Special Status: ಎನ್‌ಡಿಎಗೆ ಮೈತ್ರಿಗೆ ಮೊದಲ ಅಗ್ನಿ ಪರೀಕ್ಷೆ; ವಿಶೇಷ ಸ್ಥಾನಮಾನಕ್ಕೆ ಜೆಡಿಯು ನಿರ್ಣಯ - Vistara News

ದೇಶ

Special Status: ಎನ್‌ಡಿಎಗೆ ಮೈತ್ರಿಗೆ ಮೊದಲ ಅಗ್ನಿ ಪರೀಕ್ಷೆ; ವಿಶೇಷ ಸ್ಥಾನಮಾನಕ್ಕೆ ಜೆಡಿಯು ನಿರ್ಣಯ

Special Status: ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷದ ಮುಖಂಡರು ಬಿಹಾರದ ಆರ್ಥಿಕ ಮತ್ತು ಅಭಿವೃದ್ಧಿ ಕೊರತೆಗಳನ್ನು ಉಲ್ಲೇಖಿಸಿದ್ದು, ವಿಶೇಷ ಸ್ಥಾನಮಾನ ನೀಡಬೇಕು ಎಂಬ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸುವ ಅಗತ್ಯವನ್ನು ಪ್ರತಿಪಾದಿಸಿದೆ. ಬಿಹಾರ ಸಂಪುಟದಲ್ಲಿ ಕಳೆದ ವರ್ಷ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂಬಂಧ ನಿರ್ಣಯ ಅಂಗೀಕರಿಸಲಾಗಿತ್ತು.

VISTARANEWS.COM


on

Special Status
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಾಟ್ನಾ: ಈ ಬಾರಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ(NDA Government) ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಜೆಡಿಯು(JDU) ಇದೀಗ ಕೇಂದ್ರ ಸರ್ಕಾರದ ಎದುರು ತನ್ನ ದಶಕದ ಬೇಡಿಕೆಯನ್ನಿಡಲು ಶತ ಪ್ರಯತ್ನ ಮಾಡುತ್ತಿದೆ. ಇದರ ಭಾಗವಾಗಿ ಇಂದು ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ದಶಕದ ಬೇಡಿಕೆಯಾಗಿರುವ ಬಿಹಾರಕ್ಕೆ ವಿಶೇಷ ಸ್ಥಾನಮಾನದ(Special Status) ನಿರ್ಣಯವನ್ನು ಅಂಗೀಕಾರ ಮಾಡಲಾಗಿದೆ.

ಸಭೆಯಲ್ಲಿ, ರಾಜ್ಯಸಭಾ ಸದಸ್ಯ ಸಂಜಯ್ ಝಾ ಅವರನ್ನು ಜೆಡಿಯುನ ಹೊಸ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಯಿತು. ಅಲ್ಲದೆ ಜೆಡಿಯು ಎನ್‌ಡಿಎನಲ್ಲಿಯೇ ಉಳಿಯಲು ನಿರ್ಧರಿಸಲಾಯಿತು. NEET-UG ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದ್ದು, ಪೇಪರ್ ಸೋರಿಕೆ ತಡೆಯಲು ಕಠಿಣ ಕಾನೂನುಗಳನ್ನು ಜಾರಿಗೆ ತರಬೇಕು ಎಂಬ ಬೇಡಿಕೆಯನ್ನು ಜೆಡಿಯು ನಾಯಕರು ಮುಂದಿಟ್ಟರು.

ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷದ ಮುಖಂಡರು ಬಿಹಾರದ ಆರ್ಥಿಕ ಮತ್ತು ಅಭಿವೃದ್ಧಿ ಕೊರತೆಗಳನ್ನು ಉಲ್ಲೇಖಿಸಿದ್ದು, ವಿಶೇಷ ಸ್ಥಾನಮಾನ ನೀಡಬೇಕು ಎಂಬ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸುವ ಅಗತ್ಯವನ್ನು ಪ್ರತಿಪಾದಿಸಿದೆ. ಬಿಹಾರ ಸಂಪುಟದಲ್ಲಿ ಕಳೆದ ವರ್ಷ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂಬಂಧ ನಿರ್ಣಯ ಅಂಗೀಕರಿಸಲಾಗಿತ್ತು.

ಕಾರ್ಯಾಧ್ಯಕ್ಷರಾಗಿ ನೇಮಕವಾದ ನಂತರ ಮಾತನಾಡಿರುವ ಝಾ, ಪ್ರಧಾನಿ ನರೇಂದ್ರ ಮೋದಿ ಯಾವಾಗಲೂ ಬಿಹಾರದತ್ತ ಹೆಚ್ಚು ಗಮನ ಹರಿಸುತ್ತಾರೆ. ರಾಜ್ಯಕ್ಕೆ ವಿಶೇಷ ವರ್ಗದ ಸ್ಥಾನಮಾನ ಅಥವಾ ಪ್ಯಾಕೇಜ್‌ಗಾಗಿ ಪಕ್ಷದ ಬೇಡಿಕೆಯನ್ನು ಈಡೇರಿಸುತ್ತಾರೆ ಎಂಬ ಭರವಸೆ ಇದೆ. ಜೆಡಿಯು ಯಾವಾಗಲೂ ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವುದಾಗಿ ಘೋಷಿಸಿದ್ದಾರೆ. ರಾಜ್ಯಸಭಾ ಸಂಸದ ಸಂಜಯ್‌ ಝಾ ಅವರನ್ನು ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ನಾವು ವಿಶೇಷ ಸ್ಥಾನಮಾನ ಮತ್ತು ಆರ್ಥಿಕ ಪ್ಯಾಕೇಜ್‌ಗಾಗಿ ಹೋರಾಟ ಮುಂದುವರಿಸುತ್ತೇವೆ ಎಂದಿದ್ದಾರೆ.

ಬಿಜೆಪಿ ಕಗ್ಗಂಟು

ಜೆಡಿಯುನ ಈ ಬೇಡಿಕೆ ಬಿಜೆಪಿಗೆ ಭಾರೀ ಕಗ್ಗಂಟಾಗಿ ಪರಿಣಮಿಸಲಿದೆ. ಒಂದು ವೇಳೆ ಬಿಹಾರದ ಈ ಬೇಡಿಕೆಯನ್ನು ಈಡೇರಿಸಿದರೂ, ಮತ್ತೊಂದೆಡೆ ಎನ್‌ಡಿಎಗೆ ಅನಿವಾರ್ಯವಾಗಿರುವ ಆಂಧ್ರ ಪ್ರದೇಶದ ತೆಲುಗು ದೇಶಂ ಪಕ್ಷದ ಬೆಂಬಲ ಉಳಿಸಿಕೊಳ್ಳಲು ಅದರ ಬೇಡಿಕೆಯನ್ನು ಕೂಡ ಈಡೇರಿಸಬೇಕಾಗುತ್ತದೆ. ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಕೂಡ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂಬ ಬೇಡಿಕೆಯನ್ನು ಇರಿಸಿದ್ದಾರೆ.

ಬಿಹಾರ ಸರ್ಕಾರ ಕಳೆದ ವರ್ಷ ಮೀಸಲಾತಿ ಪ್ರಮಾಣವನ್ನು ಶೇ. 50ರಿಂದ ಶೇ. 65ಕ್ಕೆ ಹೆಚ್ಚಿಸಿತ್ತು. ಸರ್ಕಾರದ ಈ ಆದೇಶವನ್ನು ಪಾಟ್ನಾ ಹೈಕೋರ್ಟ್ (Patna High Court)​ ರದ್ದುಗೊಳಿಸಿದೆ. ರಾಜ್ಯವ್ಯಾಪಿ ಜಾತಿ ಸಮೀಕ್ಷೆ ನಡೆಸಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಪ್ರಮಾಣವನ್ನು ಕಳೆದ ವರ್ಷ ಹೆಚ್ಚಿಸಲಾಗಿತ್ತು. ರಾಜ್ಯ ಸರ್ಕಾರದ ಈ ಕ್ರಮವು ಸುಪ್ರೀಂ ಕೋರ್ಟ್ ಆದೇಶಿಸಿದ ಮೀಸಲಾತಿಯ ಶೇ. 50 ರ ಮಿತಿಯನ್ನು ಮೀರಿದೆ. ಹೀಗಾಗಿ ಪಾಟ್ನಾ ಹೈಕೋರ್ಟ್‌ ಇದನ್ನು ಸಂವಿಧಾನ ಬಾಹಿರ ಎಂದು ಕರೆದಿದೆ.

2023ರ ನವೆಂಬರ್‌ನಲ್ಲಿ ನಿತೀಶ್ ಕುಮಾರ್ ನೇತೃತ್ವ ಸರ್ಕಾರ ಜಾರಿಗೆ ತಂದ ಕಾನೂನನ್ನು ವಿರೋಧಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ನೇತೃತ್ವದ ವಿಭಾಗೀಯ ಪೀಠ ಈ ಆದೇಶವನ್ನು ಹೊರಡಿಸಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಬಿಹಾರ ವಿಧಾನಸಭೆ ಮೀಸಲಾತಿ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಿದ ಕೆಲವು ದಿನಗಳ ನಂತರ, ನಿತೀಶ್ ಕುಮಾರ್ ಸರ್ಕಾರವು ರಾಜ್ಯ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ಮಿತಿಯನ್ನು ಶೇ. 50ರಿಂದ ಶೇ. 65 ಕ್ಕ ಹೆಚ್ಚಿಸಲು ಗೆಜೆಟ್ ಅಧಿಸೂಚನೆಗಳನ್ನು ಹೊರಡಿಸಿತ್ತು.

ಇದನ್ನೂ ಓದಿ: Bulldozer: ‌ಉತ್ತರ ಪ್ರದೇಶದಲ್ಲಿ ಮತ್ತೆ ಬುಲ್ಡೋಜರ್‌ ಸದ್ದು; ರಸ್ತೆಯಲ್ಲಿ ಗುಂಡು ಹಾರಿಸಿದವರ ಹೋಟೆಲ್ ಧ್ವಂಸ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

LK Advani: ಎಲ್‌ ಕೆ ಅಡ್ವಾಣಿ ಆರೋಗ್ಯದಲ್ಲಿ ಮತ್ತೆ ಏರುಪೇರು; ಆಸ್ಪತ್ರೆಗೆ ದಾಖಲು

LK Advani: ರಾತ್ರಿ 9 ಗಂಟೆ ಸುಮಾರಿಗೆ ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಇದಾದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. 96 ವರ್ಷದ ಎಲ್‌.ಕೆ.ಅಡ್ವಾಣಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಜೂನ್‌ 27ರಂದು ಕೂಡ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಸದ್ಯದ ಮಟ್ಟಿಗೆ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

VISTARANEWS.COM


on

LK Advani
Koo

ನವದೆಹಲಿ: ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ (L K Advani) ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ದೆಹಲಿಯಲ್ಲಿರುವ ಅಪೋಲೊ ಆಸ್ಪತ್ರೆಗೆ (Apollo Hospital) ದಾಖಲಿಸಲಾಗಿದೆ. ಅಪೋಲೊ ಆಸ್ಪತ್ರೆಯ ವೈದ್ಯರು ಎಲ್‌.ಕೆ.ಅಡ್ವಾಣಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಹೆಚ್ಚಿನ ನಿಗಾ ವಹಿಸಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಮಾಜಿ ಉಪ ಪ್ರಧಾನಿಯ ಆರೋಗ್ಯವು ಸ್ಥಿರವಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿದುಬಂದಿದೆ.

ಬುಧವಾರ (ಜುಲೈ 3) ರಾತ್ರಿ 9 ಗಂಟೆ ಸುಮಾರಿಗೆ ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಇದಾದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. 96 ವರ್ಷದ ಎಲ್‌.ಕೆ.ಅಡ್ವಾಣಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಜೂನ್‌ 27ರಂದು ಕೂಡ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಹಾಗಾಗಿ ಅವರನ್ನು ಅದೇ ರಾತ್ರಿ ದೆಹಲಿಯಲ್ಲಿರುವ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಅವರನ್ನು ಡಿಸ್‌ಚಾರ್ಜ್‌ ಮಾಡಲಾಗಿತ್ತು.

ಕಳೆದ ತಿಂಗಳ ಆರಂಭದಲ್ಲಿ, ಸರ್ಕಾರ ರಚನೆಗೆ ಹಕ್ಕು ಸಾಧಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಅಡ್ವಾಣಿಯವರನ್ನು ಭೇಟಿ ಮಾಡಿದ್ದರು. ಗಾಂಧಿನಗರದ ಮಾಜಿ ಸಂಸದರಾದ ಅಡ್ವಾಣಿ, ಮೋದಿಯವರ ರಾಜಕೀಯ ಮಾರ್ಗದರ್ಶಕರಾಗಿದ್ದಾರೆ.

ಅಡ್ವಾಣಿ ಅವರಿಗೆ ಈ ವರ್ಷದ ಮಾರ್ಚ್‌ನಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ನೀಡಲಾಗಿತ್ತು. ಅವರ ನಿವಾಸದಲ್ಲಿಯೇ ಈ ಅತ್ಯುನ್ನತ ನಾಗರಿಕ ಗೌರವವನ್ನು ಸಲ್ಲಿಸಲಾಗಿತ್ತು. ರಾಷ್ಟ್ರಪತಿ ದ್ರೌಪದಿ ಮುರ್ಮು ಇದನ್ನು ಕೊಡಮಾಡಿದ್ದರು. ಔಪಚಾರಿಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಎಲ್ ಕೆ ಅಡ್ವಾಣಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

ಎಲ್‌ಕೆ ಅಡ್ವಾಣಿ ಅವರು ಜೂನ್ 2002ರಿಂದ ಮೇ 2004 ರವರೆಗೆ ಭಾರತದ ಉಪ ಪ್ರಧಾನ ಮಂತ್ರಿಯಾಗಿ, ಅಕ್ಟೋಬರ್ 1999 ರಿಂದ ಮೇ 2004 ರವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದರು. ಅವರು 1986 ರಿಂದ 1990, 1993 ರಿಂದ 1998 ಮತ್ತು 2004 ರಿಂದ 2005ರವರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು.

ಇದನ್ನೂ ಓದಿ: Narendra Modi: ಪ್ರಮಾಣವಚನಕ್ಕೂ ಮೊದಲು ಅಡ್ವಾಣಿಯ ಆಶೀರ್ವಾದ ಪಡೆದ ನರೇಂದ್ರ ಮೋದಿ!

Continue Reading

ವೈರಲ್ ನ್ಯೂಸ್

Viral Video: ಸರ್ಕಾರಿ ಕಚೇರಿಯಲ್ಲಿ ಡ್ಯಾನ್ಸ್‌ ಮಾಡಿ ರೀಲ್ಸ್; 8 ನೌಕರರಿಗೆ ನೋಟಿಸ್‌ ಬಿಸಿ!

ಕೇರಳದ ಪಟ್ಟನಂತಿಟ್ಟ ಜಿಲ್ಲೆಯ ತಿರುವಲ್ಲಾ ಪುರಸಭೆ ಪಾಲಿಕೆ ಕಚೇರಿಯಲ್ಲಿ ರೀಲ್ಸ್ ಮಾಡಿರುವ ನೌಕರರು ಬಳಿಕ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು. ಇದು ಭಾರೀ ವೈರಲ್ (Viral Video) ಆಗಿತ್ತು. ರೀಲ್ಸ್ ನಲ್ಲಿ ಕಾಣಿಸಿಕೊಂಡಿರುವ ಎಲ್ಲ ನೌಕರರಿಗೆ ಮೂರು ದಿನಗಳ ಬಳಿಕ ನೋಟಿಸ್‌ ಜಾರಿಗೊಳಿಸಲಾಗಿದೆ.

VISTARANEWS.COM


on

By

Viral Video
Koo

ತಿರುವನಂತಪುರಂ: ನೌಕರರು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಮಾಡಿದ ಬಳಿಕ ಹಿರಿಯ ಅಧಿಕಾರಿಯ ಕೆಂಗಣ್ಣಿಗೆ ಗುರಿಯಾದ ಘಟನೆ ಕೇರಳದಲ್ಲಿ (kerala) ನಡೆದಿದೆ. ಪಟ್ಟನಂತಿಟ್ಟ ಜಿಲ್ಲೆಯ (Pathanamthitta district) ತಿರುವಲ್ಲಾ ಪುರಸಭೆ ಪಾಲಿಕೆ ಕಾರ್ಯದರ್ಶಿ ಅವರು ಇದೀಗ ಎಂಟು ಮಂದಿ ನೌಕರರಿಗೆ ಶೋಕಾಸ್ ನೋಟಿಸ್‌ (notice) ಜಾರಿಗೊಳಿಸಿದ್ದಾರೆ.

ಸರ್ಕಾರಿ ಕಚೇರಿಯಲ್ಲಿ ರೀಲ್ಸ್ ಮಾಡಿರುವ ನೌಕರರು ಬಳಿಕ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಇದು ವೈರಲ್ ಆಗಿದ್ದು, ಮೂರು ದಿನಗಳ ಬಳಿಕ ರೀಲ್ಸ್ ನಲ್ಲಿ ಕಾಣಿಸಿಕೊಂಡಿರುವ ಎಲ್ಲ ನೌಕರರಿಗೆ ನೊಟೀಸ್ ಜಾರಿ ಗೊಳಿಸಲಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ನೌಕರರು ಕಚೇರಿಯಲ್ಲಿ ಹಾಡುವುದು ಮತ್ತು ನೃತ್ಯ ಮಾಡುವುದು ಸೆರೆಯಾಗಿದೆ. ಪುರಸಭೆ ಉದ್ಯೋಗಿಗಳು ರೀಲ್ಸ್ ಗಾಗಿ ಮೊದಲು ಸ್ಕ್ರಿಪ್ಟ್ ಸಿದ್ಧಪಡಿಸಿ ಬಳಿಕ ಅದನ್ನು ಕಚೇರಿಯಲ್ಲಿ ವಿಡಿಯೋ ಮಾಡಿದ್ದಾರೆ. ಹಾಡು ಮತ್ತು ನೃತ್ಯದ ಸಂಯೋಜನೆ ಇದರಲ್ಲಿದೆ. ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಕೂಡಲೇ ರೀಲ್ಸ್ ಭಾರೀ ವೈರಲ್ ಆಗಿದೆ.


ಇದನ್ನೂ ಓದಿ: Viral Video: ಸಾವು ಹೇಗೆಲ್ಲ ಹೊಂಚು ಹಾಕುತ್ತದೆ! ಈ ವಿಡಿಯೊ ನೋಡಿ

ಈ ಕುರಿತು ನಗರಸಭೆ ಕಾರ್ಯದರ್ಶಿ ಗಮನಕ್ಕೆ ಬಂದಿದ್ದು, ಅವರು ಕೂಡಲೇ ಎಂಟು ನೌಕರರಿಗೆ ಶೋಕಾಸ್ ನೊಟೀಸ್ ಜಾರಿ ಮಾಡಿ ಮೂರು ದಿನಗಳಲ್ಲಿ ವಿವರಣೆ ನೀಡುವಂತೆ ಸೂಚಿಸಿದ್ದಾರೆ. ಈ ಕುರಿತು ಕ್ರಮದ ಬಗ್ಗೆ ಪ್ರತಿಕ್ರಿಯಿಸಿರುವ ಕಾರ್ಯದರ್ಶಿ, ಅವರು ತಮ್ಮ ಕರ್ತವ್ಯವನ್ನು ನಿರ್ವಹಿಸಿದ್ದಾರೆ. ಇದು ನಿರುಪದ್ರವಿ ಕೃತ್ಯವಾಗಿರುವುದರಿಂದ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ನಿರೀಕ್ಷಿಸಿದ್ದರು. ಆದರೆ, ನೋಟಿಸ್‌ ಜಾರಿ ಮಾಡಿದ ಅನಂತರ ಕಚೇರಿ ಕೆಲಸದ ಬಿಡುವಿನ ಸಮಯದಲ್ಲಿ ರೀಲ್ ಮಾಡಿರುವುದು, ಕೆಲಸ ಮಾಡಲು ಅಥವಾ ತಮ್ಮ ಅಗತ್ಯಗಳಿಗಾಗಿ ಬಂದವರಿಗೆ ಯಾವುದೇ ಅಡ್ಡಿ ಉಂಟುಮಾಡಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿಸಿದರು.

Continue Reading

ಪ್ರಮುಖ ಸುದ್ದಿ

BJP Muslim Candidate: ಉತ್ತರ ಪ್ರದೇಶದಲ್ಲಿ ಮೊದಲ ಬಾರಿಗೆ ಮುಸ್ಲಿಂ ಅಭ್ಯರ್ಥಿಗೆ ಬಿಜೆಪಿ ಟಿಕೆಟ್? ಏನಿದರ ಗುಟ್ಟು?

BJP Muslim Candidate: ಉತ್ತರ ಪ್ರದೇಶದಲ್ಲಿ ಬಿಜೆಪಿಯು ಕಳೆದ ಲೋಕಸಭೆ ಚುನಾವಣೆಯನ್ನು ರಾಮಮಂದಿರ, ಹಿಂದುತ್ವದ ಆಧಾರದ ಮೇಲೆ ಎದುರಿಸಿತ್ತು. ಇಷ್ಟಾದರೂ ಉತ್ತರ ಪ್ರದೇಶದಲ್ಲಿ ಬಿಜೆಪಿ ಸ್ಥಾನಗಳು ಗಣನೀಯವಾಗಿ ಕುಸಿದಿವೆ. ಬಿಜೆಪಿಯು ಮುಸ್ಲಿಂ ವಿರೋಧಿ ಎಂಬ ಕಳಂಕದಿಂದ ಹೊರಬರುವ ದಿಸೆಯಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ನೀಡಲು ಚಿಂತನೆ ನಡೆದಿದೆ. ಕೆಲವೇ ದಿನಗಳಲ್ಲಿ ಈ ಕುರಿತು ಘೋಷಣೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

VISTARANEWS.COM


on

BJP Muslim Candidate
Koo

ಲಖನೌ: ಬಿಜೆಪಿಯು ಚುನಾವಣೆ ಸಂದರ್ಭಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳಿಗೆ (BJP Muslim Candidate) ಟಿಕೆಟ್‌ ನೀಡುವುದಿಲ್ಲ ಎಂಬುದು ಪ್ರತಿಪಕ್ಷಗಳ ಆರೋಪವಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಮುಸ್ಲಿಂ ಅಭ್ಯರ್ಥಿಗೆ (Muslim Candidate) ಟಿಕೆಟ್‌ ನೀಡಿಲ್ಲ ಎಂಬುದು ಕೂಡ ಗಮನಾರ್ಹವಾಗಿದೆ. ಇದರ ಬೆನ್ನಲ್ಲೇ, ಉತ್ತರ ಪ್ರದೇಶದ ಕುಂಡರ್ಕಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ (Kundarki Assembly Bypoll) ಬಿಜೆಪಿಯು ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ನೀಡಲು ಚಿಂತನೆ ನಡೆಸಿದೆ. ಇದು ಬಿಜೆಪಿಯ ರಣತಂತ್ರದ ಭಾಗವೂ ಆಗಿದೆ ಎಂದು ತಿಳಿದುಬಂದಿದೆ.

ಮೊರಾದಾಬಾದ್‌ ಜಿಲ್ಲೆಯ ಕುಂಡರ್ಕಿ ಕ್ಷೇತ್ರದ ಸಮಾಜವಾದಿ ಪಕ್ಷದ ಶಾಸಕರಾಗಿದ್ದ ಜಿಯಾ ಉರ್‌ ರೆಹಮಾನ್‌ ಅವರು ಸಂಭಾಲ್‌ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ ಕಾರಣ ಕುಂಡರ್ಕಿ ಕ್ಷೇತ್ರದ ಶಾಸಕ ಸ್ಥಾನವು ತೆರವಾಗಿದೆ. ಇದಕ್ಕೆ ಉಪ ಚುನಾವಣೆ ನಡೆಯಲಿದ್ದು, ರಾಜ್ಯದ ವಿಧಾನಸಭೆ ಚುನಾವಣೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಬಿಜೆಪಿಯು ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ನೀಡಲು ಪಕ್ಷದಲ್ಲಿ ಉನ್ನತ ಮಟ್ಟದ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ. ಬಿಜೆಪಿಯ ಉನ್ನತ ಮಟ್ಟದ ಸಭೆಯಲ್ಲಿ ಮುಸ್ಲಿಂ ಅಭ್ಯರ್ಥಿಯ ಕುರಿತು ಚರ್ಚಿಸಲಾಗಿದೆ. ಹಾಗೊಂದು ವೇಳೆ ಇದೇ ಅಂತಿಮವಾದರೆ, ಬಿಜೆಪಿಯ ಸಂಘಟನಾತ್ಮಕ ಜವಾಬ್ದಾರಿ ಹೊತ್ತಿರುವ ಹಿರಿಯ ಮುಸ್ಲಿಂ ನಾಯಕನಿಗೆ ಟಿಕೆಟ್‌ ಸಿಗಲಿದೆ ಎಂದೇ ಹೇಳಲಾಗುತ್ತಿದೆ.

ಬಿಜೆಪಿ ರಣತಂತ್ರ ಏನು?

ಉತ್ತರ ಪ್ರದೇಶದಲ್ಲಿ ಬಿಜೆಪಿಯು ಕಳೆದ ಲೋಕಸಭೆ ಚುನಾವಣೆಯನ್ನು ರಾಮಮಂದಿರ, ಹಿಂದುತ್ವದ ಆಧಾರದ ಮೇಲೆ ಎದುರಿಸಿತ್ತು. ಇಷ್ಟಾದರೂ ಉತ್ತರ ಪ್ರದೇಶದಲ್ಲಿ ಬಿಜೆಪಿ ಸ್ಥಾನಗಳು ಗಣನೀಯವಾಗಿ ಕುಸಿದಿವೆ. ರಾಮಮಂದಿರ ಇರುವ ಅಯೋಧ್ಯೆಯಲ್ಲಿಯೇ ಬಿಜೆಪಿ ಅಭ್ಯರ್ಥಿ ಸೋಲನುಭವಿಸಿದ್ದಾರೆ. ಹಾಗಾಗಿ, ಬಿಜೆಪಿಯು ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ನೀಡುವ ಮೂಲಕ ಮುಸ್ಲಿಂ ವಿರೋಧಿ ಪಕ್ಷ ಎಂಬ ಹಣೆಪಟ್ಟಿಯನ್ನು ಕಳಚಿಕೊಳ್ಳುವುದು, ಮುಂಬರುವ ಚುನಾವಣೆಯಲ್ಲಿ ಮುಸ್ಲಿಮರ ಮತಗಳನ್ನೂ ಸೆಳೆಯುವುದು ಉದ್ದೇಶವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮುಸ್ಲಿಂ ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್‌ ನೀಡಿಲ್ಲವೇ?

ಬಿಜೆಪಿಯು ಇದಕ್ಕೂ ಮೊದಲು ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಮುಕ್ತಾರ್ ಅಬ್ಬಾಸ್‌ ನಖ್ವಿ ಅವರಿಗೆ‌ ಟಿಕೆಟ್‌ ನೀಡಿತ್ತು. ಅಷ್ಟೇ ಅಲ್ಲ, ಕೇರಳದ ಮಲಪ್ಪುರಂ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಅಬ್ದುಲ್‌ ಸಲಾಂ ಅವರು ಕಣಕ್ಕೆ ಇಳಿದಿದ್ದರು. ಮುಕ್ತಾರ್‌ ಅಬ್ಬಾಸ್‌ ನಖ್ವಿ ಅವರು 1998ರಲ್ಲಿ ಕೂಡ ರಾಮ್‌ಪುರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇವರು 1999ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬೇಗಂ ನೂರ್‌ ಬಾನೋ ವಿರುದ್ಧ ಸೋಲನುಭವಿಸಿದ್ದರು. ಇದೇ ವರ್ಷ ಬಿಹಾರದ ಕಿಶನ್‌ಗಂಜ್‌ ಲೋಕಸಭೆ ಕ್ಷೇತ್ರದಲ್ಲಿ ಸೈಯದ್‌ ಶಾಹ್‌ನವಾಜ್‌ ಅವರು ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು.

ಇದನ್ನೂ ಓದಿ: Narendra Modi: ಸಂಸತ್ತಲ್ಲಿ ಹಿಂದುಗಳಿಗೆ ಅವಮಾನ, ದೇವರಿಗೆ ಅಪಮಾನ, ಇದನ್ನು ಹಿಂದುಗಳು ಮರೆಯಲಾರರು ಎಂದ ಮೋದಿ

Continue Reading

ದೇಶ

Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು; ಟಾಸ್ಕ್‌ಫೋರ್ಸ್‌ ವರದಿಯಲ್ಲಿ ಗಂಭೀರ ಅಂಶಗಳು ಬಯಲು

Uttar Pradesh Politics: ಬಿಜೆಪಿಯ ಅವನತಿಯ ಹಿಂದಿನ ಪ್ರಮುಖ ಅಂಶವೆಂದರೆ ಆಂತರಿಕ ಭಿನ್ನಾಭಿಪ್ರಾಯ, ಪ್ರಾಥಮಿಕವಾಗಿ ಟಿಕೆಟ್ ಹಂಚಿಕೆಯ ಸಮಸ್ಯೆಗಳು ಮತ್ತು ಠಾಕೂರ್ ಸಮುದಾಯದೊಳಗಿನ ಅತೃಪ್ತಿಗೆ ಕಾರಣವಾಗಿದೆ. ಇದನ್ನು ಹೊರತುಪಡಿಸಿ, ಪ್ರತಿಪಕ್ಷಗಳ ‘ಸಂವಿಧಾನಕ್ಕೆ ಬೆದರಿಕೆ’ಯ ನಿರೂಪಣೆಯು ಬಿಜೆಪಿ ಬಹುದೊಡ್ಡ ಹಿನ್ನಡೆಯನ್ನು ತಂದೊಡ್ಡಿತ್ತು ಎಂದು ಪಕ್ಷದ ಕಾರ್ಯಪಡೆ ಹೇಳಿತ್ತು.

VISTARANEWS.COM


on

Uttar pradesh Politics
Koo

ಲಕ್ನೋ: ಉತ್ತರಪ್ರದೇಶ(Uttar Pradesh Politics)ದಲ್ಲಿ ಈ ಬಾರಿ ಚುನಾವಣೆ(Lok Sabha Election 2024)ಯಲ್ಲಿ ಬಿಜೆಪಿಯ ಸಂಖ್ಯಾಬಲ 33ಕ್ಕೆ ಕುಸಿದಿರುವುದು ಪಕ್ಷವನ್ನು ತೀವ್ರ ಮುಜುಗರಕ್ಕೀಡು ಮಾಡಿತ್ತು. ಇದಾದ ಬಳಿಕ ಈ ಹೀನಾಯ ಸೋಲಿಗೆ ಕಾರಣವೇನೆಂಬುದನ್ನು ತಿಳಿಯಲು ಬಿಜೆಪಿ(BJP)ಯ ಕಾರ್ಯಪಡೆ ಅಧ್ಯಯನಕ್ಕೆ ಇಳಿದಿತ್ತು. ಪಕ್ಷದೊಳಗಿನ ಭಿನ್ನಾಭಿಪ್ರಾಯ ಮತ್ತು ಜಿಲ್ಲಾ ಆಡಳಿತದ ಸಹಕಾರದ ಕೊರತೆಯು ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಯ ಕಳಪೆ ಪ್ರದರ್ಶನಕ್ಕೆ ಎರಡು ಪ್ರಮುಖ ಅಂಶಗಳಾಗಿವೆ ಎಂದು ಪಕ್ಷದ ಕಾರ್ಯಪಡೆಯು ತನ್ನ ವರದಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath)ಗೆ ಸಲ್ಲಿಸಿದೆ.

ಟಾಸ್ಕ್ ಫೋರ್ಸ್ ತನ್ನ ವರದಿಯನ್ನು ಸಲ್ಲಿಸಿದ ಕೂಡಲೇ, ಆದಿತ್ಯನಾಥ್ 12 ಜಿಲ್ಲಾಧಿಕಾರಿಗಳನ್ನು (ಡಿಎಂ) ವರ್ಗಾಯಿಸಿದ್ದರು. ಸೀತಾಪುರ್, ಬಂದಾ, ಬಸ್ತಿ, ಶ್ರಾವಸ್ತಿ, ಕೌಶಂಬಿ, ಸಂಭಾಲ್, ಸಹರಾನ್‌ಪುರ, ಮೊರಾದಾಬಾದ್ ಮತ್ತು ಹತ್ರಾಸ್‌ನಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳನ್ನು ವರ್ಗಾವಣೆ ಮಾಡಲಾಗಿದ್ದು, ಇಟಾ, ಬಂದಾ ಮತ್ತು ಇಟಾವಾ ಕ್ಷೇತ್ರಗಳ ಅಡಿಯಲ್ಲಿ ಬರುವ ಕಾಸ್‌ಗಂಜ್, ಚಿತ್ರಕೂಟ್ ಮತ್ತು ಔರೈಯಾದಲ್ಲಿ ಡಿಎಂಗಳನ್ನು ಮರು ನಿಯೋಜಿಸಲಾಗಿದೆ. ಹತ್ರಾಸ್ ಹೊರತುಪಡಿಸಿ ಈ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಸೋಲುಂಡಿತ್ತು.

ಬಿಜೆಪಿಯು ಈ ಬಾರಿ ಟಿಕೆಟ್ ಹಂಚಿಕೆ ಎಡವಿರುವುದುನ್ನು ಟಾಸ್ಕ್‌ ಫೋರ್ಸ್‌ ಗಮನಿಸಿದೆ. ಅದೂ ಅಲ್ಲದೇ ಕಾಂಗ್ರೆಸ್‌ ಸಂವಿಧಾನಕ್ಕೆ ಅಪಾಯವಿದೆ ಎಂಬ ವಾದ, ಬಿಎಸ್‌ಪಿಯ ಮತಗಳು ಸಮಾಜವಾದಿಗೆ ಬದಲಾಗಿರುವುದು ಕೂಡ ಬಿಜೆಪಿ ಸೋಲಿಗೆ ಪ್ರಮುಖ ಕಾರಣ. ಎಸ್‌ಪಿ ತನ್ನ ಪಿಚ್ಚಡಾ ದಲಿತರು ಮತ್ತು ಮುಸ್ಲಿಂ ಮತ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ನಮ್ಮ ಸೋಲಿಗೆ ನಮ್ಮವರೇ ಕಾರಣ. ನಮ್ಮನ್ನು ಸೋಲಿಸಲು ಬೇರೆಯವರಿಗೆ ಎಲ್ಲಿ ಶಕ್ತಿ? ಎಲ್ಲಿ ಅತ್ಯಂತ ನೀರು ಇತ್ತೋ ಅಲ್ಲೇ ನಾವು ಮುಳುಗಿದ್ದೇವೆ. ಬಿಜೆಪಿ ಸೋಲು ಆಕಸ್ಮಿಕ ಅಲ್ಲ. ಉದ್ದೇಶಿತ ಎಂದು ಟಾಸ್ಕ್‌ ಫೋರ್ಸ್‌ ಹೇಳಿದೆ.

ಬಿಜೆಪಿಯ ಅವನತಿಯ ಹಿಂದಿನ ಪ್ರಮುಖ ಅಂಶವೆಂದರೆ ಆಂತರಿಕ ಭಿನ್ನಾಭಿಪ್ರಾಯ, ಪ್ರಾಥಮಿಕವಾಗಿ ಟಿಕೆಟ್ ಹಂಚಿಕೆಯ ಸಮಸ್ಯೆಗಳು ಮತ್ತು ಠಾಕೂರ್ ಸಮುದಾಯದೊಳಗಿನ ಅತೃಪ್ತಿಗೆ ಕಾರಣವಾಗಿದೆ. ಇದನ್ನು ಹೊರತುಪಡಿಸಿ, ಪ್ರತಿಪಕ್ಷಗಳ ‘ಸಂವಿಧಾನಕ್ಕೆ ಬೆದರಿಕೆ’ಯ ನಿರೂಪಣೆಯು ಬಿಜೆಪಿ ಬಹುದೊಡ್ಡ ಹಿನ್ನಡೆಯನ್ನು ತಂದೊಡ್ಡಿತ್ತು ಎಂದು ಪಕ್ಷದ ಕಾರ್ಯಪಡೆ ಹೇಳಿತ್ತು.

“ಹೊಸ ಸಂವಿಧಾನವನ್ನು ರಚಿಸಲು” ಸರ್ಕಾರಕ್ಕೆ ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತ ಬೇಕು ಎಂದು ಬಿಜೆಪಿಯ ಅಭ್ಯರ್ಥಿ ಲಲ್ಲು ಸಿಂಗ್ ಅವರ ವೀಡಿಯೊ ವೈರಲ್ ಆದ ನಂತರ ಗದ್ದಲ ಪ್ರಾರಂಭವಾಯಿತು. “272 ಸ್ಥಾನಗಳೊಂದಿಗೆ ರಚನೆಯಾದ ಸರ್ಕಾರವು ಸಂವಿಧಾನವನ್ನು ತಿದ್ದುಪಡಿ ಮಾಡಲು ಸಾಧ್ಯವಿಲ್ಲ. ಅದಕ್ಕಾಗಿ ಅಥವಾ ಹೊಸ ಸಂವಿಧಾನ ರಚನೆಯಾಗಬೇಕಿದ್ದರೂ ಮೂರನೇ ಎರಡರಷ್ಟು ಬಹುಮತದ ಅವಶ್ಯಕತೆ ಇದೆ,” ಎಂದು ಅವರು ಹೇಳಿದ್ದರು. ಇದನ್ನೇ ಅಸ್ತ್ರವನ್ನಾಗಿಸಿಕೊಂಡ ಕಾಂಗ್ರೆಸ್‌, ಕೇಂದ್ರದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬೇಕಾಬಿಟ್ಟಿ ತಿದ್ದುತ್ತಾರೆ ಎಂಬ ಭಯವನ್ನು ಜನರ ಮನಸ್ಸಿನಲ್ಲಿ ಬಿತ್ತಿತ್ತು. ಇದೂ ಕೂಡ ಬಿಜೆಪಿಗೆ ಈ ಬಾರಿ ತಿರುಮಂತ್ರವಾಗಿ ಪರಿಣಮಿಸಿತ್ತು.

ಇದನ್ನೂ ಓದಿ: Drinking Water Tips: ನೀರು ಕುಡಿಯುವುದೇ ನಿಮ್ಮ ಸಮಸ್ಯೆಯೇ? ಇಲ್ಲಿವೆ ಸರಳ ಉಪಾಯಗಳು!

Continue Reading
Advertisement
Team India
ಕ್ರಿಕೆಟ್7 mins ago

Team India: ಟಿ-20 ವಿಶ್ವಕಪ್‌ ಗೆದ್ದು ಭಾರತದತ್ತ ಟೀಮ್‌ ಇಂಡಿಯಾ; ಫ್ಲೈಟ್‌ ಟ್ರ್ಯಾಕರ್‌ನಲ್ಲಿ ಹೊಸ ದಾಖಲೆ

LK Advani
ದೇಶ20 mins ago

LK Advani: ಎಲ್‌ ಕೆ ಅಡ್ವಾಣಿ ಆರೋಗ್ಯದಲ್ಲಿ ಮತ್ತೆ ಏರುಪೇರು; ಆಸ್ಪತ್ರೆಗೆ ದಾಖಲು

Ashika Ranganath
ಸ್ಯಾಂಡಲ್ ವುಡ್49 mins ago

Ashika Ranganath: ಪುಷ್ಪ 2 ಹಾಡಿಗೆ ದಿಲ್‌ ಖುಷ್‌ ಆಗಿ ಕುಣಿದ ಆಶಿಕಾ ರಂಗನಾಥ್;‌ Video ಇದೆ ನೋಡಿ

Lokayukta Raid Honnavara Pattana Panchayat Chief Executive Engineer caught by lokayukta while recieving money
ಉತ್ತರ ಕನ್ನಡ1 hour ago

Lokayukta Raid: ಹೊನ್ನಾವರ ಪ.ಪಂ ʼಲಂಚ ಪ್ರವೀಣʼ ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ

Viral Video
ವೈರಲ್ ನ್ಯೂಸ್1 hour ago

Viral Video: ಸರ್ಕಾರಿ ಕಚೇರಿಯಲ್ಲಿ ಡ್ಯಾನ್ಸ್‌ ಮಾಡಿ ರೀಲ್ಸ್; 8 ನೌಕರರಿಗೆ ನೋಟಿಸ್‌ ಬಿಸಿ!

Pradhan Mantri Awas Yojana CM Siddaramaiah instructs to complete work on incomplete houses on priority
ಪ್ರಮುಖ ಸುದ್ದಿ2 hours ago

CM Siddaramaiah: ಪ್ರಧಾನಮಂತ್ರಿ ಆವಾಸ್‌ ಯೋಜನೆ; ಅಪೂರ್ಣ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಸಿಎಂ ಸೂಚನೆ

Toyota Kirloskar Motor has joined hands with the IISC to support the establishment of a Mobility Engineering Laboratory
ಬೆಂಗಳೂರು2 hours ago

Toyota Kirloskar Motor: ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬ್ ಸ್ಥಾಪಿಸಲು ಐಐಎಸ್‌ಸಿಯೊಂದಿಗೆ ಕೈಜೋಡಿಸಿದ ಟಿಕೆಎಂ

BJP Muslim Candidate
ಪ್ರಮುಖ ಸುದ್ದಿ2 hours ago

BJP Muslim Candidate: ಉತ್ತರ ಪ್ರದೇಶದಲ್ಲಿ ಮೊದಲ ಬಾರಿಗೆ ಮುಸ್ಲಿಂ ಅಭ್ಯರ್ಥಿಗೆ ಬಿಜೆಪಿ ಟಿಕೆಟ್? ಏನಿದರ ಗುಟ್ಟು?

Uttar pradesh Politics
ದೇಶ2 hours ago

Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು; ಟಾಸ್ಕ್‌ಫೋರ್ಸ್‌ ವರದಿಯಲ್ಲಿ ಗಂಭೀರ ಅಂಶಗಳು ಬಯಲು

Mangalore News
ಕರ್ನಾಟಕ3 hours ago

Mangalore News: ಫಲಿಸದ ಸತತ 6-7 ಗಂಟೆ ಕಾರ್ಯಾಚರಣೆ; ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಸಾವು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌