Arvind Kejriwal: ಅರವಿಂದ ಕೇಜ್ರಿವಾಲ್‌ ಬಿಡುಗಡೆ ಕನಸು ಭಗ್ನ; ಮತ್ತೆ 14 ದಿನ ನ್ಯಾಯಾಂಗ ಬಂಧನ - Vistara News

ಪ್ರಮುಖ ಸುದ್ದಿ

Arvind Kejriwal: ಅರವಿಂದ ಕೇಜ್ರಿವಾಲ್‌ ಬಿಡುಗಡೆ ಕನಸು ಭಗ್ನ; ಮತ್ತೆ 14 ದಿನ ನ್ಯಾಯಾಂಗ ಬಂಧನ

Arvind Kejriwal: ತನಿಖೆ ಮತ್ತು ಮುಕ್ತ ನ್ಯಾಯಾಂಗ ಪ್ರಕ್ರಿಯೆಯ ದೃಷ್ಟಿಯಿಂದ ಕೇಜ್ರಿವಾಲ್ ಅವರನ್ನು ಕಸ್ಟಡಿಗೆ ಪಡೆಯುವುದು ಅಗತ್ಯವಿದೆ ಎಂದು ಸಿಬಿಐ ಹೇಳಿದೆ. ಮೂರು ದಿನಗಳ ಸಿಬಿಐ ಕಸ್ಟಡಿ ಅಂತ್ಯಗೊಂಡ ನಂತರ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು.

VISTARANEWS.COM


on

Arvind Kejriwal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಅವರನ್ನು ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿ ದೆಹಲಿ ಅವೆನ್ಯೂ ಕೋರ್ಟ್‌ (Dehli avenue Court) ಆದೇಶ ನೀಡಿದೆ. ಸಿಬಿಐ ನಡೆಸುತ್ತಿರುವ ದೆಹಲಿ ಮದ್ಯ ನೀತಿ (Delhi Excise policy) ಪ್ರಕರಣದಲ್ಲಿ, ಅವರಿಗೆ ನೀಡಲಾಗಿದ್ದ ಜಾಮೀನನ್ನು ಪ್ರಶ್ನಿಸಲಾಗಿತ್ತು.

ತನಿಖೆ ಮತ್ತು ಮುಕ್ತ ನ್ಯಾಯಾಂಗ ಪ್ರಕ್ರಿಯೆಯ ದೃಷ್ಟಿಯಿಂದ ಕೇಜ್ರಿವಾಲ್ ಅವರನ್ನು ಕಸ್ಟಡಿಗೆ ಪಡೆಯುವುದು ಅಗತ್ಯವಿದೆ ಎಂದು ಸಿಬಿಐ ಹೇಳಿದೆ. ಮೂರು ದಿನಗಳ ಸಿಬಿಐ ಕಸ್ಟಡಿ ಅಂತ್ಯಗೊಂಡ ನಂತರ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಆದೇಶವನ್ನು ವಿಶೇಷ ನ್ಯಾಯಾಧೀಶ ಸುನೇನಾ ಶರ್ಮಾ ಕಾಯ್ದಿರಿಸಿದ್ದರು. ಕೇಜ್ರಿವಾಲ್ ತನಿಖೆಗೆ ಸಹಕಾರ ನೀಡುತ್ತಿಲ್ಲ, ಸರಿಯಾದ ಉತ್ತರಗಳನ್ನು ಕೊಡುತ್ತಿಲ್ಲ ಎಂದು ಸಿಬಿಐ ರಿಮಾಂಡ್ ಅರ್ಜಿಯಲ್ಲಿ ಆರೋಪಿಸಿದೆ.

2021-22 ರ ದೆಹಲಿಯ ಹೊಸ ಅಬಕಾರಿ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭದ ಪ್ರಮಾಣವನ್ನು ಶೇಕಡಾ 5 ರಿಂದ 12 ಕ್ಕೆ ಹೆಚ್ಚಿಸಿರುವ ಬಗ್ಗೆ ಯಾವುದೇ ಸಮರ್ಥನೆ ಅಥವಾ ಸತ್ಯವಾದ ವಿವರಣೆ ನೀಡಿಲ್ಲ ಎಂದು ಸಿಬಿಐ ಆರೋಪಿಸಿದೆ. ಕೋವಿಡ್‌ನ ಎರಡನೇ ಅಲೆಯ ಸಂದರ್ಭದಲ್ಲಿ ದಕ್ಷಿಣ ಭಾರತದ ಪ್ರಮುಖರು ದೆಹಲಿಯಲ್ಲಿ ಮೊಕ್ಕಾಂ ಹೂಡಿದಾಗ, ಪರಿಷ್ಕೃತ ಅಬಕಾರಿ ನೀತಿಗೆ ಕ್ಯಾಬಿನೆಟ್ ಅನುಮೋದನೆಯನ್ನು ಒಂದೇ ದಿನದಲ್ಲಿ ತರಾತುರಿಯಲ್ಲಿ ಚಲಾವಣೆ ಮಾಡುವ ಮೂಲಕ ಏಕೆ ಪಡೆಯಲಾಯಿತು ಎಂಬುದನ್ನು ವಿವರಿಸಲು ಅವರಿಗೆ ಸಾಧ್ಯವಾಗಿಲ್ಲ ಎಂದಿದೆ. ಕೇಜ್ರಿವಾಲ್ ಅವರು ಪ್ರಕರಣದ ಆರೋಪಿಗಳಾದ ಮಾಗುಂಟ ಶ್ರೀನಿವಾಸಲು ರೆಡ್ಡಿ, ಅರ್ಜುನ್ ಪಾಂಡೆ ಮತ್ತು ಮೂತ ಗೌತಮ್ ಅವರನ್ನು ಭೇಟಿಯಾದ ಬಗ್ಗೆ ಸರಿಯಾದ ವಿವರಣೆಯನ್ನು ಕೊಟ್ಟಿಲ್ಲ ಎಂದು ಸಿಬಿಐ ಹೇಳಿದೆ.

ಕೇಜ್ರಿವಾಲ್ ಪ್ರಮುಖ ರಾಜಕಾರಣಿ ಮತ್ತು ದೆಹಲಿಯ ಮುಖ್ಯಮಂತ್ರಿಯಾಗಿರುವುದರಿಂದ, ಅತ್ಯಂತ ಪ್ರಭಾವಶಾಲಿ ವ್ಯಕ್ತಿಯಾಗಿರುವುದರಿಂದ, ಕಸ್ಟಡಿ ವಿಚಾರಣೆಯ ಸಮಯದಲ್ಲಿ ಅವರು ಈಗಾಗಲೇ ಬಹಿರಂಗಪಡಿಸಿದ ಸಾಕ್ಷಿಗಳು ಮತ್ತು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಬಹುದು. ಇನ್ನೂ ಪರಿಶೀಲಿಸಬೇಕಾದವರು, ಮತ್ತಷ್ಟು ಸಂಗ್ರಹಿಸಬೇಕಾದ ಪುರಾವೆಗಳನ್ನು ಹಾಳು ಮಾಡಿ ಮತ್ತು ನಡೆಯುತ್ತಿರುವ ತನಿಖೆಗೆ ಅಡ್ಡಿಯಾಗಬಹುದು ಎಂದು ಸಿಬಿಐ ಅರ್ಜಿಯಲ್ಲಿ ಆತಂಕ ವ್ಯಕ್ತಪಡಿಸಿದೆ.

2021-22ರ ದೆಹಲಿ ಮದ್ಯ ನೀತಿಯನ್ನು ರೂಪಿಸುವಾಗ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಮಾರ್ಚ್ 21ರಂದು ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಮೊದಲು ಬಂಧಿಸಿತ್ತು. ಕೇಜ್ರಿವಾಲ್ ಅವರು ಎಎಪಿಯ ಸಂಚಾಲಕರಾಗಿದ್ದರಿಂದ ಗೋವಾದಲ್ಲಿ ಪಕ್ಷದ ಪ್ರಚಾರಕ್ಕೆ ಹಣ ನೀಡಲು ಮದ್ಯ ಮಾರಾಟಗಾರರಿಂದ ಪಡೆದ ಹಣವನ್ನು ಬಳಸಲಾಗಿದೆ ಎಂದು ಇಡಿ ಆರೋಪಿಸಿದೆ. ಕೇಜ್ರಿವಾಲ್ ಮತ್ತು ಇತರ ಪ್ರಮುಖ ಆಮ್ ಆದ್ಮಿ ಪಾರ್ಟಿ ನಾಯಕರಿಗೆ ಕೇಂದ್ರ ಸರ್ಕಾರ ತನ್ನ ಏಜೆನ್ಸಿಗಳನ್ನು ಬಳಸಿಕೊಂಡು ಸುಳ್ಳು ಪ್ರಕರಣಗಳನ್ನು ದಾಖಲಿಸಿ ಕಿರುಕುಳ ನೀಡುತ್ತಿದೆ ಎಂದು ಪಕ್ಷದ ನಾಯಕರು ಆರೋಪಿಸಿದ್ದಾರೆ.

ಇದನ್ನೂ ಓದಿ: Arvind Kejriwal: ಪ್ಯಾಂಟ್‌ ಲೂಸ್‌ ಆಗಿದೆ, ಒಂದು ಬೆಲ್ಟ್‌ ಕೊಡಿ; ಕೋರ್ಟ್‌ಗೆ ಅರವಿಂದ್‌ ಕೇಜ್ರಿವಾಲ್‌ ಮನವಿ‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Dengue fever: ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಿದ ರಾಜ್ಯ ಸರ್ಕಾರ

Dengue fever: ಡೆಂಗ್ಯೂ ಪರೀಕ್ಷೆಗೆ ದುಪ್ಪಟ್ಟು ಹಣ ವಸೂಲಿಯಾಗುತ್ತಿದೆ ಎಂಬ ಬಗ್ಗೆ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ನಿಗದಿಗಿಂತ ಹೆಚ್ಚು ಹಣ ಸ್ವೀಕರಿಸದಂತೆ ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

VISTARANEWS.COM


on

Dengue fever
Koo

ಬೆಂಗಳೂರು: ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಡೆಂಗ್ಯೂ ಜ್ವರ ಪತ್ತೆಗೆ ಎರಡು ರೀತಿಯ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಈ ಪರೀಕ್ಷೆಗಳಿಗೆ ಒಟ್ಟು 600 ರೂ. ನಿಗದಿಪಡಿಸಲು ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲೇ ಈ ಸಂಬಂಧ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ.

ಡೆಂಗ್ಯೂ ಜ್ವರ ಪತ್ತೆಗೆ ಎರಡು ಮಾದರಿಯ ಪರೀಕ್ಷೆ ನಡೆಸಲಾಗುತ್ತದೆ. ತಲಾ 300 ರೂ.ನಂತೆ ಒಟ್ಟು 600 ರೂ. ದರವನ್ನು ನಿಗದಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಈ ಸಂದರ್ಭವನ್ನು ಬಳಸಿಕೊಂಡು ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಪರೀಕ್ಷೆಗೆ ದುಪ್ಪಟ್ಟು ಹಣ ವಸೂಲಿಯಾಗುತ್ತಿದೆ ಎಂಬ ಬಗ್ಗೆ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಪರೀಕ್ಷೆಗೆ ರಾಜ್ಯ ಸರ್ಕಾರ ದರ ನಿಗದಿ ಮಾಡಲು ಮುಂದಾಗಿದೆ.

ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ

ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಕೇಸ್ ರಿಪೋರ್ಟ್ ಮಾಡುತ್ತಿಲ್ಲ. ಕೆಪಿಎಂ ಆಕ್ಟ್ ಪ್ರಕಾರ ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಕೇಸ್ ರಿಪೋರ್ಟ್ ಮಾಡುವುದು ಕಡ್ಡಾಯ. IHIPಯಲ್ಲಿ ಅನೇಕ ಖಾಸಗಿ ಆಸ್ಪತ್ರೆಗಳು ಅಪ್ಲೋಡ್ ಮಾಡುತ್ತಿಲ್ಲ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ಖಾಸಗಿ ಆಸ್ಪತ್ರೆಯಲ್ಲಿ ಡೆಂಗ್ಯು ತಪಾಸಣೆಗೆ ದರ ನಿಗದಿ ಮಾಡುವ ಬಗ್ಗೆ ಚರ್ಚೆ ಮಾಡಿಲ್ಲ. ಆ ಬಗ್ಗೆ ಮುಂದೆ ಚರ್ಚೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಮಂಗಳವಾರ ತಿಳಿಸಿದ್ದರು.

ನಮ್ಮ ವೆಬ್‌ಸೈಟಿನಲ್ಲಿ ಡೆಂಗ್ಯೂ ಬುಲೆಟಿನ್ ಬಿಡುಗಡೆ ಮಾಡುತ್ತೇವೆ. ಪ್ರತಿ ದಿನ ಎಷ್ಟು ಕೇಸ್ ಬಂದಿದೆ ಎನ್ನುವ ಮಾಹಿತಿ ಹಾಕುತ್ತೇವೆ. ದಿನ ನಿತ್ಯ ಡೆಂಗ್ಯೂ ಬುಲೆಟಿನ್ ಕೊಡಲಾಗುತ್ತದೆ. ಬೆಂಗಳೂರು ನಗರದಲ್ಲಿ ಬಿಬಿಎಂಪಿ ಎಲ್ಲಾ ಮನೆಗಳ ಸರ್ವೆ ಮಾಡುತ್ತಿದೆ. ಸೂಕ್ಷ್ಮ ಪ್ರದೇಶಗಳು ಮಾತ್ರವಲ್ಲ ಎಲ್ಲಾ ಮನೆಗಳ ಸರ್ವೆ ನಡೆಸಲು ನಾನು ಬಿಬಿಎಂಪಿಗೆ ಸೂಚನೆ ನೀಡಿದ್ದೇನೆ. ಮನೆ ಮನೆಗೆ ಭೇಟಿ ಕೊಡಲು ಸೂಚಿಸಿದ್ದೇನೆ. ರಾಜ್ಯಾದ್ಯಂತ ಡೆಂಗ್ಯೂ ಬಗ್ಗೆ ಕಟ್ಟೆಚ್ಚರ ವಹಿಸಲು ಸೂಚನೆ ಕೊಡಲಾಗಿದೆ. ಪ್ರತಿ ಶುಕ್ರವಾರ ಡೆಂಗ್ಯೂ ವಿಚಾರದಲ್ಲಿ ಫೀಲ್ಡ್‌ನಲ್ಲಿ ಇದ್ದು, ಮಾನಿಟರ್ ಮಾಡಲು ಸೂಚಿಸಿದ್ದೇನೆ. ಪ್ರತಿ ಶುಕ್ರವಾರ ಮನೆ ಮನೆ ಸಮೀಕ್ಷೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದ್ದರು.

ಇದನ್ನೂ ಓದಿ | Dengue Fever: ಮಳೆಗಾಲ ಬರುತ್ತಿದೆ! ಡೆಂಗ್ಯೂ ಬಗ್ಗೆ ಇರಲಿ ಎಚ್ಚರಿಕೆ!

ಹೊಳೆನರಸೀಪುರದಲ್ಲಿ ಡೆಂಗ್ಯೂ ಜ್ವರದಿಂದ ಬಾಲಕಿ ಸಾವು

ಹಾಸನ: ಮಾರಕ ಡೆಂಗ್ಯೂ ಜ್ವರಕ್ಕೆ ಮತ್ತೊಬ್ಬ ಬಾಲಕಿ ಬಲಿಯಾಗಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ
ತಾಲೂಕಿನ ಗುಡ್ಡೇನಹಳ್ಳಿಯಲ್ಲಿ ನಡೆದಿದೆ. ಕಲಾಶ್ರೀ ಜಿ.ಎಲ್. (11) ಮೃತಪಟ್ಟ ಬಾಲಕಿ.

ಗುಡ್ಡೇನಹಳ್ಳಿ ಗ್ರಾಮದ ಲೋಕೇಶ್ ತನುಜ ದಂಪತಿಗಳ ಪುತ್ರಿ ಕಲಾಶ್ರೀ ಜಿ.ಎಲ್. ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದಳು. ಆಕೆಗೆ ಹೊಳೆನರಸೀಪುರ ಪಟ್ಟಣದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹಿಮ್ಸ್ ಆಸ್ಪತ್ರೆಗೆ ಶನಿವಾರ ಸಂಜೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾಳೆ. ಇದರಿಂದ ಒಂದು ವಾರದಲ್ಲಿ ಡೆಂಗ್ಯೂ ಜ್ವರಕ್ಕೆ ಇಬ್ಬರು ಹೆಣ್ಣುಮಕ್ಕಳು ಬಲಿಯಾದಂತಾಗಿದೆ.

ಇದನ್ನೂ ಓದಿ | Dengue fever: ಮಾರಕ ಡೆಂಗ್ಯು ಜ್ವರಕ್ಕೆ ಬಾಲಕಿ ಬಲಿ

ಜೂ.28 ರಂದು ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರು ಗ್ರಾಮದ ಕುಮಾರ್ ಎಂಬುವರ ಪುತ್ರಿ ವರ್ಷಿಕ (8) ಮೃತಪಟ್ಟಿದ್ದಳು. ಅತಿಯಾದ ಜ್ವರದಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ವರ್ಷಿಕ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆದಿದ್ದಳು.

Continue Reading

Latest

Viral Video: ಸಾವು ಹೇಗೆಲ್ಲ ಹೊಂಚು ಹಾಕುತ್ತದೆ! ಈ ವಿಡಿಯೊ ನೋಡಿ

ಉತ್ತರ ಪ್ರದೇಶದ ಮಹೋಬಾದಲ್ಲಿ ಸಂಬಂಧಿಕರ ಮನೆಯಲ್ಲಿ ಧಾರ್ಮಿಕ ಸಮಾರಂಭ ನಡೆಯುತ್ತಿದ್ದ ಹಿನ್ನಲೆಯಲ್ಲಿ ಸಮಾರಂಭಕ್ಕೆ ಆಗಮಿಸಿದ್ದ ದೇವೇಂದ್ರ ಎಂಬ ವ್ಯಕ್ತಿ ಆಚರಣೆಯ ಅಂಗವಾಗಿ ಧ್ವಜವನ್ನು ಕಟ್ಟಲು ಬಿದಿರಿನ ಕೋಲನ್ನು ತೆಗೆದುಕೊಂಡು ಬಂದಿದ್ದಾರೆ. ಆಗ ಮನೆಯ ಮೇಲಿದ್ದ ವಿದ್ಯುತ್ ತಂತಿಗೆ ಕೋಲು ತಗುಲಿ ಶಾಕ್ ಹೊಡೆದು ಕೆಳಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

VISTARANEWS.COM


on

Viral Video
Koo

ಹೈ ವೋಲ್ಟೇಜ್ ವಿದ್ಯುತ್ ತಂತಿ ಹಾದುಹೋಗಿರುವ ಕೆಲವೊಂದು ಸ್ಥಳಗಳಲ್ಲಿ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಆ ಸ್ಥಳದಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಂತಿಗಳ ಸಂಪರ್ಕಕ್ಕೆ ಬರದಂತೆ ನೋಡಿಕೊಂಡು ಕೆಲಸ ಮಾಡಬೇಕು. ಇಲ್ಲವಾದರೆ ಇದರಿಂದ ಜೀವಕ್ಕೇ ಅಪಾಯವಾಗಬಹುದು. ಇದೀಗ ಅಂಹತದೊಂದು ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸಂಬಂಧಿಕರ ಮನೆಯಲ್ಲಿ ಧಾರ್ಮಿಕ ಸಮಾರಂಭ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಸಮಾರಂಭಕ್ಕೆ ಬೇಕಾದ ತಯಾರಿ ಮಾಡಲು ಬಿದಿರಿನ ಕೋಲನ್ನು ಸಾಗಿಸುತ್ತಿದ್ದ ವ್ಯಕ್ತಿ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವಿದ್ಯುತ್ ಶಾಕ್‌ನಿಂದ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಮಹೋಬಾದಲ್ಲಿ ನಡೆದಿದ್ದು, ಈ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್(Viral Video) ಆಗಿದೆ.

ಮೃತ ವ್ಯಕ್ತಿ ಚಂದೋನ್ ಗ್ರಾಮದ ನಿವಾಸಿ 35 ವರ್ಷದ ದೇವೇಂದ್ರ ಎಂದು ಗುರುತಿಸಲಾಗಿದ್ದು, ವರದಿ ಪ್ರಕಾರ ದೇವೇಂದ್ರ ತನ್ನ ಸೋದರ ಸಂಬಂಧಿ ಸುವೇಂದ್ರ ಸಿಂಗ್ ಅವರ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಸೋಡಾ ನಗರಕ್ಕೆ ಬಂದಿದ್ದರು. ಘಟನೆಯ ಸಮಯದಲ್ಲಿ, ಅವರ ಕುಟುಂಬ ಸದಸ್ಯರು ದೇವಾಲಯಕ್ಕೆ ಹೋಗಲು ತಯಾರಿ ನಡೆಸುತ್ತಿದ್ದರು. ಕೆಲವರು ಪ್ರಸಾದ ತಯಾರಿಸುತ್ತಿದ್ದರೆ, ಇತರರು ದೇವಾಲಯದಲ್ಲಿ ಆಚರಣೆಗಳಿಗೆ ಬೇಕಾದ ತಯಾರಿ ನಡೆಸುತ್ತಿದ್ದರು. ಈ ನಡುವೆ, ದೇವೇಂದ್ರ ಆಚರಣೆಯ ಅಂಗವಾಗಿ ಧ್ವಜವನ್ನು ಕಟ್ಟಲು ಬಿದಿರಿನ ಕೋಲನ್ನು ತೆಗೆದುಕೊಂಡು ಬಂದಿದ್ದಾರೆ. ಆಗ ಮನೆಯ ಮೇಲಿದ್ದ ವಿದ್ಯುತ್ ತಂತಿಗೆ ಕೋಲು ತಗುಲಿ ಶಾಕ್ ಹೊಡೆದು ಕೆಳಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ವಿಡಿಯೊದಲ್ಲಿ ದೇವೆಂದ್ರ ಅವರು ತಮ್ಮ ಸಂಬಂಧಿಕರ ಸಮ್ಮುಖದಲ್ಲಿ ಬಿದಿರಿನ ಕೋಲನ್ನು ಹಿಡಿದುಕೊಂಡು ಮನೆಯೊಳಗೆ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ನಂತರ ದೇವೇಂದ್ರ ಬಲವಾದ ಆಘಾತದಿಂದ ಬಿದ್ದಾಗ ಅವರ ತಲೆ ಕಬ್ಬಿಣದ ಗೇಟ್‍ಗೆ ತಗುಲಿದೆ.. ಆಗ ಅವರ ಕುಟುಂಬ ಸದಸ್ಯರು ದೇವೇಂದ್ರ ಅವರ ಕೈ ಮತ್ತು ಕಾಲುಗಳನ್ನು ಮಸಾಜ್ ಮಾಡುವ ಮೂಲಕ ಸಹಾಯ ಮಾಡಿದರು. ಆದರೆ ಕೆಲವೇ ಸೆಕೆಂಡುಗಳಲ್ಲಿ ಅವರು ಸಾವನ್ನಪ್ಪಿದ್ದಾರೆ. ಅವರ ಕುಟುಂಬ ಸದಸ್ಯರು ತಿಳಿಸಿದ ಪ್ರಕಾರ, ಈ ಪ್ರದೇಶದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ, ಬಿದಿರಿನ ಕೋಲು ಒದ್ದೆಯಾಗಿತ್ತು. ಹಾಗಾಗಿ ದೇವೆಂದ್ರ ಅವರಿಗೆ ಕರೆಂಟ್ ಶಾಕ್ ತಗುಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ತಲೆ ಬೋಳಿಸಿಕೊಂಡು ರಾಮನಿಗೆ ಪೇಟ ಅರ್ಪಿಸಿದ ಬಿಹಾರ ಡಿಸಿಎಂ! ಇದಕ್ಕಿದೆ ವಿಶೇಷ ಕಾರಣ!

ದೇವೇಂದ್ರ ಅವರ ಸಂಬಂಧಿಕರು ತಮ್ಮ ಮನೆಯ ಮೇಲೆ ಹೈ ವೋಲ್ಟೇಜ್ ವಿದ್ಯುತ್ ತಂತಿ ಹಾದುಹೋಗಿರುವ ಬಗ್ಗೆ ದೂರು ನೀಡಿದ್ದರೂ ಪ್ರಾಧಿಕಾರವು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ. ಇಲಾಖೆ ಕ್ರಮ ಕೈಗೊಂಡಿದ್ದರೆ, ತಮ್ಮ ಪ್ರೀತಿಯ ದೇವೇಂದ್ರ ಜೀವಂತವಾಗಿರುತ್ತಿದ್ದರು ಎಂದು ಕುಟುಂಬ ಸದಸ್ಯರು ದುಃಖಿಸಿದ್ದಾರೆ.

Continue Reading

Latest

Sexual Harassment: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಅಶ್ಲೀಲ ವಿಡಿಯೊ ತೋರಿಸಿ ಲೈಂಗಿಕ ಕಿರುಕುಳ

Sexual Harassment: ಕಾಮ, ಕ್ರೋಧ, ಮೋಹ, ಮದ, ಮತ್ಸರ ಇವೆಲ್ಲವೂ ಅಂಕೆಯಲ್ಲಿದ್ದರೆ ಚೆನ್ನ. ಆದರೆ ಈಗ ಎಳೆಯ ಮಕ್ಕಳನ್ನು ಕೂಡ ಕಾಮುಕ ದೃಷ್ಟಿಯಲ್ಲಿ ನೋಡುವ ದುರಂತ ಕಾಲದಲ್ಲಿದ್ದೇವೆ. ರೈಲಿನಲ್ಲಿ ಅಜ್ಜಿಯೊಂದಿಗೆ ಪ್ರಯಾಣಿಸುತ್ತಿದ್ದ ಬಾಲಕಿಯೊಬ್ಬಳಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ. ವ್ಯಕ್ತಿಯೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಅಶ್ಲೀಲ ವಿಡಿಯೊಗಳನ್ನು ನೋಡುವಂತೆ ಒತ್ತಾಯಿಸಿದ್ದಲ್ಲದೇ ಅಸಭ್ಯ ಸನ್ನೆಗಳನ್ನು ಸಹ ಮಾಡಿ ಕಿರುಕುಳ ಕೊಟ್ಟಿದ್ದಾನೆ.

VISTARANEWS.COM


on

Sexual Harassment
Koo

ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣ ಆಗಾಗ ಕೇಳಿ ಬರುತ್ತಲೇ ಇದೆ. ಬಸ್,
ರೈಲುಗಳಲ್ಲಿ , ಹೋಟೆಲ್, ರೆಸ್ಟೋರೆಂಟ್, ಮಾಲ್‍ಗಳಂತಹ ಹೊರಗಿನ ಸ್ಥಳದಲ್ಲಿ ಮಾತ್ರವಲ್ಲ ಕೆಲವೊಮ್ಮೆ ಕೆಲವು ಮಹಿಳೆಯರು ತಮ್ಮ ಮನೆಯೊಳಗೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಾರೆ. ಒಟ್ಟಾರೆ ಹೆಣ್ಣು ಮಕ್ಕಳ ಮೇಲಿನ ಶೋಷಣೆ ಕಡಿಮೆಯಾಗುವುದಿಲ್ಲ. ಇದೀಗ ಮಧ್ಯಪ್ರದೇಶದ ಭೋಪಾಲ್‍ನಲ್ಲಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ (Sexual Harassment )ನೀಡಿದ ಘಟನೆ ಬೆಳಕಿಗೆ ಬಂದಿದೆ.

ಇಟಾರ್ಸಿಯಿಂದ ಭೋಪಾಲ್‍ಗೆ ತೆರಳುತ್ತಿದ್ದ ಮಂಗಳಾ ಎಕ್ಸ್‌ಪ್ರೆಸ್‌ನಲ್ಲಿ ಸೆಕೆಂಡ್ ಕ್ಲಾಸ್ ಎಸಿ ಕೋಚ್ ಎ -1 ರಲ್ಲಿ 14 ವರ್ಷದ ಬಾಲಕಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವುದಾಗಿ ವರದಿಯಾಗಿದೆ. ಬಾಲಕಿ ತನ್ನ ಅಜ್ಜಿಯ ಜೊತೆಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಳು. ಆಗ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿ ಅಶ್ಲೀಲ ವಿಡಿಯೊಗಳನ್ನು ನೋಡುವಂತೆ ಒತ್ತಾಯಿಸಿದ್ದಲ್ಲದೇ ಅಸಭ್ಯ ಸನ್ನೆಗಳನ್ನು ಸಹ ಮಾಡಿದ್ದಾನೆ. ಕಿರುಕುಳವನ್ನು ಸಹಿಸಲಾಗದೆ ಭಯಭೀತಳಾದ ಬಾಲಕಿ ತನ್ನ ಅಜ್ಜಿಗೆ ಮಾಹಿತಿ ನೀಡಿದ್ದಾಳೆ. ಬಾಲಕಿ ಈ ಘಟನೆಯ ಬಗ್ಗೆ ಸರ್ಕಾರಿ ರೈಲ್ವೆ ಪೊಲೀಸ್ (ಜಿ ಆರ್ ಪಿ) ನಿಯಂತ್ರಣ ಕೊಠಡಿಗೆ ವರದಿ ಮಾಡಿದ್ದಾಳೆ. ರೈಲು ಬೀನಾ ತಲುಪಿದಾಗ, ಜಿಆರ್‌ಪಿ ಅಧಿಕಾರಿಗಳು ಬಂದು, ತಕ್ಷಣದ ಕ್ರಮ ತೆಗೆದುಕೊಳ್ಳುವ ಬದಲು, ಎಫ್ಐಆರ್ ದಾಖಲಿಸಲು ರೈಲಿನಿಂದ ಇಳಿಯುವಂತೆ ಅವರು ಹುಡುಗಿಗೆ ಸೂಚಿಸಿದರು. ಆದರೆ ಅವಳು ಅದಕ್ಕೆ ನಿರಾಕರಿಸಿದಳು.

ಕೊನೆಗೆ ಬಾಲಕಿ ಗ್ವಾಲಿಯರ್‌ಗೆ ಬಂದು ತನ್ನ ತಂದೆಯನ್ನು ಭೇಟಿಯಾಗಿ ಅವರ ಜೊತೆ ಗ್ವಾಲಿಯರ್‌ನ ಜಿಆರ್‌ಪಿ ಠಾಣೆಯಲ್ಲಿ ಸೆಕ್ಷನ್ 74 ಬಿಎನ್ಎಸ್ 11/12 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾಳೆ. ರಾಣಿ ಕಮಲಾಪತಿ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದರಿಂದ ಪ್ರಕರಣವನ್ನು ದಾಖಲಿಸಿಕೊಂಡ ಗ್ವಾಲಿಯರ್‌ನ ಜಿರ್‌ಪಿ ಠಾಣೆ ಮುಂದಿನ ಕ್ರಮಕ್ಕಾಗಿ ರಾಣಿ ಕಮಲಪತಿ ಠಾಣೆಯ ಜಿಆರ್‌ಪಿಗೆ ವರ್ಗಾಯಿಸಿದೆ ಎನ್ನಲಾಗಿದೆ.

ಇದನ್ನೂ ಓದಿ: ಸಾಮೂಹಿಕ ವಿವಾಹದಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ಅಂಬಾನಿ ಕುಟುಂಬ

ಲೈಂಗಿಕ ಕಿರುಕುಳ ಬಾಲಕಿಯರ ಮೇಲೆ ಮಾತ್ರ ನಡೆಯುತ್ತಿಲ್ಲ. ಈ ವರ್ಷದ ಮೇ ತಿಂಗಳಿನಲ್ಲಿ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುವಾಗ ತಾನು ಲೈಂಗಿಕ ದೌರ್ಜನ್ಯವನ್ನು ಎದುರಿಸಿದ್ದೇನೆ ಎಂದು 16 ವರ್ಷದ ಬಾಲಕನೊಬ್ಬ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಅದು ಸಖತ್ ವೈರಲ್ ಆಗಿತ್ತು. ಸಮಯ್ ಪುರ್ ಬದ್ಲಿ ಕಡೆಗೆ ಹೋಗುತ್ತಿದ್ದ ರಾಜೀವ್ ಚೌಕ್ ಮೆಟ್ರೋ ನಿಲ್ದಾಣದಲ್ಲಿ ರೈಲು ಹತ್ತಿದ ನಂತರ ತನ್ನ ಸಹ ಪ್ರಯಾಣಿಕರು ತನ್ನ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದಾರೆ ಎಂದಾತ ದೂರಿದ್ದ.

Continue Reading

ದೇಶ

ಬೇರೆ ಹುಡುಗಿಗೆ ಮೋಸ ಆಗಬಾರದು; ಮದುವೆಯಾಗಲ್ಲ ಎಂದ ಗೆಳೆಯನ ಗುಪ್ತಾಂಗ ಕತ್ತರಿಸಿದ ಯುವತಿ! Video ಇದೆ

ಬಿಹಾರದ ಸರಣ್‌ ಜಿಲ್ಲೆಯಲ್ಲಿ ವೃತ್ತಿಯಲ್ಲಿ ವೈದ್ಯೆಯಾಗಿರುವ ಯುವತಿಯು ಗೆಳೆಯನ ಗುಪ್ತಾಂಗವನ್ನೇ ಕತ್ತರಿಸಿದ್ದಾರೆ. ಜುಲೈ 1ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಮರ್ಹೌರಾ ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ನರ್ಸಿಂಗ್‌ ಹೋಮ್‌ನಲ್ಲಿಯೇ ಘಟನೆ ನಡೆದಿದೆ. ನರ್ಸಿಂಗ್‌ ಹೋಮ್‌ನಲ್ಲಿಯೇ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಯುವಕ-ಯುವತಿ ಮಧ್ಯೆ ವಾಗ್ವಾದ ನಡೆದಿದೆ. ಯುವಕನು ಮದುವೆಯಾಗಲು ಸುತಾರಾಂ ಒಪ್ಪದ ಕಾರಣ ಇಂತಹ ಕೃತ್ಯ ಎಸಗಿದ್ದಾಳೆ.

VISTARANEWS.COM


on

Woman Doctor
Koo

ಪಟನಾ: ಬಣ್ಣದ ಮಾತನಾಡಿ, ನೂರು ಕನಸು ಬಿತ್ತಿ, ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕವನ್ನೂ ಬೆಳೆಸಿ, ಕೊನೆಗೆ ಮೋಸ ಮಾಡುವ ಯುವಕರು ಹಾಗೂ ಯುವತಿಯರ ಸಂಖ್ಯೆ ಜಾಸ್ತಿ ಇದೆ. ಬ್ರೇಕಪ್‌ (Breakup) ಎಂದು ಒಂದೇ ಒಂದು ಮಾತಿನಲ್ಲಿ ಸಂಬಂಧವನ್ನು, ಪ್ರೀತಿಯನ್ನು ಕಡಿದುಕೊಳ್ಳುವವರ ಸಂಖ್ಯೆ ಜಾಸ್ತಿಯೇ ಆಗುತ್ತಿದೆ. ಹೀಗೆ, ಮದುವೆಯಾಗುವುದಾಗಿ ಭರವಸೆ ನೀಡಿ, ದೈಹಿಕ ಸಂಪರ್ಕ ಬೆಳೆಸಿ, ಕೊನೆಗೆ ಮದುವೆಯಾಗುವುದಿಲ್ಲ (Marriage) ಎಂದು ಹೇಳಿದ ಯುವಕನ ಮರ್ಮಾಂಗವನ್ನೇ ಲೇಡಿ ಡಾಕ್ಟರ್‌ ಒಬ್ಬರು ಕತ್ತರಿಸಿದ ಘಟನೆ ಬಿಹಾರದಲ್ಲಿ (Bihar) ನಡೆದಿದೆ.

ಹೌದು, ಸರಣ್‌ ಜಿಲ್ಲೆಯಲ್ಲಿ ವೃತ್ತಿಯಲ್ಲಿ ವೈದ್ಯೆಯಾಗಿರುವ ಯುವತಿಯು ಗೆಳೆಯನ ಗುಪ್ತಾಂಗವನ್ನೇ ಕತ್ತರಿಸಿದ್ದಾರೆ. ಜುಲೈ 1ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಮರ್ಹೌರಾ ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ನರ್ಸಿಂಗ್‌ ಹೋಮ್‌ನಲ್ಲಿಯೇ ಘಟನೆ ನಡೆದಿದೆ. ನರ್ಸಿಂಗ್‌ ಹೋಮ್‌ನಲ್ಲಿಯೇ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಯುವಕ-ಯುವತಿ ಮಧ್ಯೆ ವಾಗ್ವಾದ ನಡೆದಿದೆ. ಇದೇ ವೇಳೆ, ಮದುವೆಯಾಗುವುದಿಲ್ಲ ಎಂದು ಕಡ್ಡಿ ಮುರಿದ ಹಾಗೆ ಹೇಳಿದ ಗೆಳೆಯನ ಮೇಲೆ ದಾಳಿ ಮಾಡಿದ ಯುವತಿಯು, ಆತನ ಗುಪ್ತಾಂಗವನ್ನೇ ಕತ್ತರಿಸಿದ್ದಾರೆ.

ಘಟನೆಯ ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ, ಪರಿಸ್ಥಿತಿ ಗಂಭೀರವಾದ ಕಾರಣ ಪಟನಾದಲ್ಲಿರುವ ಸೃಷ್ಟಿ ಆಸ್ಪತ್ರೆಗೆ ಯುವಕನನ್ನು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಜುಲೈ 1ರಂದು ಛಪ್ರಾದಲ್ಲಿಯೇ ಯುವಕ-ಯುವತಿಯು ಮದುವೆಯಾಗಲು ತೀರ್ಮಾನಿಸಿದ್ದರು. ಸಿಂಪಲ್‌ ಆಗಿ ರಿಜಿಸ್ಟರ್‌ ಮದುವೆಯಾಗಲು ನಿರ್ಧರಿಸಿದ್ದರು. ನೂರು ಕನಸುಗಳನ್ನು ಇಟ್ಟುಕೊಂಡು ಯುವತಿಯು ಕಾಯುತ್ತಿದ್ದಳು. ಆದರೆ, ಏಕಾಏಕಿ ಮದುವೆಯಾಗುವುದಿಲ್ಲ ಎಂದು ಹೇಳಿದ ಕಾರಣ ಇಂತಹ ಕೃತ್ಯ ಎಸಗಿದ್ದಾಳೆ ಎಂದು ಹೇಳಲಾಗುತ್ತಿದೆ.

ಯುವತಿ ಹೇಳುವುದೇನು?

ಘಟನೆಯ ಬಳಿಕ ಯುವತಿಯನ್ನು ವಶಕ್ಕೆ ಪಡಿಸಿಕೊಂಡ ಪೊಲೀಸರು ವಿಚಾರಣೆ ನಡೆಸಿದ್ದಾರೆ. “ಇಬ್ಬರೂ ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದೆವು. ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ. ಮೂರು ಬಾರಿ ನನಗೆ ಗರ್ಭಪಾತ ಆಗಿದೆ. ಮದುವೆಯಾಗುವುದಾಗಿ ನಂಬಿಸಿ ಈಗ ಮೋಸ ಮಾಡಿದ್ದಾನೆ. ನನ್ನನ್ನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಾನೆ. ಬೇರೆ ಯುವತಿಯರಿಗೆ ಹೀಗೆ ಮೋಸ ಆಗಬಾರದು ಎಂದು ಇಂತಹ ಕೃತ್ಯ ಎಸಗಿದ್ದೇನೆ” ಎಂಬುದಾಗಿ ಯುವತಿ ಪೊಲೀಸರ ಎದುರು ಹೇಳಿರುವ ವಿಡಿಯೊ ಈಗ ವೈರಲ್‌ ಆಗಿದೆ.

ಇದನ್ನೂ ಓದಿ: Actor Darshan: ಪವಿತ್ರಾಗೆ ಮರ್ಮಾಂಗದ ಫೋಟೊ ಕಳುಹಿಸಿದ್ರಾ ರೇಣುಕಾಸ್ವಾಮಿ? ದರ್ಶನ್​ಗೆ ತಿಳಿದಿದ್ದು ಹೇಗೆ?

Continue Reading
Advertisement
Monsoon Jacket Styling Tips
ಫ್ಯಾಷನ್16 mins ago

Monsoon Jacket Styling Tips: ಮಳೆಗಾಲದ ಜಾಕೆಟ್‌ನಲ್ಲೂ ಸ್ಟೈಲಿಶ್‌ ಆಗಿ ಕಾಣಿಸುವುದು ಹೇಗೆ?

Dengue fever
ಕರ್ನಾಟಕ20 mins ago

Dengue fever: ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಿದ ರಾಜ್ಯ ಸರ್ಕಾರ

mamatheya thottilu inauguration programme at gangavathi
ಕರ್ನಾಟಕ22 mins ago

Koppala News: ʼಮಮತೆಯ ತೊಟ್ಟಿಲುʼವಿನ 4 ಅನಾಥ ಮಕ್ಕಳು ವಿದೇಶಿ ದಂಪತಿಗಳ ಮಡಿಲಿಗೆ!

Viral Video
Latest31 mins ago

Viral Video: ಸಾವು ಹೇಗೆಲ್ಲ ಹೊಂಚು ಹಾಕುತ್ತದೆ! ಈ ವಿಡಿಯೊ ನೋಡಿ

Viral Video
ವೈರಲ್ ನ್ಯೂಸ್36 mins ago

Viral Video: ವಿಮಾನದಲ್ಲಿ ದಢೂತಿ ಹೆಂಗಸಿನ ಡ್ಯಾನ್ಸ್‌! ನಗಲಾರದೆ ಅಳಲಾರದೆ ತೊಳಲಾಡಿದ ಪ್ರಯಾಣಿಕರು!

OTT Releases
ಸಿನಿಮಾ45 mins ago

OTT Releases: ಒಟಿಟಿಯಲ್ಲಿ ಈ ವಾರ ಮಿರ್ಜಾಪುರ ಸೀಸನ್ 3 ಸೇರಿದಂತೆ ಹಲವು ಸಿನಿಮಾ, ಸಿರೀಸ್‌ಗಳು!

Sexual Harassment
Latest52 mins ago

Sexual Harassment: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಅಶ್ಲೀಲ ವಿಡಿಯೊ ತೋರಿಸಿ ಲೈಂಗಿಕ ಕಿರುಕುಳ

Woman Doctor
ದೇಶ1 hour ago

ಬೇರೆ ಹುಡುಗಿಗೆ ಮೋಸ ಆಗಬಾರದು; ಮದುವೆಯಾಗಲ್ಲ ಎಂದ ಗೆಳೆಯನ ಗುಪ್ತಾಂಗ ಕತ್ತರಿಸಿದ ಯುವತಿ! Video ಇದೆ

Designer Hairpins Fashion
ಫ್ಯಾಷನ್1 hour ago

Designer Hairpins Fashion: ಗ್ರ್ಯಾಂಡ್‌ ಲುಕ್‌ಗೆ ಸಾಥ್‌ ನೀಡುವ ಡಿಸೈನರ್‌ ಹೇರ್‌ಪಿನ್ಸ್

Amritpal Singh
ದೇಶ2 hours ago

Amritpal Singh: ಜೈಲಿನಲ್ಲಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತ್‌ಪಾಲ್‌ ಸಿಂಗ್‌ಗೆ ಪೆರೋಲ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌