Bike Wheeling: ಹೈವೇಯಲ್ಲಿ ಭಯಾನಕ ವ್ಹೀಲಿಂಗ್‌ ಜತೆಗೆ ಯುವತಿಗೆ ಕೀಟಲೆ ಮಾಡಿದ ಪುಂಡರು! - Vistara News

ಬೆಂಗಳೂರು ಗ್ರಾಮಾಂತರ

Bike Wheeling: ಹೈವೇಯಲ್ಲಿ ಭಯಾನಕ ವ್ಹೀಲಿಂಗ್‌ ಜತೆಗೆ ಯುವತಿಗೆ ಕೀಟಲೆ ಮಾಡಿದ ಪುಂಡರು!

ಹೈವೇಯಲ್ಲಿ ಭಯಾನಕ ವ್ಹೀಲಿಂಗ್‌ ಮಾಡುವುದಲ್ಲದೇ (Bike Wheeling) ಬೈಕ್‌ನಲ್ಲಿ ಓಡಾಡುವ ಯುವತಿಯರಿಗೆ ಕೀಟಲೆ ಮಾಡಿ ಪುಂಡರು ರ‍್ಯಾಗಿಂಗ್‌ ಮಾಡಿದ್ದಾರೆ. ಪುಂಡರ ಹಾವಳಿ ತಪ್ಪಿಸುವಲ್ಲಿ ಪೊಲೀಸರು ಹಿಂದೆ ಬಿದ್ದಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

VISTARANEWS.COM


on

bike wheeling
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆನೇಕಲ್: ಬೆಂಗಳೂರಿನ ಬೀದಿಗಳಲ್ಲಿ ಭಯಾನಕ ವ್ಹೀಲಿಂಗ್‌ (Bike Wheeling) ಹಾವಳಿ ಹೆಚ್ಚಾಗಿದೆ. ವ್ಹೀಲಿಂಗ್‌ ಜತೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವತಿಗೆ ಕೀಟಲೆ ಮಾಡಿ ಯುವಕರು ಪುಂಡಾಟ ಮೆರೆದಿದ್ದಾರೆ. ಪುಂಡರ ಹಾವಳಿಗೆ ವಾಹನ ಸವಾರರು ಬೇಸತ್ತು ಹೋಗಿದ್ದಾರೆ.

ಟ್ರಾಫಿಕ್ ಪೊಲೀಸರ ಕಣ್ತಪ್ಪಿಸಿ ಸಿಕ್ಕಸಿಕ್ಕ ರೋಡ್‌ಗಳಲ್ಲಿ ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡುವ ಚಟ ಹಲವು ಯುವಕರಲ್ಲಿ ಕಂಡುಬರುತ್ತಿದೆ. ಇದೀಗ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆದ್ದಾರಿಯುದ್ದಕ್ಕೂ ವ್ಹೀಲಿಂಗ್‌ ಮಾಡಿ ಕಿರಿಕಿರಿ ಮಾಡಿದ್ದಾರೆ. ಮಾತ್ರವಲ್ಲದೇ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕ- ಯುವತಿಯರನ್ನು ಚುಡಾಯಿಸಿರುವುದು ಕಂಡು ಬಂದಿದೆ.

ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಜನ ಯುವಕರ ತಂಡವು ಎಲೆಕ್ಟ್ರಾನಿಕ್ ಸಿಟಿಯಿಂದ ಚಂದಾಪುರದವರೆಗೆ ಯುವತಿಯನ್ನು ಹಿಂಬಾಲಿಸುತ್ತಾ ಕೀಟಲೆ ಮಾಡಿದ್ದಾರೆ. ಹಲವು ಬಾರಿ ಯುವತಿ ಎಚ್ಚರಿಕೆ ನೀಡಿದರೂ ಯುವಕರು ಹುಚ್ಚಾಟ ಮೆರೆದಿದ್ದಾರೆ. ವ್ಹೀಲಿಂಗ್‌ ಮಾಡಿ ಇತರೆ ವಾಹನಗಳಿಗೂ ಕಿರಿಕ್ ಮಾಡಿದ್ದಲ್ಲೇ ರಾಜಾರೋಷವಾಗಿ ಹೆದ್ದಾರಿಯಲ್ಲಿ ಯುವತಿಯರನ್ನು ರೇಗಿಸಿದ್ದಾರೆ.

ಇದನ್ನೂ ಓದಿ: Road Accident : ತಿರುವಿನಲ್ಲಿ ಕಂದಕಕ್ಕೆ ಉರುಳಿದ ಬಸ್‌; ಚಾಲಕ ಸೇರಿ ಮೂವರು ಗಂಭೀರ

ಇತ್ತ ಕಾರು-ಆಟೋ ಚಾಲಕರು ಸೂಚನೆಗೂ ತಲೆ ಕೆಡಿಸಿಕೊಳ್ಳದೆ ಯುವಕರು ಪುಂಡಾಟಿಕೆ ತೋರಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆ ಎದುರಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕ ಯುವತಿಗೆ ತೊಂದರೆ ಮಾಡಿದ್ದಾರೆ. ಬಳಿಕ ಯುವತಿ ಮೊಬೈಲ್‌ನಲ್ಲಿ ವಿಡಿಯೊ ಮಾಡಿಕೊಳ್ಳಲು ಶುರು ಮಾಡುತ್ತಿದ್ದಂತೆ ತಾವು ಧರಿಸಿದ್ದ ಶರ್ಟ್‌ನಲ್ಲೇ ಮುಖ ಮುಚ್ಚಿಕೊಂಡು ಎಸ್ಕೇಪ್‌ ಆಗಲು ಯತ್ನಿಸಿದ್ದಾರೆ.

ಬೈಕ್‌ನಿಂದ ಸ್ಕಿಡ್‌ ಆಗಿ ಕೆಳಗೆ ಬಿದ್ದ ಸವಾರ ಸಾವು

ಅತಿ ವೇಗ ಚಾಲನೆಯಿಂದ ಅಪಘಾತ ಸಂಭವಿಸಿದ್ದು, ಯುವಕನೊರ್ವ ಮೃತಪಟ್ಟಿದ್ದಾನೆ. ಬೈಕ್‌ನಿಂದ ಸ್ಕಿಡ್ ಆಗಿ ಕೆಳಗೆ ಬಿದ್ದ ಕುಮಾರ್ (30) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಿನ್ನೆ ತಡರಾತ್ರಿ 1.30ಕ್ಕೆ ಬೆಂಗಳೂರಿನ ಬೊಮ್ಮನಹಳ್ಳಿ ಆಕ್ಸ್‌ಫರ್ಡ್ ಕಾಲೇಜು ಮುಂಭಾಗ ಘಟನೆ ನಡೆದಿದೆ.

ಕುಮಾರ್ ಮತ್ತು ನವೀನ್ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಬೈಕ್ ಸ್ಕಿಡ್ ಆಗಿ ಇಬ್ಬರು ಕೆಳಗೆ ಬಿದ್ದಿದ್ದಾರೆ. ಸ್ಥಳದಲ್ಲೇ ಕುಮಾರ್ ಮೃತಪಟ್ಟರೇ ನವೀನ್‌ ಗಂಭೀರ ಗಾಯಗೊಂಡಿದ್ದಾನೆ. ಸದ್ಯ ನವೀನ್ (20) ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕುಮಾರ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಡಿವಾಳ ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain : ರಾಜ್ಯದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಮನೆ ಕುಸಿತ, ಗುಡ್ಡ ಕುಸಿತದಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಗುಡ್ಡ ಕುಸಿತಕ್ಕೆ ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್ ಆಗಿದ್ದರಿಂದ ಇತ್ತ ಯಕ್ಷಗಾನ ಕಲಾವಿದನ ಮನೆಗೆ ಹಾನಿಯಾಗಿದೆ.

VISTARANEWS.COM


on

By

karnataka Rain
Koo

ಕಾರವಾರ/ಶಿವಮೊಗ್ಗ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ (Karnataka Rain) ಪ್ರಕರಣ ಹೆಚ್ಚಾಗುತ್ತಿದೆ. ರಸ್ತೆ ಮೇಲೆ ಗುಡ್ಡ ಕುಸಿದ ಪರಿಣಾಮ ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-206 ಬಂದ್ ಆಗಿದೆ. ವರ್ನಕೇರಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಕಾಏಕಿ ಗುಡ್ಡ ಕುಸಿದಿದೆ. ಗುಡ್ಡ ಕುಸಿತದಿಂದ ರಾಷ್ಟ್ರೀಯ ಹೆದ್ದಾರಿ ಮೇಲೆ ದೊಡ್ಡ ಮರ ಹಾಗೂ ಮಣ್ಣು ಬಿದ್ದಿದೆ. ಇದರಿಂದ ವಾಹನ ಸವಾರರು ಆತಂಕಗೊಂಡಿದ್ದಾರೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಭಾರಿ ಮಳೆಗೆ ಕುಸಿದು ಬಿದ್ದ ಯಕ್ಷಗಾನ ಕಲಾವಿದನ ಮನೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಗ್ರಾಮದಲ್ಲಿ ಭಾರಿ ಮಳೆಯಾಗುತ್ತಿದೆ. ಭಾರಿ ಮಳೆಗೆ ಹೊನ್ನೆತಾಳು ಗ್ರಾಮದ ಯಕ್ಷಗಾನ ಕಲಾವಿದ ನಂದನ್‌ ಶೆಟ್ಟಿ ಅವರ ಮನೆ ಕುಸಿದು ಬಿದ್ದಿದೆ. ನಂದನ ಶೆಟ್ಟಿ‌ ಮಂದಾರ್ತಿ ಮೇಳದಲ್ಲಿ ಯಕ್ಷಗಾನ ಕಲಾವಿದರಾಗಿದ್ದಾರೆ. ಮನೆ ಕುಸಿಯುವಾಗ ಅದೃಷ್ಟ ವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಕಳೆದುಕೊಂಡು ಕಂಗಲಾಗಿರುವ ಕಲಾವಿದನ ಕುಟುಂಬವು ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

karnataka Rain

ಕೊಡಗಿನಲ್ಲಿ ಇಲ್ಲೆಲ್ಲ ನಿಷೇಧ

ಮಹಾರಾಷ್ಟ್ರ ಫಾಲ್ಸ್ ದುರಂತದ ಬೆನ್ನೆಲ್ಲೆ ಪ್ರವಾಸಿ ತಾಣಗಳ ಬಗ್ಗೆ ಕೊಡಗು ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದೆ. ಪ್ರವಾಸಿಗರು ಜಲಪಾತಗಳು, ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತ ನಿಷೇಧ ಹೇರಿದೆ. ನೀರಿನಲ್ಲಿ ಇಳಿದು ಕ್ರೀಡೆ, ಫೋಟೋ ತೆಗೆಯುವ ದುಸ್ಸಾಹಕ್ಕೆ ಕಡಿವಾಣ ಹಾಕಲಾಗಿದೆ. ಮಳೆಗಾಲದಲ್ಲಿ ಹೆಚ್ಚುತ್ತಿರುವ ಜಲ ಸಂಬಂಧಿ ಸಾವಿನ ಪ್ರಕರಣಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಆದೇಶ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ. ನದಿಗಳಲ್ಲಿ ನಡೆಯುವ ರ‍್ಯಾಫ್ಟಿಂಗ್ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಇಲ್ಲ ಎಂದಿದ್ದಾರೆ.

ಮನೆ ಮೇಲೆ ಬಿದ್ದ ರಸ್ತೆ ಬದಿಯ ತಡೆಗೋಡೆ; ಜೀಪ್ ಸಂಪೂರ್ಣ ಜಖಂ

ಚಿಕ್ಕಮಗಳೂರಿನಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಮನೆಯ ಮೇಲೆ ರಸ್ತೆ ಬದಿಯ ತಡೆಗೋಡೆ ಬಿದ್ದು,
ಮನೆಯಂಗಳದಲ್ಲಿ ನಿಲ್ಲಿಸಿದ್ದ ಜೀಪ್ ಸಂಪೂರ್ಣ ಜಖಂಗೊಂಡಿದೆ. ಕಳಸ ತಾಲೂಕಿನ ಕಚ್ಚಿ ಗಾನೆ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ರಂಗನಾಥ್ ಎಂಬುವರ ಮನೆಗೆ ಹಾನಿಯಾಗಿದ್ದು, ಧರೆ ಇನ್ನಷ್ಟು ಕುಸಿಯುವ ಆತಂಕ ಹೆಚ್ಚಿದೆ.
ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

ಈ ತಾಣಗಳಿಗೆ ಹೋಗಬೇಡಿ

ಮಂಗಳೂರು: ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದಾಗಿ (Rain News) ಹೊಳೆ- ಹಳ್ಳಗಳು ತುಂಬಿಕೊಂಡಿದ್ದು, ಜಲಪಾತಗಳು (falls) ಭೋರ್ಗರೆಯುತ್ತಿವೆ. ಆದರೆ ಅಪಾಯವೂ ಇರುವುದರಿಂದಾಗಿ, ಜಲಪಾತಗಳತ್ತ ತೆರಳದಂತೆ ಪ್ರವಾಸಿಗರಿಗೆ ನಿರ್ಬಂಧ (No Entry) ವಿಧಿಸಲಾಗಿದೆ. ಬೆಟ್ಟಗುಡ್ಡಗಳಿಗೆ ಟ್ರೆಕ್ಕಿಂಗ್‌ (Trekking) ಹೋಗುವವರಿಗೂ ಮುಂದಿನ ಸೂಚನೆ ಸಿಗುವವರೆಗೂ ಮುಂದುವರಿಯದಂತೆ ಸೂಚಿಸಲಾಗಿದೆ.

ಈ ನಾಲ್ಕು ಜಿಲ್ಲೆಗಳಲ್ಲಿ ಹಲವು ಪ್ರವಾಸಿ ಸ್ಥಳಗಳಿಗೆ (tourist places) ಭೇಟಿ ನೀಡಲು ಅರಣ್ಯ ಇಲಾಖೆ (Forest Department) ನಿರ್ಬಂಧ ವಿಧಿಸಿದೆ. ವನ್ಯಜೀವಿ (Wildlife) ವಲಯದ ವ್ಯಾಪ್ತಿಗೆ ಬರುವ ಕಾಡುಗಳು, ಬೆಟ್ಟಗಳು- ಜಲಪಾತಗಳ ಪ್ರವೇಶ ನಿರ್ಬಂಧಿಸಲಾಗಿದೆ. ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ನರಸಿಂಹಗಡ (ಗಡಾಯಿಕಲ್ಲು) ಬೆಟ್ಟ, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಜಲಪಾತಗಳತ್ತ ತೆರಳದಂತೆ ನಿರ್ಬಂಧಿಸಲು ಬೆಳ್ತಂಗಡಿ ಆರ್‌ಎಫ್‌ಓಗೆ ಕುದುರೆಮುಖ ಸಿಎಫ್ ಆದೇಶ ನೀಡಿದ್ದಾರೆ.

ಯಲ್ಲಾಪುರ ಫಾಲ್ಸ್‌ಗಳಿಗೆ ನಿರ್ಬಂಧ

ಕಾರವಾರ: ಯಲ್ಲಾಪುರ ತಾಲೂಕಿನಾದ್ಯಂತ ಅಬ್ಬರದ ಮಳೆ ಹಿನ್ನೆಲೆಯಲ್ಲಿ ಧಾರಾಕಾರ ಮಳೆಗೆ ಜಲಪಾತ ಮೈದುಂಬಿ ಧುಮುಕುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಲವು ಜಲಪಾತಗಳಿಗೆ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ. ಯಲ್ಲಾಪುರದ ಸಾತೊಡ್ಡಿ ಜಲಪಾತ ಇದರಲ್ಲಿ ಮುಖ್ಯವಾಗಿದ್ದು, ಮಳೆಗಾಲದಲ್ಲಿ ವಿವಿಧೆಡೆಗಳಿಂದ ಜಲಪಾತ ವೀಕ್ಷಣೆಗೆ ಇಲ್ಲಿ ಪ್ರವಾಸಿಗರು ಬರುತ್ತಾರೆ. ಜಲಪಾತ ಅಪಾಯಕಾರಿ ಮಟ್ಟದಲ್ಲಿ ತುಂಬಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ತಪ್ಪಿಸಲು ಸ್ಥಳೀಯ ಆಡಳಿತ ಕ್ರಮ ಕೈಗೊಂಡಿದೆ.

ಗಂಗಾವಳಿ ನದಿ ನೀರಿ‌ನ ಪ್ರಮಾಣ ಹೆಚ್ಚಳದಿಂದ ತಾಲೂಕಿನ ಹಲವು ಫಾಲ್ಸ್‌ಗಳಿಗೆ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹಾಕಲಾಗಿದೆ. ಯಲ್ಲಾಪುರದ ಶಿರಲೆ ಫಾಲ್ಸ್, ಕಾನೂರು ಫಾಲ್ಸ್, ಕುಳಿ ಮಾಗೋಡು ಜಲಪಾತಗಳಲ್ಲಿ ಅರಣ್ಯ ಇಲಾಖೆ, ಸ್ಥಳೀಯ ಗ್ರಾಮ ಅರಣ್ಯ ಸಮಿತಿಯಿಂದ ಪ್ರವೇಶ ನಿಷೇಧ ಮಾಡಲಾಗಿದೆ. ತಾಲೂಕಿನ ಪಣಸಗುಳಿ ಸೇತುವೆ ಮುಳುಗಡೆ ಹಾಗೂ ಗಂಗಾವಳಿ ನದಿ ಉಕ್ಕಿ ಹರಿಯುತ್ತಿರುವ ಹಿನ್ನಲೆ ಸಂಚಾರ ನಿರ್ಬಂಧಿಸಲಾಗಿದೆ.

ಶೃಂಗೇರಿಯಲ್ಲಿ ತುಂಬಿಕೊಂಡ ತುಂಗೆ

ಚಿಕ್ಕಮಗಳೂರು: ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಶೃಂಗೇರಿಯ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಾಗಿ ತುಂಗಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಂದಿದೆ. ತುಂಗಾ ನದಿ ಅಪಾಯದ ಅಂಚಿನಲ್ಲಿ ಹರಿಯುತ್ತಿದೆ. ಶೃಂಗೇರಿ ಶಾರದಾಂಬಾ ದೇವಾಲಯದ ದಡದವರೆಗೆ ತುಂಗೆಯ ನೀರು ಬಂದಿದೆ. ತುಂಗಾ ನದಿ ಇಕ್ಕೆಲಗಳ ತೋಟಗಳು ಜಲಾವೃತ‌ವಾಗಿವೆ.

ಶಾಲೆಗಳಿಗೆ ರಜೆ

ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಿ ಬೆಳ್ತಂಗಡಿ ಹಾಗೂ ಬಂಟ್ವಾಳ ತಹಶೀಲ್ದಾರ್ ಆದೇಶ ನೀಡಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ಶಿಕ್ಷಣ ವಲಯ ವ್ಯಾಪ್ತಿಯಲ್ಲಿ ಒಂದರಿಂದ ಹತ್ತನೇ ತರಗತಿವರೆಗೆ ರಜೆ ನೀಡಲಾಗಿದೆ. ಭೌಗೋಳಿಕವಾಗಿ ತಗ್ಗು ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ನೀಡಲಾಗಿದೆ ಎಂದು ಉಡುಪಿ ಡಿಸಿ ಡಾ. ವಿದ್ಯಾ ಕುಮಾರಿ ಮಾಹಿತಿ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು ಗ್ರಾಮಾಂತರ

Electric shock : ಕತ್ತಲಲ್ಲಿ ಕೆಲಸಕ್ಕೆ ಹೋದವನಿಗೆ ಕರೆಂಟ್‌ ಶಾಕ್‌

Electric shock : ಶೌಚಾಲಯ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ವಿದ್ಯುತ್ ಅವಘಡದಲ್ಲಿ ಯುವಕನೊರ್ವ ದಾರುಣವಾಗಿ ಮೃತಪಟ್ಟಿದ್ದಾನೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Electric shock
Koo

ದೇವನಹಳ್ಳಿ: ಶೌಚಾಲಯ ಕಟ್ಟಡ ಕೆಲಸ ಮಾಡುವಾಗ ಕರೆಂಟ್‌ ಶಾಕ್‌ನಿಂದ (Electric shock) ಯುವಕನೊರ್ವ ಮೃತಪಟ್ಟಿದ್ದಾನೆ. ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ತಾಲೂಕಿನ ಯರ್ತಿಗಾನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ವಿಜಯಪುರ ಮೂಲದ ಶ್ರೇಯಸ್ (18) ಮೃತ ದುರ್ದೈವಿ.

ನಿನ್ನೆ ರಾತ್ರಿ ಶೌಚಾಲಯ ಕಟ್ಟಡ ಕೆಲಸ ಮಾಡಲು ಹೋಗಿದ್ದ ಶ್ರೇಯಸ್‌ಗೆ, ಮನೆ ಮುಂದಿದ್ದ ವಿದ್ಯುತ್ ಲೈನ್ ತಾಗಿದೆ. ಈ ವೇಳೆ ಕರೆಂಟ್‌ ಶಾಕ್‌ನಿಂದಾಗಿ ಶ್ರೇಯಸ್‌ ಕುಸಿದು ಬಿದ್ದಿದ್ದಾನೆ. ಘಟನೆ ಬಳಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆದರೆ ಚಿಕಿತ್ಸೆ ಫಲಿಸದೇ ಶ್ರೇಯಾಸ್‌ ಮೃತಪಟ್ಟಿದ್ದಾರೆ.

ಶೌಚಾಲಯ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ವಿದ್ಯುತ್ ಅವಘಡದಲ್ಲಿ ಯುವಕ ಮೃತಪಟ್ಟ ಸುದ್ದಿ ಕೇಳಿ ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಿನ್ನೆ ಸಂಜೆ ಕೆಲಸಕ್ಕೆಂದು ಶ್ರೇಯಾಸ್‌ನನ್ನು ಕರೆದುಕೊಂಡು ಹೋಗಿದ್ದರು. ಮಹಡಿ ಮೇಲೆ ವಿದ್ಯುತ್ ವೈರ್ ಎಲ್ಲ ಡಿಸ್ಕನೆಕ್ಟ್ ಆಗಿದ್ದರಿಂದ ಈ ಅವಘಡ ಸಂಭವಿಸಿದೆ.

ನಮಗೆ ನಿನ್ನೆ ಸಂಜೆ 7:30ಕ್ಕೆ ಶ್ರೇಯಾಸ್‌ಗೆ ಕರೆಂಟ್‌ ಶಾಕ್‌ ಹೊಡೆದಿದೆ ಎಂದು ತಿಳಿಯಿತು. ಅವಘಡ ನಡೆದಾಗಲೇ ಬೇಗ ಆಸ್ಪತ್ರೆಗೆ ದಾಖಲಿಸಿದ್ದರೆ ಜೀವ ಉಳಿಯುತ್ತಿತ್ತು, ಆದರೆ ಯಾರೊಬ್ಬರು ಕಾಳಜಿ ತೋರದೆ ನಿರ್ಲಕ್ಷ್ಯವಹಿಸಿದ್ದಾರೆ. ಆಸ್ಪತ್ರೆಗೆ ಬಂದಾಗ ಪಲ್ಸ್ ರೇಟ್ ಕಡಿಮೆ ಆಗಿ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ದೊರೆತಿಲ್ಲ ಎಂದು ಕುಟುಂಬಸ್ಥರು ಅಳಲು ತೊಡಿಕೊಂಡರು.

ಕೆಂಪೇಗೌಡ ಏರ್‌ಪೋರ್ಟ್‌ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ: Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

ಹತ್ರಾಸ್‌ ಕಾಲ್ತುಳಿತ- FIRನಲ್ಲಿ ಭೋಲೇ ಬಾಬಾನ ಹೆಸರೇ ಇಲ್ಲ!

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಗ್ರಾಮದಲ್ಲಿ ಕಾಲ್ತುಳಿತ(Hathras Stampede)ಕ್ಕೆ ಧಾರ್ಮಿಕ ಕಾರ್ಯಕ್ರಮ ಸತ್ಸಂಗ ಕಾರ್ಯಕ್ರಮ ಆಯೋಜಿಸಿದ್ದ ಮುಖ್ಯ ಸೇವಾಧರ್‌ ದೇವ್‌ಪ್ರಕಾಶ್‌ ಮಧುಕರ್‌ ಮತ್ತು ಇತರೆ ಆಯೋಜಕರ ವಿರುದ್ಧ ಸಿಕಂದ್ರ ರಾವ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಆದರೆ ಸತ್ಸಂಗ ನಡೆಸಿದ್ದ ಭೋಲೇ ಬಾಬಾ(Bhole Baba) ಹೆಸರು ಎಫ್‌ಐಆರ್‌ನಲ್ಲಿ ದಾಖಲಾಗಿಲ್ಲ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 105, 110, 126(2), 223, ಮತ್ತು 238ರ ಅಡಿಯಲ್ಲಿ ಈ ಪ್ರಕರಣ ದಾಖಲಿಸಲಾಗಿದೆ. ಈ ಮಧ್ಯೆ ಸತ್ಸಂಗ ಕಾರ್ಯಕ್ರಮ ಆಯೋಜಿಸಿದ್ದ ನಾರಾಯಣ ಸಕಾರ್‌ ಹರಿ (Narayan Sakaar Hari) ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ ನಾಪತ್ತೆಯಾಗಿದ್ದಾರೆ. ಅವರ ಪತ್ತೆಗಾಗಿ ಉತ್ತರ ಪ್ರದೇಶ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಭೋಲೆ ಬಾಬಾ ಅವರಿಗಾಗಿ ಮೈನ್ಪುರಿ ಜಿಲ್ಲೆಯ ರಾಮ್ ಕುಟೀರ್ ಚಾರಿಟಬಲ್ ಟ್ರಸ್ಟ್‌ನಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತಾದರೂ ಅವರು ಕ್ಯಾಂಪಸ್ ಒಳಗೆ ಕಂಡುಬಂದಿಲ್ಲʼʼ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಕುಮಾರ್ ತಿಳಿಸಿದರು.

ಇನ್ನು ಭೋಲೆ ಬಾಬಾ ಮೈನ್‌ಪುರಿ ನಗರದ ಹೊರವಲಯದಲ್ಲಿರುವ ಅವರ ಆಶ್ರಮದಲ್ಲಿದ್ದಾರೆ ಎನ್ನಲಾಗಿದ್ದು, ಆಶ್ರಮಕ್ಕೆ ಬಿಗಿ ಬಂದೋಬಸ್ತ್‌ ನೀಡಲಾಗಿದೆ. ಆದರೆ ಮೈನ್‌ಪುರಿಯಲ್ಲಿರುವ ಆಶ್ರಮದ ಬಳಿ ನಿಯೋಜಿಸಲಾದ ಪೊಲೀಸ್ ಅಧಿಕಾರಿಗಳು ಭೋಲೆ ಬಾಬಾ ಆಶ್ರಮದಲ್ಲಿ ಇರುವುದನ್ನು ತಳ್ಳಿಹಾಕಿದ್ದಾರೆ ಮತ್ತು ಮಂಗಳವಾರದ ಘಟನೆಯ ಹಿನ್ನೆಲೆಯಲ್ಲಿ ಆಶ್ರಮದೊಳಗಿನ ಭೋಲೆ ಬಾಬಾ ಅವರ ಅನುಯಾಯಿಗಳ ಸುರಕ್ಷತೆಗಾಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ.

ಮಂಗಳವಾರ ಫುಲ್ರೈ ಗ್ರಾಮದಲ್ಲಿ ಆಯೋಜಿಸಲಾಗಿದ್ದ ‘ಸತ್ಸಂಗ’ದಲ್ಲಿ ಸುಮಾರು 2.5 ಲಕ್ಷ ಜನ ಸೇರಿದ್ದರು. ಆದರೆ ಸಂಘಟಕರು ಇದನ್ನು ಮರೆಮಾಚಿದ್ದರು. ಸಂಘಟಕರು ಕೇವಲ 80,000 ಜನ ಭಾಗಿಯಾಗಿದ್ದರು ಎಂದು ಹೇಳಿದ್ದರು. ಹೀಗಾಗಿ ಸತ್ಸಂಗ’ದಲ್ಲಿ ಪಾಲ್ಗೊಳ್ಳುವವರ ಸಂಖ್ಯೆ ಲಕ್ಷಗಟ್ಟಲೆ ಇರುತ್ತದೆ ಎಂಬ ಅಂಶವನ್ನು ಮರೆಮಾಚಿದ್ದಕ್ಕಾಗಿ ಸಂಘಟಕರನ್ನು ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ.

ಸತ್ಯಂಗ ಮುಗಿಸಿ ಭೋಲೆ ಬಾಬಾ ಅವರು ಅಪರಾಹ್ನ 3.30ರ ಸುಮಾರಿಗೆ ಸ್ಥಳದಿಂದ ಹೊರಡುವಾಗ ಕಾಲ್ತುಳಿತ ಸಂಭವಿಸಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ಈಗಾಗಲೇ ಆದೇಶಿಸಿದ್ದಾರೆ. ಹತ್ರಾಸ್ ಘಟನೆಯ ಹಿಂದಿನ ಸತ್ಯವನ್ನು ಬಹಿರಂಗಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರಕಾರವು ಎಸ್‌ಐಟಿ ರಚಿಸಿದ್ದಲ್ಲದೇ, ಹೈಕೋರ್ಟ್‌ನ ನಿವೃತ್ತ ಜಡ್ಜ್‌ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಲು ನಿರ್ಧರಿಸಿದೆ. ಹತ್ರಾಸ್‌ನ ಜಿಲ್ಲಾಸ್ಪತ್ರೆಗೆ ಭೇಟಿ ಕೊಟ್ಟು ಗಾಯಾಳುಗಳನ್ನು ವಿಚಾರಿಸಿದ ನಂತರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು, ”ಈ ದುರಂತ ಅತೀವ ಬೇಸರ ತರಿಸಿದೆ. ಇದೊಂದು ಆಕಸ್ಮಿಕವೋ ಅಥವಾ ದೊಡ್ಡ ಸಂಚಿನ ಭಾಗವೋ ಎಂಬುದು ಗೊತ್ತಾಗಬೇಕಿದೆ. ಎಲ್ಲ ಆಯಾಮಗಳಿಂದಲೂ ತನಿಖೆ ನಡೆಯಬೇಕಿದೆ. ಸರಕಾರವು ಆಗ್ರಾದ ಎಡಿಜಿ ಅನುಪಮ್‌ ಕುಲಶ್ರೇಷ್ಠ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಹಾಗೆಯೇ ಹೈಕೋರ್ಟ್‌ ನಿವೃತ್ತ ಜಡ್ಜ್‌ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಲು ನಿರ್ಧರಿಸಲಾಗಿದೆ,” ಎಂದು ಮಾಧ್ಯಮಗಳಿಗೆ ವಿವರ ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Karnataka Rain: ರಾಜ್ಯಾದ್ಯಂತ ಹಲವೆಡೆ ಮಳೆಯು ಅಬ್ಬರಿಸುತ್ತಿದ್ದು, ಜನ-ಜೀವನ ಅಸ್ತವ್ಯಸ್ತವಾಗಿದೆ. ರಾತ್ರಿ ಸುರಿದ ಒಂದು ಮಳೆಗೆ ಹಲವು ಗ್ರಾಮಗಳು ಮುಳುಗಡೆಯಾಗಿವೆ. ಮಳೆಗೆ ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಬಸ್‌ವೊಂದು ಸಿಲುಕಿಕೊಂಡು ಪ್ರಯಾಣಿಕರು ಕಂಗಲಾದರು.

VISTARANEWS.COM


on

By

Karnataka Rain
Koo

ಬೆಂಗಳೂರು/ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕ (karnataka Rain) ಮಳೆಯಾಗುತ್ತಿದ್ದು, ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766Eಯ ಕತಗಾಲ ಬಳಿ ಚಂಡಿಕಾ ಹೊಳೆ ಉಕ್ಕಿ ರಸ್ತೆಗೆ ಹರಿದಿದೆ. ಪರಿಣಾಮ ಬಸ್‌ವೊಂದು ನೀರಿನಲ್ಲಿ ಸಿಲುಕಿತ್ತು. ಗ್ರಾಮ ಪಂಚಾಯತಿ ಅಧಿಕಾರಿಗಳು, ಸ್ಥಳೀಯರಿಂದ ಬೋಟ್ ಮೂಲಕ ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರ ರಕ್ಷಣೆ ಮಾಡಲಾಗಿದೆ. ಶಿರಸಿ-ಕುಮಟಾ ಹೆದ್ದಾರಿ ಸಂಚಾರ ಬಂದ್ ಆಗಿದ್ದು, ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಪ್ರತಿವರ್ಷ ಮಳೆಗಾಲದಲ್ಲಿ (karnataka weather forecast) ಚಂಡಿಕಾ ಹೊಳೆ ತುಂಬಿ ಹರಿಯಲಿದೆ.

ಚಾರ್ಮಾಡಿ ಹೆದ್ದಾರಿ ತಡೆಗೋಡೆಗಳಲ್ಲಿ ಬಿರುಕು

ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರಿದ್ದು, ಚಾರ್ಮಾಡಿ ಹೆದ್ದಾರಿಯ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಲ್ಲಲ್ಲಿ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿದೆ. ಹೊಸ ಕಾಮಗಾರಿ ನಡೆದ ಸ್ಥಳದಲ್ಲೇ ಬಿರುಕು ಕಾಣಿಸಿಕೊಂಡಿದೆ. ಮಳೆ ಹಾಗೂ ಮಂಜಿನ ನಡುವೆ ರಸ್ತೆ ಬಿರುಕು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ರಸ್ತೆಗೆ ಕೋಟ್ಯಂತರ ರೂಪಾಯಿ ವ್ಯಯಿಸಿದರೂ ಪ್ರಯೋಜನವಾಗಿಲ್ಲ. ಕಳಪೆ ಗುಣಮಟ್ಟದ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇತ್ತ ರಾತ್ರಿಯಿಡೀ ಸುರಿದ ಮಳೆಗೆ ಸೇತುವೆ ಮೇಲೆ ನೀರು ಉಕ್ಕಿ ಹರಿಯುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಾಳೆ ಗದ್ದೆ ಬಿಳ್ಳೂರು ಗ್ರಾಮದಲ್ಲಿ ಬಿಳ್ಳೂರು- ಮುಲ್ಲರ ಹಳ್ಳಿ ಸೇರಿ ಹಲವು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲೆ ನೀರು ನದಿಯಂತೆ ಉಕ್ಕಿ ಹರಿಯುತ್ತಿದೆ. ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಗ್ರಾಮಸ್ಥರು ಪರದಾಟ ಅನುಭವಿಸುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.

ಶೃಂಗೇರಿಯ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಶೃಂಗೇರಿ ಶಾರದಾಂಭೆ ತಟದಲ್ಲಿ ತುಂಗಾ ನದಿ ದೊಡ್ಡ ಪ್ರಮಾಣದಲ್ಲಿ ಹರಿಯುತ್ತಿದೆ. ತುಂಗಾ ನದಿ ಇಕ್ಕೆಲಗಳ ತೋಟಗಳು ಜಲಾವೃತ‌ವಾಗುವ ಸಾಧ್ಯತೆ ಇದೆ. ಇತ್ತ ಅಪಾಯದ ಮಟ್ಟ ಮೀರಿದ ಭದ್ರಾ ನದಿಯಿಂದಾಗಿ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಹಂತ ತಲುಪಿದೆ.

ಹೆಬ್ಬಾಳೆ ಸೇತುವೆಯ ಮೇಲ್ಪದರಕ್ಕೆ ಭದ್ರಾ ನೀರು ಅಪ್ಪಳಿಸುತ್ತಿದೆ. ಸೇತುವೆ ಮುಳುಗಡೆಯಾದರೆ ಹತ್ತಾರು ಹಳ್ಳಿಗಳ ಸಂಪರ್ಕ ಬಂದ್ ಆಗಲಿದೆ. ಕಳಸ-ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವೂ ಬಂದ್ ಆಗಲಿದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಪ್ರವಾಸಿಗರು ಹಾಗೂ ಸ್ಥಳೀಯರ ಓಡಾಟಕ್ಕೆ ತಡೆಹಿಡಿಯಲಾಗಿದೆ. ಯಾವುದೇ ಕ್ಷಣದಲ್ಲಾದರೂ ಸೇತುವೆ ಮೇಲೆ ನೀರು ಉಕ್ಕುವ ಸಾಧ್ಯತೆ ಇದೆ. ಹೀಗಾಗಿ ಸ್ಥಳದಲ್ಲಿಯೇ ಕಳಸ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಇದನ್ನೂ ಓದಿ: Rain News: ಭಾರಿ ಮಳೆ ಹಿನ್ನೆಲೆ, ಜಲಪಾತ ವೀಕ್ಷಣೆ- ಟ್ರೆಕ್ಕಿಂಗ್‌ಗೆ ನಿರ್ಬಂಧ; ಈ ತಾಣಗಳಿಗೆ ಹೋಗಬೇಡಿ!

ಶಿವಮೊಗ್ಗದಲ್ಲಿ ಮಳೆಗೆ ಧರೆಗುರುಳಿದ ವಿದ್ಯುತ್‌ ಕಂಬಗಳು

ಶಿವಮೊಗ್ಗದಲ್ಲೂ ಧಾರಾಕಾರ ಮಳೆಯಿಂದಾಗಿ ಹತ್ತಾರು ವಿದ್ಯುತ್ ಕಂಬಗಳು ಧರೆಗುರುಳಿವೆ. ಸಾಗರ ತಾಲೂಕಿನ ಹೊಳೆಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ವಿದ್ಯುತ್ ಕಂಬಗಳು ಬಿದ್ದಿದೆ. ಹೊಳೆಬಾಗಿಲು, ಕಳಸವಳ್ಳಿ, ತುಮರಿ ರಸ್ತೆ ವಿದ್ಯುತ್‌ ಕಂಬಗಳು ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಕೊಡಗಿನಲ್ಲಿ ಮತ್ತೆ ಮುಂದುವರಿದ ಮಳೆ

ಕೊಡಗಿನಲ್ಲಿ ತಡರಾತ್ರಿಯಿಂದ ನಿರಂತರ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು, ನದಿ ತುಂಬಿ ಹರಿಯುತ್ತಿದೆ. ಕಾವೇರಿಯ ತವರು ಬ್ರಹ್ಮಗಿರಿ ತಪ್ಪಲಿನಲ್ಲೂ ರಾತ್ರಿಯಿಂದ ಭಾರಿ ಮಳೆಯಾಗಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಸೋರುತಿಹುದು ಅರಸೀಕೆರೆ ರೈಲ್ವೆ ಫ್ಲಾಟ್ ಫಾರಂ

ಮಳೆ ಬಂದರೆ ಹಾಸನ ಜಿಲ್ಲೆಯ ಅರಸೀಕೆರೆ ಜಂಕ್ಷನ್‌ನ ರೈಲ್ವೆ ಫ್ಲಾಟ್ ಫಾರಂ ಬಚ್ಚಲು ಮನೆಯಂತೆ ಬಾಸವಾಗುತ್ತದೆ. ರೈಲ್ವೆ ಫ್ಲಾಟ್ ಫಾರಂನ ಛಾವಣಿ ಸೋರುತ್ತಿದ್ದು, ಪ್ರಯಾಣಿಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಪ್ರಯಾಣಿಕರ ಲ್ಯಾಗೇಜ್‌ಗಳ ಮೇಲೆ ನೀರು ಸೋರುತ್ತಿದ್ದು, ಕೂಡಲೇ ಛಾವಣಿ ದುರಸ್ತಿ ಮಾಡುವಂತೆ ಒತ್ತಾಯ ಕೇಳಿ ಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Actor Darshan: ಪವಿತ್ರಾ ಗೌಡ ಮತ್ತು ದರ್ಶನ್‌ ಸಂಬಂಧ ಅದಲ್ಲ: ಕಮಿಷನರ್‌ಗೆ ಪತ್ರ ಬರೆದ ವಿಜಯಲಕ್ಷ್ಮಿ

Actor Darshan: ದರ್ಶನ್ ಹಾಗೂ ಇತರೆ ಆರೋಪಿಗಳ ಬಂಧನದ ಬಗ್ಗೆ ನಗರ ಪೊಲೀಸ್ ಆಯುಕ್ತ ಬಿ.‌ದಯಾನಂದ್ ಸುದ್ದಿಗೋಷ್ಠಿ ಮಾಡಿದ್ದರು. ಆ ವೇಳೆ,‌‌ ʼದರ್ಶನ್ ಪತ್ನಿ ಪವಿತ್ರ ಗೌಡಗೆ ರೇಣುಕಾ ಸ್ವಾಮಿ ‌ಅಶ್ಲೀಲ‌ ಸಂದೇಶ ಕಳಿಸಿದ್ದʼ ಎಂದು ಉಲ್ಲೇಖ ಮಾಡಿದ್ದರು. ಆ ಸುದ್ದಿ ಎಲ್ಲಾ ಮಾಧ್ಯಮಗಳಲ್ಲಿ, ‌ಪತ್ರಿಕೆಗಳಲ್ಲಿ‌ ಪ್ರಸಾರವಾಗಿತ್ತು.

VISTARANEWS.COM


on

actor darshan vijayalakshmi pavitra gowda
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ (Parappana Agrahara Jail) ನಟ ದರ್ಶನ್ (Actor Darshan) ಹಾಗೂ ಪವಿತ್ರ ಗೌಡ (Pavitra Gowda) ಸಂಬಂಧದ ಕುರಿತು ಕಮಿಷನರ್‌ ಬಿ. ದಯಾನಂದ್‌ (Police commissioner B Dayanand) ಅವರು ನೀಡಿರುವ ಉಲ್ಲೇಖದ ಬಗ್ಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮಿ (Vijayalakshmi) ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ʼಪವಿತ್ರ ಗೌಡ ಅವರು ದರ್ಶನ್‌ ಪತ್ನಿ ಅಲ್ಲ, ದರ್ಶನ್‌ ಪತ್ನಿ ನಾನುʼ ಎಂದು ಸ್ಪಷ್ಟಪಡಿಸಿದ್ದಾರೆ.

ದರ್ಶನ್ ಹಾಗೂ ಇತರೆ ಆರೋಪಿಗಳ ಬಂಧನದ ಬಗ್ಗೆ ನಗರ ಪೊಲೀಸ್ ಆಯುಕ್ತ ಬಿ.‌ದಯಾನಂದ್ ಸುದ್ದಿಗೋಷ್ಠಿ ಮಾಡಿದ್ದರು. ಆ ವೇಳೆ,‌‌ ʼದರ್ಶನ್ ಪತ್ನಿ ಪವಿತ್ರ ಗೌಡಗೆ ರೇಣುಕಾ ಸ್ವಾಮಿ ‌ಅಶ್ಲೀಲ‌ ಸಂದೇಶ ಕಳಿಸಿದ್ದʼ ಎಂದು ಉಲ್ಲೇಖ ಮಾಡಿದ್ದರು. ಆ ಸುದ್ದಿ ಎಲ್ಲಾ ಮಾಧ್ಯಮಗಳಲ್ಲಿ, ‌ಪತ್ರಿಕೆಗಳಲ್ಲಿ‌ ಪ್ರಸಾರವಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ‌ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

“ನೀವು ಸುದ್ದಿಗೋಷ್ಠಿಯಲ್ಲಿ ದರ್ಶನ್ ಪತ್ನಿ ಪವಿತ್ರ ಗೌಡ ಎಂದು ಹೇಳಿಕೆ‌ ನೀಡಿದ್ದೀರಿ. ದರ್ಶನ್‌ಗೆ ನಾನು ಕಾನೂನುಬದ್ಧವಾಗಿ ವಿವಾಹವಾದ ಏಕೈಕ ಪತ್ನಿ. ನಮ್ಮ ವಿವಾಹವು 19.05.2003ರಂದು ಧರ್ಮಸ್ಥಳದಲ್ಲಿ ಅದ್ಧೂರಿಯಾಗಿ ನೆರವೇರಿತು. ಪವಿತ್ರ ಗೌಡ ನನ್ನ ಪತಿ ದರ್ಶನ್ ಸ್ನೇಹಿತೆ ನಿಜ. ಆದರೆ ಅವರು ದರ್ಶನ್ ಅವರ ಹೆಂಡತಿಯಲ್ಲ ಎಂದು ದಯವಿಟ್ಟು ಗಮನಿಸಿ” ಎಂದು ವಿಜಯಲಕ್ಷ್ಮಿ ಬರೆದಿದ್ದಾರೆ.

“ನೀವು ಹಾಗೂ ಗೃಹ ಸಚಿವರು ಇಬ್ಬರೂ A1 ಆರೋಪಿ ಪವಿತ್ರ ಗೌಡರನ್ನು ದರ್ಶನ್ ಪತ್ನಿ ಎಂದು ಹೇಳಿಕೆ‌ ನೀಡಿದ್ದೀರಿ. ಅದರಿಂದ ನನ್ನ ಹಾಗೂ ನನ್ನ ಮಗನ ಭವಿಷ್ಯಕ್ಕೆ ತೊಂದರೆಯಾಗಲಿದೆ. ಪವಿತ್ರ ಗೌಡ ಸಂಜಯ್ ಸಿಂಗ್ ಅವರನ್ನು ಮದುವೆಯಾಗಿದ್ದಾರೆ. ಅವರಿಗೆ ಒಬ್ಬ ಮಗಳು ಸಹ ಇದ್ದಾಳೆ. ಹೀಗಾಗಿ ಪೊಲೀಸ್ ರೆಕಾರ್ಡ್ಸ್ ಸರಿಪಡಿಸಿ” ಎಂದು ಮನವಿ ಮಾಡಿದ್ದಾರೆ.

ಜೈಲು ಸಹವಾಸಿಗಳನ್ನು ಮಾತನಾಡಿಸದ ದರ್ಶನ್‌

ಜೈಲುಪಾಲಾಗಿರುವ ನಟ ದರ್ಶನ್‌ (Actor Darshan), ಒಂದೇ ಸೆಲ್‌ನಲ್ಲಿರುವ ತನ್ನ ಶಿಷ್ಯ ವಿನಯ್‌ ಅನ್ನು ಕೂಡ ಹೆಚ್ಚು ಮಾತನಾಡಿಸುತ್ತಿಲ್ಲ, ಮೌನವಾಗಿದ್ದಾನೆ ಎಂದು ತಿಳಿದುಬಂದಿದೆ. ಪ್ರಚೋದಿಸಿ ತನ್ನಿಂದ ಕೊಲೆ (Murder Case) ಮಾಡಿಸಿದರು ಎಂಬ ಸಿಟ್ಟೇ ಇದಕ್ಕೆ ಕಾರಣ ಎನ್ನಲಾಗಿದೆ.

ಸಹವಾಸ ಮಾಡಿ ಕೆಟ್ಟ ಮೇಲೆ ದರ್ಶನ್‌ಗೆ ಬುದ್ಧಿ ಬಂದಂತಿದೆ. ರೇಣುಕಾ ಸ್ವಾಮಿ ಮೆಸೇಜ್‌ಗಳಿಂದ ಆಕ್ರೋಶಗೊಂಡಿದ್ದ ದರ್ಶನ್‌ಗೆ ಇನ್ನಷ್ಟು ಪ್ರಚೋದನೆ ನೀಡಿದವರು ಜೊತೆಯಲ್ಲಿದ್ದ ವಿನಯ್ ಮತ್ತು ಟೀಂ. ಶೆಡ್‌ನಲ್ಲಿ ಹಲ್ಲೆ ನಡೆಸುತ್ತಿದ್ದಾಗ ʼಬಾಸ್, ಬಿಡ್ಬೇಡಿ ಬಿಡ್ಬೇಡಿʼ ಎಂದು ಗ್ಯಾಂಗ್‌ ಪ್ರಚೋದನೆ ಕೊಟ್ಟಿತ್ತು. ಇದರಿಂದಾಗಿಯೇ ಕೈಮೀರಿ ಕೊಲೆ ನಡೆಯಿತು ಎಂದು ದರ್ಶನ್‌ ಭಾವಿಸಿದಂತಿದೆ.

ತಾನು ಮಾಡಿದ್ದು ತಪ್ಪೋ, ಇವರ ಮಾತು ಕೇಳಿ ಕೆಟ್ಟೆನೋ ಎಂಬ ಚಿಂತೆಯಲ್ಲೇ ಇರುವ ದರ್ಶನ್, ಇದೇ ಕಾರಣಕ್ಕೆ ಜೊತೆಯಲ್ಲೇ ಒಂದೇ ಬ್ಯಾರಕ್‌ನಲ್ಲಿದ್ದರೂ ವಿನಯ್‌ ಅನ್ನು ಹೆಚ್ಚು ಮಾತನಾಡಿಸುತ್ತಿಲ್ಲ. ಜೊತೆಗಿರುವವರ ಸಹವಾಸ ಬಿಟ್ಟು ಹೆಚ್ಚು ಒಂಟಿಯಾಗಿದ್ದಾನೆ. ನಾನು ತಪ್ಪು ಮಾಡಿಬಿಟ್ನೋ ಅಥವಾ ಜೊತೆಯಲ್ಲಿದ್ದವರ ಮಾತು ಕೇಳಿ ಕೆಟ್ನೋ ಗೊತ್ತಿಲ್ಲ ಎಂದು ಸಿಬ್ಬಂದಿಗಳ ಬಳಿ ಆತ ಮಾತಾಡಿದ್ದು ವರದಿಯಾಗಿದೆ. ತಾಯಿ ಬಂದಾಗಲೂ, ಪತ್ನಿ ಬಂದಾಗಲೂ, ರಕ್ಷಿತಾ ಪ್ರೇಮ್ ಬಂದಾಗಲೂ ದರ್ಶನ್ ಇದೇ ಮಾತು ಹೇಳಿದ್ದಾರೆ ಎನ್ನಲಾಗಿದೆ.

ಈ ನಡುವೆ, ದರ್ಶನ್‌ ಕುಟುಂಬಸ್ಥರಿಗೆ ಬಿಟ್ಟು ಉಳಿದವರ ಭೇಟಿಗೆ ಅವಕಾಶ ಕೊಡದಿರಲು ಜೈಲಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಪ್ರತಿನಿತ್ಯ ಜೈಲಿನ ಬಳಿ ವಿಐಪಿಗಳು ಬಂದರೆ ಮೈಂಟೇನ್ ಮಾಡುವುದು ಕಷ್ಟ. ಭೇಟಿಗೆ ದರ್ಶನ್ ಹೊರ ಬಂದು ವಿಸಿಟರ್ ಛೇಂಬರ್ ಬಳಿ ಬಂದರೆ ಉಳಿದ ಕೈದಿಗಳನ್ನು ಮೈಂಟೇನ್ ಮಾಡುವುದೂ ಕಷ್ಟವಾಗುತ್ತದೆ.

ಕೆಲ ಕೈದಿಗಳನ್ನು ಭೇಟಿ ಮಾಡಲು ಬರುವ ಕುಟುಂಬಸ್ಥರು ಸಹ ಮುಗಿಬೀಳುತ್ತಾರೆ. ಕೈದಿಗಳು ಸಹ ದರ್ಶನ್ ಹೊರಬಂದಾಗ ಹಿಂದೆ ಓಡೋಡಿ ಬರುತ್ತಾರೆ. ಇದೆಲ್ಲದರಿಂದಾಗಿ ಜೈಲಿನೊಳಗೆ ಸುವ್ಯವಸ್ಥೆ ಸಮಸ್ಯೆ ಆಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಇದನ್ನೂ ಓದಿ: Actor Darshan : ನಟ ದರ್ಶನ್‌ಗಾಗಿ ಊಟ ಬಿಟ್ಟು ಜೈಲಿನ ಹೊರಗೆ ವಿಶೇಷಚೇತನ ಯುವತಿ ಗೋಳಾಟ

Continue Reading
Advertisement
Viral News
ವೈರಲ್ ನ್ಯೂಸ್21 mins ago

Viral News: ಇವನು ಅಂತಿಂತಾ ಕಳ್ಳನಲ್ಲ…ಮನೆ ಎಲ್ಲಾ ದೋಚಿ, ಲೆಟರ್‌ ಬರೆದಿಟ್ಟು ಕ್ಷಮೆ ಕೇಳ್ತಾನೆ!

Chikkaballapura News
ಚಿಕ್ಕಬಳ್ಳಾಪುರ30 mins ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

Team India
ಕ್ರೀಡೆ42 mins ago

Team India: ಟೀಮ್‌ ಇಂಡಿಯಾ ಆಟಗಾರರನ್ನು ಸನ್ಮಾನಿಸಿದ ಪ್ರಧಾನಿ ಮೋದಿ

Bhole Baba
Latest47 mins ago

Hathras Case: ಭೋಲೆ ಬಾಬಾ ಇರುತ್ತಿದ್ದುದು ಫೈವ್‌ ಸ್ಟಾರ್‌ ಆಶ್ರಮದಲ್ಲಿ! ಅವರಿಗಿದೆ ಅಪಾರ ಆಸ್ತಿ!

Team India victory parade
ಪ್ರಮುಖ ಸುದ್ದಿ50 mins ago

Team India victory parade: ಸಂಜೆ 5ರಿಂದ 7ರವರೆಗೆ ಮುಂಬಯಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ರೋಡ್ ಶೋ; ನೇರ ಪ್ರಸಾರ ವೀಕ್ಷಣೆ ಹೇಗೆ?

karnataka Rain
ಮಳೆ1 hour ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Yuva Rajkumar Shreedevi Divorce Application case
ಸ್ಯಾಂಡಲ್ ವುಡ್1 hour ago

Yuva Rajkumar: ಶ್ರೀದೇವಿ-ಯುವರಾಜ್ ವಿಚ್ಛೇದನ: ಆಗಸ್ಟ್ 23ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ

Job Alert
ಉದ್ಯೋಗ1 hour ago

Job Alert: 6,128 ಬ್ಯಾಂಕ್ ಕ್ಲರ್ಕ್‌ ಹುದ್ದೆಯ ಅವಕಾಶ; ಬೇಗ ಅರ್ಜಿ ಸಲ್ಲಿಸಿ

heart attack death
ಪ್ರಮುಖ ಸುದ್ದಿ1 hour ago

Heart Attack: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಎಳೇ ಜೀವ ಬಲಿ; ಈ ಸಲ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

Job Alert
ಉದ್ಯೋಗ1 hour ago

Job Alert: ಬ್ಯಾಂಕ್‌ ಆಫ್‌ ಬರೋಡಾದ 627 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಟೈಮ್‌ ಟೇಬಲ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Chikkaballapura News
ಚಿಕ್ಕಬಳ್ಳಾಪುರ30 mins ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ1 hour ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ2 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ3 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

ಟ್ರೆಂಡಿಂಗ್‌