vasavi condiments : ವಾಸವಿ ಕಾಂಡಿಮೆಂಟ್ಸ್‌ಗೆ ಬೀಗ; ನಿದ್ರೆ ಮಾತ್ರೆ ಸೇವಿಸಿ ಮಾಲಕಿ ಗೀತಾ ಆತ್ಮಹತ್ಯೆಗೆ ಯತ್ನ - Vistara News

ಬೆಂಗಳೂರು

vasavi condiments : ವಾಸವಿ ಕಾಂಡಿಮೆಂಟ್ಸ್‌ಗೆ ಬೀಗ; ನಿದ್ರೆ ಮಾತ್ರೆ ಸೇವಿಸಿ ಮಾಲಕಿ ಗೀತಾ ಆತ್ಮಹತ್ಯೆಗೆ ಯತ್ನ

vasavi condiments: ಅವರೆಮೇಳದಿಂದ ಹೆಚ್ಚು ಹೆಸರು ಮಾಡಿದ್ದ ವಾಸವಿ ಕಾಂಡಿಮೆಂಟ್ಸ್‌ ಮಾಲಕಿ ಗೀತಾ ಅವರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. 10 ವರ್ಷಗಳಿಂದ ಕೋಟ್ಯಾಂತರ ರೂ. ಬಾಡಿಗೆ ಕಟ್ಟದ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕರು ಕೋರ್ಟ್‌ ಮೆಟ್ಟಿಲೇರಿದ್ದರು.

VISTARANEWS.COM


on

Vasavi Condiments owner attempts suicide by consuming sleeping pills
ಬಾಡಿಗೆ ಕಟ್ಟದ ಕಾರಣ ವಾಸವಿ ಕಾಂಡಿಮೆಂಟ್ಸ್‌ಗೆ ಬೀಗ ಹಾಕಿದ ಪೊಲೀಸರು ಮತ್ತೊಂದು ಕಡೆ ಆತ್ಮಹತ್ಯೆಗೆ ಯತ್ನಿಸಿದ ಮಾಲಕಿ ಗೀತಾ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನ ವಾಸವಿ ಕಾಂಡಿಮೆಂಟ್ಸ್‌ನ (vasavi condiments) ಮಾಲಕಿ ಆತ್ಮಹತ್ಯೆಗೆ (Self Harming) ಯತ್ನಿಸಿದ್ದಾರೆ. ಬೆಂಗಳೂರಿನ ಸಜ್ಜನ್ ರಾವ್ ಸರ್ಕಲ್ ಬಳಿ ಇರುವ ಶ್ರೀ ವಾಸವಿ ಕಾಂಡಿಮೆಂಟ್ಸ್‌ನ ಮಾಲಕಿ ಗೀತಾ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

10 ವರ್ಷ ಬಾಡಿಗೆ ಕಟ್ಟದ ಹಿನ್ನೆಲೆಯಲ್ಲಿ ಗೀತಾ ವಿರುದ್ಧ ಅಂಗಡಿ ಮಾಲೀಕರು ಕೋರ್ಟ್ ಮೆಟ್ಟಿಲೇರಿದ್ದರು. ವಾಸವಿ ಕಾಂಡಿಮೆಂಟ್ಸ್‌ನ ಮಾಲಕಿ ಗೀತಾ ಬರೋಬ್ಬರಿ ಒಂದು ಕೋಟಿ 70 ಲಕ್ಷ ರೂ. ಬಾಡಿಗೆ ಹಣ ಬಾಕಿ ಉಳಿಸಿಕೊಂಡಿದ್ದರು. ಕೇವಲ 40 ಲಕ್ಷ ಮಾತ್ರ ಬಾಡಿಗೆ ನೀಡಿದ್ದರಂತೆ.

ಹೀಗಾಗಿ ಇಂದು ಕೋರ್ಟ್ ಅನುಮತಿ ಪಡೆದು ಪೊಲೀಸರು ಅಂಗಡಿಗೆ ಬೀಗ ಹಾಕಿದ್ದರು. ಈ ವೇಳೆ ವಾಸವಿ ಕಾಂಡಿಮೆಂಟ್ಸ್ ಮಾಲಕಿ ಗೀತಾ ಕುಸಿದು ಬಿದ್ದಿದ್ದಾರೆ. ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ನಿದ್ರೆ ಮಾತ್ರೆ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಸದ್ಯ ಗೀತಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರೇಕಾಯಿ ತಿನಿಸುಗಳಿಗೆ ಹಾಗೂ ಅವರೇಕಾಯಿ ಮೇಳಕ್ಕೆ ವಾಸವಿ ಕಾಂಡಿಮೆಂಟ್ಸ್ ಪ್ರಸಿದ್ದಿಯಾಗಿತ್ತು. ಆದರೆ ಬಾಡಿಗೆ ಕಟ್ಟದ ಹಿನ್ನೆಲೆ ಪೊಲೀಸರು ಅಂಗಡಿಗೆ ಬೀಗ ಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ನೇಮಕ

Hemant Nimbalkar: ಹೇಮಂತ್ ಅವರು ಅಧಿಕಾರ ವಹಿಸಿಕೊಳ್ಳಲಿರುವ ಕಾರಣ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಹಿರಿಯ ಐಎಎಸ್‌ ಅಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಅವರನ್ನು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಶಾಖೆ ವಿಶೇಷ ಆಯುಕ್ತರನ್ನಾಗಿ ಮುಂದುವರಿಸಲಾಗಿದೆ.

VISTARANEWS.COM


on

Hemant Nimbalkar
Koo

ಬೆಂಗಳೂರು: ಐಪಿಎಸ್‌ ಅಧಿಕಾರಿ ಹೇಮಂತ್‌ ನಿಂಬಾಳ್ಕರ್‌ (Hemant Nimbalkar) ಅವರನ್ನು ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಮರು ನಿಯೋಜನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಅವರು ಕಳೆದ ಮೂರು ತಿಂಗಳಿಂದ ಯಾವುದೇ ಹುದ್ದೆಯನ್ನು ಹೊಂದಿರಲಿಲ್ಲ. ಅವರ ಪತ್ನಿ ಅಂಜಲಿನಿಂಬಾಳ್ಕರ್​ ಚುನಾವಣೆಗೆ ಸ್ಪರ್ಧಿಸಿದ್ದ ಕಾರಣ ಈ ನಿಯೋಜನೆ ಮಾಡಲಾಗಿತ್ತು. ಇದೀಗ ಅವರಿಗೆ ಸ್ಥಾನ ನೀಡಲಾಗಿದೆ.

ಸರ್ಕಾರದ ಆದೇಶದ ಪ್ರತಿ ಇಲ್ಲಿದೆ

ಹೇಮಂತ್ ಅವರು ಅಧಿಕಾರ ವಹಿಸಿಕೊಳ್ಳಲಿರುವ ಕಾರಣ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಹಿರಿಯ ಐಎಎಸ್‌ ಅಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಅವರನ್ನು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಶಾಖೆ ವಿಶೇಷ ಆಯುಕ್ತರನ್ನಾಗಿ ಮುಂದುವರಿಸಲಾಗಿದೆ.

ಇದನ್ನೂ ಓದಿ: Advocate G Devarajegowda: ಅತ್ಯಾಚಾರ ಕೇಸ್‌; ಜೈಲಿನಿಂದ ವಕೀಲ ದೇವರಾಜೇಗೌಡ ರಿಲೀಸ್‌

ಹೇಮಂತ್ ನಿಂಬಾಳ್ಕರ್ ಕಳೆದ ಒಂದು ವರ್ಷದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಅವರನ್ನು ಪತ್ನಿ ಡಾ. ಅಂಜಲಿ ನಿಂಬಾಳ್ಕರ್‌ ಅವರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರಿಂದ ವರ್ಗ ಮಾಡಲಾಗಿತ್ತು. ಅವರಿಗೆ ಯಾವುದೇ ಹುದ್ದೆ ಸೂಚಿಸಿರದ ಕಾರಣ ಮೂರು ತಿಂಗಳಿನಿಂದ ಪೊಲೀಸ್‌ ಮಹಾನಿರ್ದೇಶಕರ ಕಚೇರಿಯಲ್ಲಿಯೇ ಇದ್ದರು. ಹೇಮಂತ್ ನಿಂಬಾಳ್ಕರ್‌ ಅವರು ಕಳೆದ ಜನವರಿಯಲ್ಲಿ ಬಡ್ತಿ ಹೊಂದಿದ್ದರು. ಅವರಿಗೆ ಐಜಿಪಿ ದರ್ಜೆಯಿಂದ ಎಡಿಜಿಪಿ ದರ್ಜೆಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶಿತ್ತು.

ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿದ್ದ ವಿಕಾಸ್ ಸುರಳ್ಕರ್​ಗೆ ಅವರನ್ನು ಆ ಹುದ್ದೆಯಲ್ಲಿ ಮುಂದುವರಿಸಲಾಗಿದೆ.

Continue Reading

ಬೆಂಗಳೂರು

Bengaluru News: ಬೆಂಗಳೂರಿನ ವಿದ್ಯಾರ್ಥಿನಿಗೆ ಐಐಟಿ ಬಾಂಬೆಯ ಪ್ರತಿಷ್ಠಿತ ಪ್ರಶಸ್ತಿ

Bengaluru News: ಐಐಟಿ ಬಾಂಬೆಯ ಐಡಿಸಿ ಸ್ಕೂಲ್‌ ಆಫ್‌ ಡಿಸೈನ್‌ ಆಯೋಜಿಸಿದ್ದ ಡಿʼಸೋರ್ಸ್-ಡಿಐಸಿ, ಬಿಎಚ್‌ಯುಎಸ್‌ ಡಿಜಿ ಡಿಸೈನ್‌ ಚಾಲೆಂಜ್‌ನಲ್ಲಿ ಗೋಪಾಲನ್‌ ಆರ್ಕಿಟೆಕ್ಚರ್‌ ಮತ್ತು ಪ್ಲಾನಿಂಗ್‌ ವಿಭಾಗದ ವಿದ್ಯಾರ್ಥಿನಿ ಬೆಂಗಳೂರಿನ ವೈಷ್ಣವಿ ಎಂ. ವಿಜೇತರಾಗಿದ್ದಾರೆ.

VISTARANEWS.COM


on

bengaluru student Vaishnavi M who won the prestigious award from IIT Bombay
Koo

ಬೆಂಗಳೂರು: ಐಐಟಿ ಬಾಂಬೆಯ ಐಡಿಸಿ ಸ್ಕೂಲ್‌ ಆಫ್‌ ಡಿಸೈನ್‌ ಆಯೋಜಿಸಿದ್ದ ಡಿʼಸೋರ್ಸ್-ಡಿಐಸಿ, ಬಿಎಚ್‌ಯುಎಸ್‌ ಡಿಜಿ ಡಿಸೈನ್‌ ಚಾಲೆಂಜ್‌ನಲ್ಲಿ ಗೋಪಾಲನ್‌ ಆರ್ಕಿಟೆಕ್ಚರ್‌ ಮತ್ತು ಪ್ಲಾನಿಂಗ್‌ ವಿಭಾಗದ ವಿದ್ಯಾರ್ಥಿನಿ ಬೆಂಗಳೂರಿನ ವೈಷ್ಣವಿ ಎಂ. ವಿಜೇತರಾಗಿದ್ದಾರೆ.

ಸುಸ್ಥಿರ ಅಭಿವೃದ್ಧಿಯ ಗುರಿಯ ನಿಟ್ಟಿನಲ್ಲಿ ಕ್ರಿಯಾಶೀಲ ಹಾಗೂ ವಿನೂತನ ಪರಿಹಾರಗಳನ್ನು ನೀಡುವ ನಿಟ್ಟಿನಲ್ಲಿ ಡಿಡಿಎಸ್‌ಡಿಸಿ ಸ್ಪರ್ಧಿಗಳನ್ನು ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿದೆ.

ಇದನ್ನೂ ಓದಿ: Yuva Sambhrama 2024: ಬೆಂಗಳೂರಿನಲ್ಲಿ ಜು.12ರಿಂದ 3 ದಿನ ಯುವ ಸಂಭ್ರಮ

ಸ್ಪರ್ಧಿಗಳು ರಚನಾತ್ಮಕ ವಿನ್ಯಾಸ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುವುದರಿಂದ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು, ವಿಶ್ಲೇಷಿಸಲು ಮತ್ತು ಅಂತಿಮವಾಗಿ ಕಲ್ಪನೆಯ ರೂಪಕೊಡಲು ನೆರವಾಗುತ್ತದೆ. ಶಬ್ದದ ತೀರ್ಪಿನ ಮೇಲೆ ಪರಿಹಾರಗಳನ್ನು ಖಾತರಿಪಡಿಸಿಕೊಳ್ಳುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

Continue Reading

ಕರ್ನಾಟಕ

Kannada New Movie: ಗೋಪಿನಾಥ ಬೆಟ್ಟದಲ್ಲಿ ನಡೆದ ಧರ್ಮ ಕೀರ್ತಿರಾಜ್ ಅಭಿನಯದ ʼಪ್ರೊಡಕ್ಷನ್ ನಂ 1ʼ ಚಿತ್ರದ ಮುಹೂರ್ತ

Kannada New Movie: ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸುತ್ತಿರುವ “ಪ್ರೊಡಕ್ಷನ್ ನಂ 1” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಚಿಕ್ಕಬಳ್ಳಾಪುರದ ಗೋಪಿನಾಥ ಬೆಟ್ಟದಲ್ಲಿರುವ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.

VISTARANEWS.COM


on

Dharma Keerthiraj starrer production No 1 movie Muhurta
Koo

ಬೆಂಗಳೂರು: ಲಿತನ್ಯ ಗೋಲ್ಡ್ ಲೀಫ್ ಮೀಡಿಯಾ ವೆಂಚರ್ಸ್ ಪ್ರೈ.ಲಿ. ಹಾಗೂ ಸಾರ್ಥಕ್ ಕ್ರಿಯೇಟರ್ಸ್ ಲಾಂಛನದಲ್ಲಿ ಜಿ.ಎಚ್. ಜನಾರ್ದನ್ ಹಾಗೂ ಸಿ.ಎಲ್. ಹರ್ಷವರ್ಧನ್ ನಿರ್ಮಿಸುತ್ತಿರುವ ರಮೇಶ್ ರಾಜ್ ಅವರ ನಿರ್ದೇಶನದಲ್ಲಿ ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸುತ್ತಿರುವ “ಪ್ರೊಡಕ್ಷನ್ ನಂ 1” ಚಿತ್ರದ (Kannada New Movie) ಮುಹೂರ್ತ ಸಮಾರಂಭ ಇತ್ತೀಚಿಗೆ ಚಿಕ್ಕಬಳ್ಳಾಪುರದ ಗೋಪಿನಾಥ ಬೆಟ್ಟದಲ್ಲಿರುವ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.

ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಆರಂಭ ಫಲಕ ತೋರಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಎಂ. ಮುನೇಗೌಡ ಕ್ಯಾಮೆರಾ ಚಾಲನೆ ಮಾಡಿದರು.

ಇದನ್ನೂ ಓದಿ: Eshwar Khandre: ಚಾರಣಪಥಗಳ ಆನ್‌ಲೈನ್ ಟಿಕೆಟ್‌ಗೆ ಶೀಘ್ರ ಚಾಲನೆ; ಸಚಿವ ಈಶ್ವರ ಖಂಡ್ರೆ

ಆಕ್ಷನ್ ಡ್ರಾಮ ಜಾನರ್‌ನ ಈ ಚಿತ್ರಕ್ಕೆ ನಿರ್ದೇಶಕ ರಮೇಶ್ ರಾಜ್ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. “ಗ್ಯಾಂಗ್ ಲೀಡರ್”, ” ತವರಿನ ಋಣ” ಚಿತ್ರಗಳನ್ನು ನಿರ್ದೇಶಿಸಿರುವ ರಮೇಶ್ ರಾಜ್ ಅವರಿಗೆ ಇದು ಮೂರನೇ ಚಿತ್ರ.

ಈಶ್ವರಿ ಸುರೇಶ್ ಛಾಯಾಗ್ರಹಣ, ಶಶಿ ಸಂಕಲನ, ಬಿ.ವಿ. ರೆಡ್ಡಿ ಸಹ ನಿರ್ದೇಶನ ಹಾಗೂ ಮಂಜುನಾಥ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ. ವಂಟೂರು ಶ್ರೀನಿವಾಸ್ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: Yuva Sambhrama 2024: ಬೆಂಗಳೂರಿನಲ್ಲಿ ಜು.12ರಿಂದ 3 ದಿನ ಯುವ ಸಂಭ್ರಮ

ಧರ್ಮ ಕೀರ್ತಿರಾಜ್ ಅವರಿಗೆ ಪ್ರಿಯಾ ಹೆಗ್ಡೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ಮುಂದಿನ ವಾರದಿಂದ ಚಿತ್ರೀಕರಣ ಆರಂಭವಾಗುತ್ತಿದೆ. ಚಿಕ್ಕಬಳ್ಳಾಪುರ, ಬೆಂಗಳೂರು, ಮಡಿಕೇರಿ ಹಾಗೂ ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ.

Continue Reading

ಕರ್ನಾಟಕ

Lakshmi Hebbalkar: ಅಂಗನವಾಡಿ ಬಲವರ್ಧನೆಗೆ ಕೇಂದ್ರದ ನೆರವು ಕೋರಿದ ಲಕ್ಷ್ಮೀ ಹೆಬ್ಬಾಳಕರ್

Lakshmi Hebbalkar: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರನ್ನು ಭೇಟಿ ಮಾಡಿ ಇಲಾಖೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳನ್ನು ಸಲ್ಲಿಸಿದರು. ಸಚಿವೆ ಮಾಡಿರುವ ಮನವಿಯ ವಿವರ ಇಲ್ಲಿದೆ.

VISTARANEWS.COM


on

Minister Lakshmi Hebbalkar has submitted various proposals to the Union Minister seeking grant for the strengthening of the department
Koo

ನವದೆಹಲಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ (Lakshmi Hebbalkar), ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರನ್ನು ಸೋಮವಾರ ಭೇಟಿ ಮಾಡಿ ಇಲಾಖೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳನ್ನು ಸಲ್ಲಿಸಿದರು.

ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲು, ಮಕ್ಕಳಿಗೆ ಪೌಷ್ಠಿಕ ಆಹಾರ ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್‌ಕೆಜಿ, ಯುಕೆಜಿ) ನೀಡಲು ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡುವಂತೆ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್, ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.

ಕೇಂದ್ರ ಸಹಭಾಗಿತ್ವದ ವಿವಿಧ ಯೋಜನೆಗಳ ಜಾರಿಗೆ ರಾಜ್ಯಕ್ಕೆ ಬಿಡುಗಡೆ ಆಗಬೇಕಿರುವ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರಲ್ಲದೆ, ಅಂಗನವಾಡಿ ಕೇಂದ್ರಗಳಿಗೆ ಅಗತ್ಯವಿರುವ ಅಕ್ಕಿ, ಗೋಧಿಯನ್ನು ಕೂಡಲೇ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: Yuva Sambhrama 2024: ಬೆಂಗಳೂರಿನಲ್ಲಿ ಜು.12ರಿಂದ 3 ದಿನ ಯುವ ಸಂಭ್ರಮ

ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ, ಕುಡಿಯುವ ನೀರು, ವಿದ್ಯುತ್ ಸೌಕರ್ಯ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನದ ನೆರವು ಅಗತ್ಯವಿದೆ. ಹಾಗಾಗಿ, ಜರೂರಾಗಿ ಅನುದಾನವನ್ನು ಬಿಡುಗಡೆ ಮಾಡಬೇಕು. ಪ್ರಮುಖವಾಗಿ ರಾಜ್ಯದಲ್ಲಿ ಹೊಸದಾಗಿ ಸೃಜನೆಗೊಂಡ ತಾಲೂಕುಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಮತ್ತು ವಿವಿಧ ಸೌಲಭ್ಯಗಳನ್ನು ಕೂಡಲೇ ಮಂಜೂರು ಮಾಡುವಂತೆ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್, ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ. ಜಿ.ಸಿ. ಪ್ರಕಾಶ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್ ಸೇರಿದಂತೆ ಕೇಂದ್ರ ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ: Eshwar Khandre: ಚಾರಣಪಥಗಳ ಆನ್‌ಲೈನ್ ಟಿಕೆಟ್‌ಗೆ ಶೀಘ್ರ ಚಾಲನೆ; ಸಚಿವ ಈಶ್ವರ ಖಂಡ್ರೆ

ಹಲವು ಬೇಡಿಕೆಗಳ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದೆ. ಎಲ್ಲ ಮಾಹಿತಿಗಳನ್ನು ಅತ್ಯಂತ ತಾಳ್ಮೆಯಿಂದ ಪಡೆದುಕೊಂಡಿರುವ ಕೇಂದ್ರ ಸಚಿವರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ.
-ಲಕ್ಷ್ಮೀ ಹೆಬ್ಬಾಳಕರ್, ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ

Continue Reading
Advertisement
Viral Video
Latest6 mins ago

Viral Video: ಲೈವ್‌ ವರದಿ ಮಾಡುತ್ತಿದ್ದಾಗ ಪಾಕ್ ಟಿವಿ ವರದಿಗಾರ್ತಿ ಮೇಲೆ ಗೂಳಿ ದಾಳಿ!

Hemant Nimbalkar
ಪ್ರಮುಖ ಸುದ್ದಿ10 mins ago

Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ನೇಮಕ

Kolar News
ಕರ್ನಾಟಕ10 mins ago

Kolar News: ಕಾಲೇಜಿನ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಯುವಕನ ಬಂಧನ

Tamanna Bhatia
Latest18 mins ago

Tamanna Bhatia: ‘ಜೀ ಕರ್ದಾ’ದಲ್ಲಿ ತಮನ್ನಾ ಭಾಟಿಯಾ ಪೂರ್ತಿ ಟಾಪ್‌ಲೆಸ್‌! ವಿಡಿಯೊ ಇದೆ

bengaluru student Vaishnavi M who won the prestigious award from IIT Bombay
ಬೆಂಗಳೂರು28 mins ago

Bengaluru News: ಬೆಂಗಳೂರಿನ ವಿದ್ಯಾರ್ಥಿನಿಗೆ ಐಐಟಿ ಬಾಂಬೆಯ ಪ್ರತಿಷ್ಠಿತ ಪ್ರಶಸ್ತಿ

IPL 2025
ಪ್ರಮುಖ ಸುದ್ದಿ34 mins ago

IPL 2025 : ಐಪಿಎಲ್​ ತಂಡಗಳಲ್ಲಿ ಉಳಿಸಿಕೊಳ್ಳುವ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ

Dharma Keerthiraj starrer production No 1 movie Muhurta
ಕರ್ನಾಟಕ36 mins ago

Kannada New Movie: ಗೋಪಿನಾಥ ಬೆಟ್ಟದಲ್ಲಿ ನಡೆದ ಧರ್ಮ ಕೀರ್ತಿರಾಜ್ ಅಭಿನಯದ ʼಪ್ರೊಡಕ್ಷನ್ ನಂ 1ʼ ಚಿತ್ರದ ಮುಹೂರ್ತ

Anjanadri Temple Hundi Count
ಕರ್ನಾಟಕ39 mins ago

Koppala News: ಅಂಜನಾದ್ರಿ ದೇಗುಲ ಹುಂಡಿಯಲ್ಲಿ 32.95 ಲಕ್ಷ ರೂ; ವಿವಿಧ ದೇಶಗಳ ನೋಟುಗಳು

Pancreatitis
ಆರೋಗ್ಯ41 mins ago

Pancreatitis: ಏನಿದು ಪ್ಯಾಂಕ್ರಿಯಾಟೈಟಿಸ್‌ನಿಂದ ಉಂಟಾಗುವ ಉರಿಯೂತ? ಇದಕ್ಕೇನು ಪರಿಹಾರ?

MLA Shivaram Hebbar spoke in Taluk level janaspandana programme yallapur
ಉತ್ತರ ಕನ್ನಡ43 mins ago

Uttara Kannada News: ಮಾನವೀಯ ದೃಷ್ಟಿಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಶಾಸಕ ಶಿವರಾಮ ಹೆಬ್ಬಾರ್ ಸೂಚನೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌