R Ashok: ಪ್ರತಿ ಕುಟುಂಬದಿಂದ 8-10 ಸಾವಿರ ರೂ. ದರೋಡೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್ ಆರೋಪ - Vistara News

ಕರ್ನಾಟಕ

R Ashok: ಪ್ರತಿ ಕುಟುಂಬದಿಂದ 8-10 ಸಾವಿರ ರೂ. ದರೋಡೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್ ಆರೋಪ

R Ashok: ಸಿಎಂ ಸ್ಥಾನದ ಕುರಿತು ಕಾಂಗ್ರೆಸ್‌ ಪಕ್ಷದೊಳಗೆ ಒಡಕು ಉಂಟಾಗಿದೆ. ಈ ಬಗ್ಗೆ ಒಕ್ಕಲಿಗ ಸ್ವಾಮೀಜಿ ಕೂಡ ಮಾತಾಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಹಾಗೂ ಮೂರು ಡಿಸಿಎಂ ಮಾಡುವಲ್ಲಿ ಎಲ್ಲರೂ ಮುಳುಗಿದ್ದು, ಅಭಿವೃದ್ಧಿ ಕೆಲಸ ಮಾಡಲು ಯಾರೂ ಮುಂದಾಗುತ್ತಿಲ್ಲ. ಈ ಸರ್ಕಾರಕ್ಕೆ ಕುಡಿಯುವ ನೀರು ಕೊಡುವ ಯೋಗ್ಯತೆಯೂ ಇಲ್ಲವಾಗಿ, ಜನರು ಕಲುಷಿತ ನೀರು ಸೇವಿಸಿ ಸಾಯುತ್ತಿದ್ದಾರೆ. ಡೆಂಘೀ ಸೋಂಕು ಹರಡಿ ಜನರು ತೊಂದರೆಗೊಳಗಾಗಿದ್ದರೂ ಅದಕ್ಕೆ ಸೂಕ್ತ ಕ್ರಮ ವಹಿಸಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆರೋಪಿಸಿದ್ದಾರೆ.

VISTARANEWS.COM


on

Valmiki Development Corporation Scam Opposition party leader R Ashok has demanded that CM Siddaramaiah should resign
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಬಳ್ಳಾಪುರ: ಕಾಂಗ್ರೆಸ್‌ ಸರ್ಕಾರದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನದ ಕುರಿತು ಕಚ್ಚಾಟ ನಡೆಯುತ್ತಿದ್ದು, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನದ ಕುರಿತು ಕಾಂಗ್ರೆಸ್‌ ಪಕ್ಷದೊಳಗೆ ಒಡಕು ಉಂಟಾಗಿದೆ. ಈ ಬಗ್ಗೆ ಒಕ್ಕಲಿಗ ಸ್ವಾಮೀಜಿ ಕೂಡ ಮಾತಾಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಹಾಗೂ ಮೂರು ಡಿಸಿಎಂ ಮಾಡುವಲ್ಲಿ ಎಲ್ಲರೂ ಮುಳುಗಿದ್ದು, ಅಭಿವೃದ್ಧಿ ಕೆಲಸ ಮಾಡಲು ಯಾರೂ ಮುಂದಾಗುತ್ತಿಲ್ಲ. ಈ ಸರ್ಕಾರಕ್ಕೆ ಕುಡಿಯುವ ನೀರು ಕೊಡುವ ಯೋಗ್ಯತೆಯೂ ಇಲ್ಲವಾಗಿ, ಜನರು ಕಲುಷಿತ ನೀರು ಸೇವಿಸಿ ಸಾಯುತ್ತಿದ್ದಾರೆ. ಡೆಂಘೀ ಸೋಂಕು ಹರಡಿ ಜನರು ತೊಂದರೆಗೊಳಗಾಗಿದ್ದರೂ ಅದಕ್ಕೆ ಸೂಕ್ತ ಕ್ರಮ ವಹಿಸಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ: Run4Research: ಬೆಂಗಳೂರಿನಲ್ಲಿ ಜೂ.30ರಂದು ʼರನ್4ರೀಸರ್ಚ್ʼ ಓಟ

ಈಗ ಒಕ್ಕಲಿಗರು ಹಾಗೂ ಲಿಂಗಾಯತರು ಮಾತಾಡುತ್ತಿದ್ದಾರೆ. ಮುಂದೆ ಕುರುಬ ಸಮುದಾಯದವರು ಮಾತಾಡುತ್ತಾರೆ. ಜಾತಿಗಳ ನಡುವೆ ಕಾಂಗ್ರೆಸ್‌ ಕಚ್ಚಾಟ ಹುಟ್ಟುಹಾಕಿರುವುದು ಒಳ್ಳೆಯದಲ್ಲ. ಜಾತಿಗಳನ್ನು ಒಡೆಯುವ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎಂದು ದೂರಿದರು.

ಒಂದು ಕುಟುಂಬಕ್ಕೆ 2,000 ರೂ. ನೀಡುತ್ತೇವೆಂದು ಹೇಳಿದ ಕಾಂಗ್ರೆಸ್‌, 8-10 ಸಾವಿರ ರೂ. ದರೋಡೆ ಮಾಡುತ್ತಿದೆ. ಹಾಲಿನ ದರವನ್ನು ಕಳೆದ ವರ್ಷ 3 ರೂ. ಹೆಚ್ಚಿಸಿ, ಈಗ 2 ರೂ. ಹೆಚ್ಚಿಸಿದ್ದಾರೆ. ಪೆಟ್ರೋಲ್‌-ಡೀಸೆಲ್‌ ದರವನ್ನು ನಿರ್ದಾಕ್ಷಿಣ್ಯವಾಗಿ ಏರಿಸಿದ್ದರಿಂದ ಎಲ್ಲ ದರಗಳು ಏರಿಕೆಯಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಾದ ಕೂಡಲೇ ಬಸ್‌ ಟಿಕೆಟ್‌ ದರ ಹೆಚ್ಚಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಸಾರಿಗೆ ನಿಗಮಗಳಿಗೆ ಇನ್ನೂ ಹಣ ಬಾಕಿ ಉಳಿಸಿಕೊಳ್ಳಲಾಗಿದೆ. ಹಾಲಿನ ಪೋತ್ಸಾಹಧನವೂ ಬಾಕಿ ಇದೆ ಎಂದರು.

ಇದನ್ನೂ ಓದಿ: Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಚೊಂಬು ನೀಡುತ್ತಿದೆ ಎಂದು ಕಾಂಗ್ರೆಸ್‌ ತೋರಿಸಿತ್ತು. ಆದರೆ ವಾಸ್ತವದಲ್ಲಿ ಕಾಂಗ್ರೆಸ್‌ ಸರ್ಕಾರವೇ ಜನರಿಗೆ ಚೊಂಬು ನೀಡುತ್ತಿದೆ. ಕೇಂದ್ರ ಸರ್ಕಾರದ ಬಳಿ ಹೋಗಿ ಅಲ್ಲಿಯೂ ದ್ವೇಷದ ಕಿಡಿ ಕಾರುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಟಾಚಾರಕ್ಕೆ ಸಂಸದರ ಸಭೆ ಕರೆದು ಮಾತಾಡಿದ್ದಾರೆ. ಕೇಂದ್ರ ಸರ್ಕಾರ ಯಾವುದೇ ಯೋಜನೆಗೆ ಅನುದಾನ ನೀಡಿದರೆ, ಅದಕ್ಕೆ ಸಮನಾಗಿ ತಮ್ಮ ಪಾಲನ್ನು ನೀಡಲು ಕೂಡ ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ಇಡೀ ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Stabbing Case: ಕಾಲೇಜಿನೊಳಗೆ ಬಿಡದ್ದಕ್ಕೆ ಸೆಕ್ಯೂರಿಟಿ ಗಾರ್ಡ್‌ನ ಇರಿದು ಕೊಂದ ವಿದ್ಯಾರ್ಥಿ!

Stabbing Case: ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಘಟನೆ ನಡೆದಿದೆ. ಮದ್ಯ ಸೇವಿಸಿದ್ದರಿಂದ ಕಾಲೇಜಿನೊಳಗೆ ಬಿಡದ್ದಕ್ಕೆ ಸೆಕ್ಯೂರಿಟಿ ಗಾರ್ಡ್‌ನ ವಿದ್ಯಾರ್ಥಿ ಚಾಕುವಿನಿಂದ ಇರಿದು ಕೊಂದಿದ್ದಾನೆ.

VISTARANEWS.COM


on

Stabbing Case
Koo

ಬೆಂಗಳೂರು: ನಗರದ ಖಾಸಗಿ ಕಾಲೇಜಿನಲ್ಲಿ ಸೆಕ್ಯೂರಿಟಿ ಗಾರ್ಡ್‌ನ ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಇರಿದು ಕೊಂದಿರುವ ಘಟನೆ (Stabbing Case) ಬುಧವಾರ ನಡೆದಿದೆ. ಜೈ ಕಿಶೋರ್‌ ರಾಯ್ ಮೃತ ಸೆಕ್ಯೂರಿಟಿ ಗಾರ್ಡ್, ಭಾರ್ಗವ್ ಕೊಲೆ ಆರೋಪಿಯಾಗಿದ್ದಾನೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಘಟನೆ ನಡೆದಿದೆ. ಕಾಲೇಜಿಗೆ ವಿದ್ಯಾರ್ಥಿ ಮದ್ಯ ಸೇವಿಸಿ ಹೋಗಿದ್ದ. ಹೀಗಾಗಿ ಆತನನ್ನು ಒಳಗೆ ಹೋಗಲು ಸೆಕ್ಯೂರಿಟಿ ಗಾರ್ಡ್ ಜೈ ಕಿಶೋರ್ ರಾಯ್ ಬಿಟ್ಟಿಲ್ಲ. ಈ ವೇಳೆ ಜಗಳ ತೆಗೆದ ವಿದ್ಯಾರ್ಥಿ ಆತನನ್ನು ಚಾಕುವಿನಿಂದ ಇರಿದಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಸೆಕ್ಯೂರಿಟಿ ಗಾರ್ಡ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಅಮೃತಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆ ಮಾಡಿದ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಕಾಲೇಜಿನ ಮುಂಭಾಗದಲ್ಲಿ ಮೃತ ಕಿಶೋರ್ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.

ಇದನ್ನೂ ಓದಿ | Suraj Revanna Case: ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ

ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಬಾಲಕಿ

ಬೆಳಗಾವಿ: ಬಾವಿಗೆ ಹಾರಿ ಬಾಲಕಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ನಡೆದಿದೆ. ಪ್ರಿಯಾ ರವಿ ತಳವಾರ (11) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ನೆನ್ನೆ ಶಾಲೆಯಿಂದ ಮನೆಗೆ ಬಂದ ಬೆನ್ನಲ್ಲೇ ಬಾಲಕಿ ಬಾವಿಗೆ ಹಾರಿದ್ದಾಳೆ. ಸುಮಾರು 50 ಅಡಿ ಆಳದ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದು, ಬಾಲಕಿ ಶವ ಹೊರಕ್ಕೆ ತೆಗೆಯಲಾಗಿದೆ.

ಕಾರು-ಖಾಸಗಿ ಬಸ್ ಡಿಕ್ಕಿಯಾಗಿ ಚಾಲಕ ಸಾವು

ಶಿವಮೊಗ್ಗ: ಕಾರು- ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟು, ಐದಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ದೇವಿಕೊಪ್ಪ ಬಳಿ ನಡೆದಿದೆ. ಶಿವಮೊಗ್ಗ ಮೂಲದ ಪ್ರಸಾದ್ ಮೃತ ಯುವಕ. ಅಪಘಾತದ ರಭಸಕ್ಕೆ ಕಾರು ಜಖಂಗೊಂಡಿದ್ದು, ಬಸ್ ಪಲ್ಟಿಯಾಗಿದೆ. ಇದರಿಂದ ಬಸ್‌ನಲ್ಲಿದ್ದ ಐದಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

ಗಾಯಾಳುಗಳನ್ನು ಶಿರಾಳಕೊಪ್ಪ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನವಟ್ಟಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಹಾಗೂ ಶಿರಾಳಕೊಪ್ಪದ ಕಡೆದಿಂದ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಕಾರಿಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿ ಕಾರಿನ ಮೇಲೆ ಬಿದ್ದಿದೆ. ಇದರಿಂದ ಕಾರು ಚಾಲಕ ಕೊನೆಯುಸಿರೆಳೆದಿದ್ದಾನೆ.

ಇದನ್ನೂ ಓದಿ | Physical Abuse: ಬೆಂಗಳೂರಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ; ಸವಾರನ ತಲೆ ಮೇಲೆ ಹರಿದ ಲಾರಿ

ಬೆಂಗಳೂರು: ಲಾರಿ ಡಿಕ್ಕಿ ಹೊಡೆದಿದ್ದರಿಂದ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯದ ನೈಸ್‌ ರಸ್ತೆಯಲ್ಲಿ ನಡೆದಿದೆ. ಲಾರಿ ಡಿಕ್ಕಿ ಹೊಡೆದು ದ್ವಿಚಕ್ರವಾಹನ ಸವಾರನ ತಲೆ ಮೇಲೆ ಹರಿದಿದ್ದರಿಂದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಕೆಂಗೇರಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

ಕರ್ನಾಟಕ

Rain News: ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆ ಅಬ್ಬರ; ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಜನ ಪರದಾಟ

Rain News: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆವರೆಗೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಚದುರಿದಂತೆ ಭಾರಿ ಮಳೆ ಸುರಿಯಲಿದೆ. ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

ಭಾರಿ ಗಾಳಿ ಮಳೆಯಿಂದ ಉಡುಪಿಯ ವಸಂತಿ ಶೆಟ್ಟಿ ಎಂಬುವವರ ಮನೆ ಮೇಲೆ ಬೃಹತ್ ಆಲದ ಮರ ಬಿದ್ದಿದೆ.
Koo

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ ಸುತ್ತ ಮುತ್ತ ಧಾರಾಕಾರ ಮಳೆ (Rain News) ಸುರಿಯುತ್ತಿದೆ. ನೆನ್ನೆ ರಾತ್ರಿಯಿಂದಲೂ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಭಾರಿ ಮಳೆಯಿಂದ ಕೊಟ್ಟಿಗೆಹಾರ, ಬಾಳೂರು, ಬಣಕಲ್ ಸೇರಿ ಹಲವೆಡೆ ವಿದ್ಯುತ್ ಕಣ್ಣಾ ಮುಚ್ಚಾಲೆ ಆಟ ಆಡುತ್ತಿದೆ. ಇನ್ನು ಬಿರುಸಿನ ಮಳೆಯಿಂದ ಚಾರ್ಮಾಡಿ ಘಾಟ್ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿದ್ದು, ಮಂಗಳೂರು-ಮೂಡಿಗೆರೆ ಪ್ರಯಾಣಿಕರು ಪರದಾಡುವಂತಾಗಿದೆ. ಭಾರಿ ಮಳೆಯಿಂದಾಗಿ ಆಂಬ್ಯುಲೆನ್ಸ್ ಚಾಲಕರಿಗೂ ಸಂಕಷ್ಟ ಎದುರಾಗಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಮಂಜು ಮಿಶ್ರಿತ ಮಳೆಯಿಂದಾಗಿ ರಸ್ತೆ ಕಾಣದೆ ವಾಹನಗಳು ನಿಂತಲ್ಲೇ ನಿಂತಿವೆ.

ವಿರಾಜಪೇಟೆ ತಾಲೂಕಿನಲ್ಲಿ ಕುಸಿದ ಕಾಂಕ್ರೀಟ್ ರಸ್ತೆ

ಕೊಡಗು: ಜಿಲ್ಲೆಯಲ್ಲಿ ಆರಿದ್ರಾ ಮಳೆ ಅಬ್ಬರದಿಂದ ಕಾಂಕ್ರೀಟ್ ರಸ್ತೆಯ ಒಂದು ಬದಿ‌ ಕುಸಿದಿದೆ. ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಪುತ್ತಮಕ್ಕಿ ಸ್ಕೂಲ್ ಸಮೀಪ ನಡೆದ ಘಟನೆ ನಡೆದಿದೆ. ಕಳೆದ ನಾಲ್ಕು ವರ್ಷದ ಹಿಂದೆ ಕಾಮಗಾರಿ ನಡೆದಿತ್ತು. ವಿರಾಜಪೇಟೆ ತೆರ್ಮೆಮೊಟ್ಟೆ ಮೂಲಕ ತೋರಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಕಳೆದ 5 ವರ್ಷದ ಹಿಂದೆ ತೋರದ ಬಳಿ ಭಾರಿ ಕುಸಿತವಾಗಿದ್ದ ಸ್ಥಳದಿಂದ 8 ಕಿ.ಮೀ. ದೂರದಲ್ಲಿ ಘಟನೆ‌ ನಡೆದಿದೆ.

ಮನೆ ಚಾವಣಿ ಕುಸಿದು ಅವಶೇಷಗಳಡಿ ಸಿಲುಕಿದ ನಾಲ್ವರ ರಕ್ಷಣೆ

ಗದಗ: ಮನೆ ಚಾವಣಿ ಕುಸಿದು ಅವಶೇಷಗಳಡಿ ಸಿಲುಕಿದ್ದ ನಾಲ್ವರ ರಕ್ಷಣೆ ಮಾಡಿದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹತ್ತಿಕಾಳ ಬಡಾವಣೆಯಲ್ಲಿ ನಡೆದಿದೆ.

ನಿರಂತರ ಮಳೆಯಿಂದ ಚಾವಣಿ ಶಿಥಿಲವಾಗಿತ್ತು. ಮನೆಯಲ್ಲಿ ಮಲಗಿದ್ದ ನಾಲ್ವರ ಮೇಲೆ ಏಕಾಏಕಿ ಚಾವಣಿ ಕುಸಿದಿದ್ದರಿಂದ ಗಂಗಪ್ಪ ಹತ್ತಿಕಾಳ, ಚಂಭವ್ವ ಹತ್ತಿಕಾಳ, ಸರೋಜಾ ಹತ್ತಿಕಾಳಗೆ ಗಾಯಗಳಾಗಿವೆ. ಛಾವಣಿ ಕುಸಿತ ಗಮನಿಸಿ ಮನೆಯಿಂದ 16 ವರ್ಷ ಬಾಲಕಿ ಮೇಘಾ ಆಚೆ ಓಡಿ ಬಂದಿದ್ದಾಳೆ.

ಕೂಡಲೇ ಸ್ಥಳೀಯರಿಗೆ ಮೇಘಾ ಮಾಹಿತಿ ನೀಡಿದ್ದರಿಂದ ಸ್ಥಳಕ್ಕೆ ಬಂದು ಮಣ್ಣಿನ ಅಡಿಯಲ್ಲಿ ಸಿಲುಕಿದ ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿರುಗಾಳಿ ಮಳೆಗೆ ಮನೆ ಮೇಲೆ ಬಿದ್ದ ಆಲದ ಮರ; ಮನೆಯಲ್ಲಿದ್ದವರು ಪಾರು

ಉಡುಪಿ: ಬಿರುಗಾಳಿ ಸಹಿತ ಭಾರಿ ಮಳೆಗೆ ನಗರದ ವಸಂತಿ ಶೆಟ್ಟಿ ಎಂಬುವವರ ಮನೆ ಮೇಲೆ ಆಲದ ಮರ ಬಿದ್ದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದ ಎಲ್ಲರೂ ಪಾರಾಗಿದ್ದಾರೆ. ಘಟನೆ ನಡೆದ ವೇಳೆ ವಸಂತಿ ಶೆಟ್ಟಿ, ಮಗಳು, ಮೊಮ್ಮಕ್ಕಳು ಮನೆಯಲ್ಲಿದ್ದರು.

ಇದನ್ನೂ ಓದಿ | Mangalore News: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು

ಮರ ಬಿದ್ದಿದ್ದರಿಂದ ಮನೆಯ ಎರಡು ಕೊಠಡಿಗಳ ಮೇಲ್ಚಾವಣಿ ಕುಸಿದು ಬಿದ್ದಿದೆ. ಮನೆಯ ಸದಸ್ಯರು ಬೇರೆ ಕೋಣೆಯಲ್ಲಿ ಮಲಗಿದ್ದರು, ಇದರಿಂದ ಅಪಾಯ ತಪ್ಪಿದೆ. ಅವಘಡದಿಂದ ಸೈಕಲ್ ಶಾಪ್, ಜನಪ್ರಿಯ ಸೌಂಡ್ಸ್, ಸಲೂನ್‌ಗೆ ಹಾನಿಯಾಗಿದೆ.

ಕರಾವಳಿ ಬೈಪಾಸ್ ಜಲಾವೃತ

ಉಡುಪಿ ಜಿಲ್ಲೆಯಲ್ಲಿ ಇಂದು ಕೂಡ ಎಲ್ಲೋ ಅಲರ್ಟ್ ನೀಡಲಾಗಿತ್ತು. ಏಕಾಏಕಿ ಸುರಿದ ಗಾಳಿ ಸಹಿತ ಮಳೆಯಿಂದ ನಗರದ ಕರಾವಳಿ ಬೈಪಾಸ್ ಬಳಿ ರಸ್ತೆ ಜಲಾವೃತವಾಗಿದ್ದರಿಂದ ವಾಹನ ಸವಾರರು ಪರದಾಡಿದರು. ಗಾಳಿ ಸಹಿತ ಮಳೆಗೆ ಹಲವೆಡೆ ಮರಗಳು ನೆಲಕ್ಕುರುಳಿದ್ದು, ಕಡೆಕಾರು ಪರಿಸರದಲ್ಲಿ ಮನೆಯ ಮೇಲೆ ಮರ ಬಿದ್ದಿದೆ.

Continue Reading

ಕರ್ನಾಟಕ

MUDA site scandal: ಮುಡಾ ಸೈಟ್ ಅಕ್ರಮ; ನಾನು ಯಾಕಪ್ಪ ರಾಜೀನಾಮೆ ಕೊಡಲಿ, ನನ್ನ ಪಾತ್ರ ಏನಿದೆ ಎಂದ ಸಿಎಂ!

MUDA site scandal: ಮುಡಾ ನಿವೇಶನಗಳು ಅಮಾನತ್ತಿನಲ್ಲಿದ್ದು, ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ನಷ್ಟವಾಗಿಲ್ಲ. ತನಿಖಾ ವರದಿ ಬಂದ ನಂತರ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

MUDA site scandal
Koo

ಬೆಂಗಳೂರು: ಮುಡಾ ಸೈಟ್ ಅಕ್ರಮದ (MUDA site scandal) ತನಿಖೆ ಮಾಡಲು ತನಿಖಾ ತಂಡ ರಚನೆ ಮಾಡಲಾಗಿದೆ. ಈ ಹಿಂದೆ ಬಿಜೆಪಿಯವರು, ನಾವು ಕೇಳಿದಾಗ ಒಂದೇ ಒಂದು ಕೇಸನ್ನಾದರೂ ಸಿಬಿಐಗೆ ಕೊಟ್ಟಿದ್ದಾರಾ? ಯಾಕೆ ನಾವು ಯಾಕೆ ಸಿಬಿಐಗೆ ಕೊಡಬೇಕು? ಸೈಟ್ ಹಂಚಿದ್ದು ಅವರ ಸರ್ಕಾರದಲ್ಲಿ, ದುರುಪಯೋಗ ಆಗಿದೆ ಅಂತ ಈಗ ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಇಷ್ಟಕ್ಕೂ ನಾನು ಯಾಕಪ್ಪ ರಾಜೀನಾಮೆ ಕೊಡಬೇಕು, ನನ್ನ ಪಾತ್ರ ಏನಿದೆ? ಅಶೋಕ್ ರಾಜೀನಾಮೆ ಕೇಳ್ತಾನೆ ಅಂತ ಕೊಟ್ಟು ಬಿಡೋಕೆ ಆಗುತ್ತಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ವಿಪಕ್ಷ ನಾಯಕರು ಸಿಎಂ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು, ಎಲ್ಲಾ ನಿವೇಶನಗಳನ್ನು ಅಮಾನತ್ತಿನಲ್ಲಿ ಇಡಲಾಗಿದೆ. ಹಾಗಾಗಿ ಸರ್ಕಾರಕ್ಕೆ ನಷ್ಟವಾಗಿಲ್ಲ. ನಿವೇಶನಗಳನ್ನು ಹಂಚಿಕೆ ಮಾಡಿದ್ದವರನ್ನು ವರ್ಗಾವಣೆ ಮಾಡಿ ಹಿರಿಯ ಐಎಎಸ್ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುತ್ತಿದೆ. ವರದಿ ಬಂದ ನಂತರ ತೀರ್ಮಾನ ಈ ಬಗ್ಗೆ ಮಾಡಲಾಗುವುದು ಎಂದು ತಿಳಿಸಿದರು.

ಮುಡಾ ಹಗರಣ ಸಿಬಿಐಗೆ ಹಸ್ತಾಂತರ ಮಾಡಲು ಒತ್ತಾಯದ ಬಗ್ಗೆ ಮಾತನಾಡಿ, ಎಲ್ಲವನ್ನೂ ಸಿಬಿಐಗೆ ಹಸ್ತಾಂತರಿಸಲು ಏಕೆ ಹೇಳುತ್ತಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐಗೆ ಹಸ್ತಾಂತರ ಮಾಡಿದ್ದರು ಎಂದು ಪ್ರಶ್ನಿಸಿದರು. ಜಮೀನು ಕೊಟ್ಟವರಿಗೆ ಪರ್ಯಾಯವಾಗಿ ನಿವೇಶನ ನೀಡಬೇಕೆಂದು ಬಿಜೆಪಿಯೇ ಕಾನೂನು ಮಾಡಿದೆ ಎಂದರು.

ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದಲ್ಲಿ ನನ್ನ ಪಾತ್ರವೇನಿದೆ? ಆರ್. ಅಶೋಕ್ ಕರ್ತವ್ಯ ಲೋಪವೆಸಗಿದ್ದಾರೆ ಎಂದರೆ ರಾಜೀನಾಮೆ ಕೊಡುತ್ತಾರೆಯೇ ಎಂದು ಪ್ರಶ್ನಿಸಿದರು. ಅವರ ಕಾಲದಲ್ಲಿ ಅಕ್ರಮ ಸಕ್ರಮ ಸರಿಯಾದ ರೀತಿಯಲ್ಲಿ ಆಗಿಲ್ಲ ಎಂದು ಆರೋಪ ಕೇಳಿ ಬಂದಾಗ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ಅದಕ್ಕೆ ರಾಜೀನಾಮೆ ಕೊಡಿ ಅಂದರೆ ಕೊಡುತ್ತಾರೆಯೇ ಎಂದರು.

ವಾಲ್ಮೀಕಿ ನಿಗಮದ ಅಕ್ರಮಗಳ ಬಗ್ಗೆ ತನಿಖೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅಕ್ರಮಗಳ ಬಗ್ಗೆಯೂ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾತನಾಡಿ, ವಾಲ್ಮೀಕಿ ನಿಗಮದ ಪ್ರಕರಣವನ್ನು ಎಸ್‍ಐಟಿಗೆ ವಹಿಸಲಾಗಿದ್ದು ತನಿಖೆ ನಡೆಯುತ್ತಿದೆ. ಸಚಿವರಾಗಿದ್ದ ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯಲಾಗಿದೆ. ನಿಗಮದ ಅಧೀಕ್ಷಕ ಚಂದ್ರಶೇಖರನ್ ಡೆತ್ ನೋಟ್‌ನಲ್ಲಿ ಮಂತ್ರಿಗಳು ವ್ಯವಸ್ಥಾಪಕ ನಿರ್ದೇಶಕರಿಗೆ ಮೌಖಿಕ ಆದೇಶ ನೀಡಿದ್ದರು ಎಂದು ಬರೆದಿರುವ ಕಾರಣ ರಾಜೀನಾಮೆ ಪಡೆದೆವು. ಬ್ಯಾಂಕ್ ವ್ಯವಹಾರಗಳ ಬಗ್ಗೆ ಸಿಬಿಐ ತನಿಖೆ ಕೈಗೊಂಡಿದೆ ಎಂದರು.

ಇದನ್ನೂ ಓದಿ | Sirsi News: ವಿಶ್ವಶಾಂತಿಗೆ ಯಕ್ಷ ನೃತ್ಯ ಕೊಡುಗೆ; ವಿಶ್ವದಾಖಲೆ ಪಟ್ಟಿಗೆ ತುಳಸಿ ಹೆಗಡೆ ಸೇರ್ಪಡೆ

ಶರಣ ಪ್ರಕಾಶ್ ಪಾಟೀಲ್ ಅವರಿಗೂ ಪಾಲು ಹೋಗಿದೆ ಎಂಬ ಆರೋಪ ಮಾಡಿರುವ ಬಗ್ಗೆ ಮಾತನಾಡಿ, ಅದಕ್ಕಾಗಿಯೇ ಎಸ್‍ಐಟಿ ರಚನೆಯಾಗಿದೆ. ತನಿಖೆಯ ವರದಿ ಬರಬೇಕು. ಅವರ ಮೇಲೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಬೇಕು. ಇದ್ಯಾವುದೂ ಇಲ್ಲದೇ ಕ್ರಮ ಕೈಗೊಳ್ಳುವುದು ಹೇಗೆ ಎಂದು ಪ್ರಶ್ನಿಸಿದರು.

Continue Reading

ಕರ್ನಾಟಕ

Kannada New Movie: ಸಿನಿಪ್ರಿಯರ ಗಮನ ಸೆಳೆಯುತ್ತಿದೆ ‘ಫ್ಯಾಮಿಲಿ ಡ್ರಾಮ’ ಸಿನಿಮಾದ ಸಾಂಗ್!

Kannada New Movie: “ಫ್ಯಾಮಿಲಿ ಡ್ರಾಮ” ಚಿತ್ರದ ಸದ್ಯ ರಿಲೀಸ್ ಆಗಿರುವ ಟೈಟಲ್ ಟ್ರ್ಯಾಕ್ ಈಗ ಎಲ್ಲರ ಗಮನ ಸೆಳೆಯುತ್ತದೆ. ಗಾಯಕ ವಾಸುಕಿ ವೈಭವ್ ಧ್ವನಿಯಲ್ಲಿ ಮೂಡಿ ಬಂದಿರುವ ‘ ಲಿ ಲಿ ಫ್ಯಾಮಿಲಿ ಹಾಡು…’ ಹಾಡು ಕೇಳೋಕೆ ಎಷ್ಟು ಮಜವಾಗಿದೆಯೋ ನೋಡೊಕು ಅಷ್ಟೇ ಕುತೂಹಲಕಾರಿಯಾಗಿದೆ.

VISTARANEWS.COM


on

Family drama Kannada movie song
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಸದ್ದು ಮಾಡುತ್ತಿರುವ ಸಿನಿಮಾಗಳಲ್ಲಿ ‘ಫ್ಯಾಮಿಲಿ ಡ್ರಾಮ’ ಕೂಡ ಒಂದು. ಈಗಾಗಲೇ ಟ್ರೈಲರ್ ಮೂಲಕ ಗಮನ ಸೆಳೆದಿರುವ ಫ್ಯಾಮಿಲಿ ಡ್ರಾಮ ಸದ್ಯ ಇಂಟ್ರೆಸ್ಟಿಂಗ್ ಟೈಟಲ್ ಟ್ರ್ಯಾಕ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಯುವ ಪ್ರತಿಭೆಗಳೇ ಸೇರಿಕೊಂಡು ಮಾಡಿರುವ ‘ಫ್ಯಾಮಿಲಿ ಡ್ರಾಮಾ’ ಹಾಡು ಕೂಡ ಚಿತ್ರದ (Kannada New Movie) ಮೇಲಿನ ಕುತೂಹಲ ಹೆಚ್ಚಿಸಿದೆ. ಇತ್ತೀಚಿಗಷ್ಟೇ ರಿಲೀಸ್ ಆಗಿದ್ದ ಟ್ರೈಲರ್ ಸಖತ್ ಕ್ರಿಯೇಟಿವ್‌ ಆಗಿದ್ದು, ಇದೊಂದು ಮಾಮೂಲಿ ಸಿನಿಮಾವಲ್ಲ, ವಿನೂತನ ಮತ್ತು ವಿಭಿನ್ನವಾದ ಸಿನಿಮಾ ಎನ್ನುವುದನ್ನು ಹೇಳುತ್ತಿದೆ.

ಫ್ಯಾಮಿಲಿ ಡ್ರಾಮಾ, ಆಕರ್ಷ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚೊಚ್ಚಲ ಸಿನಿಮಾ. ಈ ಚಿತ್ರದಲ್ಲಿ ಅಭಯ್, ಅನನ್ಯಾ ಅಮರ್, ಸಿಂಧು ಶ್ರೀನಿವಾಸ್ ಮೂರ್ತಿ, ರೇಖಾ, ಪೂರ್ಣಚಂದ್ರ ಮೈಸೂರು ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.

ಬಹುತೇಕ ಹೊಸ ಪ್ರತಿಭೆಗಳೇ ಸೇರಿಕೊಂಡು ಮಾಡಿರುವ ಈ ಸಿನಿಮಾಗೆ ಡಬ್ಬುಗುಡಿ ಮುರಳಿಕೃಷ್ಣ ಅವರು ತಮ್ಮ ಡಿಎಂಕೆ (DMK) ಎಂಟರ್ಟೈನ್ಮೆಂಟ್ ಮೂಲಕ ಬಂಡವಾಳ ಹೂಡಿದ್ದಾರೆ.

ಸದ್ಯ ರಿಲೀಸ್ ಆಗಿರುವ ಟೈಟಲ್ ಟ್ರ್ಯಾಕ್ ಈಗ ಎಲ್ಲರ ಗಮನ ಸೆಳೆಯುತ್ತದೆ. ಗಾಯಕ ವಾಸುಕಿ ವೈಭವ್ ಧ್ವನಿಯಲ್ಲಿ ಮೂಡಿ ಬಂದಿರುವ ‘ ಲಿ ಲಿ ಫ್ಯಾಮಿಲಿ ಹಾಡು…’ ಹಾಡು ಕೇಳೋಕೆ ಎಷ್ಟು ಮಜವಾಗಿದೆಯೋ ನೋಡೊಕು ಅಷ್ಟೇ ಕುತೂಹಲಕಾರಿಯಾಗಿದೆ.

ಅಂದಹಾಗೆ ಈ ಹಾಡಿಗೆ ಚೇತನ್ ಅಮ್ಮಯ್ಯ ಸಂಗೀತ ಸಂಯೋಜನೆ ಮಾಡಿದ್ದು, ಶರತ್ ವಶಿಷ್ಠ ಹಾಗೂ ಚೇತನ್ ಅಮ್ಮಯ್ಯ ಜಂಟಿಯಾಗಿ ಸಾಹಿತ್ಯ ಬರೆದಿದ್ದಾರೆ. ಈ ಹಾಡಿನಲ್ಲಿ ಪಾರ್ಟಿ ನಡೆಯುತ್ತಿದ್ದು ನಟ ಅಭಯ್, ಸಿಂಧು, ಅನಯ್ಯಾ ಎಂಡ್ ಗ್ಯಾಂಗ್ ಯಾರನ್ನೊ ಕೊಲೆ ಮಾಡಲು ಸ್ಕೆಚ್ ಹಾಕಿದ್ದಾರೆ. ಆದರೆ ಹಾಡಿನ ಕೊನೆಯಲ್ಲಿ ಅವರ ಸ್ಕೆಚ್ ಫ್ಲಾಪ್ ಆಗಿರುವ ಹಾಗೆ ಅನ್ನಿಸುತ್ತದೆ. ಆದರೆ ಮುಂದೇನಾಗುತ್ತೆ ಎನ್ನುವುದು ಸಿನಿಮಾದಲ್ಲಿಯೇ ನೋಡಬೇಕು. ಈ ಹಾಡು ಸಿನಿಮಾದ ಮೇಲಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ಇದನ್ನೂ ಓದಿ: Bengaluru News: ಬೆಂಗಳೂರಿನ ವಿದ್ಯಾರ್ಥಿನಿಗೆ ಐಐಟಿ ಬಾಂಬೆಯ ಪ್ರತಿಷ್ಠಿತ ಪ್ರಶಸ್ತಿ

ಇನ್ನು ನಿರ್ಮಾಪಕ ಮುರಳಿಕೃಷ್ಣ ಅವರು ಈ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಅಂದಹಾಗೆ ಮುರಳಿಕೃಷ್ಣ ಅವರು ಯುಎಸ್‌ನಲ್ಲಿ ನೆಲೆಸಿದ್ದಾರೆ. ವಿದೇಶದಲ್ಲಿದ್ದರೂ ತಮ್ಮ ನೆಲದ ಮೇಲಿನ ಪ್ರೀತಿ, ಸಿನಿಮಾಗಳ ಮೇಲಿನ ಆಸಕ್ತಿ ಕಳೆದುಕೊಂಡಿಲ್ಲ. ಉತ್ತಮ ಸಿನಿಮಾಗಳನ್ನು ಮಾಡಬೇಕು ಎನ್ನುವ ದೊಡ್ಡ ಕನಸು ಹೊತ್ತಿರುವ ಮುರುಳಿಯವರು ಚಿತ್ರರಂಗದ ಬಗ್ಗೆ ಒಂದಷ್ಟು ತಿಳಿದುಕೊಂಡು ‘ಫ್ಯಾಮಿಲಿ ಡ್ರಾಮ’ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.

ಕನ್ನಡದ ‘ಫ್ಯಾಮಿಲಿ ಡ್ರಾಮ’ ಸಿನಿಮಾ ರಿಲೀಸ್‌ನ ಬ್ಯುಸಿಯ ಜತೆಗೆ ನಿರ್ಮಾಪಕರು ಈಗಾಗಲೇ ತೆಲುಗಿನಲ್ಲಿ ಮೂರು ಸಿನಿಮಾಗಳ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ತಮ್ಮ DMK ಎಂಟರ್ಟೈನ್ಮೆಂಟ್ ನಿರ್ಮಾಣ ಸಂಸ್ಥೆ ಮೂಲಕ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ಕೊಡಬೇಕು ಹಾಗೂ ದೊಡ್ಡ ಬಜೆಟ್‌ನ ಸ್ಟಾರ್ ಸಿನಿಮಾ ನಿರ್ಮಾಣ ಮಾಡುವ ದೊಡ್ಡ ಕನಸನ್ನು ಕಂಡಿದ್ದಾರೆ. ಅವರ ಮುಂದಿನ ಎಲ್ಲಾ ಯೋಜನೆಗಳಿಗೆ ‘ಫ್ಯಾಮಿಲಿ ಡ್ರಾಮ’ ಉತ್ತಮ ವೇದಿಕೆಯಾಗಲಿದೆ ಎನ್ನುವ ಭರವಸೆ ಹೊಂದಿದ್ದಾರೆ.

ಇದನ್ನೂ ಓದಿ: Lakshmi Hebbalkar: ಅಂಗನವಾಡಿ ಬಲವರ್ಧನೆಗೆ ಕೇಂದ್ರದ ನೆರವು ಕೋರಿದ ಲಕ್ಷ್ಮೀ ಹೆಬ್ಬಾಳಕರ್

ಫ್ಯಾಮಿಲಿ ಡ್ರಾಮ ಉತ್ತಮ ಕಂಟೆಂಟ್ ಜತೆಗೆ ಟೆಕ್ನಿಕಲ್ ವಿಚಾರಗಳು ಸಹ ಗಮನ ಸೆಳೆಯುತ್ತಿದೆ. ಡಾರ್ಕ್ ಕಾಮಿಡಿ ಸಿನಿಮಾ ಇದಾಗಿದ್ದು, ಮುಗ್ದ ಕುಟುಂಬವೊಂದು ಕೊಲೆ ಮಾಡಿ ಸಂಕಷ್ಚಕ್ಕೆ ಸಿಲುಕುವ ಕಥೆಯಾಗಿದೆ. ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆ ಮೂಡಿಸಿರುವ ಫ್ಯಾಮಿಲಿ ಡ್ರಾಮ ಸದ್ಯದಲ್ಲೇ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲು ಸಜ್ಜಾಗಿದೆ.

Continue Reading
Advertisement
Viral Video
Latest5 mins ago

Viral Video: ಸಾವು ಹೇಗೆಲ್ಲ ಹೊಂಚು ಹಾಕುತ್ತದೆ! ಈ ವಿಡಿಯೊ ನೋಡಿ

Viral Video
ವೈರಲ್ ನ್ಯೂಸ್10 mins ago

Viral Video: ವಿಮಾನದಲ್ಲಿ ದಢೂತಿ ಹೆಂಗಸಿನ ಡ್ಯಾನ್ಸ್‌! ನಗಲಾರದೆ ಅಳಲಾರದೆ ತೊಳಲಾಡಿದ ಪ್ರಯಾಣಿಕರು!

OTT Releases
ಸಿನಿಮಾ20 mins ago

OTT Releases: ಒಟಿಟಿಯಲ್ಲಿ ಈ ವಾರ ಮಿರ್ಜಾಪುರ ಸೀಸನ್ 3 ಸೇರಿದಂತೆ ಹಲವು ಸಿನಿಮಾ, ಸಿರೀಸ್‌ಗಳು!

Sexual Harassment
Latest26 mins ago

Sexual Harassment: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಅಶ್ಲೀಲ ವಿಡಿಯೊ ತೋರಿಸಿ ಲೈಂಗಿಕ ಕಿರುಕುಳ

Woman Doctor
ದೇಶ38 mins ago

ಬೇರೆ ಹುಡುಗಿಗೆ ಮೋಸ ಆಗಬಾರದು; ಮದುವೆಯಾಗಲ್ಲ ಎಂದ ಗೆಳೆಯನ ಗುಪ್ತಾಂಗ ಕತ್ತರಿಸಿದ ಯುವತಿ! Video ಇದೆ

Designer Hairpins Fashion
ಫ್ಯಾಷನ್50 mins ago

Designer Hairpins Fashion: ಗ್ರ್ಯಾಂಡ್‌ ಲುಕ್‌ಗೆ ಸಾಥ್‌ ನೀಡುವ ಡಿಸೈನರ್‌ ಹೇರ್‌ಪಿನ್ಸ್

Amritpal Singh
ದೇಶ1 hour ago

Amritpal Singh: ಜೈಲಿನಲ್ಲಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತ್‌ಪಾಲ್‌ ಸಿಂಗ್‌ಗೆ ಪೆರೋಲ್‌

Bridge Collapse
ದೇಶ2 hours ago

Bridge Collapse: ಬಿಹಾರದಲ್ಲಿ ಮತ್ತೆರಡು ಸೇತುವೆ ಕುಸಿತ; 15 ದಿನಗಳಲ್ಲಿ ಇದು 7ನೇ ಪ್ರಕರಣ!

Stabbing Case
ಕರ್ನಾಟಕ2 hours ago

Stabbing Case: ಕಾಲೇಜಿನೊಳಗೆ ಬಿಡದ್ದಕ್ಕೆ ಸೆಕ್ಯೂರಿಟಿ ಗಾರ್ಡ್‌ನ ಇರಿದು ಕೊಂದ ವಿದ್ಯಾರ್ಥಿ!

ಕರ್ನಾಟಕ2 hours ago

Rain News: ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆ ಅಬ್ಬರ; ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಜನ ಪರದಾಟ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌