Kalki 2898 AD: ಮೂರನೇ ದಿನ ಭರ್ಜರಿ ಗಳಿಕೆ ಕಂಡ ‘ಕಲ್ಕಿ 2898 ಎಡಿ’ ಸಿನಿಮಾ !  - Vistara News

ಟಾಲಿವುಡ್

Kalki 2898 AD: ಮೂರನೇ ದಿನ ಭರ್ಜರಿ ಗಳಿಕೆ ಕಂಡ ‘ಕಲ್ಕಿ 2898 ಎಡಿ’ ಸಿನಿಮಾ ! 

Kalki 2898 AD: ಕರ್ನಾಟಕದಲ್ಲಿ ‘ಕಲ್ಕಿ2898 AD’ ಸಿನಿಮಾ ಅತೀ ಹೆಚ್ಚು ಸ್ಕ್ರೀನ್‌ಗಳಲ್ಲಿ ರಿಲೀಸ್ ಆಗಿತ್ತು. ಕನ್ನಡದಲ್ಲಿ ದೊಡ್ಡ ಸಿನಿಮಾಗಳು ಇಲ್ಲದೇ ಇರುವುದರಿಂದ ಕರ್ನಾಟಕದಲ್ಲಿ ಸುಮಾರು 444 ಸ್ಕ್ರೀನ್‌ಗಳಲ್ಲಿ ಬಿಡುಗಡೆ ಮಾಡಲಾಗಿತ್ತು. ಇದರಲ್ಲಿ 219 ಸ್ಕ್ರೀನ್‌ಗಳಲ್ಲಿ ತೆಲುಗು, 100 ಸ್ಕ್ರೀನ್‌ಗಳಲ್ಲಿ ಕನ್ನಡ, 85 ಸ್ಕ್ರೀನ್‌ಗಳಲ್ಲಿ ಹಿಂದಿ, 40 ಸ್ಕ್ರೀನ್‌ಗಳಲ್ಲಿ ತಮಿಳು ಭಾಷೆಯ ಕಲ್ಕಿ ರಿಲೀಸ್ ಆಗಿದ್ದವು. ಈ ನಾಲ್ಕು ಭಾಷೆಗಳಿಂದ ಕರ್ನಾಟಕದಲ್ಲಿ ‘ಕಲ್ಕಿ2898 AD’ ಗಳಿಸಿದ್ದು ಬರೋಬ್ಬರಿ 6.7 ಕೋಟಿ ರೂಪಾಯಿ (Nett) ಎಂದು ಟ್ರೇಡ್ ಎಕ್ಸ್‌ಪರ್ಟ್‌ಗಳು ಲೆಕ್ಕ ಕೊಟ್ಟಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾಗ್ ಅಶ್ವಿನ್ ಅವರ ಕಲ್ಕಿ 2898 AD ಜೂನ್ 27 ರಂದು (Kalki 2898 AD) ಬಿಡುಗಡೆಯಾಯಿತು. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್‌ ಬಚ್ಚನ್ ಮತ್ತು ಕಮಲ್ ಹಾಸನ್ ನಟಿಸಿದ ಈ ಚಿತ್ರ ಮೂರು ದಿನಗಳಲ್ಲಿ ಭಾರತದಲ್ಲಿ ಎಲ್ಲಾ ಭಾಷೆಗಳಲ್ಲಿ 220 ಕೋಟಿ ರೂ. ಗಳಿಕೆ ಕಂಡಿದೆ ಎಂದು ವರದಿಯಾಗಿದೆ.

ಕಲ್ಕಿ 2898 AD ತನ್ನ ಆರಂಭಿಕ ದಿನದಲ್ಲಿ 95.3 ಕೋಟಿ ರೂ. ಮತ್ತು ಎರಡನೇ ದಿನ 57.6 ಕೋಟಿ ರೂ. ಭಾರತದಲ್ಲಿ ಗಳಿಕೆ ಕಂಡಿತ್ತು. ನಿನ್ನೆ ಅಂದರೆ ಮೂರನೇ ದಿನ 67.1 ಕೋಟಿ ರೂ. ಗಳಿಸಿ, ಒಟ್ಟು 220 ಕೋಟಿ ವರೆಗೆ ಕಲೆಕ್ಷನ್‌ನಲ್ಲಿ ಏರಿಕೆ ಕಂಡಿದೆ. ಈ ಚಿತ್ರವು ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಎರಡು ದಿನಗಳಲ್ಲಿ 298.5 ಕೋಟಿ ರೂ. ಗಳಿಸಿದೆ. ಭಾನುವಾರದಂದು (ಇಂದು) ಚಿತ್ರ ಯಾವ ರೀತಿ ಮೂಡಿಬರಲಿದೆ ಎಂಬುದನ್ನು ಕಾದು ನೋಡಬೇಕಿದೆ. ಕಲ್ಕಿ 2898 AD ಎಲ್ಲಾ ದಕ್ಷಿಣ ಭಾರತದ ಭಾಷೆಗಳಲ್ಲಿ ಮತ್ತು ಹಿಂದಿಯಲ್ಲಿ 2D ಮತ್ತು 3D ನಲ್ಲಿ ಬಿಡುಗಡೆಯಾಗಿದೆ.

ಭಾರತದಲ್ಲಿ ಕೇವಲ ಮೂರು ದಿನಕ್ಕೆ 200 ಕೋಟಿ ಕಲೆಕ್ಷನ್ ಅನ್ನು ದಾಟಿದೆ. ಭಾರತದಲ್ಲಿ ಮೂರು ದಿನದಲ್ಲಿ ‘ಕಲ್ಕಿ’ ಸಿನಿಮಾ ಸುಮಾರು 225 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಕುರಿತು ಮಾತನಾಡಿದ ಕಮಲ್, “ಭಾರತೀಯ ಸಿನಿಮಾ ಜಾಗತಿಕವಾಗಿ ಮನರಂಜನೆ ನೀಡುತ್ತಿದೆ. ಅವುಗಳಲ್ಲಿ ಕಲ್ಕಿ 2898 ಎಡಿ ಸಿನಿಮಾ ಕೂಡ. ನಾಗ್ ಅಶ್ವಿನ್ ಯಾವುದೇ ಧಾರ್ಮಿಕ ಪಕ್ಷಪಾತವಿಲ್ಲದೆ ಪುರಾಣದ ವಿಷಯವನ್ನು ಎಚ್ಚರಿಕೆಯಿಂದ ನಿಭಾಯಿಸಿದ್ದಾರೆ. ಪ್ರಪಂಚದಾದ್ಯಂತ, ಜಪಾನ್, ಚೀನಾ ಮತ್ತು ಗ್ರೀಕ್ ನಾಗರಿಕತೆಗಳು ಮಾತ್ರ ಭಾರತೀಯ ಪರಂಪರೆಯ ಕಥಾಹಂದರದ ಹತ್ತಿರ ಬರಬಹುದು. ಅಶ್ವಿನ್ ಅದರಲ್ಲಿ ಕಥೆಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ ಮತ್ತು ಎಲ್ಲರನ್ನು ಒಟ್ಟಿಗೆ ಸೇರಿಸುವ ಮೂಲಕ ಹೆಚ್ಚು ತಾಳ್ಮೆಯಿಂದ ನಿಭಾಯಿಸಿದ್ದಾರೆʼʼಎಂದರು.

ಇದನ್ನೂ ಓದಿ: Kannada New Movie: ಸೆನ್ಸಾರ್ ಅಂಗಳದಲ್ಲಿ ‘ಬ್ಯಾಕ್ ಬೆಂಚರ್ಸ್’ ಸಿನಿಮಾ!


ಚಿತ್ರದಲ್ಲಿ ಪ್ರಭಾಸ್ ಭೈರವನಾಗಿ, ದೀಪಿಕಾ SUM-80 ಆಗಿ, ಅಮಿತಾಭ್‌ ಅಶ್ವತ್ಥಾಮನಾಗಿ ಮತ್ತು ಕಮಲ್ ಸುಪ್ರೀಂ ಯಾಸ್ಕಿನ್ ಆಗಿ ನಟಿಸಿದ್ದಾರೆ. ಚಿತ್ರದಲ್ಲಿ ದಿಶಾ ಪಟಾನಿ ರಾಕ್ಸಿಯಾಗಿ ನಟಿಸಿದ್ದಾರೆ. ವಿಜಯ್ ದೇವರಕೊಂಡ, ಮೃಣಾಲ್ ಠಾಕೂರ್, ದುಲ್ಕರ್ ಸಲ್ಮಾನ್, ಫರಿಯಾ ಅಬ್ದುಲ್ಲಾ ಮತ್ತು ಇತರರು ಅತಿಥಿ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಕರ್ನಾಟಕದಲ್ಲಿ ‘ಕಲ್ಕಿ2898 AD’ ಸಿನಿಮಾ ಅತೀ ಹೆಚ್ಚು ಸ್ಕ್ರೀನ್‌ಗಳಲ್ಲಿ ರಿಲೀಸ್ ಆಗಿತ್ತು. ಕನ್ನಡದಲ್ಲಿ ದೊಡ್ಡ ಸಿನಿಮಾಗಳು ಇಲ್ಲದೇ ಇರುವುದರಿಂದ ಕರ್ನಾಟಕದಲ್ಲಿ ಸುಮಾರು 444 ಸ್ಕ್ರೀನ್‌ಗಳಲ್ಲಿ ಬಿಡುಗಡೆ ಮಾಡಲಾಗಿತ್ತು. ಇದರಲ್ಲಿ 219 ಸ್ಕ್ರೀನ್‌ಗಳಲ್ಲಿ ತೆಲುಗು, 100 ಸ್ಕ್ರೀನ್‌ಗಳಲ್ಲಿ ಕನ್ನಡ, 85 ಸ್ಕ್ರೀನ್‌ಗಳಲ್ಲಿ ಹಿಂದಿ, 40 ಸ್ಕ್ರೀನ್‌ಗಳಲ್ಲಿ ತಮಿಳು ಭಾಷೆಯ ಕಲ್ಕಿ ರಿಲೀಸ್ ಆಗಿದ್ದವು. ಈ ನಾಲ್ಕು ಭಾಷೆಗಳಿಂದ ಕರ್ನಾಟಕದಲ್ಲಿ ‘ಕಲ್ಕಿ2898 AD’ ಗಳಿಸಿದ್ದು ಬರೋಬ್ಬರಿ 6.7 ಕೋಟಿ ರೂಪಾಯಿ (Nett) ಎಂದು ಟ್ರೇಡ್ ಎಕ್ಸ್‌ಪರ್ಟ್‌ಗಳು ಲೆಕ್ಕ ಕೊಟ್ಟಿದ್ದಾರೆ.

ಕಲ್ಕಿ 2898 AD ಜೂನ್ 27 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಯಿತು. ಚಲನಚಿತ್ರವು ಈಗಾಗಲೇ ತನ್ನ ಮುಂಗಡ ಬುಕಿಂಗ್‌ನಲ್ಲಿ ಎಲ್ಲಾ ಭಾಷೆಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳನ್ನು ಮಾರಾಟ ಮಾಡಿದೆ.

ವಿಶ್ವದಾದ್ಯಂತ (world) ತೆರೆಗೆ ಬಂದ ಅತ್ಯಂತ ದುಬಾರಿ ಚಿತ್ರ (film) ʼಕಲ್ಕಿ 2898 ಎಡಿʼ (Kalki 2898AD) ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಮುಖ್ಯ ಕಾರಣ ಇದು ಹಿಂದೂ ಧರ್ಮದ (hindu dharma) ವಿಷಯದ ಮೇಲೆ ಕೇಂದ್ರೀಕೃತವಾಗಿರುವುದು. ಭಗವಾನ್ ವಿಷ್ಣುವಿನ (baghavan vishnu) 10ನೇ ಅವತಾರ ಕಲ್ಕಿ (kalki). ಸದಾಚಾರ ಮತ್ತು ನೈತಿಕ ನಡವಳಿಕೆಯನ್ನು ಉತ್ತೇಜಿಸುವ ಕಲ್ಕಿ, ಕಲಿಯುಗವನ್ನು ಕೊನೆಗೊಳಿಸಿ ಮತ್ತೆ ಸತ್ಯಯುಗದ ಸುವರ್ಣ ಯುಗವನ್ನು ಪ್ರಾರಂಭಿಸುತ್ತಾನೆ ಎಂದು ನಂಬಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಟಾಲಿವುಡ್

Kalki 2898 AD: 1000 ಕೋಟಿ ರೂ. ಗಳಿಕೆಯತ್ತ ‘ಕಲ್ಕಿ 2898  ಎಡಿʼ; ಇಲ್ಲಿಯವರೆಗೆ ಕಲೆಕ್ಷನ್‌ ಮಾಡಿದ್ದೆಷ್ಟು?

Kalki 2898 AD: ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್ ಅಶ್ವಿನ್ ಆ್ಯಕ್ಷನ್‌ ಕಟ್‌ ಹೇಳಿರುವ ʼಕಲ್ಕಿʼಯಲ್ಲಿ ಬಹುತಾರಾಗಣವಿದೆ. ಪ್ರಭಾಸ್‌ ಮತ್ತು ದೀಪಿಕಾ ಪಡುಕೋಣೆ ಮೊದಲ ಬಾರಿ ತೆರೆ ಹಂಚಿಕೊಂಡಿದ್ದು, ಬಾಲಿವುಡ್‌ನ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Kalki 2898 AD records global box office collection
Koo

ಬೆಂಗಳೂರು:   ʼಕಲ್ಕಿ 2898 ಎಡಿʼ (Kalki 2898 AD) ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನಾಗಾಲೋಟ ಮುಂದುವರಿಸಿದೆ. ಜೂನ್ 27ರಂದು ವಿಶ್ವಾದ್ಯಂತ ತೆರೆಕಂಡ ಈ ಸೈನ್ಸ್‌ ಫಿಕ್ಷನ್‌ ದಾಖಲೆಯ ಕಲೆಕ್ಷನ್‌ ಮಾಡಿದೆ. ಜಾಗತಿಕವಾಗಿ 700 ಕೋಟಿ ರೂ. ಬಾಕ್ಸ್ ಆಫೀಸ್ ಸಂಗ್ರಹ ಮಾಡಿದೆ. ಮೊದಲ ವಾರದಲ್ಲಿ ಭಾರತದಲ್ಲಿ 393.4 ಕೋಟಿ ರೂ ಗಳಿಕೆ ಕಂಡಿದೆ.

ಭಾರತದ ಒಟ್ಟು ಕಲೆಕ್ಷನ್ ಅಂದಾಜು 441.5 ಕೋಟಿ ರೂ. ಅಂತಾರಾಷ್ಟ್ರೀಯ ಮಾರುಕಟ್ಟೆಗಳಿಂದ 168.5 ಕೋಟಿ ರೂಪಾಯಿಗಳನ್ನು ಸಂಗ್ರಹಿಸುವುದರೊಂದಿಗೆ, ಚಿತ್ರದ 7-ದಿನಗಳ ಒಟ್ಟು ಒಟ್ಟು ಮೊತ್ತ ಸುಮಾರು 610 ಕೋಟಿ ರೂ. ಕಲೆಕ್ಷನ್‌ ಆಗಿದೆ ಎಂದು ಅಂದಾಜಿಸಲಾಗಿದೆ. “ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತಿ ದೊಡ್ಡ ಬ್ಲಾಕ್‌ಬಸ್ಟರ್” ಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ. ʻʻಈ ಚಿತ್ರ ಎಷ್ಟು ಲಾಭ ಗಳಿಸುತ್ತದೆ ಎಂದು ನೋಡೋಣ” ಎಂದು ಇನ್ನೊಬ್ಬರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Kalki 2898 AD: ಕಡಿಮೆ ಆಗಿಲ್ಲ `ಕಲ್ಕಿ’ ಅಬ್ಬರ; ಚಿತ್ರದ ಒಟ್ಟೂ ಗಳಿಕೆ ಎಷ್ಟು?

ಭರ್ಜರಿ ಗಳಿಕೆ

ಮೊದಲ ದಿನ ಭರ್ಜರಿ 191 ಕೋಟಿ ರೂ. ಗಳಿಸಿದ ʼಕಲ್ಕಿʼ ಆ ಮೂಲಕ ಸ್ಯಾಂಡಲ್‌ವುಡ್‌ನ ʼಕೆಜಿಎಫ್‌ 2ʼ (159 ಕೋಟಿ ರೂ.), ʼಸಲಾರ್‌ʼ (158 ಕೋಟಿ ರೂ.), ʼಲಿಯೋʼ (142.75 ಕೋಟಿ ರೂ.), ʼಸಾಹೋʼ (130 ಕೋಟಿ ರೂ.) ಮತ್ತು ʼಜವಾನ್‌ʼ (129 ಕೋಟಿ ರೂ.) ದಾಖಲೆ ಮುರಿದೆ. ಅದಾಗ್ಯೂ 223 ಕೋಟಿ ರೂ. ಕಲೆಕ್ಷನ್‌ ಮಾಡಿದ ʼಆರ್‌ಆರ್‌ಆರ್‌ʼ ಮತ್ತು 217 ಕೋಟಿ ರೂ. ಗಳಿಸಿದ ʼಬಾಹುಬಲಿ 2ʼ ಈಗಲೂ ಮೊದಲ ದಿನದ ಕಲೆಕ್ಷನ್‌ ವಿಚಾರದಲ್ಲಿ ಮೊದಲೆರಡು ಸ್ಥಾನಗಳಲ್ಲಿ ಭದ್ರವಾಗಿವೆ.

ಬಹುತಾರಾಗಣ

ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್ ಅಶ್ವಿನ್ ಆ್ಯಕ್ಷನ್‌ ಕಟ್‌ ಹೇಳಿರುವ ʼಕಲ್ಕಿʼಯಲ್ಲಿ ಬಹುತಾರಾಗಣವಿದೆ. ಪ್ರಭಾಸ್‌ ಮತ್ತು ದೀಪಿಕಾ ಪಡುಕೋಣೆ ಮೊದಲ ಬಾರಿ ತೆರೆ ಹಂಚಿಕೊಂಡಿದ್ದು, ಬಾಲಿವುಡ್‌ನ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಕ್ಷಿಣ ಭಾರತದ ಜನಪ್ರಿಯ ತಾರೆಗಳಾದ ಕಮಲ್‌ ಹಾಸನ್‌, ಶೋಭನಾ ಮತ್ತಿತರರು ಅತಿಥಿ ಪಾತ್ರದಲ್ಲಿ ಮಿಂಚಿದ್ದಾರೆ.

Continue Reading

ಟಾಲಿವುಡ್

Ram Charan: ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ಸಿನಿಮಾ!

Ram Charan: ದಿ ಕಾಶ್ಮೀರಿ ಫೈಲ್ಸ್, ಕಾರ್ತಿಕೇಯ-2 ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಅಭಿಷೇಕ್ ಅಗರ್ವಾಲ್ ತಮ್ಮದೇ ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಬ್ಯಾನರ್ ಹಾಗೂ ರಾಮ್ ಚರಣ್ ಒಡೆತನದ ವಿ ಮೆಗಾ ಪಿಕ್ಚರ್ಸ್ ಜಂಟಿಯಾಗಿ ಈ ಚಿತ್ರ ನಿರ್ಮಿಸುತ್ತಿದೆ. ಭಾರತದ ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಘಟನೆಗಳನ್ನು ಆಧರಿಸಿ ‘ದಿ ಇಂಡಿಯಾ ಹೌಸ್’ ವನ್ನು ಕಟ್ಟಿಕೊಡಲಾಗುತ್ತಿದೆ. ಸಿನಿಮಾದಲ್ಲಿ ನಾಯಕ ನಿಖಿಲ್ ಶಿವನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

Ram charan the Indian House on set
Koo

ಬೆಂಗಳೂರು: ಆರ್‌ಆರ್‌ಆರ್‌ ಸಿನಿಮಾ (Ram Charan) ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಮೆಗಾ ಪವರ್ ಸ್ಟಾರ್ ರಾಮ್ ಚರಣ್ , ಇತ್ತೀಚೆಗೆ ವಿ ಮೆಗಾ ಪಿಕ್ಚರ್ಸ್ ಹೆಸರಿನ ನಿರ್ಮಾಣ ಸಂಸ್ಥೆ ಆರಂಭಿಸಿದ್ದು, ತಮ್ಮ ಮೊದಲ ಸಿನಿಮಾ ಆಗಿ ಸಾರ್ವಕರ್ ಜೀವನ ಕತೆಯನ್ನು ತೆರೆಗೆ ತರಲು ಸಜ್ಜಾಗಿದ್ದಾರೆ. ʻದಿ ಇಂಡಿಯಾ ಹೌಸ್ʼ ಹೆಸರಿನಡಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ತೆಲುಗಿನ ನಿಖಿಲ್ ಸಿದ್ಧಾರ್ಥ್ ನಾಯಕನಾಗಿ ನಟಿಸಲಿದ್ದಾರೆ. ಹಂಪಿಯ ವಿರೂಪಾಕ್ಷ ಸನ್ನಿಧಿಯಲ್ಲಿ ʻದಿ ಇಂಡಿಯಾ ಹೌಸ್ʼ ಸಿನಿಮಾದ ಮುಹೂರ್ತ ನೆರವೇರಿದೆ. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು.

ದಿ ಕಾಶ್ಮೀರಿ ಫೈಲ್ಸ್, ಕಾರ್ತಿಕೇಯ-2 ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಅಭಿಷೇಕ್ ಅಗರ್ವಾಲ್ ತಮ್ಮದೇ ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಬ್ಯಾನರ್ ಹಾಗೂ ರಾಮ್ ಚರಣ್ ಒಡೆತನದ ವಿ ಮೆಗಾ ಪಿಕ್ಚರ್ಸ್ ಜಂಟಿಯಾಗಿ ಈ ಚಿತ್ರ ನಿರ್ಮಿಸುತ್ತಿದೆ. ಭಾರತದ ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಘಟನೆಗಳನ್ನು ಆಧರಿಸಿ ‘ದಿ ಇಂಡಿಯಾ ಹೌಸ್’ ವನ್ನು ಕಟ್ಟಿಕೊಡಲಾಗುತ್ತಿದೆ. ಸಿನಿಮಾದಲ್ಲಿ ನಾಯಕ ನಿಖಿಲ್ ಶಿವನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಮ್ ವಂಶಿ ಕೃಷ್ಣ ನಿರ್ದೇಶನದ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ಅನುಪಮ್ ಖೇರ್ ನಟಿಸುತ್ತಿದ್ದಾರೆ. ಅನುಪಮ್ ಅವರು ಶ್ಯಾಮ್‌ಜಿ ಕೃಷ್ಣ ವರ್ಮಾ ಅವರ ಪಾತ್ರ ನಿರ್ವಹಿಸಲಿದ್ದಾರೆ. ನಿಖಿಲ್ ಸಿದ್ದಾರ್ಥ್ ಗೆ ಜೋಡಿಯಾಗಿ ಸಾಯಿ ಮಂಜ್ರೇಕರ್ ಬಣ್ಣ ಹಚ್ಚಲಿದ್ದಾರೆ.

ಇದನ್ನೂ ಓದಿ: Kannada New Movie: ಸಿನಿಪ್ರಿಯರ ಗಮನ ಸೆಳೆಯುತ್ತಿದೆ ‘ಫ್ಯಾಮಿಲಿ ಡ್ರಾಮ’ ಸಿನಿಮಾದ ಸಾಂಗ್!

ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಮೂಡಿ ಬರುತ್ತಿರು ದಿ ಇಂಡಿಯನ್ ಹೌಸ್ ಸಿನಿಮಾಗೆ ಕ್ಯಾಮೆರಾನ್ ಬ್ರೈಸನ್ ಕ್ಯಾಮೆರಾ ಹಿಡಿಯಲಿದ್ದಾರೆ. ಕಾರ್ತಿಕೇಯ 2 ನಂತರ ನಿಖಿಲ್, ಅನುಪಮ್ ಖೇರ್, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಜೊತೆ ದಿ ಇಂಡಿಯಾ ಹೌಸ್ ಸಿನಿಮಾಗಾಗಿ ಮತ್ತೊಮ್ಮೆ ಒಂದಾಗಿದ್ದಾರೆ.

Continue Reading

ಟಾಲಿವುಡ್

Double Ismart: ಪ್ರಚಾರ ಅಖಾಡದಲ್ಲಿ ‘ಡಬಲ್ ಇಸ್ಮಾರ್ಟ್’: ಮೊದಲ ಹಾಡು ರಿಲೀಸ್!

Double Ismart: ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್​ ಇಸ್ಮಾರ್ಟ್​’ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಸ್ಯಾಮ್ ಕೆ ನಾಯ್ಡು ಮತ್ತು ಗಿಯಾನಿ ಗಿಯಾನ್ನೆಲಿ ಛಾಯಾಗ್ರಾಹಕರಾಗಿ ದುಡಿದಿದ್ದಾರೆ.

VISTARANEWS.COM


on

Double Ismart Steppa Maar electrifies with mass beats
Koo

ಬೆಂಗಳೂರು: ಉಸ್ತಾದ್ ರಾಮ್ ಪೋತಿನೇನಿ ಮತ್ತು ಡೈರೆಕ್ಟರ್ ಪೂರಿ ಜಗನ್ನಾಥ್ ಜೋಡಿಯ ಬಹುನಿರೀಕ್ಷಿತ ಸಿನಿಮಾ ʻಡಬಲ್ ಇಸ್ಮಾರ್ಟ್ʼ (Double Ismart). ಪುರಿ ಕನೆಕ್ಟ್ಸ್ ಬ್ಯಾನರ್‌ನಲ್ಲಿ ಪೂರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿರುವ ಈ ಚಿತ್ರ ಆಗಸ್ಟ್ 15 ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಸದ್ಯ ಡಬಲ್ ಇಸ್ಮಾರ್ಟ್ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಇತ್ತ ಪ್ರಚಾರ ಕೆಲಸ ಕೂಡ ಆರಂಭವಾಗಿದೆ.

ಡಬಲ್ ಇಸ್ಮಾರ್ಟ್ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ʻಸ್ಟೆಪ್ಪಾ ಮಾರ್‌ʼ ಎಂಬ ಹಾಡಿಗೆ ಭಾಸ್ಕರ ಭಟ್ಲರ ಸಾಹಿತ್ಯ ಬರೆದಿದ್ದು , ಅನುರಾಗ್ ಕುಲಕರ್ಣಿ ಹಾಗೂ ಸಾಹಿತಿ ಚಂಗಂತಿ ಧ್ವನಿಯಾಗಿದ್ದಾರೆ.‌ ಮಣಿ ಶರ್ಮಾ ಟ್ಯೂನ್ ಹಾಕಿದ್ದಾರೆ. ಅದ್ಧೂರಿ ಸೆಟ್ ನಲ್ಲಿ ಜಾನಿ ಮಾಸ್ಟರ್ ಕೊರಿಯೋಗ್ರಫಿಗೆ ರಾಮ್ ಪೋತಿನೇನಿ ಜಬರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ.

ಸೌತ್​ ಸಿನಿಮಾಗಳಲ್ಲಿ ಖಳನಾಗಿ ಅಬ್ಬರಿಸುತ್ತಿರುವ ಸಂಜಯ್ ದತ್ ಅವರು ‘ಡಬಲ್​ ಇಸ್ಮಾರ್ಟ್​’ ಚಿತ್ರದಲ್ಲೂ ವಿಲನ್​ ಆಗಿ ಅಭಿನಯಿಸಿದ್ದಾರೆ. ನಾಯಕಿಯಾಗಿ ಕಾವ್ಯಾ ಥಾಪರ್ ನಟಿಸಿದ್ದಾರೆ.

ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್​ ಇಸ್ಮಾರ್ಟ್​’ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಸ್ಯಾಮ್ ಕೆ ನಾಯ್ಡು ಮತ್ತು ಗಿಯಾನಿ ಗಿಯಾನ್ನೆಲಿ ಛಾಯಾಗ್ರಾಹಕರಾಗಿ ದುಡಿದಿದ್ದಾರೆ.

ಇದನ್ನೂ ಓದಿ: Highest Collection Movie: ಅತೀ ಹೆಚ್ಚು ಗಳಿಕೆ ದಾಖಲಿಸಿದ ಭಾರತದ ಟಾಪ್‌ 10 ಸಿನಿಮಾಗಳಿವು

2019 ರಲ್ಲಿ ಇಸ್ಮಾರ್ಟ್ ಶಂಕರ್ ಸಿನಿಮಾ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರ್ತಿದೆ. ಟಾಲಿವುಡ್‌ನಲ್ಲಿ ಈಗಲೇ ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ ಅಂತ ಹೇಳಬಹುದು.

Continue Reading

ಟಾಲಿವುಡ್

Kalki 2898 AD: ಕಡಿಮೆ ಆಗಿಲ್ಲ `ಕಲ್ಕಿ’ ಅಬ್ಬರ; ಚಿತ್ರದ ಒಟ್ಟೂ ಗಳಿಕೆ ಎಷ್ಟು?

Kalki 2898 AD: ವರದಿ ಪ್ರಕಾರ ‘ಕಲ್ಕಿ 2898 ಎಡಿ’ ಚಿತ್ರ ಆರನೇ ದಿನಕ್ಕೆ 27.85 ಕೋಟಿ ರೂಪಾಯಿ ಗಳಿಕೆ ಮಾಡಿದೆ. ತೆಲುಗು ಭಾಷೆಯಿಂದ 11.2 ಕೋಟಿ ಕಲೆಕ್ಷನ್ ಆಗಿದೆ. ತಮಿಳು, ಮಲಯಾಳಂನಿಂದ ತಲಾ 1.2 ಕೋಟಿ ರೂಪಾಯಿ, ಹಿಂದಿಯಿಂದ 14 ಕೋಟಿ ರೂಪಾಯಿ ಸಿಕ್ಕಿದೆ. ಕನ್ನಡ ವರ್ಷನ್​ನಿಂದ ಸಿಕ್ಕಿರುವುದು ಕೇವಲ 25 ಲಕ್ಷ ರೂಪಾಯಿ ಮಾತ್ರ.

VISTARANEWS.COM


on

Kalki 2898 AD Box Office Collection Day Deepika Padukone's Film
Koo

ಬೆಂಗಳೂರು: :  ʼಕಲ್ಕಿ 2898 ಎಡಿʼ (Kalki 2898 AD) ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನಾಗಾಲೋಟ ಮುಂದುವರಿಸಿದೆ. ಜೂನ್ 27ರಂದು ವಿಶ್ವಾದ್ಯಂತ ತೆರೆಕಂಡ ಈ ಸೈನ್ಸ್‌ ಫಿಕ್ಷನ್‌ ದಾಖಲೆಯ ಕಲೆಕ್ಷನ್‌ ಮಾಡಿದೆ. ಅದರಲ್ಲಿಯೂ ಚಿತ್ರ ಬಿಡುಗಡೆಯಾಗಿ 5 ದಿನ ಕಳೆದರೂ ಅಬ್ಬರ ಇನ್ನೂ ಕಡಿಮೆಯಾಗಿಲ್ಲ. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಐದು ದಿನಕ್ಕೆ 625 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈಗ ಆರನೇ ದಿನದ ಗಳಿಕೆಯ ಲೆಕ್ಕಾಚಾರ ಸಿಕ್ಕಿದೆ.

ವರದಿ ಪ್ರಕಾರ ‘ಕಲ್ಕಿ 2898 ಎಡಿ’ ಚಿತ್ರ ಆರನೇ ದಿನಕ್ಕೆ 27.85 ಕೋಟಿ ರೂಪಾಯಿ ಗಳಿಕೆ ಮಾಡಿದೆ. ತೆಲುಗು ಭಾಷೆಯಿಂದ 11.2 ಕೋಟಿ ಕಲೆಕ್ಷನ್ ಆಗಿದೆ. ತಮಿಳು, ಮಲಯಾಳಂನಿಂದ ತಲಾ 1.2 ಕೋಟಿ ರೂಪಾಯಿ, ಹಿಂದಿಯಿಂದ 14 ಕೋಟಿ ರೂಪಾಯಿ ಸಿಕ್ಕಿದೆ. ಕನ್ನಡ ವರ್ಷನ್​ನಿಂದ ಸಿಕ್ಕಿರುವುದು ಕೇವಲ 25 ಲಕ್ಷ ರೂಪಾಯಿ ಮಾತ್ರ.

5ನೇ ದಿನವಾದ ಸೋಮವಾರ (ಜುಲೈ 2) ʼಕಲ್ಕಿʼ ಚಿತ್ರ ಜಾಗತಿಕವಾಗಿ ಬರೋಬ್ಬರಿ 84 ಕೋಟಿ ರೂ. ಗಳಿಸಿತ್ತು. ಈ ಮೂಲಕ ಮಲ್ಟಿ ಸ್ಟಾರರ್‌ ಚಿತ್ರ ಒಟ್ಟು 635 ಕೋಟಿ ರೂ. ಬಾಚಿಕೊಂಡಿತ್ತು.

ಇದನ್ನೂ ಓದಿ: Kalki 2898 AD: ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಬರೆದ ʼಕಲ್ಕಿʼ; ಬಿಡುಗಡೆಯಾದ 5ನೇ ದಿನ ಗಳಿಸಿದ್ದು ಬರೋಬ್ಬರಿ 84 ಕೋಟಿ ರೂ.

ಸೋಮವಾರ ಭಾರತವೊಂದರಲ್ಲೇ ʼಕಲ್ಕಿʼ ಸುಮಾರು 34.6 ಕೋಟಿ ರೂ. ಗಳಿಸಿದೆ ಎಂದು ವರದಿಯೊಂದು ತಿಳಿಸಿತ್ತು. ʼʼಸೋಮವಾರ ಭಾರತದಲ್ಲಿ ಎಲ್ಲ ಭಾಷೆಗಳಲ್ಲಿ ಸೇರಿ ಸೇರಿ ಸುಮಾರು 34.6 ಕೋಟಿ ರೂ. ಬಾಚಿಕೊಂಡಿದೆ. ಇನ್ನು ಜಗತ್ತಿನ ವಿವಿಧ ಕಡೆಗಳ ಕಲೆಕ್ಷನ್‌ 45-50 ಕೋಟಿ ರೂ. ಹೀಗೆ ಒಂದೇ ದಿನ ಸುಮಾರು 84 ಕೋಟಿ ರೂ. ಬಾಚಿಕೊಂಡಿದ್ದು, ಒಟ್ಟು ಕಲೆಕ್ಷನ್‌ 635 ಕೋಟಿ ರೂ,ಗೆ ತಲುಪಿದೆʼʼ ಎಂದು ವರದಿ ತಿಳಿಸಿದೆ. ಅಧಿಕೃತ ಹೇಳಿಕೆ ಇನ್ನಷ್ಟೇ ಹೊರ ಬರಬೇಕಿದೆ. ಚಿತ್ರವನ್ನು ಸುಮಾರು 600 ಕೋಟಿ ರೂ. ಬಜೆಟ್‌ನಲ್ಲಿ ತಯಾರಿಸಲಾಗಿದ್ದು, ಈಗಾಗಲೇ ಹಾಕಿದ ದುಡ್ಡು ವಾಪಸ್‌ ಬಂದಂತಾಗಿದೆ.

ಭರ್ಜರಿ ಗಳಿಕೆ

ಮೊದಲ ದಿನ ಭರ್ಜರಿ 191 ಕೋಟಿ ರೂ. ಗಳಿಸಿದ ʼಕಲ್ಕಿʼ ಆ ಮೂಲಕ ಸ್ಯಾಂಡಲ್‌ವುಡ್‌ನ ʼಕೆಜಿಎಫ್‌ 2ʼ (159 ಕೋಟಿ ರೂ.), ʼಸಲಾರ್‌ʼ (158 ಕೋಟಿ ರೂ.), ʼಲಿಯೋʼ (142.75 ಕೋಟಿ ರೂ.), ʼಸಾಹೋʼ (130 ಕೋಟಿ ರೂ.) ಮತ್ತು ʼಜವಾನ್‌ʼ (129 ಕೋಟಿ ರೂ.) ದಾಖಲೆ ಮುರಿದೆ. ಅದಾಗ್ಯೂ 223 ಕೋಟಿ ರೂ. ಕಲೆಕ್ಷನ್‌ ಮಾಡಿದ ʼಆರ್‌ಆರ್‌ಆರ್‌ʼ ಮತ್ತು 217 ಕೋಟಿ ರೂ. ಗಳಿಸಿದ ʼಬಾಹುಬಲಿ 2ʼ ಈಗಲೂ ಮೊದಲ ದಿನದ ಕಲೆಕ್ಷನ್‌ ವಿಚಾರದಲ್ಲಿ ಮೊದಲೆರಡು ಸ್ಥಾನಗಳಲ್ಲಿ ಭದ್ರವಾಗಿವೆ.

ಬಹುತಾರಾಗಣ

ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್ ಅಶ್ವಿನ್ ಆ್ಯಕ್ಷನ್‌ ಕಟ್‌ ಹೇಳಿರುವ ʼಕಲ್ಕಿʼಯಲ್ಲಿ ಬಹುತಾರಾಗಣವಿದೆ. ಪ್ರಭಾಸ್‌ ಮತ್ತು ದೀಪಿಕಾ ಪಡುಕೋಣೆ ಮೊದಲ ಬಾರಿ ತೆರೆ ಹಂಚಿಕೊಂಡಿದ್ದು, ಬಾಲಿವುಡ್‌ನ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಕ್ಷಿಣ ಭಾರತದ ಜನಪ್ರಿಯ ತಾರೆಗಳಾದ ಕಮಲ್‌ ಹಾಸನ್‌, ಶೋಭನಾ ಮತ್ತಿತರರು ಅತಿಥಿ ಪಾತ್ರದಲ್ಲಿ ಮಿಂಚಿದ್ದಾರೆ.

Continue Reading
Advertisement
Kalki 2898 AD records global box office collection
ಟಾಲಿವುಡ್3 mins ago

Kalki 2898 AD: 1000 ಕೋಟಿ ರೂ. ಗಳಿಕೆಯತ್ತ ‘ಕಲ್ಕಿ 2898  ಎಡಿʼ; ಇಲ್ಲಿಯವರೆಗೆ ಕಲೆಕ್ಷನ್‌ ಮಾಡಿದ್ದೆಷ್ಟು?

Dengue Fever In Children
ಆರೋಗ್ಯ7 mins ago

Dengue Fever In Children: ಮಗುವಿನ ಮೈ ಬಿಸಿ ಆಗಿದೆಯೇ? ಡೆಂಗ್ಯು ಜ್ವರದ ಲಕ್ಷಣಗಳನ್ನು ತಿಳಿದುಕೊಳ್ಳಿ

Teachers Transfer
ಶಿಕ್ಷಣ9 mins ago

Teachers Transfer: 10 ವರ್ಷ ಒಂದೇ ಕಡೆ ಇದ್ದ 5,000 ಶಿಕ್ಷಕರ ವರ್ಗಾವಣೆ

Death Penalty
ದೇಶ13 mins ago

Death Penalty: ಸೌದಿ ಅರೇಬಿಯಾದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಕೇರಳದ ವ್ಯಕ್ತಿಗೆ ಬಿಡುಗಡೆ ಭಾಗ್ಯ

board exam
ಪ್ರಮುಖ ಸುದ್ದಿ16 mins ago

Board Exam: ಈ ವರ್ಷ 5, 8, 9ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ಇಲ್ಲ: ಶಿಕ್ಷಣ ಇಲಾಖೆ

T20 World Cup 2024
ಕ್ರಿಕೆಟ್22 mins ago

T20 World Cup 2024: ವಿವಾದಾತ್ಮಕ ಕ್ಯಾಚ್​ನ ಮತ್ತೊಂದು ವಿಡಿಯೊ ವೈರಲ್​

Salman Khan shares new pic from for Sikandar
ಸಿನಿಮಾ26 mins ago

Salman Khan: ಸಲ್ಮಾನ್ ಖಾನ್ ಹೊಸ ಲುಕ್‌ ವೈರಲ್‌: ‘ಸಿಕಂದರ್’ಗೆ ಫ್ಯಾನ್ಸ್‌ ಫಿದಾ!

Champions Trophy 2025
ಕ್ರೀಡೆ46 mins ago

Champions Trophy 2025: ಲಾಹೋರ್‌ನಲ್ಲಿ ಭಾರತ-ಪಾಕ್​ ಹೈವೋಲ್ಟೇಜ್​ ಪಂದ್ಯ

Yuva Rajkumar
ಸ್ಯಾಂಡಲ್ ವುಡ್1 hour ago

Yuva Rajkumar: ಅಮೆರಿಕಕ್ಕೆ ಮರಳಿದ ಶ್ರೀದೇವಿ ಭೈರಪ್ಪ; ಡಿವೋರ್ಸ್ ಕಥೆ ಏನಾಯ್ತು?

sweets Gujiya peda barfi Motichoor Laddu Indian Sweet dessert mithai festival dish
ಆರೋಗ್ಯ1 hour ago

Health Tips: ಮಧ್ಯಾಹ್ನದ ನಂತರ ಏನಾದರು ಸಿಹಿತಿನಿಸು ತಿನ್ನಬೇಕು ಅನಿಸುತ್ತಿದೆಯೆ? ಇದಕ್ಕೂ ಇದೆ ಕಾರಣ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ6 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ7 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ7 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌