Post Office: ಪೋಸ್ಟ್‌ ಆಫೀಸ್‌ ಉಳಿತಾಯ ಯೋಜನೆಗಳ ಬಡ್ಡಿದರ ಬದಲಾವಣೆ ಇಲ್ಲ; ಬಡ್ಡಿಯ ಪಟ್ಟಿ ಇಲ್ಲಿದೆ - Vistara News

ಪ್ರಮುಖ ಸುದ್ದಿ

Post Office: ಪೋಸ್ಟ್‌ ಆಫೀಸ್‌ ಉಳಿತಾಯ ಯೋಜನೆಗಳ ಬಡ್ಡಿದರ ಬದಲಾವಣೆ ಇಲ್ಲ; ಬಡ್ಡಿಯ ಪಟ್ಟಿ ಇಲ್ಲಿದೆ

Post Office: 2024-25ನೇ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದ ಅವಧಿಗೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರವನ್ನು ಬದಲಾವಣೆ ಮಾಡಿಲ್ಲ. ಏಪ್ರಿಲ್‌-ಜೂನ್‌ ತ್ರೈಮಾಸಿಕದಲ್ಲಿ ಸಿಗುತ್ತಿದ್ದ ಬಡ್ಡಿದರವೇ ಮುಂದುವರಿಯಲಿದೆ ಎಂಬುದಾಗಿ ಕೇಂದ್ರ ಹಣಕಾಸು ಸಚಿವಾಲಯವು ಅಧಿಸೂಚನೆ ಹೊರಡಿಸಿದೆ. ಯಾವೆಲ್ಲ ಯೋಜನೆಗಳ ಬಡ್ಡಿದರ ಎಷ್ಟಿದೆ ಎಂಬುದರ ಕಿರು ಮಾಹಿತಿ ಇಲ್ಲಿದೆ.

VISTARANEWS.COM


on

Post Office
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ (2024-25) ಎರಡನೇ ತ್ರೈಮಾಸಿಕದ ಅವಧಿಗೆ (ಜುಲೈ-ಸೆಪ್ಟೆಂಬರ್‌ 2024) ಕೇಂದ್ರ ಸರ್ಕಾರವು ಪೋಸ್ಟ್‌ ಆಫೀಸ್‌ (Post Office) ಉಳಿತಾಯ ಯೋಜನೆ ಸೇರಿ ಯಾವುದೇ ಕಿರು ಉಳಿತಾಯ ಯೋಜನೆಗಳ (Small Savings Schemes) ಮೇಲಿನ ಬಡ್ಡಿದರವನ್ನು ಏರಿಕೆ ಮಾಡಿಲ್ಲ. ಇದರಿಂದಾಗಿ ಪಬ್ಲಿಕ್‌ ಪ್ರಾವಿಡೆಂಟ್‌ ಫಂಡ್‌ (PPF), ಸುಕನ್ಯಾ ಸಮೃದ್ಧಿ ಯೋಜನೆ (SSY) ಸೇರಿ ಹಲವು ಉಳಿತಾಯ ಯೋಜನೆಗಳ ಬಡ್ಡಿದರದಲ್ಲಿ ಬದಲಾವಣೆಯಾಗದ ಕಾರಣ ಸಣ್ಣ ಪ್ರಮಾಣದಲ್ಲಿ ಠೇವಣಿ ಮಾಡುವವರಿಗೆ ಯಾವುದೇ ಅನುಕೂಲ ಆಗಿಲ್ಲ.

ಬಡ್ಡಿದರದ ಪಟ್ಟಿ ಹೀಗಿದೆ

ಯೋಜನೆಗಳುಬಡ್ಡಿದರ
ಉಳಿತಾಯ ಖಾತೆಯ ಠೇವಣಿ4%
1 ವರ್ಷ ಪೋಸ್ಟ್‌ ಆಫೀಸ್‌ ಠೇವಣಿ6.9%
2 ವರ್ಷ ಪೋಸ್ಟ್‌ ಆಫೀಸ್‌ ಠೇವಣಿ7%
3 ವರ್ಷ ಪೋಸ್ಟ್‌ ಆಫೀಸ್‌ ಠೇವಣಿ7.1%
5 ವರ್ಷ ಪೋಸ್ಟ್‌ ಆಫೀಸ್‌ ಠೇವಣಿ7.5%
5 ವರ್ಷ ರೆಕರಿಂಗ್‌ ಡೆಪಾಸಿಟ್‌ (RD)6.7%
ನ್ಯಾಷನಲ್‌ ಸೇವಿಂಗ್ಸ್‌ ಸರ್ಟಿಫಿಕೇಟ್ (NSC)‌7.7%
ಕಿಸಾನ್‌ ವಿಕಾಸ್‌ ಪತ್ರ7.5%
ಪಿಪಿಎಫ್‌7.1%
ಸುಕನ್ಯಾ ಸಮೃದ್ಧಿ ಖಾತೆ8.2%
ಹಿರಿಯ ನಾಗರಿಕರ ಉಳಿತಾಯ ಯೋಜನೆ8.2%

“2024-25ನೇ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದ ಅವಧಿಗೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರವನ್ನು ಬದಲಾವಣೆ ಮಾಡಿಲ್ಲ. ಏಪ್ರಿಲ್‌-ಜೂನ್‌ ತ್ರೈಮಾಸಿಕದಲ್ಲಿ ಸಿಗುತ್ತಿದ್ದ ಬಡ್ಡಿದರವೇ ಮುಂದುವರಿಯಲಿದೆ” ಎಂಬುದಾಗಿ ಕೇಂದ್ರ ಹಣಕಾಸು ಸಚಿವಾಲಯವು ಅಧಿಸೂಚನೆ ಹೊರಡಿಸಿದೆ. ಇದರಿಂದಾಗಿ ಕಿರು ಉಳಿತಾಯ ಯೋಜನೆಗಳ ಮೂಲಕ ಠೇವಣಿ ಇರಿಸಿದವರಿಗೆ ತುಸು ನಿರಾಸೆಯಾದಂತಾಗಿದೆ. ಎರಡನೇ ತ್ರೈಮಾಸಿಕದಲ್ಲಿ ಕೇಂದ್ರ ಸರ್ಕಾರವು ಬಡ್ಡಿದರ ಏರಿಕೆ ಮಾಡುವ ನಿರೀಕ್ಷೆ ಇತ್ತು.

Job Alert

ಮತ್ತೊಂದೆಡೆ, ಭವಿಷ್ಯ ನಿಧಿ ಹೊಂದಿರುವ ಉದ್ಯೋಗಿಗಳು ತಮ್ಮ ಖಾತೆಗೆ ಬಡ್ಡಿ ಮೊತ್ತ ಜಮೆಯಾಗುವುದನ್ನು ಕಾಯುತ್ತಿದ್ದಾರೆ. ಅಂತಹವರಿಗೆ ಇದೀಗ ಸಿಹಿ ಸುದ್ದಿ. ಜುಲೈ ಅಂತ್ಯದ ವೇಳೆಗೆ ಬಡ್ಡಿ ಹಣ ಇಪಿಎಫ್ ಒ ಸದಸ್ಯರ ಖಾತೆಗೆ ತಲುಪಬಹುದು. ಇದಕ್ಕಾಗಿ ಶೀಘ್ರದಲ್ಲೇ ಹಣಕಾಸು ಸಚಿವಾಲಯ ಅಧಿಕೃತ ಅಧಿಸೂಚನೆಯನ್ನು ಹೊರಡಿಸುವ ನಿರೀಕ್ಷೆ ಇದೆ.

ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆಯ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟಿಗಳು ಫೆಬ್ರವರಿಯಲ್ಲಿ ಆರ್ಥಿಕ ವರ್ಷ 2024 ಕ್ಕೆ ಶೇ. 8.25ರ ಬಡ್ಡಿ ದರವನ್ನು ಅನುಮೋದಿಸಿದೆ. ಆದರೆ ಔಪಚಾರಿಕ ಅಧಿಸೂಚನೆಯನ್ನು ಹೊರಡಿಸಲು ಹಣಕಾಸು ಸಚಿವಾಲಯವು ಇನ್ನೂ ಕಾಯುತ್ತಿದೆ. ಸಾರ್ವತ್ರಿಕ ಚುನಾವಣೆಗಳಿಂದಾಗಿ ಇದು ವಿಳಂಬವಾಗಿದೆ. ಇದು ಜುಲೈ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ: EPFO Balance Check: ಜುಲೈ ಅಂತ್ಯದಲ್ಲಿ ಪಿಎಫ್ ಖಾತೆಗೆ ಬಡ್ಡಿ ಹಣ ಬರಲಿದೆ; ಪರಿಶೀಲಿಸುವುದು ಹೇಗೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

David Miller : ಸೋಲಿನ ಬೇಸರದಲ್ಲಿ ವಿದಾಯ ಹೇಳಿದರೇ ಮಿಲ್ಲರ್​​; ದಕ್ಷಿಣ ಆಫ್ರಿಕಾ ಆಟಗಾರನ ಪ್ರತಿಕ್ರಿಯೆ ಏನು?

David Miller : ಮೊದಲ ಬಾರಿಗೆ ವಿಶ್ವಕಪ್ ಗೆಲ್ಲುವ ಭರವಸೆ ಭಗ್ನಗೊಂಡಿತ್ತು. ದಕ್ಷಿಣ ಆಫ್ರಿಕಾ ಫೈನಲ್​​ನಲ್ಲಿ ಭಾರತದ ವಿರುದ್ಧ 7 ರನ್​ಗಳ ಸೋಲು ಅನುಭವಿಸಿತ್ತು. ಪಂದ್ಯದ ಅಂತಿಮ ಕ್ಷಣಗಳಲ್ಲಿ ದಕ್ಷಿಣ ಆಫ್ರಿಕಾ ಕೈಚೆಲ್ಲಿತ್ತು. ಅದರಲ್ಲೂ ಡೇವಿಡ್ ಮಿಲ್ಲರ್​​ ಕೊನೇ ಓವರ್​​ನ ಮೊದಲ ಎಸೆತಕ್ಕೆ ಔಟಾಗಿದ್ದರು. ಇದು ಅವರಿಗೆ ಬೇಸರ ಮೂಡಿಸಿತ್ತು.

VISTARANEWS.COM


on

David Miller :
Koo

ಬೆಂಗಳೂರು: ಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ಟಿ 20 ವಿಶ್ವಕಪ್ 2024 ರ ಫೈನಲ್​​ನಲ್ಲಿ ಆಘಾತಕಾರಿ ಸೋಲಿನ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ ಡೇವಿಡ್ ಮಿಲ್ಲರ್ ಟಿ 20ಯಿಂದ ನಿವೃತ್ತರಾಗುವ ವದಂತಿಗಳು ಬಂದಿದ್ದವು. ಅದಕ್ಕವರು ಪ್ರತಿಕ್ರಿಯೆ ನೀಡಿದ್ದಾರೆ.

ಮೊದಲ ಬಾರಿಗೆ ವಿಶ್ವಕಪ್ ಗೆಲ್ಲುವ ಭರವಸೆ ಭಗ್ನಗೊಂಡಿತ್ತು. ದಕ್ಷಿಣ ಆಫ್ರಿಕಾ ಫೈನಲ್​​ನಲ್ಲಿ ಭಾರತದ ವಿರುದ್ಧ 7 ರನ್​ಗಳ ಸೋಲು ಅನುಭವಿಸಿತ್ತು. ಪಂದ್ಯದ ಅಂತಿಮ ಕ್ಷಣಗಳಲ್ಲಿ ದಕ್ಷಿಣ ಆಫ್ರಿಕಾ ಕೈಚೆಲ್ಲಿತ್ತು. ಅದರಲ್ಲೂ ಡೇವಿಡ್ ಮಿಲ್ಲರ್​​ ಕೊನೇ ಓವರ್​​ನ ಮೊದಲ ಎಸೆತಕ್ಕೆ ಔಟಾಗಿದ್ದರು. ಇದು ಅವರಿಗೆ ಬೇಸರ ಮೂಡಿಸಿತ್ತು.

15ನೇ ಓವರ್​ನಲ್ಲಿ ಅಕ್ಷರ್ ಪಟೇಲ್ ಓವರ್​ಗೆ ಎರಡು ಸಿಕ್ಸರ್ ಹಾಗೂ ನಾಲ್ಕು ಬೌಂಡರಿ ಬಾರಿಸುವ ಮೂಲಕ ಹೆನ್ರಿಚ್​ ಕ್ಲಾಸೆನ್​ ದಕ್ಷಿಣ ಆಫ್ರಿಕಾ ತಂಡಕ್ಕೆ ಗೆಲುವಿನ ಅವಕಾಶ ತಂದುಕೊಟ್ಟಿದ್ದರು. 16ನೇ ಓವರ್ ಮುಗಿದಾಗ ದಕ್ಷಿಣ ಆಫ್ರಿಕಾಕ್ಕೆ ಅಂತಿಮ ನಾಲ್ಕು ಓವರ್​ಗಳಲ್ಲಿ ಕೇವಲ 26 ರನ್​ಗಳನ್ನು ಬಾರಿಸಬೇಕಿತ್ತು.

ಇದನ್ನೂ ಓದಿ: IPL 2025 : ಐಪಿಎಲ್​ ತಂಡಗಳಲ್ಲಿ ಉಳಿಸಿಕೊಳ್ಳುವ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ

ಕ್ಲಾಸೆನ್ 17 ನೇ ಓವರ್​ನ ಮೊದಲ ಎಸೆತದಲ್ಲೇ ಔಟಾದರು. ಈ ವೇಳೆ ತಂಡವನ್ನು ಗುರಿ ಮುಟ್ಟಿಸುವ ಕೆಲಸ ಡೇವಿಡ್ ಮಿಲ್ಲರ್ ಅವರ ಹೆಗಲ ಮೇಲಿತ್ತು. ಅಂತಿಮವಾಗಿ ಅಂತಿಮ ಓವರ್​ನಲ್ಲಿ ಹಾರ್ದಿಕ್ ಪಾಂಡ್ಯ ಅವರನ್ನು ಎದುರಿಸಿದ ಅನುಭವಿ ಬ್ಯಾಟರ್​​ 16 ರನ್​​ಗಳಿಗೆ ಔಟಾದರು. 20ನೇ ಓವರ್​ನ ಮೊದಲ ಎಸೆತದಲ್ಲಿ ಡೇವಿಡ್ ಮಿಲ್ಲರ್ ಪಾಂಡ್ಯ ಅವರ ಲೋ ಫುಲ್ ಟಾಸ್ ಅನ್ನು ನೇರವಾಗಿ ಹೊಡೆದರು. ಸೂರ್ಯಕುಮಾರ್ ಯಾದವ್ ರೋಚಕ ಕ್ಯಾಚ್ ಅನ್ನು ಹಿಡಿದು ಮಿಲ್ಲರ್ ಅವರನ್ನು ಹಿಂದಕ್ಕೆ ಕಳುಹಿಸಿದರು. ಭಾರತವು ಪಂದ್ಯವನ್ನು 7 ರನ್​ಗಳಿಂದ ಗೆದ್ದಿತು. ಒಂದು ಹಂತದಲ್ಲಿ ಗೆಲುವು ದಕ್ಷಿಣ ಆಫ್ರಿಕಾಗೆ ಎಂದು ತೋರುತ್ತಿತ್ತು. ಅಂತಿಮವಾಗಿ ಭಾರತದ ಪರವಾಯಿತು.

ನಿವೃತ್ತಿ ವದಂತಿಗಳ ಬಗ್ಗೆ ಡೇವಿಡ್ ಮಿಲ್ಲರ್ ಹೇಳಿಕೆಯೇನು?

ದಕ್ಷಿಣ ಆಫ್ರಿಕಾ ಸೋಲಿನ ಬಳಿಕ ಡೇವಿಡ್ ಮಿಲ್ಲರ್ ಟಿ20 ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ ಎಂಬ ವದಂತಿಗಳು ಹರಿದಾಡಿದವು. 35 ವರ್ಷದ ಆಟಗಾರ ಕ್ರಿಕೆಟ್​​ನ ಕಿರು ಸ್ವರೂಪದಿಂದ ನಿವೃತ್ತರಾಗಿದ್ದಾರೆ ಎಂದು ವದಂತಿಗಳು ತಿಳಿಸಿವೆ. ಆದಾಗ್ಯೂ, ಡೇವಿಡ್ ಮಿಲ್ಲರ್ ಮಂಗಳವಾರ (ಜುಲೈ 2) ಆ ವದಂತಿಗಳನ್ನು ತಳ್ಳಿಹಾಕಿದರು ಮತ್ತು ತಮ್ಮ ರಾಷ್ಟ್ರೀಯ ತಂಡಕ್ಕಾಗಿ ಟಿ 20 ಪಂದ್ಯಗಳನ್ನು ಆಡಲು ಲಭ್ಯವಿರುವುದಾಗಿ ಹೇಳಿದರು.

ಕೆಲವು ವರದಿಗಳ ಹಿನ್ನೆಲೆಯಲ್ಲಿ ಹೇಳುತ್ತಿದ್ದೇನೆ. ನಾನು ಟಿ 20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದಿಲ್ಲ. ನಾನು ದಕ್ಷಿಣ ಆಫ್ರಿಕಾ ಪರ ಆಡಲು ಲಭ್ಯವಿದ್ದೇನೆ. ಅತ್ಯುತ್ತಮ ಫಲಿತಾಂಶ ಇನ್ನೂ ಬರಬೇಕಿದೆ ಎಂದು ಡೇವಿಡ್ ಮಿಲ್ಲರ್ ಹೇಳಿದ್ದಾರೆ.

Continue Reading

ದೇಶ

Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

Sudha Murty: ಭಾರತದಲ್ಲಿ ಪ್ರವಾಸೋದ್ಯಮಕ್ಕೆ‌ ಇನ್ನಷ್ಟು ಆದ್ಯತೆ ನೀಡಬೇಕು. ದೇಶದಲ್ಲಿ ಅಜಂತಾ, ಎಲ್ಲೋರ, ಬೃಹದೀಶ್ವರ, ತಾಜ್‌ಮಹಲ್‌ ನೋಡಬೇಕು ಎಂಬ ಮಾತಿದೆ. ಆದರೆ, ಭಾರತದಲ್ಲಿ 42 ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿವೆ. ಇನ್ನೂ 57 ತಾಣಗಳು ಪೆಂಡಿಂಗ್‌ ಲಿಸ್ಟ್‌ನಲ್ಲಿವೆ. ಇವುಗಳ ಕುರಿತು ಹೆಚ್ಚಿನ ಆದ್ಯತೆ ನೀಡಬೇಕು ಎಂದು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದರು.

VISTARANEWS.COM


on

Sudha Murty
Koo

ನವದೆಹಲಿ: ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಇನ್ಫೋಸಿಸ್‌ ಪ್ರತಿಷ್ಠಾನದ ಸಂಸ್ಥಾಪಕಿ ಸುಧಾ ಮೂರ್ತಿ (Sudha Murty) ಅವರು ಇದೇ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಭಾಷಣ ಮಾಡಿದರು. “ನಾನು ರಾಜಕಾರಣಿ ಅಲ್ಲ. ನನಗೆ ಹೆಚ್ಚು ಮಾತನಾಡಲು ಬರುವುದಿಲ್ಲ” ಎನ್ನುತ್ತಲೇ ಭಾಷಣ ಆರಂಭಿಸಿದ ಅವರು ಗರ್ಭಕಂಠ ಕ್ಯಾನ್ಸರ್‌ಗೆ (Cervical Cancer) ಲಸಿಕೆ ಹಾಗೂ ಕರ್ನಾಟಕ (Karnataka) ಸೇರಿ ದೇಶದ ಪ್ರವಾಸೋದ್ಯಮದ ಏಳಿಗೆಯ ಕುರಿತು ಸದನದ ಗಮನಕ್ಕೆ ತಂದರು. ಕರ್ನಾಟಕ ಪ್ರವಾಸೋದ್ಯಮದ ಕುರಿತೂ ಅವರು ಹೆಚ್ಚು ಗಮನ ಸೆಳೆದರು.

“ಗರ್ಭಕಂಠದ ಕ್ಯಾನ್ಸರ್‌ ಈಗ ಮಾರಣಾಂತಿಕವಾಗಿದೆ. ಒಬ್ಬ ತಾಯಿ ಮೃತಪಟ್ಟರೆ ಮಕ್ಕಳು ಅನಾಥರಾಗುತ್ತಾರೆ. ಒಬ್ಬ ವ್ಯಕ್ತಿಗೆ ಹೆಂಡತಿ ತೀರಿಕೊಂಡರೆ ಮತ್ತೊಬ್ಬ ಪತ್ನಿ ಸಿಗುತ್ತಾಳೆ. ಆದರೆ, ಮಕ್ಕಳಿಗೆ ತಾಯಿ ತೀರಿಕೊಂಡರೆ, ಜೀವನಪೂರ್ತಿ ಅವರು ಅನಾಥರಾಗುತ್ತಾರೆ. ಹಾಗಾಗಿ, ಗರ್ಭಕಂಠದ ಕ್ಯಾನ್ಸರ್‌ಗೆ ಲಸಿಕೆ ನೀಡುವ ವ್ಯವಸ್ಥೆ ಮಾಡಬೇಕು. ಈಗ ಲಸಿಕೆಗೆ 1,300-1,400 ರೂ. ಆಗುತ್ತದೆ. ಸರ್ಕಾರ ಮಧ್ಯಪ್ರವೇಶಿಸಿದರೆ ಅದನ್ನು 800 ರೂಪಾಯಿಗೆ ಹೆಣ್ಣುಮಕ್ಕಳಿಗೆ ಲಸಿಕೆ ಕೊಡಿಸಬಹುದು” ಎಂದರು. ಆಗ ಸಭಾಧ್ಯಕ್ಷರು, “ಈ ಕುರಿತು ಕೇಂದ್ರ ಆರೋಗ್ಯ ಸಚಿವರಾದ ಜೆ.ಪಿ ನಡ್ಡಾ ಅವರ ಗಮನಕ್ಕೆ ತನ್ನಿ” ಎಂದರು.

ಪ್ರವಾಸೋದ್ಯಮದ ಕುರಿತು ಹೇಳಿದ್ದಿಷ್ಟು…

“ಭಾರತದಲ್ಲಿ ಪ್ರವಾಸೋದ್ಯಮಕ್ಕೆ‌ ಇನ್ನಷ್ಟು ಆದ್ಯತೆ ನೀಡಬೇಕು. ದೇಶದಲ್ಲಿ ಅಜಂತಾ, ಎಲ್ಲೋರ, ಬೃಹದೀಶ್ವರ, ತಾಜ್‌ಮಹಲ್‌ ನೋಡಬೇಕು ಎಂಬ ಮಾತಿದೆ. ಆದರೆ, ಭಾರತದಲ್ಲಿ 42 ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿವೆ. ಇನ್ನೂ 57 ತಾಣಗಳು ಪೆಂಡಿಂಗ್‌ ಲಿಸ್ಟ್‌ನಲ್ಲಿವೆ. ಇವುಗಳ ಕುರಿತು ಹೆಚ್ಚಿನ ಆದ್ಯತೆ ನೀಡಬೇಕು. ಕರ್ನಾಟಕದ ಶ್ರವಣಬೆಳಗೋಳದಲ್ಲಿರುವ ಬಾಹುಬಲಿಯ ಮೂರ್ತಿ, ಮಧ್ಯಪ್ರದೇಶದ ಮಾಂಡು, ದೇಶದ ಗುಹೆಗಳು, ಬಾದಾಮಿ, ಐಹೊಳೆ, ಲಿಂಗರಾಜ ದೇವಾಲಯಗಳು ದೇಶದ ಸಂಸ್ಕೃತಿಯ ತಾಣಗಳಾಗಿವೆ. ಇವುಗಳನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಬೇಕು” ಎಂದರು.

“ತ್ರಿಪುರದಲ್ಲಿರುವ ಉನಾಕೋಟಿ, ಮಿಜೋರಾಂನಲ್ಲಿ ನೈಸರ್ಗಿಕ ಸೇತುವೆಗಳಿವೆ. ಇವುಗಳನ್ನು ನೋಡಲು ವಿದೇಶಕ್ಕೆ ಹೋಗುವವರಿದ್ದಾರೆ. ತಂಜಾವೂರಿನ ಬೃಹದೇಶ್ವರ ದೇವಾಲಯ, ಶ್ರೀರಂಗಂ, ಕಾಶ್ಮೀರದಲ್ಲಿರುವ ಮೊಘಲ್‌ ಗಾರ್ಡನ್‌ಗಳು ಜಗತ್ತಿನ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಇಲ್ಲ. ಇವುಗಳನ್ನು ಪಟ್ಟಿಗೆ ಸೇರಿಸುವುದರಿಂದ ಆ ಸ್ಥಳಗಳಿಗೆ ಜನರನ್ನು ಸೆಳೆಯಲು ಪ್ಯಾಕೇಜ್‌ಗಳನ್ನು ಘೋಷಿಸಲಾಗುತ್ತದೆ. ಇದರಿಂದ ಪ್ರವಾಸೋದ್ಯಮದ ಆದಾಯ ಹೆಚ್ಚಾಗುತ್ತದೆ. ಹತ್ತಾರು ಅವಕಾಶಗಳು ಸೃಷ್ಟಿಯಾಗುತವೆ” ಎಂದು ಹೇಳಿದರು.

ಇದನ್ನೂ ಓದಿ: Narendra Modi: ನನ್ನ ದನಿಯೂ ಗಟ್ಟಿಯಿದೆ, ಸಂಕಲ್ಪವೂ; ಈ ಮೋದಿ ಯಾರಿಗೂ ಹೆದರಲ್ಲ, ಬಗ್ಗಲ್ಲ: ಸಂಸತ್‌ನಲ್ಲಿ ಪ್ರಧಾನಿ ಅಬ್ಬರ

Continue Reading

ಪ್ರಮುಖ ಸುದ್ದಿ

Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Mahua Moitra: “ಸ್ಪೀಕರ್‌ ಸರ್‌, ನೀವು ಚುನಾವಣೆ ಪ್ರಚಾರ ಮಾಡುವಾಗ ನೀವು ಎರಡು ಬಾರಿ ನನ್ನ ಕ್ಷೇತ್ರಕ್ಕೆ ಬಂದಿದ್ರಿ. ನನ್ನ ಮಾತು ಕೇಳಿಸಿಕೊಳ್ಳಿ” ಎಂದು ಮಹುವಾ ಮೊಯಿತ್ರಾ ಮಾತನಾಡುತ್ತಿದ್ದರು. ಇದೇ ವೇಳೆ ರಾಹುಲ್‌ ಗಾಂಧಿ ಅವರು ಮಾತನಾಡಲು ಎದ್ದು ನಿಂತರು. ಆಗ, ಮೊಹಿತ್ರಾ ಅವರು, “ರಾಹುಲ್‌, ಕುಳಿತುಕೊಳ್ಳಿ” ಎಂದು ಸೂಚಿಸಿದರು. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Mahua Moitra
Koo

ನವದೆಹಲಿ: ಸಂಸತ್‌ನ ವಿಶೇಷ ಅಧಿವೇಶನದಲ್ಲಿ (Parliament Session 2024) ಪ್ರತಿಪಕ್ಷಗಳು ನೀಟ್‌ ಅಕ್ರಮ, ಮಣಿಪುರ ಹಿಂಸಾಚಾರ ಸೇರಿ ಹಲವು ವಿಷಯಗಳ ಕುರಿತು ಚರ್ಚೆ, ಗಲಾಟೆ, ವಾಗ್ವಾದ, ಆರೋಪ ಮಾಡಿವೆ. ಯಾವುದೇ ಆಡಳಿತ ಪಕ್ಷದ ವಿರುದ್ಧ ಪ್ರತಿಪಕ್ಷವು ಆರೋಪ, ಗಲಾಟೆ, ಪ್ರತಿಭಟನೆ ಮಾಡುವುದು ಸಹಜ. ಇನ್ನು ಸೋಮವಾರ (ಜುಲೈ 1) ಸಂಸತ್‌ನಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರು ಮಾತನಾಡುವಾಗ, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರಿಗೇ ಕುಳಿತುಕೊಳ್ಳಿ ಎಂಬುದಾಗಿ ಸೂಚಿಸಿದ್ದಾರೆ.

“ಸ್ಪೀಕರ್‌ ಸರ್‌, ನೀವು ಚುನಾವಣೆ ಪ್ರಚಾರ ಮಾಡುವಾಗ ನೀವು ಎರಡು ಬಾರಿ ನನ್ನ ಕ್ಷೇತ್ರಕ್ಕೆ ಬಂದಿದ್ರಿ. ನನ್ನ ಮಾತು ಕೇಳಿಸಿಕೊಳ್ಳಿ” ಎಂದು ಮಹುವಾ ಮೊಯಿತ್ರಾ ಮಾತನಾಡುತ್ತಿದ್ದರು. ಇದೇ ವೇಳೆ ರಾಹುಲ್‌ ಗಾಂಧಿ ಅವರು ಮಾತನಾಡಲು ಎದ್ದು ನಿಂತರು. ಆಗ, ಮೊಹಿತ್ರಾ ಅವರು, “ರಾಹುಲ್‌, ಕುಳಿತುಕೊಳ್ಳಿ” ಎಂದು ಸೂಚಿಸಿದರು. ಆಗ ಆಡಳಿತ ಪಕ್ಷದ ಸದಸ್ಯರು ಗೇಲಿ ಮಾಡಿದರು. ಇದಕ್ಕೆ ಪ್ರತ್ಯುತ್ತರ ನೀಡಿದ ಮಹುವಾ ಮೊಯಿತ್ರಾ, “ಅವರು ನಮ್ಮ ಪ್ರತಿಪಕ್ಷ ನಾಯಕರಾಗಿದ್ದಾರೆ. ಅವರು ಅರ್ಥ ಮಾಡಿಕೊಳ್ಳುತ್ತಾರೆ” ಎಂದು ತಿರುಗೇಟು ನೀಡಿದರು.

ಇದೇ ವೇಳೆ ಆಡಳಿತ ಪಕ್ಷದ ವಿರುದ್ಧ ಟಿಎಂಸಿ ಸಂಸದೆ ಹರಿಹಾಯ್ದರು. “ಸಂಸತ್‌ನಲ್ಲಿ ನಾನು ಪ್ರಶ್ನೆ ಕೇಳಲು, ಮಾತನಾಡಲು ಬಿಡಲಿಲ್ಲ. ನಾನು ಸಂಸತ್‌ನಲ್ಲಿ ಮಾತನಾಡಲು ಎದ್ದು ನಿಂತಾಗ, ನನ್ನ ಧ್ವನಿಯನ್ನು ಹುದುಗಿಸಲಾಯಿತು. ಆದರೆ, ಚುನಾವಣೆ ವೇಳೆ ಏನಾಯಿತು? ಆಡಳಿತ ಪಕ್ಷದ ಸದಸ್ಯ ಬಲವು 303ರಿಂದ 240ಕ್ಕೆ ಇಳಿಸಲಾಯಿತು. ಟಿಎಂಸಿ ಸಂಸದೆಯಾದ ನನ್ನನ್ನು ಕುಳಿತುಕೊಳ್ಳುವಂತೆ ಮಾಡಿದರು. ಆದರೆ, ಬಿಜೆಪಿಯ 63 ಸಂಸದರನ್ನು ಮನೆಯಲ್ಲಿಯೇ ಕುಳಿತುಕೊಳ್ಳುವಂತೆ ದೇಶದ ಜನ ಮಾಡಿದರು” ಎಂಬುದಾಗಿ ಹೇಳಿದರು.

ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ

ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಮಾತನಾಡಿದ ಮೋದಿ, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು “ನಾನು ಕಾಂಗ್ರೆಸ್‌ನವರಿಗೆ ಜಾಣತನ ಕೊಡಲಿ ಎಂಬುದಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ. ಬಾಲಬುದ್ಧಿಯ ನಾಯಕನಿಗೂ ಬುದ್ಧಿ ಕೊಡಲಿ. ರಾಷ್ಟ್ರಪತಿಯವರ ಭಾಷಣಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ಹಾಗೆಯೇ, ಇಷ್ಟು ಹೊತ್ತು ನನಗೆ ಅವಕಾಶ ಮಾಡಿಕೊಟ್ಟಿದ್ದಕ್ಕಾಗಿಯೂ ಧನ್ಯವಾದ ತಿಳಿಸುತ್ತೇನೆ. ಯಾರು ಎಷ್ಟೇ ಗಲಾಟೆ ಮಾಡಿದರೂ ನನ್ನ ಧ್ವನಿಯನ್ನು, ಸತ್ಯದ ಧ್ವನಿಯನ್ನು ಅಡಗಿಸಲು ಆಗುವುದಿಲ್ಲ. ನಾನು ಇದುವರೆಗೆ ಸತ್ಯದ ಅನುಭವವನ್ನು ಅನುಭವಿಸಿದ್ದೇನೆ” ಎಂದು ಹೇಳಿದರು.

ಇದನ್ನೂ ಓದಿ: Narendra Modi: ನೀಟ್‌ ಅಕ್ರಮ ಕುರಿತು ಸಂಸತ್‌ನಲ್ಲಿ ಮೋದಿ ಪ್ರಸ್ತಾಪ; ವಿದ್ಯಾರ್ಥಿಗಳಿಗೆ ಅವರು ಹೇಳಿದ್ದಿಷ್ಟು

Continue Reading

Latest

Viral Video: ಲೈವ್‌ ವರದಿ ಮಾಡುತ್ತಿದ್ದಾಗ ಪಾಕ್ ಟಿವಿ ವರದಿಗಾರ್ತಿ ಮೇಲೆ ಗೂಳಿ ದಾಳಿ!

Viral Video: ಪಾಕಿಸ್ತಾನದಲ್ಲಿ ಟಿವಿ ವರದಿಗಾರ್ತಿಯೊಬ್ಬಳು ಗೂಳಿ ದಾಳಿಗೆ ಒಳಗಾದ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ವರದಿಗಾರ್ತಿ ಗೂಳಿ ಮಾಲೀಕರ ಬಳಿ ಅವುಗಳ ದರಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಳು. ಆಗ ಹಿಂದಿನಿಂದ ಬಂದ ಗೂಳಿಯೊಂದು ಆಕೆಯನ್ನು ಗುದ್ದಿದೆ. ಇದರಿಂದ ಆಕೆ ಕಿರುಚುತ್ತಾ ಓಡಿದ್ದಾಳೆ. ಅವಳ ಕೈಯಲ್ಲಿದ್ದ ಮೈಕ್ ಗೂಳಿಯ ಕೊಂಬಿನಲ್ಲಿ ಸಿಲುಕಿಕೊಂಡಿದ್ದು, ನಂತರ ಅದನ್ನು ಒಬ್ಬ ವ್ಯಕ್ತಿಯೊಬ್ಬರು ತೆಗೆದು ಕೊಟ್ಟಿದ್ದಾರೆ!

VISTARANEWS.COM


on

Viral Video
Koo

ಇತ್ತೀಚಿನ ದಿನಗಳಲ್ಲಿ ಗೂಳಿಗಳು, ಹಸುಗಳು ಮುಂತಾದ ಪ್ರಾಣಿಗಳು ಮನುಷ್ಯರ ಮೇಲೆ ಆಕ್ರಮಣ ಮಾಡುವಂತಹ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ. ಈ ಹಿಂದೆ ಭಾರತದಲ್ಲಿ ಎಮ್ಮೆ ಮತ್ತು ಹಸುವಿನ ದಾಳಿಗೆ ಮಹಿಳೆಯರು ಗಾಯಗೊಂಡಿದ್ದರು. ಇದೀಗ ಪಾಕಿಸ್ತಾನದಲ್ಲಿ ಟಿವಿ ವರದಿಗಾರ್ತಿಯೊಬ್ಬಳು ಗೂಳಿ ದಾಳಿಗೆ ಒಳಗಾಗಿದ್ದಾಳೆ. ಅದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

ವಿಡಿಯೊದಲ್ಲಿ ಪಾಕಿಸ್ತಾನದ ಟಿವಿ ವರದಿಗಾರ್ತಿ ಲೈವ್ ಪ್ರಸಾರದ ವೇಳೆ ಗೂಳಿಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಹಾಗಾಗಿ ಅಲ್ಲಿದ್ದ ಗೂಳಿ ಮಾಲೀಕರ ಬಳಿ ಅವುಗಳ ದರಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಳು. ಆಗ ಹಿಂದಿನಿಂದ ಬಂದ ಗೂಳಿಯೊಂದು ಆಕೆಯನ್ನು ಗುದ್ದಿದೆ. ಇದರಿಂದ ಆಕೆ ಕಿರುಚುತ್ತಾ ಓಡಿದ್ದಾಳೆ. ಅವಳ ಕೈಯಲ್ಲಿದ್ದ ಮೈಕ್ ಗೂಳಿಯ ಕೊಂಬಿನಲ್ಲಿ ಸಿಲುಕಿಕೊಂಡಿದ್ದು, ನಂತರ ಅದನ್ನು ಒಬ್ಬ ವ್ಯಕ್ತಿಯೊಬ್ಬರು ತೆಗೆದು ಕೊಟ್ಟಿದ್ದಾರೆ.

ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗಿದ್ದು, ಇದಕ್ಕೆ 2,89,000ಕ್ಕೂ ಹೆಚ್ಚು ವೀವ್ಸ್ ಬಂದಿದೆ. ಈ ವೀಡಿಯೊ ಬಗ್ಗೆ ಹಲವಾರು ಮಂದಿ ಪ್ರತಿಕ್ರಿಯೆ ನೀಡಿದ್ದಾರೆ. ಇದು ಅನಿರೀಕ್ಷಿತ ಘಟನೆಯಾಗಿದ್ದು, ಇಂತಹ ಅಪಾಯಕಾರಿ ಪರಿಸ್ಥಿತಿಯಲ್ಲಿ ವರದಿಗಾರ್ತಿ ಸಂಯಮ ಕಾಪಾಡಿಕೊಂಡಿದ್ದಕ್ಕೆ ನೆಟ್ಟಿಜನ್ ಒಬ್ಬರು ಅಭಿನಂದನೆ ಸಲ್ಲಿಸಿದ್ದಾರೆ. ಆದರೆ ಇನ್ನೊಬ್ಬರು ಇಷ್ಟಾದರೂ ಕ್ಯಾಮೆರಾ ಮ್ಯಾನ್ ಸಹಾಯಕ್ಕೆ ಬರಲಿಲ್ಲವೆಂದು ಆತನ ಬಗ್ಗೆ ಟೀಕೆ ಮಾಡಿದ್ದಾರೆ. ಈ ವಿಡಿಯೊದಲ್ಲಿ ಮಾಹಿತಿ ಸಿಗುತ್ತದೆ ಎಂದು ನೋಡಿದರೆ ಅಲ್ಲಿ ದೊಡ್ಡ ತಿರುವು ಎದುರಾಗಿದೆ ಎಂದು ಇನ್ನೊಬ್ಬ ನೆಟ್ಟಿಜನ್ ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಗಾಯಗೊಂಡು ರಸ್ತೆಯಲ್ಲಿ ಪರದಾಡುತ್ತಿದ್ದ ಜೈನ ಸನ್ಯಾಸಿಗಳಿಗೆ ನೆರವಾದ ಮಹಾರಾಷ್ಟ್ರ ಸಿಎಂ

ಗೂಳಿಗಳ ಆಕ್ರಮಣ ಪ್ರಕರಣ ಇತ್ತೀಚೆಗೆ ಕೆಲವು ಕಡೆ ಕಂಡುಬರುತ್ತಿದೆ. ಈ ಹಿಂದೆ ಏಪ್ರಿಲ್‌ನಲ್ಲಿ ಬೆಂಗಳೂರಿನಲ್ಲಿ ಗೂಳಿಯೊಂದು ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಮಹಾಲಕ್ಷ್ಮಿ ಲೇಔಟ್ ಈಜುಕೊಳ ಜಂಕ್ಷನ್ ಬಳಿ ಈ ಘಟನೆ ನಡೆದಿದೆ. ಪ್ರದರ್ಶನಕ್ಕಾಗಿ ಅಲಂಕರಿಸಿದ್ದ ಗೂಳಿ ಬೈಕ್ ಸವಾರನ ಮೇಲೆ ದಾಳಿ ಮಾಡಿದೆ. ಗೂಳಿಯ ಹೊಡೆತದಿಂದ ವ್ಯಕ್ತಿ ಟ್ರಕ್‌ನ ಚಕ್ರಗಳ ಅಡಿಯಲ್ಲಿ ಬಿದ್ದಿದ್ದರು. ಅದೃಷ್ಟವಶಾತ್, ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದರು. ಹಾಗೇ ಈ ಹಿಂದೆ ಜೂನ್ 16ರಂದು ಗುಜರಾತ್ ನ ಮೊದಸಾದಲ್ಲಿ ಬೈಕ್ ನಲ್ಲಿ ಪತಿಯ ಜೊತೆ ಪ್ರಯಾಣಿಸುತ್ತಿದ್ದ ಮಹಿಳೆಯನ್ನು ಬೀಡಾಡಿ ಹಸುವೊಂದು ಬೆನ್ನಟ್ಟಿ ಗುದ್ದಿತ್ತು. ಆಕೆಗೆ ಗಂಭೀರ ಗಾಯಗಳಾಗಿದ್ದವು.

Continue Reading
Advertisement
David Miller :
ಪ್ರಮುಖ ಸುದ್ದಿ2 mins ago

David Miller : ಸೋಲಿನ ಬೇಸರದಲ್ಲಿ ವಿದಾಯ ಹೇಳಿದರೇ ಮಿಲ್ಲರ್​​; ದಕ್ಷಿಣ ಆಫ್ರಿಕಾ ಆಟಗಾರನ ಪ್ರತಿಕ್ರಿಯೆ ಏನು?

Sudha Murty
ದೇಶ29 mins ago

Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

Physical Abuse
ಕರ್ನಾಟಕ1 hour ago

Physical Abuse : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Mahua Moitra
ಪ್ರಮುಖ ಸುದ್ದಿ2 hours ago

Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Viral Video
Latest2 hours ago

Viral Video: ಲೈವ್‌ ವರದಿ ಮಾಡುತ್ತಿದ್ದಾಗ ಪಾಕ್ ಟಿವಿ ವರದಿಗಾರ್ತಿ ಮೇಲೆ ಗೂಳಿ ದಾಳಿ!

Hemant Nimbalkar
ಪ್ರಮುಖ ಸುದ್ದಿ2 hours ago

Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮರು ನೇಮಕ

Kolar News
ಕರ್ನಾಟಕ2 hours ago

Kolar News: ಕಾಲೇಜಿನ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಯುವಕನ ಬಂಧನ

Tamanna Bhatia
Latest2 hours ago

Tamanna Bhatia: ‘ಜೀ ಕರ್ದಾ’ದಲ್ಲಿ ತಮನ್ನಾ ಭಾಟಿಯಾ ಪೂರ್ತಿ ಟಾಪ್‌ಲೆಸ್‌! ವಿಡಿಯೊ ಇದೆ

bengaluru student Vaishnavi M who won the prestigious award from IIT Bombay
ಬೆಂಗಳೂರು2 hours ago

Bengaluru News: ಬೆಂಗಳೂರಿನ ವಿದ್ಯಾರ್ಥಿನಿಗೆ ಐಐಟಿ ಬಾಂಬೆಯ ಪ್ರತಿಷ್ಠಿತ ಪ್ರಶಸ್ತಿ

IPL 2025
ಪ್ರಮುಖ ಸುದ್ದಿ3 hours ago

IPL 2025 : ಐಪಿಎಲ್​ ತಂಡಗಳಲ್ಲಿ ಉಳಿಸಿಕೊಳ್ಳುವ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ5 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌