್ಪರ್ಧೆಯಲ್ಲಿ ಶ್ರುತಿ 40 ದೇಶಗಳ ಸ್ಪರ್ಧಿಗಳನ್ನು ಹಿಂದಿಕ್ಕಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಅವರು ಮಿಸ್ ಯೂನಿವರ್ಸಲ್‌ ಪೆಟೀಟ್‌ ಟೈಟಲ್‌ ಗೆದ್ದ ಮೊದ ಭಾರತೀಯ ಸ್ಪರ್ಧಿ ಎನಿಸಿಕೊಂಡಿದ್ದಾರೆ.

VISTARANEWS.COM


on

Ms Universal Petite 2024
Koo

ವಾಷಿಂಗ್ಟನ್‌: ಉತ್ತರ ಕನ್ನಡ (UttaraKannada) ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ, ಹುಬ್ಬಳಿಯ ವೈದ್ಯೆ ಶ್ರುತಿ ಹೆಗಡೆ (Shruti Hegde) ಇತ್ತೀಚಿಗೆ ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಅಮೆರಿಕದಲ್ಲಿ ನಡೆದ ಮಿಸ್ ಯೂನಿವರ್ಸಲ್‌ ಪೆಟೀಟ್‌ (Ms Universal Petite 2024) ಎನ್ನುವ ಸೌಂದರ್ಯ ಸ್ಪರ್ಧೆಯಲ್ಲಿ ಶ್ರುತಿ 40 ದೇಶಗಳ ಸ್ಪರ್ಧಿಗಳನ್ನು ಹಿಂದಿಕ್ಕಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

ವಿಶೇಷ ಎಂದರೆ‌ ಶ್ರುತಿ ಮಿಸ್ ಯೂನಿವರ್ಸಲ್‌ ಪೆಟೀಟ್‌ ಟೈಟಲ್‌ ಗೆದ್ದ ಮೊದ ಭಾರತೀಯ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಈ ಸ್ಪರ್ಧೆಯನ್ನು ಸುಮಾರು 15 ವರ್ಷಗಳಿಂದ ಅಮೆರಿಕದಲ್ಲಿ ನಡೆಸಿಕೊಂಡು ಬರಲಾಗುತ್ತಿದೆ. ಮೊದಲ ಬಾರಿಗೆ 2009ರಲ್ಲಿ ಈ ಸ್ಪರ್ಧೆ ನಡೆದಿತ್ತು.

ಶಿರಸಿ, ಹುಬ್ಬಳ್ಳಿ ಮೂಲ

ಶ್ರುತಿ ಅವರು ಶಿರಸಿ ಮತ್ತು ಹುಬ್ಬಳ್ಳಿ ನಂಟು ಹೊಂದಿದ್ದಾರೆ. ಶಿರಸಿ ತಾಲೂಕಿನ ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾದ ಶ್ರುತಿ ಸದ್ಯ ತಮ್ಮ ಪಾಲಕರಾದ ಕೃಷ್ಣ ಹೆಗಡೆ, ಕಮಲಾ ಅವರೊಂದಿಗೆ ಹುಬ್ಬಳ್ಳಿಯಲ್ಲಿ ನೆಲೆಸಿದ್ದಾರೆ. 2018ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ಕೀರೀಟ ತೊಟ್ಟುಕೊಂಡಿದ್ದ ಶ್ರುತಿ ಕಳೆದ ವರ್ಷ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದರು.

ಎಂ.ಡಿ. ಅಧ್ಯಯನ

ಹುಬ್ಬಳ್ಳಿಯಲ್ಲಿ ಎಂಬಿಬಿಎಸ್‌ ಓದಿರುವ ಶ್ರುತಿ ಅವರು ಪ್ರಸ್ತುತ ತುಮಕೂರಿನಲ್ಲಿ ಡರ್ಮಟಾಲಜಿಯಲ್ಲಿ ಎಂ.ಡಿ. ಮಾಡುತ್ತಿದ್ದಾರೆ. ಅವರು ಬಹುಮುಖ ಪ್ರತಿಭೆಯೂ ಹೌದು. ಭರತನಾಟ ಕಲಾವಿದೆಯಾಗಿ ವಿವಿಧ ಕಡೆ ಹಲವು ಪ್ರದರ್ಶನ ನೀಡಿದ್ದಾರೆ. ಜತೆಗೆ ಕನ್ನಡದ ಕೆಲವು ಸಿನಿಮಾ, ಧಾರಾವಾಹಿಗಳಲ್ಲಿಯೂ ನಟಿಸಿದ್ದಾರೆ. ಈ ಬಾರಿಯ ಸ್ಪರ್ಧೆ ಅಮೆರಿಕದ ಫ್ಲೋರಿಡಾದಲ್ಲಿ ಜೂ. 6ರಿಂದ 10ರವರೆಗೆ ಆಯೋಜಿಸಲಾಗಿತ್ತು. ನ್ಯಾಷನಲ್‌ ಕಾಸ್ಟ್ಯೂಮ್‌ ರೌಂಡ್‌, ಪ್ರಶ್ನೋತ್ತರ ರೌಂಡ್‌ ಮೂಲಕ ವಿಜೇತರನ್ನು ಆಯ್ಕೆ ಮಾಡಲಾಯಿತು.

ಏನಿದು ಮಿಸ್ ಯೂನಿವರ್ಸಲ್‌ ಪೆಟೀಟ್‌ ಸ್ಪರ್ಧೆ?

ಮಿಸ್ ಯೂನಿವರ್ಸಲ್‌ ಪೆಟೀಟ್‌ ಎನ್ನುವುದು ಕಡಿಮೆ ಎತ್ತರ ಹೊಂದಿರುವವರಿಗಾಗಿ ಇರುವ ಸ್ಪರ್ಧೆ. 5.2 ಅಡಿ ಎತ್ತರದ ಶ್ರುತಿ ಅವರಿಗೆ ಈ ಹಿಂದೆ ಮಿಸ್‌ ವರ್ಲ್ಡ್‌, ಮಿಸ್‌ ಯೂನಿವರ್ಸ್‌ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಆಗಿರಲಿಲ್ಲ. ಇದೀಗ ಅವರ ಕನಸು ನನಸಾಗಿದೆ. ಹಲವು ವರ್ಷಗಳಿಂದ ನಡೆಸುತ್ತಿದ್ದ ತಯಾರಿಗೆ ಕೊನೆಗೂ ಫಲ ಸಿಕ್ಕಿದೆ ಎಂದು ಅವರು ಈ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Miss World 2024: ಸಿನಿ ಶೆಟ್ಟಿಗೆ ವಿಶ್ವ ಸುಂದರಿ ಕಿರೀಟ ಜಸ್ಟ್‌ ಮಿಸ್‌

ಕ್ರಿಸ್ಟಿನಾ ಪಿಸ್ಕೋವಾಗೆ ವಿಶ್ವ ಸುಂದರಿ ಕಿರೀಟ

ಮುಂಬೈ: ಜೆಕ್ ಗಣರಾಜ್ಯ ದೇಶದ ಕ್ರಿಸ್ಟಿನಾ ಪಿಸ್ಕೋವಾ 2024ನೇ ಆವೃತ್ತಿಯ ವಿಶ್ವ ಸುಂದರಿ (Miss World 2024)ಯಾಗಿ ಹೊರಹೊಮ್ಮಿದ್ದಾರೆ. ಮುಂಬೈಯ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಮಾರ್ಚ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ ಅವರು 71ನೇ ವಿಶ್ವ ಸುಂದರಿ ಕಿರೀಟವನ್ನು ತಮ್ಮದಾಗಿಸಿಕೊಂಡರು. ಕ್ರಿಸ್ಟಿನಾ ಕಾನೂನು ಮತ್ತು ವ್ಯವಹಾರ ಆಡಳಿತ ಎರಡರಲ್ಲೂ ಪದವಿ ಅಧ್ಯಯನ ಮಾಡುತ್ತಿದ್ದಾರೆ ಮತ್ತು ರೂಪದರ್ಶಿಯಾಗಿಯೂ ಕೆಲಸ ಮಾಡುತ್ತಿದ್ದಾರೆ. ಅವರು ಕ್ರಿಸ್ಟಿನಾ ಫೌಂಡೇಶನ್ ಅನ್ನು ಸ್ಥಾಪಿಸಿದ್ದಾರೆ ಎಂದು ಮಿಸ್ ವರ್ಲ್ಡ್ ಆರ್ಗನೈಸೇಶನ್ ತಿಳಿಸಿದೆ.

ವಿಶೇಷ ಎಂದರೆ ವಿಶ್ವ ಸುಂದರಿ ಸ್ಪರ್ಧೆಯ ಆತಿಥ್ಯವನ್ನು ಭಾರತ ಬರೋಬ್ಬರಿ 28 ವರ್ಷಗಳ ಬಳಿಕ ವಹಿಸಿತ್ತು. 1996ರಲ್ಲಿ ವಿಶ್ವ ಸುಂದರಿ ಸ್ಪರ್ಧೆಯನ್ನು ಭಾರತವು ಕೊನೆಯದಾಗಿ ಆಯೋಜಿಸಿತ್ತು. ಬೆಂಗಳೂರಿನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಗ್ರೀಸ್‌ನ 19ರ ಹರೆಯದ ಐರಿನ್ ಸ್ಕ್ಲಿವಾ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡಿದ್ದರು.

Continue Reading

ಮಳೆ

Karnataka Weather : ರಾಜ್ಯದ ಇಲ್ಲೆಲ್ಲ ವಿಪರೀತ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather Forecast : ಕರಾವಳಿ ಹಾಗೂ ಮಲೆನಾಡು ಸುತ್ತಮುತ್ತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆ ಹಗುರದಿಂದ ಕೂಡಿದ ಮಳೆ ಸುರಿಯಲಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ (rain News) ಸಾಧ್ಯತೆ ಇದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (karnataka Weather Forecast) ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳದಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನ ಜತೆಗೆ ಗಂಟೆಗೆ 30-40 ಕಿ.ಮೀ ಗಾಳಿ ಬೀಸುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಪ್ರತ್ಯೇಕವಾಗಿ ಹಗುರವಾದ ಮಳೆಯಾಗುವ ನಿರೀಕ್ಷೆಯಿದೆ.

ಮಲೆನಾಡು ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾದರೆ, ಕರಾವಳಿಯಲ್ಲಿ ವ್ಯಾಪಕ ಲಘುದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಕರಾವಳಿ ಮತ್ತು ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆಯು ಮುಂದುವರಿದಿದೆ. ಗುಡುಗು ಸಹಿತ ಗಾಳಿಗೆ ವೇಗವು 40-50 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ ಹೇರಲಾಗಿದೆ.

ಇದನ್ನೂ ಓದಿ: Tumkur News : ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆದು ಮನಬಂದಂತೆ ಥಳಿಸಿದ ಉಪಾಧ್ಯಕ್ಷ!

ಮಳೆಗಾಲಕ್ಕೆ ತಕ್ಕಂತೆ ಬದಲಾಗುವ ಫುಟ್‌ವೇರ್‌ ಸ್ಟೈಲಿಂಗ್‌


ಮಳೆಗಾಲಕ್ಕೆ ತಕ್ಕಂತೆ (Monsoon Footwear Fashion) ಪ್ರತಿಯೊಬ್ಬರ ಫುಟ್‌ವೇರ್‌ ಸ್ಟೈಲಿಂಗ್‌ ಕೂಡ ಬದಲಾಗುತ್ತದೆ. ಇದಕ್ಕೆ ಪೂರಕ ಎಂಬಂತೆ, ಮಾರುಕಟ್ಟೆಯಲ್ಲಿ ನಾನಾ ಬ್ರಾಂಡ್‌ಗಳು ವಿನೂತನ ಮಾದರಿಯ ಬಗೆಬಗೆಯ ವಿನ್ಯಾಸದ ವಾಟರ್‌ಪ್ರೂಫ್‌ ಹಾಗೂ ಸ್ಕಿಡ್‌ ಆಗದ ಫುಟ್‌ವೇರ್​​ಗಳು ಲಗ್ಗೆ ಇಟ್ಟಿವೆ.

Monsoon Footwear Fashion

ವೈವಿಧ್ಯಮಯ ಫುಟ್‌ವೇರ್ಸ್

ಅವುಗಳಲ್ಲಿ ಫಂಕಿ ಕ್ರೂಕ್ಸ್‌, ಫ್ಲಿಪ್‌ಫ್ಲಾಪ್‌, ಜೆಲ್ಲಿ ಫ್ಲಾಟ್ಸ್, ವೆಡ್ಜಸ್‌ ಬೆಲ್ಲಿ ಶೂಸ್‌, ಸ್ಕಿಪ್ಪರ್‌ ಕ್ಲಾಗ್ಸ್‌, ಕ್ಯಾನ್ವಾಸ್‌, ಬ್ಯಾಲೇರಿನಾ ಫ್ಲಾಟ್‌ ಸ್ಯಾಂಡಲ್ಸ್, ಮಾನ್ಸೂನ್‌ ಸ್ನೀಕರ್‌, ರೈನ್‌ ಶೂ, ಅಕ್ವಾ ಶೂಸ್‌, ಗಮ್‌ ಬೂಟ್ಸ್, ಫೋಮ್‌ ಕ್ಲಾಗ್ಸ್ ಸೇರಿದಂತೆ ಮೆನ್ಸ್‌ ಹಾಗೂ ವುಮೆನ್ಸ್‌ ಕೆಟಗರಿಯಲ್ಲಿ ನಾನಾ ಬಗೆಯವು ಬಿಡುಗಡೆಗೊಂಡಿದ್ದು, ಮಾರಾಟ ಹೆಚ್ಚಾಗಿಯೇ ಸಾಗಿದೆ ಎನ್ನುತ್ತಾರೆ ಫುಟ್‌ವೇರ್‌ ಶೋರೂಂವೊಂದರ ಮಾರಾಟಗಾರರು.

ಸೀಸನ್‌ಗೆ ಬದಲಾಗುವ ಫುಟ್‌ವೇರ್ಸ್

ಸಮ್ಮರ್‌ ಸೀಸನ್‌ನಿಂದ ಮಾನ್ಸೂನ್‌ ಸೀಸನ್‌ಗೆ ಕಾಲಿಡುವಾಗ ಫುಟ್‌ವೇರ್‌ ಫ್ಯಾಷನ್‌ ಕೂಡ ಸಾಕಷ್ಟು ಬದಲಾಗುತ್ತದೆ. ಗ್ರ್ಯಾಂಡ್‌ ಲುಕ್‌ ನೀಡುವ ಸ್ಯಾಂಡಲ್ಸ್‌ ಆಗಲಿ, ವೆಲ್ವೆಟ್‌ ಹಾಗೂ ಡಿಸೈನರ್‌ ಶೂಗಳನ್ನಾಗಲಿ ಈ ಮಳೆಗಾಲದಲ್ಲಿ ಧರಿಸಿ ಹೊರಾಂಗಣದಲ್ಲಿ ಓಡಾಡಲು ಸಾಧ್ಯವಿಲ್ಲ! ಹಾಗಾಗಿ ಮಳೆಗಾಲಕ್ಕೆ ನೀರಿನಲ್ಲಿ ನೆನೆದರೂ, ತೊಪ್ಪೆಯಾದರೂ, ವಾಶ್‌ ಮಾಡಿದರೂ ಹಾಳಾಗದ ಮೆಟೀರಿಯಲ್‌ನ ಫುಟ್‌ವೇರ್‌ಗಳನ್ನು ಧರಿಸುವುದು, ವಾಕ್‌ ಮಾಡುವಾಗ ಸ್ಕಿಡ್‌ ಆಗದ, ಜಾರದ ಫುಟ್‌ವೇರ್‌ಗಳನ್ನು ಧರಿಸುವುದು ಅವಶ್ಯವಾಗುತ್ತದೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಅದರಲ್ಲೂ ಪ್ರತಿನಿತ್ಯ ಹೆಚ್ಚು ಓಡಾಡುವ ವ್ಯಾಪಾರಸ್ಥರು, ಉದ್ಯೋಗಸ್ಥರು ಹೆಚ್ಚಾಗಿ ಕಂಫರ್ಟಬಲ್‌ ಜೊತೆಗೆ ಸೀಸನ್‌ ಮುಗಿಯುವವರೆಗೂ ಬಾಳಿಕೆ ಬರುವಂತಹ ಫುಟ್‌ವೇರ್‌ಗಳನ್ನೇ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ ಎನ್ನುತ್ತಾರೆ ಅವರು.

ಬೂಟ್ಸ್-ಶೂ-ಸ್ಯಾಂಡಲ್ಸ್-ಫ್ಲಿಪ್‌-ಫ್ಲಾಪ್‌

ಮಳೆಗಾಲದಲ್ಲಿ ಫ್ಯಾಷನ್‌ ಲುಕ್‌ಗಾಗಿ ಮಾತ್ರವಲ್ಲ, ನಿಮ್ಮ ಕಂಫರ್ಟಬಲಿಟಿಗೆ ತಕ್ಕಂತೆ ಆಯ್ಕೆ ಮಾಡಿಕೊಳ್ಳುವುದು ಜಾಣತನ. ಔಟ್‌ಡೋರ್‌ನಲ್ಲಿ ಹೆಚ್ಚು ಓಡಾಡುವವರು ಹಾಗೂ ಕೆಲಸ ಮಾಡುವವರು ಬೂಟ್ಸ್​​​ಗಎ ಮೊರೆ ಹೋದರೆ, ಮಹಿಳೆಯರು ಸ್ಯಾಂಡಲ್ಸ್‌ ಹಾಗೂ ಫ್ಲಿಪ್‌-ಫ್ಲಾಪ್‌ಗಳನ್ನು ಚೂಸ್‌ ಮಾಡುತ್ತಾರೆ. ಇನ್ನು ಹುಡುಗಿಯರು ಕ್ರೂಕ್ಸ್‌ ಹಾಗೂ ಬ್ಯಾಲೇರಿನಾ ಶೂಗಳಂತವನ್ನು ಸೆಲೆಕ್ಟ್‌ ಮಾಡುತ್ತಾರೆ ಎನ್ನುತ್ತಾರೆ ಫುಟ್‌ವೇರ್‌ ಮಾರಾಟಗಾರರು.

ಫುಟ್‌ವೇರ್‌ ಸೆಲೆಕ್ಷನ್‌ ಹೀಗಿರಲಿ

  • – ಫ್ಯಾಷನ್‌ಗಿಂತ ಹೆಚ್ಚಾಗಿ ಆರಾಮದಾಯಕವಾಗಿರಲಿ.
  • – ಫುಟ್‌ವೇರ್‌ ಒದ್ದೆಯಾಗಿದ್ದಲ್ಲಿ, ಒಣಗಿಸಿ, ಧರಿಸಿ.
  • – ಗುಣಮಟ್ಟದ ಫುಟ್‌ವೇರ್ ಕೊಳ್ಳಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Krishna River Tragedy
ಕರ್ನಾಟಕ2 mins ago

Krishna River Tragedy: ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಆರು ಮಂದಿ ನೀರುಪಾಲು, ಒಬ್ಬರ ಮೃತದೇಹ ಪತ್ತೆ

Stampedes in India
ದೇಶ10 mins ago

Stampedes in India: ದೇಶದಲ್ಲಿ ಈ ಹಿಂದೆಯೂ ನಡೆದಿವೆ ಭಾರೀ ಕಾಲ್ತುಳಿತ ದುರಂತ; ಇಲ್ಲಿದೆ ಲಿಸ್ಟ್‌

Agniveer
ರಾಜಕೀಯ18 mins ago

Agniveer: ಹುತಾತ್ಮ ʼಅಗ್ನಿವೀರʼನ ಕುಟುಂಬಕ್ಕೆ 1.08 ಕೋಟಿ ರೂ. ಪರಿಹಾರ; ರಾಹುಲ್‌ ಗಾಂಧಿ ಆರೋಪ ಠುಸ್‌!

Hathras Stampede
ಪ್ರಮುಖ ಸುದ್ದಿ21 mins ago

Hathras Stampede : ಹತ್ರಾಸ್​ ಸತ್ಸಂಗದಲ್ಲಿ ಕಾಲ್ತುಳಿತಕ್ಕೆ ಮೃತಪಟ್ಟವರ ಸಂಖ್ಯೆ 107 ಕ್ಕೆ ಏರಿಕೆ

KMF Milk Production
ಕರ್ನಾಟಕ34 mins ago

KMF Milk Production: ದಿನಕ್ಕೆ 1 ಕೋಟಿ ಲೀಟರ್ ಹಾಲು ಉತ್ಪಾದನೆ; ಕೆಎಂಎಫ್ ಸಾಧನೆ ಬಗ್ಗೆ ಸಿಎಂ ಮೆಚ್ಚುಗೆ‌

Narendra Modi
ದೇಶ52 mins ago

Narendra Modi: ನನ್ನ ದನಿಯೂ ಗಟ್ಟಿಯಿದೆ, ಸಂಕಲ್ಪವೂ; ಈ ಮೋದಿ ಯಾರಿಗೂ ಹೆದರಲ್ಲ, ಬಗ್ಗಲ್ಲ: ಸಂಸತ್‌ನಲ್ಲಿ ಪ್ರಧಾನಿ ಅಬ್ಬರ

Printed Handbags Fashion
ಫ್ಯಾಷನ್1 hour ago

Printed Handbags Fashion: ಉದ್ಯೋಗಸ್ಥ ಮಹಿಳೆಯರನ್ನು ಸೆಳೆಯುತ್ತಿರುವ ಪ್ರಿಂಟೆಡ್‌ ಹ್ಯಾಂಡ್‌ ಬ್ಯಾಗ್ಸ್

Bomb Blast
ಕರ್ನಾಟಕ1 hour ago

Bomb Blast: ಜೋಯಿಡಾದಲ್ಲಿ ಪತ್ರಕರ್ತರು ಸಾಗುತ್ತಿದ್ದ ಕಾರಿನಡಿ ನಾಡ ಬಾಂಬ್ ಸ್ಫೋಟ

Pune Porsche Crash
ಪ್ರಮುಖ ಸುದ್ದಿ1 hour ago

Pune Porsche Crash : ಪೋರ್ಶೆ ಕಾರು ಗುದ್ದಿಸಿ ಇಬ್ಬರ ಸಾವಿಗೆ ಕಾರಣನಾದ ಬಾಲಕನ ಅಪ್ಪ, ಅಜ್ಜನಿಗೆ ಜಾಮೀನು

K Annamalai
ರಾಜಕೀಯ1 hour ago

K Annamalai: ಕೆ ಅಣ್ಣಾಮಲೈ ಯುಕೆ ಫೆಲೋಶಿಪ್‌ಗೆ ಆಯ್ಕೆ; ಬಿಜೆಪಿ ರಾಜ್ಯಾಧ್ಯಕ್ಷತೆಗೆ ರಾಜೀನಾಮೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 hour ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌