INDW vs SAW: ವಿಶ್ವ ದಾಖಲೆ ನಿರ್ಮಿಸಿದ ಭಾರತ ಮಹಿಳಾ ತಂಡ - Vistara News

ಕ್ರೀಡೆ

INDW vs SAW: ವಿಶ್ವ ದಾಖಲೆ ನಿರ್ಮಿಸಿದ ಭಾರತ ಮಹಿಳಾ ತಂಡ

INDW vs SAW: 603 ರನ್ ಗಳಿಸುವ ಮೂಲಕ ಮಹಿಳಾ ಟೆಸ್ಟ್​ ಕ್ರಿಕೆಟ್​ನಲ್ಲಿ(highest-team total in Women’s Test) ಅತ್ಯಧಿಕ ರನ್​ ಕಲೆಹಾಕಿದ ವಿಶ್ವ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡಿತು. ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿತ್ತು. ಅಚ್ಚರಿ ಎಂದರೆ ಇದೇ ವರ್ಷ ಪರ್ತ್​ನಲ್ಲಿ ನಡೆದಿದ್ದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 575 ರನ್​ಗಳಿಸಿ ಈ ದಾಖಲೆ ಬರೆದಿತ್ತು.

VISTARANEWS.COM


on

INDW vs SAW
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಪ್ರವಾಸಿ ದಕ್ಷಿಣ ಆಫ್ರಿಕಾ(INDW vs SAW) ವಿರುದ್ಧ ಸಾಗುತ್ತಿರುವ ಏಕೈಕ ಟೆಸ್ಟ್​ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಸಂಘಟಿತ ಬ್ಯಾಟಿಂಗ್​ ಪ್ರದರ್ಶನ ತೋರುವ ಮೂಲಕ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದೆ. ಮೊದಲ ದಿನದಾಟದ ಅಂತ್ಯಕ್ಕೆ ನಾಲ್ಕು ವಿಕೆಟ್ ನಷ್ಟಕ್ಕೆ 525 ರನ್ ಗಳಿಸಿದ್ದ ಭಾರತ ದ್ವಿತೀಯ ದಿನದಾಟದಲ್ಲಿ 78 ರನ್​ ಕಲೆ ಹಾಕಿ ಒಟ್ಟು 6 ವಿಕೆಟ್​ಗೆ 603 ರನ್​ ಬಾರಿಸಿ ಡಿಕ್ಲೇರ್​ ಘೋಷಿಸಿದೆ.

603 ರನ್ ಗಳಿಸುವ ಮೂಲಕ ಮಹಿಳಾ ಟೆಸ್ಟ್​ ಕ್ರಿಕೆಟ್​ನಲ್ಲಿ(highest-team total in Women’s Test) ಅತ್ಯಧಿಕ ರನ್​ ಕಲೆಹಾಕಿದ ವಿಶ್ವ ದಾಖಲೆಯನ್ನು ನಿರ್ಮಿಸಿದೆ. ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿತ್ತು. ಅಚ್ಚರಿ ಎಂದರೆ ಇದೇ ವರ್ಷ ಪರ್ತ್​ನಲ್ಲಿ ನಡೆದಿದ್ದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 575 ರನ್​ಗಳಿಸಿ ಈ ದಾಖಲೆ ಬರೆದಿತ್ತು. ಆದರೆ ಕೆಲವೇ ತಿಂಗಳ ಅಂತರದಲ್ಲಿ ಈ ದಾಖಲೆ ಪತನಗೊಂಡಿದೆ.

ಸದ್ಯ ಈ ಟೆಸ್ಟ್ ಪಂದ್ಯದಲ್ಲಿ ಭಾರತ ಬಿಗಿ ಹಿಡಿತ ಸಾಧಿಸಿದೆ. ಮೊದಲ ದಿನದಾಟಕ್ಕೆ ಅಜೇಯರಾಗಿದ್ದ ನಾಯಕಿ ಹರ್ಮನ್ ಮತ್ತು ವಿಕೆಟ್ ಕೀಪರ್ ರಿಚಾ ಘೋಷ್ ಇಂದು ಆರಂಭಗೊಂಡ ದ್ವಿತೀಯ ದಿನದಾಟದಲ್ಲಿ ಅರ್ಧಶತಕ ಬಾರಿಸಿ ಗಮನಸೆಳೆದರು. ಹರ್ಮನ್​ಪ್ರೀತ್​ 69 ರನ್ ಗಳಿಸಿದರೆ, ರಿಚಾ 86 ರನ್ ವಿಕೆಟ್​ ಒಪ್ಪಿಸಿದರು. ರಿಚಾ ಔಟಾಗುತ್ತಿದ್ದಂತೆ ಭಾರತ ತಂಡವು ಡಿಕ್ಲೇರ್ ಘೋಷಿಸಿತು. ಸದ್ಯ ಚೇಸಿಂಗ್​ ನಡೆಸುತ್ತಿರುವ ದಕ್ಷಿಣ ಆಫ್ರಿಕಾ 1 ವಿಕೆಟ್ ಕಳೆದುಕೊಂಡು 50ರ ಗಡಿ ದಾಟಿದೆ. ​

ಇದನ್ನೂ ಓದಿ IND vs SA Final: ವಿಶ್ವಕಪ್​ ಗೆಲ್ಲಲು ಕೊಹ್ಲಿ, ರೋಹಿತ್​, ದ್ರಾವಿಡ್​ಗೆ ಇದು ಕೊನೆಯ ಅವಕಾಶ!

ಮೊದಲ ದಿನದಾಟದಲ್ಲಿ ಸೊಗಸಾದ ಬ್ಯಾಟಿಂಗ್​ ನಡೆಸಿದ ಆರಂಭಿಕ ಆಟಗಾರ್ತಿಯರಾದ ಸ್ಮೃತಿ ಮಂಧಾನ ಶತಕ ಸಂಭ್ರಮಿಸಿದರೆ, ಇವರ ಜತೆಗಾರ್ತಿ ಶಫಾಲಿ ವರ್ಷ ಬಿರುಸಿನ ಬ್ಯಾಟಿಂಗ್​ ಮೂಲಕ ದ್ವಿಶತಕ ಬಾರಿಸಿ ಮಿಂಚಿದರು. ದಕ್ಷಿಣ ಆಫ್ರಿಕಾ ಬೌಲರ್​ಗಳನ್ನು ಬೆಂಡೆತ್ತಿದ ಇವರಿಬ್ಬರು ಮೊದಲ ವಿಕೆಟ್​ಗೆ ದಾಖಲೆಯ 292 ರನ್ ಜೊತೆಯಾಟವಾಡಿದರು. ಮಂಧಾನ 149 ರನ್ ಗಳಿಸಿದರೆ, ಶಫಾಲಿ 197 ಎಸೆತಗಳಲ್ಲಿ 205 ರನ್ ಮಾಡಿದರು. ಈ ಇನ್ನಿಂಗ್ಸ್ ನಲ್ಲಿ ಅವರು 23 ಬೌಂಡರಿ ಮತ್ತು 8 ಸಿಕ್ಸರ್ ಚಚ್ಚಿದರು. ಈ ವಿಕೆಟ್​ ಪತನದ ಬಳಿಕ ಆಡಲಿಳಿದ ಮಧ್ಯಮ ಕ್ರಮಾಂಕದ ನಂಬಿಕಸ್ತ ಆಟಗಾರ್ತಿ ಜೆಮಿಮಾ ರೋಡ್ರಿಗಸ್ 55 ರನ್ ಬಾರಿಸಿದರು.

ಮೊದಲು ವಿಕೆಟ್ 292 ರನ್ ಜೊತೆಯಾಟವಾಡಿದ ಮಂಧನಾ ಮತ್ತು ಶಫಾಲಿ ಹೊಸ ವಿಶ್ವದಾಖಲೆ ಬರೆದರು. 2004 ರಲ್ಲಿ ಕರಾಚಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪಾಕಿಸ್ತಾನದ ಸಜ್ಜಿದಾ ಶಾ ಮತ್ತು ಕಿರಣ್ ಬಲೂಚ್ ಅವರ 241 ರನ್ ಆರಂಭಿಕ ವಿಕೆಟ್ ಜೊತೆಯಾಟದ ದಾಖಲೆಯನ್ನು ಶಫಾಲಿ ಮತ್ತು ಸ್ಮೃತಿ ಹಿಂದಿಕ್ಕಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Hardik Pandya: ಆಲ್​ರೌಂಡರ್​ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ ಹಾರ್ದಿಕ್​ ಪಾಂಡ್ಯ

Hardik Pandya: ಬ್ಯಾಟಿಂಗ್​ ಶ್ರೇಯಾಂಕದಲ್ಲಿ ಯಾವುದೇ ಮಹತ್ವದ ಬದಲಾವಣೆ ಸಂಭವಿಸಿಲ್ಲ. ಈ ಹಿಂದೆ ಇದ್ದಂತೆ ಆಸ್ಟ್ರೇಲಿಯಾದ ಟ್ರಾವಿಸ್​ ಹೆಡ್​ ಅಗ್ರಸ್ಥಾನ, ಸೂರ್ಯಕುಮಾರ್ ಯಾದವ್​ ದ್ವಿತೀಯ ಸ್ಥಾನದಲ್ಲೇ ಮುಂದುವರಿದಿದ್ದಾರೆ.

VISTARANEWS.COM


on

Hardik Pandya
Koo

ದುಬೈ: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್​ ಮತ್ತು ಬೌಲಿಂಗ್​ ಪ್ರದರ್ಶನ ತೋರುವ ಮೂಲಕ ಭಾರತ ತಂಡ ವಿಶ್ವಕಪ್​ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಹಾರ್ದಿಕ್​ ಪಾಂಡ್ಯ(222 ರೇಟಿಂಗ್​ ಅಂಕ) ಅವರು ನೂತನ ಐಸಿಸಿ ಟಿ20 ಆಲ್​ರೌಂಡರ್​ ಶ್ರೇಯಾಂಕದಲ್ಲಿ(T20I all-rounder) ಅಗ್ರಸ್ಥಾನಕ್ಕೇರಿದ್ದಾರೆ.

ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಪಾಂಡ್ಯ(Hardik Pandya) ಒಟ್ಟು 144 ರನ್​ ಮತ್ತು 11 ವಿಕೆಟ್​ ಕಿತ್ತ ಸಾಧನೆ ಮಾಡಿದ್ದರು. ಅದರಲ್ಲೂ ಫೈನಲ್​ನಲ್ಲಿ ಸೋಲಿನ ಭೀತಿಯಲ್ಲಿದ್ದ ಭಾರತಕ್ಕೆ ಅಪಾಯಕಾರಿ ಕ್ಲಾಸೆನ್​ ಮತ್ತು ಮಿಲ್ಲರ್​ ವಿಕೆಟ್​ ಭೇಟೆಯಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಎಲ್ಲ ಪ್ರದರ್ಶನದ ಫಲವಾಗಿ ಅವರು ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಜಂಟಿ ಅಗ್ರಸ್ಥಾನ ಪಡೆದರು. ಲಂಕಾದ ವನಿಂದು ಹಸರಂಗ ಕೂಡ 222 ರೇಟಿಂಗ್​ ಅಂಕದೊಂದಿಗೆ ಅಗ್ರಸ್ಥಾನ ಪಡೆದರು.

ಬ್ಯಾಟಿಂಗ್​ ಶ್ರೇಯಾಂಕದಲ್ಲಿ ಯಾವುದೇ ಮಹತ್ವದ ಬದಲಾವಣೆ ಸಂಭವಿಸಿಲ್ಲ. ಈ ಹಿಂದೆ ಇದ್ದಂತೆ ಆಸ್ಟ್ರೇಲಿಯಾದ ಟ್ರಾವಿಸ್​ ಹೆಡ್​ ಅಗ್ರಸ್ಥಾನ, ಸೂರ್ಯಕುಮಾರ್ ಯಾದವ್​ ದ್ವಿತೀಯ ಸ್ಥಾನದಲ್ಲೇ ಮುಂದುವರಿದಿದ್ದಾರೆ. ಆದರೆ ಬೌಲಿಂಗ್​ ಶ್ರೇಯಾಂಕದಲ್ಲಿ ದಕ್ಷಿಣ ಆಫ್ರಿಕಾದ ಅನ್ರಿಚ್​ ನೋರ್ಜೆ ಬರೋಬ್ಬರಿ 7 ಸ್ಥಾನಗಳ ಪ್ರಗತಿ ಸಾಧಿಸಿ 2ನೇ ಸ್ಥಾನಕ್ಕೇರಿದ್ದಾರೆ. ಇಂಗ್ಲೆಂಡ್​ ಸ್ಪಿನ್ನರ್​ ಆದೀಲ್​ ರಶೀದ್​ ಮೊದಲ ಸ್ಥಾನಿಯಾಗಿದ್ದಾರೆ. ಭಾರತೀಯ ಬೌಲರ್​ಗಳಾದ ಅಕ್ಷರ್​ ಪಟೇಲ್​ 7ನೇ, ಕುಲ್​ದೀಪ್​ ಯಾದವ್​ 8ನೇ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ Hardik Pandya : ಭಾರತಕ್ಕೆ ಆಡುವುದೇ ಕನಸು; ಹಾರ್ದಿಕ್ ಪಾಂಡ್ಯನ ಹಳೆ ವಿಡಿಯೊ ವೈರಲ್​

ಟಾಪ್​-5 ಆಲ್​ರೌಂಡರ್​ಗಳು


1. ಹಾರ್ದಿಕ್​ ಪಾಂಡ್ಯ- 222 ರೇಟಿಂಗ್​ ಅಂಕ

2. ವನಿಂದು ಹಸರಂಗ-222 ರೇಟಿಂಗ್​ ಅಂಕ

3. ಮಾರ್ಕಸ್​ ಸ್ಟೋಯಿನಿಸ್​-211 ರೇಟಿಂಗ್​ ಅಂಕ

4. ಸಿಕಂದರ್​ ರಾಜಾ-210 ರೇಟಿಂಗ್​ ಅಂಕ

5. ಶಕೀಬ್​ ಅಲ್​ ಹಸನ್​-206 ರೇಟಿಂಗ್​ ಅಂಕ


ಟಿ20 ವಿಶ್ವಕಪ್​ ಟೂರ್ನಿ ಆರಂಭಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ(Hardik Pandya) ಅವರು ಪತ್ನಿ, ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರಿಗೆ ವಿಚ್ಛೇದನ ನೀಡಲಿದ್ದಾರೆ, ಜತೆಗೆ ವಿಚ್ಛೇದನ(Hardik Pandya and Natasa Stankovic divorce) ಪ್ರಕ್ರಿಯೆಯ ಭಾಗವಾಗಿ, ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ನತಾಶಾಗೆ ವರ್ಗಾಯಿಸಬೇಕಿದೆ ಎನ್ನಲಾಗಿತ್ತು. ಈ ಎಲ್ಲ ಮಾತುಗಳ ಮಧ್ಯೆಯೂ ಪಾಂಡ್ಯ ದೇಶದ ಕರ್ತವ್ಯಕ್ಕೆ ಹಾಜರಾಗಿ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

Continue Reading

ಕ್ರೀಡೆ

James Anderson: 41ನೇ ವಯಸ್ಸಿನಲ್ಲಿಯೂ 7 ವಿಕೆಟ್​ ಕಿತ್ತ ಜೇಮ್ಸ್ ಆಂಡರ್ಸನ್

James Anderson: 2003ರಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಆ್ಯಂಡರ್ಸನ್‌, ಈವರೆಗೂ 187 ಪಂದ್ಯಗಳಲ್ಲಿ 700 ವಿಕೆಟ್‌ ಗಳಿಸಿದ್ದಾರೆ. ಶ್ರೀಲಂಕಾದ ಮುತ್ತಯ್ಯ ಮುರಳೀಧರನ್‌ ಹಾಗೂ ಆಸ್ಟ್ರೇಲಿಯಾದ ಶೇನ್‌ ವಾರ್ನ್‌ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದವರ ಸ್ಥಾನದಲ್ಲಿ ಆ್ಯಂಡರ್‌ಸನ್‌ ಇದ್ದಾರೆ

VISTARANEWS.COM


on

James Anderson
Koo

ಲಂಡನ್​: ವಿದಾಯದ ಸನಿಹದಲ್ಲಿರುವ ಇಂಗ್ಲೆಂಡ್​ ತಂಡದ ಹಿರಿಯ ವೇಗಿ ಜೇಮ್ಸ್ ಆಂಡರ್ಸನ್(James Anderson) ಅವರು ಪ್ರಸಕ್ತ ಸಾಗುತ್ತಿರುವ ಕೌಂಟಿ ಕ್ರಿಕೆಟ್​ ಟೂರ್ನಿಯಲ್ಲಿ ತಮ್ಮ ಕರಾರುವಾಕ್​ ಬೌಲಿಂಗ್​ ದಾಳಿಯ ಮೂಲಕ 7 ವಿಕೆಟ್​ ಕಿತ್ತು ಮಿಂಚಿದ್ದಾರೆ. 41ನೇ ವಯಸ್ಸಿನಲ್ಲಿಯೂ ಅವರ ಈ ಸಾಧನೆ ಯುವ ಆಟಗಾರರನ್ನು ಕೂಡ ನಾಚಿಸುವಂತೆ ಮಾಡಿದೆ.

ಈಗಾಗಲೇ ಕ್ರಿಕೆಟ್​ಗೆ ವಿದಾಯ ಘೋಷಿಸಿರುವ ಜೇಮ್ಸ್ ಆಂಡರ್ಸನ್, ಇದೇ ಜುಲೈನಲ್ಲಿ ನಡೆಯುವ ವೆಸ್ಟ್​ ಇಂಡೀಸ್​ ವಿರುದ್ಧದ ಟೆಸ್ಟ್​ ಸರಣಿಯ ಮೊದಲನೇ ಪಂದ್ಯ ಆಡುವ ಮೂಲಕ 20 ವರ್ಷಗಳ ತಮ್ಮ ಸುದೀರ್ಘ ಕ್ರಿಕೆಟ್‌ ಬದುಕಿಗೆ ತೆರೆ ಎಳೆಯಲಿದ್ದಾರೆ. ಸಾರ್ವಕಾಲಿಕ ಶ್ರೇಷ್ಠ ಬೌಲರ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ 41 ವರ್ಷದ ಆಂಡರ್ಸನ್, ಇಂಗ್ಲೆಂಡ್‌ ಪರ ಅತಿ ಹೆಚ್ಚು ವಿಕೆಟ್‌ ಪಡೆದುಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 700ಕ್ಕೂ ಅಧಿಕ ವಿಕೆಟ್‌ ಪಡೆದ ಮೂವರು ಬೌಲರ್‌ಗಳ ಪೈಕಿ ಆಂಡರ್ಸನ್ ಕೂಡ ಒಬ್ಬರು. ವೇಗಿಗಳ ಪೈಕಿ ಮೊದಲಿಗ.

3 ತಿಂಗಳ ಹಿಂದೆ ಆ್ಯಂಡರ್ಸನ್​ ಅವರು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ನಿವೃತ್ತಿಯನ್ನು ಘೋಷಿಸಿದ್ದರು. “ಎಲ್ಲರಿಗೂ ನಮಸ್ಕಾರ, ಈ ಬೇಸಿಗೆಯಲ್ಲಿ ಲಾರ್ಡ್ಸ್‌ನಲ್ಲಿ ನಡೆಯುವ ವೆಸ್ಟ್‌ ಇಂಡೀಸ್‌ ವಿರುದ್ಧದ ಮೊದಲ ಟೆಸ್ಟ್ ಪಂದ್ಯ, ನನ್ನ ಕೊನೆಯ ಪಂದ್ಯವಾಗಿರಲಿದೆ. ಬಾಲ್ಯದಿಂದ ಇಷ್ಟಪಟ್ಟಿದ ಆಟವನ್ನು ಆಡಲು, ನನ್ನ ದೇಶವನ್ನು ಪ್ರತಿನಿಧಿಸಿದ 20 ಅದ್ಭುತ ವರ್ಷಗಳಿವು. ಇಂಗ್ಲೆಂಡ್ ತಂಡಕ್ಕಾಗಿ ಆಡುವುದನ್ನು ನಾನು ಮಿಸ್‌ ಮಾಡಿಕೊಳ್ಳುತ್ತೇನೆ’ ಎಂದು ಬರೆದುಕೊಂಡಿದ್ದರು. ಜುಲೈ 10ರಿಂದ ವೆಸ್ಟ್‌ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ.

ಇದನ್ನೂ ಓದಿ James Anderson : ಕೋಚ್ ಒತ್ತಡಕ್ಕೆ ಮಣಿದು ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​

2003ರಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಆ್ಯಂಡರ್ಸನ್‌, ಈವರೆಗೂ 187 ಪಂದ್ಯಗಳಲ್ಲಿ 700 ವಿಕೆಟ್‌ ಗಳಿಸಿದ್ದಾರೆ. ಶ್ರೀಲಂಕಾದ ಮುತ್ತಯ್ಯ ಮುರಳೀಧರನ್‌ ಹಾಗೂ ಆಸ್ಟ್ರೇಲಿಯಾದ ಶೇನ್‌ ವಾರ್ನ್‌ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದವರ ಸ್ಥಾನದಲ್ಲಿ ಆ್ಯಂಡರ್‌ಸನ್‌ ಇದ್ದಾರೆ. 194 ಏಕದಿನ ಪಂದ್ಯಗಳನ್ನು ಆಡಿರುವ ಅವರು, 269 ವಿಕೆಟ್‌ಗಳನ್ನು ಪಡೆದಿದ್ದಾರೆ.

 ಆಸ್ಟ್ರೇಲಿಯಾದ ದಿವಂಗತ ಕ್ರಿಕೆಟಿಗ ಶೇನ್​ ವಾರ್ನ್ ಅವರು 708 ಟೆಸ್ಟ್​ ವಿಕೆಟ್ ಕಿತ್ತು ದ್ವಿತೀಯ ಸ್ಥಾನಿಯಾಗಿದ್ದಾರೆ. ಆ್ಯಂಡರ್ಸನ್​ಗೆ ವಾರ್ನ್ ಅವರ ಟೆಸ್ಟ್​​ ವಿಕೆಟ್​ ದಾಖಲೆ ಮುರಿಯುವು ಕಷ್ಟವಾಗದು. ಏಕೆಂದರೆ ಅವರು ಇನ್ನೊಂದು ವರ್ಷ ಕ್ರಿಕೆಟ್​ ಆಡಿದರೂ ಈ ದಾಖಲೆ ಮುರಿಯಬಹುದು. ಈ ದಾಖಲೆಯನ್ನು ಮುರಿಯಲು ಅವರಿಗೆ ಬೇಕಿರುವುದು 8 ವಿಕೆಟ್. ವಿಂಡೀಸ್​ ವಿರುದ್ಧದ ಪಂದ್ಯದಲ್ಲಿ ಈ ಸಾಧನೆ ಮಾಡುವ ಅವಕಾಶ ಅವರಿಗಿದೆ.

Continue Reading

ಕ್ರೀಡೆ

IPL 2025: ಮುಂದಿನ ವರ್ಷ ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕ?

IPL 2025: ಟಿ20ಗೆ ನಿವೃತ್ತಿ ಹೇಳಿ ಎಲ್ಲ ಒತ್ತಡ ಕಡಿಮೆ ಮಾಡಿರುವ ಕೊಹ್ಲಿ ಮತ್ತೆ ನಾಯಕನಾದರೂ ಅಚ್ಚರಿಯಿಲ್ಲ. ಸದ್ಯದ ಮಾಹಿತಿ ಪ್ರಕಾರ ಕೊಹ್ಲಿ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದರೂ ಕೂಡ ಕೊಹ್ಲಿ ಇದಕ್ಕೆ ಒಪ್ಪಲಿದ್ದಾರಾ ಎನ್ನುವುದು ಕುತೂಹಲ.

VISTARANEWS.COM


on

IPL 2025
Koo

ಬೆಂಗಳೂರು: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿರುವ ವಿರಾಟ್​ ಕೊಹ್ಲಿ(Virat Kohli) ಅವರು ಮತ್ತೆ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಇದು ಆರ್​ಸಿಬಿ ಮತ್ತು ಕೊಹ್ಲಿ ಅಭಿಮಾನಿಗಳಿಗೆ ಕುತೂಹಲ ಮೂಡಿಸುವಂತೆ ಮಾಡಿದೆ.

ಮುಂದಿನ ವರ್ಷ ಮೆಗಾ ಹರಾಜು ಕೂಡ ನಡೆಯಲಿದೆ. (IPL 2025)​ 18ನೇ ಆವೃತ್ತಿಯಲ್ಲಿ ಬೆಂಗಳೂರು ತಂಡದಲ್ಲಿ ಕೂಡ ದೊಡ್ಡ ಬದಲಾವಣೆಯೊಂದು ಸಂಭವಿಸುವ ಮುನ್ಸೂಚನೆಯೊಂದು ಲಭಿಸಿದೆ. ಈ ಹಿಂದೆ ತಂಡದ ನಾಯಕನಾಗಿದ್ದ ದಕ್ಷಿಣ ಆಫ್ರಿಕಾದ ಡುಪ್ಲೆಸಿಸ್​ ಅವರನ್ನು ಕೈ ಬಿಟ್ಟು ಮಾಜಿ ನಾಯಕ ವಿರಾಟ್​ ಕೊಹ್ಲಿ(Virat Kohli)ಗೆ ಮತ್ತೆ ನಾಯಕತ್ವ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿರಾಟ್​ ಕೊಹ್ಲಿ ಅವರು ಭಾರತ ತಂಡದ ಮೂರು ಮಾದರಿಯ ನಾಯಕತ್ವ ವಹಿಸಿಕೊಂಡಿದ್ದ ವೇಳೆ ಐಪಿಎಲ್​ನಲ್ಲಿಯೂ ತಂಡವನ್ನು ಮುನ್ನಡೆಸುವುದು ಕಷ್ಟವಾಗುತ್ತದೆ, ಕೆಲಸದ ಒತ್ತಡದಿಂದಾಗಿ ಆಟದ ಕಡೆ ಸರಿಯಾಗಿ ಗಮನ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಐಪಿಎಲ್​ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಸೂಕ್ತ ನಾಯಕನ ಸ್ಥಾನಕ್ಕೆ ಚೆನ್ನೈ ತಂಡದಲ್ಲಿದ್ದ ಫಾಫ್​ ಡುಪ್ಲೆಸಿಸ್​ ಅವರನ್ನು ಖರೀದಿ ಮಾಡಿ ಅವರಿಗೆ ನಾಯಕತ್ವ ನೀಡಲಾಗಿತ್ತು.

ಕಳೆದ ಮೂರು ಸೀಸನ್​ನಲ್ಲಿ ಡುಪ್ಲೆಸಿಸ್ ಆರ್​ಸಿಬಿ ತಂಡವನ್ನು ಮುನ್ನಡೆಸಿದರೂ ತಂಡದ ಭವಿಷ್ಯ ಮಾತ್ರ ಬದಲಾಗಲಿಲ್ಲ. ಕಳೆದ ಬಾರಿಯಂತೂ ಲೀಗ್​ನಿಂದಲೇ ಹೊರಬಿದ್ದಿತ್ತು. ಇದೀಗ ಟಿ20ಗೆ ನಿವೃತ್ತಿ ಹೇಳಿ ಎಲ್ಲ ಒತ್ತಡ ಕಡಿಮೆ ಮಾಡಿರುವ ಕೊಹ್ಲಿ ಮತ್ತೆ ನಾಯಕನಾದರೂ ಅಚ್ಚರಿಯಿಲ್ಲ. ಸದ್ಯದ ಮಾಹಿತಿ ಪ್ರಕಾರ ಕೊಹ್ಲಿ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದರೂ ಕೂಡ ಕೊಹ್ಲಿ ಇದಕ್ಕೆ ಒಪ್ಪಲಿದ್ದಾರಾ ಎನ್ನುವುದು ಕುತೂಹಲ. ಈ ಐಪಿಎಲ್​ನಲ್ಲಿ ಕೊಹ್ಲಿ ಪ್ರಚಂಡ ಬ್ಯಾಟಿಂಗ್​ ಮೂಲಕ 700ಕ್ಕೂ ಅಧಿಕ ರನ್​ ಕಲೆ ಹಾಕಿ ಟೂರ್ನಿಯ ಅತ್ಯಧಿಕ ಸ್ಕೋರ್​ ಎನಿಸಿಕೊಂಡಿದ್ದರು.

ಇದನ್ನೂ ಓದಿ Virat Kohli: ಬುರ್ಜ್‌ ಖಲೀಫಾದಲ್ಲಿ ಕಣ್ಮನ ಸೆಳೆದ ವಿರಾಟ್​ ಕೊಹ್ಲಿಯ ಫೋಟೊ; ವಿಡಿಯೊ ವೈರಲ್​

ಕನ್ನಡಿಗ ಕೆ.ಎಲ್​ ರಾಹುಲ್​ ಕೂಡ ಆರ್​ಸಿಬಿ ತಂಡಕ್ಕೆ ಬರಲಿದ್ದಾರೆ ಎನ್ನುವ ಮಾತುಗಳು ಕೂಡ ಕೆಲ ತಿಂಗಳಿನಿಂದ ಕೇಳಿರುತ್ತಿದೆ. ಒಂದೊಮ್ಮೆ ಕೊಹ್ಲಿ ನಾಯಕನ ಸ್ಥಾನ ತಿರಸ್ಕರಿಸಿದರೆ, ರಾಹುಲ್​ ಆರ್​ಸಿಬಿ ಸೇರಿದರೆ ನಾಯಕತ್ವ ಅವರ ಪಾಲಾಗುವು ಸಾಧ್ಯತೆ ಇದೆ.

ಕೊಹ್ಲಿಯ ನಾಕಯತ್ವ ಸಾಧನೆ ಹೇಗಿದೆ?

ವಿರಾಟ್​ ಕೊಹ್ಲಿ 2013ರಲ್ಲಿ ಆರ್​ಸಿಬಿಯ ಪೂರ್ಣ ಪ್ರಮಾಣದ ನಾಯಕನಾಗಿ ನೇಮಕಗೊಂಡಿದ್ದರು. 2021ರ ತನಕ ಅವರು ಆರ್​ಸಿಬಿಯನ್ನು ಮುನ್ನಡೆಸಿದ್ದರು. ಕೊಹ್ಲಿ ನಾಯಕತ್ವದಲ್ಲಿ ಒಟ್ಟು 140 ಪಂದ್ಯಗಳನ್ನು ಆಡಿದ್ದ ಆರ್​​ಸಿಬಿ 66 ಪಂದ್ಯಗಳನ್ನು ಜಯಿಸಿದೆ. 70 ಪಂದ್ಯಗಳಲ್ಲಿ ಸೋಲು ಕಂಡಿದೆ. ಐಪಿಎಲ್​ ಇತಿಹಾಸದಲ್ಲಿ ವಿನ್ನಿಂಗ್ಸ್​ ಸರಾಸರಿಯಲ್ಲಿ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಅವರ ನಾಯಕತ್ವದ ಸರಾಸರಿ ಗೆಲುವು ಶೇ. 46.15 ರಷ್ಟಿದೆ. ದಾಖಲೆ ಧೋನಿ ಹೆಸರಿನಲ್ಲಿದೆ. ಧೋನಿ ನಾಯಕತ್ವದ ಗೆಲುವಿನ ಸರಾಸರಿ 60.38 ರಷ್ಟಿದೆ.

Continue Reading

ಕ್ರೀಡೆ

IND vs ZIM: ಜಿಂಬಾಬ್ವೆ ತಲುಪಿದ ಯಂಗ್‌ ಟೀಮ್‌ ಇಂಡಿಯಾ; ಶನಿವಾರದಿಂದ ಸರಣಿ ಆರಂಭ

IND vs ZIM: ಆಟಗಾರರು ಮತ್ತು ಹಂಗಾಮಿ ಕೋಚ್​ ವಿವಿಎಸ್​ ಲಕ್ಮ್ಮಣ್(VVS Laxman)​ ಜಿಂಬಾಬ್ಬೆಗೆ ತಲುಪಿರುವ ಫೋಟೊವನ್ನು ಜಿಂಬಾಬ್ವೆ ಕ್ರಿಕೆಟ್‌ ಮಂಡಳಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಉಭಯ ತಂಡಗಳ ಸರಣಿ ಜುಲೈ 6 ರಿಂದ ಆರಂಭಗೊಳ್ಳಲಿದೆ.

VISTARANEWS.COM


on

IND vs ZIM
Koo

ಹರಾರೆ: ಆತಿಥೇಯ ಜಿಂಬಾಬ್ವೆ(IND vs ZIM) ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನಾಡಲು ಭಾರತ ತಂಡ ಹರಾರೆಗೆ(Team India touchdown in Zimbabwe) ತಲುಪಿದೆ. ಆಟಗಾರರು ಮತ್ತು ಹಂಗಾಮಿ ಕೋಚ್​ ವಿವಿಎಸ್​ ಲಕ್ಮ್ಮಣ್(VVS Laxman)​ ಜಿಂಬಾಬ್ಬೆಗೆ ತಲುಪಿರುವ ಫೋಟೊವನ್ನು ಜಿಂಬಾಬ್ವೆ ಕ್ರಿಕೆಟ್‌ ಮಂಡಳಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಉಭಯ ತಂಡಗಳ ಸರಣಿ ಜುಲೈ 6 ರಿಂದ ಆರಂಭಗೊಳ್ಳಲಿದೆ.

ಬುಧವಾರ (ಜುಲೈ 3) ಜಿಂಬಾಬ್ವೆಗೆ ಬಂದಿಳಿದ ಟೀಮ್​ ಇಂಡಿಯಾಕ್ಕೆ ಆತ್ಮೀಯ ಸ್ವಾಗತ ಕೋರಲಾಯಿತು. ಜಿಂಬಾಬ್ವೆ ಕ್ರಿಕೆಟ್ ಹಂಚಿಕೊಂಡ ವೀಡಿಯೊದಲ್ಲಿ, ಲಕ್ಷ್ಮಣ್ ವಿಮಾನ ನಿಲ್ದಾಣದಿಂದ ಹೊರಬರುತ್ತಿರುವುದನ್ನು ನೋಡಬಹುದು ಮತ್ತು ಇತರ ಬೆಂಬಲ ಸಿಬ್ಬಂದಿಯೊಂದಿಗೆ 15 ಸದಸ್ಯರ ತಂಡ ಕೂಡ ಜತೆಗಿತ್ತು. ಗುರುವಾರದಿಂದ ಆಟಗಾರರು ಅಭ್ಯಾಸ ಆರಂಭಿಸಲಿದ್ದಾರೆ.

ಚಂಡಮಾರುತದಿಂದ ಬಾರ್ಬಡೋಸ್‌ನಲ್ಲಿ ಸಿಲುಕಿರುವ ಟಿ20 ವಿಶ್ವಕಪ್​ ತಂಡದ ಭಾಗವಾಗಿದ್ದ, ಸಂಜು ಸ್ಯಾಮ್ಸನ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಇನ್ನೂ ಕೂಡ ಭಾರತಕ್ಕೆ ಆಗಮಿಸದ ಕಾರಣ ಅವರ ಬದಲಿಗೆ ಸಾಯಿ ಸುದರ್ಶನ್(Sai Sudharsan), ಜಿತೇಶ್ ಶರ್ಮಾ(Jitesh Sharma) ಮತ್ತು ಹರ್ಷಿತ್ ರಾಣಾ(Harshit Rana) ಅವರನ್ನು ಮೊದಲ ಎರಡು ಪಂದ್ಯಗಳಿಗಾಗಿ ಬಿಸಿಸಿಐ ಮಂಗಳವಾರ ತಂಡಕ್ಕೆ ಸೇರ್ಪಡೆಗೊಳಿಸಿತ್ತು.

ಚೊಚ್ಚಕ ಕರೆ ಪಡೆದ ಹರ್ಷಿತ್ ರಾಣಾ ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ ಮೊನಚಾದ ಬೌಲಿಂಗ್​ ಮೂಲಕ ಒಟ್ಟು 19 ವಿಕೆಟ್​ ಕಿತ್ತು ಮಿಂಚಿದ್ದರು. ಮಾಯಾಂಕ್​ ಅಗರ್ವಾಲ್​ ವಿಕೆಟ್​ ಕಿತ್ತು ದುರ್ವರ್ತನೆ ತೋರಿದ ಕಾರಣಕ್ಕೆ ದಂಡ ಮತ್ತು ಒಂದು ಪಂದ್ಯದ ನಿಷೇಧ ಶಿಕ್ಷೆ ಕೂಡ ಎದುರಿಸಿದ್ದರು.

ಇದನ್ನೂ ಓದಿ Team India: ತವರಿಗೆ ಪ್ರಯಾಣ ಬೆಳೆಸಿದ ಟೀಮ್​ ಇಂಡಿಯಾ; ನಾಳೆ ದಿಲ್ಲಿಗೆ ಆಗಮನ

5 ಪಂದ್ಯಗಳ ಟಿ20 ಸರಣಿ ಇದಾಗಿದ್ದು, ಅಭಿಷೇಕ್ ಶರ್ಮಾ, ನಿತೀಶ್ ರೆಡ್ಡಿ, ರಿಯಾನ್ ಪರಾಗ್ 2024 ರ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಫಲಿತಾಂಶವಾಗಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಟಿ20 ಸರಣಿಯಲ್ಲಿ ಪಂದ್ಯಗಳನ್ನಾಡಲಿದ್ದಾರೆ. ಪರಾಗ್ ಅಸ್ಸಾಂ ನಿಂದ ಭಾರತೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುವ ಮೊದಲ ಕ್ರೀಡಾಪಟುವಾಗಿದ್ದಾರೆ.

ಭಾರತ ತಂಡ

ಶುಭಮನ್ ಗಿಲ್ (ನಾಯಕ), ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಧ್ರುವ್ ಜುರೆಲ್ (ವೀಕಿ), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ, ಸಾಯಿ ಸುದರ್ಶನ್, ಜಿತೇಶ್ ಶರ್ಮಾ (ವೀಕಿ) , ಹರ್ಷಿತ್ ರಾಣಾ.

ವೇಳಾಪಟ್ಟಿ

1ನೇ ಟಿ20: ಜುಲೈ 6, ಹರಾರೆ, ಸಂಜೆ 4.30

2ನೇ ಟಿ20: ಜುಲೈ 7, ಹರಾರೆ, ಸಂಜೆ 4.30

3ನೇ T20: ಜುಲೈ 10, ಹರಾರೆ, ಸಂಜೆ 4.30

4ನೇ T20: ಜುಲೈ 13, ಹರಾರೆ, ಸಂಜೆ 4.30

5 ನೇ T20: ಜುಲೈ 14, ಹರಾರೆ, ಸಂಜೆ 4.30

Continue Reading
Advertisement
Ram charan the Indian House on set
ಟಾಲಿವುಡ್1 min ago

Ram Charan: ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ಸಿನಿಮಾ!

Family drama Kannada movie song
ಕರ್ನಾಟಕ4 mins ago

Kannada New Movie: ಸಿನಿಪ್ರಿಯರ ಗಮನ ಸೆಳೆಯುತ್ತಿದೆ ‘ಫ್ಯಾಮಿಲಿ ಡ್ರಾಮ’ ಸಿನಿಮಾದ ಸಾಂಗ್!

Suraj Revanna Case
ಕರ್ನಾಟಕ5 mins ago

Suraj Revanna Case: ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ

Sexual Harassment
Latest6 mins ago

Sexual Harassment: ಎಲ್ಲಾ ತಂದೆಯರೂ ಹೀಗೇ ಮಾಡುತ್ತಾರೆ ಎನ್ನುತ್ತ ಮಗಳನ್ನೇ ಗರ್ಭಿಣಿ ಮಾಡಿದ್ದ ನೀಚ ತಂದೆಗೆ 101 ವರ್ಷ ಶಿಕ್ಷೆ!

Koo Shut Down
ಕರ್ನಾಟಕ17 mins ago

Koo Shut Down: ‘ಕೂ’ಗು ನಿಲ್ಲಿಸಿದ ಕನ್ನಡಿಗನೇ ಕಟ್ಟಿದ ಆ್ಯಪ್‌; ದೇಶೀಯ ಟ್ವಿಟರ್‌ ಇನ್ನು ನೆನಪು ಮಾತ್ರ!

Ananth Ambani
Latest26 mins ago

Ananth Ambani: ಸಾಮೂಹಿಕ ವಿವಾಹದಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ಅಂಬಾನಿ ಕುಟುಂಬ

kanaganahalli mid day meal
ಕಲಬುರಗಿ28 mins ago

Mid Day Meal: ಕಲಬುರಗಿಯಲ್ಲಿ ಬಿಸಿಯೂಟ ಉಂಡ 33 ವಿದ್ಯಾರ್ಥಿಗಳು ಅಸ್ವಸ್ಥ; 3 ದಿನಗಳಲ್ಲಿ ಎರಡನೇ ಘಟನೆ

Yakshagana artist Tulsi Hegade added to the world record list
ಕರ್ನಾಟಕ29 mins ago

Sirsi News: ವಿಶ್ವಶಾಂತಿಗೆ ಯಕ್ಷ ನೃತ್ಯ ಕೊಡುಗೆ; ವಿಶ್ವದಾಖಲೆ ಪಟ್ಟಿಗೆ ತುಳಸಿ ಹೆಗಡೆ ಸೇರ್ಪಡೆ

Hardik Pandya
ಕ್ರೀಡೆ29 mins ago

Hardik Pandya: ಆಲ್​ರೌಂಡರ್​ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ ಹಾರ್ದಿಕ್​ ಪಾಂಡ್ಯ

Actor Darshan K manju talks
ಸ್ಯಾಂಡಲ್ ವುಡ್31 mins ago

Actor Darshan: ದರ್ಶನ್‌ ಕೆಟ್ಟ ವ್ಯಕ್ತಿಯಲ್ಲ, ತಪ್ಪು ಮಾಡಿಲ್ಲ ಎಂದ ಕೆ. ಮಂಜು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ21 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌