Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಹೇಗಿದೆ? - Vistara News

ಕರ್ನಾಟಕ

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಹೇಗಿದೆ?

Gold Rate Today:‌ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,625 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,228 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,000. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,250 ಮತ್ತು ₹ 6,62,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,824 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,280 ಮತ್ತು ₹ 7,22,800 ವೆಚ್ಚವಾಗಲಿದೆ.

VISTARANEWS.COM


on

Gold Rate Today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು(ಸೋಮವಾರ) ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate Today). ಶನಿವಾರ ಬಂಗಾರದ ದರ ತುಸು ಏರಿಕೆಯಾಗಿತ್ತು. ಭಾನುವಾರವೂ ಬೆಲೆ ಹೆಚ್ಚಳವಾಗದೆ ಗ್ರಾಹಕರು ನಿರಾಳರಾಗಿದ್ದರು. ಇದೀಗ ಇಂದೂ ಬೆಲೆ ಸ್ಥಿರವಾಗಿದೆ. ಬೆಂಗಳೂರಿನಲ್ಲಿ ಇಂದಿನ ದರದ ವಿವರ ಇಲ್ಲಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,625 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,228 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,000. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,250 ಮತ್ತು ₹ 6,62,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,824 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,280 ಮತ್ತು ₹ 7,22,800 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,660₹ 7,242
ಮುಂಬೈ₹ 6,625₹ 7,288
ಬೆಂಗಳೂರು₹ 6,625₹ 7,288
ಚೆನ್ನೈ₹ 6,685₹ 7,293

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯೂ ಕೊಂಚ ಇಳಿಮುಖವಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 90.15 ಹಾಗೂ 8 ಗ್ರಾಂಗೆ ₹ 721.20 ಇದೆ. 10 ಗ್ರಾಂಗೆ ₹ 901.50 ಹಾಗೂ 1 ಕಿಲೋಗ್ರಾಂಗೆ ₹ 90,150 ಬೆಲೆ ಬಾಳುತ್ತದೆ.

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ:Birla Opus: ಬಿರ್ಲಾ ಪೇಂಟ್ ಜಾಹೀರಾತು ನಿಮಗೂ ಇಷ್ಟ ಆಗಿರಬೇಕಲ್ಲವೇ? ಇದರ ಸಂದೇಶ ಏನು? ಹಿನ್ನೆಲೆ ಏನು? ಕುತೂಹಲಕರ ಮಾಹಿತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದಾವಣಗೆರೆ

Electric shock : ಮೋಟಾರ್‌ ಆನ್‌ ಮಾಡುವಾಗ ಕರೆಂಟ್‌ ಶಾಕ್‌ಗೆ ಮಹಿಳೆ ಸಾವು; ಮೀನು ಹಿಡಿಯಲು ಹೋಗಿ ವ್ಯಕ್ತಿ ನೀರುಪಾಲು

Electric shock: ದಾವಣೆಗರೆಯಲ್ಲಿ ಕರೆಂಟ್‌ ಶಾಕ್‌ಗೆ ಮಹಿಳೆಯೊಬ್ಬರು ಮೃತಪಟ್ಟರೆ, ನದಿಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು (Drowned in water) ನೀರುಪಾಲಾಗಿದ್ದಾರೆ.

VISTARANEWS.COM


on

By

Electric shock
Koo

ದಾವಣಗೆರೆ: ಮೋಟಾರ್ ಆನ್ ಮಾಡುವಾಗ ವಿದ್ಯುತ್ ಶಾಕ್‌ಗೆ (Electric shock) ಸ್ಥಳದಲ್ಲಿಯೇ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬೇಲಿ ಮಲ್ಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಸೌಭಾಗ್ಯ ನರಸಿಂಹಪ್ಪ (46) ವಿದ್ಯುತ್ ಶಾಕ್‌ನಿಂದ ಮೃತಪಟ್ಟವರು.

ಸೌಭಾಗ್ಯ ಬೇಲಿ ಮಲ್ಲೂರು ಗ್ರಾಮದ ಉಮಾ ಪ್ರಗತಿ ಪ್ರೌಢಶಾಲೆಯಲ್ಲಿ ಮುಖ್ಯ ಅಡುಗೆ ತಯಾರಕರಾಗಿ ಕೆಲಸ ಮಾಡುತ್ತಿದ್ದರು. ಮನೆಗೆ ನೀರು ತುಂಬಿಸುವ ವೇಳೆ ಮೋಟಾರ್ ಆನ್ ಮಾಡುವಾಗ ವಿದ್ಯುತ್ ಶಾಕ್‌ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಮೀನು ಹಿಡಿಯುವಾಗ ಕೊಚ್ಚಿ ಹೋದ ವ್ಯಕ್ತಿ

ನದಿಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನೀರು ಪಾಲಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಅಜಿಲಮೊಗರು ಸಮೀಪದ ಕೂಟೇಲು ಸೇತುವೆಯ ಬಳಿ ಘಟನೆ ನಡೆದಿದೆ. ಮೈಕಲ್ (53) ನೇತ್ರಾವತಿ ನದಿಗೆ ಬಿದ್ದು ನಾಪತ್ತೆಯಾದವರು.

ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋಗಿದ್ದ ಮೈಕಲ್‌, ಭಾರೀ ಮಳೆಯಿಂದ ಉಕ್ಕಿ ಹರಿಯುತ್ತಿದ್ದ ನೇತ್ರಾವತಿ ನದಿಗೆ ಇಳಿದಿದ್ದರು. ಈ ವೇಳೆ ನೋಡನೋಡುತ್ತಲೇ ಮೈಕಲ್‌ ನೀರುಪಾಲಾಗಿದ್ದಾರೆ. ಈತ ನೀರಿನಲ್ಲಿ ಕೊಚ್ಚಿಹೋದ ಮೈಕಲ್‌ಗಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.

Electric shock

ನದಿ‌ದಾಟಲು ಹೋದ ವ್ಯಕ್ತಿ ನೀರು ಪಾಲು

ಕಲಬುರಗಿಯ ಚಿಂಚೋಳಿ ತಾಲೂಕಿನಲ್ಲಿರುವ ಮುಲ್ಲಾಮಾರಿ ನದಿ ದಾಟಲು ಹೋದ ವ್ಯಕ್ತಿ ನೀರುಪಾಲಾಗಿದ್ದಾರೆ. ಸಾಯಬಣ್ಣ(45)ನೀರು ಪಾಲಾದವರು. ಪೊತಂಗಲ ಗ್ರಾಮದಿಂದ ತೆಲಂಗಾಣದ ನಾವದಗಿ ಗ್ರಾಮಕ್ಕೆ ಹೋಗುವಾಗ ಈ ದುರ್ಘಟನೆ ನಡೆದಿದೆ. ಸುಲೇಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ

ಇಂದೋರ್: ಮಳೆಗಾಲದಲ್ಲಿ ರಸ್ತೆಗಳಲ್ಲಿ ಹೊಂಡಗಳ ಸಮಸ್ಯೆ ಸಾಮಾನ್ಯ ಎನ್ನುವಂತಾಗಿದೆ. ರಸ್ತೆಗಳಲ್ಲಿ ಅಲ್ಲಲ್ಲಿ ಹೊಂಡಗಳು, ಚರಂಡಿಗಳನ್ನು ತೆರೆದಿಡುವುದರಿಂದ ಮಳೆಗಾಲದಲ್ಲಿ ಪ್ರಾಣಕ್ಕೇ ಕುತ್ತು ಬರುವಂತಾಗುತ್ತದೆ. ಇದೀಗ ಅಂತಹದೊಂದು ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ ಭಾರೀ ಮಳೆಯ ಕಾರಣ ಅಲ್ಲಲ್ಲಿ ರಸ್ತೆ ಹಾಳಾಗಿತ್ತು. ಅದನ್ನು ರಿಪೇರಿ ಮಾಡದೇ ರಸ್ತೆ ಪ್ರಾಧಿಕಾರ ಕೂಡ ನಿರ್ಲಕ್ಷ್ಯ ತೋರಿತ್ತು. ಇದು ಬಾಲಕಿಯೊಬ್ಬಳ ಜೀವವನ್ನೇ ಅಪಾಯದಂಚಿಗೆ ದೂಡಿದ ಸನ್ನಿವೇಶವದು. ಇಂದೋರ್‌ನ ಅಮ್ಮರ್ ನಗರದಲ್ಲಿ ರಸ್ತೆ ದಾಟಲು ಪ್ರಯತ್ನಿಸುವಾಗ ಹನ್ನೆರಡು ವರ್ಷದ ಬಾಲಕಿಯೊಬ್ಬಳು 4 ಅಡಿ ಆಳದ ನೀರಿನ ಗುಂಡಿಗೆ ಬಿದ್ದಿದ್ದಾಳೆ. ನಂತರ ನೀರಿನಲ್ಲಿ ಒದ್ದಾಡುತ್ತಿದ್ದ ಬಾಲಕಿಯನ್ನು ಅಲ್ಲಿಗೆ ಬಂದ ಹುಡುಗನೊಬ್ಬ ಕಾಪಾಡಿದ್ದಾನೆ. ಈ ವಿಡಿಯೊ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಹೆಂಡತಿಯನ್ನು ಯಾಮಾರಿಸಿ ಪ್ರೇಯಸಿಯನ್ನು ಮನೆಗೆ ಕರೆಸಬಾರದಿತ್ತು! ಗೂಸಾ ತಿಂದವನ ಪ್ರತಿಕ್ರಿಯೆ!

ಬಾಲಕಿ ಅಜ್ಜಿಯ ಜೊತೆಗೆ ರಸ್ತೆ ದಾಟಲು ಮುಂದಾಗಿದ್ದಾಳೆ. ಅಜ್ಜಿ ಮುಂದೆ ಹೋಗಿದ್ದು, ಹಿಂದಿನಿಂದ ಬಂದ ಹುಡುಗಿ ರಸ್ತೆಯಲ್ಲಿ ಸಣ್ಣ ಹೊಂಡವೆಂದು ನೀರಿಗೆ ಕಾಲಿಡಲು ಪ್ರಯತ್ನಿಸಿದ್ದಾಳೆ. ಆಗ ಬ್ಯಾಲೆನ್ಸ್ ತಪ್ಪಿ ಬಾಲಕಿ 4 ಅಡಿ ಆಳದ ನೀರಿನ ಗುಂಡಿಗೆ ಬಿದ್ದಿದ್ದಾಳೆ. ಆಕೆ ಮುಳುಗಿ ನಂತರ ಸಮತೋಲನ ಮಾಡಿ ಗುಂಡಿಯ ಬದಿಗೆ ಬಂದಿದ್ದಾಳೆ. ಆಕೆ ಗುಂಡಿಯಿಂದ ಹೊರಗೆ ಬರಲು ಹೆಣಗಾಡುತ್ತಿರುವಾಗ ಅಲ್ಲಿಗೆ ಬಂದ ಹುಡುಗನೊಬ್ಬ ಆಕೆಯನ್ನು ಮೇಲಕ್ಕೆ ಎತ್ತಿದ್ದಾನೆ. ಇದರಿಂದ ಆಕೆಯ ಜೀವ ಉಳಿದಿದೆ.

ಮಾಹಿತಿಯ ಪ್ರಕಾರ, ನಿರ್ಮಾಣ ಕಾರ್ಯಕ್ಕಾಗಿ ರಸ್ತೆ ಪ್ರಾಧಿಕಾರದ ಅಧಿಕಾರಿಗಳು ಗುಂಡಿಯನ್ನು ಅಗೆದಿದ್ದರು ಆದರೆ ಅದನ್ನು ಮುಚ್ಚದೆ ಹಾಗೇ ಬಿಟ್ಟಿದ್ದರು. ಅದು ಮಳೆಯ ಸಮಯದಲ್ಲಿ ತುಂಬಿದ್ದರಿಂದ ಈ ಘಟನೆ ಸಂಭವಿಸಿದೆ. ಚಂದನ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅಮ್ಮರ್ ನಗರದ ವಾರ್ಡ್ ನಂ.1ರಲ್ಲಿ ಜೂನ್ 29ರಂದು ಈ ಘಟನೆ ನಡೆದಿದೆ. ಇಡೀ ಘಟನೆಯನ್ನು ಅಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಅದು ಬುಧವಾರ ವೈರಲ್ ಆಗಿದೆ. ಆದರೆ ಈ ಘಟನೆಯ ಬಗ್ಗೆ ಯಾವುದೇ ಮಾಹಿತಿ ಅಥವಾ ದೂರು ದಾಖಲಾಗಿಲ್ಲ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Channaptna By Election: ಚನ್ನಪಟ್ಟಣಕ್ಕೆ ನಾನೇ ಮೈತ್ರಿ ಅಭ್ಯರ್ಥಿ, ಎಚ್‌ಡಿಕೆ ಇದನ್ನು ಘೋಷಿಸಲಿ: ಸಿಪಿ ಯೋಗೇಶ್ವರ್‌

Channaptna By Election: ‘ಕುಮಾರಸ್ವಾಮಿ ಅವರು ಚನ್ನಪಟ್ಟಣಕ್ಕೆ ಬಾರದೇ ಇದ್ದರೆ ನಾನು ಸೋಲನ್ನೇ ಕಾಣುತ್ತಿರಲಿಲ್ಲ. ಚನ್ನಪಟ್ಟಣದ ಜನ ನನ್ನನ್ನು ಕೈ ಬಿಡ್ತಿರಲಿಲ್ಲ. ನೀವು ಬಂದ ಮೇಲೆ ನಮ್ಮ ಸಮುದಾಯ ನಿಮ್ಮ ಕೈ ಹಿಡಿದು ಎರಡು ಬಾರಿ ಗೆಲ್ಲಿಸಿದೆ. ಹಾಗಾಗಿ ಕುಮಾರಸ್ವಾಮಿ ಅವರೇ ಬಂದು ನಮ್ಮ ಚುನಾವಣೆ ಮಾಡಬೇಕು’ ಎಂದಿದ್ದಾರೆ ಯೋಗೇಶ್ವರ್.‌

VISTARANEWS.COM


on

Channaptna By Election CP Yogeshwar
Koo

ರಾಮನಗರ: ಚನ್ನಪಟ್ಟಣದಲ್ಲಿ ನಡೆಯುವ ಉಪಚುನಾವಣೆಯಲ್ಲಿ (Channaptna By Election) ನಾನೇ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿದ್ದು, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಕೂಡ ಇದನ್ನು ಅನುಮೋದಿಸಿದ್ದಾರೆ. ಅವರೇ ಅದನ್ನು ಘೋಷಿಸಬೇಕು ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ (CP Yogeshwar) ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಕಳೆದ ವಾರ ನಾನು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದೆ. ಈಗಾಗಲೇ ಕಾಂಗ್ರೆಸ್ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿದೆ. ಹೀಗಾಗಿ ಆದಷ್ಟು ಬೇಗ ಮೈತ್ರಿ ಅಭ್ಯರ್ಥಿ ಆಯ್ಕೆ ಮಾಡಿ ಹೆಸರು ಸೂಚಿಸಿ. ಹೆಚ್‌ಡಿಕೆ ಅವರು ನನ್ನನ್ನೇ ನಿಲ್ಲುವಂತೆ ಹೇಳಿದ್ದಾರೆ. ಅದಕ್ಕೆ ಅಧಿಕೃತ ಅನುಮೋದನೆ ಅವರೇ ಕೊಡಬೇಕು. ಮೈತ್ರಿ ಪಕ್ಷದ ವರಿಷ್ಠರು ಅಧಿಕೃತ ಘೋಷಣೆ ಮಾಡಬೇಕು. ಹಾಗಾಗಿ ನೀವೇ ಬಂದು ಹೆಸರು ಘೋಷಣೆ ಮಾಡಿ ಎಂದು ಅವರನ್ನೇ ಕೇಳಿದ್ದೇನೆ ಎಂದು ಚನ್ನಪಟ್ಟಣದಲ್ಲಿ ಮಾಜಿ ಸಚಿವ ಸಿಪಿವೈ ಹೇಳಿದರು.

ಕುಮಾರಸ್ವಾಮಿ ಎನ್‌ಡಿಎ ಮೈತ್ರಿಯಿಂದ ಗೆದ್ದು ಕೇಂದ್ರ ಮಂತ್ರಿಯಾಗಿದ್ದಾರೆ. ಬಹಳ ಎತ್ತರದ ಸ್ಥಾನಕ್ಕೆ ಹೋಗಿದ್ದಾರೆ. ಕುಮಾರಸ್ವಾಮಿ ಅವರು ಚನ್ನಪಟ್ಟಣಕ್ಕೆ ಬಾರದೇ ಇದ್ದರೆ ನಾನು ಸೋಲನ್ನೇ ಕಾಣುತ್ತಿರಲಿಲ್ಲ. ಚನ್ನಪಟ್ಟಣದ ಜನ ನನ್ನನ್ನು ಕೈ ಬಿಡ್ತಿರಲಿಲ್ಲ. ನೀವು ಬಂದ ಮೇಲೆ ನಮ್ಮ ಸಮುದಾಯ ನಿಮ್ಮ ಕೈ ಹಿಡಿದು ಎರಡು ಬಾರಿ ಗೆಲ್ಲಿಸಿದೆ. ಹಾಗಾಗಿ ಕುಮಾರಸ್ವಾಮಿ ಅವರೇ ಬಂದು ನಮ್ಮ ಚುನಾವಣೆ ಮಾಡಬೇಕು. ನಾನು ಈ ಬಗ್ಗೆ ಕುಮಾರಸ್ವಾಮಿ ಅವರಲ್ಲಿ ಮನವಿ ಕೂಡಾ ಮಾಡಿದ್ದೇನೆ. ಅದಕ್ಕೆ ಅವರೂ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ತಾಲೂಕಿನ ಜನರ ಆತಂಕ, ಒತ್ತಡ ಹೆಚ್ಚಾಗ್ತಿದೆ. ಹಾಗಾಗಿ ಗೊಂದಲಕ್ಕೆ ಅವಕಾಶ ಕೊಡದೇ ಶೀಘ್ರದಲ್ಲೇ ಅಭ್ಯರ್ಥಿ ಘೋಷಣೆ ಆಗಬೇಕು. ಎಚ್‌ಡಿಕೆ ಇನ್ನೆರಡು ದಿನಗಳಲ್ಲಿ ಅಭ್ಯರ್ಥಿ ಹೆಸರು ಘೋಷಣೆ ಮಾಡುತ್ತಾರೆ ಎಂದರು ಯೋಗೇಶ್ವರ್.‌

ಮೈತ್ರಿ ಪಕ್ಷದಿಂದ ಟಿಕೆಟ್ ಸಿಗದಿದ್ದರೆ ಎಂಬ ಪ್ರಶ್ನೆಗೆ ಉತ್ತರಿಸಿದ ಯೋಗೇಶ್ವರ್, ʼಮೈತ್ರಿ ಧರ್ಮ ಪಾಲಿಸಬೇಕು ಅಂತ ಅಂದುಕೊಂಡರೆ ಯಾರೇ ಸ್ಪರ್ಧೆ ಮಾಡಿದರೂ ಸಪೋರ್ಟ್ ಮಾಡಬೇಕು. ಅದರೆ ಪ್ರಬಲ ಅಭ್ಯರ್ಥಿ ಹಾಕುವ ಅನಿವಾರ್ಯತೆ ಇದೆ. ನಾವು ಸೋಲು ಒಪ್ಪಿಕೊಳ್ಳಬಾರದು. ನನ್ನ ರಾಜಕೀಯ ಜೀವನದ ಗ್ರಾಫ್ ಯಾವತ್ತೂ ಕಡಿಮೆ ಆಗಿಲ್ಲ. ಪ್ರತಿ ಚುನಾವಣೆಯಲ್ಲೂ ಐದು ಸಾವಿರ ಮತಗಳು ಹೆಚ್ಚಾಗ್ತಿವೆ. ಜೊತೆಗೆ ಈಗ ನಾವು ಡಬಲ್ ಬ್ಯಾರೆಲ್ ಗನ್. ನಮ್ಮ ಗುರಿ ಫೇಲ್ ಆಗಲ್ಲʼ ಎಂದರು.

ಕಳೆದ ವಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಮೂರು ದಿನ ಜನಸ್ಪಂದನಾ ಕಾರ್ಯಕ್ರಮ ಮಾಡಿದ್ದಾರೆ.‌ ಇದು ಉಪಚುನಾವಣೆ ದೃಷ್ಠಿಯಲ್ಲಿ ಮಾಡಿರೋ ಸರ್ಕಾರಿ ಸಂತೆ. ಯಾವುದೇ ಗುರಿ ಇಲ್ಲದೇ, ಯೋಜನೆ ಇಲ್ಲದೇ ಮಾಡಿರೋ ಕಾರ್ಯಕ್ರಮ. ಅಧಿಕಾರಿಗಳನ್ನು ಚನ್ನಪಟ್ಟಣಕ್ಕೆ ಕರೆತಂದು ಹೆದರಿಸಿ ಜನರಿಗೆ ಆಸೆ ತೋರಿಸುವ ಕೆಲಸ. ಕಳೆದ ಒಂದು ಕಾಲು ವರ್ಷದ ಅವಧಿಯಲ್ಲಿ ಸರ್ಕಾರ ಸಾರ್ವಜನಿಕರಿಗೆ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿಲ್ಲ. ಸರ್ಕಾರ ಬಂದಾಗಿನಿಂದಲೂ ಚನ್ನಪಟ್ಟಣಕ್ಕೆ ಬಂದಿರಲಿಲ್ಲ. ಈಗ ಚನ್ನಪಟ್ಟಣ ಖಾಲಿ ಇದೆ, ಬಂದಿದ್ದೇನೆ ಅಂತ ಸುಳ್ಳು ಹೇಳ್ತಿದ್ದಾರೆ. ಜನರಿಗೆ ಮನೆ ಕೊಡ್ತೀನಿ, ಸೈಟ್ ಕೊಡ್ತೀನಿ ಅಂತ ಸುಳ್ಳು ಆಸ್ವಾಸನೆ ಕೊಡ್ತಿದ್ದಾರೆ ಎಂದರು ಯೋಗೇಶ್ವರ್.‌

ಟೌನ್ ವ್ಯಾಪ್ತಿ ಬಿಟ್ಟರೆ ಬಹುತೇಕ ತಾಲೂಕಿನ ಜನತೆಗೆ ಮನೆ ಸಮಸ್ಯೆ ಇಲ್ಲ. ಚುನಾವಣೆ ಸಮಯದಲ್ಲಿ ಮನೆ ಕೊಡುತ್ತೇವೆ ಅನ್ನೋದು ಸುಳ್ಳು. ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಒನ್ ಮ್ಯಾನ್ ಶೋ ಮಾಡಿದ್ದಾರೆ. ಎಂಪಿಗೆ ಆಹ್ವಾನ ನೀಡಿಲ್ಲ, ನನಗೆ ಆಹ್ವಾನ ನೀಡಿಲ್ಲ. ಸರ್ಕಾರದ ಪ್ರೋಟೋಕಾಲ್ ಸರಿಯಾಗಿ ಫಾಲೋ ಮಾಡದೇ ಕಾರ್ಯಕ್ರಮ ಮಾಡಿದ್ದಾರೆ. ಕೇವಲ ಚುನಾವಣಾ ತಂತ್ರಕ್ಕೆ ಜನ ಸೇರಿಸಿ ಜಾತ್ರೆ ಮಾಡಿದ್ದಾರೆ ಎಂದರು ಅವರು.

ಕ್ಷೇತ್ರದಲ್ಲಿ ಡಿಕೆಶಿ ಅವರ ಕೊಡುಗೆ ಏನೂ ಇಲ್ಲ. ಚನ್ನಪಟ್ಟಣದಿಂದಲೇ ರಾಜಕೀಯ ಜೀವನ ಆರಂಭಿಸಿದ್ರೂ ಅವರ 40 ವರ್ಷದ ಅವಧಿಯಲ್ಲಿ ಅವರ ಕೊಡುಗೆ ಶೂನ್ಯ. ಕೇವಲ ಚುನಾವಣೆ ಸಂದರ್ಭದಲ್ಲಿ ಬಂದು ಜಾತ್ರೆ ಮಾಡ್ತಿದ್ದಾರೆ. ಮುಂದಿನ ದಿನಗಳಲ್ಲಿ ಇದು ಮುಂದುವರೆದ್ರೆ ಆ ಕಾರ್ಯಕ್ರಮಕ್ಕೆ ಹೋಗಿ ಖಂಡಿಸುತ್ತೇವೆ. ಪ್ರೋಟೋಕಾಲ್ ಫಾಲೋ ಮಾಡದಿದ್ದರೆ ಮೈತ್ರಿ ಪಕ್ಷದ ನಾಯಕರು ತಡೆ ಮಾಡುತ್ತೇವೆ. ಮುಂದಿನ ಕಾರ್ಯಕ್ರಮಗಳಿಗೆ ಪ್ರತಿಭಟನೆ ಮಾಡ್ತೇವೆ ಎಂದರು.

ಅವರ ಸರ್ಕಾರ ಕುಸಿಯುವ ಹಂತ ತಲುಪಿದೆ. ಅವರಲ್ಲೇ ಸಾಕಷ್ಟು ಗೊಂದಲ ಇದೆ. ನೂರೆಂಟು ಹಗರಣಗಳು ಬೆಳಕಿಗೆ ಬರ್ತಿದೆ. ಮೂಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ ನೋಡಿದ್ದೇವೆ. ಉಪಚುನಾವಣೆ ಹೊತ್ತಿಗೆ ಅವರ ಸರ್ಕಾರ ಇರುತ್ತೋ, ಇರಲ್ವೋ ಗೊತ್ತಿಲ್ಲ ಎಂದು ಡಿಕೆಶಿಗೆ ಸಿ.ಪಿ.ಯೋಗೇಶ್ವರ್ ಟಾಂಗ್ ನೀಡಿದರು.

ಸರ್ಕಾರದ ಹಣದಲ್ಲಿ ಉಪಚುನಾವಣೆ ಮಾಡ್ತಿದ್ದಾರೆ. ಡಿಕೆಶಿ ಕನಕಪುರದಿಂದ ಗೆದ್ದು ರಾಮನಗರ ಉಸ್ತುವಾರಿ ತೆಗೆದುಕೊಂಡಿಲ್ಲ. ಹೋಗಿ ಬೆಂಗಳೂರು ಉಸ್ತುವಾರಿ ತೆಗೆದುಕೊಂಡಿರೋದು ಯಾಕೆ? ಈಗ ಚುನಾವಣೆ ಸಮಯದಲ್ಲಿ ಮಾತ್ರ ಚನ್ನಪಟ್ಟಣ ನೆನಪಾಗಿರೋದಾ? ಚನ್ನಪಟ್ಟಣ ಜನ ಬುದ್ಧಿವಂತರಿದ್ದಾರೆ. ಇಂತಹ ನಾಟಕಗಳಿಗೆ ನಮ್ಮ ಜನ ಉತ್ತರ ಕೊಡ್ತಾರೆ ಎಂದು ಹೇಳಿದರು.

ಇದನ್ನೂ ಓದಿ: HD Kumaraswamy: ಸಿಎಂ ಕುರ್ಚಿ ಮೇಲೆ ಟವಲ್‌ ಹಾಕಿದವರಿಂದಲೇ ಮುಡಾ ಹಗರಣ ಬಯಲು: ಎಚ್‌ಡಿಕೆ

Continue Reading

ಪ್ರಮುಖ ಸುದ್ದಿ

SC ST Scholarship: ದೆಹಲಿಯಲ್ಲಿ ಎಸ್‌ಸಿ, ಎಸ್‌ಟಿ ಮಕ್ಕಳಿಗೆ ಹಾಸ್ಟೆಲ್, ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ 15,000 ಶಿಷ್ಯವೇತನ: ಸಿಎಂ ಘೋಷಣೆ

SC ST Scholarship: ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಗೆ ಈ ಬಾರಿ ಸುಮಾರು 39,121.46 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ. ಇದು ಕಳೆದ ವರ್ಷಕ್ಕಿಂತ 3900 ಕೋಟಿ ಹೆಚ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

SC ST Scholarship
Koo

ಬೆಂಗಳೂರು: ಐಎಎಸ್‌, ಐಆರ್‌ಎಸ್‌ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗಾಗಿ (competitive exam training) ನವ ದೆಹಲಿಯಲ್ಲಿ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಶಿಷ್ಯವೇತನ (SC ST Scholarship) ಕೊಡಲಾಗುವುದು (ಸದ್ಯ 10 ಸಾವಿರ ಕೊಡಲಾಗುತ್ತಿದ್ದು, 5 ಸಾವಿರ ಹೆಚ್ಚಿಸಲಾಗುವುದು). ದೆಹಲಿ ಹಾಸ್ಟೆಲ್‌ನಲ್ಲಿ ಹೈಟೆಕ್ ಲೈಬ್ರರಿ ಮಾಡಲಾಗುವುದು. ಅಲ್ಲಿ ಎಲ್ಲಾ ರೀತಿಯ ಪುಸ್ತಕಗಳು ಸಿಗುವ ವ್ಯವಸ್ಥೆ ಕಲ್ಪಿಸಲಾಗುವುದು. ಈ ಸಂಬಂಧ ತಕ್ಷಣ ಆದೇಶ ಹೊರಡಿಸಲಾಗುವುದು ಸಿ.ಎಂ.ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ನಗರದಲ್ಲಿ ಶುಕ್ರವಾರದ ನಡೆದ ಎಸ್‌ಸಿಎಸ್‌ಪಿ, ಟಿಎಸ್‌ಪಿ ಪರಿಷತ್ ಸಭೆಯಲ್ಲಿ ಸಿಎಂ ಮಾತನಾಡಿದರು. 2024-25 ನೇ ಸಾಲಿಗೆ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯಲ್ಲಿ ಲಭ್ಯ ಇರುವ ಹಣವನ್ನು ಖರ್ಚು ಮಾಡಲು ಕ್ರಿಯಾ ಯೋಜನೆಗೆ ಅನುಮೋದನೆ ಮಾಡಲಾಗಿದೆ. ರಾಜ್ಯದ ಅಭಿವೃದ್ಧಿ ಆಯವ್ಯಯ ಈ ಸಾಲಿನಲ್ಲಿ ಒಟ್ಟು 1,60,000 ಕೋಟಿ. ಇದರಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿಗೆ ಸುಮಾರು 39,121.46 ಕೋಟಿ ರೂ.ಗಳನ್ನು 34 ಇಲಾಖೆಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.

ಕಳೆದ ವರ್ಷಕ್ಕಿಂತ 3900 ಕೋಟಿ ಹೆಚ್ಚು ಅನುದಾನ

ಕಳೆದ ವರ್ಷಕ್ಕಿಂತ ಈ ವರ್ಷ 3900 ಕೋಟಿ ಹೆಚ್ಚಾಗಿದೆ. 3900 ಕೋಟಿ ಹೆಚ್ಚುವರಿ ಹಣ ಈ ವರ್ಷ ನೀಡಿದ್ದೇವೆ. ಈ ಹಣ ಇಲಾಖೆಗಳಿಗೆ ಹಂಚಿಕೆಯಾಗಿದ್ದು ಇದರ ಸದುಪಯೋಗ ಆಗಬೇಕು. ಸಮಾಜ ಕಲ್ಯಾಣ ಇಲಾಖೆ, ನಿಗಮಗಳು ಕಾಯ್ದೆಯ ಉದ್ದೇಶಕ್ಕೆ ಪೂರಕವಾಗಿ ಕೆಲಸ ಮಾಡಬೇಕು. ಹಿಂದಿನ ವರ್ಷ 97.81 ಕೋಟಿ ಉಳಿತಾಯವಾಗಿದೆ. ಈ ಹಣವೂ ಸೇರಿದೆ. ಶೇ.100 ಸಾಧನೆ ಆಗಬೇಕು. ಇದರಲ್ಲಿ ನಿರ್ಲಕ್ಷ್ಯ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ | Valmiki Corporation Scam: ವಾಲ್ಮೀಕಿ ನಿಗಮ ಹಗರಣದಲ್ಲಿ ಮುಂದುವರಿದ ಮಾಜಿ ಸಚಿವರ ಪಿಎಸ್‌ ವಿಚಾರಣೆ; ನಾಗೇಂದ್ರಗೆ ಢವಢವ!

ಕಾಯ್ದೆಯಲ್ಲಿದ್ದ 7D ರದ್ದು ಮಾಡಿದ ರೀತಿಯಲ್ಲೇ 7C ಕೂಡ ರದ್ದು ಮಾಡಬೇಕು ಎನ್ನುವ ಶಾಸಕ ನರೇಂದ್ರಸ್ವಾಮಿ ಅವರು ಸಲಹೆ ನೀಡಿದ್ದಾರೆ. ಈ ಸಲಹೆಯ ಸಾಧಕ ಬಾದಕಗಳನ್ನು ಪರಿಶೀಲಿಸಲಾಗುವುದು. ಖಾಲಿ ಇರುವ ಹೋಬಳಿಗಳಲ್ಲೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಆರಂಭಿಸಲೇಬೇಕು. ಆಯಾ ಹೋಬಳಿಯ ವಿದ್ಯಾರ್ಥಿಗಳಿಗೆ ಶೇ75 ರಷ್ಟು ಸೀಟು, ಉಳಿದ ಶೇ25 ರಷ್ಟು ಸೀಟುಗಳನ್ನು ಇತರೆ ಪ್ರದೇಶದ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳಲ್ಲಿ ನೀಡಬೇಕು ಎಂದು ಸೂಚಿಸಿದರು.

ಸರ್ಕಾರಿ ಶಾಲೆಗಿಂತ ಕ್ರೈಸ್‌ನಲ್ಲಿ ಓದಿರುವ ಬಡ ವಿಧ್ಯಾರ್ಥಿನಿ ಕ್ರೈಸ್ ಶಾಲೆಯಲ್ಲಿ ಓದಿ ಮೊದಲ ರ್ಯಾಂಕ್ ಪಡೆದಿದ್ದಾರೆ. ಇದನ್ನು ಪ್ರೋತ್ಸಾಹಿಸುತ್ತಲೇ ಇತರೆ ನ್ಯೂನ್ಯತೆಗಳನ್ನು ಸರಿಪಡಿಸಲು ಅಧಿಕಾರಿಗಳು ಶ್ರಮಿಸಬೇಕು. ಬಜೆಟ್‌ನಲ್ಲಿ ನಾವು ಘೋಷಿಸಿರುವ ಎಲ್ಲಾ ಕಾರ್ಯಕ್ರಮಗಳನ್ನೂ ನೀವು ಜಾರಿ ಮಾಡಲೇಬೇಕು. ಹಿಂದಿನ ಬಿಜೆಪಿ ಸರ್ಕಾರ ಮೂರು ವರ್ಷ ಕ್ರೈಸ್ ಮಕ್ಕಳಿಗೆ ಬಾತ್ ರೂಮ್ ಕಿಟ್ ಕೊಡ್ಲೇ ಇಲ್ಲ. ಈಗ ನಾವು ಸರಿಯಾಗಿ ವಿತರಿಸುತ್ತಿದ್ದೇವೆ ಎಂದರು.

ಹಾಸ್ಟೆಲ್‌ಗಳಿಗೆ ಭೇಟಿ ನೀಡದಿದ್ದರೆ ಸಸ್ಪೆಂಡ್‌

ಆಶ್ರಮ ಶಾಲೆಗಳಲ್ಲಿ ರಾತ್ರಿ ವೇಳೆ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಾರೆ ಎನ್ನುವುದು ಕಂಡುಬಂದಿದೆ. ಇದಕ್ಕೆ ಅವಕಾಶ ಆಗಬಾರದು. ಮನೆಗೆ ಕರೆದೊಯ್ಯದಂತೆ ಪೋಷಕರಿಗೆ ಒಪ್ಪಿಸಬೇಕು. ಹಳ್ಳಿಗಾಡು, ಬಡ ಕುಟುಂಬಗಳಿಗೆ ಸರ್ಕಾರದಿಂದ ಬರುವ ಸವಲತ್ತುಗಳನ್ನು ಸರಿಯಾಗಿ ತಲುಪಿಸಬೇಕು. ಇದರಲ್ಲಿ ವಿಫಲರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನಾವು ಕೊಟ್ಟ ಅನುದಾನ ಆಯಾ ಉದ್ದೇಶಗಳಿಗೇ ಬಳಕೆಯಾಗಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲದಂತೆ ಆಯಾ ಸಮುದಾಯಗಳಿಗೆ ಸವಲತ್ತು ತಲುಪಿಸಬೇಕು. ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸದಿದ್ದರೆ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗುವುದು ಎಂದರು.

ಇದನ್ನೂ ಓದಿ | SCSP TSP Scheme: ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ಶೇ.100 ಖರ್ಚು ಮಾಡದಿದ್ರೆ ಕಠಿಣ ಕ್ರಮ; ಸಿಎಂ ವಾರ್ನಿಂಗ್‌

10 ವರ್ಷದಲ್ಲಿ ಈ ಯೋಜನೆಯಿಂದ ಸಮುದಾಯದ ಮೇಲೆ ಬೀರಿರುವ ಪರಿಣಾಮ, ಸಮುದಾಯಕ್ಕೆ ಯೋಜನೆ ತಲುಪಿರುವ ಪ್ರಮಾಣದ ಬಗ್ಗೆ, ಹಾಗೂ ಅವರ ಆರ್ಥಿಕ‌ ಸ್ಥಿತಿ ಪ್ರಗತಿ ಆಗಿರುವ ಬಗ್ಗೆ ಮೌಲ್ಯಮಾಪನ ಮಾಡಲಾಗುವುದು. 3 ತಿಂಗಳ ಬಳಿಕ ಮತ್ತೊಮ್ಮೆ ಪರಿಷತ್ ಸಭೆ ಕರೆಯುತ್ತೇವೆ. ಯಾರಿಂದ ಲೋಪ ಆಗಿದೆ ಎಂದು ಗೊತ್ತಾದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈ ವರ್ಷದ ಕ್ರಿಯಾ ಯೋಜನೆಯನ್ನು ಸಭೆಯಲ್ಲಿ ಶಾಸಕರು, ಸಚಿವರು, ಅಧಿಕಾರಿಗಳು ನೀಡಿದ ಸಲಹೆಗಳ ಸಮೇತ ಜಾರಿ ಆಗಬೇಕು ಎನ್ನುವ ಸೂಚನೆಯನ್ನು ಮುಖ್ಯಮಂತ್ರಿಗಳು ನೀಡಿದರು.

Continue Reading

ಪ್ರಮುಖ ಸುದ್ದಿ

Electric Bike Taxi: ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ಸಂಪೂರ್ಣ ನಿಷೇಧ

Electric Bike Taxi: ಇಂದು ಹಾಗೂ ನಾಳೆ ಕಾರ್ಯಾಚರಣೆಗೆ ಇಳಿಯಲಿರುವ ಸಾರಿಗೆ ಇಲಾಖೆ ಅಧಿಕಾರಿಗಳು, ಎಲೆಕ್ಟ್ರಿಕ್ ಬೈಕ್‌ ಟ್ಯಾಕ್ಸಿಗಳ ವಿರುದ್ಧ ಮತ್ತು ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಿದ್ದಾರೆ. ಈ ಬಗ್ಗೆ 11 ತಂಡಗಳನ್ನು ರಚಿಸಿ ಕಾರ್ಯಾಚರಣೆಗೆ ಸಾರಿಗೆ ಇಲಾಖೆ ಆಯುಕ್ತರು ಸೂಚಿಸಿದ್ದು, ನಗರದ ನಾನಾ ಭಾಗಗಳಲ್ಲಿರುವ ಅನಧಿಕೃತ ಬೈಕ್ ಟ್ಯಾಕ್ಸಿಗಳಿಗೆ ಬಿಸಿ ಮುಟ್ಟಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

VISTARANEWS.COM


on

electric bike taxi
Koo

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ʼಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ’ಗಳನ್ನು ನಿಷೇಧಿಸಿ (Electric Bike Taxi) ರಾಜ್ಯ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ನಿನ್ನೆ ಶಾಂತಿನಗರ ಸಾರಿಗೆ ಆಯುಕ್ತರ (Transport commissioner) ಕಚೇರಿಯಲ್ಲಿ ಖಾಸಗಿ ಸಾರಿಗೆ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ.

ಸಂಘಟನೆಗಳ ಒತ್ತಾಯದ ಬಳಿಕ ಇಂದು ಹಾಗೂ ನಾಳೆ ಕಾರ್ಯಾಚರಣೆಗೆ ಇಳಿಯಲಿರುವ ಸಾರಿಗೆ ಇಲಾಖೆ ಅಧಿಕಾರಿಗಳು, ಎಲೆಕ್ಟ್ರಿಕ್ ಬೈಕ್‌ ಟ್ಯಾಕ್ಸಿಗಳ ವಿರುದ್ಧ ಮತ್ತು ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಿದ್ದಾರೆ. ಈ ಬಗ್ಗೆ 11 ತಂಡಗಳನ್ನು ರಚಿಸಿ ಕಾರ್ಯಾಚರಣೆಗೆ ಸಾರಿಗೆ ಇಲಾಖೆ ಆಯುಕ್ತರು ಸೂಚಿಸಿದ್ದು, ನಗರದ ನಾನಾ ಭಾಗಗಳಲ್ಲಿರುವ ಅನಧಿಕೃತ ಬೈಕ್ ಟ್ಯಾಕ್ಸಿಗಳಿಗೆ ಬಿಸಿ ಮುಟ್ಟಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಈ ಮೂಲಕ ಆಟೋ, ಕ್ಯಾಬ್‌ ಚಾಲಕರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ. ಕಳೆದ ವರ್ಷ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಈ ವೇಳೆ ಸರ್ಕಾರದಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೂ, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡುವಂತೆ ಸಾರಿಗೆ ಸಂಘಟನೆಗಳು ಸರ್ಕಾರಕ್ಕೆ ಹಲವು ಬಾರಿ ಒತ್ತಾಯಿಸಿದ್ದವು.

ಈ ಹಿನ್ನೆಲೆಯಲ್ಲಿ ಸಾರಿಗೆ ಅಧಿಕಾರಿಗಳು ನಗರದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೀಜ್‌ ಮಾಡಲು ಮುಂದಾಗಿದ್ದಾರೆ. ರಾಜ್ಯಾದ್ಯಂತ ಜು.5ರಿಂದ ಕಡ್ಡಾಯವಾಗಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿದ್ದು, ಒಂದು ವೇಳೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಕಂಡುಬಂದಲ್ಲಿ ಕೂಡಲೇ ಅವುಗಳನ್ನು ಜಪ್ತಿ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಈ ಕುರಿತು ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿಗಳು ಹೊರಡಿಸಿರುವ ನೋಟೀಸ್‌ ಹೀಗಿದೆ:

“ಸರ್ಕಾರದ 14-07-2021ರ ಸೂಚನೆಯನ್ವಯ ಸಾರ್ವಜನಿಕ ಸಾರಿಗೆಗಾಗಿ ಮೊದಲ ಮತ್ತು ಕೊನೆಯ ಹಂತದ ಸಾರಿಗೆ ಸಂಪರ್ಕವನ್ನು ಕಲ್ಪಿಸುವ ಮತ್ತು ಸ್ವಯಂ ಉದ್ಯೋಗ ಅವಕಾಶವನ್ನು ಒದಗಿಸುವ ಉದ್ದೇಶದಿಂದ, ಮೋಟಾರು ವಾಹನ ಕಾಯ್ದೆ 1988ರ (1998ರ ಕೇಂದ್ರ ಅಧಿನಿಯಮ 59)ರ ಕಲಂ 2ರ ಉಪಕಲಂ (1) ಕ್ರಮ ಸಂಖ್ಯೆ: 38(ಎ) ರಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು, ಕರ್ನಾಟಕ ರಾಜ್ಯದಲ್ಲಿನ ಎಲ್ಲಾ ನಗರ ಪ್ರದೇಶಗಳಿಗೆ ಅನ್ವಯಿಸುವಂತೆ “ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ 2021″ನ್ನು ಜಾರಿಗೆ ತರಲಾಗಿತ್ತು.

ಕರ್ನಾಟಕ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಯ ಅಗತ್ಯತೆ ಮತ್ತು ಜಾರಿಯ ಬಗ್ಗೆ ವ್ಯವಸ್ಥಾಪಕ ನಿರ್ದೇಶಕರು, BMRCL ರವರ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯ ವರದಿಯಲ್ಲಿ ಬೈಕ್ ಟ್ಯಾಕ್ಸಿ ಯೋಜನೆಗೆ ಸಂಬಂಧಿಸಿದಂತೆ ವರದಿಯು ಪೂರಕವಾಗಿರುವುದಿಲ್ಲವೆಂದು ತಿಳಿಸಿದೆ. ಪ್ರಸ್ತುತ ಕೆಲವು ಖಾಸಗಿ ಆಪ್ ಆಧಾರಿತ ಸಂಸ್ಥೆಗಳು ಮೋಟಾರು ವಾಹನ ಕಾಯ್ದೆ ಮತ್ತು ಅದರಡಿ ರಚಿತವಾದ ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಸಾರಿಗೇತರ (Non-transport) ದ್ವಿಚಕ್ರ ವಾಹನಗಳನ್ನು ಸಾರಿಗೆ (Transport) ವಾಹನಗಳನ್ನಾಗಿ ಉಪಯೋಗಿಸುತ್ತಿರುವುದು ಕಂಡುಬಂದಿರುತ್ತದೆ. ಖಾಸಗಿ ಸಾರಿಗೆ ಕ್ಷೇತ್ರಗಳಲ್ಲಿನ ಇತರೆ ಆಟೋರಿಕ್ಷಾ, ಮ್ಯಾಕ್ಸಿ ಕ್ಯಾಬ್ ಮತ್ತು ಟ್ಯಾಕ್ಸಿ ಸಂಘಗಳು / ಚಾಲಕರುಗಳು, ಬೈಕ್ ಟ್ಯಾಕ್ಸಿ ಚಾಲಕರ ವಿರುದ್ಧ ಹಲವಾರು ಬಾರಿ ಸಂಘರ್ಷಣೆಗಳು ನಡೆದು, ಮೊಕದ್ದಮೆಗಳು ದಾಖಲಾಗುತ್ತಿರುವುದನ್ನು ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಹಾಗೂ ಮಹಿಳೆಯರಿಗೆ ಈ ಯೋಜನೆ ಅಸುರಕ್ಷಿತವಾಗಿರುವುದನ್ನು ಸಹ ಗಮನಿಸಲಾಗಿದೆ. ಸಾರಿಗೆ ಇಲಾಖೆಯ ರಾಜಸ್ವ ಸಂಗ್ರಹಣೆಗೆ ಮತ್ತು ಪವರ್ತನ ಚಟುವಟಿಕೆಯ ಸಮರ್ಥ ಕಾರ್ಯನಿರ್ವಹಣೆಗೆ ಈ ಯೋಜನೆಯಿಂದ ಕಷ್ಟವಾಗುತ್ತಿದೆ. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ, “ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ 2021″ ನ್ನು ಜಾರಿಗೊಳಿಸಿ ಹೊರಡಿಸಲಾದ ಸರ್ಕಾರದ ಅಧಿಸೂಚನೆ ಸಂಖ್ಯೆ: ಟಿಡಿ 160 ಟಿಡಿಓ 2020, ದಿನಾಂಕ:14-07-2021ನ್ನು ಈ ಮೂಲಕ ರದ್ದುಗೊಳಿಸಿ ಆದೇಶಿಸಿದೆ.”

ಇದನ್ನೂ ಓದಿ: Electric Bike taxi Service : ನಿರ್ಬಂಧ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿಗೆ ಮಾತ್ರ; ರ‍್ಯಾಪಿಡೊ ಸೇವೆಗೆ ತೊಂದರೆ ಇಲ್ಲ

Continue Reading
Advertisement
Rohit Sharma
ಕ್ರೀಡೆ13 mins ago

Rohit Sharma: ವಿಶ್ವಕಪ್​ ಗೆದ್ದು ಬಂದ ರೋಹಿತ್​ಗೆ ಸರ್​ಪ್ರೈಸ್​ ಕೊಟ್ಟ ಬಾಲ್ಯದ ಗೆಳೆಯರು; ವಿಡಿಯೊ ವೈರಲ್​

Raj Tarun Police complaint filed by live-in partner
ಟಾಲಿವುಡ್13 mins ago

Raj Tarun: ಟಾಲಿವುಡ್‌ ಯುವ ನಟ ʻರಾಜ್ ತರುಣ್ʼ ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಸ: ದೂರು ದಾಖಲಿಸಿದ ಪ್ರೇಯಸಿ!

NEET PG 2024
ಶಿಕ್ಷಣ15 mins ago

NEET PG 2024: ನೀಟ್-ಪಿಜಿ ಪರೀಕ್ಷೆಯ ದಿನಾಂಕ ಪ್ರಕಟ; ಆ. 11ರಂದು ನಡೆಯಲಿದೆ ಟೆಸ್ಟ್‌

Electric shock
ದಾವಣಗೆರೆ18 mins ago

Electric shock : ಮೋಟಾರ್‌ ಆನ್‌ ಮಾಡುವಾಗ ಕರೆಂಟ್‌ ಶಾಕ್‌ಗೆ ಮಹಿಳೆ ಸಾವು; ಮೀನು ಹಿಡಿಯಲು ಹೋಗಿ ವ್ಯಕ್ತಿ ನೀರುಪಾಲು

Channaptna By Election CP Yogeshwar
ಪ್ರಮುಖ ಸುದ್ದಿ24 mins ago

Channaptna By Election: ಚನ್ನಪಟ್ಟಣಕ್ಕೆ ನಾನೇ ಮೈತ್ರಿ ಅಭ್ಯರ್ಥಿ, ಎಚ್‌ಡಿಕೆ ಇದನ್ನು ಘೋಷಿಸಲಿ: ಸಿಪಿ ಯೋಗೇಶ್ವರ್‌

Viral Video
Latest24 mins ago

Viral Video: ತಲೆಕೂದಲಿನಲ್ಲಿ ಟೀಪಾಟ್ ತಯಾರಿಸಿ ಅದರಿಂದ ನೀರು ಕುಡಿದ ಕೇಶ ವಿನ್ಯಾಸಕಿ!

SC ST Scholarship
ಪ್ರಮುಖ ಸುದ್ದಿ28 mins ago

SC ST Scholarship: ದೆಹಲಿಯಲ್ಲಿ ಎಸ್‌ಸಿ, ಎಸ್‌ಟಿ ಮಕ್ಕಳಿಗೆ ಹಾಸ್ಟೆಲ್, ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ 15,000 ಶಿಷ್ಯವೇತನ: ಸಿಎಂ ಘೋಷಣೆ

Retirement Panning
ಮನಿ-ಗೈಡ್41 mins ago

Retirement Panning: ನಿವೃತ್ತಿ ಬಳಿಕ 1 ಲಕ್ಷ ರೂ. ಪಿಂಚಣಿ ಗಳಿಸೋದು ಹೇಗೆ? ಸುಲಭ ಯೋಜನೆಯ ಮಾಹಿತಿ ಇಲ್ಲಿದೆ

electric bike taxi
ಪ್ರಮುಖ ಸುದ್ದಿ57 mins ago

Electric Bike Taxi: ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ಸಂಪೂರ್ಣ ನಿಷೇಧ

Puri Jagannath Yatra
ಧಾರ್ಮಿಕ60 mins ago

Puri Jagannath Yatra: ಜುಲೈ 7ರಂದು ಪುರಿ ಜಗನ್ನಾಥ ರಥಯಾತ್ರೆ; ಇದಕ್ಕಿದೆ ಪೌರಾಣಿಕ ಹಿನ್ನೆಲೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ1 hour ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ3 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು4 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು4 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ9 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ21 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ22 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ24 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ1 day ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

ಟ್ರೆಂಡಿಂಗ್‌